Tag: Beef Meat

  • ಗೋಮಾಂಸ ಮಾರಾಟ ಮಾಡ್ತಿದ್ದ ಇಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ – ವೀಡಿಯೋ ವೈರಲ್

    ಗೋಮಾಂಸ ಮಾರಾಟ ಮಾಡ್ತಿದ್ದ ಇಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ – ವೀಡಿಯೋ ವೈರಲ್

    ರಾಯಪುರ: ದನದ ಮಾಂಸ (Beef Meat) ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ನಡುರಸ್ತೆಯಲ್ಲೇ ವಿವಸ್ತ್ರಗೊಳಿಸಿ ಥಳಿಸಿರುವ ಆಘಾತಕಾರಿ ಘಟನೆ ಛತ್ತಿಸ್‌ಗಢದ (Chhattisgarh) ಬಿಸ್ಲಾಪುರದಲ್ಲಿ ನಡೆದಿದೆ.

    ದನದ ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರನ್ನು ವಿವಸ್ತ್ರಗೊಳಿಸಿ ರಸ್ತೆಯಲ್ಲಿ ಮೆರವಣಿಗೆ ಮಾಡುತ್ತಿದ್ದಂತೆ ಹಿಂಬದಿಯಿಂದ ಥಳಿಸಲು ಪ್ರಾರಂಭಿಸಿದ್ದಾರೆ. ಹಲವರು ಇದನ್ನು ತಮ್ಮ ಮೊಬೈಲ್ (Mobile) ಫೋನ್‌ಗಳಲ್ಲಿ ಸೆರೆಹಿಡಿದಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ಹರಿದಾಡುತ್ತಿದೆ. ಇದನ್ನೂ ಓದಿ: ದಕ್ಷಿಣ ಕೊರಿಯಾದ ಹ್ಯಾಲೋವೀನ್ ದುರಂತದಲ್ಲಿ ಖ್ಯಾತ ನಟ, ಗಾಯಕ ಸಾವು

    ಘಟನೆಗೆ ಸಂಬಂಧಿಸಿದಂತೆ ನರಸಿಂಗ್ ದಾಸ್ (50) ಮತ್ತು ರಾಮನಿವಾಸ್ ಮೆಹರ್ (52) ಆರೋಪಿಗಳಿಂದ 33 ಕೆಜಿ ಗೋ ಮಾಂಸ ವಶಪಡಿಸಿಕೊಂಡಿರುವುದಾಗಿ ಪೊಲೀಸರು (Police) ತಿಳಿಸಿದ್ದಾರೆ. ಬಳಿಕ ಇಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಪಶುವೈದ್ಯರಿಂದ ಮಾಂಸ ಪರೀಕ್ಷೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಬುರ್ಖಾ ಹಾಕಿಲ್ಲ ಅಂತ ಅಫ್ಘನ್ ವಿವಿ ಹೊರಗಡೆ ವಿದ್ಯಾರ್ಥಿನಿಯರ ಮೇಲೆ ತಾಲಿಬಾನ್ ದಾಳಿ

    ಆರೋಪಿಗಳಿಬ್ಬರು ಗೋಣಿಚೀಲದಲ್ಲಿ ವಸ್ತುಗಳನ್ನು ತುಂಬಿಕೊಂಡು ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಸ್ಥಳೀಯರು ಅನುಮಾನಗೊಂಡು ಪರಿಶೀಲಿಸಿದಾಗ ಗೋಮಾಂಸ ಇರುವುದು ಪತ್ತೆಯಾಗಿದೆ. ಇದರಿಂದ ಆಕ್ರೋಶಗೊಂಡ ಕೆಲವರು ಅವರನ್ನು ವಿವಸ್ತ್ರಗೊಳಿಸಿ, ರಸ್ತೆಯಲ್ಲೇ ಬೆಲ್ಟ್ನಿಂದ ಥಳಿಸಲು ಪ್ರಾರಂಭಿಸಿದ್ದಾರೆ. ನಂತರ ಪೊಲೀಸರಿಗೆ (Chhattisgarh Police) ಮಾಹಿತಿ ನೀಡಲಾಗಿದ್ದು, ಇಬ್ಬರು ಆರೋಪಿಗಳೊಂದಿಗೆ 33 ಕೆಜಿ ಗೋಮಾಂಸವನ್ನೂ ವಶಪಡಿಸಿಕೊಂಡಿದ್ದಾರೆ.

