Tag: basavarj bommai

  • ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನ ಸಮಗ್ರ ತನಿಖೆಯಾಗಲಿ: ಬೊಮ್ಮಾಯಿ

    ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನ ಸಮಗ್ರ ತನಿಖೆಯಾಗಲಿ: ಬೊಮ್ಮಾಯಿ

    -ಸರ್ಕಾರದ ತಪ್ಪು ಮುಚ್ಚಿಕೊಳ್ಳಲು `ಗ್ರೇಟರ್ ಬೆಂಗಳೂರು’; ಸಂಸದ ಕಿಡಿ

    ನವದೆಹಲಿ: ರನ್ಯಾ ರಾವ್ (Ranya Rao) ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ಜಾಲದಲ್ಲಿ ಇರುವವರನ್ನು ಪತ್ತೆ ಹಚ್ಚಲು ಸಮಗ್ರವಾಗಿ, ಆಳವಾದ ತನಿಖೆ ನಡೆಸಬೇಕು. ನಮ್ಮ ಅವಧಿಯಲ್ಲಿ ರನ್ಯಾ ರಾವ್ ನಿರ್ದೇಶಕಿಯಾದ ಕಂಪನಿಗೆ ಜಮೀನು ನೀಡಿರುವುದು ಮುಖ್ಯಮಂತ್ರಿಯ ಹಂತದವರೆಗೂ ಬಂದಿರುವುದಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

    ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿರಾ ಕೈಗಾರಿಕಾ ಪ್ರದೇಶದಲ್ಲಿ ಮೆ. ಕ್ಸಿರೋಡಾ ಇಂಡಿಯಾ ಪ್ರೈ. ಲಿಮಿಟೆಡ್ ಸಂಸ್ಥೆಗೆ ಜಮೀನು ನೀಡಿದ್ದೇವೆ. ರನ್ಯಾ ರಾವ್ ಕಂಪನಿಯ ನಿರ್ದೇಶಕಿಯಾಗಿದ್ದಾರೆ. ಯಾರೇ ಉದ್ದಿಮೆ ಮಾಡುತ್ತೇವೆ ಎಂದು ಬಂದರೂ ನಾವು ಅವರಿಗೆ ಅಗತ್ಯ ಕರಾರುಗಳನ್ನು ಹಾಕುತ್ತೇವೆ. ಲ್ಯಾಂಡ್ ಆಡಿಟ್ ಕಮಿಟಿ ಅಂತ ಇರುತ್ತದೆ. ಆ ಸಮಿತಿಯಲ್ಲಿ ಪ್ರಧಾನ ಕಾರ್ಯದರ್ಶಿ ಸೇರಿ ಹಿರಿಯ ಅಧಿಕಾರಿಗಳು ಇರುತ್ತಾರೆ. ಅವರು ಸಂಬಂಧಪಟ್ಟ ಕಂಪನಿಗೆ ಎಷ್ಟು ಜಮೀನು ಬೇಕು. ಯಾವ ಭಾಗದಲ್ಲಿ ಜಮೀನು ಬೇಕಿದೆ ಎನ್ನುವುದನ್ನು ಪರಿಶೀಲಿಸಿ ಶಿಫಾರಸ್ಸು ಮಾಡುತ್ತಾರೆ ಎಂದರು. ಇದನ್ನೂ ಓದಿ: ಬಿಹಾರದ ಆಭರಣ ಮಳಿಗೆಯಲ್ಲಿ ಫಿಲ್ಮಿಸ್ಟೈಲ್‌ನಲ್ಲಿ ದರೋಡೆ – 8 ನಿಮಿಷದಲ್ಲಿ 25 ಕೋಟಿ ಚಿನ್ನಾಭರಣ ದರೋಡೆ!

    500 ಕೋಟಿ ರೂ.ಗಳವರೆಗಿನ ಯೋಜನೆಗಳಿಗೆ ಸಂಬಂಧಪಟ್ಟ ಮಂತ್ರಿಗಳ ಹಂತದಲ್ಲಿ ತೀರ್ಮಾನ ಆಗುತ್ತದೆ. ಮುಖ್ಯಮಂತ್ರಿಯವರೆಗೂ ಬರುವುದಿಲ್ಲ ನನ್ನ ಹಂತದವರೆಗೂ ಅದು ಬಂದಿಲ್ಲ. ಕೈಗಾರಿಕಾ ಸಚಿವರ ನೇತೃತ್ವದಲ್ಲಿ ಸಿಂಗಲ್ ವಿಂಡೊ ಪ್ರೊಸಿಡಿಂಗ್ ಮೂಲಕ ಹಂಚಿಕೆ ಮಾಡುತ್ತಾರೆ. ಅವರಿಗೆ ಜಮೀನು ಹಂಚಿಕೆ ಮಾಡಿದ ಮೇಲೆ ಹಣ ಕಟ್ಟುವಂತೆ ನೊಟೀಸ್ ನೀಡಲಾಗಿದೆ. ಅವರು ಹಣ ಕಟ್ಟದಿರುವುದರಿಂದ ಅವರಿಗೆ ಭೂಮಿ ಹಂಚಿಕೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಮೋದಿ ಅವಧಿಯಲ್ಲಿ ರೈಲ್ವೆ ವಲಯ ಭಾರೀ ಅಭಿವೃದ್ಧಿ ಹೊಂದಿದೆ: ಹೆಚ್‍ಡಿಡಿ

    ಉದ್ದಿಮೆ ಸ್ಥಾಪಿಸಲು ಹಲವಾರು ಅರ್ಜಿಗಳು ಬಂದಾಗ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಉದ್ಯಮಗಳಿಗೆ ಜಮೀನು ನೀಡುತ್ತೇವೆ. ಈಗಿನ ಸರ್ಕಾರವೂ ಕೂಡ ಲಕ್ಷಾಂತರ ಕೋಟಿ ರೂ. ಜಮೀನು ಹಂಚಿಕೆ ಮಾಡಿರುತ್ತದೆ. ಯಾರೋ ಮುಂದೆ ಅಪರಾಧ ಮಾಡುತ್ತಾರೆ ಎಂದು ಯಾರಿಗೂ ಗೊತ್ತಿರುವುದಿಲ್ಲ. ಅದನ್ನು ಊಹೆ ಮಾಡಲು ಆಗುವುದಿಲ್ಲ. ನಟಿ ದುಬೈನಿಂದ ಅಕ್ರಮವಾಗಿ ಚಿನ್ನ ತಂದಿರುವ ಬಗ್ಗೆ ತನಿಖೆ ನಡೆಯುತ್ತಿದೆ. ಎಲ್ಲ ಆಯಾಮದಿಂದಲೂ ತನಿಖೆ ನಡೆಯಲಿ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಹೇಳಿದರು. ಇದನ್ನೂ ಓದಿ: ರಂಜಾನ್ ಟೈಮಲ್ಲೇ ಗುಲ್ಮಾರ್ಗ್‌ ಫ್ಯಾಷನ್ ಶೋ – 24 ಗಂಟೆಗಳಲ್ಲಿ ವರದಿ ನೀಡುವಂತೆ ಒಮರ್ ಅಬ್ದುಲ್ಲಾ ಆದೇಶ

    ಮಾಧ್ಯಮಗಳಲ್ಲಿ ಇಬ್ಬರು ಸಚಿವರು ಇದರ ಹಿಂದೆ ಇದ್ದಾರೆ ಎಂದು ತೋರಿಸಲಾಗುತ್ತಿದೆ. ಈ ಬಗ್ಗೆ ತನಿಖೆ ಆಗಬೇಕು. ಇದು ಒಂದು ಬಾರಿ ನಡೆದಿರುವಂತೆ ಕಾಣಿಸುತ್ತಿಲ್ಲ. ಇದಕ್ಕೆ ಬೆಂಬಲವಾಗಿ ಇರುವುವವರ ಬಗ್ಗೆ ಸಮಗ್ರವಾಗಿ, ಆಳವಾಗಿ ತನಿಖೆಯಾಗಲಿ. ಅಧಿಕಾರಿಗಳ ಪಾತ್ರ ಇಲ್ಲದೆ ಇಷ್ಟು ದೊಡ್ಡ ಅಕ್ರಮ ನಡೆಯಲು ಸಾಧ್ಯವಿಲ್ಲ. ಇದರ ಹಿಂದಿರುವ ಜಾಲವನ್ನು ಸಂಪೂರ್ಣವಾಗಿ ಭೇದಿಸಬೇಕು. ಸಿಬಿಐ ತನಿಖೆಯಿಂದ ಯಾರ ಪಾತ್ರ ಇದೆ ಎನ್ನುವುದು ಹೊರ ಬರುತ್ತದೆ. ಹೀಗಾಗಿ ಇದರ ಬಗ್ಗೆ ಆಳವಾಗಿ ತನಿಖೆಯಾದರೆ ಎಲ್ಲ ಸತ್ಯವೂ ಹೊರ ಬರಲಿದೆ ಎಂದರು. ಇದನ್ನೂ ಓದಿ: ಬಿಬಿಎಂಪಿ 2ಕ್ಕಿಂತ ಹೆಚ್ಚು ಹೋಳಾಗೋದು ಫಿಕ್ಸ್ – ಸದ್ಯದಲ್ಲೇ `ಗ್ರೇಟರ್ ಬೆಂಗಳೂರು’ ಆಡಳಿತ ಕಾಯ್ದೆ ಜಾರಿಗೆ ಸಿದ್ಧತೆ

