Tag: Basavaraj Bommai

  • ಧರ್ಮಸ್ಥಳ ಪ್ರಕರಣ; ಎಸ್‌ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ಧವಾಗಿ ನಡೆಯಲಿ: ಬೊಮ್ಮಾಯಿ

    ಧರ್ಮಸ್ಥಳ ಪ್ರಕರಣ; ಎಸ್‌ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ಧವಾಗಿ ನಡೆಯಲಿ: ಬೊಮ್ಮಾಯಿ

    – ಧರ್ಮಸ್ಥಳ ದೇವಸ್ಥಾನದ ಮೇಲಿನ ಜನರ ನಂಬಿಕೆ ಕೆಡಿಸುವ ಕೆಲಸ ಆಗಬಾರದು ಎಂದ ಸಂಸದ

    ಬೆಂಗಳೂರು: ಧರ್ಮಸ್ಥಳ ಪ್ರಕರಣದ (Dharmasthala Mass Burials) ಕುರಿತು ಎಸ್‌ಐಟಿ (SIT) ತನಿಖೆಗೆ ನೀಡಿರುವುದನ್ನು ಸ್ವಾಗತ ಮಾಡುತ್ತೇವೆ. ಕಾಲಮಿತಿಯಲ್ಲಿ ಕಾನೂಬದ್ಧವಾಗಿ ಎಸ್‌ಐಟಿ ತನಿಖೆಯಾಗಬೇಕು. ಯಾರನ್ನೋ ಗುರಿಯಾಗಿಸಿಕೊಂಡು ತನಿಖೆ ನಡೆಯಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai)  ಹೇಳಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ಬಗ್ಗೆ ಸ್ಥಳೀಯರು ಹಾಗೂ ಅಲ್ಲಿ ಬಹಳ ದಿನಗಳವರೆಗೆ ಕೆಲಸ ಮಾಡಿರುವ ಪೊಲಿಸರಿಗೆ ಗೊತ್ತಿರುತ್ತದೆ. ದೂರು ಕೊಟ್ಟವರು ತಮ್ಮ ಮೇಲೆ ಒತ್ತಡ ಇದೆ ಎಂದು ಹೇಳಿದ್ದಾರೆ. ದೂರು ಕೊಟ್ಟವರಿಗೆ ಯಾರು ಒತ್ತಡ ಹಾಕಿದ್ದಾರೆ ಎಂದು ಹೇಳಬೇಕು. ಈ ಬಗ್ಗೆ ತನಿಖೆಯಾಗಬೇಕು. ಅಲ್ಲಿ ನಡೆದಿರುವ ಪ್ರಕರಣದ ಬಗ್ಗೆ ಪೊಲಿಸರು ಕ್ರಮ ಕೈಗೊಳ್ಳಬೇಕು. ಧರ್ಮಸ್ಥಳ ಪುರಾತನ ಹಾಗೂ ನಂಬಿಕೆಗೆ ಹೆಸರಾಗಿರುವ ದೇವಸ್ಥಾನ. ಆ ದೇವಸ್ಥಾನದ ಮೇಲಿನ ಜನರ ನಂಬಿಕೆ ಕೆಡಿಸುವ ಕೆಲಸವನ್ನು ಮಾಡಬಾರದು ಎಂದು ಹೇಳಿದರು. ಇದನ್ನೂ ಓದಿ: ಬಾಂಗ್ಲಾದೇಶದ ವಾಯುಪಡೆಯ ತರಬೇತಿ ವಿಮಾನ ಪತನ – ಓರ್ವ ಸಾವು, ನಾಲ್ವರು ಗಂಭೀರ

    ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಸ್ಥರಿಗೆ ವಾಣಿಜ್ಯ ತೆರಿಗೆ ಇಲಾಖೆಯವರು ನೋಟಿಸ್ ಕೊಟ್ಟಿದ್ದು ಸಣ್ಣ ವ್ಯಾಪಾರಸ್ಥರಿಗೆ ದೊಡ್ಡ ಆಘಾತವಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರದ ಮೇಲೆ ಹಾಕಿ ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ನೆಲಮಂಗಲ | ರ‍್ಯಾಗಿಂಗ್‌ಗೆ ಹೆದರಿ ಸೆಲ್ಫಿ ವೀಡಿಯೋ ಮಾಡಿಟ್ಟು ಕಾಲೇಜು ಟಾಪರ್ ಆತ್ಮಹತ್ಯೆ

    ಜಿಎಸ್‌ಟಿ ಕೌನ್ಸಿಲ್ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜಂಟಿ ಜವಾಬ್ದಾರಿ ಇದೆ. ರಾಜ್ಯದ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಹೊಣೆ ಮತ್ತು ನಿರ್ವಹಣೆಯನ್ನು ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯವರು ನೋಡುತ್ತಾರೆ. ಈಗ ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ಕೊಟ್ಟಿರುವುದರಿಂದ ಅವರ ವ್ಯಾಪಾರ್ ಬಂದ್ ಆಗಿರುವುದು ದೊಡ್ಡ ಹೊಡೆತ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಣ್ಣ ವ್ಯಾಪಾರಸ್ಥ ಮುಖಂಡರನ್ನು ಕರೆದು ಮಾತನಾಡಬೇಕು. ಸಿಎಂ ಹಣಕಾಸು ಸಚಿವರಾಗಿದ್ದು, ಇದನ್ನು ಬಗೆ ಹರಿಸಬೇಕು. ಹಾಗೂ ಮುಂದಿನ ದಿನಗಳಲ್ಲಿ ವ್ಯಾಪಾರಸ್ಥರು ಕಾನೂನು ಬದ್ಧವಾಗಿ ತೆರಿಗೆ ಕಟ್ಟಲು ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: Mandya | ಕಾಲೇಜು ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿ ನೇಣಿಗೆ ಶರಣು

    ಡಿಸಿಎಂ ಡಿಕೆಶಿವಕುಮಾರ್ ಅವರು ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ, ಡಿಸಿಎಂ ಡಿಕೆ ಶಿವಕುಮಾರ್‌ಗೆ ಎಲ್ಲ ಗೊತ್ತಿದ್ದು, ದಾರಿ ತಪ್ಪಿಸುತ್ತಿದ್ದಾರೆ. ರಾಜ್ಯದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳೇ ನೋಟಿಸ್ ಕೊಟ್ಟಿದ್ದಾರೆ. ಇಲ್ಲಿ ಯಾರೂ ಯಾರ ಬಾಯಿಗೆ ವರೆಸುವ ಪ್ರಶ್ನೆ ಇಲ್ಲ. ಅವರು ಜಾರಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್‌ಗೆ ಟ್ವಿಸ್ಟ್‌ – ಪ್ರಮುಖ ಆರೋಪಿಯಿಂದ ನಟಿ ರಚಿತಾ ರಾಮ್‌ಗೆ ಭರ್ಜರಿ ಗಿಫ್ಟ್

    ಬೆಂಗಳೂರು ಮಹತ್ವ ಕಳೆದುಕೊಳ್ಳಬಾರದು:
    ಬೆಂಗಳೂರು ಐದು ಮಹಾನಗರ ಪಾಲಿಕೆಯಾಗಿ ವಿಭಜನೆ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಬೆಂಗಳೂರು ವಿಭಜನೆ ಮಾಡುವುದರಿಂದ ಅದರ ಮಹತ್ವ ಕಡಿಮೆ ಆಗಬಾರದು. ದೇಶದ ನಾಲ್ಕು ಮಹಾನಗರಕ್ಕಿಂತ ಪ್ರಖ್ಯಾತಿ ಇರುವ ನಗರ ಅಂದರೆ ಬೆಂಗಳೂರು. ವಿದೇಶದಲ್ಲಿಯೂ ಇದರ ಮಹತ್ವ ಇದೆ. ವಿಭಜನೆಯಿಂದ ಅಭಿವೃದ್ಧಿಯಲ್ಲಿ ತಾರತಮ್ಯ ಆಗದಂತೆ ನೋಡಿಕೊಳ್ಳಬೇಕು. ಕೇವಲ ರಾಜಕೀಯ ಉದ್ದೇಶದಿಂದ ಪ್ರತ್ಯೇಕ ಪಾಲಿಕೆ ಮಾಡುವುದು ಸರಿಯಲ್ಲ. ಈಗಾಗಲೇ ಬಿಬಿಎಂಪಿಗೆ ನೂರಾಹತ್ತು ಹಳ್ಳಿಗಳನ್ನು ಸೇರಿಸಲಾಗಿತ್ತು. ಅವು ಇನ್ನೂ ಅಭಿವೃದ್ಧಿ ಆಗಿಲ್ಲ. ಈಗ ಅವೆಲ್ಲ ಒಂದೇ ಪಾಲಿಕೆಗೆ ಸೇರಿದರೆ ಅವು ಅಭಿವೃದ್ಧಿ ಆಗುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಮುಡಾ ಕೇಸ್ | ಇಡಿ-ಬಿಜೆಪಿ ಪಾಲುದಾರಿಕೆಯ ಪ್ರಚಾರವನ್ನು ಸುಪ್ರೀಂ ರದ್ದುಗೊಳಿಸಿದೆ: ಸುರ್ಜೇವಾಲಾ

