Tag: Beijing

  • 5 ವರ್ಷದ ಬಳಿಕ ಚೀನಿಯರಿಗೆ ಭಾರತ ಪ್ರವಾಸಕ್ಕೆ ಅನುಮತಿ

    5 ವರ್ಷದ ಬಳಿಕ ಚೀನಿಯರಿಗೆ ಭಾರತ ಪ್ರವಾಸಕ್ಕೆ ಅನುಮತಿ

    ಬೀಜಿಂಗ್: 5 ವರ್ಷಗಳ ಬಳಿಕ ಭಾರತ (India) ನಾಳೆಯಿಂದ (ಜು.24) ಚೀನಾ ಪ್ರಜೆಗಳಿಗೆ ಪ್ರವಾಸಿ ವೀಸಾ (Tourist Visa) ನೀಡುವ ಪ್ರಕ್ರಿಯೆಯನ್ನು ಆರಂಭಿಸಲಿದೆ ಎಂದು ಬೀಜಿಂಗ್‌ನಲ್ಲಿರುವ ಭಾರತದ ರಾಯಭಾರ ಕಚೇರಿ ತಿಳಿಸಿದೆ.

    ಕೋವಿಡ್-19 ಹರಡುವಿಕೆಯನ್ನು ನಿಯಂತ್ರಿಸುವ ಸಲುವಾಗಿ 2020ರಲ್ಲಿ ಚೀನಾ ಪ್ರಜೆಗಳಿಗೆ ವೀಸಾ ರದ್ದುಗೊಳಿಸಲಾಗಿತ್ತು. ಕೋವಿಡ್ ಬಳಿಕ ಪೂರ್ವ ಲಡಾಖ್ ಗಡಿಯ ವಿಚಾರವಾಗಿ ವೀಸಾ ನಿರ್ಬಂಧ ಮುಂದುವರೆದಿತ್ತು. ಈ ವಾರದಿಂದ ಚೀನಾ ಪ್ರಜೆಗಳು ಪ್ರವಾಸಿ ವೀಸಾಗೆ ಅರ್ಜಿ ಸಲ್ಲಿಸಬಹುದು ಎಂದು ಭಾರತೀಯ ರಾಯಭಾರ ಕಚೇರಿ ಹೇಳಿದೆ. ಇದನ್ನೂ ಓದಿ: ಕೊಪ್ಪಳ | ಕನ್ನಡ ಭಾಷಾಂತರ ಮಾಡೋಕೆ ಸಿಬ್ಬಂದಿ ಕರೆದ ಬ್ಯಾಂಕ್ ಮ್ಯಾನೇಜರ್ – ವಿಡಿಯೋ ವೈರಲ್

    ಬೀಜಿಂಗ್, ಶಾಂಘೈ ಮತ್ತು ಗುವಾಂಗ್‌ಝೌನಲ್ಲಿರುವ ಆಯಾ ಭಾರತೀಯ ವೀಸಾ ಅರ್ಜಿ ಕೇಂದ್ರಗಳಲ್ಲಿ ಅಗತ್ಯ ದಾಖಲೆಗಳನ್ನು ಒದಗಿಸುವ ಮೂಲಕ ವೀಸಾಗೆ ಅರ್ಜಿ ಸಲ್ಲಿಸಬಹುದು. ಇದನ್ನೂ ಓದಿ: ಬಿಹಾರದ 56 ಲಕ್ಷ ಜನರನ್ನು ವೋಟರ್‌ ಲಿಸ್ಟ್‌ನಿಂದ ತೆಗೆದ ಚುನಾವಣಾ ಆಯೋಗ

    ಗಾಲ್ವಾನ್ ಕಣಿವೆಯಲ್ಲಿ ನಡೆದ ಮಿಲಿಟರಿ ಘರ್ಷಣೆ ನಂತರ ತೀವ್ರ ಹದಗೆಟ್ಟ ದ್ವಿಪಕ್ಷೀಯ ಸಂಬಂಧಗಳನ್ನು ಸರಿಪಡಿಸುವ ಭಾಗವಾಗಿ ಈ ಕ್ರಮವನ್ನು ಕೈಗೊಳ್ಳಲಾಗಿದೆ. ವಿದೇಶಾಂಗ ಸಚಿವ ಎಸ್ ಜೈಶಂಕರ್ ಚೀನಾದ ವಿದೇಶಾಂಗ ಸಚಿವ ವಾಂಗ್ ಯೀ ಜೊತೆ ಮಾತುಕತೆ ನಡೆಸಿದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: ತಿರುಪತಿಯಲ್ಲಿ ಭಕ್ತರ ಶೀಘ್ರ ದರ್ಶನಕ್ಕಾಗಿ `ಶ್ರೀವಾಣಿ ದರ್ಶನ’ ಟಿಕೆಟ್ ಸೇವೆ ಆರಂಭ

  • 2 ಲಕ್ಷ ಬಹುಮಾನಕ್ಕಾಗಿ 10 ನಿಮಿಷದಲ್ಲಿ ಒಂದು ಲೀಟರ್ ಮದ್ಯ ಕುಡಿದು ವ್ಯಕ್ತಿ ಸಾವು

    2 ಲಕ್ಷ ಬಹುಮಾನಕ್ಕಾಗಿ 10 ನಿಮಿಷದಲ್ಲಿ ಒಂದು ಲೀಟರ್ ಮದ್ಯ ಕುಡಿದು ವ್ಯಕ್ತಿ ಸಾವು

    ಬೀಜಿಂಗ್: 2 ಲಕ್ಷ ರೂ. ಬಹುಮಾನಕ್ಕಾಗಿ ಆಫಿಸ್ ಪಾರ್ಟಿಯಲ್ಲಿ 10 ನಿಮಿಷದಲ್ಲಿ ಒಂದು ಲೀಟರ್ ಹಾರ್ಡ್ ಡ್ರಿಂಕ್ಸ್ (Alcohol) ಕುಡಿದು ವ್ಯಕ್ತಿಯೊಬ್ಬ ಸಾವಿಗೀಡಾದ ಘಟನೆ ಚೀನಾದಲ್ಲಿ (China) ನಡೆದಿದೆ.

