Tag: Baraguru Ramachandrappa

  • ಸ್ವಪ್ನಮಂಟಪ: ಶೂಟಿಂಗ್ ಮುಗಿಸಿದ ಬರಗೂರು ರಾಮಚಂದ್ರಪ್ಪ

    ಸ್ವಪ್ನಮಂಟಪ: ಶೂಟಿಂಗ್ ಮುಗಿಸಿದ ಬರಗೂರು ರಾಮಚಂದ್ರಪ್ಪ

    ಮೈಸೂರಿನ ಬಾಬುನಾಯ್ಕ್ ಅವರು ತಮ್ಮ ಮಲೈಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ‘ಸ್ವಪ್ನಮಂಟಪ’ ಎಂಬ ಕನ್ನಡ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರವು ಬರಗೂರು ರಾಮಚಂದ್ರಪ್ಪನವರ ಅದೇ ಹೆಸರಿನ ಕಾದಂಬರಿಯನ್ನು ಆಧರಿಸಿದೆ. ಬರಗೂರು ರಾಮಚಂದ್ರಪ್ಪನವರೇ ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶನ ಮಾಡಿದ್ದಾರೆ. ‘ಸ್ವಪ್ನಮಂಟಪ’ ಚಿತ್ರವು ಈಗಾಗಲೇ ಚಿತ್ರೀಕರಣ ಮತ್ತು ಡಬ್ಬಿಂಗ್ ಕೆಲಸಗಳನ್ನು ಮುಗಿಸಿದೆ. ಕನಕಪುರ ರಸ್ತೆಯ ಒಂದು ಹಳ್ಳಿಯಲ್ಲಿ ಚಿತ್ರೀಕರಣವನ್ನು ಮಾಡಲಾಗಿದೆ. ಹೊಸಮನೆ ಮೂರ್ತಿಯವರು ಈ ಸೆಟ್ ನಿರ್ಮಾಣ ಮಾಡಿದ್ದಾರೆ.

    ‘ಸ್ವಪ್ನಮಂಟಪ’ ಚಿತ್ರವು ಪಾರಂಪರಿಕ ಸ್ಥಳಗಳ ರಕ್ಷಣೆಯನ್ನು ಪ್ರತಿಪಾದಿಸುವ ಕಥಾವಸ್ತುವನ್ನು ಒಳಗೊಂಡಿದೆ. ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ ಸ್ವಪ್ನಮಂಟಪವನ್ನು ಕೆಡವಿ ಹಾಕುವ ಪ್ರಯತ್ನವನ್ನು ಕೆಲವರು ಮಾಡಿದಾಗ , ಕಥಾನಾಯಕ ಮತ್ತು ನಾಯಕಿ ಜನರನ್ನು ಸಂಘಟಿಸಿ ಸ್ವಪ್ನಮಂಟಪವನ್ನು ಉಳಿಸಿ ಸರ್ಕಾರದ ಅಧಿಕೃತ ಸ್ಮಾರಕದ ಪಟ್ಟಿಗೆ ಸೇರಿಸುವ ಮೂಲಕ ಚಾರಿತ್ರಿಕ ಸ್ಮಾರಕಗಳ ಪರಂಪರೆಯನ್ನು ಎತ್ತಿ ಹಿಡಿಯುತ್ತಾರೆ. ಈ ಸಾಮಾಜಿಕ ಚಿತ್ರದಲ್ಲಿ ಸ್ವಪ್ನಮಂಟಪವನ್ನು ನಿರ್ಮಾಣ ಮಾಡಿದ ರಾಜ-ರಾಣಿ ಯರ ಕಥನವನ್ನೂ ಹಿನ್ನೋಟ ತಂತ್ರದಲ್ಲಿ ಸೇರಿಸಿರುವುದು ಒಂದು ವಿಶೇಷ.

    ನಾಯಕ ಮತ್ತು ನಾಯಕಿಯ ಪಾತ್ರದಲ್ಲಿ ಕ್ರಮವಾಗಿ ವಿಜಯ ರಾಘವೇಂದ್ರ ಮತ್ತು ರಂಜಿನಿ ರಾಘವನ್ ಅಭಿನಯಿಸಿದ್ದಾರೆ. ಇವರಿಬ್ಬರೂ ದ್ವಿಪಾತ್ರಗಳಲ್ಲಿ ಅಭಿನಯಿಸಿರುವುದು ಸಿನಿಮಾದ ಒಂದು ವಿಶೇಷ. ಜೊತೆಗೆ ಸುಂದರರಾಜ್, ಶೋಭಾರಾಘವೇಂದ್ರ, ರಜನಿ, ಮಹಾಲಕ್ಷ್ಮೀ, ಸುಂದರರಾಜ ಅರಸು, ರಾಜಪ್ಪದಳವಾಯಿ, ಅಂಬರೀಶ ಸಾರಂಗಿ, ಮೈಸೂರು ಮಂಜುಳ, ಉಮ್ಮತ್ತೂರು ಬಸವರಾಜು, ವೆಂಕಟರಾಜು, ಶಿವಲಿಂಗಪ್ರಸಾದ್, ಭಾರತಿರಮೇಶ್, ಗುಂಡಿ ರಮೇಶ್ ಮುಂತಾದವರು ತಾರಾಗಣದಲ್ಲಿ ಇದ್ದಾರೆ.

     

    ಬಾಬುನಾಯ್ಕ್ ನಿರ್ಮಾಣ ಮತ್ತು ಬರಗೂರರ ನಿರ್ದೇಶನದ ಈ ಚಿತ್ರವು ನಾಗರಾಜ ಆದವಾನಿ ಛಾಯಗ್ರಹಣ, ಸುರೇಶ್ ಅರಸು ಸಂಕಲನ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಮತ್ತು ತ್ರಿಭುವನ್ ನೃತ್ಯ ಸಂಯೋಜನೆಯನ್ನು ಒಳಗೊಂಡಿದೆ. ನಟರಾಜ್ ಶಿವು ಮತ್ತು ಪ್ರವೀಣ್ ಸಹನಿರ್ದೇಶಕರಾಗಿದ್ದಾರೆ.

  • ಅಹಮದಾಬಾದ್ ಚಿತ್ರೋತ್ಸವಕ್ಕೆ ಬರಗೂರು ಸಿನಿಮಾ

    ಅಹಮದಾಬಾದ್ ಚಿತ್ರೋತ್ಸವಕ್ಕೆ ಬರಗೂರು ಸಿನಿಮಾ

    ಹಮದಾಬಾದ್ (Ahmedabad) ಅಂತರರಾಷ್ಟ್ರೀಯ ಮಕ್ಕಳ ಚಿತ್ರೋತ್ಸವಕ್ಕೆ (Chirotsava) ಬರಗೂರು ರಾಮಚಂದ್ರಪ್ಪ (Baraguru Ramachandrappa) ನಿರ್ದೇಶನದ ‘ಚಿಣ್ಣರ ಚಂದ್ರ’ (Chinnara Chandra) ಚಿತ್ರ ಅಧಿಕೃತವಾಗಿ ಆಯ್ಕೆಯಾಗಿದೆ. ಸ್ಪರ್ಧಾ ವಿಭಾಗದಲ್ಲಿ ಪ್ರವೇಶ ಪಡೆದಿದೆ.

