Tag: BC Patil

  • ಆಪರೇಷನ್ ಹಸ್ತ ವದಂತಿ ಬೆನ್ನಲ್ಲೇ ಬಿಜೆಪಿ ನಾಯಕರ ಜೊತೆ ಡಿಕೆಶಿ ಆಪ್ತ ಮಾತುಕತೆ!

    ಆಪರೇಷನ್ ಹಸ್ತ ವದಂತಿ ಬೆನ್ನಲ್ಲೇ ಬಿಜೆಪಿ ನಾಯಕರ ಜೊತೆ ಡಿಕೆಶಿ ಆಪ್ತ ಮಾತುಕತೆ!

    ಬೆಂಗಳೂರು: ಆಪರೇಷನ್ ಹಸ್ತದ (Operation Hasta) ವದಂತಿ ನಡುವೆ ಬಿಜೆಪಿ (BJP) ನಾಯಕರ ಜೊತೆ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಆಪ್ತ ಮಾತುಕತೆ ನಡೆಸಿದ ಫೋಟೋ ಈಗ ವೈರಲ್‌ ಆಗಿದ್ದಾರೆ.

    ಖಾಸಗಿ ಹೋಟೆಲಿನಲ್ಲಿ ನಡೆದ ನಟ ಸುದೀಪ್ (Sudeep) ಹುಟ್ಟುಹಬ್ಬದ ಪಾರ್ಟಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಚಿವರಾದ ಬಿ.ಸಿ.ಪಾಟೀಲ್ (BC Patil) ಹಾಗೂ ರಾಜೂ ಗೌಡ (Raju Gowda) ಜೊತೆ ಆಪ್ತ ಮಾತುಕತೆ ನಡೆಸಿದ್ದಾರೆ.  ಇದನ್ನೂ ಓದಿ: ಈಶ್ವರಪ್ಪ ವಿರುದ್ಧ ಬಿ.ಸಿ.ಪಾಟೀಲ್ ಗರಂ

     

    ಡಿಕೆಶಿ ಮಾತುಕತೆ ಫೋಟೋ ವೈರಲ್ ಬೆನ್ನಲ್ಲೇ ರಾಜಕೀಯ ವಲಯದಲ್ಲಿ ನಾನಾ ಚರ್ಚೆ ಹುಟ್ಟುಹಾಕಿದೆ. ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ಬಿಸಿ ಪಾಟೀಲ್‌, ಕಾಮಾಲೆ ಕಣ್ಣಿಗೆ ಕಾಣವುದೆಲ್ಲ ಹಳದಿ ಅಂತೆ. ಇದೊಂದು ಆಕಸ್ಮಿಕ ಭೇಟಿ ಅಷ್ಟೇ. ಔಪಚಾರಿಕ ಚರ್ಚೆ, ಬೇರೆ ಯಾವುದೇ ಚರ್ಚೆ ಇಲ್ಲ. ಹುಟ್ಟುಹಬ್ಬದ ಪಾರ್ಟಿಗೆ ಹೋಗಿದ್ದೆವು. ಆಗ ಡಿಕೆ ಶಿವಕುಮಾರ್ ಅವರು ಬಂದಿದ್ದರು. ಅವರು ರಾಜ್ಯದ ಉಪಮುಖ್ಯಮಂತ್ರಿ. ಸಹಜವಾಗಿ ಗೌರವ ಕೊಟ್ಟು ಮಾತನಾಡಿಸಬೇಕಾಗುತ್ತದೆ. ಅದೇ ರೀತಿ ಮಾತನಾಡಿಸಿದ್ದೇವೆ ಹೊರತು ಬೇರೆ ಇಲ್ಲ. ಇದು ಆಕಸ್ಮಿಕ ಭೇಟಿ ಅಷ್ಟೇ, ಬೇರೆ ಅರ್ಥ ಬೇಡ ಎಂದು ಸ್ಪಷ್ಟನೆ ನೀಡಿದರು.

    ರಾಜೂ ಗೌಡ ಪ್ರತಿಕ್ರಿಯಿಸಿ, ನಮ್ಮ ಭೇಟಿ ಆಕಸ್ಮಿಕ. ತಮಾಶೆ ಮಾಡಿಕೊಂಡು ಮಾತಾಡಿದ್ದೇವೆ. ನಮ್ಮ ಚರ್ಚೆ ರಾಜಕೀಯ ಹೊರತಾಗಿ ಇತ್ತು ಎಂದು ಪ್ರತಿಕ್ರಿಯಿಸಿದ್ದಾರೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಈಶ್ವರಪ್ಪ ವಿರುದ್ಧ ಬಿ.ಸಿ.ಪಾಟೀಲ್ ಗರಂ

    ಈಶ್ವರಪ್ಪ ವಿರುದ್ಧ ಬಿ.ಸಿ.ಪಾಟೀಲ್ ಗರಂ

    ಬೆಂಗಳೂರು: ಹಾವೇರಿ (Haveri) ಲೋಕಸಭಾ ಟಿಕೆಟ್ ವಿಚಾರವಾಗಿ ಮಾಜಿ ಸಚಿವ ಬಿ.ಸಿ.ಪಾಟೀಲ್ (B.C.Patil), ಮಾಜಿ ಸಚಿವ ಕೆಎಸ್ ಈಶ್ವರಪ್ಪ (K.S.Eshwarappa) ಅವರ ವಿರುದ್ಧ ಅಸಮಾಧಾನ ಹೊರಹಾಕಿದರು.

    ಈಶ್ವರಪ್ಪ ತಮ್ಮ ಮಗನಿಗೆ ಹಾವೇರಿ ಟಿಕೆಟ್‌ಗಾಗಿ ಓಡಾಟ ನಡೆಸುತ್ತಿದ್ದಾರೆ. ಹಾಗಾಗಿ ನೀವು ಕಾಂಗ್ರೆಸ್ ಕಡೆ ಮುಖ ಮಾಡಿದ್ರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಹಾವೇರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷ ನನಗೆ ಟಿಕೆಟ್ ಕೊಟ್ಟರೆ ಕಂಟೆಸ್ಟ್ ಮಾಡುತ್ತೇನೆ ಎಂದು ಇಚ್ಛೆ ವ್ಯಕ್ತಪಡಿಸಿದ್ದೇನೆ. ನನಗೆ ಟಿಕೆಟ್ (Ticket) ಕೊಟ್ಟರೆ ನಾನು ನಿಲ್ಲುತ್ತೇನೆ. ಬೇರೆ ಅವರಿಗೆ ಕೊಟ್ಟರೆ ಅವರ ಪರ ಕೆಲಸ ಮಾಡುತ್ತೇನೆ ಎಂದರು. ಇದನ್ನೂ ಓದಿ: 5 ಬಾರಿ ಮರುಜನ್ಮ ಪಡೆದಿದ್ದೇನೆ, ನನ್ನ ಜೀವನದ ಬಗ್ಗೆ ಕನಿಕರದಿಂದ ನೋಡಿ: ಹೆಚ್‌ಡಿಕೆ ರಿಯಾಕ್ಷನ್

    ಯಾರು ಯಾರಿಗೋ ಕಂಡ ಕಂಡವರಿಗೆ ಪಕ್ಷ ಟಿಕೆಟ್ ಕೊಡಲ್ಲ. ಭಾರತೀಯ ಜನತಾ ಪಕ್ಷ ಎಲ್ಲರಿಗೂ ಟಿಕೆಟ್ ಕೊಡಲ್ಲ. ನಾವು ಹೇಳಿರೋದು ಹಾವೇರಿ ಮತ್ತು ಗದಗದಲ್ಲಿ ಯಾರಿಗಾದ್ರು ಕೊಟ್ಟರೆ ಓಕೆ. ಅದು ಬಿಟ್ಟು ಹೊರಗಡೆಯಿಂದ ಬಂದವರಿಗೆ ಕೊಡುವ ಪರಿಸ್ಥಿತಿ ಇಲ್ಲ. ಹೊರಗಡೆಯಿಂದ ಬಂದವರಿಗೆ ಟಿಕೆಟ್ ಕೊಟ್ಟರೆ ಕಷ್ಟ. ಕ್ಷೇತ್ರಗಳಿಗೆ ಕೊಡುಗೆ ಇರಬೇಕು. ಕ್ಷೇತ್ರದಲ್ಲಿ ದುಡಿದಿರಬೇಕು. ಅಲ್ಲಿ ಜನಕ್ಕೋಸ್ಕರ ಕೆಲಸ ಮಾಡಬೇಕು. ನಾವು ಪಕ್ಷಕ್ಕೆ ಒತ್ತಾಯ ಮಾಡಿರೋದು ಇಷ್ಟೇ. ಹಾವೇರಿ ಗದಗ ಸ್ಥಳೀಯರಿಗೆ ಟಿಕೆಟ್ ಕೊಡಿ ಎಂದು ಹೇಳಿದ್ದೇವೆ ಎನ್ನುವ ಮೂಲಕ ಈಶ್ವರಪ್ಪಗೆ ಪರೋಕ್ಷವಾಗಿ ಟಾಂಗ್ ಕೊಟ್ಟರು. ಇದನ್ನೂ ಓದಿ: ಇಸ್ರೋ ಅಧ್ಯಕ್ಷರಿಗೆ ವಿಕ್ರಂ ಲ್ಯಾಂಡರ್ ಗಿಫ್ಟ್ ನೀಡಿದ ಪುಟ್ಟ ಬಾಲಕ

