Tag: Basavalinga Shree

  • ಬಂಡೆಮಠದ ಸ್ವಾಮೀಜಿ ಕೇಸ್‌ಗೆ ಟ್ವಿಸ್ಟ್ – ಪ್ರತೀಕಾರ ತೀರಿಸಿಕೊಂಡ ನೀಲಾಂಬಿಕೆ

    ಬಂಡೆಮಠದ ಸ್ವಾಮೀಜಿ ಕೇಸ್‌ಗೆ ಟ್ವಿಸ್ಟ್ – ಪ್ರತೀಕಾರ ತೀರಿಸಿಕೊಂಡ ನೀಲಾಂಬಿಕೆ

    ರಾಮನಗರ: ಬಂಡೆಮಠದ ಸ್ವಾಮೀಜಿ (Basavalinga Shree) ಸಾವಿಗೆ ಸಂಬಂಧಿಸಿದಂತೆ ತನಿಖೆ ಮುಗಿಸಿರುವ ಪೊಲೀಸರು ದೋಷಾರೋಪ ಪಟ್ಟಿಯನ್ನು ಕೋರ್ಟಿಗೆ (Court) ಸಲ್ಲಿಸುತ್ತಿದ್ದಾರೆ. ನೂರಾರು ಪುಟಗಳ ದೋಷಾರೋಪ ಪಟ್ಟಿಯಲ್ಲಿ (Police Charge Sheet) ಇಂಚಿಂಚೂ ಮಾಹಿತಿ ಬಹಿರಂಗವಾಗಿದೆ.

    ಆರೋಪಿ ಯುವತಿ ನೀಲಾಂಬಿಕೆ (Neelambike), ತಾನು ಸೇಡು ತೀರಿಸಿಕೊಳ್ಳೋದಕ್ಕಾಗಿಯೇ ಈ ಕೃತ್ಯವನ್ನು ಮಾಡಿದ್ದಳು ಅನ್ನೋ ಸತ್ಯ ಬಯಲಾಗಿದೆ. ಸ್ವಾಮೀಜಿ ಮಾಡಿದ್ದ ಒಂದು ಅವಮಾನವನ್ನು ಮನಸ್ಸಿನಲ್ಲಿಟ್ಟುಕೊಂಡು ಪ್ರತೀಕಾರ ತೀರಿಸಿಕೊಳ್ಳಲು ಹೀಗೆ ಮಾಡಿದ್ದಾರೆ ಅನ್ನೊ ಬಗ್ಗೆ ಚಾರ್ಜ್‌ಶೀಟ್‌ನಲ್ಲಿ (Police Charge Sheet) ಉಲ್ಲೇಖವಾಗಿದೆ. ಇದನ್ನೂ ಓದಿ: ಬಂಡೆಮಠದ ಸ್ವಾಮೀಜಿಗೆ ಮಹಿಳೆಯಿಂದ ಬರುತ್ತಿತ್ತು ದೂರವಾಣಿ ಕರೆ- ಡೆತ್‍ನೋಟ್‍ನಲ್ಲಿ ರಹಸ್ಯ ಬಯಲು

    ಪೊಲೀಸರ ಚಾರ್ಜ್‌ಶೀಟ್‌ನಲ್ಲಿ ಏನಿದೆ?
    ನೀಲಾಂಬಿಕೆಗೆ ಬಂಡೆಮಠದ ಸ್ವಾಮಿಯ ಮೇಲೆ ಸೇಡು ಇತ್ತು. ಸ್ವಾಮೀಜಿ ಮಾಡಿದ ಅವಮಾನಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಆಕೆ ಕಾಯುತ್ತಿದ್ದಳು. ಅದಕ್ಕಾಗಿ ಈ ಹಿಂದೆ ಸ್ವಾಮೀಜಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಳು. ಸ್ವಾಮೀಜಿ ಒಬ್ಬ ಹೆಣ್ಣುಬಾಕ, ಹೆಣ್ಣಿನ ಮೋಹ ಇದೆ ಅಂತಾ ಹೇಳಿದ್ದಳು. ಈ ವಿಚಾರ ಗೊತ್ತಾಗಿ ಬಂಡೆಮಠದ ಸ್ವಾಮಿ ಆಡಿಯೋ ರೆಕಾರ್ಡ್ ಮಾಡಿಕೊಂಡಿದ್ದಂತೆ. ಆ ಆಡಿಯೋದ ಮೂಲಕ ನೀಲಾಂಬಿಕೆಗೆ ಸ್ವಾಮೀಜಿ ಅವಮಾನ ಮಾಡಿದ್ದರು. ಇದನ್ನೂ ಓದಿ: ಬಂಡೆಮಠದ ಶ್ರೀ ಆತ್ಮಹತ್ಯೆ ಕೇಸ್ – ನಗ್ನವಾಗಿರುವ ಮೂರನೇ ವೀಡಿಯೋ ಬಹಿರಂಗ