    ಈ ಚಿತ್ರವು ಈಗಾಗಲೇ ಮೆಲ್ಬರ್ನ್ ಅಂತರರಾಷ್ಟ್ರೀಯ ಚಿತ್ರೋತ್ಸವದ ಸ್ಪರ್ಧಾ ವಿಭಾಗಕ್ಕೆ ಆಯ್ಕೆಯಾಗಿ ಸ್ಪರ್ಧೆಯ ಅಂತಿಮ ಹಂತ ತಲುಪಿದೆ. ಚಿಣ್ಣರ ಚಂದ್ರ ಚಿತ್ರವು ಶಿಕ್ಷಣದ ಮಹತ್ವವನ್ನು ಸಾದರ ಪಡಿಸುತ್ತಲೇ ಸಮಾಜದಲ್ಲಿ ಸದಭಿರುಚಿ, ಸೌಹಾರ್ದತೆ ಮತ್ತು ಸಮಾನತೆ ಅಗತ್ಯ ಎಂಬುದನ್ನೂ ಮಕ್ಕಳ ಮೂಲಕ ಅಭಿವ್ಯಕ್ತ ಪಡಿಸುತ್ತದೆ. ಜೊತೆಗೆ ಜನಪದ ಕಥೆಗಳು ಮಕ್ಕಳ ಮನಸ್ಸಿನ ಭಾಗವಾಗುವುದನ್ನು ಚಿತ್ರಿಸುತ್ತದೆ.

    ಬರಗೂರರ ಅಡಗೂಲಜ್ಜಿ ಎಂಬ ಕಾದಂಬರಿಯನ್ನು ಆಧರಿಸಿರುವ ಈ ಚಿತ್ರವನ್ನು ಜಿ.ಎಸ್ ಗೋವಿಂದರಾಜು (ರಾಜಶೇಖರ್) ನಿರ್ಮಿಸಿದ್ದಾರೆ. ತಾರಾಗಣದಲ್ಲಿ ಆಕಾಂಕ್ಷ್ ಬರಗೂರ್, ನಿಕ್ಷೇಪ, ಷಡ್ಜ, ಈಶಾನ್, ಅಭಿನವ್ ನಾಗ್, ಸುಂದರರಾಜ್, ರೇಖಾ, ವತ್ಸಲ ಮೋಹನ್, ರಾಧ ರಾಮಚಂದ್ರ, ರಾಘವ, ರಾಜಪ್ಪ ದಳವಾಯಿ, ಸುಂದರರಾಜ್ ಅರಸು, ವೆಂಕಟರಾಜು, ಹಂಸ ಮುಂತಾದವರಿದ್ದಾರೆ.

    ಸಂಕಲನಕಾರರಾಗಿ ಸುರೇಶ್ ಅರಸು, ಛಾಯಾಗ್ರಾಹಕರಾಗಿ ನಾಗರಾಜ್ ಆದವಾನಿ, ಸಂಗೀತ ನಿರ್ದೇಶಕರಾಗಿ ಶಮಿತ ಮಲ್ನಾಡ್ ಕೆಲಸ ಮಾಡಿದ್ದಾರೆ. ಸಹ ನಿರ್ದೇಶಕರು ನಟರಾಜ್ ಶಿವ ಮತ್ತು ಪ್ರವೀಣ್. ಚಿಣ್ಣರ ಚಂದ್ರ ಚಿತ್ರವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಲ್ಲದೇ ಶಾಲಾ ಮಕ್ಕಳಿಗೆ ರಾಜ್ಯದಾದ್ಯಂತ ಪ್ರದರ್ಶಿಸುವ ಉದ್ದೇಶ ಹೊಂದಲಾಗಿದೆ.

  • ಬರಗೂರು ನಿರ್ದೇಶನದ ಚಿತ್ರಕ್ಕೆ ಮೊಮ್ಮಗನೇ ನಾಯಕ

    ಬರಗೂರು ನಿರ್ದೇಶನದ ಚಿತ್ರಕ್ಕೆ ಮೊಮ್ಮಗನೇ ನಾಯಕ

    ರಗೂರು ರಾಮಚಂದ್ರಪ್ಪ (Baraguru Ramachandrappa) ಮಕ್ಕಳ ಚಿತ್ರವೊಂದನ್ನು ಸದ್ದಿಲ್ಲದೆ ಸಿದ್ಧ ಮಾಡಿದ್ದಾರೆ. ತಮ್ಮ ರಚನೆಯ ‘ಅಡಗೂಲಜ್ಜಿ’ (Adagoolajji) ಎಂಬ ಕಾದಂಬರಿಯನ್ನು ಆಧರಿಸಿದ ಈ ಚಿತ್ರಕ್ಕೆ ‘ಚಿಣ್ಣರ ಚಂದ್ರ’ ಎಂದು ಹೆಸರಿಡಲಾಗಿದೆ. ಬರಗೂರರ ಮೊಮ್ಮಗ ಆಕಾಂಕ್ಷ್ ಬರಗೂರು (Akanksh Baraguru) ಈ ಹಿಂದೆ ಬಯಲಾಟದ ಭೀಮಣ್ಣ ಮತ್ತು ತಾಯಿ ಕಸ್ತೂರ್ ಗಾಂಧಿ ಚಿತ್ರಗಳಲ್ಲಿ ಪುಟ್ಟ ಪಾತ್ರ ವಹಿಸಿದ್ದು ‘ಚಿಣ್ಣರ ಚಂದ್ರ’ದಲ್ಲಿ ನಾಯಕ ಪಾತ್ರವನ್ನು ನಿರ್ವಹಿಸಿರುವುದು ಈ ಚಿತ್ರದ ಒಂದು ವಿಶೇಷ.

    ಆಕಾಂಕ್ಷ್ ಬರಗೂರು ಜೊತೆಗೆ ಈಶಾನ್ ಪಾಟೀಲ್, ನಿಕ್ಷೇಪ್, ಅಭಿನವ್ ನಾಗ್, ಶಡ್ಜಹೆಗ್ಡೆ ಮುಂತಾದ ಬಾಲ ಕಲಾವಿದರು ಅಭಿನಯಿಸಿದ್ದಾರೆ. ಹಿರಿಯ ಕಲಾವಿದರಾದ ಸುಂದರರಾಜ್, ರೇಖಾ, ರಾಧಾ ರಾಮಚಂದ್ರ ಅವರಲ್ಲದೆ ರಾಘವ್, ಸುಂದರರಾಜ ಅರಸು, ಹಂಸ, ವೆಂಕಟರಾಜು, ಗೋವಿಂದರಾಜು, ವತ್ಸಲಾ ಮೋಹನ್, ರಾಜಪ್ಪ ದಳವಾಯಿಯವರು ಈ ಚಿತ್ರದಲ್ಲಿ ನಟ-ನಟಿಯರಾಗಿ ಪಾಲ್ಗೊಂಡಿದ್ದಾರೆ. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ `ಜೋಶ್’ ನಾಯಕಿ ಪೂರ್ಣಾ

    ‘ಚಿಣ್ಣರ ಚಂದ್ರ’ ಚಿತ್ರವು ಪ್ರಮುಖವಾಗಿ ಮಕ್ಕಳಿಗೆ ಅಗತ್ಯವಾದ ಉತ್ತಮ ಶಿಕ್ಷಣ, ಕ್ರೀಡೆ ಮುಂತಾದ ಆಶಯಗಳ ಜೊತೆಗೆ ಸಮಾನತೆ ಮತ್ತು ಸೌಹಾರ್ದತೆಯ ಸಂದೇಶವನ್ನು ನೀಡುತ್ತದೆ. ಈ ಸಿನಿಮಾದಲ್ಲಿ ಅಡಗೂಲಜ್ಜಿಯ ಪಾತ್ರದ ಮೂಲಕ ಮಕ್ಕಳಿಗೆ ಜನಪದ ಕತೆಗಳ ಪರಿಚಯವಾಗುತ್ತದೆ. ಊರಿಗೆ ಟೂರಿಂಗ್ ಟಾಕೀಸ್ ಬಂದು ಸಿನಿಮಾಗಳಿಂದ ಜನಪದ ಕತೆಗಳಿಗೆ ಧಕ್ಕೆ ಬರುತ್ತದೆಯೆಂದುಕೊಂಡಾಗ ಅಡಗೂಲಜ್ಜಿಯು ಸಿನಿಮಾ ಕತೆಗಳನ್ನೇ ಜನಪದ ಕತೆಗಳನ್ನಾಗಿಸಿ ಮಕ್ಕಳು ಮತ್ತು ಹಿರಿಯರಿಗೆ ಹೇಳುತ್ತಾಳೆ. ಈ ಮೂಲಕ ಕಥನದ ಮಹತ್ವದ ಜೊತೆಗೆ ಜಾನಪದವು ಆಧುನಿಕ ರೂಪ ಪಡೆಯುವ ಹೊಸ ವಿಧಾನವನ್ನು ನಿರೂಪಿಸಲಾಗಿದೆ. ಜಾನಪದಕ್ಕೆ ಅಂತ್ಯವಿಲ್ಲವೆಂದು ಧ್ವನಿಸಲಾಗಿದೆ.