    ಝಾಂಗ್ ಎಂಬಾತ ತನ್ನ ಕಚೇರಿಯ ಸಹೋದ್ಯೋಗಿಗಳಿಗೆ ಮಾಲೀಕ ಆಯೋಜಿದ್ದ ಔತಣಕೂಟಕ್ಕೆ ತೆರಳಿದ್ದ. ಈ ವೇಳೆ ಕುಡಿಯುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಯಾರಾದರೂ ಕುಡಿತದಲ್ಲಿ ಝಾಂಗ್‍ನನ್ನು ಮೀರಿಸಿದರೆ 20,000 ಯುವಾನ್ ಬಹುಮಾನವನ್ನು ನೀಡುವುದಾಗಿ ಈ ವೇಳೆ ಘೋಷಿಸಲಾಗಿದೆ. ಸ್ಪರ್ಧೆಯಲ್ಲಿ ಸೋತರೆ ಅದೇ ಮೊತ್ತದ ಪಾರ್ಟಿ ಕೊಡಿಸುವಂತೆ ಹೇಳಲಾಗಿದೆ. ಬಳಿಕ ತೀವ್ರ ಮದ್ಯ ಸೇವನೆ ಮಾಡಿದ ಝಾಂಗ್ ಅಸ್ವಸ್ಥನಾಗಿ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಪ್ರಾಣಿಗಳ ದಿನಕ್ಕೆ ಮುದ್ದಾದ ಪಪ್ಪಿಯನ್ನು ತಾಯಿಗೆ ಉಡುಗೊರೆ ನೀಡಿದ್ರು ರಾಹುಲ್

    ಔತಣಕೂಟದಲ್ಲಿದ್ದ ಉದ್ಯೋಗಿಯೊಬ್ಬರು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಝಾಂಗ್ 10 ನಿಮಿಷಗಳಲ್ಲಿ ಒಂದು ಲೀಟರ್ ಬೈಜು ಎಂಬ ಹಾರ್ಡ್ ಡ್ರಿಂಕ್ಸ್ ಕುಡಿದಿದ್ದಾನೆ. ಇದು 30% ರಿಂದ 60% ರಷ್ಟು ವಿಶಿಷ್ಟವಾದ ಆಲ್ಕೋಹಾಲ್ ಅಂಶ ಹೊಂದಿರುವ ಚೈನೀಸ್ ಸ್ಪಿರಿಟ್ ಆಗಿದೆ ಎಂದು ತಿಳಿಸಿದ್ದಾರೆ.

    ಝಾಂಗ್ ಕುಸಿದು ಬಿದ್ದ ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅವರು ಉಸಿರುಗಟ್ಟುವಿಕೆ ಮತ್ತು ಹೃದಯ ಸ್ತಂಭನದಿಂದ ಮೃತಪಟ್ಟರು ಎಂದು ಹೇಳಿದ್ದಾರೆ.

    ಇದೇ ಮದ್ಯವನ್ನು ಸೇವಿಸಿ ಚೀನಾದಲ್ಲಿ ಇತ್ತೀಚೆಗೆ ಪ್ರಭಾವಿ ಒಬ್ಬರು ಮೃತಪಟ್ಟಿದ್ದರು. ಬಳಿಕ ಈ ಮದ್ಯದ ಬಗ್ಗೆ ಚೀನಾದಲ್ಲಿ ಭಾರೀ ಚರ್ಚೆ ಶುರುವಾಗಿದೆ. ಇದನ್ನೂ ಓದಿ: ಆಂಧ್ರಪ್ರದೇಶ-ತೆಲಂಗಾಣ ನಡುವೆ ಕೃಷ್ಣಾ ನದಿ ನೀರು ಹಂಚಿಕೆ ವಿವಾದ- ಕೃಷ್ಣಾ ನ್ಯಾಯಧಿಕರಣ 2 ರಚನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 276 ದಿನ ಕಕ್ಷೆಯಲ್ಲಿದ್ದು ಭೂಮಿಗೆ ವಾಪಸ್‌ ಆಯ್ತು ಚೀನಾ ಬಾಹ್ಯಾಕಾಶ ನೌಕೆ!

    276 ದಿನ ಕಕ್ಷೆಯಲ್ಲಿದ್ದು ಭೂಮಿಗೆ ವಾಪಸ್‌ ಆಯ್ತು ಚೀನಾ ಬಾಹ್ಯಾಕಾಶ ನೌಕೆ!

    ಬೀಜಿಂಗ್: ಪ್ರಾಯೋಗಿಕ ಚೀನೀ ಬಾಹ್ಯಾಕಾಶ ನೌಕೆಯು (Mystery Chinese Spacecraft) 276 ದಿನಗಳ ಕಾಲ ಕಕ್ಷೆಯಲ್ಲಿ ಉಳಿದುಕೊಂಡ ಇಂದು (ಸೋಮವಾರ) ಭೂಮಿಗೆ ವಾಪಸ್‌ ಆಗಿದೆ ಎಂದು ಚೀನಾದ (China) ರಾಜ್ಯ ಮಾಧ್ಯಮ ವರದಿ ಮಾಡಿದೆ.

    ನೌಕೆಯನ್ನು ಮರುಬಳಕೆ ಮಾಡಬಹುದೆ ಎಂಬುದನ್ನು ಪರಿಶೀಲಿಸುವ ಸಲುವಾಗಿ ಈ ಪರೀಕ್ಷೆಯನ್ನು ನಡೆಸಲಾಗಿತ್ತು. ಮಾನವರಹಿತ ಬಾಹ್ಯಾಕಾಶ ನೌಕೆಯು ಸೋಮವಾರ ವಾಯುವ್ಯ ಚೀನಾದ ಜಿಯುಕ್ವಾನ್ ಉಡಾವಣಾ ಕೇಂದ್ರಕ್ಕೆ ಮರಳಿದೆ. ಇದನ್ನೂ ಓದಿ: ಚಿನ್ನದ ಗಣಿಯಲ್ಲಿ ಬೆಂಕಿ ದುರಂತ – 27 ಕಾರ್ಮಿಕರು ಸಾವು

    ಈ ಬಾಹ್ಯಾಕಾಶ ನೌಕೆ ಯಾವುದು, ಯಾವ ತಂತ್ರಜ್ಞಾನ ಬಳಸಲಾಗಿದೆ, ಅದು ಎಷ್ಟು ಎತ್ತರಕ್ಕೆ ಹಾರಿತು, ಆಗಸ್ಟ್ 2022 ರ ಆರಂಭದಲ್ಲಿ ಉಡಾವಣೆಯಾದಾಗಿನಿಂದ ಅದರ ಕಕ್ಷೆಗಳು ಅದನ್ನು ಎಲ್ಲಿಗೆ ಕೊಂಡೊಯ್ದಿವೆ ಎಂಬುದರ ಕುರಿತು ಯಾವುದೇ ವಿವರಗಳನ್ನು ವಿಜ್ಞಾನಿಗಳು ನೀಡಿಲ್ಲ. ನೌಕೆಯ ಚಿತ್ರಗಳನ್ನು ಇನ್ನೂ ಸಾರ್ವಜನಿಕವಾಗಿ ಬಿಡುಗಡೆ ಮಾಡಿಲ್ಲ.

    2021 ರಲ್ಲಿ, ಇದೇ ಮಾದರಿಯ ನೌಕೆಯು ಬಾಹ್ಯಾಕಾಶದ ಅಂಚಿಗೆ ಹಾರಿ ಅದೇ ದಿನ ಭೂಮಿಗೆ ಮರಳಿತ್ತು. ಬೀಜಿಂಗ್ ಯುಎಸ್‌ ಏರ್ ಫೋರ್ಸ್‌ನ X-37B ನಂತಹ ಬಾಹ್ಯಾಕಾಶ ನೌಕೆಯನ್ನು ಅಭಿವೃದ್ಧಿಪಡಿಸುತ್ತಿದೆ. ಈ ಸ್ವಾಯತ್ತ ಬಾಹ್ಯಾಕಾಶ ನೌಕೆಯು ವರ್ಷಗಳವರೆಗೆ ಕಕ್ಷೆಯಲ್ಲಿ ಉಳಿಯುವ ಸಾಮರ್ಥ್ಯ ಹೊಂದಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ನೇಪಾಳದಲ್ಲಿ ಹಿಮಪಾತ – ಮೂವರು ಸಾವು, 9 ಮಂದಿಗೆ ಗಾಯ

    ಮಾನವರಹಿತ ಮತ್ತು ಮರುಬಳಕೆ ಮಾಡಬಹುದಾದ X-37B, 900ಕ್ಕಿಂತ ಹೆಚ್ಚು ದಿನ ಕಕ್ಷೆಯಲ್ಲಿದ್ದು ಕಳೆದ ವರ್ಷ ನವೆಂಬರ್‌ನಲ್ಲಿ ಭೂಮಿಗೆ ವಾಪಸ್‌ ಆಗಿತ್ತು.

