Tag: BC Patil

  • ದರ್ಶನ್ ಬಹಳ ಮುಗ್ಧ, ಯಾವುದೇ ಕೆಟ್ಟ ಕೆಲಸ ಮಾಡಲ್ಲ: ಬಿ.ಸಿ ಪಾಟೀಲ್

    ದರ್ಶನ್ ಬಹಳ ಮುಗ್ಧ, ಯಾವುದೇ ಕೆಟ್ಟ ಕೆಲಸ ಮಾಡಲ್ಲ: ಬಿ.ಸಿ ಪಾಟೀಲ್

    ಬೆಂಗಳೂರು: ನಟ ದರ್ಶನ್ ಬಹಳ ಮುಗ್ಧ. ಯಾವುದೇ ಕೆಟ್ಟ ಕೆಲಸ ಮಾಡಲ್ಲ ಎಂದು ಕೃಷಿ ಸಚಿವ ಬಿಸಿ ಪಾಟೀಲ್ ‘ದಾಸ’ನ ಪರ ಬ್ಯಾಟ್ ಬೀಸಿದ್ದಾರೆ.

    ದರ್ಶನ್‍ರಿಂದ ಹಲ್ಲೆ ಆರೋಪ ವಿಚಾರ ಸಂಬಂಧ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿ, ಅಂತಹ ಯಾವುದೇ ಕೆಲಸ ದರ್ಶನ್ ಮಾಡಿಲ್ಲ ಅಂತ ನನಗೆ ಮನವರಿಕೆ ಇದೆ. ದರ್ಶನ್ ಬಹಳ ಮುಗ್ಧ. ಕೆಳ ಹಂತದಿಂದ ಮೇಲೆ ಬೆಳೆದು ಬಂದವರು. ಅವರ ಏಳಿಗೆ ಸಹಿಸಲಾರದವರು ದುರುದ್ದೇಶದಿಂದ ಅವರ ಮೇಲೆ ಇಂತಹ ಕೇಸ್ ಹಾಕಿಸಿ ಆರೋಪ ಮಾಡ್ತಿದ್ದಾರೆ ಅನ್ನೋದು ನನ್ನ ಭಾವನೆ ಎಂದರು.

    ದರ್ಶನ್ ಬಹಳ ಸರಳ, ದೊಡ್ಡ ಹೃದಯದ ಹುಡುಗ. ಅಂತಹ ಯಾವುದೇ ಕೆಟ್ಟ ಕೆಲಸ ಮಾಡಲ್ಲ ಅನ್ನೋದು ನನ್ನ ನಂಬಿಕೆ ಎಂದು ತಿಳಿಸಿದರು. ಇದನ್ನೂ ಓದಿ: ‘ಏನಯ್ಯಾ ದರ್ಶನ್‍ಗೆ ತಲೆ ಇಲ್ವೇನಯ್ಯಾ, ಹೋಗಿ ಹೋಗಿ ನಾಯಿಗೆ ಕಚ್ಚಿದ್ದಾನೆ’

    ತಲೆ ತೆಗೆಯುತ್ತೇನೆ ಎಂಬ ದರ್ಶನ್ ಪದ ಬಳಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನು ಕೂಡ ಅವತ್ತು ದರ್ಶನ್ ಹೇಳಿಕೆ ನೋಡಿದ್ದೇನೆ. ನೀವು ಏನೇನೋ ಕೇಳಬೇಡಿ, ಕೇಳಿದ್ರೆ ರೆಕ್ಕೆ ಪುಕ್ಕ ಬರುತ್ತೆ ಅಂತ ದರ್ಶನ್ ಅವತ್ತು ಹೇಳಿದ್ರು. ಪ್ರಚೋದನೆ ಮಾಡಿ ಪ್ರಶ್ನೆ ಕೇಳಿದ್ದಕ್ಕೆ ಆವೇಶದಲ್ಲಿ ಏನೋ ಹೇಳಿರಬಹುದು. ದರ್ಶನ್ ಹೃದಯದಿಂದ ಅಂತಹ ಮಾತು ಹೇಳೋ ವ್ಯಕ್ತಿ ಅಲ್ಲ ಎಂದು ಹೇಳಿದರು. ಇದನ್ನೂ ಓದಿ:ಸಣ್ಣ ಗಲಾಟೆ ನಡೆದಿದ್ದು ನಿಜ, ಆದ್ರೆ ದರ್ಶನ್ ಹೊಡೆದಿಲ್ಲ: ಸಂದೇಶ್ ನಾಗರಾಜ್ ಪುತ್ರ

    ಇದೇ ವೇಳೆ ಕೃಷಿ ಇಲಾಖೆ ರಾಯಭಾರಿ ಸ್ಥಾನದಿಂದ ನಟ ದರ್ಶನ್ ಕೈ ಬಿಡುವುದಿಲ್ಲ. ರಾಯಭಾರಿ ಸ್ಥಾನದಿಂದ ಕೈ ಬಿಡುವ ಪ್ರಶ್ನೆಯೇ ಇಲ್ಲ. ರಾಯಭಾರಿ ಸ್ಥಾನದಿಂದ ಕೈ ಬಿಡುವ ಯಾವುದೇ ಕೆಲಸ ದರ್ಶನ್ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ನೀವೆಲ್ಲಾ ಸೇರಿದ್ದೀರಿ, ನಿಮ್ಮ ಜಾತಿಯನ್ನು ನಾವು ಕೇಳ್ತೀವಾ – ಇಂದ್ರಜಿತ್‍ಗೆ ದರ್ಶನ್ ತಿರುಗೇಟು

  • ಸಚಿವ ಬಿ.ಸಿ.ಪಾಟೀಲ್ ಮೇಲೆ ಮುನಿಸು – ಕೆಡಿಪಿ ಸಭೆಗೆ ಬಾರದ ಆಚಾರ್, ದಡೇಸೂಗೂರ!

    ಸಚಿವ ಬಿ.ಸಿ.ಪಾಟೀಲ್ ಮೇಲೆ ಮುನಿಸು – ಕೆಡಿಪಿ ಸಭೆಗೆ ಬಾರದ ಆಚಾರ್, ದಡೇಸೂಗೂರ!

