Tag: bee attack

  • ಜಮೀನಿನಲ್ಲಿ ಕೆಲಸ ಮಾಡುವಾಗ ಹೆಜ್ಜೇನು ದಾಳಿ – ಸ್ಥಳದಲ್ಲೇ ರೈತ ಸಾವು

    ಜಮೀನಿನಲ್ಲಿ ಕೆಲಸ ಮಾಡುವಾಗ ಹೆಜ್ಜೇನು ದಾಳಿ – ಸ್ಥಳದಲ್ಲೇ ರೈತ ಸಾವು

    ಹಾಸನ: ಹೆಜ್ಜೇನು ದಾಳಿಯಿಂದ (Bee Attack) ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ (Farmer) ಸ್ಥಳದಲ್ಲೇ ಸಾವಿಗೀಡಾದ ಘಟನೆ ಹಾಸನದ (Hassan) ಕೆಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಮೃತನನ್ನು ಜಗದೀಶ್ (55) ಎಂದು ಗುರುತಿಸಲಾಗಿದೆ. ಅವರು ತಮ್ಮ ಜಮೀನಿನಲ್ಲಿ ದಿನಚರಿಯಂತೆ ಕೃಷಿ ಕಾರ್ಯಗಳಲ್ಲಿ ತೊಡಗಿದ್ದಾಗ ಜೇನು ದಾಳಿ ನಡೆಸಿದೆ. ತೀವ್ರ ಅಸ್ವಸ್ಥಗೊಂಡ ಅವರು ಸ್ಥಳದಲ್ಲೆ ಮೃತಪಟ್ಟಿದ್ದಾರೆ.

    ಜಗದೀಶ್ ಅವರು ಆಕಸ್ಮಿಕವಾಗಿ ಹೆಜ್ಜೇನಿನ ಗೂಡನ್ನು ಅಲುಗಿಸಿದ ಪರಿಣಾಮ ದಾಳಿ ಮಾಡಿವೆ. ಬಹಳ ಸಂಖ್ಯೆಯಲ್ಲಿ ಹೆಜ್ಜೇನುಗಳು ಕಚ್ಚಿದ ಪರಿಣಾಮ, ಅವರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

    ಈ ಘಟನೆ ಸಂಬಂಧ ದುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ – 42 ಮಂದಿಗೆ ಗಾಯ, 19 ಜನ ಆಸ್ಪತ್ರೆಗೆ

    ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ – 42 ಮಂದಿಗೆ ಗಾಯ, 19 ಜನ ಆಸ್ಪತ್ರೆಗೆ

    ಚಾಮರಾಜನಗರ: ಶವಸಂಸ್ಕಾರಕ್ಕೆ (Funeral) ತೆರಳಿದ್ದ ವೇಳೆ ಹೆಜ್ಜೇನು ದಾಳಿ (Bee Attack) ನಡೆಸಿ ಹಲವರು ಗಾಯಗೊಂಡ ಘಟನೆ ಚಾಮರಾಜನಗರ (Chamarajanagar) ಜಿಲ್ಲೆಯ ಗುಂಡ್ಲುಪೇಟೆ (Gundlupet) ತಾಲೂಕಿನ ಬಸವಾಪುರ ಗ್ರಾಮದಲ್ಲಿ ನಡೆದಿದೆ.

    ಹೆಜ್ಜೇನು ದಾಳಿಯಲ್ಲಿ 42 ಮಂದಿ ಗಾಯಗೊಂಡಿದ್ದು, 19 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ರಾಮದ ಮಹಾದೇವಯ್ಯ ಎಂಬವರ ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಅಂತ್ಯಸಂಸ್ಕಾರದಲ್ಲಿ ಬೆಂಕಿ ಹಾಕಿದ್ದ ಹೊತ್ತಲ್ಲಿ ಮರದ ಮೇಲೆ ಗೂಡು ಕಟ್ಟಿದ್ದ ಹೆಜ್ಜೇನು ದಾಳಿ ನಡೆಸಿದೆ. ಇದನ್ನೂ ಓದಿ: ಹೈ-ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ವಾರ್ಷಿಕೋತ್ಸವ: ಸ್ಕೇಟರ್‌ಗಳಿಗೆ ಚಿನ್ನ, ಬೆಳ್ಳಿ ನಾಣ್ಯ ನೀಡಿ ಗೌರವ

    ಘಟನೆಯಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಹೆಚ್‌ಒ ಚಿದಂಬರಂ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಮಂಗಳೂರು ದಕ್ಷಿಣ ಮಂಡಲ ಮಹಿಳಾ‌ ಮೋರ್ಚಾದಿಂದ ಉಚಿತ‌ ಹೊಲಿಗೆ ಯಂತ್ರ ವಿತರಣೆ

  • ಉತ್ತರ ಕನ್ನಡ ಜಿಲ್ಲೆಯ ಸಾತೋಡ್ಡಿ ಜಲಪಾತಕ್ಕೆ ಪ್ರವಾಸಿಗರಿಗೆ ನಿಷೇಧ

    ಉತ್ತರ ಕನ್ನಡ ಜಿಲ್ಲೆಯ ಸಾತೋಡ್ಡಿ ಜಲಪಾತಕ್ಕೆ ಪ್ರವಾಸಿಗರಿಗೆ ನಿಷೇಧ

    ಕಾರವಾರ: ಜಲಪಾತ ವೀಕ್ಷಣೆಗೆ ತೆರಳುವ ಪ್ರವಾಸಿಗರ ಮೇಲೆ ನಿರಂತರ ಜೇನು ದಾಳಿ (Bee Attack) ಮಾಡುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ (Uttara Kannada) ಜಿಲ್ಲೆಯ ಯಲ್ಲಾಪುರದ (Yellapur) ಪ್ರಸಿದ್ಧ ಸಾತೊಡ್ಡಿ (Sathoddi Falls) ಜಲಪಾತಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

    ಕಳೆದ ಎರಡು ದಿನಗಳಲ್ಲಿ 30ಕ್ಕೂ ಅಧಿಕ ಪ್ರವಾಸಿಗರಿಗೆ ಜೇನು ದಾಳಿ ಮಾಡಿದ್ದು, ಇಂದು ಜೇನು ಕಡಿತಕ್ಕೆ ಒಳಗಾಗಿ ಗಂಭೀರ ಗಾಯಗೊಂಡಿದ್ದ ನಾಲ್ವರು ಪ್ರವಾಸಿಗರಿಗೆ ಹುಬ್ಬಳ್ಳಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ನೀರಲ್ಲಿ ಆಟವಾಡಲು ಸಾತೊಡ್ಡಿ ಫಾಲ್ಸ್‌ಗೆ ಹೆಚ್ಚು ಪ್ರವಾಸಿಗರು ಭೇಟಿ ನೀಡುತಿದ್ದು, ಜಲಪಾತದ ಬಳಿಯೇ ಪ್ರವಾಸಿಗರ ಮೇಲೆ ಜೇನುಹುಳಗಳು ನಿರಂತರ ದಾಳಿ ಮಾಡುತ್ತಿದೆ. ಇದನ್ನೂ ಓದಿ: ಕೆನಡಾದಲ್ಲಿ ಭಾರತ ಮೂಲದ ವಿದ್ಯಾರ್ಥಿಯನ್ನು ಕಾರಿನೊಳಗೆ ಗುಂಡಿಕ್ಕಿ ಹತ್ಯೆ