  • ಚೀನಾದಲ್ಲಿ ಭೀಕರ ರಸ್ತೆ ಅಪಘಾತ – 19 ಮಂದಿ ಬಲಿ

    ಚೀನಾದಲ್ಲಿ ಭೀಕರ ರಸ್ತೆ ಅಪಘಾತ – 19 ಮಂದಿ ಬಲಿ

    ಬೀಜಿಂಗ್: ದಟ್ಟ ಮಂಜಿನ (Fog) ಪರಿಣಾಮವಾಗಿ ಪೂರ್ವ ಚೀನಾದ (China) ಜಿಯಾಂಗ್‌ಕ್ಸಿ ಪ್ರಾಂತ್ಯದಲ್ಲಿ ಭಾನುವಾರ ಭೀಕರ ಅಪಘಾತ (Road Accident) ಸಂಭವಿಸಿದ್ದು, 19 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 20 ಜನರು ಗಾಯಗೊಂಡಿದ್ದಾರೆ.

    ಮೃತ ವ್ಯಕ್ತಿಯ ಅಂತ್ಯಕ್ರಿಯೆಗೆ ಹೊರಟಿದ್ದ ಮೆರವಣಿಗೆಗೆ ಟ್ರಕ್‌ ಡಿಕ್ಕಿ ಹೊಡೆದಿದೆ. ಅಂತ್ಯಕ್ರಿಯೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರ ಪೈಕಿ 19 ಮಂದಿ ಮೃತಪಟ್ಟಿದ್ದಾರೆ. ಗಾಂಗ್ ಎಂಬ ಸ್ಥಳೀಯ ವ್ಯಕ್ತಿಯೊಬ್ಬರ ಪತ್ನಿಯ ಅಂತ್ಯಕ್ರಿಯೆಗೆ ಮೆರವಣಿಗೆ ಸಾಗುತ್ತಿತ್ತು. ಇದನ್ನೂ ಓದಿ: ಶಾಲೆ ಬಿಟ್ಟು ಬೀಡಿ ಕಟ್ಟುವ ಕೆಲಸ ಮಾಡುತ್ತಿದ್ದ ವ್ಯಕ್ತಿ ಅಮೆರಿಕದ ಜಡ್ಜ್

    ರಸ್ತೆಯಲ್ಲಿ ಮುಂದೆ ಮೆರವಣಿಗೆ ವಾಹನ ಸಾಗಿತ್ತು. ವಾಹನವನ್ನು ಹಿಂಬಾಲಿಸಿ ಜನರು ಸಾಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಟ್ರಕ್‌ಗೆ ಜನರ ಗುಂಪಿಗೆ ನುಗ್ಗಿದೆ. ದಟ್ಟ ಮಂಜಿನ ಕಾರಣದಿಂದ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

    ಕಟ್ಟುನಿಟ್ಟಿನ ಸುರಕ್ಷತಾ ಸಂಚಾರಿ ನಿಯಮಗಳ ಸಮಸ್ಯೆಯಿಂದಾಗಿ ಚೀನಾದಲ್ಲಿ ರಸ್ತೆ ಅಪಘಾತಗಳು ಸಾಮಾನ್ಯವಾಗಿದೆ. ಸೆಪ್ಟೆಂಬರ್‌ನಲ್ಲಿ ನೈಋತ್ಯ ಗೈಝೌ ಪ್ರಾಂತ್ಯದ ಬಳಿ ಬಸ್ ಪಲ್ಟಿಯಾದ ನಂತರ 27 ಪ್ರಯಾಣಿಕರು ಸಾವನ್ನಪ್ಪಿದ್ದರು. ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟು – ಪಾಕ್‌ನಲ್ಲಿ ಅಗತ್ಯ ವಸ್ತುಗಳ ಕೊರತೆ, ಚಿಕನ್ ಬೆಲೆಯೂ ಗಗನಕ್ಕೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಚೀನಾದಲ್ಲಿ ವಿದೇಶಿಯರಿಗೆ ಟಫ್ ರೂಲ್ಸ್ – ಫೈಜರ್ ಲಸಿಕೆ ನೀಡಲು ನಿರ್ಧಾರ

    ಚೀನಾದಲ್ಲಿ ವಿದೇಶಿಯರಿಗೆ ಟಫ್ ರೂಲ್ಸ್ – ಫೈಜರ್ ಲಸಿಕೆ ನೀಡಲು ನಿರ್ಧಾರ

    ಬೀಜಿಂಗ್: ಚೀನಾದಲ್ಲಿ (China) ಕೊರೊನಾ (Corona) ಪಾಸಿಟಿವ್ ಪ್ರಕರಣಗಳು ಏರಿಕೆ ಯಾಗುತ್ತಿದ್ದಂತೆ ಸರ್ಕಾರ ಕಠಿಣ ನಿಯಮ ಜಾರಿಗೆ ಮುಂದಾಗಿದೆ. ಈಗಾಗಲೇ ವಿದೇಶದಿಂದ ಆಗಮಿಸುವ ಪ್ರಯಾಣಿಕರಿಗೆ ಕ್ವಾರಂಟೈನ್ (Quarantine) ಸಹಿತ ಹಲವು ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಿದೆ.

    ಚೀನಾಗೆ ಆಗಮಿಸುವ ವಿದೇಶಿ ಪ್ರಯಾಣಿಕರನ್ನು 5 ದಿನಗಳ ಕಾಲ ಹೋಟೆಲ್‍ನಲ್ಲಿ ಕ್ವಾರಂಟೈನ್ ಮಾಡಲು ನಿರ್ಧರಿಸಿದೆ. ಇದರೊಂದಿಗೆ ಬೀಜಿಂಗ್‍ನಲ್ಲಿ ಫೈಜರ್ (Pfizer Vaccine) ಲಸಿಕೆ ನೀಡಲು ತೀರ್ಮಾನಿಸಿದೆ. ವಿದೇಶಿ ಪ್ರಯಾಣಿಕರು ಸಹಿತ ಅಲ್ಲಿನ ನಾಗರಿಕರಿಗೆ ರ್‍ಯಾಂಡಮ್ ಟೆಸ್ಟ್ ನಡೆಸಲು ಸರ್ಕಾರ ಮುಂದಾಗಿದೆ. ಇದನ್ನೂ ಓದಿ: ಭೀಕರ ಸುನಾಮಿಗೆ 60 ಮಂದಿ ಬಲಿ – 15 ಸಾವಿರ ವಿಮಾನಗಳ ಸಂಚಾರ ರದ್ದು

