Tag: Basava Jaya Mrityunjaya Swamiji

  • 2ಎ ಮೀಸಲಾತಿ ಕಿಚ್ಚು – ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

    2ಎ ಮೀಸಲಾತಿ ಕಿಚ್ಚು – ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

    – ಲಾಠಿಚಾರ್ಜ್ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

    ಬೆಳಗಾವಿ: 2ಎ ಮೀಸಲಾತಿಗೆ ಆಗ್ರಹಿಸಿ ಉಗ್ರ ಹೋರಾಟದ ಮಾಡುವುದಾಗಿ ಕೂಡಲಸಂಗಮದ ಪಂಚಮಸಾಲಿ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ (Basavajaya Mrutunjaya Swamiji) ಎಚ್ಚರಿಕೆ ನೀಡಿದ್ದಾರೆ.

    ಇಂದು (ಡಿ.12) ಬೆಳಗಾವಿ (Belagavi) ಅಧಿವೇಶನದ ವೇಳೆ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಪ್ರಕರಣದ ಹಿನ್ನೆಲೆ ಉಗ್ರ ಹೋರಾಟ ಮಾಡುವುದಾಗಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪಂಚಮಸಾಲಿ ಸಮಾಜಕ್ಕೆ ಪ್ರತಿಭಟನೆಗೆ ಕರೆ ನೀಡಿದ್ದಾರೆ. ರಾಜ್ಯಾದ್ಯಂತ ಪಂಚಮಸಾಲಿ ಸಮಾಜದಿಂದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಲಿದೆ. ಸದನದ ಒಳಗೂ ಹೊರಗೂ ಪಂಚಮಸಾಲಿ ಮೀಸಲಾತಿ ಹೋರಾಟ ಸದ್ದು ಮಾಡಲಿದ್ದು, ಜೊತೆಗೆ ಜಿಲ್ಲೆ, ತಾಲೂಕು, ಹೋಬಳಿ ಮಟ್ಟದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆಗೆ ಕರೆ ನೀಡಲಾಗಿದೆ.ಇದನ್ನೂ ಓದಿ: ಡ್ರೋನ್‌ ಪ್ರತಾಪ್‌ ಎಡವಟ್ಟು – ನೀರಿನೊಳಗೆ ಕೆಮಿಕಲ್ ಹಾಕಿ ಬ್ಲಾಸ್ಟ್, ಸಾರ್ವಜನಿಕರು ನಿಗಿನಿಗಿ ಕೆಂಡ!

    ಬೆಳಗಾವಿ ಹಿರೇಬಾಗೇವಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಸ್ವಾಮೀಜಿ ನೇತೃತ್ವದಲ್ಲಿ ಬೆಳಗ್ಗೆ 10:30ಕ್ಕೆ ಪ್ರತಿಭಟನೆ ನಡೆಯಲಿದ್ದು, ಪಂಚಮಸಾಲಿ ಸಮಾಜದವರು ರಾಜ್ಯಪಾಲರಿಗೆ ಮನವಿ ಸಲ್ಲಿಸಲಿದ್ದಾರೆ. ಮನವಿ ಮೂಲಕ ಸಿಎಂ ಸಿದ್ದರಾಮಯ್ಯ, ಎಡಿಜಿಪಿ ಆರ.ಹಿತೇಂದ್ರ ಅವರನ್ನು ವಜಾ ಮಾಡಬೇಕು. ಮೀಸಲಾತಿ ಹೋರಾಟವನ್ನ ಸರ್ಕಾರ ಹತ್ತಿಕ್ಕಲು ಯತ್ನಿಸಿದೆ. ತಕ್ಷಣವೇ ಪಂಚಮಸಾಲಿ ಸಮಾಜಕ್ಕೆ ಕ್ಷಮೆ ಕೇಳಬೇಕು. ಇದು ಲಿಂಗಾಯತ ವಿರೋಧಿ ಸರ್ಕಾರ ಎಂದು ಪ್ರತಿಭಟನೆ ಮೂಲಕ ಆಗ್ರಹಿಸಲಿದ್ದಾರೆ.

