Tag: beheading

  • ಪತ್ನಿಯನ್ನು ಕೊಂದು ರುಂಡ ಹಿಡಿದುಕೊಂಡೇ ಠಾಣೆಗೆ ಬಂದ ಪತಿ!

    ಪತ್ನಿಯನ್ನು ಕೊಂದು ರುಂಡ ಹಿಡಿದುಕೊಂಡೇ ಠಾಣೆಗೆ ಬಂದ ಪತಿ!

    ಭುವನೇಶ್ವರ: ಅಕ್ರಮ ಸಂಬಂಧದ ಶಂಕೆಯ ಮೇಲೆ ಪತ್ನಿಯನ್ನು ಕೊಂದು ಆಕೆಯ ತಲೆಯನ್ನು ಕತ್ತರಿಸಿ, ಅದನ್ನು ಹಿಡಿದುಕೊಂಡೇ ಪತಿ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಆಘಾತಕಾರಿ ಘಟನೆ ಒಡಿಶಾದ (Odisha) ನಯಾಗಢ (Nayagarh) ಜಿಲ್ಲೆಯಲ್ಲಿ ನಡೆದಿದೆ.

    ಬಿಡಪಾಜು ಗ್ರಾಮದ ನಿವಾಸಿ ಅರ್ಜುನ ಬಾಘಾ (35) ಪತ್ನಿ ಧರಿತ್ರಿಯನ್ನು (30) ಅಕ್ರಮ ಸಂಬಂಧ ಹೊಂದಿರುವ ಶಂಕೆಯ ಮೇಲೆ ಹತ್ಯೆ ಮಾಡಿದ್ದಾನೆ. ಆಕೆಯನ್ನು ಕ್ರೂರವಾಗಿ ಕೊಂದ ಬಳಿಕ ಹರಿತವಾದ ಆಯುಧ ಬಳಸಿ ಶಿರಚ್ಛೇದನ (Beheading) ಮಾಡಿದ್ದಾನೆ. ಬಳಿಕ ಪತ್ನಿಯ ರುಂಡವನ್ನು ಹಿಡಿದುಕೊಂಡು ನಡೆದೇ ಪೊಲೀಸ್ ಠಾಣೆಗೆ ಹೋಗಿದ್ದಾನೆ. ವ್ಯಕ್ತಿ ದಾರಿಯುದ್ದಕ್ಕೂ ಪತ್ನಿಯ ತಲೆಯನ್ನು ಝಾಡಿಸಿ ಸ್ಥಳೀಯರನ್ನು ಬೆಚ್ಚಿಬೀಳಿಸಿದ್ದಾನೆ.

    ಪೊಲೀಸ್ ಠಾಣೆಗೆ ಬಂದ ಬಾಘಾ ಪೊಲೀಸರ ಮುಂದೆ ತಾನು ಪತ್ನಿಯನ್ನು ಅಕ್ರಮ ಸಂಬಂಧ ಹೊಂದಿದ್ದ ಹಿನ್ನೆಲೆ ಕೊಂದಿರುವುದಾಗಿ ತಿಳಿಸಿ ಶರಣಾಗಿದ್ದಾನೆ. ಜೊತೆಗೆ ಪೊಲೀಸ್ ಠಾಣೆ ವರೆಗೂ ಹಿಡಿದುಕೊಂಡೇ ಬಂದಿದ್ದ ಪತ್ನಿಯ ತಲೆಯನ್ನು ತೋರಿಸಿದ್ದಾನೆ. ವ್ಯಕ್ತಿಯ ಅಮಾನವೀಯ ಕೃತ್ಯ ಕಂಡು ಪೊಲೀಸರು ತಬ್ಬಿಬ್ಬಾಗಿದ್ದಾರೆ. ಇದನ್ನೂ ಓದಿ: ಕಾರು, ಟ್ರಕ್ ನಡುವೆ ಅಪಘಾತ – ಮದುವೆಗೆ ಹೊರಟಿದ್ದ ಎಂಟು ಮಂದಿ ಸಜೀವ ದಹನ

