Tag: BBMP schools

  • ಬಡವರ ಮಕ್ಕಳು ಬಿಬಿಎಂಪಿ ಶಾಲೆಗಳಲ್ಲಿ ಓದುತ್ತಿದ್ದು, ಅವರಿಗೆ ಉತ್ತಮ ಶಿಕ್ಷಣ ನೀಡುವುದು ನಮ್ಮ ಆದ್ಯತೆ: ಡಿಕೆಶಿ

    ಬಡವರ ಮಕ್ಕಳು ಬಿಬಿಎಂಪಿ ಶಾಲೆಗಳಲ್ಲಿ ಓದುತ್ತಿದ್ದು, ಅವರಿಗೆ ಉತ್ತಮ ಶಿಕ್ಷಣ ನೀಡುವುದು ನಮ್ಮ ಆದ್ಯತೆ: ಡಿಕೆಶಿ

    ಬೆಂಗಳೂರು: ಬಡವರ (Poor) ಮಕ್ಕಳು ಬೆಂಗಳೂರಿನ (Bengaluru) ಬಿಬಿಎಂಪಿ ಶಾಲೆಗಳಲ್ಲಿ (BBMP School) ಓದುತ್ತಿದ್ದು, ಅವರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡುವುದು ನಮ್ಮ ಆದ್ಯತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದರು.

    ಸದಾಶಿವನಗರ ನಿವಾಸದ ಬಳಿ ಅತಿಥಿ ಉಪನ್ಯಾಸಕರು (Guest Lecturers) ಅಹವಾಲು ಸಲ್ಲಿಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಬೆಂಗಳೂರಿನ ಅತಿಥಿ ಉಪನ್ಯಾಸಕರು ಇಂದು ನನ್ನನ್ನು ಭೇಟಿ ಮಾಡಿ, ನಮ್ಮನ್ನು ಸೇವೆಯಲ್ಲಿ ಮುಂದುವರಿಸಬೇಕು ಎಂದು ಕೇಳಿಕೊಂಡರು. ಇದನ್ನೂ ಓದಿ: ಸಚಿವ ಶಿವಾನಂದ್ ಪಾಟೀಲ್ ಕೂಡಲೇ ರೈತರ ಕ್ಷಮೆ ಕೇಳಬೇಕು: ಹೆಚ್‍ಡಿಕೆ

    ಸೆಕ್ಯೂರಿಟಿ ಏಜೆನ್ಸಿ ಅವರು ಶಿಕ್ಷಕರನ್ನು ನೇಮಿಸುತ್ತಾರೆ ಎಂಬ ದೂರು ಬಂದಿದೆ. ಯಾರು ಯಾವ ಕೆಲಸ ಮಾಡಬೇಕೋ ಅವರು ಅದನ್ನೇ ಮಾಡಬೇಕು. ಇಂದು ಆಗಮಿಸಿದವರಲ್ಲಿ ಉತ್ತಮವಾಗಿ ಬೋಧನೆ ಮಾಡುವ ಶಿಕ್ಷಕರಿಗೆ ಪ್ರಾತಿನಿಧ್ಯ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಈ ವಿಚಾರವಾಗಿ ಮತ್ತೆ ಪರಿಶೀಲನೆ  ಮಾಡುತ್ತೇನೆ. ನಮಗೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ಬಹಳ ಮುಖ್ಯ ಎಂದರು. ಇದನ್ನೂ ಓದಿ: ಹಿಜಬ್ ನಿಷೇಧ ಆದೇಶ ವಾಪಸ್ ವಿಚಾರದಲ್ಲಿ ಕೊನೆಗೂ ಮೌನ ಮುರಿದ ಡಿಕೆಶಿ

    ಬಿಬಿಎಂಪಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕುಸಿದಿದೆ ಎಂಬ ಕಾರಣಕ್ಕೆ ಶಿಕ್ಷಣ ಇಲಾಖೆ ಸುಪರ್ದಿಗೆ ಈ ಶಾಲೆಗಳನ್ನು ನೀಡಿದ್ದೇವೆ. ಸರಿಯಾಗಿ ತರಬೇತಿ ಹೊಂದಿರುವ ಶಿಕ್ಷಕರನ್ನು ನೇಮಿಸಬೇಕಿದೆ. ಬಿಬಿಎಂಪಿ ವತಿಯಿಂದ ಎಲ್ಲಾ ಮೂಲಸೌಕರ್ಯ ಒದಗಿಸಲಾಗುವುದು, ಶಿಕ್ಷಣದ ಜವಾಬ್ದಾರಿಯನ್ನು ಇಲಾಖೆಗೆ ವಹಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ರೈತರನ್ನು ಅವಮಾನಿಸುವ ಸಚಿವರನ್ನು ಸಂಪುಟದಿಂದ ವಜಾ ಮಾಡಿ: ಬಿ.ವೈ.ವಿಜಯೇಂದ್ರ ಆಗ್ರಹ