    ದೊಡ್ಡ ರಾಜಕೀಯ ಬದಲಾವಣೆ:
    ರಾಜ್ಯ ಕಾಂಗ್ರೆಸ್ ನಲ್ಲಿ ಕುರ್ಚಿಗಾಗಿ ನಡೆಯುತ್ತಿರುವ ಆಂತರಿಕ ಕಚ್ಚಾಟದ ಕುರಿತು ಮಾತನಾಡಿ, ಬರುವ ದಿನಗಳಲ್ಲಿ ರಾಜ್ಯದಲ್ಲಿ ದೊಡ್ಡ ರಾಜಕೀಯ ಬದಲಾವಣೆ ಆಗುತ್ತದೆ. ಯಾರು ಏನೇ ಹೇಳಿದರೂ, ಆಗುವ ಬೆಳವಣಿಗೆಯನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಮಾರ್ಮಿಕವಾಗಿ ನುಡಿದರು. ಇದನ್ನೂ ಓದಿ: ಸುಳ್ಳು ಸುದ್ದಿ ಹರಿಬಿಟ್ಟ ಆರೋಪ – ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ರದ್ದುಗೊಳಿಸಿದ ಸುಪ್ರೀಂ

    ಇದೇ ವೇಳೆ ಮಾಜಿ ಸಚಿವರಾದ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಅವರು ಒಂದಾಗಿರುವ ಕುರಿತು ಪ್ರತಿಕ್ರಿಯಿಸಿ, ಅವರನ್ನು ಒಟ್ಟು ಗೂಡಿಸುವ ಅಗತ್ಯವಿಲ್ಲ. ಅವರು ಮೊದಲಿನಿಂದಲೂ ಒಟ್ಟಾಗಿದ್ದಾರೆ. ರಾಜಕೀಯಕ್ಕೆ ಬರುವ ಮೊದಲಿನಿಂದಲೂ ಅವರ ಸ್ನೇಹ ಗಾಢವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಜಯಮೃತ್ಯುಂಜಯ ಶ್ರೀಗಳಿಗೆ ವಿಷಪ್ರಾಶನ ಪ್ರಯತ್ನ ನಡೆದಿದೆ: ಬೆಲ್ಲದ್‌ ಗಂಭೀರ ಆರೋಪ

  • ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ಬರೆ; ಸಿಎಂ ಮಧ್ಯಪ್ರವೇಶಿಸಿ ಪರಿಹಾರ ಒದಗಿಸಲಿ: ಬೊಮ್ಮಾಯಿ ಆಗ್ರಹ

    ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ಬರೆ; ಸಿಎಂ ಮಧ್ಯಪ್ರವೇಶಿಸಿ ಪರಿಹಾರ ಒದಗಿಸಲಿ: ಬೊಮ್ಮಾಯಿ ಆಗ್ರಹ

    ಬೆಂಗಳೂರು: ಕರ್ನಾಟಕದಲ್ಲಿ ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಸ್ಥರಿಗೆ ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ ಜಿಎಸ್‌ಟಿ ಶಾಕ್ ಕೊಟ್ಟಿರುವಂಥದ್ದು ಅತ್ಯಂತ ಖಂಡನೀಯ. ಜಿಎಸ್‌ಟಿ ಕಾನೂನು ಅಡಿಯಲ್ಲಿ ವ್ಯಾಪಾರ ವಹಿವಾಟು ಮಾಡಲು ಕೆಲವು ರಿಯಾಯಿತಿ ಇದೆ. ಸಿಎಂ ಸಿದ್ದರಾಮಯ್ಯ (Siddaramaiah) ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಿ ಕೂಡಲೇ ಸಣ್ಣ ವ್ಯಾಪಾರಸ್ಥರಿಗೆ ಪರಿಹಾರ ಒದಗಿಸಬೇಕೆಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ (Basavaraj Bommai) ಆಗ್ರಹಿಸಿದ್ದಾರೆ.

    ಈ ಕುರಿತು ಎಕ್ಸ್ ಮೂಲಕ ಪ್ರತಿಕ್ರಿಯಿಸಿದ ಅವರು, ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಿಗಳ ವಿಚಾರದಲ್ಲಿ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ (Commercial tax department), ದುಡುಕಿ ಹಲವಾರು ವರ್ಷದ ತೆರಿಗೆ ಅದರ ಮೇಲೆ ಬಡ್ಡಿ ಮತ್ತು ಇತರ ಚಾರ್ಜ್ ಹಾಕಿದೆ. ಈ ಮೂಲಕ ಸಣ್ಣ ಬೀದಿಬದಿ ವ್ಯಾಪಾರಸ್ಥರ ಮೇಲೆ ದೊಡ್ಡ ಹೊರೆ ಹೊರೆಸಿ ಅವರು ವ್ಯಾಪಾರ ಮುಚ್ಚುವ ಪರಿಸ್ಥಿತಿಗೆ ತಂದಿರುವುದು ಯಾರೂ ಕೂಡ ಒಪ್ಪಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೊಲೆ ಕೇಸಲ್ಲಿ ಮೂರೂವರೆ ಗಂಟೆ ಪೊಲೀಸರಿಂದ ಗ್ರಿಲ್ – ಹೊರ ಬರ್ತಿದ್ದಂತೆ ಬೆಂಬಲಿಗರಿಂದ ಜೈಕಾರ

    ಸಂಬಂಧಪಟ್ಟ ಸಣ್ಣ ವ್ಯಾಪಾರಿಗಳ ಪ್ರತಿನಿಧಿಗಳನ್ನು ಕರೆದು ಚರ್ಚೆ ಮಾಡಿ, ಅವರಿಗೆ ಎಲ್ಲ ರೀತಿಯ ರಿಯಾಯಿತಿಗಳನ್ನು ಕೊಟ್ಟು ಕರ ಸಮಾಧಾನ ಯೋಜನೆ ಅಡಿಯಲ್ಲಿ ಯಾವ ರೀತಿ ತೆರಿಗೆದಾರರಿಗೆ ಸಹಾಯ ಮಾಡುತ್ತೇವೊ, ಅದೇ ರೀತಿ ಅವರಿಗೂ ಸಹಾಯ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: Uttar Pradesh | ಸ್ಕೂಲ್ ವ್ಯಾನ್‌ನಲ್ಲಿ 4 ವರ್ಷದ ಬಾಲಕಿ ಮೇಲೆ ರೇಪ್ – ಡ್ರೈವರ್ ಬಂಧನ

    ಬೇರೆ ರಾಜ್ಯಗಳಲ್ಲಿ ಈ ವಿಚಾರದಲ್ಲಿ ಏನೆಲ್ಲ ಕ್ರಮ ತೆಗೆದುಕೊಂಡಿದ್ದಾರೆ. ಸಣ್ಣ ವ್ಯಾಪಾರಸ್ಥರು ಮತ್ತು ಗ್ರಾಹಕರ ಹಿತ ದೃಷ್ಟಿಯಿಂದ ಆ ಕ್ರಮ ಇಲ್ಲಿ ಕೂಡ ಅನ್ವಯಿಸಬೇಕೆಂದು ಆಗ್ರಹ ಮಾಡುತ್ತೇನೆ. ರಾಜ್ಯದಲ್ಲಿ ಹಣಕಾಸಿನ ತೊಂದರೆಯಾಗಿ ಬೊಕ್ಕಸ ಖಾಲಿಯಾಗಿರುವುದು ಮತ್ತು ಈ ವರ್ಷದ ಮೊದಲನೇಯ ತ್ರೈಮಾಸಿಕ ತೆರಿಗೆ ಸಂಗ್ರಹದಲ್ಲಿ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಗಾಬರಿಯಿಂದ ತೀವ್ರವಾದ ಕ್ರಮಕ್ಕೆ ಆದೇಶದ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ವಾಣಿಜ್ಯ ತೆರಿಗೆ ಇಲಾಖೆಯ ಉನ್ನತ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಇದಕ್ಕೆ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

  • ಬಿ.ಸರೋಜಾದೇವಿ ಕಿತ್ತೂರು ರಾಣಿ ಚೆನ್ನಮ್ಮನ ಪಾತ್ರಕ್ಕೆ ನೈಜತೆ ತಂದಿದ್ದರು: ಬೊಮ್ಮಾಯಿ

    ಬಿ.ಸರೋಜಾದೇವಿ ಕಿತ್ತೂರು ರಾಣಿ ಚೆನ್ನಮ್ಮನ ಪಾತ್ರಕ್ಕೆ ನೈಜತೆ ತಂದಿದ್ದರು: ಬೊಮ್ಮಾಯಿ

    – ಸರೋಜಾದೇವಿ ನಿಧನ ಕರ್ನಾಟಕ ಕಲಾಕ್ಷೇತ್ರಕ್ಕೆ ದುಃಖದ ದಿನ ಎಂದ ಸಂಸದ

    ಬೆಂಗಳೂರು: ಬಿ.ಸರೋಜಾದೇವಿ (B Saroja Devi) ಕಿತ್ತೂರು ರಾಣಿ ಚೆನ್ನಮ್ಮನ ಪಾತ್ರಕ್ಕೆ ನೈಜತೆ ತಂದಿದ್ದರು. ಅವರ ನಿಧನ ಕರ್ನಾಟಕದ ಕಲಾಕ್ಷೇತ್ರಕ್ಕೆ ಅತ್ಯಂತ ದುಃಖದ ದಿನ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಸಂತಾಪ ಸೂಚಿಸಿದ್ದಾರೆ.

