Tag: belagavi

  • ಡಿಕೆಶಿ, ಜಾರಕಿಹೊಳಿ ಅಲ್ಲ.. ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಸಿಎಂ ಆಗ್ತಾರೆ: ಯತ್ನಾಳ್ ಬಾಂಬ್

    ಡಿಕೆಶಿ, ಜಾರಕಿಹೊಳಿ ಅಲ್ಲ.. ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಸಿಎಂ ಆಗ್ತಾರೆ: ಯತ್ನಾಳ್ ಬಾಂಬ್

    – ವಿಜಯೇಂದ್ರ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ಆದ್ರೆ ಹೊಸ ಪಕ್ಷ ಕಟ್ತೀನಿ ಎಂದ ಶಾಸಕ

    ಬೆಳಗಾವಿ: ಡಿಕೆಶಿ, ಸತೀಶ್ ಜಾರಕಿಹೊಳಿ ಇಬ್ಬರೂ ಸಿಎಂ ಆಗಲ್ಲ. ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ಬೆಳಗಾವಿಯಲ್ಲಿ ಕನೇರಿ ಮಠದ ಸ್ವಾಮೀಜಿ ಬೆಂಬಲಿಸಿ ನಡೆದ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಯತ್ನಾಳ್, ಕಾಂಗ್ರೆಸ್‌ನಲ್ಲಿ ಸ್ಪರ್ಧೆಯಲ್ಲಿರುವ ಯಾವ ನಾಯಕರೂ ಸಿಎಂ ಆಗಲ್ಲ. ರಾಜ್ಯದ ಸಾರಥ್ಯ ಬ್ಲ್ಯಾಕ್ ಹಾರ್ಸ್ ಕೈಗೆ ಸಿಗಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ. ಡಿಕೆಶಿಯೂ ಸಿಎಂ ಆಗಲ್ಲ, ಸತೀಶ್ ಜಾರಕಿಹೊಳಿ ಕೂಡ ಸಿಎಂ ಆಗಲ್ಲ. ಒಮ್ಮೆ ಸಿಎಂ ಆಗಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಕಾಯುತ್ತಿದ್ದಾರೆ. ಸಿಎಂ ಪುತ್ರ ಕೂಡ ಬೆಳಗಾವಿಗೆ ಬಂದು ಸತೀಶ್ ಜಾರಕಿಹೊಳಿ ಹೆಸರು ಹೇಳಿ ಹೋಗಿದ್ದಾರೆ. ಆದರೆ, ನಾಯಕತ್ವ ಬದಲಾವಣೆ ಆಗಲಿದೆ. ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಲಿದ್ದಾರೆ ಎಂದು ಭವಿಷ್ಯ ನುಡಿದರು. ಇದನ್ನೂ ಓದಿ: ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆಶಿ ಟಾಂಗ್‌

    ಡಿಕೆಶಿಯನ್ನ ಸಿಎಂ ಮಾಡ್ತೀನಿ ಅಂತ ನೀವು ಡಿಸೈಡ್ ಮಾಡಿದ್ರೆ, ನಾನು ಸತೀಶ್ ಪರವಾಗಿ ನಿಲ್ತೀನಿ ಅಂತ ಸಿದ್ದರಾಮಯ್ಯ ಸಂದೇಶ ಕೊಟ್ಟಿದ್ದಾರೆ. ತಮ್ಮ ಮಗನನ್ನು ಕಳಿಸಿ ಸಂದೇಶ ಸಾರಿದ್ದಾರೆ ಸಿಎಂ ಸಿದ್ದರಾಮಯ್ಯ ಯತ್ನಾಳ್ ಆರೋಪ ಮಾಡಿದ್ದಾರೆ.

    ವಿಜಯೇಂದ್ರ ಮರಳಿ ರಾಜ್ಯ ಬಿಜೆಪಿ ಅಧ್ಯಕ್ಷರಾದ್ರೆ ನಾನು ಹೊಸ ಪಕ್ಷ ಕಟ್ಟುತ್ತೇನೆ. ಕರ್ನಾಟಕ ರಾಜ್ಯದಲ್ಲಿ ಜೆಸಿಬಿ ಹೆಸರಲ್ಲಿ ಹೊಸ ಪಕ್ಷ ಕಟ್ಟುತ್ತೇನೆ. ಜೆ ಅಂದ್ರೆ ಜೆಡಿಎಸ್‌ನಲ್ಲಿ, ಸಿ ಅಂದ್ರೆ ಕಾಂಗ್ರೆಸ್ ಹಾಗೂ ಬಿ ಅಂದ್ರೆ ಬಿಜೆಪಿಯಲ್ಲಿ ನೊಂದವರು ನಮ್ಮ ಪಕ್ಷ ಸೇರುತ್ತಾರೆ. ಈಗ ಬಿಜೆಪಿಯಲ್ಲಿರುವ 50 ಕ್ಕೂ ಅಧಿಕ ಶಾಸಕರ ಬೆಂಬಲ ನನಗಿದೆ. ಹೆಚ್ಚಿನ ಸಂಖ್ಯೆಯ ಸಂಸದರ ಬೆಂಬಲವೂ ನನಗಿದೆ. ಹೀಗಾಗಿ, ಯಾವುದೇ ಕಾರಣಕ್ಕೂ ಬಿಜೆಪಿ ಹೈಕಮಾಂಡ್ ವಿಜಯೇಂದ್ರರನ್ನು ಅಧ್ಯಕ್ಷ ಮಾಡಬಾರದು. ಒಂದು ವೇಳೆ ವಿಜಯೇಂದ್ರ ಅಧ್ಯಕ್ಷರಾದ್ರೆ ನಾನು ಜೆಸಿಬಿ ಪಕ್ಷ ಕಟ್ಟುವೆ. ಜೆಸಿಬಿ ಪಾರ್ಟಿ ರಚನೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿದ್ದೇವೆ. ವಿಜಯೇಂದ್ರ ನೇಮಿಸಿದ ಮರುದಿನವೇ ಪಕ್ಷ ಆ್ಯಕ್ಟಿವ್ ಆಗಲಿದೆ. ನಾನು ಹೋದ ಕಡೆಗಳಲ್ಲಿ ಜನಬೆಂಬಲ ಸಿಗ್ತಿದೆ. ಹಿಂದುತ್ವದ ಆಧಾರದ ಮೇಲೆ ಪಕ್ಷ ಕಟ್ಟುವೆ ಎಂದು ತಿಳಿಸಿದರು. ಇದನ್ನೂ ಓದಿ: ಹಣೆಯಲ್ಲಿ ಬರೆದಿದ್ದರೆ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ, ಇಲ್ಲದಿದ್ದರೆ ಇಲ್ಲ: ಡಿ.ಕೆ.ಸುರೇಶ್

