Tag: belagavi police

  • ಕಾಲಿಗೆ ಕೋಳ, ಪ್ರತಿನಿತ್ಯ ಚಿತ್ರಹಿಂಸೆ – ಜೀತ ಪದ್ಧತಿಯ ಪ್ರತ್ಯಕ್ಷ ವರದಿ; ʻಪಬ್ಲಿಕ್‌ʼ ವರದಿ ಬೆನ್ನಲ್ಲೇ ಕಾರ್ಮಿಕರ ರಕ್ಷಣೆ!

    ಕಾಲಿಗೆ ಕೋಳ, ಪ್ರತಿನಿತ್ಯ ಚಿತ್ರಹಿಂಸೆ – ಜೀತ ಪದ್ಧತಿಯ ಪ್ರತ್ಯಕ್ಷ ವರದಿ; ʻಪಬ್ಲಿಕ್‌ʼ ವರದಿ ಬೆನ್ನಲ್ಲೇ ಕಾರ್ಮಿಕರ ರಕ್ಷಣೆ!

    ಬೆಳಗಾವಿ: ಅನ್ನ – ನೀರು ನೀಡದೆ ಕಾಲಿಗೆ ಕಬ್ಬಿಣದ ಸರಪಳಿ ಕಟ್ಟಿ ಕೋಳ ತೊಡಿಸಿ ಹೊಟೇಲ್ ಕಾರ್ಮಿಕರಿಗೆ (labourers)  ಪ್ರತಿನಿತ್ಯ ಚಿತ್ರಹಿಂಸೆ ನೀಡುತ್ತಿದ್ದ ಅಮಾನವೀಯ ಘಟನೆ ಬೆಳಗಾವಿಯಲ್ಲಿ ಕಂಡುಬಂದಿದೆ. ಈ ದೃಶ್ಯಗಳನ್ನು ನೋಡಿದರೆ ಜೀತ ಪದ್ಧತಿ ಇನ್ನೂ ಜೀವಂತವಿದೆಯೇ ಎಂಬುದಕ್ಕೆ ಈ ವರದಿ ಪುಷ್ಟಿ ನೀಡಿತ್ತು. ಈ ಕುರಿತು ʻಪಬ್ಲಿಕ್‌ ಟಿವಿʼ (Public TV) ವರದಿ ಪ್ರಸಾರ ಮಾಡಿದ ಕೆಲವೇ ಸಮಯದಲ್ಲಿ ಚಿತ್ರಹಿಂಸೆ ಅನುಭವಿಸುತ್ತಿದ್ದ ಕಾರ್ಮಿಕರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.

    ಬೆಳಗಾವಿ (Belagavi) ಜಿಲ್ಲೆಯ ಕಿತ್ತೂರು ಹಾಗೂ ಧಾರವಾಡ ತಾಲೂಕಿನ ತೇಗೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-4ರಲ್ಲಿರುವ ಖಾಸಗಿ ಢಾಬಾಗೆ ಗ್ರಾಮೀಣ ಸಿಪಿಐ ಸಮೀರ ಮುಲ್ಲಾ ಭೇಟಿ ನೀಡಿದ್ದಾರೆ. ತಹಶೀಲ್ದಾರ್‌ ಸಹ ಭೇಟಿ ನೀಡಿದ್ದು, ಢಾಬಾ ಮಾಲಿಕ ಹಾಗೂ ಕೆಲಸಗಾರರಿಂದ ಮಾಹಿತಿ ಕಲೆಹಾಕುತ್ತಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ 5 ವರ್ಷ ಅಧಿಕಾರದಲ್ಲಿ ಇರ್ತಾರೋ ಇರಲ್ವೋ ಗೊತ್ತಿಲ್ಲ: ಸಿಎಂ ಆಪ್ತ ಸಲಹೆಗಾರ ಬಿಆರ್ ಪಾಟೀಲ್ ಹೊಸ ಬಾಂಬ್

    ಹೊಟೇಲ್ ಕೆಲಸಕ್ಕೆ ಉತ್ತರ ಭಾರತದ ಯುವಕರನ್ನು ಕರೆತಂದು ಪುಡಿಗಾಸು ಮುಂಗಡವಾಗಿ ನೀಡಿ ಅವರಿಗೆ ಚಿತ್ರಹಿಂಸೆ ಕೊಟ್ಟು ಕಾಲಿಗೆ ಬೇಡಿ ಹಾಕಿ ಕಬ್ಬಿಣದ ಸರಪಳಿಯಿಂದ ಕಟ್ಟಿ ಥಳಿಸುವ ದೃಶ್ಯಗಳು ಕಂಡುಬಂದಿದ್ದವು. ಇದನ್ನೂ ಓದಿ: ಚಾಮರಾಜನಗರ| ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಉಚಿತ ಸಿ.ಟಿ ಸ್ಕ್ಯಾನ್ ಸೌಲಭ್ಯವಿದ್ರೂ ರೋಗಿಗಳ ಪರದಾಟ

    ಮಾಲಿಕನ ಕುಕೃತ್ಯಕ್ಕೆ ರೋಸಿಹೋದ ಹೊಟೇಲ್ ಕೂಲಿ ಕಾರ್ಮಿಕರು ಬಿಡುಗಡೆ ಭಾಗ್ಯ ಯಾವಾಗ ಎಂಬುದನ್ನು ಕಾದು ನೋಡುತ್ತಿದ್ದರು. ಉತ್ತರ ಭಾರತದಿಂದ ಬಂದ ಯುವಕರಿಗೆ ಇಲ್ಲಿಯ ಭಾಷೆ ಬರುವುದಿಲ್ಲ. ಕಾಲಿಗೆ ಕೋಳ ತೊಟ್ಟುಕೊಂಡೇ ರೊಟ್ಟಿ ತಟ್ಟಿ ಜನರ ಹೊಟ್ಟೆ ತುಂಬಿಸುತ್ತಿದ್ದುದ್ದಂತು ವಿಷಾಧನಿಯ.

    ಇದೀಗ ʻಪಬ್ಲಿಕ್‌ ಟಿವಿʼ ವರದಿ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್‌ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಕಾರ್ಮಿಕರನ್ನು ರಕ್ಷಿಸುವ ಕೆಲಸ ಮಾಡಿದ್ದಾರೆ. ಈ ಸಂಬಂಧ ಮಾತನಾಡಿರುವ ಕಾರ್ಮಿಕ ಇಲಾಖೆ ಅಧಿಕಾರಿಗಳು, ಇಷ್ಟೊಂದು ಕಾಯ್ದೆ ಕಾನೂನುಗಳು ಪ್ರಬಲವಾಗಿದ್ದರೂ ಇಂಥ ಅಮಾನವೀಯ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಜೀತ ಪದ್ದತಿ ಸಂಪೂರ್ಣ ಹೊಗಲಾಡಿಸಲು ಕಠಿಣ ಕಾನೂನುಗಳಿದ್ದು ಹೋಟೆಲ್ ಮಾಲಿಕರಿಗೆ ಶಿಕ್ಷೆಯಾಗುತ್ತದೆ ಮತ್ತು ದಂಡ ವಿಧಿಸಲಾಗುತ್ತದೆ ತಿಳಿಸಿದ್ದಾರೆ.

