Tag: bbmp

  • Bengaluru | ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿ ಆಯುಕ್ತರಿಗೆ ಡಿಸಿಎಂ 15 ದಿನಗಳ ಗಡುವು

    Bengaluru | ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿ ಆಯುಕ್ತರಿಗೆ ಡಿಸಿಎಂ 15 ದಿನಗಳ ಗಡುವು

    ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯ ರಸ್ತೆಗುಂಡಿಗಳನ್ನು ಇನ್ನೂ 15 ದಿನಗಳ ಒಳಗಾಗಿ ಮುಚ್ಚಿ ದುರಸ್ತಿ ಮಾಡಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

    ಈ ಸಂಬಂಧ ಡಿಸಿಎಂ ಡಿ.ಕೆ ಶಿವಕುಮಾರ್ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಲಾಗಿದೆ. ರಸ್ತೆ ಗುಂಡಿಗಳ (Road Potholes) ಬಗ್ಗೆ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಈ ಬಗ್ಗೆ ತುರ್ತಾಗಿ ಗಮನ ಹರಿಸಬೇಕು ಈಗಾಗಲೇ ʻರಸ್ತೆ ಗುಂಡಿ ಗಮನʼ ಎನ್ನುವ ಆಪ್ ಮೂಲಕ ಸಾರ್ವಜನಿಕರು ರಸ್ತೆ ಗುಂಡಿಗಳ ಫೋಟೋ ತೆಗೆದು ಅಪ್‌ಲೋಡ್‌ ಮಾಡುವ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಡಿಕೆಶಿ ಓಡಿಸುತ್ತಿದ್ದ ಹಳೇ ಬೈಕ್‌ಗೆ ಹೊಸ ರೂಪ – 1981 ರ ಮಾಡೆಲ್ ಎಝಡಿ ರೋಡ್ ಕಿಂಗ್ ಬೈಕ್

    ನಗರದ ಅನೇಕ ಕಡೆ ರಸ್ತೆ ಹಾಳಾಗಿರುವುದರ ಬಗ್ಗೆ ಇಲ್ಲಿಯೂ ಸಹ ದೂರುಗಳು ಬರುತ್ತಿವೆ. ಮಳೆಗಾಲದ ಕಾರಣಕ್ಕೂ ರಸ್ತೆಗಳು ಗುಂಡಿ ಬೀಳುತ್ತಿರಬಹುದು. ಇದರ ಬಗ್ಗೆಯೂ ಬಿಬಿಎಂಪಿ ಆಯುಕ್ತರು ಗಮನ ಹರಿಸಬೇಕು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: Gujarat Floods | ಸ್ಕೂಟಿ ಮೇಲೆ ಹೊತ್ತೊಯ್ದು ಮೊಸಳೆ ರಕ್ಷಣೆ – ವೀಡಿಯೋ ವೈರಲ್

    ರಸ್ತೆ ಗುಂಡಿಗಳನ್ನು ಮುಚ್ಚಲು ಗಡುವು ನೀಡಿರುವ 15 ದಿನಗಳ ನಂತರ ಇಡೀ ಬೆಂಗಳೂರು ನಗರವನ್ನು ತಾವೇ ಸ್ವತಃ ಪ್ರದಕ್ಷಿಣೆ ಹಾಕಲಿದ್ದೇನೆ. ಪ್ರತಿ ರಸ್ತೆಗಳನ್ನು ಪರಿಶೀಲನೆ ಮಾಡುತ್ತೇನೆ. ಅಷ್ಟರಲ್ಲಿ ಕೆಲಸ ಮುಗಿಸಿರಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ: ಉಡುಪಿ | ಸಮುದ್ರದಲ್ಲಿ ಮುಳುಗುತ್ತಿದ್ದ ಮೀನುಗಾರ – ಸತತ 1 ಗಂಟೆ ಕಾರ್ಯಾಚರಣೆ ನಡೆಸಿ ರಕ್ಷಣೆ

  • ಜವಾಹರಲಾಲ್ ನೆಹರು ತಾರಾಲಯ ಆಧುನಿಕರಣಕ್ಕೆ ಅಗತ್ಯ ಪ್ರಸ್ತಾವನೆ ಸಲ್ಲಿಸಿ: ಬೋಸರಾಜು ಸೂಚನೆ

    ಜವಾಹರಲಾಲ್ ನೆಹರು ತಾರಾಲಯ ಆಧುನಿಕರಣಕ್ಕೆ ಅಗತ್ಯ ಪ್ರಸ್ತಾವನೆ ಸಲ್ಲಿಸಿ: ಬೋಸರಾಜು ಸೂಚನೆ

    ಬೆಂಗಳೂರು: ಜವಾಹರಲಾಲ್ ನೆಹರು ತಾರಾಲಯದಲ್ಲಿ (Jawaharlal Nehru Planetarium) ತಾಂತ್ರಿಕ ಆಧುನೀಕರಣಕ್ಕೆ ಅಗತ್ಯವಿರುವ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು (NS Boseraju) ಸೂಚನೆ ನೀಡಿದರು.

    ಇಂದು ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಿಜ್ವಾನ್ ಅರ್ಷದ್ ಅವರ ಜೊತೆಯಲ್ಲಿ ಬೋಸರಾಜು ಜವಾಹರಲಾಲ್ ನೆಹರು ತಾರಾಲಯಕ್ಕೆ ಭೇಟಿ ನೀಡಿ ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ನಡೆಸುತ್ತಿರುವ ಕಾಮಗಾರಿಗಳ ಪರಿಶೀಲನೆಯನ್ನು ನಡೆಸಿದರು. ಜವಾಹರಲಾಲ್ ನೆಹರು ತಾರಾಲಯದಲ್ಲಿ ನಡೆಯುತ್ತಿರುವ ಯೋಜನೆಗಳು ಹಾಗೂ ಮುಂದಿನ ಪ್ರಸ್ತಾವನೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಇದನ್ನೂ ಓದಿ: Tungabhadra Dam |ಈವರೆಗೂ ಸಾಧ್ಯವಾಗಿಲ್ಲ ತಾತ್ಕಾಲಿಕ ಗೇಟ್- ಮಾಧ್ಯಮಗಳ ಚಿತ್ರೀಕರಣಕ್ಕೆ ನಿರ್ಬಂಧ

    ಇನ್ನು ಸ್ಮಾರ್ಟ್ ಸಿಟಿ ಯೋಜನೆಯ (Smart City Scheme) ಅಡಿಯಲ್ಲಿ ಬಿಬಿಎಂಪಿ ವತಿಯಿಂದ ಜವಾಹರಲಾಲ್ ನೆಹರು ತಾರಾಲಯದ ಆವರಣದಲ್ಲಿ ಆಧುನಿಕ ಸಭಾಂಗಣ, ಕ್ಲಾಸ್‌ರೂಂ ಸೇರಿದಂತೆ ಹಲವು ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಈ ಕಟ್ಟಡ ಕಾಮಗಾರಿಯನ್ನು ಸೆಪ್ಟೆಂಬರ್ 15ರ ಒಳಗಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದೇ ವೇಳೆ ಈ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಆಗಸ್ಟ್ 22ರಂದು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳನ್ನು ಒಳಗೊಂಡ ಸಭೆಯನ್ನು ಆಯೋಜಿಸುವಂತೆ ಸೂಚನೆ ನೀಡಿದರು. ಇದನ್ನೂ ಓದಿ: ಶನಿವಾರ ರಾಜ್ಯಾದ್ಯಂತ ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆ ಬಂದ್ – ದಿನೇಶ್ ಗುಂಡೂರಾವ್ ಪರೋಕ್ಷ ಬೆಂಬಲ

    ಜವಾಹರಲಾಲ್ ನೆಹರು ತಾರಾಲಯ ತಾಂತ್ರಿಕ ಆಧುನೀಕರಣ:
    ಜವಾಹರಲಾಲ್ ನೆಹರು ತಾರಾಲಯದಲ್ಲಿ ಪ್ರಸ್ತುತ ಇರುವಂತಹ ಅನಲಾಗ್ ಪ್ರೊಜೆಕ್ಟರ್‌ಗಳ ತಾಂತ್ರಿಕ ಉಪಕರಣಗಳು ಬಹಳ ಹಳೆಯ ತಂತ್ರಜ್ಞಾನದ್ದಾಗಿವೆ. ಇವುಗಳನ್ನು ಬದಲಿಸುವ ಮೂಲಕ ನೂತನ ತಂತ್ರಜ್ಞಾನದ ಎಲ್‌ಇಡಿ ಪ್ರೊಜೆಕ್ಟರ್‌ಗಳನ್ನು ಅಳವಡಿಸುವುದು ಬಹಳ ಮುಖ್ಯವಾಗಿದೆ ಎಂದು ತಾರಾಲಯದ ನಿರ್ದೇಶಕರು ಸಚಿವರಿಗೆ ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ ನೀಡಿದರು. ಇದನ್ನೂ ಓದಿ:  ಪಶ್ಚಿಮ ಘಟ್ಟದಲ್ಲಿ ಭೂಪರಿವರ್ತನೆಗೆ ತಾತ್ಕಾಲಿಕ ತಡೆ: ಈಶ್ವರ ಖಂಡ್ರೆ