    ಕೊಪ್ಪಳ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಎದ್ದಿರುವಾಗಲೇ ಕೊಪ್ಪಳ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರ ಬದಲಾವಣೆಯ ಧ್ವನಿ ಎದ್ದಿದೆ. ಸಚಿವರ ವಿರುದ್ಧ ಮುನಿಸಿಕೊಂಡಿರುವ ಬಿಜೆಪಿ ಶಾಸಕ ಹಾಲಪ್ಪ ಆಚಾರ್, ಬಸವರಾಜ ದಡೇಸೂಗೂರ ಸಚಿವ ಬಿ.ಸಿ. ಪಾಟೀಲ್ ಕರೆದ ಕೆಡಿಪಿ ತ್ರೈಮಾಸಿಕ ಸಭೆಗೆ ಗೈರಾಗುವ ಮೂಲಕ ಬಂಡಾಯದ ಬಿಸಿ ಮುಟ್ಟಿಸಿದ್ದಾರೆ.

    ಕೊಪ್ಪಳ ಜಿಲ್ಲಾ ಬಿಜೆಪಿಯಲ್ಲಿ ಭಿನ್ನಾಭಿಪ್ರಾಯದ ಹೊಗೆಯಾಡುತ್ತಿದೆ. ಕೃಷಿ ಸಚಿವ ಬಿ.ಸಿ. ಪಾಟೀಲ್ ಜಿಲ್ಲಾ ಉಸ್ತುವಾರಿ ಸಚಿವರಾದಾಗಿನಿಂದ ಜಿಲ್ಲೆಯ ಬಿಜೆಪಿ ಶಾಸಕರು ಮತ್ತು ಸಂಸದರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿಲ್ಲ ಎಂಬ ಆರೋಪಗಳು ಇವೆ. ಇದೀಗ ಈ ಭಿನ್ನಾಭಿಪ್ರಾಯ ತಾರಕಕ್ಕೆ ಏರಿದ್ದು, ಕನಕಗಿರಿ ಶಾಸಕ ಬಸವರಾಜ ದಡೇಸುಗೂರ ಮತ್ತು ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್ ಕೆಡಿಪಿ ಸಭೆಗೆ ಗೈರಾಗುವ ಮೂಲಕ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ. ಇನ್ನು ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ ಸಹ ಗೈರಾಗಿರುವುದು ಕುತೂಹಲ ಮೂಡಿಸಿದೆ. ಇದನ್ನೂ ಓದಿ: ಸೋನು ಸೂದ್ ಭೇಟಿಗೆ ಹೊರಟ ಅಲೆಮಾರಿ ಜನಾಂಗದ ಯುವಕರ ತಂಡ

    ಇಂದು ಕೊಪ್ಪಳದಲ್ಲಿ ಸ್ವತಃ ಬಿ.ಸಿ. ಪಾಟೀಲ್ ಅಧ್ಯಕ್ಷತೆಯಲ್ಲಿ ಕೊರೊನಾ ಮೂರನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಮತ್ತು ಕೆಡಿಪಿ ತ್ರೈಮಾಸಿಕ ಸಭೆ ನಡೆಯಿತು. ಜೊತೆಗೆ ಸಚಿವರು ಜೆಡಿಎಸ್ ಮುಖಂಡರನ್ನು ಪಕ್ಷಕ್ಕೆ ತರುವ ನಿಟ್ಟಿನಲ್ಲಿ ಅವರ ಮನೆಗೆ ಭೇಟಿ ನೀಡಿದ್ದರು. ಸಾಮಾನ್ಯವಾಗಿ ಸಚಿವರನ್ನು ಸ್ವಾಗತಿಸಲು ಬಿಜೆಪಿ ಶಾಸಕರೆಲ್ಲರು ಬರುತ್ತಿದ್ದರು. ಆದರೆ ಬಿಜೆಪಿಯ ಮೂವರು ಶಾಸಕರ ಪೈಕಿ ಇಬ್ಬರು ಶಾಸಕರು ಕೊನೆವರೆಗೂ ಸಭೆಗೆ ಬರಲಿಲ್ಲ. ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಸಭೆ ಆರಂಭದ ನಂತರ ಆಗಮಿಸಿ ಭಾಗವಹಿಸಿದ್ದರು.

    ಬಿಜೆಪಿ ಶಾಸಕರು ಉಸ್ತುವಾರಿ ಸಚಿವರ ವಿರುದ್ಧ ಅಸಮಾಧಾನಗೊಳ್ಳಲು ಕಾರಣ, ಸಚಿವರು ಕಾಂಗ್ರೆಸ್ ಶಾಸಕರನ್ನು ಮಾತ್ರ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದ್ದಾರೆ. ನಮ್ಮ ಮಾತಿಗೆ ಯಾವುದೇ ಕಿಮ್ಮತ್ತಿಲ್ಲ ಎಂಬ ಬಲವಾದ ಆರೋಪ ಕೇಳಿ ಬಂದಿವೆ.

    ಇದೇ ಕಾರಣಕ್ಕೆ ತಮ್ಮ ಜಿಲ್ಲೆಗೆ ಬೇರೊಬ್ಬರನ್ನು ಉಸ್ತುವಾರಿ ಸಚಿವರನ್ನಾಗಿ ಮಾಡಿ ಎಂದು ಸಿಎಂ ಬಳಿ ಬಿಜೆಪಿ ಶಾಸಕರು ಪಟ್ಟು ಹಿಡಿದಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಯಡಿಯೂರಪ್ಪ ಅವರದ್ದು ರಾಕ್ಷಸ ಸರ್ಕಾರ, ಪಕೋಡ ಮಾರೋಣ ಅಂದ್ರೆ ಎಣ್ಣೆ ರೇಟ್ ಜಾಸ್ತಿ: ಸಿದ್ದರಾಮಯ್ಯ

