Tag: bbmp

  • ಗಾಳಿ ಇಲ್ಲ, ಮಳೆ ಇಲ್ಲ – ಸಿಎಂ ನಿವಾಸದ ಮುಂದೆ ಧರೆಗುರುಳಿದ ಬೃಹತ್ ಮರ

    ಗಾಳಿ ಇಲ್ಲ, ಮಳೆ ಇಲ್ಲ – ಸಿಎಂ ನಿವಾಸದ ಮುಂದೆ ಧರೆಗುರುಳಿದ ಬೃಹತ್ ಮರ

    – ರಸ್ತೆಯಲ್ಲಿ ಹೋಗ್ತಿದ್ದ ಟಿಟಿ, ಇನ್ನೋವಾ ಮೇಲೆ ಬಿದ್ದ ಕೊಂಬೆಗಳು

    ಬೆಂಗಳೂರು: ಗಾಳಿ ಇಲ್ಲ, ಮಳೆ ಇಲ್ಲ ಅಂದ್ರೂ ಸಿಎಂ ಸಿದ್ದರಾಮಯ್ಯ (CM Siddaramaiah) ಸರ್ಕಾರಿ ನಿವಾಸದ ಬಳಿಯೇ ಬೃಹತ್ ಮರವೊಂದು (Tree) ಧರೆಗುರುಳಿ ಅನಾಹುತ ಸಂಭವಿಸಿದೆ.

    ಬೃಹತ್ ಮರ ಧರೆಗುರುಳಿದ ಪರಿಣಾಮ ರಸ್ತೆಯಲ್ಲಿ ಹೋಗುತ್ತಿದ್ದ ಟಿಟಿ ಹಾಗೂ ಇನ್ನೋವಾ ಮೇಲೆ ಮರದ ಕೊಂಬೆಗಳು ಬಿದ್ದಿವೆ. ಮರ ಬಿದ್ದ ಹಿನ್ನೆಲೆ ಶಿವಾನಂದ ಬಳಿಯೇ ಪೊಲೀಸರು ರಸ್ತೆ ಬಂದ್ ಮಾಡಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ವರುಣನ ಅಬ್ಬರ – ಹೇಮಾವತಿ ಜಲಾಶಯಕ್ಕೆ 19,546 ಕ್ಯೂಸೆಕ್ ಒಳಹರಿವು

    ಜೂ.15ರಂದು ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದಾಗಲೇ ಮರದ ಕೊಂಬೆ ಬಿದ್ದು ಬಸವನಗುಡಿಯ ಬ್ರಹ್ಮ ಚೈತನ್ಯ ಮಂದಿರದ ಬಳಿ ಸವಾರ ಗಂಭೀರವಾಗಿ ಗಾಯಗೊಂಡಿದ್ದರು. 29 ವರ್ಷದ ಅಕ್ಷಯ್ ಗಂಭೀರವಾಗಿ ಗಾಯಗೊಂಡ ಸವಾರ. ಕೊಂಬೆ ಬೀಳುತ್ತಿದ್ದಂತೆ ನಿಯಂತ್ರಣ ತಪ್ಪಿ ಎದುರುಗಡೆ ನಿಲ್ಲಿಸಿದ್ದ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಗಮನಿಸಿ: ನಾಳೆ ಬೆಂಗಳೂರಿನ ಯಾವ ಏರಿಯಾದಲ್ಲೂ ಒಂದು ಹನಿ ಕಾವೇರಿ ನೀರು ಬರಲ್ಲ

    ಶ್ರೀನಿವಾಸನಗರದ ನಿವಾಸಿಯಾಗಿರುವ ಅಕ್ಷಯ್ ರಾಜಾಜಿನಗರದಲ್ಲಿ ಕಂಪನಿಯೊಂದದರಲ್ಲಿ ಹೆಚ್‌ಆರ್ ಆಗಿ ಕೆಲಸ ಮಾಡುತ್ತಿದ್ದರು. ತಲೆಯ ಮಧ್ಯ ಭಾಗಕ್ಕೆ ತೀವ್ರ ಹಾನಿಯಾಗಿದೆ. ಮೂಗು, ಬಾಯಿ, ಕಿವಿಯಲ್ಲಿ ರಕ್ತಸ್ರಾವವಾಗಿದೆ. ಅಕ್ಷಯ್ ತಂದೆಗೆ ಡಯಾಲಿಸಿಸ್ ನಡೆಯುತ್ತಿದ್ದು, ಕುಟುಂಬಕ್ಕೆ ಅಕ್ಷಯ್ ಆಧಾರವಾಗಿದ್ದರು. ಇದನ್ನೂ ಓದಿ: ಮಾಜಿ ಶಾಸಕ ಕಾಕಾಸಾಹೇಬ್ ಪಾಟೀಲ್ ನಿಧನ

  • ಗಮನಿಸಿ: ನಾಳೆ ಬೆಂಗಳೂರಿನ ಯಾವ ಏರಿಯಾದಲ್ಲೂ ಒಂದು ಹನಿ ಕಾವೇರಿ ನೀರು ಬರಲ್ಲ

    ಗಮನಿಸಿ: ನಾಳೆ ಬೆಂಗಳೂರಿನ ಯಾವ ಏರಿಯಾದಲ್ಲೂ ಒಂದು ಹನಿ ಕಾವೇರಿ ನೀರು ಬರಲ್ಲ

    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಜೂನ್ 19ರಂದು ಬೆಳಗ್ಗೆ 6 ರಿಂದ ಜೂನ್ 20ರ ಬೆಳಗ್ಗೆ 6 ಗಂಟೆವರೆಗೆ ನಗರದ ಬಹುತೇಕ ಭಾಗಗಳಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ (Cauvery Water Supply) ವ್ಯತ್ಯಯ ಉಂಟಾಗಲಿದೆ.

    ಕಾವೇರಿ 5ನೇ ಹಂತದ ಕಾಮಗಾರಿ ಹಾಗೂ ವಿದ್ಯುತ್ ನಿರ್ವಹಣೆ ಕಾರಣದಿಂದಾಗಿ ಕಾವೇರಿ ನೀರು ಸರಬರಾಜು ಸ್ಥಗಿತ ಅನಿವಾರ್ಯವಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ತಿಳಿಸಿದ್ದು, ಮುಂಜಾಗ್ರತೆಯಾಗಿ ಕಾವೇರಿ ನೀರು ಸಂಗ್ರಹಿಸಿಕೊಳ್ಳುವಂತೆ ನಾಗರಿಕರಿಗೆ BWSSB ಮನವಿ ಮಾಡಿದೆ. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಸರ್ಕಾರದ ತನಿಖೆ ಮೇಲೆ ಯಾರಿಗೂ ನಂಬಿಕೆ ಇಲ್ಲ: ಅಶೋಕ್

    ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುವ ಸಲುವಾಗಿ ಜೂನ್‌ 19ರ ಬೆಳಗ್ಗೆ 6 ರಿಂದ ಹಾಗೂ ಜೂ.20ರ ಬೆಳಗ್ಗೆ 6 ಗಂಟೆ ವರೆಗೆ ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1 ರಿಂದ ಹಂತ- 5ರ ವರೆಗಿನ ಎಲ್ಲಾ ಜಲರೇಚಕ ಯಂತ್ರಾಗಾರಗಳನ್ನು ಸ್ಥಗಿತಗೊಳಿಸಲಾಗುತ್ತಿದೆ. ಇದರಿಂದ ಬಿಬಿಎಂಪಿ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ. ಹೀಗಾಗಿ ಬೆಂಗಳೂರಿನ ನಾಗರಿಕರಿಗೆ, ವಾಣಿಜ್ಯ ಹಾಗೂ ಕೈಗಾರಿಕಾ ಪ್ರದೇಶಗಳಿಗೆ ಮುಂಜಾಗ್ರತೆಯಾಗಿ ಅಗತ್ಯವಿರುವ ನೀರನ್ನು ಸಂಗ್ರಹಣೆ ಮಾಡಿಕೊಳ್ಳುವಂತೆ ಜಲಮಂಡಳಿ ಸೂಚನೆ ನೀಡಿದೆ. ಇದನ್ನೂ ಓದಿ: ಮಲೆನಾಡಿನ ಮಳೆಗಾಲದ ಗೆಳೆಯರು!

