Tag: belagavi session

  • ಇಂದಿನಿಂದ ಬೆಳಗಾವಿ ಅಧಿವೇಶನ – ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ BJP-JDS ಸಜ್ಜು

    ಇಂದಿನಿಂದ ಬೆಳಗಾವಿ ಅಧಿವೇಶನ – ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ BJP-JDS ಸಜ್ಜು

    ಬೆಂಗಳೂರು: ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿದ್ದ ಮೇಲೆ ಸಹಜವಾಗಿಯೇ ಬಿಜೆಪಿಗೆ ಖುಷಿ ತಂದಿದೆ. ಇಂದಿನಿಂದ ಆರಂಭವಾಗಲಿರುವ ಸಂಸತ್ ಅಧಿವೇಶನದ ಮೇಲೆಯೂ ಇದು ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದೆ.

    ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜಾಗಿವೆ. ಉತ್ತರ ಭಾರತದ ಗೆಲುವಿನಿಂದ ಫುಲ್ ಜೋಷ್‌ನಲ್ಲಿರುವ ಬಿಜೆಪಿ, ವಿಪಕ್ಷಗಳಿಗೆ ಸಮರ್ಥವಾಗಿ ಕೌಂಟರ್ ನೀಡಲು ಸಜ್ಜಾಗಿದೆ. ಇದನ್ನೂ ಓದಿ: ಮಿಜೋರಾಂ ಮತ ಎಣಿಕೆಗೆ ಕೌಂಟ್‌ ಡೌನ್‌ – ಯಾರಿಗೆ ಸಿಗುತ್ತೆ ಮ್ಯಾಜಿಕ್ ನಂಬರ್?

    ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್.ಅಶೋಕ್, ಹೆಚ್.ಡಿ ಕುಮಾರಸ್ವಾಮಿ, ವಿಜಯೇಂದ್ರರಿಂದ ಜೋಡಿ ಅಸ್ತ್ರಗಳು ಮುಗಿಬೀಳಲು ಸಜ್ಜಾಗಿದ್ದಾರೆ. ಸರ್ಕಾರದ ವೈಫಲ್ಯಗಳ ಕುರಿತು ಅಧಿವೇಶನದಲ್ಲಿ ಜಂಟಿ ಹೋರಾಟ ನಡೆಯುವುದು ಖಚಿತವಾಗಿದೆ. ಅಧಿವೇಶನದ ಮೊದಲ ದಿನದಿಂದಲೇ ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿಸಲು ದೋಸ್ತಿಗಳ ಪ್ಲ್ಯಾನ್ ನಡೆದಿದೆ. ಬಿಜೆಪಿ-ಜೆಡಿಎಸ್ ಜಂಟಿ ಅಸ್ತ್ರಕ್ಕೆ ಕಾಂಗ್ರೆಸ್ ಕೌಂಟರ್ ಏನು ಅನ್ನೋದು ಕುತೂಹಲ ಮೂಡಿಸಿದೆ. ಇದನ್ನೂ ಓದಿ: 3 ರಾಜ್ಯಗಳಲ್ಲಿ ಮೋದಿ ಪಡೆಗೆ ಭರ್ಜರಿ ಗೆಲುವು – ಗ್ಯಾರಂಟಿಯಿಂದಲೇ ತೆಲಂಗಾಣದಲ್ಲಿ ಗೆದ್ದ ಕಾಂಗ್ರೆಸ್

