Tag: Basavasagar Reservoir

  • ಬಸವಸಾಗರ ಡ್ಯಾಂನಿಂದ ಕೃಷ್ಣ ನದಿಗೆ 1.60 ಲಕ್ಷ ಕ್ಯೂಸೆಕ್ ನೀರು ರಿಲೀಸ್ – ಲಿಂಗಸೂಗುರು ಸೇತುವೆ ಮುಳುಗಡೆ

    ಬಸವಸಾಗರ ಡ್ಯಾಂನಿಂದ ಕೃಷ್ಣ ನದಿಗೆ 1.60 ಲಕ್ಷ ಕ್ಯೂಸೆಕ್ ನೀರು ರಿಲೀಸ್ – ಲಿಂಗಸೂಗುರು ಸೇತುವೆ ಮುಳುಗಡೆ

    ರಾಯಚೂರು/ಯಾದರಿಗಿ: ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾದ ಹಿನ್ನೆಲೆ ಬಸವಸಾಗರ ಜಲಾಶಯದಿಂದ  (Basavasagar Dam) ನದಿಗೆ ನೀರು ಬಿಡಲಾಗುತ್ತಿದ್ದು, ಪರಿಣಾಮ ಲಿಂಗಸುಗೂರು (Lingasuguru) ತಾಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ.ಇದನ್ನೂ ಓದಿ: ಉಪರಾಷ್ಟ್ರಪತಿ ಚುನಾವಣೆ – ನಿವೃತ್ತ ನ್ಯಾ. ಬಿ.ಸುದರ್ಶನ್ ರೆಡ್ಡಿ ಇಂಡಿಯಾ ಒಕ್ಕೂಟದ ಅಭ್ಯರ್ಥಿ

    ಭಾರೀ ಮಳೆಯ ಪರಿಣಾಮ ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ ಸದ್ಯ 1.55 ಲಕ್ಷ ಕ್ಯೂಸೆಕ್ ಒಳಹರಿವು ಇದ್ದು, ಜಲಾಶಯದ ಸುರಕ್ಷತಾ ದೃಷ್ಟಿಯಿಂದ 1.60 ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ರಿಲೀಸ್ ಮಾಡಲಾಗಿದೆ. ಪರಿಣಾಮ ರಾಯಚೂರಿನ ಲಿಂಗಸುಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿ, ಐದಾರು ಗ್ರಾಮಗಳ ರಸ್ತೆ ಸಂಪರ್ಕ ಕಡಿತವಾಗಿದೆ.

    ಶೀಲಹಳ್ಳಿ, ಹಂಚಿನಾಳ, ಯರಗೋಡಿ ಮಾರ್ಗ ಸಂಪೂರ್ಣ ಬಂದ್ ಆಗಿದೆ. ಹೀಗಾಗಿ ಗ್ರಾಮಸ್ಥರು ಲಿಂಗಸುಗೂರಿಗೆ ತೆರಳಲು ಸುಮಾರು 45 ಕಿ.ಮೀ ಸುತ್ತುವರೆದು ಪ್ರಯಾಣಿಸಬೇಕಿದೆ. ಇನ್ನೂ ಹೆಚ್ಚು ಪ್ರಮಾಣದ ನೀರು ನದಿಗೆ ಹರಿದು ಬಂದಿದ್ದರಿAದ ರೈತರ ಪಂಪ್ ಸೆಟ್‌ಗಳು ನೀರಲ್ಲಿ ಮುಳುಗಿ ಹೋಗಿವೆ. ನೀರಿನ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಗ್ರಾಮಸ್ಥರಿಗೆ ನದಿ ಪಾತ್ರಕ್ಕೆ ತೆರಳದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.ಇದನ್ನೂ ಓದಿ: ಹೊಂಬಾಳೆ ಫಿಲಮ್ಸ್‌ನ ‘ಕಾಂತಾರ ಚಾಪ್ಟರ್ 1’ ನಲ್ಲಿ ಕುಲಶೇಖರನ ಪಾತ್ರದಲ್ಲಿ ಗುಲ್ಶನ್ ದೇವಯ್ಯ

  • ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 1.78 ಲಕ್ಷ ಕ್ಯುಸೆಕ್ ನೀರು ಬಿಡುಗಡೆ

    ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 1.78 ಲಕ್ಷ ಕ್ಯುಸೆಕ್ ನೀರು ಬಿಡುಗಡೆ