    CRIME

    ಪಶುವೈದ್ಯರಿಂದ ಇನ್ನೂ ವರದಿ ಬಂದಿಲ್ಲವಾದ್ದರಿಂದ ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಪೊಲೀಸ್ ಅಧಿಕಾರಿಗಳೂ ಪ್ರತಿಕ್ರಿಯೆ ನೀಡಿಲ್ಲ.

    Live Tv
    [brid partner=56869869 player=32851 video=960834 autoplay=true]

  • ಗೋಮಾಂಸ ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್

    ಗೋಮಾಂಸ ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್

    ಬೆಳಗಾವಿ: ಕರ್ನಾಟಕದಿಂದ ಗೋವಾ ರಾಜ್ಯಕ್ಕೆ ಗೋಮಾಂಸ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ತಡರಾತ್ರಿ ಹಿರೇಬಾಗೇವಾಡಿ ಪೊಲೀಸರು ಬಂಧಿಸಿದ್ದರು.

    ಗೋವಾದ ಮಡಗಾವ್‍ನ ಹುಸೇನ್ ದೇಸಾಯಿ ಹಾಗೂ ಆಜಾದ್ ಕಾದ್ರೊಳ್ಳಿ ಎಂಬ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರು ಬೆಳಗಾವಿ ತಾಲೂಕಿನ ಹಾಲಗಿಮರಡಿ ಕ್ರಾಸ್ ಮೂಲಕ ಎರಡು ವಾಹನಗಳಲ್ಲಿ ಅಕ್ರಮವಾಗಿ ಗೋವಾ ರಾಜ್ಯಕ್ಕೆ ಗೋಮಾಂಸವನ್ನು ಸಾಗಿಸುತ್ತಿದ್ದರು.

    ಈ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಹಿರೇಬಾಗೆವಾಡಿ ಪೊಲೀಸರು ಗೋಮಾಂಸ ಸಮೇತ ಇಬ್ಬರು ಆರೋಪಿಗಳು ಮತ್ತು ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳನ್ನು ಬಂಧಿಸುವ ವೇಳೆ ಪೊಲೀಸ್ ಸಿಬ್ಬಂದಿ ನಾಗಪ್ಪ ಸುತಗಟ್ಟಿ ಕೂಡ ಇದರಲ್ಲಿ ಭಾಗಿಯಾಗಿದ್ದಾರೆ ಎಂಬ ಮಾಹಿತಿ ದೊರೆತಿದ್ದು ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಕಾರ್ಯಾಚರಣೆಯಲ್ಲಿ ಹಿರೇಬಾಗೇವಾಡಿ ಠಾಣೆ ಸಿಪಿಐ ವಿಜಯಕುಮಾರ್ ಸಿನ್ನೂರ್ ಮಾರ್ಗದರ್ಶನದಲ್ಲಿ ಪಿಎಸ್‍ಐ ಶಶಿಕುಮಾರ್ ಕೊರಲೆ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಭಾಗಿಯಾಗಿದ್ದರು.

  • ಮಾರುವೇಶದಲ್ಲಿ ಪೊಲೀಸರ ದಾಳಿ – 400 ಕೆ.ಜಿ ದನದ ಮಾಂಸ ವಶ

    ಮಾರುವೇಶದಲ್ಲಿ ಪೊಲೀಸರ ದಾಳಿ – 400 ಕೆ.ಜಿ ದನದ ಮಾಂಸ ವಶ

    ಉಡುಪಿ: ಜಿಲ್ಲೆಯ ಕಾಪು ತಾಲೂಕಿನ ಬಡಾ ಉಚ್ಚಿಲ ಗ್ರಾಮ ಪಂಚಾಯತ್ ಸದಸ್ಯ ರಫೀಕ್ ಯಾನೇ, ಡಿಯೋ ರಫೀಕ್ ಉಸ್ತುವಾರಿವಾರಿಯಲ್ಲಿ ಉಚ್ಚಿಲ ಭಾಸ್ಕರ ನಗರದಲ್ಲಿ ನಡೆಯುತ್ತಿದ್ದ ಬೃಹತ್ ಅಕ್ರಮ ಕಸಾಯಿಖಾನಿಗೆ ಪೊಲೀಸರು ದಾಳಿ ಮಾಡಿದ್ದಾರೆ.