    ದೋಸ್ತಿಗಳ ಹೋರಾಟದ ಅಸ್ತ್ರ ಏನು?
    * ಸಿದ್ದರಾಮಯ್ಯ ಸರ್ಕಾರದ 60 ವೈಫಲ್ಯಗಳನ್ನ ಉಲ್ಲೇಖಿಸಿ ಹೋರಾಟ
    * ಬಿಜೆಪಿ ಹೋರಾಟಕ್ಕೆ ಜೆಡಿಎಸ್ ಕೈ ಜೋಡಿಸಿ ಜಂಟಿ ಹೋರಾಟ ನಡೆಸುವುದು.
    * ಬರ ಅಧ್ಯಯನ ಮಾಡಿರೋ ಬಿಜೆಪಿ, ಜೆಡಿಎಸ್ ನಿಂದ ಸರ್ಕಾರದ ವಿರುದ್ಧ ಬರ ಅಸ್ತ್ರ ಪ್ರಯೋಗ.
    * ಬರ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದೆ ಅಂತ ಸರ್ಕಾರದ ವಿರುದ್ಧ ಹೋರಾಟ.
    * ಬರ ಪರಿಹಾರ ಕೊಡದೇ ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡುತ್ತಿದೆ ಎಂಬ ಆರೋಪ
    * ಡಿಕೆ ಶಿವಕುಮಾರ್ ಸಿಬಿಐ ಕೇಸ್ ವಾಪಸ್ ಪಡೆದಿರೋ ಬಗ್ಗೆ ಚರ್ಚೆ
    * ಗೃಹಜ್ಯೋತಿ ಯೋಜನೆ ಕೊಟ್ಟು ಲೋಡ್ ಶೆಡ್ಡಿಂಗ್ ಮಾಡ್ತಿರೋ ಅಂಶ ಮುದ್ದಿಟ್ಟುಕೊಂಡು ಹೋರಾಟ.
    * ಗ್ಯಾರಂಟಿಗಳ ಅನುಷ್ಠಾನ ಸರಿಯಾಗಿ ಆಗಿಲ್ಲ ಎಂಬ ಅಂಶ
    * ವರ್ಗಾವಣೆ ದಂಧೆಯಲ್ಲಿ ಸರ್ಕಾರ ಮುಳುಗಿದೆ ಅಂತ ರಾಜಕೀಯ ಅಸ್ತ್ರ.
    * ಜಾತಿಗಣತಿ ವಿವಾದ ಕುರಿತು ಸರ್ಕಾರದ ವಿರುದ್ಧ ಹೋರಾಟ.
    * ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ಮಾಡಿರೋದಕ್ಕೆ ವಿರೋಧ
    * ನೀರಾವರಿ ಯೋಜನೆಗಳು ನಿರ್ಲಕ್ಷ್ಯ, ಗ್ಯಾರಂಟಿ ಯೋಜನೆ ಬಿಟ್ಟು ಯಾವುದೇ ಕೆಲಸ ಆಗ್ತಿಲ್ಲ ಅಂತ ಸರ್ಕಾರದ ವಿರುದ್ಧ ಹೋರಾಟ.
    * ತೆಲಂಗಾಣ ಚುನಾವಣೆ ಸ್ಪೀಕರ್ ಸ್ಥಾನದ ಬಗ್ಗೆ ಸಚಿವ ಜಮೀರ್ ಆಡಿರೋ ವಿವಾದಾತ್ಮಕ ವಿಷಯ ಕುರಿತು ಹಕ್ಕುಚ್ಯುತಿ ಮಂಡನೆಗೆ ಬಿಜೆಪಿ ನಿರ್ಧಾರ.

  • ವಿಪಕ್ಷ ನಾಯಕ ಸ್ಥಾನಕ್ಕೆ ಆಕಾಂಕ್ಷಿಯಾಗಿರಲಿಲ್ಲ, ಹೈಕಮಾಂಡ್‌ಗೆ ತಿಳಿಸಿದ್ದೆ: ಬೊಮ್ಮಾಯಿ

    ವಿಪಕ್ಷ ನಾಯಕ ಸ್ಥಾನಕ್ಕೆ ಆಕಾಂಕ್ಷಿಯಾಗಿರಲಿಲ್ಲ, ಹೈಕಮಾಂಡ್‌ಗೆ ತಿಳಿಸಿದ್ದೆ: ಬೊಮ್ಮಾಯಿ

    ಬೆಂಗಳೂರು: ನಾನು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಆಕಾಂಕ್ಷಿಯಾಗಿರಲಿಲ್ಲ. ಈ ವಿಚಾರವನ್ನು ನಾನು ಹೈಕಮಾಂಡ್‌ಗೆ ಹೇಳಿದ್ದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

    ತೆರೆದ ಹೃದಯ ಶಸ್ತ್ರ ಚಿಕಿತ್ಸೆಯ (Open Heart Surgery) ಬಳಿಕ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನಗೆ ಓಪನ್ ಹಾರ್ಟ್ ಸರ್ಜರಿ ಆಗಿತ್ತು. ಈಗ ನಾನು ಗುಣಮುಖನಾಗಿದ್ದು, ಸಾರ್ವಜನಿಕರನ್ನು ಭೇಟಿ ಆಗುತ್ತೇನೆ. ವೈದ್ಯರ ಸಲಹೆ ಮೇರೆಗೆ ನಾನು ಬೆಳಗಾವಿ ಅಧಿವೇಶನದಲ್ಲಿ (Belagavi Session) ಮೊದಲ ವಾರ ಹಾಜರಾಗುವುದಿಲ್ಲ. ಎರಡನೇ ವಾರದಲ್ಲಿ ಭಾಗವಹಿಸಲು ಪ್ರಯತ್ನಿಸುತ್ತೇನೆ ಎಂದರು.   ಇದನ್ನೂ ಓದಿ: ಇನ್ಮುಂದೆ ರಾಜ್ಯದ ಪರ್ಮಿಟ್ ವಾಹನಗಳಿಗೆ ಪ್ಯಾನಿಕ್ ಬಟನ್, GPS ಅಳವಡಿಕೆ ಕಡ್ಡಾಯ

     

     ರಾಷ್ಟ್ರ ರಾಜಕಾರಣಕ್ಕೆ ಹೋಗುವ ಯೋಚನೆ ಮಾಡಿಲ್ಲ. ರಾಜ್ಯ ರಾಜಕಾರಣದಲ್ಲೇ ಸಾಕಷ್ಟು ಕೆಲಸ ಮಾಡಬೇಕಿದೆ. ವಿರೋಧ ಪಕ್ಷದಲ್ಲಿ ಇದ್ದು ಕೆಲಸ ಮಾಡಿ ಗೊತ್ತಿದೆ ಎಂದು ತಿಳಿಸಿದರು.

