Tag: Belagavi Airport

  • ಬೆಳಗಾವಿಯಿಂದ ಮುಂಬೈಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ – ತುರ್ತು ಭೂಸ್ಪರ್ಶ; ತಪ್ಪಿದ ದುರಂತ

    ಬೆಳಗಾವಿಯಿಂದ ಮುಂಬೈಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ – ತುರ್ತು ಭೂಸ್ಪರ್ಶ; ತಪ್ಪಿದ ದುರಂತ

    – 41 ಮಂದಿ ಪ್ರಯಾಣಿಕರು ಸೇಫ್‌

    ಬೆಳಗಾವಿ: ಬೆಳಗಾವಿಯಿಂದ ಮುಂಬೈಗೆ ಹೊರಟಿದ್ದ ಸ್ಟಾರ್ ಏರ್ ವಿಮಾನದಲ್ಲಿ (Star Air Flight) ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ವಿಮಾನವನ್ನ ಬೆಳಗಾವಿ ಏರ್‌ಪೋರ್ಟ್‌ನಲ್ಲೇ (Belagavi Airport) ತುರ್ತು ಭೂಸ್ಪರ್ಶ ಮಾಡಲಾಗಿದೆ.

    ಸ್ಟಾರ್ ಏರ್‌ನ S5111 ಸಂಖ್ಯೆಯ ವಿಮಾನದ ಇಂಜಿನ್‌ನಲ್ಲಿ ದೋಷ (Technical Error) ಕಂಡುಬಂದ ಹಿನ್ನೆಲೆ ತುರ್ತು ಭೂಸ್ಪರ್ಶ ಮಾಡಲಾಗಿದೆ. ಅದೃಷ್ಟವಶಾತ್‌ ಯಾವುದೇ ಅನಾಹುತ ಸಂಭವಿಸಿಲ್ಲ. ಇದನ್ನೂ ಓದಿ: 2-3 ವಾರದ ನಂತ್ರ ಹೊಸ ಸುಂಕದ ಬಗ್ಗೆ ಯೋಚಿಸ್ತೀನಿ – ಭಾರತಕ್ಕೆ ಸಿಗುತ್ತಾ ಸುಂಕ ವಿನಾಯ್ತಿ?

    ವಿಮಾನದಲ್ಲಿ ಅಜಯ್ ಸುತಾರ್, ವೈಷ್ಣವ್‌ ಶಾನಭಾಗ, ನಾರಾಯಣ ಡೆಲ್ ಸೇರಿದಂತೆ ಸುಮಾರು 41 ಮಂದಿ ಪ್ರಯಾಣಿಕರಿದ್ದರು. ವಿಮಾನ ಟೇಕಾಫ್‌ ಆಗುತ್ತಿದ್ದಂತೆ ತಾಂತ್ರಿಕ ದೋಷವಿರುವುದು ಗೊತ್ತಾಗಿದೆ. ಎಚ್ಚೆತ್ತ ಪೈಲಟ್‌ ಕೂಡಲೇ ವಿಮಾನವನ್ನ ತುರ್ತು ಭೂಸ್ಪರ್ಶ ಮಾಡಿಸಿದ್ದಾರೆ. ಇದನ್ನೂ ಓದಿ: UER-II ದ್ವಾರಕಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ಮೋದಿ

    ಒಟ್ಟಿನಲ್ಲಿ ಕುಂದಾನಗರಿ ಬೆಳಗಾವಿಯಲ್ಲಿ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.ಇದನ್ನೂ ಓದಿ: ಬಂಧನದಲ್ಲಿದ್ದ ಬಾಂಗ್ಲಾದ ಗರ್ಭಿಣಿ ಮುಂಬೈನ ಜೆಜೆ ಆಸ್ಪತ್ರೆಯಿಂದ ಎಸ್ಕೇಪ್

  • ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ!

    ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ!

    ಬೆಳಗಾವಿ: ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ (Sambra Airport) ದುಷ್ಕರ್ಮಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ (Bomb Threat) ಕಳಿಸಿದ್ದಾರೆ.

