Tag: bbmp

  • ಡೆಂಗ್ಯೂ ಹೆಚ್ಚಳಕ್ಕೆ ಹೈಕೋರ್ಟ್ ಕಳವಳ – ಸುಮೋಟೋ ಕೇಸ್ ದಾಖಲು

    ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ (Dengue fever) ಪ್ರಕರಣ ಹೆಚ್ಚಳಕ್ಕೆ ಹೈಕೋರ್ಟ್ (High Court) ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ಸಂಬಂಧ ನ್ಯಾಯಾಲಯ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡು, ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಆರೋಗ್ಯ ಇಲಾಖೆಯ ಕಾರ್ಯದರ್ಶಿಗೆ ತುರ್ತು ನೋಟಿಸ್ ಜಾರಿಗೊಳಿಸಿದೆ.

    ಬೆಂಗಳೂರು (Bengaluru )ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಈ ಬಗ್ಗೆ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಜು.23ರ ಒಳಗೆ ಉತ್ತರಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆಯ ಕಾರ್ಯದರ್ಶಿ ಹಾಗೂ ಬಿಬಿಎಂಪಿಗೆ (BBMP) ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

    ಮುಖ್ಯ ನ್ಯಾ.ಎನ್.ವಿ ಅಂಜಾರಿಯಾ ನೇತೃತ್ವದ ಪೀಠ ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದು, ಅಧಿಕಾರಿಗಳಿಗೆ ಪೀಠ ಕೆಲವು ಪ್ರಮುಖ ಪ್ರಶ್ನೆಗಳನ್ನು ಇಟ್ಟಿದೆ. ಈ ಪ್ರಶ್ನೆಗಳಿಗೆ ನಿಗದಿತ ಸಮಯದಲ್ಲಿ ಉತ್ತರಿಸುವಂತೆ ಕೋರ್ಟ್ ಸೂಚಿಸಿದೆ.

    ಹೈಕೋರ್ಟ್ ನೋಟಿಸ್‍ನಲ್ಲೇನಿದೆ?
    1.ಬೆಂಗಳೂರು ಹಾಗೂ ರಾಜ್ಯದ ಇತರ ಜಿಲ್ಲೆಗಳಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ತೆಗೆದುಕೊಂಡ ಕ್ರಮಗಳೇನು?
    2.ಬೆಂಗಳೂರು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆಯೇ?
    3.ಒದಗಿಸಿರುವ ಮೂಲಸೌಕರ್ಯಗಳ ಮಾಹಿತಿ
    4.ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಕೈಗೊಂಡ ಕ್ರಮಗಳೇನು?
    5.ಸೊಳ್ಳೆಗಳ ಉತ್ಪತ್ತಿ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ.
    ಈ ಸಂಬಂಧ ಸಂಪೂರ್ಣ ಮಾಹಿತಿ ಒದಗಿಸುವುದಾಗಿ ಎಜಿ ಶಶಿಕಿರಣ್ ಶೆಟ್ಟಿ ಹೈಕೋರ್ಟ್‍ಗೆ ಉತ್ತರಿಸಿದ್ದಾರೆ.

  • ಕೆಂಗೇರಿಯಲ್ಲಿ ತಡೆಗೋಡೆಗೆ ಬೈಕ್ ಡಿಕ್ಕಿ – ನಾಪತ್ತೆಯಾಗಿದ್ದ ಯುವಕನ ಶವ ರಾಜಕಾಲುವೆಯಲ್ಲಿ ಪತ್ತೆ

    ಕೆಂಗೇರಿಯಲ್ಲಿ ತಡೆಗೋಡೆಗೆ ಬೈಕ್ ಡಿಕ್ಕಿ – ನಾಪತ್ತೆಯಾಗಿದ್ದ ಯುವಕನ ಶವ ರಾಜಕಾಲುವೆಯಲ್ಲಿ ಪತ್ತೆ

    ಬೆಂಗಳೂರು: ಕೆಂಗೇರಿಯ (Kengeri) ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ (Bike Accident) ವೃಷಭಾವತಿ ಕಾಲುವೆಗೆ ಬಿದ್ದಿದ್ದ ಬೈಕ್ ಸವಾರನ ಮೃತದೇಹ ಪತ್ತೆಯಾಗಿದೆ.

    ಮೃತ ಯುವಕನನ್ನು ಬ್ಯಾಟರಾಯನಪುರದ ಹೇಮಂತ್ ಎಂದು ಗುರುತಿಸಲಾಗಿದೆ. ಯುವಕ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಎಂದಿನಂತೆ ಕೆಲಸ ಮುಗಿಸಿ, ಶುಕ್ರವಾರ ರಾತ್ರಿ 10:30ರ ವೇಳೆಗೆ ಮನೆಗೆ ತೆರಳುತ್ತಿದ್ದಾಗ ಬೈಕ್ ಡಿವೈಡರ್‌ಗೆ ಡಿಕ್ಕಿಯಾಗಿ ರಾಜಕಾಲುವೆಗೆ ಬಿದ್ದಿದ್ದ. ಇದೀಗ ಆತನ ಶವ ಪತ್ತೆಯಾಗಿದೆ. ಇದನ್ನೂ ಓದಿ: ಬೆಂಗಳೂರಿನ ಚೆನ್ನಸಂದ್ರ ಅರಣ್ಯ ಪ್ರದೇಶದಲ್ಲಿ ವನಮಹೋತ್ಸವ

    ನಾಪತ್ತೆಯಾಗಿದ್ದ ಹೇಮಂತ್‍ಗಾಗಿ ಮೈಸೂರು ರಸ್ತೆಯ ಯೂನಿವರ್ಸಿಟಿ ಗೇಟ್‍ನಿಂದ ಕೆಂಗೇರಿ ಮಾರ್ಗದಲ್ಲಿ ಶೋಧ ನಡೆಸಲಾಗಿತ್ತು. ಆತನ ಶವಕ್ಕಾಗಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸುಮಾರು 20 ಗಂಟೆಗೂ ಹೆಚ್ಚು ಕಾಲ ಹುಡುಕಾಟ ನಡೆಸಿದ್ದರು. ರಾಜಕಾಲುವೆ ಬಳಿ ಇದ್ದ ಗುಂಡಿಯಿಂದ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