    ನರೇಂದ್ರ ಮೋದಿ ಜನರಿಂದ ಆದ ನಾಯಕ. ದೇಶದಲ್ಲಿ ಒಂದು ಸಂಚಲನ ಆಯ್ತು. ಮೋದಿಯವರ ನಂತರ ಯೋಗಿ ಆದಿತ್ಯನಾಥ್ ಪಿಎಂ ಆಗಬೇಕು ಎಂದು ಜನ ಬಯಸಿದ್ದಾರೆ. ಹಾಗೆಯೇ ರಾಜ್ಯದ ಜನರ ಆಶಾವಾದವಿದೆ. ಜನರಲ್ಲಿ ಯತ್ನಾಳ್ ಸಿಎಂ ಆಗಬೇಕು ಎನ್ನುವುದಿದೆ. ಇಲ್ಲಾವಾದರೆ ನಂದು ಜೆಸಿಬಿ ಪಾರ್ಟಿ ರೆಡಿ ಇದೆ. ಮುಂದಿನ ಚುನಾವಣೆವಣೆಯೊಳಗೆ ಹೈಕಮಾಂಡ್ ಕರೆಯಲಿ. ಕರೆಯದಿದ್ದರೆ ನಂದು ಜೆಸಿಪಿ ಪಾರ್ಟಿ ರೆಡಿ ಇದೆ ಎಂದು ಹೇಳಿದರು.

  • ಬೆಳಗಾವಿ | ಭಿಕ್ಷೆ ಬೇಡುತ್ತಾ ರಸ್ತೆ ದಾಟುತ್ತಿದ್ದ ವೃದ್ಧನ ಮೇಲೆ ಹರಿದ ಲಾರಿ – ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

    ಬೆಳಗಾವಿ | ಭಿಕ್ಷೆ ಬೇಡುತ್ತಾ ರಸ್ತೆ ದಾಟುತ್ತಿದ್ದ ವೃದ್ಧನ ಮೇಲೆ ಹರಿದ ಲಾರಿ – ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

    ಬೆಳಗಾವಿ: ಭಿಕ್ಷೆ ಬೇಡುತ್ತಾ ರಸ್ತೆ ದಾಟುತ್ತಿದ್ದ ವೃದ್ಧನ ಮೇಲೆ ಲಾರಿಯೊಂದು ಹರಿದು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ.

    ಬೆಳಗಾವಿ ನಗರದ ಕೃಷ್ಣದೇವರಾಯ ವೃತ್ತದ ಸಿಗ್ನಲ್‌ನಲ್ಲಿ ವೃದ್ಧನೋರ್ವ ಭಿಕ್ಷೆ ಬೇಡುತ್ತಿದ್ದರು. ಈ ವೇಳೆ ಸಿಗ್ನಲ್ ಬಿಡುತ್ತಿದ್ದಂತೆ ವೃದ್ಧ ರಸ್ತೆ ದಾಟುತ್ತಿದ್ದರು. ಇದೇ ಸಮಯಕ್ಕೆ ಲಾರಿ ಚಾಲಕನೋರ್ವ ಲಾರಿಯನ್ನು ಮುಂದೆ ಚಲಾಯಿಸಿದ ಪರಿಣಾಮ ಭಿಕ್ಷುಕ ಲಾರಿ ಚಕ್ರದಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ. ಅಪಘಾತದ ಭೀಕರ ದೃಶ್ಯ ಅಲ್ಲಿಯೇ ಇದ್ದ ಸಿಸಿಟವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ – 30 ಲಕ್ಷ ಮೌಲ್ಯದ ಐಫೋನ್ ದೋಚಿದ್ದ ಗ್ಯಾಂಗ್ ಅರೆಸ್ಟ್

    ಸದ್ಯ ಬೆಳಗಾವಿ ಉತ್ತರ ಸಂಚಾರಿ ಪೊಲೀಸರು ಅಪಘಾತ ಮಾಡಿದ ಲಾರಿ, ಲಾರಿ ಚಾಲಕನನ್ನ ವಶಕ್ಕೆ ಪಡೆದಿದ್ದು, ಅಪರಿಚಿತ ಭಿಕ್ಷುನ ಗುರುತು ಪತ್ತೆ ಹಚ್ಚುತ್ತಿದ್ದಾರೆ.

  • ಬೆಳಗಾವಿ | 2,000 ಹಣಕ್ಕಾಗಿ ಹರಿಯಿತು ಯುವಕನ ನೆತ್ತರು

    ಬೆಳಗಾವಿ | 2,000 ಹಣಕ್ಕಾಗಿ ಹರಿಯಿತು ಯುವಕನ ನೆತ್ತರು

    ಬೆಳಗಾವಿ: ಸಾಲವಾಗಿ ಕೊಟ್ಟ ಹಣ ಮರುಪಾವತಿಸದ ಸ್ನೇಹಿತನಿಗೆ (Friend) ತನ್ನ ಸ್ನೇಹಿತನೇ ಚಟ್ಟ ಕಟ್ಟಿ ಪೊಲೀಸರಿಗೆ ಶರಣಾದ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ.

    ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗಿರಿಯಾಲ ಗ್ರಾಮದಲ್ಲಿ ಘಟನೆ ನಡೆದಿದ್ದು ಘಟನೆಯಿಂದ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಗಿರಿಯಾಲ‌ ಗ್ರಾಮದ ಮಂಜುನಾಥ ಗೌಡರ (30) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ರಸ್ತೆಗಳಲ್ಲಿ ಬಟರ್ ಫ್ಲೈ ಲೈಟ್ ಹಾಕಿದ್ದೇವೆಂದು 73 ಲಕ್ಷ ಹಣ ಪಡೆದು ಗುಳುಂ; ಗೋಲ್ಮಾಲ್ ಬಹಿರಂಗ

    ಕಳೆದ ವಾರ ಸ್ನೇಹಿತ ದಯಾನಂದ ಗುಂಡ್ಲೂರನಿಂದ 2 ಸಾವಿರ ಹಣ ಸಾಲವನ್ನಾಗಿ ಮಂಜುನಾಥ ಪಡೆದಿದ್ದ. ಒಂದು ವಾರದೊಳಗೆ ಹಣ ಮರಳಿಸುವುದಾಗಿ ಹೇಳಿದ್ದ. ಅವಧಿ ಮುಗಿದ ಹಿನ್ನೆಲೆಯಲ್ಲಿ ಸಾಲ ಕೇಳಲು ದಯಾನಂದ ಮುಂದಾಗಿದ್ದ. ಇದೇ ಹಣದ ವಿಚಾರಕ್ಕೆ ಮಂಜುನಾಥ ‌ಹಾಗೂ ದಯಾನಂದ ಮಧ್ಯೆ ಜಗಳ ಆಗಿದೆ. ಇಬ್ಬರ ಜಗಳ ವಿಕೋಪಕ್ಕೆ ತಿರುಗಿ ಮಂಜುನಾಥ‌ನನ್ನು ದಯಾನಂದ ಕೊಲೆ ಮಾಡಿದ್ದಾನೆ.

