Tag: Basavasagar Dam

  • ಬಸವಸಾಗರ ಡ್ಯಾಂಗೆ ಹೆಚ್ಚಿದ ಒಳಹರಿವು – ಉಕ್ಕಿ ಹರಿದ ಕೃಷ್ಣೆ, ಶೀಲಹಳ್ಳಿ ಬ್ರಿಡ್ಜ್ ಮುಳುಗಡೆ

    ಬಸವಸಾಗರ ಡ್ಯಾಂಗೆ ಹೆಚ್ಚಿದ ಒಳಹರಿವು – ಉಕ್ಕಿ ಹರಿದ ಕೃಷ್ಣೆ, ಶೀಲಹಳ್ಳಿ ಬ್ರಿಡ್ಜ್ ಮುಳುಗಡೆ

    ರಾಯಚೂರು: ಮಳೆ ಪ್ರಮಾಣ ಜಾಸ್ತಿಯಾದ ಹಿನ್ನೆಲೆ ಬಸವಸಾಗರ ಜಲಾಶಯಕ್ಕೆ (Basavasagar Dam) ಒಳಹರಿವು ಹೆಚ್ಚಾಗಿದ್ದು, ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ. ಪರಿಣಾಮ ರಾಯಚೂರಿನ (Raichuru) ಲಿಂಗಸುಗೂರು (Lingasuguru) ತಾಲೂಕಿನ ಶೀಲಹಳ್ಳಿ ಸೇತುವೆ ಪುನಃ ಮುಳುಗಡೆಯಾಗಿದೆ.ಇದನ್ನೂ ಓದಿ: ಗಣೇಶ ಚತುರ್ಥಿ – ಕುರುಡುಮಲೆ ವಿನಾಯಕನಿಗೆ ವಿಶೇಷ ಪೂಜೆ, ಅಲಂಕಾರ

    ಎರಡು ದಿನಗಳ ಹಿಂದೆಯಷ್ಟೇ ನದಿಯ ನೀರಿನ ಪ್ರಮಾಣ ಕಡಿಮೆಯಾಗಿ ಸೇತುವೆ ಸಂಚಾರಕ್ಕೆ ಮುಕ್ತವಾಗಿತ್ತು. ಇದೀಗ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಡ್ಯಾಂನಿಂದ 1.55 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ರಿಲೀಸ್ ಮಾಡಲಾಗಿದೆ. ಹೀಗಾಗಿ ಶೀಲಹಳ್ಳಿ ಸೇತುವೆ ಮತ್ತೆ ಮುಳುಗಡೆಯಾಗಿದೆ. ಇದರಿಂದ ಲಿಂಗಸುಗೂರು ತಾಲೂಕಿನ ಐದಾರು ಗ್ರಾಮಗಳ ರಸ್ತೆ ಸಂಪರ್ಕ ಕಡಿತವಾಗಿದ್ದು, ಶೀಲಹಳ್ಳಿ, ಹಂಚಿನಾಳ, ಯರಗೋಡಿ ಸಂಪರ್ಕ ಮಾರ್ಗ ಸಂಪೂರ್ಣ ಬಂದ್ ಆಗಿದೆ. ಹೀಗಾಗಿ ಗ್ರಾಮಸ್ಥರು ಲಿಂಗಸುಗೂರಿಗೆ ತೆರಳಲು ಸುಮಾರು 45 ಕಿ.ಮೀ ಸುತ್ತುವರೆದು ಪ್ರಯಾಣಿಸಬೇಕಿದೆ.

    ಹೆಚ್ಚು ಪ್ರಮಾಣದ ನೀರು ನದಿಗೆ ಹರಿದು ಬಂದಿದ್ದರಿಂದ ರೈತರ ಪಂಪ್ ಸೆಟ್‌ಗಳು ನೀರಲ್ಲಿ ಮುಳುಗಡೆಯಾಗಿವೆ. ಜಲಾಶಯಕ್ಕೆ ಸದ್ಯ 1.55 ಲಕ್ಷ ಕ್ಯೂಸೆಕ್ ಒಳಹರಿವು ಇದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಭಾರೀ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ನೀರಿನ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ನದಿ ಪಾತ್ರಕ್ಕೆ ತೆರಳದಂತೆ ಗ್ರಾಮಸ್ಥರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.ಇದನ್ನೂ ಓದಿ: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಉಗ್ರನಿಗೆ ಜೈಲಲ್ಲಿ ಇಡಿ ಡ್ರಿಲ್

  • ಕೃಷ್ಣಾ ನದಿಯಲ್ಲಿ ಹೆಚ್ಚಿದ ನೀರಿನ ಪ್ರಮಾಣ – ಗಡ್ಡೆಗೂಳಿ ಬಸವೇಶ್ವರ ದೇವಸ್ಥಾನ ಭಾಗಶಃ ಮುಳುಗಡೆ

