Tag: Basavana Bagewadi

  • ವಿಜಯಪುರ | ಬಸವನಬಾಗೇವಾಡಿ ತಾಲೂಕಿನ ಹಲವೆಡೆ 2.9 ತೀವ್ರತೆಯ ಭೂಕಂಪನ

    ವಿಜಯಪುರ | ಬಸವನಬಾಗೇವಾಡಿ ತಾಲೂಕಿನ ಹಲವೆಡೆ 2.9 ತೀವ್ರತೆಯ ಭೂಕಂಪನ

    ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ (Basavana Bagewadi) ತಾಲೂಕಿನ ಹಲವೆಡೆ 2.9 ತೀವ್ರತೆಯ ಭೂಕಂಪನ ದಾಖಲಾಗಿದೆ.

    ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದಿಂದ ಮಾಹಿತಿ ನೀಡಿದ್ದು, ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣ, ಯರನಾಳ, ಹತ್ತರಕಿಹಾಳ, ನಂದ್ಯಾಳ ಗ್ರಾಮಗಳ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿದೆ ಎಂದು ತಿಳಿಸಿದೆ.ಇದನ್ನೂ ಓದಿ: ವಿಜಯಪುರ | ಸಿಂದಗಿ ಶಾಸಕ ಅಶೋಕ್ ಮನಗೂಳಿ ಕಾರು ಅಪಘಾತ – ಪ್ರಾಣಾಪಾಯದಿಂದ ಪಾರು

    ಮನಗೂಳಿ ಪಟ್ಟಣದಲ್ಲಿ ಭೂಮಿಯಾಳದಿಂದ ಮೂರು ಬಾರಿ ಭಾರೀ ಶಬ್ದ ಕೇಳಿಸಿದ್ದು, 2.5 ಕಿ.ಮೀ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿದೆ. ಭಾರೀ ಶಬ್ದಕ್ಕೆ ಆತಂಕಗೊಂಡ ಜನರು ಮನೆಯಿಂದ ಓಡಿ ಹೊರಬಂದಿದ್ದಾರೆ.

    ಕಡಿಮೆ ತೀವ್ರತೆಯ ಭೂಕಂಪನ ಸಂಭವಿಸಿದೆ. ಹೀಗಾಗಿ ಜನರು ಭಯಪಡಬಾರದು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.ಇದನ್ನೂ ಓದಿ: BBK 12 | ಈ ಅವಮಾನ ಯಾವತ್ತೂ ಮರೆಯೋಕಾಗಲ್ಲ; ದೊಡ್ಮನೆಯಲ್ಲಿ ಗಳಗಳನೆ ಅತ್ತ ಅಶ್ವಿನಿ ಗೌಡ

  • 10.5 ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ ಕೇಸ್ – ಶಾಲೆಯಲ್ಲಿ ಚಿನ್ನ ಕರಗಿಸಿದ್ದ ಖದೀಮರಿಗೆ ಚೇರಮನ್ ಸಾಥ್

    10.5 ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ ಕೇಸ್ – ಶಾಲೆಯಲ್ಲಿ ಚಿನ್ನ ಕರಗಿಸಿದ್ದ ಖದೀಮರಿಗೆ ಚೇರಮನ್ ಸಾಥ್

    ವಿಜಯಪುರ/ಹುಬ್ಬಳ್ಳಿ: ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ದರೋಡೆ ಮಾಡಿ, 10.5 ಕೋಟಿ ರೂ. ಮೌಲ್ಯದ ಚಿನ್ನವನ್ನು ಕಳ್ಳತನ ಮಾಡಿದ್ದ ಕೇಸ್‌ಗೆ ಸಂಬಂಧಿಸಿದಂತೆ ರೋಚಕ ಸಂಗತಿಯೊಂದು ಬಯಲಾಗಿದ್ದು, ಹುಬ್ಬಳ್ಳಿ ಜಿಲ್ಲೆಗೆ ಲಿಂಕ್ ಇಲ್ಲದೇ ಇರೋದು ಗೊತ್ತಾಗಿದೆ.

    ಮೇ 25 ರಂದು ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಣಣದ ಕೆನರಾ ಬ್ಯಾಂಕ್‌ನಲ್ಲಿ 58 ಕೆ.ಜಿ 975.94 ಗ್ರಾಂ ಚಿನ್ನಾಭರಣ ಹಾಗೂ 5.20 ಲಕ್ಷ ರೂ. ದರೋಡೆ ನಡೆದಿತ್ತು. ತನಿಖೆ ವೇಳೆ ಈ ಕೇಸ್‌ಗೆ ಹುಬ್ಬಳ್ಳಿ ಜಿಲ್ಲೆಗೆ ಲಿಂಕ್ ಇರುವುದು ಗೊತ್ತಾಗಿದ್ದು, ಶಾಲೆಯ ಚೇರಮನ್ ಆಗಿರುವ ಆರೋಪಿ ಶೇಖರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಕೇಶ್ವಾಪುರದಲ್ಲಿರುವ ಮನೆ ಹಾಗೂ ಗದಗ ರಸ್ತೆಯಲ್ಲಿನ ತನ್ನ ಶಾಲೆಯೊಂದರಲ್ಲಿ ಚಿನ್ನ ಕರಗಿಸಿರುವುದು ತಿಳಿದುಬಂದಿದೆ.ಇದನ್ನೂ ಓದಿ: ಹುಲಿಗಳ ಹತ್ಯೆ ಬಳಿಕ ಗಸ್ತು ತೀವ್ರಗೊಳಿಸಲು ಕ್ರಮ – ಕಾಡಿನಲ್ಲಿ ಜಾನುವಾರು ಮೇಯಿಸುವುದಕ್ಕೆ ಕಡಿವಾಣ