    ಈ ಅಪಘಾತ ಸಂಭವಿಸಿದ್ದ ಬೆನ್ನಲ್ಲೇ ಎಚ್ಚೆತ್ತಿರುವ ಬಿಬಿಎಂಪಿ (BBMP) ಫ್ಲೈಓವರ್‌ಗಳ ಮೇಲಿನ ತಡೆಗೋಡೆಗಳ ಎತ್ತರವನ್ನು ಹೆಚ್ಚಿಸುವ ಬಗ್ಗೆ ಚರ್ಚೆ ನಡೆಸಿದೆ. ಇದನ್ನೂ ಓದಿ: ಬಬಲೇಶ್ವರ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ ಬಾಯ್ಲರ್ ಸ್ಫೋಟ

  • ಇನ್ಮುಂದೆ ಎಲ್ಲೆಂದರಲ್ಲಿ ಕಸ ಬಿಸಾಡಿದ್ರೆ 500ರೂ. ದಂಡ- ಬಿಬಿಎಂಪಿ ಆಯುಕ್ತ ಎಚ್ಚರಿಕೆ

    ಇನ್ಮುಂದೆ ಎಲ್ಲೆಂದರಲ್ಲಿ ಕಸ ಬಿಸಾಡಿದ್ರೆ 500ರೂ. ದಂಡ- ಬಿಬಿಎಂಪಿ ಆಯುಕ್ತ ಎಚ್ಚರಿಕೆ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಗ್ಯಾರಂಟಿ ಸರ್ಕಾರದಿಂದ ಮತ್ತೊಂದು ದಂಡ ಪ್ರಯೋಗ ಮಾಡಲಾಗಿದೆ.

    ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ (Tushar Girinath), ಎಲ್ಲೆಂದರಲ್ಲಿ ಕಸ ಬಿಸಾಡುವವರಿಗೆ ದಂಡ ಪ್ರಯೋಗ ಮಾಡಲಾಗುತ್ತದೆ. ಎಲ್ಲೆಂದರಲ್ಲಿ ಕಸ ಮತ್ತು ಸ್ವಚ್ಛತೆ ಕಾಪಾಡದವರಿಗೆ ದಂಡದ ಮೊತ್ತ 50 ರೂ. ನಿಂದ 500 ರೂ. ವರೆಗೆ ಏರಿಕೆ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

    ಈ ಕುರಿತು ಆರೋಗ್ಯ ಇಲಾಖೆ ಸದ್ಯದಲ್ಲೇ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಿಗೂ ಆದೇಶ ಹೊರಡಿಸಲಿದೆ. ನಿನ್ನೆ ಆರೋಗ್ಯ ಸಚಿವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದರು. ಇದನ್ನೂ ಓದಿ: ಸಿಎಂ ಸರ್ಕಾರಕ್ಕೆ ಸೈಟ್ ವಾಪಸ್ ಕೊಡದಿದ್ದರೆ‌ ಭ್ರಷ್ಟಾಚಾರ ಚಿರಸ್ಥಾಯಿಯಾಗಿ ಉಳಿಯುತ್ತೆ: ಹೆಚ್. ವಿಶ್ವನಾಥ್

    ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲಾಗಿದೆ. ನಾಲ್ಕೈದು ದಿನಗಳಿಗೆ ನೀರು ಬದಲಾಯಿಸಬೇಕು. ರೈಟ್ ಅಪ್ ಕೊಡಿ ಅಂದಿದ್ದಾರೆ. ಆರ್‍ಡಬ್ಲ್ಯೂಎಸ್‍ಗೆ ಸಾಫ್ಟ್ ಕಾಪಿ ಕಳುಹಿಸಿದ್ದೀವಿ. ಆಶಾ ಕಾರ್ಯಕರ್ತರು ಬಂದಾಗ ಆರ್ ಡಬ್ಲ್ಯೂಡಿ ಅಂದರೆ ಅಪಾರ್ಟ್‍ಮೆಂಟ್ ನಿವಾಸಿಗಳು ಸ್ಪಂದಿಸಬೇಕು ಎಂದು ಹೇಳಿದರು.

  • ವೈಟ್ ಟಾಪಿಂಗ್‌ಗೆ ಬಿಬಿಎಂಪಿ ಸಿದ್ಧತೆ- ಯಾವೆಲ್ಲಾ ರಸ್ತೆಗಳಲ್ಲಿ ಕಾಮಗಾರಿ?

    ವೈಟ್ ಟಾಪಿಂಗ್‌ಗೆ ಬಿಬಿಎಂಪಿ ಸಿದ್ಧತೆ- ಯಾವೆಲ್ಲಾ ರಸ್ತೆಗಳಲ್ಲಿ ಕಾಮಗಾರಿ?

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಬಿಬಿಎಂಪಿ (BBMP) ವೈಟ್ ಟಾಪಿಂಗ್ ಕಾಮಗಾರಿ ಮಾಡಲು ತಯಾರಿ ನಡೆಸುತ್ತಿದೆ. 15 ಪ್ಯಾಕೇಜ್‌ಗಳಲ್ಲಿ 43 ರಸ್ತೆಗಳಲ್ಲಿ ವೈಟ್ ಟಾಪಿಂಗ್ ಮಾಡಲು ಬ್ಲೂಪ್ರಿಂಟ್ ರೆಡಿ ಮಾಡಿದೆ. ಈ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಈಗಾಗಲೇ ಎಂಜಿನಿಯರ್‌ಗಳ ಜೊತೆ ಸಭೆ ಮಾಡಿದ್ದು, ಭೂಮಿ ಪೂಜೆ ಮಾಡೋದಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.