    ಕೃಷ್ಣಾ ನದಿಯಲ್ಲಿ ಹೆಚ್ಚಿದ ನೀರಿನ ಪ್ರಮಾಣ – ಗಡ್ಡೆಗೂಳಿ ಬಸವೇಶ್ವರ ದೇವಸ್ಥಾನ ಭಾಗಶಃ ಮುಳುಗಡೆ

    ರಾಯಚೂರು: ಮಹಾರಾಷ್ಟ್ರದ (Maharashtra) ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆ ಹಿನ್ನೆಲೆ ಕೃಷ್ಣಾ ನದಿಗೆ (Krishna River) ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ರಾಯಚೂರಿನ ದೇವದುರ್ಗ (Devadurga) ತಾಲೂಕಿನ ಗಡ್ಡೆಗೂಳಿ ಬಸವೇಶ್ವರ ದೇವಸ್ಥಾನ ಭಾಗಶಃ ಮುಳುಗಡೆಯಾಗಿದೆ.ಇದನ್ನೂ ಓದಿ: ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ತುಂಬಿ ತುಳುಕುತ್ತಿದ್ದು, ಸದ್ಯ ಐಸಿಯುಲ್ಲಿದೆ – ಯತ್ನಾಳ್

    ನಾರಾಯಣಪುರ ಜಲಾಶಯದಿಂದ ಹರಿದು ಬರುತ್ತಿರುವ ನೀರಿನಿಂದ ಕೃಷ್ಣಾ ನದಿ ತೀರದ ದೇವಸ್ಥಾನ ಭಾಗಶಃ ಮುಳುಗಡೆಯಾಗಿದೆ. ಸದ್ಯ ಜಲಾಶಯದಿಂದ 25 ಗೇಟ್‌ಗಳ ಮೂಲಕ 75 ಸಾವಿರ ಕ್ಯುಸೆಕ್ ಹೊರಹರಿವು ಇದೆ.

    ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಬಂದರೆ ಹೂವಿನಹೆಡಗಿ ಸೇತುವೆ ಮುಳುಗಡೆಯಾಗುವ ಭೀತಿ ಎದುರಾಗಿದೆ. ಸೇತುವೆ ಮುಳುಗಡೆಯಾದರೆ ದೇವದುರ್ಗದಿಂದ ಯಾದಗಿರಿ, ಕಲಬುರಗಿ ಸಂಪರ್ಕ ಕಡಿತವಾಗುತ್ತದೆ. ನಾರಾಯಣಪುರ ಜಲಾಶಯಕ್ಕೆ ಸದ್ಯ 75,000 ಕ್ಯುಸೆಕ್ ಒಳಹರಿವು ಇದ್ದು, ಜನರಿಗೆ ನದಿಗೆ ಇಳಿಯದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ನೀಡಿದೆ.ಇದನ್ನೂ ಓದಿ: ಅರಬ್ಬಿ ಸಮುದ್ರದಲ್ಲಿ ಮೀನುಗಾರರ ಬೋಟ್ ವಶಕ್ಕೆ – ನೌಕಾದಳದಿಂದ ಆರು ಮೀನುಗಾರರ ಬಂಧನ

  • ಬಸವಸಾಗರ ಡ್ಯಾಂಗೆ ಹೆಚ್ಚಿದ ಒಳಹರಿವು – 25 ಗೇಟ್‌ಗಳಿಂದ ಕೃಷ್ಣಾ ನದಿಗೆ 75 ಸಾವಿರ ಕ್ಯುಸೆಕ್ ನೀರು ಬಿಡುಗಡೆ

    ಬಸವಸಾಗರ ಡ್ಯಾಂಗೆ ಹೆಚ್ಚಿದ ಒಳಹರಿವು – 25 ಗೇಟ್‌ಗಳಿಂದ ಕೃಷ್ಣಾ ನದಿಗೆ 75 ಸಾವಿರ ಕ್ಯುಸೆಕ್ ನೀರು ಬಿಡುಗಡೆ

    ರಾಯಚೂರು/ಯಾದಗಿರಿ: ಮಹಾರಾಷ್ಟ್ರ ಸೇರಿದಂತೆ ಪಶ್ಚಿಮ ಘಟ್ಟಗಳಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ನಾರಾಯಣ ಜಲಾಶಯಕ್ಕೆ (Narayanapur Dam) ಒಳಹರಿವು ಹೆಚ್ಚಾಗಿದೆ. ಇದರಿಂದಾಗಿ 25 ಗೇಟ್‌ಗಳ ಮೂಲಕ ಕೃಷ್ಣಾ ನದಿಗೆ (Krishna River) 75 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ.

    ಯಾದಗಿರಿ (Yadagiri) ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿಯಿರುವ ಬಸವಸಾಗರ ಜಲಾಶಯ 492.25 ಮೀ. ಗರಿಷ್ಠ ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಸದ್ಯ 490.47 ಮೀ. ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 75 ಸಾವಿರ ಕ್ಯುಸೆಕ್ ಒಳಹರಿವು ಇದೆ. ಸದ್ಯ 77.37ರಷ್ಟು ಜಲಾಶಯ ಭರ್ತಿಯಾದ ಹಿನ್ನೆಲೆ ಹೊರಹರಿವು ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ ಜಲಾಶಯದಿಂದ ಹಂತ ಹಂತವಾಗಿ ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿಬಿಡಲಾಗುತ್ತಿದೆ.ಇದನ್ನೂ ಓದಿ: ಬೆಂಗ್ಳೂರಿನ ಅಪಾರ್ಟ್ಮೆಂಟ್‌ನಲ್ಲಿ ಅಸ್ಥಿಪಂಜರಗಳು ಪತ್ತೆ

    ಈಗಾಗಲೇ ಡ್ಯಾಂನ 25 ಗೇಟ್‌ಗಳ ಮೂಲಕ ಕೃಷ್ಣಾ ನದಿಗೆ (Krishna River) 75 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ರಾಯಚೂರಿನ ಕೃಷ್ಣಾ ನದಿ ಪಾತ್ರದ ಗ್ರಾಮಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ನದಿ ಪಾತ್ರಕ್ಕೆ ತೆರಳದಂತೆ ಜಿಲ್ಲಾಡಳಿತದಿಂದ ನಿರಂತವಾಗಿ ಎಚ್ಚರಿಕೆ ನೀಡುತ್ತಿದೆ.