    ಒಟ್ಟು 9 ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯಲಿದ್ದು, 4 ಸಂಘಟನೆಗಳು ಸರ್ಕಾರಕ್ಕೆ ಮನವಿ ಸಲ್ಲಿಸಲಿವೆ. ಬೆಳಗಾವಿ ವಿಧಾನ ಸೌಧದ ಹೊರಗಿನ ಕೊಂಡಸಕೋಪ್ಪ, ಸುವರ್ಣ ಗಾರ್ಡನ್ ಬಳಿಯ ಟೆಂಟ್‌ನಲ್ಲಿ ಹೋರಾಟ ನಡೆಯಲಿದೆ. ಕಾರ್ಮಿಕರ ವಿವಿಧ ಬೇಡಿಕೆಗೆ ಒತ್ತಾಯಿಸಿ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್, ಸ್ವಾತಂತ್ರ‍್ಯ ಯೋಧರ ಉತ್ತರಾಧಿಕಾರಿ ಸದಸ್ಯರಿಗೆ ಸರ್ಕಾರಿ ನೌಕರಿ ಸೇರಿ ವಿವಿಧ ಬೇಡಿಕೆಗೆ ಒತ್ತಾಯಿಸಿ ಅಖಿಲ ಕರ್ನಾಟಕ ಸ್ವಾತಂತ್ರ‍್ಯ ಯೋಧರ ಉತ್ತರಾಧಿಕಾರಿಗಳ ಸಂಘ, ಒಳ ಮೀಸಲಾತಿ, ಜಾತಿ ಗಣತಿ ಕೂಡಲೆ ಜಾರಿಗೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಹೋರಾಟ ನಡೆಯಲಿದೆ.

    ಪಂಚಮಸಾಲಿ ಮೀಸಲು ಹೋರಾಟದಲ್ಲಿ ನಡೆದ ಲಾಠಿಚಾರ್ಜ್‌ನಿಂದಾಗಿ ಹಲವರು ಗಾಯಗೊಂಡಿದ್ದರು. ಸದ್ಯ ಗಾಯಳುಗಳು ಬೆಳಗಾವಿ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಿಜೆಪಿ ನಾಯಕರು ಇಂದು ಗಾಯಾಳುಗಳ ಆರೋಗ್ಯ ವಿಚಾರಿಣೆ ನಡೆಸಲಿದ್ದಾರೆ. ಬಿಜೆಪಿ ರಾಜಾಧ್ಯಕ್ಷ ಬಿವೈ ವಿಜಯೇಂದ್ರ, ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಅರವಿಂದ ಬೆಲ್ಲದ್, ಸಿ.ಸಿ ಪಾಟೀಲ್ ಸೇರಿದಂತೆ ಇನ್ನಿತರರು ಭೇಟಿ ನೀಡಲಿದ್ದಾರೆ.

    ಬಿಜೆಪಿಯಿಂದ ಲಾಠಿಚಾರ್ಜ್ ಖಂಡಿಸಿ ಪ್ರತಿಭಟನೆ:
    ಪಂಚಮಸಾಲಿ ಹೋರಾಟದಲ್ಲಿ ನಡೆದ ಲಾಠಿಚಾರ್ಜ್ ಖಂಡಿಸಿ ಇಂದು ಬಿಜೆಪಿ ಸುವರ್ಣಸೌಧದ ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಿದೆ. ಬಿವೈ ವಿಜಯೇಂದ್ರ, ಅಶೋಕ್, ಛಲವಾದಿ ನಾರಾಯಣಸ್ವಾಮಿ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಬಿಜೆಪಿಯ ಶಾಸಕರು, ಪರಿಷತ್ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.ಇದನ್ನೂ ಓದಿ: ಮರುಡೇಶ್ವರದಲ್ಲಿ ವಿದ್ಯಾರ್ಥಿನಿಯರ ಸಾವು ಕೇಸ್: ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ

  • ಮೀಸಲಾತಿ ಕೊಡದಿದ್ದರೆ ಅಧಿವೇಶನದಲ್ಲೇ ಸುವರ್ಣ ಸೌಧಕ್ಕೆ ಮುತ್ತಿಗೆ – ಸರ್ಕಾರಕ್ಕೆ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

