Tag: bbmp

  • ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಸಮಗ್ರ ಕಾರ್ಯಾಚರಣೆಗೆ ಟಾಸ್ಕ್‌ ಫೋರ್ಸ್‌ ರಚನೆ

    ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಸಮಗ್ರ ಕಾರ್ಯಾಚರಣೆಗೆ ಟಾಸ್ಕ್‌ ಫೋರ್ಸ್‌ ರಚನೆ

    ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಸಮಗ್ರ ಕಾರ್ಯಾಚರಣೆ, ಮೇಲ್ವಿಚಾರಣೆಗಾಗಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ (Tushar Giri Nath) ಅವರು ವಲಯ ಮಟ್ಟದಲ್ಲಿ ‘ಟಾಸ್ಕ್ ಫೋರ್ಸ್” ಸಮಿತಿ ರಚಿಸಿ ಆದೇಶಿಸಿದ್ದಾರೆ.

    ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು 12,878 ಕಿಮೀ ರಸ್ತೆ ಜಾಲವಿದ್ದು, ಈ ರಸ್ತೆಗಳ ಪೈಕಿ 1,344.84 ಕಿಮೀ ಉದ್ದದ ರಸ್ತೆಗಳನ್ನು ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳೆಂದು ಪರಿಗಣಿಸಲಾಗಿದೆ. ಈ ರಸ್ತೆಗಳನ್ನು, ರಸ್ತೆ ಮೂಲಭೂತ ಸೌಕರ್ಯ ಶಾಖೆಯಿಂದ ನಿರ್ವಹಣೆ ಮಾಡಲಾಗುತ್ತಿದೆ. ಉಳಿಕೆ 11,533.16 ಕಿಮೀ ರಸ್ತೆಗಳನ್ನು ವಲಯ ಮಟ್ಟದಲ್ಲಿ ನಿರ್ವಹಣೆ ಮಾಡಲಾಗುತ್ತಿದೆ. ಇದನ್ನೂ ಓದಿ: ಪ್ರಣಾಳಿಕೆ ಭರವಸೆಯಿಂದಾಗುವ ಆರ್ಥಿಕ ಲಾಭ ಅಭ್ಯರ್ಥಿಯ ಭ್ರಷ್ಟಾಚಾರವಲ್ಲ – ಜಮೀರ್‌ಗೆ ಸುಪ್ರೀಂ ರಿಲೀಫ್

    ಗುಂಡಿ ಬಿದ್ದಿರುವ ರಸ್ತೆಗಳನ್ನು (Pothole Roads) ನಿಗಧಿತ ಅವಧಿಯಲ್ಲಿ ನಿರ್ವಹಣೆ ಮಾಡಲು ವಲಯ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡುವುದು ಸೂಕ್ತವೆಂದು ತೀರ್ಮಾನಿಸಿ, ಸದರಿ ಟಾಸ್ಕ್ ಫೋರ್ಸ್‌ ಅನ್ನು ವಲಯ ಮಟ್ಟದ ವಲಯ ಆಯುಕ್ತರು ಅವರ ನೇತೃತ್ವದಲ್ಲಿ ರಚಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ. ಇದನ್ನೂ ಓದಿ: T20 World Cup: ಚುಟುಕು ಕ್ರಿಕೆಟ್ ಯುಗದ ಆರಂಭ – ಚೊಚ್ಚಲ ಆವೃತ್ತಿಯಲ್ಲೇ ಭಾರತ ಚಾಂಪಿಯನ್!

    ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ಯಾರೆಲ್ಲ ಇದ್ದಾರೆ?
    1. ವಲಯ ಆಯುಕ್ತರು – ಅಧ್ಯಕ್ಷರು.
    2. ವಲಯ ಜಂಟಿ ಆಯುಕ್ತರು – ಸದಸ್ಯರು.
    3. ವಲಯ ಮುಖ್ಯ ಅಭಿಯಂತರರು – ಸದಸ್ಯರು.
    4. ವಲಯ ಸಹಾಯಕ ಸಂಚಾರ ಪೊಲೀಸ್ ಆಯುಕ್ತರು – ಸದಸ್ಯರು.
    5. ವಲಯದ ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರು – ಸದಸ್ಯರು.
    6. ವಲಯ ವ್ಯಾಪ್ತಿಗೆ ಬರುವ ಸಂಬಂಧಪಟ್ಟ ವಿಭಾಗದ ಕಾರ್ಯಪಾಲಕ ಅಭಿಯಂತರರು – ಸದಸ್ಯರು.
    7. ವಲಯ ಆಯುಕ್ತರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಉಪ ನಿಯಂತ್ರಕರು (ಹಣಕಾಸು) – ಸದಸ್ಯರ ಕಾರ್ಯದರ್ಶಿ.

  • ಬೆಂಗಳೂರು ರಸ್ತೆ ಗುಂಡಿ ಮುಚ್ಚಲು ವಿಶೇಷ ನಿರ್ವಹಣೆ ವ್ಯವಸ್ಥೆ: ಸಿದ್ದರಾಮಯ್ಯ

    ಬೆಂಗಳೂರು ರಸ್ತೆ ಗುಂಡಿ ಮುಚ್ಚಲು ವಿಶೇಷ ನಿರ್ವಹಣೆ ವ್ಯವಸ್ಥೆ: ಸಿದ್ದರಾಮಯ್ಯ

    ಬೆಂಗಳೂರು: ಬೆಂಗಳೂರಿನಲ್ಲಿ (Bengaluru) 5,500 ರಸ್ತೆ ಗುಂಡಿಗಳು ಇದ್ದು, ಒಂದು ತಿಂಗಳಲ್ಲಿ ರಸ್ತೆ (Road) ಗುಂಡಿ ಮುಚ್ಚಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah)  ಬಿಬಿಎಂಪಿ (BBMP) ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಬೆಂಗಳೂರು ನಗರ ಪ್ರದಕ್ಷಿಣೆ ಬಳಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ವಾರ್ಡ್ ರಸ್ತೆಗಳಲ್ಲಿ 5,500 ಗುಂಡಿಗಳು ಬಿದ್ದಿದ್ದು, ಅವುಗಳನ್ನು ಮುಚ್ಚಬೇಕು. ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಲ್ಲಿ 557 ಗುಂಡಿಗಳಿವೆ. ಈ ತಿಂಗಳಲ್ಲಿ ಭರ್ತಿ ಮಾಡಬೇಕು ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಪ್ರಜ್ವಲ್ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್ ರದ್ದತಿ ಕೇಂದ್ರದ ಕರ್ತವ್ಯ: ಜಿ.ಪರಮೇಶ್ವರ್

