Tag: basavaj bommai

  • ಮತಾಂತರ ತಡೆ ಮಸೂದೆಯಲ್ಲಿರುವ ಪ್ರಮುಖ ಅಂಶಗಳು ಏನು?

    ಮತಾಂತರ ತಡೆ ಮಸೂದೆಯಲ್ಲಿರುವ ಪ್ರಮುಖ ಅಂಶಗಳು ಏನು?

    ಬೆಳಗಾವಿ: ನಾಳೆ ಮತಾಂತರ ತಡೆ ಮಸೂದೆ ಮಂಡನೆ ಆಗಲಿದೆ. ಇವತ್ತು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಸೂದೆ ಮಂಡನೆಗೆ ಒಪ್ಪಿಗೆ ಸಿಕ್ಕಿದ್ದು, ಕರಡು ಮಸೂದೆಯಲ್ಲಿ ಕೆಲ ಬದಲಾವಣೆ ಮತ್ತು ಬಿಗಿ ಕ್ರಮದೊಂದಿಗೆ ಮಂಡನೆಗೆ ಸಚಿವ ಸಂಪುಟ ತೀರ್ಮಾನಿಸಿದೆ.

    ನಾಳೆ ವಿಧಾನಸಭೆ ಕಲಾಪದಲ್ಲಿ ಮತಾಂತರ ನಿಷೇಧ ಕಾನೂನು ಮಂಡನೆ ಆಗಲಿದೆ. ಆದರೆ ಕಾಂಗ್ರೆಸ್ ಪಕ್ಷ ಮತಾಂತರ ತಡೆ ಕಾನೂನು ಜಾರಿಗೆ ತರಲು ಬಿಡಲ್ಲ ಎಂದು ಪಟ್ಟುಹಿಡಿದಿದೆ. ವಿರೋಧದ ಮಧ್ಯೆ ಸರ್ಕಾರ ಮತಾಂತರ ಮಸೂದೆ ಮಂಡನೆಗೆ ಮುಂದಾಗಿದೆ. ಮತಾಂತರವಾದವರ ಮೂಲ ಹುಡುಕಿದರೆ ಅವರೆಲ್ಲ ಹಿಂದುಗಳೇ. ಕೆಲವು ಕಡೆ ಗೌಪ್ಯವಾಗಿ ಮತಾಂತರ ನಡೆಯುತ್ತಿದೆ. ಬಲವಂತದ ಮತಾಂತರವನ್ನು ಸರ್ಕಾರ ಸಹಿಸಲ್ಲ. ಕಾನೂನು ಮುಖಾಂತರ ಆಸೆ ಆಮಿಷ ಒತ್ತಡ ಮತಾಂತರವನ್ನು ತಡೆಯುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇದನ್ನೂ ಓದಿ: ಮತಾಂತರ ತಡೆ ಮಸೂದೆಗೆ ವಿರೋಧ ಇದೆ: ಸಿದ್ದರಾಮಯ್ಯ

    ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ-2021
    ಬಲವಂತದ ಮತಾಂತರ ಜಾಮೀನುರಹಿತ ಅಪರಾಧ ಮತ್ತು ಅಸಿಂಧುವಾಗಿದೆ. ಇದನ್ನು ನೇರ ವಿಚಾರಣೆಗೆ ಒಳಪಡಿಸಬಹುದು. ಉಡುಗೊರೆ, ಕೆಲಸ, ಉಚಿತ ಶಿಕ್ಷಣ, ವಿವಾಹದ ಆಮಿಷ ಒಡ್ಡಿ ಮತಾಂತರ ಮಾಡುವಂತಿಲ್ಲ. ಭಾವನಾತ್ಮಕವಾಗಿ ಸೆಳೆದು ಮತಾಂತರ ಮಾಡುವುದು ಅಪರಾಧ. ಅಮಿಷ ಒಡ್ಡಿ ಮತಾಂತರಗೊಂಡು ವಿವಾಹ ಆಗಿದ್ದರೆ ಆ ಮದುವೆ ಅಸಿಂಧು ಎಂದು ಘೋಷಿಸಲು ಕೌಟುಂಬಿಕ ನ್ಯಾಯಾಲಯಕ್ಕೆ ಈ ಮಸೂದೆಯಲ್ಲಿ ಅವಕಾಶ ನೀಡಲಾಗಿದೆ. ಸಾಮೂಹಿಕ ಮತಾಂತರದಲ್ಲಿ ಶಿಕ್ಷಣ ಸಂಸ್ಥೆ, ಆಶ್ರಮ, ಧಾರ್ಮಿಕ ಮಿಷನರಿ, ಎನ್‍ಜಿಓ ಪಾಲ್ಗೊಳ್ಳುವಂತಿಲ್ಲ. ಸಾಮೂಹಿಕ ಮತಾಂತರದಲ್ಲಿ ಭಾಗಿಯಾದ ಸಂಸ್ಥೆಗಳಿಗೆ ಸರ್ಕಾರದಿಂದ ಅನುದಾನ ನಿಲ್ಲಿಸಲಾಗುವುದು. ಇದನ್ನೂ ಓದಿ: ಬಲವಂತದ ಮತಾಂತರ ಜಾಮೀನುರಹಿತ ಅಪರಾಧ

