Tag: belagavi session

  • ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಪರಿಹಾರ ಸಿಗುತ್ತೆ ಎಂಬ ನಂಬಿಕೆ ಇಲ್ಲ: ಬಿವೈವಿ

    ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಪರಿಹಾರ ಸಿಗುತ್ತೆ ಎಂಬ ನಂಬಿಕೆ ಇಲ್ಲ: ಬಿವೈವಿ

    ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ (Winter Session) ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಪರಿಹಾರ ಸಿಗುತ್ತೆ ಎಂಬ ನಂಬಿಕೆ ಇಲ್ಲ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (B.Y Vijayendra) ಹೇಳಿದ್ದಾರೆ.

    ಬೆಳಗಾವಿಯಲ್ಲಿ `ಪಬ್ಲಿಕ್ ಟಿವಿ’ ಜೊತೆ ಅವರು ಮಾತನಾಡಿದರು. ಈ ವೇಳೆ, ರಾಜ್ಯ ಸರ್ಕಾರ ಉತ್ತರ ಕರ್ನಾಟಕ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವುದು ಕೇವಲ ಬುಟಾಟಿಕೆ. ಈ ಬಗ್ಗೆ ಗಂಭೀರ ಚರ್ಚೆ ಆಗುವುದಿಲ್ಲ ಎಂದು ಕಿಡಿಕಾರಿದ್ದಾರೆ.

    ರಾಜ್ಯದಲ್ಲಿ ಸರ್ಕಾರ ನಿಷ್ಕ್ರಿಯವಾಗಿದೆ. ಶಿಶುಗಳ ಮರಣ, ಬಾಣಂತಿಯರ ಸಾವು, ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿರುವ ವಕ್ಫ್ ಆಸ್ತಿ ವಿವಾದದ ಬಗ್ಗೆ ಸದನದಲ್ಲಿ ಚರ್ಚೆ ಮಾಡುತ್ತೇವೆ. ಬಾಣಂತಿಯರ ಸಾವುಗಳು ಬಗ್ಗೆ ಸರ್ಕಾರ ಬೇಜವಾಬ್ದಾರಿತನದಿಂದ ವರ್ತಿಸಿದೆ. ಇನ್ನೂ ಪಂಚಮಸಾಲಿ ಹೋರಾಟಗಾರರ ಅಹವಾಲನ್ನು ಸರ್ಕಾರ ಸ್ವೀಕರಿಬೇಕು ಎಂದು ಅವರು ಇದೇ ವೇಳೆ ಆಗ್ರಹಿಸಿದ್ದಾರೆ.

    ಗ್ಯಾರಂಟಿಗಳಿಂದ ರಾಜ್ಯದ ಜನ ಆನಂದಲ್ಲಿದ್ದಾರೆ ಎಂಬ ಭ್ರಮೆಯಲ್ಲಿದ್ದಾರೆ. ಆನೆ ನಡೆದದ್ದೇ ದಾರಿ ಎಂದು ತಿಳಿದುಕೊಂಡಿದ್ದಾರೆ. ದುರ್ಘಟನೆಗಳು ನಡೆದಾಗ ಸರ್ಕಾರ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಈ ಸರ್ಕಾರ ಹಾಗೂ ಸಚಿವರದ್ದು ಉದ್ಧಟನದ ವರ್ತನೆಯೇ ಆಗಿದೆ. ಸದನದಲ್ಲಿ ಸರ್ಕಾರದ ವಿರುದ್ಧ ನಮ್ಮದೇ ಆದ ಅಸ್ತ್ರಗಳನ್ನು ಪ್ರಯೋಗ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.

  • ಚಳಿಗಾಲದ ಕಲಾಪದಲ್ಲಿ ಸಿಡಿಯಲಿದೆ ಹಗರಣಗಳ ಕಿಡಿ – ಇಂದಿನಿಂದ ಸರ್ಕಾರ Vs ವಿಪಕ್ಷ ಸಂಘರ್ಷ

    ಚಳಿಗಾಲದ ಕಲಾಪದಲ್ಲಿ ಸಿಡಿಯಲಿದೆ ಹಗರಣಗಳ ಕಿಡಿ – ಇಂದಿನಿಂದ ಸರ್ಕಾರ Vs ವಿಪಕ್ಷ ಸಂಘರ್ಷ

    ಬೆಳಗಾವಿ: ಇಂದಿನಿಂದ ಬೆಳಗಾವಿಯ ಸುವರ್ಣಸೌಧದಲ್ಲಿ (Belagavi Suvarna Soudha) ಚಳಿಗಾಲದ ಅಧಿವೇಶನ (Winter Session) ಆರಂಭವಾಗಲಿದೆ. ಉಪಚುನಾವಣೆಯಲ್ಲಿ (By Election) ಭರ್ಜರಿ ಗೆಲುವು ಹುಮ್ಮಸ್ಸಿನಲ್ಲಿರುವ ರಾಜ್ಯ ಸರ್ಕಾರವನ್ನು ಕಟ್ಟಿಹಾಕಲು ವಿಪಕ್ಷಗಳು ಸಿದ್ದಗೊಂಡಿವೆ.

    10 ದಿನಗಳ ಕಾಲ ನಡೆಯಲಿರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಮುಡಾ, ವಾಲ್ಮೀಕಿ, ಅಬಕಾರಿ, ವಕ್ಫ್, ಬಾಣಂತಿಯರ ಸಾವು ಪ್ರಕರಣಗಳು ಸರ್ಕಾರಕ್ಕೆ ಬಿಸಿತುಪ್ಪವಾಗಿ ಪರಿಣಮಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

    ಸಾಲು ಸಾಲು ಅಸ್ತ್ರಗಳನ್ನ ರೆಡಿ ಮಾಡಿಕೊಂಡಿರುವ ವಿಪಕ್ಷಗಳು ಸರ್ಕಾರದ ಮೇಲೆ ಮುಗಿ ಬೀಳಲು ಸಜ್ಜಾಗಿವೆ. ಇತ್ತ ವಿಪಕ್ಷಗಳನ್ನು ಕಟ್ಟಿ ಹಾಕಲು ಸರ್ಕಾರವೂ ಸನ್ನದ್ಧವಾಗಿದೆ. ವಿಪಕ್ಷಗಳ ಹಗರಣಗಳನ್ನು ಮುಂದಿಟ್ಟುಕೊಂಡು ಸರ್ಕಾರ ಕೌಂಟರ್ ನೀಡಲು ತಯಾರಾಗಿದೆ. ಇದನ್ನೂ ಓದಿ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸರಣಿ ಸಾವು – ಮೃತ ಬಾಣಂತಿಯರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

    ಸದನದ ಒಳಗೆ ಆಡಳಿತ ವಿಪಕ್ಷಗಳ ವಾಗ್ಯುದ್ಧ ಒಂದು ಕಡೆಯಾದರೆ ಸದನದ ಹೊರಗಡೆಯೂ ಸಮರ ಜೋರಾಗಿರಲಿದೆ. ಪಂಚಮಸಾಲಿ 2ಎ ಮೀಸಲಾತಿ ಹೋರಾಟ, ಅನ್ನದಾತರ ಪ್ರತಿಭಟನೆ ಕೂಡ ನಡೆಯುತ್ತಿದೆ.