    ರಾತ್ರಿ ನಡೆದ ಜಗಳದ ಸಿಟ್ಟಿನಲ್ಲೇ ಬೆಳಗಿ‌ನ ಜಾವ ಕೊಡ್ಲಿಯಿಂದ ಹೊಡೆದು ಮಂಜುನಾಥ‌ನ ಹತ್ಯೆ ಮಾಡಲಾಗಿದೆ. ತೀವ್ರ ರಕ್ತಸ್ರಾವದಿಂದ ಆಸ್ಪತ್ರೆಗೆ ಸಾಗಿಸುವ ಮುನ್ನವೇ ಮಂಜುನಾಥ ಗೌಡರ ಉಸಿರು ಚಲ್ಲಿದ್ದಾನೆ. ಮಂಜುನಾಥ ಗೌಡರ ಸಾವನಪ್ಪಿರುವ ಸುದ್ದಿ ತಿಳಿದು ಪೊಲೀಸರಿಗೆ ಸ್ವಯಂ ಪ್ರೇರಿತವಾಗಿ ಹೋಗಿ ದಯಾನಂದ ಶರಣಾಗಿದ್ದಾನೆ. ಇದನ್ನೂ ಓದಿ: ಬ್ರಿಟನ್‌ನಲ್ಲಿ ಭಾರತೀಯ ಮೂಲದ 20ರ ಯುವತಿ ಮೇಲೆ ಅತ್ಯಾಚಾರ

  • ಜನವರಿಯಲ್ಲಿ ನನಗೆ ಶುಕ್ರದೆಸೆ ಬರುವುದು ಪಕ್ಕಾ – ಸಚಿವನಾಗುವ ಇಂಗಿತ ವ್ಯಕ್ತಪಡಿಸಿದ ಲಕ್ಷ್ಮಣ ಸವದಿ

    ಜನವರಿಯಲ್ಲಿ ನನಗೆ ಶುಕ್ರದೆಸೆ ಬರುವುದು ಪಕ್ಕಾ – ಸಚಿವನಾಗುವ ಇಂಗಿತ ವ್ಯಕ್ತಪಡಿಸಿದ ಲಕ್ಷ್ಮಣ ಸವದಿ

    ಚಿಕ್ಕೋಡಿ: ಜನವರಿಯಲ್ಲಿ ನನಗೆ ಶುಕ್ರದೆಸೆ ಬರುವುದು ಪಕ್ಕಾ ಎನ್ನುವ ಮೂಲಕ ಸಂಪುಟ ಪುನಾರಚನೆಯಲ್ಲಿ ಸಚಿವನಾಗುವ ಇಂಗಿತವನ್ನ ಅಥಣಿ (Athani) ಕೈ ಶಾಸಕ ಲಕ್ಷ್ಮಣ ಸವದಿ (Laxman Savadi) ವ್ಯಕ್ತಪಡಿಸಿದ್ದಾರೆ.

    ಅಥಣಿ ಪಟ್ಟಣದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅವರು, ಸಂಪುಟ ಪುನರ್ ರಚನೆ (Cabinet Reshuffle) ಆಗುವುದು ಮೊದಲೇ ಗೊತ್ತಿತ್ತು.ಶನಿವಾರ ಬೆಳಗಾವಿಯಲ್ಲಿ ಸಿಎಂ ಸಹ ಹೇಳಿದ್ದಾರೆ. ನನಗೆ ಸಚಿವನಾಗುವ ಸಂದರ್ಭ ಬರಲಿ. ಆ ಸಂದರ್ಭದಲ್ಲಿ ನಾನು ಪ್ರತಿಕ್ರಿಯೆ ನೀಡುತ್ತೇನೆ ಎಂದರು. ಇದನ್ನೂ ಓದಿ: ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ – ಅಸಲಿ ಚಿನ್ನದ ಬಾಗಿಲು ತಾನೇ ಇಟ್ಟುಕೊಂಡು ತಾಮ್ರದ ಬಾಗಿಲನ್ನು ದೇಗುಲಕ್ಕೆ ಕೊಟ್ಟಿದ್ದ ಉನ್ನಿಕೃಷ್ಣನ್

    ನಾವು ಯಾವುದೇ ಅಧಿಕಾರವನ್ನ ಕೇಳಿ ಪಡೆದವನಲ್ಲ. ಭಗವಂತನ ಆಶೀರ್ವಾದ ಹಾಗೂ ಹೈಕಮಾಂಡ್ ಇಚ್ಛೆ ಇದ್ರೆ ಸಚಿವ ಸ್ಥಾನ ನನಗೆ ತಾನಾಗಿಯೇ ಬರುತ್ತದೆ. ಹೈಕಮಾಂಡ್ ಕೊಟ್ಟ ಜವಾಬ್ದಾರಿಯನ್ನ ನಾವು ನಿಭಾಯಿಸಲು ಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ರಷ್ಯಾದಿಂದ ತೈಲ ಆಮದನ್ನು ಭಾರತ ಸಂಪೂರ್ಣವಾಗಿ ನಿಲ್ಲಿಸಲಿದೆ: ಟ್ರಂಪ್ ಅದೇ ರಾಗ

  • ಕೊನೆಗೂ ಜಾರಕಿಹೊಳಿ ಸಹೋದರರ ಪಾಲಾದ ಡಿಸಿಸಿ ಬ್ಯಾಂಕ್‌ ಗದ್ದುಗೆ – ತೊಡೆ ತಟ್ಟಿದ್ದ ಸವದಿ, ಕತ್ತಿಗೆ ಮುಖಭಂಗ

    ಕೊನೆಗೂ ಜಾರಕಿಹೊಳಿ ಸಹೋದರರ ಪಾಲಾದ ಡಿಸಿಸಿ ಬ್ಯಾಂಕ್‌ ಗದ್ದುಗೆ – ತೊಡೆ ತಟ್ಟಿದ್ದ ಸವದಿ, ಕತ್ತಿಗೆ ಮುಖಭಂಗ

    ಬೆಳಗಾವಿ: ಪೈಪೋಟಿ, ಜಟಾಪಟಿ ನಡುವೆ ಕೊನೆಗೂ ಡಿಸಿಸಿ ಬ್ಯಾಂಕ್‌ (DCC Bank) ಗದ್ದುಗೆ ಜಾರಕಿಹೊಳಿ ಸಹೋದರರ ಪಾಲಾಗಿದೆ. ಜಾರಕಿಹೊಳಿ‌ ಬ್ರದರ್ಸ್‌ ವಿರುದ್ಧ ತೋಡೆ ತಟ್ಟಿದ ಸವದಿ, ಕತ್ತಿಗೆ ಶಾಕ್ ಕೊಟ್ಟಿದ್ದಾರೆ.

