Tag: bbmp

  • ಗ್ರೇಟರ್ ಬೆಂಗಳೂರು ಅಥಾರಿಟಿ ಹೆಸರು ಬದಲಾವಣೆ?

    ಗ್ರೇಟರ್ ಬೆಂಗಳೂರು ಅಥಾರಿಟಿ ಹೆಸರು ಬದಲಾವಣೆ?

    ಬೆಂಗಳೂರು: ಗ್ರೇಟರ್ ಬೆಂಗಳೂರು ಅಥಾರಿಟಿ (Greater Bengaluru Authority) ಹೆಸರು ಬದಲಾವಣೆಗೆ ಸರ್ಕಾರದ ಸಿದ್ದತೆ ನಡೆಸಿದೆ ಎನ್ನಲಾಗಿದೆ.

    ಬಿಬಿಎಂಪಿಯನ್ನು (BBMP) ಗ್ರೇಟರ್ ಬೆಂಗಳೂರು ಅಥಾರಿಟಿ ಆಗಿಸಿ 5 ಪಾಲಿಕೆಯಾಗಿ ಮಾಡಲಾಗಿದೆ. ಗ್ರೇಟರ್ ಬೆಂಗಳೂರು ಅಥಾರಿಟಿಯಲ್ಲಿ ಕನ್ನಡ ಪದಕ್ಕೆ ಒತ್ತು ನೀಡಿ ಗ್ರೇಟರ್ ಎಂಬ ಪದ ಬದಲಾವಣೆಗೆ ಸರ್ಕಾರ ಚಿಂತನೆ ನಡೆಸಿದೆ.

     

    ಬೆಂಗಳೂರು ಅಥಾರಿಟಿ ಉಳಿಸಿಕೊಂಡು ಗ್ರೇಟರ್ ಬದಲಾವಣೆಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆದಿದೆ. ಗ್ರೇಟರ್ ಬದಲಿಗೆ ಕನ್ನಡದ ಸೂಕ್ತ ಪದ ಬಳಕೆಗೆ ಬರುವಂತೆ ಹೆಸರು ಸೂಚಿಸಲು ಅಧಿಕಾರಿಗಳಿಗೆ ಮೌಕಿಕ ಸೂಚನೆ ನೀಡಲಾಗಿದೆ.  ಇದನ್ನೂ ಓದಿ: ಗ್ರೇಟರ್ ಬೆಂಗಳೂರು ಸಮಗ್ರ ಟೌನ್‌ಶಿಪ್ ಜಮೀನು ಡಿನೋಟಿಫೈ ಮಾಡಿ BSY ರೀತಿ ಜೈಲಿಗೆ ಹೋಗಲು ಸಿದ್ಧನಿಲ್ಲ: ಡಿಕೆಶಿ

    ಗ್ರೇಟರ್‌ ಪದ ಬಳಕೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿತ್ತು. ಕನ್ನಡದಲ್ಲಿ ಈ ಪದಕ್ಕೆ ಪರ್ಯಾಯವಾಗಿ ಬೇರೆ ಯಾವುದೇ ಪದ ಸಿಕ್ಕಿಲ್ಲವೇ ಎಂದು ಜನರು ಪ್ರಶ್ನಿಸಿದ್ದರು.

  • ಇತಿಹಾಸದ ಪುಟ ಸೇರಿದ ಬಿಬಿಎಂಪಿ – ಜಿಬಿಎಗೆ ಆಯ್ಕೆಯಾಗಲಿದ್ದಾರೆ 500 ಸದಸ್ಯರು

    ಇತಿಹಾಸದ ಪುಟ ಸೇರಿದ ಬಿಬಿಎಂಪಿ – ಜಿಬಿಎಗೆ ಆಯ್ಕೆಯಾಗಲಿದ್ದಾರೆ 500 ಸದಸ್ಯರು

    ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (BBMP) ಇತಿಹಾಸದ ಪುಟ ಸೇರಿದೆ. ಬೆಂಗಳೂರು ಪಾಲಿಕೆಯನ್ನು 5 ಮಹಾನಗರ ಪಾಲಿಕೆವುಳ್ಳ ಗ್ರೇಟರ್ ಬೆಂಗಳೂರು ಪ್ರಾಧಿಕಾರ (Greater Bengaluru Authority) ಇಂದಿನಿಂದ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದೆ.

    ಒಂದೊಂದು ಪಾಲಿಕೆಗೆ 100ರಿಂದ 150 ವಾರ್ಡ್‌ಗಳನ್ನು ಸೇರಿಸಲಾಗುತ್ತದೆ. ಅಂದಾಜು 500 ಸದಸ್ಯರು ಆರಿಸಿ ಬರಲಿದ್ದಾರೆ. ನವೆಂಬರ್ 1ರೊಳಗೆ ವಾರ್ಡ್ ವಿಂಗಡಣೆ ಅಂತಿಮವಾಗಲಿದೆ. ನ.30ರೊಳಗೆ ವಾರ್ಡ್ ಮೀಸಲಾತಿ ಅಂತಿಮವಾಗಲಿದ್ದು, ಆ ನಂತರ ಚುನಾವಣೆ ಪ್ರಕ್ರಿಯೆ ಆರಂಭವಾಗಲಿದೆ. ಮುಂದಿನ ವರ್ಷಾರಂಭದಲ್ಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ನಡೆಯುವ ಸಾಧ್ಯತೆ ಇದೆ.  ಇದನ್ನೂ ಓದಿ: ತಲೆಬುರುಡೆ ರಹಸ್ಯ | ಶೀಘ್ರದಲ್ಲೇ ಎಲ್ಲದಕ್ಕೂ ಕ್ಲ್ಯಾರಿಟಿ ಕೊಡ್ತೀನಿ: ಯೂಟ್ಯೂಬರ್ ಸಮೀರ್ ಫಸ್ಟ್ ರಿಯಾಕ್ಷನ್

     

    ಮೇಯರ್ ಅವಧಿ 1 ವರ್ಷದಿಂದ ಎರಡೂವರೆ ವರ್ಷಕ್ಕೆ ವಿಸ್ತರಿಸಲಾಗುವುದು. ನಾಳೆಯಿಂದಲೇ ಆಯಾ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಟ್ಯಾಕ್ಸ್ ಸಂಗ್ರಹಿಸಲಾಗುವುದು. ನ.1ನೇ ತಾರೀಖಿಗೆ ಎಲ್ಲಾ 5 ಪಾಲಿಕೆಗಳಿಗೆ ಗುದ್ದಲಿ ಪೂಜೆ ನೆರವೇರಿಸಲಾಗುವುದು ಎಂದು ಬೆಂಗಳೂರು ಉಸ್ತುವಾರಿ ಸಚಿವ ಶಿವಕುಮಾರ್ (DK Shivakumar) ಹೇಳಿದರು.

    ಸಿದ್ದರಾಮಯ್ಯ (Siddaramaiah) ಪುತ್ರ ಯತೀಂದ್ರರನ್ನು ಜಿಬಿಎ ಸದಸ್ಯರನ್ನಾಗಿ ಮಾಡಿರೋದನ್ನು ಸಮರ್ಥಿಸಿಕೊಂಡಿರುವ ಡಿಕೆಶಿ ಬೆಂಗಳೂರು ವೋಟರ್ ಆಗಿರುವುದರಿಂದ ಸದಸ್ಯರಾಗಿ ನೇಮಿಸಿರಬಹುದು ಎಂದಿದ್ದಾರೆ.

  • ಇಂದಿನಿಂದ ಗ್ರೇಟರ್ ಬೆಂಗಳೂರು ಆಡಳಿತ ಜಾರಿ

    ಇಂದಿನಿಂದ ಗ್ರೇಟರ್ ಬೆಂಗಳೂರು ಆಡಳಿತ ಜಾರಿ

    ಬೆಂಗಳೂರು: ಇಂದಿನಿಂದ (ಸೆ.1) ಗ್ರೇಟರ್ ಬೆಂಗಳೂರು ಆಡಳಿತ (Greater Bengaluru Authority) ಜಾರಿಯಾಗಿದ್ದು, ಬೆಂಗಳೂರನ್ನು ಐದು ಪಾಲಿಕೆಗಳಾಗಿ ವಿಂಗಡಿಸಿ ಆಡಳಿತ ನಡೆಸಲಾಗುತ್ತದೆ.