    ನಮ್ಮ ಮೇಲೆ 40% ಸರ್ಕಾರ ಎಂದು ಆರೋಪಿಸಿದ್ದರು. ಇವರದ್ದು 50% ಭ್ರಷ್ಟಾಚಾರ ಸರ್ಕಾರ. ಬಿಬಿಎಂಪಿಯಲ್ಲಿ (BBMP) ಭ್ರಷ್ಟಾಚಾರ (Corruption) ನಡೆಯುತ್ತಿದ್ದು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಆಯೋಗದ ಮುಂದೆ ಗುತ್ತಿಗೆದಾರರು ದಾಖಲೆ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಸರ್ಕಾರ ಆ ದಾಖಲೆಗಳನ್ನು ಬಹಿರಂಗಪಡಿಸಲಿ ಎಂದು ಸವಾಲ್‌ ಹಾಕಿದರು.

    ಬಸನಗೌಡ ಪಾಟೀಲ್ ಯತ್ನಾಳ್ ಮೊದಲಿನಿಂದಲೂ ಹಾಗೆಯೇ ಹೇಳುತ್ತಿದ್ದಾರೆ. ಅವರು ಅವರ ಅಭಿಪ್ರಾಯವನ್ನು ಹೇಳಿದ್ದಾರೆ. ಸದನದ ಒಳಗಡೆ ಒಗ್ಗಟ್ಟು ಇರುತ್ತದೆ. ಜನ ಸಾಮಾನ್ಯರ ವಿಷಯಗಳು ಇವೆ. ಲೋಕಸಭೆ ಚುನಾವಣೆ ಎದುರಿಸಲು ಒಗ್ಗಟ್ಟಾಗಿ ಹೋಗುತ್ತೇವೆ. , ರಾಜಕಾರಣದಲ್ಲಿ ಕೆಲವು ಸಲ ಅಂದುಕೊಂಡಂತೆ ಆಗುವುದಿಲ್ಲ ಎಂದು ಹೇಳಿದರು.

     

  • ಬೆಳಗಾವಿ ಅಧಿವೇಶನದಲ್ಲಿ ಸದಾಶಿವ ಆಯೋಗ ವರದಿ ಜಾರಿಗೆ ಸಿಎಂಗೆ ಮನವಿ: ಪರಮೇಶ್ವರ್

    ಬೆಳಗಾವಿ ಅಧಿವೇಶನದಲ್ಲಿ ಸದಾಶಿವ ಆಯೋಗ ವರದಿ ಜಾರಿಗೆ ಸಿಎಂಗೆ ಮನವಿ: ಪರಮೇಶ್ವರ್

    ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ (Belagavi Session) ಒಳ ಮೀಸಲಾತಿ ಸಂಬಂಧ ಸದಾಶಿವ ಆಯೋಗದ ವರದಿ ಜಾರಿಗೆ ಸಿಎಂಗೆ ಮನವಿ ಮಾಡಿದ್ದೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ (G Parameshwara) ತಿಳಿಸಿದ್ದಾರೆ.

    ಒಳ ಮೀಸಲಾತಿ (Internal Reservation) ಸಂಬಂಧ ಸದಾಶಿವ ವರದಿ ಜಾರಿ ವಿಚಾರ ಹಾಗೂ ನಿನ್ನೆ ಎಡಗೈ ಸಮುದಾಯದ ಸಚಿವರು, ಶಾಸಕರ ಸಭೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಪರಮೇಶ್ವರ್, ಒಳ ಮೀಸಲಾತಿ ವಿಚಾರದಲ್ಲಿ ನಾವು ಚಿತ್ರದುರ್ಗದಲ್ಲಿ ಚುನಾವಣೆ ವೇಳೆ ಎಸ್‌ಸಿ-ಎಸ್‌ಟಿ ಸಮಾವೇಶ ಮಾಡಿದ್ವಿ. ಈ ಸಮಾವೇಶದಲ್ಲಿ 10 ಘೋಷಣೆ ಮಾಡಿದ್ವಿ. ಅದರಲ್ಲಿ ಒಳ ಮೀಸಲಾತಿಗೆ ಸಂಬಂಧಿಸಿದ ಸದಾಶಿವ ಆಯೋಗದ ವರದಿಯನ್ನು ಮೊದಲ ಅಧಿವೇಶನದಲ್ಲಿ ಮಂಡನೆ ಮಾಡ್ತೀವಿ ಅಂತ ಘೋಷಣೆ ಮಾಡಿದ್ವಿ ಎಂದು ಹೇಳಿದರು.