    ರಸ್ತೆ ಹಾಗೂ ಗುಂಡಿಗಳನ್ನು ನಿರ್ವಹಿಸಲು ಒಂದು ಶಾಶ್ವತ ನಿರ್ವಹಣಾ ವ್ಯವಸ್ಥೆ ರೂಪಿಸಲು ಸೂಚನೆ ನೀಡಲಾಗಿದೆ. ಗುಂಡಿಗಳು ಬಿದ್ದ ಹಾಗೆಯೇ ಕೂಡಲೇ ಮುಚ್ಚಬೇಕು. ಬಿಡಿಎನಲ್ಲಿಯೂ ಈ ರೀತಿ ವ್ಯವಸ್ಥೆ ರೂಪಿಸಬೇಕು ಅಂತ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಫೋನ್ ಟ್ಯಾಪ್‌ನಂತಹ ನೀಚ ಕೆಲಸ ಮಾಡಲ್ಲ: ಸಿದ್ದರಾಮಯ್ಯ ತಿರುಗೇಟು

    ಮಳೆಗಾಲ ನಿರ್ವಹಣೆಗೆ ಎಲ್ಲಾ ರೀತಿಯಲ್ಲಿಯೂ ಸಜ್ಜಾಗಬೇಕು. ಯಾವುದೇ ಕಾರಣಕ್ಕೂ ಮಳೆ ಬಂದಾಗ ನೀರು ನುಗ್ಗಿದರೆ ಎಂಜಿನಿಯರ್‌ಗಳನ್ನೇ ಹೊಣೆಗಾರರನ್ನಾಗಿಸಲಾಗುವುದು ಎಂದು ಎಚ್ಚರಿಕೆ ಕೊಟ್ಟರು. ರಾಜಕಾಲುವೆ ಒತ್ತುವರಿಯಾಗಿದ್ದರೆ ಎಷ್ಟೇ ಪ್ರಭಾವಿಗಳಾಗಿದ್ದರೂ ತೆರವುಗೊಳಿಸಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಪೋರ್ಶೆ ಕಾರಿಗೆ ಟೆಕ್ಕಿಗಳು ಬಲಿ ಪ್ರಕರಣ – ಅಪ್ರಾಪ್ತನ ತಂದೆಗೆ 2 ದಿನ ಪೊಲೀಸ್ ಕಸ್ಟಡಿ

  • ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ – ಮೇ ತಿಂಗಳಲ್ಲೇ 172 ಕೇಸ್‌ ದಾಖಲು!

    ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ – ಮೇ ತಿಂಗಳಲ್ಲೇ 172 ಕೇಸ್‌ ದಾಖಲು!

    – ಡೆಂಗ್ಯೂ ನಿಯಂತ್ರಣಕ್ಕೆ ಬಿಬಿಎಂಪಿ ಹಲವು ಮುನ್ನೆಚ್ಚರಿಕೆ ಕ್ರಮ

    ಬೆಂಗಳೂರು: ನಗರ ವ್ಯಾಪ್ತಿಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಬಿಬಿಎಂಪಿ ಮುಂದಾಗಿದೆ. ಡೆಂಗ್ಯೂ ಪ್ರಕರಣ ನಿಯಂತ್ರಿಸುವ ನಿಟ್ಟಿನಲ್ಲಿ ಬೃಹತ್‌ ಬೆಂಗಳೂರು ಮಹಾನರ ಪಾಲಿಕೆ (BBMP) ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳಲ್ಲಿ ಸೊಳ್ಳೆ ನಿಯಂತ್ರಣ ಕುರಿತು ಅರಿವು ಮೂಡಿಸುವ ಹಾಗೂ ಔಷಧಿ ಸಿಂಪಡಣೆಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ.

    ಗುರುವಾರವೂ ಸಹ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯ (National Dengue Day) ಅಂಗವಾಗಿ ಬೆಂಗಳೂರು ಪೂರ್ವ ವಲಯದ ರಾಮಸ್ವಾಮಿ ಪಾಳ್ಯದಲ್ಲಿ ಜಾಗೃತಿ ಅಭಿಯಾನ ನಡೆಸಲಾಗಿದೆ. ಬಿಬಿಎಂಪಿ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ಅವರು ಸಹ ಈ ಅಭಿಯಾನದಲ್ಲಿ ಸಾರ್ವಜನಿಕರು ಅನುಸರಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸಲಹೆ ನೀಡಿದ್ದಾರೆ.

    ಮಳೆ ಬಂದಾಗ ನೀರು ಸಂಗ್ರಹವಾಗಿ ಸೊಳ್ಳೆಗಳ (Mosquito) ಸಂತತಿ ಹೆಚ್ಚಾಗಲಿದ್ದು, ಅದನ್ನು ಫಾಗಿಂಗ್ ಮತ್ತು ಔಷಧಿ ಸಿಂಪಡಿಸುವ ಮೂಲಕ ತಡೆಯಬೇಕು. ಹೂವಿನ ಕುಂಡ, ಬಿಸಾಕಿದ ಟೈರ್, ನೀರು ಸಂಗ್ರಹಿಸುವ ತೊಟ್ಟಿ, ನೀರಿನ ಬಾಟಲ್ ಸೇರಿದಂತೆ ಇನ್ನಿತರ ಕಡೆಯಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಅಂತಹ ಸ್ಥಳಗಳಲ್ಲಿ ಎಚ್ಚರಿಕೆ ಕೊಳಚೆ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಬೇಕು ಎಂದಿದ್ದಾರೆ.