    ತಪ್ಪು ಮುಚ್ಚಿಕೊಳ್ಳಲು ಗ್ರೇಟರ್ ಬೆಂಗಳೂರು
    ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ ಜಾರಿಗೆ ಸರ್ಕಾರ ಮುಂದಾಗಿರುವ ಬಗ್ಗೆ ಮಾತನಾಡಿದ ಅವರು, ಬೆಂಗಳೂರು ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ರಸ್ತೆಗಳ ರಿಪೇರಿಯಿಂದ ಹಿಡಿದು ಹೊಸ ರಸ್ತೆ ನಿರ್ಮಾಣ ಮಾಡುವುದರಿಂದ ಹಿಡಿದು, ಚರಂಡಿ ನಿರ್ವಹಣೆ ಮಾಡುವುದನ್ನು ಸರಿಯಾಗಿ ಮಾಡಿಲ್ಲ. ಸುಮ್ಮನೆ 2 ವರ್ಷ ಬ್ರಾಂಡ್ ಬೆಂಗಳೂರು ಎಂದು ಅರ್ಜಿ ತೆಗೆದುಕೊಂಡು ಎಲ್ಲಿ ಹಾಕಿದ್ದಾರೋ ಗೊತ್ತಿಲ್ಲ. ಬಜೆಟ್‌ನಲ್ಲಿಯೂ ಕೂಡ ಕಾರ್ಯಸಾಧುವಾಗುವಂತೆ ಯಾವುದೇ ಯೋಜನೆ ಘೋಷಣೆ ಮಾಡಿಲ್ಲ ಕಿಡಿಕಾರಿದರು. ಇದನ್ನೂ ಓದಿ: ತಂಬಾಕು, ಮದ್ಯದ ಜಾಹೀರಾತು ನಿಯಂತ್ರಿಸಿ – ಬಿಸಿಸಿಐ ಅಧ್ಯಕ್ಷರಿಗೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ

    ನಮ್ಮ ಕಾಲದಲ್ಲಿ ತೀರ್ಮಾನ ಮಾಡಿರುವ ವಿಶ್ವ ಬ್ಯಾಂಕಿನಿಂದ 1700 ಕೋಟಿ ರೂ. ಸಾಲ ನೀಡುವ ಯೋಜನೆ ಈಗ ಅಂತಿಮವಾಗಿದೆ. ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು, ದೇವರು ಬಂದರೂ ಇದನ್ನು ಸರಿ ಮಾಡಲು ಸಾಧ್ಯವಿಲ್ಲ ಎಂಬ ಸರ್ಕಾರದ ಧೋರಣೆಯಿದೆ. ಬೆಂಗಳೂರಿನ ವಿಸ್ತರಣೆ ಎಷ್ಟಿದೆ ಅಷ್ಟೇ ಇದೆ. ಈಗಾಗಲೇ ವಲಯಗಳಿಗೊಬ್ಬರು ಮುಖ್ಯ ಇಂಜಿನಿಯರ್ ಇದ್ದಾರೆ. ಈಗ ಎಲ್ಲ ವಲಯಗಳಿಗೆ ಆಯುಕ್ತರನ್ನು ಮಾಡಲು ಹೊರಟಿದ್ದಾರೆ. ಅದು ಪರಿಹಾರವಲ್ಲ, ಅದರ ಬದಲು ಯೋಜನಾಬದ್ಧವಾಗಿ ಹಣಕಾಸು ಒದಗಿಸಬೇಕು. ನಮ್ಮ ಕಾಲದಲ್ಲಿ 2 ಉಪನಗರಗಳನ್ನು ಮಾಡಲು ಯೋಚಿಸಿದ್ದೇವು. ಅವುಗಳನ್ನು ಮಾಡಿ ಸಂಪರ್ಕ ಕಲ್ಪಿಸಿ, ಅದರ ಬಗ್ಗೆ ಸರ್ಕಾರ ಚಿಂತನೆ ಮಾಡಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಗುಜರಾತ್‌ | 5 ವರ್ಷದ ಬಾಲಕಿಯ ನರಬಲಿ – ದೇವಾಲಯದ ಮೆಟ್ಟಿಲುಗಳ ಮೇಲೆ ರಕ್ತ ಅರ್ಪಿಸಿದ ಪಾಪಿ!

    ಪರಿಷ್ಕರಣೆಗೆ ಅವಸರ ಬೇಡ
    ಇದೇ ವೇಳೆ ರಾಜ್ಯ ಸರ್ಕಾರ ರೇಷನ್ ಕಾರ್ಡ್ ಪರಿಷ್ಕರಣೆ ಮಾಡಲು ಮುಂದಾಗಿರುವ ಕುರಿತು ಅವರು ಪ್ರತಿಕ್ರಿಯಿಸಿದರು. ರೇಷನ್ ಕಾರ್ಡ್ ಪರಿಷ್ಕರಣೆ ಮಾಡುವ ಮೊದಲು ರಾಜ್ಯ ಸರ್ಕಾರ ಅವಸರದ ತೀರ್ಮಾನ ಮಾಡಬಾರದು. ಅರ್ಹ ಫಲಾನುಭವಿಗಳಿಗೆ ಯಾವುದೇ ರೀತಿಯಲ್ಲಿ ಅನ್ಯಾಯವಾಗದಂತೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಎಲ್ಲಾ ಪಕ್ಷದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಮೊದಲು 2 ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನ ಮಾಡಿ, ಅಲ್ಲಿ ಬರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು ನಂತರ ರಾಜ್ಯಾದ್ಯಂತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಇದನ್ನೂ ಓದಿ: ನಟಿ ರನ್ಯಾಗೆ KIADB ಜಾಗ ಕೊಟ್ಟಿದ್ದೇ ಬಿಜೆಪಿ, ಈಗ ಕಾಂಗ್ರೆಸ್ ಮೇಲೆ ಆರೋಪ ಮಾಡೋ ನೈತಿಕತೆ ಅವರಿಗಿಲ್ಲ: ಹೆಚ್.ಸಿ ಬಾಲಕೃಷ್ಣ

  • ಮಾಧುಸ್ವಾಮಿ ಮಾತಿಗೆ ಸಿಎಂ ಬೊಮ್ಮಾಯಿ ವ್ಯಂಗ್ಯ

    ಮಾಧುಸ್ವಾಮಿ ಮಾತಿಗೆ ಸಿಎಂ ಬೊಮ್ಮಾಯಿ ವ್ಯಂಗ್ಯ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕಳ್ಳನೇ ತಿರುಗಿ ಬೊಬ್ಬೆ ಹೊಡೆದ ರೀತಿಯಲ್ಲಿ ಬೊಮ್ಮಾಯಿ ಬೊಬ್ಬೆ ಹೊಡೆಯುತ್ತಿದ್ದಾರೆ: ನಾಲಿಗೆ ಹರಿಬಿಟ್ಟ ಶಿವಸೇನೆ ಪುಂಡ

    ಕಳ್ಳನೇ ತಿರುಗಿ ಬೊಬ್ಬೆ ಹೊಡೆದ ರೀತಿಯಲ್ಲಿ ಬೊಮ್ಮಾಯಿ ಬೊಬ್ಬೆ ಹೊಡೆಯುತ್ತಿದ್ದಾರೆ: ನಾಲಿಗೆ ಹರಿಬಿಟ್ಟ ಶಿವಸೇನೆ ಪುಂಡ

    ಬೆಳಗಾವಿ: ಕಳ್ಳನೇ ತಿರುಗಿ ಬೊಬ್ಬೆ ಹೊಡೆದ ರೀತಿಯಲ್ಲಿ ಬೊಮ್ಮಾಯಿ ಬೊಬ್ಬೆ ಹೊಡೆದುಕೊಳ್ಳುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ವಿರುದ್ಧ ಕೊಲ್ಲಾಪುರ ಶಿವಸೇನೆ ಉದ್ಧವ್ ಠಾಕ್ರೆ ಬಣದ ಜಿಲ್ಲಾಧ್ಯಕ್ಷ ವಿಜಯ ದೇವಣೆ (Vijay Devane) ನಾಲಿಗೆ ಹರಿಬಿಟ್ಟಿದ್ದಾರೆ.

