ಬೆಂಗಳೂರು: ವೀರಶೈವ ಲಿಂಗಾಯತ ಮಹಾಸಭೆ (Veerashaiva Lingayat Mahasabha) ಸಂಪೂರ್ಣವಾಗಿ ಕಾಂಗ್ರೆಸ್‌ಮಯ ಆಗಿದೆ. ಮಹಾಸಭೆಗೆ ನನ್ನ ವಿನಂತಿ, ಕಾನೂನು, ಸಂವಿಧಾನ ಪ್ರಕಾರ ಸಲಹೆ ಮಾಡಬೇಕು. ಮಹಾಸಭೆ ಗೊಂದಲ ಸೃಷ್ಟಿಸಬಾರದು. ಗೊಂದಲ ಸೃಷ್ಟಿಸದೇ ಸೂಕ್ತ ಸಲಹೆ ಕೊಡಬೇಕೆಂದು ಬೊಮ್ಮಾಯಿ (Basavaraj Bommai) ಆಗ್ರಹಿಸಿದರು.
ಜನರ ಭಾವನೆ ಮುಖ್ಯ:
ಭಾರತ – ಪಾಕ್ ನಡುವೆ ಇಂದು ಕ್ರಿಕೆಟ್ ಮ್ಯಾಚ್ ನಡೆಯುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಹಲ್ಗಾಂ ಹತ್ಯಾಕಾಂಡ, ಆಪರೇಷನ್ ಸಿಂಧೂರ, ಭಾರತ ಬಗ್ಗೆ ಪಾಕ್ ಹೇಳಿಕೆಗಳನ್ನು ಪರಿಗಣಿಸಬೇಕು. ಇದೆಲ್ಲದರ ಹಿನ್ನೆಲೆಯಲ್ಲಿ ಈ ಮ್ಯಾಚ್ ಅನ್ನು ನಡೆಸದಿದ್ದರೆ ಚೆನ್ನಾಗಿತ್ತು. ಕ್ರೀಡೆ ಇರಬೇಕು, ಆದರೆ ದೇಶ, ದೇಶದ ಜನರ ಭಾವನೆ ಬಹಳ ಮುಖ್ಯ, ಬಿಸಿಸಿಐ ದೇಶದ ಜನರ ಭಾವನೆಗಳಿಗೆ ತಕ್ಕ ನಿರ್ಧಾರ ತೆಗೆದುಕೊಂಡಿಲ್ಲ ಎಂದರು. ಇದನ್ನೂ ಓದಿ: ಪಾಕ್ ವಿರುದ್ಧ ಟೀಂ ಇಂಡಿಯಾ ಗೆಲುವಿಗೆ ವಿಶ್ವ ಹಿಂದೂ ರಕ್ಷಾ ಪರಿಷತ್‌ನಿಂದ ಹೋಮ-ಹವನ
ಹೆಚ್ಚಿನ ಪರಿಹಾರ ಕೊಡಲಿ:
ಹಾಸನ ದುರಂತದಲ್ಲಿ ಮಡಿದವರ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ನೀಡಬೇಕು ಎಂದು ಬೊಮ್ಮಾಯಿ ಆಗ್ರಹಿಸಿದರು. ಹಿಂದೆ ನಡೆದ ಹಲವು ಪ್ರಕರಣಗಳಲ್ಲಿ ಇದೇ ಸಿಎಂ ಹೆಚ್ಚು ಪರಿಹಾರ ಕೊಟ್ಟಿದ್ದಾರೆ. ಹಾಸನದಲ್ಲಿ ಸತ್ತವರು ಅಮಾಯಕರು, ಯುವಕರು ಅವರ ಕುಟುಂಬಗಳು ಕಷ್ಟದಲ್ಲಿದ್ದಾರೆ, ಇದೆಲ್ಲ ನೋಡಿಕೊಂಡು ಹೆಚ್ಚು ಪರಿಹಾರ ಕೊಡಲಿ. ದಾಖಲೆ ಪ್ರಮಾಣದ ಪರಿಹಾರವನ್ನು ಸಿಎಂ ಕೊಡಬೇಕು ಎಂದು ಬೊಮ್ಮಾಯಿ ಆಗ್ರಹಿಸಿದರು. ಇದನ್ನೂ ಓದಿ: ತಮಾಷೆಗಾಗಿ ಹಾಸ್ಟೆಲ್‌ನಲ್ಲಿ ಸ್ನೇಹಿತರಿಂದ ವಿದ್ಯಾರ್ಥಿಗಳ ಕಣ್ಣಿಗೆ ಫೆವಿಕ್ವಿಕ್ ಗಮ್ – 7 ಮಕ್ಕಳಿಗೆ ಮುಂದುವರಿದ ಚಿಕಿತ್ಸೆ
ಬೆಂಗಳೂರು: ಧರ್ಮಸ್ಥಳ ಕೇಸ್‍ಲ್ಲಿ (Dharmasthala Case) ಷಡ್ಯಂತ್ರ ಮಾಡಿದ ಮುಖ್ಯ ವ್ಯಕ್ತಿಗಳನ್ನು ಎಸ್‍ಐಟಿ (SIT) ಇನ್ನೂ ಮುಟ್ಟಿಲ್ಲ. ಎಸ್‍ಐಟಿಗೆ ಷಡ್ಯಂತ್ರ ಮಾಡಿದ ದೊಡ್ಡ ವ್ಯಕ್ತಿಗಳನ್ನು ಮುಟ್ಟೋದಕ್ಕೆ ಧೈರ್ಯ ಇಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ದಕ್ಷತೆಯಿಂದ ಶೀಘ್ರದಲ್ಲಿ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಲಿ ಎಂದು ಪ್ರಕರಣದ ತನಿಖೆಗೆ ಎಸ್‍ಐಟಿ ರಚನೆ ಮಾಡಲಾಗಿದೆ. ಆದರೆ ನಿರೀಕ್ಷೆಗೆ ತಕ್ಕಂತೆ ಎಸ್‍ಐಟಿ ತನಿಖೆ ನಡೆಯುತ್ತಿಲ್ಲ. ಪೊಲೀಸ್ ಪದ್ಧತಿ ಪ್ರಕಾರ ತನಿಖೆ ನಡೆಯುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ – ಬಂಗ್ಲೆ ಗುಡ್ಡ ಕಾಡಿನಲ್ಲಿ 3 ಅಸ್ಥಿಪಂಜರ ಪತ್ತೆ
ಮಾಸ್ಕ್ ಮ್ಯಾನ್ ನೀಡಿದ ದೂರು ಹುಸಿಯಾದ ನಂತರ ಬೇರೆ ಬೇರೆ ದೂರುಗಳು ದಾಖಲಾಗುತ್ತಿವೆ. ಇದ್ಕಕೆ ಎಸ್‍ಐಟಿಗೆ ಉತ್ತರದಾಯಿತ್ವ ಇದೆ, ಜವಾಬ್ದಾರಿ ಇದೆ. ಶೀಘ್ರದಲ್ಲೇ ವರದಿ ಕೊಡಲಿ, ಇದುವರೆಗೆ ಆಗಿರುವ ತನಿಖೆ ಬಗ್ಗೆ ವರದಿ ನೀಡಲಿ. ಈ ಪ್ರಕರಣದಲ್ಲಿ ಪ್ರಮುಖ ವ್ಯಕ್ತಿಗಳನ್ನು ಎಸ್‍ಐಟಿ ಮುಟ್ಟಿಲ್ಲ. ನಮ್ಮನ್ನು ಮುಟ್ಟಲ್ಲ ಎಂದು ಅವರಿಗೂ ಖಾತ್ರಿ ಆಗಿದೆ. ಅದಕ್ಕಾಗಿ ಅವರು ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
– ಹಿಂದೂ ಧರ್ಮದಲ್ಲಿ ಸಮಾನತೆ ಇಲ್ಲ ಅಂತ ಸಿಎಂ ಹೇಳಿದ್ದಾರೆ – ಜಾತಿ ಜನಗಣತಿ ಮರುಸಮೀಕ್ಷೆ 425 ಕೋಟಿ ಮೀಸಲು; ಬೊಮ್ಮಾಯಿ ಆಕ್ಷೇಪ
ಬೆಂಗಳೂರು: ಪಹಲ್ಗಾಮ್ ಹತ್ಯಾಕಾಂಡ (Pahalgam Terror Attack), ಆಪರೇಷನ್ ಸಿಂಧೂರ ಬಳಿಕ ಪಾಕಿಸ್ತಾನದ (Pakistan) ಹೇಳಿಕೆಗಳನ್ನ ಗಮನಿಸಬೇಕು. ಬಿಸಿಸಿಐ ಭಾರತ-ಪಾಕ್ ಪಂದ್ಯವನ್ನು ನಡೆಸಬಾರದಿತ್ತು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ (Basavaraja Bommai) ಬೇಸರ ಹೊರಹಾಕಿದರು.