    ಪತ್ನಿಯನ್ನು ಕ್ರೂರವಾಗಿ ಕೊಂದ ಆರೋಪಿಯನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ. ಬಳಿಕ ಬಾಘಾ ಪತ್ನಿಯ ತಲೆ ಇಲ್ಲದ ಮುಂಡವನ್ನೂ ವಶಪಡಿಸಿಕೊಂಡಿದ್ದು, ಪ್ರಕರಣದ ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ ಪ್ರಕರಣ – ಇಬ್ಬರು ಶೂಟರ್ ಸೇರಿ ಮೂವರು ಅರೆಸ್ಟ್

  • ಭಯೋತ್ಪಾದಕರು ಮಕ್ಕಳ ಶಿರಚ್ಛೇದನ ಮಾಡೋ ಚಿತ್ರಗಳನ್ನು ಯಾವತ್ತೂ ನೋಡುತ್ತೇನೆ ಎಂದುಕೊಂಡಿರಲಿಲ್ಲ: ಆಘಾತ ವ್ಯಕ್ತಪಡಿಸಿದ ಬೈಡನ್

    ಭಯೋತ್ಪಾದಕರು ಮಕ್ಕಳ ಶಿರಚ್ಛೇದನ ಮಾಡೋ ಚಿತ್ರಗಳನ್ನು ಯಾವತ್ತೂ ನೋಡುತ್ತೇನೆ ಎಂದುಕೊಂಡಿರಲಿಲ್ಲ: ಆಘಾತ ವ್ಯಕ್ತಪಡಿಸಿದ ಬೈಡನ್

    ವಾಷಿಂಗ್ಟನ್: ಭಯೋತ್ಪಾದಕರು (Terrorists) ಮಕ್ಕಳ ಶಿರಚ್ಛೇದನ (Beheading) ಮಾಡುವ ಚಿತ್ರಗಳನ್ನು ನಾನು ಎಂದಿಗೂ ನೋಡುತ್ತೇನೆ ಎಂದುಕೊಂಡಿರಲಿಲ್ಲ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್ (Joe Biden) ತಿಳಿಸಿದ್ದಾರೆ.

    ಇಸ್ರೇಲ್‌ನಲ್ಲಿ (Israel) ಹಮಾಸ್ ನಡೆಸಿದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಆಘಾತ ವ್ಯಕ್ತಪಡಿಸಿದ ಬೈಡನ್, ಈ ದಾಳಿಯು ಕ್ರೂರ ಕ್ರೌರ್ಯದ ಅಭಿಯಾನವಾಗಿದೆ. ಭಯೋತ್ಪಾದಕರು ಮಕ್ಕಳ ಶಿರಚ್ಛೇದನ ಮಾಡಿದ ಚಿತ್ರಗಳನ್ನು ನಾನು ಖಚಿತಪಡಿಸುತ್ತೇನೆ ಎಂದು ನಾನು ಎಂದಿಗೂ ಯೋಚಿಸಲಿಲ್ಲ ಎಂದು ಬೈಡನ್ ಹೇಳಿದ್ದಾರೆ.

    ಶನಿವಾರ ಹಮಾಸ್ (Hamas) ಉಗ್ರರು ಇಸ್ರೇಲ್ ಮೇಲೆ ದಾಳಿ ನಡೆಸಿದ್ದು, ಅದನ್ನು ಮಾರಣಾಂತಿಕ ದಿನ ಎಂದು ಬೈಡನ್ ಕರೆದಿದ್ದಾರೆ. ಹಮಾಸ್ ಭಯೋತ್ಪಾದಕ ದಾಳಿ ಯಹೂದಿ ಜನರ ವಿರುದ್ಧ ನಡೆಸಲಾಗಿದ್ದು, ಸಹಸ್ರಾರು ಯಹೂದಿಗಳ ನರಮೇಧದ ನೋವಿನ ನೆನಪುಗಳನ್ನು ಮರಳಿ ತಂದಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇಸ್ರೇಲ್‍ನಲ್ಲಿ ಕಿರುತೆರೆ ನಟಿ ಮಧುರಾ ನಾಯ್ಕ್ ಕುಟುಂಬಸ್ಥರ ಹತ್ಯೆ