    ಮೀಸಲಾತಿ ಕೊಡದಿದ್ದರೆ ಅಧಿವೇಶನದಲ್ಲೇ ಸುವರ್ಣ ಸೌಧಕ್ಕೆ ಮುತ್ತಿಗೆ – ಸರ್ಕಾರಕ್ಕೆ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

    ಬೆಳಗಾವಿ: ಡಿಸೆಂಬರ್ 22 ರಂದು ಸುವರ್ಣ ಸೌಧದ (Suvarna Vidhana Soudha) ಬಳಿ ವಿರಾಟ ಪಂಚಶಕ್ತಿ ಸಮಾವೇಶ ಮಾಡುವ ಮೂಲಕ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಾಗುತ್ತದೆ ಎಂದು ಕೂಡಲಸಂಗಮ ಪಂಚಮಸಾಲಿ (Panchamasali) ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ (Basava Jaya Mrityunjaya swamiji) ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ (2A Reservation) ಘೋಷಿಸಲು ಸರ್ಕಾರಕ್ಕೆ ಡಿಸೆಂಬರ್ 19 ರವರೆಗೂ ಗಡುವು ನೀಡಲಾಗಿದೆ. ಮೀಸಲಾತಿ ಕೊಟ್ಟರೆ ವಿಜಯೋತ್ಸವ ಮಾಡುತ್ತೇವೆ. ಇಲ್ಲವಾದ್ರೆ ಡಿಸೆಂಬರ್ 22 ರಂದು ಸುವರ್ಣ ವಿಧಾನ ಸೌಧ ಮುತ್ತಿಗೆ ಹಾಕುತ್ತೇವೆ. ಮೀಸಲಾತಿಗಾಗಿ ಕಳೆದ ಎರಡು ವರ್ಷಗಳಿಂದ ಸುಧೀರ್ಘ ಹೋರಾಟ ಮಾಡಿದ್ದೇವೆ. ಡಿಸೆಂಬರ್ 19 ರಂದು ಮೀಸಲಾತಿ ಘೋಷಣೆ ಮಾಡುವುದಾಗಿ ಸಿಎಂ ಬೊಮ್ಮಾಯಿ (Basavaraj Bommai) ಹೇಳಿದ್ರು. ಬೆಳಗಾವಿ ಅಧಿವೇಶನದಲ್ಲಿ ಮೀಸಲಾತಿ ಘೋಷಣೆ ಮಾಡುವ ಭರವಸೆ ಇದೆ. ಮುಖ್ಯಮಂತ್ರಿಗಳ ನಿಲುವು ನೋಡಿಕೊಂಡು ಹೋರಾಟ ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಪಠಾಣ್ ದೇಶಭಕ್ತಿ ಸಿನಿಮಾ ಎಂದು ಟ್ವೀಟ್ ಮಾಡಿದ ನಟ ಶಾರುಖ್ ಖಾನ್

    ಇದೇ ಡಿಸೆಂಬರ್ 22 ರಂದು ಸುವರ್ಣಸೌಧದ ಬಳಿ ವಿರಾಟ ಪಂಚಶಕ್ತಿ ಸಮಾವೇಶ ಮಾಡ್ತಿದ್ದೇವೆ. ನಾಳೆ ಸವದತ್ತಿ ಮತಕ್ಷೇತ್ರದಲ್ಲಿ ಪಂಚಮಸಾಲಿ ಮೀಸಲಾತಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಈ ಸಮಾವೇಶದಲ್ಲಿ ಮೀಸಲಾತಿ ಕೊಟ್ಟರೆ ಯಾವ ರೀತಿ ವಿಜಯೋತ್ಸವ ಮಾಡಬೇಕು. ಮೀಸಲಾತಿ ಕೊಡದಿದ್ದರೆ ಯಾವ ರೀತಿ ಉಗ್ರ ಹೋರಾಟ ಮಾಡಬೇಕು ಎಂಬ ಸ್ಪಷ್ಟವಾದ ತೀರ್ಮಾನ ಮಾಡುತ್ತೇವೆ. ಸವದತ್ತಿಯಿಂದ ಸುವರ್ಣ ವಿಧಾನ ಸೌಧವರೆಗೂ ಪಂಚಲಕ್ಷ ಪಾದಯಾತ್ರೆ ಮಾಡುತ್ತೇವೆ. ಈ ಪಾದಯಾತ್ರೆ ಮೂಲಕ ಸುವರ್ಣ ವಿಧಾನಸೌಧ ಮುತ್ತಿಗೆ ಹಾಕಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಲಿಂಗದೇವರು ನಿರ್ದೇಶನದ ‘ವಿರಾಟಪುರ ವಿರಾಗಿ’ ಸಿನಿಮಾಗಾಗಿ 7000 ಕಿಲೋಮೀಟರ್ ರಥಯಾತ್ರೆ