    ಬಿ.ಸರೋಜಾದೇವಿಯವರ ನಿಧನದ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಅಭಿನಯ ಸರಸ್ವತಿ, ಚತುರ್ಭಾಷಾ ತಾರೆ ಪೌರಾಣಿಕ ಹಾಗೂ ಸಾಮಾಜಿಕ ಚಲನಚಿತ್ರಗಳಲ್ಲಿ ವಿಭಿನ್ನ ಪಾತ್ರವನ್ನು ಲೀಲಾಜಾಲವಾಗಿ ನಟಿಸುತ್ತಿದ್ದ ಸರೋಜಾದೇವಿ ಇನ್ನಿಲ್ಲ. ಒಂದು ಕಾಲದಲ್ಲಿ ಕನ್ನಡದ ಸೂಪರ್ ಸ್ಟಾರ್ ಆಗಿದ್ದ ಅವರು, ರಾಜಕುಮಾರ್ ಜೊತೆ, ತೆಲುಗಿನಲ್ಲಿ ಎನ್‌ಟಿಆರ್ ಜೊತೆ, ಹಿಂದಿಯಲ್ಲಿ ದಿಲೀಪ್ ಕುಮಾರ್ ಜೊತೆ ನಟಿಸಿ ಇಡೀ ದೇಶದಲ್ಲಿ ಪ್ರಖ್ಯಾತ ನಟಿ ಆಗಿದ್ದರು. ಕನ್ನಡದಲ್ಲಿ ಹೇಳಬೇಕಾದರೆ ಕಿತ್ತೂರು ರಾಣಿ ಚೆನ್ನಮ್ಮ ಪಾತ್ರಕ್ಕೆ ನೈಜತೆ ತಂದಿದ್ದರು. ಚೆನ್ನಮ್ಮ ಅಂದರೆ ಹೀಗಿದ್ದರು ಅಂತ ಕಲ್ಪನೆ ಮೂಡಿಸಿದ್ದರು. ಅವರ ಅಭಿನಯ, ಕಲ್ಪನೆ ಇಂದಿಗೂ ಮನಸ್ಸಿನಲ್ಲಿ ಇದೆ. ಚೆನ್ನಮ್ಮ ಬ್ರಿಟೀಷರ ವಿರುದ್ಧ ಹೇಗೆ ಹೋರಾಟ ಮಾಡಿದ್ದರು ಅಂತ ಅವರ ನಟನೆ ಮೂಲಕ ತೋರಿಸಿದ್ದರು ಎಂದರು. ಇದನ್ನೂ ಓದಿ:  ಸತ್ಯನಾರಾಯಣ ದೇವರ ಪ್ರಸಾದದಿಂದ ನಾನು ಜನಿಸಿದ್ದೆ ಎಂದಿದ್ದ ಸರೋಜಾದೇವಿ

    ಮಲ್ಲಮ್ಮನ ಪವಾಡ ಇದೊಂದು ಮನೆಮನೆಯಲ್ಲಿ ಮನಮುಟ್ಟುವ ಚಿತ್ರವಾಗಿತ್ತು. ಲಕ್ಷ್ಮಿ ಸರಸ್ವತಿ, ಬಬ್ರುವಾಹನ, ಶ್ರೀನಿವಾಸ ಕಲ್ಯಾಣ ಸೇರಿದಂತೆ ನೂರಾರು ಚಿತ್ರಗಳಲ್ಲಿ ನಟನೆ ಮಾಡಿದ್ದರು. ಅಭಿನಯದ ಜೊತೆ ಗಂಭೀರತೆಯಲ್ಲಿ ಅಗ್ರಮಾನ್ಯರಾಗಿದ್ದರು. ಐದು ದಶಕದಿಂದ ಚಿತ್ರರಂಗದಲ್ಲಿ ನಟಿಸಿದ್ದು, ನಮ್ಮನ್ನೆಲ್ಲಾ ಅಗಲಿದ್ದಾರೆ. ಆದರೂ ಅವರ ಅಭಿನಯದ ಮೂಲಕ ನಮ್ಮ ಮನದಲ್ಲಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು. ಇದನ್ನೂ ಓದಿ: ಸರೋಜಾದೇವಿ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ನಟಿಯರಲ್ಲಿ ಒಬ್ಬರು – ಬಿವೈವಿ

  • ಮಹಾರಾಷ್ಟ್ರ ಸಿಎಂ ಆಲಮಟ್ಟಿ ಡ್ಯಾಂ ಎತ್ತರದ ಬಗ್ಗೆ ತಕರಾರು ಮಾಡಿರೋದು ರಾಜಕೀಯ ಪ್ರೇರಿತ: ಬೊಮ್ಮಾಯಿ

    ಮಹಾರಾಷ್ಟ್ರ ಸಿಎಂ ಆಲಮಟ್ಟಿ ಡ್ಯಾಂ ಎತ್ತರದ ಬಗ್ಗೆ ತಕರಾರು ಮಾಡಿರೋದು ರಾಜಕೀಯ ಪ್ರೇರಿತ: ಬೊಮ್ಮಾಯಿ

    ಬೆಂಗಳೂರು: ಮಹಾರಾಷ್ಟ್ರ (Maharashtra) ಸಿಎಂ ಆಲಮಟ್ಟಿ ಜಲಾಶಯದ (Almatti Dam) ಎತ್ತರದ ಬಗ್ಗೆ ತಕರಾರು ಮಾಡಿರುವುದು ಅಸಮಂಜಸ ಮತ್ತು ರಾಜಕೀಯ ಪ್ರೇರಿತ ಎಂದು ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಅಭಿಪ್ರಾಯಪಟ್ಟಿದ್ದಾರೆ.

    ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಕೃಷ್ಣಾ ಮೇಲ್ದಂಡೆ ಯೋಜನೆ ಅಡಿಯಲ್ಲಿ ನಿರ್ಮಾಣವಾಗಿರುವ ಆಲಮಟ್ಟಿ ಸಂಪೂರ್ಣ ಕೃಷ್ಣಾ ಜಲಾನಯನ ಪ್ರದೇಶದ ಒಂದು ಪ್ರಮುಖ ನೀರು ಸಂಗ್ರಹ ಮತ್ತು ವಿತರಣೆಯ ವಾಟರ್ ಗ್ರಿಡ್ ಆಗಿದೆ. ಉತ್ತರ ಕರ್ನಾಟಕದ ಜೀವನದಿಗೆ ಹೃದಯ ಭಾಗವಾಗಿದೆ. ಆಲಮಟ್ಟಿ ಎತ್ತರದ ಬಗ್ಗೆ ಕರ್ನಾಟಕದ ಮೂಲ ಕೃಷ್ಣಾ ಜಲಾನಯನ ಯೋಜನೆಯಲ್ಲಿ ಅಳವಡಿಸಿದೆ. ಮತ್ತು ಕೇಂದ್ರ ಸರ್ಕಾರ ಇದಕ್ಕೆ ಒಪ್ಪಿಗೆ ಕೊಟ್ಟಿದೆ. ಅದರ ಪ್ರಕಾರ 524.25 ಮೀಟರ್ ಎಂಬುದು ಮೂಲ ಯೋಜನೆಯಲ್ಲಿ ಇದ್ದು ತದ ನಂತರ ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶ ತಕರಾರು ಆದಮೇಲೆ ಕೆಡಬ್ಲುಡಿಟಿ 1 (ಕೃಷ್ಣಾ ವಾಟರ್ ಡಿಸ್ಪ್ಯೂಟ್ ಟ್ರಿಬ್ಯುನಲ್), ನೀರನ್ನು ಉಪಯೋಗ ಮಾಡಲು 519.6 ಮೀಟರ್‌ಗೆ ಸೀಮಿತಗೊಳಿಸಿ ಉಪಯೋಗಿಸಲು ಸುಪ್ರೀಂ ಕೋರ್ಟ್ ಕೂಡ ಒಪ್ಪಿದೆ. ಸ್ಕಿಂ ಬಿಯಲ್ಲಿ ಕೆಡಬ್ಲುಡಿಟಿ 2, ( ಕೃಷ್ಣಾ ವಾಟರ್ ಡಿಸ್ಪ್ಯೂಟ್ ಟ್ರಿಬ್ಯುನಲ್ 2)ನಲ್ಲಿ ನಮಗೆ ನೀರು ಹಂಚಿಕೆಯಾಗಿರುವ 173 ಟಿಎಂಸಿಯನ್ನು 519 ರಿಂದ 524 ರಲ್ಲಿ ಪಡೆದುಕೊಳ್ಳಬಹುದೆಂದು ಕೆಡಬ್ಲುಡಿಟಿ 2 ಅಂತಿಮ ಟ್ರಿಬ್ಯುನಲ್ ಆದೇಶದಲ್ಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಡಿಕೆಶಿ ತೆಲಂಗಾಣಕ್ಕೆ ನೀರು ಬಿಟ್ಟಿದ್ದಾರೆ: ಆರ್.ಅಶೋಕ್ ಕಿಡಿ