ಇಂದು ನಡೆಯಲಿರುವ ಭಾರತ-ಪಾಕ್ ಕ್ರಿಕೆಟ್ ಪಂದ್ಯದ ಬಗ್ಗೆ ಮಾತನಾಡಿದ ಅವರು, ಬಿಸಿಸಿಐಯು (BCCI) ಪಹಲ್ಗಾಮ್ ಹತ್ಯಾಕಾಂಡ, ಆಪರೇಷನ್ ಸಿಂಧೂರ (Operation Sindoor) ಹಾಗೂ ಭಾರತ ಬಗ್ಗೆ ಪಾಕ್ ನೀಡಿರುವ ಹೇಳಿಕೆಗಳನ್ನು ಗಮನಿಸಬೇಕು. ಇವೆಲ್ಲದನ್ನು ಗಮನದಲ್ಲಿಟ್ಟುಕೊಂಡು ಈ ಪಂದ್ಯವನ್ನು ನಡೆಸದೇ ಇದ್ದಿದ್ದರೆ ಚೆನ್ನಾಗಿತ್ತು. ಕ್ರೀಡೆ ಇರಬೇಕು, ಆದ್ರೆ ದೇಶ ಹಾಗೂ ದೇಶದ ಜನರ ಭರವಸೆ ಬಹಳ ಮುಖ್ಯ. ಬಿಸಿಸಿಐ ದೇಶದ ಜನರ ಭಾವನೆಗಳಿಗೆ ತಕ್ಕ ನಿರ್ಧಾರ ತಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: Hassan Tragedy | ಹೆಚ್ಚಿನ ಪರಿಹಾರ ಕೊಡದಿದ್ರೆ ರಾಜೀನಾಮೆ ಕೊಟ್ಟು ಹೋಗಿ – ಸಿಎಂ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ
ಮತಾಂತರಕ್ಕೆ ಮನ್ನಣೆ ಕೊಟ್ಟಿರೋದೇಕೆ?
ಜಾತಿ ಜನಗಣತಿ ಮೂಲಕ ಕ್ರೈಸ್ತ ಧರ್ಮಕ್ಕೆ ಮತಾಂತರ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ಸಂವಿಧಾನದಲ್ಲಿ ಕೇವಲ ಆರು ಧರ್ಮಗಳಿವೆ. ಅಷ್ಟೇ ಧರ್ಮಗಳ ಹೆಸರು ಬರೆಯಬೇಕು. ರಾಜ್ಯದಲ್ಲಿ ಮತಾಂತರಗೊಂಡ ಕ್ರೈಸ್ತರು ಅನ್ನೋ ಹೊಸ ಕಾಲಂ ಮಾಡಿದ್ದಾರೆ. ಇದೊಂದು ಧರ್ಮದ ರೀತಿ ಕಾಲಂ ಮಾಡಿದ್ದಾರೆ. ಇದು ಕಾನೂನು ಬಾಹಿರ, ಸಂವಿಧಾನ ಬಾಹಿರ, ರಾಜಕೀಯ ಪ್ರೇರಿತವಾಗಿದೆ. ಎರಡೂ ಕಡೆಯೂ ಮತಾಂತರ ಆಗಿರುತ್ತದೆ. ಆದ್ರೆ ಸಿಎಂ ಕ್ರೈಸ್ತ ಧರ್ಮದ ಮತಾಂತರಕ್ಕೆ ಮಾತ್ರ ಮನ್ನಣೆ ಕೊಟ್ಟಿರೋದೇಕೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಪ್ರಮೋದಾ ದೇವಿ ಒಡೆಯರ್‌ಗೆ ದಸರಾಗೆ ಅಧಿಕೃತ ಆಹ್ವಾನ ನೀಡಿದ ಹೆಚ್.ಸಿ ಮಹದೇವಪ್ಪ
ಸಿಎಂ ಅವರು ಒಂದು ಹೆಜ್ಜೆ ಮುಂದೆ ಹೋಗಿ ಮತಾಂತರ ಅವರ ಹಕ್ಕು ಅಂದಿದ್ದಾರೆ. ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಹಿಂದೂ ಧರ್ಮದಲ್ಲಿ ಸಮಾನತೆ ಇಲ್ಲ ಅಂತ ಸಿಎಂ ಹೇಳಿದ್ದಾರೆ. ಇದು ಸಮಾನತೆ ಪ್ರಶ್ನೆ ಅಲ್ಲ, ಆಸೆ ಆಮಿಷ ಒಡ್ಡಿ ಮತಾಂತರ ಮಾಡಲಾಗಿದೆ. ಅವರ ಬಡತನದ ದುರುಪಯೋಗ, ಶಿಕ್ಷಣ ಇಲ್ಲದಿರೋದನ್ನು ಗಮನಿಸಿ ಮತಾಂತರ ಮಾಡಲಾಗಿದೆ ಎಂದು ಆರೋಪಿಸಿದರು.
ಸಾಮಾಜಿಕ, ಆರ್ಥಿಕ ಸಮೀಕ್ಷೆಗೆ ಜಾತಿ ಏಕೆ ಬೇಕು?
ಇವರಿಗೆ ಜಾತಿ ಕಾಲಂನಲ್ಲಿ ಮತಾಂತರಗೊಂಡವರಿಗೆ ಹೊಸ ಕಾಲಂ ಮಾಡಲು ಯಾರು ಅಧಿಕಾರ ಕೊಟ್ರು? ಯಾವ ಕಾನೂನಿನಲ್ಲಿದೆ? ಇದು ಧರ್ಮ, ಧರ್ಮಗಳ ನಡುವೆ ವಿಷ ಬೀಜ ಬಿತ್ತುವ, ಗಲಭೆ ಮಾಡಿಸುವ ಕೆಲಸವಾಗ್ತಿದೆ. ಈಗಾಗಲೇ ಒಂದು ಬಾರಿ ಜಾತಿ ಸಮೀಕ್ಷೆ ಹೆಸ್ರಲ್ಲಿ 350 ಕೋಟಿ ರೂ. ಪೋಲು ಮಾಡಿದರು. ಈಗ ಮತ್ತೆ ಜಾತಿ ಜನಗಣತಿ ಮರುಸಮೀಕ್ಷೆಗೆ 425 ಕೋಟಿ ರೂ. ಮೀಸಲಿಟ್ಟಿದ್ದಾರೆ. ಸಾಮಾಜಿಕ, ಆರ್ಥಿಕ ಸಮೀಕ್ಷೆಗೆ ಜಾತಿ ಏಕೆ ಬೇಕು ಎಂದು ಕಿಡಿಕಾರಿದರು.
ಸಿಎಂ ಕುರ್ಚಿ ಗಟ್ಟಿ ಮಾಡಿಕೊಳ್ಳಲು ಜಾತಿ ಸಮೀಕ್ಷೆ
ಡಿಸೆಂಬರ್‌ನಲ್ಲಿ ಜಾತಿ ಜನಗಣತಿ ವರದಿ (Caste Census Report) ಕೊಡಿ ಅಂತ ಆಯೋಗಕ್ಕೆ ಸಿಎಂ ಹೇಳಿದ್ದಾರೆ. ಈ ಕಡೆ ಡಿಸೆಂಬರ್‌ನಲ್ಲಿ ನಾಯಕತ್ವ ಬದಲಾವಣೆ ಆಗಬೇಕು ಅಂತ ಡಿಕೆಶಿ ಟೀಮ್ ಹೇಳ್ತಿದೆ. ಡಿಕೆಶಿ ಸಿಎಂ ಆಗ್ತಾರೆ ಅಂತಿದ್ದಾರೆ. ಹೀಗಾಗಿ ತಮ್ಮ ಕುರ್ಚಿ ಗಟ್ಟಿ ಮಾಡಿಕೊಳ್ಳಲು ಸಿಎಂ ಜಾತಿ ಸಮೀಕ್ಷೆ ವರದಿಯನ್ನು ರಾಜಕೀಯವಾಗಿ ಬಳಸಲು ಮುಂದಾಗಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಸೆ.22ಕ್ಕೆ ಹೈಕೋರ್ಟ್‌ನಲ್ಲಿ ಬೈಕ್ ಟ್ಯಾಕ್ಸಿ ಭವಿಷ್ಯ – ಚಾಲಕರಿಗೆ ಸಿಹಿ ಸುದ್ದಿ ಸಿಗುತ್ತಾ?
ಜಾತಿ ಗಣತಿಯಲ್ಲಿ ನಾಸ್ತಿಕ ಕಾಲಂ ಸಿದ್ದರಾಮಯ್ಯಗೋಸ್ಕರ ಮಾಡಿದ್ದು
ಜಾತಿ ಜನಗಣತಿ ಸಮೀಕ್ಷೆಯಲ್ಲಿ ನಾಸ್ತಿಕ ಕಾಲಂ ವಿಚಾರವಾಗಿ ಮಾತನಾಡಿದ ಅವರು ಜಾತಿ ಜನಗಣತಿಯಲ್ಲಿ ಸಮೀಕ್ಷೆಯಲ್ಲಿ ನಾಸ್ತಿಕ ಕಾಲಂ ಅನ್ನು ಸಿದ್ದರಾಮಯ್ಯಗೋಸ್ಕರ (Siddaramaiagh) ಮಾಡಿದ್ದಾರೆ ಲೇವಡಿ ಮಾಡಿದರು.
