Tag: Begusarai

  • ಫೇಸ್‌ಬುಕ್‌ನಲ್ಲಿ ವಿದಾಯದ ಪೋಸ್ಟ್ ಹಾಕಿ ಅಂತರ್ಜಾತಿ ವಿವಾಹವಾಗಿದ್ದ ಜೋಡಿ ಆತ್ಮಹತ್ಯೆ

    ಫೇಸ್‌ಬುಕ್‌ನಲ್ಲಿ ವಿದಾಯದ ಪೋಸ್ಟ್ ಹಾಕಿ ಅಂತರ್ಜಾತಿ ವಿವಾಹವಾಗಿದ್ದ ಜೋಡಿ ಆತ್ಮಹತ್ಯೆ

    ಪಾಟ್ನಾ: ಮದುವೆಯಾದ 8 ತಿಂಗಳಿಗೆ ಅಂತರ್ಜಾತಿ ಮದುವೆಯಾಗಿದ್ದ ಜೋಡಿ ಫೇಸ್‌ಬುಕ್‌ನಲ್ಲಿ (Facebook) ವಿದಾಯದ ಪೋಸ್ಟ್ ಹಾಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿಹಾರದ (Bihar)  ಬೇಗುಸರಾಯ್‌ನಲ್ಲಿ ನಡೆದಿದೆ.

    ಬಹದ್ದೂರ್‌ಪುರ ಗ್ರಾಮದ ಶುಭಂ ಕುಮಾರ್ (19) ಹಾಗೂ ಆತನ ಪತ್ನಿ ಮುನ್ನಿ ಕುಮಾರಿ (18) ಮೃತರೆಂದು ಗುರುತಿಸಲಾಗಿದೆ. ಕೆಲ ವರ್ಷದ ಹಿಂದೆ ಇನ್ಸ್ಟಾಗ್ರಾಂ ಮೂಲಕ ಇವರಿಬ್ಬರ ಪರಿಚಯವಾಗಿತ್ತು. ಈ ಪರಿಚಯ ಪ್ರೇಮಕ್ಕೆ ತಿರುಗಿ, 2024ರ ಅಕ್ಟೋಬರ್‌ನಲ್ಲಿ ಮನೆಯವರ ವಿರೋಧದ ನಡುವೆಯೇ ಇಬ್ಬರು ಓಡಿಹೋಗಿ ವಿವಾಹವಾಗಿದ್ದರು. ಇದನ್ನೂ ಓದಿ: Tumakuru | ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು

    ಮದುವೆಯ ನಂತರ, ಮುನ್ನಿ ಮನೆಯವರು ಇದನ್ನು ವಿರೋಧಿಸಿದ್ದರು. ಅಲ್ಲದೇ ರಾಜಿ ಪಂಚಾಯಿತಿ ನಡೆಸಿ, ಯುವತಿಯ ಸಿಂಧೂರವನ್ನು ಅಳಿಸಿ, ಆಕೆಯನ್ನು ಮನೆಯವರು ಕರೆದುಕೊಂಡು ಹೋಗಿದ್ದರು. ಬಳಿಕ ಡಿಸೆಂಬರ್‌ನಲ್ಲಿ ಮತ್ತೆ ಒಂದಾಗಿ, ಒಟ್ಟಿಗೆ ವಾಸಿಸಲು ಪ್ರಾರಂಭಿಸಿದ್ದರು. ಇದನ್ನೂ ಓದಿ: ಪಿಎಸ್‌ಐ ಪರೀಕ್ಷೆ ಅಕ್ರಮದ ಕಿಂಗ್‌ಪಿನ್ ಆರ್‌ಡಿ ಪಾಟೀಲ್‌ಗೆ ಜಾಮೀನು ನಿರಾಕರಿಸಿದ ಸುಪ್ರೀಂ

    ದಂಪತಿಯ ಸಂಬಂಧಿಕರೊಬ್ಬರು ಮಗುವಿನ ಚಿಕಿತ್ಸೆಗೆ ಆಸ್ಪತ್ರೆಗೆ ತೆರಳಿ, ಶುಭಂ ಮನೆಗೆ ಬಂದಿದ್ದರು. ಈ ವೇಳೆ ಅವರು ಎಷ್ಟೇ ಬಾಗಿಲು ಬಡಿದರೂ, ತೆರೆಯದಿದ್ದಾಗ ಕಿಟಕಿಯಲ್ಲಿ ಇಣುಕಿ ನೋಡಿದಾಗ ಶುಭಂ ನೇಣು ಬಿಗಿದುಕೊಂಡಿದ್ದ. ಆತನ ಪತ್ನಿ ಮುನ್ನಿ ಹಾಸಿಗೆಯ ಮೇಲೆ ನಿರ್ಜೀವವಾಗಿ ಬಿದ್ದಿದ್ದದನ್ನು ಗಮನಿಸಿದ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದನ್ನೂ ಓದಿ: ನಟ ಪ್ರಥಮ್‌ಗೆ ಜೀವಬೆದರಿಕೆ ಕೇಸ್‌ – ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಇಬ್ಬರ ವಿರುದ್ಧ FIR