    ಸಚಿವ ಭೈರತಿ ಸುರೇಶ್ ಅವರ ಭೇಟಿ ವಿಚಾರವಾಗಿ ಕೇಳಿದಾಗ, ನಮ್ಮಲ್ಲಿ ಕೆಲವು ಯೋಜನಾ ಪ್ರಾಧಿಕಾರಗಳು ಇವೆ. ಅವುಗಳಿಗೆ ಕಾರ್ಯಕರ್ತರನ್ನು ನೇಮಕ ಮಾಡಬೇಕು. ನಾಲ್ವರು ಸದಸ್ಯರನ್ನು ನೇಮಿಸಿ, ಎಲ್ಲರಿಗೂ ಅವಕಾಶ ಮಾಡಿಕೊಡಬೇಕು. ಈ ದೃಷ್ಟಿಯಿಂದ ಮಾರ್ಗದರ್ಶನ ನೀಡಿದ್ದೇನೆ. ಇನ್ನು ಲೋಕಸಭೆ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಹೆಸರು ಸೂಚನೆ ಜವಾಬ್ದಾರಿ ಸಚಿವರಿಗೆ ನೀಡಿದ್ದು, ಸಚಿವರ ಜೊತೆ ಚರ್ಚೆ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಭಾರತ ಮಾತೆಗೆ ವಾಜಪೇಯಿಯವರ ಸೇವೆ ನಮಗೆ ಸ್ಫೂರ್ತಿ: ಮೋದಿ

    ನಿಗಮ, ಮಂಡಳಿಗಳಿಗೆ ಯಾವಾಗ ನೇಮಕ ಆಗಲಿದೆ ಎಂಬ ಪ್ರಶ್ನೆಗೆ, ಯಾವುದೇ ಕ್ಷಣದಲ್ಲಿ ಬೇಕಾದರೂ ಆಗಬಹುದು ಎಂದು ಉತ್ತರಿಸಿದರು. ಕನ್ನಡ ನಾಮಫಲಕ ವಿಚಾರವಾಗಿ ಕನ್ನಡಪರ ಸಂಘಟನೆಗಳ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕನ್ನಡಪರ ಸಂಘಟನೆಗಳು ಕಾನೂನಿನ ಚೌಕಟ್ಟಿನಲ್ಲಿ ಹೋರಾಟ ಮಾಡಬೇಕು. ಹೋರಾಟದ ಹೆಸರಿನಲ್ಲಿ ಯಾರ ಆಸ್ತಿಪಾಸ್ತಿಗೂ ಹಾನಿ ಮಾಡಬಾರದು. ಬೆಂಗಳೂರಿಗೆ ಬಂದು ವ್ಯಾಪಾರ ಮಾಡಿ ಬದುಕುತ್ತಿರುವವರು ತಮ್ಮ ಮಳಿಗೆ ಬೋರ್ಡ್ನಲ್ಲಿ 60% ನಷ್ಟು ಕನ್ನಡ ಇರಬೇಕು ಎಂಬ ಕಾನೂನು ಇದ್ದು, ಯಾರು ಎಷ್ಟೇ ದೊಡ್ಡ ವ್ಯಾಪಾರಸ್ಥರಾದರೂ ಎಲ್ಲರೂ ಅದನ್ನು ಪಾಲನೆ ಮಾಡಬೇಕು ಎಂದರು. ಇದನ್ನೂ ಓದಿ: ನನಗೆ ಮದ ಏರಿಲ್ಲ, ನನ್ನ ಹೇಳಿಕೆಯನ್ನು ತಿರುಚಲಾಗಿದೆ: ಶಿವಾನಂದ್ ಪಾಟೀಲ್