    ನಾನು ಬಿಜೆಪಿ (BJP) ಬಿಟ್ಟು ಹೋಗಲ್ಲ, ಬಿಜೆಪಿಯಲ್ಲೆ ಇರುತ್ತೇನೆ. ಬಿಜೆಪಿ ಬಿಡುತ್ತೇನೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು. ನಮ್ಮ ಜೊತೆ ಬಂದಿರುವವರು ಯಾರೂ ಹೋಗಲ್ಲ ಎಂದರು. ಕಳೆದ ಬಾರಿ ಬಿಜೆಪಿಗೆ ಬಂದ ವಲಸಿಗರು ಕೆಲವರು ಕಾಂಗ್ರೆಸ್‌ಗೆ (Congress) ವಾಪಾಸ್ ಆಗುತ್ತಿದ್ದಾರೆ ಎನ್ನುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಯಾರೂ ಮತ್ತೆ ಕಾಂಗ್ರೆಸ್‌ಗೆ ವಾಪಸ್ ಹೋಗಲ್ಲ. ಎಸ್‌ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಹೋಗುತ್ತಾರೆ ಎಂದು ಕೇಳಿಬರುತ್ತಿತ್ತು. ಅವರು ಹೋಗಲ್ಲ. ಅಲ್ಲಿ ಹೋಗಿ ಏನು ಮಾಡಬೇಕು ಹೇಳಿ? ಅದೇ ಲಾಸ್ಟ್ ನಂಬರ್ 137 ಮತ್ತು 138. ಕೊನೇ ಬೆಂಚಲ್ಲಿಯೇ ಅಪಸ್ವರ ಇದೆ, ಅಸಮಾಧಾನ ಇದೆ. ನಾವು ಹೋಗಿ ಏನು ಮಾಡಬೇಕು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಸಿಂಗಾಪುರ ಅಧ್ಯಕ್ಷರಾಗಿ ಆಯ್ಕೆಯಾದ ಭಾರತೀಯ ಮೂಲದ ಷಣ್ಮುಗರತ್ನಂಗೆ ಮೋದಿ ಅಭಿನಂದನೆ – ಯಾರಿವರು?

    ಡಿಕೆ ಶಿವಕುಮಾರ್ (DK Shivakumar) ಜೊತೆ ಬಿಸಿ ಪಾಟೀಲ್ ಫೋಟೋ ವೈರಲ್ ವಿಚಾರವಾಗಿ ಮಾತನಾಡಿದ ಅವರು, ಕಾಮಾಲೆ ಕಣ್ಣಿಗೆ ಕಾಣೋದೆಲ್ಲ ಹಳದಿ ಅಂತೆ. ಇದೊಂದು ಆಕಸ್ಮಿಕ ಭೇಟಿ ಅಷ್ಟೇ. ಔಪಚಾರಿಕ ಚರ್ಚೆ, ಬೇರೆ ಯಾವುದೇ ಚರ್ಚೆ ಇಲ್ಲ. ಬರ್ತ್ಡೇ ಪಾರ್ಟಿಗೆ ಹೋಗಿದ್ದೆವು. ಆಗ ಡಿಕೆ ಶಿವಕುಮಾರ್ ಅವರು ಬಂದಿದ್ದರು. ಅವರು ರಾಜ್ಯದ ಉಪಮುಖ್ಯಮಂತ್ರಿ. ಸಹಜವಾಗಿ ಗೌರವ ಕೊಟ್ಟು ಮಾತನಾಡಿಸಬೇಕಾಗುತ್ತದೆ. ಅದೇ ರೀತಿ ಮಾತನಾಡಿಸಿದ್ದೇವೆ ಹೊರತು ಬೇರೆ ಇಲ್ಲ. ಇದು ಆಕಸ್ಮಿಕ ಭೇಟಿ ಅಷ್ಟೇ, ಬೇರೆ ಅರ್ಥ ಬೇಡ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಹೆಚ್‌ಡಿಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್‌ – ಅಭಿಮಾನಿಯಿಂದ ಕುಂಕುಮ ಅಕ್ಷತೆ ಸ್ವೀಕರಿಸಿದ ಮಾಜಿ ಸಿಎಂ

    ಸುದೀಪ್ ಅವರು ಊಟಕ್ಕೆ ಕರೆದಿದ್ದರು. ರಾಜು ಗೌಡರೂ ಬಂದಿದ್ದರು. ಸರ್ಕಾರ ಬಂದಮೇಲೆ ಉಪ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿರಲಿಲ್ಲ. ಸೌಜನ್ಯಕ್ಕೆ ಮಾತನಾಡಿಸಿದ್ದೇನೆ. ಕಾಮಾಲೆ ಕಣ್ಣಿಗೆ ಜಗತ್ತೆಲ್ಲ ಹಳದಿ ಅಂತೆ. ಸಹಜವಾಗಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿರೋದು ಆಕಸ್ಮಿಕ. ನಾನು ಬಿಜೆಪಿ ಬಿಟ್ಟು ಹೋಗುತ್ತೇನೆ ಅನ್ನೋದು ಸತ್ಯಕ್ಕೆ ದೂರವಾದ ಮಾತು. ಕಾಂಗ್ರೆಸ್ ನಮ್ಮನ್ನು ಸೆಳೆಯುವ ಪ್ರಯತ್ನ ಮಾಡುತ್ತಿದೆ ಎನ್ನುವುದು ಸುಳ್ಳು. ಡಿಕೆ ಶಿವಕುಮಾರ್ ಅವರು ಬರುತ್ತಾರೆ ಎಂದು ನಾನು ಊಹೆ ಮಾಡಿರಲಿಲ್ಲ ಎಂದರು. ಇದನ್ನೂ ಓದಿ: ಬಹುಪತ್ನಿತ್ವ ನಿಷೇಧ – ಮಸೂದೆ ಮಂಡನೆಗೆ ಮುಂದಾದ ಅಸ್ಸಾಂ ಸರ್ಕಾರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮದಕರಿ ನಾಯಕ ಕಾದಂಬರಿ ಓದುತ್ತಿದ್ದೇನೆ: ಕುತೂಹಲ ಮೂಡಿಸಿದ ಕೌರವ

    ಮದಕರಿ ನಾಯಕ ಕಾದಂಬರಿ ಓದುತ್ತಿದ್ದೇನೆ: ಕುತೂಹಲ ಮೂಡಿಸಿದ ಕೌರವ

    ಕೌರವ ಖ್ಯಾತಿಯ ಬಿ.ಸಿ. ಪಾಟೀಲ್ (BC Patil) ‘ಮದಕರಿ ನಾಯಕ’ನ (Veera Madkari) ಕುರಿತಾದ ಕಾದಂಬರಿ ಓದುತ್ತಿದ್ದೇನೆ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಈಗಾಗಲೇ ಮದಕರಿ ನಾಯಕನ ಕುರಿತಾಗಿ ಸಿನಿಮಾ ಮಾಡಲು ಇಬ್ಬರು ಸ್ಟಾರ್ ನಟರು ತಯಾರಿ ಮಾಡಿಕೊಂಡಿದ್ದರು. ಅದರಲ್ಲೂ ಸುದೀಪ್ (Sudeep) ಹೆಸರು ಹೆಚ್ಚು ಓಡಾಡಿತು.

    ಮದಕರಿ ನಾಯಕನ ಸಿನಿಮಾ ಕುರಿತಂತೆ ಸ್ಯಾಂಡಲ್ ವುಡ್ ನಲ್ಲಿ ಈಗಾಗಲೇ ಹಲವಾರು ಭಾರಿ ಚರ್ಚೆ ನಡೆದಿವೆ. ನಟರ ಫ್ಯಾನ್ಸ್ ವಾರ್ ಗೂ ಅದು ಕಾರಣವಾಗಿತ್ತು. ತಮ್ಮದೇ ಆದ ರೀತಿಯಲ್ಲಿ ಅಭಿಮಾನಿಗಳು ಪೋಸ್ಟರ್ ಮಾಡಿಯೂ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇಷ್ಟೆಲ್ಲ ನಡುವೆಯೂ ಬಿ.ಸಿ. ಪಾಟೀಲ್ ಮತ್ತೊಂದು ಅಚ್ಚರಿಯ ಸುದ್ದಿಯನ್ನು ನೀಡಿದ್ದಾರೆ. ಇದನ್ನೂ ಓದಿ:ದಾಂಪತ್ಯಕ್ಕೆ ಅಂತ್ಯ ಹಾಡಿದ ನಟಿ, ಡಿವೋರ್ಸ್ ಬಗ್ಗೆ ಬಿಗ್ ಬಾಸ್ ಚೈತ್ರಾ ಅಪ್‌ಡೇಟ್

    ತಾವೇ ನಟಿಸಲು ಆ ಕಾದಂಬರಿ ಓದುತ್ತಿದ್ದಾರೋ ಅಥವಾ ನಿರ್ಮಾಣಕ್ಕೆ ಏನಾದರೂ ಪ್ಲ್ಯಾನ್ ಮಾಡಿದ್ದರೋ ಗೊತ್ತಿಲ್ಲ. ಆ ಕುರಿತು ಅವರು ಯಾವುದೇ ಮಾಹಿತಿಯನ್ನೂ ನೀಡಿಲ್ಲ. ಆದರೆ, ಕಾದಂಬರಿ ಓದುತ್ತಿರುವ ಕುರಿತು ಅವರು ಮಾತನಾಡಿದ್ದಾರೆ. ಮುಂದೆ ನೋಡೋಣ ಎನ್ನುವ ಕುತೂಹಲವನ್ನೂ ಉಳಿಸಿಕೊಂಡಿದ್ದಾರೆ.

     

    ಗರಡಿ ಸೇರಿದಂತೆ ಹಲವು ಸಿನಿಮಾಗಳನ್ನು ಪಾಟೀಲರು ನಿರ್ಮಾಣ ಮಾಡುತ್ತಿದ್ದಾರೆ. ಜೊತೆಗೆ ಗರಡಿಯಲ್ಲಿ ಅವರು ಪ್ರಮುಖ ಪಾತ್ರವನ್ನೂ ಮಾಡಿದ್ದಾರೆ. ಶಶಾಂಕ್ ಜೊತೆ ಕೈ ಜೋಡಿಸಿ ನಿರ್ಮಾಣ ಮಾಡಿರುವ ಕೌಸಲ್ಯ ಸುಪ್ರಜಾ ರಾಮ ಸಿನಿಮಾ ಈ ವಾರ ರಿಲೀಸ್ ಆಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಕೌಸಲ್ಯ ಸುಪ್ರಜಾ ರಾಮ’  ಚಿತ್ರದ ಟ್ರೈಲರ್ ರಿಲೀಸ್ ಮಾಡಿದ ಕಿಚ್ಚ ಸುದೀಪ್

    ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರದ ಟ್ರೈಲರ್ ರಿಲೀಸ್ ಮಾಡಿದ ಕಿಚ್ಚ ಸುದೀಪ್

    ಶಾಂಕ್ (Shashank) ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ ‘ಕೌಸಲ್ಯ ಸುಪ್ರಜಾ ರಾಮ’ (Kausalya Supraja Rama) ಚಿತ್ರದ ಟ್ರೈಲರ್ (Trailer) ಇತ್ತೀಚೆಗೆ ಬಿಡುಗಡೆಯಾಯಿತು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್  (Sudeep) ಟ್ರೈಲರ್ ಅನಾವರಣ ಮಾಡಿದರು.  ‌

    ಈ ಟ್ರೈಲರ್ ನಲ್ಲಿ ಬಹಳ ಒಳ್ಳೆಯ ಕಥೆಯನ್ನು ಕಂಡೆ ಎಂದು ಮಾತು ಪ್ರಾರಂಭಿಸಿದ ಕಿಚ್ಚ ಸುದೀಪ್,ಇಲ್ಲಿ ನಂಬಿಕೆ ಮತ್ತು ಸಂಬಂಧಗಳ ಸಂಘರ್ಷ ಇದೆ. ಶಶಾಂಕ್ ಅವರು ಎಮೋಷನ್ ಗಳನ್ನು ಹಿಡಿದಿಡುವ ರೀತಿ ನನಗೆ ಇಷ್ಟ. ಚಿತ್ರದ ಹಾಡುಗಳು ಚೆನ್ನಾಗಿವೆ. ಈ ಚಿತ್ರ ಸಹ ಚೆನ್ನಾಗಿ ಮೂಡಿಬಂದಿರುತ್ತದೆ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

    ನಾನು ಇದುವರೆಗೂ ಮಾಡಿರುವ ಸಿನಿಮಾಗಳಲ್ಲಿ ಬೆಸ್ಟ್ ಸಿನಿಮಾ ಇದು. ಕಾರಣ ಈ ಚಿತ್ರದ ಕಥೆ. ಈ ಕಥೆಗೆ ಯಾವುದೋ ಒಂದು ಆಯಾಮವಿಲ್ಲ, ಹಲವು ಆಯಾಮಗಳಿವೆ. ಸಿನಿಮಾ ನೋಡುವ ಪ್ರತಿಯೊಬ್ಬರಿಗೂ ರಿಲೇಟ್ ಆಗುವ ಕಥೆ ಇದು. ಪ್ರತಿಯೊಬ್ಬರೂ ಚಿತ್ರದಲ್ಲಿನ ಯಾವುದಾದರೊಂದು ಪಾತ್ರದ ಜೊತೆಗೆ ರಿಲೇಟ್ ಮಾಡಿಕೊಳ್ಳಬಹುದು. ಈ ತರಹದ ಕಥೆ ಸಿಗೋದು ಕಷ್ಟ. ಇದು ದೊಡ್ಡ ಮಟ್ಟದಲ್ಲಿ ಸದ್ದು ಮಾಡಬಹುದು ಎಂಬ ನಿರೀಕ್ಷೆ ಇದೆ. ಕೃಷ್ಣ ಅವರನ್ನು ಬೇರೆ ತರಹ ತೋರಿಸುವ ಪ್ರಯತ್ನ ಮಾಡಿದ್ದೇನೆ.   ಮಿಲನಾ ಅವರನ್ನು ಚಿತ್ರಕ್ಕೆ ಆಯ್ಕೆ ಮಾಡಿದ್ದು ಬೇರೆ ಕಾರಣಕ್ಕಲ್ಲ, ಅವರ ಪ್ರತಿಭೆಗಾಗಿ. ಆ ಪಾತ್ರ ನಿಭಾಯಿಸುವುದು ಬಹಳ ಕಷ್ಟ. ಬಹಳ ನೈಜವಾಗಿ ಮತ್ತು ಸೆನ್ಸಿಬಲ್ ಆಗಿ ನಟಿಸಬೇಕಿತ್ತು. ನಿರೀಕ್ಷೆಗೂ ಮೀರಿ ಅವರು ನಟಿಸಿದ್ದಾರೆ. ಬೃಂದಾ ಅವರ ಅಭಿನಯ ಕೂಡ ಅದ್ಭುತವಾಗಿದೆ. ಜುಲೈ 28ಕ್ಕೆ ಚಿತ್ರ ಬಿಡುಗಡೆಯಾಗುತ್ತಿದೆ. ಇಷ್ಟವಾಗಬಹುದೆಂಬ ನಂಬಿಕೆ ಇದೆ ಎಂದು ನರ್ದೇಶಕ ಶಶಾಂಕ್ ತಿಳಿಸಿದರು. ಇದನ್ನೂ ಓದಿ:ನಟನೆ ಜೊತೆಗೆ ನಿರ್ದೇಶನಕ್ಕಿಳಿದ ʼಗರುಡ’ ಖ್ಯಾತಿಯ ಸಿದ್ದಾರ್ಥ್ ಮಹೇಶ್