    ಪ್ರತಿಷ್ಠಿತ ಡಿಸಿಸಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯಿತು. ಹದಿನಾರು ಸ್ಥಾನಗಳ ಪೈಕಿ ಒಂಬತ್ತು ಸ್ಥಾನ ಗೆಲ್ಲುವುದರ ಮೂಲಕ ಜಾರಕಿಹೊಳಿ‌ ಬ್ರದರ್ಸ್ ಕಮಾಲ್ ಮಾಡಿದ್ದಾರೆ. ಇದನ್ನೂ ಓದಿ: ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ – ಭಾರೀ ಮತಗಳ ಅಂತರದಿಂದ ಲಕ್ಷ್ಮಣ್ ಸವದಿ ಗೆಲುವು

    ನಾಲ್ಕು ಸ್ಥಾನಗಳ ರಿಸಲ್ಟ್ ಬರದಿದ್ದರೂ ಜಾರಕಿಹೊಳಿ‌ ಬ್ರದರ್ಸ್ ಗೆಲುವು ಸಾಧಿಸಿದ್ದಾರೆ. ಏಳು ಅವಿರೋಧವಾಗಿ ಆಯ್ಕೆಯಾಗಿದ್ದರು. ಇಂದು ನಡೆದ ಚುನಾವಣೆಯಲ್ಲಿ ಇಬ್ಬರು ನಿರ್ದೇಶಕರು ಗೆಲುವು ಸಾಧಿಸಿದ್ದಾರೆ. ಒಂಬತ್ತು ಸ್ಥಾನಗಳನ್ನ ಗೆಲ್ಲುವುದರ ಮೂಲಕ ಜಾರಕಿಹೊಳಿ ಮತ್ತೆ ಬ್ಯಾಂಕ್‌ನ್ನು ಕಂಟ್ರೋಲ್‌ಗೆ ತೆಗೆದುಕೊಂಡಿದ್ದಾರೆ.

    ಮೊನ್ನೆ ಗೆದ್ದಿರುವ ರಾಜು ಕಾಗೆ, ಗಣೇಶ್ ಹುಕ್ಕೇರಿ ತಟಸ್ಥವಾಗಿ ಉಳಿದುಕೊಂಡಿದ್ದರು. ಇಂದು ಗೆದ್ದ ಮಲ್ಲಣ್ಣ ಯಾದವಾಡ ಸವದಿ ಬಣಕ್ಕೆ ಬೆಂಬಲ‌ ವ್ಯಕ್ತಪಡಿಸಿದ್ದಾರೆ. ಬಣ‌‌ ಮಾಡಿಕೊಂಡು ಓಡಾಡಿದ್ದ ಲಕ್ಷ್ಮಣ ಸವದಿ ಮತ್ತು ರಮೇಶ್ ಕತ್ತಿಗೆ ಮುಖಭಂಗವಾಗಿದೆ. ಇದನ್ನೂ ಓದಿ: ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಯಲ್ಲಿ ಹೈಡ್ರಾಮಾ; ಜಾರಕಿಹೊಳಿ v/s ಸವದಿ-ಕತ್ತಿ ಬಣ ಜಟಾಪಟಿ

  • ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ – ಭಾರೀ ಮತಗಳ ಅಂತರದಿಂದ ಲಕ್ಷ್ಮಣ್ ಸವದಿ ಗೆಲುವು

    ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ – ಭಾರೀ ಮತಗಳ ಅಂತರದಿಂದ ಲಕ್ಷ್ಮಣ್ ಸವದಿ ಗೆಲುವು

    ಬೆಳಗಾವಿ: ಕುಂದಾನಗರಿ ಬೆಳಗಾವಿ (Belagavi) ಅಂದ್ರೆ ರಾಜಕೀಯ ಮನೆತನಗಳ ಸಮರ. ಅದರಲ್ಲೂ ಕತ್ತಿ- ಜಾರಕಿಹೊಳಿ ಕುಟುಂಬದ ಮಧ್ಯೆ ರಾಜಕೀಯ ಜಿದ್ದಾಜಿದ್ದಿ ತೀರಾ ಸಾಮಾನ್ಯ. ಒಬ್ಬರಿಗೊಬ್ಬರು ಕತ್ತಿ ಮಸಿಯುತ್ತಾ ಆಗಾಗ್ಗೆ ಕದನದಲ್ಲಿ ಕೆಲವರು ಜಾರಿ ಬೀಳುತ್ತಲೇ ಇರ್ತಾರೆ. ಇದೀಗ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ (DCC Bank Election) ಮತ್ತೊಮ್ಮೆ ಬದ್ಧವೈರಿಗಳ ಕದನಕ್ಕೆ ಅಣಿಯಾಗಿದೆ. ಇಂದು ನಡೆದ ಡಿಸಿಸಿ ಬ್ಯಾಂಕ್ ಚುನಾವಣೆ ಶಾಂತಿಯುತವಾಗಿ ನಡೆಯಿತು.