    ದಂಡ ಎಷ್ಟು?
    ಎಸ್‍ಸಿ, ಎಸ್‍ಟಿ ಸಮುದಾಯದವರನ್ನು ಬಲವಂತವಾಗಿ ಮತಾಂತರ ಮಾಡುವ ಹಾಗಿಲ್ಲ. ಅಪ್ರಾಪ್ತರು, ಮಹಿಳೆಯರು, ಬುದ್ದಿಮಾಂಧ್ಯರಿಗೆ ಆಸೆ, ಆಮಿಷ ಒಡ್ಡಿ ಮತಾಂತರ ಮಾಡಬಾರದು. ಕಾಯ್ದೆ ಉಲ್ಲಂಘಿಸಿದಲ್ಲಿ ಕನಿಷ್ಠ 3ರಿಂದ 10 ವರ್ಷ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಲಾಗುವುದು. ಇತರರನ್ನು ಬಲವಂತವಾಗಿ ಮತಾಂತರಿಸಿದ್ದಲ್ಲಿ 3ರಿಂದ 5 ವರ್ಷ ಜೈಲು ಶಿಕ್ಷೆ ಮತ್ತು 25 ಸಾವಿರ ರೂ. ದಂಡ ಹಾಗೂ ಸಾಮೂಹಿಕ ಮತಾಂತರ ಮಾಡಿದವರಿಗೆ 3ರಿಂದ 10 ವರ್ಷ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ ವಿಧಿಸಲಾಗುವುದು.ಇದನ್ನೂ ಓದಿ: ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆ ತಂದೇ ತರುತ್ತೇವೆ: ಬಿಎಸ್‌ವೈ

    ಪರಿಹಾರವೇನು?
    ಬಲವಂತದ ಮತಾಂತರ ಸಾಬೀತಾದಲ್ಲಿ ಮತಾಂತರಕ್ಕೆ ಒಳಗಾದವನಿಗೆ ಗರಿಷ್ಠ 5 ಲಕ್ಷ ಪರಿಹಾರ ನೀಡಬೇಕಾಗುತ್ತದೆ. ಪರಿಹಾರದ ಮೊತ್ತವನ್ನು ಮತಾಂತರ ಮಾಡಿದವನಿಂದಲೇ ವಸೂಲಿ ಮಾಡಬೇಕಾಗುತ್ತದೆ. ಈ ಹಿಂದೆಯೂ ಮತಾಂತರ ಮಾಡಿದ್ದು ಸಾಬೀತಾದಲ್ಲಿ ದುಪ್ಪಟ್ಟು ದಂಡ ವಿಧಿಸಲಾಗುವುದು.