    ಸದ್ಯ ಪೊಲೀಸರು ಶಾಲೆ ಸೇರಿದಂತೆ ಕೆಲವು ಸ್ಥಳಗಳಲ್ಲಿ ಮಹಜರು ಮಾಡಿದ್ದು, ಚಿನ್ನ ಕರಗಿಸಲು ಬಳಸಿದ ಕೆಲವು ವಸ್ತುಗಳನ್ನ ವಶಕ್ಕೆ ಪಡೆದಿದ್ದಾರೆ.

    ಘಟನೆ ಏನು?
    ಆರೋಪಿ ವಿಜಯಕುಮಾರ ಹುಬ್ಬಳ್ಳಿಯ ಕೋಠಾರಿ ನಗರದ ಕೆನರಾ ಬ್ಯಾಂಕ್‌ನಲ್ಲಿ ಸೀನಿಯರ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಇನ್ನೋರ್ವ ಆರೋಪಿ ಚಂದ್ರಶೇಖರ ಹುಬ್ಬಳ್ಳಿಯಲ್ಲಿ ಖಾಸಗಿ ಉದ್ಯೋಗಿಯಾಗಿದ್ದ. ಮೂರನೇ ಆರೋಪಿ ಸುನೀಲ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಮೇ 25ರಂದು ಬ್ಯಾಂಕ್‌ನ ಕಿಟಕಿಯ ಸರಳುಗಳನ್ನು ಕಟ್ ಮಾಡಿ, ಒಳನುಗ್ಗಿ, ಧಾರಾಕಾರ ಮಳೆಯಲ್ಲೇ ಸಿನಿಮೀಯ ಶೈಲಿಯಲ್ಲಿ ಬಂದು 58 ಕೆ.ಜಿ 975.94 ಗ್ರಾಂ ಚಿನ್ನಾಭರಣ ಹಾಗೂ 5.20 ಲಕ್ಷ ರೂ. ನಗದು ಕದ್ದು ಪರಾರಿಯಾಗಿದ್ದರು. ಜೊತೆಗೆ ಪೊಲೀಸರ ದಿಕ್ಕು ತಪ್ಪಿಸಲು ಗೊಂಬೆ ಇಟ್ಟು ವಾಮಾಚಾರ ಮಾಡಿದ್ದರು. ಪರಾರಿಯಾಗಿದ್ದ ಮೂವರನ್ನು ಬಂಧಿಸಿದ್ದರು.ಇದನ್ನೂ ಓದಿ: ರವಿಕುಮಾರ್ ಸದನದಲ್ಲಿ ಅಲ್ಲ, ನಿಮ್ಮಾನ್ಸ್‌ನಲ್ಲಿ ಇರಬೇಕು: ಪ್ರಿಯಾಂಕ್ ಖರ್ಗೆ ಲೇವಡಿ

  • ವಿಜಯಪುರದಲ್ಲಿ ಭೀಕರ ಅಪಘಾತ – ಐವರು ದುರ್ಮರಣ

    ವಿಜಯಪುರದಲ್ಲಿ ಭೀಕರ ಅಪಘಾತ – ಐವರು ದುರ್ಮರಣ

    ವಿಜಯಪುರ: ಟಿಯುವಿ ಕಾರು, ಕಂಟೇನರ್ ಹಾಗೂ ಖಾಸಗಿ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ (Vijayapura) ಜಿಲ್ಲೆಯ ಬಸವನ ಬಾಗೇವಾಡಿ (Basavana Bagewadi) ತಾಲೂಕಿನ ಮನಗೂಳಿ ಪಟ್ಟಣದ ಬಳಿ ಎನ್‌ಹೆಚ್ 50ರಲ್ಲಿ ನಡೆದಿದೆ.

    ಭೀಕರ ಅಪಘಾತದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಹಾಗೂ ಖಾಸಗಿ ಬಸ್‌ನಲ್ಲಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಇತರರಿಗೆ ಗಾಯಗಳಾಗಿವೆ. ಅಲ್ಲದೇ ಕಂಟೇನರ್‌ ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿದೆ. ಇದನ್ನೂ ಓದಿ: ಮನೆಯ ಒಳಗಡೆ ನುಗ್ಗಿ ಅಪರಿಚಿತ ವ್ಯಕ್ತಿಯಿಂದ ಲಷ್ಕರ್‌ ಉಗ್ರನಿಗೆ ಗುಂಡೇಟು!