    ಬೆಳಗಾವಿ ಡಿಸಿಸಿ ಬ್ಯಾಂಕ್ ಗದ್ದುಗೆಗಾಗಿ ನಡೆದಿರುವ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್ ಹಾಗೂ ಸವದಿ ಮತ್ತು ಕತ್ತಿ ಟೀಂ ಜೊತೆಗೆ ತೀವ್ರ ಕಾದಾಟಕ್ಕೆ ಸಾಕ್ಷಿಯಾಯಿತು. ಜಾರಕಿಹೊಳಿ ಸಹೋದರರು ಒಂದು ಬಣವಾದರೇ, ಸಂಸದ ರಮೇಶ್ ಕತ್ತಿ ಹಾಗೂ ಶಾಸಕ ಲಕ್ಷ್ಮಣ ಸವದಿ ಜಾರಕಿಹೊಳಿ ಬ್ರದರ್ಸಗೆ ತೊಡೆ ತಟ್ಟಿದ್ದಾರೆ. 7 ಕ್ಷೇತ್ರಗಳಲ್ಲಿ 2 ಕ್ಷೇತ್ರಗಳಲ್ಲಿ ಸವದಿ ಬಣ ಗೆಲುವು ಸಾಧಿಸಿದರೆ 1 ಕ್ಷೇತ್ರದಲ್ಲಿ ಜಾರಕಿಹೊಳಿ ಬಣ ಗೆಲುವು ಸಾಧಿಸಿ ಸಂಭ್ರಮಾಚರಣೆ ನಡೆಸಿದರು. ಇದನ್ನೂ ಓದಿ: ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಯಲ್ಲಿ ಹೈಡ್ರಾಮಾ; ಜಾರಕಿಹೊಳಿ v/s ಸವದಿ-ಕತ್ತಿ ಬಣ ಜಟಾಪಟಿ

    ಇಂದು ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯ ಮತದಾನದ ನಡುವೆ ಜಾರಕಿಹೊಳಿ ಬಣದವರು ಮತ್ತು ಸವದಿ-ಕತ್ತಿ ಬಣದ ಸದಸ್ಯರು ಕೈಕೈ ಮಿಲಾಯಿಸಿದರು. ಮತದಾರರಿಗೆ ಡೆಲಿಗೇಷನ್ ಪಾರ್ಮ್ ಕೊಡುತ್ತಿಲ್ಲ ಎಂದ ಜಾರಕಿಹೊಳಿ ಬಣದ ಅಪ್ಪಾಸಾಹೇಬ್ ಕುಲಗೋಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಡಿಸಿಪಿ ನಾರಾಯಣ ಭರಮನಿ ಚುನಾವಣಾಧಿಕಾರಿಗೆ ದೂರು ನೀಡುವಂತೆ ಸವದಿ ಬೆಂಬಲಿಗರ ಮನವೊಲಿಕೆ ಮಾಡಿದರು. ನಂತರ ಜಾರಕಿಹೊಳಿ ಬಣದ ಕಾರ್ಯಕರ್ತರ ವಿರುದ್ಧ ರಾಯಭಾಗ ಕ್ಷೇತ್ರದಿಂದ ಕಣಕ್ಕಿಳಿದಿರುವ ಬಸಗೌಡ ಆಸಂಗಿ ಕೋರ್ಟ್ ಮೆಟ್ಟಿಲೇರಿದ್ದರು. ಇದನ್ನೂ ಓದಿ: ಬೆಂಗಳೂರಿನ ಸೌಲಭ್ಯ ಬಳಸಿಕೊಂಡು ಬೆಳೆದವರು ಟೀಕೆ, ಟ್ವೀಟ್ ಮಾಡುತ್ತಿದ್ದಾರೆ: ಡಿಕೆಶಿ

    ಇನ್ನು ಮತದಾನದ ಹಕ್ಕಿಗಾಗಿ ಪಿಕೆಪಿಎಸ್ ಸದಸ್ಯರು ಕೋರ್ಟ್ ಮೊರೆ ಹೋಗಿದ್ದರು. ಇದರಿಂದ ನಾಲ್ಕು ತಾಲೂಕಿನ ಫಲಿತಾಂಶದ ಕುರಿತು ಚುನಾವಣಾ ಫಲಿತಾಂಶವನ್ನು ಪ್ರಕಟಿಸದಂತೆ ಚುನಾವಣಾಧಿಕಾರಿಗಳಿಗೆ ಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ 4 ಕ್ಷೇತ್ರಗಳಾದ ನಿಪ್ಪಾಣಿ, ಕಿತ್ತೂರು, ಬೈಲಹೊಂಗಲ, ಹುಕ್ಕೇರಿ ಕ್ಷೇತ್ರದ ಫಲಿತಾಂಶವನ್ನು ತಡೆಹಿಡಿಯಲಾಗಿದೆ. ನ್ಯಾಯಾಲಯದಲ್ಲಿ ಚುನಾವಣಾ ಫಲಿತಾಂಶ ಘೋಷಣೆ ಮಾಡದಂತೆ ಆದೇಶ ಬರುತ್ತಿದ್ದಂತೆ ನಾಲ್ಕು ತಾಲೂಕಿನ ಅಭ್ಯರ್ಥಿಗಳು ಸಂಭ್ರಮಾಚರಣೆ ಮಾಡಿದರು. ಇದನ್ನೂ ಓದಿ: ಈಗಲೇ ಯಾಕೆ ಪಥ ಸಂಚಲನ ಮಾಡಬೇಕು? ಸಂವಿಧಾನ, ಕಾನೂನಿಗಿಂತ ನೀವು ದೊಡ್ಡವರೇ- ಆರ್‌ಎಸ್‌ಎಸ್‌ಗೆ ಪ್ರಿಯಾಂಕ್‌ ಪ್ರಶ್ನೆ

    ರಾಮದುರ್ಗ ತಾಲೂಕಿನ ಫಲಿತಾಂಶ:
    ಮಲಣ್ಣಾ ಯಾದವಾಡ – 19 ಮತಗಳು
    ಶ್ರೀಕಾಂತ್ ಧವನ – 16 ಮತಗಳು
    ಮಲ್ಲಣ್ಣಾ ಯಾದವಾಡ 3 ಮತಗಳಿಂದ ಗೆಲುವು

    ಅಥಣಿ ತಾಲೂಕಿನ ಫಲಿತಾಂಶ:
    ಲಕ್ಷ್ಮಣ ಸವದಿ- 122 ಮತಗಳು
    ಮಹೇಶ್ ಕುಮಟಳ್ಳಿ – 3 ಮತಗಳು
    ಲಕ್ಷ್ಮಣ ಸವದಿ 119 ಮತಗಳಿಂದ ಗೆಲುವು

    ರಾಯಭಾಗ ತಾಲೂಕಿನ ಫಲಿತಾಂಶ:
    ಅಪ್ಪಾಸಾಹೇಬ್ ಕುಲಗೋಡೆ – 120 ಮತಗಳು
    ಬಸನಗೌಡ ಆಸಂಗಿ – 64 ಮತಗಳು
    ಅಪ್ಪಾಸಾಹೇಬ್ ಕುಲಗೋಡೆ 56 ಮತಗಳಿಂದ ಗೆಲುವು