    ಹಿಜಬ್ ವಿಚಾರವಾಗಿ ಮಾತನಾಡಿದ ಅವರು, ನಾವು ಆ ವಿಚಾರವಾಗಿ ಆಲೋಚನೆ ಮಾಡಿಲ್ಲ. ಮಾಧ್ಯಮಗಳೇ ಇದನ್ನು ದೊಡ್ಡ ವಿಷಯ ಮಾಡುತ್ತಿವೆ. ಹಿಜಬ್ ವಿಚಾರವಾಗಿ ಚರ್ಚೆಗೆ ಬರುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಸರ್ಕಾರದ ಮುಂದೆ ಪ್ರಸ್ತಾವನೆ ಎಲ್ಲಿದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಮನೆ-ಮನೆಗೆ ತೆರಳಿ ಪಡಿ ಸಂಗ್ರಹಿಸಿದ ದತ್ತಮಾಲಾಧಾರಿ ಸಿ.ಟಿ ರವಿ

    ಇಂಡಿಯಾ ಮೈತ್ರಿಕೂಟ ಲೋಕಸಭೆ ಚುನಾವಣೆ ಮುನ್ನವೇ ಮುರಿದು ಬೀಳಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, ಎನ್‌ಡಿಎ ಮೈತ್ರಿಕೂಟ ಮುರಿದು ಬೀಳಲಿದೆ ಎಂದು ತಿಳಿಸಿದರು. ಸಚಿವ ಶಿವಾನಂದ ಪಾಟೀಲ್ ವಿವಾದಾತ್ಮಕ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಸಾಲಮನ್ನಾ ಆಸೆಗಾಗಿ ರೈತರು ಬರಗಾಲಕ್ಕೆ ಕಾಯುತ್ತಾರೆ- ಶಿವಾನಂದ್ ಪಾಟೀಲ್ ವಿವಾದಾತ್ಮಕ ಹೇಳಿಕೆ

  • ಬಿಬಿಎಂಪಿ ಶಾಲೆಗಳಿಗೆ ಕೆಂಪೇಗೌಡ ಹೆಸರು ನಾಮಕರಣ

    ಬಿಬಿಎಂಪಿ ಶಾಲೆಗಳಿಗೆ ಕೆಂಪೇಗೌಡ ಹೆಸರು ನಾಮಕರಣ

    ಬೆಂಗಳೂರು: ಬಿಬಿಎಂಪಿ ಶಾಲೆಗಳಿಗೆ ಕೆಂಪೇಗೌಡರ ಹೆಸರು ಇಡಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಮಂಜುಳಾ ನಾರಾಯಣ್ ಸ್ವಾಮಿ ಹೇಳಿದ್ದಾರೆ.

    ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಶಿಕ್ಷಣ ಸ್ಥಾಯಿ ಸಮಿತಿ ಹಾಗೂ ನಗರ ಜಿಲ್ಲಾ ಪಂಚಾಯತ್ ಶಿಕ್ಷಣ ಅಧ್ಯಕ್ಷ ನರಸಿಂಹಮೂರ್ತಿ ಗುರುವಾರ ನಡೆಸಿದ ಜಂಟಿ ಸುದ್ದಿಗೋಷ್ಟಿಯಲ್ಲಿ ಈ ಮಾಹಿತಿ ತಿಳಿಸಿದರು. ಈ ಬಗ್ಗೆ ಮಾತನಾಡಿದ ನರಸಿಂಹಮೂರ್ತಿ ಅವರು, ಬೆಂಗಳೂರಿನಲ್ಲಿರುವ ಸರ್ಕಾರಿ ಶಾಲೆ, ಪಾಲಿಕೆ ಶಾಲೆಗಳಿಗೆ ಸಂಬಂಧಿಸಿದ ಅಭಿವೃದ್ಧಿ ಮಾಡಲು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಹಣಕಾಸಿನ ವ್ಯವಸ್ಥೆ ಇಲ್ಲ. ಇದಕ್ಕೆ ಪಾಲಿಕೆ ಶಿಕ್ಷಣ ಸಮಿತಿಯಲ್ಲಿ ಮನವಿ ಮಾಡಿದ್ದೆವು. ಇದಕ್ಕೆ ಸ್ಪಂದಿಸಿದ ಪಾಲಿಕೆ ಶಿಕ್ಷಣ ಸಮಿತಿ ಈ ಬಜೆಟ್‍ನಲ್ಲಿ ಮೂಲಭೂತ ಸೌಕರ್ಯ ಕೊಡುವ ಭರವಸೆ ನೀಡಿದೆ ಎಂದರು.