    ಕೊಲ್ಲಾಪುರ ನಗರದಲ್ಲಿ ಕರ್ನಾಟಕ ಬಸ್‍ಗಳಿಗೆ ಮಸಿ ಬಳಿದ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ (Karnataka) ಸಿಎಂ ಬೊಮ್ಮಾಯಿ ಜತ್ತ, ಅಕ್ಕಲಕೋಟ, ಸೊಲ್ಲಾಪುರ ಕರ್ನಾಟಕ ವ್ಯಾಪ್ತಿಯ ಪ್ರದೇಶ ಅಂತಾರೆ. ಕಳ್ಳನೇ ತಿರುಗಿ ಬೊಬ್ಬೆ ಹೊಡೆದ ರೀತಿಯಲ್ಲಿ ಬೊಮ್ಮಾಯಿ ಬೊಬ್ಬೆ ಹೊಡೆದುಕೊಳ್ಳುತ್ತಿದ್ದಾರೆ. ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್ ಮಹಾರಾಷ್ಟ್ರಕ್ಕೆ (Maharashtra) ಸೇರಬೇಕೆಂದು ಚಳವಳಿ ನಡೆಯುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಿಂದ ಬೆಳಗಾವಿಗೆ ಬರುತ್ತಿದ್ದ 300ಕ್ಕೂ ಹೆಚ್ಚು ಬಸ್‌ಗಳು ತಾತ್ಕಾಲಿಕ ಸ್ಥಗಿತ

    ಕಳೆದ 50 ರಿಂದ 60 ವರ್ಷಗಳಿಂದ ಚಳವಳಿ ನಡೆಯುತ್ತಿದೆ. ಈ ಚಳವಳಿ ಹತ್ತಿಕ್ಕಲು ಬೊಮ್ಮಾಯಿ ನೋಡುತ್ತಿದ್ದಾರೆ. ಕರ್ನಾಟಕಕ್ಕೆ ಮಹಾರಾಷ್ಟ್ರ ಸಾರಿಗೆ ಬಸ್‍ಗಳ ಪ್ರವೇಶ ನಿರ್ಬಂಧಿಸಲಾಗಿದೆ. ಇದನ್ನೆಲ್ಲ ನೋಡಿದ್ರೆ ಮರಾಠಿಗರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಬೊಮ್ಮಾಯಿ ನಡೆ ಮಹಾರಾಷ್ಟ್ರ ಅಷ್ಟೇ ಅಲ್ಲ ಇಡೀ ದೇಶಕ್ಕೆ ಗೊತ್ತಾಗಬೇಕೇಂದು ಶವಯಾತ್ರೆ ಮಾಡಿದ್ದೇವೆ ಎಂದು ವಿಜಯ್ ದೇವಣೆ ನಾಲಿಗೆ ಹರಿಬಿಟ್ಟಿದ್ದಾರೆ. ಇದನ್ನೂ ಓದಿ: ಶಬರಿಮಲೆಗೆ ತೆರಳಿದ್ದ ಮಿನಿ ಬಸ್‍ಗೆ ಲಾರಿ ಡಿಕ್ಕಿ – 23 ಭಕ್ತರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

    Live Tv
    [brid partner=56869869 player=32851 video=960834 autoplay=true]

  • ರಾಜ್ಯದಲ್ಲಿ ಹೊಸ ಕಾನೂನು ಜಾರಿಯಾಗಿದೆ – ಲಂಚ ತಿಂದರೆ ಅಪರಾಧವಲ್ಲ, ಲಂಚ ತಿಂದದ್ದನ್ನು ಹೇಳಿದರೆ ಅಪರಾಧ: ಸಿದ್ದು

    ರಾಜ್ಯದಲ್ಲಿ ಹೊಸ ಕಾನೂನು ಜಾರಿಯಾಗಿದೆ – ಲಂಚ ತಿಂದರೆ ಅಪರಾಧವಲ್ಲ, ಲಂಚ ತಿಂದದ್ದನ್ನು ಹೇಳಿದರೆ ಅಪರಾಧ: ಸಿದ್ದು

    ಬೆಂಗಳೂರು: ಕರ್ನಾಟಕದಲ್ಲಿ (Karnataka) ಹೊಸ ಕಾನೂನು ಜಾರಿಯಾಗಿದೆ. ಇಲ್ಲಿ ಲಂಚ ತಿಂದರೆ ಅಪರಾಧ ಅಲ್ಲ, ಲಂಚ ತಿಂದದ್ದನ್ನು ಹೇಳಿದರೆ ಅಪರಾಧ. ಪೊಲೀಸರ ಮೂಲಕ ಎಷ್ಟು ಜನರ ಬಾಯಿ ಮುಚ್ಚಿಸುತ್ತೀರಿ. ಎಷ್ಟು ಮಂದಿಯನ್ನು ಜೈಲಿಗೆ ಹಾಕ್ತೀರಿ? ರಾಜ್ಯದ ತುಂಬಾ ಜೈಲು ಕಟ್ಟಿಸ್ತಿರಾ? ಜನ ಬಂಡೆದಿದ್ದಾರೆ, ಎಚ್ಚರ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಬಿಜೆಪಿ (BJP) ವಿರುದ್ಧ ಸರಣಿ ಟ್ವೀಟ್‍ಗಳ ಮೂಲಕ ವಾಗ್ದಾಳಿ ನಡೆಸಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ಕರ್ನಾಟಕದಲ್ಲಿ ಹೊಸ ಕಾನೂನು ಜಾರಿಯಾಗಿದೆ. ಇಲ್ಲಿ ಲಂಚ ತಿಂದರೆ ಅಪರಾಧ ಅಲ್ಲ, ಲಂಚ ತಿಂದದ್ದನ್ನು ಹೇಳಿದರೆ ಅಪರಾಧ. ಪೊಲೀಸರ ಮೂಲಕ ಎಷ್ಟು ಜನರ ಬಾಯಿ ಮುಚ್ಚಿಸುತ್ತೀರಿ. ಎಷ್ಟು ಮಂದಿಯನ್ನು ಜೈಲಿಗೆ ಹಾಕ್ತೀರಿ? ರಾಜ್ಯದ ತುಂಬಾ ಜೈಲು ಕಟ್ಟಿಸ್ತಿರಾ? ಜನ ಬಂಡೆದಿದ್ದಾರೆ, ಎಚ್ಚರ. ರಾಜ್ಯ ಬಿಜೆಪಿ ಸರ್ಕಾರದ ಲಂಚುಗುಳಿತನ ಬಗ್ಗೆ ಪಕ್ಷದ ಕಾರ್ಯಕರ್ತರ ಜೊತೆ ನಾನೇ ಪೋಸ್ಟರ್ ಅಂಟಿಸುತ್ತೇನೆ, ತಾಕತ್ತಿದ್ದರೆ ನಮ್ಮನ್ನೂ ಬಂಧಿಸಿ. ನನ್ನ ಮತ್ತು ಡಿ.ಕೆ ಶಿವಕುಮಾರ್ (D.K Shivakumar) ಬಗ್ಗೆ ಪೋಸ್ಟರ್ ಅಂಟಿಸಿದ್ದರಲ್ಲಾ, ಅದರ ಬಗ್ಗೆ ಸಿಎಂ ಯಾಕೆ ಮೌನವಾಗಿದ್ದಾರೆ? ಪೊಲೀಸರ ಕಣ್ಣು ಯಾಕೆ ಕುರುಡಾಗಿದೆ? ಬಿಜೆಪಿ ಗೆಲುವಿನ ಸೂತ್ರವೇ ಸುಳ್ಳು ಮಾಹಿತಿಗಳ ಅಪಪ್ರಚಾರ, ವಿರೋಧಿಗಳ ಚಾರಿತ್ರ್ಯಹರಣ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ. ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ಭೇಷರತ್ ಕ್ಷಮೆ ಕೋರಬೇಕು: ಪಿ.ರಾಜೀವ್ ಆಗ್ರಹ

    ಸಾಮಾಜಿಕ ಮಾಧ್ಯಮವೂ ಸೇರಿದಂತೆ ಹೊಸ ತಂತ್ರಜ್ಞಾನವನ್ನು ಬಿಜೆಪಿ ಅವರಷ್ಟು ದುರುಪಯೋಗ ಪಡಿಸಿಕೊಂಡ ರಾಜಕೀಯ ಪಕ್ಷ ಜಗತ್ತಿನಲ್ಲಿ ಇನ್ನೊಂದಿಲ್ಲ. ರಾಜ್ಯ ಬಿಜೆಪಿಯ ಅಧಿಕೃತ ಸೋಷಿಯಲ್ ಮೀಡಿಯಾಗಳಲ್ಲಿಯೇ ನನ್ನ ವಿರುದ್ಧದ ಕುತ್ಸಿತ ಹೇಳಿಕೆಗಳು, ವಿರೂಪಗೊಳಿಸಿದ ಫೋಟೋಗಳ ವಿವರ ಕೊಡುತ್ತೇನೆ, ಅವರನ್ನೂ ಬಂಧಿಸಿ. ನಾನು ಅಧಿಕಾರದಲ್ಲಿದ್ದಾಗಲೇ ಇಂಥವರ ವಿರುದ್ಧ ಪೊಲೀಸರಿಗೆ ದೂರು ಕೊಟ್ಟಿಲ್ಲ. ಇದು ನಾನು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಕೊಟ್ಟ ಗೌರವ ರಾಜಕೀಯ ವ್ಯವಸ್ಥೆಯಲ್ಲಿ ಇಂತಹ ಆರೋಪ-ಪ್ರತ್ಯಾರೋಪ ಸಹಜ ವಿದ್ಯಮಾನವಾದರೂ ಇದನ್ನು ಇಷ್ಟೊಂದು ಕೀಳು ಮಟ್ಟಕ್ಕೆ ತಂದು ನಿಲ್ಲಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ. ಏನು ಬೊಮ್ಮಾಯಿ (Basavaraj Bommai) ಅವರೇ, ಬೇರೆಯವರಿಗೆ ಚುಚ್ಚಿದಾಗ ಖುಷಿಪಟ್ಟಿರಿ, ಯಾರೋ ನಿಮಗೆ ಚುಚ್ಚಿದ್ದಕ್ಕೆ ನೋವಾಯ್ತಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: PayCM ಕೇಸ್ – ಬೆಳಗ್ಗೆ ಮೂವರು ಅರೆಸ್ಟ್, ಮಧ್ಯಾಹ್ನ ಬಿಡುಗಡೆ

