Tag: bantwala

  • ದಲಿತರ ಮನೆಗೆ ನುಗ್ಗಿ ಗೂಂಡಾಗಿರಿ – ಸಾಯಿಸ್ತೀವಿ ಅಂತ ತಾಯಿ, ಮಗಳಿಗೆ ಧಮ್ಕಿ!

    ದಲಿತರ ಮನೆಗೆ ನುಗ್ಗಿ ಗೂಂಡಾಗಿರಿ – ಸಾಯಿಸ್ತೀವಿ ಅಂತ ತಾಯಿ, ಮಗಳಿಗೆ ಧಮ್ಕಿ!

    ಮಂಗಳೂರು: ಚಿಕ್ಕಮಗಳೂರಲ್ಲಿ ಹಿಂದೂ ನೈತಿಕ ಪೊಲೀಸ್‍ಗಿರಿ ಧನ್ಯಶ್ರೀ ಅನ್ನೋ ಯುವತಿಯ ಸಾವಿಗೆ ಕಾರಣವಾಗಿತ್ತು. ಅದೇ ರೀತಿಯಲ್ಲಿ ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಕೆಲ ಪುಂಡರು ಮನೆಯೊಂದಕ್ಕೆ ನುಗ್ಗಿ ದಲಿತ ಸಮುದಾಯಕ್ಕೆ ಸೇರಿದ ಮನೆಯೊಂದಕ್ಕೆ ದಾಂಧಲೆ ಮಾಡಿದ್ದಾರೆ.

    ತಾಯಿ ಮತ್ತು ಅಪ್ರಾಪ್ತ ಮಗಳಿಗೆ ಜೀವ ಬೆದರಿಕೆ ಹಾಕಿದ್ದು ತಡೆಯಲು ಬಂದವ್ರ ಮೇಲೆ ಹಲ್ಲೆ ನಡೆಸಿದ್ದಾರೆ. ಮುಸ್ಲಿಂ ಯುವಕನ ಜೊತೆಗೆ ಮಾತಾಡಿದ್ರೆ ಸಾಯಿಸ್ತೇವೆ. ಒಂದು ವೇಳೆ ನಿಮಗೆ ಬದುಕ್ಬೇಕು ಅಂತಿದ್ರೆ ಊರು ಬಿಟ್ಟು ಹೋಗಿ ಅಂತ ಧಮ್ಕಿ ಹಾಕಿದ್ದಾರೆ. ಇದನ್ನೂ ಓದಿ: ಧನ್ಯಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ – ಮೂಡಿಗೆರೆ ಬಿಜೆಪಿ ಯುವ ಮೋರ್ಚಾ ನಗರಾಧ್ಯಕ್ಷ ಅರೆಸ್ಟ್

    ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗೂಂಡಾಗಿರಿ ಎಸಗಿದ 33 ವರ್ಷದ ಉಮೇಶ್, 48 ವರ್ಷ ರಮೇಶ್‍ನನ್ನು ಬಂಧಿಸಿದ್ದಾರೆ. ಸದ್ಯ ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಉಮೇಶ್ ಸಹೋದರ ರಾಜೇಶ್ ಸೇರಿದಂತೆ ಉಳಿದಿಬ್ಬರು ಆರೋಪಿಗಳು ಓಡಿಹೋಗಿದ್ದಾರೆ. ಇದನ್ನೂ ಓದಿ: ಧನ್ಯಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್-ಧಮ್ಕಿ ಹಾಕಿದ್ದು ಬೆಳ್ತಂಗಡಿ ಬಜರಂಗದಳದವರು ಅಂತ ತಾಯಿ ಕಣ್ಣೀರು

    ಇದನ್ನೂ ಓದಿ: ಅನ್ಯ ಧರ್ಮದ ಯುವಕರ ಜೊತೆ ಕಾಣಿಸಿಕೊಂಡರೆ ಧರ್ಮದೇಟು ಗ್ಯಾರಂಟಿ-ವಾರ್ನಿಂಗ್ ಮೆಸೇಜ್ ವೈರಲ್

  • ಮಂಗ್ಳೂರಲ್ಲಿ ಐವರು ವಿದ್ಯಾರ್ಥಿಗಳು ನೀರುಪಾಲು!

    ಮಂಗ್ಳೂರಲ್ಲಿ ಐವರು ವಿದ್ಯಾರ್ಥಿಗಳು ನೀರುಪಾಲು!