    ಮತಾಂತರ ಪ್ರಕ್ರಿಯೆ ಹೇಗೆ?
    ಧರ್ಮ ಬದಲಿಸುವ 60 ದಿನ ಮೊದಲು ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಬೇಕು. ಮತಾಂತರ ಆಗುವವರು, ಮಾಡುವವರಿಗೆ ಡಿಸಿ, ಪೊಲೀಸ್ ಸಮ್ಮುಖದಲ್ಲಿ ವಿಚಾರಣೆ ಇರುತ್ತದೆ. ಶಾಲೆ, ಕಾಲೇಜು ಸಕ್ಷಮ ಪ್ರಾಧಿಕಾರಕ್ಕೆ ಮತ ಬದಲಾವಣೆಗೆ ಡಿಸಿ ಸೂಚಿಸಬೇಕು. ಮತಾಂತರಗೊಂಡ ಎಸ್‍ಸಿ, ಎಸ್‍ಟಿ ವ್ಯಕ್ತಿಗಳಿಗೆ ಸಿಗುವ ಮೀಸಲಾತಿ, ಇತರೆ ಸೌಲಭ್ಯ ರದ್ದುಗೊಳಿಸುವುದು ಪ್ರಸ್ತಾವಿತ ಮಸೂದೆಯಲ್ಲಿ ಇದೆ. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಬಳಿಕ ಲವ್ ಜಿಹಾದ್ ನಿಷೇಧ ಕಾಯ್ದೆ: ಸುನಿಲ್ ಕುಮಾರ್

  • ಬೊಮ್ಮಾಯಿ ಭಾವನಾತ್ಮಕ ಹೇಳಿಕೆ ಹೃದಯ ಇದ್ದವರಿಗೆ ಮಾತ್ರ ಅರ್ಥವಾಗುತ್ತದೆ: ಎಚ್‍ಡಿಕೆ

    ಬೊಮ್ಮಾಯಿ ಭಾವನಾತ್ಮಕ ಹೇಳಿಕೆ ಹೃದಯ ಇದ್ದವರಿಗೆ ಮಾತ್ರ ಅರ್ಥವಾಗುತ್ತದೆ: ಎಚ್‍ಡಿಕೆ

    -ಐದು ದಿನ ಕಲಾಪದಲ್ಲಿ ಮೌಲ್ಯಾಧಾರಿತ ಚರ್ಚೆ ಆಗಿದೆಯಾ?
    -ರಾಯಣ್ಣ ಪ್ರತಿಮೆ ವಿರೂಪ ಮಾಡಿದ ಕನ್ನಡ ದ್ರೋಹಿಗಳನ್ನು ಗಡೀಪಾರು ಮಾಡಿ

    ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಗ್ಗಾಂವಿಯಲ್ಲಿ ಅವರು ನಾಲ್ಕು ಚುನಾವಣೆಗಳನ್ನು ಸತತವಾಗಿ ಗೆದ್ದಿದ್ದಾರೆ. ಜನ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ ಆ ಭಾವನೆಗಳು ಸಹಜ. ಹೃದಯ ಇದ್ದವರಿಗೆ ಮಾತ್ರ ಅವರ ಭಾವನೆ ಅರ್ಥವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಸಿಎಂ ಪರ ಬ್ಯಾಟ್ ಬೀಸಿದ್ದಾರೆ.

    ಸಿಎಂ ಭಾವನಾತ್ಮಕ ಹೇಳಿಕೆ ತಪ್ಪೇನಿಲ್ಲ:
    ಬೆಂಗಳೂರಿನಲ್ಲಿ ಇಂದು ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೊಮ್ಮಾಯಿ ಅವರು ತಮ್ಮ ತವರು ಕ್ಷೇತ್ರದಲ್ಲಿ ತಮ್ಮ ಅಧಿಕಾರದ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿರುವ ಬಗ್ಗೆ ನಾನು ವ್ಯಾಖ್ಯಾನ ಮಾಡಲು ಹೋಗುವುದಿಲ್ಲ. ಆ ಸ್ಥಾನಕ್ಕೆ ಅವರು ಬರಬೇಕಾದರೆ ಆ ಕ್ಷೇತ್ರದ ಜನರೇ ಕಾರಣ. ಹೀಗಾಗಿ ಸಿಎಂ ಅವರು ಭಾವನಾತ್ಮಕವಾಗಿ ಮಾತನಾಡಿರಬಹುದು. ಅದರಲ್ಲಿ ತಪ್ಪೇನಿಲ್ಲ. ಅವರ ಮಾತುಗಳು ತಾಯಿ ಹೃದಯ ಇರುವವರಿಗೆ ಮಾತ್ರ ಅರ್ಥವಾಗುತ್ತವೆ. ಬೇರೆಯವರಿಗೆ ಅದು ಅರ್ಥ ಆಗಲ್ಲ. ನನ್ನ ಬಗ್ಗೆಯೂ ಕೆಲವರು ಮಾತನಾಡಿದ್ದಾರೆ. ನಾನು ಅನೇಕ ಸಲ ಹೇಳಿದ್ದೇನೆ, ನನಗೆ ರಾಜಕೀಯ ಜನ್ಮ ಕೊಟ್ಟವರು ರಾಮನಗರದ ಜನ ಅಂತ. ಅವರ ಬಗ್ಗೆ ಹೇಳುವಾಗ ನಾನೂ ಭಾವುಕನಾಗಿದ್ದೇನೆ. ಇದು ಮನುಷ್ಯ ಸಹಜ ಗುಣ ಎಂದು ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಈ ಬದುಕು ಶಾಶ್ವತವಲ್ಲ, ನಾವು ಎಷ್ಟು ದಿನ ಇರ್ತೇವೆ ಅದು ಗೊತ್ತಿಲ್ಲ: ಸಿಎಂ ವೈರಾಗ್ಯದ ಮಾತು