    ಅಧಿವೇಶನದಲ್ಲಿ ಬಿಬಿಎಂಪಿ ವಿಧೇಯಕ, ರಾಜ್ಯಪಾಲರ ಅಧಿಕಾರ ಮೊಟಕು ಮಾಡುವ ಗ್ರಾಮೀಣಾಭಿವೃದ್ಧಿ ವಿವಿ ವಿಧೇಯಕ ಸೇರಿ 15ಕ್ಕೂ ಹೆಚ್ಚು ಮಸೂದೆಗಳು ಮಂಡನೆ ಆಗಲಿವೆ. ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ವಿಜಯೇಂದ್ರ, ಸದನದ ಒಳಗೆ, ಹೊರಗೆ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡುತ್ತೇವೆ ಎಂದಿದ್ದಾರೆ. ವಿಪಕ್ಷಗಳು ಅಸ್ತ್ರಗಳನ್ನು ಎದುರಿಸಲು ನಾವ್ ರೆಡಿ ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ.

    ಬಿಜೆಪಿ ಅಸ್ತ್ರ Vs ಸರ್ಕಾರದ ಪ್ರತ್ಯಸ್ತ್ರ
    – ಮುಡಾ ಸೈಟ್ ಹಂಚಿಕೆ ಹಗರಣ Vsಬಿಜೆಪಿ ಸರ್ಕಾರದ ಅವಧಿಯ ಕೋವಿಡ್ ಹಗರಣ
    – ವಾಲ್ಮೀಕಿ ನಿಗಮ ಅಕ್ರಮ ಪ್ರಕರಣ Vs ಬಿಎಸ್‌ವೈ & ವಿಜಯೇಂದ್ರ ವಿರುದ್ಧದ ಬಿಡಿಎ ಹಗರಣ
    – ವಕ್ಫ್‌ ಆಸ್ತಿ ಕಬಳಿಕೆ ವಿವಾದ Vs ಯತ್ನಾಳ್-ವಿಜಯೇಂದ್ರ ಬಣಗಳ ತಿಕ್ಕಾಟ
    – ಅಬಕಾರಿ ಇಲಾಖೆಯಲ್ಲಿ ವಸೂಲಿ Vs ಗಣಿ ಸೇರಿ ವಿವಿಧ ಹಗರಣ
    – ಬಳ್ಳಾರಿಯಲ್ಲಿ ಬಾಣಂತಿಯರ ಸಾವು Vs ಲೈಂಗಿಕ ದೌರ್ಜನ್ಯ ಪ್ರಕರಣ

     

  • ಶಾಸಕರ ಆದಾಯ ಕೋಟಿ ಕೋಟಿ ಹೆಚ್ಚಾದ್ರೂ ಕನಕಪುರ ಅಭಿವೃದ್ಧಿಯಾಗಿಲ್ಲ: ಪರೋಕ್ಷವಾಗಿ ಡಿಕೆಶಿ ತಿವಿದ ಯತ್ನಾಳ್‌

    ಶಾಸಕರ ಆದಾಯ ಕೋಟಿ ಕೋಟಿ ಹೆಚ್ಚಾದ್ರೂ ಕನಕಪುರ ಅಭಿವೃದ್ಧಿಯಾಗಿಲ್ಲ: ಪರೋಕ್ಷವಾಗಿ ಡಿಕೆಶಿ ತಿವಿದ ಯತ್ನಾಳ್‌

    – ಶೂನ್ಯವೇಳೆಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಕೇಸ್ ಪ್ರಸ್ತಾಪ
    – ಕಿಡಿಗೇಡಿಗಳ ಮನೆ ಮೇಲೆ ಬುಲ್ಡೋಜರ್ ಪ್ರಯೋಗಿಸಲು ಬಿಜೆಪಿ ಶಾಸಕರ ಒತ್ತಾಯ

    ಬೆಳಗಾವಿ: ಸದನದ ಕಲಾಪದಲ್ಲಿಂದು ಉತ್ತರ ಕರ್ನಾಟಕದ ಚರ್ಚೆ ವೇಳೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal), ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ವಿರುದ್ಧ ಪರೋಕ್ಷವಾಗಿ ಲೇವಡಿ ಮಾಡಿದ ಪ್ರಸಂಗ ನಡೆಯಿತು.

    ಉತ್ತರಕರ್ನಾಟಕದ (UttarKarnataka) ಸಮಗ್ರ ಅಭಿವೃದ್ಧಿಯಾಗ್ತಿಲ್ಲ. ಹಳೇ ಮೈಸೂರು ಭಾಗ ಮಾತ್ರ ಅಭಿವೃದ್ಧಿಯಾಗ್ತಿದೆ. ಅದಕ್ಕೆ ಮೈಸೂರು ಮಹಾರಾಜರು ಕಾರಣ. ಹಾಗೆಯೇ ಕನಕಪುರ ಕ್ಷೇತ್ರವೂ (Kanakapura Constituency) ಅಭಿವೃದ್ಧಿಯಾಗಿಲ್ಲ. ಅಲ್ಲಿರುವ ಶಾಸಕರ ಆದಾಯ ಮಾತ್ರ ವರ್ಷವರ್ಷವೂ ಹೆಚ್ಚಾಗ್ತಿದೆ. 50 ಕೋಟಿ ರೂ. ನಿಂದ 100 ಕೋಟಿ ರೂ., 1,583 ಕೋಟಿ ರೂ. ವರೆಗೂ ಹೆಚ್ಚಾಗಿದೆ. ಆದ್ರೆ ಕನಕಪುರದ ಅಭಿವೃದ್ಧಿ ಮಾತ್ರ ಕುಂಠಿತವಾಗಿದೆ ಎಂದು ಪರೋಕ್ಷವಾಗಿ ಕುಟುಕಿದರು.