ಹಾಸನ ದುರಂತದಲ್ಲಿ ಮಡಿದವರ ಕುಟುಂಬಗಳಿಗೆ ಹೆಚ್ಚಿನ ಪರಿಹಾರಕ್ಕೆ ಆಗ್ರಹ
ಹಿಂದೆ ನಡೆದ ಹಲವು ಪ್ರಕರಣಗಳಲ್ಲಿ ಇದೇ ಸಿಎಂ ಸಿದ್ದರಾಮಯ್ಯ ಅವರು ಹೆಚ್ಚು ಪರಿಹಾರ ಕೊಟ್ಟಿದ್ದಾರೆ. ಹಾಸನದಲ್ಲಿ ದುರಂತದಲ್ಲಿ ಮೃತಪಟ್ಟವರು ಅಮಾಯಕರು ಹಾಗೂ ಯುವಕರು. ಅವರ ಕುಟುಂಬಗಳೂ ಕಷ್ಟದಲ್ಲಿವೆ. ಇದೆಲ್ಲವನ್ನು ನೋಡಿಕೊಂಡು ಸಿಎಂ ಹೆಚ್ಚಿನ ಪರಿಹಾರವನ್ನು ನೀಡಬೇಕು ಎಂದು ಆಗ್ರಹಿಸಿದರು.
ಜಾತಿ ಜನಗಣತಿ ಸಮೀಕ್ಷೆ ಮೂಲಕ ಗ್ಯಾರಂಟಿ ಫಲಾನುಭವಿಗಳ ಡೇಟಾ ಸಂಗ್ರಹಕ್ಕೆ ಸರ್ಕಾರ ಮುಂದಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಗ್ಯಾರಂಟಿ ಯೋಜನೆಗಳಿಗೂ ಸಾಮಾಜಿ ಆರ್ಥಿಕ ಸಮೀಕ್ಷೆಗೂ ಏನು ಸಂಬಂಧ. ಇದು ರಾಜಕೀಯ ಪ್ರೇರಿತವಾದ ಸಮೀಕ್ಷೆ. ಗ್ಯಾರಂಟಿ ಫಲಾನುಭವಿಗಳ ಪರಿಶೀಲನೆಗೆ ಮಾಹಿತಿ ಸಂಗ್ರಹ ಜಾತಿ ಜನಗಣತಿಯನ್ನು ರಾಜಕೀಯ ಅಸ್ತ್ರವಾಗಿ ಬಳಸಲು ಡಿಸಿಎಂ ಡಿ.ಕೆ.ಶಿವಕುಮಾರ್ ಬಣ ಮುಂದಾಗಿದೆ ಎಂದು ಹೇಳಿದರು.
– ಮ್ಯಾಜಿಸ್ಟ್ರೇಟ್ ತನಿಖೆ ಮಾಡಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡಲಿ
ನವದೆಹಲಿ: ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದ ಮಂಡ್ಯದ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಕಿಡಿಕಾರಿದ್ದಾರೆ.
ನವದೆಹಲಿಯಲ್ಲಿ (New Delhi) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮದ್ದೂರಿನಲ್ಲಿ (Maddur) ನಡೆದ ಘಟನೆ ಪೂರ್ವನಿಯೋಜಿತ ಕೃತ್ಯವಾಗಿದೆ. ಮೊದಲೇ ಕಲ್ಲುಗಳನ್ನು ಶೇಖರಣೆ ಮಾಡಿ ಮೆರವಣಿಗೆ ವೇಳೆ ಕಲ್ಲೆಸಿದ್ದಾರೆ. ಅಲ್ಲಿ ಪೊಲೀಸ್ ಇಲಾಖೆ ಹಾಗೂ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಮ್ಯಾಜಿಸ್ಟ್ರೇಟ್ ತನಿಖೆ ಮಾಡಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡಲಿ ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಡಿಜೆ ಹಳ್ಳಿ, ಕೆಜೆಹಳ್ಳಿ ಗಲಭೆಕೋರರ ಮೇಲಿನ ಕೇಸ್ ಹಿಂಪಡೆದಿದ್ದಕ್ಕೆ ಬಾಲ ಬಿಚ್ಚಿದ್ದಾರೆ: ಪ್ರತಾಪ್ ಸಿಂಹ
ಪೊಲೀಸ್ ಇಲಾಖೆಯವರು ಸೂಕ್ತ ಬಂದೋಬಸ್ತ್ ಮಾಡಿಕೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ. ಘಟನೆಯ ನಂತರ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಘಟನೆಯಲ್ಲಿ ಅಮಾಯಕರನ್ನು ಬಂಧಿಸಿದ್ದಾರೆ. ಇಂದು ಹಿಂದೂ ಸಂಘಟನೆಗಳು ಪ್ರತಿಭಟನೆ ಮಾಡಿದಾಗ ಅವರ ಮೇಲೆ ಪೊಲೀಸರು ವಿನಾಕಾರಣ ಲಾಠಿಚಾರ್ಜ್ ಮಾಡಿದ್ದಾರೆ. ಪೊಲೀಸರು ದಮನಕಾರಿ ನೀತಿ ಅನುಸರಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಮದ್ದೂರು ಘಟನೆ ನೋಡಿದ್ರೆ ರಾಜ್ಯದಲ್ಲಿ `ಮೊಘಲ್ ಪ್ರೇರಣೆಯ’ ಆಡಳಿತದಂತೆ ಭಾಸವಾಗುತ್ತಿದೆ – ಬಿವೈವಿ ಕಿಡಿ
ಸಂವಿಧಾನದ ಬಗ್ಗೆ ಬಹಳ ಮಾತನಾಡುವ ಸಿಎಂ ಸಿದ್ದರಾಮಯ್ಯ (Siddaramaiah) ಅವರೇ, ಸಂವಿಧಾನದಲ್ಲಿ ಎಲ್ಲ ಧರ್ಮೀಯರಿಗೆ ಅವರವರ ಧರ್ಮದ ಆಚರಣೆಗೆ ಅವಕಾಶ ಇದೆ. ಈದ್‌ಮಿಲಾದ್ ಹಬ್ಬವು ರಾಜ್ಯಾದ್ಯಂತ ಶಾಂತ ರೀತಿಯಿಂದ ನಡೆಯುತ್ತದೆ. ಆದರೆ, ಗಣೇಶನ ಹಬ್ಬದಲ್ಲಿ ಶಾಂತಿ ಕದಡಿ ಹಿಂಸಾತ್ಮಕವಾಗಿ ಮಾಡಬೇಕು ಎನ್ನುವ ಹುನ್ನಾರದಿಂದ ಈ ರೀತಿ ಮಾಡಿದ್ದಾರೆ ಆಕ್ರೋಶ ಹೊರಹಾಕಿದ್ದಾರೆ.
ಗಣೇಶನ ಹಬ್ಬದಲ್ಲಿ ಪೊಲೀಸರು ಪೂಜೆಗೆ, ಮೆರವಣಿಗೆಗೆ, ಸೌಂಡ್ ಸಿಸ್ಟಮ್‌ಗೆ ಎಲ್ಲದಕ್ಕೂ ನಿರ್ಬಂಧ ಹೇರುತ್ತಾರೆ. ಇದು ಸಂವಿಧಾನ ವಿರೋಧಿ ಅಲ್ಲವೇ? ಪೊಲೀಸರು ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಚರಣೆಗೆ ಅವಕಾಶ ನೀಡಬಹುದು. ಶಿವಮೊಗ್ಗ, ಚಿತ್ರದುರ್ಗ, ಉತ್ತರ ಕರ್ನಾಟಕ ಎಲ್ಲ ಕಡೆ ಶಾಂತ ರೀತಿಯಾಗಿ ಗಣೇಶೋತ್ಸವ ಮೆರವಣಿಗೆ ನಡೆದಿದೆ. ಮಂಡ್ಯದಲ್ಲಿ ಯಾಕೆ ಮಾಡಲು ಆಗಲಿಲ್ಲ. ಮಂಡ್ಯದಲ್ಲಿ ಪೊಲೀಸರು ಮತ್ತು ಸರ್ಕಾರದ ವೈಫಲ್ಯವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: 21 ಜನರನ್ನು ಬಂಧಿಸಲಾಗಿದೆ, ಮಸೀದಿ ಕಡೆಯಿಂದ ಕಲ್ಲು ಎಸೆದ ಬಗ್ಗೆ ಮಾಹಿತಿ ಇದೆ: ಚಲುವರಾಯಸ್ವಾಮಿ
ಘಟನೆ ಬಗ್ಗೆ ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆ
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಘಟನೆಯನ್ನು ಬಹಳ ಹಗುರವಾಗಿ ತೆಗೆದುಕೊಂಡು, ಬೇಜವಾಬ್ದಾರಿಯಿಂದ ಮಾತನಾಡಿದ್ದಾರೆ. ಕಾನೂನು ಸುವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಜವಾಬ್ದಾರಿ, ಅನವಶ್ಯಕವಾಗಿ ಬಿಜೆಪಿ ಮೇಲೆ ಆರೋಪ ಮಾಡುವುದನ್ನು ಬಿಟ್ಟು ನಿಷ್ಪಕ್ಷಪಾತವಾಗಿ ತಮ್ಮ ಕರ್ತವ್ಯ ಮಾಡುವುದನ್ನು ಕಲಿಯಲಿ, ಓಲೈಕೆ ರಾಜಕಾರಣ ಮಾಡುವುದರ ಪರಿಣಾಮದಿಂದಾಗಿ ಈ ಘಟನೆ ನಡೆದಿದೆ ಎಂದಿದ್ದಾರೆ.