    ಅವಮಾನದಿಂದ ಕುಪಿತಗೊಂಡಿದ್ದ ನೀಲಾಂಬಿಕೆ ಸೇಡು ತೀರಿಸಿಕೊಳ್ಳೋ ಪ್ಲಾನ್ ಮಾಡಿದ್ದಳು. ಈ ವಿಚಾರ ತಿಳಿದು ಕಣ್ಣೂರು ಮಠದ ಸ್ವಾಮೀಜಿ ನೀಲಾಂಬಿಕೆಯನ್ನು ಬಳಸಿಕೊಂಡಿದ್ದಾರೆ. ನೀಲಾಂಬಿಕೆಗೆ ಹಣದ ಸಹಾಯ ಮಾಡಿ ವೀಡಿಯೋ ಕಾಲ್‌ಗೆ ಪ್ರೇರಣೆ ನೀಡಿದ್ದಾರೆ ಅನ್ನೋ ಸತ್ಯ ಚಾರ್ಜ್‌ಶೀಟ್‌ನಲ್ಲಿ ಬಯಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಬಂಡೇಮಠ ಶ್ರೀಗಳ ಆತ್ಮಹತ್ಯೆ ಕೇಸ್- ವೀರಶೈವ ಲಿಂಗಾಯತ ಮುಖಂಡನಿಗೆ ನೋಟಿಸ್

    ಬಂಡೇಮಠ ಶ್ರೀಗಳ ಆತ್ಮಹತ್ಯೆ ಕೇಸ್- ವೀರಶೈವ ಲಿಂಗಾಯತ ಮುಖಂಡನಿಗೆ ನೋಟಿಸ್

    ರಾಮನಗರ: ಬಂಡೇಮಠದ ಬಸವಲಿಂಗ ಸ್ವಾಮೀಜಿ (BandeMutt Basavalinga Swamji) ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ಮೇಜರ್ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಇದೀಗ ಪ್ರಕರಣ ಸಂಬಂಧ ಬೆಂಗಳೂರಿನ ಬಸವೇಶ್ವರ ನಗರದ ನಿವಾಸಿಯಾಗಿರುವ ವೀರಶೈವ ಲಿಂಗಾಯತ ಮುಖಂಡನಿಗೆ ನೋಟಿಸ್ ನೀಡಲಾಗಿದೆ.

    ಡೆತ್‍ನೋಟ್‍ನಲ್ಲಿ ಸಚ್ಚಿದಾನಂದ ಮೂರ್ತಿ ಹೆಸರು ಉಲ್ಲೇಖ ಆಗಿದ್ದರಿಂದ ಮಾಗಡಿ ಪೋಲಿಸರು (Magadi Police) ನೋಟಿಸ್ ನೀಡಿದ್ದಾರೆ. ಸಚ್ಚಿದಾನಂದ ಮೂರ್ತಿಯಿಂದಲೂ ಅಪಪ್ರಚಾರ ಎಂದು ಬಸವಲಿಂಗ ಶ್ರೀಗಳು ಬರೆದಿದ್ದರು. ಹೆಸರು ಪ್ರಸ್ತಾಪ ಹಿನ್ನಲೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‍ನಲ್ಲಿ ತಿಳಿಸಲಾಗಿದೆ. ಪ್ರಕರಣ ಸಂಬಂಧ ಮಾಹಿತಿ ಕಲೆಹಾಕುವ ನಿಟ್ಟನಲ್ಲಿ ವಿಚಾರಣೆ ನಡೆಸಲಾಗುತ್ತದೆ. ಇದನ್ನೂ ಓದಿ: ಬಂಡೇ ಮಠ ಶ್ರೀ ಆತ್ಮಹತ್ಯೆ ಪ್ರಕರಣ – ಮತ್ತೊಂದು ಪ್ರಭಾವಿ ಮಠದ ಶ್ರೀ ಭಾಗಿ?