    ಸಿನಿಮಾ ಕೂಡ ಒಂದು ಜಾನಪದವಾಗುವುದನ್ನು ಸಾಂಕೇತಿಕವಾಗಿ ಹೇಳಲಾಗಿದೆ. ಮಕ್ಕಳು ಈ ಹಿನ್ನೆಲೆಯಲ್ಲಿ ಉತ್ತಮ ಅಭಿರುಚಿಯ ಸಿನಿಮಾಗಳಿಗಾಗಿ ಒತ್ತಾಯಿಸಿ ನೈತಿಕ ಮೌಲ್ಯವನ್ನು ಮೆರೆಯುತ್ತಾರೆ. ಹೀಗೆ ಶಿಕ್ಷಣ, ಸಿನಿಮಾ, ಜನಪದ ಕಥನಗಳೊಂದಾದ ವಿಶಿಷ್ಟತೆಯನ್ನು ಈ ಸಿನಿಮಾದಲ್ಲಿ ಕಾಣಬಹುದು. ‘ಚಿಣ್ಣರ ಚಂದ್ರ’ ಸಿನಿಮಾವನ್ನು ಶ್ರೀ ಗೋವಿಂದರಾಜ್ ಅಲಿಯಾಸ್ ಜಿಗಣಿ ರಾಜಶೇಖರ್ ಅವರು ನಿರ್ಮಾಣ ಮಾಡಿದ್ದು ಬರಗೂರರು ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶಿಸಿದ್ದಾರೆ. ಈ ಚಿತ್ರಕ್ಕೆ ಸುರೇಶ್ ಅರಸು ಸಂಕಲನ, ನಾಗರಾಜ ಆದವಾನಿ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನವಿದೆ.

  • ನಾಟಕ ಟಿಪ್ಪು ವಿರುದ್ಧ ಅಲ್ಲ, ತುಕ್ಡೆ ತುಕ್ಡೆ ಅನ್ನೋರ ವಿರುದ್ಧ- ಅಡ್ಡಂಡ ಕಾರ್ಯಪ್ಪ

    ನಾಟಕ ಟಿಪ್ಪು ವಿರುದ್ಧ ಅಲ್ಲ, ತುಕ್ಡೆ ತುಕ್ಡೆ ಅನ್ನೋರ ವಿರುದ್ಧ- ಅಡ್ಡಂಡ ಕಾರ್ಯಪ್ಪ

    ಕೋಲಾರ: ನನ್ನ ನಾಟಕ ಟಿಪ್ಪು ವಿರುದ್ಧ ಅಲ್ಲ, ಮುಸ್ಲಿಂ ವಿರುದ್ಧ ಅಲ್ಲ. ತುಕ್ಡೆ ತುಕ್ಡೆ ಅನ್ನೋರು, ಪೊಲೀಸ್ ಠಾಣೆಗೆ ಬೆಂಕಿ ಹಾಕುವವರ ವಿರುದ್ಧವಾಗಿದೆ ಎಂದು ರಂಗಾಯಣ (Rangayana) ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ (Addanda Cariappa) ತಿಳಿಸಿದ್ದಾರೆ.

    ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಕಷ್ಟು ಜನರು ವಿರೋಧ ಮಾಡುತ್ತಿದ್ದಾರೆ. ರಣ ಹೇಡಿಯ ನಿಜ ರೂಪ ಬಯಲು ಮಾಡುವುದು ನನ್ನ ಉದ್ದೇಶ. ನಾಟಕ ಅಂದ್ರೆ ಕಲ್ಪನೆ ಅಲ್ಲ, ಸತ್ಯದ ಅನಾವರಣ. ಟಿಪ್ಪು ವೀರನಲ್ಲ. ಆತನ ಮತ್ತೊಂದು ಮುಖವಾಡವೆ ಟಿಪ್ಪು ನಿಜ ಕನಸುಗಳು (Tippu Nija Kanasugalu) ನಾಟಕ ಎಂದು ಹೇಳಿದ್ದಾರೆ. ಇದನ್ನೂ ಓದಿ: ನನ್ನ ಸ್ಥಿತಿ ಯಾರಿಗೂ ಬೇಡ- ಅಪ್ಪನ ನೆನಪಿಗಾಗಿ ಕ್ಯಾಂಟೀನ್ ಮಂಜಣ್ಣನಿಂದ ಉಚಿತ ಅಂಬುಲೆನ್ಸ್ ಸೇವೆ

    ಟಿಪ್ಪು ನಿಜ ಕನಸುಗಳು ನಾಟಕ ಪ್ರದರ್ಶನದ ಮೂಲಕ ಟಿಪ್ಪುವಿನ ಬಗ್ಗೆ ಮರೆಮಾಚಿದ್ದ ಮತ್ತೊಂದು ಮುಖವಾಡ ಬಯಲಾಗುತ್ತಿದೆ. ಮರೆಮಾಚಿದ್ದ ವಿಚಾರಗಳನ್ನು ಜನರ ಮುಂದೆ ತರುವ ಪ್ರಯತ್ನ ಮಾಡಲಾಗುತ್ತಿದೆ. ಮಾ.7 ರಂದು ಕೋಲಾರ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ನಾಟಕ ಪ್ರದರ್ಶನವಾಗಲಿದೆ. ಈಗಾಗಲೇ ರಾಜ್ಯದಲ್ಲಿ 55 ಪ್ರದರ್ಶನಗಳನ್ನ ಮಾಡಲಾಗಿದೆ. ಆದ್ರೆ ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ನನ್ನ ವಾಕ್ ಸ್ವಾತಂತ್ರ್ಯ ಬಳಸಿಕೊಂಡು ನಾನು ನಾಟಕ ರೂಪಿಸಿದ್ದೇನೆ. ರಫಿವುಲ್ಲಾ ಎಂಬಾತ ನನ್ನ ವಿರುದ್ಧ ಬೆಂಗಳೂರಿನಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದಾನೆ. ನ್ಯಾಯಾಲಯದಲ್ಲಿ ನನ್ನ ಪರವಾಗಿ ತೀರ್ಪು ಬರಲಿದೆ. ನನ್ನ ನಾಟಕ ಪ್ರತಿನಿತ್ಯ ರಂಗಭೂಮಿಯಲ್ಲಿ ಸದ್ದು ಮಾಡುತ್ತದೆ. ನಾನು ಬಂದಾಗ ನನ್ನ ವಿರುದ್ಧ ಮಾತನಾಡುವುದು, ಫ್ಲೆಕ್ಸ್‍ಗಳನ್ನ ಹರಿದು ಹಾಕುವ ಕೆಲಸವನ್ನು ಮುಸ್ಲಿಂ ಮುಖಂಡರು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

    ಬರಗೂರು ರಾಮಚಂದ್ರಪ್ಪ (Baraguru Ramachandrappa), ಗಿರೀಶ್ ಕಾರ್ನಾಡ್ (Girish Karnad) ಅವರು ಬರೆದ ನಾಟಕಗಳಿಗೆ ವಿರೋಧ ಇಲ್ಲ. ಆದ್ರೆ ನನ್ನ ನಾಟಕಕ್ಕೆ ಮಾತ್ರ ವಿರೋಧ ಇದೆ. ಯಾಕೆ ಅವರೆಲ್ಲಾ ದೊಡ್ಡವರು ಅಂತ ಪ್ರಶ್ನೆ ಮಾಡುತ್ತಿಲ್ವಾ? ಅವರೆಲ್ಲಾ ಎಡಪಂಥೀಯರು, ಬ್ರಾಹ್ಮಣರು ಸೇರಿದಂತೆ ಬೇರೆ ಬೇರೆಯವರನ್ನ ಹಲವು ರೀತಿಯಲ್ಲಿ ವರ್ಣಿಸಿದಾಗ ಖುಷಿ ಪಡ್ತಾರೆ. ಆದ್ರೆ ಟಿಪ್ಪು ಬಗ್ಗೆ ಅವರ ನಿಜ ರೂಪ ಬಯಲಾಗುತ್ತೆ ಅನ್ನೋ ಕಾರಣಕ್ಕೆ ವಿರೋಧ ಮಾಡಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ

  • ಆಸ್ಪತ್ರೆಯಿಂದ ಡಿಸ್ಚಾರ್ಜ್ – ಆರೋಗ್ಯವಾಗಿದ್ದೇನೆ ಎಂದ ಬರಗೂರು ರಾಮಚಂದ್ರಪ್ಪ

    ಆಸ್ಪತ್ರೆಯಿಂದ ಡಿಸ್ಚಾರ್ಜ್ – ಆರೋಗ್ಯವಾಗಿದ್ದೇನೆ ಎಂದ ಬರಗೂರು ರಾಮಚಂದ್ರಪ್ಪ

    ದಾವಣಗೆರೆ: ಸಾಹಿತಿ ಬರಗೂರು ರಾಮಚಂದ್ರಪ್ಪ (Baraguru Ramachandrappa) ಅವರು ಭಾನುವಾರ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ದಾವಣಗೆರೆಯ (Davanagere) ಹರಿಹರದಲ್ಲಿ ನಡೆದಿತ್ತು. ಇದೀಗ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ (Discharged) ಆಗಿರುವ ಲೇಖಕರು ಆರೋಗ್ಯವಾಗಿರುವುದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

    ಡಿಸ್ಚಾರ್ಜ್ ಬಳಿಕ ನಗರದಲ್ಲಿ ಮಾತನಾಡಿದ ಅವರು, ಕವಿಗೋಷ್ಠಿ ಉದ್ಘಾಟನೆ ನಂತರ ಸಭಾಂಗಣದ ಹೊರಗೆ ಪೋಸ್ಟರ್ ಬಿಡುಗಡೆ ಮಾಡಲು ಹೋಗಿದ್ದೆ. ಎಸ್‌ಸಿ, ಎಸ್‌ಟಿ ಸ್ಪರ್ಧಾ ಪರೀಕ್ಷೆಗೆ ಪೋಸ್ಟರ್ ಬಿಡುಗಡೆ ಮಾಡಿದ್ದೆವು. ಆಗ ತಲೆ ಸುತ್ತು ಬಂದಂತಾಯಿತು. ತಕ್ಷಣ ಹೋಗಿ ಕಾರಿನಲ್ಲಿ ಕುಳಿತುಕೊಂಡೆ. ಬಳಿಕ ಸ್ನೇಹಿತರು ಆಸ್ಪತ್ರೆಗೆ ಕರೆದೊಯ್ದರು. ನನಗೆ ಕೆಲ ನಿಮಿಷಗಳ ಕಾಲ ಪ್ರಜ್ಞೆ ಇರಲಿಲ್ಲ ಎಂದು ಘಟನೆ ಬಗ್ಗೆ ವಿವರಿಸಿದರು.

    BaraguruRamachandrappa

    ನನಗೆ ಬಿಪಿ, ಶುಗರ್ ಇಲ್ಲ. ಆದರೆ ಇದೆಲ್ಲಾ ಆಗಿರುವ ಹಿನ್ನೆಲೆ ವೈದ್ಯರು ಇಸಿಜಿ ಬಿಪಿ ಶುಗರ್ ಟೆಸ್ಟ್ ಮಾಡಿದ್ದಾರೆ. ಹೆಚ್ಚು ಒತ್ತಡದಿಂದ ಈ ರೀತಿಯಾಗುತ್ತದೆ ಎಂದು ಹೇಳಿದ್ದಾರೆ. ವೈದ್ಯರು ಡ್ರಿಪ್ಸ್ ಹಾಕಿದ್ರು, ನಾನು ವಿಶ್ರಾಂತಿ ಪಡೆದು ಈಗ ಡಿಸ್ಚಾರ್ಚ್ ಆಗಿದ್ದೇನೆ. ಡಿಸ್ಚಾರ್ಜ್ ಆಗುವ ಮುನ್ನವೂ ವೈದ್ಯರು ಮತ್ತೊಮ್ಮೆ ತಪಾಸಣೆ ನಡೆಸಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: IAF Jets Crashː ವಾಯುಸೇನಾ ವಿಮಾನಗಳು ಪತನ – ಬ್ಲ್ಯಾಕ್‌ ಬಾಕ್ಸ್‌ ಪತ್ತೆ

    ನಾನು ಕುಸಿದಿದ್ದ ಕ್ಷಣ ಸ್ನೇಹಿತರಲ್ಲಿ ಆತಂಕ ಹುಟ್ಟಿದ್ದು ನಿಜ. ನನ್ನ ಕಾಳಜಿ ವಹಿಸಿದ ಸ್ನೇಹಿತರಿಗೂ, ಮಾಧ್ಯಮ ಮಿತ್ರರಿಗೂ ಧನ್ಯವಾದಗಳು. ವೈದ್ಯರು ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ನಾನು ಬೆಂಗಳೂರಿಗೆ ಹೋದ ಮೇಲೆ ಮತ್ತೊಮ್ಮೆ ಆರೋಗ್ಯ ತಪಾಸಣೆ ಮಾಡಿಸುತ್ತೇನೆ. ವೈದ್ಯರು ವಿಶ್ರಾಂತಿ ಬೇಕು ಎಂದಿದ್ದಾರೆ, ಅದರಂತೆ ಪಾಲಿಸುತ್ತೇನೆ ಎಂದರು. ಇದನ್ನೂ ಓದಿ: ದೇವರಿಗೆ ನಾಲಿಗೆಯನ್ನೇ ಕತ್ತರಿಸಿ ದಾನ ಕೊಟ್ಟ ಭೂಪ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕುಸಿದು ಬಿದ್ದ ಬರಗೂರು ರಾಮಚಂದ್ರಪ್ಪ – ಆಸ್ಪತ್ರೆಗೆ ದಾಖಲು

    ಕುಸಿದು ಬಿದ್ದ ಬರಗೂರು ರಾಮಚಂದ್ರಪ್ಪ – ಆಸ್ಪತ್ರೆಗೆ ದಾಖಲು

    ದಾವಣಗೆರೆ: ಬಂಡಾಯ ಸಾಹಿತ್ಯ ಪ್ರಮುಖ ಲೇಖಕ ಬರಗೂರು ರಾಮಚಂದ್ರಪ್ಪ (Baraguru Ramachandrappa) ಅವರು ಅಸ್ವಸ್ಥರಾಗಿ ಆಸ್ಪತ್ರೆ ದಾಖಲಾಗಿರುವ ಘಟನೆ ಭಾನುವಾರ ದಾವಣಗೆರೆಯ (Davanagere) ಹರಿಹರದಲ್ಲಿ ನಡೆದಿದೆ.

    BaraguruRamachandrappa

    ರಾಮಚಂದ್ರಪ್ಪ ಅವರು ಕವಿಗೋಷ್ಠಿಯನ್ನು ಮುಗಿಸಿ, ತಮ್ಮ ಕಾರಿನಲ್ಲಿ ವಾಪಾಸಾಗಬೇಕೆಂದಿದ್ದಾಗ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ.