    Live Tv
    [brid partner=56869869 player=32851 video=960834 autoplay=true]

  • PSI ಅಕ್ರಮದಲ್ಲಿ ಸಚಿವರು, ಶಾಸಕರ ಕೈವಾಡ ಬಯಲಾಗಿರುವುದನ್ನು ‘ಜನವೇದನ’ ಸಮಾವೇಶದಲ್ಲಿ ಹೇಳಿಕೊಳ್ಳುವಿರಾ: ಕಾಂಗ್ರೆಸ್ ಪ್ರಶ್ನೆ

    PSI ಅಕ್ರಮದಲ್ಲಿ ಸಚಿವರು, ಶಾಸಕರ ಕೈವಾಡ ಬಯಲಾಗಿರುವುದನ್ನು ‘ಜನವೇದನ’ ಸಮಾವೇಶದಲ್ಲಿ ಹೇಳಿಕೊಳ್ಳುವಿರಾ: ಕಾಂಗ್ರೆಸ್ ಪ್ರಶ್ನೆ

    ಬೆಂಗಳೂರು: ಬಿಜೆಪಿ (BJP) ಆಡಳಿತದಲ್ಲಿ ಹೊರಬಂದ ಪಿಎಸ್‍ಐ (PSI) ಹಗರಣವೇ ನಿಮ್ಮ ಸಾಧನೆಯೇ ಬಿಜೆಪಿ? ಸಿಎಂ ಬೊಮ್ಮಾಯಿ (Basavarj Bommai) ಅವರೇ, ಪಿಎಸ್‍ಐ ಅಕ್ರಮದಲ್ಲಿ ನಿಮ್ಮ ಸಂಪುಟ ಸಚಿವರು, ಶಾಸಕರ ಕೈವಾಡ ಬಯಲಾದರೂ ಕಣ್ಮುಚ್ಚಿ ಕುಳಿತಿರುವುದನ್ನು, 54,000 ಯುವಕರಿಗೆ ಮೋಸ ಮಾಡಿದ್ದನ್ನು ಸಾಧನೆ ಎಂದು ‘ಜನವೇದನ’ ಸಮಾವೇಶದಲ್ಲಿ ಹೇಳಿಕೊಳ್ಳುವಿರಾ ಎಂದು ಕಾಂಗ್ರೆಸ್ (Congress) ಸರಣಿ ಟ್ವೀಟ್ ಮೂಲಕ ಬಿಜೆಪಿಗೆ ಚಾಟಿ ಬೀಸಿದೆ.

    ಟ್ವೀಟ್‍ನಲ್ಲಿ ಏನಿದೆ?:
    ಬಿಜೆಪಿ ಆಡಳಿತದಲ್ಲಿ ಹೊರಬಂದ ಪಿಎಸ್‍ಐ ಹಗರಣವೇ ನಿಮ್ಮ ಸಾಧನೆಯೇ ಬಿಜೆಪಿ? ಸಿಎಂ ಬೊಮ್ಮಾಯಿ ಅವರೇ, ಪಿಎಸ್‍ಐ ಅಕ್ರಮದಲ್ಲಿ ನಿಮ್ಮ ಸಂಪುಟ ಸಚಿವರು, ಶಾಸಕರ ಕೈವಾಡ ಬಯಲಾದರೂ ಕಣ್ಮುಚ್ಚಿ ಕುಳಿತಿರುವುದನ್ನು, 54,000 ಯುವಕರಿಗೆ ಮೋಸ ಮಾಡಿದ್ದನ್ನು ಸಾಧನೆ ಎಂದು ‘ಜನವೇದನ’ ಸಮಾವೇಶದಲ್ಲಿ ಹೇಳಿಕೊಳ್ಳುವಿರಾ? ಬಿಜೆಪಿ ಭ್ರಷ್ಟೋತ್ಸವ. ರಾಜ್ಯದ 54 ಸಾವಿರ ಪಿಎಸ್‍ಐ ಅಭ್ಯರ್ಥಿಗಳಿಗೆ ವಂಚಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರದ್ದು ಯಾವ ಸಾಧನೆ? ತಮ್ಮ ಕಛೇರಿಯೇ ಅಕ್ರಮದ ಅಡ್ಡೆಯಾಗಿದ್ದರೂ ಸದನದಲ್ಲಿ ಸುಳ್ಳು ಹೇಳಿ ನಾಡಿನ ದಿಕ್ಕು ತಪ್ಪಿಸಲು ಯತ್ನಿಸಿದ ಗೃಹಸಚಿವರದ್ದು ‘ಜನಸ್ಪಂದನೆ’ಯ ಸಾಧನೆಯೇ? ಈ ವಂಚನೆಯನ್ನು ಸಮಾವೇಶದಲ್ಲಿ ಹೇಳುವಿರಾ? ಇದನ್ನೂ ಓದಿ: ಹಿಮಾಂತ ಬಿಸ್ವಾ ಶರ್ಮಾ ರ‍್ಯಾಲಿಯಲ್ಲಿ ಮೈಕ್ ಕಿತ್ತುಕೊಂಡ ಅಪರಿಚಿತ ವ್ಯಕ್ತಿ – ವೀಡಿಯೋ ವೈರಲ್

    ಒಂದೆಡೆ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ, ನಮ್ಮದು ಪಾರದರ್ಶಕ ತನಿಖೆ ಎನ್ನುತ್ತಾರೆ ಸಿಎಂ. ಇನ್ನೊಂದೆಡೆ ಪಿಎಸ್‍ಐ ಅಕ್ರಮದಲ್ಲಿ ಸಚಿವ ಅಶ್ವಥ್‍ನಾರಾಯಣ ತಮ್ಮ ಸಹೋದರರೊಂದಿಗೆ ಸೇರಿ ಅಕ್ರಮ ನಡೆಸಿದ ಸಂಗತಿ ಬೆಳಕಿಗೆ ಬಂದರೂ ಸಚಿವರ ತನಿಖೆ ಇಲ್ಲ. ಪ್ರಕರಣ ಮುಚ್ಚಿಹಾಕಲು ಯತ್ನಿಸುವುದೇ ನಿಮ್ಮ ಸಾಧನೆಯೇ? ರಾಜ್ಯದ ಇತಿಹಾಸದಲ್ಲೇ ಎಡಿಜಿಪಿಯೊಬ್ಬರು ಅಕ್ರಮದಲ್ಲಿ ಭಾಗಿಯಾಗಿ ಬಂಧನಕ್ಕೆ ಒಳಗಾಗಿದ್ದು ಇದೇ ಮೊದಲು. ಉನ್ನತ ಮಟ್ಟದ ಅಧಿಕಾರಿಗಳು ಸರ್ಕಾರ ಹಾಗೂ ಮಂತ್ರಿಗಳು ಸಹಕಾರವಿಲ್ಲದೆ ಅಕ್ರಮವನ್ನು ನಡೆಸಲು ಸಾಧ್ಯವೇ ಇಲ್ಲ.

    ಮಂತ್ರಿಗಳ ವಿಚಾರಣೆ ನಡೆಸದೆ ಭ್ರಷ್ಟರನ್ನು ರಕ್ಷಿಸಿರುವುದೇ ಬಿಜೆಪಿ ಸರ್ಕಾರದ ಸಾಧನೆ. ಪಿಎಸ್‍ಐ ಹಗರಣದಲ್ಲೂ ವಿಜಯೇಂದ್ರ ಸರ್ವಿಸ್ ಟ್ಯಾಕ್ಸ್ ಮುಂದುವರಿದಿದೆ. ಸ್ವತಃ ಬಿಜೆಪಿ ಶಾಸಕ ಯತ್ನಾಳ್ ಪರೋಕ್ಷವಾಗಿ ಈ ಸಂಗತಿಯನ್ನು ಬಹಿರಂಗಪಡಿಸಿದರೂ ತನಿಖೆಯಾಗುವುದಿಲ್ಲ. ಅವರಿಗೆ ತಮ್ಮ ತಂದೆಯ ಆಡಳಿತದಲ್ಲಿ ಸಿಕ್ಕ “ಸೂಪರ್ ಸಿಎಂ” ಹುದ್ದೆ ನಿಮ್ಮ ಅವಧಿಯಲ್ಲೂ ಮುಂದುವರಿದಿದೆಯೇ ಬೊಮ್ಮಾಯಿ ಅವರೇ? ರಾಜ್ಯದ ಜನತೆಗೆ ಯಾವ ಸಾಧನೆ, ಯೋಜನೆ, ಸ್ಪಂದನೆ ಮಾದಿದ್ದರೆಂದು ಸರ್ಕಾರ ಸಮಾವೇಶ ಮಾಡುತ್ತಿದೆ? ಸರ್ಕಾರ ಕರ್ನಾಟಕದ ಜನತೆಗೆ, ಕನ್ನಡ ನಾಡುನುಡಿಗೆ ಮಾಡಿದ್ದು ಬಿಟ್ಟರೆ ಬೇರೇನು ಮಾಡಿದೆ? ಪಠ್ಯಪುಸ್ತಕ ಪರಿಷ್ಕರಣೆ ಹೆಸರಲ್ಲಿ ನಾಡಿನ ಸಾಹಿತಿಗಳಿಗೆ ಅವಮಾನಿಸಿದ್ದೇ ನಿಮ್ಮ ಸಾಧನೆಯೇ ಬೊಮ್ಮಾಯಿ ಅವರೇ? ಬಿಜೆಪಿ ಅವರ ಒಂದು ವರ್ಷದ ವಾರ್ಷಿಕೋತ್ಸವಕ್ಕೆ ಸಜ್ಜಾಗಿರುವ ಸರ್ಕಾರ ತಮ್ಮ ಸಾಧನೆ ಏನು ಎಂದು ನಾಡಿನ ಜನತೆಗೆ ಉತ್ತರಿಸಬೇಕು. ಇದನ್ನೂ ಓದಿ: ಗಣಿಗಾರಿಕೆಯಿಂದ ಭಾರತದ GDPಗೆ ಶೇ.2.5 ರಷ್ಟು ಕೊಡುಗೆ: ಪ್ರಲ್ಹಾದ್ ಜೋಶಿ