    ವಸತಿ ಶಾಲೆಗಳಿಗೆ ಟೆಲಿಸ್ಕೋಪ್ ಒದಗಿಸುವ ಟೆಂಡರ್ ಪ್ರಕ್ರಿಯೆ ಚಾಲ್ತಿಯಲ್ಲಿ:
    ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ರಾಜ್ಯದ ಜನರಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಅಗತ್ಯ ಪ್ರೋತ್ಸಾಹ ನೀಡುತ್ತಿದ್ದಾರೆ. ಈ ಬಾರಿಯ ಆಯವ್ಯದಲ್ಲಿ 883 ವಸತಿ ಶಾಲೆಗಳಲ್ಲಿ ಟೆಲಿಸ್ಕೋಪ್ ಒದಗಿಸಲು ಅಗತ್ಯ ಅನುದಾನ ಬಿಡುಗಡೆ ಮಾಡಿದ್ದಾರೆ. ಈ ಟೆಲಿಸ್ಕೋಪ್‌ಗಳನ್ನು ಖರೀದಿಸಲು ಈಗಾಗಲೇ ಟೆಂಡರ್ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಆದಷ್ಟು ಶೀಘ್ರದಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ನಗರದ ಜವಾಹರಲಾಲ್ ನೆಹರು ತಾರಾಲಯದ ಸಹಯೋಗದಲ್ಲಿ ತರಬೇತಿ ಶಿಬಿರಗಳನ್ನು ಆಯೋಜಿಸಲಾಗುವುದು. ಆಯಾ ವಲಯವಾರು ತರಬೇತಿ ಶಿಬಿರಗಳಲ್ಲಿ ಟೆಲಿಸ್ಕೋಪ್ ಬಳಕೆ, ಅದರ ಮೂಲಕ ಅಧ್ಯಯನ ಮತ್ತು ಬೋಧನೆ ಹಾಗೂ ಅದನ್ನು ಸುಸ್ಥಿತಿಯಲ್ಲಿಡುವ ಬಗ್ಗೆ ವಿಜ್ಞಾನ ಶಿಕ್ಷಕರಿಗೆ ತರಬೇತಿ ನೀಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ:  ಶೀಘ್ರವೇ ಜಾರ್ಖಂಡ್‌ ಮಾಜಿ ಸಿಎಂ ಚಂಪೈ ಸೊರೆನ್‌ ಬಿಜೆಪಿ ಸೇರ್ಪಡೆ ಸಾಧ್ಯತೆ

    ಸಭೆಯಲ್ಲಿ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಿಜ್ವಾನ್ ಅರ್ಷದ್, ಜವಾಹರಲಾಲ್ ನೆಹರು ತಾರಾಲಯದ ನಿರ್ದೇಶಕರಾದ ಡಾ.ಬಿಆರ್ ಗುರುಪ್ರಸಾದ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ:  ವಿ.ಸೋಮಣ್ಣಗೆ ಬಿಗ್ ಶಾಕ್ – ಸಂಸದರ ಕಚೇರಿ ವಾಪಸ್ ಪಡೆದ ಸರ್ಕಾರ

  • ಜನಪ್ರತಿನಿಧಿಯಾಗಿ ಜನರ ಸಮಸ್ಯೆ ಬಗ್ಗೆ ಟ್ವೀಟ್ ಮಾಡಿದ್ದೇನೆ, ತಪ್ಪೇನು ಅಲ್ಲ: ಕೃಷ್ಣಬೈರೇಗೌಡ ಸಮರ್ಥನೆ

    ಜನಪ್ರತಿನಿಧಿಯಾಗಿ ಜನರ ಸಮಸ್ಯೆ ಬಗ್ಗೆ ಟ್ವೀಟ್ ಮಾಡಿದ್ದೇನೆ, ತಪ್ಪೇನು ಅಲ್ಲ: ಕೃಷ್ಣಬೈರೇಗೌಡ ಸಮರ್ಥನೆ

    ಬೆಂಗಳೂರು: ಜನಪ್ರತಿನಿಧಿಯಾಗಿ ಜನರ ಸಮಸ್ಯೆ ಬಗ್ಗೆ ಟ್ವೀಟ್ (Tweet) ಮಾಡಿ ಸರಿ ಮಾಡಲು ಹೇಳಿದ್ದೇನೆ. ಇದಕ್ಕೆ ಬೇರೆ ಬಣ್ಣ ಕಟ್ಟೋದು ಬೇಡ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ (Krishna Byre Gowda) ತಿಳಿಸಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ತಮ್ಮ ಏರಿಯಾದ ರಸ್ತೆ ಗುಂಡಿ ಮುಚ್ಚುವ ಬಗ್ಗೆ ಟ್ವೀಟ್ ಮಾಡಿದ್ದ ವಿಚಾರಕ್ಕೆ ಸ್ಪಷ್ಟನೆ ನೀಡಿದ ಅವರು, ಸಾರ್ವಜನಿಕರ ಪರವಾಗಿ ಅಧಿಕಾರಿಗಳಿಗೆ ಮಾಹಿತಿ ಕೊಡುವ ಪ್ರಯತ್ನ ಮಾಡಿದ್ದೇನೆ. ಅಧಿಕಾರಿಗಳು ಎಚ್ಚೆತ್ತುಕೊಂಡು ಕೆಲಸ ಮಾಡಬೇಕು. ಸಾರ್ವಜನಿಕರ ಪರವಾಗಿ ಕೆಲಸ ಮಾಡಬೇಕು. ಅಧಿಕಾರಿಗಳಿಗೆ ಮಾಹಿತಿ ಕೊಡೋಕೆ ನಾನಾ ಮಾರ್ಗಗಳು ಇವೆ. ಫೋನ್ ಮಾಡಬಹುದು, ಪತ್ರ ಬರೆಯಬಹುದು. ವೀಡಿಯೋ ಕಳುಹಿಸಬಹುದು. ನಾವು ಅದನ್ನು ಅವರ ಗಮನಕ್ಕೆ ತಂದಿದ್ದೇನೆ. ನನ್ನ ಕ್ಷೇತ್ರದಲ್ಲಿ ಜನ ಸಮಸ್ಯೆ ತಂದಿದ್ದರು. ಅದನ್ನು ಸರಿ ಮಾಡಲು ಹೇಳಿದ್ದೇನೆ. ಅದಕ್ಕೆ ನೀವು ಬಣ್ಣ ಕಟ್ಟಿ ಏನೇನೋ ಹೇಳಿದರೆ ಅದು ಅವರಿಗೆ ಬಿಟ್ಟದ್ದು. ನಮಗೆ ಜನರ ಕೆಲಸ ಸರ್ಕಾರದಿಂದ ಆಗಬೇಕು. ಆ ಒಂದು ಪ್ರಯತ್ನ ನಾನು ಮಾಡುತ್ತಿದ್ದೇನೆ ಎಂದರು. ಇದನ್ನೂ ಓದಿ: ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯದಲ್ಲಿ ಸದ್ಯಕ್ಕೆ ಉಪಚುನಾವಣೆ ಇಲ್ಲ

    ಸಚಿವರ ಟ್ವೀಟ್‌ಗೆ ಬಿಜೆಪಿ ಟೀಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೆಲಸ ಆಗೋದು ಮುಖ್ಯನಾ? ಹೇಗೆ ಆಯ್ತು ಅನ್ನೋದು ಮುಖ್ಯನಾ? ಜನಕ್ಕೆ ಸಮಸ್ಯೆ ಪರಿಹಾರ ಆಗಬೇಕು. ಯಾವ ಮೂಲದಿಂದ ಆಗುತ್ತೆ ಅನ್ನೋದು ಎರಡನೇ ವಿಚಾರ. ಜನ ಪ್ರತಿನಿಧಿಯಾಗಿ ಜನರ ಸಮಸ್ಯೆ ಪರಿಹಾರ ಮಾಡೋದು ನನ್ನ ಕೆಲಸ. ಜನರ ಪರವಾಗಿ ನಾನು ಕೆಲಸ ಮಾಡಿದ್ದೇನೆ. ನಾನು ಆಯುಕ್ತರಿಗೆ ಅನೇಕ ಬಾರಿ ಈ ವಿಷಯ ಹೇಳಿದ್ದೆ. ಅವರಿಗೆ ಚಿತ್ರಣ ಕಳುಹಿಸಿಕೊಡೋಣ ಅಂತ ವೀಡಿಯೋ ಕಳುಹಿಸಿದೆ. ಬೆಂಗಳೂರಿನಲ್ಲಿ ಸಾರ್ವಜನಿಕರಿಗೆ ಕೆಲಸ ಆಗಬೇಕು ಅನ್ನೋದು ಮುಖ್ಯ ಎಂದು ಹೇಳಿದರು. ಇದನ್ನೂ ಓದಿ: Assembly elections 2024: ಜಮ್ಮು-ಕಾಶ್ಮೀರದಲ್ಲಿ 3 ಹಂತ, ಹರಿಯಾಣದಲ್ಲಿ ಅ.1ಕ್ಕೆ ಮತದಾನ