    ಬರಗೂರು ರಾಮಚಂದ್ರಪ್ಪ ಅವರು ಅಸ್ವಸ್ಥರಾಗುತ್ತಿದ್ದಂತೆ ತಕ್ಷಣ ಹರಿಹರದ ಅಕ್ಷಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: Praveen Nettaru Case: ಹತ್ಯೆಯ ಪ್ರಮುಖ ಆರೋಪಿಗಳು ಸೌದಿಯಲ್ಲಿ ಭೂಗತ – ತನಿಖೆಯಲ್ಲಿ ಮಹತ್ವದ ಪ್ರಗತಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಾಷ್ಟ್ರಗೀತೆಗೆ ಅಪಮಾನ : ಬರಗೂರು ವಿರುದ್ಧ ಬಿಜೆಪಿಯಿಂದ ದೂರು

    ರಾಷ್ಟ್ರಗೀತೆಗೆ ಅಪಮಾನ : ಬರಗೂರು ವಿರುದ್ಧ ಬಿಜೆಪಿಯಿಂದ ದೂರು

    ಬೆಂಗಳೂರು: ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ತಮ್ಮ ಕಾದಂಬರಿ ʼಭರತನಗರಿʼಯಲ್ಲಿ ರಾಷ್ಟ್ರಗೀತೆ ಬಗ್ಗೆ ಅತ್ಯಂತ ಅವಹೇಳನಕಾರಿಯಾಗಿ ಬರೆದಿದ್ದಾರೆ. ವಿಡಂಬನೆ ಮಾಡಿದ್ದಲ್ಲದೆ ಭಾರತವನ್ನು ಜಡಭಾರತ ಎಂದು ಕರೆದಿದ್ದಾರೆ. ಗಂಗಾನದಿಯನ್ನು ಹಾದರ ಎಂದು ಕರೆದಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಆಕ್ಷೇಪಿಸಿದರು.

    ಬರಗೂರು ರಾಮಚಂದ್ರಪ್ಪ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೆಂಗಳೂರು ಮಹಾನಗರ ಪೊಲೀಸ್ ಆಯುಕ್ತರಿಗೆ ಇಂದು ದೂರು ಸಲ್ಲಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಭಾರತ ಮತ್ತು ರಾಷ್ಟ್ರಗೀತೆ ಬಗ್ಗೆ ಅಭಿಮಾನ ಇರುವವರು ಇದನ್ನು ಸಹಿಸಿಕೊಂಡು ಸುಮ್ಮನೆ ಕುಳಿತಿರಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದರು.

    ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರೂ ಆಗಿದ್ದ ಬರಗೂರು ರಾಮಚಂದ್ರಪ್ಪ ಅವರು ದೊಡ್ಡ ಸಾಹಿತಿಯಾಗಿದ್ದು, ಅಂಥವರು ನಾಡಿಗೆ ಮತ್ತು ದೇಶಕ್ಕೆ ಅವಹೇಳನ ಮಾಡಿದ್ದಾರೆ. ಇದೊಂದು ತಲೆ ತಗ್ಗಿಸಬೇಕಾದ ವಿಚಾರ ಎಂದು ತಿಳಿಸಿದರು. ಸಿದ್ದರಾಮಯ್ಯನವರ ಸರ್ಕಾರ ಇದ್ದಾಗ ಇಂಥ ಅಪಮಾನ ಆಗಿದೆ. ಯಾಕೆ ಅವರು ಕ್ರಮ ಕೈಗೊಂಡಿಲ್ಲ? ಅಥವಾ ಸಿದ್ದರಾಮಯ್ಯನವರು ಹೋಗಲಿ ಬಿಡಿ ಎಂದು ಉದಾಸೀನ ಮಾಡಿದರೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಈದ್ಗಾ ಮೈದಾನದಲ್ಲಿ ಮೂರು ದಿನ ಗಣೇಶೋತ್ಸವಕ್ಕೆ ಅನುಮತಿ

    ಇವತ್ತು ಬರಗೂರು ರಾಮಚಂದ್ರಪ್ಪ ಅವರ ಈ ಬರಹದ ಬಗ್ಗೆ ಸಿದ್ದರಾಮಯ್ಯ ಏನು ಹೇಳುತ್ತಾರೆ ಎಂದು ಕೇಳಿದರಲ್ಲದೆ, ಪೊಲೀಸ್ ಇಲಾಖೆಯು ರಾಷ್ಟ್ರಧ್ವಜಕ್ಕೆ ಆದ ಅವಮಾನದ ಹಿನ್ನೆಲೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಕಾನೂನು ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜೊತೆ ಚರ್ಚಿಸಿ ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸ್ ಆಯುಕ್ತರು ತಿಳಿಸಿದ್ದಾಗಿ ಹೇಳಿದರು. ಭರತನಗರಿ ಕಾದಂಬರಿಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದರು.

    ನಾಡಿನ ಕಲೆ, ಸಂಸ್ಕೃತಿ, ದೇಶ, ಅಂಬೇಡ್ಕರ್ ಮತ್ತು ಸಾಹಿತ್ಯದ ಬಗ್ಗೆ ಉದ್ದುದ್ದ ಭಾಷಣ ಮಾಡುವ ಬರಗೂರು ರಾಮಚಂದ್ರಪ್ಪ ಅವರು, ಹೀಗೆ ಬರೆದುದಾದರೂ ಹೇಗೆ ಎಂದು ಕೇಳಿದರು. 1983ರಲ್ಲಿ ಈ ಕಾದಂಬರಿ ಬರೆದುದಾಗಿ ಅವರು ಪ್ರಶ್ನೆಗೆ ಉತ್ತರ ನೀಡಿದರು. ಈಗ ಅದು ಗಮನಕ್ಕೆ ಬಂದಿದೆ ಎಂದರು.

    BaraguruRamachandrappa

    ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಬರಗೂರು ರಾಮಚಂದ್ರಪ್ಪ ಎಂಬ ಪುಸ್ತಕವನ್ನು ಎಸ್.ಮಾರುತಿ ಅವರು ಬರೆದಿದ್ದಾರೆ. ಆ ಪುಸ್ತಕ ಗಮನಿಸಿದಾಗ ರಾಷ್ಟ್ರಗೀತೆ, ರಾಷ್ಟ್ರಧ್ವಜದ ಬಗ್ಗೆ ವಿಕೃತಿ ಮೆರೆದಿರುವುದು ಗೊತ್ತಾಗಿದೆ. ಬರಗೂರರಿಗೆ ರಾಷ್ಟ್ರಗೀತೆ ಬಗ್ಗೆ ಇರುವ ವಿಕೃತ ಮನಸ್ಸು ಈಗ ಅರಿವಿಗೆ ಬಂದಿದೆ ಎಂದು ವಿವರಿಸಿದರು.

    ಭರತನಗರಿ ಓದಿದರೆ ಯಾರಿಗಾದರೂ ತಲೆ ಕೊಡಬಹುದು. ಪ್ರಧಾನಿಯಾಗಿದ್ದ ವಾಜಪೇಯಿಯವರನ್ನು ಮಜಾಪೇಯಿ ಬಿಹಾರಿ ಎಂದು ಕರೆದು ಅವಮಾನ ಮಾಡಿದ್ದಾರೆ. ಚಂದ್ರಶೇಖರ, ಮೊರಾರ್ಜಿ, ಸಿಂಹಚರಣ್ (ಚರಣ್ ಸಿಂಗ್) ಎಂದು ವಿಕೃತಿಯ ಹೆಸರುಗಳನ್ನು ಬಳಸಿದ್ದಾರೆ. ಓದುವವರ ತಲೆ ಕೆಡಬೇಕೆಂದು ಹೀಗೆ ಮಾಡಿದ್ದಾರಾ? ಅಥವಾ ಅವರು ತಲೆಕೆಟ್ಟು ಬರೆದಿದ್ದಾರಾ ಗೊತ್ತಿಲ್ಲ ಎಂದು ಆಕ್ಷೇಪಿಸಿದರು.