    ಮುಖ್ಯಮಂತ್ರಿ ಬದಲಾವಣೆ ಆಗುತ್ತೆ ಅಂತ ಬೊಮ್ಮಾಯಿ ಅವರು ಹೀಗೆ ಮಾತನಾಡಿದ್ದಾರೆ ಎನ್ನುವುದನ್ನು ನಾನು ಒಪ್ಪಲು ತಯಾರಿಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು. ಇದನ್ನೂ ಓದಿ: ಪ್ರತಿಮೆ ಭಗ್ನ ಮಾಡೋರು ನೀವೇ, ಗೌರವ ಸಲ್ಲಿಸೋರು ನೀವೇ – ಸಿದ್ದು ವಿರುದ್ಧ ಬಿಜೆಪಿ ಕಿಡಿ

    ಮಧ್ಯರಾತ್ರಿಯಲ್ಲಿ ಬಂದು ಕನ್ನಡಿಗರ ಹೆಮ್ಮೆಯ ಪುತ್ರ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪ ಮಾಡಿರುವ, ವಾಹನಗಳ ಮೇಲೆ ಕಲ್ಲು ಹೊಡೆದು ಬೆಂಕಿ ಇಟ್ಟಿರುವ ನಾಡದ್ರೋಹಿಗಳನ್ನು ರಾಜ್ಯದಿಂದ ಗಡೀಪಾರು ಮಾಡಬೇಕು, ಘಟನೆಯಲ್ಲಿ ಭಾಗಿಯಾಗಿರುವ ಸಂಘಟನೆಗಳನ್ನು ನಿಷೇಧ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸರ್ಕಾರವನ್ನು ಒತ್ತಾಯ ಮಾಡಿದ್ದಾರೆ.

    ಕಿಡಿಗೇಡಿಗಳನ್ನು ಸುಮ್ಮನೆ ಬಿಡಬಾರದು:
    ಮಧ್ಯರಾತ್ರಿ ಬಂದು ರಾಯಣ್ಣ ಪ್ರತಿಮೆಯನ್ನು ಹಾಳು ಮಾಡಿರುವುದು ಹೇಡಿತನ. ಭಾಷಾ ಸಾಮರಸ್ಯ ಹಾಳು ಮಾಡುವ ಇಂಥ ಕಿಡಿಗೇಡಿಗಳನ್ನು ಸುಮ್ಮನೆ ಬಿಡಬಾರದು. ಸ್ವಾತಂತ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ವಿರೂಪ ಮಾಡಿರುವುದು ಹೇಯ ಕೃತ್ಯ. ಇದು ವಿಕೃತವಲ್ಲದೇ ಮತ್ತೇನು ಅಲ್ಲ. ಈ ಮೂಲಕ ಕಿಡಿಗೇಡಿಗಳು ಕನ್ನಡಿಗರಿಗೆ ಮಾತ್ರವಲ್ಲ ಮರಾಠಿಗರಿಗೆ ಕೂಡ ದ್ರೋಹ ಎಸಗಿದ್ದಾರೆ. ಓರ್ವ ರಾಷ್ಟ್ರಪ್ರೇಮಿ, ಮಹಾನ್ ಯೋಧನಿಗೆ ಆಗಿರುವ ಈ ಅಪಚಾರದಿಂದ ಎಲ್ಲರೂ ತಲೆತಗ್ಗಿಸುವಂತೆ ಆಗಿದೆ. ಈ ಕೃತ್ಯದಲ್ಲಿ ಯಾವುದೇ ಸಂಘಟನೆಗಳು ಭಾಗಿಯಾಗಿದ್ದರೂ ಅವುಗಳನ್ನು ರಾಜ್ಯದಲ್ಲಿ ನಿಷೇಧ ಮಾಡಬೇಕು ಹಾಗೂ ತಪ್ಪಿತಸ್ಥರನ್ನು ರಾಜ್ಯದಿಂದ ಗಡೀಪಾರು ಮಾಡಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು. ಇದನ್ನೂ ಓದಿ: ಶಾಂತಿ ಕದಡುವುದೇ ನಾಡದ್ರೋಹಿ ಕಾಂಗ್ರೆಸ್ ಉದ್ದೇಶ – ಕೈ ವಿರುದ್ಧ ಬಿಜೆಪಿ ಟ್ವೀಟ್ ದಾಳಿ