    ಕಾರಣಾಂತರಗಳಿಂದ ಮೊದಲ ಅಧಿವೇಶನದಲ್ಲಿ ಇದನ್ನು ಮಾಡಲು ಆಗಲಿಲ್ಲ. ಈಗಲೂ ಸಿಎಂ ಗಮನಕ್ಕೆ ತಂದಿದ್ದೇವೆ. ಬೆಳಗಾವಿ ಅಧಿವೇಶನದಲ್ಲಿ ಮಂಡನೆ ಮಾಡಬೇಕು ಎಂದು ಸಿಎಂಗೆ ತಿಳಿಸಿದ್ದೇವೆ. ನಾನು, ಮಹದೇವಪ್ಪ, ಮುನಿಯಪ್ಪ, ಪ್ರಿಯಾಂಗ್ ಖರ್ಗೆ ಎಲ್ಲರು ಸಿಎಂ ಗಮನಕ್ಕೆ ತಂದಿದ್ದೇವೆ. ಸಿಎಂ ಅವರು ಸಮುದಾಯದ ಮುಖಂಡರ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡೋದಾಗಿ ಹೇಳಿದ್ದಾರೆ ಎಂದರು. ಇದನ್ನೂ ಓದಿ: ಡಿಕೆಶಿಗೆ ಹೈಕಮಾಂಡ್‌ ಬುಲಾವ್‌ – ಇಂದು ಡಿಸಿಎಂ ದೆಹಲಿಗೆ

    ಸದಾಶಿವ ಆಯೋಗದ ವರದಿ ಜಾರಿ ಮಾಡೋ ಕೆಲಸ ಮಾಡ್ತೀವಿ. ಎಲ್ಲರ ಅಭಿಪ್ರಾಯ ತೆಗೆದುಕೊಳ್ಳಬೇಕು. ಎಲ್ಲರ ಮನಸು ಒಂದಾಗಬೇಕು. ಹೀಗಾಗಿ ಸಿಎಂ ಅವರು ಎಲ್ಲರ ಜೊತೆ ಮಾತಾಡಿ ತೀರ್ಮಾನ ಮಾಡೋಣ ಅಂತ ಹೇಳಿದ್ದಾರೆ, ಮಾಡ್ತೀವಿ. ಸರ್ಕಾರಕ್ಕೆ ಒಳ ಮೀಸಲಾತಿ ಮಾಡಬಾರದು ಅಂತ ಭಿನ್ನಾಭಿಪ್ರಾಯ ಇಲ್ಲ. ಬೆಳಗಾವಿ ಅಧಿವೇಶನದಲ್ಲಿ ಮಾಡಬೇಕು ಅಂತ ಸಿಎಂಗೆ ಹೇಳಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಕಳೆಗಟ್ಟಿದ ಹಾಸನಾಂಬೆ ದರ್ಶನೋತ್ಸವ ಸಂಭ್ರಮ – ಇಂದು ದೇವಿಯ ದರ್ಶನ ಪಡೆಯಲಿರುವ ಸಿಎಂ

  • `ಮಹಾ’ ಕ್ಯಾತೆಗೆ ವಿಧಾನಸಭೆಯಲ್ಲಿ ಸರ್ವಾನುಮತದ ಖಂಡನಾ ನಿರ್ಣಯ ಅಂಗೀಕಾರ

    `ಮಹಾ’ ಕ್ಯಾತೆಗೆ ವಿಧಾನಸಭೆಯಲ್ಲಿ ಸರ್ವಾನುಮತದ ಖಂಡನಾ ನಿರ್ಣಯ ಅಂಗೀಕಾರ

    ಬೆಳಗಾವಿ: ಮಹಾರಾಷ್ಟ್ರದ ಗಡಿ ವಿವಾದ (Maharashtra Border Controversy) ಕ್ಯಾತೆ, ಪುಂಡಾಟಿಕೆ ಖಂಡಿಸಿ ರಾಜ್ಯ ವಿಧಾನಸಭೆಯಲ್ಲಿ (Assembly) ಸರ್ವಾನುಮತದಿಂದ ಖಂಡನಾ ನಿರ್ಣಯ ಅಂಗೀಕರಿಸಲಾಗಿದೆ.