    ಪೊಲೀಸರು ಕೂಡ ಕೊರೊನಾ ಸೋಂಕಿಗೆ ತುತ್ತಾಗುತ್ತಿರುವುದು ಹೊಸ ತಲೆನೋವು ತಂದಿದೆ. ಈಗಾಗಲೇ ಆಸ್ಪತ್ರೆಗಳೆಲ್ಲ ಸೋಂಕಿತರಿಂದ ತುಂಬಿತುಳುಕುತ್ತಿದ್ದು, ಈಗಾಗಲೇ ದೈನಂದಿನ ಕೊರೊನಾ ವರದಿ ನೀಡುವುದನ್ನು ಚೀನಾ ನಿಲ್ಲಿಸಿದೆ. ಕಳೆದ ಒಂದು ತಿಂಗಳಿಂದ 30 ಕೋಟಿಗೂ ಹೆಚ್ಚು ಜನ ಸೋಂಕಿಗೆ ತುತ್ತಾಗಿದ್ದಾರೆ. ಸೋಂಕಿತರಿಂದ ಆಸ್ಪತ್ರೆಗಳು ಭರ್ತಿಯಾಗಿ ವೈದ್ಯಕೀಯ ವ್ಯವಸ್ಥೆ ಮೇಲೆ ಹೆಚ್ಚಿನ ಒತ್ತಡ ಬಿದ್ದಿದೆ. ಈ ನಡುವೆ ದೇಶದ ಜನ ಕೋವಿಡ್ ಸೋಂಕನ್ನು ಒಂದು ಸಾಮಾನ್ಯ ರೋಗವಾಗಿ ಪರಿಗಣಿಸಿ, ಅದರೊಂದಿಗೆ ಬದುಕು ಕಟ್ಟಿಕೊಳ್ಳುವತ್ತ ಹೆಜ್ಜೆ ಇಟ್ಟಿದ್ದಾರೆ. ಬೀಜಿಂಗ್ ಹಾಗೂ ಶಾಂಘೈನಲ್ಲಿ ಜನ ಕೊರೊನಾ ಭಯ ತೊರೆದು ಮಾಸ್ಕ್ ಧರಿಸಿ ಕೆಲಸ ಕಾರ್ಯಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಚೀನಾದಲ್ಲಿ ಕೋವಿಡ್‌ ಹಾವಳಿ – ಮೊದಲ ಬಾರಿಗೆ ಕೊರೊನಾ ಬಗ್ಗೆ ಜಿನ್‌ಪಿಂಗ್‌ ಮಾತು

    ಈ ಹಿಂದೆ ಚೀನಾದಲ್ಲಿ ಕೇವಲ ಒಂದು ಪ್ರಕರಣ ದಾಖಲಾದರು ಲಾಕ್‍ಡೌನ್ ಮಾಡಲು ಮುಂದಾಗಿತ್ತು. ಈ ನಿಯಮದ ವಿರುದ್ಧ ಜನ ಆಕ್ರೋಶ ಹೊರ ಹಾಕಿದ ಬಳಿಕ ಈ ನಿಯಮವನ್ನು ಸರ್ಕಾರ ಸಡಿಲಗೊಳಿಸಿತು. ಆ ಬಳಿಕ ಸೋಂಕಿತರ ಸಂಖ್ಯೆ ಏರಿಕೆಕಂಡಿತ್ತು.

    Live Tv
    [brid partner=56869869 player=32851 video=960834 autoplay=true]

  • ಜಿನ್‌ಪಿಂಗ್ ವಿರುದ್ಧ ಭುಗಿಲೆದ್ದ ಚೀನಾದ ಜನ – ಅಪರೂಪದಲ್ಲಿ ಕಂಡುಬಂತು ಬ್ಯಾನರ್

    ಜಿನ್‌ಪಿಂಗ್ ವಿರುದ್ಧ ಭುಗಿಲೆದ್ದ ಚೀನಾದ ಜನ – ಅಪರೂಪದಲ್ಲಿ ಕಂಡುಬಂತು ಬ್ಯಾನರ್

    ಬೀಜಿಂಗ್: ಚೀನಾದ (China) ಅಧ್ಯಕ್ಷ ಕ್ಸಿ ಜಿನ್‌ಪಿಂಗ್ (Xi Jinping) ವಿರುದ್ಧ ಅಪರೂಪದಲ್ಲಿ ಅಲ್ಲಿನ ಜನರು ಪ್ರತಿಭಟನೆ (Protest) ನಡೆಸಿರುವುದಾಗಿ ವರದಿಯಾಗಿದೆ. ಬೀಜಿಂಗ್‌ನ (Beijing) ಸಿಟಾಂಗ್ ಸೇತುವೆ ಮೇಲೆ 2 ದೊಡ್ಡ ಬ್ಯಾನರ್‌ಗಳು (Banner) ಕಂಡುಬಂದಿದ್ದು, ಅದರಲ್ಲಿ ಅಧ್ಯಕ್ಷ ಸ್ಥಾನದಿಂದ ಕ್ಸಿ ಜಿನ್‌ಪಿಂಗ್ ಅವರನ್ನು ತೆಗೆದು ಹಾಕುವಂತೆ ಕರೆ ನೀಡಲಾಗಿದೆ.

    ಸೇತುವೆ ಮೇಲೆ ಕಂಡುಬಂದ 1 ಬ್ಯಾನರ್‌ನಲ್ಲಿ ಕೋವಿಡ್ ಪರೀಕ್ಷೆ ಬೇಡ, ಆಹಾರಕ್ಕೆ ಹೌದು ಎನ್ನಿ. ಲಾಕ್‌ಡೌನ್ ಬೇಡ, ಸ್ವಾತಂತ್ರ್ಯಕ್ಕೆ ಹೌದು ಎನ್ನಿ. ಸುಳ್ಳು ಬೇಡ, ಘನತೆಗೆ ಹೌದು ಎನ್ನಿ. ಸಾಂಸ್ಕೃತಿಕ ಕ್ರಾಂತಿ ಬೇಡ, ಸುಧಾರಣೆಗೆ ಹೌದು ಎನ್ನಿ. ಮಹಾನಾಯಕ ಬೇಡ, ಮತ ಚಲಾವಣೆ ಬೇಕು ಎನ್ನಿ. ಗುಲಾಮನಾಗಬೇಡಿ, ಪ್ರಜೆಯಾಗಿರಿ ಎಂದು ಬರೆಯಲಾಗಿದೆ.