    ಮಂಗಳೂರು: ಈಜಲು ಹೋದ ಐವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

    ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮುಲ್ಲರಪಟ್ನದಲ್ಲಿರೋ ಫಲ್ಗುಣಿ ನದಿಯಲ್ಲಿ ಈ ದುರಂತ ಸಂಭವಿಸಿದೆ. ಮೃತರನ್ನು ಅಸ್ಲಾಂ(17), ರಮೀಜ್ (17), ಅಜ್ಮಲ್ (18), ಮುದಾಸಿರ್ (17), ಸವಾದ್ (17) ಎಂದು ಗುರುತಿಸಲಾಗಿದೆ.

    ಸೋಮವಾರ ರಜಾ ದಿನವಾಗಿದ್ದರಿಂದ ಸಂಜೆ ವಿದ್ಯಾರ್ಥಿಗಳು ನದಿಯಲ್ಲಿ ಈಜಲೆಂದು ತೆರಳಿದ್ದರು. ಹೀಗೆ ನದಿಯಲ್ಲಿ ಸ್ನಾನಕ್ಕೆಂದು ಹೋದ ಐವರು ರಾತ್ರಿಯಾದರೂ ವಾಪಾಸ್ಸಾಗದ ಹಿನ್ನೆಲೆಯಲ್ಲಿ ಪೋಷಕರು ನದಿ ದಡಕ್ಕೆ ಬಂದಿದ್ದಾರೆ. ಈ ವೇಳೆ ಐವರ ವಸ್ತ್ರ ಹಾಗೂ ಮೊಬೈಲ್ ಪತ್ತೆಯಾಗಿದೆ. ಇದರಿಂದ ಮಕ್ಕಳು ನೀರಿನಲ್ಲಿ ಮುಳುಗಿದ್ದಾರೆ ಎಂದು ಪೋಷಕರಿಗೆ ತಿಳಿದಿದೆ.

    ಇದನ್ನೂ ಓದಿ: ಕೊಪ್ಪಳದಲ್ಲಿ ಈಜಲು ಹೋದ ಮೂವರು ಹೆಣ್ಣುಮಕ್ಕಳು ಸೇರಿ ಐವರು ನೀರುಪಾಲು!

    ಸದ್ಯ ಐವರಲ್ಲಿ ಅಸ್ಲಾಂ ಎಂಬಾತನ ಶವ ಪತ್ತೆಯಾಗಿದ್ದು, ಇನ್ನು ಉಳಿದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

    ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

  • ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ: ಮೂವರ ಬಂಧನ

    ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ: ಮೂವರ ಬಂಧನ

    ಮಂಗಳೂರು: ರಾಜ್ಯದಲ್ಲೇ ಭಾರೀ ಸಂಚಲನ ಸೃಷ್ಟಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಬಂಧಿತರನ್ನು ಶಫೀ, ಷರೀಫ್, ಖಲಂದರ್ ಎಂಬುವುದಾಗಿ ಗುರುತಿಸಲಾಗಿದ್ದು, ಇವರ ಬಗ್ಗೆ ಪೂರ್ಣ ಮಾಹಿತಿ ತಿಳಿದುಬಂದಿಲ್ಲ.

    ಏನಿದು ಪ್ರಕರಣ?: ಕಳೆದ ಜುಲೈ 4 ರಂದು ರಾತ್ರಿ ಬಂಟ್ವಾಳ ತಾಲೂಕಿನ ಬಿಸಿರೋಡ್ ಬಳಿ ತನ್ನ ಲಾಂಡ್ರಿಯ ಬಾಗಿಲು ಹಾಕಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಏಕಾಏಕಿ ಶರತ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಜುಲೈ 7 ರಂದು ಆಸ್ಪತ್ರೆಯಲ್ಲೇ ಮೃತಪಟ್ಟಿದ್ದರು. ಆ ಬಳಿಕ ರಾಜ್ಯಾದ್ಯಂತ ಸಾಕಷ್ಟು ಹೋರಾಟಗಳು ನಡೆದಿತ್ತು.