    ಮುಂದುವರಿದು, ಸುವರ್ಣಸೌಧಕ್ಕೆ ಲೈಟಿಂಗ್, ಫೌಂಟೇನ್ ಹಾಕೋದ್ರಿಂದ ಉತ್ತರ ಕರ್ನಾಟಕದ ಅಭಿವೃದ್ಧಿಯಾಗಲ್ಲ. 10 ದಿನಗಳ ಕಾಟಾಚಾರದ ಸದನದಿಂದ ಪ್ರಯೋಜನವಿಲ್ಲ. ಈ ಭಾಗದಲ್ಲಿ ಕಚೇರಿಗಳನ್ನ ಪ್ರಾರಂಭಿಸಿ, ಹೆಚ್ಚಿನ ಅನುದಾನ ಒದಗಿಸಿ ಅಂತ ಸರ್ಕಾರಕ್ಕೆ ಯತ್ನಾಳ್ ಒತ್ತಾಯಿಸಿದರು. ಇದನ್ನೂ ಓದಿ: ದಶಪಥ ಹೆದ್ದಾರಿಯಲ್ಲಿ ನಿರ್ಮಾಣವಾಗದ ಸ್ಕೈವಾಕ್ – ಜೀವ ಭಯದಲ್ಲಿ ರಸ್ತೆ ದಾಟುವ ಸಾರ್ವಜನಿಕರು

    ಬುಲ್ಡೋಜರ್ ಪ್ರಯೋಗಿಸಿ: ಬೆಳಗಾವಿಯ (Belagavi) ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಸದ್ದು ಮಾಡಿತು. ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸುನೀಲ್ ಕುಮಾರ್ ಹಾಗೂ ಶಶಿಕಲಾ ಜೊಲ್ಲೆ ಇದೊಂದು ಅಮಾನವೀಯ ಕೃತ್ಯ. ಭವಿಷ್ಯದಲ್ಲಿ ಇಂತಹ ಪ್ರಕರಣಗಳು ನಡೆಯಬಾರದು ಅಂತ ಆಕ್ರೋಶ ಹೊರಹಾಕಿದರು.

    ಕೃತ್ಯ ಎಸಗಿದ ಕಿಡಿಗೇಡಿಗಳ ಮನೆ ಮೇಲೆ ಯುಪಿ ಮಾದರಿಯಲ್ಲಿ ಬುಲ್ಡೋಜರ್ ಪ್ರಯೋಗ ಮಾಡಬೇಕು ಎಂದು ಸುನೀಲ್ ಕುಮಾರ್ ಆಗ್ರಹಿಸಿದರು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಕೊಡಬೇಕು. ಯಾವುದೇ ಕಾರಣಕ್ಕೂ ಅವರಿಗೆ ಬೇಲ್ ಸಿಗದಂತೆ ನೋಡಿಕೊಳ್ಳಬೇಕೆಂದು ಸದಸ್ಯರು ಒತ್ತಾಯಿಸಿದರು. ಈ ವೇಳೆ ಪ್ರಕರಣದ ಬಗ್ಗೆ ವಿವರಣೆ ನೀಡಿದ ಗೃಹ ಸಚಿವ ಪರಮೇಶ್ವರ್, ಇದನ್ನ ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ‘ಸಲಾರ್’ ಸಿನಿಮಾಗೆ ಐದೂ ಭಾಷೆಗಳಿಗೂ ತಾವೇ ಡಬ್ ಮಾಡಿದ ಪೃಥ್ವಿರಾಜ್

    ಮಹಿಳೆ ಮತ್ತು ಅವರ ಕುಟುಂಬಕ್ಕೆ ರಕ್ಷಣೆ ಕೊಡಲಾಗುತ್ತದೆ. ಪ್ರಕರಣದಲ್ಲಿ ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಏಳು ಆರೋಪಿಗಳನ್ನ ಬಂಧಿಸಿದ್ದೇವೆ, ಅದೇ ರೀತಿ ಓಡಿಹೋದ ಹುಡಗ-ಹುಡುಗಿಯನ್ನು ಹುಡುಕುವ ಪ್ರಯತ್ನ ನಡೆದಿದೆ ಎಂದು ಉತ್ತರಿಸಿದರು. ಇದನ್ನೂ ಓದಿ: ನಾಯಿ ಬೊಗಳಿದ್ದಕ್ಕೆ ಮಾಲೀಕನಿಗೆ ಚಾಕು ಇರಿದ ದುಷ್ಕರ್ಮಿಗಳು

  • ನಿನ್ಗೆ ಹುಚ್ಚು ನಾಯಿ ಕಚ್ಚಿದ್ಯಾ? ರೈತರ ಹಣ ತಿಂದ್ರೆ ಪ್ಯಾರಾಲಿಸಿಸ್ ಬರುತ್ತೆ – ಬಿಜೆಪಿ ವಿರುದ್ಧ ಲಕ್ಷ್ಮಣ್‌ ಸವದಿ ಕೆಂಡಾಮಂಡಲ

    ನಿನ್ಗೆ ಹುಚ್ಚು ನಾಯಿ ಕಚ್ಚಿದ್ಯಾ? ರೈತರ ಹಣ ತಿಂದ್ರೆ ಪ್ಯಾರಾಲಿಸಿಸ್ ಬರುತ್ತೆ – ಬಿಜೆಪಿ ವಿರುದ್ಧ ಲಕ್ಷ್ಮಣ್‌ ಸವದಿ ಕೆಂಡಾಮಂಡಲ

    ಬೆಳಗಾವಿ: ರೈತರು (Farmers) ಶಿವಸ್ವರೂಪಿಗಳು, ದೇವರ ಸಮಾನ, ಅವರ ಹಣ ತಿಂದ್ರೆ ಪ್ಯಾರಾಲಿಸಿಸ್ (ಸ್ಟ್ರೋಕ್‌ ಅಥವಾ ಪಾರ್ಶ್ವವಾಯು) (Paralysis) ಬರುತ್ತೆ, ರೈತರ ಹಣ ತಿಂದ ಮಾಲೀಕರು ಉದ್ಧಾರ ಆಗಲ್ಲ. ಅವರಿಗೆ ಮೋಸ ಮಾಡಬೇಡಿ ಎಂದು ಅಥಣಿ ಶಾಸಕ ಲಕ್ಷ್ಮಣ್‌ ಸವದಿ (Laxman Savadi) ಸದನದಲ್ಲಿ ಮನವಿ ಮಾಡಿದರು.

    ಬೆಳಗಾವಿಯ (Belagavi) ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪದ ವೇಳೆ ಬಿಜೆಪಿ ಧರಣಿಯನ್ನು ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಖಂಡಿಸಿದರು. ಇದನ್ನೂ ಓದಿ: Article 370: ಶೇಕ್ ಅಬ್ದುಲ್ಲಾ ಖುಷಿಪಡಿಸಲು ಜಾರಿಗೆ ತಂದಿದ್ದನ್ನು ಮೋದಿ ಧೈರ್ಯದಿಂದ ರದ್ದು ಮಾಡಿದ್ರು: ಯತ್ನಾಳ್

    ಬಿಜೆಪಿ ಶಾಸಕರ (BJP MLAs) ವಿರುದ್ಧ ಕೆಂಡಾಮಂಡಲವಾದ ಲಕ್ಷ್ಮಣ್‌ ಸವದಿ ರೈತರ ಪರ ದನಿ ಎತ್ತಿದರು. ನಿಯಮ 69ರ ಅಡಿ ಕಬ್ಬು ಕಾರ್ಖಾನೆಗಳಲ್ಲಿ ಆಧುನಿಕ ತೂಕದ ಯಂತ್ರಗಳನ್ನು ಅಳವಡಿಸುವ ಬಗ್ಗೆ ಅಥಣಿ ಶಾಸಕ ಲಕ್ಷ್ಮಣ ಸವದಿ ಆರಂಭಿಸುತ್ತಿದ್ದಂತೆ ವಿಪಕ್ಷ ಶಾಸಕರು ಸದನದ ಬಾವಿಯಲ್ಲೇ ನಿಂತು ಧಿಕ್ಕಾರ ಕೂಗಿದರು. ವಿಪಕ್ಷ ನಾಯಕ ಆರ್. ಅಶೋಕ್ ಮತ್ತು ಸವದಿ ನಡುವೆ ಮಾತಿನ ಚಕಮಕಿಯೂ ನಡೆಯಿತು.