  • Digital Arrest | ಮಹಿಳೆಯರ ನಗ್ನ ವೀಡಿಯೋ ರೆಕಾರ್ಡ್ ಮಾಡಿ ಹಣಕ್ಕಾಗಿ ಬ್ಲ್ಯಾಕ್​ ಮೇಲ್!

    Digital Arrest | ಮಹಿಳೆಯರ ನಗ್ನ ವೀಡಿಯೋ ರೆಕಾರ್ಡ್ ಮಾಡಿ ಹಣಕ್ಕಾಗಿ ಬ್ಲ್ಯಾಕ್​ ಮೇಲ್!

    – ಬೆಳಗಾವಿ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

    ಬೆಳಗಾವಿ: ಮುಂಬೈ ಕ್ರೈಂ ಬ್ರ್ಯಾಂಚ್, ಗುಪ್ತಚರ ಇಲಾಖೆ ಅಧಿಕಾರಿಗಳು ಅಂತ ಹೇಳಿಕೊಂಡು ಮಹಿಳೆಯರಿಗೆ ವಿಡಿಯೋ ಕಾಲ್​ ಮಾಡಿ, ಅವರ ನಗ್ನ ದೇಹವನ್ನು ವಿಡಿಯೋ ರೆಕಾರ್ಡ್​ ಮಾಡಿಕೊಂಡು ಹಣಕ್ಕಾಗಿ ಬ್ಲ್ಯಾಕ್​ ಮೇಲ್​ ಮಾಡುತ್ತಿರುವ ಪ್ರಕರಣ ಬೆಳಗಾವಿಯಲ್ಲಿ (Belagavi) ಬೆಳಕಿಗೆ ಬಂದಿದೆ. ಇದನ್ನು ಡಿಜಿಟಲ್‌ ಅರೆಸ್ಟ್‌ (Digital Arrest) ಎಂದೂ ಸಹ ಕರೆಯುತ್ತಾರೆ. ಈ ಕುರಿತು ಇಲ್ಲಿನ ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ (CEN) ಠಾಣೆಯಲ್ಲಿ ದೂರು ದಾಖಲಾಗಿದೆ.

    ಪ್ರಕರಣ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿರುವ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಸೈಬರ್‌ ಕಳ್ಳರು ಹೊಸ ಮಾರ್ಗಗಳಲ್ಲಿ ಅಪರಾಧ ಕೃತ್ಯಗಳಿಗೆ ಮುಂದಾಗುತ್ತಿದ್ದಾರೆ. ಮೊದಲಿಗೆ ಇ-ಮೇಲ್‌, ಮೆಸೇಜ್, ಕಾಲ್ಸ್ ಅಥವಾ ವಾಟ್ಸಪ್‌ ಮೂಲಕ ಒಂದು ಮೆಸೇಜ್ ಬರುತ್ತದೆ. ಕ್ರೈಮ್‌ ಬ್ರ್ಯಾಂಚ್‌ನಿಂದ ಕರೆ ಮಾಡುತ್ತಿದ್ದೇವೆ. ನಿಮ್ಮ ಹೆಸರು ಕ್ರಿಮಿನಲ್ ಕೇಸ್‌ನಲ್ಲಿದೆ. ನೀವು ನಮ್ಮ ಹತ್ತಿರ ಬರಬೇಕು ರಿಪೋರ್ಟ್ ಕೊಡಬೇಕು ಯಾಕೆ ನೀವು ಈ ರೀತಿ ಮಾಡಿದೀರಿ ಅಂತ ಹೇಳ್ತಾರೆ. ಈ ರೀತಿ ಮಾಡಿ ಸಂತ್ರಸ್ತರಿಗೆ ಭಯ ಹುಟ್ಟಿಸುತ್ತಿದ್ದಾರೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಸದ್ದು ಮಾಡುತ್ತಿದೆ ಅನೀಶ್, ಮಿಲನಾ ನಾಗರಾಜ್ ನಟನೆಯ ‘ಆರಾಮ್ ಅರವಿಂದ ಸ್ವಾಮಿ’ ಚಿತ್ರದ ಪೋಸ್ಟರ್

    ಈಗ ನಾವು ನಿಮ್ಮನ್ನು ವಿಚಾರಣೆ ಮಾಡಬೇಕು. ಕ್ಯಾಮೆರಾ ಮುಂದೆ ನೀವು ಬರಬೇಕು. ಬೇರೆ ಕಡೆ ನೀವು ಹೋದರೆ ನಿಮ್ಮ ಕ್ರೈಮ್ ಬಗ್ಗೆ ಫ್ಯಾಮಿಲಿ ಅವರಿಗೆ ಹೇಳುತ್ತೇವೆ. ಹೇಗೆ ಕ್ರೈಮ್ ಮಾಡಿದೀರಿ ಅಂತಾ ನಿಮ್ಮ ಬಾಡಿ ವೆರಿಫಿಕೇಶನ್ ಆಗಬೇಕು ಬಟ್ಟೆ ಬಿಚ್ಚಬೇಕು ಅಂತಾ ಹೇಳ್ತಾರೆ. ಬಳಿಕ ಆ ವಿಡಿಯೋ ಇಟ್ಟುಕೊಂಡು ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಾರೆ. ಈ ರೀತಿ ಸುಳ್ಳು ಹೇಳಿ ನಂಬಿಸಿ ಹಣ ದೋಚುವ ಕೆಲಸ ಮಾಡುತ್ತಿದ್ದಾರೆ. ಈ ರೀತಿ ಮೂರು ಪ್ರಕರಣಗಳು ಸೆನ್‌ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ ಪಕ್ಷವನ್ನು ಅಧಿಕೃತಗೊಳಿಸಿದ ಚುನಾವಣಾ ಆಯೋಗ

    ಈ ರೀತಿ ದೂರವಾಣಿ ಕರೆಗಳು ಬಂದು ಬ್ಲ್ಯಾಕ್ ಮೇಲ್ ಮಾಡಿದರೆ ಕೂಡಲೇ ಪೊಲೀಸರ ಗಮನಕ್ಕೆ ತರಬೇಕು ಎಂದು ಕರೆ ಎಚ್ಚರಿಸಿದ್ದಾರೆ. ಇದನ್ನೂ ಓದಿ: ಒಂದೇ ದಿನದಲ್ಲಿ ತನಗೆ ಸೇರಿದ ಜಾಗದ 848 ಖಾತೆ ಮಾಡಿಸಿಕೊಂಡ ಮುಡಾ ಮಾಜಿ ಅಧ್ಯಕ್ಷ