    ಆಯಾ ವಲಯದ ವಾರ್ಡ್ ಮಟ್ಟದಲ್ಲಿ ಒಂದು ವಾರ್ಡ್‌ಗೆ 4 ಔಷಧಿ ಸಿಂಪಡಣೆ ಮಾಡುವ ತಂಡಗಳನ್ನು ನಿಯೋಜನೆ ಮಾಡಿದ್ದು, ತಾತ್ಕಾಲಿಕವಾಗಿ ನೀರು ನಿಲ್ಲುವ ಸ್ಥಳ ಹಾಗೂ ಶಾಶ್ವತವಾಗಿ ನೀರು ನಿಲ್ಲುವ ಸ್ಥಳಗಳನ್ನು ಗುರುತಿಸಿ ಫಾಗಿಂಗ್ ಮತ್ತು ಔಷಧಿ ಸಿಂಪಡಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

    ಲಾರ್ವಾ ಸಮೀಕ್ಷೆ ಪ್ರಾರಂಭ:
    ಈಡೀಸ್, ಈಜಿಪ್ಟೈ ಎಂಬ ಸೊಳ್ಳೆಗಳಿಂದ ಡೆಂಗ್ಯೂ ರೋಗ ಹರಡುತ್ತದೆ. ಆ ಸೊಳ್ಳೆಗಳು ತೆರೆದಿಟ್ಟ ನೀರಿನ ತೊಟ್ಟಿಗಳು, ಏರ್ ಕೂಲರ್ ಗಳು, ಹೂವಿನ ಕುಂಡದ ತಟ್ಟೆಗಳು, ಬಕೆಟ್‌ಗಳು, ಸಿಮೆಂಟ್ ತೊಟ್ಟಿಗಳು, ತೆಂಗಿನ ಚಿಪ್ಪುಗಳು, ಒಡೆದ ಟೈರ್‌ಗಳಲ್ಲಿ ಉತ್ಪತ್ತಿಯಾಗುತ್ತವೆ. ಈ ಸಂಬಂಧ ಪ್ರಾರಂಭಿಕ ಹಂತದಲ್ಲೇ ಸೊಳ್ಳೆ ನಿಯಂತ್ರಣ ಮಾಡಲು ಲಾರ್ವಾ ಉತ್ಪಿತ್ತಿಯಾಗುವ ತಾಣಗಳನ್ನು‌ ಗುರುತಿಸಿ ನಾಶಪಡಿಸಲಾಗುತ್ತದೆ.

    ಕೊಳಚೆ ಹಾಗೂ ಇನ್ನಿತರ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಣಾ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ನಮ್ಮ ಕ್ಲಿನಿಕ್ ವೈದ್ಯರ ತಂಡ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿ ಮತ್ತು ಸಿಬ್ಬಂದಿ ತಂಡಗಳನ್ನು ರಚಿಸಿಕೊಂಡು ಮನೆ-ಮನೆ ಭೇಟಿ ನೀಡಿ ಡೆಂಗ್ಯೂ ಪ್ರಕರಣಗಳ ಪತ್ತೆ ಹಚ್ಚುವ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಸಹ ಹೇಳಿದ್ದಾರೆ.

    ಜಾಥಾ, ಧ್ವನಿವರ್ಧಕಗಳ ಮೂಲಕ ಜಾಗೃತಿ ಅಭಿಯಾನ:
    ನಗರದಲ್ಲಿ ಡೆಂಗ್ಯೂ ನಿಯಂತ್ರಿಸುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣ, ಆಯಾ ವಲಯಗಳ ವಾರ್ಡ್ ಮಟ್ಟದಲ್ಲಿ ಜಾಗೃತಿ ಜಾಥಾ ಹಾಗೂ ಪಾಲಿಕೆಯ ಕಸದ ವಾಹನಗಳಲ್ಲಿ ಧ್ವನಿವರ್ಧಕಗಳ ಮೂಲಕ ಡೆಂಗ್ಯೂ ಬಗ್ಗೆ ನಾಗರೀಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಿಸಲಾಗುತ್ತಿದೆ. ಜೊತೆಗೆ ಮನೆ-ಮನೆಗೆ ತೆರಳಿ ಡೆಂಗ್ಯೂ ನಿಯಂತ್ರಣದ ಕುರಿತು ಭಿತ್ತಿಪತ್ರಗಳನ್ನು ವಿತರಿಸಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ನುಡಿದಿದ್ದಾರೆ.

    ಈ ವೇಳೆ ಮುಖ್ಯ ಆರೋಗ್ಯಾಧಿಕಾರಿ ಡಾ.ಮದನಿ, ಪೂರ್ವ ವಲಯ ಆರೋಗ್ಯಾಧಿಕಾರಿ ಡಾ.ಭಾಗ್ಯಲಕ್ಷ್ಮಿ, ಡೆಂಗ್ಯೂ ನೋಡಲ್ ಅಧಿಕಾರಿ ಸುಜಾತಾ ಸೇರಿದಂತೆ ಇನ್ನಿತರರು ಜಾಥಾದಲ್ಲಿ ಪಾಲ್ಗೊಂಡಿದ್ದರು.

    ಮೇ 1 ರಿಂದ 13ರ ವರೆಗೆ ದಾಖಲಾದ ಡೆಂಗ್ಯೂ ಪ್ರಕರಣಗಳು – ಯಾವ ವಲಯದಲ್ಲಿ ಎಷ್ಟು ಕೇಸ್‌?
    ಬೊಮ್ಮನಹಳ್ಳಿ: 23
    ಪೂರ್ವ: 41
    ಮಹದೇವಪುರ: 44
    ಆರ್.ಆರ್ ನಗರ: 08
    ದಕ್ಷಿಣ: 34
    ಪಶ್ಚಿಮ: 16
    ಯಲಹಂಕ: 06
    ದಾಸರಹಳ್ಳಿ: 00
    ಒಟ್ಟು: 172 ಪ್ರಕರಣ

  • ರಾಜ್ಯದೆಲ್ಲೆಡೆ ವರುಣನ ಆರ್ಭಟ – ಹಲವೆಡೆ ಧರೆಗುರುಳಿದ ಮರ!

    ರಾಜ್ಯದೆಲ್ಲೆಡೆ ವರುಣನ ಆರ್ಭಟ – ಹಲವೆಡೆ ಧರೆಗುರುಳಿದ ಮರ!

    – ವಿದ್ಯುತ್ ಸಂಪರ್ಕ ಕಡಿತ; ಜನರ ಪರದಾಟ

    ಬೆಂಗಳೂರು: ರಾಜ್ಯದೆಲ್ಲೆಡೆ ವರುಣನ ಆರ್ಭಟ ಜೋರಾಗುತ್ತಿದೆ. ಒಂದೆಡೆ ಮಳೆಯ ಆಗಮನದಿಂದ ರೈತರು ಖುಷಿಪಟ್ಟರೆ, ಇನ್ನೂ ಕೆಲವೆಡೆ ಮಳೆಯ ಅವಾಂತರಕ್ಕೆ ಜನರು ಕಂಗಾಲಾಗಿದ್ದಾರೆ.

    ರಾಜಧಾನಿ ಬೆಂಗಳೂರಿನಲ್ಲಿ (Bengaluru) ಮಳೆಯ ಹೊಡೆತಕ್ಕೆ (Rain Effect) ಮರಗಳು ಧರೆಗುರುಳುತ್ತಿದ್ದು, ಕಳೆದ ಐದು ದಿನಗಳಲ್ಲಿ 271 ಮರಗಳು ನೆಲಕಚ್ಚಿವೆ. ಹಲವೆಡೆ ನಿಂತಿದ್ದ ಕಾರುಗಳ ಮೇಲೆ ಮರ ಮುರಿದುಬಿದ್ದು ಹಾನಿಯಾಗಿದೆ. ಈ ಬಗ್ಗೆ ಬಿಬಿಎಂಪಿಗೆ (BBMP) 400ಕ್ಕೂ ಹೆಚ್ಚು ದೂರುಗಳು ಬಂದಿವೆ.

    ಹುಬ್ಬಳ್ಳಿಯಲ್ಲಿ (Hubballi) ಶನಿವಾರ ರಾತ್ರಿ ಸುರಿದ ಅಪಾರ ಮಳೆಗೆ ಕಿಮ್ಸ್ ಹಿಂಭಾಗದ ಕಮರ್ಷಿಯಲ್ ಕಾಂಪ್ಲೆಕ್ಸ್‌ನಲ್ಲಿ ಕಾಂಪೌಂಡ್ ಕುಸಿತವಾಗಿದೆ. ಪರಿಣಾಮವಾಗಿ ಕಾಂಪ್ಲೆಕ್ಸ್‍ನ ಬೇಸ್‍ಮೆಂಟ್‍ನಲ್ಲಿದ್ದ 40 ಬೈಕ್‍ಗಳಿಗೆ ಹಾನಿಯಾಗಿದೆ. ಇನ್ನೂ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಹೊರ ಭಾಗದಲ್ಲಿನ ಎರಡು ಎಕರೆ ಪ್ರದೇಶದಲ್ಲಿ ಬೆಳಿದಿದ್ದ ತೋಟದಲ್ಲಿ ಬುಡ ಸಮೇತ ನಿಂಬೆ ಗಿಡಗಳು ನೆಲಕ್ಕುರುಳಿವೆ. ಇನ್ನೊಂದೆಡೆ ಸಿಡಿಲು ಬಡಿದು ಒಂದು ಆಕಳು, ಎರಡು ಆಡಿನ ಮರಿಗಳು ಸಾವನ್ನಪ್ಪಿವೆ.

    ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಬಿರುಗಾಳಿ ಸಹಿತ ಸುರಿದ ಮಳೆಗೆ ವಿದ್ಯುತ್ ಕಂಬಗಳು ಧರೆಗುರುಳಿವೆ. ವಿದ್ಯುತ್ ಇಲ್ಲದೇ ಗ್ರಾಮಸ್ಥರು ಪರದಾಡುವಂತಾಗಿದೆ. ಚಾಮರಾಜನಗರದಲ್ಲಿ ಭಾರೀ ಮಳೆಗೆ ಲಕ್ಷಾಂತರ ಬೆಲೆ ಬಾಳುವ ಬೆಳ್ಳುಳ್ಳಿ ಬೆಳೆ ನೀರಿನಲ್ಲಿ ಕೊಚ್ಚಿಹೋಗಿವೆ. ಮಲೆನಾಡು ಭಾಗದಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ಚಿಕ್ಕಮಗಳೂರು (Chikkamagaluru) ತಾಲೂಕಿನ ಶಿರವಾಸೆ ಗ್ರಾಮ ಪಂಚಾಯ್ತಿಯ ವ್ಯಾಪ್ತಿಯ ಹತ್ತಾರು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿ ಜನರು ಪರದಾಡುವಂತಾಗಿದೆ.

    ರಾಯಚೂರಿನಲ್ಲಿ ಹೋಟೆಲ್ ಒಂದರ ಟಿನ್‍ಗಳು ಹಾರಿ ಹೋಗಿ ಸಂಪೂರ್ಣ ಹಾನಿಯಾಗಿದೆ. ಇದೇ ಗ್ರಾಮದಲ್ಲಿ ಸಿಡಿಲು ಬಡಿದು ಐದು ಮೇಕೆಗಳು ಸಾವನ್ನಪ್ಪಿದ್ದು, ಓರ್ವನಿಗೆ ಗಂಭೀರ ಗಾಯವಾಗಿದೆ.

  • ಬೆಂಗಳೂರಿನ ಶ್ರೀಗಂಧಕಾವಲ್‍ನಲ್ಲಿ ಭಾರೀ ಅಗ್ನಿ ಅವಘಡ

    ಬೆಂಗಳೂರಿನ ಶ್ರೀಗಂಧಕಾವಲ್‍ನಲ್ಲಿ ಭಾರೀ ಅಗ್ನಿ ಅವಘಡ

    – 9 ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿ ಹತೋಟಿಗೆ

    ಬೆಂಗಳೂರು: ನಗರದ (Bengaluru) ಸುಮ್ಮನಹಳ್ಳಿ (Sumanahalli) ಬ್ರಿಡ್ಜ್ ಬಳಿಯ ಶ್ರೀಗಂಧಕಾವಲ್‍ನ ಅರಣ್ಯ ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ (Fire Accident) ಸಂಭವಿಸಿದ್ದು, ಮರಗಳು ಹೊತ್ತಿ ಉರಿದಿವೆ.

    ಬಿಬಿಎಂಪಿ (BBMP) ವ್ಯಾಪ್ತಿಗೆ ಸೇರಿದ 3 ಎಕರೆ ಅರಣ್ಯ ಪ್ರದೇಶದಲ್ಲಿ ಸುಮಾರು ಅರ್ಧ ಭಾಗಕ್ಕೆ ಬೆಂಕಿ ಆವರಿಸಿದೆ. ತೀವ್ರ ಬೇಸಿಗೆಯ ಪರಿಣಾಮ ಬೆಂಕಿ ಭಾರೀ ಪ್ರಮಾಣದಲ್ಲಿ ವ್ಯಾಪಿಸಿದೆ. ಒಣ ಕಸಕ್ಕೆ ಹಾಕಿದ ಬೆಂಕಿ ಅರಣ್ಯ ಪ್ರದೇಶಕ್ಕೆ ಹಬ್ಬಿದೆ ಎಂದು ಶಂಕಿಸಲಾಗಿದೆ. ಗುರುವಾರ ರಾತ್ರಿಯೇ ಅರಣ್ಯ ಪ್ರದೇಶಕ್ಕೆ ಬೆಂಕಿ ತಾಗಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಕಾಂಬೋಡಿಯಾದ ಸೇನಾನೆಲೆಯಲ್ಲಿ ಮದ್ದುಗುಂಡುಗಳ ಸ್ಫೋಟ – 20 ಸೈನಿಕರು ಸಾವು

    ನಗರದಲ್ಲಿ ತೆರವುಗೊಳಿಸಿದ ಮರಗಳನ್ನು ಇಲ್ಲಿ ತಂದು ಡಂಪ್ ಮಾಡಲಾಗುತ್ತಿತ್ತು. ಅದೇ ರೀತಿ ಹೊರಗಡೆ ಮಾರಾಟ ಮಾಡುವ ಕಟ್ಟಿಗೆಗಳನ್ನು ಇಲ್ಲಿ ತಂದು ಹಾಕಿ ಹರಾಜು ಮಾಡಲಾಗ್ತಿತ್ತು. ಹರಾಜಾಗದೇ ಉಳಿದಿದ್ದ ಕಟ್ಟಿಗೆಗಳೆಲ್ಲ ಅರಣ್ಯ ವ್ಯಾಪ್ತಿಯಲ್ಲಿ ರಾಶಿ ಬಿದ್ದಿದ್ದವು. ತೀವ್ರ ಬಿಸಿಲಿನ ಕಾರಣ ಸಂಪೂರ್ಣ ಒಣಗಿದ್ದ ಮರದ ತುಂಡುಗಳಿಗೆ ಕಿಡಿಗೇಡಿಗಳು ಬೆಂಕಿ ಇಟ್ಟಿರುವ ಸಾಧ್ಯತೆಯೂ ಇದೆ ಎಂಬುದಾಗಿಯೂ ಅಧಿಕಾರಿಗಳು ತಿಳಿಸಿದ್ದಾರೆ.

    ಸತತ 9 ಗಂಟೆಗಳಿಂದ ನಿರಂತರ ಕಾರ್ಯಾಚರಣೆ ನಡೆಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಪೆÇಲೀಸರು ಮತ್ತು ಬಿಬಿಎಂಪಿ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಅಂಬುಲೆನ್ಸ್‌ನಿಂದ ಸರಣಿ ಅಪಘಾತ – ಚಾಲಕನ ಬಂಧನ

  • ಬೆಂಗಳೂರಿನಲ್ಲಿ ಯಾವುದೇ ಸಮಸ್ಯೆ ಇಲ್ಲದೇ ಮತದಾನ ಆರಂಭ : ತುಷಾರ್‌ ಗಿರಿನಾಥ್‌

    ಬೆಂಗಳೂರಿನಲ್ಲಿ ಯಾವುದೇ ಸಮಸ್ಯೆ ಇಲ್ಲದೇ ಮತದಾನ ಆರಂಭ : ತುಷಾರ್‌ ಗಿರಿನಾಥ್‌

    ಬೆಂಗಳೂರು: ಕೆಲವೊಂದು ಕಡೆ ಇವಿಎಂನಲ್ಲಿ (EVM) ಸಣ್ಣಪುಟ್ಟ ಸಮಸ್ಯೆ ಇತ್ತು. ಬೆಳಗ್ಗೆ 7 ಗಂಟೆಯ ಒಳಗಡೆ ಎಲ್ಲಾ ಸಮಸ್ಯೆ ಪರಿಹಾರ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಹೇಳಿದ್ದಾರೆ.

    ಮತದಾನ ಮಾಡಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಎಲ್ಲಾ ಕಡೆ ಯಾವುದೇ ಸಮಸ್ಯೆ ಇಲ್ಲದೇ ಮತದಾನ ಶುರುವಾಗಿದೆ. ಮತದಾನ ಹೆಚ್ಚಾಗಲು ಎಲ್ಲಾ ರೀತಿ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.  ಇದನ್ನೂ ಓದಿ: ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ ಮೇಲೆ ದಾಳಿ ಕೇಸ್‌ – ಖಲಿಸ್ತಾನಿ ಪರ ಆರೋಪಿ ಬಂಧನ

     

    ನಮಗೂ ಇದೊಂದು ಪರೀಕ್ಷೆ. ಈ ಬಾರಿ ಮತದಾನ ಹೆಚ್ಚಾಗುವ ನಿರೀಕ್ಷೆಯಿದೆ. ಬೆಂಗಳೂರು ಜನತೆ ಬಂದು ಮತ ಹಾಕಬೇಕು ಎಂದು ತುಷಾರ್ ಗಿರಿನಾಥ್ ಕೈ ಮುಗಿದು ಮನವಿ ಮಾಡಿದರು.

    ಬೆಂಗಳೂರಿನಲ್ಲಿ ಉತ್ತಮ ಪತಿಕ್ರಿಯೆ ವ್ಯಕ್ತವಾಗುತ್ತಿದೆ. ಬೆಳಗ್ಗೆ ಹಲವು ಮತಗಟ್ಟೆಗಳಲ್ಲಿ ಮತದಾರರು ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ.

     

  • ನಟಿ ಅಮೂಲ್ಯ ಮಾವ, ಬಿಜೆಪಿ ಮುಖಂಡ ರಾಮಚಂದ್ರ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ

    ನಟಿ ಅಮೂಲ್ಯ ಮಾವ, ಬಿಜೆಪಿ ಮುಖಂಡ ರಾಮಚಂದ್ರ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ

    ಬೆಂಗಳೂರು: ನಟಿ ಅಮೂಲ್ಯ ಮಾವ, ಬಿಬಿಎಂಪಿ (BBMP) ಮಾಜಿ ಕಾರ್ಪೋರೇಟರ್ ರಾಮಚಂದ್ರ (Ramachandra) ಅವರ ಮನೆ ಮೇಲೆ ಚುನಾವಣಾಧಿಕಾರಿಗಳು ದಾಳಿ ಮಾಡಿದ್ದಾರೆ.

    10 ವಾಹನಗಳಲ್ಲಿ ಬಂದ 30ಕ್ಕೂ ಹೆಚ್ಚು ಅಧಿಕಾರಿಗಳು ಆರ್‌ಆರ್ ನಗರದಲ್ಲಿರುವ (RR Nagara) ನಿವಾಸದ ಮನೆ ರಾತ್ರಿ 10 ಗಂಟೆಯ ವೇಳೆ ದಾಳಿ ಮಾಡಿ 31 ಲೀಟರ್‌ ಮದ್ಯವನ್ನು (Liquor) ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಉದ್ಯಮಿ ಮನೆ ಮೇಲೆ ಐಟಿ ದಾಳಿ; ಸೀಕ್ರೆಟ್‌ ರೂಮಿನಲ್ಲಿದ್ದ 22 ಕೆಜಿ ಚಿನ್ನ, 6.50 ಕೋಟಿ ಹಣ ಜಪ್ತಿ!

     

    ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರಾಮಚಂದ್ರ, ಅಧಿಕಾರವನ್ನ ದುರುಪಯೋಗ ಪಡಿಸಿಕೊಂಡು ಮನೆ ಮೇಲೆ ದಾಳಿ ಮಾಡಿಸಿದ್ದಾರೆ. ಕಾಂಗ್ರೆಸ್‌ (Congress) ಈ ಭಾಗದಲ್ಲಿ ಹಣವನ್ನು ಹಂಚಿಕೆ ಮಾಡುತ್ತಿತ್ತು. ಅದಕ್ಕೆ ನಾವು ಅಡ್ಡಿ ಪಡಿಸುತ್ತೇವೆ ಎಂದು ನಮ್ಮ ಮನೆ ಮೇಲೆ‌ ದಾಳಿ ಮಾಡಿದ್ದಾರೆ ಎಂದು ದೂರಿದರು. ಇದನ್ನೂ ಓದಿ: ನೇಹಾ ಕೊಲೆ ಆರೋಪಿ ಫಯಾಜ್‍ನನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳಕ್ಕೆ ಕರೆದೊಯ್ದ ಸಿಐಡಿ

    ದಾಳಿ ವೇಳೆ ಆರ್‌ಓಗೆ ಪದೇ ಪದೇ ಪೋನ್ ಬರುತಿತ್ತು. ಅವರನ್ನು ಎರಡು ದಿನನ ಒಳಗಡೆ ಹಾಕಿಸಿ ಎಂದು ಫೋನಿನಲ್ಲಿ ಇದ್ದ ವ್ಯಕ್ತಿ ಹೇಳುತ್ತಿದ್ದರು. ಮೊಮ್ಮಕ್ಕಳ ಹುಟ್ಟುಹಬ್ಬಕ್ಕೆ ಮದ್ಯ ತರಿಸಿದ್ದೆ. ‌‌ಚುನಾವಣೆ ಸಮಯದಲ್ಲಿ ದೊಡ್ಡ ಮಟ್ಟದಲ್ಲಿ ಹುಟ್ಟುಹಬ್ಬ ಆಚರಿಸಬಾರದು ಎಂದು ಸುಮ್ಮನೆ ಆಗಿದ್ದೆವು. ಈ ಭಾಗದಲ್ಲಿ ಬಿಜೆಪಿಗೆ (BJP) 18 ಸಾವಿರ ಮುನ್ನಡೆ ಬರುತ್ತದೆ. ಇದನ್ನು ಸಹಿಸಲಾಗದೇ ಅಧಿಕಾರ ದುರ್ಬಳಕೆ ಮಾಡಿದ್ದಾರೆ ಎಂದು ರಾಮಚಂದ್ರ ಆರೋಪಿಸಿದ್ದಾರೆ.

  • ಇನ್ಮುಂದೆ ಭಾನುವಾರವೂ ತೆರೆಯಲಿದೆ ಉಪನೋಂದಣಿ ಕಚೇರಿ

    ಇನ್ಮುಂದೆ ಭಾನುವಾರವೂ ತೆರೆಯಲಿದೆ ಉಪನೋಂದಣಿ ಕಚೇರಿ

    ಬೆಂಗಳೂರು: ಇನ್ನು ಮುಂದೆ ಭಾನುವಾರವೂ ಉಪನೋಂದಣಿ ಕಚೇರಿ ತೆರೆಯುವಂತೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

    ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಭಾನುವಾರವೂ ಉಪನೋಂದಣಿ ಕಚೇರಿ ತೆರೆಯುವಂತೆ ಸೂಚಿಸಲಾಗಿದೆ. ಪ್ರಾರಂಭಿಕ ಹಂತದಲ್ಲಿ ಮೊದಲು ಬೆಂಗಳೂರಿನಲ್ಲಿ ಪ್ರಾರಂಭಿಸುವಂತೆ ಆದೇಶ ನೀಡಲಾಗಿದೆ. ಇದನ್ನೂ ಓದಿ: ನಾವು ಎಷ್ಟು ಅರ್ಜಿಗಳನ್ನು ಪರಿಗಣಿಸಬೇಕು? – EVM ಬೇಡವೆಂದು ಕಾಂಗ್ರೆಸ್‌ ಸಲ್ಲಿಸಿದ್ದ ಅರ್ಜಿ ವಜಾ

    ಏಪ್ರಿಲ್‌ನಿಂದ ಎಲ್ಲಾ ಮಹಾನಗರ ಪಾಲಿಕೆಯಲ್ಲಿ ಉಪನೋಂದಣಿ ಕಚೇರಿ ತೆರೆಯಲಿದ್ದು, ಭಾನುವಾರ ಕೆಲಸ ಮಾಡಿದ್ದ ಅಧಿಕಾರಿ, ಸಿಬ್ಬಂದಿಗೆ ಮಂಗಳವಾರ ರಜೆ ನೀಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ. ಇದನ್ನೂ ಓದಿ: ದೆಹಲಿ ಮದ್ಯ ನೀತಿ ಹಗರಣ – ತೆಲಂಗಾಣ ಮಾಜಿ ಸಿಎಂ ಕೆಸಿಆರ್‌ ಪುತ್ರಿ ಕವಿತಾ ಅರೆಸ್ಟ್‌

  • ಬಿಬಿಎಂಪಿ ಬಜೆಟ್ 2024: ಮುಂಬೈ ಮಾದರಿ ಬಿಬಿಎಂಪಿ ಮೆಡಿಕಲ್ ಕಾಲೇಜು ಸ್ಥಾಪನೆ

    ಬಿಬಿಎಂಪಿ ಬಜೆಟ್ 2024: ಮುಂಬೈ ಮಾದರಿ ಬಿಬಿಎಂಪಿ ಮೆಡಿಕಲ್ ಕಾಲೇಜು ಸ್ಥಾಪನೆ

    ಬೆಂಗಳೂರು: ನಾಡಿನ ಜನರಿಗೆ ಉತ್ತಮ ಆರೋಗ್ಯ ಸೇವೆ ಸಿಗಬೇಕು ಎಂಬ ನಿಟ್ಟಿನಲ್ಲಿ ಬಿಬಿಎಂಪಿ (BBMP) ಮಹತ್ವದ ಹೆಜ್ಜೆ ಇಟ್ಟಿದೆ. ಎಲ್ಲವೂ ಬಿಬಿಎಂಪಿ ಅಂದುಕೊಂಡಂತೆಯೇ ಆದರೆ ಬೆಂಗಳೂರಿನಲ್ಲಿ (Bengaluru) ಬಿಬಿಎಂಪಿಯಿಂದಲೇ ಮೆಡಿಕಲ್ ಕಾಲೇಜು (Medicle College) ಸ್ಥಾಪನೆಯಾಗಲಿದೆ.

    2024ರ ಬಿಬಿಎಂಪಿ ಬಜೆಟ್‌ನಲ್ಲಿ ಮೆಡಿಕಲ್ ಕಾಲೇಜು ವಿಷಯ ಪ್ರಸ್ತಾಪವಾಗಿದ್ದು, ಇದರ ಡಿಪಿಆರ್ ಸಿದ್ಧಪಡಿಸಲು ಕ್ರಮಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ. ಇದನ್ನೂ ಓದಿ: BBMP Budget 2024: ಬಡವರ ಹಸಿವು ನೀಗಿಸಲು 50 ಹೊಸ ಇಂದಿರಾ ಕ್ಯಾಂಟೀನ್

    ಮುಂಬೈ ಮಾದರಿ ಮೆಡಿಕಲ್ ಕಾಲೇಜು:
    ‘ಆರೋಗ್ಯಕರ ಬೆಂಗಳೂರು’ ಯೋಜನೆಯಡಿ ಈ ವಿಷಯವನ್ನು ಬಿಬಿಎಂಪಿ ಬಜೆಟ್‌ನಲ್ಲಿ ಮಂಡಿಸಲಾಗಿದೆ. ಈಗಾಗಲೇ ಬೃಹತ್ ಮುಂಬೈ ನಗರ ಪಾಲಿಕೆ ಅಡಿಯಲ್ಲಿ ವೈದ್ಯಕೀಯ ಮಹಾ ವಿದ್ಯಾಲಯ ನಡೆಯುತ್ತಿದೆ. ಹಲವಾರು ವರ್ಷಗಳಿಂದ ಉತ್ತಮ ಆರೋಗ್ಯ ಸೇವೆ ನೀಡುತ್ತಾ ಮುಂಬೈ ಪಾಲಿಕೆಯ ಮೆಡಿಕಲ್ ಕಾಲೇಜುಗಳು ಮೇಲ್ಪಂಕ್ತಿಯಲ್ಲಿವೆ. ಇದನ್ನೂ ಓದಿ: BBMP Budget 2024: ಪಾಲಿಕೆಯ ಶಾಲಾ/ಕಾಲೇಜು ವಿದ್ಯಾರ್ಥಿಗಳು, ಪೋಷಕರಿಗೆ ‘ಆಯುಷ್ಮಾನ್‌ ಭಾರತ್‌’ ವಿಮೆ!

    ಅದೇ ಮಾದರಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕೂಡಾ ಹೊಸದಾಗಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಡಿಪಿಆರ್ ಸಿದ್ಧಪಡಿಸಲು ಕ್ರಮಕೈಗೊಳ್ಳಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ. ಇದನ್ನೂ ಓದಿ: BBMP Budget 2024: ಆಟದ ಮೈದಾನದ ಕೆಳಗೆ ಬರಲಿದೆ ಅಂಡರ್‌ಗ್ರೌಂಡ್‌ ಪಾರ್ಕಿಂಗ್!‌

    ಬಿಎಂಸಿ ಮಾದರಿ ಏನು?
    ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ ಒಟ್ಟು 4 ಮೆಡಿಕಲ್ ಕಾಲೇಜು ಹಾಗೂ 1 ಡೆಂಟಲ್ ಕಾಲೇಜುಗಳನ್ನು ನಡೆಸುತ್ತಿದೆ. ಪ್ರತಿವರ್ಷ ಈ ಕಾಲೇಜುಗಳಲ್ಲಿ ಒಟ್ಟು 1,600 ವಿದ್ಯಾರ್ಥಿಗಳು ಸೇರ್ಪಡೆಯಾಗುತ್ತಿದ್ದಾರೆ. ಈ ಐದು ಮೆಡಿಕಲ್ ಕಾಲೇಜುಗಳಲ್ಲಿ ವರ್ಷಕ್ಕೆ ಸರಾಸರಿ 1.10 ಕೋಟಿ ಹೊರರೋಗಿಗಳು ಚಿಕಿತ್ಸೆ ಪಡೆಯುತ್ತಾರೆ. ಇದನ್ನೂ ಓದಿ: BBMP Budget 2024: ಬೆಂಗಳೂರು ನಗರದಲ್ಲಿ ನಿರ್ಮಾಣವಾಗಲಿದೆ 2 ಸುರಂಗ ಮಾರ್ಗ

  • BBMP Budget 2024: ಬಡವರ ಹಸಿವು ನೀಗಿಸಲು 50 ಹೊಸ ಇಂದಿರಾ ಕ್ಯಾಂಟೀನ್

    BBMP Budget 2024: ಬಡವರ ಹಸಿವು ನೀಗಿಸಲು 50 ಹೊಸ ಇಂದಿರಾ ಕ್ಯಾಂಟೀನ್

    ಬೆಂಗಳೂರು: ಬಡವರ ಹಸಿವು ನೀಗಿಸಲು, ಕೈಗೆಟಕುವ ದರದಲ್ಲಿ ಆಹಾರ ಸಿಗುವಂತಾಗಲು ಮತ್ತೆ ಹೊಸ 50 ಇಂದಿರಾ ಕ್ಯಾಂಟೀನ್‌ಗಳು‌ (Indira Canteen) ಬೆಂಗಳೂರಿನಲ್ಲಿ (Bengaluru) ತಲೆ ಎತ್ತಲಿವೆ.

    ಬಿಬಿಎಂಪಿ ಬಜೆಟ್‌ನಲ್ಲಿ (BBMP Budget) ಘೋಷಿಸಿದ ಈ ಹೊಸ ಇಂದಿರಾ ಕ್ಯಾಂಟೀನ್‌ಗಳು ಸ್ಥಿರ ಅಥವಾ ಮೊಬೈಲ್ ಮೋಡ್‌ನಲ್ಲಿ ಸ್ಥಾಪನೆಯಾಗಲಿವೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಈ ವರ್ಷ ಹೊಸದಾಗಿ ಇಂದಿರಾ ಕ್ಯಾಂಟೀನ್ ಸ್ಥಾಪನೆಯಾಗಲಿದೆ. ಇಂದಿರಾ ಕ್ಯಾಂಟೀನ್‌ಗಳಿಗಾಗಿ ಈ ವರ್ಷದ ಬಜೆಟ್‌ನಲ್ಲಿ ಒಟ್ಟು 70 ಕೋಟಿ ರೂ.ಗಳನ್ನು ನೀಡಲಾಗಿದೆ. ಇದನ್ನೂ ಓದಿ: BBMP Budget 2024: ಪಾಲಿಕೆಯ ಶಾಲಾ/ಕಾಲೇಜು ವಿದ್ಯಾರ್ಥಿಗಳು, ಪೋಷಕರಿಗೆ ‘ಆಯುಷ್ಮಾನ್‌ ಭಾರತ್‌’ ವಿಮೆ!