    ಆಗ ಬಿಜೆಪಿ ಶಾಸಕರ ವಿರುದ್ಧ ಕಂಡಾಮಂಡಲವಾದ ಸವದಿ, ನೀವು ಕಬ್ಬು ಬೆಳೆಗಾರರ ವಿರೋಧಿಗಳು, ಉತ್ತರ ಕರ್ನಾಟಕದ ವಿರೋಧಿಗಳು, ಹೊರಗೆ ಹೋದರೆ ಜನ ಕಬ್ಬು ತಗೊಂಡು ನಿಮಗೆ ಹೊಡೆಯುತ್ತಾರೆ ಎಂದು ಎಚ್ಚರಿಸಿದರು. ಇದನ್ನೂ ಓದಿ: `ದಳಪತಿ’ಗಳಿಗೆ ಸೆಡ್ಡು ಹೊಡೆದ ಸಿ.ಎಂ ಇಬ್ರಾಹಿಂ ಬಣ- ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾಣು ನೇಮಕ

    ಮತ್ತೊಮ್ಮೆ ಚರ್ಚೆ ಮುಂದುವರಿಸಿದಾಗಲೂ ವಿಪಕ್ಷ ಶಾಸಕರು ಧಿಕ್ಕಾರ ಕೂಗಿ ಚರ್ಚೆಚೆ ಅಡ್ಡಿಪಡಿಸಿದರು. ಆಗ ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ವಿರುದ್ಧ ಸಿಟ್ಟಿಗೆದ್ದ ಸವದಿ, ಶಿವಮೊಗ್ಗದವರು ಉತ್ತರ ಕರ್ನಾಟಕ ವಿರೋಧಿಗಳು ನಿನ್ನ ಯಾರು ಕೀಲಿ ಕೊಟ್ಟು ಇಲ್ಲಿಗೆ ಕೂಗಲು ಕಳಿಸಿದ್ದಾರೆ ಅಂತಾ ಗೊತ್ತಿದೆ, ಕೂಗು ಜೋರಾಗಿ ಕೂಗು ಎಂದು ಸಿಟ್ಟಿಗೆದ್ದರು. ಈ ಮಧ್ಯೆ ಚರ್ಚೆ ಮುಂದುವರಿಸುವಂತೆ ಸವದಿಗೆ ಸಭಾಧ್ಯಕ್ಷರು ಸೂಚಿಸಿದರು. ಇದಕ್ಕೆ ಈ ಹುಚ್ಚರ ಸಂತೆಯಲ್ಲಿ ಏನು ಮಾತಾಡೋದು? ಎಂದ ಸವದಿ, ನಿನಗೆ ಹುಚ್ಚು ನಾಯಿ ಕಚ್ಚಿದ್ಯಾ? ಹುಚ್ಚು ನಾಯಿ ಕಚ್ಚಿಸಿಕೊಂಡು ಬಂದಿದ್ಯಾ ಎಂದು ಬಿಜೆಪಿ ಶಾಸಕ ಚನ್ನಬಸಪ್ಪ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

    ರೈತರ ಹಣ ತಿಂದ್ರೆ ಪ್ಯಾರಾಲಿಸಿಸ್ (ಸ್ಟ್ರೋಕ್‌) ಆಗುತ್ತೆ, ರೈತರ ಹಣ ತಿಂದ ಮಾಲೀಕರು ಉದ್ಧಾರ ಆಗಲ್ಲ. ರೈತರು ದೇವರ ಸಮಾನ, ಶಿವಸ್ವರೂಪಿಗಳು. ಅವರಿಗೆ ಮೋಸ ಮಾಡಬೇಡಿ ಸಲಹೆ ನೀಡಿದರು.

  • ಮುಂದಿನ ವರ್ಷದಿಂದ್ಲೇ ಶಾಲಾ ಮಕ್ಕಳಿಗೆ ಉಚಿತ ʻಸೈಕಲ್‌ ಭಾಗ್ಯʼ – ಮಧು ಬಂಗಾರಪ್ಪ ಭರವಸೆ

    ಮುಂದಿನ ವರ್ಷದಿಂದ್ಲೇ ಶಾಲಾ ಮಕ್ಕಳಿಗೆ ಉಚಿತ ʻಸೈಕಲ್‌ ಭಾಗ್ಯʼ – ಮಧು ಬಂಗಾರಪ್ಪ ಭರವಸೆ

    ಬೆಂಗಳೂರು: ಮುಂದಿನ ವರ್ಷದಿಂದಲೇ ಶಾಲಾ ಮಕ್ಕಳಿಗೆ ಸೈಕಲ್ (Cycle) ವಿತರಣೆ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಭರವಸೆ ನೀಡಿದ್ದಾರೆ.

    ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ (Ravikumar) ಪ್ರಶ್ನೆಗೆ ಅವರು ಉತ್ತರಿಸಿದರು. ಶಾಲಾ ಮಕ್ಕಳಿಗೆ ಯಾಕೆ ಸೈಕಲ್ ಕೊಡ್ತಿಲ್ಲ? ಬಿಜೆಪಿ‌ ಸರ್ಕಾರ (BJP Government) ಸೈಕಲ್ ನಿಲ್ಲಿಸಿತ್ತು ಒಪ್ಪುತ್ತೇನೆ? ಅದಕ್ಕೆ ಜನ ನಮ್ಮನ್ನ ಇಲ್ಲಿಗೆ ಕೂರಿಸಿದ್ದಾರೆ. ಆದ್ರೆ ಈ ಸರ್ಕಾರಕ್ಕೆ ಸೈಕಲ್ ಕೊಡಲು ಹಣದ ಕೊರತೆ ಇದೆಯಾ? ಎಂದು ಪ್ರಶ್ನೆ ಮಾಡಿದರು. ಮಕ್ಕಳಿಗೆ ಶೂ, ಸಾಕ್ಸ್, ಸಮವಸ್ತ್ರಕ್ಕೆ 100 ರೂ. ಕೊಡ್ತಿದ್ದಾರೆ. ಖರ್ಚೀಫ್ ಗೆ ಕೊಡುವಷ್ಟು ಹಣ ಕೊಡ್ತಿದ್ದಾರೆ. ಇಷ್ಟು ಹಣ ಶೂ, ಸಾಕ್ಸ್, ಸಮವಸ್ತ್ರಕ್ಕೆ ಸಾಕಾಗುತ್ತದೆಯೇ? ಶೂ, ಸಾಕ್ಸ್ ಹಣ ಹೆಚ್ಚಳ ಮಾಡಬೇಕು ಅಂತ ಒತ್ತಾಯ ಮಾಡಿದರು. ಇದನ್ನೂ ಓದಿ: ನನ್ನ, ಸಿದ್ದರಾಮಯ್ಯ ನಡುವೆ ಅಸಮಾಧಾನವಿಲ್ಲ, ಅವರಿಗೆ ಸಿಎಂ ಆಗುವ ಅದೃಷ್ಟ ಇತ್ತು: ಬಿ.ಕೆ ಹರಿಪ್ರಸಾದ್