ಸಮಾಜ ಘಾತುಕ ಶಕ್ತಿಗಳು ಏನು ಮಾಡಿದರೂ ನಡೆಯುತ್ತದೆ ಎನ್ನುವ ಭರವಸೆಯನ್ನು ಈ ಸರ್ಕಾರ ನೀಡಿದೆ. ಹೀಗಾಗಿ, ಕಾನೂನು ಮತ್ತು ಪೊಲೀಸರ ಭಯ ಇಲ್ಲದೆ ಅವರು ನಿರ್ಭೀತಿಯಿಂದ ಹಿಂಸಾತ್ಮಕ ಕೃತ್ಯಗಳನ್ನು ಮಾಡುತ್ತಿದ್ದಾರೆ. ಇದು ಅತ್ಯಂತ ಖಂಡನೀಯ. ಮಂಡ್ಯದಲ್ಲಿ ಶಾಂತಿ ನೆಲೆಸಬೇಕು. ಎಲ್ಲ ಧರ್ಮೀಯರು ತಮ್ಮ ಹಬ್ಬಗಳ ಆಚರಣೆಗೆ ಅವಕಾಶ ದೊರೆಯಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾಳೆ ಮದ್ದೂರು ಸ್ವಯಂ ಪ್ರೇರಿತ ಬಂದ್‌ಗೆ ಕರೆ – ಹಿಂದೂ ಮುಖಂಡರ ತೀರ್ಮಾನ
ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರಿಗೆ ಪ್ರತಿಪಕ್ಷಗಳ ಮೇಲೆ ಆರೋಪ ಮಾಡುವುದು ಸುಲಭ. ಅನ್ಯಾಯ ಆದವರಿಗೆ ನ್ಯಾಯ ಕೊಡಿಸಲು ಹೋರಾಡುವುದು ಪ್ರತಿಪಕ್ಷಗಳ ಕರ್ತವ್ಯ, ನಾವು ನಮ್ಮ ಕರ್ತವ್ಯ ಮಾಡುತ್ತೇವೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಕೆಲಸ. ಅವರು ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಿದ್ದಾರೆ ಕಿಡಿಕಾರಿದ್ದಾರೆ.
ಈಗ ಚುನಾವಣೆ ನಡೆದ್ರೆ ಕಾಂಗ್ರೆಸ್ ಮನೆಗೆ ಹೋಗುತ್ತೆ
ಸಿಎಂ ಅವರು ಪಿಎಫ್‌ಐ ಹಾಗೂ ಎಸ್‌ಡಿಪಿ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆದರ ಪರಿಣಾಮವಾಗಿ ಮೈಸೂರಿನಲ್ಲಿ ಪೊಲೀಸ್ ಠಾಣೆ ಮೇಲೆ ದಾಳಿಯಾಯಿತು. ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಕೋರರ ಕೇಸ್ ವಾಪಸ್ ಪಡೆಯಲು ಪ್ರಯತ್ನಿಸಿದರು. ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದವರ ಕೇಸ್ ವಾಪಸ್ ಪಡೆದರು. ಇಂತಹ ಸಮಾಜ ಘಾತುಕ ಹಾಗೂ ಶಾಂತಿ ಕದಡುವ ಶಕ್ತಿಗಳ ವಿರುದ್ಧದ ಪ್ರಕರಣ ವಾಪಸ್ ಪಡೆಯುವುದು ಕೂಡ ಒಂದು ರೀತಿ ಪ್ರಚೋದನೆ ಆಗಿದೆ. ಈ ಘಟನೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಕಾರಣ. ರಾಜ್ಯದಲ್ಲಿ ಈಗಲೇ ಚುನಾವಣೆ ನಡೆದರೆ ಕಾಂಗ್ರೆಸ್ ಮನೆಗೆ ಹೋಗುತ್ತದೆ. ಕಾಂಗ್ರೆಸ್‌ನವರಿಗೆ ಜನರನ್ನು ಎದುರಿಸುವ ಶಕ್ತಿಯಿಲ್ಲ ಎಂದಿದ್ದಾರೆ.
ಬೆಂಗಳೂರು: ಸಿದ್ದರಾಮಯ್ಯಗೆ ಇವಿಎಂಗಳ ಮೇಲೆ ನಂಬಿಕೆ ಇಲ್ಲದಿದ್ರೆ ರಾಜೀನಾಮೆ ಕೊಟ್ಟು ಸರಿಯಿಲ್ಲ ಅಂತ ಹೇಳಲಿ ಎಂದು ಸಂಸದ ಬಸವರಾಜ ಬೊಮ್ಮಾಯಿ ಸವಾಲು ಹಾಕಿದರು.
ಬೆಂಗಳೂರಿನಲ್ಲಿ ಮಾತಾಡಿದ ಬೊಮ್ಮಾಯಿ, ಬ್ಯಾಲೆಟ್ ಪೇಪರ್‌ಗಳಲ್ಲಿ ಅಕ್ರಮ, ಗೊಂದಲ ಬಹಳ ಆಗ್ತಿತ್ತು. ಇದನ್ನು ತಪ್ಪಿಸಲು ಇವಿಎಂಗಳು ಬಂದ್ವು. 2004, 2009 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಇವಿಎಂಗೆ ತಕರಾರು ಇರಲಿಲ್ಲ ಎಂದು ಟಾಂಗ್ ಕೊಟ್ಟರು.
ಸಿದ್ದರಾಮಯ್ಯ ಗೆದ್ದಿದ್ದೇ ಇವಿಎಂನಿಂದ. ಇವರು ಗೆಲ್ಲೋದಿಕ್ಕೆ ಇವಿಎಂ ಬೇಕಾಗಿತ್ತು. ಇವಿಎಂಗಳಲ್ಲಿ ಗೊಂದಲ, ದೋಷ ಇದ್ರೆ ಬಂದು ತೋರಿಸಿ, ದಾಖಲೆ ಕೊಡಿ ಅಂದ್ರೂ ಯಾರೂ ಬರಲಿಲ್ಲ. ಈಗ ಇವಿಎಂಗಳ ಬದಲು ಬ್ಯಾಲೆಟ್ ಪೇಪರ್‌ಗಳನ್ನು ಅನುಭವದ ಮೇಲೆ ತರ್ತಿದ್ದೇವೆ ಅಂದಿದ್ದಾರೆ ಸಿಎಂ ಎಂದು ಕಿಡಿಕಾರಿದರು.
ನಿಮಗೆ ಇವಿಎಂಗಳ ಮೇಲೆ ನಂಬಿಕೆ ಇಲ್ಲದಿದ್ರೆ ರಾಜೀನಾಮೆ ಕೊಡಿ. ರಾಜೀನಾಮೆ ಕೊಟ್ಟು ಎವಿಎಂ ಸರಿಯಿಲ್ಲ ಅಂತ ಹೇಳಿ ಎಂದು ಬೊಮ್ಮಾಯಿ ವಾಗ್ದಾಳಿ ನಡೆಸಿದರು.
ಹಾವೇರಿ: ಪ್ರಜಾಪಭುತ್ವ ಗಟ್ಟಿಗೊಳಿಸಲು ಸಹಕಾರಿ ರಂಗ ಹೆಚ್ಚು ಸಹಕಾರಿಯಾಗಿದ್ದು, ಮಹಾರಾಷ್ಟ್ರ ಹಾಗೂ ಗುಜರಾತ್ ರೀತಿಯಲ್ಲಿ ಸಹಕಾರ ರಂಗ ಸರ್ಕಾರದ ಮೇಲೆ ಹಿಡಿತ ಸಾಧಿಸುವಂತಾಗಬೇಕು. ಕೆಎಂಎಫ್ ಮಾದರಿಯಲ್ಲಿ ಹಾಲು ಉತ್ಪಾದಕರ ಸಹಕಾರ ಬ್ಯಾಂಕ್ ಸ್ಥಾಪನೆ ಮಾಡಿದರೆ ರೈತರ ಆರ್ಥಿಕ ಸ್ಥಿತಿ ಸುಧಾರಣೆ ಸಾಧ್ಯವಾಗುತ್ತದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಅಭಿಪ್ರಾಯಪಟ್ಟಿದ್ದಾರೆ.
ಹಾವೇರಿಯಲ್ಲಿ (Haveri) ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಲ ನಿಯಮಿತ, ಬೆಂಗಳೂರು ಹಾಗೂ ಹಾವೇರಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ಹಾವೇರಿ ಇವರ ಸಂಯುಕ್ತ ಆಶ್ರಯದಲ್ಲಿ ನೂತನ ಆಡಳಿತ ಕಛೇರಿ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಗೌರವ ಉಪಸ್ಥಿತಿ ವಹಿಸಿ ಮಾತನಾಡಿದರು. ವಿಶ್ವದಲ್ಲಿ ಎರಡು ವ್ಯವಸ್ಥೆಗಳ ನಡುವೆ ಸದಾ ಸಂಘರ್ಷ ಇದೆ. ಕೆಲವು ದೇಶಗಳು ಕಮ್ಯುನಿಸ್ಟ್ ದೇಶಗಳಿವೆ. ಇನ್ನು ಕೆಲವು ಫೆಡರಲ್ ದೇಶಗಳಿವೆ. ಈ ಎರಡು ವಿಚಾರಧಾರೆಯ ಆಡಳಿತ ವಿಶ್ವದಲ್ಲಿದೆ. ಬಂಡವಾಳ ಶಾಹಿಗಳಿಗೆ ಮತ್ತು ಕಮ್ಯುನಿಸ್ಟ್ಗಳಿಗೆ ಪರ್ಯಾಯವಾಗಿರುವ ವ್ಯವಸ್ಥೆ ಸಹಕಾರ ತತ್ವ, ಕೋ ಆಪರೇಟಿವ್ ವ್ಯವಸ್ಥೆ ಜನರಿಂದ ಜನರಿಗೋಸ್ಕರ ಕಾರ್ಯ ನಿರ್ವಹಿಸುತ್ತದೆ ಎಂದಿದ್ದಾರೆ. ಇದನ್ನೂ ಓದಿ: ವಸ್ತುಗಳ ತೆರಿಗೆ ಭಾರೀ ಇಳಿಕೆ ಸಾಧ್ಯತೆ – ಜಿಎಸ್‌ಟಿಯಲ್ಲಿ ಇರಲಿದೆ ಎರಡೇ ಸ್ಲ್ಯಾಬ್!