    ತೂಗುಹಾಕಲಾಗಿದ್ದ ಇನ್ನೊಂದು ಬ್ಯಾನರ್‌ನಲ್ಲಿ, ಮುಷ್ಕರ ಮಾಡಿ, ಸರ್ವಾಧಿಕಾರಿ ಹಾಗೂ ರಾಷ್ಟ್ರದ್ರೋಹಿ ಕ್ಸಿ ಜಿನ್‌ಪಿಂಗ್ ಅವರನ್ನು ತೆಗೆದುಹಾಕಿ ಎಂದು ಬರೆಯಲಾಗಿದೆ. ಈ ಬ್ಯಾನರ್‌ಗಳ ವೀಡಿಯೋ ಹಾಗೂ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ತಮ್ಮ ಅಧ್ಯಕ್ಷನ ವಿರುದ್ಧ ಪ್ರತಿಭಟನೆ ನಡೆಸಲು ಚೀನಾದ ಜನರಿಗೆ ಮನವೊಲಿಸಲಾಗುತ್ತಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಬಿಸಿಸಿಐಗೆ ಜಿಎಸ್‍ಟಿ ಬರೆ – 2023ರ ವಿಶ್ವಕಪ್‍ಗೂ ಮುನ್ನ 955 ಕೋಟಿ ರೂ. ನಷ್ಟದ ಭೀತಿ

    ಬೀಜಿಂಗ್‌ನಲ್ಲಿ ಕಮ್ಯುನಿಸ್ಟ್ ನಾಯಕತ್ವವನ್ನು ಟೀಕಿಸುವ ಬ್ಯಾನರ್‌ಗಳನ್ನು ತೂಗುಹಾಕಲಾಗಿದೆ ಎಂಬ ಸುದ್ದಿ ಹರಡುತ್ತಲೇ ಚೀನಾ ಈ ಸುದ್ದಿಯನ್ನು ತಕ್ಷಣವೇ ಅಲ್ಲಗೆಳೆದಿದೆ. ಈ ಪ್ರದೇಶದಲ್ಲಿ ಯಾವುದೇ ನಾಯಕತ್ವ ವಿರೋಧಿ ಘಟನೆ ನಡೆದಿಲ್ಲ ಎಂದು ಚೀನಾ ಪೊಲೀಸರು ಹೇಳಿದ್ದಾರೆ.

    ಪಾಶ್ಚಿಮಾತ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಇದರ ಚಿತ್ರಗಳು ಮತ್ತು ವೀಡಿಯೊಗಳು ಹರಡಿದಾಡುತ್ತಿದ್ದಂತೆಯೇ, ಚೀನಾವು ತನ್ನ ಸಾಮಾಜಿಕ ಮಾಧ್ಯಮದ ಹ್ಯಾಂಡಲ್‌ಗಳಿಂದ ಚಿತ್ರಗಳ ಪ್ರತಿಯೊಂದು ಕುರುಹುಗಳನ್ನು ತೆಗೆದುಹಾಕಿದೆ. ಚೀನಾದ ಮ್ಯಾಂಡರಿನ್ ಭಾಷೆಯಲ್ಲಿ ಬರೆಯಲಾಗಿದ್ದ ಕೆಲ ಟ್ವಿಟ್ಟರ್ ಖಾತೆಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ವರದಿಯಾಗಿದೆ.

    ಕ್ಸಿ ಜಿನ್‌ಪಿಂಗ್ ಅವರು 2012 ರಲ್ಲಿ ಚೀನಾದ ಅಧ್ಯಕ್ಷರಾಗಿ ನೇಮಕವಾಗಿದ್ದು, ಇದೇ ಭಾನುವಾರದಂದು 3ನೇ ಅವಧಿಗೆ ಮತ್ತೆ 5 ವರ್ಷ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲು ಸಿದ್ಧರಾಗಿದ್ದಾರೆ. ಇದನ್ನೂ ಓದಿ: ನಮ್ಮಲ್ಲಿ ಮೂನ್‌ಲೈಟಿಂಗ್‌ಗೆ ಜಾಗ ಇಲ್ಲ – ಉದ್ಯೋಗಿಗಳನ್ನು ವಜಾಗೊಳಿಸಿದ ಇನ್ಫೋಸಿಸ್‌

    Live Tv
    [brid partner=56869869 player=32851 video=960834 autoplay=true]

  • ಹಾಂಕಾಂಗ್ ತೇಲುವ ಜಂಬೋ ರೆಸ್ಟೋರೆಂಟ್ ಮಗುಚಿದೆ, ಮುಳುಗಿಲ್ಲ: ಸ್ಪಷ್ಟನೆ ಕೊಟ್ಟ ಮಾಲೀಕ

    ಹಾಂಕಾಂಗ್ ತೇಲುವ ಜಂಬೋ ರೆಸ್ಟೋರೆಂಟ್ ಮಗುಚಿದೆ, ಮುಳುಗಿಲ್ಲ: ಸ್ಪಷ್ಟನೆ ಕೊಟ್ಟ ಮಾಲೀಕ

    ಬೀಜಿಂಗ್: ಹಾಂಕಾಂಗ್‍ನ ತೇಲುವ ಜಂಬೋ ರೆಸ್ಟೋರೆಂಟ್ ಮಗುಚಿದೆ, ಮುಳುಗಿಲ್ಲ ಎಂದು ರೆಸ್ಟೋರೆಂಟ್ ಮಾಲೀಕರು ಸ್ಪಷ್ಟಪಡಿಸಿದ್ದಾರೆ.

    46 ವರ್ಷಗಳಿಂದ ಒಂದೇ ನೆಲೆಯಲ್ಲಿದ್ದ ಪ್ಲೋಟಿಂಗ್ ರೆಸ್ಟೋರೆಂಟ್ ಕಳೆದ ವಾರ ಬೇರೆಡೆಗೆ ಸ್ಥಳಾಂತರಿಸಲು ಟಗ್‍ಬೋಟ್ ಸಹಾಯದಿಂದ ಎಳೆದುಕೊಂಡು ಹೋಗಲಾಗಿತ್ತು. ಈ ಸಂದರ್ಭ ದಕ್ಷಿಣ ಚೀನಾ ಸಮುದ್ರದ ಭಾರೀ ಅಲೆಯ ಕಾರಣ ಜಂಬೋ ರೆಸ್ಟೋರೆಂಟ್ ಮಗುಚಿದೆ. ಅದನ್ನು ನೀರಿನಿಂದ ಮೇಲೆತ್ತುವುದು ಅತ್ಯಂತ ಕಷ್ಟಕರವಾಗಿದೆ ಎಂದು ವರದಿಗಳು ತಿಳಿಸಿತ್ತು. ಆದರೆ ಇನ್ನೂ ಕೆಲವು ವರದಿಗಳು ಇದು ನಿಜವಾಗಿಯೂ ಮುಳುಗಿದೆಯೇ ಎಂಬ ಗೊಂದಲವನ್ನು ವ್ಯಕ್ತಪಡಿಸಿತ್ತು.