    ಈ ದುಡುಕಿನ ನಿರ್ಧಾರ ತೆಗೆದುಕೊಳ್ಳುವ ಮೊದಲು ಶುಭಂ, ಇಬ್ಬರ ಫೋಟೋವನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿ `ಅಲ್ವಿದಾ’ ಅಂದರೆ ಗುಡ್‌ಬೈ ಎಂದು ಬರೆದುಕೊಂಡಿದ್ದ ಎನ್ನಲಾಗಿದೆ.

    ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಳಿಕ ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿ, ಬಹದ್ದೂರ್‌ಪುರ ಗ್ರಾಮದಲ್ಲಿ ವಿವಾಹಿತ ದಂಪತಿಗಳಾದ ಶುಭಂ ಕುಮಾರ್ ಮತ್ತು ಮುನ್ನಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಸಾವಿಗೆ ನಿಖರ ಕಾರಣಗಳು ತಿಳಿದುಬಂದಿಲ್ಲ. ಘಟನೆ ಸಂಬಂಧ ತನಿಖೆ ಕೈಗೊಂಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

  • ಬಾಲಕಿಯನ್ನು ರೇಪ್ ಮಾಡಿ ಪೊದೆಗೆ ಎಸೆದ ಕುಡುಕ!

    ಪಾಟ್ನಾ: ಏಳು ವರ್ಷದ ಬಾಲಕಿಯ ಮೇಲೆ ಕುಡುಕನೊಬ್ಬ ಅತ್ಯಾಚಾರ ಎಸಗಿದ ಪ್ರಕರಣ ಬಿಹಾರದ (Bihar) ಬೆಗುಸರಾಯ್ (Begusarai) ಜಿಲ್ಲೆಯ ಹಳ್ಳಿಯೊಂದರ ಶಾಲಾ ಆವರಣದಲ್ಲಿ ನಡೆದಿದೆ.

    ಬಾಲಕಿ ಹಾಗೂ ಆಕೆಯ ಸ್ನೇಹಿತೆ ಹೋಳಿಯ ದಿನ ಶಾಲೆಯ ಆವರಣದ ಸ್ವಿಂಗ್ ರೈಡ್‍ನಲ್ಲಿ (Swing ride) ಆಟ ಆಡಲು ತೆರಳಿದ್ದರು. ಈ ವೇಳೆ ಚೋಟು ಕುಮಾರ್ ಎಂಬಾತ ಬಾಲಕಿಯರನ್ನು ಪುಸಲಾಯಿಸಿ ಶಾಲೆಯ (School) ಶೌಚಾಲಯಕ್ಕೆ ಕರೆದೊಯ್ದಿದ್ದಾನೆ. ನಂತರ ಏಳು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ (Rape) ಎಸಗಿದ್ದಾನೆ. ಆರೋಪಿಯನ್ನು ತಡೆಯಲು ಪ್ರಯತ್ನಿಸಿದ ಒಂಬತ್ತು ವರ್ಷದ ಸ್ನೇಹಿತೆಯ ಮೇಲೆ ಆರೋಪಿ ಹಲ್ಲೆ ನಡೆಸಿದ್ದಾನೆ. ಆಕೆ ಗಾಯಗೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ವಸತಿ ಮನೆ ಬಿಡುಗಡೆಗೆ ಲಂಚ ನೀಡದ ವ್ಯಕ್ತಿಯ ಮರ್ಮಾಂಗಕ್ಕೆ ಒದ್ದು ಹತ್ಯೆ

    ಆರೋಪಿ ಬಾಲಕಿಯನ್ನು ಪೊದೆಗೆ ಎಸೆದಿದ್ದಾನೆ. ಅಲ್ಲಿಂದ ತಪ್ಪಿಸಿಕೊಂಡ ಬಾಲಕಿ ಸ್ಥಳೀಯರಿಗೆ ಮಾಹಿತಿ ನೀಡಿದ್ದಾಳೆ.

    ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಬೆಗುಸರಾಯ್ ಉಪ ಪೊಲೀಸ್ ವರಿಷ್ಠಾಧಿಕಾರಿ (Deputy Superintendent of Police) ನಿಶಿತ್ ಪ್ರಿಯಾ ತಿಳಿಸಿದ್ದಾರೆ. ಇದನ್ನೂ ಓದಿ: ತಂದೆ ಮನೆಯಿಂದ ಕಾಸ್ಟ್ಲಿ ವಾಚ್ ತರದಿದ್ದಕ್ಕೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ!