    ಹೌದು, ಸಿಲಿಕಾನ್ ಸಿಟಿ (Silicon City) ಬೆಳೆಯುತ್ತಿರುವ ನಗರ. ಹೀಗಾಗಿ ಒಂದೇ ಸಂಸ್ಥೆಯಿಂದ ನಿರ್ವಹಣೆ ಕಷ್ಟ ಅಂತಾ ಸರ್ಕಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಮಾಡಿ ಐದು ಪಾಲಿಕೆಗಳಾಗಿ ವಿಂಗಡಿಸಿ ಆಡಳಿತ ನಡೆಸೋದಕ್ಕೆ ಆದೇಶಿಸಿತ್ತು. ಅದರಂತೆ ಇಂದಿನಿಂದ (ಸೆ.2) ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆಡಳಿತ ಜಾರಿ ಆಗಿದೆ. ಈ ಹಿಂದೆ ಬಿಬಿಎಂಪಿ ಇತ್ತು, ಆದರೆ ಇನ್ಮುಂದೆ ಗ್ರೇಟರ್ ಬೆಂಗಳೂರು ಆಡಳಿತ ಜಾರಿಯಲ್ಲಿರಲಿದೆ. ಈಗಾಗಲೇ ಐದು ಪಾಲಿಕೆಗಳಿಗೆ 10 ಕಚೇರಿಯನ್ನ ಗುರುತು ಮಾಡಲಾಗಿದೆ.ಇದನ್ನೂ ಓದಿ: ಹಾಸನ | ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸುತ್ತಿದ್ದ ಪಾಲಿಕೆಯ ಶೆಡ್ ಕುಸಿತ – ಕಾರ್ಮಿಕರು ಪಾರು

    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಂದು ಇತಿಹಾಸ ಪುಟ ಸೇರಲಿದೆ. 1949ರಲ್ಲಿ ಬೆಂಗಳೂರಿನಲ್ಲಿ ನಗರ ಸಭೆ ರೂಪುಗೊಂಡಿತ್ತು. ಆರ್.ಸುಬ್ಬಣ್ಣ ಮೊದಲ ಮೇಯರ್ ಆಗಿದ್ದರು. ಅಂದಿನಿಂದ 1995ರವರೆಗೆ ನಗರಸಭೆ ಆಡಳಿತ ಜಾರಿಯಲ್ಲಿತ್ತು. ನಂತರ 1996ರಲ್ಲಿ ಬೆಂಗಳೂರು ಮಹಾನಗರ ಪಾಲಿಕೆ ರಚನೆಯಾಗಿ 2006ರವರೆಗೆ ಆಡಳಿತ ನಡೆಸಿತ್ತು. ಬಳಿಕ ವ್ಯಾಪ್ತಿಯನ್ನು ಹಿರಿದಾಗಿಸಿ 2010ರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ರಚನೆಯಾಗಿತ್ತು. ಅಂದಿನಿಂದ 2025ರವರೆಗೆ ಬಿಬಿಎಂಪಿ (BBMP) ಆಡಳಿತ ನಡೆಸಿಕೊಂಡು ಬಂದಿದೆ. 2019-20ರಲ್ಲಿ ಮೇಯರ್ ಆದ ಎಂ.ಗೌತಮ್ ಕುಮಾರ್ ಬೆಂಗಳೂರಿನ ಏಕೀಕೃತ ಆಡಳಿತದ ಕೊನೆಯ ಮೇಯರ್ ಆಗಿದ್ದರು. ಇದೀಗ ಮಹಾನಗರ ಪಾಲಿಕೆಯನ್ನು 5 ನಗರಪಾಲಿಕೆಗಳನ್ನು ವಿಂಗಡಿಸಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆಡಳಿತ ಆರಂಭವಾಗಿದೆ.

    ಬಿಬಿಎಂಪಿ ವ್ಯಾಪ್ತಿಯಲ್ಲಿದ್ದ ಎಲ್ಲಾ ನಾಮಫಲಕಗಳು ಇಂದೇ ಬದಲಾಗಲಿದ್ದು, ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನಿಯಮ ರೂಪಿಸಿದೆ.

    ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿ ಐದು ಪಾಲಿಕೆಗಳಿಗೆ ಎರಡೆರಡು ಕಚೇರಿಗಳನ್ನ ಗುರುತು ಮಾಡಲಾಗಿದೆ.
    1. ಗ್ರೇಟರ್ ಬೆಂಗಳೂರು ಪ್ರಾಧಿಕಾರ: ಕಾರ್ಪೋರೇಷನ್ ಸರ್ಕಲ್ ಕೇಂದ್ರ ಕಚೇರಿ ಮುಖ್ಯ ಕಟ್ಟಡ ಅನೆಕ್ಸ್ 1 – ಅನೆಕ್ಸ್ – 2

    2. ಬೆಂಗಳೂರು ನಗರ ಕೇಂದ್ರ ನಗರ ಪಾಲಿಕೆ: ಹಾಲಿ ಪೂರ್ವ ವಲಯ ಕಚೇರಿ, ಕೇಂದ್ರ ಕಚೇರಿ ಅನೆಕ್ಸ್ ಕಟ್ಟಡ

    3. ಬೆಂಗಳೂರು ಪೂರ್ವ ನಗರ ಪಾಲಿಕೆ: ಮಹಾದೇವಪುರ ವಲಯ ಕಚೇರಿ, ಕೆ.ಆರ್ ಪುರಂ ಕಚೇರಿ

    4. ಪಶ್ಚಿಮ ವಲಯ: ಆರ್.ಆರ್ ನಗರ ವಲಯ ಕಚೇರಿ, ಹಾಲಿ ಪಾಲಿಕೆ ಸೌಧ ಚಂದ್ರಲೇಔಟ್

    5. ಬೆಂಗಳೂರು ಉತ್ತರ ನಗರ ಪಾಲಿಕೆ: ಹಾಲಿ ಯಲಹಂಕ ವಲಯ ಕಚೇರಿ, ಹಾಲಿ ದಾಸರಹಳ್ಳಿ ವಲಯ ಕಚೇರಿ

    6. ಬೆಂಗಳೂರು ದಕ್ಷಿಣ ನಗರ ಪಾಲಿಕೆ: ಹಾಲಿ ದಕ್ಷಿಣ ವಲಯ ಕಚೇರಿ, ಹಾಲಿ ಬೊಮ್ಮನಹಳ್ಳಿ ವಲಯ ಕಚೇರಿ

    ಇನ್ನೂ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 15 ಐಎಎಸ್, 20ಕ್ಕೂ ಹೆಚ್ಚು ಕೆಎಎಸ್ ಮತ್ತು ಇಬ್ಬರು ಐಪಿಎಸ್ ಅಧಿಕಾರಗಳ ಹುದ್ದೆಯನ್ನ ರಚನೆ ಮಾಡಲಾಗಿದೆ ಹಾಗೂ ಐದು ಪಾಲಿಕೆಗಳಿಗೆ 28 ವಿಧಾನಸಭಾ ಕ್ಷೇತ್ರಗಳನ್ನ ಹಂಚಿಕೆ ಮಾಡಲಾಗಿದೆ.ಇದನ್ನೂ ಓದಿ: ಟಿ20 ಕ್ರಿಕೆಟ್‌ಗೆ ದಿಢೀರ್‌ ನಿವೃತ್ತಿ ಘೋಷಿಸಿದ ಮಿಚೆಲ್‌ ಸ್ಟಾರ್ಕ್

    ಯಾವ್ಯಾವ ಪಾಲಿಕೆಗೆ ಎಷ್ಟೆಷ್ಟು ವಿಧಾನಸಭಾ ಕ್ಷೇತ್ರ?

    1. ಬೆಂಗಳೂರು ಪಶ್ಚಿಮ ನಗರ ಪಾಲಿಕೆ – 10 ವಿಧಾನಸಭಾ ಕ್ಷೇತ್ರ
    2. ಬೆಂಗಳೂರು ಕೇಂದ್ರ ನಗರ ಪಾಲಿಕೆ – 07 ವಿಧಾನಸಭಾ ಕ್ಷೇತ್ರ
    3. ಬೆಂಗಳೂರು ಪೂರ್ವ ನಗರ ಪಾಲಿಕೆ – _02 ವಿಧಾನಸಭಾ ಕ್ಷೇತ್ರ
    4.ಬೆಂಗಳೂರು ಉತ್ತರ ನಗರ ಪಾಲಿಕೆ – 07 ವಿಧಾನಸಭಾ ಕ್ಷೇತ್ರ
    5. ಬೆಂಗಳೂರು ದಕ್ಷಿಣ ನಗರ ಪಾಲಿಕೆ – 08 ವಿಧಾನಸಭಾ ಕ್ಷೇತ್ರ

    ಇನ್ನೂ ಗ್ರೇಟರ್ ಬೆಂಗಳೂರು ಎಂಬುದು ಆಂಗ್ಲ ಪದ ಕನ್ನಡ ಪದ ಇಲ್ಲವಾ ಎಂಬ ಪ್ರಶ್ನೆ ಎದ್ದಿತ್ತು. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸದನದಲ್ಲಿಯೇ ಡಿಕೆ ಶಿವಕುಮಾರ್ ಅವರನ್ನ ಪ್ರಶ್ನೆ ಮಾಡಿದ್ದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬದಲು ಬೃಹತ್ ಬೆಂಗಳೂರು ಪ್ರಾಧಿಕಾರ ಮಾಡಿ ಅಂತಾ ಒತ್ತಾಯ ಎದ್ದಿದೆ. ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಹೆಸರು ಬದಲಾವಣೆ ವಿಚಾರವನ್ನ ಪ್ರಾಧಿಕಾರದ ಸಮಿತಿ ಗಮನಕ್ಕೆ ತರಲು ಮುಂದಾಗಿದ್ದಾರೆ.ಇದನ್ನೂ ಓದಿ: ಅಮೆರಿಕದಲ್ಲಿ ಭೀಕರ ಅಪಘಾತ – ಕೋಲಾರ ಮೂಲದ ಬಾಡಿ ಬಿಲ್ಡರ್ ದುರ್ಮರಣ