    ಸ್ಥಳಕ್ಕೆ ಮನಗೂಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದನ್ನೂ ಓದಿ: ಈ ಬಾರಿ 1 ವಾರ ಮೊದಲೇ ರಾಜ್ಯಕ್ಕೆ ಮುಂಗಾರು ಪ್ರವೇಶ?

  • ವಿಜಯಪುರ | ಜಿಲ್ಲೆಯಾದ್ಯಂತ ಗುಡುಗು, ಸಿಡಿಲು ಸಹಿತ ಭಾರೀ ಮಳೆ

    ವಿಜಯಪುರ | ಜಿಲ್ಲೆಯಾದ್ಯಂತ ಗುಡುಗು, ಸಿಡಿಲು ಸಹಿತ ಭಾರೀ ಮಳೆ

    -ಸಿಡಿಲು ಬಡಿದು ಎಮ್ಮೆ, ಹಸು ಸಾವು

    ವಿಜಯಪುರ: ಜಿಲ್ಲೆಯಾದ್ಯಂತ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದ್ದು, ಹಲವು ಕಡೆಗಳಲ್ಲಿ ಆಲಿಕಲ್ಲು ಮಳೆ ಸುರಿದಿದೆ.ಇದನ್ನೂ ಓದಿ: ಬೆಂಗಳೂರಿಗಿಂತ ಚೆನ್ನಾಗಿ 10,000 ಎಕ್ರೆ ಜಾಗದಲ್ಲಿ ಉತ್ತಮ ಸಿಟಿ ಮಾಡ್ತೀವಿ: ಡಿಕೆಶಿ

    ಬಸವನ ಬಾಗೇವಾಡಿ (Basavana Bagewadi) ತಾಲೂಕಿನ ಮನಗೂಳಿ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯಾಗಿದೆ. ಭಾರೀ ಮಳೆ ಸುರಿದ ಪರಿಣಾಮ ರಸ್ತೆಗಳು ಜಲಾವೃತ್ತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಇನ್ನೂ ನಿಲ್ಲಿಸಿದ್ದ ಬೈಕ್ ಹಾಗೂ ಕಾರುಗಳು ಮುಳುಗುವಷ್ಟು ನೀರು ನಿಂತಿದ್ದು, ಅಂಗಡಿ ಮುಂಗಟ್ಟುಗಳ ಜಲಾವೃತಗೊಂಡಿದೆ. ಏಕಾಏಕಿ ಸುರಿದ ಮಳೆಗೆ ಜನರು ಕಕ್ಕಾಬಿಕ್ಕಿಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

    ಸಿಡಿಲು ಬಡಿದು ಎಮ್ಮೆ, ಹಸು ಸಾವು:
    ಜಿಲ್ಲೆಯಲ್ಲಿ ಸುರಿದ ಗುಡುಗು, ಸಿಡಿಲು ಸಹಿತ ಭಾರೀ ಮಳೆಗೆ ಬಸವನಬಾಗೇವಾಡಿ ತಾಲೂಕಿನ ಕರಭಂಟನಾಳ ಗ್ರಾಮದಲ್ಲಿ ಬಸವರಾಜ ಸದಾಶಿವ ಮಣ್ಣೂರ ಎಂಬುವವರಿಗೆ ಸೇರಿದ ಎಮ್ಮೆಯೊಂದು ಸಿಡಿಲು ಬಡಿದು ಸಾವನ್ನಪ್ಪಿದೆ. ಜೊತೆಗೆ ನಾಗೂರು ಗ್ರಾಮದಲ್ಲಿ ಬಸಪ್ಪ ಕ್ವಾಟಿ ಎಂಬುವವರಿಗೆ ಸೇರಿದ ಹಸುವೊಂದು ಸಾವನ್ನಪ್ಪಿದೆ.ಇದನ್ನೂ ಓದಿ: ತಮನ್ನಾಗೆ ಬಿಗ್ ಚಾನ್ಸ್- ಬಾಲಿವುಡ್‌ನ ಹೊಸ ಚಿತ್ರಕ್ಕೆ ಮಿಲ್ಕಿ ಬ್ಯೂಟಿ ನಾಯಕಿ

  • ಫೆ.4ರಂದು ಬಸವನ ಬಾಗೇವಾಡಿಯಲ್ಲಿ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ: ಈಶ್ವರಪ್ಪ

    ಫೆ.4ರಂದು ಬಸವನ ಬಾಗೇವಾಡಿಯಲ್ಲಿ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ: ಈಶ್ವರಪ್ಪ

    ವಿಜಯಪುರ: ಫೆಬ್ರವರಿ 4 ರಂದು ವಿಜಯಪುರ (Vijayapura) ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ (Basavana Bagewadi) ಕ್ರಾಂತಿವೀರ ಬ್ರಿಗೇಡ್ (Krantiveera Brigade) ಉದ್ಘಾಟನೆ ನಡೆಯಲಿದೆ. 1,008 ಸಾದು ಸಂತರ ಪಾದ ಪೂಜೆ ಮೂಲಕ ಬ್ರಿಗೇಡ್ ಉದ್ಘಾಟನೆ ನಡೆಯಲಿದೆ ಎಂದು ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ (KS Eshwarappa) ಹೇಳಿದ್ದಾರೆ.