    ಬೆಂಗಳೂರು ನಗರ ಹಾಗೂ ಉಪನಗರ ವ್ಯಾಪ್ತಿಯ ಪ್ರದೇಶಗಳಿಗೆ ಮುಂದಿನ ದಶಕಗಳ ನೀರಿನ ಅಗತ್ಯವನ್ನು ಪೂರೈಸುವ ನಿಟ್ಟಿನಲ್ಲಿ ಟಿ.ಕೆ. ಹಳ್ಳಿಯಲ್ಲಿ ನಡೆಯುತ್ತಿರುವ ಕಾವೇರಿ 5ನೇ ಹಂತದ ಕಾಮಗಾರಿ ಪ್ರಮುಖವಾಗಿದೆ. ಇದನ್ನೂ ಓದಿ: ಮಳೆ ಆರ್ಭಟಕ್ಕೆ ಮಂಜಿನ ನಗರಿ ಥಂಡಾ – ಭಾಗಮಂಡಲದ ತ್ರಿವೇಣಿ ಸಂಗಮ ಮುಳುಗಡೆ

  • ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತಾ ಕಡ್ಡಾಯ – ಜುಲೈ 1ರಿಂದ ಬಿಬಿಎಂಪಿಯ ಹೊಸ ರೂಲ್ಸ್ ಜಾರಿ

    ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತಾ ಕಡ್ಡಾಯ – ಜುಲೈ 1ರಿಂದ ಬಿಬಿಎಂಪಿಯ ಹೊಸ ರೂಲ್ಸ್ ಜಾರಿ

    ಬೆಂಗಳೂರು: ಕಟ್ಟಡ ನಿರ್ಮಾಣ ಮಾಡುವವರು, ನಕ್ಷೆ ಮಂಜೂರಾತಿ ಪಡೆಯುವವರಿಗೆ ಇ-ಖಾತಾ(E-Khata) ಕಡ್ಡಾಯಗೊಳಿಸಲಾಗಿದ್ದು, ಬಿಬಿಎಂಪಿ ಇದೀಗ ಹೊಸ ನಿಯಮ ಜಾರಿ ಮಾಡಿದೆ.

    ಬೆಂಗಳೂರಿನಲ್ಲಿ (Bengaluru) ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತಾ ಕಡ್ಡಾಯಗೊಳಿಸಲಾಗಿದೆ. ಜು. 1ರಿಂದ ಈ ನಿಯಮ ಜಾರಿಗೆ ಬರಲಿದೆ. ಬಿಬಿಎಂಪಿಗೆ (BBMP) ಅರ್ಜಿ ಸಲ್ಲಿಸುವಾಗ ಇ-ಖಾತಾ ಸಲ್ಲಿಸುವುದು ಅವಶ್ಯಕವಾಗಿದೆ. ಹಳೆಯ ವಿಧಾನವನ್ನು ರದ್ದು ಮಾಡಲಾಗಿದ್ದು, ಇ-ಆಸ್ತಿ ತಂತ್ರಾಂಶದೊಂದಿಗೆ ನಕ್ಷೆ ಮಂಜೂರಾತಿ ಪ್ರಕ್ರಿಯೆ ಏಕೀಕರಣಗೊಳ್ಳಲಿದೆ. ಇದನ್ನೂ ಓದಿ: Nelamangala | 2 ಸ್ಕೂಲ್ ಬಸ್‌ಗಳ ನಡುವೆ ಅಪಘಾತ – ಮಕ್ಕಳಿಗೆ ಸಣ್ಣಪುಟ್ಟ ಗಾಯ

    ಇದರಿಂದ ಸೇವೆಗಳು ಸರಳವಾಗುತ್ತವೆ ಮತ್ತು ಕಾಲಮಿತಿಯಲ್ಲಿ ಮಂಜೂರಾತಿ ಸಿಗುತ್ತದೆ ಎಂದು ಬಿಬಿಎಂಪಿ ತಿಳಿಸಿದ್ದು, ನಕ್ಷೆ ಮಂಜೂರಾತಿ ಪಡೆಯಬೇಕಾದರೆ ಇ-ಖಾತಾ ಕಡ್ಡಾಯವಾಗಿ ಸಲ್ಲಿಸಬೇಕಿದೆ. ಜು. 01ರಿಂದ ಈ ನಿಯಮ ಜಾರಿ ಆಗುತ್ತಾ ಇದ್ದು, ಸಾರ್ವಜನಿಕರು ಪಾಲಿಸಬೇಕಾಗಿ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್ ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ – ಇಂದು ರಾಜ್ಯಾದ್ಯಂತ ಯೆಲ್ಲೋ ಅಲರ್ಟ್

    ಈ ಹಿಂದೆ ಕಟ್ಟಡ ನಕ್ಷೆಗಳ ಮಂಜೂರಾತಿ ಕೋರಿ ಸಲ್ಲಿಸುವ ಪ್ರಸ್ತಾವನೆಗಳ ಸ್ವತ್ತಿನ ದಾಖಲಾತಿಗಳನ್ನು ಪರಿಶೀಲನೆಗೆ ಪಾಲಿಕೆಯ ಕಂದಾಯ ವಿಭಾಗಕ್ಕೆ ಕಳುಹಿಸುವ ಕ್ರಮವನ್ನು ರದ್ದುಪಡಿಸಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಈಗಾಗಲೇ ಇಒಡಿಬಿ-ಒಬಿಪಿಎಸ್ ತಂತ್ರಾಂಶದ ಮೂಲಕ ಕಟ್ಟಡ ನಕ್ಷೆ ಮಂಜೂರಾತಿಯನ್ನು ಆನ್‌ಲೈನ್‌ನಲ್ಲಿ ನೀಡಲಾಗುತ್ತಿರುತ್ತದೆ. ಇದನ್ನೂ ಓದಿ: ಟ್ರಕ್ಕಿಂಗ್ ವೇಳೆ ಕಾಡಿನಲ್ಲಿ ನಾಪತ್ತೆಯಾದ ಚಿತ್ರದುರ್ಗದ 10 ಮೆಡಿಕಲ್ ವಿದ್ಯಾರ್ಥಿಗಳು – 6 ಗಂಟೆ ಬಳಿಕ ಪತ್ತೆ

    ಪಾಲಿಕೆಯ ಕಂದಾಯ ವಿಭಾಗದಿಂದ ಇ-ಆಸ್ತಿ ತಂತ್ರಾಂಶವನ್ನು ಜಾರಿ ಮಾಡಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಈಗಾಗಲೇ ಇ-ಖಾತಾ ನೀಡಲಾಗುತ್ತಿರುತ್ತದೆ. ಇಂತಹ ಸ್ವತ್ತುಗಳ ದತ್ತಾಂಶವು ಇ-ಆಸ್ತಿ ತಂತ್ರಾಂಶದಲ್ಲಿ ಲಭ್ಯವಿರುತ್ತದೆ. ಪಾಲಿಕೆಯ ಕಂದಾಯ ವಿಭಾಗಕ್ಕೆ ಸ್ವತ್ತಿನ ದಾಖಲಾತಿಗಳ ಪರಿಶೀಲನೆಗಾಗಿ ಸಲ್ಲಿಸುವ ಕ್ರಮವನ್ನು ಹೊರತುಪಡಿಸಿರುವುದರಿಂದ ಪಾಲಿಕೆಯು ನೀಡುವ ಸೇವೆಗಳನ್ನು ಸರಳೀಕರಣಗೊಳಿಸಲು ಹಾಗೂ ಕಾಲಮಿತಿಯಲ್ಲಿ ನಕ್ಷೆ ಮಂಜೂರಾತಿ ನೀಡಲು ಸಹಕಾರಿಯಾಗಲಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಅಧಿಕಾರದ ಸಿಂಹಾಸನವನ್ನು ಆರಿಸಿಕೊಂಡರೇ ಹೊರತು ಜನಸಾಮಾನ್ಯರನ್ನಲ್ಲ: ನಿಖಿಲ್ ಕಿಡಿ

    ಜು. 01ರಿಂದ ಕಟ್ಟಡ ನಕ್ಷೆ ಮಂಜೂರಾತಿ ಕೋರಿ ಪಾಲಿಕೆಗೆ ಆನ್‌ಲೈನ್‌ನಲ್ಲಿ ನಂಬಿಕೆ ನಕ್ಷೆ ಒಳಗೊಂಡಂತೆ ಎಲ್ಲಾ ಕಟ್ಟಡ ಅನುಮತಿಗಳಿಗೆ ಅರ್ಜಿ ಸಲ್ಲಿಸುವಾಗ ಇ-ಖಾತಾ ಸಲ್ಲಿಸುವುದನ್ನು ಕಡ್ಡಾಯಗೊಳಿಸಿದೆ. ಸದರಿ ದಿನಾಂಕದಿಂದ ಕಟ್ಟಡ ನಕ್ಷೆಗಳ ಮಂಜೂರಾತಿ ಕೋರಿ ಸಲ್ಲಿಸುವ ಪ್ರಸ್ತಾವನೆಗಳ ಸ್ವತ್ತಿನ ದಾಖಲಾತಿಗಳನ್ನು ಪರಿಶೀಲನೆಗೆ ಪಾಲಿಕೆಯ ಕಂದಾಯ ವಿಭಾಗಕ್ಕೆ ಕಳುಹಿಸುವ ಕ್ರಮವನ್ನು ರದ್ದುಪಡಿಸಿ ಆದೇಶಿಸಿದೆ. ಇದನ್ನೂ ಓದಿ: ಕೈಕೋಳ ಹಾಕಿ, ನೆಲಕ್ಕೆ ಕೆಡವಿ, ಹಿಂಸೆ ಕೊಟ್ಟು ಅಮೆರಿಕದಿಂದ ಭಾರತೀಯ ವಿದ್ಯಾರ್ಥಿ ಗಡೀಪಾರು

    ಸಂಬಂಧಪಟ್ಟ ನಕ್ಷೆ ಮಂಜೂರಾತಿಯನ್ನು ನಗರ ಯೋಜನೆಯ ಸಹಾಯಕ ನಿರ್ದೇಶಕರು ಕಾಲಮಿತಿ ಒಳಗಡೆ ಧೃಢಿಕರಿಸಲಿದ್ದಾರೆ. ಸ್ವಯಂ ಅನುಮೋದನೆ ಕೊಡುವ ಅಧಿಕಾರಿಗಳ ವಿರುದ್ಧ ಕೂಡ ಕ್ರಮ ವಹಿಸಲಿದ್ದಾರೆ. ನಕ್ಷೆ ಮಂಜೂರಾತಿಗೆ ಅರ್ಜಿ ಸಲ್ಲಿಸುವವರು ಇ-ಖಾತಾವನ್ನ ಕಡ್ಡಾಯವಾಗಿ ಸಲ್ಲಿಸಬೇಕಿದೆ.