    ಈ ಘಟನೆಯ ಹಿಂದೆ ಯಾರಿದ್ದಾರೆ ಎನ್ನುವುದನ್ನು ಹೊರಗೆಳೆದು, ಷಡ್ಯಂತ್ರ ನಡೆಸಿದ ಎಲ್ಲರಿಗೂ ತಕ್ಕ ಶಾಸ್ತಿ ಮಾಡಬೇಕು ಎನ್ನುವುದು ನನ್ನ ಒತ್ತಾಯವಾಗಿದೆ. ಎಂಇಎಸ್ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಮೃದು ಧೋರಣೆ ಅನುಸರಿಸುತ್ತಿವೆ ಎಂದು ಜನ ದೂರುತ್ತಿದ್ದಾರಲ್ಲ ಎಂದು ಮಾಧ್ಯಮಗಳು ಗಮನ ಸೆಳೆದಾಗ. ಯಾರ ಮೇಲೆ ಯಾರಿಗೆ ಮೃದು ಧೋರಣೆ ಇದೆ ಎನ್ನುವುದಕ್ಕಿಂತ ನಮ್ಮ ನೆಲದಲ್ಲೇ ಇದ್ದು, ಇಲ್ಲಿನ ನೀರು ಗಾಳಿ ಅನ್ನ ಸೇವಿಸುತ್ತಾ ನಮ್ಮ ನಾಡಿನ ಬಗ್ಗೆ ದ್ರೋಹ ಚಿಂತನೆ ಮಾಡುವುದು ಘೋರ ಅಪರಾಧ. ಇದಕ್ಕೆ ಕ್ಷಮೆ ಇಲ್ಲ ಎಂದು ಕಿಡಿಕಾರಿದರು.

    ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಗೆ ನಾನು ಹೇಳುವುದು ಇಷ್ಟೇ, ಎರಡು ರಾಜ್ಯಗಳ ನಡುವೆ ದ್ವೇಷವನ್ನು ಬಿತ್ತಿ ಸಾಮರಸ್ಯ ಹಾಳು ಮಾಡುವಂತ ವಿಚ್ಛಿದ್ರ ಶಕ್ತಿಗಳಿಗೆ ಬೆಂಬಲ ಕೊಟ್ಟು ನಿಮ್ಮ ರಾಜಕೀಯ ಶಕ್ತಿ ವೃದ್ಧಿ ಮಾಡಿಕೊಳ್ಳಲು ಸಾಧ್ಯವಿಲ್ಲ. ನಾವು ಪರಸ್ಪರ ಸಹೋದರ ಭಾವದಿಂದ ಕೆಲಸ ಮಾಡಬೇಕು. ಒಕ್ಕೂಟ ವ್ಯವಸ್ಥೆಯನ್ನು ನಾಶ ಮಾಡುವಂತ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಎಂಇಎಸ್ ಸಂಘಟನೆಯನ್ನು ನಿಷೇಧ ಮಾಡುವ ಬಗ್ಗೆ ಸರ್ಕಾರವೇ ಕಾನೂನು ವ್ಯಾಪ್ತಿಯಲ್ಲಿ ಆಲೋಚನೆ ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಒತ್ತಾಯ ಮಾಡಿದರು. ಇದನ್ನೂ ಓದಿ: ಇಂದೇ ಎಂಇಎಸ್‍ಗೆ ನಿಷೇಧ ಹೇರಿ ಇಲ್ಲದಿದ್ದರೆ ಕರ್ನಾಟಕ ಬಂದ್‍ಗೆ ಕರೆ: ವಾಟಾಳ್ ನಾಗರಾಜ್