    ಈ ಕುರಿತು ಸಂಪೂರ್ಣ ಮಾಹಿತಿ ತಿಳಿದುಕೊಳ್ಳಲು ಮಾಧ್ಯಮಗಳು ರೆಸ್ಟೋರೆಂಟ್ ಮಾಲೀಕರನ್ನು ಸಂಪರ್ಕಿಸಿದ್ದು, ನಮ್ಮ ರೆಸ್ಟೋರೆಂಟ್ ಮಗುಚಿದೆ, ಮುಳುಗಿಲ್ಲ. ಪದಗಳನ್ನು ಸರಿಯಾಗಿ ಬಳಸಿ ಎಂದು ಹೇಳಿದೆ. ಆದರೆ ಹೇಗೆ ನಡೆಯಿತು ಎಂಬ ಹೆಚ್ಚಿನ ವಿವರಗಳನ್ನು ಕೊಟ್ಟಿಲ್ಲ. ಇದನ್ನೂ ಓದಿ: ಸಮುದ್ರದಲ್ಲಿ ಮುಳುಗಿತು ಹಾಂಕಾಂಗ್ ಫೇಮಸ್ ತೇಲುವ ರೆಸ್ಟೋರೆಂಟ್

    File:Jumbo Floating Restaurant, Hong Kong - panoramio.jpg - Wikimedia Commons

    ಹಿನ್ನೆಲೆ
    ಒಂದು ಕಾಲದಲ್ಲಿ ವಿಶ್ವದ ಅತಿ ದೊಡ್ಡ ತೇಲುವ ರೆಸ್ಟೋರೆಂಟ್ ಎಂದು ಹೆಗ್ಗಳಿಕೆಗೆ ಪಾತ್ರವಾಗಿದ್ದ ಜಂಬೋ ಅಂತಾರಾಷ್ಟ್ರೀಯ ಚಲನಚಿತ್ರಗಳಲ್ಲೂ ಕಾಣಿಸಿಕೊಂಡಿತ್ತು. ಈ ರೆಸ್ಟೋರೆಂಟ್‍ನಲ್ಲಿ ಎರಡನೇ ರಾಣಿ ಎಲಿಜಬೆತ್, ಜಿಮ್ಮಿ ಕಾರ್ಟರ್, ಟಾಮ್ ಕ್ರೂಸ್ ಸೇರಿದಂತೆ ಹಲವು ಗಣ್ಯರಿಗೆ ಆತಿಥ್ಯ ನೀಡಲಾಗಿತ್ತು. ಭವ್ಯವಾದ ಗೋಪುರ, ವರ್ಣರಂಜಿತ ಚಿತ್ರ, ಚೈನೀಸ್ ಭಾಷೆಯ ಸಾಲುಗಳಿಂದ ಜಂಬೋ ಪ್ರಸಿದ್ಧವಾಗಿದೆ.

    Live Tv

  • 132 ಪ್ರಯಾಣಿಕರಿದ್ದ ಚೀನಾ ವಿಮಾನ ಪತನ ಉದ್ದೇಶಪೂರ್ವಕ – ಅಮೆರಿಕ ವರದಿ ಹೇಳಿದ್ದೇನು?

    132 ಪ್ರಯಾಣಿಕರಿದ್ದ ಚೀನಾ ವಿಮಾನ ಪತನ ಉದ್ದೇಶಪೂರ್ವಕ – ಅಮೆರಿಕ ವರದಿ ಹೇಳಿದ್ದೇನು?

    ಬೀಜಿಂಗ್: 132 ಜನರನ್ನು ಬಲಿ ಪಡೆದ ಚೀನಾ ವಿಮಾನ ದುರಂತ ಉದ್ದೇಶಪೂರ್ವಕ ಎಂದು ಅಮೆರಿಕದ ಮಾಧ್ಯಮ ವರದಿ ಮಾಡಿದೆ.

    ವಿಮಾನ ಪತನಗೊಂಡ ಸ್ಥಳದಲ್ಲಿ ಸಿಕ್ಕ ಬ್ಲಾಕ್‌ಬಾಕ್ಸ್‌ನಿಂದ ಈ ಮಾಹಿತಿ ಪತ್ತೆಯಾಗಿದೆ ಎಂದು ಅಮೆರಿಕದ ವಾಲ್‌ಸ್ಟ್ರೀಟ್‌ ಜರ್ನಲ್ ವರದಿ ಮಾಡಿದೆ. ಇದನ್ನೂ ಓದಿ: ವಿಮಾನದ ಬ್ಲ್ಯಾಕ್‌ ಬಾಕ್ಸ್‌ ಪತ್ತೆ – ಹೇಗೆ ಕೆಲಸ ಮಾಡುತ್ತೆ? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ? 

    FLIGHT

    ಕಳೆದ ಮಾರ್ಚ್‌ ಚೀನಾದ ಈಸ್ಟರ್ನ್ ಜೆಟ್ ಕಂಪನಿಗೆ ಸೇರಿದ ವಿಮಾನ ಇಲ್ಲಿನ ಗುವಾಂಗ್ಸಿ ಪ್ರದೇಶದಲ್ಲಿ ಪತನಗೊಂಡು 132 ಜನರು ಮೃತಪಟ್ಟಿದ್ದರು. ಈ ವೇಳೆ ಪೈಲಟ್ ತಪ್ಪಿನಿಂದಾಗಿ ಅಥವಾ ಆತ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ವಿಮಾನವನ್ನು ಉದ್ದೇಶಪೂರ್ವಕವಾಗಿಯೇ ಪತನಗೊಳಿಸಿರಬಹುದು ಎಂಬ ವಾದಗಳು ಹುಟ್ಟಿಕೊಂಡಿದ್ದವು. ಇದೀಗ ಅಮೆರಿಕ ತಜ್ಞರ ವರದಿ ಈ ಕುರಿತು ಸ್ಪಷ್ಟನೆ ನಿಡಿದೆ.

    ಫ್ಲೈಟ್‌ ಡೇಟಾ ರೆಕಾರ್ಡರ್ ಮತ್ತು ಕಾಕ್‌ಪಿಟ್ ಧ್ವನಿ ರೆಕಾರ್ಡರ್ ಅನ್ನು ಈಗಾಗಲೇ ಪರೀಕ್ಷೆಗಾಗಿ ಕಳುಹಿಸಲಾಗಿದೆ. 30 ದಿನಗಳಲ್ಲಿ ಪ್ರಾಥಮಿಕ ವರದಿಗಳು ಬರಬಹುದು ಎಂದು ಅಧಿಕಾರಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: 133 ಪ್ರಯಾಣಿಕರಿದ್ದ ಚೀನಾ ವಿಮಾನ ಪತನ

    ಏನಿದು ಘಟನೆ?: ಕಳೆದ ಮಾರ್ಚ್ 21ರಂದು 133 ಜನರಿದ್ದ ಚೈನಾ ಈಸ್ಟರ್ನ್ ಏರ್‌ಲೈನ್ಸ್ ಬೋಯಿಂಗ್-737 ವಿಮಾನವು ದಕ್ಷಿಣ ಪ್ರಾಂತ್ಯದ ಗುವಾಂಗ್ಸಿಯಲ್ಲಿ ಪತನಗೊಂಡಿತ್ತು. ವಿಮಾನ ಬಿದ್ದ ರಭಸಕ್ಕೆ ಪರ್ವತದ ಅರಣ್ಯ ಪ್ರದೇಶ ಹೊತ್ತಿ ಉರಿದಿತ್ತು. ವಿಮಾನ ಪರ್ವತಕ್ಕೆ ಅಪ್ಪಳಿಸಿದೆ. ಪರಿಣಾಮವಾಗಿ ಪರ್ವತದ ಪ್ರದೇಶವೆಲ್ಲಾ ಬೆಂಕಿಗಾಹುತಿಯಾಗಿತ್ತು.

