ಕುಡುಕ ತಂದೆಯ ಚಿತ್ರ ಹಿಂಸೆ ಅನುಭವಿಸಿದವರಿಗಷ್ಟೇ ಗೊತ್ತು ಎಂದ ಚೈತ್ರಾ ಕುಂದಾಪುರ
‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ಕುಂದಾಪುರ (Chaithra Kundapura) ಮದುವೆ ಬಗ್ಗೆ ತಂದೆ ಬಾಲಕೃಷ್ಣ ನಾಯ್ಕ್ ಚಕಾರವೆತ್ತಿದ್ದಾರೆ. ಮದುವೆಗೆ ತನ್ನನ್ನು ಕರೆದಿಲ್ಲ ಮಾಧ್ಯಮದ ಮುಂದೆ ತಂದೆ ಕಿಡಿಕಾರಿದ್ದರು. ತಂದೆಯ ಆರೋಪಕ್ಕೆಲ್ಲಾ ಚೈತ್ರಾ ತಿರುಗೇಟು ನೀಡಿದ್ದಾರೆ. ಹೆಣ್ಣು ಮಕ್ಕಳ ಜವಾಬ್ದಾರಿ ಹೊತ್ತು ಮದುವೆಯೂ ಮಾಡಲಿಲ್ಲ ಎಂದು ಕುಡುಕ ತಂದೆಯ ಚಿತ್ರ ಹಿಂಸೆ ಎಂದು ಫೈರ್ ಬ್ರ್ಯಾಂಡ್ ಚೈತ್ರಾ ಕುಂದಾಪುರ ರಿಯಾಕ್ಟ್ ಮಾಡಿದ್ದಾರೆ. ಇದನ್ನೂ ಓದಿ:ನನ್ನನ್ನು ಜಗಲಿಯಲ್ಲಿ ಬಿಟ್ಟು ಮನೆಗೆ ಬೀಗ ಹಾಕ್ಕೊಂಡು ಬಿಗ್ ಬಾಸ್‌ಗೆ ಹೋಗಿದ್ದಳು- ಚೈತ್ರಾ ಕುಂದಾಪುರ ತಂದೆ ಕಿಡಿ

ಚೈತ್ರಾ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ, ಕುಡುಕ ತಂದೆಯ ಚಿತ್ರ ಹಿಂಸೆ ಅನುಭವಿಸಿದವರಿಗಷ್ಟೇ ಗೊತ್ತು. ಎಂತಹ ಮಕ್ಕಳಿಗೂ ಕುಡುಕ ತಂದೆ ಸಿಗಬಾರದು. ಎರಡು ಕ್ವಾಟರ್ ನಾನು ಕೊಟ್ರೆ ನನ್ನ ಮಕ್ಕಳು ದೇವರು ಅನ್ನುವವರ ಮಾತಿಗೆ ಬೆಲೆ ಕೊಡುವವರು ಮೂರ್ಖರಾಗ್ತಾರೆ ಅಂತ ಬರೆದುಕೊಳ್ಳುವ ಮೂಲಕ ತಿರುಗೇಟು ಕೊಟ್ಟಿದ್ದಾರೆ. ಇದನ್ನೂ ಓದಿ:ಚೈತ್ರ & ಆಕೆಯ ಪತಿ ಇಬ್ಬರೂ ಕಳ್ಳರು- ಮಗಳ ಮದುವೆಗೆ ತಂದೆ ಆಕ್ಷೇಪ