    ಇನ್ನೂ 7 ಕ್ಷೇತ್ರಗಳಲ್ಲಿ ಅಥಣಿ, ರಾಯಬಾಗ, ರಾಮದುರ್ಗ 3 ಕ್ಷೇತ್ರಗಳ ಚುನಾವಣೆ ಫಲಿತಾಂಶ ಅಧಿಕೃತ ಘೋಷಣೆಯಾಗಿದ್ದು ಉಳಿದ ಹುಕ್ಕೇರಿ, ನಿಪ್ಪಾಣಿ, ಬೈಲಹೊಂಗಲ, ಕಿತ್ತೂರು ಕ್ಷೇತ್ರಗಳ 4ರ ಫಲಿತಾಂಶ ನ್ಯಾಯಾಲಯದ ಆದೇಶ ಹಿನ್ನೆಲೆಯಲ್ಲಿ ಅಧಿಕೃತವಾಗಿ ಪ್ರಕಟ ಮಾಡುವಂತಿಲ್ಲ. ಹೀಗಾಗಿ ಬೆಳಗಾವಿ ಪೊಲೀಸರು ಬಿ.ಕೆ ಮಾಡಲ್ ಕಾಲೇಜು ಸುತ್ತಮುತ್ತ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಇದನ್ನೂ ಓದಿ: ಕಳೆದ ಅಕ್ಟೋಬರ್‌ನಿಂದಲೇ ಹತ್ಯೆಗೆ ಸ್ಕೆಚ್‌, ಮರಣೋತ್ತರ ಪರೀಕ್ಷೆಯನ್ನ ನಾನು ನೋಡಬೇಕು ಎಂದಿದ್ದ ಮಹೇಂದ್ರ ರೆಡ್ಡಿ

    ಒಟ್ಟಿನಲ್ಲಿ ಮತದಾನ ಶಾಂತಿಯುತವಾಗಿ ಜರುಗಿ 7 ಕ್ಷೇತ್ರಗಳಲ್ಲಿ 2 ಕ್ಷೇತ್ರಗಳಲ್ಲಿ ಸವದಿ ಬಣ ಗೆಲುವು ಸಾಧಿಸಿದರೆ, 1 ಕ್ಷೇತ್ರದಲ್ಲಿ ಜಾರಕಿಹೊಳಿ ಬಣ ಗೆಲುವು ಸಾಧಿಸಿದೆ. ಇದನ್ನೂ ಓದಿ: ಮಳೆಯಾಟದಲ್ಲಿ ಗೆದ್ದ ಆಸ್ಟ್ರೇಲಿಯಾ – ಭಾರತದ ವಿರುದ್ಧ 7 ವಿಕೆಟ್‌ಗಳ ಗೆಲುವು

  • ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಯಲ್ಲಿ ಹೈಡ್ರಾಮಾ; ಜಾರಕಿಹೊಳಿ v/s ಸವದಿ-ಕತ್ತಿ ಬಣ ಜಟಾಪಟಿ

    ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಯಲ್ಲಿ ಹೈಡ್ರಾಮಾ; ಜಾರಕಿಹೊಳಿ v/s ಸವದಿ-ಕತ್ತಿ ಬಣ ಜಟಾಪಟಿ

    ಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಯಲ್ಲಿ ಕಾಂಗ್ರೆಸ್‌ನಲ್ಲೇ ಭಾರಿ ಹೈಡ್ರಾಮಾ ನಡೆದಿದೆ. ಜಾರಕಿಹೊಳಿ ಸಹೋದರರು ವರ್ಸಸ್ ಲಕ್ಷ್ಮಣ ಸವದಿ, ಉಮೇಶ್ ಕತ್ತಿ ಬಣಗಳ ನಡುವೆ ಜಟಾಪಟಿ ಏರ್ಪಟ್ಟಿದೆ.

    ಜಾರಕಿಹೊಳಿ ಬಣದ ಅಭ್ಯರ್ಥಿ ಅಪ್ಪಾಸಾಹೇಬ್ ಕುಲಗೋಡೆ ವಿರುದ್ಧ ಮತದಾನ ಹಕ್ಕು ಪಡೆದವರ ಮತಚೀಟಿ ಇಟ್ಟುಕೊಂಡ ಆರೋಪ ಕೇಳಿಬಂದಿದೆ. ಮತದಾನ ಮಾಡಲು 40 ಡೆಲಿಗೇಷನ್ ಫಾರ್ಮ್ ಕೊಡುತ್ತಿಲ್ಲ ಎಂದು ಆರೋಪಿಸಲಾಗಿದೆ.

    ರಾಯಭಾಗ ತಾಲೂಕಿನಿಂದ ನಿರ್ದೇಶಕ ಸ್ಥಾನಕ್ಕೆ ಬಸಗೌಡ ಆಸಂಗಿ ಕಣಕ್ಕಿಳಿದಿದ್ದಾರೆ. ಇವರು ಸವದಿ-ಕತ್ತಿ ಬಣದಿಂದ ಗುರುತಿಸಿಕೊಂಡಿದ್ದಾರೆ. ಬೆಳಗಾವಿಯ ಇಫಾ ಹೋಟೆಲ್‌ಗೆ ನುಗ್ಗಿ ಬಸಗೌಡ ಆಸಂಗಿ ಬೆಂಬಲಿಗರು ಗಲಾಟೆ ತೆಗೆದಿದ್ದಾರೆ.

    ಹೋಟೆಲ್ ಮುಂಭಾಗದಲ್ಲಿ ಸವದಿ ಹಾಗೂ ಜಾರಕಿಹೊಳಿ ಬೆಂಬಲಿಗರ ನಡುವೆ ನೂಕಾಟ-ತಳ್ಳಾಟ ಆಗಿದೆ. ಕೈ-ಕೈ ಮಿಲಾಯಿಸುವ ಹಂತಕ್ಕೆ ಪ್ರಕರಣ ಹೋಗಿದೆ. ಸ್ಥಳಕ್ಕೆ ಆಗಮಿಸಿದ ಡಿಸಿಪಿ ನಾರಾಯಣ ಬರಮನಿ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದರು. ಚುನಾವಣಾಧಿಕಾರಿಗೆ ದೂರು ನೀಡುವಂತೆ ಸವದಿ ಬೆಂಬಲಿಗರ ಮನವೊಲಿಕೆ ಮಾಡಿದರು.