    ಸವದತ್ತಿ ಸಮಾವೇಶ ಸಂಜೆ 7 ಗಂಟೆಗೆ ಮುಕ್ತಾಯವಾಗಲಿದೆ. ಅಷ್ಟರೊಳಗಾಗಿ ರಾಜ್ಯ ಸರ್ಕಾರದ ನಿರ್ಧಾರ ಗೊತ್ತಾಗಲಿದೆ. ಸರ್ಕಾರದ ನಿರ್ಧಾರ ನೋಡಿಕೊಂಡು ಹೋರಾಟ ಮಾಡುತ್ತೇವೆ. ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸವದತ್ತಿ ಸಮಾವೇಶ ಆಯೋಜನೆ ಮಾಡಿದ್ದೇವೆ. ವಿರಾಟ ಸಮಾವೇಶಕ್ಕೆ ನೂರು ಎಕರೆ ಪ್ರದೇಶದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪಂಚಮಸಾಲಿ ಶಕ್ತಿ ಪ್ರದರ್ಶನಕ್ಕೆ ಸ್ವಯಂ ಪ್ರೇರಿತರಾಗಿ ರೊಟ್ಟಿ ಬುತ್ತಿಕಟ್ಟಿಕೊಂಡು ಬರಲಿದ್ದಾರೆ. ಯಡಿಯೂರಪ್ಪನವರು ಕೊಟ್ಟ ಮಾತು ತಪ್ಪಿದ್ದಕ್ಕೆ ಬಾಗಲಕೋಟೆಯಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡಿದ್ವಿ. ಅಂತಿಮವಾದ ಹೋರಾಟ ನಡೆಸಲು ನಾವು ಸನ್ನದ್ಧರಾಗಿದ್ದೇವೆ. ಮೀಸಲಾತಿ ನೀಡದಿದ್ದರೆ ಅಹೋರಾತ್ರಿ ಹೋರಾಟ ಮಾಡಲು ಬರುವಂತೆ ಬಸನಗೌಡ ಪಾಟೀಲ್ ಯತ್ನಾಳ್‌ ಆಹ್ವಾನಿಸಿದ್ದಾರೆ. ಮೀಸಲಾತಿ ಕೊಡದಿದ್ದರೆ ಅಹೋರಾತ್ರಿ ಹೋರಾಟಕ್ಕೂ ಸಿದ್ಧರಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜೂ.27ರಂದು 50 ಪಂಚಮಸಾಲಿಗಳಿಂದ ಸಿಎಂ ಮನೆ ಮುಂದೆ ಧರಣಿ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ

    ಜೂ.27ರಂದು 50 ಪಂಚಮಸಾಲಿಗಳಿಂದ ಸಿಎಂ ಮನೆ ಮುಂದೆ ಧರಣಿ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ

    ಹಾವೇರಿ: 2A ಮೀಸಲಾತಿ ನೀಡುವಂತೆ ಆಗ್ರಹಿಸಿ ಜೂನ್ 27ರಂದು ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರ ನಿವಾಸದ ಮುಂದೆ 50 ಸಾವಿರ ಪಂಚಮಸಾಲಿಗಳಿಂದ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