  • ಕೋವಿಡ್‌ ಕೇಸ್‌ ಹೆಚ್ಚಳ ಬೆನ್ನಲ್ಲೇ ಶಾಲೆಗಳಿಗೆ ಹೊಸ ಮಾರ್ಗಸೂಚಿ ರಿಲೀಸ್‌

    ಕೋವಿಡ್‌ ಕೇಸ್‌ ಹೆಚ್ಚಳ ಬೆನ್ನಲ್ಲೇ ಶಾಲೆಗಳಿಗೆ ಹೊಸ ಮಾರ್ಗಸೂಚಿ ರಿಲೀಸ್‌

    ಬೆಂಗಳೂರು: ಕೊರೊನಾ (Corona) ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಅಲರ್ಟ್‌ ಆಗಿದ್ದು, ಶಾಲೆಗಳಿಗೆ ಹೊಸ ಮಾರ್ಗಸೂಚಿ (Covid Guidelines For Schools) ಬಿಡುಗಡೆ ಮಾಡಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.

    ಶಾಲೆಗಳಿಗೆ ಹೊಸ ಮಾರ್ಗಸೂಚಿಯಲ್ಲಿ ಏನಿದೆ?
    * ಮಕ್ಕಳಿಗೆ ನೆಗಡಿ, ಜ್ವರ, ಕೆಮ್ಮು ಇದ್ರೆ ಶಾಲೆಗೆ ಕಳುಹಿಸದೇ ವೈದ್ಯರ ಸಲಹೆ ಪಡೆದುಕೊಂಡು ಸೂಕ್ತ ಚಿಕಿತ್ಸೆ, ಆರೈಕೆ ನೀಡಬೇಕು
    * ಜ್ವರ ಸಂಪೂರ್ಣ ಗುಣಮುಖವಾದ ಬಳಿಕ ಮಕ್ಕಳನ್ನ ಶಾಲೆಗೆ ಕಳಿಸಬೇಕು
    * ಶಾಲೆಗೆ ಬಂದ ನಂತ್ರ ಮಕ್ಕಳಲ್ಲಿ ಜ್ವರ ಶೀತ ಗುಣಲಕ್ಷಣಗಳು ಕಂಡುಬಂದ್ರೇ ತಕ್ಷಣ ಪೋಷಕರ ಗಮನಕ್ಕೆ ತಂದು ಮನೆಗೆ ಕಳುಹಿಸಬೇಕು
    * ಶಾಲಾ ಶಿಕ್ಷಕರಿಗೆ ಸಿಬ್ಬಂದಿಗೆ ಜ್ವರ, ಶೀತದಂತಹ ಲಕ್ಷಣ ಕಂಡುಬಂದ್ರೆ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು.
    * ಸ್ಯಾನಿಟೈಸ್ ಬಳಕೆ, ಕೈಗಳ ಸ್ವಚ್ಛತೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳೋದು ಸೇರಿದಂತೆ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನ ಶಾಲೆಯಲ್ಲಿ ಪಾಲಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.

    ಬೆಂಗಳೂರಿನಲ್ಲಿ 150ರ ಗಡಿ ದಾಟಿದ ಕೊರೊನಾ ಪ್ರಕರಣ
    ರಾಜ್ಯದಲ್ಲಿ ಕೋವಿಡ್ ಕೇಸ್ ಗಣನೀಯವಾಗಿ ಏರಿಕೆ ಕಂಡಿದೆ. ರಾಜ್ಯದ ಒಟ್ಟು ಆಕ್ಟೀವ್ ಕೇಸ್ 234 ಇದ್ದು, ಅದರಲ್ಲಿ ಬೆಂಗಳೂರು ಒಂದರಲ್ಲೇ ಬರೋಬ್ಬರಿ 150ಕ್ಕೂ ಹೆಚ್ಚು ಆಕ್ಟೀವ್ ಕೇಸ್‌ಗಳು ದಾಖಲಾಗಿದೆ. ಬೆಂಗಳೂರು ಮತ್ತೆ ಕೊರೊನಾ ಹಾಟ್‌ಸ್ಪಾಟ್ ಆಗುತ್ತಿದೆ. ಐಎಲ್ ಮತ್ತು ಸಾರಿ ಕೇಸ್‌ಗಳಿಗೆ ಕಡ್ಡಾಯವಾಗಿ ಟೆಸ್ಟ್ ಮಾಡಲು ಸರ್ಕಾರ ಸೂಚಿಸಿದೆ. ಇನ್ನು ಬೆಂಗಳೂರಿನಲ್ಲಿ ಕೇಸ್ ಏರಿಕೆ ಆಗುತ್ತಿದ್ದು, ಕೋವಿಡ್ ನಿಯಂತ್ರಣ ಜೊತೆಗೆ ಡೆಂಗ್ಯೂ ಕಾಪಾಡಿಕೊಳ್ಳೋದು ಸವಾಲಾಗಿದೆ. ಮಳೆಗಾಲ ಆಗಿರುವುದರಿಂದ ಬಿಬಿಎಂಪಿ ಆರೋಗ್ಯ ವಿಭಾಗ ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುತ್ತಿದೆ.

    ಬೆಂಗಳೂರಿನಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ವು ಐಎಲ್‌ಐ, ಸಾರಿ ಕೇಸ್‌ಗಳು ಇವೆ ಎಂಬ ಮಾಹಿತಿ ಇದೆ. ಬಿಬಿಎಂಪಿಯ ಎಂಟು ವಲಯ ಮಹಾದೇವಪುರ, ಯಲಹಂಕ, ಪೂರ್ವ ವಲಯ, ಪಶ್ಚಿಮ ವಲಯ ಮತ್ತು ಬೆಂಗಳೂರು ದಕ್ಷಿಣದಲ್ಲೂ ಉಸಿರಾಟದ ಸಮಸ್ಯೆ, ಹೃದಯ ಸಂಬಂಧಿ ಮತ್ತು ಬೇರೆ ಬೇರೆ ಖಾಯಿಲೆಗಳಿಂದ ಬಳಲುತ್ತಿದ್ದಾರೆ. ಅಂತಹವರ ಬಗ್ಗೆ ನಿಗಾವಹಿಸಲು ಪಾಲಿಕೆ ಮುಂದಾಗಿದೆ. ಆದರೆ ಮಹಾದೇವಪುರ ಬೆಂಗಳೂರು ದಕ್ಷಿಣ ವಲಯ ಜೊತೆಗೆ ಪೂರ್ವ ವಲಯದಲ್ಲಿ ಕೇಸ್ ಏರಿಕೆ ಆಗುತ್ತಿದೆ. ಪೂರ್ವ ವಲಯದಲ್ಲಿ 30ರ ಗಡಿ ದಾಟಿದೆ. ಮಹಾದೇವಪುರದಲ್ಲಿ ಆಕ್ಟೀವ್ ಕೇಸ್ 30ರ ಗಡಿ ದಾಟಿದೆ ಜೊತೆಗೆ ದಕ್ಷಿಣ ವಲಯದಲ್ಲೂ ಕೇಸ್ ಏರಿಕೆ ಆಗಿದೆ.

    ಇನ್ನೂ ಡೆಂಗ್ಯೂ ಜೊತೆಗೆ ಕೋವಿಡ್ ಕಂಟ್ರೋಲ್ ಮಾಡಲು ಬಿಬಿಎಂಪಿ ಹಲವು ಕ್ರಮ ವಹಿಸುತ್ತಿದೆ. ಐಎಲ್‌ಐ ಮತ್ತು ಸಾರಿ ಕೇಸ್‌ಗಳ ಬಗ್ಗೆ ಎಚ್ಚರಿಕೆ ವಹಿಸುತ್ತಿದೆ.