    ಅಧಿವೇಶನ ಕಲಾಪ ಕಥೆ ಏನಾಗಿದೆ?
    ವಿಧಾನ ಮಂಡಲ ಕಲಾಪಕ್ಕೆ ಹೋಗಿ ಏನು ಮಾಡಲಿ. ಐದು ದಿನ ಕಲಾಪ ನಡೆದಿದೆ. ಟಿಎ, ಡಿಎ ಬಿಲ್ ಕ್ಲೈಮ್ ಮಾಡಿಕೊಳ್ಳಲು ಹೋಗಬೇಕು ಅಷ್ಟೇ. ಈ ಐದು ದಿನಗಳ ಕಲಾಪ ಅದೆಷ್ಟು ಮೌಲ್ಯಾಧಾರಿತವಾಗಿತ್ತು? ಒಂದು ದಿನ ಬೈರತಿ ಬಸವರಾಜ್ ಪ್ರಕರಣ ಇಟ್ಟುಕೊಂಡು ಬಾವಿಗೆ ಇಳಿದರು. ಇನ್ನೊಂದು ದಿನ ಸಂಡೂರು ತಹಸೀಲ್ದಾರ್ ವಿಷಯ ಇಟ್ಟುಕೊಂಡು ಒಂದು ದಿನದ ಕಲಾಪವನ್ನು ವ್ಯರ್ಥ ಮಾಡಿದರು. ಇನ್ನೊಂದು ದಿನ ಮಾಜಿ ಸ್ಪೀಕರ್ ಹೇಳಿಕೆಗೆ ಕಲಾಪ ಬಲಿ ಆಯಿತು. ಕಲಾಪದಲ್ಲಿ ಏನು ಚರ್ಚೆ ಆಯಿತು? ಇದನ್ನೆಲ್ಲ ಕೇಳಲು, ನೋಡಲು ಹೋಗಬೇಕಿತ್ತ ನಾನು? ಎಂದು ಪ್ರಶ್ನಿಸಿದರು.

    ನಾಳೆ ನಾನು ಕಲಾಪಕ್ಕೆ ಹೋಗುತ್ತೇನೆ. ಸದನಕ್ಕೆ ಬೇಕಿಲ್ಲದ ವಿಷಯಗಳಿಗೆ ಮಹತ್ವ ಕೊಡುವ ವ್ಯಕ್ತಿ ನಾನಲ್ಲ. ಕಳೆದ ಬಾರಿ ಬೆಂಗಳೂರಿನಲ್ಲಿ ನಡೆದ ಅಧಿವೇಶನದಲ್ಲಿ ಕೊರೊನಾ ಬಗ್ಗೆ ಸರ್ಕಾರಕ್ಕೆ ಗುಣಾತ್ಮಕ ಸಲಹೆ ನೀಡಿದ್ದೆ. ಅದು ಎಷ್ಟರ ಮಟ್ಟಿಗೆ ಜಾರಿ ಆಗಿದೆಯೋ ಗೊತ್ತಿಲ್ಲ. ಮಂಗಳವಾರ ಮತ್ತು ಬುಧವಾರ ನಾನು ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳು ಮತ್ತು ಸಮಸ್ಯೆಗಳ ಮಾತನಾಡಲಿದ್ದೇನೆ. ಗುರುವಾರ ಮತ್ತೆ ನಾನು ಬಿಡದಿಗೆ ವಾಪಸ್ ಬರಬೇಕಿದೆ. ಅಲ್ಲಿ ಪಟ್ಟಣ ಪಂಚಾಯತ್ ಚುನಾವಣೆ ಇದೆ ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಎಂಇಎಸ್ ಪುಂಡಾಟಿಕೆ ಹಿಂದೆ ಕಾಂಗ್ರೆಸ್ ಇದೆ – ಡಿಕೆಶಿ ವಿರುದ್ಧ ಸಿ.ಟಿ.ರವಿ ಆಕ್ರೋಶ