  • Belagavi: ನಿಯಂತ್ರಣ ತಪ್ಪಿ ಮಾರ್ಕಂಡೇಯ ನದಿಗೆ ಬಿದ್ದ ಬೈಕ್ – ಓರ್ವನ ರಕ್ಷಣೆ ಮತ್ತೋರ್ವ ನಾಪತ್ತೆ

    Belagavi: ನಿಯಂತ್ರಣ ತಪ್ಪಿ ಮಾರ್ಕಂಡೇಯ ನದಿಗೆ ಬಿದ್ದ ಬೈಕ್ – ಓರ್ವನ ರಕ್ಷಣೆ ಮತ್ತೋರ್ವ ನಾಪತ್ತೆ

    ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಮುಂದುವರಿದ ಧಾರಾಕಾರ ಮಳೆ ಹಿನ್ನೆಲೆ ನಿಯಂತ್ರಣ ತಪ್ಪಿ ಉಕ್ಕಿಹರಿಯುವ ಮಾರ್ಕಂಡೇಯ ನದಿಗೆ (Markandeya River) ಬೈಕ್ ಬಿದ್ದಿರುವ ಕಂಗ್ರಾಳಿ ಬಳಿಯ ಮಾರ್ಕಂಡೇಯ ನದಿಯಲ್ಲಿ ಘಟನೆ ನಡೆದಿದೆ.

    ಬೆಳಗಾವಿ ತಾಲೂಕಿನ ಅಲತ್ತಗಾ ಗ್ರಾಮದ ಓಂಕಾರ ಅರುಣ ಪಾಟೀಲ (23), ನಾಪತ್ತೆಯಾದವ, ಜ್ಯೋತಿನಾಥ್ ಪಾಟೀಲ ಈಜಿ ದಡ ಸೇರಿದವ. ಬೈಕ್‌ನಲ್ಲಿ ಹೋಗುತ್ತಿದ್ದ ಸಹೋದರರ ಪೈಕಿ ಓರ್ವನ ರಕ್ಷಣೆ ಮಾಡಿದ್ದು ಮತ್ತೋರ್ವ ನಾಪತ್ತೆ ಆಗಿದ್ದಾನೆ. ಸದ್ಯ ನಾಪತ್ತೆಯಾದ ಮತ್ತೋರ್ವ ಸಹೋದರನ ಪತ್ತೆಗೆ ಶೋಧ ಕಾರ್ಯಾಚರಣೆ ಮುಂದುವರೆದಿದ್ದು ಬೆಳಗಾವಿ ತಾಲೂಕಿನ ಕಂಗ್ರಾಳಿ ಬಳಿಯಿರುವ ಮಾರ್ಕಂಡೇಯ ನದಿಯಲ್ಲಿ ಕಾರ್ಯಾಚರಣೆ ಮಾಡಲಾಗುತ್ತಿದೆ. ಇದನ್ನೂ ಓದಿ: ವಯನಾಡು ಭೂಕುಸಿತಕ್ಕೆ ಗೋ ಹತ್ಯೆ ಕಾರಣ – ಬಿಜೆಪಿ ನಾಯಕ ವಿವಾದಾತ್ಮಕ ಹೇಳಿಕೆ

    ಸೋಮವಾರ (ಆ.4) ಶ್ರಾವಣ ಅಮಾವಾಸ್ಯೆ ಹಿನ್ನೆಲೆ ಕಟ್ಟಿಂಗ್ ಮಾಡಿಸಿಕೊಳ್ಳಲು ಬೆಳಗಾವಿಗೆ ಬರುತ್ತಿದ್ದಾಗ ಬೈಕ್ ಸವಾರನ ನಿಯಂತ್ರಣ ತಪ್ಪಿ ಹರಿಯುವ ನೀರಿನಲ್ಲಿ ಬೈಕ್ ಬಿದ್ದಿದೆ. ಈ ವೇಳೆ ಜ್ಯೋತಿನಾಥ ಪಾಟೀಲ ಅಪಾಯದಿಂದ ಪಾರಾಗಿದ್ದು ಈಜಿಕೊಂಡು ದಡ ಸೇರಿದ್ದು ಮತ್ತೋರ್ವ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಶೋಧ ಕಾರ್ಯಾಚರಣೆ ಮುಂದಯವರಿದಿದೆ. ಸ್ಥಳಕ್ಕೆ ಬೆಳಗಾವಿ ನಗರ ಡಿಸಿಪಿ ಪಿ.ವಿ ಸ್ನೇಹಾ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಕಾಕತಿ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: 104 ಸಂಭವನೀಯ ಭೂಕುಸಿತ, ಪ್ರವಾಹ ಪ್ರದೇಶಗಳ ಗುರುತು – 2,995 ಕುಟುಂಬಗಳ ಸ್ಥಳಾಂತರಕ್ಕೆ ಪ್ಲ್ಯಾನ್ 

  • ನದಿಗೆ ಸ್ನಾನಕ್ಕೆ ತೆರಳಿದ್ದ ವ್ಯಕ್ತಿ ಮೊಸಳೆ ಬಾಯಿಗೆ ಸಿಕ್ಕಿ ಸಾವು!

    ನದಿಗೆ ಸ್ನಾನಕ್ಕೆ ತೆರಳಿದ್ದ ವ್ಯಕ್ತಿ ಮೊಸಳೆ ಬಾಯಿಗೆ ಸಿಕ್ಕಿ ಸಾವು!

    ಚಿಕ್ಕೋಡಿ: ನದಿಗೆ ಸ್ನಾನಕ್ಕೆ ತೆರಳಿದ್ದ ವ್ಯಕ್ತಿ ಮೊಸಳೆ (Crocodile) ಬಾಯಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ (Chikkodi) ತಾಲ್ಲೂಕಿನ ಸದಲಗಾ ಪಟ್ಟಣದ ಬಳಿ ದೂಧಗಂಗಾ ನದಿಯಲ್ಲಿ ನಡೆದಿದೆ.

    ಮಹಾದೇವ ಪುನ್ನಪ್ಪ ಖುರೆ (72) ಎಂಬುವರು ಮೊಸಳೆ ಬಾಯಿಗೆ ಸಿಲುಕಿ, ಮೃತಪಟ್ಟಿರುವ ದುರ್ದೈವಿ. ಮೃತ ಮಹಾದೇವ ಪುನ್ನಪ್ಪ ಖುರೆಯವರಿಗೆ ಈಜಲು ಬರುತ್ತಿರಲಿಲ್ಲ. ಹೀಗಾಗಿ ನದಿ (River) ದಡದಲ್ಲಿ ಕುಳಿತು ಸ್ನಾನ ಮಾಡುತ್ತಿದ್ದರು. ಇದನ್ನೂ ಓದಿ: ನಾವಿಕನಿಲ್ಲದ ದೋಣಿಯಲ್ಲಿ ಮುಳುಗಿದ ಡೆಲ್ಲಿ – ಆರ್‌ಸಿಬಿಗೆ 47 ರನ್‌ಗಳ ಜಯ; ಪ್ಲೇ ಆಫ್‌ ಕನಸು ಜೀವಂತ!