    ಶನಿವಾರ ಏರ್‌ಪೋರ್ಟ್‌ಗೆ ದುಷ್ಕರ್ಮಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯ ಸಂದೇಶ ಕಳುಹಿಸಿದ್ದು, ಚೆನೈನಿಂದ ಬರುವ ವಿಮಾನದಲ್ಲಿ ಬಾಂಬ್ ಇಡುವುದಾಗಿ ಬೆದರಿಕೆ ಹಾಕಿದ್ದರು. ಬೆಳಗಾವಿಗೆ ಚೆನೈನಿಂದ ಯಾವುದೇ ವಿಮಾನ ಸಂಪರ್ಕ ಇರುವುದಿಲ್ಲ. ಇದರಿಂದ ಇದು ಹುಸಿ ಬೆದರಿಕೆ ಎಂದು ತೀರ್ಮಾನಕ್ಕೆ ಬರಲಾಗಿದೆ.

    ಈ ಸಂಬಂಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇ-ಮೇಲ್ ಎಲ್ಲಿಂದ ಬಂದಿದೆ? ಯಾರು ಮಾಡಿದ್ದಾರೆ? ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ದೇಶದಲ್ಲಿ ಒಂದು ವಾರದಲ್ಲಿ 46ಕ್ಕೂ ಹೆಚ್ಚು ವಿಮಾನಗಳು ಬೆದರಿಕೆ ಕರೆ ಸ್ವೀಕರಿಸಿರುವ ಬಗ್ಗೆ ವರದಿಯಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ (Ministry Of Civil Aviation) ತಿಳಿಸಿದೆ.

  • ರಾಣಿ ಚೆನ್ನಮ್ಮ ವಿಜಯೋತ್ಸವಕ್ಕೆ 200 ವರ್ಷ – ಬೆಳಗಾವಿ ವಿಮಾನ ನಿಲ್ದಾಣಕ್ಕೆ ಹೆಸರಿಡುವಂತೆ ಮನವಿ

    ರಾಣಿ ಚೆನ್ನಮ್ಮ ವಿಜಯೋತ್ಸವಕ್ಕೆ 200 ವರ್ಷ – ಬೆಳಗಾವಿ ವಿಮಾನ ನಿಲ್ದಾಣಕ್ಕೆ ಹೆಸರಿಡುವಂತೆ ಮನವಿ

    – ಜೊತೆಗೆ ಅಂಚೆ ಚೀಟಿ ಬಿಡುಗಡೆಗೆ ಮನವಿ

    ನವದೆಹಲಿ: ಬ್ರಿಟಿಷರ ವಿರುದ್ಧ ಹೋರಾಡಿ ಜಯ ಸಾಧಿಸಿದ ಕಿತ್ತೂರು ರಾಣಿ ಚೆನ್ನಮ್ಮ (Kitturu Rani Chennamma) ವಿಜಯೋತ್ಸವಕ್ಕೆ 200 ವರ್ಷ ಪೂರ್ಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ವಿಮಾನ ನಿಲ್ದಾಣಕ್ಕೆ (Belagavi Airport) ರಾಣಿ ಚೆನ್ನಮ್ಮ ಹೆಸರಿಡಬೇಕು ಹಾಗೂ ಅಂಚೆ ಚೀಟಿ ಬಿಡುಗಡೆ ಮಾಡಬೇಕು ಎಂದು ಕಿತ್ತೂರು ಕರ್ನಾಟಕದ ನಾಯಕರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

    ದೆಹಲಿಯಲ್ಲಿ (Delhi) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ, ಕಿತ್ತೂರು ರಾಣಿ ಚೆನ್ನಮ್ಮ ಅವರ ವಿಜಯೋತ್ಸವಕ್ಕೆ 200 ವರ್ಷ ಪೂರ್ಣವಾಗಲಿದೆ. ಸ್ವಾತಂತ್ರ‍್ಯ ಸಂಗ್ರಾಮದಲ್ಲಿ ವೀರ ಮಹಿಳೆಯಾಗಿ ಬ್ರಿಟಿಷರ ವಿರುದ್ಧ ಯುದ್ಧ ಸಾರಿ ಗೆಲುವು ಸಾಧಿಸಿದರು. ಅವರ ತ್ಯಾಗ, ಬಲಿದಾನವನ್ನು ನಾವು ಮರೆಯಬಾರದು. ಇದಕ್ಕಾಗಿ ಅ.23ರಂದು ವಿಜಯೋತ್ಸವದ ದಿನವಾಗಿ ಆಚರಿಸಿಕೊಂಡು ಬರುತ್ತಿದ್ದೇವೆ.ಇದನ್ನೂ ಓದಿ: ಹಾಸನ | ಆಹಾರ ಅರಸಿ ಬಂದಿದ್ದ ಕಾಡಾನೆ ವಿದ್ಯುತ್ ಸ್ಪರ್ಶದಿಂದ ಸಾವು