  • ಸೆ.2 ರಿಂದ ಗ್ರೇಟರ್ ಬೆಂಗಳೂರು ಆಡಳಿತ – ಐದು ಪಾಲಿಕೆಗಳ ರಚನೆ

    ಸೆ.2 ರಿಂದ ಗ್ರೇಟರ್ ಬೆಂಗಳೂರು ಆಡಳಿತ – ಐದು ಪಾಲಿಕೆಗಳ ರಚನೆ

    – ಐದು ಪಾಲಿಕೆಗಳಿಗೆ 10 ತಾತ್ಕಾಲಿಕ ಕಚೇರಿಗಳ ಗುರುತು
    – 16 ಐಎಎಸ್, 2 ಐಪಿಎಸ್ ಅಧಿಕಾರಿಗಳು

    ಬೆಂಗಳೂರು: ಬೆಳೆಯುತ್ತಿರುವ ಬೆಂಗಳೂರು ನಗರ ಒಂದೇ ಸಂಸ್ಥೆಯಿಂದ ನಿರ್ವಹಣೆ ಕಷ್ಟ ಎಂದು ಸರ್ಕಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಮಾಡಿ ಐದು ಪಾಲಿಕೆಗಳಾಗಿ ವಿಂಗಡಿಸಿ ಆಡಳಿತ ನಡೆಸುವುದಕ್ಕೆ ಆದೇಶ ಮಾಡಿದೆ. ಸೆ.2 ರಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆಡಳಿತ ಜಾರಿಯಾಗಲಿದೆ. ಈ ಹಿಂದೆ ಬಿಬಿಎಂಪಿ ಜಾರಿ ಇತ್ತು. ಆದರೆ, ಇನ್ಮುಂದೆ ಗ್ರೇಟರ್ ಬೆಂಗಳೂರು ಆಡಳಿತ ಜಾರಿಯಲ್ಲಿ ಇರಲಿದೆ.

    ಐದು ಪಾಲಿಕೆಗಳು ಯಾವ್ಯಾವು? ಮತ್ತೆ ಐದು ಪಾಲಿಕೆಗಳ ಕಚೇರಿ ಎಲ್ಲಿ ಬರುತ್ತೆ ಎಂಬ ಪ್ರಶ್ನೆಗಳು ಜನರಲ್ಲಿವೆ. ಅದಕ್ಕೆ ಉತ್ತರ ಕೂಡ ಸಿಕ್ಕಿದೆ. ಐದು ಪಾಲಿಕೆಗಳಿಗೆ 10 ಕಚೇರಿಯನ್ನ ಗುರುತು ಮಾಡಲಾಗಿದೆ.

    5 ಪಾಲಿಕೆಗಳಿಗೆ 10 ತಾತ್ಕಾಲಿಕ ಕಚೇರಿಗಳ ಗುರುತು
    * ಗ್ರೇಟರ್ ಬೆಂಗಳೂರು ಪ್ರಾಧಿಕಾರ
    ಕಾರ್ಪೋರೇಷನ್ ಸರ್ಕಲ್ ಕೇಂದ್ರ ಕಚೇರಿ ಮುಖ್ಯ ಕಟ್ಟಡ ಅನೆಕ್ಸ್ 1 – ಅನೆಕ್ಸ್ 2

    * ಬೆಂಗಳೂರು ನಗರ ಕೇಂದ್ರ ನಗರ ಪಾಲಿಕೆ
    ಹಾಲಿ ಪೂರ್ವ ವಲಯ ಕಚೇರಿ
    ಕೇಂದ್ರ ಕಚೇರಿ ಅನೆಕ್ಸ್ ಕಟ್ಟಡ

    * ಬೆಂಗಳೂರು ಪೂರ್ವ ನಗರ ಪಾಲಿಕೆ
    ಮಹಾದೇವಪುರ ವಲಯ ಕಚೇರಿ
    ಕೆ.ಆರ್ ಪುರಂ ಕಚೇರಿ

    * ಪಶ್ಚಿಮ ವಲಯ
    ಆರ್.ಆರ್ ನಗರ ವಲಯ ಕಚೇರಿ
    ಹಾಲಿ ಪಾಲಿಕೆ ಸೌಧ ಚಂದ್ರ ಲೇಔಟ್

    * ಬೆಂಗಳೂರು ಉತ್ತರ ನಗರ ಪಾಲಿಕೆ
    ಹಾಲಿ ಯಲಹಂಕ ವಲಯ ಕಚೇರಿ
    ಹಾಲಿ ದಾಸರಹಳ್ಳಿ ವಲಯ ಕಚೇರಿ

    * ಬೆಂಗಳೂರು ದಕ್ಷಿಣ ನಗರ ಪಾಲಿಕೆ
    ಹಾಲಿ ದಕ್ಷಿಣ ವಲಯ ಕಚೇರಿ
    ಹಾಲಿ ಬೊಮ್ಮನಹಳ್ಳಿ ವಲಯ ಕಚೇರಿ

    ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 15 ಐಎಎಸ್, 20 ಕ್ಕೂ ಹೆಚ್ಚು ಕೆಎಎಸ್ ಮತ್ತು ಇಬ್ಬರು ಐಪಿಎಸ್ ಅಧಿಕಾರಗಳ ಹುದ್ದೆಯನ್ನ ರಚನೆ ಮಾಡಲಾಗಿದೆ. ಐದು ಪಾಲಿಕೆಗಳಿಗೂ 28 ವಿಧಾನಸಭಾ ಕ್ಷೇತ್ರಗಳನ್ನ ಹಂಚಿಕೆ ಮಾಡಲಾಗಿದೆ.

    ಯಾವ್ಯಾವ ಪಾಲಿಕೆಗೆ ಎಷ್ಟೆಷ್ಟು ವಿಧಾನಸಭಾ ಕ್ಷೇತ್ರ ಹಂಚಿಕೆ?
    * ಬೆಂಗಳೂರು ಪಶ್ಚಿಮ ನಗರ ಪಾಲಿಕೆ – 10 ವಿಧಾನಸಭಾ ಕ್ಷೇತ್ರ
    * ಬೆಂಗಳೂರು ಕೇಂದ್ರ ನಗರ ಪಾಲಿಕೆ – 7 ವಿಧಾನಸಭಾ ಕ್ಷೇತ್ರ
    * ಬೆಂಗಳೂರು ಪೂರ್ವ ನಗರ ಪಾಲಿಕೆ – 2 ವಿಧಾನಸಭಾ ಕ್ಷೇತ್ರ
    * ಬೆಂಗಳೂರು ಉತ್ತರ ನಗರ ಪಾಲಿಕೆ – 7 ವಿಧಾನಸಭಾ ಕ್ಷೇತ್ರ
    * ಬೆಂಗಳೂರು ದಕ್ಷಿಣ ನಗರ ಪಾಲಿಕೆ – 8 ವಿಧಾನಸಭಾ ಕ್ಷೇತ್ರ

  • ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್‌ಗಳಿಗೆ ಶಾಕ್ – ಸ್ಮೋಕಿಂಗ್ ಝೋನ್ ಇರದಿದ್ರೆ ಲೈಸನ್ಸ್ ರದ್ದು

    ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್‌ಗಳಿಗೆ ಶಾಕ್ – ಸ್ಮೋಕಿಂಗ್ ಝೋನ್ ಇರದಿದ್ರೆ ಲೈಸನ್ಸ್ ರದ್ದು

    – ಮೊದಲು ನೋಟಿಸ್, ಆಮೇಲೆ ದಂಡಂ ದಶಗುಣಂ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಪಬ್, ಕ್ಲಬ್, ಹೋಟೆಲ್, ಬಾರ್‌ಗಳಿಗೆ ಬಿಬಿಎಂಪಿ (BBMP) ಬಿಗ್‌ಶಾಕ್ ನೀಡಿದೆ. ಬಿಬಿಎಂಪಿ ನೋಟಿಸ್ ಜಾರಿ ಮಾಡಿದರೂ ಪ್ರತಿಕ್ರಿಯಿಸದ ಹೋಟೆಲ್‌ಗಳು, ಪಬ್, ಕ್ಲಬ್, ರೆಸ್ಟೋರೆಂಟ್ ಪರವಾನಗಿ (Licence) ರದ್ದು ಮಾಡಲು ಬಿಬಿಎಂಪಿ ಮುಂದಾಗಿದೆ.