    ಮಹಾರಾಷ್ಟ್ರದ (Maharashtra) ಕ್ಯಾತೆ, ಸಚಿವ ಸಂಸದನ ಪುಂಡಾಟದ ಹೇಳಿಕೆಯ ವಿರುದ್ಧ ವಿಧಾನಸಭೆಯಲ್ಲಿ ಆಕ್ರೋಶ ವ್ಯಕ್ತವಾಯ್ತು. ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಮಂಡಿಸಿದ ಖಂಡನಾ ನಿರ್ಣಯ ಸರ್ವಾನುಮತದಿಂದ ಅಂಗೀಕಾರವಾಯಿತು. ಕರ್ನಾಟಕ ಜನರ ಆಶಯದಂತೆ ಒಂದಿಂಚು ನೆಲ ಬಿಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರ ಕ್ಯಾತೆ, ಸಚಿವರು, ಸಂಸದನ ಹೇಳಿಕೆ ಖಂಡನೀಯ ಎಂದು ಖಂಡನಾ ನಿರ್ಣಯ ಕೈಗೊಳ್ಳಲಾಯ್ತು. ಇದನ್ನೂ ಓದಿ: ಮಗಳ ಹುಟ್ಟುಹಬ್ಬಕ್ಕೆ ಸುವರ್ಣಸೌಧ ಬಾಡಿಗೆ ಕೊಡಿ – ಸಭಾಪತಿ, ಡಿಸಿಗೆ ಪತ್ರ ಬರೆದ ತಂದೆ

    ಇದೇ ವೇಳೆ ನಮ್ಮ ರಾಜ್ಯದ ಸಿಎಂ ಬಗ್ಗೆ ಮಾತನಾಡಿದ್ದ ಮಹಾರಾಷ್ಟ್ರದ ಸಚಿವರು ಹಾಗೂ ಸಂಸದ ಸಂಜಯ್ ರಾವತ್ ವಿರುದ್ಧ ಸಿದ್ದರಾಮಯ್ಯ (Siddaramaiah) ಕಿಡಿಕಾರಿದರು. ಮಾನ ಮರ್ಯಾದೆ ಇಲ್ಲ, ನಾವು ನಾಗರಿಕ ಭಾಷೆಯಲ್ಲೇ ಉತ್ತರ ಕೊಡಬೇಕು ಅಂತಾ ಆಕ್ರೋಶ ಹೊರ ಹಾಕಿದ್ರು. ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸಂಜಯ್ ರಾವತ್ (Sanjay Raut) ಒಬ್ಬ ದೇಶದ್ರೋಹಿ, ಚೀನಾದ (China) ಏಜೆಂಟ್. ಹೀಗೆ ಮಾತನಾಡಿದ್ರೆ ಕಾನೂನು ಕ್ರಮ ಜರುಗಿಸುತ್ತೇವೆ. ಒಂದಿಂಚು ನೆಲ ಬಿಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರದ ಗಡಿ ಕ್ಯಾತೆ ಖಂಡನೀಯ ಅಂತಾ ಗುಡುಗಿದ್ರು. ಇದನ್ನೂ ಓದಿ: ಪಂಚಮಸಾಲಿ ಮೀಸಲಾತಿ – ಇನ್ನೂ ಸ್ಪಷ್ಟ ನಿಲುವು ಪ್ರಕಟಿಸದ ಕಾಂಗ್ರೆಸ್

    ಮಹಾರಾಷ್ಟ್ರ ವಿರುದ್ಧ ಖಂಡನಾ ನಿರ್ಣಯದ ಸಾರಾಂಶ:
    ಕರ್ನಾಟಕದ (Karnataka) ನೆಲ, ಜಲದ ಹಿತ ಕಾಪಾಡಲು ಮತ್ತು ಕಾನೂನಿನ ಹೋರಾಟದ ಸಮರ್ಥನೆ ಮಾಡಲು, ಈ ಮೂಲಕ ರಾಜ್ಯ ಸರ್ಕಾರ ತನ್ನ ಬದ್ಧತೆಯನ್ನು ಪ್ರದರ್ಶಿಸಿದೆ. ಇತ್ತೀಚಿಗೆ ಈ ವಿಷಯದ ಬಗ್ಗೆ ಮಹಾರಾಷ್ಟ್ರದ ನಾಯಕರು ಕೊಡುತ್ತಿರುವ ಎಲ್ಲ ಹೇಳಿಕೆಗಳು ಅತ್ಯಂತ ಖಂಡನೀಯ. ಮಹಾರಾಷ್ಟ್ರದ ಸಚಿವರು ಕಾನೂನು ಸುವ್ಯವಸ್ಥೆ ಸೂಕ್ಮವಿದ್ದಂತಹ ಸಂದರ್ಭದಲ್ಲಿ ಕರ್ನಾಟಕಕ್ಕೆ ಆಗಮಿಸಿ ಪ್ರಚೋದಿಸಲು ಯತ್ನಿಸುವ ಕಾರ್ಯವೂ ಖಂಡನೀಯ. ಕೇಂದ್ರ ಗೃಹ ಸಚಿವರು, ಎರಡು ರಾಜ್ಯಗಳ ಮಧ್ಯೆ, ಶಾಂತಿ ಸುವ್ಯವಸ್ಥೆ ಮತ್ತು ಸೌಹಾರ್ದತೆ ಕಾಪಾಡಲು ನೀಡಿರುವ ಸೂಚನೆಯನ್ನು ಸಹ ಮಹಾರಾಷ್ಟ್ರ ಉಲ್ಲಂಘಿಸುತ್ತಿದೆ.

