Tag: beed district

  • ಅಪಘಾತವಾಗಿದ್ದ ಕಾರು ತೆರವು ಮಾಡ್ತಿದ್ದವರ ಮೇಲೆ ಹರಿದ ಟ್ರಕ್ – ಆರು ಮಂದಿ ಸಾವು

    ಅಪಘಾತವಾಗಿದ್ದ ಕಾರು ತೆರವು ಮಾಡ್ತಿದ್ದವರ ಮೇಲೆ ಹರಿದ ಟ್ರಕ್ – ಆರು ಮಂದಿ ಸಾವು

    ಮುಂಬೈ: ಅಪಘಾತವಾಗಿದ್ದ ಕಾರನ್ನು ತೆರವು ಮಾಡುತ್ತಿದ್ದವರ ಮೇಲೆ ಟ್ರಕ್ ಹರಿದು ಆರು ಜನರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ (Maharashtra) ಬೀಡ್ ಜಿಲ್ಲೆಯಲ್ಲಿ ನಡೆದಿದೆ.

    ಮೃತರನ್ನು ಬೀಡ್‌ನ ಜಿಯೋರೈ ನಿವಾಸಿಗಳಾದ ಬಾಲು ಅಟ್ಕರೆ, ಭಾಗವತ್ ಪರಲ್ಕರ್, ಸಚಿನ್ ನನ್ನಾವ್ರೆ, ಮನೋಜ್ ಕರಂಡೆ, ಕೃಷ್ಣ ಜಾಧವ್ ಮತ್ತು ದೀಪಕ್ ಸುರಯ್ಯ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಬಿಜೆಪಿಯಿಂದ ಎಸ್‌ಟಿ ಸೋಮಶೇಖರ್‌, ಶಿವರಾಂ ಹೆಬ್ಬಾರ್‌ ಉಚ್ಚಾಟನೆ

    ಸೋಮವಾರ ರಾತ್ರಿ 8:30ರ ಸುಮಾರಿಗೆ ದೀಪಕ್ ಅಟ್ಕರೆ ಚಲಾಯಿಸಿಕೊಂಡು ಹೋಗುತ್ತಿದ್ದ ಕಾರು, ಬೀಡ್ ಗ್ರಾಮದಿಂದ 100 ಕಿ.ಮೀ ದೂರದಲ್ಲಿರುವ ರಾಷ್ಟ್ರೀಯ ಹೆದ್ದಾರಿ-52ರ ಡಿವೈಡರ್ ಬಳಿ ಅಪಘಾತಕ್ಕೀಡಾಯಿತು. ಅವಘಡವನ್ನು ನೋಡಿದ ಕೆಲವರು ಕಾರನ್ನು ರಸ್ತೆಯಿಂದ ತೆಗೆಯುತ್ತಿದ್ದರು. 11:30ರ ಸುಮಾರಿಗೆ ವೇಗವಾಗಿ ಬಂದ ಟ್ರಕ್, ತೆರವುಗೊಳಿಸುತ್ತಿದ್ದವರ ಮೇಲೆ ಹಾದು ಹೋಗಿದೆ. ಪರಿಣಾಮ ಆರು ಜನರು ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ.

    ಸದ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ ಹಾಗೂ ಟ್ರಕ್ ಚಾಲಕನನ್ನು ಪತ್ತೆ ಹಚ್ಚುವಲ್ಲಿ ನಿರತರಾಗಿದ್ದಾರೆ.ಇದನ್ನೂ ಓದಿ: ಮ್ಯಾನೇಜರ್ ಮೇಲೆ ಹಲ್ಲೆ- ನಟ ಉನ್ನಿ ಮುಕುಂದನ್ ವಿರುದ್ಧ ಕೇಸ್

