Tag: BC Nagesh

  • ಜಾತಿ ಬಲ ಇಲ್ಲದಿದ್ದರೂ, ಅಭಿವೃದ್ಧಿ ನಂಬಿ ಗೆದ್ದು ಸಚಿವರಾದ ಬಿ.ಸಿ. ನಾಗೇಶ್

    ಜಾತಿ ಬಲ ಇಲ್ಲದಿದ್ದರೂ, ಅಭಿವೃದ್ಧಿ ನಂಬಿ ಗೆದ್ದು ಸಚಿವರಾದ ಬಿ.ಸಿ. ನಾಗೇಶ್

    ತುಮಕೂರು: ರಾಜಕಾರಣದಲ್ಲಿ ಜಾತಿ ಮತ್ತು ದುಡ್ಡಿನ ಬಲವೇ ಪ್ರಮುಖ ಪಾತ್ರ ವಹಿಸುತ್ತದೆ. ಅಭಿವೃದ್ಧಿ ನೋಡಿ ಮತ ಹಾಕುವ ಆದ್ಯತೆಯ ಪ್ರಮಾಣ ಕಡಿಮೆ. ಪ್ರಬಲ ಜಾತಿಯ ಮತಗಳೇ ನಿರ್ಣಾಯಕವಾಗಿ, ಕ್ಷೇತ್ರದಿಂದ ಸ್ಪರ್ಧಿಸಿದ ಪ್ರಬಲ ಸಮುದಾಯದ ಅಭ್ಯರ್ಥಿಯೇ ಗೆಲ್ಲೋದು ಹೆಚ್ಚು. ಆದರೆ ಅಪರೂಪಕ್ಕೆ ಎಂಬಂತೆ ಜಾತಿ ಪ್ರಾಬಲ್ಯ ಇಲ್ಲದೇ ಇದ್ದರೂ ಗೆದ್ದು ಸಚಿವ ಸ್ಥಾನ ಅಲಂಕರಿಸಿದವರೂ ಇದ್ದಾರೆ.

    ಸಮುದಾಯದ ಮತ ನಂಬದೇ ಸರಳತೆ, ಕ್ಷೇತ್ರದ ಜನರೊಂದಿಗಿನ ಆಪ್ತತೆ ಹಾಗೂ ಅಭಿವೃದ್ಧಿ ಕೆಲಸದ ಮೂಲಕ ತಿಪಟೂರು (Tiptur) ಶಾಸಕ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ಬಿಜೆಪಿಯಿಂದ (BJP) ಎರಡು ಬಾರಿ ಗೆದ್ದು ಸಚಿವರಾಗಿದ್ದಾರೆ.

    ಸಚಿವ ಬಿ.ಸಿ.ನಾಗೇಶ್ ಬ್ರಾಹ್ಮಣ ಸಮುದಾಯದವರು. ತಿಪಟೂರು ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯದ ಪ್ರಾಬಲ್ಯ ಇದೆ. ಸರಿಸುಮಾರು 68 ಸಾವಿರ ನೊಳಂಬ ಲಿಂಗಾಯತರ ಮತಗಳಿವೆ. ಬ್ರಾಹ್ಮಣ ಸಮುದಾಯದ ಮತ ಕೇವಲ 5-8 ಸಾವಿರದ ಆಸುಪಾಸು. ಆದರೂ ಲಿಂಗಾಯತ ಸಮುದಾಯದ ಕಾಂಗ್ರೆಸ್ ಮಾಜಿ ಶಾಸಕ ಕೆ.ಷಡಕ್ಷರಿ ಅವರನ್ನು ಪರಾಭವಗೊಳಿಸಿ ಬಿ.ಸಿ.ನಾಗೇಶ್ ಎರಡು ಬಾರಿ ಶಾಸಕರಾಗಿ ಸಚಿವರಾಗಿದ್ದಾರೆ.

    ತಿಪಟೂರು ತಾಲೂಕಿನವರಾದ ಬಿ.ಸಿ. ನಾಗೇಶ್ ಅವರು, 2008 ಮತ್ತು 2018ರ ಸಾರ್ವತ್ರಿಕ ಚುನಾವಣೆಯಲ್ಲಿ ತಿಪಟೂರು ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಬೆಂಗಳೂರಿನ ಬಿ.ಎಂ.ಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ (ಬಿ.ಇ) ಪದವೀಧರರಾಗಿರುವ ಬಿ.ಸಿ ನಾಗೇಶ್ ಅವರು ಕಾಲೇಜು ದಿನಗಳಲ್ಲೇ ಜನ ಸೇವೆ ಮಾಡುವ ಉದ್ದೇಶದಿಂದ ಸಾರ್ವಜನಿಕ ಜೀವನಕ್ಕೆ ಧುಮುಕಿದರು.

    ಸಾಂದರ್ಭಿಕ ಚಿತ್ರ

    ಸ್ವಾತಂತ್ರ್ಯ ಭಾರತದ ಕರಾಳ ಘಟನೆಗಳಲ್ಲಿ ಒಂದಾದ ‘ತುರ್ತು ಪರಿಸ್ಥಿತಿ’ ಹೇರಿಕೆ ವಿರುದ್ಧ ಹೋರಾಟ ನಡೆಸಿದ ಬಿ.ಸಿ. ನಾಗೇಶ್ ಅವರು ಸೆರೆಮನೆ ವಾಸ ಅನುಭವಿಸಿದ್ದಾರೆ. ಬಿ.ಸಿ. ನಾಗೇಶ್ ಅವರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ (ಎಬಿವಿಪಿ) ಪೂರ್ಣಾವಧಿ ಕಾರ್ಯಕರ್ತರಾಗಿ, ಎಬಿವಿಪಿ ಬೆಂಗಳೂರು ವಿಭಾಗದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ದೇಶದ ಹಿತಕ್ಕಾಗಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಸ್ವಯಂ ಸೇವಾ ಸಂಘದ (RSS) ಸ್ವಯಂ ಸೇವಕರಾಗಿ ಬಿ.ಸಿ. ನಾಗೇಶ್ ಅವರು ಅವಿರತ ದುಡಿದಿದ್ದಾರೆ. ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ತುಮಕೂರು ಜಿಲ್ಲೆಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯ ಜವಾಬ್ದಾರಿಯನ್ನು ನಿಭಾಯಿಸಿರುವ ಬಿ.ಸಿ. ನಾಗೇಶ್ ಹಿಡಿದ ಅಭಿವೃದ್ಧಿ ಕೆಲಸ ಮಾಡಿಯೇ ತೀರುವ ಛಾತಿ ಇದ್ದವರು.

    ಶಿಕ್ಷಣ ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ಬಳಿಕ ಅಮೂಲಾಗ್ರ ಬದಲಾವಣೆ ತಂದರು. 15 ಸಾವಿರ ಶಿಕ್ಷಕರ ನೇಮಕ, 10 ಸಾವಿರ ಶಾಲಾ ಕೊಠಡಿಗಳ ನಿರ್ಮಾಣ ಮಾಡಿ ಸದ್ದು ಮಾಡಿದ್ದಾರೆ. ಅತಿಥಿ ಶಿಕ್ಷಕರ ಗೌರವ ಸಂಭಾವನೆ ಹೆಚ್ಚಳ, ಬಿಸಿಯೂಟ ನೌಕರರ ಸಂಬಳವೂ ಹೆಚ್ಚಿಸಿ ಕೈಹಿಡಿದಿದ್ದಾರೆ. ಇದನ್ನೂ ಓದಿ: ಶಾಸಕ ಸ್ಥಾನಕ್ಕೆ ಗುಬ್ಬಿ ಶ್ರೀನಿವಾಸ್ ಇಂದು ರಾಜೀನಾಮೆ

    ಶಿಕ್ಷಣ ಇಲಾಖೆಯ ಜವಾಬ್ದಾರಿ ಹೊತ್ತ ಬಳಿಕ ತಮ್ಮ ಕ್ಷೇತ್ರದ ಅಭಿವೃದ್ಧಿ ಕೆಲಸದ ಮೇಲೂ ಸಚಿವರು ತೀರಾ ನಿಗಾ ಇರಿಸಿದ್ದರು. ಹೊನ್ನವಳ್ಳಿ ಏತನೀರಾವರಿ ಯೋಜನೆಯ ಎರಡನೇ ಹಂತದ ಅನುಷ್ಠಾನ. ರಾಷ್ಟ್ರೀಯ ಹೆದ್ದಾರಿ 206 ಚತುಷ್ಪಥ ನಿರ್ಮಾಣಕ್ಕೆ 32 ಕೋಟಿ ರೂ., ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ 180 ಕೋಟಿ ರೂ. ವೆಚ್ಚದಲ್ಲಿ ಹತ್ತಾರು ಕೆರೆಗಳಿಗೆ ನೀರು ಹರಿಸಿದ್ದಾರೆ. ತಿಪಟೂರು ನೊಣವಿನಕೆರೆ ರಸ್ತೆ, ತಿಪಟೂರು ಹುಳಿಯಾರು ರಸ್ತೆ, ತಿಪಟೂರು-ಹಾಸನ ರಸ್ತೆ ಹೀಗೆ ನೂರಾರು ಕೋಟಿ ವೆಚ್ಚದಲ್ಲಿ ಪ್ರಮುಖ ರಸ್ತೆಗಳ ಅಭಿವೃದ್ಧಿ ಮಾಡಿದ್ದಾರೆ. ದಿ. ಹಾಸ್ಯ ನಟ ನರಸಿಂಹರಾಜು ಅವರ ರಂಗಮಂದಿರ, ಶಾಲಾ ಕಾಲೇಜು ಕಟ್ಟಡ ಹೀಗೆ ಅಭಿವೃದ್ಧಿ ಅಜೆಂಡಾ ಇಟ್ಟುಕೊಂಡ ಬಿ.ಸಿ.ನಾಗೇಶ್ ಮುಂದಿನ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸದಲ್ಲಿ ಇದ್ದಾರೆ.