    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಳೆದ 15 ದಿನಗಳ ಹಿಂದೆ ಸುಮಾರು 300ಕ್ಕೂ ಹೆಚ್ಚು ಪಬ್, ಬಾರ್, ರೆಸ್ಟೋರೆಂಟ್, ಹೋಟೆಲ್‌ಗಳಿಗೆ ನೋಟಿಸ್ ಜಾರಿ ಮಾಡಿತ್ತು. ಸ್ಮೋಕಿಂಗ್ ಝೋನ್  (Smoking Zone) ನಿರ್ಮಾಣ ಮಾಡಿಲ್ಲ ಅಂತಾ ನೋಟಿಸ್ ನೀಡಿ ಎಚ್ಚರಿಸಿತ್ತು. ನೋಟಿಸ್ ಜಾರಿ ಮಾಡಿದರೂ ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್‌ಗಳು ಸರಿಪಡಿಸಿಕೊಂಡಿಲ್ಲ ಎಂಬ ಮಾಹಿತಿ ಬಿಬಿಎಂಪಿ ಪರಿಶೀಲನೆ ವೇಳೆ ಗೊತ್ತಾಗಿದೆ. ಹೀಗಾಗಿ ಅಂತಹ ಪಬ್, ಬಾರ್, ರೆಸ್ಟೋರೆಂಟ್, ಹೋಟೆಲ್‌ಗಳಿಗೆ ಬಿಸಿ ಮುಟ್ಟಿಸಲು ಪಾಲಿಕೆ ಮುಂದಾಗಿದೆ. ಇದನ್ನೂ ಓದಿ: ಪ್ರವಾಸಿಗರಿಗೆ ಹುಡುಗಿಯರು ಮತ್ತು ಮಹಿಳೆಯರು ಲಭ್ಯವಿದ್ದಾರೆ – ಸಾಮಾಜಿಕ ಜಾಲತಾಣದಲ್ಲಿ ಕೊಡಗಿನ ಬಗ್ಗೆ ಅಪಪ್ರಚಾರ

    ಇನ್ನೂ ಬಿಬಿಎಂಪಿ ಮುಂದಿನ ವಾರ ನೋಟಿಸ್ ನೀಡಿದ್ದ ಸ್ಥಳಗಳನ್ನು ಪರಿಶೀಲನೆ ನಡೆಸಲಿದೆ. ಪರಿಶೀಲನೆ ನಡೆಸಿ ನೋಟಿಸ್ ಕೊಟ್ಟ ಮೇಲೂ ಸ್ಮೋಕಿಂಗ್ ಝೋನ್ ಅಳವಡಿಸಿಕೊಂಡಿಲ್ಲ ಎಂಬುದು ಕಂಡು ಬಂದರೆ ಪರವಾನಗಿ ರದ್ದು ಮಾಡಲಿದ್ದಾರೆ. ಇದನ್ನೂ ಓದಿ:ಬುರುಡೆ ಗ್ಯಾಂಗ್‌ ಹೇಳಿದಂತೆ ನಾನು ಮಾಡಿದ್ದೇನೆ – ಎಸ್‌ಐಟಿ ಪ್ರಶ್ನೆಗಳಿಗೆ ಸುಜಾತ ಥಂಡಾ

    ಬೆಂಗಳೂರಿನಲ್ಲಿರುವ ಎಲ್ಲಾ ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್‌ಗಳು ನಿಯಮಾನುಸಾರ ಕ್ರಮವಹಿಸಬೇಕು. ಸ್ಮೋಕಿಂಗ್ ಝೋನ್ ಕಡ್ಡಾಯ ಇರಲೇಬೇಕು. ಇಲ್ಲದೇ ಹೋದರೆ ಕೇಸ್ ಹಾಕಿ ಪರವಾನಗಿ ರದ್ದು ಮಾಡಲು ಬಿಬಿಎಂಪಿ ಮುಂದಾಗಿದೆ. ಇದನ್ನೂ ಓದಿ: ಚಾಮುಂಡೇಶ್ವರಿ ದೇವಸ್ಥಾನ ಹಿಂದೂ ದೇಗುಲವಲ್ಲದೇ ಇದ್ದಿದ್ರೆ ಮುಜರಾಯಿ ವ್ಯಾಪ್ತಿಗೆ ತರುತ್ತಿರಲಿಲ್ಲ – ಪ್ರಮೋದಾ ದೇವಿ ಒಡೆಯರ್‌

  • ರಾತ್ರೋರಾತ್ರಿ ಡಿಕೆಶಿ ಸಿಟಿ ರೌಂಡ್ಸ್ – ರಸ್ತೆ ಗುಂಡಿಗಳ ಕಾಮಗಾರಿ ಪರಿಶೀಲನೆ

    ರಾತ್ರೋರಾತ್ರಿ ಡಿಕೆಶಿ ಸಿಟಿ ರೌಂಡ್ಸ್ – ರಸ್ತೆ ಗುಂಡಿಗಳ ಕಾಮಗಾರಿ ಪರಿಶೀಲನೆ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಬಿಬಿಎಂಪಿ (BBMP) ಪಣ ತೊಟ್ಟಿದ್ದು, ಕಳೆದ ಹಲವು ದಿನಗಳಿಂದ ಗುಂಡಿ ಮುಚ್ಚುವ ಕಾರ್ಯ ಮಾಡುತ್ತಿದೆ. ಈ ನಡುವೆ ಸೋಮವಾರ ತಡರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಕಾಮಗಾರಿ ಪರಿಶೀಲನೆ ಮಾಡಿದ್ದಾರೆ.

    ಯಲಹಂಕದ ಬಾಗಲೂರು ಮುಖ್ಯರಸ್ತೆ, ಎಂಎಸ್ ಪಾಳ್ಯದ ಸಂದೀಪ್ ಉಣ್ಣೀಕೃಷ್ಣನ್ ರೋಡ್ ಮತ್ತು ಈಜಿಪುರದ ಪ್ಲೈಓವರ್ ಕಾಮಗಾರಿಯ ವೀಕ್ಷಣೆ ಮಾಡಿದ ಡಿಕೆಶಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಇದನ್ನೂ ಓದಿ: ಬಿಕ್ಲು ಶಿವ ಹತ್ಯೆ ಕೇಸ್ – ಎ1 ಆರೋಪಿ ಜಗ್ಗ ಅರೆಸ್ಟ್

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಸ್ತೆ ಗುಂಡಿಗಳನ್ನು ಮುಚ್ಚುವ ವಿಚಾರವಾಗಿ ನಗರದ ಶಾಸಕರೆಲ್ಲರೂ ಗಮನಕ್ಕೆ ತಂದಿದ್ದರು. ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ ರಸ್ತೆ ಗುಂಡಿ ಗಮನ ತಂತ್ರಾಂಶ ಸಿದ್ದಪಡಿಸಿದ್ದೇವೆ. ಪೊಲೀಸರಿಗೂ ಅವರ ಠಾಣೆಗಳ ವ್ಯಾಪ್ತಿಯಲ್ಲಿ ಗುಂಡಿಗಳಿರುವ ಪಟ್ಟಿ ಕೊಡಲು ತಿಳಿಸಲಾಗಿತ್ತು. ಆಪ್‌ನಲ್ಲಿ ನಾಗರೀಕರು ದೂರುಗಳನ್ನು ಸಲ್ಲಿಸುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಬೆಳ್ಳಂಬೆಳಗ್ಗೆ 5 ಗಂಟೆಗೆ ಆಗಮಿಸಿ ಎಸ್‌ಐಟಿ ಅಧಿಕಾರಿಗಳಿಗೆ ಶಾಕ್‌ ಕೊಟ್ಟ ಸುಜಾತ ಭಟ್‌!

    ಇತ್ತೀಚೆಗೆ ಬಾಗಲೂರು ರಸ್ತೆಯಲ್ಲಿ ಹೋದಾಗ ರಸ್ತೆ ಸ್ಥಿತಿ ನೋಡಿ ಬೇಸರವಾಗಿತ್ತು. ನಗರದ ಎಲ್ಲಾ ಕಡೆ ರಸ್ತೆ ಗುಂಡಿ ಮುಚ್ಚುವ ಕೆಲಸ ಮಾಡಲಾಗುತ್ತಿದೆ. 5000ಕ್ಕೂ ಹೆಚ್ಚು ಗುಂಡಿಗಳನ್ನು ಗುರುತಿಸಲಾಗಿದ್ದು, ಅದರಲ್ಲಿ 4400 ರಸ್ತೆ ಗುಂಡಿಗಳನ್ನು ಆದ್ಯತೆ ಮೇಲೆ ಮುಗಿಸಲು ಸೂಚನೆ ನೀಡಲಾಗಿದೆ. ಅದರಂತೆ ಕಳೆದ 4 ದಿನಗಳಿಂದ 2200 ಗುಂಡಿಗಳನ್ನು ಮುಚ್ಚಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಈ ಗಣೇಶೋತ್ಸವಕ್ಕೆ ವಿಘ್ನ ವಿನಾಶಕನ ಮೂರ್ತಿಯನ್ನು ಮನೆಯಲ್ಲೇ ತಯಾರಿಸಿ…