    ಕೋವಿಡ್ ಲಕ್ಷಣಗಳಿದ್ದರೆ ಏನು ಮಾಡಬೇಕು?
    * ಐಎಲ್‌ಐ, ಸಾರಿ ರೋಗಲಕ್ಷಣಗಳಿದ್ದರೆ ಟೆಸ್ಟ್ ಮಾಡಿಸಬೇಕು.
    * ಆರೋಗ್ಯದಲ್ಲಿ ಏರುಪೇರಾದ್ರೆ ವೈದ್ಯರನ್ನ ಭೇಟಿ ಮಾಡಬೇಕು.
    * ಸಭೆ, ಸಮಾರಂಭಗಳಲ್ಲಿ ಕೊರೊನಾ ನಿಯಮಾವಳಿ ಪಾಲಿಸಬೇಕು.
    * ಮಾಸ್ಕ್ ಹಾಕಬೇಕು, ಸ್ಯಾನಿಟೈಸೇಷನ್ ಮಾಡಿಕೊಳ್ಳಬೇಕು.
    * ಬೇರೆ ಬೇರೆ ಖಾಯಿಲೆಯಿಂದ ಬಳಲುತ್ತಿದ್ದರೆ ಚಿಕಿತ್ಸೆ ಅಗತ್ಯ.

  • ಬೆಂಗಳೂರಿನಲ್ಲಿ 150ರ ಗಡಿ ದಾಟಿದ ಕೋವಿಡ್ ಆಕ್ಟೀವ್ ಕೇಸ್

    ಬೆಂಗಳೂರಿನಲ್ಲಿ 150ರ ಗಡಿ ದಾಟಿದ ಕೋವಿಡ್ ಆಕ್ಟೀವ್ ಕೇಸ್

    – ಐಎಲ್‌ಐ, ಸ್ಯಾರಿ ಕೇಸ್‌ಗಳ ಪತ್ತೆಗೆ ಮುಂದಾದ ಬಿಬಿಎಂಪಿ

    ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ (Bengaluru) ಕೊರೊನಾ ಕೇಸ್ ಏರಿಕೆ ಆಗುತ್ತಿದೆ. ಆಕ್ಟೀವ್ ಪ್ರಕರಣಗಳ ಸಂಖ್ಯೆ ಬರೋಬ್ಬರಿ 150ರ ಗಡಿ ದಾಟಿದೆ. ಕೊರೊನಾ ಭೀತಿ, ಡೆಂಗ್ಯೂ ಕಾಟದ ಮಧ್ಯೆ ಮತ್ತೆ ಮಹಾದೇವಪುರ, ಪೂರ್ವ ವಲಯದಲ್ಲಿ ಕೋವಿಡ್ (Covid) ಏರಿಕೆ ಆಗುತ್ತಿದೆ.

    ರಾಜ್ಯದಲ್ಲಿ ಕೋವಿಡ್ ಕೇಸ್ ಗಣನೀಯವಾಗಿ ಏರಿಕೆ ಕಂಡಿದೆ. ರಾಜ್ಯದ ಒಟ್ಟು ಆಕ್ಟೀವ್ ಕೇಸ್ 234 ಇದ್ದು, ಅದರಲ್ಲಿ ಬೆಂಗಳೂರು ಒಂದರಲ್ಲೇ ಬರೋಬ್ಬರಿ 150ಕ್ಕೂ ಹೆಚ್ಚು ಆಕ್ಟೀವ್ ಕೇಸ್‌ಗಳು ದಾಖಲಾಗಿದೆ. ಬೆಂಗಳೂರು ಮತ್ತೆ ಕೊರೊನಾ ಹಾಟ್‌ಸ್ಪಾಟ್ ಆಗುತ್ತಿದೆ. ಐಎಲ್ ಮತ್ತು ಸಾರಿ ಕೇಸ್‌ಗಳಿಗೆ ಕಡ್ಡಾಯವಾಗಿ ಟೆಸ್ಟ್ ಮಾಡಲು ಸರ್ಕಾರ ಸೂಚಿಸಿದೆ. ಇನ್ನು ಬೆಂಗಳೂರಿನಲ್ಲಿ ಕೇಸ್ ಏರಿಕೆ ಆಗುತ್ತಿದ್ದು, ಕೋವಿಡ್ ನಿಯಂತ್ರಣ ಜೊತೆಗೆ ಡೆಂಗ್ಯೂ ಕಾಪಾಡಿಕೊಳ್ಳೋದು ಸವಾಲಾಗಿದೆ. ಮಳೆಗಾಲ ಆಗಿರುವುದರಿಂದ ಬಿಬಿಎಂಪಿ (BBMP) ಆರೋಗ್ಯ ವಿಭಾಗ ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುತ್ತಿದೆ. ಇದನ್ನೂ ಓದಿ: ಕಮಲ್ ಹಾಸನ್ ಚಿತ್ರ ರಿಲೀಸ್ ಆದ್ರೆ ಥಿಯೇಟರ್‌ಗಳಿಗೆ ಬೆಂಕಿ ಹಚ್ತೀವಿ: ನಾರಾಯಣಗೌಡ ಎಚ್ಚರಿಕೆ

    ಬೆಂಗಳೂರಿನಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ವು ಐಎಲ್‌ಐ, ಸಾರಿ ಕೇಸ್‌ಗಳು ಇವೆ ಎಂಬ ಮಾಹಿತಿ ಇದೆ. ಬಿಬಿಎಂಪಿಯ ಎಂಟು ವಲಯ ಮಹಾದೇವಪುರ, ಯಲಹಂಕ, ಪೂರ್ವ ವಲಯ, ಪಶ್ಚಿಮ ವಲಯ ಮತ್ತು ಬೆಂಗಳೂರು ದಕ್ಷಿಣದಲ್ಲೂ ಉಸಿರಾಟದ ಸಮಸ್ಯೆ, ಹೃದಯ ಸಂಬಂಧಿ ಮತ್ತು ಬೇರೆ ಬೇರೆ ಖಾಯಿಲೆಗಳಿಂದ ಬಳಲುತ್ತಿದ್ದಾರೆ. ಅಂತಹವರ ಬಗ್ಗೆ ನಿಗಾವಹಿಸಲು ಪಾಲಿಕೆ ಮುಂದಾಗಿದೆ. ಆದರೆ ಮಹಾದೇವಪುರ ಬೆಂಗಳೂರು ದಕ್ಷಿಣ ವಲಯ ಜೊತೆಗೆ ಪೂರ್ವ ವಲಯದಲ್ಲಿ ಕೇಸ್ ಏರಿಕೆ ಆಗುತ್ತಿದೆ. ಪೂರ್ವ ವಲಯದಲ್ಲಿ 30ರ ಗಡಿ ದಾಟಿದೆ. ಮಹಾದೇವಪುರದಲ್ಲಿ ಆಕ್ಟೀವ್ ಕೇಸ್ 30ರ ಗಡಿ ದಾಟಿದೆ ಜೊತೆಗೆ ದಕ್ಷಿಣ ವಲಯದಲ್ಲೂ ಕೇಸ್ ಏರಿಕೆ ಆಗಿದೆ. ಇದನ್ನೂ ಓದಿ: ದ.ಕ ಜಿಲ್ಲೆಯಾದ್ಯಂತ ಭಾರೀ ಮಳೆ – ಶನಿವಾರ ಶಾಲೆಗಳಿಗೆ ರಜೆ ಘೋಷಣೆ

    ಇನ್ನೂ ಡೆಂಗ್ಯೂ ಜೊತೆಗೆ ಕೋವಿಡ್ ಕಂಟ್ರೋಲ್ ಮಾಡಲು ಬಿಬಿಎಂಪಿ ಹಲವು ಕ್ರಮ ವಹಿಸುತ್ತಿದೆ. ಐಎಲ್‌ಐ ಮತ್ತು ಸಾರಿ ಕೇಸ್‌ಗಳ ಬಗ್ಗೆ ಎಚ್ಚರಿಕೆ ವಹಿಸುತ್ತಿದೆ. ಇದನ್ನೂ ಓದಿ: ರಾಹುಲ್‌ ಗಾಂಧಿ ಪ್ರಧಾನಿಯಾದ ದಿನ ಪಿಒಕೆ ಭಾರತದ ಭಾಗವಾಗಲಿದೆ: ʻಕೈʼ ಸಂಸದ ಪ್ರಮೋದ್ ತಿವಾರಿ

    ಕೋವಿಡ್ ಲಕ್ಷಣಗಳಿದ್ದರೆ ಏನು ಮಾಡಬೇಕು?
    * ಐಎಲ್‌ಐ, ಸಾರಿ ರೋಗಲಕ್ಷಣಗಳಿದ್ದರೆ ಟೆಸ್ಟ್ ಮಾಡಿಸಬೇಕು.
    * ಆರೋಗ್ಯದಲ್ಲಿ ಏರುಪೇರಾದ್ರೆ ವೈದ್ಯರನ್ನ ಭೇಟಿ ಮಾಡಬೇಕು.
    * ಸಭೆ, ಸಮಾರಂಭಗಳಲ್ಲಿ ಕೊರೊನಾ ನಿಯಮಾವಳಿ ಪಾಲಿಸಬೇಕು.
    * ಮಾಸ್ಕ್ ಹಾಕಬೇಕು, ಸ್ಯಾನಿಟೈಸೇಷನ್ ಮಾಡಿಕೊಳ್ಳಬೇಕು.
    * ಬೇರೆ ಬೇರೆ ಖಾಯಿಲೆಯಿಂದ ಬಳಲುತ್ತಿದ್ದರೆ ಚಿಕಿತ್ಸೆ ಅಗತ್ಯ.