    ಕೆಡಬ್ಲ್ಯುಡಿ ಟ್ರಿಬ್ಯುನಲ್ ಸ್ವತಂತ್ರವಾಗಿ ಹೈಡ್ರಾಲಾಜಿಕಲ್ ಸ್ಟಡಿ ಮಾಡಿಸಿ 524 ಮೀಟರ್‌ಗೆ ಏರಿಸಿದರೂ ಕೂಡ ಕೊಲ್ಲಾಪುರ ಸಾಂಗ್ಲಿ ಅಷ್ಟೇ ಅಲ್ಲದೇ ಮಹಾರಾಷ್ಟ್ರದ ಯಾವುದೇ ಭಾಗ ಮುಳುಗಡೆಯಾವುದಿಲ್ಲ ಎಂದು ಅಂತಿಮವಾಗಿ ಟ್ರಿಬ್ಯುನಲ್ ತೀರ್ಪು ಕೊಟ್ಟಾಗಿದೆ. ಇದನ್ನು ಮಹಾರಾಷ್ಟ್ರ ಎಲ್ಲಿಯೂ ಕೂಡ ಕಾನೂನಾತ್ಮಕವಾಗಿ ಪ್ರಶ್ನಿಸಿಲ್ಲ. ಅಲ್ಲದೇ ಕೆಡಬ್ಲುಡಿಟಿ 2 ನೊಟಿಫಿಕೇಶನ್ ಮಾಡಬೇಕೆಂದು ಕರ್ನಾಟಕಕ್ಕಿಂತ ಮೊದಲೇ ಸುಪ್ರೀಂ ಕೊರ್ಟ್‌ಗೆ ಮಹಾರಾಷ್ಟ್ರ ಹೋಗಿದೆ. 2005 ರಲ್ಲಿ ಪ್ರವಾಹ ಆದಾಗ ಅದು ಆಲಮಟ್ಟಿ ಹಿನ್ನೀರಿನಿಂದ ಆಗಿಲ್ಲ ಎಂದು ಅವತ್ತಿನ ಕೇಂದ್ರ ಜಲ ಆಯೋಗ ಕೂಡ ತೀರ್ಪು ನೀಡಿದೆ. ಎಲ್ಲಕ್ಕಿಂತ ಮುಖ್ಯವಾಗಿ ಆಲಮಟ್ಟಿ ಡ್ಯಾಂ ನಿರ್ಮಾಣ ಆಗುವ ಮುಂಚೆಯೇ 1960-70 ರ ದಶಕದಲ್ಲಿ ಮಹಾರಾಷ್ಟ್ರದ ಕೊಲ್ಲಾಪುರ ಮತ್ತು ಸಾಂಗ್ಲಿಯಲ್ಲಿ ಪ್ರವಾಹ ಆಗಿರುವುದು ಗಮನಾರ್ಹ ಎಂದು ತಿಳಿಸಿದ್ದಾರೆ.

    ಇಷ್ಟೆಲ್ಲಾ ಪ್ರಕ್ರಿಯೆ ಆದ ಮೇಲೆ ಈಗ ಮತ್ತೆ ಆಲಮಟ್ಟಿ ಎತ್ತರದ ಬಗ್ಗೆ ಮಹಾರಾಷ್ಟ್ರ ಸಿಎಂ ತಕರಾರು ತೆಗೆದಿರುವುದು ಅಸಮಂಜಸ ಮತ್ತು ಅಲ್ಲಿಯ ಎರಡು ಜಿಲ್ಲೆಯ ರಾಜಕೀಯ ಒತ್ತಡಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿಗಳು ಈ ನಿಲುವು ತೆಗೆದುಕೊಳ್ಳಲು ಸಾದ್ಯವಿದೆ‌. ಹೀಗಾಗಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಸಂಪೂರ್ಣ ಸತ್ಯವನ್ನು ತಿಳಿಸಬೇಕು. ಅಲ್ಲದೆ ರಾಜ್ಯ ಸರ್ಕಾರ ಪುನರ್ ವಸತಿ ಮತ್ತು ಪುನರ್ ನಿರ್ಮಾಣ (ಆರ್ ಆಂಡ್ ಆರ್) ಕೆಲಸ ತ್ವರಿತಗತಿಯಲ್ಲಿ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ 173 ಟಿಎಂಸಿ ನಮ್ಮ ನೀರಿನ ಹಕ್ಕನ್ನು ನಾವೇ ಗಂಡಾಂತರಕ್ಕೆ ನೂಕಿದಂತೆ ಆಗುತ್ತದೆ‌. ಈ ವಿಚಾರದಲ್ಲಿ ರಾಜ್ಯ ಸರ್ಕಾರ ರಾಜಕೀಯ ಬೆರೆಸದೆ ಕ್ರಮ ಕೈಗೊಳ್ಳಬೇಕು. ಅಷ್ಟೇ ಅಲ್ಲ ಕೇಂದ್ರ ಸರ್ಕಾರವೂ ಕೂಡ ನಡೆದಿರುವ ಎಲ್ಲ ಘಟನಾವಳಿಗಳನ್ನು, ಆದೇಶಗಳನ್ನು ಪರಿಸಿಲಿಸಿ ಕರ್ನಾಟಕದ ಹಿತಾಸಕ್ತಿ ಕಾಪಾಡಬೇಕು ಎಂದು ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೃಷ್ಣಾ ಮೇಲ್ದಂಡೆ ಯೋಜನೆ ಹೋರಾಟದಲ್ಲಿ ಪ್ರತಿಧ್ವನಿಸಿದ ಪ್ರತ್ಯೇಕ ರಾಜ್ಯದ ಕೂಗು

  • ಕಸ್ತೂರಿ ರಂಗನ್ ನಿಧನಕ್ಕೆ ಬಸವರಾಜ ಬೊಮ್ಮಾಯಿ ಸಂತಾಪ

    ಕಸ್ತೂರಿ ರಂಗನ್ ನಿಧನಕ್ಕೆ ಬಸವರಾಜ ಬೊಮ್ಮಾಯಿ ಸಂತಾಪ

    ಬೆಂಗಳೂರು: ಖ್ಯಾತ ವಿಜ್ಞಾನಿ, ಇಸ್ರೋ ಮಾಜಿ ಅಧ್ಯಕ್ಷ ಕೆ.ಕಸ್ತೂರಿ ರಂಗನ್ (K Kasturi Rangan) ಅವರ ನಿಧನದ ಸುದ್ದಿ ಕೇಳಿ ಅತ್ಯಂತ ನೋವಾಯಿತು. ಇಸ್ರೋ (ISRO) ಅಧ್ಯಕ್ಷರಾಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ತಮ್ಮದೇ ಆದ ಕೊಡುಗೆ ನೀಡುವ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ (India)  ಹೆಸರು ಉತ್ತುಂಗಕ್ಕೇರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಸಂತಾಪ ಸೂಚಿಸಿದ್ದಾರೆ.ಇದನ್ನೂ ಓದಿ: ಅನಧಿಕೃತ, ಅಕ್ರಮ ಬಡಾವಣೆ ನಿರ್ಮಾಣ ಮಾಡಿದ್ರೆ ಸರ್ಕಾರದಿಂದಲೇ ಮುಟ್ಟುಗೋಲು – ಕೃಷ್ಣಬೈರೇಗೌಡ

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಡಾ. ಕೆ.ಕಸ್ತೂರಿ ರಂಗನ್ ಅವರು ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಸಮಿತಿಯ ಅಧ್ಯಕ್ಷರಾಗಿ, ಕರ್ನಾಟಕ (Karnataka) ಜ್ಞಾನ ಮಂಡಳಿ ಅಧ್ಯಕ್ಷರಾಗಿ, ಶಿಕ್ಷಣ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ವಿಜ್ಞಾನ ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ಅವರು ಮಾಡಿರುವ ಸಾಧನೆಗೆ ಅನೇಕ ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿಗಳು ಅವರನ್ನು ಅರಸಿ ಬಂದಿವೆ. ರಾಜ್ಯಸಭಾ ಸದಸ್ಯರಾಗಿ, ಯೋಜನಾ ಆಯೋಗದ ಸದಸ್ಯರಾಗಿ ಸೇವೆ ಸಲ್ಲಿಸಿದ್ದು, ಅವರ ಸಾಧನೆ ಗುರುತಿಸಿ ಭಾರತ ಸರ್ಕಾರ (Indian Governmeent) ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.

    ಅವರ ಅಗಲಿಕೆಯಿಂದ ಭಾರತ ಒಬ್ಬ ಶ್ರೇಷ್ಠ ಬಾಹ್ಯಾಕಾಶ ವಿಜ್ಞಾನಿಯನ್ನು ಕಳೆದುಕೊಂಡು ಬಡವಾದಂತಾಗಿದೆ. ಭಗವಂತ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬಕ್ಕೆ ನೀಡಲಿ ಹಾಗೂ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ನಾವು ಭಯೋತ್ಪಾದನೆಯನ್ನು ಬೆಂಬಲಿಸಿದ್ದೇವೆ – ಒಪ್ಪಿಕೊಂಡ ಪಾಕಿಸ್ತಾನ

  • ಪಹಲ್ಗಾಮ್ ದಾಳಿ ಭಯೋತ್ಪಾದನೆ ಮರುಸ್ಥಾಪಿಸುವ ಯತ್ನ: ಬೊಮ್ಮಾಯಿ

    ಪಹಲ್ಗಾಮ್ ದಾಳಿ ಭಯೋತ್ಪಾದನೆ ಮರುಸ್ಥಾಪಿಸುವ ಯತ್ನ: ಬೊಮ್ಮಾಯಿ

    ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕರ ಮೇಲೆ ದಾಳಿ ಮಾಡಿರುವುದು ಇದೊಂದು ಹೇಯ ಕೃತ್ಯ ಮತ್ತು ಇದು ಭಯೋತ್ಪಾದನೆ ಮರುಸ್ಥಾಪಿಸುವ ಪ್ರಯತ್ನ. ಇದನ್ನು ಪ್ರತಿಯೊಬ್ಬ ನಾಗರಿಕರು ಖಂಡಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಕಿಡಿಕಾರಿದ್ದಾರೆ.ಇದನ್ನೂ ಓದಿ: ದುಷ್ಟ ಅಜೆಂಡಾ ಎಂದಿಗೂ ಯಶಸ್ವಿಯಾಗಲ್ಲ, ದಾಳಿಕೋರರನ್ನು ಸುಮ್ಮನೆ ಬಿಡಲ್ಲ: ಗುಡುಗಿದ ಮೋದಿ