    ಎರಡು ರಾಜ್ಯಗಳ ಸಂಬಂಧಕ್ಕೆ ಧಕ್ಕೆ ತರುವಂತಾಗಿದೆ. ಇದನ್ನು ನಿಯಂತ್ರಿಸಬೇಕೆಂದು ಮಹಾರಾಷ್ಟ್ರ ಸರ್ಕಾರಕ್ಕೆ ಸೂಚಿಸುತ್ತಾ, ಈ ವಿಷಯವನ್ನು ಕೇಂದ್ರ ಸರ್ಕಾರದ ಗಮನಕ್ಕೆ ರಾಜ್ಯ ಸರ್ಕಾರ ತರುತ್ತದೆ. ಕರ್ನಾಟಕ ನೆಲ, ಜಲ, ಭಾಷೆ ಹಾಗೂ ಕನ್ನಡಿಹರ ಹಿತಾಸಕ್ತಿಯ ವಿಷಯದಲ್ಲಿ, ಯಾವುದೇ ರಾಜೀ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಈ ವಿಷಯದಲ್ಲಿ ಕರ್ನಾಟಕದ ಜನರ ಮತ್ತು ಸದಸ್ಯರೆಲ್ಲರ ಭಾವನೆಯೂ ಒಂದೇ ಆಗಿದ್ದು, ಇದಕ್ಕೆ ಧಕ್ಕೆ ಆದಾಗ ಎಲ್ಲರೂ ಒಗ್ಗಟಿನಿಂದ ರಾಜ್ಯದ ಹಿತಾಸಕ್ತಿ ಹಾಗೂ ರಕ್ಷಣೆಗೆ ಸಂವಿಧಾನಾತ್ಮಕ ಹಾಗೂ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಬದ್ಧರಿದ್ದೇವೆ.

    ಮಹಾರಾಷ್ಟ್ರದ ಜನತೆಯೂ, ಅನಾವಶ್ಯಕವಾಗಿ ಸೃಷ್ಟಿಸಿರುವ ಗಡಿ ವಿವಾವದ ಖಂಡಿಸಿ ರಾಜ್ಯದ ಹಿತರಕ್ಷಣೆಗೆ ಕಟಿಬದ್ಧರಾಗಿರುವುದಾಗಿ ಈ ಸದನವೂ ಸರ್ವಾನುಮತದಿಂದ ನಿರ್ಣಯಿಸುತ್ತದೆ.

    Live Tv
    [brid partner=56869869 player=32851 video=960834 autoplay=true]

  • ಪಂಚಮಸಾಲಿ ಮೀಸಲಾತಿ – ಇನ್ನೂ ಸ್ಪಷ್ಟ ನಿಲುವು ಪ್ರಕಟಿಸದ ಕಾಂಗ್ರೆಸ್

    ಪಂಚಮಸಾಲಿ ಮೀಸಲಾತಿ – ಇನ್ನೂ ಸ್ಪಷ್ಟ ನಿಲುವು ಪ್ರಕಟಿಸದ ಕಾಂಗ್ರೆಸ್

    ಬೆಳಗಾವಿ: ಪಂಚಮಸಾಲಿ ಮೀಸಲಾತಿ ಹೋರಾಟ(Panchamasali Reservation) ವಿಚಾರದಲ್ಲಿ ಕಾಂಗ್ರೆಸ್(Congress) ಸ್ಪಷ್ಟ ನಿಲುವು ಪ್ರಕಟಿಸಿಲ್ಲ. ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಮಣಿದು ಸರ್ಕಾರ ಒಪ್ಪಿಗೆ ಸೂಚಿಸಿದರೆ ಮುಂದೇನು ಮಾಡಬೇಕು ಎಂದು ಚಿಂತನೆ ನಡೆಸುತ್ತಿದೆ.

    ಎಸ್‍ಸಿ-ಎಸ್‍ಟಿ ಮೀಸಲು(SC- ST Reservation) ಅಸ್ತ್ರದ ಜೊತೆಗೆ ಸರ್ಕಾರದ ವಿರುದ್ಧ ಮತ್ತೊಂದು ಅಸ್ತ್ರ ಬಳಕೆಗೆ ಕೈ ಪಾಳಯದ ಪ್ಲಾನ್ ಮಾಡಿಕೊಳ್ಳುತ್ತಿದೆ ಎನ್ನುವ ಮಾತು ಕೇಳಿ ಬರುತ್ತಿದೆ. ಇದನ್ನೂ ಓದಿ: ಬೊಮ್ಮಾಯಿ ಸರ್ಕಾರಕ್ಕೆ ಪಂಚಮಸಾಲಿ ಸವಾಲು – ಬೇಡಿಕೆ ಏನು? ವಸ್ತುಸ್ಥಿತಿ ಏನಿದೆ? ಯಾವ ಜಿಲ್ಲೆಗಳಲ್ಲಿಎಷ್ಟಿದೆ ಪ್ರಭಾವ?