     

    ಪ್ರಕರಣ ಸಂಬಂಧ ಈಗಾಗಲೇ ಪೊಲೀಸ್ ಕಸ್ಟಡಿಯಲ್ಲಿರುವ ಮೂವರು ಆರೋಪಿಗಳು ವಿಚಾರ ವೇಳೆ ಮಹತ್ವದ ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ಡೆತ್‍ನೋಟ್‍ನಲ್ಲಿ ಇಬ್ಬರು ಶ್ರೀಗಳಿಂದ ತೊಂದರೆ ಆಗ್ತೀದೆ ಎಂದು ಬಸವಲಿಂಗ ಶ್ರೀ ಉಲ್ಲೇಖಿಸಿದ್ದಾರೆ. ಇದನ್ನ ಬೆನ್ನತ್ತಿರುವ ಪೊಲೀಸರು ಆ ಮತ್ತೊಬ್ಬ ಪ್ರತಿಷ್ಠಿತ ಮಠದ ಶ್ರೀಗೂ ಬಲೆ ಬೀಸಿದ್ದಾರೆ. ಬಂಧಿತ ಮೂವರು ಆರೋಪಿಗಳ ವಿಚಾರಣೆ ನಡೆಸಿದ ಪೊಲೀಸರಿಗೆ ಮತ್ತಷ್ಟು ಆಶ್ಚರ್ಯಕರ ವಿಚಾರಗಳನ್ನು ಆರೋಪಿಗಳು ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಬಂಡೆಮಠ ಶ್ರೀ ಆತ್ಮಹತ್ಯೆ ಪ್ರಕರಣ- ನೀಲಾಂಬಿಕೆ ಮೊಬೈಲ್‍ನಿಂದ ನಿತ್ಯ ಮೆಸೇಜ್!

    ಬಸವಲಿಂಗ ಶ್ರೀಗೆ ಕಿರುಕುಳ ನೀಡಿದ್ದ ಆ ಮತ್ತೊಂದು ಮಠದ ಸ್ವಾಮೀಜಿ ಯಾರು..? ಬಂಡೇಮಠಕ್ಕೂ ಆ ಮತ್ತೊಬ್ಬ ಸ್ವಾಮೀಜಿಗೂ ಏನು ಸಂಬಂಧ ಎಂಬ ಪ್ರಶ್ನೆಗಳು ಉದ್ಭವಿಸಿವೆ. ಸದ್ಯ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರು ಆ ಮತ್ತೊಬ್ಬ ಶ್ರೀಗಳನ್ನು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಅದು ಪ್ರತಿಷ್ಠಿತ ಮಠವೊಂದರ ಸ್ವಾಮೀಜಿ ಎಂಬ ಮಾತುಗಳು ಸಹ ಹರಿದಾಡುತ್ತಿವೆ. ಆದ್ರೆ, ಈ ಕುರಿತು ಮತ್ಯಾವ ಸ್ವಾಮೀಜಿಯನ್ನೂ ವಿಚಾರಣೆ ನಡೆಸಿಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಂಡೆ ಶ್ರೀ ಪ್ರಖ್ಯಾತಿಯನ್ನು ಸಹಿಸದೇ ಹನಿಟ್ರ್ಯಾಪ್ – ಕಣ್ಣೂರು ಶ್ರೀ ಕುತಂತ್ರ ಬಯಲು