    ನಗರದಲ್ಲಿ ವೈಟ್ ಟಾಪಿಂಗ್ (White Topping) ಕಾಮಗಾರಿ ಅನುಷ್ಠಾನಗೊಳಿಸುವ ಸಂಬಂಧ ಜಲಮಂಡಳಿಯ ನೀರಿನ ಹಾಗೂ ಒಳಚರಂಡಿ ಕೊಳವೆ, ಬೆಸ್ಕಾಂ ಹಾಗೂ ಕೆಪಿಟಿಸಿಎಲ್ ಸಂಸ್ಥೆಯ ಕೇಬಲ್‌ಗಳು, ಗೇಲ್ ಗ್ಯಾಸ್ ಪೈಪ್ ಲೈನ್‌ಗಳ ಬದಲಾವಣೆ ಸೇರಿದಂತೆ ಇನ್ನಿತರೆ ಇಲಾಖೆಗಳು ಸ್ಥಳ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದ್ದಾರೆ. ಇದನ್ನೂ ಓದಿ: PublicTV Explainer: ರಾಜ್ಯದಲ್ಲಿ ಆತಂಕ ಮೂಡಿಸಿದ ‘ಡೇಂಜರ್ ಡೆಂಗ್ಯೂ’

    ಬೆಂಗಳೂರು ಪಶ್ಚಿಮ ವಲಯ, ಪೂರ್ವ ವಲಯ, ದಕ್ಷಿಣ ವಲಯ, ರಾಜರಾಜೇಶ್ವರಿ ನಗರ ವಲಯ ಸೇರಿದಂತೆ ಇನ್ನೂ ಕೆಲವು ವಲಯದ 43 ರಸ್ತೆಗಳನ್ನು ಗುರುತು ಮಾಡಿದ್ದು, ವೈಟ್ ಟಾಪಿಂಗ್ ಮಾಡಲು ತಯಾರಿ ನಡೆದಿದೆ. ಈ ವರ್ಷ ಅಥವಾ ಮುಂದಿನ ವರ್ಷದ ಒಳಗೆ ಕಾಮಗಾರಿ ಮುಕ್ತಾಯ ಆಗಲಿದೆ. ಇದನ್ನೂ ಓದಿ: ಹತ್ರಾಸ್‌ ಕಾಲ್ತುಳಿತ ದುರಂತ; ಹೆಣಗಳ ರಾಶಿ ಕಂಡು ಹೃದಯಾಘಾತದಿಂದ ಪೊಲೀಸ್‌ ಕಾನ್‌ಸ್ಟೇಬಲ್‌ ಸಾವು

    ವೈಟ್ ಟಾಪಿಂಗ್ ಕಾಮಗಾರಿ ನಡೆಯೋ ರಸ್ತೆಗಳು:
    ನಾಗಾವರ ಮೈನ್ ರೋಡ್ ಟು ಶಾಂಪುರ್ ರೋಡ್ ಜಂಕ್ಷನ್
    ವೆಸ್ಟಾಫ್ ಕಾರ್ಡ್ ಜಂಕ್ಷನ್ ಟು ವಿಜಯನಗರ ಟಿಟಿಎಂಸಿ
    ಮಲ್ಲೇಶ್ವರಂ 18 ಮುಖ್ಯ ರಸ್ತೆ ಟು ಚಿತ್ತಾಪುರ ಮಠ ಸರ್ಕಲ್
    ಜಕ್ಕೂರು ರೋಡ್
    100 ಫಿಟ್ ರಿಂಗ್ ರೋಡ್ ಜಾಲಹಳ್ಳಿ ಕ್ರಾಸ್ ಟು – ಟಿವಿಎಸ್ ಕ್ರಾಸ್
    ಸಿಬಿಐ ರೋಡ್ ಫ್ರಮ್ ಬಳ್ಳಾರಿ ಟು ಆರ್‌ಟಿ ನಗರ ಮೈನ್ ರೋಡ್
    ರೇಸ್ ಕೋರ್ಸ್ ರೋಡ್ ಜಂಕ್ಷನ್ ಟು ಮೌರ್ಯ ಸರ್ಕಲ್ ರೋಡ್
    ಓಲ್ಡ್ ಪೋಸ್ಟ್ ಆಫೀಸ್ ರೋಡ್ ಟು ಸಿಟಿ ಸಿವಿಲ್ ಕೋರ್ಟ್ ಟು ಮೈಸೂರು ಬ್ಯಾಂಕ್ ಸರ್ಕಲ್
    ಮಹಾತ್ಮ ಗಾಂಧಿ ರೋಡ್ ಟು ಮಹಾತ್ಮ ಗಾಂಧಿ ಸರ್ಕಲ್ ಟ್ರಿನಿಟಿ ರೋಡ್
    ರೆಸಿಡೆನ್ಸಿ ರೋಡ್ ಟು ರಿಚ್ಮಂಡ್ ಎಂಜಿ ರೋಡ್

    ವೈಟ್ ಟಾಪಿಂಗ್ ಮಾಡುತ್ತೇವೆ ಎಂದು ಬಿಬಿಎಂಪಿ ಸಿದ್ಧತೆ ಮಾಡಿಕೊಂಡರೆ ಇನ್ನೊಂದೆಡೆ ಟ್ರಾಫಿಕ್ ಸಮಸ್ಯೆ ಕೂಡ ಆಗಲಿದೆ. ಜೊತೆಗೆ ಕಾಮಗಾರಿ ಆರಂಭ ಮಾಡಿದರೆ ಟ್ರಾಫಿಕ್ ಡೈವರ್ಶನ್ ಹೇಗಿರಲಿದೆ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: ಹತ್ರಾಸ್‌ ಕಾಲ್ತುಳಿತಕ್ಕೆ 116 ಮಂದಿ ಬಲಿ – ಅಂದು ಹೆಡ್‌ ಕಾನ್‌ಸ್ಟೇಬಲ್‌ ಈಗ ಸ್ವಯಂಘೋಷಿತ ಗುರು!

  • 6,187 ಡೆಂಗ್ಯೂ ಪ್ರಕರಣ ಪತ್ತೆ – ಬೆಂಗ್ಳೂರಲ್ಲಿ ಮನೆ ಮನೆ ಸಮೀಕ್ಷೆ ನಡೆಸುವಂತೆ ಪಾಲಿಕೆಗೆ ಸೂಚನೆ!

    6,187 ಡೆಂಗ್ಯೂ ಪ್ರಕರಣ ಪತ್ತೆ – ಬೆಂಗ್ಳೂರಲ್ಲಿ ಮನೆ ಮನೆ ಸಮೀಕ್ಷೆ ನಡೆಸುವಂತೆ ಪಾಲಿಕೆಗೆ ಸೂಚನೆ!

    – ಡೆಂಗ್ಯೂ ಪತ್ತೆಗೆ ಟೆಸ್ಟಿಂಗ್‌ ಕಿಟ್‌ ವಿತರಣೆ – ದಿನೇಶ್‌ ಗುಂಡೂರಾವ್‌

    ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು (Dengue Case) ಹೆಚ್ಚುತ್ತಿರುವ ಹಿನ್ನೆಲೆ ವಿಧಾನಸೌಧದಲ್ಲಿಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಯಿತು. ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಡೆಂಗ್ಯೂ ನಿಯಂತ್ರಣಕ್ಕೆ ಅನೇಕ ಕ್ರಮಗಳನ್ನು ಕೈಗೊಳ್ಳಲಾಯಿತು.