ಹೆತ್ತ ಮಗಳನ್ನು ಸಾಕಲಿಲ್ಲ, ಫೀಸು ಕಟ್ಟಿ ಓದಿಸಲಿಲ್ಲ. ಹೆಣ್ಣು ಮಕ್ಕಳ ಜವಾಬ್ದಾರಿ ಹೊತ್ತು ಮದುವೆಯೂ ಮಾಡಲಿಲ್ಲ. ಕಟ್ಟಿಕೊಂಡ ಹೆಂಡ್ತಿಗೆ ಹೊಡೆದು ಚಿತ್ರಹಿಂಸೆ ಮಾಡಿದ್ದು ಬಿಟ್ಟರೆ ಬೇರೆ ಏನು ಇಲ್ಲ. ಎಲ್ಲಾ ಮುಗಿದ್ಮೇಲೆ ಅಪವಾದ ಹಾಕೋಕೆ ಮಾತ್ರ ತಂದೆ ಎನ್ನುವ ಹೆಸರು ವಾವ್ ಎಂದು ತಂದೆಯ ವಾಗ್ದಾಳಿಗೆ ಚೈತ್ರಾ ಕುಂದಾಪುರ ಪ್ರತ್ಯುತ್ತರ ನೀಡಿದ್ದಾರೆ.

ಮೇ 9ರಂದು ಶ್ರೀಕಾಂತ್ ಜೊತೆ ಚೈತ್ರಾ ಅವರು ಕುಂದಾಪುರದಲ್ಲಿ ಹಸೆಮಣೆ ಏರಿದರು. 12 ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಿದ್ದಾರೆ.



ಮಗಳು ಚೈತ್ರಾ ಮದುವೆ ಬಗ್ಗೆ ತಂದೆ ಮಾತನಾಡಿ, ಚೈತ್ರಾ ಮತ್ತು ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ಚೈತ್ರಾಳ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ ಹಣದ ಆಸೆಗಾಗಿ ಹೀಗೆ ಮಾಡುತ್ತಿದ್ದಾರೆ ಎಂದರು. ಉದ್ಯಮಿ ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಇವರು ಹಣ ಹಂಚಿಕೊಂಡಿದ್ದಾರೆ. ಆಕೆ ಸೈನಿಕರಿಗೆ ಹಣ ಕೊಟ್ಟಿದ್ದೇನೆ ಎಂದು ಹೇಳಿಕೊಂಡಿದ್ದಾಳೆ. ಸ್ವಂತ ಹಣದಲ್ಲಿ ಕೊಟ್ಟಿದ್ದರೆ ಹೆಮ್ಮೆಯ ವಿಷಯವಾಗುತ್ತಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:
ನನಗೆ ನನ್ನ ದೊಡ್ಡ ಮಗಳು ಮಾತ್ರ ಆಸರೆ. ನನ್ನ ದೊಡ್ಡ ಮಗಳು ಗಾಯತ್ರಿ ನಿರಪರಾಧಿ. ನಾನು ಮತ್ತು ನನ್ನ ದೊಡ್ಡ ಮಗಳು ಮರ್ಯಾದೆಯಿಂದ ಬದುಕುತ್ತಿದ್ದೇವೆ. ಚೈತ್ರಾ ಬಿಗ್ ಬಾಸ್ ಮನೆಗೆ ಹೋಗುವಾಗಲೂ ನನಗೆ ಹೇಳಿಲ್ಲ. ನನ್ನ ಪತ್ನಿ ನನ್ನನ್ನು ಜಗಲಿಯಲ್ಲಿ ಬಿಟ್ಟು ಬೀಗ ಹಾಕಿ ಬಿಗ್ ಬಾಸ್‌ಗೆ ಹೋಗಿದ್ದಳು. ನಾನು ಕಟ್ಟಿದ ಮನೆಯಲ್ಲಿ ನಾನೇ ಅನಾಥನಾಗಿದ್ದೇನೆ ಎಂದು ನೊಂದು ನುಡಿದಿದ್ದಾರೆ.
ಆಕೆಗೆ ಯಾರು ದೊಡ್ಡ ಸ್ಥಾನಮಾನ ಕೊಡಬೇಡಿ. ತಂದೆಯನ್ನು ದೂರವಿಟ್ಟವರು ಸಂಸ್ಕೃತಿಯ ಬಗ್ಗೆ ಮಾತನಾಡುವುದು ಎಷ್ಟು ಸರಿ? ಆಕೆ ಸೈನಿಕರಿಗೆ ಹಣ ಕೊಟ್ಟಿದ್ದೇನೆ ಎಂದು ಹೇಳಿಕೊಂಡಿದ್ದಾಳೆ. ಸ್ವಂತ ಹಣದಲ್ಲಿ ಕೊಟ್ಟಿದ್ದರೆ ಹೆಮ್ಮೆಯ ವಿಷಯ. ಮೋಸದ ಹಣದಲ್ಲಿ ಆಕೆ ಕೊಟ್ಟು ಪ್ರಯೋಜನ ಏನು? ಆಕೆಯ ಮದುವೆಯನ್ನು ನಾನು ಒಪ್ಪುವುದಿಲ್ಲ. ನನಗೆ ಸರಿಯಾಗಿ ಮದುವೆಗೆ ಆಮಂತ್ರಣ ಕೂಡ ನೀಡಿಲ್ಲ. ಚೈತ್ರ ಮದುವೆ ಸಂದರ್ಭ ನನ್ನಲ್ಲಿ ಹಣ ಕೇಳಿದಳು. ನಾನು ಹೋಟೆಲ್‌ನಲ್ಲಿ ಕೆಲಸ ಮಾಡುವ ಸಾಮಾನ್ಯ ನೌಕರ ಎಂದಿದ್ದಾರೆ.
ಚೈತ್ರ ಮತ್ತು ಆಕೆಯ ತಾಯಿ ಹಣಕ್ಕಾಗಿ ನನ್ನನ್ನು ದೂರವಿಟ್ಟಿದ್ದಾರೆ. ಚೈತ್ರಾ ಪತಿ ನಮ್ಮ ಮನೆಯಲ್ಲಿ ಇದ್ದವ, ಅವನು ಕೂಡ ಕಳ್ಳ. ನನ್ನ ಕುಟುಂಬದ ಮಾನ ಮರ್ಯಾದೆ ತೆಗೆದಿದ್ದಾರೆ. ನಾನು ಸತ್ಯ, ನ್ಯಾಯ, ಧರ್ಮದಲ್ಲಿರುವ ವ್ಯಕ್ತಿ. ನನ್ನ ದೊಡ್ಡ ಮಗಳು ಟೀಚರ್ ಆಗಿ, ಹೊಲಿಗೆ ಮಾಡಿಕೊಂಡು ಗೌರವಾನ್ವಿತ ರೀತಿಯಲ್ಲಿ ಬದುಕುತ್ತಿದ್ದಾಳೆ. ನನ್ನ ದೊಡ್ಡ ಮಗಳ ಮೇಲು ಚೈತ್ರ ಸುಳ್ಳು ಅಪವಾದ ಹಾಕಿದ್ದಳು ಎಂದು ಬೇಸರಿಸಿದ್ದಾರೆ.











