ಚಿಕ್ಕಬಳ್ಳಾಪುರ: ರಾಜಮೌಳಿ ನಿರ್ದೆಶನದ ಮಲ್ಟಿ ಸ್ಟಾರ್ ಸಿನಿಮಾ ಇದೇ 25 ರಂದು ವಿಶ್ವದಾದ್ಯಂತ ತೆರೆಗೆ ಸಜ್ಜಾಗಿದೆ. ಈ ನಡುವೆ ಸಿನಿ ತಂಡ ಇಂದು ಚಿಕ್ಕಬಳ್ಳಾಪುರದಲ್ಲಿ ಪ್ರೀ ರಿಲೀಸ್ ಇವೆಂಟ್ ಹಮ್ಮಿಕೊಂಡಿತ್ತು. ಆದರೆ ಇವೆಂಟ್ ಆರಂಭಕ್ಕೂ ಮುನ್ನ ಅಭಿಮಾನಗಳ ಅತಿರೇಕದ ವರ್ತನೆ ಕಂಡುಬಂತು.
ಆರ್‌ಆರ್‌ಆರ್ ಮೂವಿ ಸಾಂಗ್, ಟ್ರೈಲರ್‌ಗಳಿಂದ ಸಖತ್ ಸದ್ದು ಮಾಡ್ತಿದ್ದು, ಮಲ್ಟಿ ಸ್ಟಾರ್ ಸಿನಿಮಾ ತೀವ್ರ ಕುತೂಹಲ ಕೆರಳಿಸಿದೆ. ಈ ನಡುವೆ ಚಿತ್ರತಂಡ ಇವತ್ತು ಚಿಕ್ಕಬಳ್ಳಾಪುರದ ಅಗಲಗುರ್ಕಿಯಲ್ಲಿ ಅದ್ದೂರಿಯಾಗಿ ಪ್ರೀ-ರಿಲೀಸ್ ಇವೆಂಟ್ ಆಯೋಜಿಸಿತ್ತು. ಕಾರ್ಯಕ್ರಮದ ಆರಂಭದಲ್ಲೇ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್‌ಗೆ ಆರ್‌ಆರ್‌ಆರ್ ಚಿತ್ರತಂಡ ಹಾಡಿನ ಮೂಲಕ ನಮನ ಸಲ್ಲಿಸಿತು. ಅಪ್ಪು ನೆನೆದು ನೆರೆದಿದ್ದವರು ಭಾವುಕರಾದ್ರು. ಬೃಹತ್ ವೇದಿಕೆಯಲ್ಲಿ ನಟ ರಾಮ್‍ಚರಣ್, ನಟ ಜ್ಯೂನಿಯರ್ ಎನ್‌ಟಿಆರ್ ಸೇರಿದಂತೆ ಕಲಾವಿದರು ಚಿತ್ರದ ಹಾಡುಗಳಿಗೆ ಸ್ಪೆಪ್ಸ್ ಹಾಕಿದರು. ಇದನ್ನೂ ಓದಿ: ಸ್ಟೇಜ್‌ನತ್ತ ನುಗ್ಗಿದ ಫ್ಯಾನ್ಸ್ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ- RRR ಪ್ರೀ-ರಿಲೀಸ್ ಇವೆಂಟ್ ತಡವಾಗಿ ಆರಂಭ
ಕಾರ್ಯಕ್ರಮ ಆರಂಭಕ್ಕೂ ಮುನ್ನ ಅಭಿಮಾನಿಗಳು ತಮ್ಮ ನೆಚ್ಚಿನ ನಟರನ್ನು ನೋಡಲು ನಾ ಮುಂದು ತಾ ಮುಂದು ಅಂತ ಒಬ್ಬರ ಮೇಲೊಬ್ಬರು ಮುನ್ನುಗ್ಗಿದ್ರು. ಬ್ಯಾರಿಕೇಡ್‌ಗಳನ್ನು ಮುರಿದು ಹಾಕಿದ್ರು. ಮುನ್ನುಗ್ಗಿ ವೇದಿಕೆಯ ಮುಂಭಾಗಕ್ಕೆ ಧಾವಿಸಿದರು. ಎಷ್ಟೇ ಹೇಳಿದ್ರೂ, ಯಾರೇ ಹೇಳಿದ್ರೂ ಅಭಿಮಾನಿಗಳಂತೂ ಯಾರ ಮಾತು ಕೇಳಲಿಲ್ಲ ಕೈಗೆ ಸಿಕ್ಕ ವಸ್ತುಗಳು, ಚೇರ್‌ಗಳನ್ನು ಬಿಸಾಡಿದ್ರು. ಪುಡಿ ಪುಡಿ ಮಾಡಿದ್ರು. ಪೊಲೀಸರ ಮೇಲೆಯೇ ಬಾಟಲಿ, ಚಪ್ಪಲಿ ತೂರಿ ಅಸಭ್ಯ ವರ್ತನೆ ತೋರಿದ್ರು. ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳನ್ನು ನಿಯಂತ್ರಿಸಲಾಗದೆ ಪೊಲೀಸರು ಹೈರಾಣಾದರು.
ಕಾರ್ಯಕ್ರಮಲ್ಲಿ ಅಭಿಮಾನದ ಸಾಗರವೇ ಹರಿದು ಬಂದಿತ್ತು. ಸಿಎಂ ಬಸವರಾಜ ಬೊಮ್ಮಾಯಿ, ನಟ ಶಿವಣ್ಣ, ಸಚಿವ ಸುಧಾಕರ್ ಸೇರಿದಂತೆ ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.