  • ಇಂದೇ ಎಂಇಎಸ್‍ಗೆ ನಿಷೇಧ ಹೇರಿ ಇಲ್ಲದಿದ್ದರೆ ಕರ್ನಾಟಕ ಬಂದ್‍ಗೆ ಕರೆ: ವಾಟಾಳ್ ನಾಗರಾಜ್

    ಇಂದೇ ಎಂಇಎಸ್‍ಗೆ ನಿಷೇಧ ಹೇರಿ ಇಲ್ಲದಿದ್ದರೆ ಕರ್ನಾಟಕ ಬಂದ್‍ಗೆ ಕರೆ: ವಾಟಾಳ್ ನಾಗರಾಜ್

    ಬೆಂಗಳೂರು: ಎಂಇಎಸ್ ಪುಂಡಾಟಿಕೆ ವಿರುದ್ಧ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ನಾಡಿನೆಲ್ಲಡೆ ಪ್ರತಿಭಟನೆಗಳು ನಡೆದಿವೆ. ಬೆಂಗಳೂರಿನ ಕನ್ನಡ ಒಕ್ಕೂಟ ಸಂಘಟನೆಗಳಿಂದ ಎಂಇಎಸ್ ಪುಂಡಾಟ ಖಂಡಿಸಿ ಹಿರಿಯ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಎಂಇಎಸ್‍ಗೆ ಇವತ್ತೆ ನಿಷೇಧ ಹೇರಿ ಇಲ್ಲದಿದ್ದರೆ ಕರ್ನಾಟಕ ಬಂದ್‍ಗೆ ಕರೆ ನೀಡಲಾಗುವುದಾಗಿ ವಾಟಾಳ್,  ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

    ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ನಡೆದ ಪ್ರತಿಭಟನೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ  ಉದ್ಧವ್ ಠಾಕ್ರೆ ಭಾವಚಿತ್ರಕ್ಕೆ ಬೆಂಕಿ ಹಾಕುವ ಮೂಲಕ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಎಂಇಎಸ್ ಪುಂಡಾಟಿಕೆ ಹಿಂದೆ ಕಾಂಗ್ರೆಸ್ ಇದೆ – ಡಿಕೆಶಿ ವಿರುದ್ಧ ಸಿ.ಟಿ.ರವಿ ಆಕ್ರೋಶ

    ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ಕರ್ನಾಟಕದಲ್ಲಿ ಇದು ಕಣ್ಣೀರ ಕಥೆ. ನಿಜಕ್ಕೂ ನಾವು ಇದನ್ನು ಗಂಭೀರವಾಗಿ ಯೋಜನೆ ಮಾಡಬೇಕು. ಎಂಇಎಸ್‍ನವರ ಪುಂಡಾಟವನ್ನು ಕೊನೆಗೊಳಿಸಬೇಕು. ಈ ಕಾರಣಕ್ಕಾಗಿ ಎಂಇಎಸ್ ನಿಷೇಧ ಆಗಲೇಬೇಕು. ಇವತ್ತೇ ಕಲಾಪದಲ್ಲಿ ತೀರ್ಮಾನ ಮಾಡಿ ರಾತ್ರಿ ಎಷ್ಟು ಹೊತ್ತು ಆದರೂ ನಿಷೇಧ ಆಗಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಗ್ಗೆ ನಮಗೆ ಗೌರವ ಇದೆ. ಆದರೆ ಅವರು ಧೈರ್ಯ ತೆಗೆದುಕೊಳ್ಳಬೇಕು ಎಂದರು. ಇದನ್ನೂ ಓದಿ: ಕರವೇ ಪ್ರತಿಭಟನೆ- ಬೆಂಗಳೂರು, ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

    ಬಿಜೆಪಿ, ಆರ್‌ಎಸ್‌ಎಸ್‌ನವರಿಗೆ ಮರಾಠರನ್ನು ಕಂಡರೆ ಪ್ರೀತಿ. ನಮ್ಮ ಕೆಲ ಶಾಸಕರು ಮಂತ್ರಿಗಳೇ ಮರಾಠರ ಬಗ್ಗೆ ಮಾತನಾಡುತ್ತಿದ್ದಾರೆ. ಇದು ಗೌರವ ಅಲ್ಲ. ಇವತ್ತು ಎಂಇಎಸ್ ನಿಷೇಧ ಆಗಲಿಲ್ಲ ಅಂದರೆ ನಾಡಿದ್ದು ಕನ್ನಡ ಒಕ್ಕೂಟ ಎಲ್ಲಾ ವರ್ಗದ ಸಂಘಟನೆಗಳನ್ನು ಕರೆದು ಸಭೆ ಮಾಡಿ ಕರ್ನಾಟಕ ಬಂದ್‍ಗೆ ಕರೆ ನೀಡುತ್ತೇವೆ. ಆ ದಿನ 1 ಲಕ್ಷಕ್ಕೂ ಹೆಚ್ಚು ಜನ ಸೇರಿ ತೀವ್ರ ಹೋರಾಟಕ್ಕೆ ಕರೆ ಕೊಡುವುದಾಗಿ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಗಲಾಟೆ ಮಾಡಿದವರೆಲ್ಲಾ ಕಾಂಗ್ರೆಸಿಗರು: ಶ್ರೀರಾಮುಲು