    ರಾಯಚೂರು: ಕೃಷ್ಣಾ (Krishna River) ಅಣೆಕಟ್ಟು ಪ್ರದೇಶದಲ್ಲಿ ಭಾರೀ ಮಳೆ ಆಗಿರುವ ಹಿನ್ನೆಲೆ ಬಸವಸಾಗರ ಜಲಾಶಯದಿಂದ (Basavasagar Reservoir) ಹೆಚ್ಚು ಪ್ರಮಾಣದ ನೀರು ಕೃಷ್ಣಾ ನದಿಗೆ ಬಿಡುಗಡೆ ಮಾಡಲಾಗಿದೆ.

    ರಾಯಚೂರಿನ (Raichur) ಲಿಂಗಸುಗೂರಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ. ಜಲಾಶಯಕ್ಕೆ 1.75 ಲಕ್ಷ ಕ್ಯುಸೆಕ್ ಒಳಹರಿವಿದೆ. ಈ ಹಿನ್ನೆಲೆ 1.78 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಲಾರಿ ಡಿಕ್ಕಿ ಹೊಡೆದು ಸೈಕಲ್ ಸವಾರ ಸ್ಥಳದಲ್ಲೆ ಸಾವು

    ಶೀಲಹಳ್ಳಿ ಸೇತುವೆ ಮುಳುಗಡೆಯಿಂದ ಐದಾರು ಗ್ರಾಮಗಳ ರಸ್ತೆ ಸಂಪರ್ಕ ಕಡಿತವಾಗಿದೆ. ಶೀಲಹಳ್ಳಿ, ಹಂಚಿನಾಳ, ಯರಗೋಡಿ ಸಂಪರ್ಕ ಮಾರ್ಗ ಸಂಪೂರ್ಣ ಬಂದ್ ಆಗಿದೆ. ನದಿ ತೀರಕ್ಕೆ ತೆರಳದಂತೆ ಗ್ರಾಮಸ್ಥರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: Anjanadri Betta | ಧಾರ್ಮಿಕ ಭಾವನೆಗಳಿಗೆ ಧಕ್ಕೆ – SDPI ದೂರಿನ ಬೆನ್ನಲ್ಲೇ ಗಂಗಾವತಿಯಲ್ಲಿ ಬಿಲ್ಲು, ಬಾಣಗಳಿರುವ ವಿದ್ಯುತ್ ಕಂಬ ತೆರವಿಗೆ ಆದೇಶ

  • ಮತ್ತೊಮ್ಮೆ ಬಸವಸಾಗರ ಡ್ಯಾಂ ಭರ್ತಿ- ಕೃಷ್ಣಾ ನದಿಗೆ ಭಾರೀ ಪ್ರಮಾಣದ ನೀರು

    ಮತ್ತೊಮ್ಮೆ ಬಸವಸಾಗರ ಡ್ಯಾಂ ಭರ್ತಿ- ಕೃಷ್ಣಾ ನದಿಗೆ ಭಾರೀ ಪ್ರಮಾಣದ ನೀರು

    ಯಾದಗಿರಿ: ಮತ್ತೊಮ್ಮೆ ಬಸವಸಾಗರ ಡ್ಯಾಂ ಸಂಪೂರ್ಣ ಭರ್ತಿಯಾದ ಹಿನ್ನೆಲೆ ಡ್ಯಾಂನಿಂದ ಕೃಷ್ಣಾ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗಿದೆ.

    ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಸಮೀಪದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 10 ಕ್ರಸ್ಟ್ ಗೇಟ್‍ಗಳ ಮೂಲಕ 1.1 ಲಕ್ಷ ಕ್ಯೂಸೆಕ್ ನಷ್ಟು ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ಕೃಷ್ಣಾ ನದಿ ತೀರದಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ಇದನ್ನೂ ಓದಿ: ಎರಡೂವರೆ ತಿಂಗಳಿಂದ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ- ಆರೋಪಿ ಬಂಧನ

    ಸದ್ಯದ ಡ್ಯಾಂಗೆ 85 ಸಾವಿರ ಕ್ಯೂಸೆಕ್ ನೀರು ಇದೆ. 492.25 ಮೀ. ಎತ್ತರದ ಜಲಾಶಯದಲ್ಲಿ ಸದ್ಯ 492.01 ಮೀಟರ್ ಅಂದರೆ 31 ಟಿಎಂಸಿ ಸದ್ಯ ನೀರು ಸಂಗ್ರಹವಾಗಿದೆ. ಹೀಗಾಗಿ ನೀರನ್ನು ಹೊರಬಿಡಲಾಗಿದೆ. ನದಿ ಪಾತ್ರದ ಜನರಲ್ಲಿ ಇದೀಗ ಮತ್ತೆ ಭಯ ಶುರುವಾಗಿದೆ.