ಚಿಕ್ಕೋಡಿ: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ ಮನೆ, ಮನೆಗೆ ಪಡಿತರ ತಲುಪಿಸುವ ಯೋಜನೆಯನ್ನು ಬಿಜೆಪಿ ಸರ್ಕಾರ ಕೈ ಬಿಟ್ಟಿದೆ ಎಂದು ಆಹಾರ ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಂಧ್ರ ಪ್ರದೇಶ ಹಾಗೂ ತಮಿಳುನಾಡಿನಲ್ಲಿ ಈ ಯೋಜನೆ ಯಶಸ್ವಿಯಾಗದ ಹಿನ್ನೆಲೆಯಲ್ಲಿ ಸಿಎಂ ಜೊತೆಗೆ ಚರ್ಚಿಸಿ ರಾಜ್ಯದಲ್ಲಿ ಈ ಯೋಜನೆಯನ್ನು ಕೈ ಬಿಡಲಾಗಿದೆ. ಈಗಿರುವ ಪಡಿತರ ಅಂಗಡಿಗಳ ಮೂಲಕವೇ ರೇಷನ್ ವಿತರಣೆ ಮಾಡಲಾಗುವುದು ಎಂದರು. ಇದನ್ನೂ ಓದಿ: ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಿದ ರಾಜ್ಯ ಬಜೆಟ್: ಕೆ.ಗೋಪಾಲಯ್ಯ
ಸಿಎಂ ಬಸವರಾಜ ಬೊಮ್ಮಾಯಿಯ ಚೊಚ್ಚಲ ಬಜೆಟ್ ಕುರಿತು ಪ್ರಶಂಸೆ ವ್ಯಕ್ತಪಡಿಸಿದ ಉಮೇಶ ಕತ್ತಿ, ಬಜೆಟ್‍ನಲ್ಲಿ ಕೃಷಿಗೆ 8 ಸಾವಿರ ಕೋಟಿ ರೂ. ನೀಡಿ ರೈತ ಪರ ಬಜೆಟ್ ಮಂಡಿಸಿದ್ದಾರೆ. ಆದರೆ ವಿರೋಧ ಪಕ್ಷದ ನಾಯಕರು ಬೋಗಸ್ ಬಜೆಟ್ ಎಂದಿದ್ದಾರೆ. ರಾಜ್ಯದಲ್ಲಿ ಜನ ಪರ ಬಜೆಟ್ ಹಾಗೂ ರಾಜ್ಯಕ್ಕೆ ಬೇಕಾದ ಸೌಲಭ್ಯಗಳನ್ನು ಒದಗಿಸುವ ಬಜೆಟ್‍ನ್ನು ಸಿಎಂ ಮಂಡಿಸಿದ್ದಾರೆ. ನೀರಾವರಿ ಯೋಜನೆಗೆ 25 ಸಾವಿರ ಕೋಟಿ ರೂ. ಬಜೆಟ್‍ನಲ್ಲಿ ಮೀಸಲಿಡಲಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಇದನ್ನೂ ಓದಿ: ರಷ್ಯಾ-ಉಕ್ರೇನ್ ಯುದ್ಧ: ಗಗನಕ್ಕೇರಿದ ಅಡುಗೆ ಎಣ್ಣೆ ದರ
ಹಿಡಕಲ್ ಜಲಾಶಯ ಅಭಿವೃದ್ದಿ ಪಡಿಸಲು 148 ಕೋಟಿ ರೂ. ನೀಡಲಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸಾಲ ಮಾಡಿಲ್ಲ ಸಿದ್ದರಾಮಯ್ಯ ಸರ್ಕಾರದಲ್ಲಿ ಸಾಲ ಮಾಡಲಾಗಿದೆ. ಕೊರೊನಾ ಸಂದರ್ಭದಲ್ಲಿ ಮಾತ್ರ ಬಿಜೆಪಿ ಅವಧಿಯಲ್ಲಿ ಸಾಲ ಮಾಡಲಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ಉಡುಪಿ: 5 ಶಾಸಕರು ಇಬ್ಬರು ಪ್ರಭಾವಿ ಸಚಿವರು ಒಬ್ಬರು ಕೇಂದ್ರ ಸಚಿವೆ, ರಾಷ್ಟ್ರಮಟ್ಟದ ಪ್ರಭಾವಿ ನಾಯಕ ಬಿ.ಎಲ್ ಸಂತೋಷ್ ಇರುವ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಬಿಜೆಪಿ ಸರ್ಕಾರ ಬಜೆಟ್‍ನಲ್ಲಿ ಕೊಟ್ಟಿದ್ದೇನು? ಎಂದು ಕಾಂಗ್ರೆಸ್ ನಾಯಕ ವಿನಯ್ ಕುಮಾರ್ ಸೊರಕೆ ಪ್ರಶ್ನೆ ಮಾಡಿದ್ದಾರೆ.
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸೊರಕೆ, ಕರಾವಳಿ ಭಾಗದಲ್ಲಿ ಅಭಿವೃದ್ಧಿಗೆ ಒತ್ತು ಕೊಟ್ಟರೆ ಯಾವುದೇ ರಾಜಕೀಯ ಲಾಭ ಸಿಗುವುದಿಲ್ಲ. ಭಾವನಾತ್ಮಕ ವಿಚಾರಗಳೇ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಶ್ರೀರಕ್ಷೆ ಎಂದು ಗೊತ್ತಿದ್ದು ಸಿಎಂ ಬೊಮ್ಮಾಯಿ ಬಜೆಟ್‍ನಲ್ಲಿ ಉಡುಪಿ ಜಿಲ್ಲೆಗೆ ಯಾವುದೇ ಅನುದಾನ ಕೊಟ್ಟಿಲ್ಲ ಎಂದು ವ್ಯಂಗ್ಯದ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಕಾಶಿ ಯಾತ್ರೆ ಕೈಗೊಳ್ಳುವವರಿಗೆ 5 ಸಾವಿರ ರೂ.ಸಹಾಯಧನ
ಬಜೆಟ್‍ನಲ್ಲಿ ಉಡುಪಿಯನ್ನು ಸಂಪೂರ್ಣವಾಗಿ ನಿರ್ಲಕ್ಷ ಮಾಡಲಾಗಿದೆ. ಆರ್ಥಿಕ ಪರಿಸ್ಥಿತಿಯನ್ನು ಉತ್ತೇಜನ ಗೊಳಿಸುವ ಯಾವುದೇ ಯೋಜನೆಗಳನ್ನು ಘೋಷಣೆ ಮಾಡಿಲ್ಲ. ಬಜೆಟ್ ಗಾತ್ರ ಶೇಕಡ ಹೆಚ್ಚಾಗಿದೆ. ಎಷ್ಟು ಸಾಲ ಪಡೆದು ಬಜೆಟ್ ಮಂಡಿಸಬಹುದೋ ಅದೆಲ್ಲವನ್ನು ಬಸವರಾಜ ಬೊಮ್ಮಾಯಿ ಬಳಸಿಕೊಂಡಿದ್ದಾರೆ. ಹಿಂದಿನ ಸರ್ಕಾರವು ಈ ಪ್ರಯೋಜನ ಬಳಸಿಕೊಂಡಿದೆ ಆದರೆ ಬೊಮ್ಮಾಯಿಯಷ್ಟು ಅಲ್ಲ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: 1 ರೂ. ಬಂದಿದ್ದು ಹೇಗೆ? ಹೋಗಿದ್ದು ಹೇಗೆ? – ಯಾವ ವಲಯಕ್ಕೆ ಎಷ್ಟು ಕೋಟಿ?