    ಗ್ರಾಮೀಣ ಭಾಗದಲ್ಲೇ ಕೇಸ್‌ ಹೆಚ್ಚು:
    ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ದಿನೇಶ್‌ ಗುಂಡೂರಾವ್‌, ಮೊದಲೆಲ್ಲಾ ಡೆಂಗ್ಯೂ ಪ್ರಕರಣ ಒಂದು ವರ್ಷ ಹೆಚ್ಚಿದ್ದರೆ, ಮುಂದಿನ ವರ್ಷ ಇಳಿಕೆಯಾಗುತ್ತಿತ್ತು. ಆದ್ರೆ ಈ ವರ್ಷ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಪ್ರಸಕ್ತ ವರ್ಷದ ಜನವರಿಯಿಂದ 6,187 ಕೇಸ್‌ ದಾಖಲಾಗಿದೆ. ಕಳೆದ ವರ್ಷ ಇದೇ ಸಮಯಕ್ಕೆ 2,900 ಕೇಸ್‌ ದಾಖಲಾಗಿತ್ತು. ಒಟ್ಟಾರೆ ದಾಖಲಾಗಿರುವ ಪ್ರಕರಣಗಳಲ್ಲಿ 56% ಗ್ರಾಮೀಣ ಭಾಗದಲ್ಲಿ ಪತ್ತೆಯಾಗಿದೆ, ನಗರ ಪ್ರದೇಶಗಳಲ್ಲಿ 44% ಪಾಸಿಟಿವ್ ಆಗಿದೆ. 6 ಮಂದಿ ಸಾವನ್ನಪ್ಪಿದ್ದಾರೆ. ಅವರು ಸಹ ಬೇರೆ ಬೇರೆ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ವಿವರಿಸಿದರು.

    ರಸ್ತೆಗಳಲ್ಲಿ ಮತ್ತು ಇತರ ಸ್ಥಳಗಳಲ್ಲಿ ಹೆಚ್ಚಾಗಿ ನೀರು ನಿಲ್ಲುತ್ತಿರುವುದೇ ಇದಕ್ಕೆ ಕಾರಣ. ಅದರಲ್ಲೂ ಬೆಂಗಳೂರು ನಗರ (Bengaluru City) ಡೆಂಗ್ಯೂ ಪ್ರಕರಣಗಳ ಏರಿಕೆಗೆ ಸೂಕ್ತ ಪ್ರದೇಶವಾದಂತೆ ಕಾಣ್ತಿದೆ. ನಿರಂತರವಾಗಿ ಮಳೆ ಬಂದರೆ ಕೇಸ್‌ ಕಡಿಮೆ ಆಗುತ್ತದೆ. ಅದಕ್ಕಾಗಿ ಟೆಸ್ಟಿಂಗ್‌ ಕಿಟ್‌ (Dengue Testing Kit) ಸರಬರಾಜು ಮಾಡ್ತಾ ಇದ್ದೇವೆ. ಇದರೊದಿಗೆ ಪ್ಯಾರಸೆಟಮಲ್ ಮಾತ್ರೆ ಕೊಡಬಹುದು, ಜೊತೆಗೆ ಪ್ಲೇಟ್‌ಲೆಟ್ಸ್‌ ಕೊಡುವ ವ್ಯವಸ್ಥೆ ಮಾಡುತ್ತೇವೆ ಎಂದು ತಿಳಿಸಿದರು.

    ಖಾಸಗಿ ಆಸ್ಪತ್ರೆಗಳು ಕೇಸ್‌ಗಳನ್ನ ವರದಿ ಮಾಡ್ಬೇಕು:
    ಡೆಂಗ್ಯೂ ಪ್ರಕರಣಗಳ ಬಗ್ಗೆ ಅನೇಕ ಖಾಸಗಿ ಆಸ್ಪತ್ರೆಗಳು ವರದಿ ಮಾಡುತ್ತಿಲ್ಲ. ಐಎಹೆಚ್‌ ವೆಬ್‌ಸೈಟ್‌ನಲ್ಲಿ ವರದಿ ಮಾಡುತ್ತಿಲ್ಲ. ಸದ್ಯಕ್ಕೆ 6,187 ಕೇಸ್‌ ಇದೆ. ಇದರ ಸಂಖ್ಯೆ ಹೆಚ್ಚಿರಬಹುದು. ಹಾಗಾಗಿ ಖಾಸಗಿ ಆಸ್ಪತ್ರೆಗಳು ವರದಿ ಮಾಡುವಂತೆ ಸೂಚಿಸಿದ್ದೇವೆ. ಜೊತೆಗೆ ತಪ್ಪು ಮಾಹಿತಿ ಹರಡಬಾರದು ಎಂಬ ಕಾರಣಕ್ಕೆ ದಿನನಿತ್ಯ ಡೆಂಗ್ಯೂ ಬುಲೆಟಿನ್ ಬಿಡುಗಡೆ ಮಾಡ್ತೆವೆ. ನಗರಪಾಲಿಕೆಗಳು ಪ್ರತಿ ನಗರದಲ್ಲೂ ಮನೆ ಮನೆ ಸರ್ವೆ ಮಾಡುವಂತೆ ಸೂಚನೆ ನೀಡಿದ್ದೇವೆ. ಪ್ರತಿ ಶುಕ್ರವಾರ ಡೆಂಗ್ಯೂ ಬಗ್ಗೆ ತಪಾಸಣೆಗೆ ನಿಗಾವಹಿಸಲು ತಿಳಿಸಿದ್ದೇವೆ ಎಂದು ಮಾಹಿತಿ ನೀಡಿದರು.