    ಇದಕ್ಕೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ, 2023-24ನೇ ಸಾಲಿನಲ್ಲಿ 55,43,828 ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ನೀಡಲಾಗಿದೆ. 45,45,749 ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂ, ಸಾಕ್ಸ್ ವಿತರಿಸಲಾಗಿದೆ. ವಿದ್ಯಾರ್ಥಿಗಳಿಗೆ ಸೈಕಲ್ ಹಿಂದಿನ ಸರ್ಕಾರ ಕೊಡೋದು ನಿಲ್ಲಿಸಿದೆ. ನಾನು ಈಗಾಗಲೇ ಸಿಎಂ ಜೊತೆಗೆ ಮಾತಾಡಿದ್ದೇನೆ. ಮುಂದಿನ ವರ್ಷದಿಂದಲೇ 8ನೇ ತರಗತಿ ಮಕ್ಕಳಿಗೆ ಸೈಕಲ್ ಕೊಡುವ ವ್ಯವಸ್ಥೆ ಮಾಡುತ್ತೇವೆ ಎಂದು ಭರವಸೆ ಕೊಟ್ಟರು. ಇದನ್ನೂ ಓದಿ: ಪ್ರಧಾನಿ ಮೋದಿಯಿಂದ ‘ವಿಕ್ಷಿತ್ ಭಾರತ್ @2047: ಯುವಜನತೆಯ ಧ್ವನಿ’ ಚಾಲನೆ: ಸಾಕ್ಷಿಯಾದ ರಾಜ್ಯಪಾಲರು

    1-8ನೇ ತರಗತಿ ಮಕ್ಕಳಿಗೆ ನೀಡಲಾಗುತ್ತಿದ್ದ ಮೊಟ್ಟೆ, ಚಿಕ್ಕಿಯನ್ನು ನಮ್ಮ ಸರ್ಕಾರ ಬಂದ್ಮೇಲೆ 9 ಮತ್ತು 10ನೇ ತರಗತಿಗೂ ವಿಸ್ತರಿಸಿದ್ದೇವೆ. ಕಳೆದ ಸರ್ಕಾರದ ಅವಧಿಯಲ್ಲಿ ಸಮವಸ್ತ್ರ ಖರೀದಿಯಲ್ಲಿ ಕ್ವಾಲಿಟಿ ಸಮಸ್ಯೆ ಆಗಿದೆ. ಹಾಗಾಗಿ ಒಪನ್ ಟೆಂಡರ್ ಮೂಲಕ ಸಮವಸ್ತ್ರ ಖರೀದಿ ಆಗುತ್ತದೆ. ಈ ವರ್ಷದ ಟೆಂಡರ್ ಪ್ರಕ್ರಿಯೆ ಮುಗಿದು ಹೋಗಿದೆ. ಮುಂದಿನ ವರ್ಷದಿಂದ ಉತ್ತಮ ಕ್ವಾಲಿಟಿ ಸಮವಸ್ತ್ರ ನೀಡಲು ಕ್ರಮವಹಿಸುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಕೈ ಜಿಲ್ಲಾಧ್ಯಕ್ಷನ ಮೇಲೆ 50 ಲಕ್ಷ ವಂಚನೆ ಆರೋಪ- ನ್ಯಾಯ ಸಿಗದಿದ್ರೆ ಆತ್ಮಹತ್ಯೆಯ ಎಚ್ಚರಿಕೆ

  • ಬೆಳಗಾವಿ ಅಧಿವೇಶನದ ಬಳಿ ಪ್ರತಿಭಟನೆಗೆ ತೆರಳುತ್ತಿದ್ದ ಬಸ್ ಅಪಘಾತ – 17 ಮಂದಿಗೆ ಗಾಯ

    ಬೆಳಗಾವಿ ಅಧಿವೇಶನದ ಬಳಿ ಪ್ರತಿಭಟನೆಗೆ ತೆರಳುತ್ತಿದ್ದ ಬಸ್ ಅಪಘಾತ – 17 ಮಂದಿಗೆ ಗಾಯ

    ದಾವಣಗೆರೆ: ದಾವಣಗೆರೆಯ (Davangere) ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ (Accident) ಸಂಭವಿಸಿದೆ. ಬೆಳಗಾವಿ ಅಧಿವೇಶನದ (Belagavi Session) ಬಳಿ ಪ್ರತಿಭಟನೆಗೆ (Protest)  ತೆರಳುತ್ತಿದ್ದ ಬಸ್ (Bus) ಲಾರಿಗೆ ಡಿಕ್ಕಿ ಹೊಡೆದಿದೆ.

    ಬಸ್‌ನಲ್ಲಿ ಬೆಂಗಳೂರು, ಚಿಕ್ಕಬಳ್ಳಾಪುರ, ಚಿಂತಾಮಣಿ ಮಾದಿಗ ದಂಡೋರ ಜಾಗೃತಿ ಸಮಿತಿ ಪದಾಧಿಕಾರಿಗಳು ಇದ್ದರು. ಸದಾಶಿವ ಆಯೋಗ ಜಾರಿಗೆ ಆಗ್ರಹಿಸಿ ಹೋರಾಟಗಾರರು ಪ್ರತಿಭಟನೆಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು – ರೈಲು ಸೇವೆಯಲ್ಲಿ ವ್ಯತ್ಯಯ

    ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ 17 ಮಂದಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆ ಉತ್ತರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಪ್ರೀತಿಸುತ್ತಿದ್ದ ಯುವತಿಯೊಂದಿಗೆ ಯುವಕ ಪರಾರಿಯಾಗಿದ್ದಕ್ಕೆ ತಾಯಿಯ ವಿವಸ್ತ್ರಗೊಳಿಸಿ ಹಲ್ಲೆ

  • ಸರ್ಕಾರದಲ್ಲಿ ಪೇ-ಸಿಎಂ, ಪೇ-ಡಿಸಿಎಂ ಹೆಸ್ರಲ್ಲಿ ಕಮಿಷನ್‌ ಹಗರಣ – ಸದನದಲ್ಲಿ ಯತ್ನಾಳ್‌ ಬಾಂಬ್‌

    ಸರ್ಕಾರದಲ್ಲಿ ಪೇ-ಸಿಎಂ, ಪೇ-ಡಿಸಿಎಂ ಹೆಸ್ರಲ್ಲಿ ಕಮಿಷನ್‌ ಹಗರಣ – ಸದನದಲ್ಲಿ ಯತ್ನಾಳ್‌ ಬಾಂಬ್‌

    ಬೆಳಗಾವಿ: ರಾಜ್ಯ ಸರ್ಕಾರದಲ್ಲಿ ಪೇ-ಸಿಎಂ, ಪೇ-ಡಿಸಿಎಂ (Pay DCM) ಹೆಸರಿನಲ್ಲಿ ಕಮಿಷನ್‌ ಹಗರಣ ನಡೀತಿದೆ. ಕಮಿಷನ್ ಪಡೆದು ಆಂಧ್ರದ ಗುತ್ತಿಗರದಾರರಿಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಸರ್ಕಾರದ ವಿರುದ್ಧ ಮತ್ತೆ ಕಮಿಷನ್‌ ಬಾಂಬ್‌ ಸಿಡಿಸಿದ್ದಾರೆ.

