ಹುಬ್ಬಳ್ಳಿ: ಕೋವಿಡ್ ಬಗ್ಗೆ ಕೇಂದ್ರ ಸರ್ಕಾರ ಈಗಾಗಲೇ ಜಾಗೃತಿ ಸೂಚನೆ ಕೊಟ್ಟಿದ್ದು, ಇಡೀ ರಾಷ್ಟçದಲ್ಲಿ ಕೋವಿಡ್ ಹೆಚ್ಚಳವಾಗಿರುವ ಪರಿಸ್ಥಿತಿಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 8-10 ದಿನಗಳಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈಗಾಗಲೇ ಕೇರಳ, ಮಹಾರಾಷ್ಟ್ರದಲ್ಲಿ ಹೆಚ್ಚಾಗಿದೆ. ಆದ್ದರಿಂದ ಕೋವಿಡ್ ಬಗ್ಗೆ ಕೇಂದ್ರ ಸರ್ಕಾರ ಈಗಾಗಲೇ ಜಾಗೃತಿ ಸೂಚನೆ ಕೊಟ್ಟಿದೆ. ಕೋವಿಡ್ ತಜ್ಞರಿಂದಲೂ ಸೂಚನೆ ಸಿಕ್ಕಿದೆ. ಕೋವಿಡ್ 2ನೇ ಅಲೆ ಬಂದಾಗ ತುಂಬಾ ಗಂಭೀರವಾಗಿತ್ತು. ಆದರೀಗ ಒಮಿಕ್ರಾನ್ ಯಾವ ರೀತಿಯಲ್ಲಿದೆ ಅನ್ನೋದನ್ನು ಪರಿಶೀಲಿಸಬೇಕಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸರ್ಕಾರಿ ಉದ್ಯೋಗದ ಆಮೀಷವೊಡ್ಡಿ ಮಹಿಳೆಯಿಂದ ವಂಚನೆ
ಇದೇ ವೇಳೆ ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಇ-ಮೇಲ್ ಅನ್ನು ದುಬೈ, ಸೌದಿ ಅರೇಬಿಯಾದಿಂದಲೂ ಮೇಲ್ ಮಾಡುವ ಸಾಧ್ಯತೆಗಳಿವೆ. ಈ ಬಗ್ಗೆ ಕೇಂದ್ರ ಸರ್ಕಾರದ ಸಹಕಾರದಿಂದ ಪತ್ತೆಹಚ್ಚುವ ಕಾರ್ಯ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಪಿಎಸ್‌ಐ ನೇಮಕಾತಿಯ ಯಾವುದೇ ಬ್ಯಾಚ್‌ನಲ್ಲಿ ಅಕ್ರಮವಾಗಿದ್ದರೂ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಆರ್.ಟಿ.ನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕ ಪ್ರಿಯಾಂಕ ಖರ್ಗೆ ಬಿಡುಗಡೆ ಮಾಡಿರುವ ಆಡಿಯೋ ನಾನೂ ಕೇಳಿಲ್ಲ. ಆದರೆ, ಯಾವ ಮೆಟೀರಿಯಲ್ ಇದ್ದರೂ ತನಿಖೆಯಾಗುತ್ತದೆ. ಇಬ್ಬರ ನಡುವೆ ಮಾತುಕತೆಯಾಗಿದೆ. ಅವರಿಬ್ಬರು ಯಾರು? ಅವರ ಅರ್ಹತೆ ಏನೆಂಬುದು ತನಿಖೆಯಲ್ಲಿ ತಿಳಿಯುತ್ತದೆ. ಆಡಿಯೋವನ್ನೂ ತನಿಖೆಗೆ ಒಳಪಡಿಸಿ ಯಾರೇ ತಪ್ಪಿತಸ್ಥರಿದ್ದರೂ, ಯಾವುದೇ ಬ್ಯಾಚ್‌ನವರಾಗಿದ್ದರೂ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಶಾಂತಿ ದೃಷ್ಟಿಯಿಂದ ಬುಲ್ಡೋಜರ್ ಕ್ರಮ ಅವಶ್ಯ: ಮುತಾಲಿಕ್
ಇದೇ ವೇಳೆ `ಕಳೆದ 15 ದಿನಗಳ ಹಿಂದೆ ಶಾಲೆಗಳಿಗೆ ಬಂದಿದ್ದ ಬಾಂಬ್ ಬೆದರಿಕೆ ಇ-ಮೇಲ್ ಸಿರಿಯಾ ಹಾಗೂ ಪಾಕಿಸ್ತಾನದಿಂದ ಬಂದಿದೆ’ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಇ-ಮೇಲ್ ಮೂಲವನ್ನು ಪತ್ತೆಹಚ್ಚಲಾಗುವುದು. ಈ ಕುರಿತು ಇ-ಮೇಲ್ ಮೂಲವನ್ನು ಪತ್ತೆಹಚ್ಚಲು ಪೊಲೀಸ್ ಆಯುಕ್ತರೊಂದಿಗೆ ಮಾತನಾಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಪಿಎಸ್‌ಐ ನೇಮಕಾತಿ ಆದೇಶ ಕೈ ಸೇರುವ ಮುನ್ನವೇ ಯೂನಿಫಾರ್ಮ್ ಹಾಕ್ಕೊಂಡು ಬಿಲ್ಡಪ್