  • ಬೇಗುಸರಾಯ್‍ನಲ್ಲಿ ಗುಂಡಿನ ದಾಳಿ – 11 ಮಂದಿಗೆ ಗಂಭೀರ ಗಾಯ, ಓರ್ವ ಸಾವು

    ಬೇಗುಸರಾಯ್‍ನಲ್ಲಿ ಗುಂಡಿನ ದಾಳಿ – 11 ಮಂದಿಗೆ ಗಂಭೀರ ಗಾಯ, ಓರ್ವ ಸಾವು

    ಪಾಟ್ನಾ: ಬಿಹಾರದ (Bihar)  ಬೇಗುಸರಾಯ್ (Begusarai) ಜಿಲ್ಲೆಯಲ್ಲಿ ನಿನ್ನೆ ಬೈಕ್‍ನಲ್ಲಿ ಬಂದ ಇಬ್ಬರು ಬಂದೂಕುಧಾರಿಗಳು (Gunmen Shot) ಜನನಿಬಿಡ ಪ್ರದೇಶಗಳಲ್ಲಿ ಜನರ ಮೇಲೆ ಏಕಾಏಕಿ ಮನಬಂದಂತೆ ಗುಂಡಿನ ದಾಳಿ ನಡೆಸಿದ ಘಟನೆ ನಡೆದಿದೆ.

    ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್‍ನಲ್ಲಿ ಮಲ್ಹಿಪುರ್ ಚೌಕ್‍ಗೆ ಬಂದ ಬಂದೂಕುಧಾರಿಗಳು ಜನನಿಬಿಡ ಪ್ರದೇಶದಲ್ಲಿನ ಅಂಗಡಿಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: UP ಬಿಜೆಪಿ ಶಾಸಕನ ತಾಯಿಯ ಕಿವಿ ಕತ್ತರಿಸಿ ಓಲೆ ಕದ್ದ ಕಳ್ಳರು

    https://twitter.com/MithilaWaala/status/1569875146865020928

    ರಾಷ್ಟ್ರೀಯ ಹೆದ್ದಾರಿ 31 ಮತ್ತು 28ರಲ್ಲಿ (NH 31 & 28) ಬಂದೂಕುದಾರಿಗಳು ಏಕಾಏಕಿ ಗುಂಡಿನ ದಾಳಿ ನಡೆಸುತ್ತಿದ್ದಂತೆ ಭಯಭೀತರಾದ ಜನರು ದಿಕ್ಕಾಪಾಲಾಗಿ ಓಡಲು ಪ್ರಾರಂಭಿಸಿದ್ದಾರೆ. ಅಂಗಡಿಯವರು ತಮ್ಮ ಅಂಗಡಿಗಳನ್ನು ಬಿಟ್ಟು ಓಡಿದ್ದಾರೆ. ನಂತರ ಬಂದೂಕುಧಾರಿಗಳು ಬರೌನಿ ಥರ್ಮಲ್ ಚೌಕ್, ಬರೌನಿ, ತೆಘ್ರಾ, ಬಚ್ವಾರಾ ಮತ್ತು ರಾಜೇಂದ್ರ ಸೇತುವೆಗೆ ತೆರಳಿ ಜನರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದರು ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: Rantac ಸೇರಿದಂತೆ 26 ಔಷಧಿಗಳನ್ನು ನಿಷೇಧಿಸಿದ ಕೇಂದ್ರ

    ಘಟನೆಯಲ್ಲಿ ಚಂದನ್ ಕುಮಾರ್ (30) ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಯೋಗೇಂದ್ರ ಕುಮಾರ್ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡರು. ಗಾಯಾಳುಗಳಲ್ಲಿ ಕೆಲವರನ್ನು ಬೇಗುಸರಾಯ್‍ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪಾಟ್ನಾಗೆ ಕಳುಹಿಸಲಾಗಿದೆ. ಜಿಲ್ಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಘಟನೆಯ ನಂತರ ಎಲ್ಲಾ ಪ್ರವೇಶ ಕೇಂದ್ರಗಳಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. ಡಿಐಜಿ ಬೇಗುಸರಾಯ್ ಸತ್ಯ ವೀರ್ ಸಿಂಗ್ ಗಾಯಗೊಂಡವರ ಆರೋಗ್ಯದ ಕುರಿತಾಗಿ ಆಸ್ಪತ್ರೆಗೆ ತೆರಳಿ ವಿಚಾರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]