ರಾಜ್ಯ ಸರ್ಕಾರ 26 ಸಾವಿರ ಕೋಟಿ ರೂಪಾಯಿ ಬಡ್ಡಿ ಕಟ್ಟುತ್ತದೆ. ಕೇಂದ್ರ ಸರ್ಕಾರದಿಂದ ಬರುವ ಯೋಜನೆ ಹಣವನ್ನು ಇಟ್ಟುಕೊಂಡು ಬಜೆಟ್ ಗಾತ್ರವನ್ನು ಹಿಗ್ಗಿಸಲಾಗಿದೆ. ಕೇಂದ್ರದಿಂದ ನಮಗೆ ಸಹಜವಾಗಿ ಬರಬೇಕಾದ ನಮ್ಮ ಹಕ್ಕು ಜಿಎಸ್‍ಟಿಯನ್ನು ನಿರ್ಲಕ್ಷ್ಯ ಮಾಡಲಾಗಿದೆ. ಎಲ್ಲಾ ಇಲಾಖೆಗಳಿಗೆ ಹಣವನ್ನು ಹಂಚಿಕೆ ಮಾಡಲಾಗಿದೆ. ಹೊಸ ಯೋಜನೆ ಏನು ಇಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಒಲಿಂಪಿಕ್ಸ್‌ಗೆ ಸಿದ್ಧತೆ – 75 ಕ್ರೀಡಾಪಟುಗಳಿಗೆ ತಲಾ 10 ಲಕ್ಷ
ನಾರಾಯಣ ಗುರು ನಿಗಮ ಆಗಬೇಕು ಎಂಬ ಬೇಡಿಕೆ ಇತ್ತು. ನಿಗಮ ಮಾಡಿಯೇ ಮಾಡುತ್ತೇವೆ ಎಂಬ ಅಭಿಪ್ರಾಯಗಳು ಬಿಜೆಪಿ ಕಡೆಯಿಂದ ಕೇಳಿಬರುತ್ತಿತ್ತು. ನಿಗಮದ ಬೇಡಿಕೆ ಇರುವಾಗ ನಾಲ್ಕು ವಸತಿ ಶಾಲೆಗಳು ಮಾತ್ರ ಸಿಕ್ಕಿದೆ. ಸಿದ್ದರಾಮಯ್ಯ ಸರ್ಕಾರ ಅಲ್ಪಸಂಖ್ಯಾತರಿಗೆ 100 ಕೋಟಿ ರೂಪಾಯಿ ಕೊಟ್ಟಿದ್ದರು. ಬಿಜೆಪಿ ಎಲ್ಲಾ ಅನುದಾನವನ್ನು ಕಡಿತ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರು: ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಮೆಗಾ ಜ್ಯುವೆಲ್ಲರಿ ಪಾರ್ಕ್‍ನ್ನು ಬೆಂಗಳೂರಿನಲ್ಲಿ ಸ್ಥಾಪಿಸಲು ಮುಂದಾಗಿದ್ದು, ಇದರಿಂದ ಸುಮಾರು ಹತ್ತು ಸಾವಿರ ಜನರಿಗೆ ಉದ್ಯೋಗವಕಾಶ ಲಭಿಸಲಿದೆ ಎಂದು ಬಸವರಾಜ ಬೊಮ್ಮಾಯಿ ಬಜೆಟ್‍ನಲ್ಲಿ ಘೋಷಿಸಿದ್ದಾರೆ.
ನವ ಕರ್ನಾಟಕ ನವಬಾರತ ನಿರ್ಮಾಣ ಎಂಬ ಧ್ಯೇಯದಡಿಯಲ್ಲಿ ನವಕರ್ನಾಟಕ ನಿರ್ಮಾಣದ ಪರಿಕಲ್ಪನೆಯನ್ನು ಯೋಜನಾ ಬಧ್ಧವಾಗಿ ಪರಿಸರ ಸ್ನೇಹಿ ನವನಗರಗಳನ್ನು ನಿರ್ಮಿಸಲು ಉದ್ದೇಶಿಸಿದೆ. ಚಿನ್ನ ಮತ್ತು ಆಭರಣದ ಕುಶಲಕರ್ಮಿಗಳ ಹಾಗೂ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸೌಲಭ್ಯವನ್ನು ಒದಗಿಸಲು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಮೆಗಾ ಜ್ಯುವೆಲ್ಲರಿ ಪಾರ್ಕ್‍ನ್ನು ಬೆಂಗಳೂರಿನಲ್ಲಿ ಸ್ಥಾಪಿಸಲು ಮುಂದಾಗಿದ್ದು, ಇದರಿಂದ ಸುಮಾರು ಹತ್ತು ಸಾವಿರ ಜನರಿಗೆ ಉದ್ಯೋಗವಕಾಶ ಲಭಿಸಲಿದೆ. ಇದನ್ನೂ ಓದಿ: ಮೇಕೆದಾಟು ಯೋಜನೆಗೆ 1,000 ಕೋಟಿ ರೂ. ಅನುದಾನ
ರಾಜ್ಯಕ್ಕೆ ವಿದೇಶಿ ಹೊಡಿಕೆಗಳನ್ನು ಆಕರ್ಷಿಸಲು ಬೆಂಗಳೂರಿನಲ್ಲಿ 2022ರ ನವೆಂಬರ್ 2 ರಿಂದ 4ರವರೆಗೆ “ಇನ್ವೆಸ್ಟ್ ಕರ್ನಾಟಕ-2022” ಜಾಗತಿಕ ಹೂಡಿಕೆದಾರರ ಸಭೆಯನ್ನು ಆಯೋಜಿಸಲಾಗಿದೆ. 2019-20ರಿಂದ ಸ್ಥಗಿತಗೊಂಡಿರುವುವ ಮೈಶುಗರ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಸರ್ಕಾರ ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಮುಂದಿನ ಎರಡು ವರ್ಷಗಳ ಕಾಲ ಪ್ರಾಯೋಗಿಕವಾಗಿ ಸರ್ಕಾರದ ವತಿಯಿಂದ ಮೈಶುಗರ್ ಕಾರ್ಖಾನೆಯನ್ನು ನಡೆಲಾಗುವುದು. ಕಾರ್ಖಾನೆಯ ಯಂತ್ರೋಪಕರಣಗಳ ದುರಸ್ತಿಗಾಗಿ 50 ಕೋಟಿ ರೂ.ಗಳನ್ನು ಒದಗಿಸುವುದಲ್ಲದೆ ಹಣಕಾಸು ಸಂಸ್ಥೆಗಳಿಂದ ದುಡಿಯುವ ಬಂಡವಾಳವನ್ನು ಪಡೆಯಲು ವ್ಯವಸ್ಥೆ ಮಾಡಲು ತೀರ್ಮಾನಿಸಿದೆ.