  • ಬಸವಸಾಗರ ಜಲಾಶಯದಿಂದ ಮತ್ತೆ ನೀರು ಬಿಡುಗಡೆ- ಜಲದಿಗ್ಬಂಧನದಲ್ಲಿ ಮುಷ್ಠಳ್ಳಿಯ ರಾಮಮಂದಿರ

    ಬಸವಸಾಗರ ಜಲಾಶಯದಿಂದ ಮತ್ತೆ ನೀರು ಬಿಡುಗಡೆ- ಜಲದಿಗ್ಬಂಧನದಲ್ಲಿ ಮುಷ್ಠಳ್ಳಿಯ ರಾಮಮಂದಿರ

    – ಶೆಳ್ಳಗಿ, ಮುಷ್ಠಳ್ಳಿಯ 13 ಕುಟುಂಬಗಳು ಸುರಕ್ಷಿತ ಸ್ಥಳಕ್ಕೆ

    ಯಾದಗಿರಿ: ಬಸವಸಾಗರ ಜಲಾಶಯದಿಂದ ಮತ್ತೆ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗುತ್ತಿದ್ದು, ಕೃಷ್ಣಾ ನದಿ ತೀರದ ದೇಗುಲಗಳು ಜಲಾವೃತಗೊಂಡಿವೆ.

    ಜಲಾಶಯದಿಂದ ಕೃಷ್ಣಾ ನದಿಗೆ 4,17,740 ಕ್ಯೂಸೆಕ್ ನೀರು ಬಿಡುಗಡೆಯಾಗುತ್ತಿದ್ದು, ಸುರಪುರ ತಾಲೂಕಿನ ಮುಷ್ಠಳ್ಳಿ ಸಮೀಪದ ರಾಮಮಂದಿರ ಜಲದಿಗ್ಬಂಧನವಾಗಿದೆ. ದೇವಸ್ಥಾನ ಸುತ್ತಲೂ ನದಿಯ ನೀರು ಆವರಿಸಿದೆ. ನದಿ ತೀರದ ಗ್ರಾಮಗಳ ಸಮೀಪದಲ್ಲಿ ನದಿ ನೀರು ಬರುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಶೆಳ್ಳಗಿ, ಮುಷ್ಠಳ್ಳಿಯ 13 ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ನದಿ ತೀರದ ಗ್ರಾಮಗಳಲ್ಲಿ ಅಧಿಕಾರಿಗಳು ಬಿಡು ಬಿಟ್ಟಿದ್ದಾರೆ.

    ಅಪಾರ ಪ್ರಮಾಣದ ಬೆಳೆ ಹಾನಿ:
    ಕೃಷ್ಣಾ ನದಿಯ ಅಬ್ಬರಕ್ಕೆ ಅಪಾರ ಪ್ರಮಾಣದ ಬೆಳೆ ಹಾನಿಯಾಗಿ ಅನ್ನದಾತರು ಕಣ್ಣೀರು ಹಾಕುವಂತಾಗಿದೆ. ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 4,17,740 ಕ್ಯೂಸೆಕ್ ನೀರು ಬಿಡುಗಡೆಯಾಗುತ್ತಿರುವ ಹಿನ್ನೆಲೆ ನದಿಯ ಹಿನ್ನೀರು ರೈತರ ಜಮೀನಿಗೆ ನುಗ್ಗಿ ಭತ್ತ, ಹತ್ತಿ ಬೆಳೆ ನೀರು ಪಾಲಾಗಿ, ಅನ್ನದಾತರ ಬದುಕು ಕೊಚ್ಚಿ ಹೋಗಿದೆ. ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ, ಶೆಳ್ಳಗಿ, ಮುಷ್ಠಳ್ಳಿ ಗ್ರಾಮದ ಸಾವಿರಾರು ಎಕರೆ ಪ್ರದೇಶದ ಬೆಳೆ ಹಾನಿಯಾಗಿದೆ.