    33.313 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ 25.77 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದ ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಉತ್ತಮ ಮಳೆ ಹಿನ್ನೆಲೆ ನದಿ ಪಾತ್ರದಲ್ಲಿ ಮುಂಜಾಗ್ರತೆ ವಹಿಸಲು ಜಿಲ್ಲಾಡಳಿತ ಅಧಿಕಾರಿಗಳಿಗೆ ಸೂಚನೆ ನೀಡಿದೆ.ಇದನ್ನೂ ಓದಿ: ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣ – ಹೆಚ್‌ಡಿಕೆಗೆ ಬಿಗ್ ರಿಲೀಫ್

  • ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 5 ಸಾವಿರ ಕ್ಯುಸೆಕ್ ನೀರು ಬಿಡುಗಡೆ

    ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 5 ಸಾವಿರ ಕ್ಯುಸೆಕ್ ನೀರು ಬಿಡುಗಡೆ

    ಯಾದಗಿರಿ: ಜಿಲ್ಲೆಯ ಬಸವಸಾಗರ ಜಲಾಶಯದಲ್ಲಿ (Basavasagar reservoir) ಒಳಹರಿವು ಹೆಚ್ಚಾಗಿದ್ದು ಕೃಷ್ಣಾ ನದಿಗೆ (Krishna River) 5 ಸಾವಿರ ಕ್ಯುಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ.ಇದನ್ನೂ ಓದಿ: ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

    ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಜಲಾಶಯ 33.33 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಸದ್ಯ ಜಲಾಶಯದಲ್ಲಿ 27.80 ಟಿಎಂಸಿ ನೀರು ಸಂಗ್ರಹವಾಗಿದೆ.

    ಸದ್ಯ ಜಲಾಶಯಕ್ಕೆ 20 ಸಾವಿರ ಕ್ಯುಸೆಕ್ ನೀರಿನ ಒಳಹರಿವು ಇದ್ದು, ಒಂದು ಗೇಟ್ ಮೂಲಕ ಕೃಷ್ಣಾ ನದಿಗೆ 5 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಜೊತೆಗೆ ನದಿ ಪಾತ್ರದ ಜನರು ನದಿ ತೀರಕ್ಕೆ ತೆರಳದಂತೆ ಹಾಗೂ ಜಾನುವಾರುಗಳನ್ನು ನದಿ ತೀರಕ್ಕೆ ಕರೆದುಕೊಂಡು ಹೋಗದಂತೆ ಕೃಷ್ಣಾ ಭಾಗ್ಯ ನಿಗಮ ಲಿಮಿಟೆಡ್‌ನ ಅಧಿಕಾರಿಗಳು ಸೂಚಿಸಿದೆ.ಇದನ್ನೂ ಓದಿ: ವಿಮಾನ ದುರಂತದಲ್ಲಿ ಸಾವನ್ನಪ್ಪಿದ ಡಾ.ಪ್ರತೀಕ್ ಜೋಶಿ ಬೆಳಗಾವಿಯ ವಿದ್ಯಾರ್ಥಿ – ಕಣ್ಣೀರಿಟ್ಟ ಸಹಪಾಠಿಗಳು

    (more…)

  • ಕೃಷ್ಣೆಯಿಂದ ಬಸವಸಾಗರ ಡ್ಯಾಮ್‍ಗೆ 1 ಲಕ್ಷ ಕ್ಯೂಸೆಕ್ ನೀರು ರಿಲೀಸ್ – ಯಾದಗಿರಿಯಲ್ಲಿ ಮುಳುಗಡೆ ಭೀತಿ

    ಕೃಷ್ಣೆಯಿಂದ ಬಸವಸಾಗರ ಡ್ಯಾಮ್‍ಗೆ 1 ಲಕ್ಷ ಕ್ಯೂಸೆಕ್ ನೀರು ರಿಲೀಸ್ – ಯಾದಗಿರಿಯಲ್ಲಿ ಮುಳುಗಡೆ ಭೀತಿ

    ಯಾದಗಿರಿ: ಮಹಾರಾಷ್ಟ್ರ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಆಗ್ತಿದ್ದು, ಉತ್ತರ ಕರ್ನಾಟಕದ ಕೃಷ್ಣಾನದಿ ತಟದ ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.