    ಆದಾಗ್ಯೂ ಪಠ್ಯಪುಸ್ತಕ ರಚನಾ ಸಮಿತಿ ವಿವಾದ, ಹಿಜಬ್ ವಿವಾದಗಳಿಂದ ಸಚಿವರಿಗೆ ಸ್ವಲ್ಪ ಹಿನ್ನಡೆಯಾದರೂ ಈ ಬಾರಿ ಚುನಾವಣೆಯಲ್ಲಿ ಫಲಿತಾಂಶ ಏನಾಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ. ಇದನ್ನೂ ಓದಿ: ಬಿಜೆಪಿ ಮಾಜಿ ಸಂಸದ ಮಂಜುನಾಥ್ ಕುನ್ನೂರು, ಪುತ್ರ ಶೀಘ್ರವೇ ಕಾಂಗ್ರೆಸ್‌ಗೆ ಸೇರ್ಪಡೆ

  • Teachers Recruitment: ಪದವೀಧರ ಪ್ರಾಥಮಿಕ ಶಿಕ್ಷಕರಾಗಿ 13,352 ಮಂದಿ ಆಯ್ಕೆ – ಅಂತಿಮ ಪಟ್ಟಿ ಪ್ರಕಟ

    Teachers Recruitment: ಪದವೀಧರ ಪ್ರಾಥಮಿಕ ಶಿಕ್ಷಕರಾಗಿ 13,352 ಮಂದಿ ಆಯ್ಕೆ – ಅಂತಿಮ ಪಟ್ಟಿ ಪ್ರಕಟ

    ಬೆಂಗಳೂರು: 2022ರ ಪದವೀಧರ ಪ್ರಾಥಮಿಕ ಶಿಕ್ಷಕರ (6 ರಿಂದ 8 ನೇ ತರಗತಿ) ನೇಮಕಾತಿಗೆ (Teachers Recruitment 2022) ಸಂಧಿಸಿದಂತೆ ಶಿಕ್ಷಣ ಇಲಾಖೆಯು ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿದ್ದು, 13,352 ಮಂದಿ ಆಯ್ಕೆಯಾಗಿದ್ದಾರೆ.

    1:1 ಅನುಪಾತದಲ್ಲಿ ಶಿಕ್ಷಕರನ್ನ ಆಯ್ಕೆ ಮಾಡಿದ್ದು, ವೆಬ್‌ಸೈಟ್‌ನಲ್ಲಿ (https://schooleducation.kar.nic.in) ಆಯ್ಕೆಪಟ್ಟಿ ಪ್ರಕಟಿಸಿದೆ. ಇಂಗ್ಲಿಷ್ ಭಾಷೆಗೆ 1,772 ಶಿಕ್ಷಕರು, ಗಣಿತ ಮತ್ತು ವಿಜ್ಞಾನಕ್ಕೆ 5,498, ಸಮಾಜ ಪಾಠಗಳಿಗೆ 4,524, ಜೀವ ವಿಜ್ಞಾನಕ್ಕೆ 1,558 ಶಿಕ್ಷಕರು ಸೇರಿ ಸೇರಿ ಒಟ್ಟು 13,352 ಶಿಕ್ಷಕರನ್ನ ನೇಮಕ ಮಾಡಿದೆ.

    ಶಿಕ್ಷಣ ಇಲಾಖೆ (Education Department) ವೆಬ್‌ಸೈಟ್‌ನಲ್ಲಿ ಮುಖ್ಯ ಆಯ್ಕೆ ಪಟ್ಟಿ ಪ್ರಕಟಿಸಿರುವ ವಿಷಯವನ್ನು ಶಿಕ್ಷಣ ಸಚಿವ ಬಿ.ಸಿ ನಾಗೇಶ್ (BC Nagesh) ಬುಧವಾರ ತಿಳಿಸಿದ್ದಾರೆ.

    ಫೆಬ್ರವರಿ 27 ರಂದು 1:1 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಮಾ.1 ರಿಂದ ಮಾ.4 ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. 700ಕ್ಕೂ ಹೆಚ್ಚು ಆಕ್ಷೇಪಣೆಗಳು ಸಲ್ಲಿಕೆಯಾಗಿದ್ದು, ಇದರಲ್ಲಿ 15 ಆಕ್ಷೇಪಣೆಗಳು ಮಾತ್ರ ಪರಿಗಣನೆಗೆ ಅರ್ಹವಾಗಿದ್ದವು. ಇವುಗಳನ್ನ ಪರಿಶೀಲಿಸಿ ಮಾರ್ಚ್ 8 ರಂದು ಮುಖ್ಯ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಯುಗಾದಿ ನಂತರ ಮೆಗಾ ಆಪರೇಷನ್‌ಗೆ `ಕೈ’ ಪಾಳಯ ಸಿದ್ಧತೆ?

    ಮುಖ್ಯ ಆಯ್ಕೆಪಟ್ಟಿಯಲ್ಲಿ ಒಟ್ಟು 8,376 ಮಹಿಳೆಯರು, 4,973 ಪುರುಷರು ಹಾಗೂ ಮೂವರು ತೃತೀಯ ಲಿಂಗಿ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಅದರಲ್ಲಿ ಕಲ್ಯಾಣ ಕರ್ನಾಟಕ ವಿಭಾಗದಿಂದ 2,413 ಮಹಿಳೆಯರು, 1779 ಪುರುಷರು ಹಾಗೂ ಒಬ್ಬರು ತೃತೀಯ ಲಿಂಗಿ ಅಭ್ಯರ್ಥಿ ಆಯ್ಕೆಯಾಗಿದ್ದಾರೆ. ಕಲ್ಯಾಣ ಕರ್ನಾಟಕೇತರ ಜಿಲ್ಲೆಗಳಿಂದ 5,963 ಮಹಿಳೆಯರು, 3,194 ಪುರುಷರು ಹಾಗೂ ಇಬ್ಬರು ತೃತೀಯ ಲಿಂಗಿ ಅಭ್ಯರ್ಥಿಗಳು ನೇಮಕಗೊಂಡಿದ್ದಾರೆ. ಇದನ್ನೂ ಓದಿ: ಯುಗಾದಿಗೆ ಮುನ್ನವೇ ಟಿಕೆಟ್ ಘೋಷಣೆಗೆ ಒತ್ತಡ – ಕೈ ನಾಯಕರಿಗೆ ಧರ್ಮ ಸಂಕಟ

    ಈ ಪೈಕಿ ಕಲ್ಯಾಣ ಕರ್ನಾಟಕ ವಿಭಾಗದಲ್ಲಿ 5 ಹಾಗೂ ಕಲ್ಯಾಣ ಕರ್ನಾಟಕೇತರ ಜಿಲ್ಲೆಗಳಲ್ಲಿ 16 ಸೇರಿ ಒಟ್ಟು 21 ಇಂಜಿನಿಯರಿಂಗ್ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.

  • ಶಾಲೆಗಳಲ್ಲಿ ಮೊಟ್ಟೆ ಕೊಡುವುದು ನಿಲ್ಲಿಸುವುದಿಲ್ಲ: ಬಿ.ಸಿ ನಾಗೇಶ್

    ಶಾಲೆಗಳಲ್ಲಿ ಮೊಟ್ಟೆ ಕೊಡುವುದು ನಿಲ್ಲಿಸುವುದಿಲ್ಲ: ಬಿ.ಸಿ ನಾಗೇಶ್

    – ಸಾತ್ವಿಕ ಆಹಾರದ ಬಗ್ಗೆ ಚರ್ಚೆ ಆಗಿಲ್ಲ

    ಬೆಂಗಳೂರು: ಶಾಲೆಗಳಲ್ಲಿ (School) ಮೊಟ್ಟೆ (Egg) ಕೊಡುವುದನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ (BC Nagesh) ಸ್ಪಷ್ಟಪಡಿಸಿದರು.

    ವಿಧಾನ ಪರಿಷತ್‌ನ (Vidhan Parishad) ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ನ (JDS) ತಿಪ್ಪೇಸ್ವಾಮಿ ಪ್ರಶ್ನೆ ಕೇಳಿದರು. ಶಾಲಾ ಮಕ್ಕಳಿಗೆ ಸರಿಯಾಗಿ ಮೊಟ್ಟೆ ವಿತರಣೆ ಆಗುತ್ತಿಲ್ಲ. ಬೆಲೆ ಜಾಸ್ತಿ ಆಯ್ತು ಅಂತ ಅಕ್ಟೋಬರ್, ನವೆಂಬರ್, ಡಿಸೆಂಬರ್‌ನಲ್ಲಿ ಮೊಟ್ಟೆ ವಿತರಣೆ ಆಗಿಲ್ಲ. ಸರ್ಕಾರ ಸಮರ್ಪಕವಾಗಿ ಮೊಟ್ಟೆ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದರು.

    ಇದಕ್ಕೆ ವಿಪಕ್ಷ ನಾಯಕ ಹರಿಪ್ರಸಾದ್ ಧ್ವನಿಗೂಡಿಸಿ, ಕೆಲ ಶಾಲೆಗಳಲ್ಲಿ ಉದ್ದೇಶ ಪೂರ್ವಕವಾಗಿ ಮೊಟ್ಟೆ ಕೊಡುತ್ತಿಲ್ಲ. ಬಾಳೆಹಣ್ಣು, ಚಿಕ್ಕಿ ಮಾತ್ರ ಕೊಡಲಾಗುತ್ತಿದೆ. ಕೆಲ ಶಾಲೆಗಳಲ್ಲಿ ಮೊಟ್ಟೆ ಕೊಡಬೇಡಿ ಅಂತ ಸೂಚನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಮೊಟ್ಟೆ ಕೊಡುವುದನ್ನು ನಿಲ್ಲಿಸಬಾರದು ಎಂದು ಆಗ್ರಹಿಸಿದರು.

    ಇದಕ್ಕೆ ಉತ್ತರ ನೀಡಿದ ಸಚಿವ ಬಿ.ಸಿ ನಾಗೇಶ್, ಬಿಸಿಯೂಟದಲ್ಲಿ ಶಾಲಾ ಮಕ್ಕಳಿಗೆ ಮೊಟ್ಟೆ ಕೊಡಬೇಕು ಎಂದು 2007ರಲ್ಲಿ ನಿರ್ಧಾರ ಕೈಗೊಳ್ಳಲಾಯಿತು. ಆದರೆ ಈವರೆಗೂ ಮೊಟ್ಟೆ ಕೊಡದಂತೆ ನೋಡಿಕೊಳ್ಳಲಾಯಿತು. ಯಾರ ಒತ್ತಡಕ್ಕೆ ಹೀಗೆ ಆಯ್ತೋ ಗೊತ್ತಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

    ನಮ್ಮ ಸರ್ಕಾರವು ಧೈರ್ಯ ಮಾಡಿ ಮೊಟ್ಟೆ ಕೊಡುವ ನಿರ್ಧಾರ ಜಾರಿಗೆ ತಂದೆವು. ಎಲ್ಲ ಕಡೆ ಒಟ್ಟಿಗೆ ಜಾರಿಗೆ ತರುವ ಬದಲು ಅಪೌಷ್ಟಿಕತೆ ಇರುವ ಕಡೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮೊದಲು ಜಾರಿಗೆ ತರಲಾಗಿದೆ. ನಂತರ ಇತರ ಜಿಲ್ಲೆಗೆ ವಿಸ್ತರಿಸಲಾಗಿದೆ. ಮೊಟ್ಟೆ ಕೊಟ್ಟ ನಂತರ ಪೌಷ್ಟಿಕತೆಯಲ್ಲಿನ ಬದಲಾವಣೆ ಕುರಿತು ಅಧ್ಯಯನ ವರದಿ ಪಡೆಯಲಾಗಿದೆ. ಅದರಂತೆ ಪೌಷ್ಟಿಕತೆ ಹೆಚ್ಚಾಗಿದ್ದನ್ನು ಮನಗಂಡು ಮೊಟ್ಟೆ ಕೊಡುವುದನ್ನು ಮುಂದುವರಿಸಲಾಗುತ್ತದೆ. ಯಾರಿಗೂ ಮೊಟ್ಟೆ, ಬಾಳೆಹಣ್ಣು ತಿನ್ನಿ ಎಂದು ಒತ್ತಾಯ ಇಲ್ಲ. ಯಾರಿಗೆ ಯಾವುದು ಬೇಕೋ ಅದನ್ನು ಕೊಡಲಾಗುತ್ತದೆ. ಮೊಟ್ಟೆ ಬೇಡ ಅಂದವರಿಗೆ ಮಾತ್ರ ಬಾಳೆಹಣ್ಣು, ಚಿಕ್ಕಿ ಕೊಡುತ್ತೇವೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ:  ಕೆಟ್ಟು ನಿಂತ ಅಂಬುಲೆನ್ಸ್ – ನಡುರಸ್ತೆಯಲ್ಲೇ 2 ಗಂಟೆ ನರಳಾಡಿದ ತುಂಬು ಗರ್ಭಿಣಿ

    ನೈತಿಕ ಶಿಕ್ಷಣ ಕೊಡಬೇಕು ಎನ್ನುವ ನಿರ್ಧಾರಕ್ಕೆ ಸರ್ಕಾರ ಬಂದಿದೆ. ಆದರೆ ಸಾತ್ವಿಕ ಆಹಾರದ ಬಗ್ಗೆ ಇಲಾಖೆಯಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು. ಈ ವೇಳೆ ಮಧ್ಯಪ್ರವೇಶ ಮಾಡಿದ ಸಭಾಪತಿ ಬಸವರಾಜ ಹೊರಟ್ಟಿ, ಶಾಲೆಗಳಲ್ಲಿ ಮಕ್ಕಳಿಗೆ ಮಾರಲ್ ಎಜುಕೇಶನ್ ಇರಬೇಕು. ವಾರಕ್ಕೆ ಒಂದು ಪೀರಿಯಡ್ ಆದರೂ ಇದನ್ನು ಮಾಡಬೇಕು. ನನ್ನ ಸಲಹೆ ಪರಿಗಣಿಸಿ ಎಂದರು. ಇದನ್ನೂ ಓದಿ: Air Show ಬಡತನ ಓಡಿಸುತ್ತಾ – ಪ್ರಧಾನಿ ಮೋದಿಗೆ ಹೆಚ್‌ಡಿಕೆ ಪ್ರಶ್ನೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸ್ಯಾಂಟ್ರೋ ರವಿಗೆ ಕುಮಾರಕೃಪಾ ಹೊಸದಲ್ಲ – ಬಿ.ಸಿ ನಾಗೇಶ್

    ಸ್ಯಾಂಟ್ರೋ ರವಿಗೆ ಕುಮಾರಕೃಪಾ ಹೊಸದಲ್ಲ – ಬಿ.ಸಿ ನಾಗೇಶ್

    ಹಾಸನ: ಸ್ಯಾಂಟ್ರೋ ರವಿಗೆ (Santro Ravi) ವಿಧಾನಸೌಧ (Vidhana Soudha), ಕುಮಾರಕೃಪಾ, ಮಿನಿಸ್ಟರ್‌ಗಳು ಯಾವುದೂ ಹೊಸದಲ್ಲ. ಯಾರೂ ಮಿನಿಸ್ಟರ್ ಆಗ್ತಾರೋ, ಯಾವ ಪಕ್ಷದವರು ಆಗ್ತಾರೋ ಅವರ ಜೊತೆ ಇದ್ದಾನೆ. ಈ ಮಾಹಿತಿಯನ್ನ ಪೊಲೀಸರೇ ಹೇಳಿರುವುದಾಗಿ ಸಚಿವ ಬಿ.ಡಿ ನಾಗೇಶ್ (BC Nagesh) ತಿಳಿಸಿದ್ದಾರೆ.