ಇವೆಲ್ಲವೂ ಆಗಾಗ್ಗೆ ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನಗಳಾಗುತ್ತವೆ. ಕಳೆದ ವರ್ಷವೂ ಆಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇ-ಮೇಲ್ ಮೂಲವನ್ನು ಪತ್ತೆ ಹಚ್ಚಲಾಗುವುದು. ಯಾವ ದೇಶದಿಂದ ಬಂದಿದೆ ಎಂದು ಗೊತ್ತಾಗುತ್ತದೆ. ಕೆಲವು ಸಂದರ್ಭದಲ್ಲಿ ಆ ದೇಶದ ಅಧಿಕಾರಿಗಳಿಗೆ ತಿಳಿಸಿ, ಕೆಲವರನ್ನು ಬಂಧಿಸಲಾಗಿದ್ದು, ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರು: ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2ನೇ ಆವೃತ್ತಿ ಮುನ್ನಡೆಸಲು ಬೆಂಗಳೂರು ಸಜ್ಜಾಗಿದೆ. 2ನೇ ಅವೃತ್ತಿಗೆ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರು ನೆರವೇರಿಸಲಿದ್ದಾರೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ತಿಳಿಸಿದರು.
ಪ್ರತಿ ಕ್ರೀಡಾಪಟುವಿಗೂ ಕೆಎಮ್‌ಎಫ್ ತಿನಿಸುಗಳ ಕಿಟ್ ನೀಡಿ ಸ್ವಾಗತಿಸಲಾಗುತ್ತಿದೆ. ಮೇ 3ರ ವರೆಗೆ ನಡೆಯಲಿರುವ ಕ್ರೀಡಾಕೂಟಕ್ಕೆ ಬರುವ ಕ್ರೀಡಾಪಟುಗಳಿಗಾಗಿ ಈಗಾಗಲೇ ಜೈನ್ ಗ್ಲೋಬಲ್ ವಿಶ್ವವಿದ್ಯಾನಿಲಯದಲ್ಲಿ 2800, ಶ್ರೀ ಶ್ರೀರವಿಶಂಕರ್ ಗುರೂಜಿ ಅವರ ಆರ್ಟ್ ಆಫ್ ಲಿವಿಂಗ್‌ನಲ್ಲಿ 1500 ಹಾಗೂ ವಿವಿಧ ಹೋಟೆಲ್‌ಗಳಲ್ಲಿ 1556 ಪ್ರತಿನಿಧಿಗಳಿಗೆ ವಸತಿ ಸೌಲಭ್ಯ ಸಜ್ಜುಗೊಳಿಸಲಾಗಿದೆ. ಕ್ರೀಡಾಕೂಟಕ್ಕಾಗಿ ಬಿಎಂಟಿಸಿ 160 ಬಸ್ಸುಗಳನ್ನು ಒದಗಿಸಿದೆ. 2800 ಕಾರುಗಳನ್ನು ಕ್ರೀಡಾಕೂಟದಲ್ಲಿನ ವಿವಿಧ ಹಂತಗಳ ಪ್ರತಿನಿಧಿಗಳ ಪ್ರಯಾಣಕ್ಕಾಗಿ ಬಳಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: IPL ಶತಕ ಸಿಡಿಸಿ ಮೆರೆದವರು ಯಾರು – ಇಲ್ಲಿದೆ ಟಾಪ್ 10 ಸಿಕ್ಸರ್ ವೀರರ ಪಟ್ಟಿ
ಈ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಪರಿಚಯಿಸಲಾದ ಯೋಗಾಸನ ಮತ್ತು ಮಲ್ಲಕಂಬದಂತಹ ದೇಶೀ ಕ್ರೀಡೆಗಳೊಂದಿಗೆ 20 ಕ್ರೀಡಾ ವಿಭಾಗಗಳಿವೆ. ವೇಯ್ಟ್ ಲಿಫ್ಟಿಂಗ್, ಜೂಡೋ, ಕುಸ್ತಿ, ಕಬ್ಬಡಿ, ವಾಲಿಬಾಲ್, ಈಜು, ಯೋಗಾಸನ, ಆರ್ಚರಿ, ಫೆನ್ಸಿಂಗ್, ಕರಾಟೆ, ಬಾಕ್ಸಿಂಗ್ ಹಾಗೂ ಫುಟ್‌ಬಾಲ್ ಸೇರಿದಂತೆ 13 ವಿಭಾಗಗಳ ಕ್ರೀಡೆಗಳು ಜೈನ್ ಯೂನಿವರ್ಸಿಟಿ ಗ್ಲೋಬಲ್ ಕ್ಯಾಂಪಸ್ ಪ್ರದರ್ಶನಗೊಳ್ಳಲಿವೆ. ಉಳಿದ ಕ್ರೀಡೆಗಳು ಶ್ರೀ ಕಂಠೀರವ ಸ್ಟೇಡಿಯಂ, ದಿ ಜೈನ್ ಸ್ಪೋರ್ಟ್ಸ್ ಸ್ಕೂಲ್, ಸಾಯಿ ನೇತಾಜಿ ಸುಭಾಷ್ ಸದರ್ನ್ ಸೆಂಟರ್ ಮತ್ತು ಕೆ.ಎಂ.ಕಾರಿಯಪ್ಪ ಹಾಕಿ ಸ್ಟೇಡಿಯಂ ಈ ಸ್ಥಳಗಳಲ್ಲಿ ನಡೆಯಲಿವೆ ಎಂದು ವಿವರಿಸಿದರು. ಇದನ್ನೂ ಓದಿ: ಪಠಾಣ್ Vs ಮಿಶ್ರಾ – ಭಾರತ ಶ್ರೇಷ್ಠ ದೇಶವಾಗಬಹುದು ಆದರೆ…