  • ಕೆಆರ್‌ಎಸ್ ವಿಷಯದಲ್ಲಿ ಯಾರೂ ಸಹ ರಾಜಕಾರಣ ಮಾಡಬಾರದು: ಬಿ.ಸಿ.ಪಾಟೀಲ್

    ಕೆಆರ್‌ಎಸ್ ವಿಷಯದಲ್ಲಿ ಯಾರೂ ಸಹ ರಾಜಕಾರಣ ಮಾಡಬಾರದು: ಬಿ.ಸಿ.ಪಾಟೀಲ್

    ಕೊಪ್ಪಳ: ಕೆಆರ್‌ಎಸ್ ವಿಷಯದಲ್ಲಿ ಯಾರೂ ಸಹ ರಾಜಕಾರಣ ಮಾಡಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

    ಕೊಪ್ಪಳದಲ್ಲಿ ಮಾತನಾಡಿದ ಅವರು, ಕೆಆರ್‌ಎಸ್ ವಿಷಯದಲ್ಲಿ ರಾಜಕೀಯ ನಡೆಯುತ್ತಿದೆ. ಕೆಆರ್‌ಎಸ್‍ನಲ್ಲಿ ಬಿರುಕು ಇಲ್ಲ ಎಂದು ಕಾವೇರಿ ನೀರಾವರಿ ನಿಗಮದ ಇಂಜನೀಯರ್ ಹಾಗೂ ಸಚಿವರು ಹೇಳಿದ್ದಾರೆ. ಆದರೂ ಸಹ ಈ ವಿಷಯದಲ್ಲಿ ಇಲ್ಲಿ ರಾಜಕೀಯ ಮಾಡಲಾಗುತ್ತಿದೆ. ಕೆಆರ್‌ಎಸ್ ವಿಷಯದಲ್ಲಿ ಏನೋ ಆಗಿದೆ ಎಂಬಂತೆ ಬಿಂಬಸಲಾಗುತ್ತಿದೆ. ಯಾರಾದರೂ ಆಗಲಿ ಮಾತಿನ ಮೂಲಕ ರಾಜಕಾರಣ ಮಾಡಬಾರದು. ನಮ್ಮ ಕೆಲಸದ ಮೂಲಕ ರಾಜಕಾರಣ ಮಾಡಬೇಕು ಎಂದಿದ್ದಾರೆ. ಇದನ್ನೂ ಓದಿ:  ಇಬ್ಬರನ್ನ ಜಗಳಕ್ಕೆ ಬಿಟ್ಟು ಸೇಫ್ ಆದಂತಿದೆ: ಸುಮಲತಾ, ಹೆಚ್‍ಡಿಕೆ ಸಮರಕ್ಕೆ ಚಲುವರಾಯಸ್ವಾಮಿ ಪ್ರತಿಕ್ರಿಯೆ 

    ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಬಾರದು. ಮಾಜಿ ಸಿಎಂ ಕುಮಾರಸ್ವಾಮಿ ಅವರು ಸುಮಲತಾ ಅವರ ಬಗ್ಗೆ ಆ ರೀತಿ ಮಾತನಾಡಿದ್ದು ತಪ್ಪು ಎಂದು ಈ ಹಿಂದೆಯೇ ಹೇಳಿದ್ದೇನೆ. ಅಂಬರೀಷ್ ಅವರು ಈಗ ಇಲ್ಲ. ಅವರ ಹೆಸರನ್ನು ಎಳೆದು ತರಬಾರದು ಎಂದಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳ ಕುರಿತು ಆಡಿಯೋ ಪ್ರಕರಣಗಳು ನಡೆಯುತ್ತಿವೆ. ಈ ಬಗ್ಗೆ ಚರ್ಚೆ ಮಾಡುತ್ತೇವೆ. ಅಕ್ರಮ ಮರಳದಂಧೆಯಲ್ಲಿ ಭಾಗಿಯಾದವರನ್ನೇ ತನಿಖಾಧಿಕಾರಿಯನ್ನಾಗಿ ಮಾಡಲಾಗಿದೆ ಎಂಬ ಆರೋಪದ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಿಂದ ಮಾಹಿತಿ ಪಡೆದುಕೊಂಡು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ:  ಖಾರವಾದ ಮೊಟ್ಟೆ ಚಿಲ್ಲಿ ನೀವೂ ಮಾಡಿ

  • ಶಕ್ತಿ ಇದ್ದರೆ ಅಪ್ಪ, ಮಗ ಅಂಬಾರಿ ಹೊರುತ್ತಾರೆ: ಬಿ.ಸಿ.ಪಾಟೀಲ್

    ಶಕ್ತಿ ಇದ್ದರೆ ಅಪ್ಪ, ಮಗ ಅಂಬಾರಿ ಹೊರುತ್ತಾರೆ: ಬಿ.ಸಿ.ಪಾಟೀಲ್

    ಹಾವೇರಿ: ಹಳೆಯ ಮಿತ್ರರು ವಾಪಸ್ ಬರಬಹುದು ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆಹ್ವಾನಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ:  ಹೆಂಡತಿಯಾಗಿದ್ದವಳು ಮಲತಾಯಿಯಾಗಿ ಬಂದಳು..!

    ಹಾವೇರಿ ಜಿಲ್ಲೆ ಹಿರೇಕೆರೂರು ಪಟ್ಟಣದ ನಿವಾಸದಲ್ಲಿ ಮಾತನಾಡಿದ ಅವರು, ಟೆಂಡರ್ ಕರೆದವರ ರೀತಿ ಬೇಕಾದವರು ಅರ್ಜಿ ಹಾಕಬಹುದು ಅಂದಿದ್ದಾರೆ. ಕಾಂಗ್ರೆಸ್ ಅರ್ಜಿಗಳು ಸೇಲ್ ಆಗೋದಿಲ್ಲ. ಡಿಕೆಶಿ ಏನೋ ಕನಸು ಕಾಣುತ್ತಿದ್ದಾರೆ. ಅದು ಯಾವುದೂ ಆಗೋದಿಲ್ಲ. ಸಚಿವ ಯೋಗೇಶ್ವರ ಅವರಷ್ಟು ಬುದ್ದಿವಂತರಲ್ಲ ನಾವು. ಅವರ ಪರೋಕ್ಷವಾದ ಮಾತುಗಳು ಅರ್ಥವಾಗೋದಿಲ್ಲ ನಮಗೆ. ನೇರವಾಗಿ ಇದ್ದರೆ ಹೇಳಬಹುದು. ಅಪ್ಪ ಶಕ್ತಿ ಇದ್ದರೆ ಅಪ್ಪ ಅಂಬಾರಿ ಹೊರ್ತಾನೆ, ಮಗ ಶಕ್ತಿ ಇದ್ದರೆ ಮಗ ಅಂಬಾರಿ ಹೊರುತ್ತಾನೆ ಎಂದಿದ್ದಾರೆ.