    ಪಠ್ಯಪುಸ್ತಕಗಳಲ್ಲಿ ಅವಾಂತರ ಸೃಷ್ಟಿಸಿದ ಸರ್ಕಾರ ಇನ್ನೂ ಶಾಲಾ ಮಕ್ಕಳಿಗೆ ಪಠ್ಯಪುಸ್ತಕ ವಿತರಣೆ ಮಾಡಲಾಗಲಿಲ್ಲ. ದೇಶದ್ರೋಹಿಗಳನ್ನು ದೇಶಭಕ್ತರನ್ನಾಗಿ ಬಿಂಬಿಸಿದ್ದೇ ಸಾಧನೆಯೇ? ಸಾಹಿತ್ಯವನ್ನೇ ಅರಿಯದ, ಸುಳ್ಳು ಹೇಳುವುದನ್ನು, ಇತಿಹಾಸ ತಿರುಚುವುದನ್ನು ಕಾಯಕ ಮಾಡಿಕೊಂಡಿರುವ ಬಿಜೆಪಿಯ ಬಾಡಿಗೆ ಭಾಷಣಕಾರನೂ ಮಕ್ಕಳ ಭವಿಷ್ಯ ರೂಪಿಸುವ ಪಠ್ಯದಲ್ಲಿ ಜಾಗ ಪಡೆದದ್ದಕ್ಕಿಂತ ದುರಂತ ಬೇರೊಂದಿಲ್ಲ. ಪಠ್ಯ ಪುಸ್ತಕ ರಚನೆಗೆ ಅಪ್ರಬುದ್ಧರನ್ನು ಕೂರಿಸಿ ಅವಾಂತರ ಎಬ್ಬಿಸಿದ್ದು ಸರ್ಕಾರದ ಮಹಾ ಸಾಧನೆಗಳಲ್ಲೊಂದು! ಮಹಿಳೆಯರಿಗೆ, ಶೋಷಿತರಿಗೆ ಅಕ್ಷರದ ದಾಸೋಹ ನಡೆಸಿದ, “ಅಕ್ಷರದವ್ವ” ಎಂದೇ ಖ್ಯಾತರಾದ ಸಾವಿತ್ರಿ ಬಾ ಪುಲೆ ಅವರ ಪಠ್ಯವನ್ನು ಕೈಬಿಟ್ಟ ಸರ್ಕಾರ ಪಠ್ಯಪುಸ್ತಕಗಳಲ್ಲಿ ಬುಲ್ ಬುಲ್ ಹಕ್ಕಿ ಹಾರಿಸುತ್ತಿದೆ! ಶಿಕ್ಷಣ ವಿರೋಧಿಯಾಗಿ ವರ್ತಿಸಿದ್ದು, ಮಹನೀಯರಿಗೆ ಅವಮಾನಿಸಿದ್ದು ನಿಮ್ಮ ಒಂದು ವರ್ಷದ ಸಾಧನೆಯೇ ಬೊಮ್ಮಾಯಿ ಅವರೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

    Live Tv
    [brid partner=56869869 player=32851 video=960834 autoplay=true]

  • ನುಡಿದಂತೆ ನಡೆಯುವವರು ಯೋಗಿ ಆದಿತ್ಯನಾಥ್ – ಬೊಮ್ಮಾಯಿ

    ನುಡಿದಂತೆ ನಡೆಯುವವರು ಯೋಗಿ ಆದಿತ್ಯನಾಥ್ – ಬೊಮ್ಮಾಯಿ

    ಬೆಂಗಳೂರು: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನುಡಿದಂತೆ ನಡೆಯುವ ಸಜ್ಜನ ವ್ಯಕ್ತಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಡಿ ಹೊಗಳಿದ್ದಾರೆ.

    ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಕೇಂದ್ರ ಕ್ಷೇಮವನ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಆಗಮಿಸಿರುವುದು ನಮಗೆ ಸಂಭ್ರಮ ಮತ್ತು ಹೆಮ್ಮೆ. ಉತ್ತರದಿಂದ ದಕ್ಷಿಣದವರೆಗೂ ಅವರು ಮನೆ ಮಾತಾಗಿದ್ದಾರೆ. ಯೋಗಿ ಆದಿತ್ಯನಾಥ್ ಗುರುಗಳಾಗಿದ್ದವರು. ನಮ್ಮ ಧರ್ಮ ಮತ್ತು ಸಮಾಜದಲ್ಲಿ ಗುರುಗಳಿಗೆ ಅ ಅತ್ಯುತ್ತಮ ಸ್ಥಾನವಿದೆ. ಮೂರು ದಶಕಗಳಿಗೂ ಹೆಚ್ಚು ಕಾಲ ಸಾರ್ವಜನಿಕ ಜೀವನದಲ್ಲಿದ್ದಾರೆ. ಆದರ್ಶಪ್ರಾಯ, ಮಾದರಿಯಾಗಿ, ಸಾರ್ವಜನಿಕ ಜೀವನವನ್ನು ಅತಿ ಉನ್ನತ ಮಟ್ಟಕ್ಕೆ ಕೊಂಡೊಯ್ದಿದ್ದಾರೆ. ನುಡಿದಂತೆ ನಡೆಯುತ್ತಾರೆ. ಗುರುಗಳು ಕೂಡ ದಕ್ಷ ಆಡಳಿತಗಾರರಾಗಬಹುದೆಂದು ಅವರು ನಿರೂಪಿಸಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಕ್ಷೇಮವನ ಜೀವನದ ಸೂತ್ರವಾಗಲಿ: ಬೊಮ್ಮಾಯಿ

    ತತ್ವಜ್ಞಾನ ಮತ್ತು ಆಡಳಿತ ಒಂದೇ ನಾಣ್ಯದ ಎರಡು ಮುಖಗಳೆಂದು ತೋರಿಸಿಕೊಟ್ಟಿದ್ದಾರೆ ಹಾಗೂ ಆಧ್ಯಾತ್ಮ ಮತ್ತು ಆಡಳಿತವೂ ಒಂದೇ ನಾಣ್ಯದ ಎರಡು ಮುಖಗಳೆಂದು ನಿರೂಪಸಿದ್ದಾರೆ. ದುಷ್ಟರ ಶಿಕ್ಷೆ, ಶಿಷ್ಟರ ರಕ್ಷಣೆ ಅವರ ಆಡಳಿತದ ಪ್ರಮುಖ ಅಂಶ. ಹಲವಾರು ಸಮುದಾಯಗಳಲ್ಲಿ ವಿಶ್ವಾಸ ಮೂಡಿಸುವ ಕೆಲಸವನ್ನು ಅವರು ಮಾಡಿದ್ದಾರೆ. ಪ್ರಜಾಸತ್ತಾತ್ಮಕ, ಬಹು ಸಂಸ್ಕೃತಿಯ ಭಾರತದಲ್ಲಿ ಹೊಸ ಅಧ್ಯಾಯವನ್ನು ಅವರು ಬರೆದಿದ್ದಾರೆ. ನಮ್ಮ ಸಮಾಜದಲ್ಲಿ ಗುರುಗಳಿಗೆ ಅತ್ಯುನ್ನತ ಸ್ಥಾನವಿದೆ. ಸಾರ್ವಜನಿಕ ಬದುಕಿನಲ್ಲಿ 3 ದಶಕಗಳಿಂದಲೂ ಹೆಚ್ಚಿದ್ದು, ನುಡಿದಂತೆ ನಡೆಯುತ್ತಾರೆ. ಗುರುಗಳು ದಕ್ಷ ಆಡಳಿತಗಾರರಾಗಿರಬಹುದು. ತತ್ವಜ್ಞಾನ, ಆಡಳಿತಕ್ಕೆ ಸಂಬಂಧವಿಲ್ಲ ಎಂದು ತೋರಿಸಿಕೊಟ್ಟಿದ್ದಾರೆ. ಇದನ್ನೂ ಓದಿ: ಬೆಂಗಳೂರಿಗೆ ಇನ್ಮುಂದೆ ಸಾಂಪ್ರದಾಯಿಕ ವೈದ್ಯ ಪದ್ಧತಿ ಹಬ್ ಆಗೋ ಅವಕಾಶ- ಯೋಗಿ ಆದಿತ್ಯನಾಥ್