    ಶಾಲೆಗಳಲ್ಲೂ ಜಾಗೃತಿ ಮೂಡಿಸಲು ತಯಾರಿ:
    ಡೆಂಗ್ಯೂ ಎಲ್ಲೆಲ್ಲಿ ಪಾಸಿಟಿವ್‌ ಪ್ರಕರಣಗಳು ಬರುತ್ತವೆ, ಅಲ್ಲಿ ಮಾನಿಟರ್‌ ಮಾಡಲು ಸೂಚಿಸಿದ್ದೇವೆ. ಲಾರ್ವ ನಾಶ ಮಾಡಬೇಕು, ಫಾಗಿಂಗ್ ಮಾಡಬೇಕು. ಜೊತೆಗೆ ಬೆಂಗಳೂರು ನಗರದಲ್ಲಿರುವ ಕ್ಷೇಮಾಭಿವೃದ್ಧಿ ಸಂಘಗಳ ಸಭೆ ಕರೆದು ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ. ಜೊತೆಗೆ ವೈದ್ಯಕೀಯ ಅಧಿಕಾರಿಗಳು ಹತ್ತಿರದ ಶಾಲೆಗಳಿಗೆ ತೆರಳಿ ವಿಜ್ಞಾನ ಶಿಕ್ಷಕರಿಂದ ಮಕ್ಕಳಿಗೆ ಜಾಗೃತಿ ಮೂಡಿಸುವ ಬಗ್ಗೆ ತರಬೇತಿ ನೀಡುವಂತೆ ಸೂಚಿಸಿದ್ದೇವೆ.

  • ಬೆಂಗಳೂರಿನಲ್ಲಿ ಡೆಂಗ್ಯೂಗೆ 27 ವರ್ಷದ ಯುವಕ ಬಲಿ

    ಬೆಂಗಳೂರಿನಲ್ಲಿ ಡೆಂಗ್ಯೂಗೆ 27 ವರ್ಷದ ಯುವಕ ಬಲಿ

    – ಜೂನ್ ತಿಂಗಳಿನಲ್ಲಿ 1,742 ಪ್ರಕರಣ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಡೆಂಗ್ಯೂಗೆ (Dengue) 27 ವರ್ಷದ ಯುವಕ ಬಲಿಯಾಗಿರುವುದನ್ನು ಬಿಬಿಎಂಪಿ (BBMP) ಖಚಿತಪಡಿಸಿದೆ.

    ಕಗ್ಗದಾಸಪುರದ 27 ವರ್ಷದ ಯುವಕ ಡೆಂಗ್ಯೂ ಸೋಂಕಿನಿಂದ ಸಾವನ್ನಪ್ಪಿರುವುದಾಗಿ ಬಿಬಿಎಂಪಿ ಹೆಲ್ತ್ ಆಡಿಟ್ (Health Audit) ದೃಢಪಡಿಸಿದೆ. ಕಳೆದ ಶುಕ್ರವಾರ ಎರಡು ಡೆಂಗ್ಯೂ ಶಂಕಿತ ಸಾವು ಪ್ರಕರಣಗಳು ಸಂಭವಿಸಿತ್ತು. ಆ ಪೈಕಿ ಕಗ್ಗದಾಸಪುರದ ಯುವಕನ ಸಾವಿಗೆ ಡೆಂಗ್ಯೂ ಕಾರಣ. ಆದರೆ 80 ವರ್ಷದ ವೃದ್ಧೆಯ ಸಾವಿಗೆ ಡೆಂಗ್ಯೂ ಕಾರಣವಲ್ಲ ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ. 80ರ ವೃದ್ಧೆಯ ಸಾವಿಗೆ ಕಾರಣ ಕ್ಯಾನ್ಸರ್ ಎಂದೂ ಬಿಬಿಎಂಪಿ ಹೆಲ್ತ್ ಆಡಿಟ್ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಇದನ್ನೂ ಓದಿ: ಕಾನ್‌ಸ್ಟೇಬಲ್‌ನಿಂದ ಹಿಡಿದು ಅಧಿಕಾರಿಗಳವರೆಗೂ ಹೊಸ ಕಾನೂನಿನ ಬಗ್ಗೆ ತರಬೇತಿ ನೀಡಿದ್ದೇವೆ: ಪರಮೇಶ್ವರ್‌

    ಹೊಸದಾಗಿ 213 ಡೆಂಗ್ಯೂ ಪ್ರಕರಣಗಳ ಪತ್ತೆಯಾಗಿದೆ. ಜೂನ್ ತಿಂಗಳಲ್ಲಿ 1,742 ಜನ ಡೆಂಗ್ಯೂ ಸೊಂಕಿಗೆ ಒಳಗಾದಂತಾಗಿದೆ. ಮಹಿಳೆಯರು ಮತ್ತು ಮಕ್ಕಳು ಡೆಂಗ್ಯೂ ಸೋಂಕಿಗೆ ಬೇಗ ಒಳಗಾಗುತ್ತಿದ್ದಾರೆ ಎಂದು ಹೆಲ್ತ್ ಆಡಿಟ್ ತಿಳಿಸಿದೆ. ಗರ್ಭಿಣಿಯರು ಡೆಂಗ್ಯೂ ಸೋಂಕಿಗೆ ಹೆಚ್ಚು ಬೇಗ ಒಳಗಾಗುತ್ತಿದ್ದು, ಎಚ್ಚರ ವಹಿಸಲು ತಿಳಿಸಿದೆ. ಇದನ್ನೂ ಓದಿ: 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್‌ ದರ 30 ರೂ. ಇಳಿಕೆ

  • ಬಿಬಿಎಂಪಿಯಲ್ಲಿ ಕೋಟಿ ಕೋಟಿ ಹಣ ಅಕ್ರಮ ವರ್ಗಾವಣೆ ಬಯಲಿಗೆ

    ಬಿಬಿಎಂಪಿಯಲ್ಲಿ ಕೋಟಿ ಕೋಟಿ ಹಣ ಅಕ್ರಮ ವರ್ಗಾವಣೆ ಬಯಲಿಗೆ

    ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ (BBMP) ಕೋಟ್ಯಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆ ಆಗಿರುವುದು ಬಯಲಾಗಿದೆ.