    ಕಾಂಗ್ರೆಸ್ ನವರು ಔಟ್ ಆಫ್ ಸೈಟ್ ಆಗಿಬಿಟ್ಟಿದ್ದಾರೆ. ಜನರು ಕಾಂಗ್ರೆಸ್ ನವರನ್ನ ಮರೆತು ಬಿಟ್ಟಿದ್ದಾರೆ. ಕಾಂಗ್ರೆಸ್ ಅರ್ಜಿಗಳನ್ನ ಯಾರೂ ತೆಗೆದುಕೊಳ್ಳುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ನವರು ಹೋಲ್ ಸೇಲ್ ಟೆಂಡರ್ ಕರೆದಿದ್ದಾರೆ. ಯಾರು ಬೇಕಾದರೂ ಬರಬಹುದು ಅಂತಾ ಫ್ರೀ ಟೆಂಡರ್ ಕರೆದಿದ್ದಾರೆ ಎಂದು ಬಿ.ಸಿ.ಪಾಟೀಲ್ ಕಿಡಿಕಾರಿದ್ದಾರೆ.

    ಸರ್ಕಾರದಲ್ಲಿ ಆಡಳಿತ ಪಕ್ಷದವರಿಗಿಂತ ವಿರೋಧ ಪಕ್ಷದವರ ಮಾತು ಜಾಸ್ತಿ ಕೇಳ್ತಾರೆ ಎಂಬ ಸಚಿವ ಸಿ.ಪಿ.ಯೋಗಿಶ್ವರ ಹೇಳಿಕೆ ಹಾಗೇನಿಲ್ಲ, ಕೆಲವರು ನೆಮ್ಮದಿ ಇಲ್ಲದಿರೋರು, ಸಂತೋಷ ಇಲ್ಲದವರು ಹಾಗೆ ಹೇಳ್ತಾರೆ. ಅದ್ಯಾವುದಕ್ಕೂ ಮಹತ್ವ ಕೊಡೋ ಅಗತ್ಯವಿಲ್ಲ ಎಂದಿದ್ದಾರೆ.

  • ಸಿಎಂ ಭೇಟಿ ಮಾಡಿದ ಕೃಷಿ ಕುಲಪತಿಗಳ ನಿಯೋಗ – ಮಾನವ ಸಂಪನ್ಮೂಲಗಳ ಕೊರತೆ ನೀಗಿಸುವಂತೆ ಮನವಿ

    ಸಿಎಂ ಭೇಟಿ ಮಾಡಿದ ಕೃಷಿ ಕುಲಪತಿಗಳ ನಿಯೋಗ – ಮಾನವ ಸಂಪನ್ಮೂಲಗಳ ಕೊರತೆ ನೀಗಿಸುವಂತೆ ಮನವಿ

    ಬೆಂಗಳೂರು: ಕೃಷಿ ವಿಶ್ವವಿದ್ಯಾಲಯಗಳಲ್ಲಿರುವ ಮಾನವ ಸಂಪನ್ಮೂಲಗಳ ಕೊರತೆಯನ್ನು ತುಂಬುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲರ ನೇತೃತ್ವದಲ್ಲಿ ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳ ಕುಲಪತಿಗಳ ನಿಯೋಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

    ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಮಂಗಳವಾರ ಸಂಜೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಿಯೋಗ, ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಶೇ.45 ರಷ್ಟು ಶಿಕ್ಷಕರ ಹುದ್ದೆಗಳು, ಶೇ.55 ರಷ್ಟು ಶಿಕ್ಷಕೇತರ ಹುದ್ದೆ ಕೊರತೆಯಿದೆ. ವಿಶ್ವವಿದ್ಯಾಲಯ ಶಿಕ್ಷಣ ಮತ್ತು ಸಂಶೋಧನೆಗೆ 2016-17 ರಿಂದೀಚೆಗೆ ಶೇ.65 ರಷ್ಟು ಅನುದಾನ ಕಡಿತಗೊಂಡಿದೆ. ಗುಣಮಟ್ಟದ ಹಾಗೂ ಪರಿಣಾಮಕಾರಿ ಶಿಕ್ಷಣಕ್ಕೆ ಮಾನವ ಸಂಪನ್ಮೂಲಗಳ ಅಗತ್ಯತೆಯಿದೆ. ಆದರೆ ಇಷ್ಟೊಂದು ದೊಡ್ಡಮಟ್ಟದಲ್ಲಿ ಹುದ್ದೆಗಳು ಖಾಲಿಯಿರುರುವುದರಿಂದ ಈಗಿರುವ ಸಿಬ್ಬಂದಿಗಳೇ ಹೇಗೋ ಸರಿದೂಗಿಸಿಕೊಂಡು ಹೆಚ್ಚುವರಿ ಜವಾಬ್ದಾರಿಯಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

    ಮಾನವ ಸಂಪನ್ಮೂಲಗಳ ಕೊರತೆಯಿಂದಾಗಿ ಕೆಲವೆಡೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗುತ್ತಿಲ್ಲ. ಮಾನವ ಸಂಪನ್ಮೂಲಗಳ ಕೊರತೆ ವಿದ್ಯಾರ್ಥಿಗಳ ಕಲಿಕೆಯ ಮೇಲೂ ಪರಿಣಾಮ ಬೀರುತ್ತಿದ್ದು, ಅಲ್ಲದೇ ಹೆಚ್ಚುವರಿ ಜವಾಬ್ದಾರಿಯಿಂದಾಗಿ ಸಿಬ್ಬಂದಿಗಳ ಮೇಲೂ ಸಹ ಪರಿಣಾಮವುಂಟಾಗುತ್ತಿದೆ ಎಂದು ಕೃಷಿ ಸಚಿವರು ಭೇಟಿ ವೇಳೆ ಸಿಎಂಗೆ ಮನವರಿಕೆ ಮಾಡಿಕೊಟ್ಟು ಮಾನವಸಂಪನ್ಮೂಲಗಳ ಹೆಚ್ಚಳಕ್ಕೆ ಮನವಿ ಮಾಡಿದರು.