    ಈ ಕುರಿತು ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 1 ಲಕ್ಷ ಜನ ಸೇರಿಸಿ ಕಾರ್ಯಕ್ರಮ ಮಾಡುತ್ತೇವೆ. ಇದಕ್ಕಾಗಿ ಜನವರಿ 12ರಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇವೆ. ಪ್ರವಾಸ ಮಾಡಿ ಬ್ರಿಗೇಡ್ ಬಗ್ಗೆ ಜಾಗೃತಿ ಮೂಡಿಸುತ್ತೇವೆ. ಬ್ರಿಗೇಡ್ ಅನ್ನು ಕನ್ಹೇರಿ ಮಠದ ಶ್ರೀಗಳು ಹಾಗೂ ಕಾಗಿನೆಲೆ ಮಹಾ ಸಂಸ್ಥಾನದ ಕನಕ ಗುರುಪೀಠದ ತಿಂಥಣಿ ಶಾಖಾ ಮಠದ ಸಿದ್ದರಾಮಾನಂದಪುರಿ ಸ್ವಾಮೀಜಿ ಉದ್ಘಾಟನೆ ಮಾಡುತ್ತಾರೆ. ರಾಜ್ಯದ ವಿವಿಧ ಭಾಗಗಳಿಂದ ಒಂದು ಲಕ್ಷ ಜನ ಸೇರುವ ಸಾಧ್ಯತೆ ಇದೆ ಎಂದರು. ಇದನ್ನೂ ಓದಿ: ಚಿತ್ರಸಂತೆಗೆ ಚಾಲನೆ – ಮನೆಗೊಂದು ಕಲಾಕೃತಿ ಇರಬೇಕು: ಸಿಎಂ

    ಹಿಂದೂ ಸಮಾಜದ ಪರವಾಗಿ ಬ್ರಿಗೇಡ್ ಹೋರಾಟ ಮಾಡಲಿದೆ. ಹಿಂದುಳಿದ ವರ್ಗದ ಸ್ವಾಮೀಜಿಗಳ ಪರ ಬ್ರಿಗೇಡ್ ಕೆಲಸ ಮಾಡಲಿದೆ. ನನ್ನ ಜೀವನದಲ್ಲಿ ನಾನು ರಾಜಕಾರಣದ ಜೊತೆ ಜೊತೆಗೆ ಸಾಧು ಸಂತರ ಸೇವೆ ಮಾಡಿದ್ದೇನೆ. ಬ್ರಿಗೇಡ್ ಸ್ಥಾಪನೆ ಮಾಡೋದಕ್ಕೆ ಮುಖ್ಯ ಉದ್ದೇಶ ಹಿಂದುಳಿದ ಮಠಗಳ ಅಭಿವೃದ್ಧಿ. ಹಿಂದೂಗಳಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ನಮ್ಮ ಹೋರಾಟ ಇರಲಿದೆ ಎಂದು ಹೇಳಿದರು. ಇದನ್ನೂ ಓದಿ: ಸಚಿನ್ ಆತ್ಮಹತ್ಯೆ ಕೇಸ್ – ಬೀದರ್‌ನಲ್ಲಿ ಬಹುತೇಕ ತನಿಖೆ ಮುಕ್ತಾಯ, ಕಲಬುರಗಿಗೆ ತೆರಳಿದ ಸಿಐಡಿ ಟೀಂ

    ರಾಜಕಾರಣದ ಜೊತೆಗೆ ಧಾರ್ಮಿಕ ಕಾರ್ಯದಲ್ಲೂ ನಾನು ಭಾಗಿಯಾಗುತ್ತಿದ್ದೇನೆ. ಈ ಹಿಂದೆ ಮಠ, ಮಂದಿರಗಳಿಗೆ ಹಣ ನೀಡುವಂತೆ ಮಾಡಿದ್ದು ನಾನೇ. ಹೀಗಾಗಿ ನಾನು ಧಾರ್ಮಿಕ ಕೆಲಸ ಮಾಡುತ್ತಿದ್ದೇನೆ ಎಂದರು. ಇದನ್ನೂ ಓದಿ: Photo Gallery: ಬೆಂಗಳೂರಲ್ಲಿ ಚಿತ್ರಸಂತೆ – ಕಲಾಸಕ್ತರನ್ನು ಕೈಬೀಸಿ ಕರೆಯುತ್ತಿವೆ ಕಲಾಕೃತಿಗಳು..

    ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಹೋರಾಟ ವಿಚಾರಕ್ಕೆ ಪ್ರತಿಕ್ರಿಯಿಸಿ ನನ್ನ ವಿರುದ್ಧ ಆರೋಪ ಬಂದಾಗ ನಾನು ರಾಜೀನಾಮೆ ನೀಡಿದ್ದೇನೆ.ನಾನು ಆರ್‌ಎಸ್‌ಎಸ್‌ನಿಂದ ಬೆಳೆದು ಬಂದವನು. ಆರೋಪ ಬಂದ ತಕ್ಷಣವೇ ರಾಜೀನಾಮೆ ನೀಡಿದ್ದೇನೆ. ಕೆಲವರು ನನ್ನ ವಿರುದ್ಧ ರಾಜಕೀಯ ಮಾಡಿದರು. ಅವರು ಈಗ ಅನುಭವಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಯಾವುದೇ ಮಂತ್ರಿ, ಶಾಸಕರ ಮಕ್ಕಳು ಬಸ್‌ನಲ್ಲಿ ಓಡಾಡಲ್ಲ: ಟಿಕೆಟ್ ದರ ಏರಿಕೆಗೆ ಹೆಚ್‌ಡಿಕೆ ಕಿಡಿ

    ನನ್ನ ವಿರುದ್ಧ ಕೆಲವರು ಕೆಲಸ ಮಾಡಿದ್ದರು, ಅವರಿಗೆ ದೇವರೇ ಉತ್ತರ ನೀಡುತ್ತಿದ್ದಾನೆ. ಮುಂದಿನ ದಿನಗಳಲ್ಲಿ ಅವರಿಗೆ ದೇವರು ಒಳ್ಳೆದು ಮಾಡುತ್ತಾರೆ. ಇನ್ನು ನನ್ನ ವಿರುದ್ಧ ಕೆಲಸ ಮಾಡಿದವರು ಯಾರು, ಯಾವ ಪಕ್ಷದವರು ಅನ್ನೋದನ್ನ ಸಮಯ ಬಂದಾಗ ಗೊತ್ತಾಗುತ್ತೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಗುಜರಾತ್‌ನ ಪೋರಬಂದರ್‌ನಲ್ಲಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ, 3 ಸಾವು

  • ಎಪಿಎಂಸಿ ಹೊರಗೆ ಯುವಕನ ಶವ ಪತ್ತೆ – ಅನೈತಿಕ ಸಂಬಂಧಕ್ಕೆ ಬಲಿಯಾದ ಶಂಕೆ!

    ಎಪಿಎಂಸಿ ಹೊರಗೆ ಯುವಕನ ಶವ ಪತ್ತೆ – ಅನೈತಿಕ ಸಂಬಂಧಕ್ಕೆ ಬಲಿಯಾದ ಶಂಕೆ!

    ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ (Basavana Bagewadi) ಪಟ್ಟಣದ ಎಪಿಎಂಸಿ ಹೊರಭಾಗದಲ್ಲಿ ಯುವಕನ ಶವ ಪತ್ತೆಯಾಗಿದ್ದು, ಕೊಲೆಯ ಭಯಾನಕ ವಿಡಿಯೋ ವೈರಲಾಗಿದೆ.

    ಮೃತ ಯುವಕನನ್ನು ಬಸವನ ಬಾಗೇವಾಡಿ ನಿವಾಸಿ ಸುನೀಲ ಭಜಂತ್ರಿ (23) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ – ತಾಯಿ, ಮಗಳಿಗೆ ಗಂಭೀರ ಗಾಯ

    ಭಾನುವಾರ (ನ.10) ಯುವಕ ಹಾಗೂ ಇತರರು ಸೇರಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ಬಳಿಕ ಯುವಕನ ಕುತ್ತಿಗೆಗೆ ಹಗ್ಗ ಹಾಕಿ ಕುತ್ತಿಗೆಯನ್ನು ತುಳಿದು ಕೊಲೆ ಮಾಡಿದ್ದಾರೆ. ಕೊಲೆಗೂ ಮುನ್ನ ಎಣ್ಣೆ ಪಾರ್ಟಿ ಮಾಡುವಾಗ, ಸಾಯುವ ಮೊದಲು ವಿಡಿಯೋ ಮಾಡಿದ್ದಾರೆ. ಜೊತೆಗೆ ಸತ್ತ ಬಳಿಕ ವಿಡಿಯೋ ಮಾಡಿದ್ದು, ವೈರಲ್ ಆಗಿದೆ.

    ಅನೈತಿಕ ಸಂಬಂಧ ಹೊಂದಿದ್ದರಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ವಿಡಿಯೋ ಆಧಾರದ ಮೇಲೆ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ. ಬಸವನ ಬಾಗೇವಾಡಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: ಬೀದಿ ನಾಯಿ ಜೊತೆ ಅಸಭ್ಯ ವರ್ತನೆ – ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

  • ಜೆಡಿಎಸ್ ಶಾಸಕ ರಾಜುಗೌಡ ಪಾಟೀಲ್‌ಗೆ ಮಾತೃ ವಿಯೋಗ

    ಜೆಡಿಎಸ್ ಶಾಸಕ ರಾಜುಗೌಡ ಪಾಟೀಲ್‌ಗೆ ಮಾತೃ ವಿಯೋಗ

    ವಿಜಯಪುರ: ದೇವರಹಿಪ್ಪರಗಿ (Devarahipparagi) ಕ್ಷೇತ್ರದ ಜೆಡಿಎಸ್ (JDS) ಶಾಸಕ ರಾಜುಗೌಡ ಪಾಟೀಲ್ (Rajugouda Patil) ಅವರ ತಾಯಿ ವಯೋಸಹಜ ಕಾಯಿಲೆಗಳಿಂದ ನಿಧನರಾಗಿದ್ದಾರೆ.