    ಮತ್ತೊಂದು ಕಡೆ ಯಾದಗಿರಿ ಮತಕ್ಷೇತ್ರದ ವಡಗೇರಾ ತಾಲೂಕಿನ ಯಕ್ಷಂತಿ, ಗೌಡೂರು, ಎಂ ಕೊಳ್ಳೂರು ಗ್ರಾಮದ ಸಾವಿರಾರು ಎಕರೆ ಬೆಳೆ ನಾಶವಾಗಿದೆ. ಇಷ್ಟಾದರೂ ಜನರ ನೋವು ಆಲಿಸಲು ಯಾವುದೇ ಜನ ಪ್ರತಿನಿಧಿಗಳು ಬಂದಿಲ್ಲ, ಇದರಿಂದಾಗಿ ರೈತರು ಹಿಡಿ ಶಾಪ ಹಾಕುತ್ತಿದ್ದಾರೆ.

  • ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಭಾರೀ ಪ್ರಮಾಣದ ನೀರು, ಹತ್ತಿಕುಣಿ ಜಲಾಶಯ ಭರ್ತಿಗೆ ಕ್ಷಣಗಣನೆ

    ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಭಾರೀ ಪ್ರಮಾಣದ ನೀರು, ಹತ್ತಿಕುಣಿ ಜಲಾಶಯ ಭರ್ತಿಗೆ ಕ್ಷಣಗಣನೆ

    – ನದಿ ತೀರದಲ್ಲಿ ಪ್ರವಾಹದ ಆತಂಕ

    ಯಾದಗಿರಿ: ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಭಾರೀ ಪ್ರಮಾಣದ ನೀರು ಬಿಡುಗಡೆಯಾಗಿದ್ದು, ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಆತಂಕ ಉಂಟಾಗಿದೆ. ಇತ್ತ ಹತ್ತಿಕುಣಿ ಜಲಾಶಯ ಭರ್ತಿಗೆ ಕ್ಷಣಗಣನೆ ಆರಂಭವಾಗಿದ್ದು, ರೈತರಲ್ಲಿ ಸಂತಸ ಮೂಡಿದೆ.

    ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರದಿಂದ 20 ಗೇಟ್ ಗಳ ಮೂಲಕ ಕೃಷ್ಣಾ ನದಿಗೆ 1,29,640 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಜಲಾಶಯಕ್ಕೆ 1,20,000 ಕ್ಯೂಸೆಕ್ಸ್ ಒಳಹರಿವಿದೆ. ಪ್ರವಾಹ ಎದುರಿಸಲು ಜಿಲ್ಲಾಡಳಿತ ಸಕಲ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಿದೆ.

    ಜಿಲ್ಲೆಯ ಎಲ್ಲಾ ತಹಶಿಲ್ದಾರರು ಕೇಂದ್ರ ಸ್ಥಾನದಲ್ಲಿರಲು ಸೂಚನೆ ನೀಡಿರುವ ಜಿಲ್ಲಾಡಳಿತ, ಪ್ರವಾಹ ವಿಪತ್ತು ನಿರ್ವಹಣಾ ಸಮಿತಿ ರಚನೆ ಮಾಡಿದೆ. ಕೃಷ್ಣಾ ನದಿ ಪಾತ್ರದಲ್ಲಿರುವ ಗ್ರಾಮಗಳ ಜನರಿಗೆ ಮುನ್ನೆಚರಿಕೆ ಕ್ರಮವಾಗಿ ಮೈಕ್ ಮೂಲಕ ಹಾಗೂ ಡಂಗುರ ಸಾರುವ ಮೂಲಕ ಜಾಗೃತಿ ಮೂಡಿಸಲು ಮುಂದಾಗಿದೆ. ಗ್ರಾಮದ ಜನ-ಜಾನುವಾರುಗಳು ನದಿಯ ದಡಕ್ಕೆ ಹೋಗದಂತೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