    Live Tv
    [brid partner=56869869 player=32851 video=960834 autoplay=true]

  • ಕ್ಷೇಮವನ ಜೀವನದ ಸೂತ್ರವಾಗಲಿ: ಬೊಮ್ಮಾಯಿ

    ಕ್ಷೇಮವನ ಜೀವನದ ಸೂತ್ರವಾಗಲಿ: ಬೊಮ್ಮಾಯಿ

    ಬೆಂಗಳೂರು: ವನ ಎಂದರೆ ಹಸಿರು, ಸಮೃದ್ಧಿ ಹಾಗೂ ಆಮ್ಲಜನಕ. ಆಮ್ಲಜನಕ ಜೀವನದ ಸೂತ್ರ. ಈ ಕ್ಷೇಮವನ ಜೀವನದ ಸೂತ್ರವಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕೇಂದ್ರದ ವತಿಯಿಂದ ನೂತನವಾಗಿ ನಿರ್ಮಿಸಿರುವ ಪ್ರಕೃತಿ ಚಿಕಿತ್ಸಾ ಕೇಂದ್ರ ಕ್ಷೇಮವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕ್ಷೇಮವನ ಎಂಬ ಹೆಸರಿನಲ್ಲಿಯೇ ನೆಮ್ಮದಿ ಇದೆ. ಮೊದಲು ಪತ್ರ ಬರೆಯುವಾಗ ಕ್ಷೇಮ ಎಂದು ಬರೆದೇ ಪ್ರಾರಂಭ ಮಾಡುತ್ತಿದ್ದೆವು. ಆರೋಗ್ಯ ಎಂಬುದು ಅತ್ಯಂತ ಪ್ರಮುಖ ಸಂಗತಿ ಎನ್ನುವುದನ್ನು ನಮ್ಮ ಪೂರ್ವಜರು ಅರಿತಿದ್ದರು. ನಾವು ಈಗ ಇದನ್ನು ತಿರುವು ಮುರುವು ಮಾಡಿದ್ದೇವೆ. ಬೇಡವಾದುದ್ದನ್ನು ದೇಹಕ್ಕೆ ಸೇರಿಸಿಕೊಂಡು ಕಷ್ಟಪಡುತ್ತಿದ್ದೇವೆ. ದೇಹದೊಳಗಿನ ವಿಷಕಾರಿ ಅಂಶಗಳನ್ನು ಹೊರತೆಗೆದು ದೇಹ ಮತ್ತು ಮನಸ್ಸುಗಳಿಗೆ ಆರೋಗ್ಯ ನೀಡುವ ಕೆಲಸವನ್ನು ಕ್ಷೇಮವನ ಮಾಡಲಿದೆ ಎಂದರು. ಇದನ್ನೂ ಓದಿ: ಬೆಂಗಳೂರಿಗೆ ಇನ್ಮುಂದೆ ಸಾಂಪ್ರದಾಯಿಕ ವೈದ್ಯ ಪದ್ಧತಿ ಹಬ್ ಆಗೋ ಅವಕಾಶ- ಯೋಗಿ ಆದಿತ್ಯನಾಥ್

    ಕ್ಷೇಮವನ ಎನ್ನುವುದು ಅದ್ಭುತ ಕಲ್ಪನೆ. ಬಾಹ್ಯದಿಂದ ಚಿಕಿತ್ಸೆ, ಔಷಧ ನೀಡದೇ ಸಹಜ ರೀತಿಯಲ್ಲಿ ಚಿಕಿತ್ಸೆ ನೀಡಿ ವಾಸಿ ಮಾಡುವ ಕ್ಷೇತ್ರವಿದು. ಚಿಕಿತ್ಸೆಯಲ್ಲಿ ಧರ್ಮವನ್ನು ಸೇರಿಸುವ ಕ್ಷೇತ್ರ ಕ್ಷೇಮವನ. ಆರೋಗ್ಯ ಎನ್ನುವುದು ಮನಸ್ಥಿತಿಯಿಂದ ಪ್ರಾರಂಭವಾಗುತ್ತದೆ. ಮನಸ್ಸು ಮತ್ತು ದೇಹದ ಉತ್ತಮ ಸ್ಥಿತಿಯೇ ಆರೋಗ್ಯ. ಸಂಯಮದ ಮನಸ್ಥಿತಿ ಅಗತ್ಯ. ಮನಸ್ಸು ಹತೋಟಿಯಲ್ಲಿದ್ದರೆ ಸ್ಥಿತಪ್ರಜ್ಞತೆಗೆ ದಾರಿ ಮಾಡಿಕೊಡುತ್ತದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: CBI ತನಿಖೆ ಮಾಡಿದ್ರೆ ಮುರುಘಾ ಮಠದ ಇನ್ನಷ್ಟು ಕೇಸ್ ಬೆಳಕಿಗೆ ಬರುತ್ತೆ – ಒಡನಾಡಿ ಸಂಸ್ಥೆ

    ವಾಸ್ತವವಲ್ಲದ್ದನ್ನು ದೇಹ ಮತ್ತು ಮನಸ್ಸಿನೊಳಗೆ ಬಿಟ್ಟುಕೊಳ್ಳದಿರುವುದೇ ಸ್ಥಿತಪ್ರಜ್ಞತೆ. ಸ್ಥಿತಪ್ರಜ್ಞತೆಯ ಸ್ಥಿತಿಗೆ ಕ್ಷೇಮವನ ಕೊಂಡೊಯ್ಯುತ್ತದೆ ಎಂದು ತಿಳಿಸಿದರಲ್ಲದೇ ಮಾನವನ ಪ್ರತಿ ಅಂಗಾಂಗ ಕ್ಷೇಮವಾಗಿರಬೇಕು. ದಿನಚರಿ ಅಶಿಸ್ತಿ ನಿಂದ ಕೂಡಿದ್ದರೆ ದೇಹ ಮತ್ತು ಮನಸ್ಸು ಶಿಥಿಲಗೊಳ್ಳತ್ತದೆ. ಕ್ಷೇಮವನ ದೇಹ ಮತ್ತು ಮನಸ್ಸುಗಳನ್ನು ಸಮತೋಲನ ಕಾಯುತ್ತದೆ ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ಬೆಳ್ಳಂಬೆಳಗ್ಗೆ ಬಿಎಸ್‍ವೈ ನಿವಾಸಕ್ಕೆ ದೌಡಾಯಿಸಿದ ಸಿಎಂ ಬೊಮ್ಮಾಯಿ

    ಬೆಳ್ಳಂಬೆಳಗ್ಗೆ ಬಿಎಸ್‍ವೈ ನಿವಾಸಕ್ಕೆ ದೌಡಾಯಿಸಿದ ಸಿಎಂ ಬೊಮ್ಮಾಯಿ

    ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಿವಾಸಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ದೌಡಾಯಿಸಿದ್ದು, ಕುತೂಹಲಕ್ಕೀಡು ಮಾಡಿತ್ತು.

    ಆದರೆ ಬಿಎಸ್‍ವೈ ಹಾಗೂ ಸಿಎಂ ಭೇಟಿ ಹಿಂದೆ ಮೋದಿ ಆಗಮನದ ಚರ್ಚೆ ಇದ್ದಿರುವುದಾಗಿ ಮೂಲಗಳು ತಿಳಿಸಿವೆ. ಸೆಪ್ಟೆಂಬರ್ 2 ಕ್ಕೆ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೋದಿ ಸಮಾವೇಶದ ಕುರಿತು ಯಡಿಯೂರಪ್ಪರ ಜೊತೆ ಸಿಎಂ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಸಮಾವೇಶಕ್ಕೆ ಎರಡು ಲಕ್ಷ ಜನ ಸೇರಿಸಿ ಯಶಸ್ವಿಗೊಳಿಸುವ ಬಗ್ಗೆ ಚರ್ಚಿಸಲಾಗಿದೆ. ಸೆಪ್ಟೆಂಬರ್ 8 ರಂದು ನಡೆಯಲಿರುವ ಜೊತೆಗೆ ದೊಡ್ಡಬಳ್ಳಾಪುರ ಜನೋತ್ಸವ ಸಮಾವೇಶದ ಬಗ್ಗೆಯೂ ಚರ್ಚಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಜನೋತ್ಸವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಆದಾಯಕ್ಕಾಗಿ ಕಮ್ಯುನಿಸ್ಟ್ ಸರ್ಕಾರ ಹಿಂದೂ ದೇಗುಲವನ್ನು ವಶಪಡಿಸಿಕೊಳ್ತಿದೆ: ಸುಪ್ರಿಂಕೋರ್ಟ್ ಮಾಜಿ ಜಡ್ಜ್ ವೀಡಿಯೋ ವೈರಲ್