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಧರ್ಮದ ಹೆಸರು ಕೇಳಿ ಗುಂಡು ಹಾರಿಸಿರುವುದು ಭಾರತದ ವಿರೋಧಿ ಶಕ್ತಿಗಳ ಕೈವಾಡ ಇರುವುದು ಬಹಳ ಸ್ಪಷ್ಟ. ಇದನ್ನು ಕೂಡಲೇ ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಂಡು ಮಟ್ಟ ಹಾಕಬೇಕು. ಜಮ್ಮು ಕಾಶ್ಮೀರ ಕಣಿವೆಯಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆ ತರಲು ರಾಜ್ಯ ಸರ್ಕಾರ ಎಲ್ಲ ವ್ಯವಸ್ಥೆಯನ್ನು ಮಾಡಬೇಕು. ಘಟನೆಯಲ್ಲಿ ಮೃತರಾದವರ ಕುಟುಂಬಸ್ಥರಿಗೆ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಭಗವಂತ ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

    ಏನಿದು ಘಟನೆ?
    ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು, ಶಿವಮೊಗ್ಗದ ಪ್ರವಾಸಿಗರೊಬ್ಬರು ಸಾವಿಗೀಡಾಗಿದ್ದಾರೆ. ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗದ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ (47) ಮೃತಪಟ್ಟಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿಯಾಗಿರುವ ಮಂಜುನಾಥ್ ಅವರು ಪತ್ನಿ ಪಲ್ಲವಿ ಹಾಗೂ ಪುತ್ರ ಅಭಿಜೇಯ ಜೊತೆ ಪ್ರವಾಸಕ್ಕೆ ಹೋಗಿದ್ದರು.ಇದನ್ನೂ ಓದಿ: ಮುಗ್ಧರನ್ನು ಕೊಲ್ಲುವುದು ದುಷ್ಟತನ- ಪಹಲ್ಗಾಮ್‌ ದಾಳಿ ಖಂಡಿಸಿದ ನಟ ಅಕ್ಷಯ್ ಕುಮಾರ್

  • ರೈತರ ಹೆಸರಿನಲ್ಲಿ ಹಾಲಿನ ದರ ಏರಿಸಿ ಜನರಿಗೆ ಬರೆ: ಬೊಮ್ಮಾಯಿ

    ರೈತರ ಹೆಸರಿನಲ್ಲಿ ಹಾಲಿನ ದರ ಏರಿಸಿ ಜನರಿಗೆ ಬರೆ: ಬೊಮ್ಮಾಯಿ

    ನವದೆಹಲಿ: ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದನ್ನು ಮರೆಮಾಚಲು ರೈತರ ಹೆಸರಿನಲ್ಲಿ ಹಾಲಿನ ದರ ಏರಿಕೆ (Milk Price Hike) ಮಾಡಿ ಜನರ ಮೇಲೆ ಬರೆ ಎಳೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಕಿಡಿಕಾರಿದ್ದಾರೆ.

    ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಕಳೆದ ಆರು ತಿಂಗಳಿನಿಂದ ಹಾಲು ಉತ್ಪಾದಕರಿಗೆ ಯಾವುದೇ ಪ್ರೋತ್ಸಾಹಧನ ಬಿಡುಗಡೆ ಮಾಡಿಲ್ಲ. ಸುಮಾರು 500 ಕೋಟಿ ರೂ. ಪ್ರೋತ್ಸಾಹಧನ ಕೊಡುವುದು ಬಾಕಿ ಇದೆ. ಪ್ರೋತ್ಸಾಹ ಧನ ಇಲ್ಲದೇ ರೈತರು ಮತ್ತು ಹಾಲು ಒಕ್ಕೂಟಗಳು ಸಂಕಷ್ಟಕ್ಕೀಡಾಗಿವೆ. ಇಡೀ ವರ್ಷ ಪ್ರೋತ್ಸಾಹಧನ ನೀಡದೇ, ನೀವೇ ದರ ಹೆಚ್ಚಳ ಮಾಡಿಕೊಂಡು ನೀವೇ ಪ್ರೋತ್ಸಾಹಧನ ನೀಡಿ ಎಂದು ಜನರ ಮೇಲೆ ಹೊರೆ ಹಾಕಿದ್ದಾರೆ. ತಮ್ಮ ಜವಾಬ್ದಾರಿಯಿಂದ ನುಣುಚಿಕೊಂಡು ರಾಜ್ಯ ದಿವಾಳಿಯಾಗಿರುವುದಕ್ಕೆ ಇದು ಮತ್ತೊಂದು ಸಾಕ್ಷಿ ಎಂದು ಅವರು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: Milk Price Hike | ಗ್ಯಾರಂಟಿ ಸರ್ಕಾರದ ಬಂದ ಮೇಲೆ ಯಾವುದು ಎಷ್ಟು ಏರಿಕೆ? ಮುಂದೆ ಏನೇನು ಶಾಕ್ ಸಿಗುತ್ತೆ?

    ತಮ್ಮ ವೈಫಲ್ಯ ಮುಚ್ಚಿಕೊಂಡು ಸರ್ಕಾರ ಕೊಡಬೇಕಾದ ಪ್ರೋತ್ಸಾಹಧನವನ್ನು ಕೆಎಂಎಫ್‌ಗೆ 4 ರೂ. ಹಾಲಿನ ದರ ಹೆಚ್ಚಳ ಮಾಡಿ, ಜನರ ಮೇಲೆ ಭಾರ ಹೇರಿದೆ. ವರ್ಷದಲ್ಲಿ ಮೂರು ಬಾರಿ 9 ರೂ. ಹೆಚ್ಚಳ ಮಾಡಿದ್ದಾರೆ. ಇದೊಂದು ಬೇಜವಾಬ್ದಾರಿ ರಾಜ್ಯ ವಿರೋಧಿ ಸರ್ಕಾರವಾಗಿದೆ. ರಾಜ್ಯವನ್ನು ದಿವಾಳಿ ಮಾಡಿ ಆರ್ಥಿಕವಾಗಿ ಸದೃಢವಾಗಿರುವ ರಾಜ್ಯವನ್ನು ಆರ್ಥಿಕವಾಗಿ ಅತ್ಯಂತ ದುರ್ಬಲವಾಗಿರುವ ರಾಜ್ಯವನ್ನಾಗಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

    ಇಷ್ಟೆಲ್ಲಾ ಆದರೂ ರಾಜ್ಯ ಸರ್ಕಾರ ಭಂಡತನಕ್ಕೆ ಬಿದ್ದಿದೆ. ವಿದ್ಯುತ್ ದರ ಹೆಚ್ಚಳ ಮಾಡಿದೆ. ಡಿಜಿಟಲ್ ಮೀಟರ್ ಅಳವಡಿಕೆ ದೊಡ್ಡ ಹಗರಣವಾಗಿದೆ. ಪೆಟ್ರೋಲ್, ಡಿಸೇಲ್, ಮುದ್ರಾಂಕ ನೋಂದಣಿ ಶುಲ್ಕ ಎಲ್ಲವನನ್ನೂ ಹೆಚ್ಚಳ ಮಾಡಿದ್ದಾರೆ. ಅಬಕಾರಿ ತೆರಿಗೆ ದರವಂತೂ ಲೆಕ್ಕವಿಲ್ಲದಷ್ಟು ಹೆಚ್ಚಳ ಮಾಡಿದ್ದಾರೆ. ಕಳೆದ ವರ್ಷ ಸುಮಾರು 40 ಸಾವಿರ ಕೋಟಿ ರೂ. ಹೆಚ್ಚಿನ ತೆರಿಗೆ ಭಾರವನ್ನು ಜನರ ಮೇಲೆ ಹಾಕಿದ್ದಾರೆ. ಈಗ ಸುಮಾರು 55 ಸಾವಿರ ಕೋಟಿ ರೂ. ಹೊಸ ತೆರಿಗೆ ಮೂಲಕ ಜನರ ಮೇಲೆ ಹಾಕಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

    – ಬಡವರು ಅತಿ ಬಡವರಾಗುತ್ತಿದ್ದಾರೆ
    ಇಷ್ಟೆಲ್ಲಾ ಆದರೂ ಸುಮಾರು 1.16 ಲಕ್ಷ ಕೋಟಿ ರೂ. ಸಾಲ ತೆಗೆದುಕೊಂಡಿದ್ದಾರೆ. ಒಂದು ಕಡೆ ತೆರಿಗೆ (Tax) ಇನ್ನೊಂದೆಡೆ ಬೆಲೆ ಏರಿಕೆ ಭಾರ, ಇದರಿಂದ ಮಧ್ಯಮ ವರ್ಗದವರು ಬಡವರಾಗುತ್ತಿದ್ದಾರೆ. ಬಡವರು ಅತಿ ಬಡವರಾಗುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್ ಸರ್ಕಾರ ನೇರ ಹೊಣೆಯಾಗಿದೆ. ಈ ಸರ್ಕಾರದ ಬಗ್ಗೆ ಜನರು ಬೇಸತ್ತಿದ್ದಾರೆ. ಈ ಸರ್ಕಾರ ಆದಷ್ಟು ಬೇಗ ತೊಲಗಲಿ ಅಂತ ಜನ ಶಾಪ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.