    ಹತ್ತಿಕುಣಿ ಜಲಾಶಯ ಭರ್ತಿಗೆ ಕ್ಷಣಗಣನೆ
    ಜಿಲ್ಲೆಯ ಪ್ರವಾಸಿ ಕೇಂದ್ರಗಳಲ್ಲಿ ಒಂದಾದ ಹತ್ತಿಕುಣಿ ಜಲಾಶಯ ಭರ್ತಿಗೆ ಕ್ಷಣಗಣನೆ ಆರಂಭವಾಗಿದ್ದು, ಮನಮೋಹಕ ದೃಶ್ಯ ಕಣ್ತುಂಬಿಕೊಳ್ಳಲು ಜನಸಾಗರ ಹರಿದು ಬರುತ್ತಿದೆ. ಜಿಲ್ಲೆಯಲ್ಲಿ ಈ ವರ್ಷ ಮುಂಗಾರು ಮಳೆ ಉತ್ತಮವಾಗಿರುವ ಹಿನ್ನೆಲೆ ಹಸಿರು ಬೆಟ್ಟಗಳ ಮಧ್ಯೆ ಇರುವ ಯಾದಗಿರಿ ತಾಲೂಕಿನ ಹತ್ತಿಕುಣಿ ಜಲಾಶಯ ಭರ್ತಿಯಾಗುತ್ತಿದೆ. ನೀರು ಬಿಡಲು ಕ್ಷಣಗಣನೆ ಆರಂಭವಾಗಿದ್ದು, ಜನ ನಿರೀಕ್ಷೆಯಲ್ಲಿದ್ದಾರೆ. ಮತ್ತೊಂದು ಕಡೆ ಜಲಾಶಯ ಭರ್ತಿ ರೈತರಲ್ಲಿ ಸಂತಸ ಮೂಡಿದೆ.

    ಹತ್ತಿಕುಣಿ, ಯಡ್ಡಳ್ಳಿ, ಬಂದಳ್ಳಿ, ಹೊನಗೇರಾ, ಕಟಗಿಶಹಾಪೂರ, ದಸರಾಬಾದ್ ಗ್ರಾಮಗಳ ಒಟ್ಟು 53 ಎಕರೆ ಜಮೀನಿಗೆ ಈ ಡ್ಯಾಂ ನೀರನ್ನು ಬಳಸಿಕೊಳ್ಳಬಹುದಾಗಿದೆ. ರೈತರು ಭತ್ತ, ಶೇಂಗಾ, ಹತ್ತಿ, ಜೋಳ, ಸಜ್ಜೆ, ಇನ್ನಿತರ ಬೆಳೆಗಳನ್ನು ಬೆಳೆಯಲು ಈ ಡ್ಯಾಂ ಬಹಳಷ್ಟು ಸಹಕಾರಿಯಾಗುತ್ತದೆ. ಒಟ್ಟು 0.352 ಟಿಎಮ್‍ಸಿ ನೀರು ಸಂಗ್ರಹ ಸಾಮಾಥ್ರ್ಯ ಹೊಂದಿರುವ ಜಲಾಶಯದಲ್ಲಿ ಈಗಾಗಲೇ 0.305 ಟಿಎಮ್‍ಸಿ ನೀರು ಸಂಗ್ರಹವಿದೆ. ಹೆಚ್ಚು ನೀರು ಹರಿದು ಬಂದರೆ ಜಲಾಶಯದ ಗೇಟ್‍ಗಳನ್ನು ತೆರೆಯಲು ನೀರಾವರಿ ಇಂಜಿನೀಯರ್ ಸೇರಿದಂತೆ ಸಿಬ್ಬಂದಿ ಸ್ಥಳದಲ್ಲಿ ಠಿಕಾಣಿ ಹಾಕಿದ್ದಾರೆ.

    ಜಲಾಶಯ ಭರ್ತಿಯಾಗಿದೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಹತ್ತಿಕುಣಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಯುವಕರು ಹಾಗೂ ರೈತರು ಬೆಳಗ್ಗೆಯಿಂದಲೇ ಜಲಾಶಯಕ್ಕೆ ಆಗಮಿಸಿ, ಜಲಾಶಯ ವೀಕ್ಷಿಸಿ, ನಿಸರ್ಗದ ಸೌಂದರ್ಯವನ್ನು ಸವಿಯುತ್ತಿದ್ದಾರೆ.