     

  • ಸ್ಪರ್ಧಿಸಿದ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುತ್ತೆ: ಸಿಎಂ ವಿಶ್ವಾಸ

    ಬೆಳಗಾವಿ: ರಾಜ್ಯದಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಸ್ಪರ್ಧಿಸಿರುವ ಎಲ್ಲಾ ಕ್ಷೇತ್ರಗಳಲ್ಲೂ ಗೆಲ್ಲುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೆಳಗಾವಿಗೆ ಭೇಟಿ ನೀಡಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾತಾವರಣ ಬಹಳ ಚೆನ್ನಾಗಿದೆ. ಈಗ ಏನು ಗೊತ್ತಾಗಲ್ಲ. ನಮ್ಮವರು ವರದಿ ಕೊಟ್ಟಿರುವ ಪ್ರಕಾರ ಎಲ್ಲ ಕಡೆ ಬಿಜೆಪಿ ಗೆಲುವು ಸಾಧಿಸಲಿದೆ. ಪ್ರತಿ ಚುನಾವಣೆಯಲ್ಲೂ ಮತದಾರರು ತಮ್ಮದೇ ರೀತಿಯಲ್ಲಿ ತೀರ್ಮಾನ ನೀಡುತ್ತಾರೆ. ಉಪ ಚುನಾವಣೆ, ವಿಧಾನಸಭಾ ಚುನಾವಣೆ ಅದರದ್ದೇ ಆದ ನೆಲೆಗಟ್ಟಿನಲ್ಲಿ ನಡೆಯುತ್ತದೆ. ಆವತ್ತಿನ ಸಂದರ್ಭದ ರಾಜಕೀಯ ಸನ್ನಿವೇಶಕ್ಕೆ ತಕ್ಕಂತೆ ಫಲಿತಾಂಶ ಹೊರಬೀಳುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಿಧಾನ ಪರಿಷತ್‌ ಚುನಾವಣೆ- 90 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ

    ಬೆಳಗಾವಿಯಲ್ಲಿ ನಡೆಯುಲಿರುವ ಚಳಿಗಾಲದ ಅಧಿವೇಶನ ಕುರಿತು ಮಾತನಾಡಿ, ಉತ್ತರ ಕರ್ನಾಟಕದ ಹಲವು ಸಮಸ್ಯೆಗಳು ಸಹಜವಾಗಿ ಚರ್ಚೆಗೆ ಬರುತ್ತವೆ ಎಂದು ನಿರೀಕ್ಷಿಸಿದ್ದೇವೆ. ಇಲ್ಲಿಯೂ ಸಚಿವ ಸಂಪುಟ ಸಭೆ ಮಾಡುವ ಚರ್ಚೆ ನಡೆದಿದೆ. ಆ ಸಂದರ್ಭದಲ್ಲಿ ಈ ಭಾಗದ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ಕೊಡುತ್ತೇವೆ. ಮಹದಾಯಿ ವಿವಾದ, ಭೂಸುಧಾರಣಾ ಕಾಯ್ದೆ ತಿದ್ದುಪಡಿ ಕಾಯ್ದೆ ಎಲ್ಲದರ ಬಗ್ಗೆ ಚರ್ಚೆ ಆಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಡಿಕೆಶಿ, ಸಿದ್ದರಾಮಯ್ಯ ಬಳಿಕ ನಾನು ಸಿಎಂ ರೇಸಿನಲ್ಲಿದ್ದೇನೆ: ಶಾಮನೂರು ಶಿವಶಂಕರಪ್ಪ