    ಸರಿಯಾಗಿ ಕೆಲಸ ಆಗಬೇಕು ಎಂಬುದು ನಮ್ಮ ಉದ್ದೇಶ. ಡಿಸಿಎಂ ಸೂಚನೆ ಕೊಟ್ಟಿದ್ದಾರೆ. ಸಿಎಂ ಕೂಡ ಸೂಚನೆ ಕೊಟ್ಟಿದ್ದಾರೆ. ಅಧಿಕಾರಿಗಳು ಎಚ್ಚೆತ್ತುಕೊಂಡು ಕೆಲಸ ಮಾಡಬೇಕು. ಈ ಬಾರಿ ಜಾಸ್ತಿ ಮಳೆ ಆಗುತ್ತದೆ ಎಂದು ನಾನು ಬಿಬಿಎಂಪಿಗೆ ಪತ್ರ ಬರೆದಿದ್ದೆ. ಅದಕ್ಕೆ ರೆಡಿಯಾಗಬೇಕು ಎಂದು ಪತ್ರ ಬರೆದಿದ್ದೆ. ಸರ್ಕಾರ ನಮ್ಮದು. ಆದರೆ ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಬೇಜವಾಬ್ದಾರಿಯಿಂದ ಕೆಲಸ ಮಾಡಿ ಸರ್ಕಾರಕ್ಕೆ ತೊಂದರೆ ಆಗಬಾರದು. ನನ್ನ ಮೊದಲ ಆದ್ಯತೆ ಜನರಿಗೆ, ಆಮೇಲೆ ಸರ್ಕಾರ. ಜನರಿಗೆ ನಾವು ಜನಪ್ರತಿನಿಧಿಯಾಗಿ ನಮ್ಮ ಮೊದಲ ಆದ್ಯತೆ ಇರಬೇಕು. ಅ ಪ್ರಜ್ಞೆ ನನಗೆ ಇದೆ. ಸರ್ಕಾರಕ್ಕೆ ಹೆಸರು ಬರಬೇಕಾದರೆ ಅಧಿಕಾರಿಗಳು ಎಚ್ಚೆತ್ತು ಕೆಲಸ ಮಾಡಬೇಕು. ಅವರನ್ನು ಎಚ್ಚರಿಸುವ ಕೆಲಸ ಮಾಡಿದ್ದೇನೆ ಎಂದು ತಾವು ಮಾಡಿದ ಟ್ವೀಟ್ ಸಮರ್ಥಿಸಿಕೊಂಡರು. ಇದನ್ನೂ ಓದಿ: ರಾಜ್ಯದ ಸರ್ಕಾರಿ ನೌಕರರು ಇನ್ಮುಂದೆ ಕೆಂಪು-ಹಳದಿ ಬಣ್ಣದ ಐಡಿ ಕಾರ್ಡ್ ಟ್ಯಾಗ್ ಧರಿಸಬೇಕು!

  • ಗುಂಡಿ ಮುಚ್ಚುವಂತೆ ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ಮನವಿ – ಸಚಿವರಿಗೆ ಹೀಗಾದ್ರೆ ಸಾಮಾನ್ಯರ ಕತೆ ಏನು?

    ಗುಂಡಿ ಮುಚ್ಚುವಂತೆ ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ಮನವಿ – ಸಚಿವರಿಗೆ ಹೀಗಾದ್ರೆ ಸಾಮಾನ್ಯರ ಕತೆ ಏನು?

    – ಭಾರೀ ಚರ್ಚೆಗೆ ಗ್ರಾಸವಾದ ಕಂದಾಯ ಸಚಿವರ ಪೋಸ್ಟ್‌
    – ರಾಹುಲ್‌ ಗಾಂಧಿ ಅವರೇ ಏನಿದು ಗ್ಯಾರಂಟಿ?

    ಬೆಂಗಳೂರು: ದಯವಿಟ್ಟು ಗುಂಡಿಯನ್ನು ಮುಚ್ಚಿ ರಸ್ತೆ ಸಮಸ್ಯೆ ಬಗೆಹರಿಸಿ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಅವರು ಬಿಬಿಎಂಪಿಗೆ (BBMP) ಮನವಿ ಮಾಡಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ.

    ಹೌದು. ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರೋಡಿನ ಸರ್ವಿಸ್ ರಸ್ತೆಯ ವಿಡಿಯೋವನ್ನು ಸಾರ್ವಜನಿಕರು ನನಗೆ ಕಳಿಸಿದ್ದಾರೆ. ಬಿಬಿಎಂಪಿ ಅಥವಾ ಬಿಎಂಆರ್‌ಸಿಇಎಲ್‌ ಯಾರಾದ್ರೂ ಆಗಲಿ ದಯವಿಟ್ಟು ಗುಂಡಿಯನ್ನು ಮುಚ್ಚಿ ರಸ್ತೆ ದುರಸ್ಥಿ ಮಾಡಿ ಸಾರ್ವಜನಿಕರ ಸಮಸ್ಯೆಯನ್ನು ಪರಿಹರಿಸಿ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ: ಸಿಎಂ ಭರವಸೆ

    ರಸ್ತೆ ಇರುವ ಜಾಗ ಕೃಷ್ಣ ಬೈರೇಗೌಡರ ಕ್ಷೇತ್ರಕ್ಕೆ ಬರುತ್ತಿದೆ. ಹೀಗಿದ್ದರೂ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು ಈಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಆಗುತ್ತಿದೆ.

    ನರೇಂದ್ರ ಸಿಂಹ ಮೂರ್ತಿ ಎಂಬವರು, ಮಂತ್ರಿಗಳೇ ಇಷ್ಟು ಅಸಹಾಯಕರಾದರೆ ಹೇಗೆ? ಒಂದು ಫೋನ್ ಮಾಡಿದರೆ ಬಿಬಿಎಂಪಿ ಕಮಿಷನರ್ ನಿಮ್ಮ ಫೋನ್ ಸ್ವೀಕರಿಸುತ್ತಿದ್ದಾರೋ ಇಲ್ಲವೋ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ದೇಶ ಮೊದಲು.. ಭಾರತವನ್ನು ಬಲಪಡಿಸಲು ದೊಡ್ಡ ಸುಧಾರಣೆಗಳಿಗೆ ಬದ್ಧ: ಪ್ರಧಾನಿ ಮೋದಿ ಪ್ರತಿಜ್ಞೆ

    ನೀವು ರಾಜ್ಯದ ಮಂತ್ರಿಗಳು. ರಾಹುಲ್‌ ಗಾಂಧಿ ಅವರೇ ಏನಿದು ಗ್ಯಾರಂಟಿ? ಕಂದಾಯ ಸಚಿವರು ಬೆಂಗಳೂರಿನಲ್ಲಿ ಗುಂಡಿ ಬಿದ್ದ ರಸ್ತೆಯನ್ನು ಸರಿ ಮಾಡುವಂತೆ ಅಧಿಕಾರಿಗಳನ್ನು ಟ್ವಿಟ್ಟರ್‌ನಲ್ಲಿ ಮನವಿ ಮಾಡುತ್ತಿದ್ದಾರೆ.

    ತಮ್ಮದೇ ಸರ್ಕಾರದಲ್ಲಿ ತಾನೇ ಸಚಿವರಾಗಿದ್ದರು ಅಸಹಾಯಕತೆಯಿಂದ ಗುಂಡಿ ಮುಚ್ಚಿ ಎಂದು ಅಂಗಲಾಚುವ ದೈನಾಸಿ ಸ್ಥಿತಿ ಬಂದಿರುವುದು ಸರ್ಕಾರ ದುರಾವಸ್ಥೆ, ದುರಾಡಳಿತಕ್ಕೆ ಸಾಕ್ಷಿ ಆಗಿದೆ. ಗುಂಡಿ ಮುಚ್ಚಿ ಎಂದು ನೇರವಾಗಿ ಹೇಳಬೇಕಂದ್ರೆ ಹಣ ಇಲ್ಲ. ಅದಕ್ಕೆ ಜಾಲತಾಣದಲ್ಲಿ ಅಂಗಲಾಚುತ್ತಿದ್ದಾರೆ ಪಾಪ. ಸಚಿವರಿಗೆ ಹೀಗಾದ್ರೆ ಸಾಮಾನ್ಯರ ಕತೆ ಏನು ಎಂದು ಜನರು ಪ್ರಶ್ನಿಸುತ್ತಿದ್ದಾರೆ.