ಪತ್ರಕರ್ತರಿಗೆ ಸೌಲಭ್ಯ: ಎಲ್ಲಾ ಕ್ರೀಡಾಂಗಣಗಳಲ್ಲಿ ಮಾಧ್ಯಮ ಪ್ರತಿನಿಧಿಗಳು ಹಾಗೂ ಪತ್ರಕರ್ತರಿಗೆ ಅನುಕೂಲವಾಗಲು ಮಾಧ್ಯಮ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪ್ರತಿಯೊಂದು ಕ್ರೀಡಾಂಗಣದಲ್ಲಿಯೂ ಉಚಿತ ವೈಫೈ ಸೌಲಭ್ಯವಿರುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್, ಕೇಂದ್ರದ ಕ್ರೀಡಾ ಸಚಿವಾಲಯದ ರಾಜ್ಯ ನಿಶಿತ್ ಪ್ರಮಾಣಿಕ್, ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ್ ಎಸ್.ಹೊರಟ್ಟಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸುವರು. ಆಹ್ವಾನಿತರನ್ನು ಹೊರತುಪಡಿಸಿ, ಉಳಿದೆಲ್ಲರಿಗೂ ಕ್ರೀಡಾಂಗಣದ ಹಿರಗೆ ಬೃಹತ್ ಪರದೆಯ ಮೇಲೆ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಇದಲ್ಲದೆ, ಆಕಾಶವಾಣಿ, ರೇಡಿಯೋ ಸಿಟಿ, ಡಿಡಿ ಸ್ಪೋರ್ಟ್ಸ್ ನಲ್ಲಿ ನೇರಪ್ರಸಾರವಾಗಲಿದೆ ಎಂದು ನಾರಾಯಣಗೌಡ ಮಾಹಿತಿ ನೀಡಿದರು.
ಬೆಂಗಳೂರು: ಹಿಜಬ್ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಅರ್ಜಿಸಲ್ಲಿಸಿದ ವಿದ್ಯಾರ್ಥಿಗಳ ಪೈಕಿ ಅಲಿಯಾ ಅಸ್ಸಾದಿ ಎಂಬ ವಿದ್ಯಾರ್ಥಿನಿ, ಹಿಜಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮತ್ತೆ ಮನವಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಇದೇ ತಿಂಗಳ 22ರಿಂದ ದ್ವಿತೀಯ ಪಿಯು ಪರೀಕ್ಷೆಗಳು ಆರಂಭವಾಗಲಿವೆ. ನಮ್ಮ ಭವಿಷ್ಯ ಹಾಳಾಗದಂತೆ ತಡೆಯಲು ಇನ್ನೂ ನಿಮಗೆ ಅವಕಾಶವಿದೆ. ಹಾಗಾಗಿ ನಮಗೆ ಹಿಜಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡುವ ನಿರ್ಧಾರ ಮಾಡಬೇಕು. ನಾವು ದೇಶದ ಭವಿಷ್ಯ ಎಂದು ಹೇಳಿಕೊಂಡಿದ್ದಾರೆ. ಹಿಜಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಪೈಕಿ ಅಲಿಯಾ ಅಸ್ಸಾದಿ ಕೂಡ ಒಬ್ಬರು. ಇತರ ಅರ್ಜಿದಾರರಲ್ಲಿ ಆಯಿಷಾ ಪಾಲವ್ಕರ್, ಆಯಿಷಾ ಹಜಾರಾ ಅಲ್ಮಾಸ್ ಮತ್ತು ಮುಸ್ಕಾನ್ ಜೈನಾಬ್ ಸೇರಿದ್ದಾರೆ. ಇದನ್ನೂ ಓದಿ: ದ್ವಿತೀಯ ಪಿಯುಸಿ ಎಕ್ಸಾಂಗೂ ಸಮವಸ್ತ್ರ ಕಡ್ಡಾಯ – ಹಿಜಬ್‍ಗಿಲ್ಲ ಅವಕಾಶ