    ಸ್ನಾನ ಮಾಡುತ್ತಿದ್ದ ಸಂಧರ್ಭದಲ್ಲಿ ಮಹಾದೇವ ಖುರೆಯವರನ್ನು ಮೊಸಳೆ ಎಳೆದುಕೊಂಡು ಹೋಗಿ ತೀವ್ರವಾಗಿ ಗಾಯಮಾಡಿದೆ. ಪರಿಣಾಮ ಮಹಾದೇವ ಖುರೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಬಳಿಕ ನದಿಯಲ್ಲಿ ಶವ ಕಂಡ ಬಳಿಕ ಸ್ಥಳೀಯರು ಶವವನ್ನ ಹೊರತೆಗೆದಿದ್ದು ಮರೋಣತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಶವ ಹಸ್ತಾಂತರಿಸಲಾಗಿದೆ. ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಾಜ್ಯದ ಇತಿಹಾಸದಲ್ಲೇ 2ನೇ ಅತಿದೊಡ್ಡ ಗಾಂಜಾ ಬೇಟೆ – 15 ಕೋಟಿ ಮೌಲ್ಯದ ಗಾಂಜಾ ಸೀಜ್!

  • ಪ್ರೀತಿಸುವಂತೆ ಪೀಡಿಸುತ್ತಿದ್ದ ಯುವಕ, ಸಹೋದರನ ಬರ್ಬರ ಹತ್ಯೆ – ಯುವತಿ ತಂದೆಯಿಂದಲೇ ಡಬಲ್ ಮರ್ಡರ್!

    ಪ್ರೀತಿಸುವಂತೆ ಪೀಡಿಸುತ್ತಿದ್ದ ಯುವಕ, ಸಹೋದರನ ಬರ್ಬರ ಹತ್ಯೆ – ಯುವತಿ ತಂದೆಯಿಂದಲೇ ಡಬಲ್ ಮರ್ಡರ್!

    ಬೆಳಗಾವಿ: ಪ್ರೀತಿಸುವಂತೆ (Lover) ಪೀಡಿಸುತ್ತಿದ್ದ ಯುವಕ ಹಾಗೂ ಆತನ ಸಹೋದರನ ಇಬ್ಬರನ್ನೂ ಯುವತಿ ತಂದೆಯೇ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಸವದತ್ತಿ ತಾಲೂಕಿನ ಕಾರಿಮನಿ ಗ್ರಾಮದಲ್ಲಿ ನಡೆದಿದೆ.

    ಕಾರಿಮನಿ ಗ್ರಾಮದ ಯಲ್ಲಪ್ಪ ಹಳೇಗೋಡಿ (22) ಮಾಯಪ್ಪ ಹಳೇಗೋಡಿ (22) ಮೃತ ಯುವಕರು. ಸವದತ್ತಿ ತಾಲೂಕಿನ ದುಂಡನಕೊಪ್ಪ ಗ್ರಾಮದ ಫಕೀರಪ್ಪ ಭಾಂವಿಹಾಳ (50) ಹತ್ಯೆಗೈದ ವ್ಯಕ್ತಿ. ಇದನ್ನೂ ಓದಿ: ದಿಢೀರನೇ ಮದುವೆ ಫೋಟೋ ಡಿಲೀಟ್ ಮಾಡಿ ಅನುಮಾನ ಮೂಡಿಸಿದ ರಣ್‌ವೀರ್ ಸಿಂಗ್

    ಯುವಕ ಯಲ್ಲಪ್ಪ ಹಳೆಗೋಡಿ ಆರೋಪಿ ಫಕೀರಪ್ಪ ಪುತ್ರಿಯನ್ನು ಪ್ರೀತಿಸುವಂತೆ ಬೆನ್ನುಬಿದ್ದಿದ್ದ. ಇದರಿಂದ ಸಿಟ್ಟಿಗೆದ್ದ ಫಕೀರಪ್ಪ ಯುವಕನಿಗೆ ಎಚ್ಚರಿಕೆ ನೀಡಲು ಕಾರಿಮನಿ ಗ್ರಾಮಕ್ಕೆ ತೆರಳಿದ್ದ. ಈ ವೇಳೆ ಫಕೀರಪ್ಪ ಹಾಗೂ ಯಲ್ಲಪ್ಪ ಮಾತಿಗೆ-ಮಾತು ಬೆಳೆದು ವಿಕೋಪಕ್ಕೆ ತಿರುಗಿದೆ. ಫಕೀರಪ್ಪ ಯಲ್ಲಪ್ಪನಿಗೆ ಚಾಕುವಿನಿಂದ ಇರಿದಿದ್ದಾನೆ. ಅಲ್ಲದೇ ಯಲ್ಲಪ್ಪನನ್ನು ಬಿಡಿಸಿಕೊಳ್ಳಲು ಬಂದ ಸಹೋದರ ಮಾಯಪ್ಪನಿಗೂ ಚಾಕುವಿನಿಂದ ಇರಿದಿದ್ದಾನೆ.

    ತೀವ್ರ ರಕ್ತಸ್ರಾವದಿಂದ ಯಲ್ಲಪ್ಪ ಸ್ಥಳದಲ್ಲೇ ಮೃತಪಟ್ಟರೆ, ಮಾಯಪ್ಪ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಮುರಗೋಡ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಲ್ಲದೇ ಈ ಹತ್ಯೆ ಬಳಿಕ ಪರಾರಿಯಾಗಿರುವ ಆರೋಪಿ ಫಕೀರಪ್ಪ ಭಾಂವಿಹಾಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಸ್ಥಳಕ್ಕೆ ರಾಮದುರ್ಗ DYSP ಭೇಟಿ ನೀಡಿದ್ದಾರೆ. ಇದನ್ನೂ ಓದಿ: ರೇವಣ್ಣ ವಿಚಾರದಲ್ಲಿ ಮಾತ್ರ ಹೋರಾಟ ಮಾಡ್ತೀನಿ, ಪ್ರಜ್ವಲ್‌ಗಾಗಿ ಅಲ್ಲ: ಹೆಚ್‌ಡಿಕೆ

  • ಬೆಳಗಾವಿಯ ಕಾಂಗ್ರೆಸ್ ಭವನಕ್ಕೆ ನುಗ್ಗಿದ 27 ಬಿಜೆಪಿ ಕಾರ್ಯಕರ್ತರ ವಿರುದ್ಧ FIR

    ಬೆಳಗಾವಿಯ ಕಾಂಗ್ರೆಸ್ ಭವನಕ್ಕೆ ನುಗ್ಗಿದ 27 ಬಿಜೆಪಿ ಕಾರ್ಯಕರ್ತರ ವಿರುದ್ಧ FIR

    ಬೆಳಗಾವಿ: ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಪ್ರತಿಭಟನೆ (Belagavi Protest) ನಡೆಸಿದ ಬಳಿಕ ಇಲ್ಲಿನ ಕಾಂಗ್ರೆಸ್ ಭವನಕ್ಕೆ ನುಗ್ಗಿದ 27 ಬಿಜೆಪಿ ಕಾರ್ಯಕರ್ತರ (BJP Workers) ವಿರುದ್ಧ ಎಫ್ಐಆರ್ ದಾಖಲಾಗಿದೆ.

    ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಕಾಂಗ್ರೆಸ್ ಭವನಕ್ಕೆ (Congress Bhavan) ಅತಿಕ್ರಮಣ ಪ್ರವೇಶ ಹಾಗೂ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದಡಿ 27 ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಬಿಜೆಪಿ ನಾಯಕರ ಹೈಡ್ರಾಮಾ- ಸಿಎಂ, ಸಚಿವರ ಕಚೇರಿಗೆ ಬೀಗ ಹಾಕಲು ಯತ್ನ

    ಬೆಳಗಾವಿ ಬಿಜೆಪಿ ಘಟಕದ ನಗರ ಅಧ್ಯಕ್ಷೆ ಗೀತಾ ಉಮಾಕಾಂತ ಸುತಾರ್, ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಗೇಂದ್ರಗೌಡ ಪಾಟೀಲ ಸೇರಿ 27 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 143, 147, 341, 283, 448 ಹಾಗೂ 149 ಅಡಿ 27 ಕಾರ್ಯಕರ್ತರ ವಿರುದ್ಧ ಕೇಸ್ ದಾಖಲಾಗಿದೆ. ಇದನ್ನೂ ಓದಿ: ಶ್ರೀಕೃಷ್ಣ ಪಾಂಡವರಿಗಾಗಿ 5 ಗ್ರಾಮಗಳನ್ನ ಕೇಳಿದ, ನಾವು 3 ಸ್ಥಳ ಕೇಳುತ್ತಿದ್ದೇವೆ – ʻಮಹಾಭಾರತʼದ ಪಾಠ ಹೇಳಿದ ಯೋಗಿ

    ಬುಧವಾರ (ಫೆ.7) ಬೆಳಗ್ಗೆ ಚೆನ್ನಮ್ಮ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದ ಬಿಜೆಪಿ ಕಾರ್ಯಕರ್ತರು, ಪ್ರತಿಭಟನೆ ನಂತರ ಡಿಸಿ ಡಾ. ನಿತೇಶ ಪಾಟೀಲ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು‌. ಇದಾದ ನಂತರ ಡಿಸಿ ಕಚೇರಿಯಿಂದ ಕಾಂಗ್ರೆಸ್ ಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿದ 27 ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದರು. ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಂಗಳೂರಿನ ಕುಂಬಾರಪೇಟೆಯಲ್ಲಿ ಡಬಲ್ ಮರ್ಡರ್ – ಕೊಲೆ ಮಾಡಿ ತಾನೇ ಶರಣಾದ ಭೂಪ

  • ʻಜೈ ಶ್ರೀರಾಮ್ʼ ಘೋಷಣೆ ಕೂಗುತ್ತಿದ್ದ ಯುವಕರ ಗುಂಪಿನ ಮೇಲೆ ಕಲ್ಲು ತೂರಾಟ

    ʻಜೈ ಶ್ರೀರಾಮ್ʼ ಘೋಷಣೆ ಕೂಗುತ್ತಿದ್ದ ಯುವಕರ ಗುಂಪಿನ ಮೇಲೆ ಕಲ್ಲು ತೂರಾಟ

    – ಪೊಲೀಸರಿಂದ ಲಘು ಲಾಠಿ ಪ್ರಹಾರ

    ಬೆಳಗಾವಿ: ಕೊನೆಗೂ ಅಯೋಧ್ಯೆಯಲ್ಲಿ (Ayodhya) ಭವ್ಯ ರಾಮಮಂದಿರ ನಿರ್ಮಾಣಗೊಂಡಿದೆ. 500 ವರ್ಷಗಳ ಕಾಯುವಿಕೆ ಅಂತ್ಯವಾಗಿದ್ದು, ಕೋಟ್ಯಂತರ ರಾಮಭಕ್ತರ ಕನಸು ನನಸಾಗಿದೆ.

    ಜನವರಿ 22ರಂದು ಅಯೋಧ್ಯೆಯಲ್ಲಿ ಬಾಲರಾಮನ (Ramlalla) ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ಇಡೀ ದೇಶಾದ್ಯಂತ ರಾಮನ ಭಕ್ತರು ವಿಶೇಷ ಪೂಜಾ ಕೈಂಯರ್ಯಗಳನ್ನು ನೆರವೇರಿಸುವ ಮೂಲಕ ರಾಮನ ಕೃಪೆಗೆ ಪಾತ್ರರಾದರು. ಇದೇ ವೇಳೆ ಬೆಳಗಾವಿಯಲ್ಲಿ (Belagavi) ಜೈಶ್ರೀರಾಮ್ ಘೋಷಣೆ ಕೂಗುತ್ತಾ ಮೆರವಣಿಗೆ ಹೊರಟ್ಟಿದ ಯುವಕರ ಗುಂಪಿನ ಮೇಲೆ ಅನ್ಯ ಗುಂಪೊಂದು ಕಲ್ಲು ತೂರಾಟ ನಡೆಸಿದ ಘಟನೆ ಬೆಳಕಿಗೆ ಬಂದಿದೆ.‌ ಇದನ್ನೂ ಓದಿ: ರೀಲ್ಸ್ ಮಾಡ್ತಾ ಸೋಶಿಯಲ್ ಮೀಡಿಯಾದಲ್ಲಿ ಫುಲ್‌ ಆಕ್ಟೀವ್ ಆಗಿದ್ದ ಶಿಕ್ಷಕಿ – ಸಾವಿನ ಸುತ್ತ ಅನುಮಾನಗಳ ಹುತ್ತ!