    ಬಂಡೆ ಶ್ರೀ ಪ್ರಖ್ಯಾತಿಯನ್ನು ಸಹಿಸದೇ ಹನಿಟ್ರ್ಯಾಪ್ – ಕಣ್ಣೂರು ಶ್ರೀ ಕುತಂತ್ರ ಬಯಲು

    ರಾಮನಗರ: ಮಾಗಡಿ  (Magadi) ತಾಲೂಕಿನ ಬಂಡೆ ಮಠದ (Bande Mutt)  ಬಸವಲಿಂಗ ಶ್ರೀಗಳ (Basavalinga Shree) ಆತ್ಮಹತ್ಯೆ ಪ್ರಕರಣವು ದಿನೇ ದಿನೇ ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಬಂಡೆ ಸ್ವಾಮೀಜಿ ತಮಗಿಂತಲೂ ಎತ್ತರಕ್ಕೆ ಬೆಳೆದಿದ್ದಾರೆ ಎಂಬ ಹೊಟ್ಟೆಕಿಚ್ಚು ತಾಳಲಾರದೇ ಕಣ್ಣೂರು ಶ್ರೀಗಳು ಹನಿಟ್ರ್ಯಾಪ್‍ಗೆ ಯೋಜಿಸಿದ್ದರು ಎಂಬ ಮಾಹಿತಿ ಬೆಳಕಿಗೆ ಬಂದಿದೆ.

    ಬಸವಲಿಂಗ ಸ್ವಾಮೀಜಿ ಹಾಗೂ ಕಣ್ಣೂರು ಸ್ವಾಮೀಜಿ ಸಹೋದರ ಸಂಬಂಧಿಗಳಾಗಿದ್ದು, ದೊಡ್ಡಪ್ಪ, ಚಿಕ್ಕಪ್ಪ ಮಕ್ಕಳಾಗಿದ್ದರು. ಆದರೆ ಬಂಡೆ ಸ್ವಾಮೀಜಿಗಳು ದಿನದಿಂದ ದಿನಕ್ಕೆ ಪ್ರಖ್ಯಾತಿಯನ್ನು ಪಡೆಯುತ್ತಿದ್ದದ್ದನ್ನು ನೋಡಿ ಕಣ್ಣೂರು ಶ್ರೀಗೆ ಹೊಟ್ಟೆಕಿಚ್ಚು ತರಿಸಿತ್ತು. ಈ ಹಿನ್ನೆಲೆಯಲ್ಲಿ ಕಣ್ಣೂರು ಮೃತ್ಯುಂಜಯ ಶ್ರೀ, ಬಂಡೇಮಠದ ಬಸವಲಿಂಗ ಸ್ವಾಮೀಜಿಯನ್ನು ಹೀಗೆ ಬಿಟ್ಟರೆ ನಮಗೆ ಉಳಿಗಾಲ ಇಲ್ಲ ಎಂದು ಇವರಿಗೆ ಖೆಡ್ಡ ತೋಡಲೇಬೇಕು ಎಂದು ನಿರ್ಧರಿಸಿದ್ದರು. ಇದರಿಂದಾಗಿಯೇ ಬಸವಲಿಂಗ ಸ್ವಾಮೀಜಿಯನ್ನು ಹನಿಟ್ರ್ಯಾಪ್‍ನಲ್ಲಿ ಸಿಕ್ಕಿ ಹಾಕಿಸಬೇಕು ಎಂದು ಯೋಜಿಸಿದರು. ಅದೇ ಸಮಯಕ್ಕೆ ಸ್ಥಳೀಯ ಮುಖಂಡ ಮಹದೇವಯ್ಯನ ಮೂಲಕ ನೀಲಾಂಬಿಕೆ, ಕಣ್ಣೂರು ಶ್ರೀಗಳಿಗೆ ಪರಿಚಯವಾಗಿದ್ದಳು.