    ಯಾದಗಿರಿ ಜಿಲ್ಲೆಯ ಬಸವಸಾಗರ ಡ್ಯಾಮ್‍ಗೆ ನಿತ್ಯ 1 ಲಕ್ಷ ಕ್ಯೂಸೆಕ್ ನೀರು ಒಳಹರಿವು ಬರುತ್ತಿದೆ. ಹೀಗಾಗಿ ನಿನ್ನೆ ಒಂದೇ ದಿನ ಡ್ಯಾಂನಿಂದ ಒಂದೂವರೆ ಲಕ್ಷ ಕ್ಯೂಸೆಕ್ ನೀರು ಹೊರಬಿಡಲಾಗಿದೆ. ಇನ್ನೂ ಹೆಚ್ಚಿನ ನೀರು ಬಿಡುವ ಸಾಧ್ಯತೆಯಿದೆ. ಹೀಗಾಗಿ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಾರಾಯಣಪುರ ಜಲಾಶಯ ಹಾಗೂ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.

    ನದಿ ಪಾತ್ರಕ್ಕೆ ತೆರಳದಂತೆ ಗ್ರಾಮಸ್ಥರಿಗೆ ಡಂಗೂರದ ಮೂಲಕ ಎಚ್ಚರಿಕೆ ನೀಡಲಾಗಿದೆ. ಈಗಾಗಲೇ ಭೀಮಾನದಿ ತೀರದ ಕಂಗಳೇಶ್ವರ ಹಾಗೂ ವೀರಾಂಜನೇಯ ದೇವಸ್ಥಾನಕ್ಕೆ ಜಲದಿಗ್ಬಂಧನವಾಗಿದೆ. ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಭಾರೀ ಪ್ರಮಾಣದ ನೀರು ಬಿಟ್ಟ ಹಿನ್ನೆಲೆ ಬಸವೇಶ್ವರ ದೇವಾಲಯ ಜಲಾವೃತವಾಗಿದೆ. ಇದನ್ನೂ ಓದಿ: ಶಾರ್ಟ್‌ಕಟ್‌ ರಾಜಕೀಯದ ಮೂಲಕ ಮತಗಳನ್ನು ಸೆಳೆಯುವುದು ತುಂಬಾ ಸುಲಭ: ಪ್ರಧಾನಿ ಮೋದಿ

    ಇದೇ ರೀತಿ ಡ್ಯಾಂನಿಂದ ನೀರು ಬಿಟ್ಟರೆ ಸುರಪುರ, ಶಹಾಪುರ ಹಾಗು ವಡಗೇರಾದ ಸುಮಾರು 45 ಗ್ರಾಮಗಳು ಬಹುತೇಕ ಜಲಾವೃತವಾಗಲಿದೆ. ಜೊತೆಗೆ ಕೊಳ್ಳುರ ಬ್ರಿಡ್ಜ್ ಸಂಪೂರ್ಣ ಮುಳುಗಡೆಯಾಗಿ ಯಾದಗಿರಿ-ರಾಯಚೂರು ಜಿಲ್ಲೆಯ ಸಂಪರ್ಕ ಸಹ ಕಡಿತವಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ಬಸವಸಾಗರ ಜಲಾಶಯದಿಂದ ಭಾರೀ ಪ್ರಮಾಣದ ನೀರು ಬಿಡುಗಡೆ

    ಬಸವಸಾಗರ ಜಲಾಶಯದಿಂದ ಭಾರೀ ಪ್ರಮಾಣದ ನೀರು ಬಿಡುಗಡೆ

    – ಕೃಷ್ಣಾ ನದಿ ತೀರದಲ್ಲಿ ಅಲರ್ಟ್

    ಯಾದಗಿರಿ: ಬಸವಸಾಗರ ಜಲಾಶಯದಿಂದ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದ್ದು, ಕೃಷ್ಣಾ ನದಿ ತೀರದಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ.

    ಜಲಾಶಯದ ಒಟ್ಟು 25 ಗೇಟ್ ಗಳ ಪೈಕಿ 8 ಗೇಟ್ ಓಪನ್ ಮಾಡಿ, ಕೃಷ್ಣಾ ನದಿಗೆ 45 ಸಾವಿರ ಕ್ಯೂಸೆಕ್ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಸಮೀಪದಲ್ಲಿರುವ ಬಸವಸಾಗರ ಜಲಾಶಯ ಇದಾಗಿದೆ.

    33.33 ಟಿಎಂಸಿ ನೀರು ಸಂಗ್ರಹ ಸಾಮಥ್ರ್ಯ ಹೊಂದಿರುವ ಡ್ಯಾಂ ನಲ್ಲಿ ಸದ್ಯ, 20.79 ಟಿಎಂಸಿ ನೀರು ಸಂಗ್ರಹವಾಗಿದ್ದು, 43 ಸಾವಿರ ಕ್ಯೂಸೆಕ್ ಒಳಹರಿವು ಇದ್ದ್ರೆ, 45 ಸಾವಿರ ಕ್ಯೂಸೆಕ್ ಹೊರಹರಿವಿದೆ.

  • ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

    ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

    – ಗ್ರಾಮಸ್ಥರಿಗೆ ನದಿ ಹತ್ತಿರಕ್ಕೆ ತೆರಳದಂತೆ ಎಚ್ಚರಿಕೆ

    ಯಾದಗಿರಿ: ಒಳ ಹರಿಯುವ ಹೆಚ್ಚಾದ ಹಿನ್ನೆಲೆಯಲ್ಲಿ ಸೋಮವಾರ ತಡರಾತ್ರಿಯಿಂದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.