    ಶಾಸಕ ರಾಜೂಗೌಡ ತಾಯಿ ನೀಲಮ್ಮಗೌಡತಿ ಪಾಟೀಲ್ (NeelammaGoudti Patil) ತಮ್ಮ 70ನೇ ವಯಸ್ಸಿನಲ್ಲಿ ನಿಧನ ಹೊಂದಿದರು. ವಯೋ ಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಅವರು ಇಂದು ಬಸವನ ಬಾಗೇವಾಡಿ (Basavana Bagewad) ತಾಲೂಕಿನ ಸ್ವಗ್ರಾಮ ಕುದರಿಸಾಲವಾಡಗಿ (Kudari Salawadgi) ನಿವಾಸದಲ್ಲಿ ಕೊನೆಯುಸಿರೆಳೆದರು.ಇದನ್ನೂ ಓದಿ: ಜಗಳವಾಡಿಕೊಂಡು ತವರು ಮನೆ ಸೇರಿದ್ದ ಹೆಂಡತಿ – ಅತ್ತೆಯನ್ನೇ ಕೊಂದು ಅಳಿಯ ಎಸ್ಕೇಪ್‌

    ಶಾಸಕ ರಾಜುಗೌಡ ಸೇರಿದಂತೆ ಮೂವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ವಿವಿಧ ಮಠಾಧೀಶರು, ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ (MB Patil), ಸಚಿವ ಶಿವಾನಂದ ಪಾಟೀಲ್ (Shivanand Patil) ಇತರೆ ಜನಪ್ರತಿನಿಧಿಗಳ ಸಂತಾಪ ಸೂಚಿಸಿದ್ದಾರೆ.

    ಗುರುವಾರ ಮಧ್ಯಾಹ್ನ 2 ಗಂಟೆಗೆ ಸ್ವಗ್ರಾಮ ಕುದರಿಸಾಲವಾಡಗಿ ಗ್ರಾಮದ ತೋಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.ಇದನ್ನೂ ಓದಿ: ಜಾಮೀನು ನಿರೀಕ್ಷೆಯಲ್ಲಿದ್ದ ದರ್ಶನ್‌ಗೆ ಮತ್ತೆ ಶಾಕ್ – ವಿಚಾರಣೆ ನಾಳೆಗೆ ಮುಂದೂಡಿಕೆ

  • ರೇಬಿಸ್ ರೋಗಕ್ಕೆ ಆರಂಭದಲ್ಲಿಯೇ ಚಿಕಿತ್ಸೆ ಪಡೆದರೆ ಗುಣಪಡಿಸಬಹುದು : ಮಂಜುನಾಥ ಸಾವಂತ

    ರೇಬಿಸ್ ರೋಗಕ್ಕೆ ಆರಂಭದಲ್ಲಿಯೇ ಚಿಕಿತ್ಸೆ ಪಡೆದರೆ ಗುಣಪಡಿಸಬಹುದು : ಮಂಜುನಾಥ ಸಾವಂತ

    ವಿಜಯಪುರ: ರೇಬಿಸ್ (Rabies) ರೋಗಕ್ಕೆ ಆರಂಭದಲ್ಲಿಯೇ ಚಿಕಿತ್ಸೆ ಪಡೆದರೆ ಗುಣಪಡಿಸಬಹುದಾಗಿದೆ. ಇಲ್ಲದಿದ್ದರೆ ಅದು ನೇರವಾಗಿ ನರಮಂಡಲದ ಮೇಲೆ ಪರಿಣಾಮ ಬೀರಿ ಮಾರಣಾಂತಿಕವಾಗಬಹುದು ಎಂದು ಶ್ರೀ ಬಿ. ಎಂ.ಪಾಟೀಲ ವೈದ್ಯಕೀಯ ಕಾಲೇಜಿನ (Shri B. M. Patil Medical College) ಶಸ್ತ್ರಚಿಕಿತ್ಸೆ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಮಂಜುನಾಥ ಸಾವಂತ ಹೇಳಿದ್ದಾರೆ.

    ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿಯ ಬಿ.ಎಲ್.ಡಿ.ಇ (BLDE) ಪಿಯು ಕಾಲೇಜಿನಲ್ಲಿ ಶ್ರೀ ಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಸಮುದಾಯ ವೈದ್ಯಕೀಯ ವಿಭಾಗ ಹಾಗೂ ಶಸ್ತ್ರ ಚಿಕಿತ್ಸೆ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ರೇಬಿಸ್ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.ಇದನ್ನೂ ಓದಿ: ವಿರೋಧದ ನಡ್ವೆ ಮೈಸೂರಲ್ಲಿ ಮಹಿಷ ದಸರಾ ಆಚರಣೆ – ಜಿಲ್ಲಾಡಳಿತ, ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ

    ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೇಬಿಸ್ ಸಸ್ತನಿಗಳಲ್ಲಿ ವೈರಾಣುವಿನಿಂದ ಹರಡುವ ಕಾಯಿಲೆಯಾಗಿದೆ. ಈ ರೋಗ ಹರಡಲು ಲಿಸ್ಸಾವೈರಸ್ ಮುಖ್ಯ ಕಾರಣವಾಗಿದೆ. ನಾಯಿ, ಬೆಕ್ಕುಗಳ ಕಡಿತ ಅಥವಾ ಲಾಲಾರಸದ ಸಂಪರ್ಕದಿಂದ ಹಾಗೂ ಸಸ್ತನಿಗಳು ಅದರಲ್ಲೂ ವಿಶೇಷವಾಗಿ ಕಾಡುಪ್ರಾಣಿಗಳ ಮೂಲಕ ಈ ಸೋಂಕು ಹರಡುತ್ತದೆ. ರೇಬಿಸ್ ಕಾಯಿಲೆಯ ಹರಡುವಿಕೆ, ಅದನ್ನು ತಡೆಗಟ್ಟುವ ವಿಧಾನ, ಪ್ರಾಣಿ ಹಾಗೂ ಮನುಷ್ಯರಿಗೆ ಲಭ್ಯವಿರುವ ರೇಬೀಸ್ ಲಸಿಕೆಯ ಬಗ್ಗೆ ಮಾಹಿತಿ ನೀಡಿದರು.

    ಸಮುದಾಯ ವೈದ್ಯಕೀಯ ಕಾರ್ಯಕರ್ತ ಸಂಜೀವ ಖಾನಗೌಡ್ರ ಮಾತನಾಡಿ, ರೇಬಿಸ್ ರೋಗ ಬಂದ ನಂತರ ಪರದಾಡುವುದಕ್ಕಿಂತ, ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸುವುದು ಅತೀ ಮುಖ್ಯವಾಗಿದೆ. ಇದರ ಭಾಗವಾಗಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು ಈ ವಿಶ್ವ ರೆಬಿಸ್ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ. ಈ ರೋಗದ ಕುರಿತು ಸಮುದಾಯದ ಜನರಲ್ಲಿ ಜನಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಬಿ.ಎಲ್. ಡಿ. ಇ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಎ. ಎಸ್. ನಾವಿ, ಸಹಾಯಕ ಪ್ರಾಧ್ಯಾಪಕಿ ಡಾ. ಪೂಜಾ ತೊದಲಬಾಗಿ, ವೈದ್ಯಕೀಯ ಸ್ನಾತಕೋತರ ವಿದ್ಯಾರ್ಥಿಗಳಾದ ಡಾ. ಈಶ್ವರ, ಡಾ. ಸ್ಮಿತ್, ಡಾ. ಶಮಿನ್, ಜಿ. ಬಿ. ಮನಗೂಳಿ, ಡಿ. ಬಿ ಚೆಣೆಗಾಂವ, ಡಿ. ಐ. ಮಠಪತಿ ಮುಂತಾದವರು ಉಪಸ್ಥಿತರಿದ್ದರು.ಇದನ್ನೂ ಓದಿ: ವೈಯಾಲಿಕಾವಲ್ ಮಹಾಲಕ್ಷ್ಮಿ ಕೊಲೆ ಪ್ರಕರಣ – ಹತ್ಯೆ ಬಳಿಕ ಪಶ್ಚಾತ್ತಾಪ ಪಟ್ಟಿದ್ದ ಹಂತಕ

  • ವಿಜಯಪುರದಲ್ಲಿ ಎರಡು ಬಾರಿ ಭೂಕಂಪನ – ಆತಂಕದಲ್ಲಿ ಜನರು

    ವಿಜಯಪುರದಲ್ಲಿ ಎರಡು ಬಾರಿ ಭೂಕಂಪನ – ಆತಂಕದಲ್ಲಿ ಜನರು

    ವಿಜಯಪುರ: ಐತಿಹಾಸಿಕ ಜಿಲ್ಲೆ ವಿಜಯಪುರದಲ್ಲಿ (Vijayapura) ಭೂಕಂಪನದ (Earthquake) ಅನುಭವ ಆಗಿದೆ. ಭಾನುವಾರ ತಡರಾತ್ರಿ ಎರಡು ಬಾರಿ ಭೂಕಂಪನ ಸಂಭವಿಸಿದೆ.