    ಜೈಶ್ರೀರಾಮ್ (Jai Shri Ram) ಘೋಷಣೆ ಕೂಗುತ್ತಾ ಹೊರಟಿದ್ದ ಯುವಕ ಮೇಲೆ ಅನ್ಯ ಗುಂಪೊಂದು ಕಲ್ಲು ತೂರಾಟ ನಡೆಸಿದೆ. ಬಳಿಕ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ. ಇದರಿಂದ ಕೆಲಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿದೆ. ತಕ್ಷಣವೇ ಕ್ರಮ ಕೈಗೊಂಡ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

    ಮುಂಚಿತವಾಗಿಯೇ ಸ್ಥಳದಲ್ಲಿ ಎರಡು ಕೆಎಸ್‌ಆರ್‌ಪಿ ತುಕಡಿಗಳನ್ನ ನಿಯೋಜನೆ ಮಾಡಿದ್ದ ಪೊಲೀಸರು, ಲಾಠಿ ಪ್ರಹಾರ ಮಾಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಈ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು, ಪುಂಡರ ವಿರುದ್ಧ ಕ್ರಮ ವಹಿಸಲು ಘಟನಾವಳಿಯ ಸಿಸಿಟಿವಿ ದೃಶ್ಯಗಳನ್ನ ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: ಸಾರ್ವಜನಿಕರಿಗೆ ತೆರೆಯುತ್ತಿದ್ದಂತೆಯೇ ರಾಮಮಂದಿರಕ್ಕೆ ಹರಿದು ಬರ್ತಿದೆ ಜನಸಾಗರ!

    ಪ್ರಾಣಪ್ರತಿಷ್ಠೆ ಸಂಪನ್ನ: ಅಯೋಧ್ಯೆಯ ರಾಮಮಂದಿರದಲ್ಲಿ ಸೋಮವಾರ ಬಾಲರಾಮನ ಪ್ರಾಣಪ್ರತಿಷ್ಠೆ ಶಾಸ್ತ್ರೋಕ್ತವಾಗಿ ನೆರವೇರಿತು. ಸರಿಯಾಗಿ ಮಧ್ಯಾಹ್ನ 12 ಗಂಟೆ 30 ನಿಮಿಷ 32 ಸೆಕೆಂಡ್‌ಗಳ ಮಧ್ಯೆ ಅಭಿಜಿನ್‌ ಲಗ್ನದಲ್ಲಿ (ಅಭಿಜಿಬ್‌ ಅಂದ್ರೆ ʻವಿಜಯಶಾಲಿʼ ಎಂದರ್ಥ) ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಾಯಿತು. ಅರ್ಚಕರು, ಪಂಡಿತರು ಹಾಗೂ ಯಜಮಾನ ಸ್ಥಾನದಲ್ಲಿದ್ದ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಪ್ರಾಣಪ್ರತಿಷ್ಠೆ ನೆರವೇರಿತು. ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ಸಿಎಂ ಯೋಗಿ ಆದಿತ್ಯನಾಥ್‌, ಗುಜರಾತ್‌ ರಾಜ್ಯಪಾಲೆ ಆನಂದಿಬೆನ್‌ ಪಟೇಲ್‌ ಮೊದಲಾದವರು ಉಪಸ್ಥಿತರಿದ್ದರು. ದೇವಾಲಯ ಆವರಣದಲ್ಲಿ ಸರಿಸುಮಾರು 8 ಸಾವಿರ ಅತಿಥಿಗಳು ನೆರೆದಿದ್ದರು.

  • ಬೆಳಗಾವಿಯ ದಂಡು ಮಂಡಳಿ CEO ನಿಗೂಢ ಸಾವು – ಮನೆಯಲ್ಲಿ ಡೆತ್‌ ನೋಟ್‌, ವಿಷದ ಬಾಟಲಿ ಪತ್ತೆ

    ಬೆಳಗಾವಿಯ ದಂಡು ಮಂಡಳಿ CEO ನಿಗೂಢ ಸಾವು – ಮನೆಯಲ್ಲಿ ಡೆತ್‌ ನೋಟ್‌, ವಿಷದ ಬಾಟಲಿ ಪತ್ತೆ

    ಬೆಳಗಾವಿ: ಬೆಳಗಾವಿಯ ದಂಡು ಮಂಡಳಿ (Belagavi Dandu Board) ಸಿಇಒ ಕರ್ನಲ್ ಆನಂದ್‌ (40) ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಶನಿವಾರ (ನ.25) ಬೆಳಗ್ಗೆ ಜಿಲ್ಲೆಯಲ್ಲಿ ನಡೆದಿದೆ.

    ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿರುವ (Belgaum camp Area) ಕೆ. ಆನಂದ್‌ ಅವರ ಸರ್ಕಾರಿ ನಿವಾಸದಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾರೆ. ಕಳೆದ ಒಂದೂವರೆ ವರ್ಷಗಳಿಂದ ದಂಡು ಮಂಡಳಿ ಸಿಇಒ ಆಗಿ ಸೇವೆ ಸಲ್ಲಿಸುತ್ತಿರುವ ಆನಂದ್‌ ಅವರು ಇಂಡಿಯನ್ ಡಿಫೆನ್ಸ್ ಎಸ್ಟೇಟ್ ಸರ್ವಿಸ್‌ಗೆ ಸೇರಿದ್ದರು. ಇದನ್ನೂ ಓದಿ: ರಾಯಚೂರು ವಿದ್ಯುತ್ ಕೇಂದ್ರಗಳ ಕಲ್ಲಿದ್ದಲು ಕಳ್ಳಾಟ ಪ್ರಕರಣ- ಇಬ್ಬರ ವಿರುದ್ಧ ಎಫ್‌ಐಆರ್

    ಮೃತ ಆನಂದ ತಮಿಳುನಾಡು (TamilNadu) ಮೂಲದವರಾಗಿದ್ದು, ವಿವಾಹ ಆಗಿಲ್ಲ ತಂದೆ-ತಾಯಿ ತಮಿಳುನಾಡಿನಲ್ಲಿದ್ದಾರೆ. ಬೆಳಗಾವಿಯ ಸರ್ಕಾರಿ‌ ನಿವಾಸದಲ್ಲಿ ಒಬ್ಬರೇ ವಾಸವಾಗಿದ್ದರು. ಶನಿವಾರ ಬೆಳಗ್ಗೆ ಮನೆ ಬಾಗಿಲು ತೆರೆಯದೇ ಇದ್ದಾಗ ಅನುಮಾನಗೊಂಡ ಮನೆ ಸಿಬ್ಬಂದಿ ಕ್ಯಾಂಪ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಗಿಲು ಮುರಿದು ಒಳ ನುಗ್ಗಿದಾಗ ಶವವಾಗಿ ಪತ್ತೆಯಾಗಿದ್ದಾರೆ.