    ನೀರು ಬಿಡುಗಡೆ ಮಾಡಿರುವುದರಿಂದ ನದಿ ಪಾತ್ರದ ಗ್ರಾಮಸ್ಥರಿಗೆ ನದಿ ಹತ್ತಿರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.

    ಯಾದಗಿರಿ ಜಿಲ್ಲೆಯ ನಾರಾಯಣಪುರ ಗ್ರಾಮದ ಬಳಿ ಇರುವ ಬಸವಸಾಗರ ಜಲಾಶಯ ಇದಾಗಿದೆ. ಜಲಾಶಯದ ಒಟ್ಟು ಸಾಮರ್ಥ್ಯ 33.33 TMC, 492.25 ಮೀ ಇದ್ದು, ಇಂದಿನ ನೀರಿನ ಸಂಗ್ರಹ 21.38 TMC 400.37 ಮೀ ಇದೆ. ಒಳಹರಿವು 10,000 ಕ್ಯೂಸೆಕ್ ಇದ್ದರೆ, ಹೊರಹರಿವು ಸಹ ಕ್ಯೂಸೆಕ್ 10,000 ಕ್ಯೂಸೆಕ್ ಇದೆ.

  • ನಾರಾಯಣಪುರ ಡ್ಯಾಂನಿಂದ 3 ಲಕ್ಷ ಕ್ಯೂಸೆಕ್ ನೀರು ಹೊರಕ್ಕೆ – ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

    ನಾರಾಯಣಪುರ ಡ್ಯಾಂನಿಂದ 3 ಲಕ್ಷ ಕ್ಯೂಸೆಕ್ ನೀರು ಹೊರಕ್ಕೆ – ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

    ಬೆಂಗಳೂರು: ಪ್ರವಾಹದ ಹೊಡೆತದಿಂದ ಚೇತರಿಸಿಕೊಳ್ಳುವ ಮೊದಲೇ ಉತ್ತರ ಕರ್ನಾಟಕಕ್ಕೆ ಮತ್ತೆರಗಿರುವ ಪ್ರವಾಹದಿಂದ ಸದ್ಯಕ್ಕೆ ಮುಕ್ತಿ ಸಿಗುವ ಸಾಧ್ಯತೆ ಇಲ್ಲ. ಏಕೆಂದರೆ ರಾತ್ರೋರಾತ್ರಿ ನಾರಾಯಣಪುರ ಜಲಾಶಯದಿಂದ 3 ಲಕ್ಷ ನೀರನ್ನು ಕೃಷ್ಣಾ ನದಿಗೆ ಬಿಡುಗಡೆ ಮಾಡಲಾಗಿದೆ.

    ಉತ್ತರ ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ನಾರಾಯಣಪುರ ಜಲಾಶಯದಿಂದ ರಾತ್ರಿ ಬರೋಬ್ಬರಿ 3.25 ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡಲಾಗಿದೆ. ಯಾದಗಿರಿ ಜಿಲ್ಲೆಯ ಸುರಪುರದಲ್ಲಿರುವ ಡ್ಯಾಂನಿಂದ ಇಷ್ಟೊಂದು ಪ್ರಮಾಣದಲ್ಲಿ ನೀರು ಬಿಟ್ಟಿರುವ ಕಾರಣ ಕೊಳ್ಳೂರು ಸೇತುವೆ, ಲಿಂಗಸುಗೂರಿನ ಶೀಲಹಳ್ಳಿ ಸೇತುವೆ, ದೇವದುರ್ಗದ ಹೂವಿನಹೆಡಗಿ ಸೇತುವೆ ಮುಳುಗಡೆಯಾಗಿದ್ದು ಯಾದಗಿರಿ, ರಾಯಚೂರು ಜಿಲ್ಲೆಗಳ ಕೃಷ್ಣಾ ನದಿ ಪಾತ್ರದ ಗ್ರಾಮಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.

    ಇತ್ತ ಮಳೆಯಬ್ಬರಕ್ಕೆ ಗೋಕಾಕ್ ಫಾಲ್ಸ್ ಬಳಿ ಇರುವ ಗುಡ್ಡ ಮತ್ತೆ ಕುಸಿಯುತ್ತಿದ್ದು, ರಸ್ತೆಗೆ ಬೃಹತ್ ಗಾತ್ರದ ಕಲ್ಲುಗಳು ಉರುಳಿ ಬಿದ್ದಿವೆ. ಬೆಳಗಾವಿ-ಗೋಕಾಕ್ ಸಂಪರ್ಕಿಸುವ ರಸ್ತೆಯಲ್ಲಿ ವಾಹನ ಸವಾರರು ಆತಂಕದಲ್ಲೇ ಓಡಾಡುತ್ತಿದ್ದಾರೆ. ಉರುಳಿ ಬಿದ್ದಿರುವ ಬಂಡೆಗಲ್ಲುಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಬೆಳಗ್ಗೆ 7 ಗಂಟೆಯಿಂದ ಮತ್ತೆ ಆರಂಭವಾಗಿದೆ. ಉರುಳಿರುವ ಎರಡು ಬೃಹತ್ ಬಂಡೆಗಳನ್ನು ಮೊದಲು ಬ್ಲಾಸ್ಟ್ ಮಾಡಿ ಅವುಗಳನ್ನು ಅಲ್ಲಿಂದ ಸಾಗಿಸಲಾಗುತ್ತದೆ. ಎನ್‍ಡಿಆರ್‍ಎಫ್ ಸಿಬ್ಬಂದಿ ಕಾರ್ಯಾಚರಣೆ ಕೈಗೊಳ್ಳಲಿದ್ದಾರೆ.