    ಭೇಟಿಗೂ ಮುನ್ನ ಕೃಷಿ ಸಚಿವರ ಅಧ್ಯಕ್ಷತೆಯಲ್ಲಿ ವಿಕಾಸಸೌಧದ ಕಚೇರಿಯಲ್ಲಿ ಕುಲಪತಿಗಳ ಸಮನ್ವಯ ಸಮಿತಿ ಸಭೆ ನಡೆದಿದ್ದು, ಸಭೆಯಲ್ಲಿ ಕೃಷಿ ಅನುಸಂಧಾನ ಪರಿಷತ್ತಿನ ಎಐಸಿಆರ್ ಪಿ ಯೋಜನೆಗಳಲ್ಲಿ ಹಾಗೂ ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ಕೇಂದ್ರ ಸರ್ಕಾರದಿಂದ ಶೇ.80 ಹಾಗು ಶೇ.100 ರಷ್ಟು ಅನುದಾನ ಬರುತ್ತಿರುವುದರಿಂದ ಕೆವಿಕೆ ಹಾಗೂ ಐಸಿಆರ್ ಪೋಸ್ಟ್ ಗಳ ನೇಮಕಾತಿ ಮಾಡಲು ಕೂಡಲೇ ಅನುಮತಿ ಗೆ ಸಚಿವರಿಗೆ ಕುಲಪತಿಗಳು ಮನವಿ ಮಾಡಿದರು. ಅಲ್ಲದೇ ಶಿವಮೊಗ್ಗದ ನೂತವಾಗಿ ನಿರ್ಮಾಣಗೊಂಡಿರುವ ಇರುವಕ್ಕಿ ಕೃಷಿ ಮತ್ತು ತೋಟಗಾರಿಗೆ ವಿಶ್ವವಿದ್ಯಾಲಯದ ಉದ್ಘಾಟನೆಗೆ ದಿನಾಂಕ ನಿಗದಿಗೊಳಿಸುವ ಬಗ್ಗೆಯೂ ಚರ್ಚಿಸಲಾಯಿತು.

    ಕೃಷಿ ಶಿಕ್ಷಣ ಎಂದಮೇಲೆ ಎಲ್ಲಾ ವಿಶ್ವವಿದ್ಯಾಲಯಗಳು ಒಂದೇಯಾಗಿದ್ದು, ಯಾವುದೇ ವಿಶ್ವವಿದ್ಯಾಲಯಗಳು ಬೇರೆಬೇರೆ ಎಂದು ಭಾವಿಸಬಾರದು. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಮತ್ತು ಕಲಿಕೆಯ ಹಿತದೃಷ್ಟಿಯಿಂದ ಸಮಾನವಾಗಿ ಕೆಲಸ ಮಾಡಬೇಕು. ಅಲ್ಲದೇ ಕೃಷಿ ವಿಶ್ವವಿದ್ಯಾಲಯಗಳು ಕೃಷಿ ಇಲಾಖೆಯ ಜೊತೆ ನಿರಂತರ ಸಂಪರ್ಕ ಸಾಧಿಸುತ್ತಿರಬೇಕು. ಕೃಷಿಯಲ್ಲಿ ನವೀನತೆ ಹಾಗೂ ಕೃಷಿ ಇಲಾಖೆಯ ಅಭಿವೃಧ್ಧಿಗೆ ವಿಶ್ವವಿದ್ಯಾಲಯಗಳ ಸಹಭಾಗಿತ್ವವೂ ಮುಖ್ಯವಾಗಿದೆ. ಹೀಗಾಗಿ ವಿಶ್ವವಿದ್ಯಾಲಯಗಳು ತಾವು ಬೇರೆ ಎಂದು ಭಾವಿಸದೇ ಇಲಾಖೆ ಜೊತೆ ಸಂಪರ್ಕ ಸಾಧಿಸಬೇಕು. ಅಲ್ಲದೇ ಕೃಷಿ ಇಲಾಖೆಯೂ ಸಹ ವಿಶ್ವವಿದ್ಯಾಲಯಗಳಲ್ಲಿ ಆಗುತ್ತಿರುವ ಹೊಸಹೊಸ ಕೃಷಿ ಆವಿಷ್ಕಾರಗಳ ಬಗ್ಗೆ ವಿಜ್ಞಾನಿಗಳ ಜೊತೆ ಸಹಕರಿಸಬೇಕೆಂದು ಕೃಷಿ ಸಚಿವರು ಸಲಹೆ ನೀಡಿದರು.

  • ದಲಿತ ನಾಯಕ ಪರಮೇಶ್ವರ್ ಕೂಡ ಸಿಎಂ ಕ್ಯಾಂಡಿಡೇಟ್ – ಮೂರನೇ ಹೆಸರು ತೇಲಿಬಿಟ್ಟ ಸಚಿವ ಬಿ.ಸಿ ಪಾಟೀಲ್

    ದಲಿತ ನಾಯಕ ಪರಮೇಶ್ವರ್ ಕೂಡ ಸಿಎಂ ಕ್ಯಾಂಡಿಡೇಟ್ – ಮೂರನೇ ಹೆಸರು ತೇಲಿಬಿಟ್ಟ ಸಚಿವ ಬಿ.ಸಿ ಪಾಟೀಲ್

    ಉಡುಪಿ: ಮುಂದಿನ ಸಿಎಂ ಗಾದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ನಡುವೆ ಮುಂದಿನ ನಾಯಕತ್ವದ ಫೈಟ್ ನಡೆಯುತ್ತಿರುವಾಗಲೇ ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ್ ಹೆಸರು ತೂರಿ ಬಂದಿದೆ. ಈ ಹೆಸರು ಎತ್ತಿದ್ದು ಕಾಂಗ್ರೆಸ್ ನಾಯಕರಲ್ಲ, ಸಚಿವ ಬಿ.ಸಿ ಪಾಟೀಲ್.

    ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಕಾಂಗ್ರೆಸ್ಸಿನಲ್ಲಿ ಡಿಕೆಶಿ ಮತ್ತು ಸಿದ್ದರಾಮಯ್ಯ ಮಾತ್ರ ಸಿಎಂ ಸ್ಪರ್ಧಿಗಳಲ್ಲ. ಜಿ. ಪರಮೇಶ್ವರ್ ಕೂಡ ಸಿಎಂ ಕ್ಯಾಂಡಿಡೇಟ್. ದಲಿತ ಸಿಎಂ ಆಗಬೇಕು ಎಂದು ಪರಮೇಶ್ವರ್ ಸದ್ದಿಲ್ಲದೆ ತಯಾರಿ ನಡೆಸುತ್ತಿದ್ದಾರೆ ಎಂದು ಮೂರನೇ ಹೆಸರನ್ನು ತೇಲಿಬಿಟ್ಟಿದ್ದಾರೆ. ಎಲ್ಲರೂ ಸಿಎಂ ಸ್ಥಾನಕ್ಕೆ ಸ್ಪರ್ಧೆ ಮಾಡುವುದು ತಪ್ಪಲ್ಲ, ಕೂಸು ಹುಟ್ಟುವ ಮೊದಲು ತೊಟ್ಟಿಲು ಕಟ್ಟಿ ತೂಗಿದ್ರೆ ಹೇಗೆ ಎಂದು ಟಾಂಗ್ ಕೊಟ್ಟಿದ್ದಾರೆ.

    ಕಾಂಗ್ರೆಸ್ ಎಂಬ ಹಡಿಲು ಭೂಮಿ:
    ಕಾಂಗ್ರೆಸ್ ಕಥೆ ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದಂತಾಯ್ತು. ರಾಜ್ಯ ಕಾಂಗ್ರೆಸ್ಸಿನಲ್ಲಿ ಮುಂದಿನ ಸಿಎಂ ಚರ್ಚೆ ನಡೆಯುತ್ತಿದೆ ಎಂದು ಸಚಿವ ಬಿಸಿ ಪಾಟೀಲ್ ಕಾಂಗ್ರೆಸ್ ನಾಯಕರಿಗೆ ಚಿವುಟಿದ್ದಾರೆ. ಇದನ್ನೂ ಓದಿ: ಉಡುಪಿಯ ಗದ್ದೆಯಲ್ಲಿ ಹೂತುಹೋದ ಕೃಷಿ ಸಚಿವರ ಕಾರು

    ಕಾಂಗ್ರೆಸ್ ಪಕ್ಷ ಈಗಾಗಲೇ ನಿರ್ಣಾಮ ಆಗಿದೆ. ನಾಟಿ ಮಾಡುವ ಮೊದಲು ಬೆಳೆ ತೆಗೆಯಲು ಸಾಧ್ಯವಿಲ್ಲ. 2023ರ ಚುನಾವಣೆಯಲ್ಲಿ ಮೊದಲು ನೀವು ಗೆಲ್ಲಿ ಆಮೇಲೆ ಸಿಎಂ ವಿಚಾರ ಚರ್ಚೆ ಮಾಡಿ. ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇದೆ. ಇವರು ಈಗಲೇ ಕುರ್ಚಿಗೆ ಕಿತ್ತಾಡುತ್ತಿದ್ದಾರೆ ಎಂದರೆ ಜನ ಅರ್ಥ ಮಾಡಿಕೊಳ್ಳಬೇಕು. ಕಾಂಗ್ರೆಸ್ ಹಡಿಲು ಭೂಮಿಯನ್ನು ಹಿಡಿದುಕೊಂಡು ಕನಸು ಕಾಣುತ್ತಿದೆ ಎಂದು ವ್ಯಂಗ್ಯವಾಡಿದರು. ಮುಂದಿನ 2023ರ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಬಿ.ಸಿ ಪಾಟೀಲ್ ಹೇಳಿದರು.

  • ಉಡುಪಿಯ ಗದ್ದೆಯಲ್ಲಿ ಹೂತುಹೋದ ಕೃಷಿ ಸಚಿವರ ಕಾರು

    ಉಡುಪಿಯ ಗದ್ದೆಯಲ್ಲಿ ಹೂತುಹೋದ ಕೃಷಿ ಸಚಿವರ ಕಾರು

    – 2000 ಎಕ್ರೆ ಬೇಸಾಯ ನಾಟಿಗೆ ಚಾಲನೆ

    ಉಡುಪಿ: ಕೃಷಿ ಚಟುವಟಿಕೆಯನ್ನು ಗಮನಿಸಿ ನೂತನ ಬೇಸಾಯ ನಾಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಆಗಮಿಸಿದ್ದ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರು ಸಂಚರಿಸುತ್ತಿದ್ದ ಕಾರು ಜಿಲ್ಲೆಯ ಕಡೆಕಾರು ಎಂಬಲ್ಲಿ ಕೆಸರಿನಲ್ಲಿ ಹೂತು ಹೋಗಿದೆ. ಭಾರೀ ಮಳೆಗೆ ತೇವಗೊಂಡಿದ್ದ ಗದ್ದೆಗೆ ಕಾರು ಇಳಿಸಿದ್ದೇ ಈ ಪಜೀತಿಗೆ ಕಾರಣವಾಗಿದೆ.

    ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಕೇದಾರೋತ್ಥಾನ ಬೇಸಾಯ ಅಭಿಯಾನ ಆರಂಭಗೊಂಡಿದೆ. ಉಡುಪಿ ವಿಧಾನಸಭಾ ಕ್ಷೇತ್ರದ ಬೀಳುಬಿಟ್ಟ 2000 ಎಕರೆ ಗದ್ದೆಯನ್ನು ಬೇಸಾಯ ಮಾಡಲಾಗುತ್ತಿದೆ. ಈ ಪುನಶ್ಚೇತನ ಕಾರ್ಯಕ್ರಮದ ನಾಟಿ ಕಾರ್ಯಕ್ಕೆ ಕೃಷಿ ಸಚಿವರು ಆಗಮಿಸಿದ್ದರು. ಈ ಸಂದರ್ಭ ಕೆಸರಿನಲ್ಲಿ ಸಚಿವರ ಕಾರು ಹೂತಿದೆ. ಉಡುಪಿಯ ಕಡೆಕಾರು ಎಂಬಲ್ಲಿ ಘಟನೆ ನಡೆದಿದ್ದು, ಕಾರು ಮೇಲೆತ್ತಲು ಬಿಜೆಪಿ ನಾಯಕರು, ಸ್ಥಳೀಯ ಜನ ಪ್ರತಿನಿಧಿಗಳು ಕೆಲಕಾಲ ಪರದಾಟ ಮಾಡಿದರು. ನಂತರ ಕೃಷಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಯುವಕರು ಓಡೋಡಿ ಬಂದು ಸಚಿವರ ಕಾರನ್ನು ತಳ್ಳಿ ಮೇಲೆ ಎತ್ತಿದರು. ಇದನ್ನೂ ಓದಿ: ಆನ್‍ಲೈನ್ ಕ್ಲಾಸ್‍ಗಾಗಿ 2 ಕಿ.ಮೀ ದೂರದಲ್ಲಿ ತಾವೇ ಕ್ಲಾಸ್ ರೂಂ ರೆಡಿ ಮಾಡಿದ ವಿದ್ಯಾರ್ಥಿಗಳು

    ಉಡುಪಿ ನಗರದಾದ್ಯಂತ ಮುಂಜಾನೆಯಿಂದ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಗೆ ಸುತ್ತಮುತ್ತಲ ಗದ್ದೆಗಳು ತೇವಗೊಂಡಿದ್ದು, ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಜಿಲ್ಲೆಯಾದ್ಯಂತ ಮೋಡ ಮುಸುಕಿದೆ.

  • ಯೋಗವೆನ್ನುವುದು ದೈನಂದಿನ ಅಭ್ಯಾಸದ ಭಾಗವಾಗಬೇಕು: ಬಿ.ಸಿ.ಪಾಟೀಲ್

    ಯೋಗವೆನ್ನುವುದು ದೈನಂದಿನ ಅಭ್ಯಾಸದ ಭಾಗವಾಗಬೇಕು: ಬಿ.ಸಿ.ಪಾಟೀಲ್

    ಹಾವೇರಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಕೃಷಿ ಸಚಿವರಾಗಿರುವ ಬಿ.ಸಿ.ಪಾಟೀಲ್ ಹಿರೇಕೆರೂರಿನ ಬಯಲು ಬಸವದೇವರ ದೇವಸ್ಥಾನದ ಆವರಣದಲ್ಲಿ ಅರ್ಚಕರಾದ ನಿಂಗಾಚಾರ್ ಮಾಯಾಚಾರ್ ನೇತೃತ್ವದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರೊಂದಿಗೆ ಯೋಗ ಮಾಡಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 224 ಕ್ಷೇತ್ರಗಳಲ್ಲಿಯೂ ಬಿಜೆಪಿ ವತಿಯಿಂದ ಇಂದು ಯೋಗ ದಿನಾಚರಣೆ ನಡೆಸಲಾಗುತ್ತಿದೆ. ಅಂತೆಯೇ ತಮ್ಮ ಮತಕ್ಷೇತ್ರದಲ್ಲಿಯೂ ಯೋಗ ದಿನಾಚರಣೆ ಆಚರಿಸಲಾಗಿದೆ. ಯೋಗ ಎನ್ನುವುದು ನಮ್ಮ ದೇಶದ ಪ್ರಾಚೀನ ಪದ್ಧತಿಯಾಗಿದ್ದು, ಯೋಗದ ಮಹತ್ವ ಇಡೀ ವಿಶ್ವಕ್ಕೆ ಸಾರಿದೆ. ಯೋಗವು ಭಾರತೀಯ ಮೂಲದ ಸುಮಾರು 6 ಸಾವಿರ ವರ್ಷ ಹಳೆಯದಾಗಿದೆ. ಭೌತಿಕ, ಮಾನಸಿಕ, ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ ಎಂದಿದ್ದಾರೆ.

    ಭಾರತದ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಶ್ವ ಸಂಸ್ಥೆಯ ತಮ್ಮ ಭಾಷಣದಲ್ಲಿ ವರ್ಷದ ಅತಿ ದೀರ್ಘ ದಿನವಾದ ಜೂನ್ 21 ರಂದು ವಿಶ್ವ ಯೋಗ ದಿನ ಆಚರಿಸುವಂತೆ ಕರೆ ನೀಡಿದರು. ಮೊದಲ ಅಂತಾರಾಷ್ಟ್ರೀಯ ಯೋಗ ದಿನವನ್ನು ಹೊಸದಿಲ್ಲಿಯ ರಾಜಪಥ್‍ನಲ್ಲಿ ನೆಡೆಸಲು ಭಾರತ ಸರ್ಕಾರ ಕಾರ್ಯಕ್ರಮ ರೂಪಿಸಿತ್ತು ಎಂದರು.

    ಯೋಗವೆನ್ನುವುದು ಆಚರಣೆಯಾಗದೇ ದೈನಂದಿನ ಭಾಗವಾಗಬೇಕು. ಯೋಗದಿಂದ ಫಿಟ್ ಎಂಡ್ ಫೈನ್ ಆಗಿರಬಹುದು. ಸದೃಢ ಆರೋಗ್ಯದ ಗುಟ್ಟು ಇದಾಗಿದ್ದು, ಮಾನಸಿಕ ಸ್ಥೈರ್ಯಕ್ಕೆ ಯೋಗ ಸಾಧನವಾಗಿದೆ. ಪ್ರತಿದಿನ 15 ನಿಮಿಷ ಒಂದೆರಡು ಆಸನವನ್ನಾದರೂ ದೈನಂದಿನ ರೂಢಿ ಮಾಡಿಕೊಳ್ಳಬೇಕು. ಯೋಗವೆನ್ನುವುದು ದೈಹಿಕ ಪ್ರಶಿಕ್ಷಣ ಮಾತ್ರವಲ್ಲದೇ ಮಾನಸಿಕ ಸಾಧನೆಯೂ ಆಗಬೇಕೆಂದು ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

    ಯೋಗ ದಿನಾಚರಣೆಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರಾದ ಶಿವಕುಮಾರ್ ತಿಪ್ಪಶೆಟ್ಟಿ, ಕಂಠಾದರ ಅಂಗಡಿ, ರಮೇಶ್,ಕುಸುಮ ಬಣಕಾರ್,ಲತಾ ಬಣಕಾರ್ ಸೇರಿದಂತೆ ಮತ್ತಿತ್ತರರು ಪಾಲ್ಗೊಂಡಿದ್ದರು.