    ಜೇನುಹುಳುಗಳ ದಾಳಿ ಹಿನ್ನೆಲೆ ಜಲಪಾತ ವೀಕ್ಷಣೆಗೆ ಅರಣ್ಯ ಇಲಾಖೆ ನಿರ್ಬಂಧ ಹೇರಿ ಬಿಸಗೋಡ ಕ್ರಾಸ್‌ನಲ್ಲಿ ಬ್ಯಾನರ್ ಅಳವಡಿಸಿ ಪ್ರವಾಸಿಗರಿಗೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಮೈಸೂರು ಬಿಜೆಪಿ ಘಟಕದಿಂದ ಮೋದಿಗಾಗಿ ರೆಡಿಯಾಗಿದೆ ವಿಶೇಷ ಉಡುಗೊರೆ

  • ಖಾಸಗಿ ಶಾಲೆಯಲ್ಲಿ 40 ಕ್ಕೂ ಅಧಿಕ ಮಕ್ಕಳಿಗೆ ಕಚ್ಚಿ ಗಾಯಗೊಳಿಸಿದ ಹೆಜ್ಜೇನು

    ಖಾಸಗಿ ಶಾಲೆಯಲ್ಲಿ 40 ಕ್ಕೂ ಅಧಿಕ ಮಕ್ಕಳಿಗೆ ಕಚ್ಚಿ ಗಾಯಗೊಳಿಸಿದ ಹೆಜ್ಜೇನು

    ಹಾವೇರಿ: ಬಿಸಿಲಿನ ತಾಪಮಾನ ಹೆಚ್ಚಳಗೊಂಡ ಪರಿಣಾಮ ಖಾಸಗಿ ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ ಮಾಡಿದ ಘಟನೆ ಹಾವೇರಿಯಲ್ಲಿ ನಡೆದಿದೆ.

    ಹಾವೇರಿಯ ವಿದ್ಯಾನಗರದಲ್ಲಿರೋ ಕೆ.ಎಲ್.ಇ ಶಿಕ್ಷಣಸಂಸ್ಥೆಯ ಕಟ್ಟಡದಲ್ಲಿರೋ ಜೇನುಹುಳುಗಳು ದಾಳಿ ಮಾಡಿ 40 ಕ್ಕೂ ಅಧಿಕ ಮಕ್ಕಳು ಗಾಯಗೊಂಡಿದ್ದಾರೆ. ಒಂದು, ಎರಡು ಹಾಗೂ ಮೂರನೇ ತರಗತಿಯ ವಿದ್ಯಾರ್ಥಿಗಳ ಕೊಠಡಿ ಬಳಿ ಇರೋ ಹೆಜ್ಜೇನು ಮಕ್ಕಳಿಗೆ ಕಚ್ಚಿ ಗಾಯಗೊಳಿಸಿವೆ.

    ಕೂಡಲೇ ವಿದ್ಯಾರ್ಥಿಗಳನ್ನ ಅಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ಪೋಷಕರಿಗೆ ತಿಳಿಯುತ್ತಿದ್ದಂತೆ ಶಾಲೆಯ ಮುಂದೆ ಪೋಷಕರು ಜಮಾವಣೆಗೊಂಡಿದ್ದಾರೆ. ನಗರಸಭೆಯ ಸಿಬ್ಬಂದಿ ಹೆಜ್ಜೇನು ಇರೋ ಕಡೆ ಫಾಗಿಂಗ್ ವ್ಯವಸ್ಥೆ ಮಾಡಿ ಹೆಜ್ಜೇನು ನಿಯಂತ್ರಣ ಮಾಡುವ ವ್ಯವಸ್ಥೆ ಮಾಡಿದ್ದಾರೆ.

    ಈ ಘಟನೆಯಲ್ಲಿ ಯಾವುದೇ ಮಕ್ಕಳಿಗೆ ಪ್ರಾಣಾಪಾಯವಾಗಿಲ್ಲ. ಕೆಲಕಾಲ ಪೋಷಕರು ಆತಂಕಕ್ಕೆ ಒಳಗಾಗಿ, ಮಕ್ಕಳನ್ನ ಶಾಲೆಯಿಂದ ಮನೆಗೆ ಕರೆದುಕೊಂಡು ಹೋಗಿದ್ದಾರೆ.