    ಜೊತೆಗೆ ಪಾಲಿಕೆ ವ್ಯಾಪ್ತಿಯಲ್ಲಿ 529 ಸರ್ಕಾರಿ ಶಾಲೆಗಳಿವೆ. ನೀರು ಮತ್ತು ವಿದ್ಯುತ್ ಉಚಿತ ಹಾಗೂ ಮೂಲಸೌಕರ್ಯವೂ ಬಿಬಿಎಂಪಿ ಒದಗಿಸಲಿದೆ. 30 ಕೋಟಿ ರೂ. ವೆಚ್ಚದಲ್ಲಿ ಈ ಬಗ್ಗೆ ಬಜೆಟ್‍ನಲ್ಲಿ ಪ್ರಸ್ತಾವನೆ ಇಡಲಾಗಿದೆ. 529 ಸರ್ಕಾರಿ ಶಾಲೆಗಳ ನಿರ್ವಹಣೆಗೆ ಬಿಬಿಎಂಪಿ ಹಾಗೂ ಜಿಲ್ಲಾ ಪಂಚಾಯತ್‍ಗೆ ಕೇವಲ 75 ಲಕ್ಷ ರೂ. ಅನುದಾನ ಇದೆ. 1,300 ಕ್ಕೂ ಹೆಚ್ಚು ಶಾಲೆಗಳಿವೆ. ಬರೀ ಸಂಬಳ ಕೊಡೋಕೆ ಹಣ ಸಾಕಾಗ್ತಿದೆ. ನಮಗೆ ಸಣ್ಣ ವಾಹನದ ವ್ಯವಸ್ಥೆಯೂ ಇಲ್ಲ. ಇಲಾಖೆ ಖರ್ಚು ವೆಚ್ಚಕ್ಕೆ 75 ಲಕ್ಷ ಸಾಲುತ್ತಿಲ್ಲ ಎಂದು ಮಂಜುಳಾ ನಾರಾಯಣಸ್ವಾಮಿ ಹೇಳಿದರು.

    ಕೆಂಪೇಗೌಡರು ಕಟ್ಟಿರುವ ನಾಡು ಇದು. ಹೀಗಾಗಿ ಪಾಲಿಕೆ ಶಾಲೆಗಳಿಗೂ ಕೆಂಪೇಗೌಡ ಹೆಸರಿಡಲು ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಕೌನ್ಸಿಲ್‍ನಲ್ಲಿ ಪ್ರಸ್ತಾವನೆ ಇಡಲಾಗುವುದು ಎಂದರು. ಪಾಲಿಕೆ ಶಾಲೆಗಳ ಗುಣಮಟ್ಟವನ್ನೂ ಹೆಚ್ಚಳ ಮಾಡ್ತೇವೆ. ಮೂಲಭೂತ ಸೌಕರ್ಯಗಳಾದ ನೀರು, ಶೌಚಾಲಯ, ವಿದ್ಯುತ್ ನೀಡದಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

  • ಹಳ್ಳ ಹಿಡೀತಿದೆ ಬಿಬಿಎಂಪಿ ಶಾಲೆಗಳಿಗೆ ಡಿಜಿಟಲ್ ಶಿಕ್ಷಣ ಕೊಡೋ ರೋಶಿನಿ ಯೋಜನೆ

    ಹಳ್ಳ ಹಿಡೀತಿದೆ ಬಿಬಿಎಂಪಿ ಶಾಲೆಗಳಿಗೆ ಡಿಜಿಟಲ್ ಶಿಕ್ಷಣ ಕೊಡೋ ರೋಶಿನಿ ಯೋಜನೆ

    ಬೆಂಗಳೂರು: ಬಿಬಿಎಂಪಿ ಶಾಲೆಗಳಿಗೆ ಡಿಜಿಟಲ್ ಶಿಕ್ಷಣ ಕೊಡೋ ಉದ್ದೇಶದಿಂದ ಜಾರಿಗೆ ಬಂದ ರೋಶಿನಿ ಯೋಜನೆ ಹಳ್ಳ ಹಿಡಿಯುತ್ತಿದೆ. ಕಳೆದ ಒಂದು ವರ್ಷದಲ್ಲಿ ರೋಶಿನಿ ಕೇವಲ ಕಡತಗಳಿಗೆ ಮಾತ್ರ ಸೀಮಿತವಾಗಿದ್ದು, ಪಾಲಿಕೆ ಶಾಲೆಗಳು ರೋಶಿನಿಯಿಂದ ಖಾಸಗೀಕರಣದ ಭಯವನ್ನು ಎದುರಿಸುತ್ತಿದೆ.