    ರಾಜ್ಯ ಸರ್ಕಾರಕ್ಕೆ ರೈತರ ಮೇಲೆ ಅಷ್ಟೊಂದು ಕಾಳಜಿ ಇದ್ದರೆ, ಸರ್ಕಾರ ಕೊಡಬೇಕಾಗಿರುವ ಪ್ರೋತ್ಸಾಹ ಧನ ಏಕೆ ಕೊಡುತ್ತಿಲ್ಲ? ತಮ್ಮ ಆರ್ಥಿಕ ದಿವಾಳಿತನ ಮುಚ್ಚಿಕೊಳ್ಳಲು ರೈತರ ಹೆಸರಿನಲ್ಲಿ ದರ ಹೆಚ್ಚಿಸಿದ್ದಾರೆ. ಅದನ್ನು ರೈತರಿಗೆ ಪೂರ್ಣ ಪ್ರಮಾಣದಲ್ಲಿ ನೀಡುವುದಿಲ್ಲ ಎಂದಿದ್ದಾರೆ.

    ಶಾಸಕರಾದ ಎಸ್.ಟಿ. ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರಿಗೆ ಪಕ್ಷ ನೋಟಿಸ್‌ ನೀಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೆ ಪಕ್ಷದ ಶಿಸ್ತು ಸಮಿತಿ ಅವರಿಗೆ ನೋಟಿಸ್‌ ಕೊಟ್ಟಿದೆ. ಅವರು ನೋಟಿಸ್‌ಗೆ ಉತ್ತರ ನೀಡಲಿದ್ದಾರೆ. ಹೀಗಾಗಿ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ನಂದಿನಿ ಹಾಲಿನ ದರ 4 ರೂ. ಹೆಚ್ಚಳ – ರೈತರಿಗೆ ಪೂರ್ಣ ಹಣ ವರ್ಗಾವಣೆಗೆ ಕ್ಯಾಬಿನೆಟ್ ತೀರ್ಮಾನ

  • ಹೈಕಮಾಂಡ್ ನಿರ್ಣಯ ನಾವೆಲ್ಲ ಪಾಲಿಸಬೇಕು: ಬಸವರಾಜ ಬೊಮ್ಮಾಯಿ

    ಹೈಕಮಾಂಡ್ ನಿರ್ಣಯ ನಾವೆಲ್ಲ ಪಾಲಿಸಬೇಕು: ಬಸವರಾಜ ಬೊಮ್ಮಾಯಿ

    – ಯತ್ನಾಳ್ ವಿಚಾರ ವರಿಷ್ಠರ ಜೊತೆ ಚರ್ಚಿಸಿ ಮಾತನಾಡುತ್ತೇನೆ

    ನವದೆಹಲಿ: ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಣಯವನ್ನು ನಾವೆಲ್ಲರೂ ಪಾಲಿಸಬೇಕಾಗುತ್ತದೆ. ಬರುವಂತಹ ದಿನಗಳಲ್ಲಿ ಪಕ್ಷಕ್ಕೆ ಯಾವುದೇ ರೀತಿಯ ನಷ್ಟವಾಗದ ರೀತಿಯಲ್ಲಿ ನಾವು ನಡೆದುಕೊಳ್ಳಬೇಕಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

    ನವದೆಹಲಿಯಲ್ಲಿ (New Delhi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಅವರ ವಿಷಯದ ಬಗ್ಗೆ ವರಿಷ್ಠರ ಜೊತೆ ಚರ್ಚಿಸಿ ಮಾತನಾಡುತ್ತೇನೆ. ನಾವು ಸಂಜೆ 6 ಗಂಟೆವರೆಗೂ ಸಂಸತ್ತಿನಲ್ಲಿ ಇದ್ದೆವು. ಅಲ್ಲಿಂದ ಹೊರಗೆ ಬಂದಾಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಉಚ್ಚಾಟನೆಯ ಸುದ್ದಿ ಕೇಳಿ ಬಂದಿತು. ಬಿಜೆಪಿ ಒಂದು ರಾಷ್ಟ್ರೀಯ ಪಕ್ಷ ತನ್ನದೇ ಆದ ನೀತಿ ನಿರ್ಧಾರಗಳನ್ನು ಹಾಕಿಕೊಂಡಿರುವ ಪಕ್ಷ. ಕರ್ನಾಟಕದ ವಿಚಾರದಲ್ಲಿ ಕಳೆದ ಒಂದು ವರ್ಷದಿಂದ ಪಕ್ಷದ ಹೈಕಮಾಂಡ್ ಎಲ್ಲರನ್ನೂ ಕರೆದು ಮಾತನಾಡಿಸಿ ಒಗ್ಗೂಡಿಸುವ ಪ್ರಯತ್ನ ಮಾಡಿದೆ ಎಂದು ಹೇಳಿದರು. ಇದನ್ನೂ ಓದಿ: ಯತ್ನಾಳ್ ಉಚ್ಚಾಟನೆ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಶುರು

    ಈಗ ಶಿಸ್ತು ಮುಖ್ಯ ಎಂದು ಒಂದು ಕಾಲಘಟ್ಟಕ್ಕೆ ಬಂದಿರುವುದರಿಂದ ಕೆಲವರಿಗೆ ನೋಟಿಸ್ ಕೊಟ್ಟಿದ್ದಾರೆ. ಕೆಲವರ ಮೇಲೆ ಕ್ರಮ ಕೈಗೊಂಡಿದ್ದಾರೆ. ಈ ವಿಚಾರವಾಗಿ ಏನೆಲ್ಲಾ ಇದೆ ಎಂದು ವರಿಷ್ಠರನ್ನು ಭೇಟಿ ಮಾಡಿಲ್ಲ. ಆದಷ್ಟು ಎಲ್ಲರನ್ನೂ ಒಂದುಗೂಡಿಸಿ ಕರೆದುಕೊಂಡು ಹೋಗುವುದು ಇಂದಿನ ಅನಿವಾರ್ಯತೆ ಇದೆ ಎಂದು ಹೇಳಿದರು. ಇದನ್ನೂ ಓದಿ: ಯತ್ನಾಳ್‌ ಉಚ್ಛಾಟನೆ – ವಿಜಯಪುರದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು

    ಶಾಸಕ ಯತ್ನಾಳ್ ಅವರಿಗೆ ಎರಡು ಬಾರಿ ನೋಟಿಸ್ ಕೊಟ್ಟಿದ್ದರು. ಅವರು ಅದಕ್ಕೆ ಉತ್ತರ ಕೊಟ್ಟಿದ್ದರು. ಆದರೆ, ಅವರು ಏನು ಉತ್ತರ ಕೊಟ್ಟಿದ್ದರು ಎಂದು ಗೊತ್ತಿಲ್ಲ. ಯಾವ ಕಾರಣಕ್ಕಾಗಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಕೊಳ್ಳುತ್ತೇನೆ. ಇಂತಹ ಕಾಲದಲ್ಲಿ ಒಗ್ಗಟ್ಟಾಗಿ ಹೋಗುವ ಅವಶ್ಯಕತೆ ಇದೆ ಎಂದರು. ಇದನ್ನೂ ಓದಿ: ಜಾತಿ ಕೇಳಿ, ಮತ ಬ್ಯಾಂಕಿನಡಿ ಮಣೆ ಹಾಕುವುದು ಕಾಂಗ್ರೆಸ್ಸಿನ ನೀತಿ, ಮೋದಿ ನೀತಿಯಲ್ಲ: ಈದ್ ಕಿಟ್ ಟೀಕೆಗೆ ಸಿ.ಟಿ.ರವಿ ಟಕ್ಕರ್

    ಯತ್ನಾಳ್ ಅವರನ್ನು ಭೇಟಿ ಮಾಡಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯತ್ನಾಳ್ ಅವರು ಅವರ ಸಕ್ಕರೆ ಕಾರ್ಖಾನೆ ಉದ್ಘಾಟನೆಗೆ ಆಹ್ವಾನ ನೀಡಿದ್ದರು. ಆಮೇಲೆ ಭೇಟಿಯಾಗಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಭಾರತಕ್ಕಿಂತಲೂ ನಾವು ಹಿಂದಿದ್ದೇವೆ – ಚುನಾವಣಾ ವ್ಯವಸ್ಥೆಯನ್ನೇ ಬದಲಿಸಲು ಮುಂದಾದ ಟ್ರಂಪ್‌

    ಪಕ್ಷದಲ್ಲಿ ಇನ್ನಷ್ಟು ಜನರಿಗೆ ನೋಟಿಸ್ ನೀಡಿರುವ ಕುರಿತು ಮಾತನಾಡಿದ ಅವರು, ಉಳಿದವರಿಗೂ ನೋಟಿಸ್ ಕೊಟ್ಟಿದ್ದು, ಅವರು ಏನು ಉತ್ತರ ಕೊಡುತ್ತಾರೆ ಎನ್ನುವುದರ ಮೇಲೆ ಶಿಸ್ತು ಸಮಿತಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತದೆ. ಪಕ್ಷದ ಶಿಸ್ತು ಸಮಿತಿಗೆ ತನ್ನದೇ ಆದ ನಿಯಮಗಳಿವೆ ಎಂದು ಹೇಳಿದರು. ಇದನ್ನೂ ಓದಿ: ದೆಹಲಿಯಲ್ಲಿ ಹೆಚ್‌ಡಿಕೆ ಜೊತೆ ಜಾರಕಿಹೊಳಿ ಸಭೆ