    ಮಳೆಯ ಅಬ್ಬರಕ್ಕೆ ನಾಡದೇವತೆ ಚಾಮುಂಡಿ ದರ್ಶನಕ್ಕೆ ಹೋಗುವ ಚಾಮುಂಡಿ ಬೆಟ್ಟದಲ್ಲೂ ಭೂ ಕುಸಿತವಾಗಿದೆ. ಚಾಮುಂಡಿ ಬೆಟ್ಟದ ವ್ಯೂವ್ ಪಾಯಿಂಟ್ ಬಳಿಯಲ್ಲಿ ಭೂಮಿ ಕುಸಿದಿದ್ದರಿಂದ ರಸ್ತೆಯೂ ಕುಸಿತವಾಗಿದೆ. ನಂದಿ ವಿಗ್ರಹದ ಕಡೆಗೆ ಸಾಗುವ ಮಾರ್ಗದ ಸನಿಹದಲ್ಲಿಯೇ ಈ ವ್ಯೂವ್ ಪಾಯಿಂಟ್ ಇದೆ. ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಿದ್ದಾರೆ.

    ತುಂಗಭದ್ರಾ ಜಲಾಶಯದಿಂದ ಮಂಗಳವಾರ ಒಂದೂವರೆ ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕಜಂತಕಲ್‍ನಲ್ಲಿ ಸೇತುವೆ ಮುಳುಗಡೆ ಆಗಿತ್ತು. ಇತ್ತ ಮಳೆ ಇಲ್ಲದೇ ಕಂಗೆಟ್ಟಿದ್ದ ಚಿತ್ರದುರ್ಗ ಜಿಲ್ಲೆಯಲ್ಲಿ ವರುಣ ರೌದ್ರಾವತಾರ ತಾಳಿದ್ದಾನೆ. ಹೊಸದುರ್ಗ ತಾಲೂಕಿನ ಕೆಲ್ಲೋಡುವಿನಲ್ಲಿ ವೇದಾವತಿ ನದಿ ಪ್ರವಾಹಕ್ಕೆ ತೆಂಗಿನ ಮರಗಳೇ ಉರುಳಿ ಬಿದ್ದಿದ್ದು, ಕೆಲ್ಲೋಡು ಸೇತುವೆ ಬಳಿ ಮಣ್ಣು ಕುಸಿದಿದೆ.

    ಮಹಾರಾಷ್ಟ್ರದಿಂದ ಭೀಮಾನದಿಗೆ 1 ಲಕ್ಷ ಕ್ಯೂಸೆಕ್ ನೀರು ಬಿಡಲಾಗಿದ್ದು, ಭೀಮಾ ನದಿಯಲ್ಲಿ ಪ್ರವಾಹ ಉಂಟಾಗಿದೆ. ಇತ್ತ ಅಕ್ಕಲಕೋಟ ತಾಲೂಕಿನ ಕರನೂರ ಡ್ಯಾಂನಿಂದಲೂ ನೀರು ಬಿಡಲಾಗಿದೆ. ಅಫಜಲಪುರ ತಾಲೂಕಿನ ಜೇವರ್ಗಿ ಬಿ ಮತ್ತು ಜೇವರ್ಗಿ ಕೆ ಗ್ರಾಮದ ಮಧ್ಯೆ ಬೋರಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಮುಳುಗಡೆ ಆಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಧಾರಾಕಾರ ಮಳೆಗೆ 12 ವರ್ಷಗಳ ಬಳಿಕ ಕೆರೆ ಭರ್ತಿ ಆಗಿ ಕೋಡಿ ಒಡೆದಿದೆ. ಚನ್ನಗಿರಿ ತಾಲೂಕಿನ ಲಿಂಗದಹಳ್ಳಿಯ ಗಾಣದಕಟ್ಟೆ ಕೆರೆ ಕೋಡಿ ಒಡೆದಿದ್ದು ಜಮೀನುಗಳಿಗೆ ನೀರು ನುಗ್ಗಿದೆ.

    ಕರಾವಳಿಯ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ರೆಡ್ ಅಲರ್ಟ್ ಘೋಷಿಸಿರುವ ಹವಾಮಾನ ಇಲಾಖೆ, ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಹೀಗಾಗಿ ಸದ್ಯಕ್ಕೆ ನೆರೆಯಬ್ಬರ ತಗ್ಗುವ ಲಕ್ಷಣಗಳಿಲ್ಲ. ಬೆಳಗಾವಿ, ಧಾರವಾಡ, ಕಲಬುರಗಿ, ವಿಜಯಪುರ, ಯಾದಗಿರಿಯಲ್ಲಿ ಕಿತ್ತಳೆ ಬಣ್ಣದ ಎಚ್ಚರಿಕೆ ನೀಡಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ. ಬೆಂಗಳೂರಲ್ಲಿ ಶುಕ್ರವಾರದ ಬೆಳಗ್ಗಿನವರೆಗೂ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ. ಇಲ್ಲಿವರೆಗೆ ಕರ್ನಾಟಕದಲ್ಲಿ ಪ್ರವಾಹಕ್ಕೆ 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

  • ಕೃಷ್ಣಾ ಎಡದಂಡೆ ಕಾಲುವೆ ಒಡೆದು ನುಗ್ಗಿದ ನೀರು: ಕೆರೆಯಂತಾದ ಹಾವಿನಾಳ ಗ್ರಾಮ!