    ವಿಧಾನಸಭೆ ಕಲಾಪ (Belagavi Session) ಶೂನ್ಯವೇಳೆಯಲ್ಲಿ ಮಾತನಾಡಿದ ಶಾಸಕ ಯತ್ನಾಳ್‌, ಟೆಂಡರ್/ಕಾಮಗಾರಿ ಬಾಕಿ ಬಿಲ್‌ಗಳಿಗೆ ಆಗ್ರಹಿಸಿದ್ದು, ಈ ವೇಳೆ ಕಮೀಷನ್ ಆರೋಪದ (Corruption Allegation) ಬಗ್ಗೆ ಪ್ರಸ್ತಾಪಿಸಿದ್ದಾರೆ. ಇದನ್ನೂ ಓದಿ: ಸಿಎಂ ತವರಲ್ಲೇ ಇಂದಿರಾ ಕ್ಯಾಂಟಿನ್ ನಡೆಸಲು ನಿರಾಸಕ್ತಿ; ಬಯಲಾಯ್ತು ಕಳ್ಳ ಲೆಕ್ಕ – ʻಪಬ್ಲಿಕ್ʼ ವರದಿಯಿಂದ ಎಚ್ಚೆತ್ತ ಪಾಲಿಕೆ

    ಸಣ್ಣ ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಇಲಾಖೆಗಳಲ್ಲಿ ಸರ್ಕಾರ ಕಾಮಗಾರಿಗಳಿಗೆ ಅಗತ್ಯ ಹಣ ಬಿಡುಗಡೆ ಮಾಡಿಲ್ಲ. ಗುತ್ತಿಗೆದಾರರಿಗೆ ಸರ್ಕಾರ ಬಾಕಿ ಹಣ ಬಿಡುಗಡೆ ಮಾಡಿಲ್ಲ, ಗುತ್ತಿಗೆದಾರರು ಸಂಕಷ್ಟದಲ್ಲಿದ್ದಾರೆ. ಅನ್ಯ ರಾಜ್ಯಗಳ ಗುತ್ತಿಗೆದಾರರಿಗೆ ಸರ್ಕಾರ ಹೆಚ್ಚು ಹಣ ಬಿಡುಗಡೆ ಮಾಡಿದೆ. ಈ ಮೂಲಕ ಸರ್ಕಾರದಲ್ಲಿ ಪೇ-ಸಿಎಂ, ಪೇ-ಡಿಸಿಎಂ ಹೆಸರಿನಲ್ಲಿ ಕಮಿಷನ್‌ ಹಗರಣ ನಡೀತಿದೆ. ರಾಜ್ಯದ ಗುತ್ತಿಗೆದಾರರಿಗೆ ಅನ್ಯಾಯ ಮಾಡಲಾಗಿದೆ. ಕಮಿಷನ್ ಪಡೆದು ಆಂಧ್ರದ ಗುತ್ತಿಗರದಾರರಿಗೆ ಹಣ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ದೊಡ್ಡ ಹಗರಣ ನಡೆದಿದೆ, ಸರ್ಕಾರ ಇದಕ್ಕೆ ಸ್ಪಷ್ಟನೆ ಕೊಡಬೇಕು ಎಂದು ಯತ್ನಾಳ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

    ಯತ್ನಾಳ್‌ ಆರೋಪಗಳಿಗೆ ಕಾಂಗ್ರೆಸ್‌ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ನಂತರ ಕೆಲಕಾಲ ಸದನದಲ್ಲಿ ಗದ್ದಲ, ಕೋಲಾಹಲ ನಡೆಯಿತು. ಬಳಿಕ ಸ್ಫೀಕರ್‌ ಗದ್ದಲವನ್ನು ಸಹಜ ಸ್ಥಿತಿಗೆ ತಂದರು. ಇದನ್ನೂ ಓದಿ: ಕಾರು-ಬಸ್‌ ನಡುವೆ ಮುಖಾಮುಖಿ ಡಿಕ್ಕಿ – ಶಿರಸಿಯಲ್ಲಿ ಭೀಕರ ಅಪಘಾತಕ್ಕೆ ಐವರು ಬಲಿ

    ಅಲ್ಲದೇ ವಿಜಯಪುರದಲ್ಲಿ ಕುಡಿಯುವ ನೀರಿಗೆ ಬಹಳ ತೊಂದರೆಯಾಗುತ್ತಿದೆ. 15 ದಿನಕ್ಕೊಮ್ಮೆ ನೀರು ಬರುತ್ತಿದೆ. ಬೇಸಿಗೆಯಲ್ಲಿ ಈ ಸಮಸ್ಯೆ ಇನ್ನಷ್ಟು ಹೆಚ್ಚಾಗಲಿದೆ. ಈ ಹಿಂದಿನ ಬಿಜೆಪಿ ಸರ್ಕಾರ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು 52 ಕೋಟಿ ರೂ. ಅಂದಾಜು ವೆಚ್ಚದ ಪಟ್ಟಿ ತಯಾರಿಸಿ ಪ್ರಸ್ತಾವನೆ ಸಲ್ಲಿಸಿತ್ತು. ವಿಜಯನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಅನುದಾನ ಬಿಡುಗಡೆ ಮಾಡಿ ಸಮಸ್ಯೆಗೆ ಪರಿಹಾರ ಕೊಡಬೇಕು ಮನವಿ ಮಾಡಿದರು.

  • ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ – ತಿದ್ದುಪಡಿ ಮಸೂದೆ ಮಂಡನೆ :  ಏನು ಬದಲಾವಣೆ?

    ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ – ತಿದ್ದುಪಡಿ ಮಸೂದೆ ಮಂಡನೆ : ಏನು ಬದಲಾವಣೆ?