  • ಸೆ.15ರ ಒಳಗೆ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣ – ಡಿಕೆಶಿ

    ಸೆ.15ರ ಒಳಗೆ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣ – ಡಿಕೆಶಿ

    -ಬೆಂಗಳೂರಿನ ಫುಟ್ ಪಾತ್ ಅಂಗಡಿಗಳನ್ನು ತೆರವು, ವ್ಯಾಪಾರಿಗಳಿಗೆ ವಾಹನ ಸೌಲಭ್ಯ
    -ಕಾನೂನು ಬಾಹಿರವಾಗಿ ಹಾಕಿರುವ ಆಪ್ಟಿಕಲ್ ಕೇಬಲ್ ಕತ್ತರಿಸಲು ಸೂಚನೆ
    -ರಸ್ತೆ ಅಗಲೀಕರಣಕ್ಕೆ ಶಾಸಕರು ಶಿಫಾರಸ್ಸು ಮಾಡಿದರೆ ಟಿಡಿಆರ್ ನೀಡಲು ಸಿದ್ಧ
    -ಮಳೆಯಿಂದ ಮನೆಯೊಳಗೆ ನೀರು ನುಗ್ಗಿರುವವರಿಗೆ 10 ಸಾವಿರ ಪರಿಹಾರ
    -ಕೆಂಪೇಗೌಡ ಬಡಾವಣೆಯ ಬಿಡಿಎ ಜಾಗದಲ್ಲಿ ಸ್ಕೈ ಡೆಕ್ ನಿರ್ಮಾಣ

    ಬೆಂಗಳೂರು: ಸೆ.15ರ ಒಳಗಾಗಿ ಬಿಬಿಎಂಪಿ (BBMP) ವಿಭಜನೆ ಪ್ರಕ್ರಿಯೆ ಪೂರ್ಣಗೊಂಡು ಗ್ರೇಟರ್ ಬೆಂಗಳೂರು ಪ್ರಾಧಿಕಾರ (Greater Bengaluru) ರಚನೆಯಾಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದರು.

    ಗ್ರೇಟರ್ ಬೆಂಗಳೂರು ಸಭೆ ನಂತರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 15ರಿಂದ ಬಿಬಿಎಂಪಿಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಬಿಜಿಎ) ಆಗಿ ಪರಿವರ್ತನೆಗೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. 120 ದಿನಗಳಲ್ಲಿ ನಾವು ಪಾಲಿಕೆಗಳನ್ನು ರಚನೆ ಮಾಡಲೇಬೇಕು. ಹೀಗಾಗಿ ಎಷ್ಟು ಪಾಲಿಕೆ ಮಾಡಬೇಕು ಎಂದು ಬೆಂಗಳೂರಿನ ಎಲ್ಲಾ ಶಾಸಕರ ಬಳಿ ಸಲಹೆಗಳನ್ನು ಕೇಳಿದ್ದೇನೆ. ನಂತರ ಮುಂದೆ ಎಲ್ಲೆಲ್ಲಿ ವಿಸ್ತರಣೆ ಮಾಡಬೇಕು ಎಂದು ತೀರ್ಮಾನ ಮಾಡುತ್ತೇವೆ. ವಿರೋಧ ಪಕ್ಷದ ನಾಯಕರು ಸೇರಿದಂತೆ ಇನ್ನೂ ಮೂರ್ನಾಲ್ಕು ಶಾಸಕರ ಜೊತೆ ಚರ್ಚೆ ಮಾಡುತ್ತೇನೆ. ಎಲ್ಲರ ಸಲಹೆ ಪಡೆದ ಬಳಿಕ ಸಚಿವ ಸಂಪುಟದಲ್ಲಿ ಪ್ರಸ್ತಾಪ ಮಾಡಿ, ಅಂತಿಮ ತೀರ್ಮಾನ ಮಾಡಲಾಗುವುದು. ಸೆಪ್ಟೆಂಬರ್ 15ರ ಒಳಗಾಗಿ ಈ ಪಾಲಿಕೆಗಳು ರಚನೆಯಾಗಬೇಕು ಎಂದಿದ್ದಾರೆ.ಇದನ್ನೂ ಓದಿ:ಮೇ 26ರಿಂದ 2 ದಿನ ಮೋದಿ ಗುಜರಾತ್ ಪ್ರವಾಸ – 53,414 ಕೋಟಿ ರೂ. ವೆಚ್ಚದ ಯೋಜನೆಗಳ ಉದ್ಘಾಟನೆ

    ಮಳೆ ಪೀಡಿತ ಪ್ರದೇಶಗಳ ಶಾಸಕರ ಜೊತೆ ಚರ್ಚೆ ಮಾಡಿ, ತುರ್ತು ಕೆಲಸ ಕೈಗೊಳ್ಳಲು ಸ್ಥಳೀಯ ಅಧಿಕಾರಿಗಳಿಗೆ ಅಧಿಕಾರ ನೀಡಿದ್ದೇವೆ. ಇದಕ್ಕೆ ಅಗತ್ಯವಿರುವ ಬಜೆಟ್ ಅನ್ನು ಸರ್ಕಾರದಿಂದ ನೀಡುತ್ತೇವೆ. ಟ್ಯಾಂಕರ್ ನೀರಿನ ವಿಚಾರವಾಗಿ ದೂರು ಬಂದಿರುವ ಪ್ರದೇಶಗಳಲ್ಲಿ ಆಯಾ ಋತುವಿಗೆ ತಕ್ಕಂತೆ ಅಗತ್ಯ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಬೆಂಗಳೂರಿನ ಎಲ್ಲಾ ಫುಟ್‌ಪಾತ್ ಅಂಗಡಿಗಳನ್ನು ತೆರವುಗೊಳಿಸಲು ನಿರ್ಧರಿಸಿದ್ದೇವೆ. 27,665 ಬೀದಿ ಬದಿ ವ್ಯಾಪಾರಿಗಳು ನೋಂದಣಿ ಮಾಡಿಕೊಂಡಿದ್ದು, ನಾವು ಅವರಿಗೆ ತಳ್ಳುವ ವಾಹನ ನೀಡಲು ಸಿದ್ಧರಿದ್ದೇವೆ. ನಾವು ನಿಗದಿ ಮಾಡುವ ಜಾಗದಲ್ಲಿ ವಾಹನ ಇಟ್ಟುಕೊಂಡು ವ್ಯಾಪಾರ ಮಾಡಬೇಕು. 3,755 ಜನ ವ್ಯಾಪಾರಿಗಳು ವಾಹನ ಬೇಕು ಎಂದು ಕೇಳಿದ್ದಾರೆ. ನೀವು ಶಾಸಕರ ಮೂಲಕ ಒತ್ತಡ ತರಬೇಡಿ. ಕಾನೂನಿನಲ್ಲಿ ಇದಕ್ಕೆ ಅವಕಾಶವಿಲ್ಲ. ನಾವು ಒಂದೇ ಬಾರಿಗೆ ಇದನ್ನು ತೆರವುಗೊಳಿಸಲು ಆಗದಿದ್ದರೂ, ವ್ಯವಸ್ಥಿತವಾಗಿ ಹಂತ ಹಂತವಾಗಿ ಇದನ್ನು ಸರಿಪಡಿಸಲಾಗುವುದು ಎಂದು ತಿಳಿಸಿದರು.

    ರಸ್ತೆ ಅಗಲೀಕರಣದ ವಿಚಾರವಾಗಿ ಶಾಸಕರ ಜೊತೆ ಚರ್ಚೆ ಮಾಡಲಾಗಿದ್ದು, ಶಾಸಕರು ಎಲ್ಲೆಲ್ಲಿ ರಸ್ತೆ ಅಗಲೀಕರಣ ಆಗಬೇಕು ಎಂದು ಶಿಫಾರಸ್ಸು ಮಾಡುತ್ತಾರೋ, ಅಲ್ಲಿ ಆಸ್ತಿ ಮಾಲೀಕರಿಗೆ ಟಿಡಿಆರ್ ನೀಡಲಾಗುವುದು. ಶಾಸಕರು ಆಸ್ತಿ ಮಾಲೀಕರ ಜೊತೆ ಚರ್ಚೆ ಮಾಡಬೇಕು. ರಾಜಕಾಲುವೆ ಅಕ್ಕಪಕ್ಕದ ಬಫರ್ ವಲಯದಲ್ಲಿ ರಸ್ತೆ ನಿರ್ಮಾಣದ ಬಗ್ಗೆ ಚರ್ಚಿಸಿದ್ದು, ನಾವು 300 ಕಿ.ಮೀ ಉದ್ದದ ರಸ್ತೆ ಗುರುತಿಸಿದ್ದು, ಶಾಸಕರು ಕೂಡ ಸುಮಾರು 300 ಕಿ.ಮೀ ಉದ್ದದಷ್ಟು ರಸ್ತೆ ಮಾಡಲು ಶಿಫಾರಸ್ಸು ನೀಡಬಹುದು ಎಂದು ಹೇಳಿದ್ದೇವೆ. ಮುಂದೆ ತಗ್ಗು ಪ್ರದೇಶಗಳಲ್ಲಿ ಬೇಸ್‌ಮೆಂಟ್ ಪಾರ್ಕಿಂಗ್‌ಗೆ ಅವಕಾಶ ಇರುವುದಿಲ್ಲ. ಆಪ್ಟಿಕಲ್ ಫೈಬರ್ ಕೇಬಲ್‌ಗಳನ್ನು ಸೀವೇಜ್ ಹಾಗೂ ನೀರುಗಾಲುವೆಗಳಲ್ಲಿ ತೆಗೆದುಕೊಂಡು ಹೋಗಿದ್ದಾರೆ ಎಂದು ಕೆಲವು ಶಾಸಕರು ಹೇಳಿದ್ದಾರೆ. ಈ ರೀತಿ ಎಳೆದಿರುವ ಕೇಬಲ್‌ಗಳನ್ನು ಕತ್ತರಿಸಿ ಹಾಕಲು ನಾನು ಹೇಳಿದ್ದೇನೆ. ಇನ್ನು ಚರಂಡಿಗಳಲ್ಲಿ ಹೂಳು ಎತ್ತಲು ಸೂಚಿಸಲಾಗಿದೆ ಎಂದರು.

    ನಗರದ 25 ಲಕ್ಷ ಆಸ್ತಿಗಳನ್ನು ಇ-ಖಾತಾ ಮಾಡಲು ಹೇಳಿದ್ದು, ಎಲ್ಲಾ ಆಸ್ತಿಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಣ ಮಾಡುತ್ತಿದ್ದು, ಈಗಾಗಲೇ 5 ಲಕ್ಷ ಆಸ್ತಿಗಳ ಡಿಜಿಟಲೀಕರಣ ಪೂರ್ಣಗೊಂಡಿದೆ. ಇದನ್ನು ದೊಡ್ಡ ಅಭಿಯಾನವಾಗಿ ಮಾಡುತ್ತಿದ್ದೇವೆ. ಆಮೂಲಕ ತೆರಿಗೆ ಹಾಗೂ ಆಸ್ತಿ ದಾಖಲಾತಿಯಲ್ಲಿ ಪಾರದರ್ಶಕತೆ ತರಲಾಗುತ್ತಿದೆ. ಇದಕ್ಕಾಗಿ ನ್ಯಾಷನಲ್ ಈ ಗವರ್ನೆನ್ಸ್ ಅವಾರ್ಡ್ ಕೂಡ ಸಿಕ್ಕಿದೆ. ಇನ್ನು ಸ್ಕೈಡೆಕ್ ಅನ್ನು ಹೆಮ್ಮಿಗೆಪುರದಲ್ಲಿ ನಿರ್ಮಿಸಲು ತೀರ್ಮಾನಿಸಿದ್ದೆವು. ಆದರೆ ವಿಮಾನ ನಿಲ್ದಾಣದಿಂದ 20 ಕಿ.ಮೀ ದೂರ ಇರಬೇಕು ಎಂಬ ಕಾರಣದಿಂದ ಅಲ್ಲಿ ಸಮಸ್ಯೆ ಎದುರಾಗಿದೆ. ಹೀಗಾಗಿ ಇದನ್ನು ಕೆಂಪೇಗೌಡ ಬಡಾವಣೆಯಲ್ಲಿ ಬಿಡಿಎ ಜಾಗದಲ್ಲಿ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ. ರಸ್ತೆಗಳಲ್ಲಿ ಹಳೆ ವಾಹನಗಳನ್ನು ನಿಲ್ಲಿಸಿ ಹೋಗುತ್ತಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ, ಕಂದಾಯ ಇಲಾಖೆಯಿಂದ 100 ಎಕರೆ ಜಾಗ ಒದಗಿಸಿ, ಆ ಎಲ್ಲಾ ವಾಹನಗಳನ್ನು ಅಲ್ಲಿಗೆ ಸ್ಥಳಾಂತರಿಸಲು ಸಂಚಾರ ಪೊಲೀಸರಿಗೆ ಸೂಚಿಸಲಾಗಿದೆ. ಪಾಲಿಕೆ ಕಾನೂನಿನ ಪ್ರಕಾರ 21 ದಿನಗಳ ಕಾಲ ರಸ್ತೆಯಲ್ಲಿ ನಿಲ್ಲಿಸಿರುವ ವಾಹನ ತೆಗೆಯದಿದ್ದರೆ ಅದನ್ನು ಅನಾಥ ವಾಹನ ಎಂದು ಪರಿಗಣಿಸಿ ಹರಾಜು ಹಾಕಲು ಅವಕಾಶವಿದೆ. ಇನ್ನು ಪೊಲೀಸರು ನಿಗದಿ ಮಾಡುವ ನೋ ಪಾರ್ಕಿಂಗ್ ಪ್ರದೇಶಗಳಲ್ಲಿ ವಾಹನ ನಿಲುಗಡೆಗೆ ಅವಕಾಶ ಇರುವುದಿಲ್ಲ. ಇನ್ನು ಮೆಟ್ರೋ ಕಾಮಗಾರಿ ನಡೆಯುತ್ತಿರುವ ಕಡೆಗಳಲ್ಲಿ ಸರ್ವೀಸ್ ರಸ್ತೆಗಳನ್ನು ಮುಖ್ಯ ರಸ್ತೆ ಜೊತೆ ವಿಲೀನ ಮಾಡಿ, ಸುಗಮವಾಗಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು. ಸುಮಾರು 40-50 ಕಿ.ಮೀ ಪ್ರಮುಖ ರಸ್ತೆಗಳಲ್ಲಿ ಈ ಕ್ರಮ ಕೈಗೊಳ್ಳಲಾಗುವುದು. ಈ ವಿಚಾರವಾಗಿ ಶಾಸಕರನ್ನು ವಿಶ್ವಾಸಕ್ಕೆ ಪಡೆದಿದ್ದು, ಎಲ್ಲರೂ ಒಪ್ಪಿದ್ದಾರೆ ಎಂದು ತಿಳಿಸಿದರು.

    ಬಿಬಿಎಂಪಿ ವಿಭಜನೆ ಬಗ್ಗೆ ಬಿಜೆಪಿ ನಾಯಕರು ಅಪಸ್ವರ ಎತ್ತಿದ್ದಾರೆ ಎಂಬ ಪ್ರಶ್ನೆಗೆ, ಅವರು ನಿಮ್ಮ ಮುಂದೆ ಏನು ಹೇಳುತ್ತಾರೋ ಗೊತ್ತಿಲ್ಲ. ಆದರೆ ನನ್ನ ಬಳಿ ಅವರು ಏನು ಹೇಳುತ್ತಾರೆ ಎಂದು ನನಗೆ ಮಾತ್ರ ಗೊತ್ತಿದೆ. ಟನಲ್ ರಸ್ತೆ ಮಾಡುವುದು ಅಸಾಧ್ಯ ಎಂಬ ಬಿಜೆಪಿ ನಾಯಕರ ಮಾತಿನ ಬಗ್ಗೆ ಕೇಳಿದಾಗ, ಈ ಯೋಜನೆಯ ಟೆಂಡರ್ ಬಂದಾಗ ಗೊತ್ತಾಗುತ್ತದೆ ಎಂದಿದ್ದಾರೆ.ಇದನ್ನೂ ಓದಿ: 3 ವರ್ಷಗಳ ಬಳಿಕ ಮತ್ತೆ ವಕ್ಕರಿಸಿದ ಕೊರೊನಾ – ದೇಶದ ಹಲವು ರಾಜ್ಯಗಳಲ್ಲಿ JN1 ಎಂಟ್ರಿ

  • ಭಾರೀ ಮಳೆಗೆ ಬಿಬಿಎಂಪಿ ವ್ಯಾಪ್ತಿಯ 63 ಕೆರೆಗಳು ಸಂಪೂರ್ಣ ಭರ್ತಿ: ಪ್ರೀತಿ ಗೆಹ್ಲೋಟ್

    ಭಾರೀ ಮಳೆಗೆ ಬಿಬಿಎಂಪಿ ವ್ಯಾಪ್ತಿಯ 63 ಕೆರೆಗಳು ಸಂಪೂರ್ಣ ಭರ್ತಿ: ಪ್ರೀತಿ ಗೆಹ್ಲೋಟ್

    ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ವ್ಯಾಪ್ತಿಯಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ ಸುರಿದ ಮಳೆಯಿಂದಾಗಿ ನೀರಿನ ಮಟ್ಟವು ಗಣನೀಯವಾಗಿ ಹೆಚ್ಚಾಗಿದೆ. ಇದರಲ್ಲಿ 63 ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿವೆ ಎಂದು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರಿತ್ಯ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್(Preeti Gehlot) ತಿಳಿಸಿದ್ದಾರೆ.