    ಈ ಬಾರಿ ಅ.23ಕ್ಕೆ 200 ವರ್ಷ ಪೂರ್ಣವಾಗುತ್ತಿರುವ ಹಿನ್ನೆಲೆ ವಿಶೇಷವಾಗಿ ಆಚರಿಸಲು ಚಿಂತನೆ ನಡೆಸಿದ್ದೇವೆ. ಬೆಳಗಾವಿ ವಿಮಾನ ನಿಲ್ದಾಣಕ್ಕೆ ರಾಣಿ ಚೆನ್ನಮ್ಮನ ಹೆಸರಿಡಬೇಕು ಹಾಗೂ ವಿಮಾನ ನಿಲ್ದಾಣದ ಆವರಣದಲ್ಲಿ ಅವರ ಮೂರ್ತಿ ಸ್ಥಾಪಿಸಬೇಕು. ಜೊತೆಗೆ ರಾಣಿ ಚೆನ್ನಮ್ಮನ ಒಂದು ಅಂಚೆ ಚೀಟಿ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನೇತೃತ್ವದಲ್ಲಿ ಕಿತ್ತೂರು ಕರ್ನಾಟಕದ ಜನಪ್ರತಿನಿಧಿಗಳು, ಮುಖಂಡರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದರು.

    ರಾಣಿ ಚೆನ್ನಮ್ಮನ ಬಲಗೈ ಬಂಟ ಸಂಗೊಳ್ಳಿ ರಾಯಣ್ಣನ (Sangolli Rayanna) ಹೆಸರನ್ನು ಹುಬ್ಬಳ್ಳಿ (Hubballi) ವಿಮಾನ ನಿಲ್ದಾಣಕ್ಕೆ, ಜಗಜ್ಯೋತಿ ಬಸವಣ್ಣನ ಹೆಸರನ್ನು ವಿಜಯಪುರಕ್ಕೆ (Vijayapura), ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಶಿವಮೊಗ್ಗ (Shivamogga) ವಿಮಾನ ನಿಲ್ದಾಣಕ್ಕೆ ಇಡಲು ಮನವಿ ಮಾಡಿದ್ದೇವೆ ಎಂದು ಹೇಳಿದರು.

    ಬೆಳಗಾವಿ ಜಿಲ್ಲೆಯಲ್ಲಿ ಸಾಕಷ್ಟು ಕೈಗಾರಿಕೆ, ಶಿಕ್ಷಣ ಸಂಸ್ಥೆಗಳು, ಕೇಂದ್ರ ಸರ್ಕಾರದ ವಿವಿಧ ತರಬೇತಿ ಕೇಂದ್ರಗಳಿದ್ದು, ಆರ್ಥಿಕ ನಗರವಾಗಿ ಬೆಳೆಯುತ್ತಿದೆ. ಬೆಳಗಾವಿ ವಿಮಾನ ನಿಲ್ದಾಣದಿಂದ ಇನ್ನಷ್ಟು ಸಂಪರ್ಕ ಹೆಚ್ಚಿಸಬೇಕಿದೆ. ಹೀಗಾಗಿ ಇನ್ನು ಅನೇಕ ನಗರಗಳಿಗೆ ವಿಮಾನ ಸಂಪರ್ಕ ಬೇಕು ಎಂದು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಮನವಿ ಮಾಡಿದ್ದೇವೆ. ಕೇಂದ್ರ ಸರ್ಕಾರ ಶೀಘ್ರದಲ್ಲಿ ನಮ್ಮ ಮನವಿಗೆ ಸ್ಪಂದಿಸುವ ಭರವಸೆ ನೀಡಿದೆ ಎಂದು ತಿಳಿಸಿದರು.ಇದನ್ನೂ ಓದಿ: ಶಿಗ್ಗಾಂವಿ ಕ್ಷೇತ್ರಕ್ಕೆ ನಾನು ಆಕಾಂಕ್ಷಿಯಲ್ಲ – ಮುರುಗೇಶ್ ನಿರಾಣಿ