ದೊಡ್ಮನೆ ಇದೀಗ ಬಿಗ್ ಬಾಸ್ ಸಾಮ್ರಾಜ್ಯವಾಗಿ ಬದಲಾಗಿದೆ. ಉಗ್ರಂ ಮಂಜು (Ugramm Manju) ರಾಜನಾಗಿ ಮನೆಯನ್ನು ಆಳುತ್ತಿದ್ದಾರೆ. ಮಂಜು ಸಾಮ್ರಾಜ್ಯದಲ್ಲಿ ಬಿಗ್ ಬಾಸ್ ನಾಮಿನೇಷನ್ ವಿಭಿನ್ನವಾಗಿದೆ ನಡೆದಿದೆ. ಈ ವೇಳೆ, ಮೋಕ್ಷಿತಾಗೆ ತ್ರಿವಿಕ್ರಮ್ ಎರಡು ತಲೆ ನಾಗರಹಾವು ಎಂದು ಗುಡುಗಿದ್ದಾರೆ. ಇದನ್ನೂ ಓದಿ:ಅನುಷಾ ಜೊತೆಗಿನ ಮದುವೆ ಪ್ರಪೋಸಲ್‌ಗೆ ಧರ್ಮ ಹೇಳೋದೇನು?

ಬಿಗ್ ಬಾಸ್ ಮನೆಯಲ್ಲಿರುವ ಪ್ರಜೆಯ ಫೋಟೋವನ್ನು ಬಾಣದಿಂದ ಚುಚ್ಚಿ ಮನೆಯ ಮುಖ್ಯದ್ವಾರದಿಂದ ಹೊರಹೋಗುವಂತೆ ಹೊಡೆದು ನಾಮಿನೇಟ್ ಮಾಡಬೇಕು ಎಂದು ಬಿಗ್ ಬಾಸ್ ನಿಯಮ ಹೇಳಿರುತ್ತಾರೆ. ಅದರಂತೆ ಮೋಕ್ಷಿತಾ ಪೈ (Mokshitha Pai) ಅವರು ನಾಮಿನೇಷನ್‌ಗೆ ಭವ್ಯ ಗೌಡ ಹಾಗೂ ತ್ರಿವಿಕ್ರಮ್ ಹೆಸರನ್ನು ಹೇಳುತ್ತಾರೆ. ಮಂಜು ಮುಂದೆ ತ್ರಿವಿಕ್ರಮ್ (Trivikram) ಬಿಲ್ಡಪ್ ಕೊಡುತ್ತಾರೆ. ಆಚೆ ಬಂದ್ಮೇಲೆ ತ್ರಿವಿಕ್ರಮ್ ಅದೇ ಮಂಜು ಬಗ್ಗೆ ಏನೂ ಅಲ್ಲ ಎನ್ನುವಂತೆ ಮಾತನಾಡುತ್ತಾರೆ ಎಂದು ಮೋಕ್ಷಿತಾ ಕಾರಣ ಕೊಟ್ಟಿದ್ದಾರೆ. ಅದಕ್ಕೆ, ಉಗ್ರಂ ಮಂಜು ಅವರು ಅದು ನಂಬಿಕೆ ದ್ರೋಹ ಎಂದು ತ್ರಿವಿಕ್ರಮ್ ಮೇಲೆ ಕೂಗಾಡಿದ್ದಾರೆ.
ಮೋಕ್ಷಿತಾ ನೀಡಿರುವ ಕಾರಣಕ್ಕೆ ತ್ರಿವಿಕ್ರಮ್ ತಮ್ಮನ್ನು ಸಮರ್ಥಿಸಿಕೊಂಡು, ನಾನು ಇವರನ್ನು ಮ್ಯಾನಿಪುಲೇಟ್ ಮಾಡುತ್ತಿಲ್ಲ. ನಿಜವಾಗಿಯೂ ಮಾಡ್ತಿರೋದು ಇವರು. ಅದಕ್ಕೆ ಸಿಟ್ಟಿಗೆದ್ದ ಉಗ್ರಂ ಮಂಜು, ಮಾತು ಬರುತ್ತದೆ ಎಂದು ನೀವು ಮಾತನಾಡಬೇಡಿ ಎನ್ನುತ್ತಾರೆ. ಆಗ ನನ್ನನ್ನು ಗೋಮುಖ ವ್ಯಾಘ್ರ ಎನ್ನುತ್ತಾರೆ. ನಿಜವಾಗಿಯೂ ಇವರು ಎರಡು ತಲೆ ನಾಗರಹಾವು ಎಂದು ಮೋಕ್ಷಿತಾ ವಿರುದ್ಧ ತ್ರಿವಿಕ್ರಮ್ ರೊಚ್ಚಿಗೆದ್ದಿದ್ದಾರೆ.
View this post on Instagram
ಕಳೆದ ವಾರಾಂತ್ಯ ಧರ್ಮ ಕೀರ್ತಿರಾಜ್ ಅವರ ಎಲಿಮಿನೇಷನ್ ನಡೆದಿದೆ. ಈ ವಾರ ಇನ್ನೂಳಿದ ಸ್ಪರ್ಧಿಗಳ ನಡುವೆ ಉಳಿವಿಕೆಗಾಗಿ ಜಟಾಪಟಿ ಶುರುವಾಗಿದೆ. ಬಿಗ್ ಬಾಸ್‌ನಲ್ಲಿ ರಾಜನಾಗಿ ಆಳ್ವಿಕೆ ಮಾಡುತ್ತಿರುವ ಉಗ್ರಂ ಮಂಜು ದರ್ಬಾರ್ ಜೋರಾಗಿದೆ. ಹಾಗಾದ್ರೆ ಮುಂದೆ ಏನೆಲ್ಲಾ ಆಗಲಿದೆ ಎಂಬುದನ್ನು ಕಾದುನೋಡಬೇಕಿದೆ.






