    Live Tv
    [brid partner=56869869 player=32851 video=960834 autoplay=true]

  • ತಳ್ಳಾಟ, ಕಿತ್ತಾಟದ ಸರ್ಕಾರ ನಡೆಸುವುದಕ್ಕಿಂತ ವಿಸರ್ಜಿಸಿ ಚುನಾವಣೆಗೆ ಬನ್ನಿ – ಬಿಜೆಪಿಗೆ ಕಾಂಗ್ರೆಸ್‌ ಸವಾಲು

    ತಳ್ಳಾಟ, ಕಿತ್ತಾಟದ ಸರ್ಕಾರ ನಡೆಸುವುದಕ್ಕಿಂತ ವಿಸರ್ಜಿಸಿ ಚುನಾವಣೆಗೆ ಬನ್ನಿ – ಬಿಜೆಪಿಗೆ ಕಾಂಗ್ರೆಸ್‌ ಸವಾಲು

    – ಸಿಎಂ ಮೇಲೆಯೇ ಸರ್ಜಿಕಲ್ ಸ್ಟ್ರೈಕ್
    – ಬಿಜೆಪಿಯ ಭ್ರಷ್ಟೋತ್ಸವ ಮಾತ್ರ ಅಡೆತಡೆಯಿಲ್ಲದೆ ಸಾಗುತ್ತಿದೆ

    ಬೆಂಗಳೂರು: ಬಿಜೆಪಿಯ ಜನೋತ್ಸವ ಮುಂದೂಡಿಕೆಯ ಮೇಲೆ ಮುಂದೂಡಿಕೆಯಾಗುತ್ತಿದೆ, ಆದರೆ ಬಿಜೆಪಿ ಭ್ರಷ್ಟೋತ್ಸವ ಮಾತ್ರ ಅಡೆತಡೆಯಿಲ್ಲದೆ ಸಾಗುತ್ತಿದೆ. ಮಾಧುಸ್ವಾಮಿಯವರ ರಾಜೀನಾಮೆ ಕೇಳಿದ ಎಸ್.ಟಿ ಸೋಮಶೇಖರ್ ಅವರ ಅಕ್ರಮದ ವಿರುದ್ಧ ಪ್ರಧಾನಿಗೆ ಪತ್ರ ಬರೆಯಲಾಗಿದೆ. ಇಂತಹ ತಳ್ಳಾಟ, ಕಿತ್ತಾಟದ ಸರ್ಕಾರ ನಡೆಸುವುದಕ್ಕಿಂತ ವಿಸರ್ಜಿಸಿ ಚುನಾವಣೆಗೆ ಬನ್ನಿ ಎಂದು ಬಿಜೆಪಿಗೆ ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಸವಾಲು ಹಾಕಿದೆ.

    ಟ್ವೀಟ್‍ನಲ್ಲಿ ಏನಿದೆ?
    ಬಿಜೆಪಿಯ ಜನೋತ್ಸವ ಮುಂದೂಡಿಕೆಯ ಮೇಲೆ ಮುಂದೂಡಿಕೆಯಾಗುತ್ತಿದೆ, ಆದರೆ ಬಿಜೆಪಿ ಭ್ರಷ್ಟೋತ್ಸವ ಮಾತ್ರ ಅಡೆತಡೆಯಿಲ್ಲದೆ ಸಾಗುತ್ತಿದೆ. ಮಾಧುಸ್ವಾಮಿಯವರ ರಾಜೀನಾಮೆ ಕೇಳಿದ ಎಸ್.ಟಿ ಸೋಮಶೇಖರ್ ಅವರ ಅಕ್ರಮದ ವಿರುದ್ಧ ಪ್ರಧಾನಿಗೆ ಪತ್ರ ಬರೆಯಲಾಗಿದೆ. ಈಗ ಯಾರ ರಾಜೀನಾಮೆ ಪಡೆಯುವಿರಿ ಬೊಮ್ಮಾಯಿ ಅವರೇ? ಮಾಧುಸ್ವಾಮಿಯವರದ್ದೋ, ಸೋಮಶೇಖರ್‍ರದ್ದೋ? ಬಿಜೆಪಿಯ ಮ್ಯಾನೇಜ್‌ಮೆಂಟ್ ಸರ್ಕಾರದಲ್ಲಿ ಸಿಎಂ ಒಂದೇ ವರ್ಷದ ಅವಧಿಯಲ್ಲಿ 12 ಭಾರಿ ದೆಹಲಿಗೆ ಹೋದರೂ ಸಂಪುಟ ವಿಸ್ತರಣೆ ಮಾಡಲಾಗಲಿಲ್ಲ. ಸಿಎಂ ಸಂಪುಟ ಸರ್ಜರಿಗೆ ಕಸರತ್ತು ನಡೆಸುತ್ತಿದ್ದರೆ, ಸ್ಥಾನ ವಂಚಿತರು ಸಿಎಂ ಮೇಲೆಯೇ ಸರ್ಜಿಕಲ್ ಸ್ಟ್ರೈಕ್ ನಡೆಸುತ್ತಿದ್ದಾರೆಯೇ? ಇದನ್ನೂ ಓದಿ: ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಬಿಎಸ್‌ವೈ ಈಗ ಟಾಪ್‌ 5 ನಾಯಕ

    ಇಷ್ಟು ಬೇಗ ನೆರೆ ಸಂತ್ರಸ್ತರನ್ನು ಮರೆಯಿತೇ ಸರ್ಕಾರ? ಸುರೇಶ್ ಗೌಡರ ಸಿಎಂ ಬದಲಾವಣೆ ಹೇಳಿಕೆ ಬೆನ್ನಲ್ಲೇ ‘3ನೇ ಸಿಎಂ’ ಕುರ್ಚಿಗೆ ಜಗದೀಶ್ ಶೆಟ್ಟರ್ ಸೇರಿ ಹಲವರು ಟವೆಲ್ ಹಾಕುತ್ತಿದ್ದಾರೆ. ಆದರೆ ಮುರುಗೇಶ್ ನಿರಾಣಿಯವರು ಸಿಎಂ ಕುರ್ಚಿಗೆ ಟವೆಲ್ ಬದಲಿಗೆ ಪೋಸ್ಟರನ್ನೇ ಅಂಟಿಸಿದ್ದಾರೆ! ಮ್ಯಾನೇಜ್‍ಮೆಂಟ್ ಸರ್ಕಾರದ ಹೊಸ ಮ್ಯಾನೇಜರ್ ಹುದ್ದೆಗೆ 2,500 ಕೋಟಿಯ ಚೌಕಾಸಿ ನಡೆಯುತ್ತಿದೆಯೇ? 40% ಸರ್ಕಾರದಲ್ಲಿ ವೈಫಲ್ಯಗಳ ಮೂಟೆ ಹೊತ್ತಿರುವ ಸಚಿವರುಗಳು ಪರಸ್ಪರ ರಾಜೀನಾಮೆ ಕೇಳುತ್ತಿದ್ದಾರೆ. ಎಸ್.ಟಿ ಸೋಮಶೇಖರ್ ಅವರೇ, ಮೊದಲು ರಾಜೀನಾಮೆ ಕೊಡಬೇಕಾದವರು ನೀವೇ ಅಲ್ಲವೇ? ಸಹಕಾರಿ ಬ್ಯಾಂಕುಗಳಲ್ಲಿನ ರೈತರ ಸುಲಿಗೆ ತಡೆಯುವ ಕನಿಷ್ಠ ಕಾಳಜಿ ಇಲ್ಲದಿರುವುದೇಕೆ? ಮಾಹಿತಿ ಸಿಕ್ಕ ನಂತರವೂ ಸುಮ್ಮನಿದ್ದಿದೇಕೆ? ಅದರಲ್ಲೂ 40% ಕಮಿಷನ್ ಇತ್ತೇ? ಇದನ್ನೂ ಓದಿ: ಅತಿಯಾದ ಬುದ್ಧಿವಂತಿಕೆ ಒಳ್ಳೆಯದಲ್ಲ: ಮಾಧುಸ್ವಾಮಿ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

    ಸೊಗಡು ಶಿವಣ್ಣ Vs ಜಿ.ಎಸ್ ಬಸವರಾಜ್, ರೇಣುಕಾಚಾರ್ಯ Vs ಕೆ.ಸುಧಾಕರ್, ಸೋಮಶೇಖರ್ Vs ಮಾಧುಸ್ವಾಮಿ, ಮುನಿರತ್ನ Vs ಮಾಧುಸ್ವಾಮಿ, ಅಶೋಕ್ Vs ಅಶ್ವಥ್‌ನಾರಾಯಣ, ಭಗವಂತ್ ಖೂಬಾ Vs ಶರಣು ಸಲಗರ, ಕಾರ್ಯಕರ್ತರು Vs ಬಿಜೆಪಿ, ಆರಗ ಜ್ಞಾನೇಂದ್ರ Vs ಯತ್ನಾಳ್, BSY vs ಸಂತೋಷ್ ಒಂದೇ ಹಡಗಿನಲ್ಲಿ ಇಷ್ಟೊಂದು ರಂಧ್ರಗಳಿದ್ದರೆ ಮುಳುಗದೆ ಇರುವುದೇ?! ಸಿಎಂ ಬದಲಾಗುತ್ತಾರೆ ಎನ್ನುತ್ತಾರೆ ಸುರೇಶ್ ಗೌಡ. ಸ್ಟ್ರಾಂಗ್ ಗೃಹಸಚಿವರು ಬೇಕು ಎನ್ನುತ್ತಾರೆ ಯತ್ನಾಳ್. ಮಾಧುಸ್ವಾಮಿ ರಾಜೀನಾಮೆ ಕೊಡಬೇಕು ಎನ್ನುತ್ತಾರೆ ಮುನಿರತ್ನ. ಸಿಎಂ ಹೇಳಿದ್ರೆ ಕೊಡ್ತೀನಿ ಅಂತಾರೆ ಮಾಧುಸ್ವಾಮಿ. ಇಂತಹ ತಳ್ಳಾಟ, ಕಿತ್ತಾಟದ ಸರ್ಕಾರ ನಡೆಸುವುದಕ್ಕಿಂತ ವಿಸರ್ಜಿಸಿ ಚುನಾವಣೆಗೆ ಬನ್ನಿ ಎಂದು ಕಾಂಗ್ರೆಸ್ ಸವಾಲು ಹಾಕಿದೆ.