    ಕೃಷ್ಣಾ ಎಡದಂಡೆ ಕಾಲುವೆ ಒಡೆದು ನುಗ್ಗಿದ ನೀರು: ಕೆರೆಯಂತಾದ ಹಾವಿನಾಳ ಗ್ರಾಮ!

    ಯಾದಗಿರಿ: ಕೃಷ್ಣಾ ಎಡದಂಡೆ ಕಾಲುವೆ ಒಡೆದ ಪರಿಣಾಮ ಜಿಲ್ಲೆಯ ಸುರಪುರ ತಾಲೂಕಿನ ಹಾವಿನಾಳ ಗ್ರಾಮಕ್ಕೆ ನೀರು ನುಗ್ಗಿದ್ದರಿಂದ ಇಡೀ ಹಳ್ಳಿ ಕೆರೆಯಂತೆ ನಿರ್ಮಾಣವಾಗಿದೆ.

    ಸುರಪುರ ತಾಲೂಕಿನ ನಾರಾಯಣಪೂರ ಗ್ರಾಮದ ಬಸವಸಾಗರ ಜಲಾಶಯದ ಕೃಷ್ಣಾ ಎಡದಂಡೆ ಮುಖ್ಯ ಕಾಲುವೆಯು ಕಳೆದ ಮೂರು ದಿನಗಳ ಹಿಂದೆ ಒಡೆದು ಹೋಗಿದೆ. ಇದರಿಂದಾಗಿ ಹಾವಿನಾಳ ಗ್ರಾಮಕ್ಕೆ ನೀರು ನುಗ್ಗಿದೆ. ನೀರು ನುಗ್ಗಿದ್ದರ ಪರಿಣಾಮ ಇಡೀ ಹಳ್ಳಿಯು ಕೆರೆಯಂತಾಗಿದ್ದು, ಗ್ರಾಮಸ್ಥರು ತತ್ತರಿಸಿ ಹೋಗಿದ್ದಾರೆ.

    ಬಸವಸಾಗರ ಎಡದಂಡೆಯ ಮುಖ್ಯ ಕಾಲುವೆಯು ಕಳಪೆ ಕಾಮಗಾರಿಯಿಂದ ನಿರ್ಮಿಸಿದ್ದರಿಂದ ಕಾಲುವೆ ಒಡೆದಿದ್ದು, ಅಪಾರ ಪ್ರಮಾಣ ನಷ್ಟವಾಗಿದೆ. ಗ್ರಾಮದಲ್ಲಿ ಕಳೆದ ಮೂರು ದಿನಗಳಿಂದ ಬೀದಿ ಬೀದಿಗಳಲ್ಲಿ ನೀರು ನಿಂತಿದೆ. ಇದರಿಂದಾಗಿ ಗ್ರಾಮಸ್ಥರು ಓಡಾಡಲು ಸಹ ಕಷ್ಟವಾಗಿದೆ. ಗ್ರಾಮದ ಪ್ರಮುಖ ರಸ್ತೆ, ಶಾಲೆ ಹಾಗೂ ದೇವಸ್ಥಾನದ ಆವರಣಗಳ ಸುತ್ತಲೂ ನೀರು ನಿಂತಿದೆ ಎಂದು ಹಾವಿನಾಳ ಗ್ರಾಮಸ್ಥರು ಹೇಳಿದ್ದಾರೆ.

    ಬಸವಸಾಗರ ಜಲಾಶಯದಿಂದ ಕಾಲುವೆಗೆ ಸ್ವಲ್ಪ ಪ್ರಮಾಣದ ನೀರು ಹರಿಸಿದಕ್ಕೆ ಇಷ್ಟು ಪ್ರಮಾಣದ ಹಾನಿಯಾಗಿದೆ. ಒಂದು ವೇಳೆ ಹೆಚ್ಚಿನ ಪ್ರಮಾಣದಲ್ಲಿ ಕಾಲುವೆಗೆ ನೀರನ್ನು ಹರಿಸಿದರೆ ಭಾರೀ ಅನಾಹುತವಾಗುತಿತ್ತು. ಈಗಾಗಲೇ ಗ್ರಾಮದಲ್ಲಿ ನೀರು ನುಗ್ಗಿದ್ದರಿಂದ ಮನೆಗಳಲ್ಲಿದ್ದ ಎಲ್ಲಾ ವಸ್ತುಗಳು ಸಂಪೂರ್ಣವಾಗಿ ಹಾಳಾಗಿವೆ. ಈಗಲಾದರೂ ಕೆಬಿಜೆಎನ್‍ಎಲ್(ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ) ಅಧಿಕಾರಿಗಳು ಒಡೆದಿರುವ ಕಾಲುವೆ ದುರಸ್ಥಿ ಮಾಡಿ ಗ್ರಾಮಕ್ಕೆ ನೀರು ಬಾರದಂತೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮದ ಮಂಜುನಾಥ್ ಆಗ್ರಹಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಚಿಕಿತ್ಸೆಗಾಗಿ ಪ್ರವಾಹದಲ್ಲಿ ಪ್ರಾಣ ಪಣಕ್ಕಿಟ್ಟು ಈಜಿ ದಡ ಸೇರಿದ