  • ಬಸವಸಾಗರ ಜಲಾಶಯದಿಂದ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

    ಬಸವಸಾಗರ ಜಲಾಶಯದಿಂದ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

    -ಕೃಷ್ಣಾ ನದಿ ತೀರದ ಪ್ರದೇಶಗಳಲ್ಲಿ ಕಟ್ಟೆಚ್ಚರ

    ಯಾದಗಿರಿ: ಮಹಾರಾಷ್ಟ್ರದಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿರುವ ಹಿನ್ನೆಲೆ ಇಂದು ಬಸವಸಾಗರ ಜಲಾಶಯದಿಂದ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ನಾಳೆ ವೇಳೆಗೆ ನೀರಿನ ಹೊರ ಹರಿವು ಜಾಸ್ತಿಯಾಗುವ ಸಾಧ್ಯತೆಯಿದೆ.

    ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದಲ್ಲಿರುವ ಬಸವಸಾಗರ ಜಲಾಶಯ ಇದಾಗಿದ್ದು, ಈಗಾಗಲೇ ಜಲಾಶಯ ಭರ್ತಿಯಾಗಿದೆ. ಇನ್ನೂ ಮತ್ತೆ ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದವಾಗುತ್ತಿದ್ದು, ಕೃಷ್ಣಾ ನದಿ ತೀರಕ್ಕೆ ಜನರು ತೆರಳದಂತೆ ಯಾದಗಿರಿ ಜಿಲ್ಲಾಡಳಿತ ಸೂಚನೆ ನೀಡಿದೆ.

    ಈಗಾಗಲೇ ನದಿ ತೀರದ ತಾಲೂಕಗಳಾದ ಶಹಾಪುರ, ಸುರಪುರ, ವಡಗೇರಾ, ಹುಣಸಗಿಯಲ್ಲಿ ಕಾಳಜಿ ಕೇಂದ್ರ ಗುರುತಿಸುವ ಕಾರ್ಯ ಆರಂಭಗೊಂಡಿದೆ. ಒಂದು ಲಕ್ಷ ಕ್ಯೂಸೆಕ್ ನೀರು ನದಿಗೆ ಹರಿಯುವ ತನಕ ಜಿಲ್ಲೆಯ ಯಾವುದೇ ಗ್ರಾಮಕ್ಕೆ ಅಪಾಯವಾಗುವುದಿಲ್ಲ. ಆದರೆ ಜಲಾಶಯದ ಹೊರ ಹರಿವು ಒಂದು ಲಕ್ಷ ಕ್ಯೂಸೆಕ್ ದಾಟಿದ್ರೆ, ಸುರಪುರ ತಾಲೂಕಿನ ನೀಲಕಂಠರಾಯನ ಗಡ್ಡಿ ಸಂಪೂರ್ಣ ಸಂಪರ್ಕ ಕಳೆದುಕೊಂಡು, ನಡುಗಡ್ಡೆಯಾಗಲಿದೆ. ಇನ್ನೂ ಕೊಳ್ಳೂರು ಸೇತುವೆ ಮುಳುಗಡೆಯಾಗುವ ಸಾಧ್ಯತೆಯಿದೆ. ಛಾಯಾಭಗವತಿ ದೇವಸ್ಥಾನ ಮುಳುಗಡೆ ಸೇರಿದಂತೆ ಯಕ್ಷಚಿಂತಿ, ಗೌಡೂರು, ಯಮನೂರು, ಸೂಗೂರು ಗ್ರಾಮಗಳ ಜಮೀನಿಗಳು ಸಂಪೂರ್ಣ ನೀರಿನಲ್ಲಿ ಜಲಾವೃತಗೊಳ್ಳಲಿವೆ. ನೀರಿನ ಪ್ರಮಾಣ ಹೆಚ್ಚಾದಂತೆ ಗ್ರಾಮಗಳಿಗೂ ನೀರು ನುಗ್ಗುವ ಸಾಧ್ಯತೆ ಇದೆ.

    ಬಸವಸಾಗರ ಜಲಾಶಯ ಒಟ್ಟು 33.31 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಸದ್ಯ ಡ್ಯಾಂ ನಲ್ಲಿ 30.06 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ ಸದ್ಯ 50 ಸಾವಿರ ಕ್ಯೂಸೆಕ್ ಒಳಹರಿವು ಇದ್ದರೆ, ಒಟ್ಟು 24 ಗೇಟ್ ಗಳ ಪೈಕಿ ಏಳು ಗೇಟ್ ಗಳ ಮೂಲಕ 50 ಸಾವಿರ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಹಂತ ಹಂತವಾಗಿ ಹೊರ ಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಲಿದೆ.