Tag: bbmp

  • ಬಿಬಿಎಂಪಿ ವ್ಯಾಪ್ತಿಯೇ ಗ್ರೇಟರ್ ಬೆಂಗಳೂರಿಗೂ ಇರಲಿದೆ – ಡಿಕೆಶಿ

    ಬಿಬಿಎಂಪಿ ವ್ಯಾಪ್ತಿಯೇ ಗ್ರೇಟರ್ ಬೆಂಗಳೂರಿಗೂ ಇರಲಿದೆ – ಡಿಕೆಶಿ

    ಬೆಂಗಳೂರು: ಈಗ ಇರುವ ಬಿಬಿಎಂಪಿ (BBMP) ವ್ಯಾಪ್ತಿಯೇ ಗ್ರೇಟರ್ ಬೆಂಗಳೂರಿಗೂ ಇರಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸ್ಪಷ್ಟಪಡಿಸಿದ್ದಾರೆ.ಇದನ್ನೂ ಓದಿ: ಹಾಸನದಲ್ಲಿ ಮಾತ್ರ ಹಾರ್ಟ್ ಅಟ್ಯಾಕ್ ಕೇಸ್ ಜಾಸ್ತಿ ಆಗಿಲ್ಲ, ಇಡೀ ದೇಶದಲ್ಲಿ ಆಗ್ತಿದೆ: ಎ.ಮಂಜು

    ಗ್ರೇಟರ್ ಬೆಂಗಳೂರು ಪ್ರಾಧಿಕಾರ (Greater Bengaluru Authority) ಸಂಬಂಧ ವಿಧಾನಸೌಧದಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು ಯಾವ ರೀತಿ ವಿಭಜನೆ ಆಗಬೇಕು ಎಂದು ಫೈನಲ್ ರಿಪೋರ್ಟ್ ಕೊಟ್ಟಿದ್ದಾರೆ. ವಿಪಕ್ಷ ನಾಯಕರ ಜೊತೆಯೂ ನಾನು ಮಾತನಾಡಬೇಕಿತ್ತು. ಆದರೆ ಆ ದಿನ ಅವರು ಇರಲಿಲ್ಲ. ರಿಪೋರ್ಟ್ ಕೊಟ್ಟಿರುವವರು ವಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಇದೆಲ್ಲವೂ ಆದ ಮೇಲೆ ಇದನ್ನು ಕ್ಯಾಬಿನೆಟ್‌ಗೆ ತೆಗೆದುಕೊಂಡು ಹೋಗ್ತೀನಿ. ಈಗ ಇರುವ ಬಿಬಿಎಂಪಿ ವ್ಯಾಪ್ತಿಯೇ ಗ್ರೇಟರ್ ಬೆಂಗಳೂರಿಗೂ ಇರಲಿದೆ. ಮುಂದೆ ಹೊಸ ವ್ಯಾಪ್ತಿಯನ್ನು ಸೇರಿಸುವ ನಿರ್ಧಾರ ಮಾಡ್ತೀವಿ ಎಂದರು.

    ಈಗ ಎಲ್ಲವನ್ನೂ ಸಮಾನವಾಗಿ ವಿಂಗಡಿಸಲಾಗಿದೆ. ಹೊಸ ವ್ಯಾಪ್ತಿ ಸೇರಿಸುವ ಬಗ್ಗೆ ಮುಂದೆ ನೋಡೋಣ. ಈ ರಿಪೋರ್ಟ್ ಮುಂದಿನ ಕ್ಯಾಬಿನೆಟ್‌ನಲ್ಲಿ ತಂದು ಎಲೆಕ್ಷನ್ ಮಾಡುವ ಬಗ್ಗೆ ತೀರ್ಮಾನ ಮಾಡ್ತೀವಿ. ಮುಂದೆ ಹೊಸ ವ್ಯಾಪ್ತಿಯನ್ನು ಸೇರಿಸಬೇಕಾಗುತ್ತದೆ. ಸದ್ಯಕ್ಕೆ ಹೊಸ ವ್ಯಾಪ್ತಿ ಸೇರಿಸುವುದಿಲ್ಲ ಎಂದು ತಿಳಿಸಿದರು.ಇದನ್ನೂ ಓದಿ: ಹಿಮಾಚಲಪ್ರದೇಶ: 17 ದಿನದಲ್ಲಿ 19 ಬಾರಿ ಮೇಘಸ್ಫೋಟ – 82 ಸಾವು, ಬದರೀನಾಥ ಮಾರ್ಗ ಬಂದ್

  • ಕಾಟಾಚಾರದ ಸರ್ವೇಗೆ 3.6 ಕೋಟಿ ವೆಚ್ಚ – ಬೇಕರಿ, ಅಂಗಡಿಗಳಿಗೂ ಜಾತಿ ಸಮೀಕ್ಷೆ ಸ್ಟಿಕ್ಕರ್!

    ಕಾಟಾಚಾರದ ಸರ್ವೇಗೆ 3.6 ಕೋಟಿ ವೆಚ್ಚ – ಬೇಕರಿ, ಅಂಗಡಿಗಳಿಗೂ ಜಾತಿ ಸಮೀಕ್ಷೆ ಸ್ಟಿಕ್ಕರ್!

    ಬೆಂಗಳೂರು: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸರ್ಕಾರ 3.6 ಕೋಟಿ ರೂ. ಖರ್ಚು ಮಾಡುತ್ತಿದೆ. ಬಿಬಿಎಂಪಿ (BBMP) ಸಿಬ್ಬಂದಿ ಮಾತ್ರ ಸಮೀಕ್ಷೆ ಮಾಡದೇ, ಕಾಟಾಚಾರಕ್ಕೆ ಸ್ಟಿಕ್ಕರ್ ಅಂಟಿಸುತ್ತಿರುವುದು ಬಯಲಾಗಿದೆ.

    ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ (SC Comprehensive Survey) 3.6 ಕೋಟಿ ರೂ. ಖರ್ಚು ಮಾಡಲಾಗಿದೆ. ಇದರಲ್ಲಿ ಒಂದು ಸ್ಟಿಕ್ಕರ್‌ನ ಬೆಲೆ 2.47 ಪೈಸೆ, ಸ್ಟಿಕ್ಕರ್ ಅಂಟಿಸಲು ಸಿಬ್ಬಂದಿಗೆ 5 ರೂ., ಒಂದು ಸ್ಟಿಕ್ಕರ್ ಪ್ರಿಂಟ್‌ಗೆ 7.47ರೂ., ಭಿತ್ರಿಪತ್ರಕ್ಕೆ 6 ರೂ., ಸಾಮಾಜಿಕ ಜಾಲತಾಣಗಳಲ್ಲಿ ಜಾಗೃತಿ ಮೂಡಿಸಲು ಎರಡು ಕಿರು ಚಿತ್ರಗಳಿಗೆ ಪ್ರತಿ ಸೆಕೆಂಡಿಗೆ 35 ಸಾವಿರ ರೂ., ಸಂಪೂರ್ಣ ನಿರ್ಮಾಣಕ್ಕೆ 49.5 ಲಕ್ಷ ರೂ., 5 ಲಕ್ಷ ರೂ. ಮೌಲ್ಯದ 2 ಕ್ಯಾಮೆರಾಗಳು, ನಿರ್ದೇಶಕ, ಸಹಾಯಕ ನಿರ್ದೇಶಕ, ಕ್ಯಾಮೆರಾ ಮ್ಯಾನ್ ಸೇರಿ ಚಿತ್ರಿಕರಣದ ಸಾಧನಕ್ಕೆ 4 ಲಕ್ಷ ರೂ., ಕಲಾವಿದರಿಗೆ 2.98 ಲಕ್ಷ ರೂ., ಎಸ್‌ಎಸ್‌ಡಿ ಕಾರ್ಡ್ & ಡಿವಿಡಿ ಪೆನ್‌ಡ್ರೈವ್‌ಗೆ 1,500 ರೂ. ಖರ್ಚು ಮಾಡಲಾಗಿದೆ.ಇದನ್ನೂ ಓದಿ: ಲೇಡಿಸ್ ಬಾರ್‌ಗಳಲ್ಲಿ ನಿಯಮ ಉಲ್ಲಂಘನೆ – ಪ್ರತಿದಿನ ಸಿಸಿಟಿವಿ ಫೂಟೇಜ್ ಕೊಡುವಂತೆ ಸಿಸಿಬಿ ರೂಲ್ಸ್

    ಇದಲ್ಲದೇ ಫೇಸ್‌ಬುಕ್, ಇನ್‌ಸ್ಟಾಗ್ರಾಂನಲ್ಲಿ ಪ್ರಚಾರಕ್ಕೆ 28 ಲಕ್ಷ ರೂ., ಜನರಿಗೆ ಜಾಗೃತಿ ಮೂಡಿಸಲು 49.5 ಲಕ್ಷ ರೂ., ಒಂದು ವಾರದಲ್ಲಿ 14 ಆಟೋಗಳಲ್ಲಿ ಧ್ವನಿವರ್ಧಕದ ಮೂಲಕ 28 ವಿಧಾನಸಭಾ ಕ್ಷೇತ್ರದಲ್ಲಿ ಜಾಗೃತಿ ಅಭಿಯಾನ ನಡೆಸಲು ಆಟೋ ಬಾಡಿಗೆ 11 ಲಕ್ಷ ರೂ., ಜಾಗೃತಿಗೆ 6 ಲಕ್ಷ ರೂ. 3.70 ಭಿತ್ತಿ ಪತ್ರಕ್ಕೆ 22.2 ಲಕ್ಷ ರೂ. ವೆಚ್ಚವಾಗಿದೆ.

    ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಇಷ್ಟೆಲ್ಲಾ ಖರ್ಚು ಮಾಡಲಾಗಿದೆ. ಈವರೆಗೂ ಬೆಂಗಳೂರು ನಗರದಲ್ಲಿ 60%ರಷ್ಟು ಕೂಡ ಸರ್ವೇ ನಡೆದಿಲ್ಲ. ಇನ್ನೂ ಕೆಲವೆಡೆ ಸಮೀಕ್ಷೆ ಮಾಡದೇ ಸ್ಟಿಕ್ಕರ್ ಅಂಟಿಸಿದ್ದಾರೆ. ಜೊತೆಗೆ ಥಣಿಸಂದ್ರ ಭಾಗದಲ್ಲಿ ಬೇಕರಿ, ಕಾಂಡಿಮೆಟ್ಸ್ ಅಂಗಡಿಗಳಿಗೂ ಸಮೀಕ್ಷೆ ಪೂರ್ಣ ಎಂಬ ಸ್ಟಿಕ್ಕರ್ ಅಂಟಿಸಿದ್ದಾರೆ. ಈ ರೀತಿ ಅಂಗಡಿಗಳ ಮೇಲೆಯೂ ಸ್ಟಿಕ್ಕರ್ ಅಂಟಿಸಿರುವ ಬಿಬಿಎಂಪಿ ಸಿಬ್ಬಂದಿಯ ಅವಸ್ಥೆಯನ್ನು ಜನರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ.ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯರಿಂದ ಎಎಸ್‌ಪಿಗೆ ಅಪಮಾನ – ಬಿಜೆಪಿಯಿಂದ ರಾಜಕೀಯಕ್ಕೆ ಭರಮನಿ ಎಂಟ್ರಿ?

  • ಸಮೀಕ್ಷೆ ಮಾಡದೇ ಜಾತಿಗಣತಿ ಸ್ಟಿಕ್ಕರ್ ಅಂಟಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ಕೇಸ್ – ಮೂವರು BBMP ನೌಕರರು ಅಮಾನತು

    ಸಮೀಕ್ಷೆ ಮಾಡದೇ ಜಾತಿಗಣತಿ ಸ್ಟಿಕ್ಕರ್ ಅಂಟಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ಕೇಸ್ – ಮೂವರು BBMP ನೌಕರರು ಅಮಾನತು

    ಬೆಂಗಳೂರು: ಸಮೀಕ್ಷೆಯನ್ನೇ ಮಾಡದೇ ಜಾತಿಗಣತಿ ಪೂರ್ಣ ಎಂಬ ಸ್ಟಿಕ್ಕರ್ ಅಂಟಿಸಿದ್ದನ್ನು ಮನೆ ಮಾಲೀಕ ಪ್ರಶ್ನಿಸಿದ್ದಕ್ಕೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಬಿಬಿಎಂಪಿ (BBMP) ನೌಕರರನ್ನು ಅಮಾನತುಗೊಳಿಸಲಾಗಿದೆ.

    ಈ ಕುರಿತು ರಾಜರಾಜೇಶ್ವರಿನಗರ ವಲಯ ಜಂಟಿ ಆಯುಕ್ತರು ಆದೇಶ ಹೊರಡಿಸಿದ್ದಾರೆ. 2025ರ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯ ಸಂಬಂಧ ಮನೆ ಮನೆಗೆ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯಲೋಪ ಎಸಗಿರುವ ಮೂರು ಜನ ಬಿಬಿಎಂಪಿ ನೌಕರರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಸಮೀಕ್ಷೆಯನ್ನೇ ಮಾಡದೇ ಜಾತಿಗಣತಿ ಪೂರ್ಣ ಸ್ಟಿಕ್ಕರ್‌ ಅಂಟಿಸಿದ ಬಿಬಿಎಂಪಿ ಸಿಬ್ಬಂದಿ – ಪ್ರಶ್ನಿಸಿದ ಮನೆ ಮಾಲೀಕನ ಮೇಲೆ ಹಲ್ಲೆ

    ಹೆಚ್.ಬಿ.ಆರ್ ಲೇಔಟ್ ಉಪವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಪರಿವೀಕ್ಷಕರಾದ ರಮೇಶ್, ಕಂದಾಯ ವಸೂಲಿಗಾರರಾದ ಪೆದ್ದುರಾಜು ಹಾಗೂ ಕೆಂಗೇರಿ ಉಪವಿಭಾಗ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ವಸೂಲಿಗಾರರಾದ ಸಿ.ಸಂದಿಲ್ ಕುಮಾರ್‌ರವರನ್ನು ಕರ್ತವ್ಯಲೋಪದ ಮೇರೆಗೆ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.

    ಏನಿದು ಘಟನೆ?
    ಚಿಕ್ಕಲ್ಲಸಂದ್ರದ ಸಾರ್ವಭೌಮ ನಗರದ 7ನೇ ಕ್ರಾಸ್‌ನಲ್ಲಿರುವ ನಂದೀಶ್ ಎಂಬುವವರ ಮನೆಗೆ ಬಿಬಿಎಂಪಿ ಸಿಬ್ಬಂದಿ ಜಾತಿಗಣತಿ ಪೂರ್ಣಗೊಂಡಿದೆ ಎಂಬ ಸ್ಟಿಕ್ಕರ್ ಅಂಟಿಸಿದ್ದರು. ಈ ಬಗ್ಗೆ ಪ್ರಶ್ನಿಸಿದ್ದಕ್ಕೆ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಮನೆ ಮಾಲೀಕ ಆರೋಪಿಸಿದ್ದರು.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಮನೆ ಮಾಲೀಕನ ಮಗ ಶಶಾಂಕ್, ನಾವು ಎಲ್ಲರೂ ಮನೆ ಒಳಗಡೆ ಇದ್ದೆವು. ಆಗ ಪೌರಕಾರ್ಮಿಕರು ಮನೆಗೆ ಸ್ಟಿಕ್ಕರ್ ಅಂಟಿಸಿದ್ದಾರೆ. ಇದನ್ನು ನಮ್ಮ ತಂದೆ ಪ್ರಶ್ನಿಸಿದ್ದಾರೆ. ಸರ್ವೇ ಮಾಡಿಲ್ಲ, ದಾಖಲೆ ಎಲ್ಲಿ ಅಂತ ಕೇಳಿದೆವು. ಇದಕ್ಕೆ ಸಿಬ್ಬಂದಿ, ಇದು ನನಗೆ ಕೊಟ್ಟಿರೋ ಟಾಸ್ಕ್ ಎಂದಿದ್ದಾರೆ. 1 ಗಂಟೆ ಬಳಿಕ ಮೇಲ್ವಿಚಾರಕರ ಜೊತೆ ಬಂದು, ಅಪ್ಪನಿಗೆ ಅವಾಚ್ಯವಾಗಿ ನಿಂದಿಸಿದ್ದಾರೆ. ಅಲ್ಲದೇ ಕಾಲಿನಿಂದ ಒದ್ದು, ಕೆನ್ನೆಗೆ ಹೊಡೆದಿದ್ದಾರೆ. ಐಡಿ ಕಾರ್ಡ್ ಸಹ ಅವರು ತಂದಿರಲಿಲ್ಲ ಎಂದು ಆರೋಪಿಸಿದ್ದರು. ಈ ಸಂಬಂಧ ಸುಬ್ರಹ್ಮಣ್ಯಪುರ ಪೊಲೀಸ್ ಸ್ಟೇಷನ್‌ಗೆ ಅಮ್ಮ, ನಾನು, ತಂದೆ ದೂರು ಕೊಡಲು ಹೋಗಿದ್ದೆವು. ಈ ವೇಳೆ, ಸಿಬ್ಬಂದಿ ಕ್ಷಮೆಯಾಚಿಸಿದ್ದಾರೆ. ಇದರಿಂದ ದೂರು ಕೊಡದೇ ವಾಪಸ್ ಆಗಿದ್ದೆವು ಎಂದು ತಿಳಿಸಿದ್ದರು.

    ಇದೆಲ್ಲದರ ನಡುವೆ ಮನೆಯ ಸದಸ್ಯರನ್ನು ಮಾತನಾಡಿಸದೇ ಕಾಟಾಚಾರಕ್ಕೆ ಕಂಡ ಕಂಡ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ ಹೋಗ್ತಿದ್ದಾರೆ. ವಿಪರ್ಯಾಸವೆಂದರೆ ಈ ಸಮೀಕ್ಷೆಗೆ ಪೌರಕಾರ್ಮಿಕರು, ಜಲಮಂಡಳಿಯ ಸಿಬ್ಬಂದಿಗಳನ್ನೂ ಬಳಸಿಕೊಳ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.ಇದನ್ನೂ ಓದಿ: ಅಮ್ಮ, ಸೋದರನಿಗೆ ಡ್ರಗ್ಸ್ ಚಟ – ಬಾಲಕನಿಗೆ ಆಸರೆಯಾಗಿದ್ದು ನಾಯಿಗಳು ಮಾತ್ರ – ಬೊಗಳುವ ಮೂಲಕ ಮಾತ್ರ ಸಂವಹನ!

  • ಸಮೀಕ್ಷೆಯನ್ನೇ ಮಾಡದೇ ಜಾತಿಗಣತಿ ಪೂರ್ಣ ಸ್ಟಿಕ್ಕರ್‌ ಅಂಟಿಸಿದ ಬಿಬಿಎಂಪಿ ಸಿಬ್ಬಂದಿ – ಪ್ರಶ್ನಿಸಿದ ಮನೆ ಮಾಲೀಕನ ಮೇಲೆ ಹಲ್ಲೆ

    ಸಮೀಕ್ಷೆಯನ್ನೇ ಮಾಡದೇ ಜಾತಿಗಣತಿ ಪೂರ್ಣ ಸ್ಟಿಕ್ಕರ್‌ ಅಂಟಿಸಿದ ಬಿಬಿಎಂಪಿ ಸಿಬ್ಬಂದಿ – ಪ್ರಶ್ನಿಸಿದ ಮನೆ ಮಾಲೀಕನ ಮೇಲೆ ಹಲ್ಲೆ

    ಬೆಂಗಳೂರು: ಸಮೀಕ್ಷೆಯನ್ನೇ ಮಾಡದೇ ಬಿಬಿಎಂಪಿ (BBMP) ಸಿಬ್ಬಂದಿ ಜಾತಿಗಣತಿ ಸಮೀಕ್ಷೆ (Caste Census) ಪೂರ್ಣ ಎಂಬ ಸ್ಟಿಕ್ಕರ್‌ನ್ನು ಮನೆಗೆ ಅಂಟಿಸುತ್ತಿದ್ದಾರೆ. ಸ್ಟಿಕ್ಕರ್‌ ಅಂಟಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಮನೆ ಮಾಲೀಕರೊಬ್ಬರ ಮೇಲೆ ಹಲ್ಲೆಯನ್ನು ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

    ಚಿಕ್ಕಲ್ಲಸಂದ್ರದ ಸಾರ್ವಭೌಮ ನಗರದ 7ನೇ ಕ್ರಾಸ್‍ನಲ್ಲಿರುವ ನಂದೀಶ್‌ ಎಂಬವರ ಮನೆಗೆ ಬಿಬಿಎಂಪಿ ಸಿಬ್ಬಂದಿ ಜಾತಿ ಗಣತಿ ಪೂರ್ಣಗೊಂಡಿದೆ ಎಂಬ ಸ್ಟಿಕ್ಕರ್‌ ಅಂಟಿಸಿದ್ದಾರೆ. ಈ ಬಗ್ಗೆ ಪ್ರಶ್ನಿಸಿದ್ದಕ್ಕೆ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಮನೆ ಮಾಲೀಕ ಆರೋಪಿಸಿದ್ದಾರೆ. ಇದನ್ನೂ ಓದಿ: UP | ರಾಂಗ್ ರೂಟ್‌ಲ್ಲಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಟ್ರಕ್ – ತಂದೆ, 4 ಮಕ್ಕಳು ಸೇರಿ ಐವರು ದುರ್ಮರಣ

    ಈ ಬಗ್ಗೆ ಪ್ರತಿಕ್ರಿಯಿಸಿರುವ ಮನೆ ಮಾಲೀಕನ ಮಗ ಶಶಾಂಕ್, ನಾವು ಎಲ್ಲರೂ ಮನೆ ಒಳಗಡೆ ಇದ್ದೆವು. ಆಗ ಪೌರಕಾರ್ಮಿಕರು ಮನೆಗೆ ಸ್ಟಿಕ್ಕರ್ ಅಂಟಿಸಿದ್ದಾರೆ. ಇದನ್ನು ನಮ್ಮ ತಂದೆ ಪ್ರಶ್ನಿಸಿದ್ದಾರೆ. ಸರ್ವೇ ಮಾಡಿಲ್ಲ, ದಾಖಲೆ ಎಲ್ಲಿ ಅಂತ ಕೇಳಿದೆವು. ಇದಕ್ಕೆ ಸಿಬ್ಬಂದಿ, ಇದು ನನಗೆ ಕೊಟ್ಟಿರೋ ಟಾಸ್ಕ್ ಎಂದಿದ್ದಾರೆ. 1 ಗಂಟೆ ಬಳಿಕ ಮೇಲ್ವಿಚಾರಕರ ಜೊತೆ ಬಂದು, ಅಪ್ಪನಿಗೆ ಅವಾಚ್ಯವಾಗಿ ನಿಂದಿಸಿದ್ದಾರೆ. ಅಲ್ಲದೇ ಕಾಲಿನಿಂದ ಒದ್ದು, ಕೆನ್ನೆಗೆ ಹೊಡೆದಿದ್ದಾರೆ. ಐಡಿ ಕಾರ್ಡ್‌ ಸಹ ಅವರು ತಂದಿರಲಿಲ್ಲ ಎಂದು ಆರೋಪಿಸಿದ್ದಾರೆ.

    ಈ ಸಂಬಂಧ ಸುಬ್ರಹ್ಮಣ್ಯಪುರ ಪೊಲೀಸ್ ಸ್ಟೇಷನ್‍ಗೆ ಅಮ್ಮ, ನಾನು, ತಂದೆ ದೂರು ಕೊಡಲು ಹೋಗಿದ್ದೆವು. ಈ ವೇಳೆ, ಸಿಬ್ಬಂದಿ ಕ್ಷಮೆಯಾಚಿಸಿದ್ದಾರೆ. ಇದರಿಂದ ದೂರು ಕೊಡದೇ ವಾಪಸ್‌ ಆಗಿದ್ದೆವು ಎಂದು ತಿಳಿಸಿದ್ದಾರೆ.

    ಇದೆಲ್ಲದರ ನಡುವೆ ಮನೆಯ ಸದಸ್ಯರನ್ನು ಮಾತನಾಡಿಸದೇ ಕಾಟಾಚಾರಕ್ಕೆ ಕಂಡ ಕಂಡ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ ಹೋಗ್ತಿದ್ದಾರೆ. ವಿಪರ್ಯಾಸವೆಂದರೆ ಈ ಸಮೀಕ್ಷೆಗೆ ಪೌರಕಾರ್ಮಿಕರು, ಜಲಮಂಡಳಿಯ ಸಿಬ್ಬಂದಿಗಳನ್ನೂ ಬಳಸಿಕೊಳ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಇದನ್ನೂ ಓದಿ: ಬೈಕ್‌ ಅಪಘಾತ – ವಚನಾನಂದ ಶ್ರೀ ಸಹೋದರ ಸಾವು

  • ಬೇಕಾಬಿಟ್ಟಿ ಜನಗಣತಿ – ಪೌರ ಕಾರ್ಮಿಕರಿಂದ ಮನೆಗೆ ಸ್ಟಿಕ್ಕರ್‌!

    ಬೇಕಾಬಿಟ್ಟಿ ಜನಗಣತಿ – ಪೌರ ಕಾರ್ಮಿಕರಿಂದ ಮನೆಗೆ ಸ್ಟಿಕ್ಕರ್‌!

    – ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್‌ನಲ್ಲಿ ಬಟಾಬಯಲು

    ಬೆಂಗಳೂರು: ಕರ್ನಾಟಕ ಸರ್ಕಾರ (Karnataka Government) ಬಿಬಿಎಂಪಿ ಸಹಯೋಗದೊಂದಿಗೆ, ಬೆಂಗಳೂರು (Bengaluru) ನಗರದಾದ್ಯಂತ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಯನ್ನು (SC Survey) ನಡೆಸುತ್ತಿದೆ. ಆದರೆ ನಗರದ ಅನೇಕ ಕಡೆ ಇದು ಕಾಟಚಾರಕ್ಕೆ ಮಾಡುತ್ತಿರುವ ಸಮೀಕ್ಷೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬೆನ್ನಲ್ಲೇ ಪಬ್ಲಿಕ್ ಟಿವಿ ಕೂಡ ರಿಯಾಲಿಟಿ ಚೆಕ್ ಮಾಡಿದಾಗ ಸಮೀಕ್ಷೆಯ ಕಳ್ಳಾಟ ಬಯಲಾಗಿದೆ.

    ನಗರದ ಹಲವು ಕಡೆ ಸಮೀಕ್ಷೆ ಹೋದವರು, ಮನೆಗಳಿಗೆ ಕೇವಲ ಚೀಟಿ ಅಂಟಿಸಿ ಹೋಗುತ್ತಿದ್ದು, ನಿವಾಸಿಗಳ ಬಳಿ ಯಾವುದೇ ದಾಖಲೆ, ಮಾಹಿತಿ ಕೇಳುತ್ತಿಲ್ಲ. ಇನ್ನು ಕೆಲವು ಕಡೆ ಪೌರ ಕಾರ್ಮಿಕರು ಮನೆಯ ಗೋಡೆಗಳಿಗೆ ಚೀಟಿ ಅಂಟಿಸಿ ಹೋಗುತ್ತಿದ್ದಾರೆ. ಈ ಸಂಬಂಧ ನಗರದ ಹಲವು ಕಡೆ ನಿಮ್ಮ ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್ ಮೂಲಕ ಸತ್ಯ ಸತ್ಯತೆಯನ್ನ ಹೊರಗೆಳೆದಿದೆ. ಇದನ್ನೂ ಓದಿ: ಶೌಚಾಲಯದಲ್ಲಿ ಮಹಿಳಾ ಸಹೋದ್ಯೋಗಿ ವೀಡಿಯೋ ರೆಕಾರ್ಡ್ ಟೆಕ್ಕಿ ಅರೆಸ್ಟ್

     

    ಸಮೀಕ್ಷೆ ಹೇಗೆ ಮಾಡಬೇಕು?
    ಪರಿಶಿಷ್ಟ ಪಂಗಡಗಳಿಗೆ ಒಳ ಮೀಸಲಾತಿ ನೀಡಲು ಕೈಗೊಂಡಿರುವ ಸಮೀಕ್ಷೆಯಲ್ಲಿ 101 ಉಪ ಜಾತಿಗಳ ವರ್ಗೀಕರಣಕ್ಕೆ ದತ್ತಾಂಶ ಸಂಗ್ರಹಣೆಗಾಗಿ ಮನೆ ಮನೆ ಹೋಗಿ ಮಾಹಿತಿ ಸಂಗ್ರಹ ಮಾಡಬೇಕು. ಮನೆಯ ಸದಸ್ಯರನ್ನು ಭೇಟಿ ಮಾಡಿ ದಾಖಲೆ ಪರಿಶೀಲನೆ ಮಾಡಿ ಆ ಬಳಿಕ ಸ್ಟಿಕ್ಕರ್‌ ಅಂಟಿಸಿ ಯಾವುದಾದರೂ ಗೊಂದಲ ಇದ್ದಲ್ಲಿ ಮಾತ್ರ ಕರೆ ಮಾಡುವಂತೆ ಮಾಹಿತಿ ನೀಡಬೇಕು. ಆದರೆ ನೇರ ಭೇಟಿ, ದಾಖಲೆ ಪರಿಶೀಲನೆಯನ್ನೂ ಮಾಡದೇ ನಗರದ ಬಹುತೇಕ ಕಡೆ ಸ್ಟಿಕ್ಕರ್‌ ಅಂಟಿಸಿ ಹೋಗುತ್ತಿದ್ದಾರೆ.

    ಕಾಟಚಾರದ ಸಮೀಕ್ಷೆ ಹೇಗಿದೆ ಎನ್ನುವುದಕ್ಕೆ ಸಿಸಿಟಿವಿ ಸಾಕ್ಷ್ಯ ಲಭ್ಯವಾಗಿದೆ. ನಗರದ ಹೆಚ್‌ಬಿಆರ್‌ ಲೇಔಟ್ ನಲ್ಲಿ ಮನೆಯಲ್ಲಿದ್ದ ಯಾರನ್ನೂ ಸಂಪರ್ಕ ಮಾಡದೇ ಮನೆಗೆ ಬಂದವರೇ ಗೋಡೆಗೆ ಸ್ಟಿಕ್ಕರ್‌ ಅಂಟಿಸಿ ಹೋಗಿದ್ದಾರೆ. ಬಿಬಿಎಂಪಿ ಅಧಿಕಾರಿ ಸಿಬ್ಬಂದಿಗಳ ಕಳ್ಳಾಟದ ವಿಡಿಯೋವನ್ನು ಕೂಡ ಬೆಂಗಳೂರಿಗರು ಬಿಡುಗಡೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೈ ಕೊಟ್ಟ ಪ್ರೀತಿಸಿದ ಹುಡುಗಿ ಮನನೊಂದು ಯುವಕ ನೇಣಿಗೆ ಶರಣು

     

    ಈ ರೀತಿ ಸಮೀಕ್ಷೆ ಬಗ್ಗೆ ಸಾರ್ವಜನಿಕರು ಕೂಡ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ಮನೆಗೆ ಅಂಟಿಸಿದ್ದ ಸ್ಟಿಕ್ಕರ್‌ಗಳಲಿದ್ದ ಸಂಖ್ಯೆಗೆ ಕರೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾರನ್ನೂ ಕೇಳದೆ ಹೇಗೆ ಸಮೀಕ್ಷೆ ಮಾಡಿದ್ದೀರಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಸಾರ್ವಜನಿಕರ ಎಚ್ಚರಿಕೆಗೆ ಕಂಗಾಲಾದ ಸಹಾಯವಾಣಿ ಸಿಬ್ಬಂದಿ ಕೂಡ ತಮ್ಮಿಂದ ಆಗಿರೋ ತಪ್ಪನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.

    ಸಮೀಕ್ಷೆ ಹಳ್ಳ ಹಿಡಿಯಲು ಸರ್ಕಾರವೇ ಕಾರಣ. ಸಂಬಳ ಆಗದ ಕಾರಣ ಆಶಾ ಕಾರ್ಯಕರ್ತೆಯರು ಸಮೀಕ್ಷೆಯಲ್ಲಿ ಭಾಗಿಯಾಗುತ್ತಿಲ್ಲ. ಸಂಬಳ ಆಗದೇ ಕಾರಣ ನಾವು ಹೋಗುತ್ತಿಲ್ಲ ಎಂದು ಆಶಾ ಕಾರ್ಯಕರ್ತರು ಕೂಡ ಹಠ ಹಿಡಿದಿದ್ದಾರೆ. ಮೂರ್ನಾಲ್ಕು ತಿಂಗಳಿನಿಂದ ಸಂಬಳ ಆಗದ ಕಾರಣವೇ ಸಮೀಕ್ಷೆ ಹಳ್ಳ ಹಿಡಿಯುತ್ತಿದೆ.

  • ಕಸದ ಲಾರಿಯಲ್ಲಿ ಶವ ಪತ್ತೆ | ದಿನಾ ಕುಡಿದು ಬಂದು ರಂಪಾಟ ಮಾಡಿದ್ದಕ್ಕೆ ಮಹಿಳೆಯ ಕೊಲೆ!

    ಕಸದ ಲಾರಿಯಲ್ಲಿ ಶವ ಪತ್ತೆ | ದಿನಾ ಕುಡಿದು ಬಂದು ರಂಪಾಟ ಮಾಡಿದ್ದಕ್ಕೆ ಮಹಿಳೆಯ ಕೊಲೆ!

    – ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಆಶಾ, ಸಂಶುದ್ದೀನ್
    – ತಡರಾತ್ರಿ ಫೋನ್‌ನಲ್ಲಿ ಮಾತಾಡ್ತಿದ್ಳು, ಇದ್ರಿಂದ ಜಗಳವಾಗಿ ಹತ್ಯೆ

    ಬೆಂಗಳೂರು: ಮಹಿಳೆಯೊಬ್ಬರನ್ನ ಬರ್ಬರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ರೋಚಕ ಸಂಗತಿಯೊಂದು ಬಯಲಾಗಿದೆ. ದಿನಾ ಕುಡಿದು ಬಂದು ರಂಪಾಟ ಮಾಡುತ್ತಿದ್ದಳು, ಇದೇ ವಿಷಯಕ್ಕಾಗಿ ಸ್ನೇಹಿತ ಕೊಲೆ ಮಾಡಿದ ವಿಚಾರ ತನಿಖೆ ವೇಳೆ ತಿಳಿದುಬಂದಿದೆ.

    ಪ್ರಕರಣ ದಾಖಲಾದ 20 ಗಂಟೆಯೊಳಗಾಗಿ ಸಿ.ಕೆ.ಅಚ್ಚುಕಟ್ಟು (Chennamanakere Police Station) ಠಾಣಾ ಪೊಲೀಸರು ಅಸ್ಸಾಂ ಮೂಲದ ಸಂಶುದ್ದೀನ್‌ನನ್ನು ಬಂಧಿಸಿದ್ದರು.ಇದನ್ನೂ ಓದಿ: ಬೆಂಗಳೂರು | ಮಹಿಳೆಯ ಭಯಾನಕ ಹತ್ಯೆ ಕೇಸ್‌ – ಅಸ್ಸಾಂ ಮೂಲದ ಲಿವ್‌ ಇನ್‌ ಗೆಳೆಯ ತಮ್ಸುದ್ದಿನ್ ಅರೆಸ್ಟ್‌

    ಪ್ರಾಥಮಿಕ ತನಿಖೆ ವೇಳೆ, ಹುಳಿಮಾವು ಬಳಿಕ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುವಾಗ ಕೊಲೆಯಾದ ಪುಷ್ಪಾ @ ಆಶಾ ಹಾಗೂ ಆರೋಪಿ ಸಂಶುದ್ದೀನ್‌ಗೆ ಪರಿಚಯವಾಗಿತ್ತು. ಕಳೆದ ಎರಡು ವರ್ಷಗಳಿಂದ ಇಬ್ಬರು ಲಿವ್ ಇನ್ ರಿಲೇಷನ್‌ನಲ್ಲಿದ್ದರು. ಆದರೆ ಮೃತ ಮಹಿಳೆ ದಿನಾಲೂ ಮನೆಗೆ ಬರುವಾಗ ಕುಡಿದು ಬಂದು ರಂಪಾಟ ಮಾಡುತ್ತಿದ್ದಳು. ಜೊತೆಗೆ ತಡರಾತ್ರಿವರೆಗೂ ಫೋನ್‌ನಲ್ಲಿ ಮಾತಾಡುತ್ತಿದ್ದಳು. ಇದೇ ಕಾರಣದಿಂದ ಇಬ್ಬರ ನಡುವೆ ಜಗಳವಾಗಿತ್ತು. ಜಗಳ ಅತಿರೇಕಕ್ಕೆ ಹೋಗಿ, ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಬಳಿಕ ಮೃತದೇಹವನ್ನು ಮೂಟೆಗೆ ಹಾಕಿ, ಬೈಕ್‌ನಲ್ಲಿ ತಂದು ಕಸದ ಲಾರಿಗೆ ಹಾಕಿ ಹೋಗಿದ್ದ ಎಂದು ತಿಳಿದುಬಂದಿದೆ.

    ಆಶಾಗೆ ಇದಕ್ಕೂ ಮೊದಲು ಮದುವೆಯಾಗಿದ್ದು, ಗಂಡ ಮೃತಪಟ್ಟಿದ್ದ. ಆಕೆಗೆ ಇಬ್ಬರು ಮಕ್ಕಳಿದ್ದರು. ಜೊತೆಗೆ ಆರೋಪಿ ಸಂಶುದ್ದೀನ್‌ಗೆ ಮದುವೆಯಾಗಿ ಹೆಂಡತಿ ಹಾಗೂ ಇಬ್ಬರು ಮಕ್ಕಳು ಅಸ್ಸಾಂನಲ್ಲಿದ್ದರು ಎಂದು ಬಯಲಾಗಿದೆ.

    ಏನಿದು ಘಟನೆ?
    ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವಾಪ್ತಿಯಲ್ಲಿ ಮಹಿಳೆಯೊಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಿ, ಮೃತದೇಹವನ್ನ ಮೂಟೆ ಕಟ್ಟಿ ಕಸದ (Garbage Truck) ಲಾರಿಯಲ್ಲಿಡಲಾಗಿತ್ತು.

    ರಾತ್ರಿ 1:40ಕ್ಕೆ ಕಸ ಹಾಕಲು ಬಂದಿದ್ದ ಸ್ಥಳೀಯ ವ್ಯಕ್ತಿ ಚೀಲ ಬಿಚ್ಚಿದಾಗ ಮೊದಲಿಗೆ ಕೂದಲು ಕಂಡಿತ್ತು. ಬಳಿಕ ಮೃತದೇಹ ಇರೋದು ಗೊತ್ತಾಗಿ ತಕ್ಷಣ ಆ ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದ. ಪೊಲೀಸರು ಬಂದಾಗ ಮಹಿಳೆ ಕೊಲೆ ವಿಚಾರ ಬಯಲಾಗಿತ್ತು.

    ಇನ್ನು ಸ್ಥಳಕ್ಕೆ ಆಗಮಿಸಿದ ಸಿಕೆ ಅಚ್ಚುಕಟ್ಟು ಪೊಲೀಸರು ಸ್ಥಳೀಯ ನೀಡಿದ ದೂರಿನ ಆಧಾರದಲ್ಲಿ ಎಫ್‌ಐಆರ್ (FIR) ದಾಖಲಿಸಿಕೊಂಡಿದ್ದರು. ಸಿಸಿಟಿವಿ ಆಧಾರದ ಮೇಲೆ ಕೊಲೆ ಹಂತಕರಿಗಾಗಿ 2 ತಂಡಗಳ ರಚಿಸಿ ಶೋಧ ನಡೆಸುತ್ತಿದ್ದರು. ಬಳಿಕ ಮಹಿಳೆಯ ಗುರುತು ಪತ್ತೆ ಮಾಡಿದ್ದರು. ಕೊಲೆಯಾದ ಮಹಿಳೆ ಹುಳಿಮಾವು ನಿವಾಸಿ ಪುಷ್ಪಾ @ ಆಶಾ ಎಂದು ಗುರುತಿಸಲಾಗಿತ್ತು. ಅಲ್ಲದೇ, ಶವ ಸಾಗಾಟಕ್ಕೆ ದ್ವಿಚಕ್ರ ವಾಹನ ಬಳಕೆ ಮಾಡಿರೋದು ಗೊತ್ತಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು.

    ಪ್ರಕರಣ ದಾಖಲಾದ 20 ಗಂಟೆ ಒಳಗಾಗಿಯೇ ಹಂತಕನನ್ನು ಇನ್ಸ್‌ಪೆಕ್ಟರ್‌ ಗಿರೀಶ್ ನಾಯ್ಕ್ ನೇತೃತ್ವದ ತಂಡ ಬಂಧಿಸಿದೆ. ಸಿಸಿಟಿವಿ (CCTV) ದೃಶ್ಯಾವಳಿಗಳನ್ನು ಪರಿಶೀಲಿಸಿ ಹಂತಕನನ್ನ ಬಂಧಿಸಿದ್ದರು.ಇದನ್ನೂ ಓದಿ: ಅನ್ಯಕೋಮಿನ ವ್ಯಕ್ತಿಯನ್ನ ಪ್ರೀತಿಸಿ ಮದ್ವೆಯಾಗಿದ್ದ ಮಹಿಳೆ – ಗಂಡನೇ ಕೊಲೆ ಮಾಡಿ ಹೆಣ ತಂದು ಬಿಸಾಡಿರುವ ಶಂಕೆ

  • ತಾನೇ ಸಾಕಿದ್ದ ಶ್ವಾನಕ್ಕೆ ಚಿತ್ರಹಿಂಸೆ ಕೊಟ್ಟು ಬರ್ಬರವಾಗಿ ಹತ್ಯೆಗೈದ ಮಹಿಳೆ

    ತಾನೇ ಸಾಕಿದ್ದ ಶ್ವಾನಕ್ಕೆ ಚಿತ್ರಹಿಂಸೆ ಕೊಟ್ಟು ಬರ್ಬರವಾಗಿ ಹತ್ಯೆಗೈದ ಮಹಿಳೆ

    – ಹತ್ಯೆಗೈದ ಬಳಿಕ ಸತ್ತ ನಾಯಿಯೊಂದಿಗೆ 2 ದಿನ ವಾಸ!

    ಬೆಂಗಳೂರು: ಮಹಿಳೆಯೊಬ್ಬಳು ತಾನೇ ಸಾಕಿದ್ದ ನಾಯಿಗೆ ಚಿತ್ರಹಿಂಸೆ ಕೊಟ್ಟು, ಬಳಿಕ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಗರದ ಮಹದೇವಪುರ (Mahadevpura) ವ್ಯಾಪ್ತಿಯ ಖಾಸಗಿ ಅಪಾರ್ಟ್ಮೆಂಟ್‌ನಲ್ಲಿ ನಡೆದಿದೆ.

    ಆರೋಪಿ ಮಹಿಳೆಯನ್ನು ತ್ರಿಪರ್ಣ ಪಾಯ್ಕ್ ಎಂದು ಗುರುತಿಸಲಾಗಿದೆ. ತಾನೇ ಸಾಕಿ, ಸಲುಹಿದ್ದ ನಾಯಿಗೆ ಚಿತ್ರಹಿಂಸೆ ಕೊಟ್ಟು, ಬರ್ಬರವಾಗಿ ಕೊಲೆ ಮಾಡಿ, ವಿಕೃತಿ ಮೆರೆದಿದ್ದಾಳೆ. ಮೂಕ ಶ್ವಾನ ದಾರುಣವಾಗಿ ಪ್ರಾಣಬಿಟ್ಟಿದ್ದು, ಬಳಿಕ ಸತ್ತ ನಾಯಿಯೊಂದಿಗೆ ಎರಡು ದಿನ ಅಲ್ಲೇ ವಾಸವಾಗಿದ್ದಳು. ಎರಡು ಮೂರು ದಿನದ ಬಳಿಕ ಅಪಾರ್ಟ್ಮೆಂಟ್‌ನ ಫ್ಲ್ಯಾಟ್‌ನಿಂದ ದುರ್ವಾಸನೆ ಬಂದಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ರಮೇಶ್‌ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ್ದೇ ವಿಜಯೇಂದ್ರ: ಮತ್ತೆ ಗುಡುಗಿದ ಯತ್ನಾಳ್

    ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ನಾಯಿಯನ್ನು ಮಹಿಳೆ ಸಾಯಿಸಿರುವುದು ಬೆಳಕಿಗೆ ಬಂದಿದ್ದು, ಆಕೆ ಹತ್ಯೆಗೈದ ರೀತಿಯನ್ನು ನೋಡಿ ಪೊಲೀಸರೇ ಶಾಕ್ ಆಗಿದ್ದಾರೆ.

    ಕೂಡಲೇ ಪೊಲೀಸರು ಬಿಬಿಎಂಪಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪಾಲಿಕೆ ಸಿಬ್ಬಂದಿ ಬಂದು ನಾಯಿಯ ಮೃತದೇಹವನ್ನು ತೆರವುಗೊಳಿಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಕಳುಹಿಸಿದಾಗ, ನಾಯಿಗೆ ಚಿತ್ರಹಿಂಸೆ ಕೊಟ್ಟು ಸಾಯಿಸಿರೋದು ತಿಳಿದು ಬಂದಿದೆ.

    ಈ ಬಗ್ಗೆ ಬಿಬಿಎಂಪಿ (BBMP) ಅಧಿಕಾರಿಗಳು ಮಹದೇವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮಹಿಳೆ ವಿರುದ್ಧ ಎಫ್‌ಐಆರ್‌ (FIR) ದಾಖಲಾಗಿದೆ. ಇನ್ನೂ ಘಟನೆ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದು, ಮನೆಯಲ್ಲಿದ್ದ ಮತ್ತೆರಡು ನಾಯಿಗಳನ್ನ ರಕ್ಷಣೆ ಮಾಡಿದ್ದಾರೆ.ಇದನ್ನೂ ಓದಿ: ಪ್ರಧಾನಿ ಮೋದಿಗೆ `ಧರ್ಮ ಚಕ್ರವರ್ತಿ’ ಬಿರುದು ಪ್ರದಾನ

  • ಮರದ ಕೊಂಬೆ ಬಿದ್ದು ಯುವಕ ಸಾವು – ಮೂವರು ಬಿಬಿಎಂಪಿ ಅರಣ್ಯಾಧಿಕಾರಿಗಳ ವಿರುದ್ಧ FIR

    ಮರದ ಕೊಂಬೆ ಬಿದ್ದು ಯುವಕ ಸಾವು – ಮೂವರು ಬಿಬಿಎಂಪಿ ಅರಣ್ಯಾಧಿಕಾರಿಗಳ ವಿರುದ್ಧ FIR

    ಬೆಂಗಳೂರು: ಮರದ ಕೊಂಬೆ ಬಿದ್ದು ಯುವಕ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಬಿಎಂಪಿಯ
    (BBMP) ಅರಣ್ಯಾಧಿಕಾರಿಗಳ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.

    ಬೆನಕ್ ರಾಜ್ ಎಂಬುವವರು ಹನುಮಂತ ನಗರ (Hanumant Nagar) ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬಿಬಿಎಂಪಿಯ ಮೂವರು ಅರಣ್ಯಾಧಿಕಾರಿಗಳಾದ ಆರ್‌ಎಫ್‌ಓ, ಎಸಿಎಫ್, ಡಿಎಫ್‌ಓ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.ಇದನ್ನೂ ಓದಿ:KRS ಭರ್ತಿಗೆ 7 ಅಡಿಗಳಷ್ಟೇ ಬಾಕಿ

    ಅಧಿಕಾರಿಗಳ ನಿರ್ಲಕ್ಷ್ಯವೇ ಅಕ್ಷಯ್ ಸಾವಿಗೆ ಕಾರಣವಾಗಿದೆ. ಎ1 ಆರೋಪಿ ಆರ್‌ಎಫ್‌ಓ, ಎ2 ಆರೋಪಿ ಎಸಿಎಫ್, ಎ3 ಆರೋಪಿ ಡಿಎಫ್‌ಓ ಆಗಿದ್ದು, ಯುವಕನ ಸಾವಿಗೆ ಕಾರಣವಾಗಿರುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಅಧಿಕಾರಿಗಳ ನಿರ್ಲಕ್ಷ್ಯದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಕರಣದ ಆರೋಪಿಗಳಾಗಿರುವ ಬಿಬಿಎಂಪಿ ಅರಣ್ಯಾಧಿಕಾರಿಗಳಿಗೆ ಕರೆದು ವಿಚಾರಣೆ ಮಾಡಲು ಪೊಲೀಸರು ಮುಂದಾಗಿದ್ದಾರೆ.

    ಘಟನೆ ಏನು?
    ಇದೇ ಜೂ.15ರಂದು ಯುವಕ ಅಕ್ಷಯ್ ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದಾಗಲೇ ಮರದ ಕೊಂಬೆ ಬಿದ್ದು ಬಸವನಗುಡಿಯ (Basavanagudi) ಬ್ರಹ್ಮ ಚೈತನ್ಯ ಮಂದಿರದ ಬಳಿ ಸವಾರ ಗಂಭೀರವಾಗಿ ಗಾಯಗೊಂಡಿದ್ದರು. ಕೊಂಬೆ ಬೀಳುತ್ತಿದ್ದಂತೆ ನಿಯಂತ್ರಣ ತಪ್ಪಿ ಎದುರುಗಡೆ ನಿಲ್ಲಿಸಿದ್ದ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿತ್ತು.

    ಶ್ರೀನಿವಾಸನಗರದ ನಿವಾಸಿಯಾಗಿರುವ ಅಕ್ಷಯ್ ರಾಜಾಜಿನಗರದರುವ ಖಾಸಗಿ ಕಂಪನಿಯೊಂದರಲ್ಲಿ ಹೆಚ್‌ಆರ್ ಆಗಿ ಕೆಲಸ ಮಾಡುತ್ತಿದ್ದರು. ಮರದ ಕೊಂಬೆ ಬಿದ್ದು ತಲೆಯ ಮಧ್ಯ ಭಾಗಕ್ಕೆ ತೀವ್ರ ಹಾನಿಯಾಗಿತ್ತು. ಮೂಗು, ಬಾಯಿ, ಕಿವಿಯಲ್ಲಿ ರಕ್ತಸ್ರಾವವಾಗಿತ್ತು. ಅಕ್ಷಯ್ ತಂದೆಗೆ ಡಯಾಲಿಸಿಸ್ ನಡೆಯುತ್ತಿದ್ದು, ಕುಟುಂಬಕ್ಕೆ ಅಕ್ಷಯ್ ಆಧಾರವಾಗಿದ್ದರು. ಎರಡು ದಿನದ ಹಿಂದೆಯಷ್ಟೇ ಅಕ್ಷಯ್ ಬ್ರೈನ್ ಡೆಡ್ ಆಗಿದೆ ಎಂದಿದ್ದರು. ಆದರೆ ಜೂ.19ರ ಮಧ್ಯಾಹ್ನ 1 ಗಂಟೆಗೆ ಸಾವನ್ನಪ್ಪಿರುವುದಾಗಿ ವೈದ್ಯರು ದೃಢಪಡಿಸಿದ್ದರು.ಇದನ್ನೂ ಓದಿ: Air India Crash | 215 ಡಿಎನ್‌ಎ ಮ್ಯಾಚ್‌ – 198 ಮೃತದೇಹ ಹಸ್ತಾಂತರ

  • ಬೆಂಗಳೂರು | ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಅಕ್ಷಯ್ ಸಾವು

    ಬೆಂಗಳೂರು | ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಅಕ್ಷಯ್ ಸಾವು

    ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದಾಗಲೇ ಮರದ (Tree) ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಅಕ್ಷಯ್‌ ಸಾವನ್ನಪ್ಪಿದ್ದಾರೆ.‌

    ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಾವನ್ನಪ್ಪಿದ್ದಾರೆಂದು ವೈದ್ಯರು ತಿಳಿಸಿದ್ದು, ಅಕ್ಷಯ್‌ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: 400 ವರ್ಷಗಳಲ್ಲಿ ಇದೇ ಮೊದಲು – ವಿಶ್ವವಿಖ್ಯಾತ ಮೈಸೂರು ದಸರಾ ಈ ಬಾರಿ 11 ದಿನ!

    Tree branch falls in Basanavgudi bengaluru Rider injured

    ಇದೇ ಜೂನ್‌ 15ರಂದು ಬಸವನಗುಡಿಯ (Basavanagudi) ಬ್ರಹ್ಮ ಚೈತನ್ಯ ಮಂದಿರದ ಬಳಿ ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಅಕ್ಷಯ್‌ (29)ಗೆ ವೈದ್ಯರು ಶಸ್ತ್ರ ಚಿಕಿತ್ಸೆ ನೆರವೇರಿಸಿದ್ದರು. ಆದ್ರೆ ಶಸ್ತ್ರಚಿಕಿತ್ಸೆ ನಡೆದು 60 ತಾಸು ಕಳೆದ ಬಳಿಕವೂ ಮೆದುಳು ಸ್ಪಂದಿಸದೇ ಇದ್ದಿದ್ದರಿಂದ ವೈದ್ಯರು ಮೆದುಳು ನಿಷ್ಕ್ರಿಯಗೊಂಡಿದೆ (Brain Dead) ಎಂದು ಕುಟುಂಬಸ್ಥರಿಗೆ ತಿಳಿಸಿದ್ದರು.

    ಅಕ್ಷಯ್‌ ಬದುಕುಳಿಯುವ ಸಾಧ್ಯತೆ ತೀರ ಕಡಿಮೆಯಿತ್ತು. ಮೊಮ್ಮಗನ ಜೀವ ಉಳಿಯಲೆಂದು ಮೃತುಂಜಯ ಹೋಮ ನೆರವೇರಿಸಿದ್ದರು. ಆದ್ರೆ ವಿಧಿಯ ಆಟವೇ ಬೇರೆಯಿತ್ತು. ಕಾರ್ಡಿಯಾಕ್‌ ಅರೆಸ್ಟ್‌ (ಹೃದಯ ಸ್ತಂಭನ) ಆಗಿ ಇಂದು ಮಧ್ಯಾಹ್ನ 1 ಗಂಟೆಗೆ ಅಕ್ಷಯ್‌ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು. ಇದನ್ನೂ ಓದಿ: ಗೃಹ ಲಕ್ಷ್ಮಿ ಹಣ ಮೇ ತಿಂಗಳದ್ದು ಮಾತ್ರ ಬಾಕಿಯಿದೆ: ಹೆಬ್ಬಾಳ್ಕರ್

    ಮಗನನ್ನ ನೋಡಲು ಒಂದೇ ಹಠ
    ಇನ್ನೂ ನಿನ್ನೆಯಷ್ಟೇ ಡಯಾಲೀಸಿಸ್‌ಗೆ ಒಳಗಾಗಿದ್ದ ಅಕ್ಷಯ್‌ ತಂದೆ ಮಗನನ್ನ ನೋಡಲೇಬೇಕೆಂದು ಹಠ ಹಿಡಿದಿದ್ದರು. ಇಂದು ಅಪೋಲೋ ಆಸ್ಪತ್ರೆಗೆ ವ್ಹೀಲ್‌ ಚೇರ್‌ನಲ್ಲೇ ಬಂದು ಮಗನನ್ನ ನೋಡಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ಮಗನ ಪ್ರಾಣಪಕ್ಷಿ ಹಾರಿದೆ. ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಅಕ್ಷಯ್ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ಸದ್ಯ ಆಸ್ಪತ್ರೆ ಮುಂದೆ ಪೊಲೀಸ್‌ ಭದ್ರತೆಗಾಗಿ ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: KMF ನಿರ್ಲಕ್ಷ್ಯದಿಂದ ನಮ್ಮ ಮೆಟ್ರೋದಲ್ಲಿ ನಂದಿನಿ ಮಳಿಗೆ ಹಾಕಲು ಅವಕಾಶ ಸಿಕ್ಕಿಲ್ಲ – ಭೀಮಾ ನಾಯಕ್

    ಏನಾಗಿತ್ತು?
    ಇದೇ ಜೂ.15ರಂದು ಯುವಕ ಅಕ್ಷಯ್ ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದಾಗಲೇ ಮರದ ಕೊಂಬೆ ಬಿದ್ದು ಬಸವನಗುಡಿಯ ಬ್ರಹ್ಮ ಚೈತನ್ಯ ಮಂದಿರದ ಬಳಿ ಸವಾರ ಗಂಭೀರವಾಗಿ ಗಾಯಗೊಂಡಿದ್ದರು. ಕೊಂಬೆ ಬೀಳುತ್ತಿದ್ದಂತೆ ನಿಯಂತ್ರಣ ತಪ್ಪಿ ಎದುರುಗಡೆ ನಿಲ್ಲಿಸಿದ್ದ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿತ್ತು. ಇದನ್ನೂ ಓದಿ:  ಏರ್ ಇಂಡಿಯಾ ದುರಂತದ ಬಳಿಕ ಎಚ್ಚೆತ್ತ DGCA – ಏರ್‌ಪೋರ್ಟ್‌ ಬಳಿಯ ಕಟ್ಟಡಗಳಿಗೆ ಹೊಸ ರೂಲ್ಸ್‌

    ಶ್ರೀನಿವಾಸನಗರದ ನಿವಾಸಿಯಾಗಿರುವ ಅಕ್ಷಯ್ ರಾಜಾಜಿನಗರದರುವ ಖಾಸಗಿ ಕಂಪನಿಯೊಂದರಲ್ಲಿ ಹೆಚ್‌ಆರ್ ಆಗಿ ಕೆಲಸ ಮಾಡುತ್ತಿದ್ದರು. ಮರದ ಕೊಂಬೆ ಬಿದ್ದು ತಲೆಯ ಮಧ್ಯ ಭಾಗಕ್ಕೆ ತೀವ್ರ ಹಾನಿಯಾಗಿತ್ತು. ಮೂಗು, ಬಾಯಿ, ಕಿವಿಯಲ್ಲಿ ರಕ್ತಸ್ರಾವವಾಗಿತ್ತು. ಅಕ್ಷಯ್ ತಂದೆಗೆ ಡಯಾಲಿಸಿಸ್ ನಡೆಯುತ್ತಿದ್ದು, ಕುಟುಂಬಕ್ಕೆ ಅಕ್ಷಯ್ ಆಧಾರವಾಗಿದ್ದರು. ಒಂದು ದಿನದ ಹಿಂದೆಯಷ್ಟೇ ಅಕ್ಷಯ್‌ ಬ್ರೈನ್‌ ಡೆಡ್‌ ಆಗಿದೆ ಎಂದು ಪ್ರಕಟಿಸಿದ್ದರು.

  • ಬೆಂಗಳೂರು | ಮರದ ಕೊಂಬೆ ಬಿದ್ದು ಆಸ್ಪತ್ರೆ ಸೇರಿದ್ದ ಯುವಕನ ಬ್ರೈನ್ ಡೆಡ್

    ಬೆಂಗಳೂರು | ಮರದ ಕೊಂಬೆ ಬಿದ್ದು ಆಸ್ಪತ್ರೆ ಸೇರಿದ್ದ ಯುವಕನ ಬ್ರೈನ್ ಡೆಡ್

    ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದಾಗಲೇ ಮರದ (Tree) ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಅಕ್ಷಯ್‌ನ ಬ್ರೈನ್‌ ಡೆಡ್‌ (Brain Dead – ಮೆದುಳು ನಿಷ್ಕ್ರಿಯ) ಆಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.

    ಇದೇ ಜೂನ್‌ 15ರಂದು ಬಸವನಗುಡಿಯ (Basavanagudi) ಬ್ರಹ್ಮ ಚೈತನ್ಯ ಮಂದಿರದ ಬಳಿ ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಅಕ್ಷಯ್‌ (29)ಗೆ ವೈದ್ಯರು ಶಸ್ತ್ರ ಚಿಕಿತ್ಸೆ ನೆರವೇರಿಸಿದ್ದರು. ಆದ್ರೆ ಶಸ್ತ್ರಚಿಕಿತ್ಸೆ ನಡೆದು 60 ತಾಸು ಕಳೆದ ಬಳಿಕವೂ ಮೆದುಳು ಸ್ಪಂದಿಸದೇ ಇರುವುದರಿಂದ ವೈದ್ಯರು ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಪರಿಗಣಿಸಿರುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಗಾಳಿ ಇಲ್ಲ, ಮಳೆ ಇಲ್ಲ – ಸಿಎಂ ನಿವಾಸದ ಮುಂದೆ ಧರೆಗುರುಳಿದ ಬೃಹತ್ ಮರ

    ಸಹಜವಾಗಿ ಶಸ್ತ್ರಚಿಕಿತ್ಸೆ ಮುಗಿದು 48 ಗಂಟೆಗಳ ನಂತರವು ಮೆದುಳು ಸ್ಪಂದಿಸದೇ ಇದ್ದರೆ ಮೆದುಳು ನಿಷ್ಕ್ರಿಯ ಎಂದು ಪರಿಗಣಿಸಲಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ. ಆದ್ರೆ ಅಕ್ಷಯ್‌ ಕೇಸ್‌ನಲ್ಲಿ 60 ಗಂಟೆ ಕಳೆದರೂ ಮೆದುಳು ಸ್ಪಂದಿಸದೇ ಇರುವ ಕಾರಣ ಮೆದುಳು ನಿಷ್ಕ್ರಿಯವಾಗಿದೆ ಎಂದು ಕುಟುಂಬಸ್ಥರಿಗೆ ವೈದ್ಯರು ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ವರುಣಾರ್ಭಟಕ್ಕೆ ಬಿರುಕು ಬಿಟ್ಟ ನಿಜಾಮರ ಕಾಲದ ಸೇತುವೆ – ಇತ್ತ ಮಲೆನಾಡಲ್ಲಿ ನದಿಗಳಿಗೆ ಜೀವಕಳೆ

    ಏನಾಗಿತ್ತು?
    ಇದೇ ಜೂ.15ರಂದು ಯುವಕ ಅಕ್ಷಯ್ ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದಾಗಲೇ ಮರದ ಕೊಂಬೆ ಬಿದ್ದು ಬಸವನಗುಡಿಯ ಬ್ರಹ್ಮ ಚೈತನ್ಯ ಮಂದಿರದ ಬಳಿ ಸವಾರ ಗಂಭೀರವಾಗಿ ಗಾಯಗೊಂಡಿದ್ದರು. ಕೊಂಬೆ ಬೀಳುತ್ತಿದ್ದಂತೆ ನಿಯಂತ್ರಣ ತಪ್ಪಿ ಎದುರುಗಡೆ ನಿಲ್ಲಿಸಿದ್ದ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿತ್ತು. ಇದನ್ನೂ ಓದಿ:  ಬೆಂಗಳೂರಿನ 10 ಮೆಟ್ರೋ ಸ್ಟೇಷನ್‌ನಲ್ಲಿ ಅಮುಲ್‌ಗೆ ಪ್ರಮೋಷನ್ – ಕನ್ನಡಿಗರು ಕೆಂಡ

    Tree branch falls in Basanavgudi bengaluru Rider injured

    ಶ್ರೀನಿವಾಸನಗರದ ನಿವಾಸಿಯಾಗಿರುವ ಅಕ್ಷಯ್ ರಾಜಾಜಿನಗರದರುವ ಖಾಸಗಿ ಕಂಪನಿಯೊಂದರಲ್ಲಿ ಹೆಚ್‌ಆರ್ ಆಗಿ ಕೆಲಸ ಮಾಡುತ್ತಿದ್ದರು. ಮರದ ಕೊಂಬೆ ಬಿದ್ದು ತಲೆಯ ಮಧ್ಯ ಭಾಗಕ್ಕೆ ತೀವ್ರ ಹಾನಿಯಾಗಿತ್ತು. ಮೂಗು, ಬಾಯಿ, ಕಿವಿಯಲ್ಲಿ ರಕ್ತಸ್ರಾವವಾಗಿತ್ತು. ಅಕ್ಷಯ್ ತಂದೆಗೆ ಡಯಾಲಿಸಿಸ್ ನಡೆಯುತ್ತಿದ್ದು, ಕುಟುಂಬಕ್ಕೆ ಅಕ್ಷಯ್ ಆಧಾರವಾಗಿದ್ದರು. ಇದನ್ನೂ ಓದಿ: KRS ಡ್ಯಾಂ ಭರ್ತಿಗೆ 11 ಅಡಿಯಷ್ಟೇ ಬಾಕಿ

    ಚಿಕಿತ್ಸಾ ವೆಚ್ಚ ಭರಿಸದ ಬಿಬಿಎಂಪಿ
    ಸದ್ಯಕ್ಕೆ ಅಕ್ಷಯ್‌ ಬದುಕುಳಿಯುವ ಬಗ್ಗೆ ಯಾವುದೇ ಭರವಸೆ ಕೊಡೋದಕ್ಕಾಗಲ್ಲ ಅಂತ ವೈದ್ಯರು ಹೇಳ್ತಿದ್ದಾರೆ. ಅಕ್ಷಯ್ ಆಸ್ಪತ್ರೆಗೆ ಸೇರಿ 4 ದಿನ ಆಗ್ತಿದ್ರೂ ಬಿಬಿಎಂಪಿ ಚಿಕಿತ್ಸಾ ವೆಚ್ಚ ಭರಿಸಿಲ್ಲ. ಕುಟುಂಬಸ್ಥರೇ ಆಸ್ಪತ್ರೆಗೆ ಈವರೆಗೆ 1,30,000ಕ್ಕೂ ಹೆಚ್ಚು ಬಿಲ್ ಕಟ್ಟಿದ್ದಾರೆ ಎಂದು ತಿಳಿದುಬಂದಿದೆ.