    ಮಾರುತಿ ಅವರು 2016ರಲ್ಲಿ ತಮ್ಮ ಪುಸ್ತಕ ಬರೆದಿದ್ದಾರೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ಯೋಗೇಂದ್ರ ಹೊಡಾಘಟ್ಟ, ಚಾಮರಾಜಪೇಟೆ ಕಾನೂನು ಪ್ರಕೋಷ್ಠದ ಮಂಡಲ ಸಹ ಸಂಚಾಲಕ ಹಾಗೂ ದೂರುದಾರ ವಿ.ಎಲ್. ಜಗದೀಶ್ ಈ ಸಂದರ್ಭದಲ್ಲಿ ಇದ್ದರು.

    Live Tv
    [brid partner=56869869 player=32851 video=960834 autoplay=true]

  • ಬರಗೂರು ಸಮಿತಿಯ ಪರಿಷ್ಕೃತ ಪಠ್ಯಪುಸ್ತಕದ ಗುಣಮಟ್ಟ ಸರಿಯಿಲ್ಲ: NCERT

    ಬರಗೂರು ಸಮಿತಿಯ ಪರಿಷ್ಕೃತ ಪಠ್ಯಪುಸ್ತಕದ ಗುಣಮಟ್ಟ ಸರಿಯಿಲ್ಲ: NCERT

    ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ಪರ-ವಿರೋಧಗಳು ನಡೆಯುತ್ತಿರುವ ಹೊತ್ತಿನಲ್ಲೇ ಈಗ ಮತ್ತೊಂದು ಮಹತ್ವದ ಅಂಶ ಬೆಳಕಿಗೆ ಬಂದಿದೆ. ಸಿದ್ದರಾಮಯ್ಯ ಕಾಲದಲ್ಲಿ ಬರಗೂರು ರಾಮಚಂದ್ರಪ್ಪ ಸಮಿತಿ ಮಾಡಿದ್ದ ಪರಿಷ್ಕೃತ ಪಠ್ಯ ಪುಸ್ತಕ ಗುಣಮಟ್ಟದ ಸರಿಯಿಲ್ಲ ಎಂದು ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್(ಎನ್‍ಸಿಇಆರ್‌ಟಿ) ಸಂಸ್ಥೆ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

    2005ರ ರಾಷ್ಟ್ರೀಯ ಶಿಕ್ಷಣ ನೀತಿ ಅಂಶಗಳು ಬರಗೂರು ಸಮಿತಿ ರಚನೆ ಮಾಡಿದ್ದ ಪರಿಷ್ಕರಣೆ ಪಠ್ಯದಲ್ಲಿ ಹೆಚ್ಚಾಗಿ ಇರಲಿಲ್ಲ. ಮೌಲ್ಯಗಳನ್ನು ಬೆಳೆಸಲು ಪೂರಕವಾದ ಪಠ್ಯಗಳು ಬರಗೂರು ರಾಮಚಂದ್ರಪ್ಪರ ಪರಿಷ್ಕರಣೆ ಪಠ್ಯ ಪುಸ್ತಕದಲ್ಲಿ ಇಲ್ಲ ಎಂಬ ಮಹತ್ವದ ಅಂಶವನ್ನು ತಿಳಿಸಿದೆ. ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷರಾದವರು ಸಿಎಂ ಆಗುವುದು ಸಂಪ್ರದಾಯ: ಡಿ.ಕೆ ಶಿವಕುಮಾರ್

    2017-18ರಲ್ಲಿ ಕರ್ನಾಟಕದ ಶಾಲೆಗಳಲ್ಲಿ ಜಾರಿಗೆ ತರಲಾದ ಬರಗೂರು ಸಮಿತಿ ನೂತನ ಪರಿಷ್ಕತ ಪಠ್ಯಪುಸ್ತಕಗಳ ಬಗ್ಗೆ ಎನ್‍ಸಿಇಆರ್‌ಟಿ ಸಂಸ್ಥೆ ಅಧ್ಯಯನ ಕೈಗೊಂಡು ವರದಿ ಸಲ್ಲಿಸಿತ್ತು. 78 ಪುಟಗಳ ವರದಿಯಲ್ಲಿ ಭಾಷೆ ಮತ್ತು ಸಮಾಜ ವಿಜ್ಞಾನ, ಗಣಿತ ಪಠ್ಯ ಪುಸ್ತಕಗಳಲ್ಲಿ ವಿದ್ಯಾರ್ಥಿಗಳ ಬೆಳವಣಿಗೆಗೆ ಪೂರಕವಾಗುವ ಪಠ್ಯಗಳು ಇರಲಿಲ್ಲ ಎಂದು ಸ್ಪಷ್ಟಪಡಿಸಿದೆ.

    ಇಷ್ಟೆಲ್ಲ ಲೋಪಗಳಿದ್ದರೂ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಮಾಡಿದ ಪಠ್ಯ ಪರಿಷ್ಕರಣೆಯನ್ನು ಬರಗೂರು ಟೀಂ ವಿರೋಧ ಮಾಡಿದ್ದು ಯಾಕೆ ಎನ್ನುವುದು ಈಗ ಚರ್ಚೆಗೆ ಕಾರಣವಾಗಿದೆ.

    ಎನ್‌ಸಿಆರ್‌ಟಿಇ ವರದಿಯಲ್ಲಿ ಏನಿದೆ?
    ಪರಿಷ್ಕೃತ ಪಠ್ಯಪುಸ್ತಕಗಳಲ್ಲಿ ಅಡಕಗೊಳಿಸಲಾದ ವಿಷಯಗಳು ವಿದ್ಯಾರ್ಥಿಗಳಲ್ಲಿ ವಿಮರ್ಶಾತ್ಮಕ ಚಿಂತನೆ ಬೆಳೆಸಲು ಪೂರಕವಾದ ಚಟುವಟಿಕೆಗಳನ್ನು ಹೊಂದಿರಬೇಕು.ಆದರೆ ಪರಿಷ್ಕೃತ ಪಠ್ಯಪುಸ್ತಕಗಳಲ್ಲಿ ಇಂತಹ ಚಟುವಟಿಕೆಗಳು ಸಾಕಷ್ಟು ಪ್ರಮಾಣದಲ್ಲಿ ಇಲ್ಲ.

    ಪಠ್ಯಪುಸ್ತಕಗಳಲ್ಲಿ ಲಿಂಗತ್ವ, ಒಳಗೊಳ್ಳುವಿಕೆ ಮತ್ತು ಪರಿಸರಕ್ಕೆ ಸಂಬಂಧಿಸಿದಂತೆ ಯಾವುದೇ ಪೂರ್ವಗ್ರಹಗಳು ಇಲ್ಲ. ಆದಾಗ್ಯೂ ಈ ಅಂಶಗಳಿಗೆ ಸಂಬಂಧಿಸಿದ ಕಾಳಜಿಗಳಿಗೆ ಅಗತ್ಯವಾದ ಸೂಕ್ಷ್ಮತೆಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಲು ಪೂರಕವಾದ ವಿಷಯ, ಚಟುವಟಿಕೆ,ನಿಯೋಜಿತ ಕಾರ್ಯಗಳು ಸಾಕಷ್ಟು ಪ್ರಮಾಣದಲ್ಲಿ ಇಲ್ಲ.

    ರಾಷ್ಟ್ರೀಯ ಶಿಕ್ಷಣ ನೀತಿ 2005 ರಂತೆ ಪಠ್ಯಪುಸ್ತಕಗಳು ಜ್ಞಾನ ಕಟ್ಟುವ ವಿಧಾನವನ್ನು (constructivist approach) ಒಳಗೊಂಡಿರಬೇಕು.ಆದರೆ ಸಿದ್ದಪಡಿಸಲಾದ ಪಠ್ಯಪುಸ್ತಕಗಳಲ್ಲಿ ಈ ಅಂಶಕ್ಕೆ ಹೆಚ್ಚಿನ ಒತ್ತು ನೀಡಿಲ್ಲ.