    ಅದಾದ ಬಳಿಕ ನೀಲಾಂಬಿಕೆ ತಾನು ಹೇಳಿದಂತೆ ಕೇಳುತ್ತಾಳೆ ಎನ್ನುವುದು ತಿಳಿಯುತ್ತಿದ್ದಂತೆ ಬಂಡೆಮಠದ ಶ್ರೀಗಳನ್ನು ಸಿಕ್ಕಿ ಹಾಕಿಸಲು ಕಣ್ಣೂರು ಶ್ರೀ ತಂತ್ರ ಹೂಡಿದ್ದಾರೆ. ಇದಾದ ಬಳಿಕ ಯುವತಿ ಬಂಡೆಮಠದ ಶ್ರೀಗಳ ಪರಿಚಯ ಮಾಡಿಕೊಂಡಿದ್ದಾಳೆ. ಸಲುಗೆ ಜಾಸ್ತಿ ಆಗುತ್ತಿದ್ದಂತೆ ಬಂಡೆ ಮಠದ ಶ್ರೀಗಳನ್ನು ತನ್ನ ತಾಳಕ್ಕೆ ತಕ್ಕಂತೆ ನೀಲಾಂಬಿಕಾ ಕುಣಿಸಿದ್ದಾಳೆ. ಅದಾದ ಬಳಿಕ ಬಂಡೆ ಶ್ರೀಗಳು ಕಾಲ್ ಮಾಡುವ ಬಗ್ಗೆ ಕಣ್ಣೂರು ಶ್ರೀ ಬಳಿ ನೀಲಾಂಬಿಕೆ ಹೇಳಿದ್ದಳು. ಆಗ ಕಣ್ಣೂರು ಶ್ರೀಗಳು, ನಿಲಾಂಬಿಕಾ ಬಳಿ ವೀಡಿಯೋ ಮಾಡ್ಕೊ ಅವರನ್ನ ಮಠದಿಂದ ಓಡಿಸಬೇಕು ಎಂದಿದ್ದರು.

    ಕಣ್ಣೂರು ಶ್ರೀ ಅಣತಿಯಂತೆ ಬಸವಲಿಂಗ ಶ್ರೀಗಳ ಜೊತೆ ನಿಲಾಂಬಿಕೆ ವೀಡಿಯೋ ಚಾಟ್ ಆರಂಭಿಸಿದ್ದು, ಅಲ್ಲದೇ ಚಾಟಿಂಗ್ ವೇಳೆ ನಗ್ನವಾಗುವಂತೆ ಹೇಳಿದ್ದಾಳೆ. ಆಕೆಯ ವೈಯ್ಯಾರದ ಮಾತಿಗೆ ಮರುಳಾದ ಶ್ರೀ ನಗ್ನವಾಗಿದ್ದಾರೆ. ಈ ಸಂದರ್ಭದಲ್ಲಿ ವೀಡಿಯೋ ಕರೆಗಳನ್ನು ಆಕೆ ರೆಕಾರ್ಡ್ ಮಾಡುತ್ತಿದ್ದಳು. ನಿಲಾಂಬಿಕೆ ಮೂರು ವೀಡಿಯೋ ಮಾಡಿಟ್ಟುಕೊಂಡು ಮಹದೇವಯ್ಯನಿಗೆ ನೀಡಿದ್ದಳು. ಅದಾದ ಬಳಿಕ ಮಹದೇವಯ್ಯ ವೀಡಿಯೋ ಎಡಿಟ್ ಮಾಡಿ ಬಂಡೆ ಶ್ರೀಗಳಿಗೆ ತೋರಿಸಿ ಬೆದರಿಕೆ ಹಾಕಿದ್ದ ಎನ್ನುವುದು ಇದೀಗ ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಇದನ್ನೂ ಓದಿ: ಬಂಡೆ ಶ್ರೀಗೆ ಖೆಡ್ಡಾ ತೋಡಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಅರೆಸ್ಟ್‌

    ಬಂಧನಕ್ಕೆ ಒಳಗಾಗಿರುವ ಕಣ್ಣೂರು ಮೃತ್ಯುಂಜಯ ಸ್ವಾಮೀಜಿಗೆ ರಾಮನಗರ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಪ್ರಕಟಿಸಿದೆ. ಇದನ್ನೂ ಓದಿ: ಬಂಡೆಮಠ ಶ್ರೀ ಆತ್ಮಹತ್ಯೆ ಕೇಸ್ – ಕಣ್ಣೂರು ಶ್ರೀ, ಯುವತಿ ಅರೆಸ್ಟ್