    ಹಾವೇರಿ ಜಿಲ್ಲೆಯಲ್ಲಿಂದು ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಆಯೋಗವು ಜಿಲ್ಲೆಯಲ್ಲಿ ಸಮಾಜದ ಜನರ ಸ್ಥಿತಿಗತಿ ಕುರಿತು ಸಮೀಕ್ಷೆ ಆರಂಭಿಸಲು ಮುಂದಾಗಿದೆ. ಸಿಎಂ ಅವರಿಗೆ ಈಗಾಗಲೇ ಮೀಸಲಾತಿ ವಿಚಾರದಲ್ಲಿ ಸಾಕಷ್ಟು ಬಾರಿ ಮನವಿ ಕೊಟ್ಟಿದ್ದೇವೆ. ಆದರೆ ಸರ್ಕಾರ ಭರವಸೆ ಈಡೇರಿಸುವುದಾಗಿ ಹೇಳಿ ಕೊಟ್ಟ ಮಾತು ತಪ್ಪಿದೆ. ಹಾಗಾಗಿ ಹೋರಾಟ ಆರಂಭಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಒಬ್ಬ ಹೆಂಡ್ತಿಗೆ ಒಬ್ಬನೇ ತಾಳಿ ಕಟ್ಟಬಹುದು, ಇಲ್ಲಿ ಒಬ್ಬ ಹೆಂಡ್ತಿಗೆ ಇಬ್ಬಿಬ್ರು ತಾಳಿ ಕಟ್ಟಿದ್ದಾರೆ: ಸಿ.ಎಂ.ಇಬ್ರಾಹಿಂ

    ಮುಖ್ಯಮಂತ್ರಿಗಳ ನಿವಾಸವೇ ವಿಧಾನಸೌಧ ಎಂಬ ಭಾವನೆಯಿಂದ ಶಿಗ್ಗಾಂವಿಯ ಸಿಎಂ ನಿವಾಸದ ಮುಂದೆ ಧರಣಿ ಸತ್ಯಾಗ್ರಹ ನಡೆಸಲಿದ್ದೇವೆ. ಆಯೋಗದವರು ಸಮೀಕ್ಷೆಗೆ ಬಂದಾಗ ಸಮಾಜದ ಜನರು ಲಿಂಗಾಯತರು ಅಂತ ಹೇಳದೇ ಸ್ಪಷ್ಟವಾಗಿ ಪಂಚಮಸಾಲಿಗಳು ಎಂದು ಹೇಳಬೇಕು. ನೈಜಸ್ಥಿತಿ ಮನವರಿಕೆ ಮಾಡಿಕೊಡಬೇಕು ಎಂದು ಕರೆ ನೀಡಿದ್ದಾರೆ.

    ನಮ್ಮಲ್ಲಿ ಪಕ್ಷ, ಮಠಗಳಲ್ಲಿ ಭಿನ್ನತೆ ಇರಬಹುದು. ಆದರೆ 2ಎ ಮೀಸಲಾತಿ ಹೋರಾಟದಲ್ಲಿ ಎಲ್ಲರೂ ಕೈಜೋಡಿಸಿದ್ದಾರೆ. ಸಿಎಂ ಅವರಿಗೆ ಧರಣಿ ಸತ್ಯಾಗ್ರಹದ ಬಗ್ಗೆ ಬಹಿರಂಗ ಪತ್ರ ಕೊಟ್ಟ ಮೇಲೆ ಸಚಿವ ಸಿ.ಸಿ.ಪಾಟೀಲರು ಸಭೆ ಕರೆದು ಚರ್ಚೆ ಮಾಡಿದ್ದಾರೆ. ಜೂನ್ 22ರಂದು ಸಚಿವ ಸಿ.ಸಿ.ಪಾಟೀಲ ನಿವಾಸದಲ್ಲಿ ಸಭೆ ಕರೆದಿದ್ದಾರೆ. ನಮ್ಮ ಸಮಾಜದ ಪ್ರಮುಖರು ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. ಒಟ್ಟಿನಲ್ಲಿ ಜೂನ್ 27ರ ಒಳಗಾಗಿ ಸ್ಪಷ್ಟ ನಿಲುವು ತೆಗೆದುಕೊಳ್ಳಬೇಕು ಎಂಬುದು ನಮ್ಮ ಒತ್ತಾಯ. ಇಲ್ಲದಿದ್ದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಅಂಗನವಾಡಿಯಲ್ಲಿ ಅನ್ನದ ಬಿಸಿಗಂಜಿ ಬಿದ್ದು ಆಸ್ಪತ್ರೆಗೆ ಸೇರಿದ ಮಕ್ಕಳು