    ಹಮಾಸ್ ಉಗ್ರರ ದಾಳಿಗೆ ಇಲ್ಲಿಯವರೆಗೆ ಸಾವಿರಾರು ನಾಗರಿಕರು ಸಾವನ್ನಪ್ಪಿದ್ದಾರೆ. ಅದರಲ್ಲಿ ಕನಿಷ್ಠ 22 ಅಮೆರಿಕನ್ನರು ಸೇರಿದ್ದಾರೆ. ನಾವು ಇಸ್ರೇಲ್ ನಾಯಕರು, ಪ್ರಪಂಚದಾದ್ಯಂತ ಹಲವಾರು ನಾಯಕರು ಹಾಗೂ ಸ್ಥಳೀಯ ನಾಯಕರೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

    ಈ ಕ್ಷಣದಲ್ಲಿ, ನಾವು ಸ್ಫಟಿಕದಂತೆ ಸ್ಪಷ್ಟವಾಗಿರಬೇಕು. ಭಯೋತ್ಪಾದನೆಗೆ ಯಾವುದೇ ಸಮರ್ಥನೆ ಹಾಗೂ ಕ್ಷಮೆ ಇಲ್ಲ. ಇಸ್ರೇಲ್‌ನ ಭದ್ರತೆ ಮತ್ತು ಸುರಕ್ಷತೆಗೆ ಇರುವ ನನ್ನ ಬದ್ಧತೆಯನ್ನು ಯಾರಿಂದಲೂ ಅಲುಗಾಡಿಸಲು ಸಾಧ್ಯವಿಲ್ಲ. ಅಮೆರಿಕ ಇಸ್ರೇಲ್‌ಗೆ ಬೆನ್ನಾಗಿ ನಿಲ್ಲುತ್ತಿದೆ. ನಾವು ಇಂದು ಮಾತ್ರವಲ್ಲ, ಅದರಾಚೆಗೂ ಈ ಬಗ್ಗೆ ಒಟ್ಟಿಗೆ ಕೆಲಸ ಮಾಡಲಿದ್ದೇವೆ ಹೇಳಿದರು. ಇದನ್ನೂ ಓದಿ: ಹಳಿ ತಪ್ಪಿ ಉರುಳಿದ ರೈಲು- ನಾಲ್ವರ ದುರ್ಮರಣ, 80ಕ್ಕೂ ಹೆಚ್ಚು ಮಂದಿಗೆ ಗಾಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಿತ್ರನ ತಲೆಯನ್ನೇ ಕಡಿದು, ಹೃದಯ ಕಿತ್ತು ಕೊನೆಗೆ ಪೊಲೀಸರಿಗೆ ಶರಣಾದ

    ಮಿತ್ರನ ತಲೆಯನ್ನೇ ಕಡಿದು, ಹೃದಯ ಕಿತ್ತು ಕೊನೆಗೆ ಪೊಲೀಸರಿಗೆ ಶರಣಾದ

    ಹೈದರಾಬಾದ್: ತನ್ನ ಗೆಳತಿಗೆ (Girlfriend) ಸಂದೇಶ ಕಳುಹಿಸಿದ್ದಕ್ಕಾಗಿ ಯುವಕನೊಬ್ಬ ತನ್ನ ಸ್ನೇಹಿತನನ್ನೇ (Friend) ಭೀಕರವಾಗಿ ಕೊಲೆಗೈದು (Murder), ಶಿರಚ್ಛೇದ ಮಾಡಿ (Beheading), ದೇಹದ ಆಂತರಿಕ ಭಾಗಗಳನ್ನು ಕಿತ್ತು ಹಾಕಿ, ಕೊನೆಗೆ ಪೊಲೀಸರಿಗೆ ಶರಣಾಗಿರುವ ಘಟನೆ ತೆಲಂಗಾಣದಲ್ಲಿ (Telangana) ನಡೆದಿದೆ.