    ಚಿಕಿತ್ಸೆಗಾಗಿ ಪ್ರವಾಹದಲ್ಲಿ ಪ್ರಾಣ ಪಣಕ್ಕಿಟ್ಟು ಈಜಿ ದಡ ಸೇರಿದ

    ಯಾದಗಿರಿ: ತಂಗಿಯನ್ನು ನೋಡಲು ಬಂದವನಿಗೆ ಜ್ವರ ಬಂದು ಚಿಕಿತ್ಸೆಗಾಗಿ ತನ್ನ ಪ್ರಾಣವನ್ನೇ ಪಣಕ್ಕಿಟ್ಟ ಹೃದಯವಿದ್ರಾವಕ ಘಟನೆ ಯಾದಗಿರಿಯಲ್ಲಿ ನಡೆದಿದೆ.

    ಹೌದು. ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 45 ಸಾವಿರ ಕ್ಯೂಸೆಕ್ ನೀರನ್ನು ಹೊರಹರಿಸಲಾಗುತ್ತಿದೆ. ನದಿಯಲ್ಲಿ ಹೆಚ್ಚಿನ ಪ್ರಮಾಣ ನೀರು ಬಂದಿರುವುದರಿಂದ ನೀಲಕಂಠರಾಯನಗಡ್ಡಿ ಈಗ ನಡುಗಡ್ಡೆಯಾಗಿದೆ.

    ನೀಲಕಂಠರಾಯನಗಡ್ಡಿ ಸುತ್ತಲು ಕೃಷ್ಣಾ ನದಿ ಒಡಲು ಮೈದುಂಬಿ ಹರಿಯುತ್ತಿದೆ. ಇಂದು ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿಯುತ್ತಿರುವ ಕಾರಣ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ. ಹೀಗಾಗಿ ಗಡ್ಡಿಯಲ್ಲಿರುವ ತನ್ನ ಸಹೋದರಿಯನ್ನು ಭೇಟಿಯಾಗಲು ಬಂದ ಯುವಕ ಜ್ವರದಿಂದ ಬಳಲಿ ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಈಜುಕಾಯಿ ಸಹಾಯದೊಂದಿಗೆ ಈಜಾಡಿ ಕೃಷ್ಣಾ ನದಿ ದಡ ಸೇರಲು ಹರಸಾಹಸ ಪಟ್ಟಿದ್ದಾರೆ.

    ರಾಯಚೂರು ಜಿಲ್ಲೆಯ ಬಗಿರಗುಂಡ ಗ್ರಾಮದ ನಿವಾಸಿ ಹಣಮಂತ ಎಂಬವರು ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲಿ ಗಡ್ಡಿ ಸುತ್ತಲು ಕೃಷ್ಣ ನದಿ ನೀರು ಹರಿಸುವುದರಿಂದ ಚಿಕಿತ್ಸೆಗೆ ಪರದಾಡಿದ್ದಾರೆ. ನಂತರ ಇಂದು ಗ್ರಾಮಸ್ಥರ ಸಹಾಯದೊಂದಿಗೆ ಈಜಾಡುತ್ತಾ ದಡ ಸೇರಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

    ಕೃಷ್ಣಾ ನದಿ ಉಕ್ಕಿ ಹರಿಯುತ್ತಿರುವ ಕಾರಣ ಗ್ರಾಮದಲ್ಲಿರುವ ಶಾಲೆಗೆ ಬೀಗ ಜಡಿಯಲಾಗಿದೆ. ಕಳೆದ 2 ದಿನಗಳಿಂದ ಗಡ್ಡಿ ಗ್ರಾಮಕ್ಕೆ ಶಿಕ್ಷಕರು ಬಂದಿಲ್ಲ. ಅದೆ ರೀತಿ ಗಡ್ಡಿಯಲ್ಲಿ ನಾಲ್ವರು ಗರ್ಭಿಣಿಯರಿದ್ದು ಆಸ್ಪತ್ರೆಗೆ ತೆರಳಲು ಪ್ರಯಾಸ ಪಡುವಂತಾಗಿದೆ. ಅದೆ ರೀತಿ ಗ್ರಾಮದಲ್ಲಿ ಆಹಾರ ಪದಾರ್ಥಕ್ಕೂ ಕೂಡ ಕೊರತೆಯುಂಟಾಗಿದೆ. ಒಟ್ಟಾರೆಯಾಗಿ ಜಿಲ್ಲಾಡಳಿತ ಎಚ್ಚೆತ್ತು ದೋಣಿ ಅನುಕೂಲ ಕಲ್ಪಿಸಿ ಜನರ ಹಸಿವನ್ನು ನೀಗಿಸಬೇಕು ಹಾಗೂ ಗರ್ಭಿಣಿಯರಿಗೆ ಸೂಕ್ತ ಚಿಕೀತ್ಸೆ ನೀಡುವ ಕೆಲಸ ಮಾಡಬೇಕಿದೆ.

    https://youtu.be/zRuiyxC3flQ