ಶಾಲೆಯಲ್ಲಿ ವಿದ್ಯಾರ್ಥಿಗಳು ಸಮವಸ್ತ್ರ ಪಾಲಿಸಬೇಕೆಂಬ ಕರ್ನಾಟಕ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿತ್ತು. ಅಷ್ಟೇ ಅಲ್ಲದೇ ಹಿಜಬ್ ಮುಸ್ಲಿಂ ಧರ್ಮದ ಕಡ್ಡಾಯ ಆಚರಣೆ ಭಾಗವಲ್ಲ ಎಂದು ಮಹತ್ವದ ತೀರ್ಪು ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಕೆಯಾಗಿತ್ತು. ಆನಂತರ ಸುಪ್ರೀಂಕೋರ್ಟ್ 2 ಬಾರಿ ತುರ್ತು ವಿಚಾರಣೆಯನ್ನು ಮುಂದೂಡಿತು. ವಿದ್ಯಾರ್ಥಿನಿ ಆಯಿಷಾ ಪರ ವಕೀಲ ದೇವದತ್ ಕಾಮತ್ ತುರ್ತು ಅರ್ಜಿ ವಿಚಾರಣೆ ನಡೆಸಬೇಕು. ಶಾಲೆಯಲ್ಲಿ ಪ್ರವೇಶಕ್ಕೆ ನಿರ್ಬಂಧ ವಿಧಿಸಿದರೆ 1 ವರ್ಷ ಹಾಳಾಗುತ್ತದೆ. ಹಾಗಾಗಿ ಶೀಘ್ರ ವಿಚಾರಣೆ ನಡೆಸಬೇಕು ಎಂದು ಮುಖ್ಯ ನ್ಯಾಯಾಧೀಶ ರಮಣ ಪೀಠದಲ್ಲಿ ಮನವಿ ಮಾಡಿದ್ದರು. ಇದನ್ನೂಓದಿ: ಹಿಜಬ್‍ಗೂ ಪರೀಕ್ಷೆಗೂ ಸಂಬಂಧವಿಲ್ಲ, ತುರ್ತು ವಿಚಾರಣೆ ನಡೆಸಲ್ಲ: ಸುಪ್ರೀಂ
2nd PU exams are going to start from 22nd of this month. Hon'ble CM @BSBommai you still have a chance to stop our future from getting ruined. You can make a decision to allow us to write exams wearing hijab. Please consider this.We are the future of this country.#HijabisOurRight
ಇದಕ್ಕೆ ಅಸಮಧಾನಗೊಂಡ ಸಿಜೆಐ, ಪ್ರಕರಣಕ್ಕೂ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ. ಸಮಸ್ಯೆಯನ್ನು ಸೂಕ್ಷ್ಮಗೊಳಿಸಬೇಡಿ ಎಂದು ಹೇಳಿ ಮನವಿಯನ್ನು ತಿರಸ್ಕರಿಸಿ ಮತ್ತೊಂದು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡರು. ಈ ಹಿಂದೆಯೇ ತುರ್ತು ವಿಚಾರಣೆ ಕೈಗೊಳ್ಳುವಂತೆಯೂ ಮನವಿ ಮಾಡಿದಾಗ ಹೋಳಿ ಹಬ್ಬದ ರಜೆಯ ಬಳಿಕ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿತ್ತು. ಈ ನಡುವೆ ವಿದ್ಯಾರ್ಥಿಗಳು ಹಿಜಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಅಲಿಯಾ ಅಸ್ಸಾದಿ ಮತ್ತೊಮ್ಮೆ ಸಿಎಂ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ.
ಬೆಂಗಳೂರು: ಯಶವಂತಪುರ ವೃತ್ತದ ಬಳಿ ನಿರ್ಮಿಸಲಾಗಿರುವ ಪಟೇಲ್ ಭೈರಹನುಮಯ್ಯ ಬಹುಮಹಡಿ ವಸತಿ ನಿಲಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಲೋಕಾರ್ಪಣೆಗೊಳಿಸಿದ್ದಾರೆ.
