Tag: Basavanagouda Patil Yatnal

  • ಮುಖ್ಯಮಂತ್ರಿಯಾಗಲು ಎರಡೂವರೆ ಸಾವಿರ ಕೋಟಿ ಬೇಕು ಯತ್ನಾಳ್ ಹೇಳಿಕೆ ತನಿಖೆ ಆಗಲಿ: ಡಿ.ಕೆ. ಶಿವಕುಮಾರ್

    ಮುಖ್ಯಮಂತ್ರಿಯಾಗಲು ಎರಡೂವರೆ ಸಾವಿರ ಕೋಟಿ ಬೇಕು ಯತ್ನಾಳ್ ಹೇಳಿಕೆ ತನಿಖೆ ಆಗಲಿ: ಡಿ.ಕೆ. ಶಿವಕುಮಾರ್

    ಬೆಂಗಳೂರು: ಮುಖ್ಯಮಂತ್ರಿಯಾಗಲು ಎರಡೂವರೆ ಸಾವಿರ ಕೋಟಿ ಬೇಕು ಎಂಬ ಬಿಜೆಪಿ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿಚಾರವಾಗಿ ತನಿಖೆಯಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.

    ಕೆಪಿಸಿಸಿ ಕಚೇರಿಯಲ್ಲಿ ಯತ್ನಾಳ್ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಯತ್ನಾಳ್ ಅವರು, ಮುಖ್ಯಮಂತ್ರಿಯಾಗಲೂ ಎರಡೂವರೆ ಸಾವಿರ ಕೋಟಿ ಬೇಕು. ಮಂತ್ರಿ ಆಗಲು ನೂರು ಕೋಟಿ ಬೇಕು ಅಂತ ಬಹಿರಂಗವಾಗಿ ಹೇಳಿದ್ದಾರೆ. ಹೀಗಾಗಿ ಇವರ ಈ ಹೇಳಿಕೆ ಬಗ್ಗೆ ರಾಷ್ಟ್ರಮಟ್ಟದಲ್ಲಿ ತನಿಖೆ ಆಗಬೇಕು ಅಂತ ಒತ್ತಾಯಿಸಿದ್ದಾರೆ. ಇದನ್ನೂ ಓದಿ; 2,500 ಕೋಟಿ ಕೊಡಿ ನಿಮ್ಮನ್ನೂ ಸಿಎಂ ಮಾಡ್ತೀವಿ ಅಂದ್ರು: ಬಾಂಬ್ ಸಿಡಿಸಿದ ಯತ್ನಾಳ್

    YATNAL 1

    ಬಿಜೆಪಿ ಸರ್ಕಾರದಲ್ಲಿ ಎಲ್ಲಾ ಇಲಾಖೆಯಲ್ಲೂ ರೇಟ್ ಫಿಕ್ಸ್ ಆಗಿದೆ. ಕೆಪಿಎಸ್‍ಸಿ, ಪಿಎಸ್‍ಐ, ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಯಲ್ಲಿ ರೇಟ್ ಫಿಕ್ಸ್ ಆಗಿದೆ. ಈ ಸಮಯದಲ್ಲಿ ಅವರದ್ದೇ ಪಕ್ಷದ ಶಾಸಕರು ಇಂತಹ ದೊಡ್ಡ ಆರೋಪ ಮಾಡಿದ್ದಾರೆ. ಕೂಡಲೇ ಈ ಬಗ್ಗೆ ಕೇಸ್ ದಾಖಲಿಸಿಕೊಂಡು ತನಿಖೆ ಮಾಡಬೇಕು ಎಂದಿದ್ದಾರೆ.