    ಅಸ್ತಿತ್ವದಲ್ಲಿಯೇ ಇಲ್ಲದ ಸಹಕಾರಿ ಸಂಸ್ಥೆಗಳಿಗೆ ಕೋಟ್ಯಂತರ ರೂಪಾಯಿ ವರ್ಗವಣೆಯಾಗಿದೆ. ವಿವಿಧ ಯೋಜನೆಗಳ ಫಲಾನುಭವಿಗಳ ಹೆಸರು ದುರ್ಬಳಕೆ ಮಾಡಿಕೊಂಡು ಅಕ್ರಮ ಎಸಗಲಾಗಿದೆ. ಸಣ್ಣ ಉದ್ದಿಮೆದಾರರಿಗೆ ಬಿಬಿಎಂಪಿ ಸ್ವಯಂ ಉದ್ಯೋಗದ ಯೋಜನೆ ದುರ್ಬಳಕೆ ಮಾಡಿ ಹಣ ಲಪಟಾಯಿಸಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಡಿಕೆಶಿ ವಾರ್ನಿಂಗ್ ನಾನ್ ಕೇಳ್ತೀನಾ? ನೋಟಿಸ್ ಕೊಡಲಿ ಅಮೇಲೆ ಮಾತಾಡ್ತೀನಿ: ಕೆ.ಎನ್.ರಾಜಣ್ಣ

    ಫಲಾನುಭವಿಗಳ ಹೆಸರು, ದಾಖಲೆ ದುರ್ಬಳಕೆ, ಸಹಿ ಸೃಷ್ಟಿ ಮೂಲಕ ಅಕ್ರಮ ನಡೆದಿದೆ. ಈ ಅಕ್ರಮಕ್ಕೆಂದೇ ಸಹಕಾರ ಸಂಘ ಸ್ಥಾಪಿಸಿ, ಅಸ್ತಿತ್ವದಲ್ಲೇ ಇಲ್ಲದ ಸೊಸೈಟಿಗೂ ಹಣ ವರ್ಗಾಯಿಸಲಾಗಿದೆ ಎನ್ನಲಾಗಿದೆ.

    2019-20, 2020-21 ಸಾಲಿನಲ್ಲಿ ಬಿಬಿಎಂಪಿ ಪಶ್ಚಿಮ ವಲಯದಲ್ಲಿ ಕೋಟ್ಯಂತರ ರೂ. ಅಕ್ರಮ ವರ್ಗವಣೆಯಾಗಿದೆ. ಒಟ್ಟಾರೆ ಎಷ್ಟು ಅಕ್ರಮ ಎಂದು ಪತ್ತೆಯಾಗಲು ತನಿಖೆ ನಡೆಸಬೇಕು ಎಂದು ಲೋಕಾಯುಕ್ತ ಪತ್ರ ಬರೆದಿದೆ. ಲೋಕಾಯುಕ್ತದಲ್ಲಿ ದಾಖಲಾದ ದೂರಿನಿಂದ ಈ ಅಕ್ರಮ ಬೆಳಕಿಗೆ ಬಂದಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ; ನಕಲಿ ಅಕೌಂಟ್‌ನ ಅಸಲಿ ಮಾಲೀಕರ ಪತ್ತೆ ಮಾಡಿದ ಸಿಐಡಿ

    ಬಿಬಿಎAಪಿ ಪಶ್ಚಿಮ ವಲಯದ 9 ಅಧಿಕಾರಿಗಳ ವಿರುದ್ಧ ತನಿಖೆಗೆ ಅನುಮತಿ ಕೋರಿ ಲೋಕಾಯುಕ್ತ ಸರ್ಕಾರಕ್ಕೆ ಪತ್ರ ಬರೆದಿದೆ. 2019-20, 2020-21 ರಲ್ಲಿ ಪಶ್ಚಿಮ ವಲಯದ ಹಣಕಾಸು ವಿಭಾಗದಲ್ಲಿದ್ದ 9 ಅಧಿಕಾರಿಗಳ ವಿರುದ್ಧ ತನಿಖೆಗೆ ಕೋರಲಾಗಿದೆ. ಈ ಕುರಿತಂತೆ ವರದಿ ಸಲ್ಲಿಸಲು ಆಡಳಿತ ವಿಭಾಗದ ಉಪ ಆಯುಕ್ತರು ಪಶ್ಚಿಮ ವಿಭಾಗದ ಜಂಟಿ ಆಯುಕ್ತರಿಗೆ ಸೂಚಿಸಿದ್ದಾರೆ.

  • ಪಟ್ಟಣಗೆರೆ ಶೆಡ್ ಮಾಲೀಕರಿಗೆ ಬಿಬಿಎಂಪಿ ನೋಟಿಸ್

    ಪಟ್ಟಣಗೆರೆ ಶೆಡ್ ಮಾಲೀಕರಿಗೆ ಬಿಬಿಎಂಪಿ ನೋಟಿಸ್

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy Case) ಕಿಡ್ನಾಪ್ ಹಾಗೂ ಕೊಲೆ ಪ್ರಕರಣದ ಬಳಿಕ ಪಟ್ಟಣಗೆರೆ ಶೆಡ್ (Pattanagere Shed) ಮುನ್ನೆಲೆಗೆ ಬಂತು. ಈ ಬೆನ್ನಲ್ಲೇ ಪಟ್ಟಣಗೆರೆ ಶೆಡ್‍ಗೆ ಬಿಬಿಎಂಪಿ ಶಾಕ್ ಕೊಟ್ಟಿದೆ.

    ಹೌದು. ರೇಣುಕಾ ಸ್ವಾಮಿಯನ್ನ ಹತ್ಯೆ ಮಾಡಿದ ಪಟ್ಟಣಗೆರೆ ಶೆಡ್ ಮಾಲೀಕರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ನೋಟಿಸ್ ನೀಡಿದೆ. 2008 – 09 ರಿಂದ ಆಸ್ತಿ ತೆರಿಗೆ ಪಾವತಿ ಆಗಿಲ್ಲ ಎಂದು ಕೆಂಗೇರಿ ಉಪ ವಲಯದಲ್ಲಿ ಸಹಾಯಕ ಕಂದಾಯ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

    ನೊಡಿಸ್‍ನಲ್ಲಿ 15 ದಿನಗಳ ಒಳಗೆ ಆಸ್ತಿ ತಮ್ಮದೇ ಅಂತಾ ಘೋಷಿಸಿಕೊಂಡು ತೆರಿಗೆ ಪಾವತಿಸುವಂತೆ ಸೂಚನೆ ಕೊಟ್ಟಿದ್ದಾರೆ. ಒಂದು ವೇಳೆ 15 ದಿನಗಳ ಒಳಗೆ ತೆರಿಗೆ ಪಾವತಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ಕೂಡ ನೀಡಿದ್ದಾರೆ. ಇದನ್ನೂ ಓದಿ: ದರ್ಶನ್ ಪರ ಜಾಮೀನು ಅರ್ಜಿ ಸಲ್ಲಿಸಿಲ್ಲವೇ? – ವಕೀಲರು ಕೊಟ್ಟ ಉತ್ತರವೇನು?

    ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್ ಮಾಡಿದ ಆರೋಪದ ಮೇಲೆ ದರ್ಶನ್ ಹಾಗೂ ಗ್ಯಾಂಗ್ ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಬೆಂಗಳೂರಿಗೆ ಕರೆತಂದಿತ್ತು. ಬಳಿಕ ಆರ್ ಆರ್‌ ನಗರದಲ್ಲಿರುವ ಪಟ್ಟಣಗೆರೆ ಶೆಡ್‍ಗೆ ಕರೆದೊಯ್ದು ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಲಾಗಿತ್ತು.

  • ಇಂದಿನಿಂದ ಜೂನ್ 12 ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯ ಎಚ್ಚರಿಕೆ

    ಇಂದಿನಿಂದ ಜೂನ್ 12 ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯ ಎಚ್ಚರಿಕೆ

    – ಇಂದು ಎಲ್ಲೆಲ್ಲಿ ಆರೆಂಜ್, ಯೆಲ್ಲೋ ಅಲರ್ಟ್?

    ಬೆಂಗಳೂರು: ದಿನದಿಂದ ದಿನಕ್ಕೆ ರಾಜ್ಯಾದ್ಯಂತ ಮುಂಗಾರು ಚುರುಕು ಪಡೆಯುತ್ತಿದ್ದು, ಇಂದಿನಿಂದ ಜೂನ್ 12ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather Department) ನೀಡಿದೆ.

    ಕಳೆದೊಂದು ವಾರದಿಂದ ರಾಜ್ಯದ ಎಲ್ಲಾ ಭಾಗದಲ್ಲೂ ಅಬ್ಬರದ ಮಳೆಯಾಗುತ್ತಿದೆ. ಇದೀಗ ಇಲಾಖೆ ನೀಡಿರುವ ಎಚ್ಚರಿಕೆಯ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಿಗೆ ಅಲರ್ಟ್‍ಗಳನ್ನು ಘೋಷಣೆ ಮಾಡಲಾಗಿದೆ. ರಾಜ್ಯದ 7 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಇಂದು ಆರೆಂಜ್ ಅಲರ್ಟ್ (Orange Alert) ಘೋಷಿಸಿದೆ. ಒಟ್ಟು 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ನೀಡಿ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.

    ಎಲ್ಲೆಲ್ಲಿ ಇಂದು ಆರೆಂಜ್ ಅಲರ್ಟ್?: ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ, ಉತ್ತರಕನ್ನಡ ಜಿಲ್ಲೆಗಳಿಗೆ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಕೊಟ್ಟಿದೆ. ಮುಂದಿನ 3 ಗಂಟೆಗಳ ಕಾಲ 30-40 ಕಿಮೀ ವೇಗದಲ್ಲಿ ಗಾಳಿ, ಮಳೆಯಾಗುವ ಸಾಧ್ಯತೆಗಳಿವೆ.

    ಎಲ್ಲೆಲ್ಲಿ ಇಂದು ಯೆಲ್ಲೋ ಅಲರ್ಟ್?: ದಕ್ಷಿಣ ಕನ್ನಡ, ಗದಗ, ಕಲಬುರಗಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಭಾರೀ ಮಳೆಯಿಂದ ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು – ಜನರಲ್ಲಿ ಹರ್ಷವೋ ಹರ್ಷ

    ನಿನ್ನೆಯ ಮಳೆಗೆ ಬೆಂಗ್ಳೂರಲ್ಲಿ ಏನೇನಾಗಿದೆ?: ಬೆಂಗಳೂರಿನಲ್ಲಿ ಮಳೆಯ ಹಿನ್ನೆಲೆ 447 ಮರಗಳು ಧರೆಗೆ ಉರುಳಿವೆ. ಕೇವಲ ಆರು ದಿನದಲ್ಲಿ 447 ಮರಗಳು ಮತ್ತು 800 ಕ್ಕೂ ಮರದ ಕೊಂಬೆಗಳು ಧರಶಾಹಿಯಾಗಿವೆ. 447 ರಲ್ಲಿ 376 ಮರಗಳನ್ನ ತೆರವು ಮಾಡಲಾಗಿದ್ದು, 71 ಮರಗಳನ್ನ ತೆರವು ಮಾಡಬೇಕಾಗಿದೆ.

    1,573 ಕ್ಕೂ ಹೆಚ್ಚು ಮರದ ಸಮಸ್ಯೆಗಳಿಗೆ ಸಂಬಂಧಿಸಿದ ಕರೆಗಳು ಬಂದಿವೆ. 905 ಸಮಸ್ಯೆಗಳನ್ನ ಬಗೆಹರಿಸಲಾಗಿದೆ 695 ಬಾಕಿ ಇವೆ. ಈಗಾಗಲೇ ಬಿಬಿಎಂಪಿಯ ಅರಣ್ಯ ಘಟಕ ವಿಭಾಗದವರು ನಿರಂತರವಾಗಿ ಮರ ತೆರವು ಕಾರ್ಯಾಚರಣೆಯನ್ನ ಮಾಡಲಾಗ್ತಿದೆ. ಮರ ಬೀಳುವ ಸಂಖ್ಯೆ ಹೆಚ್ಚಾಗಿದ್ದು ಒಂದು ಸಾವಿರಕ್ಕೂ ಹೆಚ್ಚು ಹಳೆಯ ಮರಗಳ ತೆರವಿಗೆ ಪ್ಲ್ಯಾನ್ ಮಾಡಲಾಗ್ತಿದೆ. ನಿರಂತರ ಮಳೆಯಿಂದ ಯಾರ ಮೇಲೆ ಮರ ಬೀಳುತ್ತೋ, ಎಲ್ಲಿ ಬೀಳುತ್ತೋ ಎಂಬ ಆತಂಕ ಸಾರ್ವಜನಿಕರಿಗೆ ಹೆಚ್ಚಾಗಿದೆ.