    ಶಾಂಘೈ ಮೂಲದ ಚೈನಾ ಈಸ್ಟರ್ನ್, ಚೀನಾದ ಪ್ರಮುಖ ಮೂರು ವಿಮಾನಯಾನ ಸಂಸ್ಥೆಗಳಲ್ಲಿ ಒಂದಾಗಿದೆ. ವಿಮಾನ ಟ್ಯಾಕಿಂಗ್‌ ವೆಬ್‌ಸೈಟ್ `ಫ್ಲೈಟ್‌ ರೇಡರ್-24′ ಮಾಹಿತಿ ಪ್ರಕಾರ, ಕುನ್ಮಿಂಗ್‌ನಿಂದ ಗುವಾಂಗ್‌ಝೌಗೆ ಪ್ರಯಾಣಿಸುತ್ತಿದ್ದ ಎಂಯು 5735 ವಿಮಾನ ಅಪಘಾತಕ್ಕೀಡಾಗಿತ್ತು. ಲ್ಯಾಂಡಿಂಗ್ ಆಗಲು ಸಿದ್ಧವಾಗುತ್ತಿದ್ದ ಸಂದರ್ಭದಲ್ಲಿ ವೇಗ ಕಳೆದುಕೊಂಡು ಪತನಗೊಂಡಿತ್ತು.

  • ಚೀನಿಯರ ನೆತ್ತರು ವ್ಯರ್ಥವಾಗಲು ಬಿಡಲ್ಲ: ಪಾಕ್‌ನಲ್ಲಿ ತನ್ನ ಪ್ರಜೆಗಳ ಹತ್ಯೆಗೆ ಚೀನಾ ಕಿಡಿ

    ಚೀನಿಯರ ನೆತ್ತರು ವ್ಯರ್ಥವಾಗಲು ಬಿಡಲ್ಲ: ಪಾಕ್‌ನಲ್ಲಿ ತನ್ನ ಪ್ರಜೆಗಳ ಹತ್ಯೆಗೆ ಚೀನಾ ಕಿಡಿ

    ಬೀಜಿಂಗ್: ಚೀನಿಯರ ನೆತ್ತರು ವ್ಯರ್ಥವಾಗಲು ಬಿಡಲ್ಲ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರರು ಪಾಕಿಸ್ತಾನದಲ್ಲಿ ಕೆಲಸ ಮಾಡುತ್ತಿರುವ ಚೀನಾದ ಪ್ರಜೆಗಳ ಮೇಲಿನ ದಾಳಿಯನ್ನು ಬಲವಾಗಿ ಖಂಡಿಸಿದ್ದಾರೆ.

    ಕರಾಚಿ ವಿಶ್ವವಿದ್ಯಾನಿಲಯದಲ್ಲಿ ಮೂವರು ಚೀನೀ ಶಿಕ್ಷಕರನ್ನು ಕೊಂದು ಇನ್ನೊಬ್ಬರನ್ನು ಗಾಯಗೊಳಿಸಿದ ದಾಳಿ ನಡೆದಿದೆ. ಈ ದಾಳಿಯ ಹಿಂದೆ ಇರುವ ದುಷ್ಕರ್ಮಿಗಳ ಬಗ್ಗೆ ಸಮಗ್ರವಾಗಿ ತನಿಖೆಯಾಗಬೇಕು. ಆರೋಪಿಗಳಿಗೆ ಸರಿಯಾದ ಶಿಕ್ಷೆ ವಿಧಿಸುಬೇಕು ಎಂದು ಚೀನಾ ಬುಧವಾರ ಪಾಕಿಸ್ತಾನಕ್ಕೆ ಒತ್ತಾಯಿಸಿದೆ. ಪಾಕ್‍ನಲ್ಲಿ ಕೆಲಸ ಮಾಡುತ್ತಿರುವ ಚೀನಿ ಪ್ರಜೆಗಳ ಭದ್ರತೆಯನ್ನು ಹೆಚ್ಚಿಸುವಂತೆ ಒತ್ತಾಯಿಸಿದೆ. ಇದನ್ನೂ ಓದಿ: ಚೀನಿಯರನ್ನು ಗುರಿಯಾಗಿಸಿ ಕರಾಚಿಯಲ್ಲಿ ಬಾಂಬ್ ಸ್ಫೋಟ – ನಾಲ್ವರು ಸಾವು

    ನಡೆದಿದ್ದೇನು?
    ಕರಾಚಿಯ ಪ್ರತಿಷ್ಠಿತ ವಿಶ್ವವಿದ್ಯಾನಿಲಯದಲ್ಲಿರುವ ಕನ್ಫ್ಯೂಷಿಯಸ್ ಇನ್‍ಸ್ಟಿಟ್ಯೂಟ್‍ನ ಶಟಲ್ ಪ್ಯಾಸೆಂಜರ್ ವ್ಯಾನ್‍ನಲ್ಲಿ ಮಂಗಳವಾರ ಬುರ್ಖಾ ಧರಿಸಿದ ಬಲೂಚ್ ಮಹಿಳೆ ಆತ್ಮಾಹುತಿ ಬಾಂಬರ್ ಧರಿಸಿ ವ್ಯಾನ್‍ನಲ್ಲಿ ಕುಳಿತ್ತಿದ್ದಳು. ನಂತರ ಮಹಿಳೆ ಧರಿಸಿದ್ದ ಆತ್ಮಾಹುತಿ ಬಾಂಬರ್ ಸ್ಫೋಟಗೊಂಡಿದೆ. ಪರಿಣಾಮ ವ್ಯಾನ್‍ನಲ್ಲಿದ್ದ ಮೂವರು ಚೀನೀ ಶಿಕ್ಷಕರು ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ. ಈ ಬಾಂಬ್ ದಾಳಿ ಚೀನೀ ಶಿಕ್ಷಕರನ್ನೆ ಗುರಿಯಾಗಿಟ್ಟುಕೊಂಡು ಉದ್ದೇಶಪೂರ್ವವಾಗಿ ನಡೆಸಲಾಗಿದೆ ಎಂದು ಎಲ್ಲಕಡೆ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆ ಪಾಕ್ ವಿರುದ್ಧ ಚೀನಾ ಕಿಡಿಕಾರುತ್ತಿದೆ.