ಕಲಬುರಗಿ ಮತ್ತು ವಿಜಯಪುರದಲ್ಲಿ ಮೆಗಾ-ಟೆಕ್ಸ್‌ಟೈಲ್ ಪಾರ್ಕ್‍ಗಳನ್ನು ಕೇಂದ್ರ ಸರ್ಕಾರದ ನೆರವಿನೊಂದಿಗೆ ಸ್ಥಾಪಿಸಲು ಪ್ರಸ್ತಾವನೆಯನ್ನು ಸಲ್ಲಿಸಲು ಸರ್ಕಾರ ಮುಂದಾಗಿದೆ. ಬಳ್ಳಾರಿಯಲ್ಲಿ ಜೀನ್ಸ್ ಮತ್ತು ಉಡುಪುಗಳನ್ನು ಉತ್ತೇಜಿಸಲು ಟೆಕ್ಸ್‌ಟೈಲ್ ಪಾರ್ಕ್‍ನ್ನು ಪ್ರಾರಂಭಿಸಲು ಉದ್ದೇಶಿಸಿದೆ. ಇದನ್ನೂ ಓದಿ: Karnataka Budget: ಈ ವರ್ಷ ಯಾವುದೇ ತೆರಿಗೆ ಹೆಚ್ಚಳ ಇಲ್ಲ
ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ಹಾಗೂ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನನಲ್ಲಿ ನೂತನ ಜವಳಿ ಪಾರ್ಕ್‍ಗಳನ್ನು ಸಾರ್ವಜನಿಕ -ಖಾದಗಿ ಸಹಭಾಗಿತ್ವದಲ್ಲಿ ಪ್ರಾರಂಭಿಸಲಾಗುವುದು ಇದರಿಂದ್ ಸುಮಾರು 5, ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ. ಕಲಬುರಗಿ ಜಿಲ್ಲೆಯ ಪ್ರಸಿದ್ಧ ಶಹಬಾದ್ ಕಲ್ಲನ್ನು ಹೊಸ ವಿನ್ಯಾಸ ಮತ್ತು ತಂತ್ರಜ್ಞಾನವನ್ನು ಅಳವಡಿಸಿ ವ್ಯಾಪಕ ಮಾರುಕಟ್ಟೆ ಅವಕಾಶಗಳನ್ನು ಕಲ್ಪಿಸಲಾಗುವುದು. ಇದೇ ಮಾದರಿಯಲ್ಲಿ ಇಳ್ಕಲ್ ಗ್ರಾನೈಟ್, ಶಿವರಪಟ್ಟಣದಲ್ಲಿ ಶಿಲ್ಪಕಲೆ ಮತ್ತು ಚಳ್ಳಕೆರೆಯಲ್ಲಿನ ಖಾದ್ಯ ತೈಲ ಉದ್ಯಮಗಳಿಗೆ ಪ್ರೋತ್ಸಾಹಿಸಲು ಮುಂದಾಗಿದೆ.
ಭಾರತ ಸರ್ಕಾರದ 76 ಕೋಟಿ ರೂ. ವೆಚ್ಚದ ಸೆಮಿಕಂಡಕ್ಟರ್ ಭಾರತ್ ಅಭಿಯಾನದ ಗರಿಷ್ಠ ಲಾಭ ಪಡೆದುಕೊಂಡು ರಾಜ್ಯದಲ್ಲಿ ಸೆಮಿಕಂಡಕ್ಟರ್ ತಯಾರಿಗೆ ಹೂಡಿಕೆಗಳನ್ನು ಆಕರ್ಷಿಸಲು ರಾಜ್ಯ ಸರ್ಕಾರ ವತಿಯಿಂದ ವಿಶೇಷ ಪ್ರೋತ್ಸಾಹಗಳನ್ನು ನೀಡಲು ಸರ್ಕಾರ ಉದ್ದೇಶಿಸಿದೆ ಎಂದು ಬೊಮ್ಮಾಯಿ ಬಜೆಟ್ ಭಾಷಣದಲ್ಲಿ ತಿಳಿಸಿದರು.
ಬೆಂಗಳೂರು: ಉಕ್ರೇನ್‍ನಲ್ಲಿ ಸಂಕಷ್ಟಕ್ಕೆ ಸಿಲುಕಿದ ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದೂರವಾಣಿ ಮೂಲಕ ಮಾತನಾಡಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದರು.
ಬೆಂಗಳೂರು ಮೂಲದ ವಿದ್ಯಾರ್ಥಿ ಗಗನ್ ಗೌಡ ಸೇರಿದಂತೆ ಇತರೆ ವಿದ್ಯಾರ್ಥಿಗಳ ಜೊತೆ ಸಿಎಂ ಮಾತನಾಡಿದರು. ಉಕ್ರೇನ್‍ನಲ್ಲಿ ತಮ್ಮ ಪರಿಸ್ಥಿತಿಯನ್ನು ವಿವರಿಸಿದ ವಿದ್ಯಾರ್ಥಿಗಳು, ಖಾರ್ಕಿವ್‍ನಿಂದ 30ಕಿಮೀ ದೂರದ ಪ್ರದೇಶಕ್ಕೆ ನಾವು ನಡೆದುಕೊಂಡು ಬಂದಿದ್ದೇವೆ ಸದ್ಯಕ್ಕೆ ನಾವು ಸುರಕ್ಷಿತವಾಗಿ ಇದ್ದೇವೆ ಎಂದು ಮುಖ್ಯ ಮಂತ್ರಿಗಳಿಗೆ ತಿಳಿಸಿದರು. ಇದನ್ನೂ ಓದಿ: ತಮಿಳುನಾಡಿನ ವಿದ್ಯಾರ್ಥಿಗಳ ರಕ್ಷಣೆಗಾಗಿ ವಿದೇಶಕ್ಕೆ ತೆರಳಲು ಸಿದ್ಧರಾದ ಮೂವರು ಎಂಪಿಗಳು
ವಿದ್ಯಾರ್ಥಿಗಳಿಗೆ ಧೈರ್ಯ ಹೇಳಿದ ಸಿಎಂ, ಈ ಸಂಬಂಧ ವಿದೇಶಾಂಗ ಸಚಿವಾಲಯದ ಅಧಿಕಾರಿಗಳ ಜೊತೆ ಕರ್ನಾಟಕ ಸರ್ಕಾರ ನಿರಂತರವಾಗಿ ಸಂಪರ್ಕದಲ್ಲಿದೆ. ನಿಮಗೆ ಎಲ್ಲ ರೀತಿಯ ಸಹಕಾರ ಸಿಗುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ. ನಿಮ್ಮನ್ನು ಅಲ್ಲಿಂದ ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಸರ್ವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಇದನ್ನೂ ಓದಿ: ರಷ್ಯಾ ಆಯ್ತು ಭಾರತದ ಮೇಲೆ ನಿರ್ಬಂಧ ಹೇರುತ್ತಾ ಅಮೆರಿಕ?