ಅಂಬೇಡ್ಕರ್ 131ನೇ ಜಯಂತಿ ಹಿನ್ನೆಲೆಯಲ್ಲಿ ಮೊದಲು ಯಶವಂತಪುರ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಸಿಎಂ ಮಾಲಾರ್ಪಣೆ ಮಾಡಿದ್ದಾರೆ ನಂತರ ಬಹುಮಹಡಿ ವಸತಿ ನಿಲಯವನ್ನು ಲೋಕಾರ್ಪಣೆಗೊಳಿಸಿ ತೆರಳಿದ್ದಾರೆ. ಸಿಎಂಗೆ ಸಚಿವರಾದ ಅಶ್ವತ್ಥ್ ನಾರಾಯಣ, ಮುನಿರತ್ನ, ನಿರಾಣಿ, ಸಂಸದ ಸದಾನಂದಗೌಡ ಸೇರಿದಂತೆ ಪ್ರಮುಖ ಗಣ್ಯರು ಸಾಥ್ ನೀಡಿದ್ದಾರೆ. ಇದನ್ನೂ ಓದಿ: ಇತ್ತೀಚೆಗೆ ರಾಜ್ಯದಲ್ಲಿ ನಡೆಯುತ್ತಿರುವ ಘಟನೆಗಳು ತುಂಬಾ ನೋವುಂಟು ಮಾಡಿದೆ : ಯದುವೀರ್ ಒಡೆಯರ್
ಸುಮಾರು 5.5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಬಹುಮಹಡಿ ಕಟ್ಟಡವು 60 ಮನೆಗಳನ್ನು ಒಳಗೊಂಡಿದೆ. ಇದೇ ವೇಳೆ ಸಿಎಂ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳಿಗೂ ಶಂಕು ಸ್ಥಾಪನೆ ನೆರವೇರಿಸಿದ್ದಾರೆ.
ಮೈಸೂರು: ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಮಿಷಕ್ಕೊಂದು ಹೇಳಿಕೆ ನೀಡುತ್ತಿರುವ ಅರಗ ಜ್ಞಾನೇಂದ್ರ ಅವರು ಕಾಮಿಡಿ ರೋಲ್ ಮಾಡಲು ಗೃಹ ಸಚಿವರಾಗಿದ್ದಾರಾ? ಅಥವಾ ವಿಲನ್ ರೋಲ್ ಮಾಡುತ್ತೀದ್ದಿರಾ? ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊಲೆಯಾದ ಚಂದ್ರು ದಲಿತ ಸಮಾಜದ ಯುವಕ ಅಂತಾ ಗೃಹ ಸಚಿವರು ಹೇಳಿದ್ದಾರೆ. ಆದರೆ, ಇಂದು ನೀಡುತ್ತಿರುವ ಹೇಳಿಕೆಗಳು ಅವರ ಸಣ್ಣತನವನ್ನು ತೋರಿಸುತ್ತದೆ. ಸಮಾಜದ ಶಾಂತಿ ಕದಡುವ ವೇಳೆ, ಗೃಹ ಸಚಿವರಿಗೆ ತಮ್ಮ ಸ್ಥಾನದ ಜವಾಬ್ದಾರಿ ಅರಿವಿಲ್ಲದಂತಾಗಿದೆ. ಇದರಲ್ಲಿ ಯಾವುದು ಸತ್ಯ ಎಂಬುದು ತಿಳಿಯದೇ ಮಂತ್ರಿಯೇ ತನಿಖೆಗೆ ಮುನ್ನ ತೀರ್ಪು ಕೊಟ್ಟಿದ್ದಾರೆ. ಹಿಂದೂ ಮುಸ್ಲಿಂ ಮಧ್ಯೆ ಕಂದಕ ತರುವ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ದೂರಿದ್ದಾರೆ. ಇದನ್ನೂಓದಿ: ಉರ್ದು ಮಾತನಾಡಲು ಬರದಕ್ಕೆ ಚಂದ್ರು ಕೊಲೆ: ಆರಗ