ಸಹಕಾರಿ ಸಂಘ ಯಶಸ್ವಿಯಾಗಲು ಎರಡು ಸಾಮಾನ್ಯ ತತ್ವ ಮುಖ್ಯ. ಒಂದು ಹಾಲು ಉತ್ಪಾದಕ, ಸಾಮಾನ್ಯ ನೇಕಾರ, ಸ್ವಾಭಿಮಾನದ ಮೂಲಕ ಸಹಕಾರ ರಂಗ ಕಟ್ಟುವ ಮೂಲಕ ಹೆಚ್ಚು ಬಂಡವಾಳ ಇಲ್ಲದೇ ಸಂಘ ಕಟ್ಟಬಹುದು. ಇನ್ನೊಂದು ಪ್ರಜಾಪಭುತ್ವ ಗಟ್ಟಿಗೊಳಿಸಲು ಸಹಕಾರಿ ರಂಗ ಹೆಚ್ಚು ಸಹಕಾರಿಯಾಗಿದೆ. ಸಹಕಾರ ಕ್ಷೇತ್ರ ಮಹಾರಾಷ್ಟ್ರ ಹಾಗೂ ಗುಜರಾತ್‌ನಲ್ಲಿ ಹೆಚ್ಚು ಶಕ್ತಿಶಾಲಿಯಾಗಿದೆ. ಅಲ್ಲಿ ಸಹಕಾರ ರಂಗ ಸರ್ಕಾರದ ಮೇಲೆ ಹಿಡಿತ ಸಾಧಿಸುತ್ತದೆ. ಇಲ್ಲಿ ಸರ್ಕಾರ ಸಹಕಾರ ರಂಗದ ಮೇಲೆ ಹಿಡಿತ ಸಾಧಿಸುತ್ತಿದೆ ಎಂದು ಹೇಳಿದ್ದಾರೆ.
ನಾವೂ ಇಡೀ ರಾಜ್ಯದ ಆರ್ಥಿಕ ವ್ಯವಸ್ಥೆಯನ್ನು ರೈತರ ಕೈಯಲ್ಲಿ ಇಟ್ಟುಕೊಳ್ಳಬೇಕು. ಭಾರತದ ಗೃಹ ಸಚಿವರು ಹೊಸದಾಗಿ ಆಗಿರುವ ಸಹಕಾರ ಇಲಾಖೆಯ ಸಚಿವರು, ಅಮಿತ್ ಶಾ ಅವರು ಇಷ್ಟು ವರ್ಷ ರಾಜಕಾರಣದಲ್ಲಿದ್ದಾರೆ. ಆದರೆ, ಅವರು ತಮ್ಮೂರಿನ ಸಹಕಾರ ಸಂಘದ ಅಧ್ಯಕ್ಷರಾಗಿದ್ದಾರೆ. ಅಂದರೆ ಎಷ್ಟು ಮಹತ್ವದ್ದಾಗಿದೆ ಎಂದರ್ಥ. ಸಹಕಾರ ರಂಗದಲ್ಲಿ ಹಾಲು ಉತ್ಪಾದನೆಯ ಕ್ಷೀರ ಕ್ಷೇತ್ರ ಯಶಸ್ವಿಯಾಗಿದೆ. ಒಂದು ವ್ಯವಸ್ಥೆಯ ಮೂಲಕ ಆರ್ಥಿಕ ಚಟುವಟಿಕೆ, ವ್ಯಾಪಾರ, ವ್ಯವಹಾರ, ಆಧುನಿಕ ತಂತಜ್ಞಾನ ಬಳಸಿಕೊಂಡು ಯಶಸ್ವಿಯಾಗಿ ನಡೆಯುತ್ತದೆ ಎಂದು ತಿಳಿಸಿದ್ದಾರೆ.
ಹಾಲು ಒಕ್ಕೂಟಕ್ಕೆ ಖಾಸಗಿಯವರಿಂದ ಬಹಳಷ್ಟು ಸ್ಪರ್ಧೆ ಇದೆ. ನಮ್ಮ ರೈತರು ಒಗ್ಗಟ್ಟಾಗಿ ಹಾವೇರಿ ಒಕ್ಕೂಟ ನನ್ನದು ಎಂದು ತೀರ್ಮಾನ ಮಾಡಿದರೆ ಹಾಲು ಒಕ್ಕೂಟ ಗಟ್ಟಿಯಾಗಿ ಬೆಳೆಯುತ್ತದೆ. ಇದು ರೈತರ ಆರ್ಥಿಕ ಸ್ಥಿತಿ ಸುಧಾರಣೆ ಮಾಡಲು ಬಹಳ ಉಪಯುಕ್ತವಾಗಿದೆ. ಕೇವಲ ಒಕ್ಕಲುತನ ಮಾಡಿದರೆ ಉದ್ಧಾರವಾಗಲು ಸಾಧ್ಯವಿಲ್ಲ. ಅದರ ಜೊತೆಗೆ ಉಪಕಸುಬು ಮಾಡುವ ಮೂಲಕ ಸಮಗ್ರ ಕೃಷಿ ಮಾಡಿದರೆ ರೈತರಿಗೆ ಆರ್ಥಿಕ ಸ್ಥಿತಿಯನ್ನು ಸುಧಾರಣೆ ಮಾಡಲು ಸುಲಭವಾಗಿ ಸಾಧ್ಯವಾಗುತ್ತದೆ. ಇದನ್ನು ಸರ್ಕಾರ ಮನಗಂಡು ಯಶಸ್ವಿಯಾಗಿ ನಡೆಸಿಕೊಂಡು ಹೋಗಲು ಸಾಧ್ಯವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ | ಧರ್ಮಾಧಿಕಾರಿಗಳ ವಿರುದ್ಧ ಅವಹೇಳನ ಮಾಡಲಾಗುತ್ತಿದೆ: ಲಕ್ಷ್ಮಿ ಹೆಬ್ಬಾಳ್ಕರ್
ನಾನು ಗೃಹ ಸಚಿವನಾಗಿದ್ದಾಗ ಹಾಗೂ ಸಿಎಂ ಆಗಿದ್ದಾಗ ಹಾಲು ಉತ್ಪಾದಕರ ಸಹಕಾರಿ ಬ್ಯಾಂಕ್ ಸ್ಥಾಪಿಸಲು ಪಯತ್ನ ಮಾಡಿದ್ದೆವು. ಆದರೆ, ಆರ್‌ಬಿಐ ಅನುಮತಿ ಕೊಡಲಿಲ್ಲ. ಸಹಕಾರ ರಂಗದಲ್ಲಿ ರೆಸಲ್ಯೂಷನ್ ಮಾಡಿದರೆ ರಾಜ್ಯ ಮಟ್ಟದಲ್ಲಿ ಹಾಲು ಉತ್ಪಾದಕರ ಸಹಕಾರ ಬ್ಯಾಂಕ್ ಮಾಡಲು ಸಾಧ್ಯವಿದೆ. 50 ವರ್ಷದಲ್ಲಿ ನಮ್ಮ ದುಡ್ಡಿನಲ್ಲಿಯೇ ಈ ಕ್ಷೇತ್ರವನ್ನು ಅಭಿವೃದ್ಧಿ ಮಾಡಬಹುದು. ಲಕ್ಷಾಂತರ ಹಾಲು ಉತ್ಪಾದಕರ ಬದುಕಿನಲ್ಲಿ ಬದಲಾವಣೆ ತರಲು ಸಾಧ್ಯವಿದೆ ಎಂದು ಹೇಳಿದ್ದಾರೆ.