  • ಇಂದಿರಾ ಕ್ಯಾಂಟೀನ್‌ಗೆ ಡಿಜಿಟಲ್‌ ಸ್ಪರ್ಶ – ಇನ್ಮುಂದೆ ಆನ್‌ಲೈನ್‌ನಲ್ಲಿ ಊಟ ಬುಕ್ಕಿಂಗ್‌!

    ಇಂದಿರಾ ಕ್ಯಾಂಟೀನ್‌ಗೆ ಡಿಜಿಟಲ್‌ ಸ್ಪರ್ಶ – ಇನ್ಮುಂದೆ ಆನ್‌ಲೈನ್‌ನಲ್ಲಿ ಊಟ ಬುಕ್ಕಿಂಗ್‌!

    – ಅಕ್ರಮ ತಡೆ, ಗುಣಮಟ್ಟದ ಆಹಾರ ನೀಡಲು ಬಿಬಿಎಂಪಿ ಪ್ಲ್ಯಾನ್‌
    – ಎಲ್‌ಇಡಿ ಸ್ಕ್ರೀನ್‌ನಲ್ಲಿ ಊಟದ ಮೆನು ಪ್ರದರ್ಶನ

    ಬೆಂಗಳೂರು: ಇಂದಿರಾ ಕ್ಯಾಂಟೀನ್‌ಗಳನ್ನ (Indira Canteen) ಅಪ್‌ಗ್ರೇಡ್‌ ಮಾಡಲು ಬಿಬಿಎಂಪಿ (BBMP) ಮುಂದಾಗಿದೆ. ಬಡವರ ಹೊಟ್ಟೆ ತುಂಬಿಸೋ ಈ ಕ್ಯಾಂಟೀನ್‌ಗಳಿಗೆ ಡಿಜಿಟಲ್ ಟಚ್ ನೀಡಲು ಪಾಲಿಕೆ ಮುಂದಾಗಿದ್ದು, ಇನ್ಮುಂದೆ ಗ್ರಾಹಕರು ಎಲ್‌ಇಡಿ ಮಾದರಿಯ ಮಿಷಿನ್ ಮೂಲಕ ಇಂದಿರಾ ಕ್ಯಾಂಟೀನ್ ಊಟವನ್ನ ಬುಕ್ಕಿಂಗ್‌ ಮಾಡಬಹುದು.

    ಇಂದಿರಾ ಕ್ಯಾಂಟೀನ್‌ಗಳಿಗೆ ಡಿಜಿಟಲ್‌ ಸ್ಪರ್ಧ ನೀಡಲು ಮುಂದಾಗಿರುವ ಬಿಬಿಎಂಪಿ ಎಲ್‌ಇಡಿ ಮಾದರಿಯ ಮಿಷಿನ್‌ ಸ್ಕ್ರೀನ್‌ ಅಳವಡಿಸಿ, ಅದರಲ್ಲೇ ಊಟ ಬುಕ್‌ ಮಾಡುವ ವ್ಯವಸ್ಥೆಯನ್ನ ಜಾರಿಗೆ ತರಲು ಚಿಂತನೆ ನಡೆಸಿದೆ. ಪ್ರಾಥಮಿಕ ಹಂತವಾಗಿ ರಾಜರಾಜೇಶ್ವರಿ ನಗರ ವಲಯದಲ್ಲಿ 11 ಕ್ಯಾಂಟೀನ್‌ಗಳಲ್ಲಿ‌ ಅನುಷ್ಟಾನಗೊಳಿಸಲಾಗಿದೆ. ಯಾವ ಕ್ಯಾಂಟೀನ್‌ಗಳಲ್ಲಿ ಎಷ್ಟು ಊಟ (Indira Canteen Food) ಹೋಗಿದೆ? ಊಟದ ಗುಣಮಟ್ಟ ಹೇಗಿದೆ? ಅನ್ನೋದನ್ನ ತಕ್ಷಣಕ್ಕೆ ತಿಳಿಯಬಹುದು. ಈ ಮೂಲಕ ಊಟವನ್ನ ಪಾರ್ಸೆಲ್ ಮಾಡಿ ಸೇಲ್ ಮಾಡೋದು, ಕ್ವಾಲಿಟಿ ಇಲ್ಲ ಅನ್ನೋ ದೂರುಗಳನ್ನ ತಡೆಗಟ್ಟಬಹುದು. ತಾಂತ್ರಿಕತೆ ಅಭಿವೃದ್ಧಿಪಡಿಸುವುದು ಸರಿ ಆದ್ರೆ ಅನಕ್ಷರಸ್ಥರು ಹೇಗೆ ಇದನ್ನ ಆಪರೇಟ್ ಮಾಡ್ತಾರೆ. ಅವ್ರು ಹೇಗೆ ಊಟವನ್ನ ತೆಗೆದುಕೊಳ್ತಾರೆ? ಅನ್ನೋದನ್ನ ಕೆಲ ಗ್ರಾಹಕರು ಪ್ರಶ್ನೆ ಮಾಡ್ತಿದ್ದಾರೆ.

    ಬುಕ್ಕಿಂಗ್‌ ಕಾರ್ಯ ಹೇಗೆ?
    ಸೆಲ್ಫ್ ಕಿಯೋಕ್ಸ್ ಮಿಷಿನ್ ಅಳವಡಿಕೆಯಲ್ಲಿ ಊಟದ ಮೆನುವನ್ನ, ಮೊದ್ಲೇ ಪ್ರೊಗ್ರಾಮಿಂಗ್ ಮಾಡಲಾಗುತ್ತದೆ. ಮೆನುವಿನಲ್ಲಿದ್ದ ಯಾವ ಊಟ ಬೇಕೋ, ಆ ಊಟವನ್ನ ಆಯ್ಕೆ ಮಾಡಿಕೊಂಡ್ರೆ, ಕ್ಯಾಂಟೀನ್ ಸಿಬ್ಬಂದಿ ಕೊಡುತ್ತಾರೆ. ಇದಕ್ಕಿಂತ ಮೊದಲು ಮೂರು ತಂತ್ರಜ್ಞಾನಗಳನ್ನ ಬಳಸಿಕೊಂಡು ಟ್ರಯಲ್‌ ಟೆಸ್ಟ್ ಮಾಡಿದ್ರೂ, ಸಕ್ಸಸ್ ಆಗಿರಲಿಲ್ಲ. ಹೀಗಾಗಿ ಇದೀಗಾ ಹೊಸ ವ್ಯವಸ್ಥೆಗೆ ಪಾಲಿಕೆ ಮುಂದಾಗಿದೆ. ಐಟಿ ವಿಭಾಗಕ್ಕೆ ಈಗಾಗಲೇ ಕಡತ ಕಳುಹಿಸಿರುವ ಬಿಬಿಎಂಪಿ, ಈ ಹೊಸ ವ್ಯವಸ್ಥೆ ಜಾರಿಗೆ ತರಲು ಟೆಂಡರ್ ಕರೆಯೋದಕ್ಕೂ ಮುಂದಾಗಿದೆ.

    ಸೆಲ್ಫ್ ಕಿಯೋಕ್ಸ್ ಮಿಷಿನ್ ಹೇಗೆ ಕೆಲಸ ಮಾಡುತ್ತೆ?
    * ಸೆಲ್ಫ್ ಕಿಯೋಕ್ಸ್ ಮಿಷಿನ್‌ನಲ್ಲಿ ಊಟದ ಮೆನು ಸೇರಿ, ಯೋಜನೆಯ ಎಲ್ಲಾ ಮಹಿತಿಯನ್ನ ಮೊದಲೇ ಪ್ರೋಗ್ರಾಮಿಂಗ್‌ ಮಾಡಲಾಗುತ್ತೆ.
    * ಊಟವನ್ನ ರಿಸರ್ವ್ ಮಾಡಲು ಆಪರೇಟ್ ಮಾಡುವಾಗ ಗ್ರಾಹಕನ ಫೋಟೋ ಕ್ಲಿಕ್ಕಿಸುತ್ತೆ
    * ಒಬ್ಬ ವ್ಯಕ್ತಿಗೆ ಎಷ್ಟು ಊಟ ಕೊಡಬೇಕು ಅನ್ನೋದು ಮೊದಲೇ ನಮೂದು ಆಗಿರುತ್ತೆ
    * ಬೆಳಗ್ಗೆ ಉಪಹಾರ, ಮಧ್ಯಾಹ್ನ, ರಾತ್ರಿ ಊಟದ ಸಮಯದಲ್ಲಿ ಮಾತ್ರ ಇದು ಕಾರ್ಯಾಚರಣೆ ಮಾಡುತ್ತೆ
    * ಒಂದು ದಿನಕ್ಕೆ ಎಷ್ಟು ಊಟ ಸೇಲ್ ಆಗಿದೆ, ಊಟದ ಕ್ವಾಲಿಟಿಯನ್ನೂ ಇದು ತೋರಿಸುತ್ತದೆ
    * ಸೀಮಿತ ತಿಂಗಳವರೆಗೆ, ಊಟ ಖರೀದಿಸಿದ ಗ್ರಾಹಕರ ಮಾಹಿತಿಯ ಡೆಟಾ, ಬಿಬಿಎಂಪಿ ಸರ್ವರ್‌ನಲ್ಲಿ ನೊಂದಣಿಯಾಗುತ್ತೆ
    * ಎಷ್ಟು ಊಟ ಮಾರಾಟವಾಗಿದ್ಯೋ ಅಷ್ಟು ಹಣವನ್ನ ಟೆಂಡರ್ ದಾರರಿಗೆ ನೀಡಲು ಸಹಕಾರಿ. ಅಕ್ರಮ ತಡೆಗೆ ಅನುಕೂಲ