    ಸರ್ಕಲ್ ಇನ್ಸ್‌ಪೆಕ್ಟರ್ ಹಾಗೂ ಪಡುಬಿದ್ರಿ ಎಸ್‍ಐ ನೇತೃತ್ವದಲ್ಲಿ ದಾಳಿ ನಡೆಸಿದ ವೇಳೆ ಭಾರೀ ದನದ ಮಾಂಸ ಸಹಿತ ಜೀವಂತ ದನ ಪತ್ತೆಯಾಗಿದೆ. ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಪಡುಬಿದ್ರೆ ವ್ಯಾಪ್ತಿಯಲ್ಲಿ ಹಲವು ಮನೆಗಳಲ್ಲಿ ಅಕ್ರಮವಾಗಿ ದನವನ್ನು ಕಡಿಯಲಾಗುತ್ತದೆ ಎಂಬ ಮಾಹಿತಿ ಪೊಲೀಸರಿಗೆ ತಿಳಿದಿತ್ತು. ಮಾಂಸ ಮಾರುವವರು ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಓಡಾಡಿಕೊಂಡಿದ್ದರು. ಪಡುಬಿದ್ರಿ ಪೊಲೀಸ್ ಠಾಣೆಯ ಸಿಬ್ಬಂದಿ ಮಾರುವೇಷದಲ್ಲಿ ಮನೆಯೊಂದಕ್ಕೆ ದಾಳಿ ಮಾಡಿದಾಗ ಜೀವಂತ ಜನ ದನದ ಮಾಂಸ ಮತ್ತು ಆರೋಪಿಗಳು ಸಿಕ್ಕಿಹಾಕಿಕೊಂಡಿದ್ದಾರೆ.  ಇದನ್ನೂ ಓದಿ: ಉಡದ ಮೇಲೆ ಅತ್ಯಾಚಾರಗೈದ ನಾಲ್ವರು ಅರೆಸ್ಟ್

    ದಿನಕ್ಕೊಂದು ಮನೆಗಳೇ ಹಸುವಿನ ವಧಾ ಸ್ಥಳ. ಪ್ರಮುಖ ಆರೋಪಿ ರಫೀಕ್ ಯಾನೇ, ಡಿಯೋ ರಫೀಕ್ ಪೊಲೀಸ್ ದಾಳಿ ವೇಳೆ ಪರಾರಿಯಾಗಿದ್ದು, ಇನ್ನೊರ್ವ ಆರೋಪಿ ಮನೆ ಮಾಲೀಕ ಸಾಬನ್ ತಲೆ ಮರೆಸಿಕೊಂಡಿದ್ದಾನೆ. ಉಳಿದಂತೆ ಕಳತ್ತೂರು ಸೂರ್ಯಗುಡ್ಡೆ ನಿವಾಸಿಗಳಾದ ಮಹಮ್ಮದ್ ರಫೀಕ್ (44), ಇಲಿಯಾಸ್ (38), ಉಚ್ಚಿಲ ಭಾಸ್ಕರ ನಗರ ಬಿಸ್ಮಿಲ್ಲಾ ಸ್ಕೋರ್ ಬಳಿ ನಿವಾಸಿ ಮೋಹಿನ್ ಉದ್ಧೀನ್ (17), ಮೂಳೂರು ಸುನ್ನಿ ಸೆಂಟರ್ ಬಳಿ ನಿವಾಸಿ ಮೊಯಿದಿನಬ್ಬ (40) ಬಂಧಿತ ಆರೋಪಿಗಳು ಯಾರಿಗೂ ಸಂಶಯ ಬರಬಾರದು ಎಂದು ದಿನಕ್ಕೊಂದು ಮನೆಯಲ್ಲಿ ಮಾಂಸ ಮಾಡುತ್ತಿದ್ದರು.