    ಜಾರಕಿಹೊಳಿ ಸಹೋದರರ ವಿರುದ್ಧ ಮಾಜಿ ಸಂಸದ ರಮೇಶ ಕತ್ತಿ (Ramesh Katti) ಹಾಗೂ ಶಾಸಕ ಲಕ್ಷ್ಮಣ ಸವದಿ (Lakashman Savadi) ತೊಡೆ ತಟ್ಟಿ ನಾವು ಯುದ್ಧಕ್ಕೆ ಸಿದ್ಧ ಎನ್ನುವ ಸಂದೇಶ ಸಾರಿದ್ದಾರೆ.

  • ಬೆಳಗಾವಿ | ಪ್ರೀತಿಸಿ ಮದ್ವೆಯಾದ, ವಿಚ್ಛೇದನ ಪಡೆದು ಮಾಜಿ ಪತ್ನಿ ಕೊಂದ ಪೊಲೀಸಪ್ಪ

    ಬೆಳಗಾವಿ | ಪ್ರೀತಿಸಿ ಮದ್ವೆಯಾದ, ವಿಚ್ಛೇದನ ಪಡೆದು ಮಾಜಿ ಪತ್ನಿ ಕೊಂದ ಪೊಲೀಸಪ್ಪ

    ಬೆಳಗಾವಿ: ಪ್ರೀತಿಸಿ ಮದುವೆಯಾಗಿ ವಿಚ್ಛೇದನ ಪಡೆದ ಬಳಿಕ ಮಾಜಿ ಪತ್ನಿಯನ್ನ ಪೊಲೀಸಪ್ಪ ಕೊಲೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

    ಪತ್ನಿಗೆ ಚಟ್ಟಕಟ್ಟಿ ಮನೆಯ ಹೊರಗಿನಿಂದ ಬೀಗ ಹಾಕಿಕೊಂಡು ಪೊಲೀಸಪ್ಪ ಕಾಣೆಯಾಗಿದ್ದ ಎನ್ನಲಾಗಿದೆ. ಮೃತದೇಹ ಕೊಳೆತು ವಾಸನೆ ಬಂದಾಗ ಸ್ಥಳೀಯರಿಂದ ಪ್ರಕರಣ ಬೆಳಕಿಗೆ ಬಂದಿದೆ. ‌ಮನೆಗೆ ನುಗ್ಗಿ ಭೀಕರವಾಗಿ ಹತ್ಯೆಗೈದು ಬಳಿಕ ಡೋರ್ ಲಾಕ್ ಮಾಡಿಕೊಂಡು ಹಂತಕ ಪರಾರಿಯಾಗಿದ್ದ ಎನ್ನಲಾಗಿದೆ. ಇದನ್ನೂ ಓದಿ: ವಿಜಯಪುರದಲ್ಲಿ ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು -‌ ಎನ್‌ಕೌಂಟರ್‌ಗೆ ರೌಡಿಶೀಟರ್ ಬಲಿ

    ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ಈ ದಾರುಣ ಘಟನೆ ನಡೆದಿದೆ. ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದ ಕಾಶಮ್ಮ‌ ನೆಲ್ಲಿಗಣಿ (34) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ. ಕಾಗವಾಡ ತಾಲೂಕಿನ ಬನಜವಾಡ ಗ್ರಾಮ ಸಂತೋಷ ಕಾಂಬಳೆ ಕೊಲೆ ಆರೋಪಿ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಪಕ್ಷ‌ ನಿಷ್ಠೆಗೆ ಫಲ ಸಿಗಲಿದೆ ತಾಳ್ಮೆಯಿಂದಿರಿ – ಡಿಕೆಶಿಗೆ ಖರ್ಗೆ ಅಭಯ, 1 ಗಂಟೆಗೂ ಹೆಚ್ಚುಕಾಲ ಮಾತುಕತೆ

    ಸವದತ್ತಿ ಕೆಎಸ್‌ಆರ್‌ಟಿಸಿ ಡಿಪೋ ವ್ಯಾಪ್ತಿಯಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡ್ತಿದ್ದ ಕಾಶಮ್ಮ ಪೊಲೀಸ್‌ ಇಲಾಖೆಯಲ್ಲಿ‌ ಕೆಲಸ ಮಾಡ್ತಿದ್ದ ಸಂತೋಷ ಪಾಟೀಲ್ ಇಬ್ಬರೂ ಸೇರಿ ಕಳೆದ 13 ವರ್ಷಗಳ ಹಿಂದೆಯೇ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರ ಜಾತಿ ಬೇರೆಯಾಗಿದ್ದರೂ ಸಹ ಹಿರಿಯರ ಸಮ್ಮುಖದಲ್ಲಿ ಸಂಪ್ರದಾಯದಂತೆ ಮದುವೆ ಜೋಡಿ ಸಪ್ತಪದಿ ತುಳಿದಿತ್ತು. ಮದುವೆಯಾಗಿ ಕೆಲವೇ ದಿನಗಳಲ್ಲಿ ಕಾಶಮ್ಮಳಿಗೆ ಪತಿ ಸಂತೋಷ ನಿರಂತರ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿ ಬಂದಿದ್ದು ಗಂಡನ ಕಿರುಕುಳ ಹೆಚ್ಚಾದಂತೆ ಸವದತ್ತಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ಕಾಶಮ್ಮ ವಾಸವಾಗಿದ್ದಳು ಎನ್ನಲಾಗಿದೆ.