ರಾಜ್ಯದ 200 ವಿದ್ಯಾರ್ಥಿಗಳು ಖಾರ್ಕಿವ್‍ನಲ್ಲಿ ಇದ್ದಾರೆ. ಈಗಾಗಲೇ ರಾಜ್ಯದ ಸುಮಾರು 40ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ವಾಪಸ್ ಕರೆದುಕೊಂಡು ಬರಲಾಗಿದೆ. ಉಳಿದ ಎಲ್ಲಾ ಕನ್ನಡಿಗರನ್ನು ಸುರಕ್ಷಿತವಾಗಿ ಕರೆದುಕೊಂಡು ಬರಲು ಅಗತ್ಯ ಕ್ರಮವಹಿಸುವಂತೆ ಮುಖ್ಯಮಂತ್ರಿಗಳು ನೋಡಲ್ ಅಧಿಕಾರಿಗೆ ಸೂಚನೆ ನೀಡಿದರು. ಅಲ್ಲದೆ ವಿದೇಶಾಂಗ ಸಚಿವರ ಜೊತೆ ನಿರಂತರವಾಗಿ ಮುಖ್ಯಮಂತ್ರಿಗಳು ಸಂಪರ್ಕದಲ್ಲಿ ಇದ್ದು ಆದಷ್ಟು ಬೇಗ ಕನ್ನಡಿಗರ ರಕ್ಷಣೆ ಮಾಡೋದಾಗಿ ವಿದ್ಯಾರ್ಥಿಗಳಿಗೆ ಭರವಸೆಯ ಮಾತುಗಳನ್ನಾಡಿದರು. ಇದನ್ನೂ ಓದಿ: ಉಕ್ರೇನ್‍ನಲ್ಲಿ ಭಾರತೀಯರು ಸಿಲುಕಿರುವಾಗ, ಮೋದಿ ಯುಪಿ ಚುನಾವಣಾ ಸಭೆಗಳಲ್ಲಿ ನಿರತರಾಗಿದ್ದಾರೆ: ಮಮತಾ ಬ್ಯಾನರ್ಜಿ ಕಿಡಿ
ಹುಬ್ಬಳ್ಳಿ: ರಸ್ತೆಗಳು ಸಾರಿಗೆ ಸಂಪರ್ಕಕ್ಕೆ ಮಾತ್ರವಲ್ಲದೆ, ಆರ್ಥಿಕ, ಸಾಂಸ್ಕೃತಿಕ ಹಾಗೂ ಕೃಷಿಯ ಬೆಳವಣಿಗೆಗೆ ಪೂರಕ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.
ಕೇಂದ್ರ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಇಂದು ಹುಬ್ಬಳ್ಳಿಯಲ್ಲಿ 12,795 ಕೋಟಿ ರೂ.ಗಳ ವೆಚ್ಚದಲ್ಲಿ 925 ಕಿ.ಮೀ 26 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಿದರು. ಈ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿ ಸಿಎಂ, ಕರ್ನಾಟಕ ಪ್ರಗತಿಪರ ರಾಜ್ಯ. ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳಿಗೆ ರಾಜ್ಯದ ಸಹಕಾರವಿದ್ದು, ಶೇ.100 ರಷ್ಟು ಅಭಿವೃದ್ಧಿಯನ್ನು, ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಕಾಣಬಯಸುತ್ತೇವೆ ಎಂದರು. ಇದನ್ನೂ ಓದಿ: ಅಮೆರಿಕ ಮಾದರಿ ರಸ್ತೆ ಸಂಪರ್ಕ ಜಾಲ ಅಭಿವೃದ್ಧಿ: ನಿತಿನ್ ಗಡ್ಕರಿ ಭರವಸೆ
ರಸ್ತೆಗಳ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಒಟ್ಟಾಗಿ ಕೆಲಸ ಮಾಡಬೇಕು. ಕೇಂದ್ರ ಸಚಿವರು ಭೂ ಸ್ವಾಧೀನಕ್ಕೆ ಶೇ.25 ರಷ್ಟು ಮೊತ್ತವನ್ನು ನೀಡಿದರೆ ಯೋಜನೆಯಲ್ಲಿನ ಮುಖ್ಯ ಸಾಮಾಗ್ರಿಗಳಾದ ಸ್ಟೀಲ್, ಸಿಮೆಂಟ್‍ಗಳಿಗೆ ಕೇಂದ್ರ ಸರ್ಕಾರದ ಜಿ.ಎಸ್.ಟಿ ಯಲ್ಲಿ ವಿನಾಯ್ತಿ ನೀಡುವುದು ಹಾಗೂ ಜೆಲ್ಲಿ, ಮರಳು ಇತ್ಯಾದಿಗಳಿಗೆ ರಾಯಲ್ಟಿಯಲ್ಲಿ ವಿನಾಯ್ತಿ ನೀಡುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಒಪ್ಪಂದವನ್ನು ಸಹ ಸಹಿ ಮಾಡಲಾಗುತ್ತಿದೆ. ಇದೆ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಎಸ್.ಟಿ. ಆರ್.ಆರ್, ಗುಲ್ಬರ್ಗಾ, ಬೆಳಗಾವಿಯ ಇತರೆ ರಸ್ತೆಗಳಿಗೆ ರಾಜ್ಯ ಸರ್ಕಾರ ಸಹಕಾರ ನೀಡಲು ಸಿದ್ದವಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಕೈಗೆತ್ತಿಕೊಳ್ಳಲು ಮನವಿ ಮಾಡಿದರು. ರಾ-ಹೆ ಪಕ್ಕದ ಜಲಶಕ್ತಿ ಯೋಜನೆಯ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
13,000 ಕೋಟಿ ರೂ.ಗಳ ವೆಚ್ಚದಲ್ಲಿ 925 ಕಿಮೀ ರಸ್ತೆ ಕಾಮಗಾರಿಯನ್ನು ಶಂಕುಸ್ಥಾಪನೆ ಮಾಡಿದ್ದಕ್ಕಾಗಿ ಅಭಿನಂದಿಸಿದರು. ನವ ಕರ್ನಾಟಕ ದಿಂದ ನವ ಭಾರತ ನಿರ್ಮಾಣಕ್ಕೆ ಸಿದ್ಧರಿರುವುದಾಗಿ ನುಡಿದರು.