    ಬೆಳಗಾವಿ: ವೈದ್ಯಕೀಯ ಕೋರ್ಸ್ (Medical Course) ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಕಡ್ಡಾಯ ಗ್ರಾಮೀಣ ಸೇವೆಗೆ (Compulsory Rural Service) ವಿನಾಯಿತಿ ನೀಡಲು ರಾಜ್ಯ ಸರ್ಕಾರ (Karnataka Government) ಮುಂದಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ವೈದ್ಯಕೀಯ ಕಡ್ಡಾಯ ಗ್ರಾಮೀಣ ಸೇವಾ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ವಿಧಾನ ಸಭೆಯಲ್ಲಿ ತಿದ್ದುಪಡಿ ಮಸೂದೆ ಮಂಡಿಸಿದ್ದಾರೆ.‌

    ಮಸೂದೆಯಲ್ಲಿ ‘ಒಂದು ವರ್ಷದ ಕಡ್ಡಾಯ ಗ್ರಾಮೀಣ ಸೇವೆ’ ಎಂಬ ಪದಗಳ ಮೊದಲಿಗೆ ‘ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಲಾದಂತೆ ಅಸ್ತಿತ್ವದಲ್ಲಿರುವ ಖಾಲಿ ಹುದ್ದೆಗಳಲ್ಲಿ‘ ಎಂಬ ಪದಗಳನ್ನ ಸೇರಿಸುವ ಮೂಲಕ ತಿದ್ದುಪಡಿ ತರಲಾಗುತ್ತಿದೆ. ಈ ಮೂಲಕ ಖಾಲಿ ಇರುವ ಹುದ್ದೆಗಳಿಗೆ ಮಾತ್ರ ವೈದ್ಯರ ಕಡ್ಡಾಯ ಸೇವೆಯನ್ನ ಬಳಸಿಕೊಳ್ಳಲು ಆರೋಗ್ಯ ಇಲಾಖೆ ಮುಂದಾಗಿದೆ.

     

    ಈ ಹಿಂದೆ ವೈದ್ಯರ ಕಡ್ಡಾಯ ಗ್ರಾಮೀಣ ಸೇವೆ ಕಾಯ್ದೆ ಜಾರಿಗೆ ತಂದ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇತ್ತು. ಹೀಗಾಗಿ ವೈದ್ಯಕೀಯ ಕೋರ್ಸ್ ಪೂರ್ಣಗೊಳಿಸಿದವರು, ಒಂದು ವರ್ಷ ಕಡ್ಡಾಯವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಿ ಸರ್ಟಿಫಿಕೇಟ್ ಪಡೆಯಬೇಕು ಎಂಬ ನೀತಿಯನ್ನ ಸರ್ಕಾರ ಅನುಸರಿಸಿತ್ತು. ಆದರೆ ಇತ್ತೀಚಿಗೆ ವೈದ್ಯಕೀಯ ಸ್ನಾತಕೋತ್ತರ ಹಾಗೂ ಎಂಬಿಬಿಎಸ್‌ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉತ್ತೀರ್ಣರಾಗಿ ಹೊರಬರುತ್ತಿರುವುದರಿಂದ, ಖಾಲಿ ಇರುವ ಹುದ್ದೆಗಳಿಗೆ ಮಾತ್ರ ವೈದ್ಯರ ಕಡ್ಡಾಯ ಒಂದು ವರ್ಷದ ಸೇವೆ ಬಳಸಿಕೊಳ್ಳಲು ನಿರ್ಧರಿಸಲಾಗಿದೆ.

    ಕಡ್ಡಾಯ ಸೇವೆಯಡಿ ಕಾರ್ಯನಿರ್ವಹಿಸುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸ್ಟೈಫಂಡ್‌ ರಾಜ್ಯ ಸರ್ಕಾರವೇ ನಿರ್ಧರಿಸುವ ಅಧಿಕಾರ ಹೊಂದಿದೆ. ಅಲ್ಲದೇ ಕೇಂದ್ರ ಅಥವಾ ರಾಜ್ಯ ಸರ್ಕಾರಿ ಸೇವೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಡ್ಡಾಯ ಗ್ರಾಮೀಣ ಸೇವೆಯಿಂದ ವಿನಾಯಿತಿ ನೀಡಲು ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಒಂದು ವರ್ಷದ ಕಡ್ಡಾಯ ಗ್ರಾಮೀಣ ಸೇವೆಗೆ 3,000ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಆದರೆ ಖಾಲಿ ಹುದ್ದೆಗಳ ಸಂಖ್ಯೆ 1,900 ಇದ್ದು, ತಿದ್ದುಪಡಿ ಮಸೂದೆಯ ಮೂಲಕ ಕಡ್ಡಾಯ ಸೇವೆ ಖಾಲಿ ಹುದ್ದೆಗಳಿಗೆ ಮಾತ್ರ ಸೀಮಿತಗೊಳ್ಳಲಿದೆ.

     

  • ಹುಬ್ಬಳ್ಳಿಯಲ್ಲಿಂದು ಮುಸ್ಲಿಂ ಧರ್ಮಗುರುಗಳ ಬೃಹತ್ ಸಮಾವೇಶ; ಸಿದ್ದರಾಮಯ್ಯರಿಂದ ಉದ್ಭಾಟನೆ

    ಹುಬ್ಬಳ್ಳಿಯಲ್ಲಿಂದು ಮುಸ್ಲಿಂ ಧರ್ಮಗುರುಗಳ ಬೃಹತ್ ಸಮಾವೇಶ; ಸಿದ್ದರಾಮಯ್ಯರಿಂದ ಉದ್ಭಾಟನೆ

    ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿಂದು ಮುಸ್ಲಿಂ ಧರ್ಮ ಗುರುಗಳ (Muslim Religious Leader) ಸಮಾವೇಶ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸಮಾವೇಶದ ಉದ್ಘಾಟನೆ ನೆರವೇರಿಸಲಿದ್ದಾರೆ.

    ರಾಜ್ಯದಿಂದ ಮಾತ್ರವಲ್ಲದೇ ಮಹಾರಾಷ್ಟ, ತಮಿಳನಾಡು, ತೆಲಂಗಾಣ (Telangana), ಆಂಧ್ರಪ್ರದೇಶ ಭಾಗಗಳಿಂದ 200ಕ್ಕೂ ಅಧಿಕ ಮುಸ್ಲಿಂ ಧರ್ಮಗುರುಗಳು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಮುಖ್ಯಮಂತ್ರಿಗಳು ಸಮಾವೇಶ ಉದ್ಘಾಟನೆ ನೆರವೇರಿಸಲಿದ್ದು, ಸ್ಥಳೀಯ ಸಚಿವರು ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: ಲೋಕ ಸಮರದಲ್ಲಿ ಬಿಜೆಪಿ-ಜೆಡಿಎಸ್ ಒಂದಾಗಿ ಕಾಂಗ್ರೆಸ್ಸನ್ನು ಧೂಳಿಪಟ ಮಾಡ್ತೇವೆ: ವಿಜಯೇಂದ್ರ

    ಹುಬ್ಬಳ್ಳಿಯ ಹೊರವಲಯದ ಭಾಷಾಪೀರ್ ದರ್ಗಾ ಬಳಿ ಸಮಾವೇಶ ನಡೆಯಲಿದೆ. ದೇಶದಲ್ಲಿ ಧರ್ಮದ ವಿಚಾರದಲ್ಲಿ ಹೆಚ್ಚುತ್ತಿರುವ ವಿವಾದಗಳು, ಜನಾಂಗಿಯ ವೈಷ್ಯಮ್ಯದ ಕುರಿತಾಗಿ ಚರ್ಚೆಗಳು ನಡೆಯಲಿದ್ದು, ಶಾಂತಿ-ಸೌಹಾರ್ದತೆ ನೆಲೆಸುವ ನಿರ್ಣಯಗಳನ್ನು ಸಮಾವೇಶದಲ್ಲಿ ಕೈಗೊಳ್ಳಲಾಗುತ್ತದೆ ಎಂದು ಸಮಾವೇಶ ಆಯೋಜಕರು ತಿಳಿಸಿದ್ದಾರೆ.