    Live Tv
    [brid partner=56869869 player=32851 video=960834 autoplay=true]

  • ಬಂಡೆಮಠ ಶ್ರೀ ಆತ್ಮಹತ್ಯೆ ಕೇಸ್ – ಕಣ್ಣೂರು ಶ್ರೀ, ಯುವತಿ ಅರೆಸ್ಟ್

    ಬಂಡೆಮಠ ಶ್ರೀ ಆತ್ಮಹತ್ಯೆ ಕೇಸ್ – ಕಣ್ಣೂರು ಶ್ರೀ, ಯುವತಿ ಅರೆಸ್ಟ್

    ರಾಮನಗರ: ಮಾಗಡಿ (Magadi) ತಾಲೂಕಿನ ಬಂಡೆ ಮಠದ  (Bande Mutt)  ಬಸವಲಿಂಗ ಶ್ರೀಗಳ (Basavalinga Shree) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಕಣ್ಣೂರು ಮೃತ್ಯಂಜಯ ಶ್ರೀ (Kannur Swamiji), ಸ್ಥಳೀಯ ಮುಖಂಡ ಮಹಾದೇವಯ್ಯ ಹಾಗೂ ಓರ್ವ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಬಸವಲಿಂಗ ಶ್ರೀಗಳು ಆತ್ಮಹತ್ಯೆಗೂ ಮುನ್ನ ಡೆತ್‍ನೋಟ್‍ನಲ್ಲಿ ಮೂರು ಪುಟಗಳಲ್ಲಿ ಸವಿಸ್ತಾರವಾಗಿ ಮಾಹಿತಿ ನೀಡಿದ್ದರು. ಈ ವೇಳೆ 21ವರ್ಷದ ಯುವತಿಯನ್ನು ಬಿಟ್ಟು ಕಣ್ಣೂರು ಶ್ರೀಗಳು ಹನಿಟ್ರ್ಯಾಪ್ ಮಾಡಿಸಿರುವ ಕುರಿತು ಹಾಗೂ ಕಣ್ಣೂರು ಶ್ರೀಗಳ ಷಡ್ಯಂತ್ರ್ಯದ ಬಗ್ಗೆಯೂ ಡೆತ್‍ನೋಟ್‍ನಲ್ಲಿ ಉಲ್ಲೇಖಿಸಿದ್ದರು. ಅಷ್ಟೇ ಅಲ್ಲದೇ ಕಣ್ಣೂರು ಸ್ವಾಮೀಜಿ ಹಾಗೂ ಇತರ ಏಳೆಂಟು ಮಂದಿಯಿಂದ ಕಿರುಕುಳ ಎದುರಾಗ್ತಿದೆ. ಅವರು ಮಠದ ವಿಚಾರದಲ್ಲಿ ಆಗಾಗ ತೊಂದರೆ ಉಂಟುಮಾಡುತ್ತಿದ್ದಾರೆ. ನನ್ನ ಸಾವಿಗೆ ಗೊತ್ತಿಲ್ಲದಿರುವ ಆ ಯುವತಿಯೇ ಕಾರಣ ಎಂದು ಸಾವಿಗೂ ಮೊದಲು ಬಂಡೆ ಮಠದ ಶ್ರೀಗಳು ಡೆತ್ ನೋಟ್ ಬರೆದಿಟ್ಟಿದ್ದರು.