    ಈ ಕುರಿತು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಕೆರೆಗಳ(Lakes) ಒಟ್ಟು ಸಂಗ್ರಹಣಾ ಸಾಮರ್ಥ್ಯವು 32,514 ದಶಲಕ್ಷ ಲೀಟರ್‌ಗಳಾಗಿದೆ. 2025ರ ಏಪ್ರಿಲ್‌ನಲ್ಲಿ ಕೆರೆಗಳ ಒಟ್ಟು ನೀರಿನ ಸಂಗ್ರಹಣೆಯ ಪ್ರಮಾಣವು 10,595 ದಶಲಕ್ಷ ಲೀಟರ್‌ಗಳಿಗೆ ಕುಸಿದು ಕೇವಲ 3 ಕೆರೆಗಳಲ್ಲಿ ಮಾತ್ರ ಪೂರ್ಣ ಪ್ರಮಾಣದಲ್ಲಿ ನೀರು ತುಂಬಿತ್ತು. ಸುಮಾರು 63 ಕೆರೆಗಳಲ್ಲಿ ನೀರಿಲ್ಲದೆ ಒಣಗುವ ಹಂತದಲ್ಲಿತ್ತು ಎಂದಿದ್ದಾರೆ. ಇದನ್ನೂ ಓದಿ: ಇಡಿ ತನಿಖೆಗೆ ಸಂಪೂರ್ಣ ಸಹಕಾರ – ದಾಳಿ ಉದ್ದೇಶ ಗೊತ್ತಿಲ್ಲ, ನಾನೇನೂ ಮುಚ್ಚಿಟ್ಟಿಲ್ಲ ಅಂದ ಪರಂ

    ಇದೀಗ ನಗರದಲ್ಲಿ ಕಳೆದ ಒಂದು ವಾರದಿಂದ ಸುರಿದ ಮಳೆಯಿಂದಾಗಿ ಒಟ್ಟು 26,056 ದಶಲಕ್ಷ ಲೀಟರ್‌ನಷ್ಟು ನೀರು ಕೆರೆಗಳಲ್ಲಿ ಸಂಗ್ರಹವಾಗಿದ್ದು, ಕಳೆದ ಏಪ್ರಿಲ್‌ಗೆ ಹೋಲಿಸಿದರೆ ನೀರಿನ ಪ್ರಮಾಣ ಸಾಕಷ್ಟು ಹೆಚ್ಚಾಗಿದೆ. ಇದೀಗ ಪಾಲಿಕೆ ವ್ಯಾಪ್ತಿಯ 63 ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿರುತ್ತವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪರಮೇಶ್ವರ್‌ ಬೆನ್ನಿಗೆ ನಿಂತ ಸಿಎಂ, ಸಚಿವರು – ನಾವಿದ್ದೇವೆ ಎಂದ ಹೈಕಮಾಂಡ್

    ತುಂಬಿರುವ ಎಲ್ಲಾ ಕೆರೆಗಳ ತೂಬುಗಳ ಬಳಿ ಹಾಗೂ ಕೆರೆಯಲ್ಲಿ ಸ್ವಚ್ಛತಾ ಕಾರ್ಯವನ್ನು ಮಾಡಲಾಗುತ್ತಿದೆ. ಕೆರೆಗಳು ನೀರು ಹೋಗುವ ಕಾಲುವೆಗಳಲ್ಲಿ ಕಸ-ಕಡ್ಡಿ, ಪ್ಲಾಸ್ಟಿಕ್ ಸೇರಿದಂತೆ ಇನ್ನಿತರೆ ತ್ಯಾಜ್ಯವನ್ನು ತೆರವುಗೊಳಿಸಲು ಸಿಬ್ಬಂದಿಯನ್ನ ನಿಯೋಜಿಸಿ ಸ್ವಚ್ಛತಾ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

  • BBMP ವ್ಯಾಪ್ತಿಯಲ್ಲಿನ ಕಾಮಗಾರಿಗಳ ಹಣ ಬಿಡುಗಡೆಗೆ ಆದೇಶ

    BBMP ವ್ಯಾಪ್ತಿಯಲ್ಲಿನ ಕಾಮಗಾರಿಗಳ ಹಣ ಬಿಡುಗಡೆಗೆ ಆದೇಶ

    – ಡಿಕೆಶಿ ಸೂಚನೆ ಮೇರೆಗೆ 750 ಕೋಟಿ ರೂ. ಬಿಡುಗಡೆಗೆ ಬಿಬಿಎಂಪಿ ಅಸ್ತು

    ಬೆಂಗಳೂರು: ಅಮೃತ ನಗರೋತ್ಥಾನ ಯೋಜನೆ ಅಡಿಯಲ್ಲಿ ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿನ ಕಾಮಗಾರಿಗಳ ಹಣ ಬಿಡುಗಡೆಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಆದೇಶಿಸಿದೆ.

    ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸೂಚನೆ ಮೇರೆಗೆ ಬಿಬಿಎಂಪಿ ಮುಖ್ಯ ಆಯುಕ್ತರು ಅಮೃತ ನಗರೋತ್ಥಾನ ಯೋಜನೆ ಅಡಿ ಕೈಗೊಂಡ ಎಲ್ಲಾ ಕಾಮಗಾರಿಗಳ ಹಣ ಬಿಡುಗಡೆಗೆ ಸೂಚನೆ ನೀಡಿದ್ದಾರೆ. 2025-26ನೇ ಸಾಲಿನ 1ನೇ ಕಂತಿನ ಮೊತ್ತ 750 ಕೋಟಿ ರೂ. ಬಿಡುಗಡೆಗೆ ಆದೇಶ ಹೊರಡಿಸಿದ್ದಾರೆ.

    ಬಿಬಿಎಂಪಿ ಮುಖ್ಯ ಆಯುಕ್ತರ ಕೋರಿಕೆಯ ಡಿಸಿಎಂ ಗುತ್ತಿಗೆದಾರರಿಗೆ ಬಿಡುಗಡೆಗೊಳಿಸಲು ಸೂಚನೆ ನೀಡಿದ್ದರು. ಈ ಹಿನ್ನೆಲೆ ಹಣ ಬಿಡುಗಡೆಗೆ ಆದೇಶಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

  • ನಿಮ್ಮ ಕೆಟ್ಟ ರಸ್ತೆಗಳಿಂದ ಕುತ್ತಿಗೆ, ಬೆನ್ನು ನೋವು – 50 ಲಕ್ಷ ಪರಿಹಾರ ಕೋರಿ ಬಿಬಿಎಂಪಿಗೆ ಲೀಗಲ್‌ ನೋಟಿಸ್‌

    ನಿಮ್ಮ ಕೆಟ್ಟ ರಸ್ತೆಗಳಿಂದ ಕುತ್ತಿಗೆ, ಬೆನ್ನು ನೋವು – 50 ಲಕ್ಷ ಪರಿಹಾರ ಕೋರಿ ಬಿಬಿಎಂಪಿಗೆ ಲೀಗಲ್‌ ನೋಟಿಸ್‌

    ಬೆಂಗಳೂರು: ವಾಹನ ಚಲಾಯಿಸಲು ಯೋಗ್ಯವಲ್ಲದ ರಸ್ತೆಗಳಿಂದ ನಿರಂತರ ದೈಹಿಕ ಯಾತನೆ ಅನುಭವಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ತೆರಿಗೆದಾರರೊಬ್ಬರು 50 ಲಕ್ಷ ರೂ. ಪರಿಹಾರ ಕೋರಿ ಬಿಬಿಎಂಪಿಗೆ (BBMP) ಲೀಗಲ್‌ ನೋಟಿಸ್‌ (Legal Notice) ಕಳುಹಿಸಿದ್ದಾರೆ.

    ರಿಚ್ಮಂಡ್ ಟೌನ್ ನಿವಾಸಿಯಾಗಿರುವ ದಿವ್ಯ ಕಿರಣ್ ಅವರು ಕಳುಹಿಸಿದ ನೋಟಿಸ್‌ನಲ್ಲಿ, ನಾನು ತೆರಿಗೆ ಪಾವತಿಸುವ (Tax Payer) ನಾಗರಿಕನಾಗಿದ್ದೇನೆ. ಆದರೆ ಬಿಬಿಎಂಪಿ (BBMP) ಮೂಲಭೂತ ಮೂಲಸೌಕರ್ಯಗಳನ್ನು ನಿರ್ವಹಿಸುವಲ್ಲಿ ವಿಫಲವಾಗಿದೆ. ಇದರಿಂದ ನಾನು ದೈಹಿಕ ಯಾತನೆ ಮತ್ತು ಮಾನಸಿಕ ಯಾತನೆಯನ್ನು ನಿರಂತರವಾಗಿ ಎದುರಿಸುತ್ತಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 3 ದಿನಗಳಲ್ಲಿ 11 ಪಾಕ್ ಸ್ಪೈಗಳ ಬಂಧನ – ವ್ಲಾಗರ್, ವಿದ್ಯಾರ್ಥಿ, ಉದ್ಯಮಿ, ಗಾರ್ಡ್‌ಗಳಾಗಿದ್ದವರು ಬೇಹುಗಾರರಾಗಿ ಕೆಲಸ

    ಕೆಟ್ಟ ರಸ್ತೆಯಿಂದ ತೀವ್ರ ಕುತ್ತಿಗೆ ಮತ್ತು ಬೆನ್ನು ನೋವಿನ ಸಮಸ್ಯೆ ಅನುಭವಿಸುತ್ತಿದ್ದೇನೆ. ಮೂಳೆ ನೋವಿನ ಸಂಬಂಧ ಐದು ಬಾರಿ ಭೇಟಿ ನೀಡಿದ್ದೇನೆ ಅಷ್ಟೇ ಅಲ್ಲದೇ ನಾಲ್ಕು ಬಾರಿ ಆಸ್ಪತ್ರೆಗೆ ಭೇಟಿ ನೀಡಿದ್ದೇನೆ ಎಂದು ಅವರು ತಮ್ಮ ನೋವನ್ನು ಹೇಳಿಕೊಂಡಿದ್ದಾರೆ.