    ನಗರದಲ್ಲಿ ಸ್ವಚ್ಛತೆ ಕಾಪಾಡುವ ಕೆಲಸ ಮಾಡಲಾಗುತ್ತಿದ್ದು, ಸ್ಕೈವಾಕ್‌ಗಳನ್ನು ಸ್ವಚ್ಛ ಮಾಡಲಾಗಿದೆ. ರಸ್ತೆ ಗುಂಡಿಗಳನ್ನು ಮುಚ್ಚಿ ಹೋಗುವುದು ಮಾತ್ರವಲ್ಲ, ಗುಣಮಟ್ಟದ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ಹಾಟ್ ಮಿಕ್ಸ್, ಕೋಲ್ಡ್ ಮಿಕ್ಸ್ ಹಾಗೂ ಇಕೋಫಿಕ್ಸ್ ಸೇರಿದಂತೆ ಮೂರೂ ಮಾದರಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಲಾಗುತ್ತಿದೆ ಎಂದರು. ಇದನ್ನೂ ಓದಿ: ಮಟ್ಟಣ್ಣನವರ್‌ನಿಂದ ಹೋರಾಟ ಹಳ್ಳ ಹಿಡಿಯಿತು – ಸೌಜನ್ಯ ಪರ ಹೋರಾಟಗಾರರಲ್ಲೇ ಒಡಕು!

    ರಸ್ತೆ ನಿರ್ಮಾಣ ಮಾಡುವಾಗ ಉತ್ತಮ ಗುಣಮಟ್ಟ ಕಾಯ್ದುಕೊಳ್ಳಬೇಕಲ್ಲವೇ ಎಂಬ ಪ್ರಶ್ನೆಗೆ, ಭಾರೀ ವಾಹನಗಳ ಓಡಾಟ, ಮಳೆಗಾಲ ಸೇರಿದಂತೆ ಇನ್ನಿತರೆ ಸಮಸ್ಯೆಗಳು ಇರುತ್ತವೆ. ಅದಕ್ಕಾಗಿ ಹಂತ-ಹಂತವಾಗಿ ಕಾಂಕ್ರಿಟ್ ರಸ್ತೆ ಮಾಡಲಾಗುತ್ತಿದೆ. ಇದು 30 ವರ್ಷ ಬಾಳಿಕೆ ಬರಲಿದೆ ಎಂದು ಹೇಳಿದರು. ಇದನ್ನೂ ಓದಿ: ನಾಡಿನಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ – ಗಗನಕ್ಕೇರಿದ ಹೂವುಗಳ ದರ

    ಗುಂಡಿಗಳಿಂದಲೇ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿ, ‘ಹೆಣ್ಣು ಮಕ್ಕಳನ್ನು, ಚಿಕ್ಕ ಮಕ್ಕಳನ್ನು ಕರೆದೊಯ್ಯುವಾಗ ತೊಂದರೆಗಳಾಗುವುದನ್ನು ನಾನು ಗಮನಿಸಿದ್ದೇನೆ. ಅದಕ್ಕಾಗಿ ರಸ್ತೆ ಗುಂಡಿಗಳನ್ನು ಮುಚ್ಚಲಾಗುತ್ತಿದೆ. ರಸ್ತೆ ಗುಂಡಿಗಳ ಮೇಲ್ಚಿಚಾರಣೆಗಾಗಿಯೇ ರಸ್ತೆ ಗುಂಡಿ ಗಮನ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ’ ಎಂದರು. ಇದನ್ನೂ ಓದಿ: ಮೋದಿ ಸರ್ಕಾರದ ಕ್ರಾಂತಿಕಾರಿ ನಡೆ – ರಾಜಕಾರಣ ಶುದ್ಧೀಕರಣಕ್ಕೆ ಹೊಸ ಮಸೂದೆ!

  • ಬೆಂಗಳೂರಿಗರೇ ಗಮನಿಸಿ, ಮನೆ ಮನೆ ಕಸ ಸಂಗ್ರಹದ ಆಟೋಗಳ ಸಮಯ ಬದಲಾವಣೆ

    ಬೆಂಗಳೂರಿಗರೇ ಗಮನಿಸಿ, ಮನೆ ಮನೆ ಕಸ ಸಂಗ್ರಹದ ಆಟೋಗಳ ಸಮಯ ಬದಲಾವಣೆ

    ಬೆಂಗಳೂರು: ಬಿಬಿಎಂಪಿ (BBMP)  ವ್ಯಾಪ್ತಿಯಲ್ಲಿ ಘನತ್ಯಾಜ್ಯ ಸಂಗ್ರಹಣೆಯ (Garbage Collection) ಆಟೋ ಟಿಪ್ಪರ್ ವಾಹನಗಳ ಮಸ್ಟರಿಂಗ್ (ಹಾಜರಾತಿ ದಾಖಲೆ) ಸಮಯವನ್ನು ಪರಿಷ್ಕರಿಸಿದ್ದು, ಇಂದಿನಿಂದ ವಾಹನಗಳ ಸ್ಕ್ಯಾನಿಂಗ್ ಸಮಯವನ್ನು ಬೆಳಿಗ್ಗೆ 5:30 ರಿಂದ 6:30 ರವರೆಗೆ ನಿಗದಿಪಡಿಸಲಾಗಿದೆ.

    ಬೆಂಗಳೂರು ನಗರದಲ್ಲಿ ಸ್ವಚ್ಛತಾ ಕಾರ್ಯಗಳ ಗುಣಮಟ್ಟವನ್ನು ಹೆಚ್ಚಿಸಲು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ನಗರದ ವಿವಿಧ ವಾರ್ಡ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಆಟೋ ಟಿಪ್ಪರ್ ವಾಹನಗಳ ಮಸ್ಟರಿಂಗ್ ಸಮಯವನ್ನು ಪರಿಷ್ಕರಿಸಲಾಗಿದೆ. ಇದನ್ನೂ ಓದಿ: ಆನ್‌ಲೈನ್ ಗೇಮಿಂಗ್ ನಿಷೇಧ – BCCI ಪ್ರಾಯೋಜಕತ್ವದಿಂದ ಹಿಂದೆ ಸರಿದ Dream11

    ಈ ಹಿಂದೆ ಬೆಳಿಗ್ಗೆ 6 ರಿಂದ 7:30 ರವರೆಗೆ ಘನತಾಜ್ಯ ಸಂಗ್ರಹಣೆ ಮಾಡಲಾಗುತ್ತಿತ್ತು. ಆದದರೆ ಈಗ ಒಂದು ಗಂಟೆ ಮುಂಚಿತಗೊಳಿಸುವ ಮೂಲಕ ತ್ಯಾಜ್ಯ ಸಂಗ್ರಹಣೆಯನ್ನು ಜನರ ದೈನಂದಿನ ಕಾರ್ಯವೈಖರಿಯ ಜೊತೆಗೆ ಹೊಂದುವಂತೆ ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಬೆಂಗಳೂರು ಟೆಕ್ಕಿಗೆ 2.65 ಲಕ್ಷ ವಂಚನೆ – ಟ್ರಾಫಿಕ್‌ ಫೈನ್‌ ಕಟ್ಟೋ ಮುನ್ನ ಎಚ್ಚರವಾಗಿರಿ

    ಈ ಬದಲಾವಣೆಯ ಮೂಲಕ ನಿವಾಸಿಗಳು ಕೆಲಸಕ್ಕೆ ಹೊರಡುವ ಮೊದಲು ತ್ಯಾಜ್ಯವನ್ನು ನೀಡಲು ಅನುಕೂಲವಾಗುವುದರ ಜೊತೆಗೆ, ಸಾರ್ವಜನಿಕರಿಂದ ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವ ಪ್ರಕರಣ ಮತ್ತು ಕಪ್ಪು ಚುಕ್ಕಿ (Black Spot) ಗಳು ರೂಪುಗೊಳ್ಳುವುದನ್ನು ತಡೆಗಟ್ಟಲಾಗುವುದು.

    ಈ ಕ್ರಮವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೆ ತರಲು ಸಾರ್ವಜನಿಕರ ಸಹಕಾರವನ್ನು ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಕರೀಗೌಡ ರವರು ಕೋರಿದ್ದಾರೆ.

  • ಗಣೇಶ ಚತುರ್ಥಿಗೆ ಎರಡೇ ದಿನ ಬಾಕಿ – ಬಿಬಿಎಂಪಿಯಿಂದ 75 ಏಕಗವಾಕ್ಷಿ ಕೇಂದ್ರಗಳ ಸ್ಥಾಪನೆ

    ಗಣೇಶ ಚತುರ್ಥಿಗೆ ಎರಡೇ ದಿನ ಬಾಕಿ – ಬಿಬಿಎಂಪಿಯಿಂದ 75 ಏಕಗವಾಕ್ಷಿ ಕೇಂದ್ರಗಳ ಸ್ಥಾಪನೆ

    -489 ತಾತ್ಕಾಲಿಕ ಸಂಚಾರಿ ಕಲ್ಯಾಣಿ ವಾಹನಗಳ ವ್ಯವಸ್ಥೆ

    ಬೆಂಗಳೂರು: ಗಣೇಶ ಚತುರ್ಥಿ (Ganesh Chaturthi) ಹಿನ್ನೆಲೆ ಬಿಬಿಎಂಪಿ (BBMP) ಸಕಲ ಸಿದ್ಧತೆ ಮಾಡಿಕೊಂಡಿದ್ದು, ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಅನುಮತಿ ಪಡೆಯಲು ಏಕಗವಾಕ್ಷಿ ಕೇಂದ್ರಗಳನ್ನು ಸ್ಥಾಪಿಸಿದೆ.