  • ಮಹಾರಾಷ್ಟ್ರದ 1 ಜಿಲ್ಲೆಯಲ್ಲಿ ಮಾರ್ಚ್ 26ರಿಂದ ಏಪ್ರಿಲ್ 4ರವರೆಗೆ ಲಾಕ್‍ಡೌನ್

    ಮಹಾರಾಷ್ಟ್ರದ 1 ಜಿಲ್ಲೆಯಲ್ಲಿ ಮಾರ್ಚ್ 26ರಿಂದ ಏಪ್ರಿಲ್ 4ರವರೆಗೆ ಲಾಕ್‍ಡೌನ್

    ಮುಂಬೈ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚಾಗುತ್ತಿರುವ ಹಿನ್ನೆಲೆಯಲ್ಲಿ ಒಂದು ಜಿಲ್ಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದೆ.

    ಹೌದು. ಬೀಡ್ ಜಿಲ್ಲೆಯಲ್ಲಿ ಮಾರ್ಚ್ 26ರಿಂದ ಏಪ್ರಿಲ್ 4ರವರೆಗೆ ಸರ್ಕಾರ ಲಾಕ್‍ಡೌನ್ ಘೋಷಣೆ ಮಾಡಿದೆ. ವರದಿಗಳ ಪ್ರಕಾರ ಈ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ. ಹೀಗಾಗಿ ಲಾಕ್ ಡೌನ್ ಘೋಷಣೆ ಮಾಡಲಾಗಿದ್ದು, ಎಲ್ಲಾ ಮದುವೆ ಹಾಲ್, ಹೋಟೆಲ್ ಹಾಗೂ ರೆಸ್ಟೋರೆಂಟ್ ಗಳನ್ನು ಮುಚ್ಚಲಾಗುತ್ತದೆ.

    ಲಾಕ್ ಡೌನ್ ಸಂದರ್ಭದಲ್ಲಿ ಬೀಡ್ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳು, ಖಾಸಗಿ ಕಚೇರಿಗಳನ್ನು ಕೂಡ ಬಂದ್ ಮಾಡಲಾಗುತ್ತಿದ್ದು, ಉದ್ಯೋಗಿಗಳು ವರ್ಕ್ ಫ್ರಂ ಹೋಮ್ ಮೂಲಕ ಸಹಕರಿಸುವಂತೆ ಪ್ರೋತ್ಸಾಹಿಸಲಾಗುತ್ತದೆ. ಆದರೆ ದಿನಸಿ, ಹಾಲು ಮತ್ತು ಔಷಧಿಗಳನ್ನು ಒಳಗೊಂಡಂತೆ ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳಿಗೆ ಈ ಅವಧಿಯಲ್ಲಿ ವಿನಾಯಿತಿ ನೀಡಲಾಗುತ್ತದೆ.

    ಮಹಾರಾಷ್ಟ್ರದಲ್ಲಿ ಪ್ರತಿನಿತ್ಯ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದಿದ್ದರಿಂದ ಲಾಕ್‍ಡೌನ್ ಘೋಷಣೆ ಮಾಡಲಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 28,699 ಹೊಸ ಪ್ರಕರಣಗಳು ಕಂಡು ಬಂದಿದ್ದು, 13,165 ಮಂದಿ ಗುಣಮುಖರಾಗಿದ್ದಾರೆ. ಹಾಗೆಯೇ 132 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.

    ರಾಜ್ಯ ಆರೋಗ್ಯ ಇಲಾಖೆಯ ಪ್ರಕಾರ, 2,30,641 ಸಕ್ರಿಯ ಹಾಗೂ ಗುಣಮುಖರಾಗಿರುವ 22,47,495 ಪ್ರಕರಣಗಳು ಸೇರಿ ಒಟ್ಟು ಪ್ರಕರಣಗಳ ಸಂಖ್ಯೆ 25,33,026ಕ್ಕೆ ಏರಿಕೆಯಾಗಿದೆ. ಕಳೆದ ವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಗ ಆದಿತ್ಯ ಠಾಕ್ರೆ ಅವರಿಗೆ ಕೊರೊನಾ ಬಂದಿರುವುದು ದೃಢಪಟ್ಟಿತ್ತು.