    ವರದಿಗಳ ಪ್ರಕಾರ ಆರೋಪಿಯ ಗೆಳತಿ ಈ ಹಿಂದೆ ಆತನ ಸ್ನೇಹಿತನೊಂದಿಗೆ ಸಂಬಂಧ ಹೊಂದಿದ್ದಳು. ಆಕೆಗೆ ಸಂತ್ರಸ್ತ ಯುವಕ ಸಂದೇಶ ಕಳುಹಿಸುತ್ತಿದ್ದ. ಇದರಿಂದ ಕೋಪಗೊಂಡಿದ್ದ ಆರೋಪಿ, ಸ್ನೇಹಿತನ ಶಿರಚ್ಛೇದ ಮಾಡಿದ್ದಾನೆ. ಬಳಿಕ ಆತನ ಹೃದಯ, ಖಾಸಗಿ ಭಾಗಗಳನ್ನು ಕಿತ್ತಿದ್ದು, ಬೆರಳುಗಳನ್ನೂ ಕತ್ತರಿಸಿದ್ದಾನೆ ಎನ್ನಲಾಗಿದೆ.

    ಘಟನೆಯೇನು?
    ಆರೋಪಿ ಹರಿಹರ ಕೃಷ್ಣ ಹಾಗೂ ಕೊಲೆಯಾದ ಯುವಕ ನವೀನ್ ಗೆಳೆಯರಾಗಿದ್ದು, ಈ ಹಿಂದೆ ದಿಲ್‌ಸುಖ್‌ನಗರದ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಇಬ್ಬರೂ ಅದೇ ಕಾಲೇಜಿನಲ್ಲಿ ಓದುತ್ತಿದ್ದ ಯುವತಿಯನ್ನು ಪ್ರೀತಿಸುತ್ತಿದ್ದರು. ಆದರೆ ನವೀನ್ ಮೊದಲು ತನ್ನ ಪ್ರೇಮವನ್ನು ಯುವತಿಗೆ ತಿಳಿಸಿದ್ದ. ಈ ಪ್ರಸ್ತಾಪವನ್ನು ಆಕೆ ಒಪ್ಪಿಕೊಂಡಿದ್ದು, 1-2 ವರ್ಷದ ಬಳಿ ಅವರಿಬ್ಬರೂ ಬೇರೆಯಾಗಿದ್ದರು. ಬಳಿಕ ಯುವತಿ ಹರಿಹರ ಕೃಷ್ಣನೊಂದಿಗೆ ಸಂಬಂಧ ಬೆಳೆಸಿದ್ದಳು. ಇದನ್ನೂ ಓದಿ: ಆಸ್ತಿ ಮುಟ್ಟುಗೋಲು ಹಾಕಲು ಬಂದಿದ್ದಕ್ಕೆ ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆ

    ಆದರೆ ಯುವತಿ ನವೀನ್ ನೊಂದಿಗೆ ನಿರಂತರ ಸಂಪರ್ಕದಲ್ಲಿದ್ದಳು. ಆಕೆಗೆ ನವೀನ್ ಯಾವಾಗಲೂ ಸಂದೇಶ ಹಾಗೂ ಕರೆ ಮಾಡುತ್ತಿದ್ದ. ಆದರೆ ಇದರಿಂದ ಕೃಷ್ಣ ತೀವ್ರ ಅಸಮಾಧಾನಗೊಂಡಿದ್ದ. ಈ ಹಿನ್ನೆಲೆ ಕೃಷ್ಣ ನವೀನ್ ಹತ್ಯೆ ನಡೆಸಲು ಸುಮಾರು 3 ತಿಂಗಳು ಕಾದು ಕುಳಿತಿದ್ದ.

    ಫೆಬ್ರವರಿ 17ರಂದು ಇಬ್ಬರೂ ಗೆಳೆಯರು ಮದ್ಯಪಾನ ಮಾಡಿ ಜಗಳವಾಡಿಕೊಂಡಿದ್ದರು. ಈ ವೇಳೆ ಕೃಷ್ಣ ನವೀನ್ ಕೊಲೆ ಮಾಡಿ, ಆತನ ತಲೆಯನ್ನು ದೇಹದಿಂದ ಬೇರ್ಪಡಿಸಿದ್ದ. ಆಂತರಿಕ ಅಂಗಾಂಗಗಳನ್ನೂ ಕಿತ್ತಿದ್ದ. ಬಳಿಕ ಆತನ ಮೃತದೇಹದ ಫೋಟೋ ಕ್ಲಿಕ್ಕಿಸಿ, ತನ್ನ ಗೆಳತಿಗೆ ವಾಟ್ಸಪ್‌ನಲ್ಲಿ ಕಳುಹಿಸಿದ್ದ.