    ಇತ್ತಿಚೆಗೆ ದಂಡುಮಂಡಳಿಯ ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದರು. ಇದರಿಂದಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಪೊಲೀಸರು ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಎಂಎಲ್ಐಆರ್‌ಸಿ ಕಮಾಂಡೆಂಟ್ ಬ್ರಿಗೇಡಿಯರ್ ಜೋಯದೀಪ ಮುಖರ್ಜಿ, ಡಿಸಿಪಿ ರೋಹನ ಜಗದೀಶ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮುಂದುವರಿದ ರೆಡ್ಡಿ ಸಹೋದರರ ಮುನಿಸು – ಸಹೋದರನ ಪುತ್ರನ ಮದುವೆಗೆ ಜನಾರ್ದನ ರೆಡ್ಡಿ ಗೈರು

    ಡೆತ್‌ ನೋಟ್‌, ವಿಷದ ಬಾಟಲಿ ಪತ್ತೆ:
    ಕರ್ನಲ್‌ ಆನಂದ್‌ ಅವರ ಕೊಠಡಿ ತಪಾಸಣೆ ವೇಳೆ ಡೆತ್‌ ನೋಟ್‌ ಮತ್ತು ವಿಷದ ಬಾಟಲಿ ಪತ್ತೆಯಾಗಿದೆ. ಅದರಲ್ಲಿ ಯಾವೆಲ್ಲಾ ಅಂಶ ಇದೆ ಅನ್ನೋದನ್ನ ಪರಿಶೀಲನೆ ಮಾಡುತ್ತಿದ್ದೇವೆ ಎಂದು ನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ ತಿಳಿದಿದ್ದಾರೆ.

    \

    ಕ್ಯಾಂಪ್ ನಲ್ಲಿರುವ ಸಿಇಒ ಕೆ.ಆನಂದ್‌ ಅವರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, 2021ರಿಂದ ಬೆಳಗಾವಿಯ ದಂಡು ಮಂಡಳಿ ಸಿಇಒ ಆಗಿ ಕೆಲಸ ಮಾಡುತ್ತಿದ್ದರು. ಕಳೆದ 2 ದಿನಗಳಿಂದ ಅವರ ಮನೆ ಬಾಗಿಲು ತೆರೆದಿರಲಿಲ್ಲ. ಇದರಿಂದ ನಮ್ಮ ಪೊಲೀಸರು ಅನುಮಾನಗೊಂಡು ಮದ್ರಾಸ್ ನಲ್ಲಿರುವ ಆನಂದ್‌ ಅವರ ತಂದೆಯನ್ನ ಸಂಪರ್ಕಿಸಿ ಮಾಹಿತಿ ನೀಡಿದ್ದಾರೆ. ಬಳಿಕ ಬಾಗಿಲು ತೆರೆದು ನೋಡಿದಾಗ ಆನಂದ್‌ ಸಾವನ್ನಪ್ಪಿರುವುದು ತಿಳಿದು ಬಂದಿದೆ. ಮೂಗಿನಿಂದ ರಕ್ತ ಸೋರಿ ಕೆಳಗೆ ಬಿದ್ದಿತ್ತು, ಹಾಸಿಗೆ ಪಕ್ಕದಲ್ಲಿ ಒಂದು ವಿಷಯ ಬಾಟಿಲು ಸಿಕ್ಕಿದೆ. ಯಾವುದೋ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ತಿಳಿಸಿದ್ದಾರೆ.

    ಬೆರಳಚ್ಚು ತಜ್ಞರು ಮತ್ತು ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಎಲ್ಲ ಪರೀಕ್ಷೆ ಮಾಡಿದ್ದಾರೆ. 174 ವಿಧಿಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದು, ಎಫ್ಎಸ್‌ಎಲ್ ವರದಿ ಬಂದ ಬಳಿಕ ನಿಖರ ಮಾಹಿತಿ ತಿಳಿಯಲಿದೆ. ಡೆತ್ ನೋಟ್ ಸಿಕ್ಕಿದೆ. ಆದ್ರೆ ಏನು ಬರೆದಿದ್ದಾರೆ ಅನ್ನೋದು ತನಿಖೆ ಬಳಿಕ ಬಯಲಾಗಲಿದೆ ಎಂದು ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.

  • ಕರಾಳ ದಿನ ಆಚರಿಸಿದ MES ಪುಂಡರಿಗೆ ಬಿಸಿ ಮುಟ್ಟಿಸಿದ ಪೊಲೀಸರು – 18 ಮಂದಿ ವಿರುದ್ಧ FIR

    ಕರಾಳ ದಿನ ಆಚರಿಸಿದ MES ಪುಂಡರಿಗೆ ಬಿಸಿ ಮುಟ್ಟಿಸಿದ ಪೊಲೀಸರು – 18 ಮಂದಿ ವಿರುದ್ಧ FIR

    ಬೆಳಗಾವಿ: ಜಿಲ್ಲೆಯ ಮಹಾರಾಷ್ಟ್ರ ಗಡಿ ಭಾಗದಲ್ಲಿ MES ಪುಂಡರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಕನ್ನಡ ರಾಜ್ಯೋತ್ಸವಕ್ಕೆ (Kannada Rajyotsava) ವಿರುದ್ಧವಾಗಿ ಕರಾಳ ದಿನಾಚರಣೆ ಮಾಡಿದ 18 ಮಂದಿ ಎಂಇಎಸ್ ಪುಂಡರ ವಿರುದ್ಧ ಕೇಸ್ ದಾಖಲಾಗಿದೆ.

    ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ (Market Police Station) ಎಂಇಎಸ್ ಕಿಡಿಗೇಡಿಗಳ ವಿರುದ್ಧ FIR ದಾಖಲಾಗಿದೆ. ಕನ್ನಡ ರಾಜ್ಯೋತ್ಸವ ದಿನದಂದು ಕರಾಳ ದಿನ ಆಚರಿಸಿ ನಾಡದ್ರೋಹ ಘೋಷಣೆ ಕೂಗಿದ್ದ 18 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: 5 ವರ್ಷ ಸಿಎಂ ಆಗಿ ಮುಂದುವರಿಯೋ ವಿಚಾರ ಗೊತ್ತಿರೋದು ಸಿದ್ದರಾಮಯ್ಯ, ಡಿಸಿಎಂಗೆ ಮಾತ್ರ: ಪರಂ