  • ಗುತ್ತಿಗೆಯಲ್ಲಿ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವೇ ಇಲ್ಲ, ಸರ್ಕಾರವೇ ರಾಜೀನಾಮೆ ನೀಡ್ಬೇಕು: ಬೊಮ್ಮಾಯಿ

    ಗುತ್ತಿಗೆಯಲ್ಲಿ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವೇ ಇಲ್ಲ, ಸರ್ಕಾರವೇ ರಾಜೀನಾಮೆ ನೀಡ್ಬೇಕು: ಬೊಮ್ಮಾಯಿ

    – ಹನಿಟ್ರ್ಯಾಪ್‌ ಪ್ರಕರಣ ಕಾಂಗ್ರೆಸ್ ಬುಡಕ್ಕೆ ಬರುತ್ತೆ
    – `ಕೈ’ ಹೈಕಮಾಂಡ್ ಸಿಎಂ ಜೊತೆ ಸೇರಿ ಪ್ರಕರಣ ಮುಚ್ಚಿ ಹಾಕಲು ನೋಡ್ತಿದೆ

    ನವದೆಹಲಿ: ಮುಸ್ಲಿಮರಿಗೆ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡುವ ಮೂಲಕ ಈ ಸರ್ಕಾರ ಸಂವಿಧಾನ ವಿರೋಧಿ ಕೆಲಸಗಳನ್ನು ಮಾಡುತ್ತಿದೆ. ಸಂವಿಧಾನ ವಿರೋಧಿ ಸರ್ಕಾರ ಕರ್ನಾಟಕದಲ್ಲಿದ್ದು, ಈ ಸರ್ಕಾರ ಆಡಳಿತ ನಡೆಸಲು ಯಾವುದೇ ನೈತಿಕ ಹಕ್ಕಿಲ್ಲ. ಇಡೀ ಸರ್ಕಾರವೇ ರಾಜೀನಾಮೆ ನೀಡಬೇಕು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಆಗ್ರಹಿಸಿದರು.

    ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಆಂಧ್ರಪ್ರದೇಶ (Andhra Pradesh) ಹಾಗೂ ಪಶ್ಚಿಮ ಬಂಗಾಳ ಪ್ರಕರಣಗಳಲ್ಲಿ ಧರ್ಮಾಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶ ಇಲ್ಲ ಎಂದು ಸುಪ್ರೀಂಕೋರ್ಟ್ ಬಹಳ ಸ್ಪಷ್ಟವಾಗಿ ಹೇಳಿದೆ. ಆದರೂ, ಇವರು ಧರ್ಮದ ಆಧಾರದಲ್ಲಿ ಮೀಸಲಾತಿ ತರುತ್ತಿದ್ದಾರೆ. ಅದೂ ಕೂಡ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಹೊರಟಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಸಂವಿಧಾನ ತಿದ್ದುಪಡಿಯ ಅಗತ್ಯವೂ ಇಲ್ಲ, ಅನಿವಾರ್ಯತೆಯೂ ಇಲ್ಲ: ಬಿ.ಕೆ.ಹರಿಪ್ರಸಾದ್

    ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಸಂವಿಧಾನದಲ್ಲಿ ಯಾವುದೇ ಅವಕಾಶ ಇಲ್ಲ. ಟೆಂಡರ್‌ನಲ್ಲಿ ಪಾರದರ್ಶಕತೆ ಕಾಯ್ದೆಯನ್ನೇ ರದ್ದು ಪಡಿಸುವುದು ಒಳ್ಳೆಯದು. ಸುಮಾರು ಶೇ.30 ರಿಂದ 40ರಷ್ಟು ಮೀಸಲಾತಿ ನೀಡಿದರೆ ಪಾರದರ್ಶಕತೆಗೆ ಎಲ್ಲಿ ಗೌರವ ಇರುತ್ತದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ:  ಮುಸ್ಲಿಂ ಮೀಸಲಾತಿ ಸಮರ್ಥನೆ ಭರದಲ್ಲಿ ಡಿಕೆ ವಿವಾದ- ಸಂಸತ್‌ನ ಉಭಯ ಸದನಗಳಲ್ಲಿ ಕೋಲಾಹಲ

    ಅಲ್ಲದೇ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರು (Rahul Gandhi) ಯಾವಾಗಲೂ ಸಂವಿಧಾನವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುತ್ತಾರೆ. ಆದರೆ, ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಈ ಬಗ್ಗೆ ಕರ್ನಾಟಕ ಡಿಸಿಎಂ ಡಿ.ಕೆ.ಶಿವಕುಮಾರ್ (D K Shivakumar) ಮಾತನಾಡಿದ್ದಾರೆ. ಮುಸಲ್ಮಾನರಿಗೆ ಮೀಸಲಾತಿ ನೀಡಲು ಸಂವಿಧಾನದಲ್ಲಿ ಅವಕಾಶ ಇಲ್ಲ ಎಂದು ಡಿಕೆಶಿ ಅವರೇ ಒಪ್ಪಿಕೊಂಡಿದ್ದಾರೆ. ಸಂವಿಧಾನ ತಿದ್ದುಪಡಿ ತರುತ್ತೇವೆ ಎಂದು ಹೇಳಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಹಾಲಿನ ದರ ಏರಿಕೆಯ ಒತ್ತಡಕ್ಕೆ ಮಣಿಯದ ಸಿಎಂ – ಇಂದಿನ ಹೈವೋಲ್ಟೇಜ್ ಸಭೆಯಲ್ಲಿ ಏನಾಯ್ತು?

    ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಚುನಾವಣೆಗೂ ಮುಂಚೆ ಬಿಜೆಪಿಯವರು ಸಂವಿಧಾನ ಬದಲಾವಣೆ ಮಾಡುತ್ತಾರೆ ಎಂದು ಹೇಳಿದ್ದರು. ಆದರೆ, ಸಂವಿಧಾನದ ಮೂಲ ಉದ್ದೇಶವನ್ನೇ ಬದಲಾವಣೆ ಮಾಡಿರುವುದು ಕಾಂಗ್ರೆಸ್ ಸರ್ಕಾರ. ಕಾಂಗ್ರೆಸ್ಸಿನ ಮುಖವಾಡ ಕಳಚಿ ಬಿದ್ದಿದೆ ಹೇಳಿದರು. ಇದನ್ನೂ ಓದಿ: 3.5 ಕೋಟಿಗೆ ಖರೀದಿಸಿದ್ದ ಅಪಾರ್ಟ್‌ಮೆಂಟ್‌ 6.6 ಕೋಟಿಗೆ ಮಾರಿದ ಅಕ್ಷಯ್ ಕುಮಾರ್

    ಸಂವಿಧಾನದ ಮೇಲೆ ಪ್ರಮಾಣವಚನ ತೆಗೆದುಕೊಂಡು ಅದರ ವಿರುದ್ಧ ಕೆಲಸ ಮಾಡುತ್ತಾರೆ ಎಂದರೆ ಇದು ಸಂವಿಧಾನ ವಿರೋಧಿ ಅಷ್ಟೇ ಅಲ್ಲ. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿಚಾರಕ್ಕೂ ವಿರುದ್ಧವಾಗಿದೆ. ತುಷ್ಟೀಕರಣದ ಪರಾಕಾಷ್ಟೇ ಮೀರಿದೆ. ತುಷ್ಟೀಕರಣಕ್ಕಾಗಿ ದೇಶವನ್ನು ಒಡೆಯುವ ತೀರ್ಮಾನ ತೆಗೆದುಕೊಳ್ಳುವುದು ಸಂವಿಧಾನಿಕ ಹುದ್ದೆಯಲ್ಲಿರುವವರಿಗೆ ಇದು ನ್ಯಾಯಾನಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ:  ಪತ್ನಿಗೆ 9 ಕೋಟಿ ಜೀವನಾಂಶ, ತಿಂಗಳಿಗೆ 4 ಲಕ್ಷ – ಭಾರೀ ಸಂಚಲನ ಸೃಷ್ಟಿಸಿದ ಟೆಕ್ಕಿ ಪೋಸ್ಟ್

    ಸ್ವಾತಂತ್ರ‍್ಯ ಬಂದಾಗ ಕಾಂಗ್ರೆಸ್‌ನವರು ತನ್ನ ಆಡಳಿತಕ್ಕಾಗಿ ದೇಶ ವಿಭಜನೆ ಮಾಡಿದರು. ಶಾಭಾನು ಪ್ರಕರಣದಲ್ಲಿ ಕುರ್ಚಿ ಉಳಿಸಿಕೊಳ್ಳಲು ಕಾನೂನು ಬದಲಾವಣೆ ಮಾಡಿದ್ದರು. ಈಗ ಸಂವಿಧಾನವನ್ನೇ ಬದಲಾವಣೆ ಮಾಡಲು ಹೊರಟಿದ್ದಾರೆ. ರಾಹುಲ್ ಗಾಂಧಿಯವರಿಗೆ ಇನ್ನು ಮುಂದೆ ಸಂವಿಧಾನವನ್ನು ಹಿಡಿಕೊಳ್ಳುವ ಯಾವುದೇ ನೈತಿಕ ಹಕ್ಕಿಲ್ಲ. ಈ ಸರ್ಕಾರ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಸಂಸದರ ಸಂಬಳ 24% ಏರಿಕೆ – ಈಗ ಎಷ್ಟಿದೆ? ಎಷ್ಟು ಏರಿಕೆಯಾಗಿದೆ?