  • ಭಾರೀ ವಿರೋಧದ ಬೆನ್ನಲ್ಲೇ ಸೆಕ್ಯೂರಿಟಿ ಕಂಪನಿಗೆ ನೀಡಿದ್ದ ಶಿಕ್ಷಕರ ನೇಮಕಾತಿ ಟೆಂಡರ್ ರದ್ದು

    ಭಾರೀ ವಿರೋಧದ ಬೆನ್ನಲ್ಲೇ ಸೆಕ್ಯೂರಿಟಿ ಕಂಪನಿಗೆ ನೀಡಿದ್ದ ಶಿಕ್ಷಕರ ನೇಮಕಾತಿ ಟೆಂಡರ್ ರದ್ದು

    – ಹೊರಗುತ್ತಿಗೆ ಮೂಲಕ ಶಿಕ್ಷಕರ ನೇಮಕಕ್ಕೆ ಟೆಂಡರ್‌
    – ಡಿಕೆಶಿ ಸೂಚನೆ ಬೆನ್ನಲ್ಲೇ ಆದೇಶ ರದ್ದು

    ಬೆಂಗಳೂರು: ಖಾಸಗಿ ಸೆಕ್ಯುರಿಟಿ ಮತ್ತು ಡಿಟೆಕ್ಟಿವ್ ಏಜೆನ್ಸಿಗಳ ಮೂಲಕ ಹೊರಗುತ್ತಿಗೆ ಶಿಕ್ಷಕರನ್ನು (Teachers) ನೇಮಿಸಿಕೊಳ್ಳಲು ಮುಂದಾಗಿದ್ದ ಬಿಬಿಎಂಪಿ (BBMP) ಈಗ ಈ ನಿರ್ಧಾರದಿಂದ ಹಿಂದಕ್ಕೆ ಸರಿದಿದೆ.

    ಬಿಬಿಎಂಪಿ ನಿರ್ಧಾರ ಸರ್ಕಾರ ಬಾರಿ ಮುಜುಗರ ತಂದಿತ್ತು. ಅಷ್ಟೇ ಅಲ್ಲದೇ ಮಾಜಿ ಶಿಕ್ಷಣ ಸಚಿವರು ಸೇರಿ ಹಲವರಿಂದ ಟೀಕೆ ವ್ಯಕ್ತವಾಗಿತ್ತು.‌ ಇದರಿಂದ ಎಚ್ಚೆತ್ತ ಸರ್ಕಾರ ಟೆಂಡರ್ (Tender) ರದ್ದುಗೊಳಿಸಿ ಅಧಿಕೃತ ಆದೇಶ ಪ್ರಕಟಿಸಿದೆ.

    ಸೆಕ್ಯುರಿಟಿ ಕಂಪನಿಗೆ ನೀಡಿದ ಶಿಕ್ಷಕರ ನೇಮಕಾತಿ ಟೆಂಡರ್‌ ಅನ್ನು ರದ್ದು ಮಾಡುವಂತೆ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಸೂಚನೆ ಬೆನ್ನಲ್ಲೇ ಸೆಕ್ಯುರಿಟಿ ಕಂಪನಿಗೆ ನೀಡಿದ ಗುತ್ತಿಗೆಯನ್ನ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರದ್ದು ಮಾಡಿ ಆದೇಶ ಮಾಡಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ 87 ಕೋಟಿ ಗೋಲ್ಮಾಲ್ – ಏನಿದು ಹಗರಣ? ಅಕ್ರಮ ಹಣ ವರ್ಗಾವಣೆ ಆಗಿದ್ದು ಯಾಕೆ?

    ಭದ್ರತಾ ಸಿಬ್ಬಂದಿ ಒದಗಿಸುವ ಸೆಕ್ಯೂರಿಟಿ ಏಜೆನ್ಸಿ ಮೂಲಕ ಶಿಕ್ಷಕರ ನೇಮಕಾತಿ ಮಾಡಿಕೊಂಡರೆ ಬಿಬಿಎಂಪಿ ಶಾಲಾ ಕಾಲೇಜ್‌ಗಳಲ್ಲಿ ಶಿಕ್ಷಣ ವ್ಯವಸ್ಥೆ ಹೇಗಿರುತ್ತದೆ ಎಂಬ ಭಾರೀ ಪ್ರಶ್ನೆ ಎದ್ದಿತ್ತು. ಅಷ್ಟೇ ಅಲ್ಲದೇ ಸೆಕ್ಯೂರಿಟಿ ಏಜೆನ್ಸಿ ಮೂಲಕವೇ ಶಿಕ್ಷಕಕರಿಗೆ ಸಂಬಳ ನೀಡಲಾಗುವುದು ಷರತ್ತು ವಿಧಿಸಲಾಗಿತ್ತು.

    ಗುತ್ತಿಗೆ ರದ್ದಾದ ಕಾರಣ ಬಿಬಿಎಂಪಿಯಿಂದಲೇ ನೇರವಾಗಿ ಶಿಕ್ಷಕರಿಗೆ ಸಂಬಳ ಸಿಗಲಿದೆ. ಇನ್ನು ಮುಂದೆ  ಸರ್ಕಾರದ ಮೂಲಕವೇ ಕೌನ್ಸಿಲಿಂಗ್‌ ಮಾಡಿ ಬಿಬಿಎಂಪಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ ನಡೆಯಲಿದೆ.

    ಭಾರೀ ವಿರೋಧ ವ್ಯಕ್ತವಾಗಿತ್ತು:
    ಬಿಬಿಎಂಪಿಯ ಈ ಪ್ರಕ್ರಿಯೆಗೆ ಸುಮಾರು 700ಕ್ಕೂ ಹೆಚ್ಚು ಹೊರಗುತ್ತಿಗೆ ಶಿಕ್ಷಕರು ವಿರೋಧ ವ್ಯಕ್ತಪಡಿಸಿದ್ದರು. ಶಾಲೆ ಬಹಿಷ್ಕರಿಸಿ ಪ್ರತಿಭಟಿಸಿದ್ದರು. ಆದರೂ, ಇದಕ್ಕೆ ಮಣಿಯದ ಸರ್ಕಾರ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರು, ಬಿಬಿಎಂಪಿ ಶಾಲೆಯಲ್ಲಿ ಅನರ್ಹ ಶಿಕ್ಷಕರಿದ್ದಾರೆ. ಅವರೆಲ್ಲ ಬೇಡ. ಶಿಕ್ಷಣ ಇಲಾಖೆಯಿಂದಲೇ ಶಿಕ್ಷಕರು ಬರುತ್ತಾರೆ. ಈಗಿರುವವರು ಅರ್ಹತೆ ಇದ್ದರೆ ಎಸ್‌ಡಿಎಂಸಿ ಮೂಲಕ ನೇಮಕವಾಗಬಹುದು. ಅವರಿಗೆ ಪ್ರಥಮ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದ್ದರು.