ಕ್ರಿಯಾಶೀಲ ಸಚಿವರು
ನಿತಿನ್ ಗಡ್ಕರಿ ಅವರು ಕೇಂದ್ರ ಸಚಿವರಾದ ಸಂದರ್ಭದಲ್ಲಿ ಇಡೀ ಭಾರತದಲ್ಲಿ ಮಹಾರಾಷ್ಟ್ರದಲ್ಲಿ ಅವರು ಮಾಡಿರುವ ಕೆಲಸಗಳ ರೀತಿಯಲ್ಲಿ ಬಡಲಾವಣೆಗಳು ಆಗಲಿವೆ ಎಂದು ನಮಗೆ ಅವರಿಂದ ಬಹಳಷ್ಟು ನಿರೀಕ್ಷೆ ಇತ್ತು. ದೇಶದ ಜನರ ನಿರೀಕ್ಷೆಯನ್ನು ಈಡೇರಿಸಿ, ದೇಶದ ಅಭಿವೃದ್ಧಿಗೆ ಬಹಳ ದೊಡ್ಡ ಕೊಡುಗೆಯನ್ನು ನೀಡಿದ್ದಾರೆ ಎಂದರು. ಇದನ್ನೂ ಓದಿ: ನಿಪ್ಪಾಣಿಯಿಂದ ಕಿತ್ತೂರುವರೆಗಿನ ರಾಷ್ಟ್ರೀಯ ಪಕ್ಕದಲ್ಲಿ ಜಲಶಕ್ತಿ ನಿರ್ಮಾಣ: ಬೊಮ್ಮಾಯಿ
ದೇಶದಲ್ಲಿ ಅಭಿವೃದ್ಧಿಯ ಚಿಂತನೆಯಲ್ಲಿ ಬದಲಾವಣೆಗಳಾಗಿವೆ. ಅಸಾಧ್ಯ ಎನ್ನುತ್ತಿದ್ದ ಎಲ್ಲವನ್ನೂ ಸಾಧ್ಯ ಮಾಡಿ ತೋರಿಸುವ ಕಾಲ ಬಂದಿದೆ. ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರ ಚಿಂತನೆಯ ಫಲದಿಂದ ಎಲ್ಲ ಪ್ರಮುಖ ವಿಚಾರಗಳಿಗೆ ಹೊಸತನ, ಶಕ್ತಿ, ವೇಗ ಬಂದಿದೆ. ಜನಸಂಖ್ಯೆಯನ್ನು ಬಳಸಿಕೊಂಡು ರಾಷ್ಟ್ರ ಮತ್ತು ರಾಜ್ಯ ಗಳನ್ನು ಕಟ್ಟಲು ಸಾಧ್ಯ ಎಂದು ಪ್ರಧಾನಿಗಳು ತೋರಿಸಿಕೊಟ್ಟಿದ್ದಾರೆ. ಅವರ ಚಿಂತನೆಯನ್ನು ನಿತಿನ್ ಗಡ್ಕರಿ ಅವರು ಅಕ್ಷರಶಃ ಕಾರ್ಯಗತ ಮಾಡಿದ್ದಾರೆ. ಯಾವುದೇ ವಿಚಾರದ ಬಗ್ಗೆ ಅತಿ ಶೀಘ್ರವಾಗಿ ನಿರ್ಣಯ ಮಾಡುವ ಶಕ್ತಿ ಅವರಿಗಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ನಾವೆಲ್ಲರೂ ಆಶ್ಚರ್ಯ ಪಡುವಂಥ ಸಂಗತಿ ಇದು. ಪ್ರತಿಯೊಂದು ಕ್ಷೇತ್ರದ ರಸ್ತೆಗಳ ಹೆಸರುಗಳು ಸಹ ಅವರಿಗೆ ನೆನಪಿರುತ್ತದೆ. ಒಬ್ಬ ಕ್ರಿಯಾಶೀಲ ನಾಯಕ ಏನೆಲ್ಲಾ ಬದಲಾವಣೆಗಳನ್ನು ತರಲು ಸಾಧ್ಯ ಎಂದು ಅವರು ನಿರೂಪಿಸಿದ್ದಾರೆ ಎಂದರು.
ರಸ್ತೆ ಅಭಿವೃದ್ಧಿಯಿಂದ ಜನರನ್ನು ಸಂಕಷ್ಟಗಳಿಗೆ ಮುಕ್ತಿ
ಉತ್ತರ ಕರ್ನಾಟಕದ ಅಭಿವೃದ್ಧಿಯಲ್ಲಿ ನಿತಿನ್ ಗಡ್ಕರಿ ಅವರ ಕೊಡುಗೆ ಬಹಳ ದೊಡ್ಡದಿದೆ. ಹೊಸಪೇಟೆ-ಹುಬ್ಬಳ್ಳಿ, ಚಿತ್ರದುರ್ಗ-ಹುಬ್ಬಳ್ಳಿ ಯವರೆಗೆ ಷಟ್ಪಥ, ಬೈಪಾಸ್ ರಸ್ತೆ ನೆನೆಗುದಿಗೆ ಬಿದ್ದಿತ್ತು. ಹಲವಾರು ಸಭೆಗಳನ್ನು ಮಾಡಿ ಗಡ್ಕರಿ ಅವರ ಇಚ್ಛಾಶಕ್ತಿಯಿಂದ ಇಂದು ಷಟ್ಪಥ ಹಾಗೂ ಚತುಷ್ಪಥ ರಸ್ತೆಗಳು ಸೇವೆಗೆ ಲಭಿಸಿರುವುದು ಈ ಭಾಗದ ಜನರನ್ನು ಸಂಕಷ್ಟಗಳಿಂದ, ಅಪಘಾತಗಳಿಂದ, ಸಾವು ನೋವುಗಳಿಂದ ಪಾರು ಮಾಡಿದ್ದಾರೆ ಎಂದು ನುಡಿದರು.