    Blast inside Karachi University in Pakistan, three Chinese citizens killed - WORLD - OTHERS | Kerala Kaumudi Online

    ದಾಳಿಯ ಬಗ್ಗೆ ಚೀನಾ ಬಲವಾಗಿ ಖಂಡಿಸಿದ್ದು, ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದೆ. ಜೊತೆಗೆ ದಾಳಿಯಿಂದ ಬಲಿಯಾದವರಿಗೆ ಸಂತಾಪ ಸೂಚಿಸಿದ್ದು, ಗಾಯಗೊಂಡವರು ಮತ್ತು ದುಃಖಿತ ಕುಟುಂಬಗಳಿಗೆ ಸಹಾನುಭೂತಿ ವ್ಯಕ್ತಪಡಿಸಿದೆ. ಇದನ್ನೂ ಓದಿ: ಸಿನಿ ಶುಕ್ರವಾರ ‘ವೆಡ್ಡಿಂಗ್ ಗಿಫ್ಟ್’ ಚಿತ್ರದಿಂದ ಪ್ರೇಕ್ಷಕರಿಗೆ ಡ್ಯುಯೆಟ್ ಸಾಂಗ್ ಗಿಫ್ಟ್ 

    ಚೀನಾದ ಸಹಾಯಕ ವಿದೇಶಾಂಗ ಸಚಿವ ವೂ ಜಿಯಾಂಗ್‍ಹಾವೊ ಅವರು ಚೀನಾದಲ್ಲಿರುವ ಪಾಕಿಸ್ತಾನಿ ರಾಯಭಾರಿಗೆ ತುರ್ತು ದೂರವಾಣಿ ಕರೆ ಮಾಡಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ವರದಿಯಲ್ಲಿ ತಿಳಿದುಬಂದಿದೆ. ನಂತರ ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಾಕಿಸ್ತಾನ ಸರ್ಕಾರ ಈ ಘಟನೆಯ ಬಗ್ಗೆ ತಕ್ಷಣವೇ ಸಮಗ್ರ ತನಿಖೆ ನಡೆಸಬೇಕು. ಅಪರಾಧಿಗಳನ್ನು ಬಂಧಿಸಿ ಕಾನೂನಿನ ಪೂರ್ಣ ಪ್ರಮಾಣದಲ್ಲಿ ಶಿಕ್ಷಿಸಬೇಕು. ಪಾಕಿಸ್ತಾನದಲ್ಲಿರುವ ಚೀನಾದ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಇಂತಹ ಘಟನೆಗಳು ಮತ್ತೆ ನಡೆಯದಂತೆ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

  • ವುಹಾನ್‌ ನಂತರ ಚೀನಾದಲ್ಲಿ ಅತಿದೊಡ್ಡ ಲಾಕ್‌ಡೌನ್: 2.6 ಕೋಟಿ ಜನ ಮನೆಯಲ್ಲೇ ಲಾಕ್

    ಬೀಜಿಂಗ್: ಚೀನಾದಲ್ಲಿ ಕೊರೊನಾ ಆರ್ಭಟ ಮುಂದುವರಿಯುತ್ತಿದ್ದು, 26 ಮಿಲಿಯನ್ ಜನರಿರುವ ಶಾಂಘೈ ನಗರಕ್ಕೆ ಲಾಕ್‌ಡೌನ್ ವಿಧಿಸಿ ಚೀನಾ ಸರ್ಕಾರ ಆದೇಶ ಹೊರಡಿಸಿದೆ.

    ಶಾಂಘೈ ನಗರದಲ್ಲಿ ಭಾನುವಾರ ಒಂದೇ ದಿನ 3,450 ಮಂದಿಯಲ್ಲಿ ಲಕ್ಷಣ ರಹಿತ ಕೊರೊನಾ ಸೋಂಕು ಪತ್ತೆಯಾಗಿದೆ. ಇದು ಚೀನಾದ ಒಟ್ಟು ಪ್ರಕರಣಗಳ ಶೇ.70 ರಷ್ಟಿದೆ. ಅಲ್ಲದೆ 50 ಮಂದಿಯಲ್ಲಿ ಲಕ್ಷಣ ಸಹಿತ ಪ್ರಕರಣಗಳು ವರದಿಯಾಗಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಶಾಂಘೈನಲ್ಲಿ ಲಾಕ್‌ಡೌನ್ ಘೋಷಿಸಲಾಗಿದೆ. ಶಾಂಘೈನ ಪುಡಾಂಗ್ ಜಿಲ್ಲೆ ಸೇರಿದಂತೆ ಹತ್ತಿರವಿರುವ ನಗರಗಳಲ್ಲೂ ಸೋಮವಾರದಿಂದ ಲಾಕ್‌ಡೌನ್ ಆರಂಭಿಸಿದ್ದು ಮುಂದಿನ ಶುಕ್ರವಾರದ ವರೆಗೆ ಮುಂದುವರಿಯಲಿದೆ ಎಂದು ಚೀನಾ ಸರ್ಕಾರ ಹೇಳಿದೆ. ಇದನ್ನೂ ಓದಿ: 89 ಜನರಿಗೆ ಕೊರೊನಾ, 85 ಜನ ಡಿಸ್ಚಾರ್ಜ್ – 4 ಸಾವು

    covid

    ಈ ಬೆನ್ನಲ್ಲೇ ಹುವಾಂಗ್‌ಪು ನದಿಯ ಪಶ್ಚಿಮಕ್ಕೆ ಇರುವ ಡೌನ್‌ಟೌನ್ ಪ್ರದೇಶವೂ ಮುಂದಿನ ಶುಕ್ರವಾರದಿಂದ ತನ್ನದೇ ನಿಯಮಗಳಿಂದ 5 ದಿನಗಳ ಕಾಲ ಲಾಕ್‌ಡೌನ್ ವಿಧಿಸಲಿದೆ.

    ಲಸಿಕೆಯನ್ನೇ ಪಡೆದಿಲ್ಲ
    ಮಾರ್ಚ್ ತಿಂಗಳಲ್ಲಿ ಚೀನಾದಲ್ಲಿ 56 ಸಾವಿರಕ್ಕೂ ಹೆಚ್ಚು ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿವೆ. ಈ ನಡುವೆ ಚೀನಾದಲ್ಲಿ ಇನ್ನೂ ಕೆಲವರು ಕೋವಿಡ್-19 ಲಸಿಕೆಯನ್ನೇ ಪಡೆದಿಲ್ಲ ಎಂಬ ಮಾಹಿತಿ ಕೇಳಿಬಂದಿದೆ. ಮಾರ್ಚ್ ತಿಂಗಳಲ್ಲಿ ಬಿಡುಗಡೆಯಾದ ರಾಷ್ಟ್ರೀಯ ದತ್ತಾಂಶದ ಪ್ರಕಾರ 60 ವರ್ಷ ಮೇಲ್ಪಟ್ಟ 52 ಮಿಲಿಯನ್ ಜನರು ಇನ್ನೂ ಯಾವುದೇ ಕೋವಿಡ್ -19 ಲಸಿಕೆಯನ್ನೇ ಪಡೆದಿಲ್ಲ ಎಂದು ತೋರಿಸಿದೆ. ಇದನ್ನೂ ಓದಿ: 21 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ- ರಾಜ್ಯದಲ್ಲಿಂದು 92 ಮಂದಿಗೆ ಕೊರೊನಾ, ಇಬ್ಬರು ಸಾವು

    wuhan

    60-69ರ ವರ್ಷದೊಳಗಿನ ಶೇ.56.4 ಜನರು ಮಾತ್ರ ಬೂಸ್ಟರ್ ಡೋಸ್ ಪಡೆದಿದ್ದಾರೆ ಹಾಗೂ 70-79 ವರ್ಷದೊಳಗಿನ ಶೇ.48.4ರಷ್ಟು ಜನರು ಮೊದಲ ಡೋಸ್ ಅಷ್ಟೇ ಸ್ವೀಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡಲು ಕಾರಣವಾಗಿದೆ ಎನ್ನುವುದು ತಜ್ಞರ ಅಭಿಪ್ರಾಯ.