    ಡಿಜಿಟಲ್ ವ್ಯವಸ್ಥೆ ಮಾಡುವ ಉದ್ದೇಶ ಏನು?
    * ಮೂರು ಮುಖ್ಯ ಉದ್ದೇಶಗಳನ್ನಿಟ್ಟುಕೊಂಡು ಈ ವ್ಯವಸ್ಥೆ ಜಾರಿಗೆ ತರಲು ಬಿಬಿಎಂಪಿ ನಿರ್ಧರಿಸಿದೆ.
    * ಊಟ ಬಡಿಸೋದ್ರಲ್ಲಿ ಹೆಚ್ಚು ಕಡಿಮೆಯಾಗ್ತಿದೆ ಅನ್ನೋ ದೂರುಗಳನ್ನ ತಪ್ಪಿಸಲು
    * ಯಾವ ಕ್ಯಾಂಟೀನ್‌ಗಳು ಹೇಗೆ ಕಾರ್ಯಾಚರಣೆ ಮಾಡ್ತಿವೆ?
    * ರಿಪೋರ್ಟ್ ಜನರೇಶನ್ ಬಗ್ಗೆ ತಕ್ಷಣಕ್ಕೆ ಮಾಹಿತಿ ಪಡೆಯಬಹುದು. ಊಟ ಪಡೆದ ಗ್ರಾಹಕರ ಸಂಖ್ಯೆಯ ಮಾಹಿತಿಯನ್ನ ಸುಲಭವಾಗಿ ಪಡೆಯಬಹುದು ಅನ್ನೋ ಕಾರಣಕ್ಕೆ ಡಿಜಿಟಲ್‌ ಸ್ಪರ್ಧ ನೀಡಲಾಗುತ್ತಿದೆ.

  • ಸಿಸಿಟಿವಿ ಕಡ್ಡಾಯ – ಬೆಂಗಳೂರು ಪಿಜಿಗಳಿಗೆ ಬಿಡುಗಡೆ ಮಾಡಿದ ಮಾರ್ಗಸೂಚಿಯಲ್ಲಿ ಏನಿದೆ?

    ಸಿಸಿಟಿವಿ ಕಡ್ಡಾಯ – ಬೆಂಗಳೂರು ಪಿಜಿಗಳಿಗೆ ಬಿಡುಗಡೆ ಮಾಡಿದ ಮಾರ್ಗಸೂಚಿಯಲ್ಲಿ ಏನಿದೆ?

    ಬೆಂಗಳೂರು: ಕೋರಮಂಗಲ ಪಿಜಿಯಲ್ಲಿ (Koramangala PG) ಯುವತಿ ಹತ್ಯೆ ಬೆನ್ನಲ್ಲೆ ಪಿಜಿಗಳಿಗೆ ಬಿಬಿಎಂಪಿ (BBMP) ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.

    ಇನ್ನು ಮುಂದೆ ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ ಪ್ರಾರಂಭಿಸಲು ಉದ್ದೇಶಿಸಿರುವ ಪಿಜಿಗಳಿಗೆ ಮಂಜುರಾತಿ/ನವೀಕರಣ ಹಾಗೂ ಈಗಾಗಲೇ ಪರವಾನಿಗೆ ಪಡೆದು ಅಸ್ತಿತ್ವದಲ್ಲಿರುವ ಪೇಯಿಂಗ್ ಗೆಸ್ಟ್‌ಗಳಿಗೆ (Paying Guests) ಸಂಬಂಧಿಸಿದಂತೆ ಈ ಕೆಳಕಂಡ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು ಎಂದು ಸೂಚಿಸಲಾಗಿದೆ.

    1. ಪೇಯಿಂಗ್ ಗೆಸ್ಟ್‌ಗಳಲ್ಲಿನ ಎಲ್ಲಾ ಪ್ರವೇಶ/ನಿರ್ಗಮನ ದ್ವಾರ, ಮತ್ತು ಆವರಣದ ಸುತ್ತಮುತ್ತಲಿನ ಘಟನಾವಳಿಗಳನ್ನು ಚಿತ್ರೀಕರಿಸಲು ಸಿ.ಸಿ. ಟಿ.ವಿ. ಕ್ಯಾಮೆರಾಗಳನ್ನು ಅಳವಡಿಸಿರತಕ್ಕದ್ದು. ಪ್ರತಿಯೊಂದು ಸಿಸಿ ಟಿವಿ ಕ್ಯಾಮೆರಾದ (CCTV) ವೀಡಿಯೋ ಮತ್ತು ಫೋಟೇಜ್‌ಗಳನ್ನು 90 ದಿನಗಳವರೆಗೆ ಹಾರ್ಡ್‌ ವೇರ್ ಮತ್ತು ಸಾಫ್ಟ್‌ವೇರ್ ಬ್ಯಾಕಪ್ ಸ್ಟೋರೆಜ್‌ನ್ನು ಸಂರಕ್ಷಿಸಿಟ್ಟುಕೊಳ್ಳಬೇಕು.

    2. ವಸತಿ ಸಂಬಂಧಿತ ಕಟ್ಟಡ ನಿಯಮಗಳ ಪ್ರಕಾರ, ಪೇಯಿಂಗ್ ಗೆಸ್ಟ್‌ಗಳಲ್ಲಿ ಪ್ರತಿಯೊಬ್ಬ ನಿವಾಸಿಗೆ ವಾಸಕ್ಕೆ ತಲಾ 70 ಚದರ ಅಡಿಗಳ ಕನಿಷ್ಠ ಜಾಗವಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಕಟ್ಟಡದಲ್ಲಿ ಒದಗಿಸಲಾದ/ಲಭ್ಯವಿರುವ ಸೌಕರ್ಯಕ್ಕನುಗುಣವಾಗಿ ನಿರ್ಧಿಷ್ಟ ಸಂಖ್ಯೆಯ ನಿವಾಸಿಗಳ ವಾಸಕ್ಕೆ ಮಾತ್ರ ಪರವಾನಗಿಯನ್ನು ನೀಡಬೇಕು.

    3. ಪೇಯಿಂಗ್ ಗೆಸ್ಟ್‌ಗಳಲ್ಲಿ ವಾಸಿಸುವ ನಿವಾಸಿಗಳಿಗೆ ಸ್ವಚ್ಛ ಹಾಗೂ ನೈರ್ಮಲ್ಯತೆ ಹೊಂದಿರುವ ಸ್ನಾನಗೃಹಗಳು ಮತ್ತು ಶೌಚಾಲಯಗಳ ಸೇವೆಯನ್ನು ಒದಗಿಸಬೇಕು.

    4. ಪೇಯಿಂಗ್ ಗೆಸ್ಟ್‌ಗಳಲ್ಲಿ ಕಡ್ಡಾಯವಾಗಿ ಶುದ್ಧ ಕುಡಿಯುವ ನೀರಿನ ಸೌಲಭ್ಯವಿರತಕ್ಕದ್ದು. ಪ್ರತಿಯೊಬ್ಬ ನಿವಾಸಿಗೆ 135 LPCD ನೀರಿನ ಲಭ್ಯತೆ ಇರುವುದನ್ನು ಮಾಲೀಕರು/ಉದ್ದಿಮೆದಾರರು ಖಚಿತಪಡಿಸಿಕೊಳ್ಳಬೇಕು.