    ನಾನು ಇಷ್ಟು ವರ್ಷಗಳಲ್ಲಿ ಕೇಳಿರುವ ದಿ ಬೆಸ್ಟ್ ಕಥೆ ಇದು ಎಂದ ನಾಯಕ ಡಾರ್ಲಿಂಗ್ ಕೃಷ್ಣ (Darling Krishna),  ಈ ಚಿತ್ರದಲ್ಲಿ ಸಾಕಷ್ಟು ವಿಷಯಗಳನ್ನು ಮನರಂಜನಾತ್ಮಕವಾಗಿ ಹೇಳಿದ್ದಾರೆ. ಶಶಾಂಕ್ ಅವರು ಬಂದಾಗ, ಕಥೆ ಇರಲಿಲ್ಲ. ನಿಮಗೆ ಯಾವ ತರಹದ ಸಿನಿಮಾ ಬೇಕು ಎಂದು ಕೇಳಿದರು. ನೀವು ನಿಮ್ಮ ಸ್ಟೈಲ್ ನಲ್ಲೇ ಮಾಡಿ ಎಂದು ಹೇಳಿದೆ. ಒಂದು ತಿಂಗಳ ನಂತರ ಈ ಕಥೆ ತಂದರು. ಬಹಳ ಸುಲಭವಾಗಿ ಮುಗಿದ ಚಿತ್ರ ಇದು. ನಟನೆ ಮಾಡಿದ್ದೇ ಗೊತ್ತಾಗಲಿಲ್ಲ. ಈ ಸಿನಿಮಾ ಎಲ್ಲರ ಮನಸ್ಸಿಗೂ ಹತ್ತಿರವಾಗಲಿದೆ ಎಂದು ತಿಳಿಸಿದರು.

    ಶಶಾಂಕ್ ಅವರು ಬಂದು ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ನಮ್ಮ ಕೌರವ ಪ್ರೊಡಕ್ಷನ್ ಹೌಸ್ ಹಾಗೂ ಶಶಾಂಕ್ ಸಿನಿಮಾಸ್ ಜೊತೆ ಸೇರಿ ಈ ಚಿತ್ರ‌ ನಿರ್ಮಾಣ ಮಾಡಿದ್ದೇವೆ.‌ ಅರ್ಜುನ್ ಜನ್ಯ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿರುವ ಹಾಡುಗಳು ಈಗಾಗಲೇ ಹಿಟ್ ಆಗಿದೆ. ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಸುದೀಪ್ ಅವರಿಗೆ ಧನ್ಯವಾದ ಎಂದು ಬಿ.ಸಿ.ಪಾಟೀಲ್ (BC Patil). ಚಿತ್ರದಲ್ಲಿ ನಟಿಸಿರುವ ಮಿಲನ ನಾಗರಾಜ್, ಬೃಂದಾ ಆಚಾರ್ಯ, ನಾಗಭೂಷಣ್ ಸೇರಿದಂತೆ ಅನೇಕ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರಧಾನಿಯಾಗಲು ಶೆಟ್ಟರ್ ಕಾಂಗ್ರೆಸ್ ಸೇರಿದ್ದಾರೆ: ಬಿ.ಸಿ.ಪಾಟೀಲ್‌

    ಪ್ರಧಾನಿಯಾಗಲು ಶೆಟ್ಟರ್ ಕಾಂಗ್ರೆಸ್ ಸೇರಿದ್ದಾರೆ: ಬಿ.ಸಿ.ಪಾಟೀಲ್‌

    ಹಾವೇರಿ: ಜಗದೀಶ್ ಶೆಟ್ಟರ್ (Jagadish Shettar) ದೇಶದ ಪ್ರಧಾನಿಯಾಗಲು ಕಾಂಗ್ರೆಸ್ ಪಕ್ಷ ಸೇರಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ (BC Patil) ವ್ಯಂಗ್ಯವಾಡಿದರು.

    ಹಿರೇಕೆರೂರ ನಿವಾಸದಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ (BJP) ಜಗದೀಶ್‌ ಶೆಟ್ಟರ್ ರಾಜ್ಯದ ಉನ್ನತ ಸ್ಥಾನಗಳನ್ನು ಅನುಭವಿಸಿ ಇಂದು ಕಾಂಗ್ರೆಸ್ (Congress) ಸೇರ್ಪಡೆ ಆಗುತ್ತಿರುವುದು ನಿಜಕ್ಕೂ ಖಂಡನೀಯ. ಬಿಜೆಪಿ ಇಷ್ಟೆಲ್ಲ ಅನುಭವಿಸಿದ ನಂತರವೂ ಹೀನಾಯ ಪರಿಸ್ಥಿತಿಯಲ್ಲಿರುವ ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗಿದ್ದಾರೆ ಅಂದರೆ ಬಹುಶಃ ಅವರಿಗೆ ರಾಜ್ಯದ ಮುಖ್ಯಮಂತ್ರಿ ಅಥವಾ ದೇಶದ ಪ್ರಧಾನಿ ಮಾಡುವ ಮಾತನ್ನು ಕಾಂಗ್ರೆಸ್‌ನವರು ಕೊಟ್ಟಿರಬಹುದು. ಅದಕ್ಕೆ ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ ಎಂದು ಹೇಳಿದರು.

    ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧೋಗತಿಗೆ ಬಂದಿದೆ. ಯಾರು ಬರ್ತಿರಾ ಬನ್ನಿ ಬನ್ನಿ ಅಂತಾ ಟಿಕೆಟ್ ಹಿಡ್ಕೊಂಡ್ ನಿಂತಿದ್ದಾರೆ. ಬಸ್ ಸ್ಟ್ಯಾಂಡ್‌ನಲ್ಲಿ ಟಿಕೆಟ್ ಎನ್ನುವ ಹಾಗೇ ಕಾಂಗ್ರೆಸ್ ನಾಯಕರು ಟಿಕೆಟ್ ಕೊಡುವುದಕ್ಕೆ ನಿಂತಿದ್ದಾರೆ. ಸವದಿ, ಶೆಟ್ಟರ್ ತೆಗೆದುಕೊಂಡಿರುವ ನಿರ್ಧಾರ ನಿಜಕ್ಕೂ ಖಂಡನೀಯ. ಸೋತಿದ್ರು ಸಹಿತ ಅವರನ್ನು ಡಿಸಿಎಂ ಮಾಡಿ ಎಂಎಲ್‌ಸಿ ಮಾಡಲಾಯಿತು. ಕುಮಟಳ್ಳಿ ಸೇರಿದಂತೆ 17 ಜನ ಪಕ್ಷ ಬಿಟ್ಟು ಬಂದಿದ್ದಕ್ಕೆ ಇವರು ಡಿಸಿಎಂ ಆಗಿದ್ದರು. ಇದನ್ನೆಲ್ಲಾ ಸವದಿಯವರು ತಿಳಿದುಕೊಂಡು ಪಕ್ಷದಲ್ಲಿ ಇರಬೇಕಿತ್ತು ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಶೆಟ್ಟರ್‌ನಿಂದ ಉತ್ತರ ಕರ್ನಾಟಕದಲ್ಲೂ ಕಾಂಗ್ರೆಸ್‌ಗೆ ಹೆಚ್ಚಿನ ಶಕ್ತಿ ಸಿಗುವ ವಿಶ್ವಾಸವಿದೆ: ಖರ್ಗೆ

    ಧರ್ಮೇಂದ್ರ ಪ್ರಧಾನ, ಅಮಿತ್‌ ಶಾ ಕೂಡ ಶೆಟ್ಟರ್ ಜೊತೆ ಮಾತನಾಡಿದರು. ನಿಮಗೆ ಕೇಂದ್ರದ ಸಚಿವ ಸ್ಥಾನ ಕೊಡುತ್ತೇವೆ ಎಂದು ಹೇಳಿದರು. ಇಷ್ಟೆಲ್ಲಾ ಹೇಳಿದರೂ ಸಹಿತ ಶೆಟ್ಟರ್‌ ರಾಜೀನಾಮೆ ಕೊಟ್ಟು ಹೋಗಿದ್ದು ನೋಡಿದರೆ ಶೆಟ್ಟರ್ ಅವರನ್ನು ಬಹುಶಃ ಕಾಂಗ್ರೆಸ್‌ನವರು ದೇಶದ ಪ್ರಧಾನಿ ಮಾಡಬಹುದು. ಬುಲೆಟ್ ಬೈಕ್ ಬಿಟ್ಟು ಬುಲ್ಡೋಜರ್ ಹತ್ತಬೇಕು. ಅದನ್ನು ಬಿಟ್ಟು ಸ್ಪ್ಲೆಂಡರ್ ಬೈಕ್ ಹತ್ತಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಪೂರ್ವ ನಿಯೋಜಿತ: ಆರ್.ಅಶೋಕ್ ಟೀಕೆ

  • ನಟಿ ಶ್ರುತಿ ವಿರುದ್ಧ ಹಿರೆಕೇರೂರಿನಲ್ಲಿ ದೂರು ದಾಖಲು

    ನಟಿ ಶ್ರುತಿ ವಿರುದ್ಧ ಹಿರೆಕೇರೂರಿನಲ್ಲಿ ದೂರು ದಾಖಲು

    ಬಿಜೆಪಿ (BJP) ನಾಯಕಿ ಹಾಗೂ ನಟಿ ಶೃತಿ (Shruti) ವಿರುದ್ಧ ದೂರು (Complaint) ದಾಖಲಾಗಿದೆ. ಕಳೆದ ವಾರದ ಹಿಂದೆ ಹಿರೆಕೇರೂರಿನಲ್ಲಿ (Hirekerur) ನಡೆದ ಸಮಾವೇಶದಲ್ಲಿ ಅವರು ಮಾನಹಾನಿಯಾಗುವಂತಹ ಭಾಷಣ ಮಾಡಿದ್ದರು.

    ನಟ ಹಾಗೂ ಮಾಜಿ ಸಚಿವ ಬಿ ಸಿ ಪಾಟೀಲ್ (BC Patil) ಪರ ಪ್ರಚಾರಕ್ಕೆ ಆಗಮಿಸಿದ್ದ ಶ್ರುತಿ, ಬಿಜೆಪಿ ಮಹಿಳಾ ಮೋರ್ಚಾ ಸಮಾವೇಶದಲ್ಲಿ ನಾಲಿಗೆಹರಿಬಿಟ್ಟಿದ್ದರು. ಪಕ್ಷ ಪಕ್ಷಗಳ ನಡುವೆ ವೈರತ್ವ, ದ್ವೇಷ, ಹಾಗೂ ಭಯ ಭೀತಿಯನ್ನುಂಟು ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಲಂ 505(2) ರಡಿ ಹಿರೆಕೇರೂರು ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಇದನ್ನೂ ಓದಿ: ಬೋಲ್ಡ್ ಅವತಾರ ತಾಳಿದ ‘ಕಬ್ಜ’ ಸುಂದರಿ ಶ್ರೀಯಾ

    ಶ್ರುತಿಯ ಭಾಷಣದ ಕುರಿತಾಗಿ ಹಿರೆಕೇರೂರು ನೋಡಲ್ ಅಧಿಕಾರಿ ಪಂಪಾಪತಿ ಎಂಬುವವರಿಂದ ದೂರು ನೀಡಿದ್ದರು. ಅಷ್ಟಕ್ಕೂ ಆ ಸಮಾವೇಶದಲ್ಲಿ ಶ್ರುತಿ, ‘ಮೇಜರ್ ಆಗಿ ರಾಜ್ಯದಲ್ಲಿ ಮೂರು ಪಕ್ಷಗಳಿವೆ. ಯಾವುದೇ ಬೇರೆ ಪಕ್ಷದ ಬಗ್ಗೆ ನಾನು ಜಾಸ್ತಿ ಮಾತನಾಡಲ್ಲ. ಆದರೆ ಒಂದೆ ಮಾತಿನಲ್ಲಿ ಹೇಳಿ ಮುಗಿಸಿಬಿಡ್ತೇನಿ. ನಿಮ್ಮ‌ ವಂಶ ಬಿಟ್ಟು ಬೇರೆಯವರ ವಂಶ ಅಭಿವೃದ್ದಿ ಆಗಬೇಕಾದ್ರೆ ಜೆಡಿಎಸ್ ಗೆ ಮತ ಹಾಕಿ. ನಿಮ್ಮ ವಂಶ ಬಿಟ್ಟು ಹೊರದೇಶದ ವಂಶ ಅಭಿವೃದ್ಧಿ ಆಗಬೇಕಾದ್ರೆ ಕಾಂಗ್ರೇಸ್ ಗೆ ಮತ ಹಾಕಿ. ಭಾರತದಲ್ಲಿ ಭಾರತೀಯರ ವಂಶ ಅಭಿವೃದ್ಧಿ ಆಗಬೇಕಾದ್ರೆ ಭಾರತೀಯ ಜನತಾ ಪಾರ್ಟಿ ಗೆ ಮತ ಹಾಕಿ ಎಂದು ವ್ಯಂಗ್ಯ ಮಾಡಿದ್ದರು.

    ಕೈ- ದಳ ಪಕ್ಷದ ಕುಟುಂಬ ರಾಜಕಾರಣ ಕುರಿತು ಅಪಹಾಸ್ಯ ಮಾಡಿದ ಹಿನ್ನೆಲೆಯಲ್ಲಿ ದೂರು ದಾಖಲಾಗಿತ್ತು. ದೂರು ಸ್ವೀಕರಿಸಿರುವ ಹಿರೆಕೇರೂರು ಪೊಲೀಸರು ಶ್ರುತಿ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದಾರೆ.

  • ಪ್ರತಿ ಎಕರೆಗೆ 250 ರೂ. ಡೀಸೆಲ್‌ ಸಬ್ಸಿಡಿ – ತಿಂಗಳಾಂತ್ಯಕ್ಕೆ ರೈತ ಶಕ್ತಿ ಯೋಜನೆಗೆ ಚಾಲನೆ

    ಪ್ರತಿ ಎಕರೆಗೆ 250 ರೂ. ಡೀಸೆಲ್‌ ಸಬ್ಸಿಡಿ – ತಿಂಗಳಾಂತ್ಯಕ್ಕೆ ರೈತ ಶಕ್ತಿ ಯೋಜನೆಗೆ ಚಾಲನೆ

    ಬೆಂಗಳೂರು: ರೈತಾಪಿ ಕೃಷಿಕರ ಮೇಲಿನ ಹೊರೆ ತಪ್ಪಿಸುವ ಸಲುವಾಗಿ ಬಜೆಟ್‌ನಲ್ಲಿ ಘೋಷಿಸಿದಂತೆ ರೈತ ಶಕ್ತಿ ಯೋಜನೆಗೆ (Karnataka Raitha Shakti Scheme) ಈ ತಿಂಗಳಾಂತ್ಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಚಾಲನೆ‌ ನೀಡಲಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ (BC Patil) ಹೇಳಿದ್ದಾರೆ.

    ರೈತರಿಗೆ ಕೃಷಿ ಯಾಂತ್ರೀಕರಣವು ಡೀಸೆಲ್‌ (Diesel) ಇಂಧನದ ಮೇಲೆ ಬಹುತೇಕ‌ ಅವಲಂಬಿತವಾಗಿದೆ. ಹೀಗಾಗಿ ರೈತರ (Farmers) ಮೇಲಿನ ಆರ್ಥಿಕ ಹೊರೆ ಆದಷ್ಟು ಕಡಿತಗೊಳಿಸುವ ನಿಟ್ಟಿನಲ್ಲಿ 2022 -23 ನೇ ಸಾಲಿನ ಬಜೆಟ್‌ನಲ್ಲಿ ರೈತ ಶಕ್ತಿ ಯೋಜನೆಯನ್ನು ಪ್ರಕಟಿಸಲಾಗಿತ್ತು.

    ಪ್ರತಿ ಎಕರೆಗೆ 250 ರೂ.ನಂತೆ ಗರಿಷ್ಠ ಐದು ಎಕರೆಗೆ ನೇರ ನಗದು ವರ್ಗಾವಣೆ (DBT) ಮೂಲಕ ಡೀಸೆಲ್ ಸಹಾಯಧನವನ್ನು ನೀಡಲಾಗುತ್ತದೆ. ಸುಮಾರು 45 ಲಕ್ಷಕ್ಕೂ ಹೆಚ್ಚಿನ ರೈತಾಪಿ ಕುಟುಂಬಗಳಿಗೆ ಡಿಬಿಟಿ ಮೂಲಕ ಸಬ್ಸಿಡಿಯನ್ನು ನೇರವಾಗಿ ರೈತರ ಖಾತೆಗೆ ಸಿಎಂ ನೇರವಾಗಿ ಬಿಡುಗಡೆ ಮಾಡಲಿದ್ದಾರೆ.

    ರಾಜ್ಯದ ರೈತರಿಗೆ ಕೃಷಿ ಇಲಾಖೆಯ ಎಲ್ಲಾ ಯೋಜನೆಗಳನ್ನು ರೈತರಿಗೆ FRUITS ಫೋರ್ಟಲ್‌‌ ಮೂಲಕ ನೋಂದಣಿ ಗುರುತಿನ ಸಂಖ್ಯೆ ಬಳಸಿ ಕಿಸಾನ್ ತಂತ್ರಾಂಶದ ಮೂಲಕವೇ ಅನುಷ್ಠಾನ ಮಾಡಲಾಗುತ್ತಿದೆ. ಅದೇ ರೀತಿಯಲ್ಲಿ FRUITS ಪೋರ್ಟಲ್‌ನಲ್ಲಿ ನೋಂದಣಿಗೊಂಡ ರಾಜ್ಯದ ಎಲ್ಲಾ ರೈತರಿಗೆ ರೈತ ಶಕ್ತಿ ಯೋಜನೆಯನ್ನು ಕಿಸಾನ್ ತಂತ್ರಾಂಶ ಬಳಸಿಕೊಂಡು ನೇರ ವರ್ಗಾವಣೆ (DBT) ಮೂಲಕವೇ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ.  ಇದನ್ನೂ ಓದಿ: ಪ್ರೇಕ್ಷಕರಿಲ್ಲದೇ ಖಾಲಿ ಹೊಡೆದ ಸ್ಟೇಡಿಯಂ – ಕೇರಳ ಕ್ರೀಡಾ ಸಚಿವರ ವಿವಾದಾತ್ಮಕ ಹೇಳಿಕೆ ವಿರುದ್ಧ ನಿಲ್ಲದ ಆಕ್ರೋಶ

    ನಗದು ಯೋಜನೆಯ FRUITS ಪೋರ್ಟಲ್ ನಲ್ಲಿ ನೊಂದಣಿಗೊಂಡ ರಾಜ್ಯದ ಎಲ್ಲಾ ರೈತರು ಈ ಯೋಜನೆಯ ಫಲಾನುಭವಿಗಳಾಗಿರುತ್ತಾರೆ. ಈ ಯೋಜನೆಯು ಅರ್ಹತಾಧಾರಿತ ಯೋಜನೆಯಾಗಿರುವುದರಿಂದ ಯಾವುದೇ ರೈತರು ಪ್ರತ್ಯೇಕವಾಗಿ ವೈಯಕ್ತಿಕ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ. ದಾಖಲೆಗಳ ಪರಿಶೀಲನೆಯನ್ನು ಸರ್ಕಾರದ FRUITS ಪೋರ್ಟಲ್ ನಲ್ಲಿ ಲಭ್ಯವಿರುವ ದತ್ತಾಂಶಗಳ ಆಧಾರದ ಮೇಲೆ ಮಾಡಲಾಗುತ್ತದೆ.

    FRUITS ಪೋರ್ಟಲ್‌ನಲ್ಲಿ ನಮೂದಿಸಲಾದ ಜಾಗದ ವಿಸ್ತೀರ್ಣದ ಆಧಾರದ ಮೇಲೆ ರೈತರಿಗೆ ಡೀಸೆಲ್‌ ಸಹಾಯಧನವನ್ನು ಡಿಬಿಟಿ ಮೂಲಕ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. FRUITS ತಂತ್ರಾಂಶದಲ್ಲಿ ನೋಂದಣಿಗೊಂಡ ರೈತರು ಹೊಂದಿರುವ ಭೂ ಹಿಡುವಳಿಯ ಆಧಾರದ ಮೇಲೆ ಪ್ರತಿಯೊಬ್ಬ ರೈತರಿಗೆ ಪ್ರತಿ ಎಕರೆಗೆ 250 ರೂ. ಗರಿಷ್ಠ ಐದು ಎಕರೆಗೆ 1250 ರೂ. ವರೆಗೆ ಡೀಸೆಲ್ ಸಹಾಯಧನವನ್ನು ಒದಗಿಸಲಾಗುತ್ತದೆ.

    ಅರ್ಹ ರೈತರಿಗೆ ಡೀಸಲ್ ಸಹಾಯಧನದ ಮೊತ್ತವನ್ನು ಸರ್ಕಾರದ ಡಿಬಿಟಿ ವೋರ್ಟಲ್ ಮೂಲಕ ಸೀಡೆಡ್ ಬ್ಯಾಂಕ್ / ಪೋಸ್ಟ್ ಆಫೀಸ್ ಖಾತೆಗೆ ವರ್ಷಕ್ಕೊಮ್ಮೆ ವರ್ಗಾಯಿಸಲಾಗುತ್ತದೆ ಎಂದು ಕೃಷಿ ಸಚಿವರ ಕಚೇರಿ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಗರಡಿ’ ಶೂಟಿಂಗ್ ಮುಗಿಸಿ, ಹೊಸ ಸಿನಿಮಾದಲ್ಲಿ ಯೋಗರಾಜ್ ಭಟ್ ಬ್ಯುಸಿ

    ‘ಗರಡಿ’ ಶೂಟಿಂಗ್ ಮುಗಿಸಿ, ಹೊಸ ಸಿನಿಮಾದಲ್ಲಿ ಯೋಗರಾಜ್ ಭಟ್ ಬ್ಯುಸಿ

    ಟ ಹಾಗೂ ಶಾಸಕ  ಬಿ.ಸಿ.ಪಾಟೀಲ್ ಅವರ ಪತ್ನಿ ವನಜಾ ಪಾಟೀಲ್ ಹಾಗೂ ಪುತ್ರಿ ಸೃಷ್ಟಿ ಪಾಟೀಲ್ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ “ಗರಡಿ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ರಾಮುಹಳ್ಳಿಯ ಜಿ.ವಿ.ಅಯ್ಯರ್ ಸ್ಟುಡಿಯೋದಲ್ಲಿ ‌ಗರಡಿಮನೆ ಸೆಟ್ ಹಾಕಲಾಗಿತ್ತು. ಅಲ್ಲಿ ಕೆಲವು ದಿನಗಳ ಚಿತ್ರೀಕರಣ ನಡೆಸುವುದರೊಂದಿಗೆ “ಗರಡಿ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಮಾಧ್ಯಮಕ್ಕೆ ಮಾಹಿತಿ ನೀಡಿದರು.

    ಸುಮಾರು ಎಪ್ಪತ್ತು ದಿನಗಳ ಚಿತ್ರೀಕರಣದ ನಂತರ ಇಂದು “ಗರಡಿ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಸ್ಟುಡಿಯೋದಲ್ಲಿ ನಿರ್ಮಿಸಲಾಗಿದ್ದ “ಗರಡಿ” ಮನೆ ಸೆಟ್ ನಲ್ಲಿ ಚಿತ್ರೀಕರಣ ಮಾಡಿದ್ದೇವೆ. ಈ ಹಂತದ ವಿಶೇಷವೆಂದರೆ, ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಅವರು  ನಾಯಕನ ತಂದೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಯಶಸ್ ಸೂರ್ಯ, ಸೋನಾಲ್ ‍ಮೊಂತೆರೊ, ಬಿ.ಸಿ.ಪಾಟೀಲ್, ರವಿಶಂಕರ್, ಸುಜಯ್ ಬೇಲೂರು, ರಘು, ಧರ್ಮಣ್ಣ, ಚೆಲುವರಾಜ್, ಪೃಥ್ವಿ ಮುಂತಾದವರು ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ. ನಿರ್ಮಾಪಕರಾದ ಬಿ.ಸಿ.ಪಾಟೀಲ್ ಅವರಿಗೆ ವಿಶೇಷ ಧನ್ಯವಾದ. “ಗರಡಿ” ಹಳೇ ಮೈಸೂರು ಭಾಗದಲ್ಲಿ ನಡೆಯುವ ಕಥೆ. ದೇಸಿ ಕ್ರೀಡೆಗೆ ಒತ್ತು ನೀಡುವ ಸಲುವಾಗಿ ಈ ವಿಭಿನ್ನ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದೇವೆ.‌ ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ‌ಪ್ರೋತ್ಸಾಹವಿರಲಿ ಎಂದರು ನಿರ್ದೇಶಕ ಯೋಗರಾಜ್ ಭಟ್. ಇದನ್ನೂ ಓದಿ: ದುಬೈಗೆ ಹಾರಿದ ಮಾಲಾಶ್ರೀ ಪುತ್ರಿ ರಾಧನಾ ರಾಮ್

    ಇಂದು “ಗರಡಿ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರ ಚೆನ್ನಾಗಿ ಬಂದಿದೆ. ಚಿತ್ರದ ಆಡಿಯೋ ಹಕ್ಕು ಸರಿಗಮಪ‌ ಸಂಸ್ಥೆಗೆ ಒಂದು ಕೋಟಿಗೆ ಮಾರಾಟವಾಗಿದೆ. ಡಬ್ಬಿಂಗ್, ರಿಮೇಕ್ ರೈಟ್ಸ್ ಗೂ ಸಾಕಷ್ಟು ಬೇಡಿಕೆ ಇದೆ. ನಮ್ಮ  ಸಂಸ್ಥೆಯ ನಿರ್ಮಾಣದ ಹದಿನಾರನೇ ಚಿತ್ರ. ಫೆಬ್ರವರಿ ಕೊನೆ ಅಥವಾ ಮಾರ್ಚ್ ಮೊದಲ ವಾರದಲ್ಲಿ ಚಿತ್ರ ತೆರೆಗೆ ಬರಲಿದೆ ಎಂದ ಬಿ.ಸಿ.ಪಾಟೀಲ್ ಅವರು ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದರು. ನಾನು ಪೈಲ್ವಾನ್ ಪಾತ್ರದಲ್ಲಿ‌ ಕಾಣಿಸಿಕೊಂಡಿದ್ದೇನೆ. ಇದಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೆ.  ಅನುಭವಿ ಕಲಾವಿದರೊಂದಿಗೆ ‌ನಟಿಸಿರುವ ಖುಷಿಯಿದೆ. ಅವಕಾಶ ನೀಡಿದ ನಿರ್ಮಾಪಕ ಹಾಗೂ ನಿರ್ದೇಶಕರಿಗೆ ವಂದನೆಗಳು ಎಂದರು ನಾಯಕ ಯಶಸ್ ಸೂರ್ಯ.

    ನಾಯಕಿ ಸೋನಾಲ್ ಮೊಂತೆರೊ ಸಹ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ನಟ “ಆರ್ಮುಗಂ” ರವಿಶಂಕರ್ ಮಾತನಾಡಿ, ಈ ಚಿತ್ರದಲ್ಲಿ ಅಭಿನಯಿಸಿರುವುದು ಖುಷಿಯಾಗಿದೆ. ಯೋಗರಾಜ್ ಭಟ್ ಹಾಗೂ ಬಿ.ಸಿ.ಪಾಟೀಲ್ ಅವರ ಜೊತೆ ಇದು ನನ್ನ ಮೊದಲ ಚಿತ್ರ ಎಂದರು. ನಟ ಸುಜಯ್ ಬೇಲೂರ್ ಸಹ ತಮ್ಮ ಪಾತ್ರ ಪರಿಚಯ ಮಾಡಿಕೊಂಡರು. ಕಲಾವಿದರಾದ ರಘು, ಧರ್ಮಣ್ಣ, ಚೆಲುವರಾಜ್, ಪೃಥ್ವಿ ಹಾಗೂ ಕಥೆ ಬರೆದಿರುವ  ವಿಕಾಸ್ “ಗರಡಿ” ಚಿತ್ರದ ಕುರಿತು ಮಾತನಾಡಿದರು. ನಿರ್ಮಪಕಿ ಸೃಷ್ಟಿ ಪಾಟೀಲ್ ಚಿತ್ರೀಕರಣ ಸರಾಗವಾಗಿ ಮುಗಿಯಲು ಸಹಕಾರ ನೀಡಿದ್ದ ಸಮಸ್ತ ತಂಡಕ್ಕೂ ಧನ್ಯವಾದ ತಿಳಿಸಿದರು. ನಿರ್ಮಾಪಕ ಬಿ.ಸಿ.ಪಾಟೀಲ್, ನಿರ್ದೇಶಕ ಯೋಗರಾಜ್ ಭಟ್ ಹಾಗೂ ನಾಯಕ ಯಶಸ್ ಸೂರ್ಯ ಸೇರಿದಂತೆ ಚಿತ್ರತಂಡದ ಸದಸ್ಯರು ದರ್ಶನ್ ಅವರಿಗೆ ಧನ್ಯವಾದ ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕಾಂಗ್ರೆಸ್‍ನವರಿಗೆ ಕೆಲಸ ಇಲ್ಲ, ನಿರುದ್ಯೋಗಿಗಳಾಗಿದ್ದಾರೆ: ಬಿ.ಸಿ ಪಾಟೀಲ್

    ಕಾಂಗ್ರೆಸ್‍ನವರಿಗೆ ಕೆಲಸ ಇಲ್ಲ, ನಿರುದ್ಯೋಗಿಗಳಾಗಿದ್ದಾರೆ: ಬಿ.ಸಿ ಪಾಟೀಲ್

    ಗದಗ: ಕಾಂಗ್ರೆಸ್ (Congress) ನವರಿಗೆ ಕೆಲಸ ಇಲ್ಲ, ನಿರುದ್ಯೋಗಿಗಳಾಗಿದ್ದಾರೆ. ಹೀಗಾಗಿ ಅನೇಕ ಯಾತ್ರೆಗಳನ್ನ ಮಾಡ್ತಿದ್ದಾರೆ ಅಂತ ಕೃಷಿ ಸಚಿವ ಬಿ.ಸಿ ಪಾಟೀಲ್ (B.C Patil) ಹೇಳಿದರು.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತ ತೋಡೋನೇ ಆಗಿಲ್ಲ, ಇನ್ನು ಜೋಡಿಸೋ ಪ್ರಶ್ನೆ ಎಲ್ಲಿದೆ ಅಂತ ಪ್ರಶ್ನೆ ಮಾಡಿದ್ರು. ನಮಗೆ ಕೆಲಸ ಇದೆ. ಆದರೆ ಕಾಂಗ್ರೆಸ್ ನವರಿಗೆ ಮಾಡೋಕೆ ಕೆಲಸ ಇಲ್ಲ. ಸುಮ್ಮನೆ ಜನರ ಗಮನ ಸೇಳೆಯೊಕೆ ಭಾರತ ಜೋಡೊ, ಇನ್ಯಾವುದೋ ಯಾತ್ರೆ ಮಾಡ್ತಿದ್ದಾರೆ. ಭಾರತ ಜೋಡೋ ಅದು ಸಿದ್ದರಾಮಯ್ಯ (Siddaramaiah), ಡಿಕೆಶಿ (DK Shivakumar) ಜೋಡಿಸುವ ಯಾತ್ರೆ ಆಗಿತ್ತು. ರಾಹುಲ್ ಗಾಂಧಿ (Rahul Gandhi) ಕರ್ನಾಟಕ ಬಿಟ್ಟು ಮಹಾರಾಷ್ಟ್ರಕ್ಕೆ ಹೋದ ಮೇಲೆ ಸಿದ್ದರಾಮಯ್ಯ, ಡಿಕೆಶಿ ಅವರವರ ಊರಿಗೆ ಅವರು ಹೋಗಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಮುಸ್ಲಿಂ ಪ್ರಧಾನಿ ಆಗ್ಬೇಕು ಅನ್ನೋದು ಹುಚ್ಚು ಕಲ್ಪನೆ: ಬಿ.ಸಿ ಪಾಟೀಲ್‌