    ಈ ಹಿನ್ನೆಲೆಯಲ್ಲಿ ರಾಮನಗರ ಪೊಲೀಸರು ವಿಚಾರಣೆಯನ್ನು ಚುರುಕುಗೊಳಿಸಿದ್ದರು. ಈ ವೇಳೆ ಬೆಂಗಳೂರು ಮೂಲದ ಮಹಿಳೆಯನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಕಣ್ಣೂರು ಶ್ರೀ ಹಾಗೂ ಬಂಡೆ ಮಠದ ಶ್ರೀಗಳು ಸಂಬಂಧಿಗಳಾಗಿರುವ ವಿಷಯ ಬೆಳಕಿಗೆ ಬಂದಿದೆ. ಈ ವೇಳೆ ಕಣ್ಣೂರು ಶ್ರೀ ಪೀಠಕ್ಕಾಗಿ ಷಡ್ಯಂತ್ರ ನಡೆಸಿದ್ದ ವಿಷಯವು ಬೆಳಕಿಗೆ ಬಂದಿದ್ದು, ಕಣ್ಣೂರು ಶ್ರೀಗಳನ್ನು ರಾಮನಗರ ಪೊಲೀಸರು ಬಂಧಿಸಿದ್ದಾರೆ. ಇದಲ್ಲದೆ ಸ್ವಾಮೀಜಿ ಜೊತೆ ಏಳೆಂಟು ಮಂದಿ ಸಹ ಕೈಜೋಡಿಸಿರುವ ಬಗ್ಗೆ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬಂಡೆಮಠದ ಶ್ರೀ ಆತ್ಮಹತ್ಯೆ ಕೇಸ್ – ನಗ್ನವಾಗಿರುವ ಮೂರನೇ ವೀಡಿಯೋ ಬಹಿರಂಗ

    ಒಟ್ಟಾರೆಯಾಗಿ ಬಂಡೆಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಪ್ರಕರಣವು ಪ್ರತಿದಿನ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಮನಗರ ಪೊಲೀಸರು ಚುರುಕಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈಗಾಗಲೇ ಪ್ರಕರಣ ಭೇದಿಸಲು ಮೂರು ತಂಡಗಳನ್ನು ರಚಿಸಿದ್ದಾರೆ. ನಾಲ್ವರು ಸಿಪಿಐ ಹಾಗೂ ಐದು ಜನ ಪಿಎಸ್‍ಐ ಮತ್ತು ಒಬ್ಬರು ಎವೈಎಸ್ಪಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬಸವಲಿಂಗ ಶ್ರೀಗಳ ಆತ್ಮಹತ್ಯೆ ಕೇಸ್‍ನಲ್ಲಿ ಮತ್ತೊಂದು ಮಠದ ಸ್ವಾಮೀಜಿ ಭಾಗಿ?

    Live Tv
    [brid partner=56869869 player=32851 video=960834 autoplay=true]

  • ಬಂಡೆಮಠದ ಶ್ರೀ ಆತ್ಮಹತ್ಯೆ ಕೇಸ್ – ನಗ್ನವಾಗಿರುವ ಮೂರನೇ ವೀಡಿಯೋ ಬಹಿರಂಗ

    ಬಂಡೆಮಠದ ಶ್ರೀ ಆತ್ಮಹತ್ಯೆ ಕೇಸ್ – ನಗ್ನವಾಗಿರುವ ಮೂರನೇ ವೀಡಿಯೋ ಬಹಿರಂಗ

    ರಾಮನಗರ: ಮಾಗಡಿ (Magadi) ತಾಲೂಕಿನ ಬಂಡೆ ಮಠದ (Bande Mutt) ಬಸವಲಿಂಗ ಶ್ರೀಗಳ  (Basavalinga Shree) ಆತ್ಮಹತ್ಯೆ ಪ್ರಕರಣವು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಶ್ರೀಗಳಿಗೆ ಸಂಬಂಧಿಸಿ ಇದೀಗ ಮೂರನೇ ವೀಡಿಯೋ ವೈರಲ್ ಆಗುತ್ತಿದೆ.

    ಬಂಡೆಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಪ್ರಕರಣವು ಪ್ರತಿದಿನ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಸ್ವಾಮೀಜಿಯ ಮೂರನೇ ವೀಡಿಯೋ ವೈರಲ್ ಆಗಿದ್ದು, ಮೊದಲೆರಡು ವೀಡಿಯೋದಲ್ಲಿ ಅರೆ ನಗ್ನವಾಗಿದ್ದ ಬಂಡೆಶ್ರೀ, ಇದೀಗ ನಗ್ನವಾಗಿರುವ ಮೂರನೇ ವೀಡಿಯೋ ಬಹಿರಂಗವಾಗಿದೆ.