ಧಾರವಾಡ ಹಾಲು ಒಕ್ಕೂಟದಿಂದ ಬೇರ್ಪಡಿಸಲು ಒಗ್ಗಟ್ಟಾಗಿ ಹೋಗಿ ಪ್ರತ್ಯೇಕ ಹಾಲು ಒಕ್ಕೂಟ ಮಾಡಿಕೊಂಡೆವು. ಧಾರವಾಡ ಮತ್ತು ಹಾವೇರಿ ನಿರ್ದೇಶಕರ ಮಂಡಳಿಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ. ಹಾಲು ಉತ್ಪಾದನೆ ಜೊತೆಗೆ ಇತರ ಉತ್ಪನ್ನ ಮಾಡಿದರೆ ಮಾದರಿ ಹಾಲು ಒಕ್ಕೂಟ ಮಾಡಲು ಸಾಧ್ಯ. ಪ್ರಸ್ತುತ 1 ಲಕ್ಷ 20 ಸಾವಿರದಿಂದ 1 ಲಕ್ಷ 50 ಸಾವಿರ ಲೀ. ಹಾಲು ಉತ್ಪಾದನೆಯಾಗುತ್ತಿದೆ. ರೈತರು ಮನಸು ಮಾಡಿದರೆ 3 ಲಕ್ಷ ಲೀ. ಹಾಲು ಉತ್ಪಾದನೆ ಮಾಡಬಹುದು. ಮೆಗಾ ಡೈರಿಗೆ ನಾನು 70 ಕೋಟಿ ರೂ. ಕೊಟ್ಟಿದ್ದೇನೆ. ಆದಷ್ಟು ಬೇಗ ಮೆಗಾ ಡೈರಿ ಕಾರ್ಯ ಆರಂಭಿಸಬೇಕು. ಹಾವೇರಿಗೆ ಮೆಡಿಕಲ್ ಕಾಲೇಜು ಉದ್ಘಾಟನೆಗೆ ಸಿಎಂ ಅವರನ್ನು ಕರೆಸಲು ತೀರ್ಮಾನಿಸಿದ್ದೇವೆ. ಅದೇ ಸಂದರ್ಭದಲ್ಲಿ ಮೆಗಾ ಡೈರಿ ಉದ್ಘಾಟನೆ ಮಾಡಲು ಪ್ರಯತ್ನ ಮಾಡೋಣ ಎಂದಿದ್ದಾರೆ. ಇದನ್ನೂ ಓದಿ: ಮೋದಿ ಇಂದು ದಣಿದಿದ್ದಾರೆ, ನಾಳೆ ನಿವೃತ್ತಿ ಆಗ್ತಾರೆ – ಜೈರಾಮ್ ರಮೇಶ್
ಈಗಿನ ನಿರ್ದೇಶಕ ಮಂಡಳಿಯವರು ಒಕ್ಕೂಟವನ್ನು ಎತ್ತಿ ಹಿಡಿಯಬೇಕು. ರೈತರಿಗೆ ಅನುಕೂಲ ಮಾಡಬೇಕು ಎನ್ನುವ ಕಳಕಳಿ ಇದೆ. ನಾವು ನಿಮ್ಮ ಜೊತೆಗೆ ಇದ್ದೇವೆ. ರೈತ ಯಾವುದೇ ಪಕ್ಷಕ್ಕೆ ಸೇರಿಲ್ಲ. ಎಲ್ಲ ರಾಜಕೀಯ ಪಕ್ಷಗಳು ರೈತರಿಗೆ ಸೇರಿವೆ. ಹಿಂದಿನ ನಿರ್ದೇಶಕ ಮಂಡಳಿಯೂ ಬಹಳಷ್ಟು ಶ್ರಮವಹಿಸಿದೆ. ಅವರಿಗೂ ಕೂಡ ವಿಶೇಷವಾದ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ದಾರಿ ಸವಾಲು ರೂಪದಲ್ಲಿದೆ. ಧಾರವಾಡ ಹಾಲು ಒಕ್ಕೂಟಕ್ಕಿಂತ ಎರಡು ಪಟ್ಟು ಹಾಲು ಉತ್ಪಾದನೆ ಹಾವೇರಿ ಒಕ್ಕೂಟದಿಂದ ಮಾಡೋಣ. ಈಗ ಕೆಎಂಎಫ್‌ನವರು ನಮ್ಮ ಸಹಾಯಕ್ಕೆ ಬಂದಿದ್ದಾರೆ. ಪ್ಯಾಕೇಜಿಂಗ್ ಯುನಿಟ್ ಪಾರಂಭ ಮಾಡಿದ್ದಾರೆ. ರಾಜ್ಯ ಸರ್ಕಾರದಿಂದ 5 ಕೋಟಿ ರೂ. ಹಣ ಆದಷ್ಟು ಬೇಗ ಬರುವಂತೆ ಸಚಿವರು ಮಾಡಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಗಿರೀಶ್ ಮಟ್ಟಣ್ಣನವರ್ ಹತ್ತಾರು ಎಕ್ರೆ ಪ್ರದೇಶದಲ್ಲಿ ರೆಸಾರ್ಟ್ ಮಾಡಿದ್ದಾನೆ – ಬ್ರಾಹ್ಮಣ ಪುರೋಹಿತ ಪರಿಷತ್ ಆರೋಪ
ಆಡಳಿತ ಮಂಡಳಿ ಕಚೇರಿ ಪಾರಂಭವಾಗಿದೆ. ಒಳ್ಳೆಯ ವ್ಯವಸ್ಥೆ ಇದೆ. ಅದರಲ್ಲಿ ಕುಳಿತು ಹೇಗೆ ಆಡಳಿತ ಮಾಡಬೇಕು ಎನ್ನುವುದು ಮುಖ್ಯ. ಪ್ರತೀ ನಿರ್ಣಯ ಬಡ ರೈತನಿಗೆ ಅನುಕೂಲವಾಗಬೇಕು. ಹಾಲು ಮಾರುವವ ಎಷ್ಟೇ ಪ್ರಾಮಾಣಿಕವಾಗಿದ್ದರೂ ಹಾಲಿನಲ್ಲಿ ನೀರು ಹಾಕಿದ್ದೀಯಾ ಎಂದು ಕೇಳುತ್ತಾರೆ. ಆಲ್ಕೋಹಾಲಿನವರು ಹಾಗೇ ಕೊಟ್ಟರೂ ನೀರು ಹಾಕಿಕೊಂಡು ಕುಡಿಯುತ್ತಾರೆ. ಹಾವೇರಿಯಲ್ಲಿ ಮೆಗಾ ಡೈರಿ ಉದ್ಘಾಟನೆಯಾದ ದಿನ ಅತ್ಯಂತ ಸಂತೋಷವಾಗಲಿದೆ. ರೈತರ ಮುಖದಲ್ಲಿ ನಗು ಇರಬೇಕು. ರೈತ ರೇಷ್ಮೆ ಅಂಗಿ, ರೇಷ್ಮೆ ಧೋತರಾ ತೊಟ್ಟಿರಬೇಕು. ಕಾಲಾಗ ಝುರಕಿ ಚಪ್ಪಲಿ ಹಾಕಿರಬೇಕು. ರೈತ ನಕ್ಕೊಂತ ಇರಬೇಕು. ಆಗ ನಮ್ಮ ದೇಶ ಉದ್ಧಾರ ಆಗಿದೆ ಅಂತ ಅರ್ಥ ಎಂದಿದ್ದಾರೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್, ಹೆಸ್ಕಾಂ ಅಧ್ಯಕ್ಷ ಸೈಯದ್ ಅಜ್ಜಂಪೀರ ಖಾದ್ರಿ, ಶಾಸಕ ಬಸವರಾಜ್ ಶಿವಣ್ಣನವರ್, ಶ್ರೀನಿವಾಸ್ ಮಾನೆ, ಪ್ರಕಾಶ್ ಕೋಳಿವಾಡ, ಮಾಜಿ ಶಾಸಕ ಎಸ್.ಆರ್ ಪಾಟೀಲ್, ವೀರುಪಾಕ್ಷಪ್ಪ ಬಳ್ಳಾರಿ, ಹಾವೇರಿ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ಅಧ್ಯಕ್ಷ ಮಂಜನಗೌಡ ಪಾಟೀಲ್, ಉಪಾಧ್ಯಕ್ಷ ಉಜ್ಜನಗೌಡ ಮಾವೀನತೋಪ ಸೇರಿ ಹಲವರು ಉಪಸ್ಥಿತರಿದ್ದರು.