    ಸದ್ಯ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ (Belagavi Session) ಪಾಲ್ಗೊಂಡಿದ್ದಾರೆ. ಇದನ್ನೂ ಓದಿ: ಗ್ಯಾರಂಟಿ ವಿಫಲವಾಗಿಲ್ಲ, ನಮ್ಮ ತಪ್ಪುಗಳನ್ನು ಸರಿಪಡಿಸಿಕೊಳ್ಳುತ್ತೇವೆ – ಅಧಿವೇಶನಕ್ಕೂ ಮುನ್ನ ಸಿಎಂ ರಿಯಾಕ್ಷನ್‌

  • ಪೊಲೀಸರ ಸರ್ಪಗಾವಲಿನಲ್ಲಿ ಬೆಳಗಾವಿ ಅಧಿವೇಶನ – ಭದ್ರತೆಗೆ 5,000 ಸಿಬ್ಬಂದಿ ನಿಯೋಜನೆ

    ಪೊಲೀಸರ ಸರ್ಪಗಾವಲಿನಲ್ಲಿ ಬೆಳಗಾವಿ ಅಧಿವೇಶನ – ಭದ್ರತೆಗೆ 5,000 ಸಿಬ್ಬಂದಿ ನಿಯೋಜನೆ

    ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ (Suvarna Soudha) ಚಳಿಗಾಲದ ಅಧಿವೇಶನ (Belagavi Session) ಸೋಮವಾರ (ಡಿ.4)ದಿಂದ ಆರಂಭವಾಗುತ್ತಿದ್ದು, ಬಿಗಿ ಭದ್ರತೆಗೆ 5 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

    ಅಧಿವೇಶನದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬೆಳಗಾವಿ ಆಗಮಿಸುತ್ತಿದ್ದಂತೆ ಮೇಯರ್ ಶೋಭಾ ಸೋಮನ್ನಾಚೆ, ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕ ಆಸೀಫ್ ಸೇಠ್ ಸೇರಿ ಹಲವರು ಸ್ವಾಗತ ಕೋರಿದ್ದಾರೆ. ಇದನ್ನೂ ಓದಿ: Cyclone Michaung- ನೆಲ್ಲೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಬಾಲಕ ದುರ್ಮರಣ

    ಬೆಳಗಾವಿ ಜಿಲ್ಲೆಯಲ್ಲಿ ಸಾಲು ಸಾಲು ಪ್ರತಿಭಟನೆಗಳು ಹಮ್ಮಿಕೊಂಡಿರುವುದರಿಂದ ಭದ್ರತೆಗೆ 5 ಸಾವಿರ ಪೊಲೀಸ್ ಸಿಬ್ಬಂದಿಯನ್ನು (Belagavi Police) ನಿಯೋಜಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಎಸ್.ಎನ್ ಸಿದ್ದರಾಮಪ್ಪ ನೇತೃತ್ವದಲ್ಲಿ ಭದ್ರತಾ ತಂಡವನ್ನು ನಿಯೋಜಿಸಲಾಗಿದೆ.

    ಒಟ್ಟು 9 IPS ದರ್ಜೆ, 12 ಹೆಚ್ಚುವರಿ SP, 37 DYSP, 92 PI, 219 ಪಿಎಸ್‌ಐ, 366 ಎಎಸ್‌ಐ, 3 ಸಾವಿರ ಪೊಲೀಸ್ ಕಾನ್ಸ್ಟೇಬಲ್, 200 ಹೋಮ್ ಗಾರ್ಡ್ಸ್, 35 ಕೆಎಸ್‌ಆರ್‌ಪಿ ತುಕಡಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ. 2 ಸಾವಿರ ಪೊಲೀಸ್ ಸಿಬ್ಬಂದಿ ವಾಸ್ತವ್ಯಕ್ಕೆ ಸುವರ್ಣ ಸೌಧ ಸಮೀಪದಲ್ಲೇ ಜರ್ಮನ್ ಟೆಂಟ್ ನಿರ್ಮಾಣ ಮಾಡಲಾಗಿದ್ದು, ಕಾಟ್, ಬೆಡ್, ತಲೆದಿಂಬು, ಚಾರ್ಜಿಂಗ್ ಪಾಯಿಂಟ್, ಬಿಸಿ ನೀರು ವ್ಯವಸ್ಥೆಗಳನ್ನೂ ಕಲ್ಪಿಸಲಾಗಿದೆ.

    ಇನ್ನೂ ಚಳಿಗಾಲದ ಅಧಿವೇಶನಕ್ಕೆ ಪ್ರತಿಯಾಗಿ ಅನುಮತಿ ನಿರಾಕರಣೆ ನಡುವೆಯೂ ಮಹಾಮೇಳಾವ್ ನಡೆಸಲು ಉದ್ದೇಶಿಸಿದ್ದ ಬೆಳಗಾವಿ ನಗರ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಮಹಾಮೇಳಾವ್ ನಡೆಸಲು ನಿಗಧಿಯಾಗಿದ್ದ ಲೇಲೆ ಮೈದಾನದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

    ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರದಿಂದ 18 ಕಿಮೀ ದೂರದಲ್ಲಿರುವ ಮಹಾರಾಷ್ಟ್ರದ ಶಿನ್ನೋಳ್ಳಿ ಗ್ರಾಮದಲ್ಲಿ ಮಹಾಮೇಳಾವ್ ನಡೆಸಲು ಎಂಇಎಸ್ ನಿರ್ಧರಿಸಿದೆ. ಮಹಾರಾಷ್ಟ್ರದ ಶಿವಸೇನೆ, ಎನ್‌ಸಿಪಿ ಮುಖಂಡರು ಮಹಾಮೇಳಾವ್‌ದಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಸರ್ಕಾರಿ ಸಂಸ್ಥೆಗಳಿಂದಲೇ ಸಾವಿರಾರು ಕೋಟಿ ಕರೆಂಟ್ ಬಿಲ್ ಬಾಕಿ – BBMP ಮೇಲೆ ಬೆಸ್ಕಾಂ ಅಧಿಕಾರಿಗಳು ಗರಂ