    ಜಿಲ್ಲಾಡಳಿತದಿಂದ ಎಂಇಎಸ್ ಕರಾಳ ದಿನಾಚರಣೆಗೆ ಅನುಮತಿ ನಿರಾಕರಿಸಲಾಗಿತ್ತು‌. ಅನುಮತಿ ಇಲ್ಲದಿದ್ದರೂ ನಗರದಲ್ಲಿ ಕರಾಳ ದಿನಾಚರಣೆ ಹೆಸರಲ್ಲಿ ಮೆರವಣಿಗೆ ಮಾಡಿ ಬೆಳಗಾವಿ, ಬೀದರ್, ಭಾಲ್ಕಿ, ನಿಪ್ಪಾಣಿ, ಕಾರವಾರ ಸಂಯುಕ್ತ ಮಹಾರಾಷ್ಟ್ರ ಅಂತ ನಾಡದ್ರೋಹಿ ಘೋಷಣೆ ಕೂಗಿ ಮೊಂಡತನ ಪ್ರದರ್ಶನ ಮಾಡಿದ್ದರು. ಇದನ್ನೂ ಓದಿ: ಶಮಿ ಬೆಂಕಿ ಬೌಲಿಂಗ್‌ಗೆ ನೀಲಿ ತಾರೆ ಫಿದಾ – ಕೇಂದ್ರ ಲಸ್ಟ್‌ ರಿಯಾಕ್ಷನ್‌ ಸಿಕ್ಕಾಪಟ್ಟೆ ವೈರಲ್‌

    ನಾಡದ್ರೋಹಿ ಘೋಷಣೆ ಕೂಗಿದ ಎಂಇಎಸ್‌ನ ಮಾಲೋಜಿರಾವ್ ಅಷ್ಟೇಕರ್, ಮನೋಹರ ಕಿಣೇಕರ, ರಂಜಿತ್ ಚವ್ಹಾಣ, ಸರಿತಾ ಪಾಟೀಲ, ಸಾರಿಕಾ ಪಾಟೀಲ, ಅಮರ, ಯಳ್ಳೂರಕರ್ ಪ್ರಕಾಶ ಮರಗಾಲಿ, ರವಿ ಸಾಳುಂಕೆ, ಅಂಕುಶ ಕೇಸರಕರ್ ಸೇರಿದಂತೆ 18 ಜನರ ವಿರುದ್ಧ ಕೇಸ್ ದಾಖಲಾಗಿದೆ. ಇದನ್ನೂ ಓದಿ: ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್-3: ಶುಭ ಕೋರಿದ ಬಸವರಾಜ ಹೊರಟ್ಟಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಳಗಾವಿ ಲಾಕಪ್‌ಡೆತ್ ಕೇಸ್: ಪೊಲೀಸರಿಂದ್ಲೇ ಚಿತ್ರಹಿಂಸೆ – ಮೃತನ ಪುತ್ರಿ ಆರೋಪ

    ಬೆಳಗಾವಿ ಲಾಕಪ್‌ಡೆತ್ ಕೇಸ್: ಪೊಲೀಸರಿಂದ್ಲೇ ಚಿತ್ರಹಿಂಸೆ – ಮೃತನ ಪುತ್ರಿ ಆರೋಪ

    ಬೆಳಗಾವಿ: ನಮ್ಮ ತಂದೆಗೆ ಬಿಪಿ, ಶುಗರ್ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ. ಪೊಲೀಸರೇ ಸುಳ್ಳು ಕೇಸ್ (Police Case) ದಾಖಲಿಸಿದ್ದಾರೆ. ತಂದೆಯ ಕೈಗೆ ಹಗ್ಗಕಟ್ಟಿ, ಚಿತ್ರಹಿಂಸೆ ನೀಡಿದ್ದಾರೆ. ಆದ್ದರಿಂದಲೆ ತಂದೆ ಠಾಣೆಯಲ್ಲಿ ಮೃತಪಟ್ಟಿದ್ದಾರೆ ಎಂದು ಬಸನಗೌಡ ಪಾಟೀಲ್ ಪುತ್ರಿ ರೋಹಿಣಿ ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ.

    ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿ, ನಮ್ಮ ತಂದೆಯ ವಿರುದ್ಧ ಸುಳ್ಳು ಕೇಸ್ ದಾಖಲಿಸಲಾಗಿದೆ. ನಮಗೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ದೇಶ ಕಾಯುವ ಯೋಧರಿಂದ್ಲೇ ನಾವು ಸುರಕ್ಷಿತ- ಮೃತ ಸೈನಿಕರ ಕುಟುಂಬಗಳಿಗೆ ಜೊಲ್ಲೆ ಸಾಂತ್ವನ

    ನಿನ್ನೆ ನಮ್ಮ ತಂದೆಯನ್ನು ಕರೆದುಕೊಂಡು ಹೋಗಿದ್ದಾರೆ. ರಾತ್ರಿ ಫೋನ್ ಮಾಡಿ ತಕ್ಷಣ ಬನ್ನಿ ಎಂದು ಪೊಲೀಸರು (Belagavi Police) ಹೇಳಿದ್ರು. ರಾತ್ರಿ 10ಕ್ಕೆ ಬಂದು ನೋಡಿದಾಗ ತನ್ನ ತಂದೆ ಬೆಡ್ ಮೇಲೆ ಇದ್ರು. ವೈದ್ಯರು ಹೇಳಿದ್ರು ಇನ್ನೂ ಡೆತ್ ಆಗಿಲ್ಲ ಅಂದ್ರು. ನಾನು ಪ್ಯಾರಾಮೆಡಿಕಲ್ ವಿದ್ಯಾರ್ಥಿ (Paramedical Student) ಆಗಿದ್ದರಿಂದ ಕೈಹಿಡಿದು ಪಲ್ಸ್ ನೋಡಿದೆ, ಆಗ ಯಾವ ಪ್ರತಿಕ್ರಿಯೆಯೂ ಬರಲಿಲ್ಲ. ಆಮೇಲೆ ವೈದ್ಯರು ನಿಮ್ಮ ತಂದೆ ಇನ್ನಿಲ್ಲ ಅಂತಾ ಹೇಳಿರುವುದಾಗಿ ತಿಳಿಸಿದ್ದಾರೆ.

    ಅಣ್ಣ-ನಾನು ಇನ್ನೂ ಓದಬೇಕು: ನಮ್ಮ ಕುಟುಂಬದ ದೀಪ ಆರಿಹೋಗಿದೆ. ನಾನು, ನಮ್ಮ ಅಣ್ಣ ಇನ್ನೂ ಓದಬೇಕು. ಕೇಸ್ ಇರೋ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಹೃದಯಾಘಾತವಂತು (HeartAttack) ಅಲ್ವೇ ಅಲ್ಲ. ಒಂದು ವೇಳೆ ಹೃದಯಾಘಾತ ಲಕ್ಷಣ ಕಂಡುಬಂದಿದ್ದರೆ ತಕ್ಷಣ ಆಸ್ಪತ್ರೆಗೆ (Hospital) ಸೇರಿಸಬೇಕಿತ್ತು. ಆದ್ರೆ ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಇದಾದಬಳಿಕ ಆಸ್ಪತ್ರೆಗೆ ಸೇರಿಸಿದ್ದಾರೆ. ಈ ಬಗ್ಗೆ ನ್ಯಾಯಾಧೀಶರಿಗೆ ಹೇಳಿಕೆ ನೀಡಿದ್ದೇನೆ. ನಮ್ಮ ತಂದೆ ಸಾವಿಗೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]