    ತೀವ್ರ ನೋವನ್ನು ನಿವಾರಿಸಲು ಚುಚ್ಚುಮದ್ದು ಹಾಕಿಸಿದ್ದೇನೆ. ಹಲವಾರು ಔಷಧಿಗಳು ಮತ್ತು ನೋವು ನಿವಾರಕಗಳನ್ನು ತೆಗೆದುಕೊಂಡಿದ್ದೇನೆ. ನೋವನ್ನು ತಡೆಯಲು ಸಾಧ್ಯವಾಗದೇ ಅತ್ತಿದ್ದೇನೆ. ಮಾನಸಿಕ ಯಾತನೆಯಿಂದ ನಿದ್ದೆಯೂ ಸರಿಯಾಗಿ ಬರುತ್ತಿಲ್ಲ. ಇದರಿಂದಾಗಿ ಆರೋಗ್ಯ ಮತ್ತು ದೈನಂದಿನ ಕೆಲಸದ ಮೇಲೆ ತೀವ್ರ ಪರಿಣಾಮ ಬೀರಿವೆ ಎಂದಿದ್ದಾರೆ. ಇದನ್ನೂ ಓದಿ: ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಉಲ್ಟಾ ಹೊಡೆದ ಡಿಕೆಶಿ

    ಮಾಧ್ಯಮದ ಜೊತೆ ಮಾತನಾಡಿದ ಅವರು, ಈ ಹಿಂದೆ ಅಧಿಕಾರಿಗಳಿಗೆ ಈ ಸಮಸ್ಯೆಗಳನ್ನು ತಿಳಿಸಿದ್ದರೂ ಯಾವುದೇ ಫಲಪ್ರದವಾಗಿಲ್ಲ. ನಾವು ತೆರಿಗೆಯನ್ನು ಪಾವತಿಸುತ್ತಿದ್ದೇನೆ. ನಮಗೆ ಉತ್ತಮ ರಸ್ತೆಗಳನ್ನು ಒದಗಿಸುವುದು ಬಿಬಿಎಂಪಿಯ ಕೆಲಸ. ಉತ್ತಮ ಮೂಲಸೌಕರ್ಯಗಳ ಬಗ್ಗೆ ಕಾಳಜಿ ವಹಿಸದಿರುವುದು ತುಂಬಾ ದುಃಖಕರ. ಈ ಕಾರಣಕ್ಕೆ ನೋಟಿಸ್‌ ಕಳುಹಿಸಿ 15 ದಿನಗಳ ಒಳಗಡೆ ಪರಿಹಾರ ಪಾವತಿಸಬೇಕೆಂದು ಕೋರಿದ್ದೇನೆ. ಒಂದು ವೇಳೆ ಪರಿಹಾರ ನೀಡದೇ ಇದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

  • ಗ್ರೇಟರ್ ಅಲ್ಲ, ಕ್ವಾರ್ಟರ್ ಬೆಂಗಳೂರು – ಆರ್.ಅಶೋಕ್ ಲೇವಡಿ

    ಗ್ರೇಟರ್ ಅಲ್ಲ, ಕ್ವಾರ್ಟರ್ ಬೆಂಗಳೂರು – ಆರ್.ಅಶೋಕ್ ಲೇವಡಿ

    ಬೆಂಗಳೂರು: ಗ್ರೇಟರ್ ಅಲ್ಲ, ಕ್ವಾರ್ಟರ್ ಬೆಂಗಳೂರು ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಲೇವಡಿ ಮಾಡಿದರು.

    ಇಂದಿನಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡರು ಒಂದು ಬೆಂಗಳೂರು ಕಟ್ಟಿದರೆ, ಕಾಂಗ್ರೆಸ್ ಸರ್ಕಾರ ಬೆಂಗಳೂರನ್ನು ಮೂರು ಭಾಗ ಮಾಡಿದೆ. ಇದರಿಂದಾಗಿ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. 110 ಹಳ್ಳಿಗಳಲ್ಲಿ ಜನರಿಗೆ ಹೆಚ್ಚು ತೆರಿಗೆ ವಿಧಿಸಲಾಗಿದೆ. ಯಾರದ್ದೋ ಜಮೀನಿಗೆ ಬೆಲೆ ಹೆಚ್ಚಿಸುವಂತೆ ಮಾಡಲು ಇಂತಹ ಯೋಜನೆ ರೂಪಿಸಲಾಗಿದೆ. ಇದರಿಂದಾಗಿ ಕೆಂಪೇಗೌಡರ ಚಿಂತನೆಗೆ ದ್ರೋಹ ಬಗೆದಂತಾಗಿದೆ. ಬೆಂಗಳೂರು ಭಾಗವಾದರೆ ಆದಾಯ ಬರುವುದಿಲ್ಲ. ಐಟಿ-ಬಿಟಿ ಕೇಂದ್ರಗಳು ಒಂದು ಕಡೆ ಇರುವಾಗ, ಮತ್ತೊಂದು ಕಡೆಗೆ ಆದಾಯವೇ ಬರುವುದಿಲ್ಲ. ಮೂರು ಪಾಲಿಕೆಗಳು ನಿರ್ಮಾಣವಾದರೆ ಅಲ್ಲಿ ಕನ್ನಡಿಗರೇ ಮೇಯರ್ ಆಗುತ್ತಾರೆ ಎಂಬ ಖಚಿತತೆ ಇಲ್ಲ ಎಂದು ವಿರೋಧ ವ್ಯಕ್ತಪಡಿಸಿದರು.ಇದನ್ನೂ ಓದಿ: ಈಗ U Turn – ಕದನ ವಿರಾಮ ಬಿಲ್ಡಪ್ ಕೊಟ್ಟು ಈಗ ತಣ್ಣಗಾದ ಟ್ರಂಪ್‌!

    ಮುಖ್ಯಮಂತ್ರಿಗಳು ಪಾಲಿಕೆಯಿಂದ ಆಯ್ಕೆಯಾಗುವುದಿಲ್ಲ ಎಂದಾದ ಮೇಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅವರನ್ನು ಹೇಗೆ ಅಧ್ಯಕ್ಷರನ್ನಾಗಿ ಮಾಡುತ್ತಾರೆ? ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲಿಕೆ ಸಭೆಯಲ್ಲಿ ಬಂದು ಕೂರಲು ಸಾಧ್ಯವಿಲ್ಲ. ಬೆಂಗಳೂರು ಭಾಗ ಆಗಬಾರದು ಎಂಬುದು ಬಿಜೆಪಿಯ ಅಭಿಪ್ರಾಯ. ಮುಂದೆ ನಮ್ಮ ಸರ್ಕಾರ ಬಂದರೆ ಬೆಂಗಳೂರನ್ನು ಒಂದು ಮಾಡುವ ಕೆಲಸ ಮಾಡುತ್ತೇವೆ. ಗ್ರೇಟರ್ ಬೆಂಗಳೂರಿಗೆ ವಿರುದ್ಧವಾಗಿ ಕಾನೂನು ಹೋರಾಟ ಮಾಡಲಿದ್ದೇವೆ ಎಂದು ಹೇಳಿದರು.

    ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ಲಾಭಕ್ಕೆ ಎಲ್ಲವನ್ನೂ ಮಾಡುತ್ತಿದ್ದಾರೆ. ಬಿಡಿಎ ಲೇಔಟ್‌ಗಳು ಇನ್ನೂ ಖಾಲಿ ಇದ್ದು, ಅಲ್ಲಿಗೆ ನೀರು, ವಿದ್ಯುತ್ ಕೊಡಲು ಆಗುತ್ತಿಲ್ಲ. ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು ಈ ಯೋಜನೆ ಮಾಡಿದ್ದಾರೆ. ನಗರದಲ್ಲಿ ಎಲ್ಲ ಕಡೆ ಕಸದ ರಾಶಿ ಇದೆ, ಮೇಕೆದಾಟು ಯೋಜನೆ ಜಾರಿ ಮಾಡಿಲ್ಲ, ನಗರದ ಆಡಳಿತ ನಡೆಸಲು ಆಗುತ್ತಿಲ್ಲ. ಇಂತಹ ವಿಫಲತೆಯನ್ನು ಒಪ್ಪಿಕೊಳ್ಳದೆ ಇಂತಹ ಯೋಜನೆ ತಂದಿದ್ದಾರೆ ಎಂದು ಟೀಕಿಸಿದರು.ಇದನ್ನೂ ಓದಿ: ಕರ್ನಲ್ ಸೋಫಿಯಾ ಪತಿ ಮನೆ ಮೇಲೆ RSS ದಾಳಿ ವದಂತಿ – ಪೋಸ್ಟ್ ಮಾಡಿದ್ದವನ ವಿರುದ್ಧ FIR