    ಹಾಸನದಲ್ಲಿ (Hassan) ಸ್ಯಾಂಟ್ರೋ ರವಿ ಜೊತೆ ಬಿಜೆಪಿ (BJP) ಸಚಿವರ ಸಂಪರ್ಕ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಯಾಂಟ್ರೋ ರವಿ ಇವತ್ತು ವಿಧಾನಸೌಧಕ್ಕೆ ಬಂದವನಲ್ಲ. ಮೊದಲ ಬಾರಿಗೆ ಕೇಸ್ ದಾಖಲಾಗಿದೆ. ಅವನು ಯಾರು? ಅವನ ಇತಿಹಾಸ ಏನು ನನಗೆ ಗೊತ್ತಿಲ್ಲ. ಸಿಎಂ ಪೂರ್ಣ ವಿವರಗಳನ್ನ ತೆಗೆದುಕೊಂಡು ಕ್ರಮ ತೆಗೆದುಕೊಳ್ಳುತ್ತೇವೆ ಅಂತಾ ಸ್ಪಷ್ಟವಾಗಿ ಹೇಳಿದ್ದಾರೆ. ಎಫ್‌ಐರ್‌ಆರ್ ದಾಖಲಾಗಿದೆ. ನಮ್ಮ ಸರ್ಕಾರ ಯಾವುದೇ ಆರೋಪಿಯನ್ನು ರಕ್ಷಣೆ ಮಾಡುವ ಸರ್ಕಾರ ಅಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದೈವ ಶಕ್ತಿಯಿದ್ದವರಿಗೆ ಕ್ಯಾನ್ಸರ್ ಗೆಲ್ಲುವ ಶಕ್ತಿಯಿದೆ: ಬೊಮ್ಮಾಯಿ

    ಹೆಚ್‌ಡಿಕೆ (HD Kumaraswamy) ಆರೋಪಕ್ಕೆ ತಿರುಗೇಟು ನೀಡಿದ ಸಚಿವರು, ಗೃಹ ಸಚಿವರ ಜೊತೆ ನಿಂತು ಫೋಟೋ ತೆಗೆಸಿಕೊಂಡ ಮಾತ್ರಕ್ಕೆ ಎಲ್ಲವೂ ಗೊತ್ತಿದೆ. ಈಗ ಸಾರ್ವಜನಿಕ ಜೀವನದಲ್ಲಿ ಮೊಬೈಲ್ ಬಂದ್ಮೇಲೆ ಯಾರ ಫೋಟೋ ಯಾರು ತೆಗೆದುಕೊಂಡಿರ್ತಾರೆ ಯಾರಿಗೂ ಗೊತ್ತಾಗಲ್ಲ. ಕುಮಾರಸ್ವಾಮಿ ಅವರೂ ಸಾಕ್ಷ್ಯಾಧಾರಗಳಿಲ್ಲದೇ ಆರೋಪ ಮಾಡ್ತಾರೆ. ಅದಕ್ಕೆ ಬೆಲೆಯಿಲ್ಲ. ಎಲೆಕ್ಷನ್ ಟೈಮಲ್ಲಿ ವೋಟು ತೆಗೆದುಕೊಳ್ಳುವುದಕ್ಕೋಸ್ಕರ ಮಾತನಾಡುವ ಮಾತಿಗೆ ಬೆಲೆ ಇಲ್ಲ. ತನಿಖೆಯಲ್ಲಿ ಯಾರು ಬಲಿಪಶು ಆಗಿದ್ದಾರೆ ಅನ್ನೋದು ಗೊತ್ತಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಪತ್ನಿ ಕೋಪಿಸಿಕೊಂಡಿದ್ದಾಳೆ, ಸಮಾಧಾನ ಮಾಡ್ಬೇಕು ರಜೆ ಕೊಡಿ- ಅರ್ಜಿ ಬರೆದ ಕಾನ್ಸ್‌ಟೇಬಲ್

    `ಸಿದ್ದು ನಿಜಕನಸುಗಳು’  (Siddu NijaKanasugalu) ಕೃತಿಗೆ ತಡೆಯಾಜ್ಞೆ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯ ಪ್ರಜಾಪ್ರಭುತ್ವವಾದಿ ನಾಯಕ. ಅವರ ಕಡೆಯವರು ಪುಸ್ತಕದಲ್ಲಿ ಏನಿದೆ ಅಂತಾ ನೋಡದೆ ತಡೆಯಾಜ್ಞೆ ತರ್ತಾರೆ ಅಂದ್ರೆ ನಮಗೇನು ಅರ್ಥ ಆಗ್ತಿಲ್ಲ. ನಮ್ಮ ಸರಸ್ವತಿ ಬಗ್ಗೆ ಕೆಟ್ಟದಾಗಿ ಬರೆದಾಗ, ಗಣೇಶ ಮೂರ್ತಿ ಬಗ್ಗೆ ಕೆಟ್ಟದಾಗಿ ಬರೆದಾಗ ಅವರಿಗೆ ಸ್ವಾತಂತ್ರ್ಯವಿದೆ. ಹೇಗೆ ಬೇಕಾದ್ರೂ ಬರೆದುಕೊಳ್ಳಬಹುದು ಎಂದು ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಈಗ ಪುಸ್ತಕ ಬಿಡುಗಡೆ ಆಗೋದಕ್ಕೂ ಮುನ್ನವೇ ತಡೆಯಾಜ್ಞೆ ತಂದಿರೋದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮುಂದಿನ ವರ್ಷದಿಂದ ಶಾಲೆಗಳಲ್ಲಿ ನೈತಿಕ ಶಿಕ್ಷಣ ಜಾರಿ: ಬಿಸಿ ನಾಗೇಶ್

    ಮುಂದಿನ ವರ್ಷದಿಂದ ಶಾಲೆಗಳಲ್ಲಿ ನೈತಿಕ ಶಿಕ್ಷಣ ಜಾರಿ: ಬಿಸಿ ನಾಗೇಶ್

    ಬೆಂಗಳೂರು: ಶಾಲಾ ಪಠ್ಯದಲ್ಲಿ (Textbook) ನೈತಿಕ ಶಿಕ್ಷಣ (Moral Education) ಜಾರಿಗೆ ಸರ್ಕಾರ ಮೊದಲ ಹೆಜ್ಜೆ ಇಟ್ಟಿದೆ. ಧರ್ಮಗುರುಗಳ ನೇತೃತ್ವದಲ್ಲಿ ಸೋಮವಾರ ಮಹತ್ವದ ಸಭೆ ನಡೆದಿದ್ದು, ಧರ್ಮಾತೀತವಾಗಿ ಎಲ್ಲಾ ಗುರುಗಳು ಶಾಲಾ ಪಠ್ಯದಲ್ಲಿ ನೈತಿಕ ಶಿಕ್ಷಣ ಜಾರಿಯಾಗಬೇಕು ಎಂದು ಸಲಹೆ ನೀಡಿದ್ದಾರೆ.

    ಶಾಲಾ ಪಠ್ಯದಲ್ಲಿ ನೈತಿಕ ಶಿಕ್ಷಣ ಅಳವಡಿಸುವ ಸರ್ಕಾರದ ನಿರ್ಧಾರಕ್ಕೆ ಧರ್ಮಾತೀತವಾಗಿ ಧರ್ಮಗುರುಗಳು ಸಹಮತ ವ್ಯಕ್ತಪಡಿಸಿದರು. ಶಿಕ್ಷಣ ಸಚಿವ ಬಿಸಿ ನಾಗೇಶ್ (BC Nagesh) ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಮಠಾಧೀಶರು, ಧರ್ಮಗುರುಗಳು, ಶಿಕ್ಷಣ ತಜ್ಞರ ದುಂಡು ಮೇಜಿನ ಸಭೆಯಲ್ಲಿ ಶಾಲಾ ಹಂತದಲ್ಲಿ ಕಡ್ಡಾಯವಾಗಿ ನೈತಿಕ ಶಿಕ್ಷಣ ಅವಶ್ಯಕತೆ ಇದೆ ಎಂದು ಧರ್ಮ ಗುರುಗಳು ಸಲಹೆ ನೀಡಿದ್ದಾರೆ. ಅಲ್ಲದೆ ನೈತಿಕ ಶಿಕ್ಷಣದಲ್ಲಿ ಯಾವ ಯಾವ ಮೌಲ್ಯಯುತ ಅಂಶಗಳು ಸೇರಿಸಬೇಕು ಎಂದು ಹೇಳಿದ್ದಾರೆ.

    ಸಭೆಯಲ್ಲಿ ಸುತ್ತೂರು ಶ್ರೀಗಳು, ಆದಿಚುಂಚನಗಿರಿ ಶ್ರೀಗಳು, ಸಿರಿಗೆರೆ ಶ್ರೀಗಳು, ರವಿಶಂಕರ್ ಗುರೂಜಿ, ಪೇಜಾವರ ಶ್ರೀಗಳು, ಮಾದಾರ ಚೆನ್ನಯ್ಯ ಶ್ರೀಗಳು, ರಾಘವೇಶ್ವರ ಶ್ರೀಗಳು, ಪೀಟರ್ ಮ್ಯಾಚಾರೋ, ಡಾ. ಕಸ್ತೂರಿ ರಂಗನ್, ಅಬ್ದುಲ್ ರಹೀಂ ಸೇರಿ ಹಲವು ಧರ್ಮಗಳ ಧರ್ಮಗುರುಗಳು ಭಾಗವಹಿಸಿ ಅಭಿಪ್ರಾಯ ತಿಳಿಸಿದರು. ಸುತ್ತೂರು ಶ್ರೀಗಳು ರಾಮಾಯಣ, ಮಹಾಭಾರತ ನೀತಿ ಪಾಠದ ಜೊತೆ ಮಕ್ಕಳ ಮೊಬೈಲ್ ಗೀಳಿನ ಬಗ್ಗೆ ಪ್ರಸ್ತಾಪ ಮಾಡಿದರು. ಸಿರಿಗೆರೆ ಶ್ರೀಗಳು ಸಭೆಯಲ್ಲಿ ರಾಜಕಾರಣಿಗಳನ್ನು ತರಾಟೆಗೆ ತೆಗೆದುಕೊಂಡರು. ಆದಿಚುಂಚನಗಿರಿ ಬಾಲ್ಯದಿಂದ ಮೌಲ್ಯ ಶಿಕ್ಷಣ ಸಿಗಬೇಕು ಎಂದು ತಿಳಿಸಿದರು. ಮುಸ್ಲಿಂ ಧರ್ಮಗುರುಗಳು ಹಾಗೂ ಕ್ರೈಸ್ತ ಧರ್ಮಗುರುಗಳು ನೈತಿಕ ಶಿಕ್ಷಣದ ಅವಶ್ಯಕತೆ ತಿಳಿಸಿದರು. ಇದನ್ನೂ ಓದಿ: ಪುರಭವನದಲ್ಲಿ ಭಾರೀ ಹೈಡ್ರಾಮಾ – ಸಿದ್ದು ನಿಜಕನಸುಗಳು ಪುಸ್ತಕ ಬಿಡುಗಡೆ ಕಾರ್ಯಕ್ರಮ ರದ್ದು

    bc nagesh

    ಸುಮಾರು 4 ಗಂಟೆಗಳ ಕಾಲ ಸಭೆ ನಡೆದಿದ್ದು, ಎಲ್ಲಾ ಧರ್ಮಗುರುಗಳ ಅಭಿಪ್ರಾಯಗಳನ್ನು ಶಿಕ್ಷಣ ಸಚಿವರು ಪಡೆದರು. ಸಭೆ ಬಳಿಕ ಮಾತನಾಡಿದ ಸಚಿವ ಬಿಸಿ ನಾಗೇಶ್, ಶ್ರೀಗಳು, ಧರ್ಮಗುರುಗಳ ಅಭಿಪ್ರಾಯ ಪಡೆಯಲಾಗಿದೆ. ನೈತಿಕ ಶಿಕ್ಷಣ ಜಾರಿ ಪ್ರಕ್ರಿಯೆಗೆ ಸಮಿತಿ ಮಾಡಲಾಗುತ್ತದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ ಹಂತದಲ್ಲಿ ನೈತಿಕ ಶಿಕ್ಷಣ ಜಾರಿ ಮಾಡೋದಾಗಿ ತಿಳಿಸಿದರು. ಇದನ್ನೂ ಓದಿ: ಸಚಿವ ಸುನಿಲ್ ಕುಮಾರ್ ವಿರುದ್ಧ ಅವಹೇಳನಕಾರಿ ಬರಹ – ಇಬ್ಬರಿಗೆ 25 ಸಾವಿರ ದಂಡ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 5 ಮತ್ತು 8ನೇ ತರಗತಿಗಳಿಗೂ ವಿಶೇಷ ವಾರ್ಷಿಕ ಪರೀಕ್ಷೆ – ಶಿಕ್ಷಣ ಇಲಾಖೆ ಆದೇಶ

    5 ಮತ್ತು 8ನೇ ತರಗತಿಗಳಿಗೂ ವಿಶೇಷ ವಾರ್ಷಿಕ ಪರೀಕ್ಷೆ – ಶಿಕ್ಷಣ ಇಲಾಖೆ ಆದೇಶ

    ಬೆಂಗಳೂರು: ಮಕ್ಕಳ ಶೈಕ್ಷಣಿಕ ಗುಣಮಟ್ಟ ಅಳೆಯಲು ಇನ್ಮುಂದೆ 5 ಮತ್ತು 8ನೇ ತರಗತಿಗಳಿಗೂ ವಿಶೇಷ ವಾರ್ಷಿಕ ಪರೀಕ್ಷೆ (Annual Examination) ನಡೆಸಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ (Education Department) ಅಧಿಕೃತ ಆದೇಶ ಹೊರಡಿಸಿದೆ.

    ಮೌಲ್ಯಾಂಕನ ಪರೀಕ್ಷೆ ಹೆಸರಿನಲ್ಲಿ ಈ ಪರೀಕ್ಷೆ ನಡೆಯಲಿದೆ. ಮಕ್ಕಳ ಕಲಿಕಾ ಕೊರತೆ ನೀಗಿಸಲು ಕಲಿಕೆಯಲ್ಲಿ ಚೇತರಿಕೆ ಮೂಡಿಸಲು ಇಲಾಖೆ ಈ ನಿರ್ಧಾರ ಮಾಡಿದೆ. ಕ್ಲಸ್ಟರ್ ಹಂತದಲ್ಲಿ ಪರೀಕ್ಷಾ ವ್ಯವಸ್ಥೆಗಳು ನಡೆಯಲಿದೆ.

    ಕರ್ನಾಟಕ ಶಾಲಾ ಪರೀಕ್ಷಾ (School Exams) ಮತ್ತು ಮೌಲ್ಯ ನಿರ್ಣಯ ಮಂಡಳಿ ಪರೀಕ್ಷೆಯ ಸಂಪೂರ್ಣ ಜವಾಬ್ದಾರಿ ವಹಿಸಲಿದೆ. ರಾಜ್ಯ ಪಠ್ಯ ಕ್ರಮದ ವಿದ್ಯಾರ್ಥಿಗಳ ಕಲಿಕಾ ಸಾಧನೆ ಯಾವ ರೀತಿ ಇದೆ ಎಂಬುದನ್ನು ಅಳೆಯಲು ಈ ವಾರ್ಷಿಕ ಪರೀಕ್ಷೆ ಮಾಡಲಾಗ್ತಿದೆ. ಇದನ್ನೂ ಓದಿ: ಅಕ್ರಮವಾಗಿ ಕಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿ ಹರಿದು ವಿದ್ಯಾರ್ಥಿ ಸ್ಥಳದಲ್ಲೇ ಸಾವು

    ಯಾವುದೇ ವಿದ್ಯಾರ್ಥಿಗಳನ್ನ ಈ ಪರೀಕ್ಷೆಯಲ್ಲಿ ಫೇಲ್ ಮಾಡೋದಿಲ್ಲ. ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆಯೋ ವಿದ್ಯಾರ್ಥಿಗಳಿಗೆ (Students) ವಿಶೇಷ ತರಬೇತಿ ನೀಡುವ ವ್ಯವಸ್ಥೆ ಇಲಾಖೆ ಮಾಡಿಕೊಳ್ಳಲಿದೆ. ಮಕ್ಕಳ ಕಲಿಕೆ ಗುಣಮಟ್ಟ ಏನು? ಕೊರತೆಗಳೇನು? ಯಾವ ವಿಷಯಗಳಲ್ಲಿ ಹಿನ್ನಡೆಯಾಗಿದೆ ಎಂಬುದನ್ನು ತಿಳಿಯಲು ಈ ಪರೀಕ್ಷೆಯಿಂದ ಸಹಕಾರಿಯಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

    ಪರೀಕ್ಷಾ ವ್ಯವಸ್ಥೆ ಹೇಗೆ?
    ರೂಪಣಾತ್ಮಕ ಪರೀಕ್ಷೆ ಮತ್ತು ಸಂಕಲನಾತ್ಮಕ ಪರೀಕ್ಷೆ ವಿಧಾನದಲ್ಲಿ ಪರೀಕ್ಷೆ ನಡೆಯಲಿದೆ. ಕ್ಲಸ್ಟರ್ ಹಂತದಲ್ಲಿ ಈ ಪರೀಕ್ಷೆಗಳನ್ನ ನಡೆಸಲಾಗುತ್ತದೆ. ಪರೀಕ್ಷಾ ಪ್ರಕ್ರಿಯೆಗೆ ವಿದ್ಯಾರ್ಥಿಗಳಿಂದ ಯಾವುದೇ ಶುಲ್ಕ ಪಡೆಯುವಂತಿಲ್ಲ. ಇದನ್ನೂ ಓದಿ: ತಂದೆಯನ್ನ ಕೊಂದು 20 ತುಂಡು ಮಾಡಿ ಕೊಳವೆ ಬಾವಿಗೆ ಬಿಸಾಡಿದ ಪಾಪಿ ಮಗ

    8ನೇ ತರಗತಿಗೆ ಒಂದು ಪರೀಕ್ಷಾ ಕೇಂದ್ರಕ್ಕೆ 50 ಮಕ್ಕಳು ಇರುವಂತೆ, 5ನೇ ತರಗತಿಗೆ 25 ಮಕ್ಕಳು ಒಂದು ಕೇಂದ್ರಕ್ಕೆ ಇರುವಂತೆ ಪರೀಕ್ಷಾ ಕೇಂದ್ರ ಸ್ಥಾಪನೆ ಮಾಡಬೇಕು. ಮಕ್ಕಳ ಸಂಖ್ಯೆ ಕಡಿಮೆಯಿದ್ದರೆ 2 ಕಿಮೀ ವ್ಯಾಪ್ತಿಯ ಶಾಲೆಗಳನ್ನ ಒಳಪಡಿಸಿಕೊಳ್ಳುವುದು. ಪರೀಕ್ಷಾ ಕೇಂದ್ರ ಸ್ಥಾಪನೆಗೆ ಡಯಟ್ ಪ್ರಾಂಶುಪಾಲರು, ಬಿಇಓಗಳು ಚರ್ಚಿಸಿ ನಿರ್ಧಾರ ಮಾಡಬೇಕು. ಕ್ಲಸ್ಟರ್ ವ್ಯಾಪ್ತಿಯಲ್ಲಿ ಶಿಕ್ಷಕರನ್ನ ಅದಲು ಬದಲು ಮಾಡಬೇಕು. ಶಾಲಾ ಹಂತದಲ್ಲಿ ಪರೀಕ್ಷೆ ಪ್ರವೇಶ ಪತ್ರಗಳನ್ನ ಮುಖ್ಯಶಿಕ್ಷಕರು ವಿತರಿಸಬೇಕು.

    50 ಅಂಕಗಳ ಪರೀಕ್ಷೆ. 2 ಗಂಟೆ ಪರೀಕ್ಷೆ ಬರೆಯಲು ಅವಕಾಶ ಕೊಡಬೇಕು. 50 ಅಂಕದಲ್ಲಿ 40 ಅಂಕ ಲಿಖಿತ ಪರೀಕ್ಷೆ, 10 ಅಂಕ ಮೌಖಿಕ ಪರೀಕ್ಷೆ ನಡೆಸುವುದು. ಪ್ರಶ್ನೆ ಪತ್ರಿಕೆ ಮುದ್ರಣವನ್ನ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುದ್ರಿಸುತ್ತದೆ. ಜಿಲ್ಲಾ ಡಯಟ್ ಗಳಿಗೆ ಇದು ಹಂಚಿಕೆಯಾಗಲಿದೆ. ಇದರ ಉಸ್ತುವಾರಿ ಬಿಇಓ ಆಗಿರುತ್ತಾರೆ. ಸಂಕಲನಾತ್ಮಕ ಮತ್ತು ರೂಪಣಾತ್ಮಕ ಸೇರಿ 100 ಅಂಕಗಳಿಗೆ ಪರೀಕ್ಷೆ ಇರಲಿದೆ. 35 ಅಂಕ ಪಡೆದ ವಿದ್ಯಾರ್ಥಿ ಪ್ರಗತಿ ಸಾಧಿಸಿರುವ ವಿದ್ಯಾರ್ಥಿ ಅಂತ ಘೋಷಣೆ ಮಾಡಲಾಗುತ್ತದೆ. ಕಡಿಮೆ ಅಂಕ ಪಡೆದ ವಿದ್ಯಾರ್ಥಿ ಫೇಲ್ ಮಾಡದೇ ಪ್ರಗತಿ ಸಾಧಿಸಬೇಕಾದ ವಿದ್ಯಾರ್ಥಿ ಅಂತ ಪರಿಗಣಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪಿಸುವ ಉದ್ದೇಶ ಸರ್ಕಾರಕ್ಕಿಲ್ಲ – ಬಿ.ಸಿ ನಾಗೇಶ್

    ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪಿಸುವ ಉದ್ದೇಶ ಸರ್ಕಾರಕ್ಕಿಲ್ಲ – ಬಿ.ಸಿ ನಾಗೇಶ್

    ಬೆಂಗಳೂರು: ಪ್ರತ್ಯೇಕವಾಗಿ ಮುಸ್ಲಿಂ ಕಾಲೇಜುಗಳನ್ನು (Muslims College) ಸ್ಥಾಪಿಸುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸಚಿವ ಬಿ.ಸಿ ನಾಗೇಶ್ (BC Nagesh) ಸ್ಪಷ್ಟಪಡಿಸಿದ್ದಾರೆ.

    ಪಬ್ಲಿಕ್ ಟಿವಿಯೊಂದಿಗೆ (Public TV) ಮಾತನಾಡಿರುವ ಅವರು, ಸರ್ಕಾರದಿಂದಲೇ ಮುಸ್ಲಿಂ ಕಾಲೇಜು ಸ್ಥಾಪನೆ ಮಾಡಲಾಗುತ್ತಿದೆ ಅನ್ನೋ ವಿಚಾರ ಕೇಳಿಬರುತ್ತಿದೆ. ಇಂತಹ ಯಾವುದೇ ಪ್ರಸ್ತಾವನೆಯನ್ನು ಶಿಕ್ಷಣ ಇಲಾಖೆ (Education Department) ಸಲ್ಲಿಸಿಲ್ಲ. ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪನೆ ಮಾಡುವ ಉದ್ದೇಶ ಸರ್ಕಾರಕ್ಕೂ ಇಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ಬಲಿದಾನವಾದ್ರೂ ಸರಿ ಮುಸ್ಲಿಂ ಕಾಲೇಜು ಸ್ಥಾಪನೆಗೆ ನಾನು ಬಿಡೋದಿಲ್ಲ: ಮುತಾಲಿಕ್

    ಏನಿದು ಪ್ರತ್ಯೇಕ ಮುಸ್ಲಿಂ ಕಾಲೇಜು ವಿವಾದ?
    ಉಡುಪಿಯಲ್ಲಿ ಹಿಜಬ್ (Hijab) ವಿವಾದ ಉದ್ಭವಿಸಿದ ನಂತರ ತರಗತಿಗಳಲ್ಲಿ ಹಿಜಬ್ ಧರಿಸದಂತೆ ಸರ್ಕಾರ ಆದೇಶ ಹೊರಡಿಸಿತ್ತು. ಈ ವಿಚಾರ ನ್ಯಾಯಾಲಯದ ಮೆಟ್ಟಿಲೇರಿತ್ತು. ಇದರಿಂದಾಗಿ ಬಹುತೇಕ ಮುಸ್ಲಿಂ ಸಂಘ ಸಂಸ್ಥೆಗಳು, ಸರ್ಕಾರದ ವಿರುದ್ಧ ತಿರುಗಿಬಿದ್ದು ಹೆಣ್ಣುಮಕ್ಕಳಿಗೆ ತೊಂದರೆಯಾಗುತ್ತಿದೆ ಎಂದು ಹೇಳಿದ್ದರು. ಹೀಗಾಗಿ ಮುಸ್ಲಿಂ ಹೆಣ್ಣುಮಕ್ಕಳಿಗಾಗಿ (Muslim Students) ಸರ್ಕಾರವೇ ಪ್ರತ್ಯೇಕ ಕಾಲೇಜು ಸ್ಥಾಪನೆ ಮಾಡಲು ಮುಂದಾಗಿದೆ ಮೂಲಗಳು ತಿಳಿಸಿದ್ದವು. ಇದನ್ನೂ ಓದಿ: ಕಾಂಗ್ರೆಸ್ ನಾಯಕನನ್ನು ಸೋಲಿಸಲು ಹರಕೆ- ಮೊಣಕಾಲಿನಲ್ಲೇ ತಿರುಪತಿ ಬೆಟ್ಟ ಹತ್ತಿದ BJP ಮುಖಂಡ

    ರಾಜ್ಯದಲ್ಲಿ ಮುಸ್ಲಿಂ ಹೆಣ್ಣುಮಕ್ಕಳಿಗಾಗಿಯೇ ಸರ್ಕಾರ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸಲು ಮುಂದಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಮುಂದಿನ ತಿಂಗಳು ಯೋಜನೆಗೆ ಶಂಕು ಸ್ಥಾಪನೆ ನೆರವೇರಿಸುವ ನಿರೀಕ್ಷೆಯಿದೆ. 3 ತಿಂಗಳ ಹಿಂದೆಯೇ ವಕ್ಫ್ ಬೋರ್ಡ್‌ನಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು. ಒಂದೂವರೆ ತಿಂಗಳ ಹಿಂದೆಯೇ ಅನುಮೋದನೆ ದೊರೆತು ಪ್ರತಿ ಕಾಲೇಜಿಗೆ 2.50 ಕೋಟಿ ರೂ. ಅನುದಾನವನ್ನೂ ಮೀಸಲಿಟ್ಟಿದೆ. ರಾಜ್ಯ ಸರ್ಕಾರ ವಕ್ಫ್ ಬೋರ್ಡ್‌ಗೆ ನೀಡುವ ಅನುದಾನದಲ್ಲೇ ಈ ವೆಚ್ಚವನ್ನು ಭರಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿದ್ದವು. ಇದಕ್ಕೆ ಹಿಂದೂ ಸಂಘಟನೆಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಶಾಲಾ ಪಠ್ಯದಲ್ಲಿ ಭಗವದ್ಗೀತೆ, ರಾಮಾಯಣ ಸೇರ್ಪಡೆ – ಸ್ವಾಮೀಜಿಗಳಿಗೆ ಜವಾಬ್ದಾರಿ ನೀಡಲು ಸರ್ಕಾರ ಚಿಂತನೆ

    ಶಾಲಾ ಪಠ್ಯದಲ್ಲಿ ಭಗವದ್ಗೀತೆ, ರಾಮಾಯಣ ಸೇರ್ಪಡೆ – ಸ್ವಾಮೀಜಿಗಳಿಗೆ ಜವಾಬ್ದಾರಿ ನೀಡಲು ಸರ್ಕಾರ ಚಿಂತನೆ

    ಬೆಂಗಳೂರು: ಶಾಲಾ (School) ಪಠ್ಯದಲ್ಲಿ ಭಗವದ್ಗೀತೆ, ರಾಮಾಯಣ ಸೇರ್ಪಡೆಗೆ ಸಿದ್ಧತೆ ಪ್ರಾರಂಭವಾಗಿದ್ದು, ಅದಕ್ಕಾಗಿ ನೈತಿಕ ಶಿಕ್ಷಣ ಪಠ್ಯ ಸಮಿತಿ ರಚನೆಗೆ ಸರ್ಕಾರ (Government Of Karnataka) ಮುಂದಾಗಿದೆ. ನಾಡಿನ ಪ್ರಮುಖ ಸ್ವಾಮೀಜಿಗಳ ನೇತೃತ್ವದಲ್ಲಿ ಸಮಿತಿ ರಚನೆಯಾಗಲಿದೆ. ನೈತಿಕ ಶಿಕ್ಷಣದ ಪಠ್ಯ ಹೇಗೆ ಇರಬೇಕು? ಅಂತ ಶ್ರೀಗಳು ಪಠ್ಯ ಸಿದ್ಧ ಮಾಡಲಿದ್ದಾರೆ.

    ನೈತಿಕ ಶಿಕ್ಷಣದ ಪಠ್ಯ ಸಿದ್ಧತೆಗೆ ನಾಡಿನ ಶ್ರೇಷ್ಠ ಸ್ವಾಮೀಜಿಗಳಿಗೆ ಜವಾಬ್ದಾರಿ ನೀಡಲು ಸರ್ಕಾರದ ಚಿಂತನೆ ನಡೆಸಿದೆ. ಸುತ್ತೂರು (Shivaratri Deshikendra Swamiji), ಆದಿಚುಂಚನಗಿರಿ, ಸಿದ್ದಗಂಗಾ ಶ್ರೀಗಳು ಸಮಿತಿಯಲ್ಲಿ ಇರಲಿದ್ದಾರೆ. ಸಮಿತಿ ರಚನೆ ಬಗ್ಗೆ ಶಿಕ್ಷಣ ಇಲಾಖೆ ಧರ್ಮಗುರುಗಳು, ಶ್ರೀಗಳೊಂದಿಗೆ ಪ್ರಾಥಮಿಕ ಹಂತದ ಚರ್ಚೆ ನಡೆಸುತ್ತಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಶೀಘ್ರವೇ ಶ್ರೀಗಳ ನೇತೃತ್ವದಲ್ಲಿ ನೈತಿಕ ಶಿಕ್ಷಣ ಪಠ್ಯ ಸಮಿತಿ ರಚನೆ ಆಗಲಿದೆ. ಇದನ್ನೂ ಓದಿ: ಕಾಂಗ್ರೆಸ್ ವಿಸರ್ಜಿಸುವ ಬಾಪು ಕನಸು ನನಸಾಗುವ ಸಮಯ ಬಂದಿದೆ: ಯೋಗಿ ಆದಿತ್ಯನಾಥ್

    ನೈತಿಕ ಶಿಕ್ಷಣ ಪಠ್ಯದ ಸಮಿತಿಯ ಕೆಲಸ ಏನು?
    ಈ ಸಮಿತಿ ನೈತಿಕ ಶಿಕ್ಷಣ ಪಠ್ಯ ಹೇಗಿರಬೇಕು ಅಂತಾ ನಿರ್ಧಾರ ಮಾಡಲಿದೆ. ಯಾವ ಪಠ್ಯ ಸೇರ್ಪಡೆ ಮಾಡಬೇಕು? ಯಾರ ಪಠ್ಯ ಸೇರ್ಪಡೆ ಮಾಡಬೇಕು? ಎಂಬುದನ್ನ ನಿರ್ಧರಿಸಲಿದೆ. ರಾಮಾಯಣ, ಮಹಾಭಾರತ, ಭಗವದ್ಗೀತೆ ಸೇರಿದಂತೆ ಯಾವ-ಯಾವ ಮಹಾ ದಾರ್ಶನಿಕ ಗ್ರಂಥಗಳು ಪಠ್ಯದಲ್ಲಿ ಸೇರ್ಪಡೆ ಮಾಡಬೇಕು ಅಂತಾ ಸಮಿತಿ ನಿರ್ಧಾರ ಮಾಡಲಿದೆ. ಪಂಚತಂತ್ರ ಕಥೆಗಳು, ದಾರ್ಶನಿಕರ ಜೀವನ ಚರಿತ್ರೆ, ಅವರು ಆಚರಿಸಿಕೊಂಡು ಬಂದ ನೈತಿಕ ಮೌಲ್ಯಗಳ ಕುರಿತು ಪಠ್ಯ ರಚನೆಯಾಗಲಿದೆ. ಇದನ್ನೂ ಓದಿ: ಪ್ರಧಾನಿ ಪಕ್ಕ ಕುಳಿತು ಬಿಜೆಪಿಯನ್ನು ಹಾಡಿ ಹೊಗಳಿದ ಬಾಲಕಿ – ಶಭಾಶ್ ಅಂದ ಮೋದಿ

    ವಿದ್ಯಾರ್ಥಿಗಳು ಉತ್ತಮ ಜೀವನ ರೂಪಿಸಿಕೊಳ್ಳಲು ಅಗತ್ಯವಾದ ಮೌಲ್ಯಾಧಾರಿತ ನೀತಿಕಥೆಗಳನ್ನ ಪಠ್ಯದಲ್ಲಿ ಸೇರ್ಪಡೆ ಮಾಡುವುದು. ಗುರು-ಹಿರಿಯ ಭಕ್ತಿ, ಸಂಸ್ಕಾರ, ಆಚಾರ-ವಿಚಾರಗಳು, ಸತ್ಯ, ಶಾಂತಿ, ಪ್ರೀತಿ ವಿಶ್ವಾಸಗಳ ಬಗ್ಗೆ ಮಕ್ಕಳಿಗೆ ಪಾಠ ಹೇಳುವ ಕಥೆಗಳು, ವ್ಯಕ್ತಿಗಳ ಜೀವನಾಧಾರಿತ ಪಠ್ಯಗಳ ಸೇರ್ಪಡೆಗೆ ಸಮಿತಿ ಅಗತ್ಯವಾದ ಕ್ರಮ ಕೈಗೊಳ್ಳಲಿದೆ.