    ಆ ಬಳಿಕ ಪೊಲೀಸರು ಸುಮಾರು 7 ತನಿಖಾ ತಂಡಗಳನ್ನು ರಚಿಸಿ ಬೇರೆ ಬೇರೆ ಕಡೆಗಳಲ್ಲಿ ಆರೋಪಿಗಳ ಪತ್ತೆಗೆ ಬಲೆಬೀಸಿದ್ದರು. ಅಲ್ಲದೇ ಪೊಲೀಸರಿಗೆ ಆರೋಪಿಗಳನ್ನು ಪತ್ತೆಹಚ್ಚುವುದು ಸವಾಲಾಗಿತ್ತು. ಘಟನೆ ಬಳಿಕ ಮಂಗಳೂರು, ಬಂಟ್ವಾಳ, ಬಿಸಿರೋಡಿನಲ್ಲಿ ಹಲವು ದಿನ 144 ಸೆಕ್ಷನ್ ಜಾರಿಯಾಗಿತ್ತು. ಸದ್ಯ ಇದೀಗ ಮೂವರು ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

    https://www.youtube.com/watch?v=o40hIeKFh8E

     

  • ಶರತ್ ಹತ್ಯೆಗೆ ಪಾಲಿಟಿಕ್ಸ್ ಪಂಚ್- ಹಂತಕರಿಗಾಗಿ ಎನ್‍ಐಎ ತನಿಖೆಗೆ ಕುಟುಂಬ ಪಟ್ಟು

    ಶರತ್ ಹತ್ಯೆಗೆ ಪಾಲಿಟಿಕ್ಸ್ ಪಂಚ್- ಹಂತಕರಿಗಾಗಿ ಎನ್‍ಐಎ ತನಿಖೆಗೆ ಕುಟುಂಬ ಪಟ್ಟು

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ನಡೆದು 10 ದಿನಗಳೇ ಕಳೆದುಹೋಗಿದೆ. ಶರತ್ ಹಂತಕರ ಸುಳಿವು ಸಿಕ್ಕಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳುತ್ತಿದ್ದರೂ, ಶರತ್ ಹೆತ್ತವರು ಮಾತ್ರ ಪೊಲೀಸ್ ತನಿಖೆಯ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.

    ಶರತ್ ಹತ್ಯೆಯ ಪ್ರಕರಣದ ತನಿಖೆಯನ್ನು ಪೊಲೀಸರು ಮಾಡ್ತಿದ್ರೂ, ತನಿಖೆಯ ಹಾದಿ ಶರತ್ ಹೆತ್ತವರಲ್ಲಿ ಅಸಮಾಧಾನ ಸೃಷ್ಟಿಸಿದೆ. ಶರತ್ ಸಾವಿಗೆ ಸಂಬಂಧಪಟ್ಟಂತೆ ಯಾವುದೇ ಪೊಲೀಸರು ಇದೂವರೆಗೂ ಶರತ್ ಹೆತ್ತವರನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದಿಲ್ಲ. ಈ ಬಗ್ಗೆ ಪಬ್ಲಿಕ್ ಟಿವಿ ಬಳಿ ಅಳಲು ತೋಡಿಕೊಂಡ ಶರತ್ ತಂದೆ ತನಿಯಪ್ಪ, ರಾಜ್ಯ ಸರ್ಕಾರದ ತನಿಖೆ ಬಗ್ಗೆ ನಮಗೆ ನಂಬಿಕೆ ಇಲ್ಲ. ಹೀಗಾಗಿ ಪ್ರಕರಣವನ್ನು ಕೇಂದ್ರಕ್ಕೆ ವರ್ಗಾಯಿಸಿ ಅಂತ ಒತ್ತಾಯಿಸುತ್ತಿದ್ದಾರೆ.

    ಶರತ್ ಮಡಿವಾಳ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕೆಂದು ಬಿಜೆಪಿ ಕೂಡ ಒತ್ತಾಯಿಸಿದೆ. ಈ ಸಂಬಂಧ ರಾಜ್ಯ ಬಿಜೆಪಿ ಸಂಸದರು ಇಂದು ದೆಹಲಿಯಲ್ಲಿ ಪ್ರತಿಭಟನೆ ಕೂಡ ಮಾಡುತ್ತಿದ್ದಾರೆ.

  • ಮೃತ ಶರತ್ ಮಡಿವಾಳ ಮನೆಗೆ ಸಚಿವ ರಮಾನಾಥ ರೈ ಭೇಟಿ

    ಮೃತ ಶರತ್ ಮಡಿವಾಳ ಮನೆಗೆ ಸಚಿವ ರಮಾನಾಥ ರೈ ಭೇಟಿ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಆರ್‍ಎಸ್‍ಎಸ್ ಕಾರ್ಯಕರ್ತ ಮೃತ ಶರತ್ ಮಡಿವಾಳ ಮನೆಗೆ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ರಮಾನಾಥ ರೈ ಭೇಟಿ ನೀಡಿದ್ದಾರೆ.