    ಸಿಎಂ ಬೊಮ್ಮಾಯಿ ಅವರ ಮೇಲೆ ಇವತ್ತಿಗೂ ನಂಬಿಕೆಯಿದೆ. ಆದರೆ ಅವರು ಮೀಸಲಾತಿ ಘೋಷಣೆ ಬಗ್ಗೆ ವಿಳಂಬ ಮಾಡುತ್ತಿರುವುದರ ಬಗ್ಗೆ ಸ್ಪಷ್ಟವಾಗಿ ಹೇಳುತ್ತಿಲ್ಲ. ಇದರಿಂದ ನಮ್ಮಲ್ಲಿ ನಿರಾಶೆ ಭಾವನೆ ಬಂದಿದೆ. ನಮಗೆ ಸಿಎಂ ಅವರು ಜೂನ್ 22ರ ಸಭೆ ಮೂಲಕ ಸಿಹಿ ಸುದ್ದಿ ಕೊಡಬಹುದು ಎಂಬ ವಿಶ್ವಾಸವಿದೆ ಎಂದು ಸ್ವಾಮೀಜಿ ಹೇಳಿದ್ದಾರೆ.

    Live Tv

  • 2ಎ ಮೀಸಲಾತಿ ನೀಡಿ, ಕೊಟ್ಟಮಾತು ಉಳಿಸಿಕೊಳ್ಳಿ ಸಿಎಂ ಬೊಮ್ಮಾಯಿ: ಬಸವಜಯ ಮೃತ್ಯುಂಜಯ ಸ್ವಾಮೀಜಿ

    2ಎ ಮೀಸಲಾತಿ ನೀಡಿ, ಕೊಟ್ಟಮಾತು ಉಳಿಸಿಕೊಳ್ಳಿ ಸಿಎಂ ಬೊಮ್ಮಾಯಿ: ಬಸವಜಯ ಮೃತ್ಯುಂಜಯ ಸ್ವಾಮೀಜಿ

    ಹಾವೇರಿ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು. ಈ ಹಿಂದೆ 712 ಕಿ.ಮೀ ಬಾಗಲಕೋಟೆಯಿಂದ ಬೆಂಗಳೂರುವರೆಗೆ ಪಾದಯಾತ್ರೆ ಮಾಡಿದ್ದೇವೆ. ನಮ್ಮ ಸಮಾಜಕ್ಕೆ ಮೀಸಲಾತಿ ಅನಿರ್ವಾತೆ ಇದೆ. ಹಿಂದಿನ ಸಿಎಂ ಯಡಿಯೂರಪ್ಪ ಅಧಿವೇಶನದಲ್ಲಿ ಮಾತು ಕೊಟ್ಟಿದ್ದರು. ಈಗ ಯಡಿಯೂರಪ್ಪ ರಾಜೀನಾಮೆ ನೀಡಿದ್ದರಿಂದ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾರೆ. ಬಸವರಾಜ ಬೊಮ್ಮಾಯಿ ಕೊಟ್ಟಮಾತು ಉಳಿಸಿಕೊಳ್ಳಬೇಕು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