    5. ಪೇಯಿಂಗ್ ಗೆಸ್ಟ್‌ ಗಳಲ್ಲಿ ಉದ್ದಿಮೆದಾರರು ತಮ್ಮದೇ ಆದ ಅಡುಗೆಮನೆ ಹೊಂದಿದ್ದಲ್ಲಿ, ಪಾಲಿಕೆಯಿಂದ ಉದ್ದಿಮೆ ಪರವಾನಗಿ ನೀಡಿದ 3 ತಿಂಗಳ ಅವಧಿಯೊಳಗೆ ಕಡ್ಡಾಯವಾಗಿ FSSAI ಇಲಾಖೆಯಿಂದ ಲೈಸನ್ಸ್‌ನ್ನು ಪಡೆದುಕೊಳ್ಳಬೇಕು. ಇದನ್ನೂ ಓದಿ: ಶ್ರಾವಣ ಆದ್ಮೇಲೆ ಬಾಳು ಕೊಡ್ತೀನಿ ಅಂತ ಹೇಳಿ ಆಂಟಿಗೆ ವಂಚನೆ – ಪ್ರಜ್ವಲ್‌ ವಿರುದ್ಧ ದೂರು

    6. ಉದ್ದಿಮೆದಾರರು/ಮಾಲೀಕರು ಪೇಯಿಂಗ್ ಗೆಸ್ಟ್‌ಗಳಲ್ಲಿ ವಾಸಿಸುವ ನಿವಾಸಿಗಳ ಸುರಕ್ಷತಾ ದೃಷ್ಟಿಯಿಂದ ಕನಿಷ್ಟ ಪಕ್ಷ ಓರ್ವ ಸಿಬ್ಬಂದಿಯನ್ನಾದರೂ ಕಡ್ಡಾಯವಾಗಿ 24*7 ಸೇವೆಯಡಿಯಲ್ಲಿ ನಿಯೋಜಿಸಬೇಕು. ಇದನ್ನೂ ಓದಿ: ದತ್ತಪೀಠಕ್ಕೆ ಡ್ರೆಸ್ ಕೋಡ್ ತನ್ನಿ- ಜಿಲ್ಲಾಡಳಿತಕ್ಕೆ ಶಾಖಾದ್ರಿ ಕುಟುಂಬ ಮನವಿ

    7. ಪೇಯಿಂಗ್ ಗೆಸ್ಟ್ ಉದ್ದಿಮೆಗಳಿಗೆ ಪಾಲಿಕೆಯಿಂದ ವಾಣಿಜ್ಯ ಪರವಾನಿಗೆ ಪತ್ರ ವಿತರಿಸುವ ಮುನ್ನ ಉದ್ದೇಶಿತ ಕಟ್ಟಡದಲ್ಲಿ ಮಾಲೀಕರು ಅಗ್ನಿ ಸುರಕ್ಷತಾ ಕ್ರಮಗಳನ್ನು ಆಳವಡಿಸಿರುವ ಬಗ್ಗೆ ಸಕ್ಷಮ ಪ್ರಾಧಿಕಾರದಿಂದ ಅಧಿಕೃತ ಪ್ರಮಾಣ ಪತ್ರವನ್ನು ಪಡೆದುಕೊಂಡಿರಬೇಕು.

    8. ತುರ್ತು ಸೇವೆಗಳಿಗೆ ಸಂಬಂಧಿಸಿದಂತೆ, ಪೇಯಿಂಗ್ ಗೆಸ್ಟ್ ಕಟ್ಟಡದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಾಯವಾಣಿ ಸಂಖ್ಯೆ-1533 ಮತ್ತು ಪೋಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ:101 ಅನ್ನು ಪ್ರದರ್ಶಿಸುವ ಫಲಕವನ್ನು ಅಳವಡಿಸಿಕೊಳ್ಳಬೇಕು.

    9. ಪೇಯಿಂಗ್ ಗೆಸ್ಟ್‌ಗಳಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ(First Aid Kits)ಗಳನ್ನು ಇಟ್ಟುಕೊಂಡಿರಬೇಕು.

    10. ಪೇಯಿಂಗ್ ಗೆಸ್ಟ್‌ನ ಮಾಲೀಕರು ಘನತ್ಯಾಜ್ಯವನ್ನು ಸಮರ್ಪಕವಾಗಿ ವಿಂಗಡಿಸಿ, ವಿಲೇವಾರಿ ಮಾಡಬೇಕು.

     

  • ಪಿಜಿಯಲ್ಲಿ ಯುವತಿ ಹತ್ಯೆ ಬಳಿಕ ಎಚ್ಚೆತ್ತ ಬಿಬಿಎಂಪಿ – ಹೊಸ ಗೈಡ್‌ಲೈನ್ಸ್ ಬಿಡುಗಡೆ

    ಪಿಜಿಯಲ್ಲಿ ಯುವತಿ ಹತ್ಯೆ ಬಳಿಕ ಎಚ್ಚೆತ್ತ ಬಿಬಿಎಂಪಿ – ಹೊಸ ಗೈಡ್‌ಲೈನ್ಸ್ ಬಿಡುಗಡೆ

    ಬೆಂಗಳೂರು: ಕೋರಮಂಗಲ ಪಿಜಿಯಲ್ಲಿ (Paying Guest) ಯುವತಿಯ ಹತ್ಯೆಯಾದ ಬೆನ್ನಲ್ಲೇ ಪಿಜಿಗಳಿಗೆ ಬಿಬಿಎಂಪಿ (BBMP) ಹೊಸ ಗೈಡ್‌ಲೈನ್ಸ್ ಬಿಡುಗಡೆ ಮಾಡಿದೆ.

    ಬಿಬಿಎಂಪಿ- 2020ರ ಕಾಯ್ದೆಯಡಿ, ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ ಪ್ರಾರಂಭಿಸಲು ಉದ್ದೇಶಿಸಿರುವ ಪೇಯಿಂಗ್ ಗೆಸ್ಟ್‌ಗಳಿಗೆ ಪರವಾನಿಗೆ ಮಂಜೂರಾತಿ, ನವೀಕರಣ ಹಾಗೂ ಈಗಾಗಲೇ ಪರವಾನಿಗೆ ಪಡೆದು ಅಸ್ತಿತ್ವದಲ್ಲಿರುವ ಪಿಜಿಗಳಿಗೆ ಸಂಬಂಧಿಸಿದಂತೆ ಜಾರಿಗೆ ತಂದಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಪಾಲಿಕೆ ತಿಳಿಸಿದೆ.

    ಹೊಸ ನಿಯಮಗಳು
    ಪೇಯಿಂಗ್ ಗೆಸ್ಟ್‌ಗಳಲ್ಲಿ ಎಲ್ಲಾ ಪ್ರವೇಶ/ನಿರ್ಗಮನ ದ್ವಾರ ಮತ್ತು ಆವರಣದ ಸುತ್ತಮುತ್ತಲಿನ ಘಟನಾವಳಿಗಳನ್ನು ಚಿತ್ರೀಕರಿಸಲು ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿರತಕ್ಕದ್ದು. ಪ್ರತಿಯೊಂದು ಸಿ.ಸಿ ಟಿ.ವಿ. ಕ್ಯಾಮೆರಾದ ವೀಡಿಯೋ ಮತ್ತು ಫೂಟೇಜ್‍ಗಳನ್ನು 90 ದಿನಗಳವರೆಗೆ ಹಾರ್ಡ್ ವೇರ್ &  ಸಾಫ್ಟ್‌ವೇರ್ ಬ್ಯಾಕಪ್ ಸ್ಟೋರೆಜ್‍ನ್ನು ಸಂರಕ್ಷಿಸತಕ್ಕದ್ದು. ವಸತಿ ಸಂಬಂಧಿತ ಕಟ್ಟಡ ನಿಯಮಗಳ ಪ್ರಕಾರ, ಪ್ರತಿಯೊಬ್ಬ ನಿವಾಸಿಗೆ ವಾಸಕ್ಕೆ ತಲಾ 70 ಚದರ ಅಡಿಗಳ ಕನಿಷ್ಠ ಜಾಗವಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಕಟ್ಟಡದಲ್ಲಿ ಒದಗಿಸಲಾದ/ಲಭ್ಯವಿರುವ ಸೌಕರ್ಯಕ್ಕನುಗುಣವಾಗಿ ನಿರ್ಧಿಷ್ಟ ಸಂಖ್ಯೆಯ ನಿವಾಸಿಗಳ ವಾಸಕ್ಕೆ ಮಾತ್ರ ಪರವಾನಗಿಯನ್ನು ನೀಡತಕ್ಕದ್ದು. ಪೇಯಿಂಗ್ ಗೆಸ್ಟ್‌ಗಳಲ್ಲಿ ವಾಸಿಸುವ ನಿವಾಸಿಗಳಿಗೆ ಸ್ವಚ್ಛ ಹಾಗೂ ನೈರ್ಮಲ್ಯತೆ ಹೊಂದಿರುವ ಸ್ನಾನಗೃಹಗಳು ಮತ್ತು ಶೌಚಾಲಯಗಳ ಸೇವೆಯನ್ನು ಒದಗಿಸುವಂತೆ ಬಿಬಿಎಂಪಿ ತಿಳಿಸಿದೆ.