    ನಿಖರ ಮಾಹಿತಿ ದೊರೆತ ಹಿನ್ನಲೆಯಲ್ಲಿ ಕಾಪು ಸರ್ಕಲ್ ಇನ್ಸ್‌ಪೆಕ್ಟರ್ ಪ್ರಕಾಶ್ ಹಾಗೂ ಪಡುಬಿದ್ರಿ ಎಸ್‍ಐ ಪುರುಷೋತ್ತಮ್ ತಂಡ ಮಸೀದಿ ಸಮೀಪ ಸುತ್ತಲೂ ಮುಸ್ಲಿಂ ಮನೆಗಳಿರುವ ಪ್ರದೇಶದ ಮಧ್ಯೆ ಭಾಗದ ಸಾಬನ್ ಮನೆಯನ್ನೇ ಅಕ್ರಮ ಕಸಾಯಿಖಾನೆಯನ್ನಾಗಿ ಮಾಡಿಕೊಂಡು, ರಾಜಾರೋಷವಾಗಿ ದನಗಳನ್ನು ಕಡಿದು ಮಾಂಸ ಮಾಡುತ್ತಿದ್ದರು. ಈ ವೇಳೆ ದಿಢೀರ್ ದಾಳಿ ನಡೆಸಿದಾಗ ಡಿಯೋ ರಫೀಕ್ ತಪ್ಪಿಸಿಕೊಂಡಿದ್ದಾನೆ. ಸ್ಥಳದಲ್ಲಿದ್ದ ಉಳಿದವರನ್ನು ಪೊಲೀಸ್ ತಂಡ ಬಂಧಿಸಿದೆ. ಮೂರು ದನಗಳನ್ನು ಕಡಿದು ಮಾಂಸ ಮಾಡಲಾದ 400 ಕೆ.ಜಿ ಮಾಂಸ ಸ್ಥಳದಲ್ಲೇ ಪತ್ತೆಯಾಗಿದೆ. ಇದನ್ನೂ ಓದಿ: ಹಸು ಜೊತೆಗೆ ಸೆಕ್ಸ್ – ವಿಕೃತ ಕಾಮಿ ಅರೆಸ್ಟ್

    ಪೊಲೀಸ್ ದಾಳಿಯಾಗುತ್ತಿದಂತೆ ಒಂದು ದನದ ಕತ್ತಿಗೆ ಚೂರಿ ಇರಿದ ಪರಿಣಾಮ ಪೊಲೀಸ್ ಮುಂಭಾಗದಲ್ಲೇ ಒದ್ದಾಟ ನಡೆಸಿ ಪ್ರಾಣ ಬಿಟ್ಟಿರುವ ದೃಶ್ಯ ಪೊಲೀಸರ ಕೋಪ ನೆತ್ತಿಗೇರುವಂತೆ ಮಾಡಿದೆ. ಜೀವಂತ ದನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಂದ ಒಂದು ಸ್ಕೂಟರ್ ಸಹಿತ ಕೃತ್ಯಕ್ಕೆ ಬಳಸಲಾಗಿದ್ದ ಪರಿಕರಗಳನ್ನು ವಶಕ್ಕೆ ಪಡೆದಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ.

  • ಸಿದ್ದರಾಮಯ್ಯರಿಗೆ ತಾಕತ್ ಇದ್ರೆ ಗೋ ಮಾಂಸ ತಿಂದು ತೋರಿಸಲಿ: ಪ್ರಭು ಚೌಹಾಣ್ ಸವಾಲ್

    ಸಿದ್ದರಾಮಯ್ಯರಿಗೆ ತಾಕತ್ ಇದ್ರೆ ಗೋ ಮಾಂಸ ತಿಂದು ತೋರಿಸಲಿ: ಪ್ರಭು ಚೌಹಾಣ್ ಸವಾಲ್

    ಬೀದರ್: ತಾಕತ್ ಇದ್ದರೆ ನನ್ನ ಮುಂದೆ ಸಿದ್ದರಾಮಯ್ಯ ಗೋ ಮಾಂಸ ತಿನ್ನಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಸವಾಲೊಡ್ಡಿದ್ದಾರೆ.

    ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದರೆ ಗೋ ಹತ್ಯೆ ಕಾಯಿದೆಯನ್ನು ರದ್ದು ಮಾಡುತ್ತೇನೆ ಹಾಗೂ ಗೋ ಮಾಂಸ ತಿನ್ನುತ್ತೇನೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತಂತೆ ಬೀದರ್‍ನಲ್ಲಿ ಪ್ರತಿಕ್ರಿಯಿಸಿದ ಪ್ರಭು ಚೌಹಾಣ್ ಅವರು, ನಾನು ಸಿದ್ದರಾಮಯ್ಯಗೆ ಆಹ್ವಾನ ಮಾಡುತ್ತೇನೆ. ನನ್ನ ಮುಂದೆ ಕುಳಿತು ಮಾಂಸ ತಿಂದು ತೋರಿಸಬೇಕು ಎಂದು ಸವಾಲು ಹಾಕಿದ್ದಾರೆ. ಇದನ್ನೂ ಓದಿ: ಗೋಮಾಂಸವನ್ನು ಹಿಂದೂಗಳು, ಕ್ರಿಶ್ಚಿಯನ್ ಕೂಡ ತಿನ್ನುತ್ತಾರೆ: ಸಿದ್ದರಾಮಯ್ಯ

    ಇತ್ತೀಚೆಗಷ್ಟೇ ಸಿದ್ದರಾಮಯ್ಯ ಅವರು, ನಾನು ಇದುವರೆಗೂ ಗೋ ಮಾಂಸ ತಿಂದಿಲ್ಲ. ತಿನ್ನಬೇಕು ಅನ್ನಿಸಿದರೆ ತಿನ್ನುತ್ತೇನೆ ಎಂದಿದ್ದರು. ಅಲ್ಲದೇ ಸಗಣಿ, ಗಂಜಲ ಎತ್ತದ, ಹಸು ಸಾಕದ, ಉಳಿಮೆ ಮಾಡದವರು ಗೋ ಹತ್ಯೆ ಬಗ್ಗೆ ಮಾತನಾಡುತ್ತಾರೆ. ಅವರಿಂದ ನಾವು ಪಾಠ ಕಲಿಯಬೇಕೆ ಎಂದು ಪ್ರಶ್ನಿಸಿದ್ದರು. ಇದನ್ನೂ ಓದಿ: ಗೋ ಪೂಜೆ ಮಾಡುವವರು ಗೋಮಾಂಸ ತಿಂತೀನಿ ಅಂದ್ರೆ ಅವರಿಗಿಂತ ಕಟುಕ ಈ ಪ್ರಪಂಚದಲ್ಲಿ ಯಾರು ಇಲ್ಲ: ಆರ್.ಅಶೋಕ್

    ಅಲ್ಪ ಸಂಖ್ಯಾತರ ಹಕ್ಕುಗಳು ಮತ್ತು ಅವರ ಪರವಾಗಿ ಮಾತನಾಡಿದರೆ, ಸಂಘ ಪರಿವಾರದವರು ನೀನು ಮುಸ್ಲಿಂ ಸಮುದಾಯದಲ್ಲಿ ಹುಟ್ಟಿದ್ದಿಯಾ ಎಂದು ಕೇಳುತ್ತಾರೆ. ನಮ್ಮ ಧರ್ಮದಲ್ಲಿ ನಿಷ್ಠೆಯ ಜೊತೆಗೆ ಇತರೆ ಧರ್ಮಗಳನ್ನು ಗೌರವಿಸುವ ಸಹಿಷ್ಣುತೆ ಇರಬೇಕು. ಪರ ಧರ್ಮದ ಬಗ್ಗೆ ದ್ವೇಷ, ಅಸೂಯೆ ಇದ್ದರೆ ನಾವು ಮನುಷ್ಯರಾಗಲು ಅರ್ಹರಲ್ಲ. ನಾವೆಲ್ಲ ಮನುಷ್ಯರಾಗಿ ಬದುಕುವುದನ್ನು ಕಲಿಯಬೇಕು ಎಂದು ಹೇಳಿದ್ದರು.