     
    ಒಂದು ವೇಳೆ ಪಂಚಮಸಾಲಿ ಕೈ ತಪ್ಪಿದರೆ, ಒಳ ಮೀಸಲಾತಿ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. ಸದಾಶಿವ ಆಯೋಗದ ದಾಳ ಉರುಳಿಸಲು ಸದ್ದಿಲ್ಲದೆ ಸಿದ್ಧಮಾಡಿಕೊಳ್ಳುತ್ತಿದೆ. ಆ ಮೂಲಕ ದಲಿತಾಸ್ತ್ರದ ಮೂಲಕ ಬಿಜೆಪಿ ಸರ್ಕಾರವನ್ನು ಕಟ್ಟಿ ಹಾಕುವುದು ಕೈ ಪಾಳಯದ ಲೆಕ್ಕಾಚಾರ ಎನ್ನಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಬೊಮ್ಮಾಯಿ ಸರ್ಕಾರಕ್ಕೆ ಪಂಚಮಸಾಲಿ ಸವಾಲು – ಬೇಡಿಕೆ ಏನು? ವಸ್ತುಸ್ಥಿತಿ ಏನಿದೆ? ಯಾವ ಜಿಲ್ಲೆಗಳಲ್ಲಿಎಷ್ಟಿದೆ ಪ್ರಭಾವ?

    ಬೊಮ್ಮಾಯಿ ಸರ್ಕಾರಕ್ಕೆ ಪಂಚಮಸಾಲಿ ಸವಾಲು – ಬೇಡಿಕೆ ಏನು? ವಸ್ತುಸ್ಥಿತಿ ಏನಿದೆ? ಯಾವ ಜಿಲ್ಲೆಗಳಲ್ಲಿಎಷ್ಟಿದೆ ಪ್ರಭಾವ?

    ಬೆಳಗಾವಿ: ಎಸ್‍ಸಿ-ಎಸ್‍ಟಿ ಮೀಸಲಾತಿ ಹೆಚ್ಚಿಸಿದ ರಾಜ್ಯ ಸರ್ಕಾರಕ್ಕೆ ಈಗ ಪಂಚಮಸಾಲಿ(Panchamasali ) ಸಮುದಾಯದ 2ಎ ಮೀಸಲಾತಿ(Reservation) ಬೇಡಿಕೆ ಬಿಸಿತುಪ್ಪವಾಗಿ ಪರಿಣಮಿಸಿದೆ. ಇಷ್ಟು ದಿನ ಪದೇ ಪದೇ ಡೆಡ್‍ಲೈನ್ ನೀಡುತ್ತಿದ್ದ ಪಂಚಮಸಾಲಿ ಸಮುದಾಯ ಈಗ ಮೀಸಲಾತಿಗಾಗಿ ಮಾಡು ಇಲ್ಲವೇ ಮಡಿ ಹೋರಾಟ ಆರಂಭಿಸಿದೆ.

    ಇಂದು ಬೆಳಗಾವಿಯಲ್ಲಿ(Belagavi) ಬೃಹತ್‌ ಪಂಚಮಸಾಲಿ ಸಮಾವೇಶ ನಡೆಯಲಿದೆ. ಸಮುದಾಯಕ್ಕೆ 2ಎ ಮೀಸಲಾತಿ ನೀಡಿದರೆ ಸರ್ಕಾರಕ್ಕೆ ಸನ್ಮಾನ. ಇಲ್ಲದಿದ್ದರೆ ಅಪಮಾನ ಮಾಡುವುದು ಖಚಿತ. ಶಕ್ತಿ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಸಮುದಾಯದ ನಾಯಕರು ಗುಡುಗಿದ್ದಾರೆ.

    ಕ್ಯಾಬಿನೆಟ್‌ ಸಭೆ
    ಪಂಚಮಸಾಲಿ ಮೀಸಲಾತಿ ಹೋರಾಟ ಸಂಬಂಧ ಎಲ್ಲರ ಚಿತ್ತ ಸರ್ಕಾರದ ತೀರ್ಮಾನದತ್ತ ಇದೆ. ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ಸಿಎಂ ನೇತೃತ್ವದಲ್ಲಿ ಮಹತ್ವದ ಸಂಪುಟ ಸಭೆ(Cabinet) ನಡೆಯಲಿದೆ. ಮೀಸಲಾತಿ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳುತ್ತಾರಾ ಅಥವಾ ಮೀಸಲಾತಿ ಬಿಕ್ಕಟ್ಟಿಗೆ ಪರಿಹಾರ ಸೂತ್ರ ಸಿದ್ಧಪಡಿಸಲು ಸಂಪುಟ ಸಭೆ ವೇದಿಕೆಯಾಗುತ್ತಾ ನೋಡಬೇಕಿದೆ. ಇದನ್ನೂ ಓದಿ: ಅಯೋಧ್ಯೆ ಮಾದರಿಯಲ್ಲಿ ರಾಮದೇವರ ಬೆಟ್ಟ ಅಭಿವೃದ್ಧಿ – ಸಿಎಂಗೆ ಅಶ್ವಥ್ ನಾರಾಯಣ ಪತ್ರ