    ಕಾಂಗ್ರೆಸ್ ಬುಡಕ್ಕೆ ಹನಿಟ್ರ್ಯಾಪ್‌
    ಹನಿಟ್ರ‍್ಯಾಪ್ ಕುರಿತು ಪ್ರತಿಕ್ರಿಯಿಸಿದ ಅವರು, ಹನಿಟ್ರ‍್ಯಾಪ್ ವಿಚಾರದಲ್ಲಿ ಮತ್ತೆ ರಾಜಕಾರಣ ಶುರುವಾಗಿದೆ. ಸಹಕಾರ ಸಚಿವ ಕೆ.ಎನ್.ರಾಜಣ್ಣ (K N Rajanna) ಅವರು ವಿಧಾನಸಭೆಯಲ್ಲಿ ತಮ್ಮದಷ್ಟೇ ಅಲ್ಲ 48 ಜನರ ಹನಿಟ್ರ‍್ಯಾಪ್ ಆಗಿದೆ ಅಂತ ಹೇಳಿದ್ದಾರೆ. ಇದು ಬಹಳ ಗಂಭೀರ ವಿಷಯ. ಅವರು ದೂರು ಕೊಡುತ್ತೇನೆ ಅಂತ ಹೇಳಿದ್ದರು. ಇನ್ನು ದೂರು ಕೊಟ್ಟಿಲ್ಲ. ತನಿಖೆಯೂ ನಡೆಯುತ್ತಿಲ್ಲ ಎಂದರು.

    ಈಗ ಕಾಂಗ್ರೆಸ್ ಹೈಕಮಾಂಡ್ ಇದರಲ್ಲಿ ಮಧ್ಯ ಪ್ರವೇಶ ಮಾಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikharjun Kharge) ಹಾಗೂ ಸಿಎಂ ಸಿದ್ದರಾಮಯ್ಯ ಅವರ ನಡುವೆ ಈ ಪ್ರಕರಣ ಮುಚ್ಚಿಹಾಕುವ ಕುರಿತು ಚರ್ಚೆ ನಡೆದಿದೆ. ಕಾಂಗ್ರೆಸ್‌ನ ಬುಡಕ್ಕೆ ಈ ಪ್ರಕರಣ ಬರುತ್ತದೆ ಎಂದು ಅವರಿಗೆ ಗೊತ್ತಾಗಿದೆ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರೀಲ್ಸ್ ತಂದ ಆಪತ್ತು- ರಜತ್, ವಿನಯ್‌ ಅರೆಸ್ಟ್‌

    ಡಿಸಿಎಂ ಹೇಳಿಕೆಯನ್ನು ನೋಡಿದಾಗ ಇವರು ರಾಜ್ಯವನ್ನು ಆರ್ಥಿಕವಾಗಿ ಹಾಳು ಮಾಡಿದ್ದಾರೆ. ನೈತಿಕವಾಗಿಯೂ ರಾಜ್ಯವನ್ನು ಹಾಳು ಮಾಡಿದ್ದಾರೆ. ಈಗ ಸಂವಿಧಾನ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಇದು ಜನವಿರೋಧಿ ಸರ್ಕಾರ ಇದು ಎಷ್ಟು ಬೇಗ ತೊಲಗುತ್ತದೆಯೋ ಅಷ್ಟು ಕರ್ನಾಟಕಕ್ಕೆ ಒಳ್ಳೆಯದಾಗುತ್ತದೆ ಎಂದು ಹೇಳಿದರು.

  • ಮನಿ ಕ್ರೈಸಿಸ್ ಇತ್ತು ಈಗ ಹನಿ ಕ್ರೈಸಿಸ್ ಶುರುವಾಗಿದೆ: ಬೊಮ್ಮಾಯಿ

    ಮನಿ ಕ್ರೈಸಿಸ್ ಇತ್ತು ಈಗ ಹನಿ ಕ್ರೈಸಿಸ್ ಶುರುವಾಗಿದೆ: ಬೊಮ್ಮಾಯಿ

    -`ಕೈ’ ಹಾಕಿದ ಕಡೆಯಲ್ಲ ಹಗರಣ, 2 ವರ್ಷಗಳಲ್ಲಿ 10 ಹಗರಣ ಆಚೆ ಬಂದಿದೆ

    ನವದೆಹಲಿ: ಕಾಂಗ್ರೆಸ್ (Congress) ಸಸರ್ಕಾರ ಹಾಕಿದ ಕಡೆಯಲ್ಲ ಹಗರಣ, 2 ವರ್ಷಗಳಲ್ಲಿ 10 ಹಗರಣ ಆಚೆ ಬಂದಿದೆ ಎಂದು ಬಿಜೆಪಿ ಸಂಸದ ಬಸವರಾಜ್ ಬೊಮ್ಮಾಯಿ (Basavaraj Bommai) ಹೇಳಿದರು.

    ನವದೆಹಲಿಯಲ್ಲಿ (New Delhi) ಮಾಧ್ಯಮದವರೊಂದಿಗೆ ಜನಪ್ರತಿನಿಧಿಗಳ ಮೇಲೆ ಹನಿಟ್ರ‍್ಯಾಪ್ ವಿಚಾರವಾಗಿ ಮಾತನಾಡಿದ ಅವರು, ಹನಿಟ್ರ‍್ಯಾಪ್ ಕುಖ್ಯಾತಿ ಕರ್ನಾಟಕದ ಗೌರವವನ್ನು ಕಡಿಮೆ ಮಾಡಿದೆ. ಇದನ್ನು ಬಹಳ ಸೂಕ್ಷ್ಮವಾಗಿ ಹೇಳುತ್ತಿದ್ದೇನೆ. ಕಾಂಗ್ರೆಸ್‌ನ ಅಧಿಕಾರದ ಲಾಲಸ್ಯ ನೈತಿಕತೆಯನ್ನು ಅಧೋಗತಿಗೆ ತೆಗೆದುಕೊಂಡಿದೆ. ಒಂದು ಹಗರಣದಿಂದ ಮತ್ತೊಂದು ಹಗರಣ ಆಗುತ್ತಿದೆ. ಎರಡು ವರ್ಷದಲ್ಲಿ ಹತ್ತು ಹಗರಣ ಆಚೆ ಬಂದಿದೆ. ಕೈ ಹಾಕಿದ ಕಡೆಯಲ್ಲ ಹಗರಣ ಬರುತ್ತಿದೆ ಎಂದರು.ಇದನ್ನೂ ಓದಿ:ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕ ಸಾವು

    ವಿಧಾನಸಭೆಯಲ್ಲಿ ನೈತಿಕ ಅಧಪತನ ನೋಡಿದ್ದೇವೆ. ಮನಿ ಕ್ರೈಸಿಸ್ ಇತ್ತು ಈಗ ಹನಿ ಕ್ರೈಸಿಸ್ ಶುರುವಾಗಿದೆ. ಸರ್ಕಾರ ಆರ್ಥಿಕವಾಗಿ, ನೈತಿಕವಾಗಿ ದಿವಾಳಿಯಾಗಿದೆ. ಕ್ಯಾಬಿನೆಟ್ ಸಚಿವರು ಹಬಿಟ್ರ‍್ಯಾಪ್ ಆಗುತ್ತಿದೆ ಎಂದು ಹೇಳುವ ಪರಿಸ್ಥಿತಿ ಬಂದಿದೆ. ಹದಿನೈದು ದಿನದಿಂದ ವಿಧಾನಸೌಧದ ಮೊಗಸಾಲೆಯಲ್ಲಿ ಚರ್ಚೆಯಾಗುತ್ತಿದೆ. ಇಂತಹ ಕ್ಯಾಬಿನೆಟ್‌ಗೆ ಏನು ಹೇಳಬೇಕು. ಇದು ನೈತಿಕತೆ ಕಳೆದುಕೊಂಡ ಕ್ರಿಮಿನಲ್ ಕ್ಯಾಬಿನೆಟ್. ಸಿಎಂ ನೈತಿಕ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಬೇಕು ಎಂದು ಕಿಡಿಕಾರಿದರು.

    48 ಜನರ ಸಿಡಿ ಎಂದು ರಾಜಣ್ಣ ಹೇಳಿದ್ದಾರೆ, ಅವರಿಗೆ ಮಾಹಿತಿ ಇದ್ದರೆ ಅವರು ಎಲ್ಲ ಮಾಹಿತಿಯನ್ನು ಕೊಡಬೇಕು. ಪೂರ್ಣ ಪ್ರಮಾಣದ ತನಿಖೆಯಾಗಬೇಕು. ಇದನ್ನು ಯಾರೇ ಮಾಡಿದರೂ ಅವರಿಗೆ ಶಿಕ್ಷೆಯಾಗಬೇಕು. ಈಗ ಎಸ್‌ಐಟಿಗಳಿಗೆ ಮಹತ್ವವಿಲ್ಲ. ಹೀಗಾಗಿ ನಿವೃತ್ತ ಅಥವಾ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಬೇಕು ಎಂದು ತಿಳಿಸಿದರು.ಇದನ್ನೂ ಓದಿ:ಸಿಎಂ ಕುರ್ಚಿಗಾಗಿ ಹನಿಟ್ರ‍್ಯಾಪ್ – ಸರ್ಕಾರದಲ್ಲಿ ದಲಿತ ಮಂತ್ರಿಗೆ ರಕ್ಷಣೆ ಇಲ್ಲ: ಅಶೋಕ್‌