ಕಾಲೇಜಿನಲ್ಲಿ ಓದುತ್ತಿದ್ದಾಗ ಚೈತ್ರಾಗೆ ಶ್ರೀಕಾಂತ್ ಕಶ್ಯಪ್ ಪರಿಚಯವಾಗಿತ್ತು. ಜಗಳದಿಂದ ಶುರುವಾದ ಸ್ನೇಹ ಈಗ ಮದುವೆಗೆ ಮುನ್ನುಡಿ ಬರೆದಿದೆ. ಆ್ಯನಿಮೇಷನ್ ಕೋರ್ಸ್ ಮಾಡಿರುವ ಶ್ರೀಕಾಂತ್ ಕಶ್ಯಪ್ ಸುದ್ದಿವಾಹಿನಿವೊಂದರಲ್ಲಿ ಚೈತ್ರಾ ಜೊತೆ ಕೆಲಸ ಮಾಡಿದ್ದರು. ಇದೀಗ ಜ್ಯೋತಿಷ್ಯ, ವಾಸ್ತು, ಪೌರೋಹಿತ್ಯದ ಕೆಲಸದಲ್ಲಿ ಶ್ರೀಕಾಂತ್ ತೊಡಗಿಸಿಕೊಂಡಿದ್ದಾರೆ.