    ಘಟನೆ ನಡೆದು ಒಂಬತ್ತು ದಿನಗಳ ಬಳಿಕ ರೈ ಬಂಟ್ವಾಳದ ಸಜಿಪದಲ್ಲಿರುವ ಶರತ್ ಮನೆಗೆ ಭೇಟಿ ನೀಡಿ ಶರತ್ ತಂದೆ ತನಿಯಪ್ಪ ಹಾಗೂ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಭೇಟಿ ವೇಳೆ ಸ್ಥಳೀಯರಿಗೆ ಮಾತ್ರ ರೈ ಬೆಂಬಲಿಗರು ಸೂಚನೆ ನೀಡಿದ್ದು, ಮಾಧ್ಯಮದವರ ಪ್ರವೇಶವನ್ನು ನಿರಾಕರಿಸಿದ್ದಾರೆ. ಅಲ್ಲದೇ ಯಾರೂ ಕೂಡ ಫೊಟೋ ಕ್ಲಿಕ್ಕಿಸದಂತೆ ಸೂಚಿಸಿದ್ದರು ಎನ್ನಲಾಗಿದೆ.

    ಇದನ್ನೂ ಓದಿ: ಮೃತ ಶರತ್ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದ ಸಚಿವ ಡಿವಿಎಸ್

    20 ವರ್ಷ ರಮಾನಾಥ ರೈ ಬಟ್ಟೆ ಒಗೆದು ಇಸ್ತ್ರಿ ಮಾಡಿಕೊಟ್ಟಿದ್ರೂ ಇಂದು ನನ್ನ ನೋವನ್ನು ಕೇಳಲು ಬಂದಿಲ್ಲ ಅಂತ ಶರತ್ ತಂದೆ ತನಿಯಪ್ಪ ಮಡಿವಾಳ ಮಾಧ್ಯಮದ ಮುಂದೆ ಕಣ್ಣೀರಿಟ್ಟ ಬಳಿಕ ಇದೀಗ ಯಾರಿಗೂ ಮಾಹಿತಿ ನೀಡದೆ ರೈ ಶರತ್ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ. ಇದೇ ವೇಳೆ ಪ್ರಕರಣದ ಕುರಿತು ತನಿಖೆ ಮಾಡಿ ಆರೋಪಿಗಳನ್ನು ಶೀಘ್ರವೇ ಬಂಧಿಸುವ ಭರವಸೆ ನೀಡಿದ್ದಾರೆ.

    ಮಾಧ್ಯಮಗಳಲ್ಲಿ ಸುದ್ದಿಪ್ರಸಾರವಾಗಿ ಒಂದು ಗಂಟೆಯೊಳಗೆ ಶರತ್ ಮನೆಗೆ ಭೇಟಿ ಮಾಡಿದ ಫೋಟೋವನ್ನು ರೈ ಆಪ್ತ ಕಾರ್ಯದರ್ಶಿ ರಿಲೀಸ್ ಮಾಡಿದ್ದಾರೆ.

    ಇದನ್ನೂ ಓದಿ: 20 ವರ್ಷ ಬಟ್ಟೆ ಒಗೆದು ಕೊಟ್ರೂ ರೈ ನನ್ನ ನೋವನ್ನು ಕೇಳಲು ಬಂದಿಲ್ಲ: ಶರತ್ ತಂದೆ ತನಿಯಪ್ಪ ಕಣ್ಣೀರು

    https://www.youtube.com/watch?v=L5WjxAOQ_VE

  • ಮೃತ ಶರತ್ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದ ಸಚಿವ ಡಿವಿಎಸ್

    ಮೃತ ಶರತ್ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದ ಸಚಿವ ಡಿವಿಎಸ್

    ಮಂಗಳೂರು: ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಮನೆಗೆ ಇಂದು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಭೇಟಿ ನೀಡಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪದಲ್ಲಿರುವ ಶರತ್ ಮನೆಗೆ ಭೇಟಿ ನೀಡಿದ ಡಿವಿಎಸ್ ಶರತ್ ತಂದೆ ಹಾಗೂ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಈ ವೇಳೆ ಮಗನ ಸಾವನ್ನು ನೆನೆದು ಡಿವಿಎಸ್ ಮುಂದೆ ಶರತ್ ತಂದೆ ತನಿಯಪ್ಪ ಕಣ್ಣೀರು ಹಾಕಿದ್ರು. ಡಿವಿಎಸ್‍ಗೆ ಶಾಸಕ ಸುನೀಲ್ ಕುಮಾರ್, ಎಂಎಲ್‍ಸಿ ಗಣೇಶ್ ಕಾರ್ಣಿಕ್ ಸಾಥ್ ನೀಡಿದ್ರು.

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿವಿಎಸ್, ಶರತ್ ಒಬ್ಬ ಅಮಾಯಕ ಯುವಕ. ಒಂದು ಕಪ್ಪುಚುಕ್ಕೆ ಇಲ್ಲದವನ ಕೊಲೆಯಾಯ್ತು. ಇಂತಹ ನೂರು ಶರತ್ ಹುಟ್ಟಿ ಬರ್ತಾರೆ. ಆಡಳಿತ ಸೂತ್ರ ಹಿಡಿದವರೇ ಇದರ ಹಿಂದೆಯಿದ್ದಾರೆ. ಅವರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ ಅಂತ ಹೇಳಿದ್ದಾರೆ.

    ಇದೇ ವೇಳೆ ಡಿವಿಎಸ್ ತುಪ್ಪ ಸುರಿಯುತ್ತಾರೆಂಬ ರಮಾನಾಥ ರೈ ಹೇಳಿಕೆ ಪ್ರತಿಕ್ರಿಯಿಸಿದ ಅವರು, ಯಾರು ಯಾರಿಗೆ ತುಪ್ಪ ಸುರಿಯುತ್ತಾರೆ ನೋಡೋಣ. ತುಪ್ಪ ಯಾರಿಗೆ ಸುರಿಯುತ್ತಾರೆ ಅಂತ ಗೊತ್ತಾಗುತ್ತದೆ ಎಂದು ರೈ ವಿರುದ್ಧ ಕಿಡಿಕಾರಿದ್ರು.

  • 20 ವರ್ಷ ಬಟ್ಟೆ ಒಗೆದು ಕೊಟ್ರೂ ರೈ ನನ್ನ ನೋವನ್ನು ಕೇಳಲು ಬಂದಿಲ್ಲ: ಶರತ್ ತಂದೆ ತನಿಯಪ್ಪ ಕಣ್ಣೀರು

    20 ವರ್ಷ ಬಟ್ಟೆ ಒಗೆದು ಕೊಟ್ರೂ ರೈ ನನ್ನ ನೋವನ್ನು ಕೇಳಲು ಬಂದಿಲ್ಲ: ಶರತ್ ತಂದೆ ತನಿಯಪ್ಪ ಕಣ್ಣೀರು

    ಮಂಗಳೂರು: ಉಸ್ತುವಾರಿ ಸಚಿವ ರಮಾನಾಥ ರೈ ಬಟ್ಟೆ ಒಗೆದವ ನಾನು. ಅವರ ಅಂಗಿ ಪ್ಯಾಂಟ್ 20 ವರ್ಷ ಒಗೆದಿದ್ದೇನೆ. ದಿನಂಪ್ರತಿ ಇಸ್ತ್ರಿ ಮಾಡಿಕೊಟ್ಟಿದ್ದೇನೆ. ಆದ್ರೆ ಇದೀಗ ಘಟನೆಯಾಗಿ 8 ದಿನ ಆಗ್ತಾ ಬಂದಿದೆ. ಆದ್ರೂ ರೈ ನನ್ನ ನೋವನ್ನು ಕೇಳಲು ಬಂದಿಲ್ಲ ಅಂತ ಆರ್‍ಎಸ್‍ಎಸ್ ಕಾರ್ಯಕರ್ತ ಮೃತ ಶರತ್ ಮಡಿವಾಳ ತಂದೆ ಬೇಸರ ವ್ಯಕ್ತಪಡಿಸಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ಸಜಿಪದಲ್ಲಿ ಪಬ್ಲಿಕ್ ಟಿವಿ ಜೊತೆ ಅಳಲು ತೋಡಿಕೊಂಡ ಶರತ್ ತಂದೆ ತನಿಯಪ್ಪ, ರೈ ಚಿಕ್ಕಂದಿನಿಂದ ನಮ್ಮ ಅಂಗಡಿ ಬಳಿ ಓಡಾಡುತ್ತಿದ್ದರು. ಅಂದು ಸೇವಾ ಮನೋಭಾವನೆ ನನ್ನಲ್ಲಿತ್ತು. ಹೀಗಾಗಿ ಅವರ ಬಟ್ಟೆ ಒಗೆದು, ಇಸ್ತ್ರೀ ಮಾಡಿ ಕೊಟ್ಟಿದ್ದೆ. ಆದ್ರೆ ಇವತ್ತಿಗೆ ಇದನ್ನೆಲ್ಲಾ ಮರೆತ್ರು. ನಾನು ಕಾಂಗ್ರೆಸ್-ಬಿಜೆಪಿ, ಹಿಂದೂ-ಮುಸ್ಲಿಮರೆಂದು ಭೇದ-ಭಾವ ಮಾಡಿಲ್ಲ. ನನ್ನ ಕುಟುಂಬದ ಮೇಲೆ ಅವರಿಗೆ ಯಾಕೆ ಕೋಪ ತಾತ್ಸಾರ ಅಂತ ಶರತ್ ತಂದೆ ಕಣ್ಣೀರು ಹಾಕಿದ್ರು.