    ಹರಿಹರ ಕೃಷ್ಣ ಕೃತ್ಯ ನಡೆಸಿದ ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ. ಆತನ ಹೇಳಿಕೆಯನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸಿದ್ದಾರೆ. ಮೃತ ಯುವಕನ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇದನ್ನೂ ಓದಿ: ಸಿಲಿಂಡರ್ ಬ್ಲಾಸ್ಟ್- ಗುಡಿಸಲು ಬೆಂಕಿಗಾಹುತಿ, ಮಗಳ ಚಿಕಿತ್ಸೆಗೆ ತೆಗೆದಿಟ್ಟ ಹಣವೂ ಭಸ್ಮ

  • ಆಸ್ತಿ ವಿಚಾರಕ್ಕೆ ಸೋದರ ಸಂಬಂಧಿಯ ತಲೆಯನ್ನೇ ಕಡಿದ್ರು – ಸೆಲ್ಫಿ ತೆಗೆದು ವಿಕೃತಿ ಮೆರೆದ್ರು

    ರಾಂಚಿ: ಆಸ್ತಿ (Property) ವಿಚಾರಕ್ಕೆ ವ್ಯಕ್ತಿಯೊಬ್ಬ ತನ್ನ ಸೋದರ ಸಂಬಂಧಿಯ (Cousin) ತಲೆಯನ್ನೇ ಕಡಿದು (beheading) ಹತ್ಯೆ ಮಾಡಿದ್ದಲ್ಲದೇ (Murder) ಆತನ ತಲೆಯನ್ನು ಹಿಡಿದುಕೊಂಡು ಸೆಲ್ಫಿಯನ್ನೂ (Selfie) ತೆಗೆದು ವಿಕೃತಿ ಮೆರೆದಿರುವ ಆಘಾತಕಾರಿ ಘಟನೆ ಜಾರ್ಖಂಡ್‌ನ (Jharkhand) ಖುಂಟಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ವ್ಯಕ್ತಿ, ಆತನ ಪತ್ನಿ ಸೇರಿದಂತೆ ಒಟ್ಟು 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

    20 ವರ್ಷದ ವ್ಯಕ್ತಿ ಸೋದರ ಸಂಬಂಧಿಯ ತಲೆ ಕಡಿದಿದ್ದಾನೆ. ಬಳಿಕ ಆ ತಲೆಯನ್ನು ಹಿಡಿದುಕೊಂಡು ಆತನ ಸ್ನೇಹಿತರು ಸೆಲ್ಫಿ ತೆಗೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಕೊಲೆಯಾದ ವ್ಯಕ್ತಿಯ ತಂದೆ ದೇಸಾಯಿ ಮುಂಡಾ ತನ್ನ ಮಗ ಅಪಹರಣವಾಗಿದ್ದಾಗಿ ಪೊಲೀಸರಿಗೆ ದೂರು ನೀಡಿದ್ದರು. ಅವರು ಡಿಸೆಂಬರ್ 1 ರಂದು ಭತ್ತದ ಗದ್ದೆಯಲ್ಲಿ ಕೆಲಸಕ್ಕೆಂದು ಹೋಗಿದ್ದು, ತಮ್ಮ ಮಗ ಮನೆಯಲ್ಲಿ ಒಬ್ಬನೇ ಇದ್ದ. ಮನೆಗೆ ಹಿಂದಿರುಗಿದಾಗ ಮಗನನ್ನು ಅಪಹರಿಸಿರುವುದಾಗಿ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಬಳಿಕ ಹುಡುಕಾಡಿದರೂ ಮಗ ಎಲ್ಲಿಯೂ ಸಿಗದ ಹಿನ್ನೆಲೆ ದೇಸಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಕೊರೊನಾ ವೈರಸ್‌ ವುಹಾನ್‌ ಲ್ಯಾಬ್‌ನಿಂದಲೇ ಸೋರಿಕೆ – ವಿಜ್ಞಾನಿಯಿಂದ ಸ್ಫೋಟಕ ಹೇಳಿಕೆ