ಮೌನ ಮುರಿಯಲಿ ಸಿಎಂ: ಮುಖ್ಯಮಂತ್ರಿಗಳ ಮೌನ ರಾಜ್ಯದಲ್ಲಿ ಅನಾಹುತ ಮಾಡುತ್ತದೆ. ಇಂತಹ ಘಟನೆಗಳನ್ನು ಸರ್ಕಾರ ಪ್ರಾರಂಭಿಕ ಹಂತದಿಂದಲೇ ಸರಿಪಡಿಸಬೇಕು. ಗೃಹಸಚಿವರ ಹೇಳಿಕೆಯಿಂದ ಹಿಂದೂ ಮುಸ್ಲಿಮರ ನಡುವೆ ಸಾಮರಸ್ಯ ಹಾಳಾಗುತ್ತಿದೆ. ಇದರಲ್ಲಿ ನಾನು ಯಾವುದೇ ಸಮಾಜದ ಓಲೈಕೆ ಮಾಡುತ್ತಿಲ್ಲ. ರಾಜ್ಯದ ಎಲ್ಲ ಜನರೂ ನನಗೆ ಮುಖ್ಯ. ಆದ್ದರಿಂದ ಮುಖ್ಯಮಂತ್ರಿಗಳು ಎಚ್ಚೆತ್ತುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಚಿಕನ್ ಖರೀದಿ ಮಾಡುವಾಗ ಗಲಾಟೆ – ಯುವಕ ಬರ್ಬರ ಹತ್ಯೆ
ಸಿನಿಮಾಗಳೇ ಕೃತ್ಯಗಳಿಗೆ ಪ್ರೇರಣೆ: ಇತ್ತೀಚಿನ ದಿನಗಳಲ್ಲಿ ಸಿನಿಮಾಗಳೇ ಹುಡುಗರಿಗೆ ಈ ರೀತಿಯ ಕೃತ್ಯ ಎಸಗಲು ಪ್ರೇರಣೆ ನೀಡುತ್ತಿವೆ. ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದ್ದು, ಇಂತಹ ಸಿನಿಮಾಗಳನ್ನು ಮಾಡಂದತೆ ನಿರ್ದೇಶಕರಿಗೂ ಎಚ್ಚರ ವಹಿಸಬೇಕು. ಈ ಪ್ರಕರಣದಲ್ಲಿ ಮುಸ್ಲಿಂ ಯುವಕರು ಎಂದು ಕನಿಕರ ತೋರದೇ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಬೇರೆ ಬೇರೆ ವಿಚಾರಕ್ಕೆ ಕೊಲೆಯಾದವು, ಆದರೆ, ಕೊಲೆ ವಿಚಾರದಲ್ಲಿ ಬಿಜೆಪಿ ಸೆಲೆಕ್ಟಿವ್ ಆಗಿ ಕಾರ್ಯ ಪ್ರವೃತವಾಗುತ್ತದೆ ಇದು ಸರಿಯಲ್ಲ ಎಂದು ಕುಟುಕಿದರು.
ಇದೇ ವೇಳೆ ಸಮಾಜ ಹಾಳು ಮಾಡಿ, ಕುಟುಂಬಗಳ ಬೀದಿಗೆ ತಂದು ಮತ್ತೆ ಸಿಎಂ ಆಗುವ ಆಸೆ ನನಗೆ ಇಲ್ಲ. ನಾನು ಎರಡು ರಾಜಕೀಯ ಪಕ್ಷಗಳನ್ನು ಈ ರಾಜ್ಯದಿಂದ ಕಿತ್ತಾಕುವ ಸುಪಾರಿಯನ್ನು ಜನರಿಂದ ಪಡೆದಿದ್ದೇನೆ. ನಾನು ಯಾವ ಸಮಾಜದ ಓಲೈಕೆಗೂ ರಾಜಕಾರಣ ಮಾಡುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು: ಹಲಾಲ್ ಕಟ್, ಜಟ್ಕಾ ಕಟ್ ಬಿಟ್ಟುಬಿಡಿ. ಬೆಲೆ ಏರಿಕೆ ವಿರುದ್ಧ ಹೋರಾಡಿ. ನಾನೂ ಕೇಸರಿ ಶಾಲು ಧರಿಸಿ ಹೋರಾಟಕ್ಕೆ ಬರುತ್ತೇನೆ. ಬೆಲೆ ಏರಿಕೆ ವಿರುದ್ಧ ಹೋರಾಟಕ್ಕೆ ರೆಡಿ ಇದ್ದೀರಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.
ಬೆಂಗಳೂರಿನ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಸ್ಲೀಂ ವ್ಯಾಪಾರಿಗಳಿಗೆ ನಿರ್ಬಂಧ, ಹಲಾಲ್ ಕಟ್, ಹಿಜಬ್ ವಿವಾದ ಸೇರಿದಂತೆ ಭಜರಂಗದಳ, ಹಿಂದೂಪರ ಸಂಘಟನೆಗಳ ವಿರುದ್ಧ ಟೀಕಾಪ್ರಹಾರ ಮುಂದುವರೆಸಿದರು.