    ಭಾಷೆ ಮತ್ತು ಸಮಾಜ ವಿಜ್ಞಾನ ಪಠ್ಯ ಪುಸ್ತಕಗಳಲ್ಲಿ ಮೌಲ್ಯಗಳು ಅಂತರ್ಗತವಾಗಿದ್ದರೂ ಮೌಲ್ಯಗಳನ್ನು ಬೆಳೆಸಲು ಪೂರಕವಾದ, ಚಟುವಟಿಕೆಗಳು, ಉದಾಹರಣೆಗಳು, ಕಾರ್ಯಗಳು ಸಾಕಷ್ಟು ಪ್ರಮಾಣದಲ್ಲಿ ಇಲ್ಲ.

    ವಿದ್ಯಾರ್ಥಿಗಳ ದೈನಂದಿನ ಅನುಭವಗಳಿಗೆ ಪಠ್ಯಪುಸ್ತಕಗಳನ್ನು ಜೋಡಿಸುವ ಕಾರ್ಯ ಆಗಿದ್ದರೂ ಇದು ಹೆಚ್ಚಿನ ಪ್ರಮಾಣದಲ್ಲಿ ಆಗಿಲ್ಲ. ಜೊತೆಗೆ ಪಠ್ಯಪುಸ್ತಕಗಳಲ್ಲಿ ನೀಡಲಾದ ಉದಾಹರಣೆಗಳು ವಿದ್ಯಾರ್ಥಿಗಳ ಸನ್ನಿವೇಶಗಳಿಗೆ ಹೆಚ್ಚು ಪೂರಕವಾಗಿಲ್ಲ ಹಾಗೂ ಅರ್ಥಪೂರ್ಣವಾಗಿಲ್ಲ.

    ಪಠ್ಯ ಪುಸ್ತಕಗಳಲ್ಲಿ ಹೆಚ್ಚಿನ ಅಭ್ಯಾಸ ಕಾರ್ಯ ಮತ್ತು ಚಟುವಟಿಕೆಗಳನ್ನು ನೀಡಲಾಗಿದೆ. ಆದರೆ ಗಣಿತ ವಿಷಯದ ಪಠ್ಯಪುಸ್ತಕದಲ್ಲಿ ಪುನುರಾವರ್ತಿತ ಚಟುವಟಿಕೆಗಳನ್ನು ಇದ್ದು, ವಿದ್ಯಾರ್ಥಿಗಳಿಗೆ ಹೊರೆ ಎನಿಸುವಂತೆ ಇವೆ. ಇದರಿಂದ ವಿದ್ಯಾರ್ಥಿಗಳು ಕಂಠ ಪಾಠ ಮತ್ತು ನೆನಪಿನ ಶಕ್ತಿಗೆ ಹೆಚ್ಚು ಒತ್ತು ನೀಡುವಂತಿದ್ದು, ವಿಷಯದ ಪರಿಕಲ್ಪನಾತ್ಮಕ ಜ್ಞಾನದ ಬೆಳವಣಿಗೆಗೆ ಸಹಾಯ ಆಗುವಂತಿಲ್ಲ.

    ಗಣಿತ ವಿಷಯದಲ್ಲಿ ಪರಿಸರಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ವಿಷಯಗಳನ್ನು ಅಳವಡಿಸಿಲ್ಲ.

    Live Tv
    [brid partner=56869869 player=32851 video=960834 autoplay=true]

  • ಪಠ್ಯಪುಸ್ತಕ ವಿವಾದ – ಬರಗೂರು, ಚಕ್ರತೀರ್ಥ ಸಮಿತಿಯ ಪಠ್ಯಗಳನ್ನು ʼಪಬ್ಲಿಕ್‌ʼ ಮುಂದಿಟ್ಟ ಸರ್ಕಾರ

    ಪಠ್ಯಪುಸ್ತಕ ವಿವಾದ – ಬರಗೂರು, ಚಕ್ರತೀರ್ಥ ಸಮಿತಿಯ ಪಠ್ಯಗಳನ್ನು ʼಪಬ್ಲಿಕ್‌ʼ ಮುಂದಿಟ್ಟ ಸರ್ಕಾರ

    ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿವಾದದ ಹಿನ್ನೆಲೆ ಬರಗೂರು ರಾಮಚಂದ್ರಪ್ಪ ಹಾಗೂ ರೋಹಿತ್‌ ಚಕ್ರತೀರ್ಥ ಸಮಿತಿಯ ಪಠ್ಯಗಳನ್ನು ಪಬ್ಲಿಕ್‌ ಡೊಮೈನ್‌ಗೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

    2015-16 ನೇ ಸಾಲಿ‌ನ ಡಾ‌. ಮುಡಂಬಡಿತ್ತಾಯ ಸಮಿತಿ ಪಠ್ಯ ಮತ್ತು 2017- 18ನೇ ಸಾಲಿನ ಬರಗೂರು ರಾಮಚಂದ್ರಪ್ಪ ಸಮಿತಿ ಪರಿಷ್ಕರಣೆ ಪಠ್ಯಗಳನ್ನು ಕರ್ನಾಟಕ ಪಠ್ಯಪುಸ್ತಕ ಸೊಸೈಟಿ ವೆಬ್‌ಸೈಟ್‌ ktbs.kar.nic.in  ಬಿಡುಗಡೆ ಮಾಡಲಾಗಿದೆ. ರೋಹಿತ್ ಚಕ್ರತೀರ್ಥ ಸಮಿತಿಯ ಪಠ್ಯಪುಸ್ತಕಗಳನ್ನು ಸಹ ವೆಬ್‌ಸೈಟ್‌ಗೆ ಸರ್ಕಾರ ರಿಲೀಸ್‌ ಮಾಡಿದೆ.    

    ಯಾರ ಕಾಲದಲ್ಲಿ ಯಾರ‍್ಯಾರ ಪಠ್ಯ ಕೈ ಬಿಡಲಾಗಿತ್ತು ಅನ್ನೋ ಬಗ್ಗೆ ಸಾರ್ವಜನಿಕರೇ ಮಾಹಿತಿ ಪಡೆಯಬಹುದು. ಬರಗೂರು ರಾಮಚಂದ್ರಪ್ಪ ಸಮಿತಿ ಯಾವ ಯಾವ ಮಹನೀಯರ ಪಠ್ಯ ಕೈ ಬಿಟ್ಟಿತ್ತು ಅನ್ನೋ ಬಗ್ಗೆಯೂ ಮಾಹಿತಿ ಇದೆ.

    ಪಠ್ಯದಲ್ಲಿ ಏನೇ ಲೋಪ ಇದ್ದರೂ ಸಾರ್ವಜನಿಕರು ಸಲಹೆಗಳನ್ನು ನೀಡಬಹುದು. ಸಾರ್ವಜನಿಕ ಸಲಹೆ ಮೇರೆಗೆ ಸರ್ಕಾರ ಪಠ್ಯ ಪರಿಷ್ಕರಣೆ ಮಾಡಲಿದೆ. ಇದನ್ನೂ ಓದಿ: ಸ್ಟಾಲಿನ್‌ ರಾಜಕೀಯ ಸ್ಟಂಟ್‌ ಮಾಡುತ್ತಿದ್ದಾರೆ: ತಮಿಳುನಾಡು ಸಿಎಂ ವಿರುದ್ಧ ಬೊಮ್ಮಾಯಿ ಕಿಡಿ

    ಪಠ್ಯಪುಸ್ತಕ ಪರಿಷ್ಕರಣೆಗೆ ರೋಹಿತ್‌ ಚಕ್ರತೀರ್ಥ ನೇತೃತ್ವದಲ್ಲಿ ಸಮಿತಿ ರಚಿಸಿದ್ದಕ್ಕೆ ರಾಜ್ಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಯಿತು. ಪಠ್ಯದಲ್ಲಿ ಕುವೆಂಪು, ಡಾ.ಬಿ.ಆರ್.ಅಂಬೇಡ್ಕರ್‌ ಅವರಿಗೆ ಅಪಮಾನ ಮಾಡಲಾಗಿದೆ. ಹಿಂದೂಪರ ಧೋರಣೆಗಳನ್ನು ಉದ್ದೇಶಪೂರ್ವಕವಾಗಿ ಪಠ್ಯದಲ್ಲಿ ಅಳವಡಿಸಲಾಗಿದೆ ಎಂದು ಗಂಭೀರ ಆರೋಪಗಳು ಕೇಳಿಬಂದಿದ್ದವು. ಅನೇಕ ಹಿರಿಯ ಸಾಹಿತಿಗಳು ಪಠ್ಯದಿಂದ ತಮ್ಮ ಪಾಠ, ಪದ್ಯಗಳನ್ನು ಕೈಬಿಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು.