    Live Tv
    [brid partner=56869869 player=32851 video=960834 autoplay=true]

  • 7,600 ಶಾಲಾ ಕೊಠಡಿಗಳ ಮುಂದೆ ವಿವೇಕಾನಂದ ಭಾವಚಿತ್ರ ಮುದ್ರಿಸಲು ಸರ್ಕಾರ ಪ್ಲ್ಯಾನ್‌

    7,600 ಶಾಲಾ ಕೊಠಡಿಗಳ ಮುಂದೆ ವಿವೇಕಾನಂದ ಭಾವಚಿತ್ರ ಮುದ್ರಿಸಲು ಸರ್ಕಾರ ಪ್ಲ್ಯಾನ್‌

    ಬೆಂಗಳೂರು: ಶಾಲಾ ಕೊಠಡಿಗಳಿಗೆ ಕೇಸರಿ (Saffron) ಬಣ್ಣ ಹೊಡೆಯುವ ವಿವಾದ ಬೆನ್ನಲ್ಲೇ ರಾಜ್ಯ ಸರ್ಕಾರ (Government Of Karnataka) ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

    ಸೋಮವಾರ ವಿವೇಕ ಯೋಜನೆ ಅಡಿ ಶಂಕು ಸ್ಥಾಪನೆ ಮಾಡಿರುವ 7,600 ಶಾಲಾ ಕೊಠಡಿಗಳ ಮುಂದೆ ವಿವೇಕಾನಂದರ (Swamy Vivekananda) ಫೋಟೋ ಮುದ್ರಣ ಮಾಡಲು ಶಿಕ್ಷಣ ಇಲಾಖೆ (Education Department) ತೀರ್ಮಾನ ಮಾಡಿದೆ. ಇದನ್ನೂ ಓದಿ: ಮುಸ್ಲಿಮರ ವೋಟು ಪಡೆಯೋಕೆ ಕಾಂಗ್ರೆಸ್‌ ಕೇಸರಿ ವಿರೋಧ ಮಾಡ್ತಿದೆ – ಬಿ.ಸಿ.ನಾಗೇಶ್‌ ಕಿಡಿ

    ಈ ಕುರಿತು `ಪಬ್ಲಿಕ್ ಟಿವಿ’ (Public TV) ಜೊತೆ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ (BC Nagesh), ವಿವೇಕಾನಂದರು ಜ್ಞಾನದ ಸಂಕೇತ. ಅವರ ಹೆಸರಿನಲ್ಲಿ ನಾವು ವಿವೇಕ ಯೋಜನೆ ಪ್ರಾರಂಭ ಮಾಡಿದ್ದೇವೆ. ಅವರ ಚಿಂತನೆಗಳು ಮಕ್ಕಳಲ್ಲಿ ಬರಬೇಕು. ಅದಕ್ಕಾಗಿ ನೂತನವಾಗಿ ನಿರ್ಮಾಣ ಆಗುತ್ತಿರುವ ಕೊಠಡಿಗಳ ಮುಂದೆ ವಿವೇಕಾನಂದರ ಭಾವಚಿತ್ರ ಮುದ್ರಣ ಮಾಡುವ ಚಿಂತನೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜಾಮಿಯ ವಿವಾದ- ನಾಳೆ ಹೈಕೋರ್ಟ್‍ನಲ್ಲಿ PIL ಸಲ್ಲಿಕೆ

    ಸಾಂದರ್ಭಿಕ ಚಿತ್ರ

    ವಿವೇಕಾನಂದರ ಫೋಟೋ ಮುದ್ರಿಸುವ ಬಗ್ಗೆ ಚರ್ಚೆಯಾಗಿದೆ. ಮಕ್ಕಳಿಗೆ ವಿವೇಕಾನಂದ ಅದರ್ಶಗಳು ತಿಳಿಯುವುದು ಮುಖ್ಯ. ಮಕ್ಕಳಿಗೆ ನೀವು ಏನು ಆಗಬೇಕು ಎಂದರೆ ವಿವೇಕಾನಂದ ಆಗಬೇಕು ಎನ್ನಬೇಕು. ಹೀಗಾಗಿ ಶಾಲಾ ಕೊಠಡಿಗಳ ಮುಂದೆ ವಿವೇಕಾನಂದರ ಚಿತ್ರ ಮುದ್ರಣ ಮಾಡ್ತೀವಿ ಅಂತ ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ಮೆಕಾಲೆ ಶಿಕ್ಷಣ ಪದ್ಧತಿ ಗುಲಾಮಗಿರಿಗೆ ದೂಡಿತ್ತು: ಬಿ.ಸಿ ನಾಗೇಶ್

    ಮೆಕಾಲೆ ಶಿಕ್ಷಣ ಪದ್ಧತಿ ಗುಲಾಮಗಿರಿಗೆ ದೂಡಿತ್ತು: ಬಿ.ಸಿ ನಾಗೇಶ್

    ಗದಗ: ಮೆಕಾಲೆ ಶಿಕ್ಷಣ ಪದ್ಧತಿಯು (Macaulay’s Education System) ನಮ್ಮನ್ನು ಗುಲಾಮಗಿರಿಗೆ ದೂಡಿತ್ತು. ಅದರಿಂದ ಹೊರಬರಲು ರಾಷ್ಟ್ರೀಯ ಶಿಕ್ಷಣ ನೀತಿ(NEP) ಜಾರಿಯೊಂದೇ ಮಾರ್ಗ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ (BC Nagesh) ಹೇಳಿದ್ದಾರೆ.

    ನಗರದ ವಿದ್ಯಾದಾನ ಸಮಿತಿ ಶಾಲಾ ಶತಮಾನೋತ್ಸವ ಸಮಾರಂಭದ ಕಾರ್ಯಕ್ರಮದ ಭಾಷಣದಲ್ಲಿ ಮಾತನಾಡಿದ ಅವರು, ಗುಲಾಮಗಿರಿ ಶಿಕ್ಷಣ ಪದ್ಧತಿಯಿಂದ ಹೊರ ಬರಲು ಎನ್‌ಇಪಿ ಅಗತ್ಯವಿದೆ. ಮೆಕಾಲೆ ಶಿಕ್ಷಣ ಪದ್ಧತಿ ಗುಲಾಮಗಿರಿಗೆ ದೂಡಿತ್ತು ಎಂದರು.

    ವಿದ್ಯಾರ್ಥಿ ತಾನು ಬಯಸಿದ್ದನ್ನು ಕಲಿಯುವ ಪದ್ಧತಿಯೇ ಎನ್‌ಇಪಿ ಪದ್ಧತಿ. ಮೆಕಾಲೆ ಶಿಕ್ಷಣದಿಂದ ಎಲ್ಲರನ್ನು ಒಂದು ಮಾಡುತ್ತೇವೆ ಎಂದು ಹೊರಟ ಬ್ರಿಟಿಷರು ಮೆಕಾಲೆ ಶಿಕ್ಷಣ ಪದ್ಧತಿಯಿಂದ ಗುಲಾಮಗಿರಿಗೆ ದೂಡಿದರು. ಆದರೆ ವ್ಯಕ್ತಿಯನ್ನು ಗುಲಾಮಗಿರಿಯಿಂದ ಹೊರತರಲು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಶ್ರಮಿಸಿದೆ. ಪ್ರತಿ ವ್ಯಕ್ತಿಯಲ್ಲಿ ವ್ಯಕ್ತಿತ್ವ ರೂಪುಗೊಳ್ಳಲು ಎನ್‌ಇಪಿ ಬೇಕು. ಅದಕ್ಕಾಗಿ ಪ್ರಧಾನಿ ಮೋದಿ ಅವರ ಆಶಯದಂತೆ ಈ ವರ್ಷ ಎನ್‌ಇಪಿ ಜಾರಿ ಬಂದಿದೆ ಎಂದು ತಿಳಿಸಿದರು. ಇದನ್ನೂ ಓದಿ: ಪಬ್ಲಿಕ್‌ ಟಿವಿ ವಿದ್ಯಾಮಂದಿರಕ್ಕೆ ಅದ್ಧೂರಿ ತೆರೆ

    1,900ರ ನಂತರ ಮೆಕಾಲೆ ಶಿಕ್ಷಣ ಪದ್ಧತಿ ಭಾರತವನ್ನು ಆಕ್ರಮಿಸಿ ನಮ್ಮತನದ ಶಿಕ್ಷಣ ಪದ್ಧತಿ ದೂರ ಮಾಡಿತು. ಮೆಕಾಲೆ ಶಿಕ್ಷಣ ಪದ್ಧತಿ ಸೂಕ್ತವಲ್ಲ. ಈಗ ನ್ಯಾಷನಲ್ ಎಜುಕೇಶನ್ ಪಾಲಿಸಿ ಜಾರಿಗೆ ಬರುತ್ತಿದೆ ಎಂದರು. ಇದನ್ನೂ ಓದಿ: 2019 ಏಕದಿನ ವಿಶ್ವಕಪ್ ನೆನೆಪಿಸಿದ ಬೆನ್‍ಸ್ಟೋಕ್ಸ್ – ನಿಜವಾದ ಮ್ಯಾಚ್ ವಿನ್ನರ್ ಎಂದ ಫ್ಯಾನ್ಸ್

    Live Tv
    [brid partner=56869869 player=32851 video=960834 autoplay=true]