ನವದೆಹಲಿ: ಗದಗ ಯಲವಿಗಿ ರೈಲು ಯೋಜನೆಯನ್ನು ಆದಷ್ಟು ಬೇಗ ಪ್ರಾರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಅವರಿಗೆ ಸಂಸದ ಬಸವರಾಜ್ ಬೊಮ್ಮಾಯಿ (Basavaraj Bommai) ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿರುವ ಅವರು, ಗದಗ ಯಲವಿಗಿ ರೈಲ್ವೆ (Gadag – Yalvigi Train) ಯೋಜನೆ ಹಾವೇರಿ ಗದಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುತ್ತಿದ್ದು, ಸುಮಾರು 58 ಕಿ.ಮೀ ಉದ್ದದ ಈ ಯೋಜನೆಗೆ 2017-18ರಲ್ಲಿ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಈ ಯೋಜನೆ ಗದಗ ಹಾವೇರಿ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಅಷ್ಟೇ ಅಲ್ಲದೇ ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಸಂಪರ್ಕ ಕಲ್ಪಿಸುವುದರಿಂದ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಯಾಣಿಕರ ಸಂಚಾರ ಹಾಗೂ ಸರಕು ಸಾಗಾಣಿಕೆಗೆ ಅನುಕೂಲವಾಗುವುದರಿಂದ ಕರ್ನಾಟಕದ ಆರ್ಥಿಕ ಚಟುವಟಿಕೆಗಳನ್ನು ಮೇಲ್ದರ್ಜೆಗೇರಿಸಲು ಸಹಾಯವಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ ಲೋಕಸಭೆಯಲ್ಲಿ ಐತಿಹಾಸಿಕ ಕ್ರೀಡಾ ಆಡಳಿತ, ಡೋಪಿಂಗ್ ತಡೆ ಮಸೂದೆ ಅಂಗೀಕಾರ
ಈ ಯೋಜನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು 50/50 ಅನುಪಾತದಲ್ಲಿ ಹಣಕಾಸು ಒದಗಿಸುತ್ತಿದ್ದು, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಒದಗಿಸಲಿದೆ. ಕರ್ನಾಟಕ ಸರ್ಕಾರ ಈಗಾಗಲೇ ತನ್ನ ಆದೇಶ ನಂ ಐಡಿಡಿ/91/ಎನ್‌ಎಸ್‌ಡಬ್ಲ್ಯು/2022ರಲ್ಲಿ ದಿನಾಂಕ 2022 ಏಪ್ರಿಲ್ 18ರಂದು (ನಾನು ಮುಖ್ಯಮಂತ್ರಿ ಇದ್ದಾಗ) ಯೋಜನೆಯ 50%ರಷ್ಟು ಯೋಜನಾ ವೆಚ್ಚವನ್ನು ಹಾಗೂ ಉಚಿತ ಭೂಮಿ ಕೊಡುವುದಾಗಿ ತಿಳಿಸಲಾಗಿತ್ತು. 2022 ಡಿಸೆಂಬರ್ 17ರಂದು ಪರಿಷ್ಕೃತ ಎಫ್‌ಎಸ್‌ಎಲ್ ಅಂದಾಜು 1.45 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲಾಗಿದ್ದು, ಸರ್ವೆ ಕಾರ್ಯ ಮುಕ್ತಾಯವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ `ಆಯುಷ್ಮಾನ್ ಭಾರತ್’ ಯೋಜನೆ ಜಾರಿಯಾಗದಿರುವುದಕ್ಕೆ ಲೋಕಸಭೆಯಲ್ಲಿ ಕ್ಯಾ.ಚೌಟ ಕಳವಳ
ಆಗಸ್ಟ್ 2025ರ ಅಂತ್ಯದೊಳಗೆ ಪರಿಷ್ಕೃತ ಡಿಪಿಆರ್ ಸಿದ್ಧವಾಗಲಿದೆ. ಆದ್ದರಿಂದ ಕರ್ನಾಟಕ ರಾಜ್ಯ ಸರ್ಕಾರದೊಂದಿಗೆ ತಕ್ಷಣವೇ ಸಮನ್ವಯ ಸಾಧಿಸಿ ಡಿಪಿಆರ್ ಪಡೆಯುವಂತೆ ನೈರುತ್ಯ ರೈಲ್ವೆ ವಲಯ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ.
ಅಲ್ಲದೇ ಯೋಜನೆಯ ಮೊದಲ ಹಂತದ ಯೋಜನಾ ವೆಚ್ಚ ಸುಮಾರು 650 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲು ಅಗತ್ಯ ಕ್ರಮ ಕೈಗೊಂಡು, ಅದೇ ಸಮಯದಲ್ಲಿ ಕರ್ನಾಟಕ ಸರ್ಕಾರದ ಅಧಿಕಾರಿಗಳು ಭೂಸ್ವಾಧೀನ ಪ್ರಕ್ರಿಯೆಯನ್ನೂ ಕೈಗೊಂಡು ಪ್ರಸ್ತುತ 2025-26ನೇ ಆರ್ಥಿಕ ವರ್ಷದಲ್ಲಿ ಯೋಜನೆ ಕಾರ್ಯಾರಂಭವಾಗುವಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ತಾವು ಅಗತ್ಯ ಕ್ರಮ ಕೈಗೊಳ್ಳುತ್ತೀರಿ ಎಂಬ ಭರವಸೆ ಇದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಕಾಂಗ್ರೆಸ್‌ನಲ್ಲಿ (Congress) ಸತ್ಯಕ್ಕೆ ಸ್ಥಳವಿಲ್ಲ. ಸತ್ಯ ಹೇಳುವವರಿಗೂ ಸ್ಥಳವಿಲ್ಲ. ಕಾಂಗ್ರೆಸ್‌ನ ಮತಕ್ಕೆ ಓಲೈಕೆ ರಾಜಕಾರಣದ ಜೊತೆಗೆ ಆಂತರಿಕವಾಗಿ ಸಂವಿಧಾನದ ವಿರೋಧ ನಡೆದರೂ ಹೈಕಮಾಂಡ್ ವಿರುದ್ದ ಧ್ವನಿ ಎತ್ತುವ ಸ್ವತಂತ್ರ ಇಲ್ಲ. ಗುಲಾಮರಂತೆ ನಡೆಸಿಕೊಳ್ಳುವ ಮನಸ್ಥಿತಿ ಮೂರನೇ ತಲೆಮಾರಿನ ಕಾಂಗ್ರೆಸ್ ನಾಯಕರಿಗೆ ಇನ್ನೂ ಹೋಗಿಲ್ಲ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ (Basavaraj Bommai) ಆರೋಪಿಸಿದ್ದಾರೆ.
ಕಾಂಗ್ರೆಸ್ ನಲ್ಲಿ ಸತ್ಯಕ್ಕೆ ಸ್ಥಳವಿಲ್ಲ. ಕಾಂಗ್ರೆಸ್ ನಲ್ಲಿ ಸತ್ಯ ಹೇಳುವವರಿಗೂ ಸ್ಥಳವಿಲ್ಲ. ಕಾಂಗ್ರೆಸ್ ನ ಮತಕ್ಕೆ ಓಲೈಕೆ ರಾಜಕಾರಣದ ಜೊತೆಗೆ ಆಂತರಿಕವಾಗಿ ಸಂವಿಧಾನದ ವಿರೋಧ ನಡೆದರೂ ಹೈಕಮಾಂಡ್ ವಿರುದ್ದ ಧ್ವನಿ ಎತ್ತುವ ಸ್ವತಂತ್ರ ಇಲ್ಲ. ಗುಲಾಮರಂತೆ ನಡೆಸಿಕೊಳ್ಳುವ ಮನಸ್ಥಿತಿ ಮೂರನೇ ತಲೆಮಾರಿನ ಕಾಂಗ್ರೆಸ್ ನಾಯಕರಿಗೆ ಇನ್ನೂ ಹೋಗಿಲ್ಲ.… pic.twitter.com/oSU9RDm0Qb
ಈ ಕುರಿತು ಎಕ್ಸ್ ಪೋಸ್ಟ್ ಮಾಡಿರುವ ಅವರು, ಕೆ.ಎನ್.ರಾಜಣ್ಣ (K N Rajanna) ಒಬ್ಬ ಹಿರಿಯ ಅನುಭವಿ ರಾಜಕಾರಣಿ. ತಮ್ಮ ಇಲಾಖೆಯಲ್ಲಿ ದಕ್ಷತೆಯಿಂದ ಕೆಲಸ ಮಾಡಿದ್ದರು. ಎಸ್ಟಿ ಸಮುದಾಯದ ಹಿರಿಯ ನಾಯಕರಾಗಿರುವ ಅವರಿಗೆ ರಾಜೀನಾಮೆ ಕೊಡಲು ಅವಕಾಶ ಕೊಡದಿರುವುದು ಅವರ ಅನುಭವ, ದಕ್ಷತೆ, ಎಸ್ಟಿ ಜನಾಂಗಕ್ಕೆ ಮಾಡಿರುವ ಅವಮಾನ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ನನ್ನ ವಜಾದ ಹಿಂದೆ ಪಿತೂರಿ, ಷಡ್ಯಂತ್ರವಿದೆ – ಯಾರು ಹಿಂದಿದ್ದಾರೆ ಗೊತ್ತಿದೆ: ರಾಜಣ್ಣ ಬಾಂಬ್
ಒಂದು ರೀತಿ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಹಿನ್ನಡೆ, ಮುಂದಿನ ದಿನಗಳಲ್ಲಿ ಎಚ್ಚರಿಕೆ ಗಂಟೆ. ಇದರಿಂದ ರಾಜಣ್ಣ ಹೇಳಿದಂತೆ ಕಾಂಗ್ರೆಸ್‌ನಲ್ಲಿ ಕ್ರಾಂತಿ ಪ್ರಾರಂಭ ಆಗಿದೆ. ಏನೇ ಆದರೂ ಮತ ಸೇರ್ಪಡೆ ಕಾಂಗ್ರೆಸ್ ಆಡಳಿತದಲ್ಲಿ ಆಗಿದೆ ಎನ್ನುವುದು ಕಟು ಸತ್ಯ. ಅದನ್ನು ಅಳಿಸಲು ಸಾಧ್ಯವಿಲ್ಲ. ಸತ್ಯದ ಕನ್ನಡಿಯಂತೆ ರಾಹುಲ್ ಗಾಂಧಿಗೆ ಹೇಳಿರುದುವುದಕ್ಕೆ ರಾಜಣ್ಣ ಅವರನ್ನು ಮೆಚ್ಚಬೇಕು. ಆದರೆ ಪ್ರಮಾಣಿಕರಿಗೆ ಕಾಂಗ್ರೆಸ್‌ನಲ್ಲಿ ಸ್ಥಳ ಇಲ್ಲ ಎನ್ನುವುದು ಸ್ಪಷ್ಟವಾಗಿದೆ ಎಂದು ತಿಳಿಸಿದ್ದಾರೆ.