  • ದೇವನೂರು ಮಹಾದೇವರ ಹೇಳಿಕೆಯಿಂದ ನೋವಾಗಿದೆ: ಬಿ.ಸಿ.ನಾಗೇಶ್

    ದೇವನೂರು ಮಹಾದೇವರ ಹೇಳಿಕೆಯಿಂದ ನೋವಾಗಿದೆ: ಬಿ.ಸಿ.ನಾಗೇಶ್

    ಧಾರವಾಡ: ಸಾಹಿತಿ ದೇವನೂರು ಮಹಾದೇವ ಅವರು ಪಠ್ಯದಲ್ಲಾದ ತಪ್ಪುಗಳ ಬಗ್ಗೆ ನಮಗೆ ಸಲಹೆ ನೀಡಬಹುದಿತ್ತು. ಆದರೆ ಪುಸ್ತಕ ಬಿಡುಗಡೆಗೆ ಸಿದ್ಧವಾದ ಮೇಲೆ ತಮ್ಮ ಪಠ್ಯ ತೆಗೆಯುವಂತೆ ಹೇಳಿದ್ದು ನೋವಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಬೇಸರ ವ್ಯಕ್ತಪಡಿಸಿದ್ದಾರೆ.

    ಧಾರವಾಡದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಠ್ಯಪುಸ್ತಕದಲ್ಲಿ ಸಾಹಿತಿಗಳನ್ನು ಯಾವುದೇ ರೀತಿಯಲ್ಲೂ ಕಡೆಗಣಿಸಿಲ್ಲ. ಸಾಹಿತಿ ದೇವನೂರು ಮಹಾದೇವ ಅವರು ಪಠ್ಯದಲ್ಲಾದ ತಪ್ಪುಗಳ ಬಗ್ಗೆ ಹೇಳಿದ್ದು ತಪ್ಪು ಎನ್ನುತ್ತಿಲ್ಲ. ಆದರೆ ಬಿಡುಗಡೆ ಹಂತಕ್ಕೆ ಬಂದಾಗ ತಮ್ಮ ಪಠ್ಯ ತೆಗೆಯುವಂತೆ ಹೇಳಿದ್ದು ನೋವಾಯಿತು ಅಷ್ಟೇ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಠ್ಯಪುಸ್ತಕ ವಿವಾದ: ನಾಡಿಗೆ ಕೇಡಿನ ಲಕ್ಷಣ ಕಾಣಿಸುತ್ತಿದೆ – ದೇವನೂರ ಮಹಾದೇವ ಪತ್ರ

    ಕಾಂಗ್ರೆಸ್ ಅವಧಿಯಲ್ಲಿ ಮಹಾರಾಜರ ಕಥೆಗಳನ್ನು ತೆಗೆದು ಟಿಪ್ಪು ಸುಲ್ತಾನ್ ಕಥೆ ಹಾಕಲಾಗಿತ್ತು. ಸಿಂಧೂ ಸಂಸ್ಕೃತಿ ಕಿತ್ತು ಹಾಕಿ ನೆಹರೂ ಪಾಠ ಹಾಕಲಾಗಿತ್ತು. ಇಸ್ಲಾಂ ಮತ್ತು ಕ್ರೈಸ್ತರನ್ನು ಮಾತ್ರ ಪುಸ್ತಕದಲ್ಲಿ ತರಲಾಗಿತ್ತು. ಇಂತಹ ನೂರು ಉದಾಹರಣೆಗಳನ್ನು ನಾನು ಹೇಳಬಲ್ಲೆ. ಬರಗೂರು ರಾಮಚಂದ್ರಪ್ಪನವರ ಕಾಲದಲ್ಲೂ ಪಠ್ಯದಲ್ಲಿ ತಪ್ಪುಗಳಾಗಿದ್ದವು. ಸಿದ್ದರಾಮಯ್ಯ ಸರ್ಕಾರ ಇದ್ದಾಗಲೇ ನಾಡಗೀತೆಗೆ ಅಪಮಾನ ಮಾಡಲಾಗಿತ್ತು. ಅದನ್ನು ಯಾರೂ ಖಂಡಿಸಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    TEXTBOOK

    1 ತಿಂಗಳಲ್ಲಿ ಪಠ್ಯಪುಸ್ತಕ ವಿತರಣೆಗೆ ಸಿದ್ಧ: ಪಠ್ಯ ಪುಸ್ತಕಗಳಲ್ಲಾಗಿರುವ ಲೋಪವನ್ನು ಆದಷ್ಟು ಬೇಗ ಸರಿಪಡಿಸಲಾಗುವುದು. ಈಗಾಗಲೇ ಶೇ.84 ರಷ್ಟು ಪರಿಷ್ಕೃತ ಪಠ್ಯ ಪುಸ್ತಕಗಳು ಬಿಇಓ ಕಚೇರಿ ಸೇರಿವೆ. ಇನ್ನೊಂದು ತಿಂಗಳಲ್ಲಿ ವಿತರಣೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೀದಿ ನಾಯಿಯನ್ನ ದೊಣ್ಣೆಯಿಂದ ಹೊಡೆದು ಎರಡನೇ ಪ್ಲೋರ್‌ನಿಂದ ಬಿಸಾಕಿದ ಪಾಪಿ – ಪ್ರಕರಣ ದಾಖಲು

    ಪಠ್ಯ ಪುಸ್ತಕ ಪರಿಷ್ಕರಣೆ ಮಾಡುವಾಗ ದೊಡ್ಡ ತಪ್ಪುಗಳು ಮಾಡಬಾರದು. ಇಂತಹದ್ದೊಂದು ದೊಡ್ಡ ಜವಾಬ್ದಾರಿ ಸಿಕ್ಕಾಗ ಜಾಗರೂಕರಾಗಿರಬೇಕು. ಈ ರೀತಿಯ ತಪ್ಪು ಆಗಿರೋದನ್ನು ಗಮನಿಸಿ ಅದರ ಮರು ಪರಿಷ್ಕರಣೆಗೆ ನಾವು ಮುಂದಾಗಿದ್ದೇವೆ. ಬಸವಣ್ಣನ ಪಠ್ಯದಲ್ಲಿ ಹಲವು ಹೊಸ ವಿಚಾರಗಳನ್ನು ಅಳವಡಿಸಲಾಗಿದೆ. ಈ ರೀತಿಯ ಲೋಪಗಳು ಆದಾಗ ಅದನ್ನು ಯಾರೇ ಕಂಡುಹಿಡಿದರೂ ಸರಿಪಡಿಸುತ್ತೇವೆ. ನಾವು ತಪ್ಪನ್ನು ಮುಚ್ಚಿಡುವುದಿಲ್ಲ. ನಡೆಯುತ್ತಿರುವ ವಾದ, ವಿವಾದಗಳು ಮಕ್ಕಳ ಮೇಲೆ ಪರಿಣಾಮ ಬೀರುವುದು ಬೇಡ. ಹೀಗಾಗಿ ಪಠ್ಯದಲ್ಲಾದ ತಪ್ಪುಗಳನ್ನು ಸರಿಪಡಿಸುವ ಕೆಲಸ ಮಾಡುತ್ತಿದ್ದೇವೆ ಎಂದು ವಿವಾದಗಳಿಗೆ ತೆರೆ ಎಳೆಯುವ ಹೇಳಿಕೆ ನೀಡಿದ್ದಾರೆ.