    ನನ್ನ ಚಿತೆಗೆ ಶರತ್ ಬೆಂಕಿಯಿಡಬೇಕಿತ್ತು. ಕೊಂದ ದುಷ್ಕರ್ಮಿಗಳು ಭೂಮಿ ಮೇಲೆ ಶಾಶ್ವತವಲ್ಲ. ದೇವರೇ ಅವರನ್ನ ನೋಡಿಕೊಳ್ಳಲಿ. ನನ್ನ ಮನಸ್ಸನ್ನು ಗಟ್ಟಿ ಮಾಡಿಕೊಂಡಿದ್ದೇನೆ. ನನ್ನ ಕುಟುಂಬಕ್ಕೆ ಗತಿಯಿಲ್ಲದಂತಾಗಿದೆ. ದೇವರೇ ನಮ್ಮ ಸಂಸಾರ ನೋಡಿಕೊಳ್ಳಲಿ ಅಂತ ಶರತ್ ತಂದೆ ತನಿಯಪ್ಪ ಹೇಳಿದರು.

    ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮನೆಯಲ್ಲಿ ಸದ್ಗತಿಯ ಕಾರ್ಯ ನಡೆಯಲಿದ್ದು, ಜುಲೈ 20ಕ್ಕೆ ವೈಕುಂಠ ಸಮಾರಾಧನೆ ನಡೆಯಲಿದೆ. ಬಂಟ್ವಾಳ ನಂದಾವರ ದೇವಸ್ಥಾನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

  • ಬಂಟ್ವಾಳದ ಬೆಂಜನಪದವಿನಲ್ಲಿ ಎಸ್‍ಡಿಪಿಐ ವಲಯ ಅಧ್ಯಕ್ಷನ ಬರ್ಬರ ಹತ್ಯೆ

    ಬಂಟ್ವಾಳದ ಬೆಂಜನಪದವಿನಲ್ಲಿ ಎಸ್‍ಡಿಪಿಐ ವಲಯ ಅಧ್ಯಕ್ಷನ ಬರ್ಬರ ಹತ್ಯೆ

    ಮಂಗಳೂರು: ಎಸ್‍ಡಿಪಿಐ ವಲಯ ಅಧ್ಯಕ್ಷನನ್ನ ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ.

    ಪೊಳಲಿ ಸಮೀಪದ ಅಮ್ಮುಂಜೆ ನಿವಾಸಿ ಅಶ್ರಫ್ (30) ಕೊಲೆಯಾದ ವ್ಯಕ್ತಿ. ಮಂಗಳೂರು ಜಿಲ್ಲೆ ಬಂಟ್ವಾಳ ತಾಲೂಕಿನ ಬೆಂಜನಪದವಿನಲ್ಲಿ ಈ ಘಟನೆ ನಡೆದಿದೆ. ಬೈಕಿನಲ್ಲಿ ಬಂದ ಮುಸುಕುಧಾರಿಗಳು ಆಟೋ ತಡೆದು ಅಶ್ರಫ್‍ನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ.

    ಅಶ್ರಫ್ ಎರಡು ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಹಳೇ ವೈಷಮ್ಯದಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಹಿನ್ನೆಲೆಯಲ್ಲಿ ಬಂಟ್ವಾಳ ಹಾಗೂ ಕಲ್ಲಡ್ಕದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಪೊಲೀಸರು ಅಂಗಡಿ-ಮುಂಗಟ್ಟಿಗಳನ್ನ ಮುಚ್ಚಿಸುತ್ತಿದ್ದಾರೆ.

    ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಗಿದೆ.