Tag: BC Patil

  • ರೈತರ ಟ್ರ್ಯಾಕ್ಟರ್‌ಗಳಿಗೆ ಡೀಸೆಲ್ ಸಬ್ಸಿಡಿ, ಮಹಿಳೆಯರಿಗೆ ಪ್ರತ್ಯೇಕ ಕೃಷಿ ಪಂಡಿತ ಪ್ರಶಸ್ತಿ ನೀಡಲು ನಿರ್ಧಾರ: ಬಿ.ಸಿ.ಪಾಟೀಲ್

    ರೈತರ ಟ್ರ್ಯಾಕ್ಟರ್‌ಗಳಿಗೆ ಡೀಸೆಲ್ ಸಬ್ಸಿಡಿ, ಮಹಿಳೆಯರಿಗೆ ಪ್ರತ್ಯೇಕ ಕೃಷಿ ಪಂಡಿತ ಪ್ರಶಸ್ತಿ ನೀಡಲು ನಿರ್ಧಾರ: ಬಿ.ಸಿ.ಪಾಟೀಲ್

    ಬೆಂಗಳೂರು: ರೈತರ ಟ್ರ್ಯಾಕ್ಟರ್‌ಗಳಿಗೆ ಡೀಸೆಲ್ ಸಬ್ಸಿಡಿ ನೀಡಲಾಗುತ್ತಿದೆ. ಇದು ಕೂಡ ದೇಶದಲ್ಲೇ ಮೊದಲ ಬಾರಿಗೆ ಜಾರಿಯಾಗಿದೆ. ಮಹಿಳೆಯರಿಗೆ ಪ್ರತ್ಯೇಕ ಕೃಷಿ ಪಂಡಿತ ಪ್ರಶಸ್ತಿ ಕೊಡಲು ನಿರ್ಧರಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ತಿಳಿಸಿದರು.

    ಮಲ್ಲೇಶ್ವರಂ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಡೈರೆಕ್ಟರೇಟ್ ಆಫ್ ಸೆಕೆಂಡರಿ ಅಗ್ರಿಕಲ್ಚರ್ ರಚನೆ ಕುರಿತ ಪ್ರಧಾನಿ ನರೇಂದ್ರ ಮೋದಿಯವರ ಕನಸನ್ನು ಕರ್ನಾಟಕದಲ್ಲಿ ದೇಶದಲ್ಲೇ ಪ್ರಥಮ ಬಾರಿಗೆ ನನಸು ಮಾಡಲು ಹೊರಟಿದೆ. ರಾಜ್ಯದಲ್ಲಿ ಡೈರೆಕ್ಟರೇಟ್ ಆಫ್ ಸೆಕೆಂಡರಿ ಅಗ್ರಿಕಲ್ಚರ್ ಯೋಜನೆ ಮೂಲಕ ಕೃಷಿ ತೋಟಗಾರಿಕೆ, ಹೈನುಗಾರಿಕೆ, ಪ್ರಾಣಿಜನ್ಯ ಉತ್ಪನ್ನಗಳ ಸಂಸ್ಕರಣೆ, ಗುಡಿ ಕೈಗಾರಿಕೆ ಮೂಲಕ ರೈತರಿಗೆ ಹೆಚ್ಚಿನ ಆದಾಯ, ಉದ್ಯೋಗ ಹೆಚ್ಚಳ ಸಾಧ್ಯವಾಗಿದೆ. ಕೃಷಿ ಉಪ ಉತ್ಪನ್ನಗಳ ತಯಾರಿಕೆಯೂ ಸಾಧ್ಯವಾಗುತ್ತಿದೆ. ಆತ್ಮನಿರ್ಭರ ಯೋಜನೆಯಡಿ ಆಹಾರ ಸಂಸ್ಕರಣಾ ಘಟಕಗಳನ್ನು ರಚಿಸಲು ಸೆಕೆಂಡರಿ ಡೈರೆಕ್ಟರೇಟ್ ನೆರವಾಗಲಿದೆ. ಇದರಡಿ ಘಟಕಕ್ಕೆ ಪಡೆದ ಸಾಲಕ್ಕೆ ಶೇ.35ರಷ್ಟು ಸಬ್ಸಿಡಿ ಸಿಗಲಿದೆ. ಅಲ್ಲದೆ ರಾಜ್ಯ ಸರ್ಕಾರವು ಶೇ.15 ಸಬ್ಸಿಡಿ ನೀಡಲಿದ್ದು, ಒಟ್ಟು ಶೇ.50 ಸಬ್ಸಿಡಿ ಸಿಗಲಿದೆ ಎಂದು ನುಡಿದರು. ಇದನ್ನೂ ಓದಿ: ಗಳಿಗೆ ತೇರು ಎಳೆಯುವ ಮುನ್ನ ಕುರಾನ್ ಪಠಣ ಮಾಡುವ ಸಂಪ್ರದಾಯವಿದೆ: ಸಯ್ಯದ್ ಸಜ್ಜಾದ್ ಭಾಷಾ ಖಾದ್ರಿ

    ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದಾಗ ರೈತರ ಮಕ್ಕಳಿಗೆ ಕೃಷಿ ಕಾಲೇಜು ಸೇರಲು ಶೇ.40ರಷ್ಟು ಮೀಸಲಾತಿ ಇತ್ತು. 2021ರಲ್ಲಿ ಶೇ.50ಕ್ಕೆ ಮೀಸಲಾತಿಯನ್ನು ಹೆಚ್ಚಿಸಲಾಗಿದೆ. ಕಳೆದ ವರ್ಷ 186 ಜನ ರೈತರ ಮಕ್ಕಳಿಗೆ ಹೆಚ್ಚುವರಿ ಸೀಟು ಲಭಿಸಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ರೈತ ವಿದ್ಯಾನಿಧಿ ಆರಂಭ ಮಾಡಿದ್ದು, ಇದರಿಂದ 7.13 ಲಕ್ಷ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ರೂ.261 ಕೋಟಿ ವಿದ್ಯಾರ್ಥಿವೇತನ ಸಿಕ್ಕಿದೆ. ಇದು ಕೂಡ ದೇಶದಲ್ಲೇ ಮೊದಲು. ಇದರಲ್ಲಿ ಜಾತಿ ಧರ್ಮದ ಭೇದ ಇಲ್ಲ. ಕರ್ನಾಟಕದಲ್ಲಿ ಒಟ್ಟು 742 ರೈತ ಸಂಪರ್ಕ ಕೇಂದ್ರಗಳಿದ್ದು, ಅದರಲ್ಲಿ 694 ಕೃಷಿ ಯಾಂತ್ರೀಕರಣ ಕೇಂದ್ರಗಳನ್ನು ಸ್ಥಾಪಿಸಿ 22 ಲಕ್ಷ ರೈತರು ಪ್ರಯೋಜನ ಪಡೆಯುತ್ತಿದ್ದಾರೆ. ಇಲ್ಲಿ ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಬಾಡಿಗೆಗೆ ಕೊಡಲಾಗುತ್ತಿದೆ. ಟ್ರ್ಯಾಕ್ಟರ್ ಮತ್ತಿತರ ಉಪಕರಣ ಇಲ್ಲದ ರೈತರಿಗೆ ಇದರಿಂದ ಪ್ರಯೋಜನ ಸಿಗುತ್ತಿದೆ. ಕೃಷಿ ಯಂತ್ರೋಪಕರಣ ಬ್ಯಾಂಕ್ ಕೂಡ ಆರಂಭವಾಗಿದೆ ಎಂದರು.

    ರಾಜ್ಯದಲ್ಲಿ ರಸಗೊಬ್ಬರದ ಯಾವುದೇ ಕೊರತೆ ಇಲ್ಲ. 50 ಸಾವಿರ ಮೆಟ್ರಿಕ್ ಟನ್ ಗೊಬ್ಬರವನ್ನು ಈ ವರ್ಷಕ್ಕಾಗಿ ನಾವು ದಾಸ್ತಾನು ಮಾಡಿದ್ದೇವೆ. ಯೂರಿಯಾ 30 ಸಾವಿರ ಮೆಟ್ರಿಕ್‍ಟನ್ ಇದ್ದು, ಡಿಎಪಿ ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನಿದೆ. ಸೂಕ್ಷ್ಮ ನೀರಾವರಿಗೂ ಆದ್ಯತೆ ಕೊಡುತ್ತಿದ್ದು, ನೆರವು ನೀಡಲಾಗುತ್ತಿದೆ. ರಿವಾರ್ಡ್ ರಿಜುವನೇಟಿಂಗ್ ವಾಟರ್‍ಶೆಡ್ ಫಾರ್ ಅಗ್ರಿಕಲ್ಚರ್ ಯೋಜನೆಯು ಕರ್ನಾಟಕಕ್ಕೆ ಸಿಕ್ಕಿದ್ದು, ರಾಜ್ಯದ 21 ಜಿಲ್ಲೆಗಳಲ್ಲಿ 600 ಕೋಟಿ ವೆಚ್ಚದಡಿ ಮುಂದಿನ 5 ವರ್ಷಗಳಲ್ಲಿ ಅನುಷ್ಠಾನಕ್ಕೆ ಬರಲಿದೆ. ನ್ಯೂ ಜನರೇಷನ್ ವಾಟರ್‍ಶೆಡ್ ಯೋಜನೆಯಡಿ 642 ಕೋಟಿ ಮೊತ್ತವನ್ನು 51 ತಾಲೂಕುಗಳಲ್ಲಿ ಖರ್ಚು ಮಾಡುತ್ತಿದ್ದೇವೆ. ಕಳಪೆ ರಸಗೊಬ್ಬರ, ಕಳಪೆ ಬಿತ್ತನೆ ಬೀಜ ಮಾರಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದೇವೆ. ಜಾಗೃತ ದಳವನ್ನು ಪೊಲೀಸ್ ಮಾದರಿಯಲ್ಲಿ ಜಾಗೃತಗೊಳಿಸಿ ಪರಿವರ್ತಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮಸೀದಿಯಿಂದ ಧ್ವನಿವರ್ಧಕ ತೆಗೆಸುವುದು ಸರ್ಕಾರಕ್ಕೆ ನಾಚಿಕೆಗೇಡಿನ ಸಂಗತಿ: ಸಂಜಯ್‌ ನಿರುಪಮ್‌

    ಈ ಬಾರಿ ಬಳ್ಳಾರಿ ಜಿಲ್ಲೆಯ ಹಗರಿ ಹಾಗೂ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಕೃಷಿ ಕಾಲೇಜು ಆರಂಭವಾಗಲಿದೆ. 2020-21ರಲ್ಲಿ ರಾಜ್ಯವು ಕೋವಿಡ್ ಸಂಕಷ್ಟದಲ್ಲಿದ್ದರೂ 160.55 ಲಕ್ಷ ಮೆಟ್ರಿಕ್ ಟನ್ ಆಹಾರವನ್ನು ಉತ್ಪಾದಿಸಲಾಗಿದೆ. ಇದು ಹಿಂದಿನ ವರ್ಷದ ಉತ್ಪಾದನೆಯಲ್ಲಿ ಶೇ.10ರಷ್ಟು ಹೆಚ್ಚಳದ ಸಾಧನೆಯಾಗಿದೆ. ಕೃಷಿಕರು ಕೋವಿಡ್ ಇದ್ದರೂ ಹಿಂದೆ ಸರಿಯದೆ ಇದ್ದುದಕ್ಕೆ ಇದು ಉದಾಹರಣೆ ಎಂದು ಮಾಹಿತಿ ನೀಡಿದರು.

    ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ನಾವು 2019-20ನೇ ಸಾಲಿನಲ್ಲಿ 7.32 ಲಕ್ಷ ಫಲಾನುಭವಿಗಳಿಗೆ 843 ಕೋಟಿ, 20-21ರಲ್ಲಿ 4.60 ಲಕ್ಷ ರೈತರಿಗೆ 580 ಕೋಟಿ ಬೆಳೆ ವಿಮಾ ಪರಿಹಾರ ಕೊಡಲಾಗಿದೆ. 2021ರ ಮುಂಗಾರು ಹಂಗಾಮಿನಲ್ಲಿ 48 ಸಾವಿರಕ್ಕೂ ಹೆಚ್ಚು ಫಲಾನುಭವಿಗಳಿಗೆ ಬೆಳೆ ಹಾನಿಗೆ ಸಂಬಂಧಿಸಿ 25.15 ಕೋಟಿ ಬೆಳೆ ವಿಮೆ ಪರಿಹಾರವನ್ನು ಇತ್ಯರ್ಥ ಪಡಿಸಲಾಗಿದೆ ಎಂದು ವಿವರ ನೀಡಿದರು. ಇದನ್ನೂ ಓದಿ: ಪರ್ಸೆಂಟೇಜ್ ಕೊಡದಿದ್ದರೆ ಗುದ್ದಲಿ ಪೂಜೆನೂ ಮಾಡಲ್ಲ: ಸಿದ್ದಣ್ಣ ಶೇಗಜಿ

    ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 2020-21 ಸಾಲಿನಲ್ಲಿ ರಾಜ್ಯದಿಂದ 49.18 ಲಕ್ಷ ರೈತರಿಗೆ 983.71 ಕೋಟಿ ಹಣವನ್ನು ನೇರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗಿದೆ. 2021-22ರಲ್ಲಿ ಇದುವರೆಗೆ 50,035 ರೈತರಿಗೆ 1,977 ಕೋಟಿ ರೂ. ಆರ್ಥಿಕ ನೆರವು ನೀಡಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಸೇರಿ 2020-21 ಸಾಲಿನಲ್ಲಿ 52 ಲಕ್ಷಕ್ಕೂ ಹೆಚ್ಚು ರೈತರಿಗೆ 3,113 ಕೋಟಿ ಹಾಗೂ 2021-22ರಲ್ಲಿ 53 ಲಕ್ಷಕ್ಕೂ ಹೆಚ್ಚು ರೈತರಿಗೆ 2,809 ಕೋಟಿ ಹಣವನ್ನು ಇದುವರೆಗೆ ನೀಡಿದೆ ಎಂದರು.

    2017ರವರೆಗೆ ಗ್ರಾಮಲೆಕ್ಕಿಗರು ಕಟ್ಟೆ ಮೇಲೆ ಕುಳಿತು ಬೆಳೆ ಸಮೀಕ್ಷೆ ನಡೆಸುತ್ತಿದ್ದರು. ಇದೀಗ ಜಿಪಿಎಸ್ ಅಳವಡಿಸಿ ಸಮೀಕ್ಷೆ ಮಾಡಲಾಗುತ್ತಿದೆ. 2020ರಲ್ಲಿ ನನ್ನ ಬೆಳೆ ನನ್ನ ಹಕ್ಕು ಕಾರ್ಯಕ್ರಮದ ಮೂಲಕ ರೈತರಿಂದಲೇ ಬೆಳೆ ಸಮೀಕ್ಷೆ ಮಾಡುತ್ತಿದ್ದು, 46 ಲಕ್ಷ ಪ್ಲಾಟ್‍ಗಳಲ್ಲಿ ರೈತರೇ ಬೆಳೆ ಸಮೀಕ್ಷೆ ಮಾಡಿದ್ದಾರೆ. ಇದರಿಂದ ಬೆಳೆ ಉತ್ಪಾದನೆ ಸಂಬಂಧ ಏರಿಳಿತದ ಸಮಸ್ಯೆ ಪರಿಹಾರವಾಗಿದ್ದು, ರೈತರಿಗೆ ಅನುಕೂಲವಾಗುತ್ತಿದೆ ಎಂದು ತಿಳಿಸಿದರು.

    ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ನಂಜುಂಡೇಗೌಡ ಮತ್ತು ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಜಿ.ಮಂಜುನಾಥ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

  • ಒಂದು ಧರ್ಮದವ್ರು ಇನ್ನೊಂದು ಧರ್ಮದವ್ರಿಗೆ ತೊಂದ್ರೆ ಕೊಡೋದು ಸರಿಯಲ್ಲ: ಬಿ.ಸಿ ಪಾಟೀಲ್

    ಒಂದು ಧರ್ಮದವ್ರು ಇನ್ನೊಂದು ಧರ್ಮದವ್ರಿಗೆ ತೊಂದ್ರೆ ಕೊಡೋದು ಸರಿಯಲ್ಲ: ಬಿ.ಸಿ ಪಾಟೀಲ್

    ಗದಗ: ಎಲ್ಲರೂ ಸೌಹಾರ್ದಯುತವಾಗಿ ಬಾಳಬೇಕು ಎನ್ನುವುದು ಎಲ್ಲರ ಆಶಯ. ಸಂವಿಧಾನ ಬದ್ಧವಾಗಿ ಅವರವರ ಧರ್ಮ ಪಾಲಿಸಲು ಅವಕಾಶವಿದೆ. ಆದರೆ ಒಂದು ಧರ್ಮದವರು ಇನ್ನೊಂದು ಧರ್ಮದವರಿಗೆ ತೊಂದರೆ ಕೊಡುವುದು ಸರಿಯಲ್ಲ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿಕೆ ನೀಡಿದರು.

    ನಗರದ ಹೊರವಲಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಆವರಣದಲ್ಲಿ ಗೋಶಾಲೆ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಪಾಟೀಲ್, ಧಾರವಾಡ ಪ್ರಕರಣ ಏನಾಗಿದೆ ಎಂಬುದು ಗೊತ್ತಿಲ್ಲ. ಸಚಿವ ಮಾಧುಸ್ವಾಮಿ ಹೇಳಿಕೆ ಗಮನಿಸಿಲ್ಲ ಎಂಬ ಹಾರಿಕೆ ಉತ್ತರ ನೀಡಿ, ಜಾರಿಕೊಳ್ಳುವ ಕೆಲಸ ಮಾಡಿದರು. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿಯವರು ಗೊಂದಲ ಮೂಡಿಸುವ ಕೆಲಸ ಮಾಡಬಾರದು: ಬಿಎಸ್‍ವೈ

    ಯಾರೋ ಟೀಕೆ ಮಾಡುತ್ತಾರೆಂದು ಮುಖ್ಯಮಂತ್ರಿಗಳು ನಡು ರಸ್ತೆಯಲ್ಲಿ ಲಾಠಿ ಹಿಡಿದು ನಿಲ್ಲಲು ಸಾಧ್ಯವಿಲ್ಲ. ಯಾವುದೋ ಸರ್ಕಲ್‌ನಲ್ಲಿ ನಿಂತು ಚರ್ಚೆ ಮಾಡುವ ಅಗತ್ಯವೂ ಇಲ್ಲ ಎಂದು ಕಾಂಗ್ರೆಸ್ ನಾಯಕರ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಸಿಎಂ ಬಸವರಾಜ ಬೊಮ್ಮಾಯಿ ಬಸವಣ್ಣನೂ ಹೌದು, ಬಸವರಾಜು ಹೌದು. ಆದರೆ ಮೂಖ ಬಸವಣ್ಣ ಅಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆಗೆ ಸೂಕ್ತ ನಿರ್ದೇಶನ ನೀಡಿದ್ದಾರೆ. ಆದರೂ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿಗಳು ಮಧ್ಯಪ್ರವೇಶ ಮಾಡುತ್ತಿಲ್ಲ ಎಂಬ ಹೇಳಿಕೆ ಸರಿಯಲ್ಲ ಎಂದರು. ಇದನ್ನೂ ಓದಿ: ಶಾಸ್ತ್ರದ ಪ್ರಕಾರ ವಿಶ್ವಕರ್ಮ ಜನಾಂಗದವರೇ ದೇವರ ಪ್ರತಿಮೆ ಕೆತ್ತಬೇಕು: ಡಾ. ಜ್ಞಾನನಂದ

    ನಮಗೆ ರಾಜ್ಯದ ಜನತೆ ಅಧಿಕಾರ ಕೊಟ್ಟಿದ್ದಾರೆ. ಅವರ ಬೇಕು-ಬೇಡಗಳನ್ನು ಈಡೇರಿಸುವ ಜವಾಬ್ದಾರಿ ನಮ್ಮ ಮೇಲಿದೆ. ಸಿದ್ದರಾಮಯ್ಯ ಹಾಗೂ ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಅವರಿಗೆ ಮಾಡಲು ಕೆಲಸವಿಲ್ಲ. ವಿನಾಕಾರಣ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

    ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್‌ವಿ ಸಂಕನೂರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಗಮೇಶ್ ದುಂದೂರ, ರಾಜ್ಯ ದ್ರಾಕ್ಷಾರಸ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಾಂತಿಲಾಲ್ ಬನ್ಸಾಲಿ ಉಪಸ್ಥಿತರಿದ್ದರು.

  • ಬದಾಮಿಯಲ್ಲಿ ಬೀಡು ಬಿಟ್ಟಿತ್ತು ಯೋಗರಾಜ್ ಭಟ್‌ & ಟೀಮ್

    ಬದಾಮಿಯಲ್ಲಿ ಬೀಡು ಬಿಟ್ಟಿತ್ತು ಯೋಗರಾಜ್ ಭಟ್‌ & ಟೀಮ್

    ಯೋಗರಾಜ್ ಭಟ್ ನಿರ್ದೇಶನದ, ವನಜಾ ಪಾಟೀಲ್ ನಿರ್ಮಾಣದ ಗರಡಿ ಚಿತ್ರದ ಚಿತ್ರೀಕರಣ ಕನ್ನಡ ನಾಡಿನ ಐತಿಹಾಸಿಕ ತಾಣ ಬಾದಾಮಿಯಲ್ಲಿ ನಡೆದಿದೆ. ಸೂರ್ಯ ನಾಯಕನಾಗಿ ನಟಿಸುತ್ತಿರುವ, ಸೋನಾಲ್ ಮಾಂಟೆರೊ ನಾಯಕಿಯಾಗಿ ನಟಿಸುತ್ತಿರುವ ಈ ಸಿನಿಮಾದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದನ್ನೂ ಓದಿ: ಮೂರು ದಿನಕ್ಕೆ 500 ಕೋಟಿ ಬಾಚಿದ ಆರ್.ಆರ್.ಆರ್: ಬಾಕ್ಸ್ ಆಫೀಸ್ ಚಿಂದಿಚಿತ್ರಾನ್ನ

    ಈ ಸುಂದರ ತಾಣದಲ್ಲಿ “ಗರಡಿ” ಚಿತ್ರದ ಟೈಟಲ್ ಸಾಂಗ್ ಅದ್ದೂರಿಯಾಗಿ ಚಿತ್ರೀಕರಣಗೊಂಡಿದೆ. ಕರ್ನಾಟಕ ರಾಜ್ಯದ ಮಂತ್ರಿಗಳು, ನಟರು, ನಿರ್ಮಾಪಕರೂ ಆಗಿರುವ ಕೌರವ ಬಿ.ಸಿ.ಪಾಟೀಲ್ ಈ ಹಾಡಿನ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಗರಡಿ ಮನೆಯಲ್ಲಿ ತರಭೇತಿ ಪಡೆದಿರುವ ಸಾಕಷ್ಟು ಕುಸ್ತಿಪಟುಗಳು ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.  ಬರೀ ಹಾಡಿನ ಚಿತ್ರೀಕರಣವಷ್ಟೇ ಅಲ್ಲದೇ ನಾಯಕ ಸೂರ್ಯ, ನಾಯಕಿ ಸೋನಾಲ್ ಮಾಂಟೆರೊ, ಕೌರವ ಬಿ‌.ಸಿ.ಪಾಟೀಲ್ ಮುಂತಾದವರ ಅಭಿನಯದಲ್ಲಿ ಮಾತಿನ ಭಾಗದ ಚಿತ್ರೀಕರಣ ಸಹ ನಡೆದಿದೆ. ಇದನ್ನೂ ಓದಿ : ಕೆಜಿಎಫ್ ಸಿನಿಮಾ ಆಗೋಕೆ ಮೂವರು ಮಹಿಳೆಯರು ಕಾರಣ: ವಿಜಯ್ ಕಿರಗಂದೂರು

    ಬಹಳ ದಿನಗಳ ನಂತರ ಯೋಗರಾಜ್ ಭಟ್ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ. ಇದನ್ನೂ ಓದಿ: ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ವೇದಿಕೆಯಲ್ಲೇ ಕಪಾಳಮೋಕ್ಷ: ಅತ್ಯುತ್ತಮ ನಟ ಆಸ್ಕರ್ ವಿಜೇತ ವಿಲ್ ಸ್ಮಿತ್ ಉಗ್ರತಾಪ

    ವಿ.ಹರಿಕೃಷ್ಣ ಅವರ ಸುಮಧುರ ಸಂಗೀತ, ನಿರಂಜನ್ ಬಾಬು ಛಾಯಾಗ್ರಹಣ, ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಹಾಗೂ ಹೊಸ್ಮನೆ ಮೂರ್ತಿ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಸೂರ್ಯ, ಸೋನಾಲ್ ಮಾಂಟೆರೊ, ಕೌರವ ಬಿ.ಸಿ.ಪಾಟೀಲ್, ರವಿಶಂಕರ್, ಎಸ್.ಟಿ.ಸೋಮಶೇಖರ್, ಬಲ ರಾಜವಾಡಿ, ಚೆಲುವರಾಜು, ರಾಘವೇಂದ್ರ, ಸೂರಜ್ ಬೇಲೂರ್, ಕಾಮಿಡಿ ಕಿಲಾಡಿಗಳು ನಯನ, ತ್ರಿವೇಣಿ(ಟಗರು), ರವಿಚೇತನ್, ತೇಜಸ್ವಿನಿ ಪ್ರಕಾಶ್ ಮುಂತಾದವರು “ಗರಡಿ” ಚಿತ್ರದ ತಾರಾಬಳಗದಲ್ಲಿದ್ದಾರೆ.

  • Exclusive Photos – ಗರಡಿಗಾಗಿ ಬಣ್ಣ ಹಚ್ಚಿದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್

    Exclusive Photos – ಗರಡಿಗಾಗಿ ಬಣ್ಣ ಹಚ್ಚಿದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್

    ಯೋಗರಾಜ್ ಭಟ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಗರಡಿ’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ ಸಹಕಾರ ಸಚಿವ ಎಸ್.ಟಿ ಸೋಮಶೇಖರ್. ಮತ್ತೋರ್ವ ಸಚಿವ ಬಿ.ಸಿ. ಪಾಟೀಲ್ ನಿರ್ಮಾಣದಲ್ಲಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ಗೆಳೆಯನಿಗಾಗಿ ಪಾತ್ರ ಮಾಡಿದೆ ಎಂದಿದ್ದಾರೆ ಸೋಮಶೇಖರ್. ಇದನ್ನೂ ಓದಿ : ಜೇಮ್ಸ್ ಚಿತ್ರದ ಬೆಳಗ್ಗಿನ 6 ಗಂಟೆಯ 200 ಶೋಗಳ ಟಿಕೆಟ್ ಸೋಲ್ಡ್ ಔಟ್: ಏನೆಲ್ಲ ದಾಖಲೆ?

    “ನನಗೆ ನಟನೆಯ ಗಂಧಗಾಳಿ ಗೊತ್ತಿಲ್ಲ. ಗೆಳೆಯ ಪಾಟೀಲರು ಅವರ ಸಿನಿಮಾದಲ್ಲಿ ನಟಿಸುವಂತೆ ಕೇಳಿದರು. ಗೆಳೆಯನ ಪ್ರೀತಿಗಾಗಿ ಬಣ್ಣ ಹಚ್ಚಿದೆ. ನಾನು ಪಾತ್ರ ಮಾಡುತ್ತಿರುವುದರಿಂದ ಬೇರೊಬ್ಬ ನಟನ ಅವಕಾಶ ಕಸಿದುಕೊಂಡೆ ಅನಿಸುತ್ತಿದೆ’ ಎಂದಿದ್ದಾರೆ ಸಚಿವರು. ಇದನ್ನೂ ಓದಿ : ರಾಮ್ ಗೋಪಾಲ ವರ್ಮಾ ಡೇಂಜರೆಸ್ ಹುಡುಗಿ ಅಂತ ಹೇಳಿದ್ದು ಯಾರಿಗೆ?

    ಈ ಸಿನಿಮಾದಲ್ಲಿ ಅವರು ಸೋಮಣ್ಣ ಎನ್ನುವ ಪಾತ್ರ ನಿರ್ವಹಿಸುತ್ತಿದ್ದಾರೆ. ಅದು ಬಿ.ಸಿ. ಪಾಟೀಲ್ ಗೆಳೆಯನ ಪಾತ್ರವೇ ಎನ್ನುವುದು ವಿಶೇಷ. ಈ ಸಿನಿಮಾದಲ್ಲಿ ಪಾಟೀಲ್ ರು ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಇದನ್ನೂ ಓದಿ : ರಣಬೀರ್ ಮತ್ತು ಆಲಿಯಾ ಮದ್ವೆ ಡೇಟ್ ಮತ್ತೆ ಬದಲು: ಪ್ರಣಯ ಹಕ್ಕಿಗಳ ಪ್ರಲಾಪ

    “ಬೆಳಗ್ಗೆ ನಿರ್ದೇಶಕ ಯೋಗರಾಜ್ ಭಟ್ಟರು ನನ್ನ ಪಾತ್ರವನ್ನು ವಿವರಿಸಿದರೆ, ಡೈಲಾಗ್ ಹೇಳಿದರು. ಅವರು ಏನು ಹೇಳಿದರೋ ಅಷ್ಟನ್ನು ಮಾಡಿದ್ದೇನೆ. ಅದರಾಚೆ ನನಗೆ ನಟನೆ ಬಾರದು. ಪ್ರೇಕ್ಷಕರು ನನ್ನ ಪಾತ್ರವನ್ನು ಹೇಗೆ ಸ್ವೀಕರಿಸುತ್ತಾರೋ ಗೊತ್ತಿಲ್ಲ’ ಎನ್ನುವುದು ಸೋಮಶೇಖರ್ ಮಾತು. ಇದನ್ನೂ ಓದಿ : ನಟ ಚೇತನ್ ಗಡಿಪಾರು? : ಹೋರಾಟಗಳೇ ನಟನಿಗೆ ಮುಳುವಾಗುತ್ತಾ..?

    ಬೆಂಗಳೂರಿನ ಜಿ.ವಿ ಅಯ್ಯರ್ ಸ್ಟುಡಿಯೋದಲ್ಲಿ ಸಿನಿಮಾದ ಚಿತ್ರೀಕರಣ ನಡೆದಿದೆ. ಬಿ.ಸಿ.ಪಾಟೀಲ್, ಸೋಮಶೇಖರ್, ಚಿತ್ರದ ನಾಯಕ ಯಶಸ್ ಸೂರ್ಯ ಸೇರಿದಂತೆ ಹಲವು ಕಲಾವಿದರು ಭಾಗಿಯಾಗಿದ್ದರು. ಇದನ್ನೂ ಓದಿ: ಕಂಗನಾಳನ್ನು ಹೀರೋಯಿನ್ ಮಾಡಿದ್ದು ಆ ಜ್ಯೋತಿಷಿ: ಅಸಲಿ ಸತ್ಯ ಬಾಯ್ಬಿಟ್ಟ ನಟ ಪ್ರಭಾಸ್

    ಅಂದಹಾಗೆ ಗಾಳಿಪಟ 2 ಸಿನಿಮಾದ ನಂತರ ಯೋಗರಾಜ್ ಭಟ್ ನಿರ್ದೇಶನ ಮಾಡಿರುವ ಚಿತ್ರವಿದು. ಹಳ್ಳಿ ಸೊಗಡಿನಲ್ಲಿ ಕಥೆಯನ್ನು ಈ ಸಿನಿಮಾದ ಮೂಲಕ ಹೇಳಲು ಹೊರಟಿದ್ದಾರಂತೆ ನಿರ್ದೇಶಕರು. ಇಂತಹ ಕಥೆಯನ್ನು ಅವರು ಇದೇ ಮೊದಲ ಬಾರಿಗೆ ಆಯ್ಕೆ ಮಾಡಿಕೊಂಡಿದ್ದಾರಂತೆ ಯೋಗರಾಜ್ ಭಟ್.

  • ಮಾರ್ಚ್ ಅಂತ್ಯಕ್ಕೆ 100 ಕೃಷಿ ಸಂಜೀವಿನಿ ವಾಹನಗಳು ಲೋಕಾರ್ಪಣೆ: ಬಿ.ಸಿ ಪಾಟೀಲ್

    ಮಾರ್ಚ್ ಅಂತ್ಯಕ್ಕೆ 100 ಕೃಷಿ ಸಂಜೀವಿನಿ ವಾಹನಗಳು ಲೋಕಾರ್ಪಣೆ: ಬಿ.ಸಿ ಪಾಟೀಲ್

    ಬೆಂಗಳೂರು: ರೈತರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಅಂಬುಲೆನ್ಸ್ ಮಾದರಿಯ 100 ಕೃಷಿ ಸಂಜೀವಿನಿ ವಾಹನಗಳು ಮಾರ್ಚ್ ಅಂತ್ಯಕ್ಕೆ ಲೋಕಾರ್ಪಣೆಗೊಳ್ಳಲಿವೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ತಿಳಿಸಿದ್ದಾರೆ.

    ವಿಧಾನ ಪರಿಷತ್ ಕಲಾಪದಲ್ಲಿ ನಿಯಮ 330ರ ಅಡಿ ಜೆಡಿಎಸ್ ಸದಸ್ಯ ಗೋವಿಂದ್ ರಾಜು ಪ್ರಸ್ತಾಪ ಮಾಡಿದ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಬಿ.ಸಿ ಪಾಟೀಲ್, ಮಾರ್ಚ್ ಅಂತ್ಯಕ್ಕೆ 100 ಕೃಷಿ ಸಂಜೀವಿನಿ ವಾಹನಗಳನ್ನು ಲೋಕಾರ್ಪಣೆ ಮಾಡುವ ಬಗ್ಗೆ ತಿಳಿಸಿದರು.

    ಮಣ್ಣಿನ ಗುಣಮಟ್ಟ, ಕೀಟ ನಾಶಕಗಳಿಂದಾಗುವ ಸಮಸ್ಯೆ ಸೇರಿದಂತೆ ಅನೇಕ ಇತರ ಸಮಸ್ಯೆಗಳನ್ನು ರೈತ ಎದುರಿಸುತ್ತಿದ್ದಾನೆ. ಕೃಷಿ ಸಂಜೀವಿನಿ ಸಕಾಲದಲ್ಲಿ ಬೆಳೆಯ ಎಲ್ಲಾ ಹಂತಗಳಲ್ಲಿ ಸರ್ವೇಕ್ಷಣೆಯನ್ನು ಕೈಗೊಂಡು ಕಂಡುಬಂದಿರುವ ಕೀಟ, ರೋಗ, ಕಳೆಗಳ ನಿರ್ವಹಣಾ ಮಾರ್ಗೋಪಾಯಗಳನ್ನು ಆತನ ಜಮೀನಿಗೆ ಹೋಗಿ ಮಣ್ಣಿನ ಪರೀಕ್ಷೆ ನಡೆಸಿ ಸ್ಥಳದಲ್ಲಿಯೇ ಸಮಸ್ಯೆಗೆ ಪರಿಹಾರ ನೀಡುವ ಯೋಜನೆ ಇದಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಬಿಜೆಪಿಯದ್ದು ಸಬ್ ಕಾ ವಿಕಾಸ್ ನಹೀ ಹೇ, ಸಬ್ ಕಾ ಸರ್ವ ನಾಶ್ ಹೇ: ಸಿದ್ದರಾಮಯ್ಯ

    ಅಂಬುಲೆನ್ಸ್ ಮಾದರಿ ವಾಹನ ಇದಾಗಿದ್ದು, ಒಬ್ಬ ಕೃಷಿ ಡಿಪ್ಲೋಮಾ ಪದವೀಧರ ಇದರಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಸ್ಥಳದಲ್ಲಿ ರೈತರ ಸಮಸ್ಯೆಗೆ ಪರಿಹಾರ ನೀಡುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಕೊರೊನಾದಿಂದ ಮೃತಪಟ್ಟ ರೈತರ ಸಾಲಮನ್ನಾ ಅಸಾಧ್ಯ: ಎಸ್.ಟಿ. ಸೋಮಶೇಖರ್

    ಈಗಾಗಲೇ ಕೊಪ್ಪಳದಲ್ಲಿ ನಾನು ಉಸ್ತುವಾರಿ ಸಚಿವನಾಗಿದ್ದಾಗ 24 ಕೃಷಿ ಸಂಜೀವಿನಿ ವಾಹನಗಳನ್ನು ಪೈಲಟ್ ಪ್ರಾಜೆಕ್ಟ್ ರೂಪದಲ್ಲಿ ಜಾರಿ ಮಾಡಿದ್ದೆ. ಇದನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಲಾಗಿತ್ತು. ಹೀಗಾಗಿ ಇದನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡಲು ತೀರ್ಮಾನ ಮಾಡಲಾಗಿದೆ. 164 ವಾಹನಗಳಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ. ಮಾರ್ಚ್ ಅಂತ್ಯಕ್ಕೆ 100 ವಾಹನ ಲೋಕಾರ್ಪಣೆಗೊಳ್ಳಲಿದೆ. ಉಳಿದ ವಾಹನ ಏಪ್ರಿಲ್‌ನಲ್ಲಿ ಸಿದ್ಧವಾಗಲಿವೆ ಎಂದು ಮಾಹಿತಿ ನೀಡಿದರು.

  • ಉಕ್ರೇನ್‌ನಲ್ಲಿ ಶೆಲ್ ದಾಳಿಗೆ ಮಡಿದ ಕನ್ನಡಿಗನಿಗೆ ಸ್ಯಾಂಡಲ್ ವುಡ್ ಕಣ್ಣೀರು

    ಉಕ್ರೇನ್‌ನಲ್ಲಿ ಶೆಲ್ ದಾಳಿಗೆ ಮಡಿದ ಕನ್ನಡಿಗನಿಗೆ ಸ್ಯಾಂಡಲ್ ವುಡ್ ಕಣ್ಣೀರು

    ಉಕ್ರೇನ್‌ನ ಖಾರ್ಕೀವ್ ನೆಲದಲ್ಲಿ ನಡೆದ ಶೆಲ್ ದಾಳಿಯ ವೇಳೆ ಕರ್ನಾಟಕದ ಹಾವೇರಿ ಮೂಲದ ವೈದ್ಯಕೀಯ ವಿದ್ಯಾರ್ಥಿಯಾಗಿರುವ ನವೀನ್ ನಿಧನಕ್ಕೆ ಸ್ಯಾಂಡಲ್ ವುಡ್ ಕಂಬನಿ ಮಿಡಿದಿದೆ. ಈ ಕುರಿತು ನಟಿ, ಮಾಜಿ ಸಂಸದೆ ರಮ್ಯಾ ಟ್ವೀಟ್ ಮಾಡಿ, ಸಂತಾಪ ಸೂಚಿಸಿದ್ದಾರೆ. ನಿಮ್ಮನ್ನು ಕಳೆದುಕೊಂಡಿರುವ ತಂದೆ ತಾಯಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಅವರು ಬರೆದುಕೊಂಡಿದ್ದಾರೆ. ಇದನ್ನೂ ಓದಿ : ಅದ್ಧೂರಿ ಸಮಾರಂಭದಲ್ಲಿ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಹೀರೋ ಆಗಿ ಲಾಂಚ್

    ನಟ ನೀನಾಸಂ ಸತೀಶ್ ಕೂಡ ನವೀನ್ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಎದೆಯುದ್ದ ಬೆಳೆದ ಮಕ್ಕಳನ್ನು ತಂದೆ ತಾಯಿಗಳು ಕಳೆದುಕೊಂಡಾಗಿನ ದುಃಖ ಯಾರಿಗೂ ಬರಬಾರದು. ನವೀನ್ ವೈದ್ಯನಾಗಿ ಅದೆಷ್ಟೋ ಜೀವ ಉಳಿಸುತ್ತಿದ್ದ, ಇದೀಗ ಯುದ್ಧದಾಹಿಗಳ ದಾಹಕ್ಕೆ ಬಲಿಯಾಗಿದ್ದಾರೆ. ಅವರ ಕುಟುಂಬಕ್ಕೆ ನೋವು ತಡೆದುಕೊಳ್ಳುವ ಶಕ್ತಿ ಬರಲಿ ಎಂದಿದ್ದಾರೆ.  ಇದನ್ನೂ ಓದಿ : ದುನಿಯಾ ವಿಜಯ್ ಹೊಸ ಚಿತ್ರಕ್ಕೆ ಟೈಟಲ್ ಫಿಕ್ಸ್

    ನಟ, ನಿರ್ಮಾಪಕ ಮತ್ತು ಕೃಷಿ ಮಂತ್ರಿಯೂ ಆಗಿರುವ ಬಿ.ಸಿ.ಪಾಟೀಲ್ ಕೂಡ  ಮೃತ ನವೀನ್ ಗಾಗಿ ಕಂಬನಿ ಮಿಡಿದಿದ್ದಾರೆ. “ನವೀನ್ ಜ್ಞಾನಗೌಡರ್ ಮೃತಪಟ್ಟ ಸುದ್ದಿ ಅತೀವ ದುಃಖ ತಂದಿದೆ. ಅವರು ಕುಟುಂಬಕ್ಕೆ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ದೇವರು ದಯಪಾಲಿಸಲಿ” ಎಂದು ಟ್ವಿಟ್ ಮಾಡಿದ್ದಾರೆ. ಸ್ಯಾಂಡಲ್ ವುಡ್ ನ ಸಾಕಷ್ಟು ನಿರ್ದೇಶಕರು, ನಟರು ಮತ್ತು ತಂತ್ರಜ್ಞರು ಕೂಡ ಕನ್ನಡಿಗ ಸಾವಿಗೆ ಕಂಬನಿ ಮಿಡಿದಿದ್ದಾರೆ.

  • ಆತ್ಮಹತ್ಯೆಗೆ ಯತ್ನಿಸಿದ ರೈತನ ಬದುಕು ಬದಲಾಯಿಸಿದ ‘ಸಮಗ್ರ ಕೃಷಿ ಪದ್ಧತಿ’: ಬಿ.ಸಿ.ಪಾಟೀಲ್

    ಆತ್ಮಹತ್ಯೆಗೆ ಯತ್ನಿಸಿದ ರೈತನ ಬದುಕು ಬದಲಾಯಿಸಿದ ‘ಸಮಗ್ರ ಕೃಷಿ ಪದ್ಧತಿ’: ಬಿ.ಸಿ.ಪಾಟೀಲ್

    ಬೆಂಗಳೂರು: ‘ಸಮಗ್ರ ಕೃಷಿ ಪದ್ಧತಿ’ ಆತ್ಮಹತ್ಯೆಗೆ ಯತ್ನಿಸಿದ್ದವನ ಬದುಕನ್ನು ಬದಲಾಯಿಸಿ ಮಾದರಿ ರೈತನನ್ನಾಗಿ ಮಾಡಿದೆ. ಇಂತಹ ಮಾದರಿ ರೈತ ‘ದುರ್ಗಪ್ಪ ಅಂಗಡಿ’ ಅವರನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್ ಖುದ್ದು ಕಚೇರಿಗೆ ಕರೆಯಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

    ದುರ್ಗಪ್ಪ ಅಂಗಡಿ ಅವರ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಡಿಮೆ ನೀರಿನಲ್ಲಿಯೂ ಕೃಷಿ ಸಾಧನೆ ಮಾಡುವ ಕೋಲಾರದ ರೈತರು ಇಡೀ ರಾಜ್ಯಕ್ಕೆ ಹೆಸರುವಾಸಿಯಾಗಿದ್ದಾರೆ. ಸಮಗ್ರ ಕೃಷಿ ಪದ್ಧತಿ ಎನ್ನುವುದು ರೈತರನ್ನು ಒಂದಲ್ಲ ಒಂದು ರೀತಿಯಲ್ಲಿ ಕೈಹಿಡಿದೇ ಹಿಡಿಯುತ್ತದೆ. ಸಾಲ ಮಾಡಿದೆನೆಂದು ಕೊರಗುವುದನ್ನು ಬಿಟ್ಟು ಅದರಿಂದ ಹೊರಬಂದು ಆದಾಯವನ್ನು ದ್ವಿಗುಣಗೊಳಿಸುವುದು ಹೇಗೆ ಎಂಬುದನ್ನು ‘ದುರ್ಗಪ್ಪ ಅಂಗಡಿ’ ಮಾಡಿ ತೋರಿಸಿದ್ದಾರೆ. ಇಂತಹ ರೈತರು ಎಲ್ಲ ಅನ್ನದಾತರಿಗೂ ಸ್ಫೂರ್ತಿ ಎಂದು ಶ್ಲಾಘಿಸಿದರು. ಇದನ್ನೂ ಓದಿ: ಪಂಜಾಬ್ ಚುನಾವಣೆ – ಸೋದರ ಮಾವನ ಪರ ಕೇಜ್ರಿವಾಲ್ ಪತ್ನಿ ಪ್ರಚಾರ!

    ರೈತರಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಹಾಗೂ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವುದಕ್ಕಾಗಿಯೇ ‘ರೈತರೊಂದಿಗೊಂದು ದಿನ’ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಸಮಗ್ರ ಕೃಷಿ ಪದ್ಧತಿ ರೈತನ ಸಾಧನೆ ಅವನಲ್ಲಿನ ಆತ್ಮಸ್ಥೈರ್ಯ ಹೇಗೆ ಪರಿಣಾಮಕಾರಿ ಮತ್ತು ಸ್ಫೂರ್ತಿದಾಯಕವೆನ್ನುವುದನ್ನು ದುರ್ಗಪ್ಪ ಅಂಗಡಿ ಮಾಡಿ ತೋರಿಸಿದ್ದಾರೆ, ತೋರಿಸುತ್ತಿದ್ದಾರೆ ಎಂದು ಹೊಗಳಿದರು.

    ಸ್ವಾವಲಂಬಿ ಜೀವನಕ್ಕೆ ಈ ರೈತನೇ ಮಾದರಿ ! ಕಡಿಮೆ ಖರ್ಚಿನಲ್ಲಿ ಅಧಿಕ ಲಾಭ | udayavani

    ಇಂತಹ ಗಟ್ಟಿಮನಸಿನ ರೈತರೇ ಇತರರಿಗೂ ಮಾದರಿಯಾಗಬಲ್ಲರೆಂಬುದನ್ನು ಇವರು ಹೇಳಿದ್ದಾರೆ. ಅಲ್ಲದೇ ಅನ್ನದಾತನ ಸ್ಫೂರ್ತಿದಾಯಕ ಬದುಕು ವಿಶ್ವವಿದ್ಯಾಲಯದಲ್ಲಿ ಪಠ್ಯವಾಗುವುದೆಂದರೆ ಅದು ನಮ್ಮ ರಾಜ್ಯದ ಅನ್ನದಾತ ಎನ್ನುವುದು ಹೆಮ್ಮೆಯೇ ಸರಿ. ಸಾಧನೆಗೆ ಶೈಕ್ಷಣಿಕ ಅರ್ಹತೆಯೊಂದೇ ಮುಖ್ಯವಲ್ಲ. ಸಾಧಿಸುವ ಛಲ, ದಿಟ್ಟ ನಡೆ ಎಂಬುದನ್ನು ದುರ್ಗಪ್ಪ ಅಂಗಡಿ ತೋರಿಸಿ ಕೊಟ್ಟಿದ್ದು, ಇತರ ರೈತರಿಗೂ ಸ್ಫೂರ್ತಿದಾಯಕರಾಗಿ ಆತ್ಮಸ್ಥೈರ್ಯ ತುಂಬುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: 7.47 ಕೋಟಿ ರೂ.ಗೆ ವಿಮೆ ಮಾಡಿಸಿದ್ದ ಪೇಂಟಿಂಗ್ ನಾಶ ಮಾಡಿದ ಸೆಕ್ಯೂರಿಟಿ!

  • ಭವಿಷ್ಯ ಹೇಳಲು ಸತೀಶ್ ಜಾರಕಿಹೊಳಿ ಜ್ಯೋತಿಷಿನಾ?: ಬಿ.ಸಿ ಪಾಟೀಲ್

    ಭವಿಷ್ಯ ಹೇಳಲು ಸತೀಶ್ ಜಾರಕಿಹೊಳಿ ಜ್ಯೋತಿಷಿನಾ?: ಬಿ.ಸಿ ಪಾಟೀಲ್

    ಚಿತ್ರದುರ್ಗ:ಸತೀಶ್ ಜಾರಕಿಹೊಳಿ,ಭವಿಷ್ಯ ಹೇಳುವವರಾ ಅಥವಾ ಜ್ಯೋತಿಷಿನಾ ಎಂದು  ಕೃಷಿ ಸಚಿವ ಬಿ.ಸಿ ಪಾಟೀಲ್ ವಿರೋಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕೀಹೊಳಿ ವಿರುದ್ಧವಾಗಿ ವಾಗ್ಧಾಳಿ ಮಾಡಿದ್ದರೆ.

    ರಾಜ್ಯದ ಸಿಎಂ ಬೊಮ್ಮಾಯಿ ಇನ್ನು ಕೇವಲ 6ತಿಂಗಳ ಕಾಲ ಮಾತ್ರ ಸಿಎಂ ಅಂತಹೇಳಿರುವ ಸತೀಶ್ ಜಾರಕಿಹೊಳಿ ವಿರುದ್ಧ ಗರಂ ಆದ ಅವರು ಚಿತ್ರದುರ್ಗದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದರು. ಬಿಜೆಪಿ ಭವಿಷ್ಯ ಹಾಗೂ ಮುಂದಿನ ಆಗುಹೋಗುಗಳ ಬಗ್ಗೆ ಮಾತನಾಡುವ ಸತೀಶ್ ಜಾರಕಿಹೊಳಿ ಬಿಜೆಪಿ ಪಕ್ಷದ ವಕ್ತಾರನಾ? ಎಂದು ಪ್ರಶ್ನಿಸಿದರು. ಇದನ್ನೂ ಓದಿ: ನಾಳೆಯಿಂದ ಥಿಯೇಟರ್‌ ಹೌಸ್‌ ಫುಲ್‌- ಸರ್ಕಾರದಿಂದ ಅನುಮತಿ

    satish jarkiholi

    ಅಲ್ಲದೇ ಅವರೇನಾದರು ಭವಿಷ್ಯ ಹೇಳುವವರಾ ಅಥವಾ ಜ್ಯೋತಿಷಿನಾ? ಅವರಿಗೇನು ಗೊತ್ತು ನಮ್ಮ ಪಕ್ಷದಲ್ಲಿ ನಡೆಯುವ ಆಗುಹೋಗುಗಳ ಬಗ್ಹೆ ಅವರಿಗೇನು ಮಾಹಿತಿ ಇದೆ. ಬಿಜೆಪಿಯಲ್ಲಿ ಭಿನ್ನಾಭಿಪ್ರಾಯ ಹುಟ್ಟಿಸಲು ಈ ರೀತಿ ಪ್ರಯತ್ನಿಸುತ್ತಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಈಗಾಗ್ಲೇ ಕಾಂಗ್ರೆಸ್‍ಗೆ ಡಿವೋರ್ಸ್ ಕೊಟ್ಟಿದ್ದು, ಮತ್ತೆ ಹೋಗಲ್ಲ: ಬಿ.ಸಿ ಪಾಟೀಲ್

    ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಪ್ರಯತ್ನ ಫಲಿಸಲ್ಲ. ವಿಪಕ್ಷ ಮುಖಂಡರು ಹೀಗೆ ಹೇಳುತ್ತಲೇ ಇರುತ್ತಾರೆ ಎಂದು ಹುಸಿನಗೆ ನಕ್ಕರು. ರಾಜ್ಯದ ಚುಕ್ಕಾಣಿ ಹಿಡಿದಿದ್ದ ಬಿಎಸ್‍ವೈ ಅವರ ರಾಜೀನಾಮೆ ವೇಳೆ ಸಹ ಈ ರೀತಿ ಗೊಂದಲ ಸೃಷ್ಟಿಸಿದ್ದರು. ಅದು ವಿಪಕ್ಷ ನಾಯಕರ ಹೇಳಿದ ಮೇಲೆ ಬಿಎಸ್‍ವೈ ರಾಜಿನಾಮೆ ನೀಡಿದ್ದಾರೆ ಎಂಬ ಭಾವ ಅವರಲ್ಲಿದೆ. ಆದರೆ ಬಿಎಸ್‍ವೈ ಅವರ ವಯಸ್ಸಿನ ಕಾರಣಕ್ಕೆ ಸ್ವಯಂ ರಾಜೀನಾಮೆ ನೀಡಿದ್ದೇನೆಂದು ಅವರೇ ಹೇಳಿದ್ದಾರೆ ಎಂದರು.

    ರಾಜ್ಯದ ಸಂಪುಟ ವಿಸ್ತರಣೆ ವಿಚಾರ ಸಿಎಂ ಪರಮಾಧಿಕಾರ ಅವರು ಮಾಡಲಿ ಬಿಡಿ. ಸಂಪುಟ ವಿಸ್ತರಣೆ, ಬದಲಾವಣೆ ಸಿಎಂ ಪರಮಾಧಿಕಾರವಾಗಿದೆ. ಸಿಎಂ ದೆಹಲಿಗೆ ಯಾವ ಕಾರಣಕ್ಕೆ ಹೋಗುತ್ತಿದ್ದಾರೆಂದು ಗೊತ್ತಿಲ್ಲವೆಂದಿದ್ದಾರೆ.

  • ಈಗಾಗ್ಲೇ ಕಾಂಗ್ರೆಸ್‍ಗೆ ಡಿವೋರ್ಸ್ ಕೊಟ್ಟಿದ್ದು, ಮತ್ತೆ ಹೋಗಲ್ಲ: ಬಿ.ಸಿ ಪಾಟೀಲ್

    ಈಗಾಗ್ಲೇ ಕಾಂಗ್ರೆಸ್‍ಗೆ ಡಿವೋರ್ಸ್ ಕೊಟ್ಟಿದ್ದು, ಮತ್ತೆ ಹೋಗಲ್ಲ: ಬಿ.ಸಿ ಪಾಟೀಲ್

    ಕೊಪ್ಪಳ: ನಾವು ಕಾಂಗ್ರೆಸ್ ಪಕ್ಷಕ್ಕೆ ಈಗಾಗಲೇ ಡಿವೋರ್ಸ್ ಕೊಟ್ಟಿದ್ದೇವೆ. ಡಿವೋರ್ಸ್ ಕೊಟ್ಟವರು, ಯಾವುದೇ ಕಾರಣಕ್ಕೂ ಮತ್ತೆ ಒಂದಾಗಲ್ಲ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಇದೀಗ ಕಾಂಗ್ರೆಸ್ ಪಕ್ಷಕ್ಕೆ ಡಿವೋರ್ಸ್ ಕೊಟ್ಟಿದ್ದೇವೆ. ವಾಪಸ್ ಕಾಂಗ್ರೆಸ್ ಪಕ್ಷಕ್ಕೆ ನಾವು ಹೋಗೋದಿಲ್ಲ. ಬಿಜೆಪಿ ಮನೆಗೆ ಸೊಸೆಯಾಗಿ ಬಂದಿದ್ದೇವೆ. ಮುಂದೆ ಇಲ್ಲಿಯ ಮಕ್ಕಳಾಗಿಯೇ ಇರುತ್ತೇವೆ ಎಂದರು.

    ಇದೇ ವೇಳೆ ಸಿಎಂ ಬದಲಾವಣೆ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಅವರು, ಯಾವ ಕಾಲಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಅಮಿತ್ ಶಾ, ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಯಡಿಯೂರಪ್ಪರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿಲ್ಲ. ಯಡಿಯೂರಪ್ಪ ಅವರೇ ರಾಜೀನಾಮೆ ಕೊಟ್ಟಿದ್ದಾರೆ ಎಂದರು. ಇದನ್ನೂ ಓದಿ: ಮಂಡ್ಯದಲ್ಲಿ ಸೋಲಿಗೆ ದುಡ್ಡು ವಿಳಂಬವೇ ಕಾರಣ- ಮೇಲ್ಮನೆ ಸೋಲಿನ ರಹಸ್ಯ ಬಿಚ್ಚಿಟ್ಟ ನಾರಾಯಣಗೌಡ

    ಬಿಜೆಪಿ ಶಾಸಕರ ವಿರುದ್ಧ ಗರಂ ಆದ ಕೌರವ, ಹಾದಿ ಬೀದಿಲಿ ಯಾರೂ ಮಾತನಾಡಬಾರದು ಎಂದು ರೇಣುಕಾಚಾರ್ಯ, ಯತ್ನಾಳ್, ಸೋಮಶೇಖರ್ ರೆಡ್ಡಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಇನ್ನು ಕೃಷಿ ಸಚಿವ ಬಿ.ಸಿ ಪಾಟೀಲ್ ಫೋಟೋ ಶೂಟ್ ನಲ್ಲಿ ಬ್ಯುಸಿಯಾಗಿದ್ದಾರೆಂದು ಕಾಂಗ್ರೆಸ್ ಆರೋಪದ ಕುರಿತು ಮಾತನಾಡಿ, ನಾನು ಕೃಷಿ ಸಚಿವನಾಗಿ ಕೃಷಿ ಉತ್ತೇಜನಕ್ಕಾಗಿ ಫೋಟೋ ತೆಗೆಸಿಕೊಂಡಿದ್ದೇನೆ. ಅದು ನಾಟಕೀಯ ಅಲ್ಲ, ವಾಸ್ತವ. ನಾನೇನು ಕಿಕ್ ಬ್ಯಾಕ್ ಪಡೆದಿಲ್ಲ. ಕಾಂಗ್ರೆಸ್‍ಗೆ ನಾನು ಉತ್ತರ ಕೊಡೋ ಅವಶ್ಯಕತೆ ಇಲ್ಲ ಎಂದು ಕಿಡಿಕಾರಿದರು.