  • ಕಲಾವಿದರು, ಹವ್ಯಾಸಿ ರಂಗಕರ್ಮಿಗಳಿಗೆ ಆಹಾರ ಕಿಟ್ ವಿತರಿಸಿದ ಎಸ್‍ಟಿಎಸ್

    ಕಲಾವಿದರು, ಹವ್ಯಾಸಿ ರಂಗಕರ್ಮಿಗಳಿಗೆ ಆಹಾರ ಕಿಟ್ ವಿತರಿಸಿದ ಎಸ್‍ಟಿಎಸ್

    ಮೈಸೂರು: ಕೊರೊನಾದಿಂದಾಗಿ ಸಂಕಷ್ಟಕ್ಕೆ ಒಳಗಾಗಿರುವ ನೂರಾರು ಚಲನಚಿತ್ರ ಕಲಾವಿದರು, ಸಹ ಕಲಾವಿದರು ಮತ್ತು ಹವ್ಯಾಸಿ ರಂಗಕರ್ಮಿಗಳಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಆಹಾರ ಕಿಟ್ ವಿತರಿಸಿದ್ದಾರೆ.

    ಮೈಸೂರಿನಲ್ಲಿ ನೂರಾರು ಕಲಾವಿದರು ಕೊರೊನಾದಿಂದಾಗಿ ಯಾವುದೇ ಶೂಟಿಂಗ್ ಹಾಗೂ ಕಾರ್ಯಕ್ರಮವಿಲ್ಲದೆ ಕಷ್ಟಪಡುತ್ತಿರುವುದನ್ನು ಮನಗಂಡು ಸೋಮಶೇಖರ್ ಅವರು ಕೃಷಿ ಸಚಿವ ಬಿ.ಸಿ ಪಾಟೀಲ್ ಉಪಸ್ಥಿತಿಯಲ್ಲಿ ಆಹಾರ ಕಿಟ್ ವಿತರಣೆ ಮಾಡಿ ಲಸಿಕಾಕರಣಕ್ಕೆ ಚಾಲನೆ ನೀಡಿದರು. ಇದನ್ನೂ ಓದಿ: ರಸಗೊಬ್ಬರ, ಬಿತ್ತನೆ ಬೀಜದ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್

    ಕಲಾವಿದರಿಗೆ 520ಕ್ಕೂ ಹೆಚ್ಚು ಆಹಾರ ಕಿಟ್‍ಗಳನ್ನು ನೀಡಿದ್ದು, ಈ ಪೈಕಿ 120 ಚಲನಚಿತ್ರ ಸಹ ಕಲಾವಿದರಿಗೆ ಹಾಗೂ 400 ರಂಗಕರ್ಮಿಗಳಿಗೆ ವಿತರಿಸಲಾಗುತ್ತಿದೆ. ಇನ್ನೂ ಹೆಚ್ಚಿನ ಕಿಟ್ ಅಗತ್ಯವಿದ್ದರೆ ಒದಗಿಸಲಾಗುವುದು ಎಂದು ಉಸ್ತುವಾರಿ ಸಚಿವರು ತಿಳಿಸಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಹೆಚ್. ಚೆನ್ನಪ್ಪ ಅವರು ಮಾಹಿತಿ ನೀಡಿದ್ದಾರೆ.

  • ‘ಕೃಷಿ ಇಲಾಖೆ ನಡಿಗೆ – ರೈತರ ಕಡೆಗೆ’ ಕಾರ್ಯಕ್ರಮಕ್ಕೆ ಬಿ.ಸಿ ಪಾಟೀಲ್ ಚಾಲನೆ

    ‘ಕೃಷಿ ಇಲಾಖೆ ನಡಿಗೆ – ರೈತರ ಕಡೆಗೆ’ ಕಾರ್ಯಕ್ರಮಕ್ಕೆ ಬಿ.ಸಿ ಪಾಟೀಲ್ ಚಾಲನೆ

    ಬೆಂಗಳೂರು: ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಇಂದು ಚಾಮರಾಜನಗರ ಜಿಲ್ಲಾಡಳಿತ ಭವನದಲ್ಲಿ ಮುಂಗಾರು ಹಂಗಾಮಿನ ಪೂರ್ವಸಿದ್ಧತೆ ಸಭೆ ನಡೆಸಿದರು. ಜಿಲ್ಲೆಯ ಜನಪ್ರತಿನಿಧಿಗಳು, ಕೃಷಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆ ಇದೇವೇಳೆ ಸಚಿವ ಬಿ ಸಿ ಪಾಟೀಲ್ ಸಮಾಲೋಚನೆ ನಡೆಸಿದರು.

    ಆನಂತರ ರೈತರಿಗೆ ಕೃಷಿ ಚಟುವಟಿಕೆಗಳ ಬಗ್ಗೆ ಮಾಹಿತಿ ಹಾಗೂ ಇಲಾಖೆಯ ಇತರೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪ್ರಚಾರ ನೀಡಲು “ಇಲಾಖೆಯ ನಡಿಗೆ ರೈತರ ಕಡೆಗೆ” ಎಂಬ ಕಾರ್ಯಕ್ರಮದಡಿ ವಾಹನಗಳಿಗೆ ಚಾಲನೆ ನೀಡಿದರು.

    ಈ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲೆಯ ಜನಪ್ರತಿನಿಧಿಗಳು, ಕೃಷಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.