    ಕಡ್ಡಾಯವಾಗಿ ಶುದ್ಧ ಕುಡಿಯುವ ನೀರಿನ ಸೌಲಭ್ಯವಿರತಕ್ಕದ್ದು. ಪ್ರತಿಯೊಬ್ಬರಿಗೂ 135 ಎಲ್‍ಪಿಸಿಡಿ ನೀರಿನ ಲಭ್ಯತೆ ಇರುವುದನ್ನು ಮಾಲೀಕರು/ಉದ್ದಿಮೆದಾರರು ಖಚಿತಪಡಿಸಿಕೊಳ್ಳತಕ್ಕದ್ದು. ಉದ್ದಿಮೆದಾರರು ತಮ್ಮದೇ ಆದ ಅಡುಗೆಮನೆ ಹೊಂದಿದ್ದಲ್ಲಿ, ಪಾಲಿಕೆಯಿಂದ ಉದ್ದಿಮೆ ಪರವಾನಗಿ ನೀಡಿದ 03 ತಿಂಗಳ ಅವಧಿಯೊಳಗೆ ಕಡ್ಡಾಯವಾಗಿ ಎಫ್‍ಎಸ್‍ಎಸ್‍ಎಐ ಇಲಾಖೆಯಿಂದ ಲೈಸನ್ಸ್ ಪಡೆದುಕೊಳ್ಳತಕ್ಕದ್ದು. ಉದ್ದಿಮೆದಾರರು/ಮಾಲೀಕರು ಪಿಜಿಗಳಲ್ಲಿ ವಾಸಿಸುವ ನಿವಾಸಿಗಳ ಸುರಕ್ಷತಾ ದೃಷ್ಟಿಯಿಂದ ಕನಿಷ್ಟ ಪಕ್ಷ 01 ಸಿಬ್ಬಂದಿಯನ್ನಾದರೂ ಕಡ್ಡಾಯವಾಗಿ 24*7 ಸೇವೆಯಡಿಯಲ್ಲಿ ನಿಯೋಜಿಸುವಂತೆ ಪಾಲಿಕೆ ತಿಳಿಸಿದೆ.

    ಪೇಯಿಂಗ್ ಗೆಸ್ಟ್ ಉದ್ದಿಮೆಗಳಿಗೆ ಪಾಲಿಕೆಯಿಂದ ವಾಣಿಜ್ಯ ಪರವಾನಿಗೆ ಪತ್ರ ವಿತರಿಸುವ ಮುನ್ನ ಉದ್ದೇಶಿತ ಕಟ್ಟಡದಲ್ಲಿ ಮಾಲೀಕರು ಅಗ್ನಿ ಸುರಕ್ಷತಾ ಕ್ರಮಗಳನ್ನು ಆಳವಡಿಸಿರುವ ಬಗ್ಗೆ ಸಕ್ಷಮ ಪ್ರಾಧಿಕಾರದಿಂದ ಅಧಿಕೃತ ಪ್ರಮಾಣ ಪತ್ರವನ್ನು ಪಡೆದುಕೊಂಡಿರುವುದನ್ನು ಖಚಿತಪಡಿಸಿಕೊಳ್ಳತಕ್ಕದ್ದು. ತುರ್ತು ಸೇವೆಗಳಿಗೆ ಸಂಬಂಧಿಸಿದಂತೆ, ಪೇಯಿಂಗ್ ಗೆಸ್ಟ್ ಕಟ್ಟಡದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಾಯವಾಣಿ ಸಂಖ್ಯೆ-1533 ಮತ್ತು ಪೊಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ:101 ಅನ್ನು ಪ್ರದರ್ಶಿಸುವ ಫಲಕವನ್ನು ಅಳವಡಿಸಿರುವುದನ್ನು ಖಚಿತಪಡಿಸಿಕೊಳ್ಳಟ್ಟಿದ್ದು. ಪ್ರಥಮ ಚಿಕಿತ್ಸಾ ಪೆಟ್ಟಿಗೆ ಗಳನ್ನು ಆಳವಡಿಸಿರತಕ್ಕದ್ದು. ಮಾಲೀಕರು ಘನತ್ಯಾಜ್ಯವನ್ನು ಸಮರ್ಪಕವಾಗಿ ವಿಂಗಡಿಸಿ, ವಿಲೇವಾರಿಗೊಳಸಲು ಕ್ರಮವಹಿಸುವಂತೆ ಪಾಲಿಕೆ ಸೂಚಿಸಿದೆ.

    ಈ ನಿಯಮಗಳನ್ನು ಪಾಲಿಕೆ ಬಿಡುಗಡೆ ಮಾಡಿದ್ದು, ನಿಯಮ ಪಾಲಿಸುವಂತೆ‌ ಪಿಜಿಗಳಿಗೆ ಪಾಲಿಕೆ ಖಡಕ್ ಸೂಚನೆ ನೀಡಿದೆ.

  • ಬಿಬಿಎಂಪಿ ಮೈದಾನದಲ್ಲಿ ಖಾಸಗಿ ಕಂಪನಿಯ ಕಂಟ್ರಾಕ್ಟರ್ ದರ್ಬಾರ್!

    ಬಿಬಿಎಂಪಿ ಮೈದಾನದಲ್ಲಿ ಖಾಸಗಿ ಕಂಪನಿಯ ಕಂಟ್ರಾಕ್ಟರ್ ದರ್ಬಾರ್!

    ಬೆಂಗಳೂರು: ಬಿಬಿಎಂಪಿ (BBMP) ಜಾಗವನ್ನ ಯಾರು ಬೇಕಾದ್ರೂ ಹೇಗೆ ಬೇಕಾದ್ರೂ ಬಳಸಿಕೊಳ್ಳಬಹುದು. ಯಾಕೆಂದರೆ ವರ್ಷಗಳ ಕಾಲ ಖಾಸಗಿಯವರು ಅಕ್ರಮವಾಗಿ ಬಳಸಿದರೂ ತನಗೂ ಇದಕ್ಕೂ ಸಂಬಂಧವಿಲ್ಲ ಎನ್ನುವಂತೆ ವರ್ತಿಸಿದೆ.

    ವಾರ್ಡ್ ನಂಬರ್ 12 ರ ಶೆಟ್ಟಿಹಳ್ಳಿ ಬಳಿಯ ಬಿಬಿಎಂಪಿ ಆಟದ ಮೈದಾನವನ್ನ (Ground) ಕಟ್ಟಡ ಸಾಮಾಗ್ರಿಗಳ ಹಾಗೂ ಕೆಲಸಗಾರರಿಗೆ ಟೆಂಟ್ ಹಾಕಿಕೊಡಲಾಗಿದೆ. ಅದೂ ಕಳೆದ ಎರಡು ವರ್ಷಗಳಿಂದ. ಇದರಿಂದ ರೋಸಿಹೋಗಿದ್ದ ಸ್ಥಳಿಯರು ಬಿಬಿಎಂಪಿ ಅಧಿಕಾರಿಗಳು ಹಾಗೂ ಖಾಸಗಿ ಕಂಟ್ರಾಕ್ಟರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಬಿಬಿಎಂಪಿ ಆಟದ ಮೈದಾನವನ್ನೇ ಅಕ್ರಮವಾಗಿ ಬಳಸಿಕೊಳ್ಳುತ್ತಿರುವ ಖಾಸಗಿ ಗುತ್ತಿಗೆದಾರನನ್ನು ಸಂಪರ್ಕಿಸಿದರೆ ಶಾಸಕರ ಅನುಮತಿ ಪಡೆದಿದ್ದೇನೆ ಎಂದು ಎಂದು ಕಥೆ ಕಟ್ಟಿದ್ದ. ಈ ಬಗ್ಗೆ ದಾಸರಹಳ್ಳಿ ಶಾಸಕರಾದ ಮುನಿರಾಜು (Muniraju) ಅವರನ್ನು ಪಬ್ಲಿಕ್ ಟಿವಿ ಕೇಳಿದಾಗ ಅವನ್ಯಾರೋ ಫ್ರಾಡ್, ನಾನು ಯಾರಿಗೂ ಹೇಳಿಲ್ಲ. ನಾನೇ ಖಾಲಿ ಮಾಡಿಸಿ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಹೇಳಿದ್ದೇನೆ ಆದರೂ ಖಾಲಿ ಮಾಡಿಲ್ಲ. ಇನ್ನೊಂದು ವಾರದಲ್ಲಿ ಖಾಲಿ ಮಾಡಿ ಮೈದಾನವನ್ನ ಸ್ಥಳಿಯರಿಗೆ ಬಿಟ್ಟುಕೊಡದೇ ಹೋದರೆ ಕಟ್ಟಡ ಸಾಮಾಗ್ರಿಗಳನ್ನ ನಾನೇ ಹೊರಗೆ ಹಾಕಿಸುತ್ತೇನೆ ಎಂದರು. ಇದನ್ನೂ ಓದಿ: Wayanad landslides | ಸಂತ್ರಸ್ತರಿಗೆ 15 ಕೋಟಿ, 300 ಮನೆ ನೆರವು ನೀಡಲು ಮುಂದಾದ ಬೆಂಗ್ಳೂರು ಮೂಲದ ಆರೋಪಿ

    ಒಟ್ಟಾರೆ ಕಳೆದ ಎರಡು ವರ್ಷಗಳಿಂದ ಸಹಿಸಿಕೊಂಡು ಇದ್ದ ಸಾರ್ವಜನಿಕರು ಕೊನೆಗೆ ರೊಚ್ಚಿಗೆದ್ದು ತಮ್ಮ ಬಿಬಿಎಂಪಿ ಮೈದಾನ ಉಳಿಸಿಕೊಳ್ಳಲು ಮುಂದಾಗಿದ್ದಾರೆ. ಇದಕ್ಕೆ ಸ್ಥಳೀಯ ಶಾಸಕರೂ ಗಡುವು ಕೊಟ್ಟಿದ್ದಾರೆ.