ಅಭಿನಂದನೆಗಳನ್ನು ಸಲ್ಲಿಕೆ:
ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್, ಸಾರಿಗೆ ಸಚಿವ ಶ್ರೀರಾಮುಲು, ಸಂಸದರಾದ ಶಿವಕುಮಾರ್ ಉದಾಸಿ ಹಾಗೂ ಮಲ್ಲಿಕಾರ್ಜುನ ಖರ್ಗೆ, ಶಾಸಕ ಅರವಿಂದ ಬೆಲ್ಲದ್, ಸೇರಿದಂತೆ ಇತರೆ ಜನ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಬೆಂಗಳೂರು: ರಾಜ್ಯದಲ್ಲಿ ಹಿಜಬ್ ಸಂಘರ್ಷದ ನಡುವೆ ಹೈಕೋರ್ಟ್‍ನಿಂದ ಶಾಲೆಗಳನ್ನು ಆರಂಭಿಸಲು ಆದೇಶ ಬಂದ ಹಿನ್ನೆಲೆ ಸೋಮವಾರದಿಂದ ಹತ್ತನೇ ತರಗತಿ ವರೆಗೆ ಎಲ್ಲಾ ಶಾಲೆಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದೆ.
ಶಕ್ತಿ ಭವನದಲ್ಲಿ ನಡೆದ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಕೆಲವು ದಿನಗಳಿಂದ ಶಾಲೆಗಳ ಡ್ರೆಸ್ ಕೋಡ್ ವಿವಾದ ಶುರುವಾಗಿತ್ತು. ಬಳಿಕ ಹೈಕೋರ್ಟ್ ಮೆಟ್ಟಿಲೇರಿತ್ತು. ಇದೀಗ ನ್ಯಾಯಾಲಯ ನೀಡಿರುವ ಸೂಚನೆಯನ್ನು ಸರ್ಕಾರ ಗೌರವಿಸುತ್ತದೆ. ಮೊದಲ ಹಂತವಾಗಿ 10ನೇ ತರಗತಿ ವರೆಗೆ ಶಾಲೆಗಳನ್ನು ಸೋಮವಾರದಿಂದ ಆರಂಭಿಸುತ್ತಿದ್ದೇವೆ ಎಂದರು. ಇದನ್ನೂ ಓದಿ:ಹಿಜಬ್ ನಮ್ಮ ಕುಟುಂಬದ ವಿವಾದ ಪಾಕಿಸ್ತಾನ ತಲೆಹಾಕಬಾರದು: ಫಾತಿಮಾ ಹುಸೇನ್ ಆಕ್ರೋಶ
ಶಾಲಾ ಮಕ್ಕಳು ಸಂಯಮದಿಂದ ವರ್ತಿಸುತ್ತಿದ್ದಾರೆ ಅವರಿಗೆ ಪ್ರೀತಿಯ ಅಭಿನಂದನೆ ಸಲ್ಲಿಸುತ್ತೇನೆ. ಮೊದಲ ಹಂತದಲ್ಲಿ ಹತ್ತನೇ ತರಗತಿವರೆಗೆ ಆರಂಭದ ಬಳಿಕ ಎರಡನೇ ಹಂತದಲ್ಲಿ ಪಿಯುಸಿ ಮತ್ತು ಡಿಗ್ರಿ ಕಾಲೇಜ್‍ಗಳನ್ನು ಆರಂಭಿಸುತ್ತೇವೆ. ನಾಳೆ ಸಂಜೆ ಸಚಿವರ ಜೊತೆ ಸೇರಿ ವೀಡಿಯೋ ಕಾನ್ಫರೆನ್ಸ್ ಮಾಡುತ್ತೇನೆ ನಂತರ ಕಾಲೇಜುಗಳ ಆರಂಭದ ಬಗ್ಗೆ ಪ್ರಕಟಣೆ ಹೊರಡಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಶಿಕ್ಷಣ ಕೊಡಿ ಅಂದ್ರೆ ಮಂತ್ರಿ ಮಗನೇ ಕೇಸರಿ ಶಾಲು ಹಂಚಲು ಹೋಗಿದ್ದಾರೆ: ರೇವಣ್ಣ ಟೀಕೆ
ಸಭೆಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್, ಗೃಹ ಸಚಿವ ಆರಗ ಜ್ಞಾನೇಂದ್ರ, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಅಡ್ವೋಕೆಟ್ ಜನರಲ್ ಪ್ರಬುಲಿಂಗ ನಾವಡಗಿ ಭಾಗವಹಿಸಿದ್ದರು.
ಇತ್ತ ಸಚಿವಾಕಾಂಕ್ಷಿಗಳ ಲಾಬಿ ಮುಂದುವರಿದಿದೆ. ಸಚಿವ ಸ್ಥಾನ ಮೇಲೆ ನನಗೆ ಆಸೆ ಇಲ್ಲ. ಆದರೆ 13 ಜಿಲ್ಲೆಗಳಿಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಪರೋಕ್ಷವಾಗಿ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಆಸೆ ಹೊರಹಾಕಿದ್ರು. ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನದ ಬಗ್ಗೆ ಕೇಂದ್ರ ವರಿಷ್ಠರು ನಿರ್ಣಯ ಮಾಡುತ್ತಾರೆ ಎಂದರು. ಇತ್ತ ಸಿಡಿ ಕೇಸ್‍ನಲ್ಲಿ ಕ್ಲೀನ್ ಚಿಟ್ ಪಡೆದ ರಮೇಶ್ ಜಾರಕಿಹೊಳಿ ಬಿಜೆಪಿ ಪ್ರಬಲ ನಾಯಕರ ಮೂಲಕ ವರಿಷ್ಠರ ಮೇಲೆ ಒತ್ತಡ ಹಾಕುತ್ತಿದ್ದಾರೆ ಎನ್ನಲಾಗುತ್ತಿದ್ದು, ನಾಳೆ ದೆಹಲಿಗೂ ಕೂಡ ತೆರಳಲಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಪಂಚಭೂತಗಳಲ್ಲಿ ಸಂಗೀತ ಸಾಮ್ರಾಜ್ಞೆ ಲತಾ ಮಂಗೇಶ್ಕರ್ ಲೀನ
ಧಾರವಾಡ: ಮೇಕೆದಾಟುಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆದಿರುವ ಸರ್ವ ಪಕ್ಷ ಸಭೆಗೆ ನೋಟಿಸ್ ಬಂದ ಮೇಲೆ ಸಭೆಗೆ ಹೋಗಬೇಕೋ ಬೇಡವೋ ಎಂಬ ತಿರ್ಮಾನ ಮಾಡ್ತೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಪ್ರಾಜೆಕ್ಟ್ ಆರಂಭ ಮಾಡಿದ್ದ ನಾವು. ಡಿಪಿಆರ್ ಮಾಡಿದ್ದ, ಸಿಪಿಸಿ ಕೊಟ್ಟಿದ್ದು ನಮ್ಮ ಕಾಲದಲ್ಲಿ. ಇವತ್ತು ಅದು ಪೆಂಡಿಂಗ್ ಇರುವುದು ಅರಣ್ಯ ಹಾಗೂ ಪರಿಸರದ ಅನುಮತಿ ಸಿಗದೇ ಇರುವುದಕ್ಕೆ. ಅದನ್ನು ಈ ಸರ್ಕಾರ ಮಾಡಿಲ್ಲ. ಕೇಂದ್ರ ಹಾಗೂ ರಾಜ್ಯದಲ್ಲಿ ಎರಡೂ ಕಡೆ ಬಿಜೆಪಿ ಸರಕಾರವೇ ಇದೆ. ಇವರು ಡಬಲ್ ಇಂಜಿನ್ ಸರ್ಕಾರ ಅಂತಾರೆ. ಅನಗತ್ಯವಾಗಿ ವಿಳಂಬ ಮಾಡುತ್ತಿದ್ದಾರೆ ಎಂದರು.