    ಬ್ರ‍್ಯಾಂಡ್ ಬೆಂಗಳೂರು- ಆರೋಗ್ಯಕರ ಬೆಂಗಳೂರು – ಆರೋಗ್ಯ ಕ್ಷೇತ್ರಕ್ಕೇನು ಸಿಕ್ತು?
    – ಬೆಂಗಳೂರಿನಲ್ಲಿ ಆರೋಗ್ಯ ಸೇವೆ ಉನ್ನತೀಕರಣಕ್ಕೆ ಮುಂದಿನ 2 ವರ್ಷದಲ್ಲಿ 200 ಕೋಟಿ ರೂ. ವೆಚ್ಚ. ಇದರಲ್ಲಿ ಈ ವರ್ಷ 100 ಕೋಟಿ ರೂ.ಗಳ ಯೋಜನೆ ಶುರು.
    – ಬೆಂಗಳೂರು ಆರೋಗ್ಯ ಆಯುಕ್ತ ಹೊಸ ಹುದ್ದೆ ಸೃಷ್ಟಿ.
    – 144 ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, 225 ನಮ್ಮ ಕ್ಲಿನಿಕ್, 27 ಹೆರಿಗೆ ಆಸ್ಪತ್ರೆ, 7 ಫಸ್ಟ್ ರೆಫರಲ್ ಯೂನಿಟ್ ನಿರ್ವಹಣೆಗೆ 20 ಕೋಟಿ ರೂ.
    – ಸಮಗ್ರ ಸದೃಢ ಆರೋಗ್ಯ ಯೋಜನೆಯಡಿ ಮುಂದಿನ 3 ವರ್ಷಕ್ಕೆ ಸಮಗ್ರ ಯೋಜನೆ
    – ಇದರ ಅಡಿಯಲ್ಲಿ 40 ಹೊಸ ನಗರ ಪ್ರಾಥಮಿಕ ಕೇಂದ್ರ ನಿರ್ಮಾಣ ಮತ್ತು 81 ಪ್ರಾಥಮಿಕ ಆರೋಗ್ಯ ಕೇಂದ್ರ ನವೀಕರಣಕ್ಕೆ ಒಟ್ಟು 64 ಕೋಟಿ ರೂ.
    – 24 ಹೆರಿಗೆ ಆಸ್ಪತ್ರೆಗಳು ಮತ್ತು ರೆಫರಲ್ ಘಟಕಗಳಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ 24 ಕೋಟಿ ರೂ.
    – ಈ ವರ್ಷ 27 ಉಚಿತ ಫಿಸಿಯೋಥೆರಪಿ ಕೇಂದ್ರಗಳ ಸ್ಥಾಪನೆ.
    – ಎಲೆಕ್ಟ್ರಿಕ್ ವಾಹನದಲ್ಲಿ ಮನೆ ಬಾಗಿಲಿನಲ್ಲೇ ಚುಚ್ಚುಮದ್ದು ಹಾಕಿಸುವ ಆರೋಗ್ಯ ಸಾರಥಿ ಯೋಜನೆ.
    – ನಮ್ಮ ಕ್ಲಿನಿಕ್‌ಗಳ 100 ಪ್ರಯೋಗಾಲಯಗಳಲ್ಲಿ ಇನ್ನೂ ಹೆಚ್ಚಿನ 20 ವಿವಿಧ ಚಿಕಿತ್ಸಾ ಸಂಬಂಧಿತ ಪರೀಕ್ಷೆ.
    – 14 ಅತ್ಯಾಧುನಿಕ ಜೀವ ರಕ್ಷಕ ಅಂಬುಲೆನ್ಸ್ ಖರೀದಿ.
    – ಈ ಎಲ್ಲಾ ಕಾರ್ಯಗಳಿಗೆ ಈ ವರ್ಷ 25 ಕೋಟಿ ರೂ. ಅನುದಾನ.
    – ವಿಶೇಷ ಚೇತನ ಮಕ್ಕಳಿಗೆ ದಿನದ ಆರೈಕೆ ಕೇಂದ್ರ ಸ್ಥಾಪನೆಗೆ 1 ಕೋಟಿ ರೂ.
    – ಪಾಲಿಕೆಯ ಆಂತರಿಕ ವೈದ್ಯರ ತಂಡ ಹಾಗೂ ಕ್ಷೇತ್ರ ತಜ್ಞರ ಸಹಾಯದಿಂದ ಮನೋಬಿಂಬ ಯೂಟ್ಯೂಬ್ ಚಾನೆಲ್‌ನಲ್ಲಿ ಸಂವಾದ.
    – ಪಾಲಿಕೆ ವ್ಯಾಪ್ತಿಯಲ್ಲಿ ಹೊಸ ರುದ್ರಭೂಮಿ, ಚಿತಾಗಾರ ನಿರ್ಮಾಣ. ರುದ್ರಭೂಮಿ ಹಾಗೂ ಚಿತಾಗಾರ ಉನ್ನತೀಕರಿಸಲು 15 ಕೋಟಿ ರೂ.
    – ಶುಚಿಯಾದ ಮಾಂಸದ ಬೇಡಿಕೆ ಈಡೇರಿಕೆ ಹಾಗೂ ಪೂರೈಕೆಗೆ 2 ವಲಯಗಳಲ್ಲಿ ಆಧುನಿಕ ಕಸಾಯಿಖಾನೆ ನಿರ್ಮಾಣ. ಪ್ರಾಣಿಗಳ ತ್ಯಾಜ್ಯ ವಿಲೇವಾರಿಗಾಗಿ 4 ಘಟಕ ನಿರ್ಮಾಣಕ್ಕೆ ಒಟ್ಟು 10 ಕೋಟಿ ರೂ. ನೀಡಲಾಗಿದೆ. ಇದನ್ನೂ ಓದಿ: BBMP Budget 2024: ಆಟದ ಮೈದಾನದ ಕೆಳಗೆ ಬರಲಿದೆ ಅಂಡರ್‌ಗ್ರೌಂಡ್‌ ಪಾರ್ಕಿಂಗ್!‌