ನವದೆಹಲಿ: ಹಾವೇರಿ ಗದಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕಾರವಾರ ಇಳಕಲ್ ರಾಷ್ಟ್ರೀಯ ಹೆದ್ದಾರಿಯನ್ನು (Karwar-Ilakal National Highway) ವಿಶೇಷ ಪ್ರಕರಣವೆಂದು ಪರಿಗಣಿಸಿ ಶೀಘ್ರವೇ ಡಿಪಿಆರ್ ಮಾಡಿ ಕಾಮಗಾರಿ ಪ್ರಾರಂಭಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಅವರಿಗೆ ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಮಾಡಿರುವ ಅವರು, ಕಾರವಾರ, ಕೈಗಾ, ಮುಂಡಗೋಡ, ಸವಣೂರು, ಗದಗ, ಗಜೇಂದ್ರಗಡ ಮಾರ್ಗವಾಗಿ ಇಳಕಲ್ ತಲುಪುವ ಸುಮಾರು 318 ಕಿ.ಮೀ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಈಗಾಗಲೇ ತಾತ್ವಿಕ ಒಪ್ಪಿಗೆ ನೀಡಿದ್ದು, ಯೋಜನೆಯ ಡಿಪಿಆರ್ ಸಲ್ಲಿಕೆಯಾಗಿದೆ ಹಾಗೂ ಭೂ ಸ್ವಾಧೀನ ಪಡಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದರು. ಇದನ್ನೂ ಓದಿ: ವಿಕ್ಟೋರಿಯಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ ಸಿಎಂ
ಪ್ರಸ್ತುತ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ತೀರ್ಮಾನಿಸಿರುವುದರಿಂದ ರಾಜ್ಯ ಸರ್ಕಾರದ ಸರಿಯಾದ ನಿರ್ವಹಣೆ ಇಲ್ಲದ ಕಾರಣ ವಾಹನ ಸಂಚರಿಸಲು ಸಾಧ್ಯವಾಗದ ಸ್ಥಿತಿಯಲ್ಲಿದೆ. ಇನ್ನೊಂದೆಡೆ ಯೋಜನೆಗೆ ಅಧಿಕೃತ ಅನುಮತಿ ನೀಡದೇ ಇರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರೂ ಯಾವುದೇ ಕೆಲಸ ಮಾಡುತ್ತಿಲ್ಲ. ಹೀಗಾಗಿ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ತಕ್ಷಣವೇ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಿ ಕಾಮಗಾರಿ ಆರಂಭಿಸುವಂತೆ ವಿನಂತಿಸಿಕೊಂಡಿದ್ದಾರೆ. ಇದನ್ನೂ ಓದಿ: 2-3 ದಿನಗಳಲ್ಲಿ SEP ವರದಿ ಸಿಎಂಗೆ ಸಲ್ಲಿಕೆ – ಡಾ.ಸುಧಾಕರ್
ಅಲ್ಲದೇ ಇದಕ್ಕೆ ಹೊಂದಿಕೊಂಡ ಸಂಚರಿಸಲು ಸಾಧ್ಯವಾಗದಿರುವಂತಹ ಇತರ ಸಿಆರ್‌ಎಫ್ ರಸ್ತೆಗಳನ್ನು ಅಭಿವೃದ್ಧಿ ಪಡಿಸುವಂತೆ ಮನವಿ ಮಾಡಿದ್ದಾರೆ. ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ತಮ್ಮ ಅನುಭವದ ಆಧಾರದಲ್ಲಿ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕೊಪ್ಪಳದ ಗವಿಸಿದ್ದಪ್ಪ ಕೊಲೆ ಕೇಸನ್ನ NIAಗೆ ವಹಿಸಿ – ಛಲವಾದಿ ನಾರಾಯಣಸ್ವಾಮಿ
ಗದಗ: ರಾಜ್ಯದಲ್ಲಿ ರೈತರಿಗೆ ಯೂರಿಯಾ ಗೊಬ್ಬರ ಕೊರತೆ ಎದುರಾಗಿದ್ದು, ಸರ್ಕಾರ ಮುಂಚಿತವಾಗಿ ಸ್ಟಾಕ್ ಮಾಡಬೇಕಿತ್ತು. ರೈತರಿಗೆ ಸಮರ್ಪಕ ಗೊಬ್ಬರ ವಿತರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.
ಜಿಲ್ಲೆಯ ಸೊರಟೂರ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಹೆಚ್ಚಿನ ಗೊಬ್ಬರ ಬೇಕು ಎಂದು ಕೇಂದ್ರ ಸರ್ಕಾರಕ್ಕೆ ಕೇಳಿದೆ. ಕೇಂದ್ರ ಕೃಷಿ ಸಚಿವರ ಜೊತೆ ಮಾತನಾಡಿ ಕೊಡಿಸುವಂತಹ ಪ್ರಯತ್ನ ಮಾಡುತ್ತೇನೆ. ರಾಜ್ಯದಲ್ಲಿದ್ದ ಗೊಬ್ಬರವನ್ನು ರೈತರಿಗೆ ಸಮರ್ಪಕವಾಗಿ ಸರ್ಕಾರ ಪೂರೈಕೆ ಮಾಡಲಿ ಎಂದರು.ಇದನ್ನೂ ಓದಿ: ಕಠಿಣ ಸಂದರ್ಭದಲ್ಲೂ ಅಭಿವೃದ್ಧಿಯ ದೀಪ ಬೆಳಗಿಸಬಹುದು – ಮಾಜಿ ಮಾವೋವಾದಿಗಳ ಮೀನು ಕೃಷಿಗೆ ಮೋದಿ ಶ್ಲಾಘನೆ
ಇನ್ನೂ ನಾಲ್ವಡಿ ಕೃಷ್ಣರಾಜ ಒಡೆಯರಿಗಿಂತ ಹೆಚ್ಚು ಅಭಿವೃದ್ಧಿ ಕೆಲಸ ಸಿದ್ದರಾಮಯ್ಯ ಮಾಡಿದ್ದಾರೆ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ಇದು ಹೋಲಿಕೆಗೆ ಅಸಾಧ್ಯವಾದದ್ದು. ಅವರ ತಂದೆ ಬಹಳ ಕೆಲಸ ಮಾಡಿದ್ದಾರೆಂದು ತೋರಿಸಲು ಹೋಲಿಕೆ ಮಾಡ್ತಿದ್ದಾರೆ. ಸೂರ್ಯನ ಜೊತೆಗೆ ಯಾವುದಾದರೂ ಸಣ್ಣ ಬೆಳಕನ್ನು ಹೋಲಿಕೆ ಮಾಡಲು ಸಾಧ್ಯನಾ? ಸಾಧ್ಯನೇ ಇಲ್ಲ. ಸೂರ್ಯ ಸೂರ್ಯನೇ ಎಂದು ಹೇಳಿದರು.
ಮಹದಾಯಿ ವಿಚಾರವಾಗಿ ಮಾತನಾಡಿ, ಮಹದಾಯಿ ಏನಾದ್ರು ಪ್ರಗತಿಯಾಗಿದ್ರೆ ಅದಕ್ಕೆ ಕಾರಣ ಬಿಜೆಪಿ. ಮೋದಿ ಸರ್ಕಾರ ಬಂದ್ಮೇಲೆ ಮಹದಾಯಿ ಆದೇಶ ಹೊರಡಿಸಿದ್ದರು. ಮಾಡಿಸಿದ್ದ ಡಿಪಿಆರ್‌ನ್ನು ಎನ್‌ಡಿಎ ಸರ್ಕಾರ ಕೇಂದ್ರದಲ್ಲಿ ಒಪ್ಪಿಗೆ ಪಡೆಯಿತು. ಕಾಂಗ್ರೆಸ್ ಏನು ಮಾಡಲಿಲ್ಲ. ಬರೀ ನಾವು ಮಾಡಿದ ಕೆಲಸಕ್ಕೆ ಅಡ್ಡಗೋಡೆ ಕಟ್ಟಿದ್ದಾರೆ. ಮಹದಾಯಿ ಮಲಪ್ರಭಾಗೆ ಹರಿಯಬಾರದು ಅಂತ ಗೋಡೆ ಕಟ್ಟಿದರು. ರಾಜ್ಯದ ವಿಷಯದಲ್ಲಿ ರಾಜಕಾರಣ ಬೇಡ. ನ್ಯಾಯ ಸಮ್ಮತವಾಗಿ ಕಾಂಗ್ರೆಸ್ ಸರ್ಕಾರ ನಡೆಯಲಿ. ಗೋವಾ ಸಿಎಂ ಹೇಳಿಕೆಯನ್ನು ನಾನು ಸಹ ಖಂಡಿಸುತ್ತೇನೆ. ಕಾಂಗ್ರೆಸ್‌ಗೆ ಮಹದಾಯಿ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಸೋನಿಯಾ ಗಾಂಧಿ ಗೋವಾ ಚುನಾವಣೆಯಲ್ಲಿ ಹನಿ ನೀರು ಮಹದಾಯಿಂದ ಮಲಪ್ರಭಾಗೆ ಕೊಡಲ್ಲ ಎಂದಿದ್ದರು. ಹೀಗಾಗಿ ಕಾಂಗ್ರೆಸ್‌ಗೆ ಯಾವ ನೈತಿಕ ಹಕ್ಕಿದೆ ಎಂದು ಕಿಡಿಕಾರಿದರು.