     

  • Dengue Alert: ಒಂದು ವರ್ಷದೊಳಗಿನ 10 ಮಕ್ಕಳಿಗೆ ಡೆಂಗ್ಯೂ – ಪ್ರಕರಣಗಳ ಸಂಖ್ಯೆ 19 ಸಾವಿರಕ್ಕೆ ಏರಿಕೆ

    Dengue Alert: ಒಂದು ವರ್ಷದೊಳಗಿನ 10 ಮಕ್ಕಳಿಗೆ ಡೆಂಗ್ಯೂ – ಪ್ರಕರಣಗಳ ಸಂಖ್ಯೆ 19 ಸಾವಿರಕ್ಕೆ ಏರಿಕೆ

    ಬೆಂಗಳೂರು: ರಾಜ್ಯದಾದ್ಯಂತ ಡೆಂಗ್ಯೂ (Dengue Case) ಆರ್ಭಟ ಮುಂದುವರಿದಿದೆ. ಇಲ್ಲಿವರೆಗೆ ಡೆಂಗ್ಯೂಗೆ 10 ಮಂದಿ ಬಲಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 19 ಸಾವಿರಕ್ಕೆ ಏರಿಕೆಯಾಗಿದೆ.

    ರಾಜ್ಯದಲ್ಲಿ 2,406 ಪ್ರಕರಣಗಳು ಸಕ್ರಿಯವಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಕಳೆದ 24 ಗಂಟೆಯಲ್ಲಿ 337 ಪ್ರಕರಣಗಳು ದಾಖಲಾಗಿದೆ. ಅದರಲ್ಲಿ ಒಂದು ವರ್ಷದೊಳಗಿನ 10 ಮಕ್ಕಳಲ್ಲಿ ಡೆಂಗ್ಯೂ ಧೃಡಪಟ್ಟಿದೆ. ಇದನ್ನೂ ಓದಿ: ದಲಿತರಿಗೆ ಸೇರಬೇಕಾದ 68 ಎಕರೆ ಜಮೀನನ್ನ ಡಿಕೆಶಿ ಲಪಟಾಯಿಸಿದ್ದಾರೆ – ಹೆಚ್‌ಡಿಕೆ ಬಾಂಬ್‌

    ಇಲ್ಲಿಯವರೆಗೆ 1 ವರ್ಷದೊಳಗಿನ 360 ಮಕ್ಕಳಲ್ಲಿ, 1 ರಿಂದ 18 ವರ್ಷದ 6,863 ಮಕ್ಕಳಲ್ಲಿ ಮತ್ತು 18 ವರ್ಷ ಮೇಲ್ಪಟ್ಟ 12,090 ಜನರಲ್ಲಿ ಡೆಂಗ್ಯೂ ಪತ್ತೆಯಾಗಿದೆ. ಇದನ್ನೂ ಓದಿ: 2ನೇ ದಿನಕ್ಕೆ ಕಾಲಿಟ್ಟ ದೋಸ್ತಿ ನಾಯಕರ ಪಾದಯಾತ್ರೆ; ಇದು ಹಗರಣಗಳ ಕೂಪ ಅಂತ ವಿಜಯೇಂದ್ರ ವಾಗ್ದಾಳಿ

    ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ ಕಳೆದ 24 ಗಂಟೆಯಲ್ಲಿ 123 ಡೆಂಗ್ಯೂ ಪ್ರಕರಣಗಳು ದಾಖಲಾಗಿದೆ. ಇಲ್ಲಿಯವರೆಗೆ ಪಾಲಿಕೆ ವ್ಯಾಪ್ತಿಯಲ್ಲಿ 8,800 ಪ್ರಕರಣಗಳು ಪತ್ತೆಯಾಗಿದ್ದು, ಮೂವರು ಡೆಂಗ್ಯೂಗೆ ಬಲಿಯಾಗಿದ್ದಾರೆ. ಇದನ್ನೂ ಓದಿ: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಭೀಕರ ಅಪಘಾತ – ಓರ್ವ ಸಾವು

  • ಪಂಚೆಯುಟ್ಟ ರೈತನಿಗೆ ಜಿ.ಟಿ ಮಾಲ್‌ ಅಪಮಾನ ಪ್ರಕರಣ; ಮಾಲ್‌ಗಳಿಗೆ ಬಿಬಿಎಂಪಿ ಹೊಸ ಮಾರ್ಗಸೂಚಿ

    ಪಂಚೆಯುಟ್ಟ ರೈತನಿಗೆ ಜಿ.ಟಿ ಮಾಲ್‌ ಅಪಮಾನ ಪ್ರಕರಣ; ಮಾಲ್‌ಗಳಿಗೆ ಬಿಬಿಎಂಪಿ ಹೊಸ ಮಾರ್ಗಸೂಚಿ

    – ಭಾಷೆ, ಜಾತಿ, ಜನಾಂಗ, ಧರ್ಮ, ಉಡುಪು ಮತ್ತು ಜನ್ಮಸ್ಥಳ ಆಧಾರದಲ್ಲಿ ತಾರತಮ್ಯ ಮಾಡದಂತೆ ನಿರ್ದೇಶನ
    – ರೈತನಿಗೆ ಅಪಮಾನದಂಥ ಪ್ರಕರಣ ಮರುಕಳಿಸಿದ್ರೆ ಕಾನೂನು ಕ್ರಮದ ಎಚ್ಚರಿಕೆ

    ಬೆಂಗಳೂರು: ಪಂಚೆಯುಟ್ಟಿದ್ದ ರೈತನಿಗೆ ಜಿಟಿ ಮಾಲ್‌ (GT Mall) ಅಪಮಾನ ಮಾಡಿದ್ದು ರಾಜ್ಯಾದ್ಯಂತ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಇದರ ಬೆನ್ನಲ್ಲೇ ಮಾಲ್‌ಗಳಿಗೆ ಬಿಬಿಎಂಪಿ (BBMP) ಮಾರ್ಗಸೂಚಿ ಬಿಡುಗಡೆ ಮಾಡಿದೆ.

    ಬಿಬಿಎಂಪಿ ವ್ಯಾಪ್ತಿಗೆ ಬರುವ ಎಲ್ಲಾ ವಾಣಿಜ್ಯ ಸಮುಚ್ಛಯಗಳು ಹಾಗೂ ಇತರೆ ಅಂಗಡಿಗಳ ಮಾಲೀಕರಿಗೆ ಮಾರ್ಗಸೂಚಿ ಹೊರಡಿಸಲಾಗಿದೆ. ಇದನ್ನೂ ಓದಿ: ಪಂಚೆಯುಟ್ಟ ಬಂದಿದ್ದ ರೈತನಿಗೆ ಪ್ರವೇಶ ನಿರಾಕರಿಸಿ ಅವಮಾನಿಸಿದ್ದ ಸಿಬ್ಬಂದಿಯಿಂದ ಕ್ಷಮೆಯಾಚನೆ

    ಸಾರ್ವಜನಿಕರಿಗೆ ಪ್ರವೇಶ ಸಂದರ್ಭದಲ್ಲಿ ಭಾಷೆ, ಜಾತಿ, ಜನಾಂಗ, ಧರ್ಮ, ಉಡುಪು ಮತ್ತು ಜನ್ಮಸ್ಥಳ ಆಧಾರದಲ್ಲಿ ತಾರತಮ್ಯ ಮಾಡಬಾರದು. ಎಲ್ಲಾ ವಾಣಿಜ್ಯ ಸಮುಚ್ಚಯಗಳು ಉಡುಪಿನ ಆಧಾರದ ಮೇಲೆ ಸಾರ್ವಜನಿಕರಿಗೆ ಪ್ರವೇಶ ನಿರಾಕರಣೆ ಮಾಡದಂತೆ ಭದ್ರತಾ ಸಿಬ್ಬಂದಿಗೆ ಸೂಚಿಸಬೇಕು ಎಂದು ಸೂಚಿಸಿದೆ.

    ರೈತನಿಗೆ ಅಪಮಾನ ಮಾಡಿದ ರೀತಿಯ ಪ್ರಕರಣಗಳು ಮರುಕಳಿಸಿದರೆ ಪರವಾನಗಿ ರದ್ದುಗೊಳಿಸಲಾಗುವುದು. ಜೊತೆಗೆ ಭಾರತೀಯ ನ್ಯಾಯ ಸಂಹಿತೆ ಅಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ರಾಜ್ಯದ ಎಲ್ಲಾ ಮಾಲ್‌ಗಳಿಗೂ ಮಾರ್ಗಸೂಚಿ: ಡಿಕೆಶಿ ಘೋಷಣೆ