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿ ಹೈಕಮಾಂಡ್‍ಗೆ ಕರ್ನಾಟಕದ ಸಿಎಂಗಳೆಂದರೆ ಕೈ ಗೊಂಬೆ ಇದ್ದಹಾಗೆ ಆಡಿಸಿಯೂ ನೋಡ್ತಾರೆ, ಬೀಳಿಸಿಯೂ ನೋಡ್ತಾರೆ: ಕಾಂಗ್ರೆಸ್

    ಬಿಜೆಪಿ ಹೈಕಮಾಂಡ್‍ಗೆ ಕರ್ನಾಟಕದ ಸಿಎಂಗಳೆಂದರೆ ಕೈ ಗೊಂಬೆ ಇದ್ದಹಾಗೆ ಆಡಿಸಿಯೂ ನೋಡ್ತಾರೆ, ಬೀಳಿಸಿಯೂ ನೋಡ್ತಾರೆ: ಕಾಂಗ್ರೆಸ್

    ಬೆಂಗಳೂರು: ಬಿಜೆಪಿ ಹೈಕಮಾಂಡ್‍ಗೆ ಕರ್ನಾಟಕದ ಸಿಎಂಗಳೆಂದರೆ ಕೈ ಗೊಂಬೆ ಇದ್ದಹಾಗೆ ಆಡಿಸಿಯೂ ನೋಡುತ್ತಾರೆ, ಬೀಳಿಸಿಯೂ ನೋಡುತ್ತಾರೆ ಎಂದು ಕಾಂಗ್ರೆಸ್ ಸರಣಿ ಟ್ವೀಟ್ ಮೂಲಕ ವ್ಯಂಗ್ಯವಾಡಿದೆ.

    ಟ್ವೀಟ್‍ನಲ್ಲಿ ಏನಿದೆ:
    ಬಿಜೆಪಿ ಹೈಕಮಾಂಡ್‍ಗೆ ಕರ್ನಾಟಕದ ಸಿಎಂಗಳೆಂದರೆ ಕೈ ಗೊಂಬೆ ಇದ್ದಹಾಗೆ, ಆಡಿಸಿಯೂ ನೋಡುತ್ತಾರೆ, ಬೀಳಿಸಿಯೂ ನೋಡುತ್ತಾರೆ! ಯಡಿಯೂರಪ್ಪ ಅವರಂತಹ ನಾಯಕರನ್ನೇ ಹೇಳದೆ ಕೇಳದೆ ಮನೆಗೆ ಕಳುಹಿಸಿರುವಾಗ ಬೊಂಬೆ ಸಿಎಂ ಬೊಮ್ಮಾಯಿ ಅವರು ಯಾವ ಲೆಕ್ಕ! ಸಂತೋಷ ಕೂಟಕ್ಕೆ ಸಂತೋಷಪಡಿಸುವ ಬೊಮ್ಮಾಯಿಯವರ ಪ್ರಯತ್ನ ವಿಫಲವಾಗಿದೆ. ಹಗರಣ ಮತ್ತು ವೈಫಲ್ಯಗಳ ಕೊಡ ತುಂಬಿದೆ. ಇದನ್ನೂ ಓದಿ: ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ಆಸ್ತಿ ಸೀಜ್: ಅಲೋಕ್ ಕುಮಾರ್

    ಯಡಿಯೂರಪ್ಪ ಅವರನ್ನು ಸರ್ಕಾರದ ಎರಡನೇ ವರ್ಷದ ವಾರ್ಷಿಕೋತ್ಸವದ. ಸಂಭ್ರಮದ ಸಂದರ್ಭದಲ್ಲೇ ಕಣ್ಣೀರು ಹಾಕಿಸಿ ಕಳುಹಿಸಲಾಗಿತ್ತು. ಈಗ ಬಸವರಾಜ ಬೊಮ್ಮಾಯಿ ಅವರನ್ನು 1ನೇ ವಾರ್ಷಿಕೋತ್ಸವದ ಹೊತ್ತಲ್ಲಿ ಕೆಳಗಿಳಿಸುವ ವೇದಿಕೆ ಸಜ್ಜಾಗುತ್ತಿದೆ. 1 ವರ್ಷದಲ್ಲಿ 12 ಬಾರಿ ದೆಹಲಿ ಪ್ರವಾಸ ಕೈಗೊಂಡರೂ ಕೈಗೊಂಬೆ ಸಿಎಂಗೆ ಸಂಪುಟ ಸಂಕಟ ಬಗೆಹರಿಸಲಾಗದ್ದೇ ಇದಕ್ಕೆ ಸಾಕ್ಷಿ! ಕರ್ನಾಟಕದ ಸಿಎಂಗಳು ಹೈಕಮಾಂಡ್ ಕೈಗೊಂಬೆಗಳು. ಬಿಎಸ್‍ವೈರನ್ನು ಹೇಳದೇ ಕೇಳದೇ ಮನೆಗೆ ಕಳಿಸಿದ್ರು. ಇನ್ನು ಬೊಮ್ಮಾಯಿ ಯಾವ ಲೆಕ್ಕ. ಇದನ್ನೂ ಓದಿ: ಸಿಎಂ ಬದಲಾವಣೆ ಬಗ್ಗೆ ಯಾರೂ ಚರ್ಚೆ ಮಾಡಬಾರ್ದು, ಇದನ್ನು ಇಲ್ಲಿಗೇ ನಿಲ್ಲಿಸಿ: ಬಿಎಸ್‍ವೈ

    ಅಶೋಕ್ ಅವರೇ, ಬಿಎಸ್‍ವೈ ಅವರು ಪುತ್ರನಿಗೆ ಟಿಕೆಟ್ ಘೋಷಿಸಿ ಹೈಕಮಾಂಡ್ ಬೆದರಿಕೆಗೆ ಯೂಟರ್ನ್ ಹೊಡೆದರು ಹೀಗಿರುವಾಗ ತಮ್ಮ ಅಭಿಪ್ರಾಯಕ್ಕೆ ಬೆಲೆ ಇದೆಯೇ? ನಿಮಗಿಂತ ಜೂನಿಯರ್ ಅಶ್ವಥ್ ನಾರಾಯಣರಿಗೆ ಇರುವ ಪ್ರಾಮುಖ್ಯತೆ ನಿಮಗೆ ಇಲ್ಲದಾಗುತ್ತಿತ್ತೇ? ಅಂದಹಾಗೆ ಸಿಎಂ ಎಂಬ ಮಾವಿನ ಹಣ್ಣಿಗಾಗಿ ಮರದ ಕೆಳಗೆ ತಾವೂ ಕಾದು ಕುಳಿತಿದ್ದೀರಿ ಅಲ್ಲವೇ. 40% ಸರ್ಕಾರದ ಹಗರಣಗಳ ಸರಮಾಲೆ ಬೆಳೆಯುತ್ತಲಿದೆ. ಸುಪ್ರೀಂ ಕೋರ್ಟ್ ನಿರ್ದೇಶಿಸಿದ ನಿಯಮಾವಳಿಗಳನ್ನು ಉಲ್ಲಂಘಿಸಿ (ಭ್ರಷ್ಟಾಚಾರ ಡೆವಲಪ್ಮೆಂಟ್ ಅಥಾರಿಟಿ) ಬಿಡಿಎ ಗೃಹಸಚಿವರು ಸೇರಿದಂತೆ ಬಿಜೆಪಿಗರಿಗೆ ಬೃಹತ್ ನಿವೇಶನ ಮಂಜೂರು ಮಾಡಿದ್ದು ಸರ್ಕಾರದ ಭ್ರಷ್ಟಾಚಾರಕ್ಕೆ ಹಿಡಿದ ಕನ್ನಡಿ. ಬೊಮ್ಮಾಯಿ ಅವರೇ, ಇದೇನಾ ನಿಮ್ಮ ಪ್ರಾಮಾಣಿಕ ಆಡಳಿತ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

    Live Tv
    [brid partner=56869869 player=32851 video=960834 autoplay=true]