    ಆದರೆ ವೀಡಿಯೋ ಕಾಲ್ (Video Call) ಮಾಡಿರುವ ಮಹಿಳೆ (Woman) ಯಾರೆಂದು ಈವರೆಗೆ ಗೊತ್ತಾಗಿಲ್ಲ. ಬದಲಿಗೆ ಆಕೆ ಸಂಪೂರ್ಣ ವೀಡಿಯೋ ಕಾಲ್‍ನ್ನು ರೆಕಾರ್ಡ್ ಮಾಡಿಕೊಂಡಿದ್ದು, ಆಡಿಯೋವನ್ನು ಸಂಪೂರ್ಣವಾಗಿ ಮ್ಯೂಟ್ ಮಾಡಿದ್ದಾಳೆ. ಇದನ್ನೂ ಓದಿ: ಬಂಡೇ ಮಠದ ಸ್ವಾಮೀಜಿ ಆತ್ಮಹತ್ಯೆ ಹಿಂದೆ ಲೋಕಲ್ ಸ್ವಾಮೀಜಿ ಕೈವಾಡ!

    ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಮನಗರ ಪೊಲೀಸರು ಚುರುಕಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈಗಾಗಲೇ ಪ್ರಕರಣ ಭೇದಿಸಲು ಮೂರು ತಂಡಗಳನ್ನು ರಚಿಸಿದ್ದಾರೆ. ನಾಲ್ವರು ಸಿಪಿಐ ಹಾಗೂ ಐದು ಜನ ಪಿಎಸ್‍ಐ ಮತ್ತು ಒಬ್ಬರು ಎವೈಎಸ್ಪಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈಗಾಗಲೇ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದ ಸ್ಥಳದಲ್ಲಿ ದೊರೆತಿದ್ದ ಸ್ಥಳದಲ್ಲಿ ಡೆತ್‍ನೋಟ್‍ನಲ್ಲಿದ್ದ 8 ಜನರನ್ನು ವಿಚಾರಣೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಘಟನೆಗೆ ಸಂಬಂಧಿಸಿ ಒಬ್ಬ ಸ್ವಾಮೀಜಿ ಹಾಗೂ ಬೆಂಗಳೂರಿನ ಮಹಿಳೆಯ ಓರ್ವ ಮಹಿಳೆ ಬಗ್ಗೆಯೂ ಮಾಹಿತಿಯನ್ನು ಕಲೆ ಹಾಕಿದ್ದಾರೆ.

    ಒಟ್ಟಾರೆ ಶ್ರೀಗಳ ಆತ್ಮಹತ್ಯೆ ಕುರಿತು ಹಲವು ಪ್ರಶ್ನೆಗೆ ಪೊಲೀಸರೇ ಉತ್ತರಿಸಬೇಕಿದೆ. ಶ್ರೀಗಳಿಗೆ ಖೆಡ್ಡಾ ತೋಡಿದ ಆ ಗ್ಯಾಂಗ್ ಯಾವುದು, ಅದರಲ್ಲಿ ಯಾರೆಲ್ಲಾ ಇದ್ದಾರೆ.? ಇಡೀ ಪ್ರಕರಣದ ಮಾಸ್ಟರ್ ಮೈಂಡ್ ಯಾರು ಎಂಬುದು ತನಿಖೆ ಬಳಿಕವಷ್ಟೇ ಬಯಲಾಗಬೇಕಿದೆ. ಇದನ್ನೂ ಓದಿ:  ಬಸವಲಿಂಗ ಶ್ರೀಗಳ ಆತ್ಮಹತ್ಯೆ ಕೇಸ್‍ನಲ್ಲಿ ಮತ್ತೊಂದು ಮಠದ ಸ್ವಾಮೀಜಿ ಭಾಗಿ?

    Live Tv
    [brid partner=56869869 player=32851 video=960834 autoplay=true]