    ಈಗ ಟ್ರ್ಯಾಕ್ಟರ್ ಮೆರವಣಿಗೆ ಮಾಡ್ತೀನಿ ಅಂತಿದ್ದಾರೆ. ಮೊದಲು ಎತ್ತಿನ ಮೆರವಣಿಗೆ ಅಂದು ಒಂದುಸಾರಿ ಬಿದ್ದಾಗಿದೆ. ಸೈಕಲ್ ಅಂದ್ರು ಅದು ಪಂಚರ್ ಆಯಿತು. ಕಾಲು ನಡುಗೆ ಮಾಡಿ ಈಗ ಸುಸ್ತಾಗಿದ್ದಾರೆ. ಅದಕ್ಕೆ ಈಗ ಟ್ರಾಕ್ಟರ್ ರ‍್ಯಾಲಿ ಅಂತಿದ್ದಾರೆ. ಅವರಿಗೆ ಕೆಲಸ ಇಲ್ಲ, ನಿರುದೋಗಿಗಳಾಗಿದ್ದಾರೆ. ಅದಕ್ಕೆ ಮಾಡ್ತಿದ್ದಾರೆ ಅಂತ ಕಾಂಗ್ರೆಸ್ ನಾಯಕರ ವಿರುದ್ಧ ವ್ಯಂಗ್ಯವಾಡಿದರು. ಈ ವೇಳೆ ಬಿಜೆಪಿ ಮುಖಂಡ ಎಮ್.ಡಸ್ ಕರಿಗೌಡ್ರ, ರವೀಂದ್ರನಾಥ ದಂಡಿನ, ನಗರಸಭೆ ಅಧ್ಯಕ್ಷೆ ಉಷಾ ದಾಸರ ಸೇರಿದಂತೆ ಪಕ್ಷದ ಅನೇಕರು ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಭಾರತಕ್ಕೆ ಮುಸ್ಲಿಂ ಪ್ರಧಾನಿ ಆಗ್ಬೇಕು ಅನ್ನೋದು ಹುಚ್ಚು ಕಲ್ಪನೆ: ಬಿ.ಸಿ ಪಾಟೀಲ್‌

    ಭಾರತಕ್ಕೆ ಮುಸ್ಲಿಂ ಪ್ರಧಾನಿ ಆಗ್ಬೇಕು ಅನ್ನೋದು ಹುಚ್ಚು ಕಲ್ಪನೆ: ಬಿ.ಸಿ ಪಾಟೀಲ್‌

    ಗದಗ: ಮುಸ್ಲಿಂ ಪ್ರಧಾನಿ ಆಗ್ಬೇಕು ಅನ್ನೋದು ಹುಚ್ಚು ಕಲ್ಪನೆ. ಕಲ್ಪನೆ ಕಲ್ಪನೆಯೇ ಹೊರತು ಸಹಕಾರ ಆಗೋದಕ್ಕೆ ಸಾಧ್ಯವಿಲ್ಲ ಸಚಿವ ಬಿ.ಸಿ ಪಾಟೀಲ್‌ (BC Patil) ಎಂದರು.

    ನಗರದ ಪ್ರವಾಸಿ ಮಂದಿರ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತಕ್ಕೆ (India) ಮುಸ್ಲಿಂ ಪ್ರಧಾನಿ ಆಗ್ಬೇಕು ಎಂಬ ಟ್ವಿಟ್ಟರ್ ಅಭಿಯಾನ, ಕೆಲ ನಾಯಕರ ಹೇಳಿಕೆಗೆ ಕಿಡಿಕಾರಿದರು. ಮುಸ್ಲಿಂ ಪ್ರಧಾನಿ ಆಗ್ಬೇಕು ಅನ್ನೋದು ಹುಚ್ಚು ಕಲ್ಪನೆಯಾಗಿದೆ. ಅಲ್ಲದೇ ಇದು ಭಾರತ ದೇಶವಾಗಿದ್ದು, ಇಲ್ಲಿ ಮುಸ್ಲಿಂ ಪ್ರಧಾನಿ (Prime Minister) ಆಗಲ್ಲ, ಆಗೋದಕ್ಕೆ ಸಾಧ್ಯವೂ ಇಲ್ಲ ಅಂತ ವಿವಾದಾತ್ಮಕ ಹೇಳಿಕೆ ನೀಡಿದರು.

    ಸಿದ್ದರಾಮಯ್ಯ (Siddaramaiah) ವಿರುದ್ಧದ ಕಿಕ್ ಬ್ಯಾಕ್ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಹಿಂದೆ ಅವರ ಮೇಲಿನ ಆರೋಪಗಳಿಂದ ರಕ್ಷಣೆ ಪಡೆಯಲು ಲೋಕಾಯುಕ್ತ ಮುಚ್ಚಿ ಎಸಿಬಿ ರಚನೆ ಮಾಡಿದ್ದೇ ಅದಕ್ಕೆ ಸಾಕ್ಷಿಯಾಗಿದೆ. ಹಾಗಾದ್ರೆ ಸ್ಟೀಲ್ ಬ್ರಿಜ್ಡ್ ಯಾಕೆ ವಾಪಾಸ್ ಹೋಯ್ತು? ಕಿಕ್ ಬ್ಯಾಕ್ ಆರೋಪ ಬಂದಿದ್ದಕ್ಕೆ ವಾಪಾಸ್ ಹೋಯ್ತುಲ್ಲಾ ಅಂತ ಟಾಂಗ್ ನೀಡಿದರು. ಇದನ್ನೂ ಓದಿ: ನ. 15ರವರೆಗೆ ಲೋಕಲ್, ಸೆಂಟ್ರಲ್‌ ಟ್ರೈನ್‌ಗಳಲ್ಲಿ ರೈಲ್‌ ನೀರ್‌ ಪೂರೈಕೆ ನಿಲ್ಲಿಸಿದ IRTC

    ಎಸ್.ಸಿ, ಎಸ್ಟಿ ಕ್ರೆಡಿಟ್ ವಾರ್ ವಿಚಾರಕ್ಕೆ ಮಾತನಾಡಿ, ಎಸ್.ಸಿ, ಎಸ್.ಟಿ ಮೀಸಲಾತಿ ಹೆಚ್ಚಿಸಿದ್ದು ಬಿಜೆಪಿ. ಸುಮ್ಮನೆ ಆಯೋಗ ರಚನೆ ಮಾಡಿದ್ದೇವೆ ಎಂದರೆ ಹೇಗೆ? ಆಗಲೇ ಜಾರಿ ಮಾಡಬಹುದಿತ್ತಲ್ಲ? ಯಾಕೆ ಮಾಡಿಲ್ಲ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಶ್ನಿಸಿದರು. ಸುಮ್ಮನೆ ಜನರ ಕಣ್ಣು ಒರೆಸುವುದಕ್ಕೆ ಆಯೋಗ ರಚನೆ ಮಾಡ್ಕೊಂಡು ಬಂದರು. ಆದರೆ, ಸಾಮಾಜಿಕ ನ್ಯಾಯ ಕೊಡುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ. ಯಾರು ಮೀಸಲಾತಿ ಹೆಚ್ಚು ಮಾಡಿದ್ದಾರೆ ಅಂತಾ ಆಯಾ ಜನಾಂಗಕ್ಕೆ ಗೊತ್ತಿದೆ ಎಂದರು. ಇದನ್ನೂ ಓದಿ: ಮನೆಯನ್ನು ಒಂದಿಂಚು ಜಾಸ್ತಿ ಒಡೆದ್ರೂ ಕಲ್ಲೇಟು- ಅಧಿಕಾರಿಗಳಿಗೆ ಮನೆ ಮಾಲೀಕ ಅವಾಜ್

    ಸ್ವಪಕ್ಷದಿಂದ ಕಿರುಕುಳ ಎಂಬ ಜನಾರ್ದನ ರೆಡ್ಡಿ ಅವರ ಹೇಳಿಕೆಗೆ ಮಾತನಾಡಿದ ಅವರು, ಎಲ್ಲಾ ಸುಳ್ಳು. ಯಾರೂ ಕಿರುಕುಳ ಕೊಡಲ್ಲ, ಜನಾರ್ದನ್ ರೆಡ್ಡಿ ಆರಾಮಾಗಿದ್ದಾರೆ. ಪಕ್ಷದಲ್ಲಿ ಆ ರೀತಿ ನಡೆದಿಲ್ಲ ಎಂದರು. ಈ ವೇಳೆ ಬಿಜೆಪಿ ಮುಖಂಡರಾದ ಎಮ್.ಎಸ್ ಕರಿಗೌಡ್ರ, ರವೀಂದ್ರನಾಥ ದಂಡಿನ, ರಾಜು ಕುರುಡಗಿ, ನಗರಸಭೆ ಅಧ್ಯಕ್ಷೆ ಉಷಾ ದಾಸರ ಸೇರಿದಂತೆ ಪಕ್ಷದ ಅನೇಕ ಕಾರ್ಯಕರ್ತರು ಇದ್ದರು.

    Live Tv
    [brid partner=56869869 player=32851 video=960834 autoplay=true]