ಈ ಕಾರ್ಯಕ್ಕೆ ತಮಿಳುನಾಡಿಗೆ ಅಡ್ಡಿಪಡಿಸಲು ರೈಟ್ ಇಲ್ಲ. ಪರಿಸರ ಕ್ಲೆರೆನ್ಸ್ ಕೊಟ್ಟರೆ ಕೆಲಸ ಆರಂಭ ಮಾಡಬಹುದು. ಇವರು ಅಲ್ಲಿ ಗಟ್ಟಿಯಾಗಿ ಕೇಳಿ ತಗೊಂಡಿಲ್ಲ, ಅವರು ಕೊಟ್ಟಿಲ್ಲ. ಕೇಂದ್ರದವರು ರಾಜಕೀಯ ಮಾಡುತ್ತಿದ್ದಾರೆ. ತಮಿಳುನಾಡಿನಲ್ಲಿ ಅವರ ಶಕ್ತಿ ವೃದ್ಧಿ ಮಾಡಿಕೊಳ್ಳಲು ಕೊಡ್ತಾ ಇಲ್ಲ. ಇವರು ಬಾಯಿ ಮುಚ್ಚಿಕೊಂಡು ಸುಮ್ಮನೆ ಇದ್ದಾರೆ. ಇದು ಕುಡಿಯುವ ನೀರಿನ ಪ್ರಾಜೆಕ್ಟ್. ಸುಪ್ರಿಂಕೋರ್ಟ್ ಕುಡಿಯುವ ನೀರಿಗೆ ಮೊದಲ ಪ್ರಾಶಸ್ತ್ಯ ಎಂದಿದ್ದಾರೆ. ಇದನ್ನೂ ಓದಿ: ಅರ್ಧಶತಕ ಸಿಡಿಸಿ ಮಗಳಿಗೆ ಸಮರ್ಪಿಸಿದ ಕೊಹ್ಲಿ
ಯಾಕೆ ಇವರು ಅರಣ್ಯ ಕ್ಲೆರೆನ್ಸ್ ವಿಳಂಬ ಮಾಡುತ್ತಿದ್ದಾರೆ. ಇವರು ಯಾಕೆ ತಗೊಂಡಿಲ್ಲ. ತಗೊಂಡು ಆರಂಭ ಮಾಡಿ, ಇದರಿಂದ ಬೆಂಗಳೂರು ಸುತ್ತಮುತ್ತ, ಕೋಲಾರ, ರಾಮನಗರ ಸೇರಿ ಹಲವು ಜಿಲ್ಲೆಗಳಿಗೆ ನೀರು ಸಿಗುತ್ತೆ. ಜೊತೆಗೆ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಬಹುದು ಎಂದರು.
ಬೆಂಗಳೂರು: ಹಣದುಬ್ಬರದಿಂದಾಗಿ ಎಲ್ಲಾ ಅಗತ್ಯ ವಸ್ತುಗಳು ಹಾಗೂ ಬೆಲೆಗಳು ನಿರಂತರವಾಗಿ ಏರಿಕೆ ಕಾಣುತ್ತಿವೆ. ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ, ಬೇಳೆ ಕಳು, ತರಕಾರಿ ಬೆಲೆಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ಇದು ಸಾಲದು ಅಂತಾ ಶೀಘ್ರವೇ ರಾಜ್ಯದ ಜನತೆಗೆ ಏಕಕಾಲದಲ್ಲಿ ಮೂರು ಶಾಕ್ ಎದುರಾಗಲಿವೆ.
ಹಾಲು, ವಿದ್ಯುತ್ ದರ, ಸಾರಿಗೆ ದರ ಹೆಚ್ಚಳದ ಜೊತೆ ಜೊತೆಗೆ, ಬೆಂಗಳೂರಿನ ಮಂದಿಗೆ ಹೆಚ್ಚುವರಿ ನೀರಿನ ದರ ಹೆಚ್ಚಿಸಲು ಜಲಮಂಡಳಿ ಪ್ಲಾನ್ ಮಾಡಿದೆ. ಈಗಾಗಲೇ ಆಯಾ ಇಲಾಖೆಗಳು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ರಾಜ್ಯ ಸರ್ಕಾರ ಇದಕ್ಕೆ ಒಪ್ಪಿಗೆ ಕೊಡುವುದು ಬಾಕಿ ಇದೆ. ಇದನ್ನೂ ಓದಿ: ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್?
ಆದರೆ ದರ ಹೆಚ್ಚಳಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಜನರ ಮೇಲೆ ಈಗ ತೆರಿಗೆ ಹಾಕೋದು ಸರಿಯಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ದರ ಹೆಚ್ಚಳಕ್ಕೆ ಮೊದಲು ಜನರಿಗೆ ಆದಾಯ ಬರುವಂತೆ ಸರ್ಕಾರ ಮಾಡಲಿ ಅಂತಾ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ. ಈ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಸದ್ಯಕ್ಕೆ ದರ ಹೆಚ್ಚಳದ ಬಗ್ಗೆ ಯಾವುದೇ ತೀರ್ಮಾನಗಳು ಆಗಿಲ್ಲ. ದರ ಹೆಚ್ಚಳದ ಪ್ರಸ್ತಾವನೆಗಳು ಬರುವುದು ಸಹಜ ಆದ್ರೆ ಸರ್ಕಾರ ಅವಸರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನಲ್ಲೇ ದ್ವಂದ್ವ – ನೈಟ್ ಕರ್ಫ್ಯೂ ಬಗ್ಗೆ ಡಿಕೆಶಿ, ಸಿದ್ದು ಭಿನ್ನ ಅಭಿಪ್ರಾಯ