ಎಲ್ಲಿ ಇತ್ತು ಜಾತಿ ವ್ಯವಸ್ಥೆ? ಎಲ್ಲಿ ಇತ್ತು ಹಿಂದೂ ದೇಶ? ಎಲ್ಲವೂ ನಮ್ಮನಮ್ಮ ಅನುಕೂಲಕ್ಕೆ ಮಾಡಿಕೊಂಡದ್ದು. ಧರ್ಮ ವಿಭಜನೆ ಮಾಡಿ ಮಜಾ ತಗೊಳ್ಳುವವರು, ಉರಿಯುವ ಮನೆಯಲ್ಲಿ ಗಳ ಇರಿಯೋ ಕಾಯಕ ಮಾಡ್ತಿದ್ದೀರಿ. ಬಿಜೆಪಿ ಹಿಂದೂ ಧರ್ಮದಲ್ಲಿ ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡಿಲ್ಲ, ಅವರಿಗೆ ಬೇಕಾದಗ ಮಾತ್ರ ಒಟ್ಟಿಗೆ ತೆಗೆದುಕೊಳ್ಳುತ್ತಾರೆ. ಇದನ್ನೆಲ್ಲಾ ಇಲ್ಲಿಗೇ ನಿಲ್ಲಿಸಿ, ಬಡವರನ್ನ ರಕ್ಷಿಸಿ ಎಂದು ಕರೆನೀಡಿದ್ದಾರೆ. ಇದನ್ನೂ ಓದಿ: ಗಂಡಸ್ತನ ಪದ ಬಳಕೆಗೆ ಹೆಚ್.ಡಿ.ಕುಮಾರಸ್ವಾಮಿ ವಿಷಾದ
ಬಿಜೆಪಿ ಜನರನ್ನು ನಿರ್ಗತಿಕರನ್ನಾಗಿ ಮಾಡುತ್ತಿದೆ. ಇದರಲ್ಲಿ ಕಾಂಗ್ರೆಸ್ ಪಾಲೂ ಇದೆ ಎರಡು ರಾಷ್ಟ್ರೀಯ ಪಕ್ಷಗಳು 150ರ ರೋಡ್ ಮ್ಯಾಪ್ ಪ್ಲಾನ್ ಮಾಡಿಕೊಂಡು ಮನೆ ಮನೆಗೆ ಬೆಂಕಿ ಹಚ್ಚಲು ಹೊರಟ್ಟಿದ್ದಾರೆ. ಕಳೆದ ಚುನಾವಣೆಯಲ್ಲಿ ಜೆಡಿಎಸ್ ಅನ್ನು ಬಿಜೆಪಿಯ ಬಿ-ಟೀಮ್ ಎಂದು ಸಾರಿದ್ದ ಸಿದ್ದರಾಮ್ಯಯ ಅವರೇ ಈಗೇನು ದೊಡ್ಡ ಸಾಧನೆ ಮಾಡಿದ್ದೀರಾ? ಹಿಜಬ್ ಹೆಸರು ಹೇಳ್ಬೇಡಿ ಹಿಂದೂ ಓಟ್ ಹೋಗುತ್ತೆ ಎಂದು ನಿಮ್ಮ ಅಧ್ಯಕ್ಷರೇ ಹೇಳಿದ್ದಾರೆ. ಹಿಂದೂ ಮುಸ್ಲಿಂ ನವರು ದಡ್ಡರಲ್ಲ. ವಿಶ್ವ ಹಿಂದೂ ಪರಿಷತ್‌ನವರು ಬೆಂಕಿ ಹಚ್ಚಲು ಬರುತ್ತಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ಬಹಳ ಸಲ ಗಂಡಸ್ತತನ ಪ್ರೂವ್ ಮಾಡಿದ್ದಾರೆ: ಸಿ.ಟಿ.ರವಿ
ಮೌನಿ ಬಾಬಾ ಬೊಮ್ಮಾಯಿ: ಇದೇ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಮೌನದ ಬಗ್ಗೆ ಟೀಕಿಸಿರುವ ಹೆಚ್.ಡಿ.ಕುಮಾರಸ್ವಾಮಿ, ಇಷ್ಟೆಲ್ಲಾ ವಿವಾದ ಇದ್ದರೂ ಸಿಎಂ ಬಸವರಾಜ ಬೊಮ್ಮಾಯಿ ಮೌನಿ ಬಾಬಾ ಆಗಿದ್ದಾರೆ. ಮನ್ ಮೋಹನ್ ಸಿಂಗ್ ಮೌನಿ ಅನ್ನುತಿದ್ದರು ಈಗ ಬೊಮ್ಮಾಯಿ ಮೌನವಾಗಿದ್ದಾರೆ. ಸರ್ಕಾರ ಸ್ವತಂತ್ರವಾಗಿ ನಡೆಯುತ್ತಿಲ್ಲ ರಿಮೋಟ್ ಕಂಟ್ರೋಲ್ ನಲ್ಲಿ ನಡೆಯುತ್ತಿದೆ ಎಂದು ಕಿಡಿಕಾರಿದರು.
ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ತಿರುಗೇಟು ನೀಡಿದ ಅವರು, ರಾಜ್ಯದಲ್ಲಿ ಸೌಹಾರ್ದತೆಗೆ ಧಕ್ಕೆ ಬಂದಾಗ ಮೌನವಾಗಿದ್ದವರು ಯಾರು? ಅಧಿವೇಶನದಲ್ಲಿ ಸುಮ್ಮನೆ ಕೂತವರು ಯಾರು? ಮತಾಂತರ ಬಿಲ್ ಬಗ್ಗೆ ಬೆಳಗಾವಿಯಲ್ಲಿ ಎದುರಿಸಲಾಗದೇ ಪಲಾಯನ ಮಾಡಿದ್ದು ಯಾಕೆ? ಗೋಹತ್ಯೆ ಬಿಲ್ ಬಂದಾಗ ಸದನದಲ್ಲಿ ಗೊಂದಲ ಸೃಷ್ಟಿಸಿದ್ದು ಯಾರು? ಗೋಹತ್ಯೆ ನಿಷೇಧ ಕಾಯ್ದೆ ವಿರುದ್ದ ಮೊದಲು ರಾಷ್ಟ್ರಪತಿಗೆ ದೂರು ಕೊಟ್ಟಿದ್ದು ದೇವೇಗೌಡರು. ನಮ್ಮ ಪಕ್ಷವೇ ಮೊದಲು ಅದರ ಬಗ್ಗೆ ಧ್ವನಿ ಎತ್ತಿದ್ದು. ನಾವು ಅದರ ವಿರುದ್ಧ ಮತ ಚಲಾಯಿಸಲು ತಯಾರಿದ್ದೆವು. ಅವರ ತಪ್ಪು ಇಟ್ಕೊಂಡು ನಮ್ಮ ಬಗ್ಗೆ ಮತನಾಡಲು ಕಾಂಗ್ರೆಸ್‌ಗೆ ನೈತಿಕತೆ ಏನಿದೆ ಎಂದು ಹೇಳಿದರು. ಇದನ್ನೂ ಓದಿ: ಗಂಡಸ್ತನ ಯಾವ ಯಾವುದಕ್ಕೆ ಬಳಸಬೇಕು ಎಂದು ಕುಮಾರಸ್ವಾಮಿಗೆ ಗೊತ್ತಿದೆ: ಈಶ್ವರಪ್ಪ
ರಾಜ್ಯದಲ್ಲಿ ಬೆಂಕಿಹಚ್ಚಿದ್ದು ಕಾಂಗ್ರೆಸ್
ರಾಹುಲ್‌ಗಾಂಧಿ ಬಂದಾಗ ಸಿದ್ದರಾಮಯ್ಯ, ಹಲಾಲ್ ಹಾಗೂ ಹಿಜಬ್ ವಿಚಾರದಲ್ಲಿ ನಾವು ಮಾತನ್ನಾಡಬೇಕಿತ್ತು ಎಂದು ಹೇಳುತ್ತಾರೆ. ಇಷ್ಟಾದ ಮೇಲೂ ಜೆಡಿಎಸ್ ಬಿಜೆಪಿಯ ಬಿ-ಟೀಮ್ ಎಂದು ಹೇಳುತ್ತಾರೆ. ನೀವೆ ರಾಜ್ಯದಲ್ಲಿ ಬೆಂಕಿ ಹಚ್ಚಿದ್ದು, ನೀವೇ ಬಿಜೆಪಿ ಸರ್ಕಾರ ನಿರ್ಮಾಣ ಮಾಡುವ ಪರಿಸ್ಥಿತಿ ನಿರ್ಮಾಣ ಮಾಡಿದ್ದು, ಇನ್ನಾದರೂ ಹಲಾಲ್, ಹಿಜಬ್ ವಿಚಾರದಲ್ಲಿ ಧೈರ್ಯವಾಗಿ ಎದುರಿಸಿ ಎಂದು ಕುಟುಕಿದರು.
ಅಲ್ಲದೆ, ಬಿಜೆಪಿಯವರು ನಾನು ದಾರ್ಶನಿಕ ಎನ್ನುತ್ತಾರೆ, ನಾನು ದಾರ್ಶನಿಕ ಎಂದು ಬೋರ್ಡ್ ಹಾಕಿಕೊಂಡಿಲ್ಲ, ನೀವೆ ಹಾಕಿಕೊಂಡಿರುವುದು.ನಾನು ಸಮಾಜ ಪರಿವರ್ತನಾಕಾರಕ ಅಲ್ಲ, ಇಂತ ವಿಷಯ ತೆಗೆದು ಮತಬ್ಯಾಂಕ್ ಮಾಡಲ್ಲ, ಬೆಂದ ಮನೆಯಲ್ಲಿ ಗಳ ಇಡುವ ಬುದ್ಧಿ ನನಗಿಲ್ಲ, ಕಂದಾಚಾರ ಇರುವ ನೀವು ನನಗೆ ಬುದ್ದಿ ಹೇಳುತ್ತೀರಾ? ಎಂದು ತಿರುಗೇಟು ನೀಡಿದ್ದಾರೆ.
ಯುಗಾದಿಗೆ ಇಷ್ಟು ಪ್ರಚಾರ ಯಾವತ್ತು ಸಿಕ್ಕಿರಲಿಲ್ಲ. ಒಳ್ಳೆಯ ಮನರಂಜನೆ ಸಿಕ್ಕಿತು. ಪ್ರತಿದಿನ ಯುಗಾದಿ ಮಾದರಿಯ ಸುದ್ದಿಗಳೇ ವಿಜ್ರಂಭಿಸಲಿದೆ. ಮುಂದಿನ ಚುನಾವಣೆ ವರೆಗೂ ಪರಿಸ್ಥಿತಿ ಹೀಗೆ ಇರಲಿದೆ.