    ಗಣೇಶ ಚತುರ್ಥಿಗೆ ಇನ್ನೇನು ಎರಡೇ ದಿನ ಬಾಕಿಯಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ 75 ಏಕಗವಾಕ್ಷಿ ಕೇಂದ್ರಗಳನ್ನು ಸ್ಥಾಪಿಸಿದೆ. ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 41 ಕೆರೆ ಅಂಗಳದ ಶಾಶ್ವತ/ತಾತ್ಕಾಲಿಕ ಕಲ್ಯಾಣಿಗಳ ಸ್ಥಾಪನೆ ಮಾಡಲಾಗಿದ್ದು, ಜೊತೆಗೆ ಬೆಂಗಳೂರಿನಾದ್ಯಂತ 489 ತಾತ್ಕಾಲಿಕ ಸಂಚಾರಿ ಕಲ್ಯಾಣ ವಾಹನಗಳ ವ್ಯವಸ್ಥೆ ಮಾಡಲಾಗಿದೆ.ಇದನ್ನೂ ಓದಿ: ತವರೂರು ಲಕ್ನೋದಲ್ಲಿ ಶುಭಾಂಶು ಶುಕ್ಲಾಗೆ ಭರ್ಜರಿ ಸ್ವಾಗತ

    ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಈಗಾಗಲೇ ನೋಡಲ್ ಅಧಿಕಾರಿಗಳ ನೇಮಕ ಮಾಡಿಕೊಳ್ಳಲಾಗಿದ್ದು, ಮತ್ತಷ್ಟು ವಿವರಗಳಿಗಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಒದಗಿಸಲಿದೆ. ಅದಲ್ಲದೇ ಬಿಬಿಎಂಪಿ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕವೂ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದೆ.

    ಇನ್ನೂ ರಾಜರಾಜೇಶ್ವರಿ ನಗರ (Raja Rajeshwari Nagar) ವಲಯ ವ್ಯಾಪ್ತಿಯಲ್ಲಿ ಬರುವ ಹೇರೋಹಳ್ಳಿ ಕೆರೆಯ ಕಲ್ಯಾಣಿಯಲ್ಲಿ ಪ್ರತಿ ವರ್ಷವೂ ಗಣೇಶ ಮೂರ್ತಿಗಳ ವಿಸರ್ಜನೆಗೆ ವ್ಯವಸ್ಥೆ ಕಲ್ಪಿಸಲಾಗುತ್ತಿತ್ತು. ಆದರೆ ಈ ಬಾರಿ ತಾಂತ್ರಿಕ ಕಾರಣಗಳಿಂದ ಹೇರೋಹಳ್ಳಿ ಕೆರೆ ಕಲ್ಯಾಣಿಯಲ್ಲಿ ಗಣೇಶ ವಿಸರ್ಜನೆಯನ್ನು ಸ್ಥಗಿತಗೊಳಿಸಲಾಗಿದೆ.

    ಪ್ರತಿ ವರ್ಷದಂತೆ ಈ ವರ್ಷವೂ ಯಡಿಯೂರು ಕೆರೆಯಲ್ಲಿ (Yadiyuru Lake) ಗಣೇಶ ವಿಸರ್ಜನೆಗಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಆ.27ರಿಂದ ಸೆ.17ರವರೆಗೆ ಸಾರ್ವಜನಿಕರು ಪರಿಸರ ಸ್ನೇಹಿ ಅಥವಾ ಮಣ್ಣಿನಿಂದ ಮಾಡಿರುವ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲು ಅವಕಾಶ ನೀಡಿದೆ.ಇದನ್ನೂ ಓದಿ: ಒಡಿಶಾ | ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ ಕೊಚ್ಚಿಹೋದ ಯೂಟ್ಯೂಬರ್

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಡೆಡ್ಲಿ ರಸ್ತೆ ಗುಂಡಿ ಮುಚ್ಚಿ – ‘ಪಬ್ಲಿಕ್ ಟಿವಿ’ ಅಭಿಯಾನ ಬೆನ್ನಲ್ಲೇ ಬಿಬಿಎಂಪಿ ಅಲರ್ಟ್

    ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಡೆಡ್ಲಿ ರಸ್ತೆ ಗುಂಡಿ ಮುಚ್ಚಿ – ‘ಪಬ್ಲಿಕ್ ಟಿವಿ’ ಅಭಿಯಾನ ಬೆನ್ನಲ್ಲೇ ಬಿಬಿಎಂಪಿ ಅಲರ್ಟ್

    ಬೆಂಗಳೂರು: ಡೆಡ್ಲಿ ರಸ್ತೆ ಗುಂಡಿ ಮುಚ್ಚಿ ‘ಪಬ್ಲಿಕ್‌ ಟಿವಿ’ ಅಭಿಯಾನ ಬೆನ್ನಲ್ಲೇ ಬಿಬಿಎಂಪಿ ಅಲರ್ಟ್‌ ಆಗಿದೆ. ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 8 ವಲಯಗಳಲ್ಲಿಯೂ ರಸ್ತೆ ಗುಂಡಿಗಳು ಹಾಗೂ ಕೆಟ್ಟ ಸ್ಥಿತಿಲ್ಲಿರುವ ಭಾಗಗಳಿಗೆ ಡಾಂಬರು ಹಾಕುವ ಕೆಲಸವನ್ನು ಮಾಡಲು ಪಾಲಿಕೆ ಸೂಚನೆ ನೀಡಿದೆ.

    ನಗರದಲ್ಲಿ ಪ್ರಮುಖ ರಸ್ತೆಗಳಾದ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಆದ್ಯತೆ ಮೇರೆಗೆ ಮುಚ್ಚಲಾಗುತ್ತಿದೆ. ಅದಲ್ಲದೇ ವಾರ್ಡ್ ರಸ್ತೆಗಳಲ್ಲಿಯೂ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಪರಿಣಾಮಕಾರಿಯಾಗಿ ಮಾಡಲಾಗುತ್ತಿದೆ.

    ಸಂಚಾರಿ ವಿಭಾಗದಿಂದ ಗುರುತಿಸಿರುವಂತಹ, ರಸ್ತೆ ಗುಂಡಿ ಗಮನ ತಂತ್ರಾಂಶದಲ್ಲಿ ಬಂದಿರುವ ದೂರುಗಳು ಹಾಗೂ ಸ್ಥಳೀಯ ಅಧಿಕಾರಿಗಳು ಹೊಸದಾಗಿ ಗುರುತಿಸಿರುವ ಗುಂಡಿಗಳನ್ನು ಗುರುತಿಸಿ ಮುಚ್ಚುವ ಕೆಲಸ ಮಾಡಲಾಗುತ್ತಿದೆ. ಆಯಾ ವಲಯಗಳ ಹಿರಿಯ ಅಧಿಕಾರಿಗಳು ರಸ್ತೆ ಗುಂಡಿಗಳನ್ನು ಮುಚ್ಚುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    ವಾರ್ಡ್ ರಸ್ತೆ ಹಾಗೂ ಸಂಚಾರಿ ದಟ್ಟಣೆ ಕಡಿಮೆ ಇರುವ ಸ್ಥಳಗಳಲ್ಲಿ ಬೆಳಗಿನ ವೇಳೆಯಲ್ಲಿ ಮುಚ್ಚಲಾಗುತ್ತಿದ್ದು, ಸಂಚಾರ ದಟ್ಟಣೆ ಹೆಚ್ಚು ಇರುವ ಪ್ರಮುಖ ರಸ್ತೆಗಳಲ್ಲಿ ರಾತ್ರಿ ವೇಳೆಯಲ್ಲಿ ಮುಚ್ಚಲು ಯೋಜನೆ ರೂಪಿಸಲಾಗಿದೆ. ದೊಡ್ಡದಾದ ರಸ್ತೆ ಗುಂಡಿಗಳು ಹಾಗೂ ಕೆಟ್ಟ ಸ್ಥಿತಿಯಲ್ಲಿರುವ ಭಾಗಗಳಲ್ಲಿ ನಿಯಮಾನುಸಾರ ಡಾಂಬರೀಕಣರ ರೋಲಿಂಗ್ ಮಾಡಲಾಗುತ್ತಿದೆ.