    ಬಳಿಕ ಸಂತೋಷನ ಕಾಟ ತಾಳಲಾರದೇ ವಿವಾಹ ವಿಚ್ಛೇದನ ಪಡೆದಿದ್ದಳು. ಕಳೆದ ಐದು ತಿಂಗಳ ಹಿಂದಷ್ಟೇ ಬೈಲಹೊಂಗಲ ಕೌಟುಂಬಿಕ ನ್ಯಾಯಾಲಯದಿಂದ ವಿಚ್ಛೇದನವಾಗಿತ್ತು. ಆದರೇ, ಅಕ್ಟೋಬರ್ 13ರಂದು ಕರ್ತವ್ಯ ಮುಗಿಸಿ ಮನೆಗೆ ಬಂದಿದ್ದ ಕಾಶಮ್ಮಳ ಮನೆಗೆ ಅದೇ ದಿನ ರಾತ್ರಿ 8ಗಂಟೆ ಸುಮಾರಿಗೆ ಸಂತೋಷ‌ ಬಂದಿದ್ದಾನೆ. ಈ ವೇಳೆ ಹರಿತವಾದ ಆಯುಧ ಬಳಸಿ ಕಾಶಮ್ಮ‌ಳ ಕತ್ತು, ಹೊಟ್ಟೆಗೆ ಚುಚ್ಚಿ ಆರೋಪಿ ಪರಾರಿಯಾಗಿದ್ದ. ಮೃತದೇಹದ ವಾಸನೆ ಬರುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಪೊಲೀಸರ ಪರಿಶೀಲನೆ ವೇಳೆ ಕೊಳೆತ ಸ್ಥಿತಿಯಲ್ಲಿ ಲೇಡಿ ಕಂಡಕ್ಟರ್ ಶವ ಪತ್ತೆಯಾಗಿದೆ. ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಪೊಲೀಸರು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ. ಕೊಲೆಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ. ಕೊಲೆ ಆರೋಪಿ ಸಂತೋಷನನ್ನು ಪೊಲೀಸರು ಬಂಧಿಸಿದ್ದು ಈ ಕುರಿತು ಸವದತ್ತಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಳೆಗಾಲದ ಮಧ್ಯೆ ನೀರಿಗೆ ಹಾಹಾಕಾರ – ಬೀದರ್‌ನ ಕುಗ್ರಾಮದ ಜನರಿಗೆ ಕೆಮಿಕಲ್ ನೀರು ಕುಡಿಯುವ ಕರ್ಮ

  • ಬೆಳಗಾವಿ | ಸಹಕಾರ ಕ್ಷೇತ್ರಕ್ಕೂ ಕಾಲಿಟ್ಟ ರೆಸಾರ್ಟ್ ರಾಜಕೀಯ

    ಬೆಳಗಾವಿ | ಸಹಕಾರ ಕ್ಷೇತ್ರಕ್ಕೂ ಕಾಲಿಟ್ಟ ರೆಸಾರ್ಟ್ ರಾಜಕೀಯ

    ಬೆಳಗಾವಿ: ಸಹಕಾರ ಕ್ಷೇತ್ರಕ್ಕೂ ಸಹ ರೆಸಾರ್ಟ್ ರಾಜಕೀಯ ಕಾಲಿಟ್ಟಿದೆ. ಇಷ್ಟು ದಿನಗಳ ಕಾಲ ಶಾಸಕರು ರಾಜಕಾರಣದಲ್ಲಿ ರೆಸಾರ್ಟ್ ರಾಜಕೀಯ (Resort Politics) ಮಾಡ್ತಿದ್ರು. ಆದರೆ ಬೆಳಗಾವಿ (Belagavi) ಡಿಸಿಸಿ ಬ್ಯಾಂಕ್ ವಿಚಾರದಲ್ಲಿ ಸದ್ಯ ಮತದಾನದ ಹಕ್ಕು ಪಡೆದ ಪಿಕೆಪಿಎಸ್ ನಿರ್ದೇಶಕರಿಗೆ ಟೂರ್ ಭ್ಯಾಗ್ಯ ಒದಗಿ ಬಂದಿದೆ.

    ಗೋವಾ, ಮಹಾರಾಷ್ಟ್ರ, ಉತ್ತರ ಭಾರತದ ಧಾರ್ಮಿಕ ಕ್ಷೇತ್ರಗಳಿಗೆ ಪಿಕೆಪಿಎಸ್ ಸದಸ್ಯರು ಟೂರ್ ಹೊರಟಿದ್ದಾರೆ. ಡಿಸಿಸಿ ಬ್ಯಾಂಕ್‌ನ 16 ಸ್ಥಾನಗಳ ಪೈಕಿ 9 ನಿರ್ದೇಶಕರು ಈಗಾಗಲೇ ಅವಿರೋಧ ಆಯ್ಕೆಯಾಗಿದ್ದು, ಇನ್ನೂ 7 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದೆ. ನಿಪ್ಪಾಣಿ, ಹುಕ್ಕೇರಿ, ಅಥಣಿ, ರಾಯಭಾಗ, ರಾಮದುರ್ಗ, ಕಿತ್ತೂರು, ಬೈಲಹೊಂಗಲದಲ್ಲಿ ಚುನಾವಣೆ ನಡೆಯಲಿದೆ. ಇದನ್ನೂ ಓದಿ: ಚಿತ್ರದುರ್ಗದಲ್ಲಿ ಭ್ರಷ್ಟ ಅಧಿಕಾರಿಗೆ ಬೆಳ್ಳಂಬೆಳಗ್ಗೆ ಶಾಕ್; ಕೃಷಿ ಇಲಾಖೆ ಎಡಿ ಮನೆ ಮೇಲೆ ಲೋಕಾಯುಕ್ತ ದಾಳಿ

    ಜಾರಕಿಹೊಳಿ ಹಾಗೂ ಕತ್ತಿ ಸವದಿ ಬಣಗಳ ಮಧ್ಯೆ ಡಿಸಿಸಿ ಬ್ಯಾಂಕ್ ತೆಕ್ಕೆಗೆ ಪಡೆಯಲು ಜಿದ್ದಾಜಿದ್ದಿಯೂ ನಡೆದಿದೆ. ಅಡ್ಡ ಮತದಾನ, ಮತದಾರರ ಸೆಳೆಯುವ ಭೀತಿಯ ಕಾರಣ ಮತದಾರರನ್ನು ಬೇರೆಡೆ ಸ್ಥಳಾಂತರ ಮಾಡಲಾಗಿದೆ. ಅಕ್ಟೋಬರ್ 19ಕ್ಕೆ ನಡೆಯುವ ಚುನಾವಣೆಗೆ ಮತದಾನ ಮಾಡಲು ನೇರವಾಗಿ ಮತದಾರರು ಬರಲಿದ್ದಾರೆ. ಹೈಟೆಕ್ ಟಿಟಿಯಲ್ಲಿ ಬೇರೆ ಬೇರೆ ರಾಜ್ಯಗಳ ರೆಸಾರ್ಟ್ಗಳಿಗೆ ಮತದಾರರನ್ನು ಶಿಫ್ಟ್ ಮಾಡಲಾಗಿದೆ. ಮತದಾರರು ಭದ್ರತಾ ಸಿಬ್ಬಂದಿ ಕಣ್ಗಾವಲಿನಲ್ಲಿಯೇ ಇರಲಿದ್ದು, ರೆಸಾರ್ಟ್ಗೆ ತೆರಳುವ ಮತದಾರರಿಗೆ ಮೊಬೈಲ್ ಬಳಕೆಗೆ ಅವಕಾಶ ನೀಡಿಲ್ಲ ಎಂದು ತಿಳಿದು ಬಂದಿದೆ.