  • ಸೊಸೆಯಾಗಿ ಬಂದು ಮೊಳೆ ಹೊಡೆದು ಮನೆ ಮಗಳಾಗಿದ್ದೇವೆ, ನಾವು ಪಕ್ಷ ಬಿಡಲ್ಲ: ಬಿ.ಸಿ.ಪಾಟೀಲ್

    ಸೊಸೆಯಾಗಿ ಬಂದು ಮೊಳೆ ಹೊಡೆದು ಮನೆ ಮಗಳಾಗಿದ್ದೇವೆ, ನಾವು ಪಕ್ಷ ಬಿಡಲ್ಲ: ಬಿ.ಸಿ.ಪಾಟೀಲ್

    ಗದಗ: ಕಾಂಗ್ರೆಸ್‍ನವರೇ ಬಿಜೆಪಿಗೆ ಬರುತ್ತಿದ್ದಾರೆ ಎನ್ನುವ ಮೂಲಕ ಬಿಜೆಪಿ ಶಾಸಕರು ಕಾಂಗ್ರೆಸ್‍ಗೆ ಸೇರುತ್ತಾರೆ ಎಂಬ ಕೈ ನಾಯಕರ ಹೇಳಿಕೆಗೆ ಸಚಿವ ಬಿ.ಸಿ.ಪಾಟೀಲ್ ತಿರುಗೇಟು ನೀಡಿದರು.

    ನಗರದ ಪರಿಸರ ಲೇಔಟ್‍ನಲ್ಲಿ ನಿರ್ಮಾಣವಾಗುತ್ತಿರುವ ಬಿಜೆಪಿ ಕಚೇರಿ ನೂತನ ಕಟ್ಟಡ ಕಾಮಗಾರಿ ವೀಕ್ಷಿಸಿ, ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾವ್ಯಾಕೆ ಅಲ್ಲಿಗೆ ಹೋಗೋಣ. ಬಿಜೆಪಿ ಮನೆಗೆ ಸೊಸೆಯಾಗಿ ಬಂದು ಬಾಗಿಲಿಗೆ ಮೊಳೆ ಹೊಡೆದು ಮನೆಯ ಮಗಳಾಗಿದ್ದೇವೆ. ಹೀಗಾಗಿ ಮತ್ತೆ ಸಹಕರಿಸುವ ಪ್ರಶ್ನೆ ಇಲ್ಲ ಎಂದರು.

    bjp - congress

    ಕಾಂಗ್ರೆಸ್‍ನವರಿಗೆ ಬಿಜೆಪಿ ಮೇಲೆ ಅಷ್ಟ್ಯಾಕೆ ಮಮಕಾರ ಇದೆಯೋ ಗೊತ್ತಿಲ್ಲ. ಕಾಂಗ್ರೆಸ್‍ನ ತಳಪಾಯ ಕುಸಿತವಾಗಿರುವುದರಿಂದ ಬೇರೆ ಪಕ್ಷದವರನ್ನು ಕರೆತಂದು ಟಿಕೆಟ್ ನೀಡಲು ಹಂಬಲಿಸುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಪಿಸ್ತೂಲ್ ತೋರಿಸಿ ಧಮ್ಕಿ ಹಾಕಿದ್ದ ಬಿಜೆಪಿ ಮುಖಂಡನ ಮೇಲೆ ಪ್ರಕರಣ ದಾಖಲು

    ಇದೇ ವೇಳೆ ಸಚಿವ ಸಂಪುಟದ ಕುರಿತು ಮಾತನಾಡಿದ ಅವರು, 5 ಬೆರಳು ಒಂದೇ ಸಮನಾಗಿ ಇರುವುದಿಲ್ಲ. ಇನ್ನೂ ಐದು ಸಚಿವ ಸ್ಥಾನಗಳು ಖಾಲಿ ಇರುವುದರಿಂದ ಸಚಿವರಾಗಬೇಕೆಂಬ ಆಸೆ ಎಲ್ಲರಿಗೂ ಇರುತ್ತದೆ. ಹೀಗಾಗಿ ಕೆಲವರು ಸಚಿವರಾಗುವ ಇಂಗಿತ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿಸಿದರು.

    ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎಂಬುವುದನ್ನು ಮುಖ್ಯಮಂತ್ರಿಗಳು ನಿರ್ಧರಿಸುತ್ತಾರೆ. ಈ ಬಗ್ಗೆ ಕೆಲವರು ಪಕ್ಷದ ವರಿಷ್ಠರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದಾರೆ. ಪಕ್ಷದ ಹೈಕಮಾಂಡ್ ಯಾರನ್ನು ಮಾಡಬೇಕು ಎನ್ನುತ್ತೋ ಅವರು ಮಂತ್ರಿ ಆಗುತ್ತಾರೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ನಿಮಗಾಗಿ ಆಸ್ತಿ ಮಾಡಿಲ್ಲ’ – ಹೆಂಡತಿಗೆ ಮರಣಪತ್ರ ಬರೆದು ಕಂದಾಯ ನೌಕರ ಆತ್ಮಹತ್ಯೆ

    ಸಿಎಂ ಬದಲಾವಣೆಯಿಲ್ಲ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸಾಧ್ಯವಿಲ್ಲ. ಸಿಎಂ ಬದಲಾವಣೆ ಸತ್ಯಕ್ಕೆ ದೂರವಾದ ಮಾತು. ಅಮಿತ್ ಶಾ, ಜೆ.ಪಿ.ನಡ್ಡಾ ಅವರು ಹೇಳಿದಂತೆ 2023ರ ಚುನಾವಣೆವರೆಗೂ ಬಸವರಾಜ್ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದರು.

    ಬಸವರಾಜ್ ಬೊಮ್ಮಾಯಿ 6 ತಿಂಗಳವರೆಗೆ ಮುಖ್ಯಮಂತ್ರಿ ಆಗುತ್ತಾರೆ ಎಂದು ಕಾಂಗ್ರೆಸ್ ಅವರಿಗೆ ಯಾರಾದರೂ ಬರೆದು ಕೊಟ್ಟಿದ್ದಾರಾ? ಎಂದು ಕಿಡಿಕಾರಿದ ಅವರು, ಕಾಂಗ್ರೆಸ್ ಅವರಿಗೆ ಸ್ವಪಕ್ಷದವರ ಮೇಲೆ ಅನುಮಾನವಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ:  ಹೆಚ್‌ಐವಿ ಪೀಡಿತ ಮಹಿಳೆಯ ಕಿಡ್ನಿಯಿಂದ 10 ಕೆಜಿ ಗೆಡ್ಡೆ ತೆಗೆದ ದೆಹಲಿ ವೈದ್ಯರು

    ರಾಜ್ಯದಲ್ಲಿ ಕಾಂಗ್ರೆಸ್ ಪತನ: ಕಾಂಗ್ರೆಸ್ ಕಾಲ ಕೆಳಗೆ ಹಳ್ಳ, ಹೊಳೆಗಳು ಹರಿಯುತ್ತಿದ್ದು, ಯಾವಾಗ ಕಾಲುಜಾರಿ ಬೀಳುತ್ತಾರೋ ಗೊತ್ತಿಲ್ಲ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವಿನ ಕಚ್ಚಾಟದಿಂದಾಗಿ ರಾಜ್ಯದಲ್ಲಿಯೂ ಕಾಂಗ್ರೆಸ್ ಪತನವಾಗಲಿದೆ ಎಂದು ಭವಿಷ್ಯ ನುಡಿದರು.

    ರೇಣುಕಾಚಾರ್ಯ ಅವರು ಯಾವ ಸಚಿವರು ಸ್ಪಂದಿಸುತ್ತಿಲ್ಲ ಎನ್ನುತ್ತಿದ್ದಾರೆ. ಯತ್ನಾಳ್ ಅವರು ಎಲ್ಲಾ ಸಚಿವರು ಸ್ಪಂದಿಸುತ್ತಾರೆ ಎಂದು ಹೇಳುತ್ತಾರೆ. ಒಬ್ಬೊಬ್ಬರು ಒಂದೊಂದು ತರ ಹೇಳುತ್ತಿದ್ದು, ಅದು ಅವರ ಭಾವನೆ ಎಂದು ಹೇಳಿದರು.

    ಗೊಂದಲ ಎಲ್ಲಾ ಕಡೆಗೂ ಇರುತ್ತದೆ. ಒಂದು ತಾಯಿಗೆ ಐದು ಮಕ್ಕಳಿದ್ದರೂ ಐದು ಮಕ್ಕಳು ಸರಿ ಇರುವುದಿಲ್ಲ. ರೇಣುಕಾಚಾರ್ಯ ಅವರಿಗೂ ಮಂತ್ರಿ ಆಗಬೇಕೆಂಬ ಆಸೆ ಇರುತ್ತದೆ, ಅದು ತಪ್ಪಲ್ಲ. ಆದರೆ ಮಂತ್ರಿ ಆಗಿಲ್ಲ ಎಂದು ಅಸಮಾಧಾನ ಇರಬಹುದು. ಹಾಗಾಗಿ ಹೀಗೆ ಹೇಳಿರಬಹುದು ಎಂದರು.