    ಮಹದೇವಪುರ ವಲಯದ ಮಾರತಹಳ್ಳಿ ರಸ್ತೆ, ಬೆಳ್ಳಂದೂರು ರಸ್ತೆ, ಕೆ.ಆರ್ ಪುರ. ದಕ್ಷಿಣ ವಲಯದ ಜಯನಗರ, ಬಿಟಿಎಂ ಲೇಔಟ್, ಈಜೀಪುರ ರಸ್ತೆ. ಬೊಮ್ಮನಹಳ್ಳಿ ವಲಯದ ಹೆಚ್.ಎಸ್.ಆರ್ ಬಡಾವಣೆ, ಮಣಿಪಾಲ್ ಕೌಂಟಿ ರಸ್ತೆ ಬೇಗೂರು ರಸ್ತೆ, ಬನ್ನೇರಘಟ್ಟ ರಸ್ತೆ, ಪೂರ್ವ ವಲಯದ ಶಿವಾಜಿನಗರ, ಸಿ.ವಿ ರಾಮನ್ ನಗರ, ಸರ್ವಜ್ಞನಗರ, ಆರ್.ಆರ್ ನಗರ ವಲಯದ ಕೋಡಿ ಪಾಳ್ಯ ರಸ್ತೆ, ಉತ್ತರಹಳ್ಳಿ ರಸ್ತೆ, ಯಲಹಂಕ ವಲಯದ ಕೊಡಿಗೆಹಳ್ಳಿ ಮುಖ್ಯ ರಸ್ತೆ, ಎನ್.ಟಿ.ಐ ಲೇಔಟ್, ಯಲಹಂಕ ಪೊಲೀಸ್ ಠಾಣೆ ರಸ್ತೆ, ದಾಸರಹಳ್ಳಿ ರಸ್ತೆ, ಅಮೃತಹಳ್ಳಿ, ಸಂದೀಪ್ ಉನ್ನಿಕೃಷ್ಣನ್ ರಸ್ತೆ, ಶಾಂತಿವನ ಸಹಕಾರ ನಗರ, ದಾಸರಹಳ್ಳಿ ವಲಯದ ಚೊಕ್ಕಸಂದ್ರ, ಬಗಲಗುಂಟೆ, ಹೆಗ್ಗನಹಳ್ಳಿ, ಪಶ್ಚಿಮ ವಲಯದ ಗೋವಿಂದರಾಜನಗರ, ಮಲ್ಲೇಶ್ವರಂ, ಮೈಸುರು ರಸ್ತೆ, ಸ್ಯಾಂಕಿ ರಸ್ತೆ ಸೇರಿದಂತೆ ಇನ್ನಿತರೆ ಪ್ರಮುಖ ರಸ್ತೆಗಳಲ್ಲಿ ಮುಚ್ಚಲಾಗಿದ್ದು, ಇಂದು ರಾತ್ರಿಯೂ ಪ್ರಮುಖ ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚಲಾಗುವುದು.

    ದಾಸರಹಳ್ಳಿ ವಲಯದ ಹೆಗ್ಗನಹಳ್ಳಿ ವ್ಯಾಪ್ತಿಯಲ್ಲಿ ಕಾಂಕ್ರೀಟ್ ರಸ್ತೆಯಲ್ಲಿ ಜಲಮಂಡಳಿ ವತಿಯಿಂದ ಕತ್ತರಿಸಿದ್ದ ಭಾಗಕ್ಕೆ ಕಾಂಕ್ರಿಟ್ ಹಾಕಿ ಕತ್ತರಿಸಿದ ಭಾಗವನ್ನು ಮುಚ್ಚಲಾಗಿದೆ. ಅಲ್ಲದೇ ಒಳಚರಂಡಿ ಕಾಮಗಾರಿಗಾಗಿ ಕತ್ತರಿಸದ ಭಾಗಗಳಿಗೆ ಡಾಂಬರು ಹಾಕಿ ಮುಚ್ಚಲಾಗಿದೆ.

    ಅಧಿಕಾರಿಗಳಿಂದ ಪರಿಶೀಲನೆ:
    ನಗರದಲ್ಲಿ ರಸ್ತೆ ಗುಂಡಿಗಳನ್ನು ಪ್ರಮಾಣಿತ ಕಾರ್ಯಾಚರಣೆ ವಿಧಾನ (SOP)ದ ಪ್ರಕಾರ ರಸ್ತೆ ಗುಂಡಿಗಳನ್ನು ಮುಚ್ಚಿದರೆ ಹೆಚ್ಚು ಕಾಲ ಬಾಳಿಕೆ ಬರಲಿದೆ. ಈ ಸಂಬಂಧ ಗುಣನಿಯಂತ್ರಣ ಹಾಗೂ ಟಿವಿಸಿಸಿ ವಿಭಾಗದ ಅಧಿಕಾರಿಗಳು ರ‍್ಯಾಂಡಮ್ ಆಗಿ ರಸ್ತೆ ಗುಂಡಿಗಳನ್ನು ಮುಚ್ಚುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ಗುಣಮಟ್ಟವನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಎಸ್.ಒ.ಪಿ ಪ್ರಕಾರ ಮುಚ್ಚದ ಕಡೆ ಅದನ್ನು ಸರಿಪಡಿಸಿಕೊಳ್ಳಲು ಗುತ್ತಿಗೆದಾರರಿಗೆ ಸೂಚನೆ ನೀಡಿರುತ್ತಾರೆ.

  • ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಬಿಬಿಎಂಪಿಯಿಂದ ಮಾರ್ಗಸೂಚಿ ಪ್ರಕಟ

    ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಬಿಬಿಎಂಪಿಯಿಂದ ಮಾರ್ಗಸೂಚಿ ಪ್ರಕಟ

    ಬೆಂಗಳೂರು: ಗಣೇಶೋತ್ಸವಕ್ಕೆ ಇನ್ನೂ ಕೆಲವೇ ದಿನಗಳು ಬಾಕಿಯಿರುವ ಹಿನ್ನೆಲೆ ಬಿಬಿಎಂಪಿ (BBMP) ಮಾರ್ಗಸೂಚಿ ಪ್ರಕಟಿಸಿದೆ.

    ಬೆಂಗಳೂರಿನಾದ್ಯಂತ (Bengaluru) ವಲಯವಾರು 75 ಏಕಗವಾಕ್ಷಿ ಕೇಂದ್ರಗಳ ಸ್ಥಾಪನೆ ಮಾಡಲಾಗಿದ್ದು, ಇಲಾಖಾವಾರು ನೋಡಲ್ ಅಧಿಕಾರಿಗಳ ನಿಯೋಜನೆ ಮಾಡಲಾಗಿದೆ.ಇದನ್ನೂ ಓದಿ: UGCET/NEET: 2ನೇ ಸುತ್ತಿನ ಕೌನ್ಸೆಲಿಂಗ್ ಆರಂಭ – ಕೆಇಎ

    ಮಾರ್ಗಸೂಚಿಯಲ್ಲಿ ಏನಿದೆ?
    1.ಗಣೇಶ ಹಬ್ಬದ ನಿಮಿತ್ತ ಸಾರ್ವಜನಿಕವಾಗಿ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲು ಉಪವಿಭಾಗ ಮಟ್ಟದಲ್ಲಿ ನೋಡಲ್ ಅಧಿಕಾರಿಗಳಾಗಿ ನೇಮಿಸಲಾದ ಸಹಾಯಕ ಕಾರ್ಯಪಾಲಕ ಅಭಿಯಂತರರುಗಳ ಕಾರ್ಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸಬೇಕು.

    2.ನೋಡಲ್ ಅಧಿಕಾರಿಗಳು ಪೊಲೀಸ್, ಬೆಸ್ಕಾಂ, ಅಗ್ನಿಶಾಮಕ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಭಿಪ್ರಾಯ ಪಡೆದು ಏಕಗವಾಕ್ಷಿಯಲ್ಲಿ ತ್ವರಿತವಾಗಿ ಅನುಮತಿ ನೀಡಲು ಕ್ರಮಕೈಗೊಳ್ಳಬೇಕು.

    3.ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಸಾಯನಿಕ ಬಣ್ಣಗಳು, ಥರ್ಮಾಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿಯ ತಯಾರಿಕೆಯನ್ನು ಸಂಪೂರ್ಣವಾಗಿ ನಿಷೇಧಗೊಳಿಸಬೇಕು.

    4.ಸದರಿ ವಸ್ತುಗಳನ್ನು ಬಳಸಿ ತಯಾರಿಸುವ, ಮಾರಾಟ ಮಾಡುವ ಪ್ರದೇಶಗಳನ್ನು ಸಂಬಂಧಪಟ್ಟ ಬಿಬಿಎಂಪಿಯ ಉಪವಿಭಾಗದ ನೋಡಲ್ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಅಗ್ನಿಶಾಮಕ ಅಧಿಕಾರಿಗಳು, ಬೆಸ್ಕಾಂ ಅಧಿಕಾರಿಗಳು ಈ ಬಗ್ಗೆ ಖುದ್ದಾಗಿ ಪರಿಶೀಲಿಸಿ ನೋಟಿಸ್ ನೀಡಬೇಕು.