    ಯತ್ನಾಳ್ ಸಾಮಾನ್ಯ ವ್ಯಕ್ತಿ ಅಲ್ಲ. ಅವರು ಕೇಂದ್ರದ ಮಾಜಿ ಸಚಿವರು, ಹಾಲಿ ಶಾಸಕರು. ಅವರ ಮಾತನ್ನು ಯಾರು ನಿರಾಕರಣೆ ಮಾಡಬಾರದು. ಯತ್ನಾಳ್ ಹೇಳಿಕೆ ರಾಷ್ಟ್ರೀಯ ಮಟ್ಟದಲ್ಲಿ ತನಿಖೆ ಆಗಬೇಕು. ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗಬೇಕು. ಇದೊಂದು ರಾಷ್ಟ್ರಮಟ್ಟದ ವಿಚಾರ. ಈ ಬಗ್ಗೆ ಮೋದಿ, ಅಮಿತ್ ಶಾ, ಜೆಪಿ ನಡ್ಡಾ ಮಾತನಾಡಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ ಕೂಡಲೇ ಯತ್ನಾಳ್ ಹೇಳಿಕೆ ಬಗ್ಗೆ ತನಿಖೆ ನಡೆಸಬೇಕು ಅಂತ ಆಗ್ರಹ ಮಾಡಿದ್ದಾರೆ. ಇದನ್ನೂ ಓದಿ; ವಿಜಯಪುರ ಹೆಚ್ಚು ಕಡಿಮೆ ಪಾಕಿಸ್ತಾನ ಇದ್ದಂಗೆ ಇದೆ: ಯತ್ನಾಳ್‌

  • ಡಿಕೆಶಿನಾ ಮೊದಲು ಜೈಲಿಗೆ ಹಾಕಬೇಕು: ಯತ್ನಾಳ್

    ಡಿಕೆಶಿನಾ ಮೊದಲು ಜೈಲಿಗೆ ಹಾಕಬೇಕು: ಯತ್ನಾಳ್

    ವಿಜಯಪುರ: ಮಾಜಿ ಸಚಿವ ಈಶ್ವರಪ್ಪನವರನ್ನು ಜೈಲಿಗೆ ಹಾಕೋದಲ್ಲ. ಮೊದಲು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರನ್ನು ಜೈಲಿಗೆ ಹಾಕಬೇಕು ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದರು.

    DK SHIVAKUMAR

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸರು ಹಾಕಿದ ಬ್ಯಾರಿಕೇಡ್ ಹಾರುವಷ್ಟು ಶಕ್ತಿ ಇದೆ. ಅದೇ ದೆಹಲಿಯಲ್ಲಿ ನಿಮ್ಮನ್ನ ಜೈಲಿಗೆ ಹಾಕಿದಾಗ ಬಿಪಿ, ಶುಗರ್ ಹೆಚ್ಚಾಗಿದೆಯಂತೆ ಹೇಳಿದ್ದೀರಿ ಎಂದು ಡಿಕೆ ಶಿವಕುಮಾರ್ ಕಾಲೆಳದರು. ಇದನ್ನೂ ಓದಿ: ನಾನು ತಪ್ಪಿತಸ್ಥನಲ್ಲ ನನ್ನ ತಪ್ಪು ಇದ್ದರೆ ಭಗವಂತ ನನಗೆ ಶಿಕ್ಷೆ ಕೊಡಲಿ: ಈಶ್ವರಪ್ಪ

    ನೀವು ಬ್ಯಾರಿಕೇಡ್ ಜಿಗಿಯುತ್ತೀರಿ ಅಂದರೆ ನೀವು ಫಿಟ್ ಆಗಿದ್ದೀರಿ ಅಂತಾ ಅರ್ಥ. ಹೀಗಾಗಿ ನೀವು ಆರೋಗ್ಯಕರವಾಗಿ ಇದ್ದೀರಿ. ಆರೋಗ್ಯ ಸಮಸ್ಯೆ ಹೇಳಿ ಜೈಲಿನಿಂದ ಹೊರಗೆ ಬಂದಿದ್ದೀರಿ. ಇದನ್ನು ಕೋರ್ಟ್ ಪರಿಗಣಿಸಿ ಮತ್ತೆ ಜೈಲಿಗೆ ಡಿಕೆ ಶಿವಕುಮಾರ್ ಅವರನ್ನು ಕಳಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ನಾನು ತಪ್ಪಿತಸ್ಥನಲ್ಲ ನನ್ನ ತಪ್ಪು ಇದ್ದರೆ ಭಗವಂತ ನನಗೆ ಶಿಕ್ಷೆ ಕೊಡಲಿ: ಈಶ್ವರಪ್ಪ