    ಬಿಬಿಎಂಪಿ ಶಾಲಾ ಮಕ್ಕಳಿಗೆ ಡಿಜಿಟಲ್ ಶಿಕ್ಷಣ ಕೊಡೋ ಉದ್ದೇಶದೊಂದಿಗೆ ಸರ್ಕಾರ ರೋಶಿನಿ ಯೋಜನೆಯನ್ನ ಜಾರಿಗೆ ತಂದಿತ್ತು. ಟ್ಯಾಗ್ ಎಂಬ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡು ರೋಶಿನಿ ಯೋಜನೆಯನ್ನ ಉದ್ಘಾಟನೆ ಕೂಡ ಮಾಡಲಾಗಿತ್ತು. ಆದರೆ ಈ ಸಂಸ್ಥೆ ಪಾಲಿಕೆ ಶಾಲೆಗಾಗಿ ಬಿಡುಗಾಸಿನ ಕೆಲಸವನ್ನು ಮಾಡಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ.

    ರೋಶಿನಿ ಅನ್ನೋದು ಯೋಜನೆಯನ್ನು ಗುತ್ತಿಗೆ ಪಡೆದಿರೋ ಕಂಪನಿ ಮಾಲೀಕರ ಮಗಳ ಹೆಸರು. ಈ ಹೆಸರಿನಲ್ಲೇ ಸರ್ಕಾರದ ಜೊತೆ ಟ್ಯಾಗ್ ಕಂಪನಿ ಒಪ್ಪಂದ ಮಾಡಿಕೊಂಡಿದೆ. ಬಿಬಿಎಂಪಿ ಶಾಲೆಗೆ ಟ್ಯಾಬ್, ಲ್ಯಾಪ್ ಟಾಪ್, ಡಿಜಿಟಲ್ ಶಿಕ್ಷಣ, ಟಿವಿ ಎಲ್ಲಾ ಕೊಡುತ್ತೇವೆ ಎಂದು ಶಾಲೆ ಆವರಣವನ್ನ ರೋಶಿನಿಮಯ ಮಾಡಿದ್ದಾರೆ. ಅಲ್ಲದೆ ಪಾಲಿಕೆ ಬೋರ್ಡ್ ಗಳನ್ನು ಕೂಡ ಕಿತ್ತುಹಾಕಿದ್ದಾರೆ. ಫ್ರೆಜರ್ ಟೌನ್ ಶಾಲೆಯಲ್ಲಂತೂ ಕೊಠಡಿಗೆ ಬೀಗ ಜಡಿದು ಹೋದವರು ಇವತ್ತಿನವರೆಗೂ ತಿರುಗಿ ನೋಡಿಲ್ಲ ಎನ್ನಲಾಗುತ್ತಿದೆ.

    ಇದೆಲ್ಲಾ ಯಾಕೆ ಎಂದು ಕೇಳೋ ಅಧಿಕಾರ ಪಾಲಿಕೆಗೆ ಇಲ್ಲ. ಯಾಕೆಂದರೆ ಒಪ್ಪಂದದ ಪ್ರಕಾರ ಪಾಲಿಕೆ ಶಾಲೆಗೆ ಸಾಫ್ಟ್ ವೇರ್ ಕಂಪನಿಗಳು ಸಿಎಸ್‍ಆರ್ ಫಂಡ್ ನೀಡಿದರೆ ಅದು ಈ ಟ್ಯಾಗ್ ಕಂಪನಿಗೆ ನೀಡಬೇಕು. ಹೀಗಾಗಿ ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಕೇಳಿದರೆ, ನನಗೆ ಗೊತ್ತಿಲ್ಲ ಕಮಿಷನರ್ ಬಳಿ ಕೇಳಿ ಎಂದು ಹೇಳುತ್ತಿದ್ದಾರೆ.

    ಕಳೆದ ಒಂದು ವರ್ಷದಲ್ಲಿ ರೋಶಿನಿಗಾಗಿ ಎಷ್ಟು ಸಿಎಸ್‍ಆರ್ ಹಣ ಬಂದಿದೆ ಎನ್ನುವ ಬಗ್ಗೆ ಪಾಲಿಕೆಗೆ ಗೊತ್ತಿಲ್ಲ. ಹೀಗೆ ಬಂದವರು ಹೋದವರು ಪಾಲಿಕೆ ಹೆಸರಲ್ಲಿ ಏನು ಬೇಕಾದರು ಮಾಡಬಹುದು ಎಂಬ ಆರೋಪವೂ ಹರಿದಾಡುತ್ತಿದೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]