    5.ರಾಸಾಯನಿಕ ಬಣ್ಣಗಳು, ಥರ್ಮಾಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿ ತಯಾರಿಸುತ್ತಿದ್ದಲ್ಲಿ ಹಾಗೂ ಮಾರಾಟ ಮಾಡುತ್ತಿದ್ದಲ್ಲಿ ದಂಡ ವಿಧಿಸಿ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಿ, ನಿಷೇಧಿಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲು ಕ್ರಮವಹಿಸಬೇಕು.

    6.ವಲಯ ಆಯುಕ್ತರು, ವಲಯ ಮಟ್ಟದಲ್ಲಿ ಮೇಲ್ವಿಚಾರಣೆ ನಡೆಸಬೇಕು. ವಶಪಡಿಸಿಕೊಳ್ಳಲಾದ ಮೇಲ್ಕಂಡ ವಸ್ತುಗಳನ್ನು ನಿಯಮಾನುಸಾರ ವಿಲೇವಾರಿಗೊಳಿಸಲು ಕ್ರಮವಹಿಸಬೇಕು.

    7.ಗಣೇಶಮೂರ್ತಿ ತಯಾರಿಕೆದಾರರಿಗೆ ಪರಿಸರ ಸ್ನೇಹಿ/ಮಣ್ಣಿನಿಂದ ಮಾಡಿದ ಮೂರ್ತಿಗಳನ್ನು ಮಾತ್ರ ತಯಾರಿಸಲು ಜಾಹೀರಾತು ನೀಡುಬೇಕು.

    8.ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ತಮ್ಮ ಮನೆಗಳಲ್ಲಿ, ಬಕೇಟ್‌ಗಳಲ್ಲಿ ವಿಸರ್ಜನೆಗೊಳಿಸಿ, ಬರುವ ಮಣ್ಣನ್ನು ಕೈತೋಟಗಳಿಗೆ, ಹೂವಿನ ಕುಂಡಗಳಿಗೆ ಬಳಸಲು ಅರಿವು ಮೂಡಿಸಬೇಕು.

    9.ದೊಡ್ಡ ಗಾತ್ರದ ಮೂರ್ತಿಗಳ ವಿಸರ್ಜನೆಗೆ ಬಿಬಿಎಂಪಿ ವ್ಯಾಪ್ತಿಯ ವಾರ್ಡ್ಗಳಲ್ಲಿ ವಿಸರ್ಜನೆ/ನಿಮಜ್ಜನ ಸ್ಥಳಗಳನ್ನು ಗುರುತಿಸಿ, ಸದರಿ ಸ್ಥಳಗಳ ಮಾಹಿತಿಯನ್ನು ಸಾರ್ವಜನಿಕರಿಗೆ ಪ್ರಚುರಪಡಿಸಬೇಕು.

    10.ವಾರ್ಡ್ ವ್ಯಾಪ್ತಿಯಲ್ಲಿ ಸಂಚಾರಿ ವಾಹನ ಮೂಲಕ ವಿಸರ್ಜನೆಗೆ ಅಗತ್ಯ ವ್ಯವಸ್ಥೆ ಕೈಗೊಳ್ಳಬೇಕು.

    11.ಪಾಲಿಕೆಯ ವ್ಯಾಪ್ತಿಯ ಕೆರೆ/ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆಯಿಂದ ಉಂಟಾಗುವ ಮಾಲಿನ್ಯವನ್ನು ತಡೆಗಟ್ಟಲು ಸದರಿ ಸ್ಥಳಗಳ ಸಮೀಪದಲ್ಲಿ ತಾತ್ಕಾಲಿಕ ವಿಸರ್ಜನೆ ಸ್ಥಳಗಳನ್ನು ನಿರ್ಮಿಸಬೇಕು. ಸದರಿ ವಿಸರ್ಜನೆಯಿಂದ ಬರುವ ಮಣ್ಣು, ಪೂಜಾ ಹೂಗಳು ಹಾಗೂ ಪ್ಲಾಸ್ಟಿಕ್ ಇತ್ಯಾದಿ ವಸ್ತುಗಳನ್ನು ವಿಂಗಡಿಸಬೇಕು. ಹಸಿತ್ಯಾಜ್ಯವನ್ನು ಹಸಿತ್ಯಾಜ್ಯ ಸಂಸ್ಕರಣಾ ಘಟಕಗಳಿಗೆ, ಒಣತ್ಯಾಜ್ಯವನ್ನು ಒಣತ್ಯಾಜ್ಯ ಸಂಗ್ರಹಣಾ ಕೇಂದ್ರಗಳಿಗೆ ರವಾನಿಸಬೇಕು. ವಿಸರ್ಜನಾ ಸ್ಥಳಗಳಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಮೂರ್ತಿಗಳನ್ನು ವಿಸರ್ಜಿಸಲು ಪ್ರತ್ಯೇಕ ತಂಡಗಳನ್ನು ನೇಮಿಸಬೇಕು ಹಾಗೂ ಕಿಯಾಸ್, ಆಂಬ್ಯುಲೆನ್ಸ್ ವ್ಯವಸ್ಥೆ, ವೈದ್ಯರು ಮತ್ತು ಶುಶ್ರೂಷಕಿಯರನ್ನು ಪ್ರಾಥಮಿಕ ಚಿಕಿತ್ಸೆ ನೀಡಲು ನೇಮಿಸಿ, ಎಲ್ಲಾ ಪಿಹೆಚ್‌ಸಿಗಳ ಬಳಿಯಲ್ಲಿ ಹೆಚ್ಚುವರಿ ಆಂಬ್ಯುಲೆನ್ಸ್ ಹಾಗೂ ವೈದ್ಯರು ಸಿದ್ಧವಿರುವಂತೆ ಕ್ರಮವಹಿಸಬೇಕು. ಬೆಳಕಿನ ವ್ಯವಸ್ಥೆ, ಬ್ಯಾರಿಕೇಡ್ ನಿರ್ಮಾಣ, ಧ್ವನಿವರ್ಧಕ ವ್ಯವಸ್ಥೆ ಮತ್ತು ನುರಿತ ಈಜುಗಾರರನ್ನು ಒಳಗೊಂಡಂತೆ ಎನ್‌ಡಿಆರ್‌ಎಫ್ ತಂಡ ಸ್ಥಳದಲ್ಲಿ ಹಾಜರಿರುವಂತೆ ಕ್ರಮವಹಿಸಬೇಕು.

    12.ಪರಿಸರ ಸ್ನೇಹಿ ಗಣೇಶ ಆಚರಣೆಯ ನಿಮಿತ್ತ ವಲಯ ಆಯುಕ್ತರು ವಲಯಕ್ಕೆ ಒಬ್ಬರನ್ನು ಮೇಲುಸ್ತುವಾರಿ ಅಧಿಕಾರಿಯನ್ನಾಗಿ ನೇಮಿಸಿ, ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ವಾರ್ಡಿಗೆ ಒಬ್ಬರಂತೆ ನೋಡಲ್ ಅಧಿಕಾರಿಯನ್ನು ನೇಮಿಸಲು ಅಗತ್ಯ ಕ್ರಮವಹಿಸಬೇಕು.

    13.ಪ್ಲಾಸ್ಟಿಕ್ ನಿಷೇಧ ಆದೇಶ ಜಾರಿಯಲ್ಲಿದ್ದು, ವಲಯ ವ್ಯಾಪ್ತಿಯಲ್ಲಿ ತಂಡಗಳನ್ನು ರಚಿಸಿ ಪ್ಲಾಸ್ಟಿಕ್ ಮಾರಾಟ ಮತ್ತು ಬಳಕೆ ಕಂಡುಬಂದಲ್ಲಿ ನಿಯಮಾನುಸಾರ ದಂಡ ವಿಧಿಸಿ ಕ್ರಮಕೈಗೊಳ್ಳಬೇಕು.

    14.ಪರಿಸರ ಸ್ನೇಹಿ ಗಣೇಶ ಆಚರಣೆಗೆ ಪ್ರೋತ್ಸಾಹ ನೀಡುಬೇಕು ಹಾಗೂ ಬಿಬಿಎಂಪಿ, ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆ, ಬೆಸ್ಕಾಂ ಹಾಗೂ ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಹೊರಡಿಸುವ ಷರತ್ತುಗೊಳಪಡಿಸಿ, ಗಣೇಶ ಹಬ್ಬ ಆಚರಣೆಗೆ ಅನುಮತಿ ನೀಡಲು ಕ್ರಮವಹಿಸಬೇಕು.ಇದನ್ನೂ ಓದಿ: ನಾನು ಹಣಕ್ಕಾಗಿ ಹೀಗೆ ಮಾಡಿಲ್ಲ, ಮಗಳು ಇಲ್ಲ ಅಂತ ಕೊರಗುತ್ತಿದ್ದೀನಿ: ಸುಜಾತಾ ಭಟ್ ಕಣ್ಣೀರು