    ಎಫ್‌ಐಆರ್ ದಾಖಲಿಸಿಕೊಂಡ ಖುಂಟಿ ಉಪವಿಭಾಗದ ಪೊಲೀಸ್ ಅಧಿಕಾರಿ ಅಮಿತ್ ಕುಮಾರ್ ನೇತೃತ್ವದ ಪೊಲೀಸರ ತಂಡ ಆರೋಪಿ ಸಾಗರ್ ಮುಂಡಾನನ್ನು ಬಂಧಿಸಿದ್ದಾರೆ. ಬಂಧನದ ಬಳಿಕ ಆ ಪ್ರದೇಶದಿಂದ ಸುಮಾರು 15 ಕಿ.ಮೀ ದೂರದ ದುಲ್ವಾ ತುಂಗ್ರಿ ಪ್ರದೇಶದ ಅರಣ್ಯದಲ್ಲಿ ಮೃತ ವ್ಯಕ್ತಿಯ ತಲೆಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

    crime

    ಮೃತನ ಕುಟುಂಬ ಹಾಗೂ ಆರೋಪಿಗಳ ನಡುವೆ ಆಸ್ತಿಗೆ ಸಂಬಂಧಿಸಿದಂತೆ ಹಲವು ವರ್ಷಗಳಿಂದಲೇ ಕಲಹವಿತ್ತು. ಈ ಕಾರಣಕ್ಕೆ ಆರೋಪಿಗಳು ಶಿರಚ್ಛೇದ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಗಳಿಂದ ಪೊಲೀಸರು 6 ಮೊಬೈಲ್ ಫೋನ್‌ಗಳು, 2 ಹರಿತವಾದ ರಕ್ತಸಿಕ್ತ ಆಯುಧಗಳು, 1 ಕೊಡಲಿ ಹಾಗೂ ಒಂದು ಕಾರನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಡೆತ್‍ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಯುವಕ ಬಳ್ಳಾರಿಯಲ್ಲಿ ಪತ್ತೆ

    Live Tv
    [brid partner=56869869 player=32851 video=960834 autoplay=true]

  • ಸೌದಿ ಅರೇಬಿಯಾದಲ್ಲಿ ಕತ್ತಿಯಿಂದ ಜನರ ಶಿರಚ್ಛೇದ – 10 ದಿನಗಳಲ್ಲಿ 12 ಜನರಿಗೆ ಮರಣದಂಡನೆ

    ಸೌದಿ ಅರೇಬಿಯಾದಲ್ಲಿ ಕತ್ತಿಯಿಂದ ಜನರ ಶಿರಚ್ಛೇದ – 10 ದಿನಗಳಲ್ಲಿ 12 ಜನರಿಗೆ ಮರಣದಂಡನೆ

    ರಿಯಾದ್: ಕಳೆದ 10 ದಿನಗಳಲ್ಲಿ ಮಾದಕವಸ್ತು ಸಂಬಂಧಿತ ಅಪರಾಧಗಳಿಗಾಗಿ ಸೌದಿ ಅರೇಬಿಯಾ (Saudi Arabia) 12 ಜನರನ್ನು ಗಲ್ಲಿಗೇರಿಸಿದೆ. ಇವುಗಳಲ್ಲಿ ಕೆಲವು ಅಪರಾಧಿಗಳನ್ನು ಕತ್ತಿಯಿಂದ ಶಿರಚ್ಛೇದ (Beheading) ಮಾಡಲಾಗಿದೆ ಎಂದು ವರದಿಯೊಂದು ತಿಳಿಸಿದೆ.