    ಹಾವೇರಿಯಲ್ಲಿ ಮಾತನಾಡಿದ ಅವರು, ಬೆಳೆಗಾವಿ ಅಧಿವೇಶನದ ಅವಧಿಯಲ್ಲಿ ಬೊಮ್ಮಾಯಿ ಮೂರು ತಿಂಗಳ ಅವಕಾಶ ಕೇಳಿದ್ದರು. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ವಿಜಯಾನಂದ ಕಾಶಪ್ಪನವರ್ ಸೇರಿದಂತೆ ನಮ್ಮ ಸಮುದಾಯದ ನಾಯಕರಿಗೆ ಮೀಸಲಾತಿ ಕೊಡುತ್ತೇನೆ ಎಂದು ಮಾತು ಕೊಟ್ಟಿದ್ದಾರೆ. ಏಪ್ರಿಲ್ 24 ಅಂತಿಮ ಗಡುವು ನೀಡಿದ್ದೇವು. ಆದರೆ ಯಾವುದೇ ಪ್ರಯೋಜನ ಆಗಿಲ್ಲ. ಮೇ 23 ರಂದು ರಾಜ್ಯದ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಹಾಗೂ ಬಸವರಾಜ ಬೊಮ್ಮಾಯಿ ನಿವಾಸದ ಮುಂದೆ ಸತ್ಯಾಗ್ರಹ ಮಾಡಲು ನಿರ್ಧಾರ ಮಾಡಲಾಗಿತ್ತು. ರಾಜ್ಯದಲ್ಲಿ ನಿರಂತರ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ 23ರಂದು ನಡೆಯುವ ಸತ್ಯಾಗ್ರಹ ಮುಂದೂಡಲಾಗಿದೆ. ಬರುವ ಜೂನ್‍ನಲ್ಲಿ ಇನ್ನೊಂದು ಸಭೆ ನಡೆಸಿ ಸತ್ಯಾಗ್ರಹವನ್ನು ಪ್ರಾರಂಭ ಮಾಡುವ ಕುರಿತಂತೆ ದಿನಾಂಕ ನಿಗದಿ ಮಾಡುತ್ತೇವೆ. ಬೊಮ್ಮಾಯಿ ಪಂಚಮಸಾಲಿ ಸಮುದಾಯದ ಬಗ್ಗೆ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದರು.

    ಶಿಗ್ಗಾಂವಿಯಲ್ಲಿ ನಡೆದ ಪಂಚಮಸಾಲಿ ಸಮುದಾಯದ ಕಾರ್ಯಕ್ರಮದಲ್ಲಿ ಬೊಮ್ಮಾಯಿ ಕಣ್ಣೀರು ಹಾಕಿದ್ದೀರಿ. ಬಿಸಿರೊಟ್ಟಿ, ನವಣಕ್ಕಿ ಅನ್ನ ಕೊಟ್ಟಿದ್ದೀರಿ ಅಂತಾ ಹೇಳಿದ್ದೀರಿ. ಅದರ ಋಣ ತೀರಿಸಿ, ಕೊಟ್ಟ ಮಾತಿನಂತೆ ನಡೆದುಕೊಳ್ಳಿ. ಕಳೆದ ಎರಡು ತಿಂಗಳಿನಿಂದ ಬಸವರಾಜ ಬೊಮ್ಮಾಯಿ ಮೌನವಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಇದೇ ವೇಳೆ ಪರೋಕ್ಷವಾಗಿ ಹರಿಹರದ ಪಂಚಮಸಾಲಿ ಸ್ವಾಮೀಜಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸುಖದ ಸುಪ್ಪತ್ತಿಗೆಯಲ್ಲಿ ಇದ್ದಾರೆ. ಮೀಸಲಾತಿ ಸಮಾಜಕ್ಕೆ ಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿ ಮಾತು ಕೇಳಬೇಕು. ಮಗುವಿಗೆ ಹಸಿವಾದಾಗ ಹಾಲು ಕುಡಿಸಬೇಕು. ಆಗ ಕುಡಿಸದಿದ್ದರೆ ಮಗು ಸಾಯುತ್ತದೆ. ಸಮಾಜ ಈಗ ಮಗುವಿನಂತೆ ಮೀಸಲಾತಿ ಕೇಳುತ್ತಿದೆ. ಸರ್ಕಾರ ತಾಯಿಯಂತೆ ಮೀಸಲಾತಿ ನೀಡಬೇಕು ಇಲ್ಲದಿದ್ದರೆ ಸಮಾಜ ಸಾಯುತ್ತದೆ. ಮೀಸಲಾತಿ ನೀಡುವ ಬಗ್ಗೆ ಸ್ಪಷ್ಟವಾದ ಹೇಳಿಕೆ ನೀಡಿ. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಪ್ರಾರಂಭ ಆಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.