    ವಿಜಯಪುರ ನಗರ ಮತ್ತು ಬಸವನಬಾಗೇವಾಡಿ (Basavana Bagewadi) ತಾಲೂಕಿನ ಮನಗೂಳಿಯಲ್ಲಿ ಭೂಮಿ ಕಂಪಿಸಿದೆ. ಭಾನುವಾರ ರಾತ್ರಿ 12:22 ಹಾಗೂ ರಾತ್ರಿ 1:20ಕ್ಕೆ ಭೂಮಿ ಕಂಪಿಸಿದ ಅನುಭವ ಆಗಿದೆ. ಇದನ್ನೂ ಓದಿ: ವೇಣೂರಿನಲ್ಲಿ ಪಟಾಕಿ ಗೋಡೌನ್ ಸ್ಫೋಟ – ಮೂವರು ಕಾರ್ಮಿಕರ ದಾರುಣ ಸಾವು

    2.9 ತೀವ್ರತೆಯಲ್ಲಿ ಭೂಕಂಪನ ಆಗಿದ್ದು, ಭೂಮಿಯ 5 ಕಿ.ಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. ಆ್ಯಪ್‌ಗಳಲ್ಲೂ ಭೂಕಂಪನ ದಾಖಲಾಗಿದೆ. ಇದರಿಂದ ವಿಜಯಪುರದ ಜನರಲ್ಲಿ ಆತಂಕ ಮನೆಮಾಡಿದೆ. ಇದನ್ನೂ ಓದಿ: ಶಾಲಾ ಬಸ್-ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ – ನಾಲ್ವರು ವಿದ್ಯಾರ್ಥಿಗಳ ದುರ್ಮರಣ

  • ರೌಡಿ ಶೀಟರ್​​ನನ್ನು ಕಲ್ಲುಗಳಿಂದ ಹೊಡೆದು ಬರ್ಬರವಾಗಿ ಕೊಲೆಗೈದ ಗ್ರಾಮಸ್ಥರು

    ರೌಡಿ ಶೀಟರ್​​ನನ್ನು ಕಲ್ಲುಗಳಿಂದ ಹೊಡೆದು ಬರ್ಬರವಾಗಿ ಕೊಲೆಗೈದ ಗ್ರಾಮಸ್ಥರು

    ಬೀದರ್: ಎರಡು ಗುಂಪುಗಳ ಮಧ್ಯೆ ನಡೆದ ಗಲಾಟೆಯಲ್ಲಿ ರೌಡಿ ಶೀಟರ್ ಒಬ್ಬನನ್ನು ಗ್ರಾಮಸ್ಥರೇ ಕಲ್ಲುಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬಸವಕಲ್ಯಾಣ ತಾಲೂಕಿನ ಸಿರಗೂರ ಗ್ರಾಮದಲ್ಲಿ ನಡೆದಿದೆ.

    ಬಟಗೇರಾವಾಡಿ ಗ್ರಾಮದ ಬಸವರಾಜ ಹಣಮಂತ ಚಂಡಕಾಳೆ (38) ಕೊಲೆಯಾದ ರೌಡಿ ಶೀಟರ್. ಕೊಲೆಯಾದ ರೌಡಿ ಶೀಟರ್ ಬಸವರಾಜ ಬಿಎಸ್‍ಎಫ್‍ನಲ್ಲಿ ಸುಮಾರು 10 ವರ್ಷಗಳಿಗೂ ಅಧಿಕ ಕಾಲ ಸೇವೆಸಲ್ಲಿಸಿದ್ದ. ಸೋಮವಾರ ರಾತ್ರಿ ನಡೆದ ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

    ಸಿರಗೂರ ಗ್ರಾಮದಲ್ಲಿ ಭಾನುವಾರ ರಾತ್ರಿ ಅದ್ಧೂರಿಯಾಗಿ ದೇವಿ ಮೆರವಣಿಗೆ ನಡೆದಿತ್ತು. ಈ ವೇಳೆ ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ಮಧ್ಯೆ ಜಗಳವಾಗಿತ್ತು. ಆದರೆ ಗ್ರಾಮದ ಹಿರಿಯರು ಸೇರಿ ಅದನ್ನು ಬಗೆ ಹರಿಸಿದ್ದರು. ಆದರೆ ಸೋಮವಾರ ಸಂಜೆ ಮತ್ತೆ ಎರಡೂ ಗುಂಪುಗಳ ಮಧ್ಯೆ ಗಲಾಟೆ ಆರಂಭವಾಗಿತ್ತು. ರೌಡಿ ಶೀಟರ್ ಬಸವರಾಜ್ ಒಂದು ಗುಂಪಿನ ಪರ ವಹಿಸಿಕೊಂಡು ತನ್ನ ಸಹಚರರೊಂದಿಗೆ ಸಿರಗೂರ ಗ್ರಾಮಕ್ಕೆ ಆಗಮಿಸಿದ್ದ.

    ಬಸವರಾಜ್ ಎದುರಾಳಿ ಗುಂಪಿನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಇದರಿಂದ ಕೋಪಗೊಂಡ ಸಿರಗೂರ ಗ್ರಾಮಸ್ಥರು ಬಸವರಾಜ್‍ಗೆ ಕಲ್ಲುಗಳಿಂದ ಹೊಡೆದಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ರೌಡಿ ಶೀಟರ್ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

    ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಮಂಠಾಳ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ ಕೆಲವರಿಗೆ ಗಾಯವಾಗಿದ್ದು, ಅವರನ್ನು ಬಸವಕಲ್ಯಾಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಮಂಠಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.