    ಮಾದಕವಸ್ತು ಸಂಬಂಧಿತ ಆರೋಪದ ಮೇಲೆ ಜೈಲಿನಲ್ಲಿದ್ದ 12 ಜನರಿಗೆ ಮರಣದಂಡನೆ (Death Penalty) ವಿಧಿಸಲಾಗಿದೆ. ಅದರಲ್ಲಿ ಮೂವರು ಪಾಕಿಸ್ತಾನಿಗಳು, 4 ಸಿರಿಯನ್ನರು, ಇಬ್ಬರು ಜೋರ್ಡಾನ್ ಮೂಲದವರು ಹಾಗೂ ಮೂವರು ಸೌದಿಗಳು ಸೇರಿದ್ದಾರೆ ಎಂದು ವರದಿಯಾಗಿದೆ.

    ಈ ವರ್ಷ ಮಾರ್ಚ್‌ನಲ್ಲಿ ಸೌದಿ ಅರೇಬಿಯಾದ ಆಧುನಿಕ ಇತಿಹಾಸದಲ್ಲೇ ಅತಿ ದೊಡ್ಡ ಸಾಮೂಹಿಕ ಮರಣದಂಡನೆ ನೀಡಲಾಗಿತ್ತು. ಹತ್ಯೆ, ಉಗ್ರಗಾಮಿ ಗುಂಪು ಸೇರಿದಂತೆ ವಿವಿಧ ಅಪರಾಧಗಳಿಂದ ಶಿಕ್ಷೆಗೊಳಗಾದ 81 ಜನರನ್ನು ಗಲ್ಲಿಗೇರಿಸಲಾಗಿತ್ತು. ಇದನ್ನೂ ಓದಿ: ಪಂಪ್‌ವೆಲ್‌ ಫ್ಲೈ ಓವರ್‌ ಬಳಿ ಬಾಂಬ್‌ ಸ್ಟೋಟಿಸಲು ಮುಂದಾಗಿದ್ದ ಶಾರೀಕ್‌

    ಕಳೆದ 2 ವರ್ಷಗಳ ಹಿಂದೆ ಸೌದಿ ಅರೇಬಿಯಾದಲ್ಲಿ ಮರಣದಂಡನೆಗಳಂತಹ ಶಿಕ್ಷೆಗಳನ್ನು ಕಡಿಮೆ ಮಾಡುವುದಾಗಿ ಅಲ್ಲಿನ ಆಡಳಿತ ಪ್ರತಿಜ್ಞೆ ಮಾಡಿತ್ತು. 2018ರಲ್ಲಿ ಟರ್ಕಿಯಲ್ಲಿ ಅಮೆರಿಕದ ಪತ್ರಕರ್ತ ಜಮಾಲ್ ಖಶೋಗ್ಗಿ ಹತ್ಯೆಯ ಬಳಿಕ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಹೊಸ ಆದೇಶವನ್ನು ನೀಡಿದ್ದರು.

    2018ರ ಬಳಿಕ ಸೌದಿ ಆಡಳಿತ ಮರಣದಂಡನೆಯನ್ನು ಕಡಿಮೆ ಮಾಡಲು ಪ್ರಯತ್ನಿಸಿದ್ದು, ಕೊಲೆ ಅಥವಾ ನರಹತ್ಯೆಯ ತಪ್ಪಿತಸ್ಥರನ್ನು ಮಾತ್ರವೇ ಮರಣದಂಡನೆಗೆ ಒಳಪಡಿಸಲು ಪ್ರಾರಂಭಿಸಿತು. ಇದೀಗ ಮತ್ತೆ ಮರಣದಂಡನೆ ಶಿಕ್ಷೆಗಳನ್ನು ಹೆಚ್ಚಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಇಂಡೋನೇಷ್ಯಾ ಬಳಿಕ ಸೊಲೊಮನ್ ದ್ವೀಪದಲ್ಲಿ ಭಾರೀ ಭೂಕಂಪ – ರಿಕ್ಟರ್ ಮಾಪಕದಲ್ಲಿ 7.3 ತೀವ್ರತೆ ದಾಖಲು

    Live Tv
    [brid partner=56869869 player=32851 video=960834 autoplay=true]