    ಪ್ರತಿಭಟನೆ ಮಾಡುತ್ತಿರುವ ಪಂಚಮಸಾಲಿಗಳಿಗೆ ಯಾವ ಭರವಸೆ ನೀಡುತ್ತದೆ ಎನ್ನುವುದರ ಬಗ್ಗೆ ಹೆಚ್ಚಿದ ಕುತೂಹಲ ಮೂಡಿಸಿದೆ. ಸರಕಾರದ ಬಳಿ ಎರಡು ಪ್ರಮುಖ ಪರಿಹಾರ ಸೂತ್ರವಿದೆ. ಹಿಂದುಳಿದ ವರ್ಗಗಳ ಆಯೋಗದ ವರದಿ ಬರುವವರೆಗೆ ಕಾಯಬೇಕು. ಇಲ್ಲವೇ ಪ್ರಸ್ತುತ ಮೀಸಲಾತಿ ಪ್ರಮಾಣದ ಏರಿಕೆಗೆ ತಿರ್ಮಾನ ಮಾಡಿ 2ಎಗೆ ಶಿಫಾರಸ್ಸು ಮಾಡಬೇಕು. ಯಾಕಂದರೆ ಇನ್ನೂ 12 ಜಿಲ್ಲೆಗಳಲ್ಲಿ ಹಿಂದುಳಿದ ವರ್ಗಗಳ ಆಯೋಗದಿಂದ ಅಧ್ಯಯನ ಬಾಕಿಯಿದೆ. ಸರ್ಕಾರದ ನಿರ್ಧಾರ ಏನು ಎನ್ನುವುದೇ ಸದ್ಯದ ಕುತೂಹಲ.

    ಪಂಚಮಸಾಲಿಗಳ ಬೇಡಿಕೆ ಏನು?
    ಸದ್ಯ ಪ್ರವರ್ಗ 3ಬಿಯಲ್ಲಿರುವ ಪಂಚಮಸಾಲಿ ಸಮುದಾಯ ಶೇ.5 ಮೀಸಲಾತಿ ಇದೆ. ಪ್ರವರ್ಗ 2ಎಗೆ ಸೇರ್ಪಡೆ ಆದರೆ ಶೇ.15 ಮೀಸಲಾತಿ ಅನುಕೂಲ ಸಿಗಲಿದೆ. ಜನಸಂಖ್ಯೆ ಹೆಚ್ಚಳ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ಆಧರಿಸಿ ಮೀಸಲಾತಿಗೆ ಒತ್ತಾಯ ಮಾಡುತ್ತಿದೆ.

    ವಸ್ತುಸ್ಥಿತಿ ಏನಿದೆ?
    ಪಂಚಮಸಾಲಿ ಸಮುದಾಯದ 2ಎ ಸೇರ್ಪಡೆ ಬೇಡಿಕೆ ಬಗ್ಗೆ ಪರಾಮರ್ಶೆ ಸಂಬಂಧ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ಸರ್ಕಾರ ವರದಿ ಕೇಳಿದೆ. ಆಯೋಗದ ವರದಿ ಪೂರ್ತಿ ಆಗಲು ಇನ್ನೂ ಕನಿಷ್ಠ 2 ತಿಂಗಳು ಬೇಕಿದೆ. ಸದ್ಯಕ್ಕೆ ಸರ್ಕಾರ ಆಯೋಗದಿಂದ ಮಧ್ಯಂತರ ವರದಿ ಕೇಳಿದೆ.

     

    ಪ್ರಭಾವ ಎಷ್ಟಿದೆ?
    ಒಂಥರಾ ಅತ್ತ ದರಿ ಇತ್ತ ಪುಲಿ ಸ್ಥಿತಿಯಲ್ಲಿ ಸರ್ಕಾರವಿದೆ. ಯಾಕೆಂದರೆ ಪಂಚಮಸಾಲಿ ಲಿಂಗಾಯತ ಅತ್ಯಂತ ಪ್ರಬಲ ಸಮುದಾಯ. ಈ ಸಮುದಾಯಕ್ಕೆ ಮೀಸಲಾತಿ ಕೊಡದೇ ಹೋದರೆ ಎದುರಾಗುವ ಸಂಕಷ್ಟದ ಬಗ್ಗೆಯೂ ಸರ್ಕಾರಕ್ಕೆ ಅರಿವಿದೆ. ಒಂದು ವೇಳೆ ಮತ್ತೆ ಕಣ್ಣೊರೆಸುವ ತಂತ್ರ ಮಾಡಿದರೆ ಚುನಾವಣಾ ನಷ್ಟದ ಭೀತಿ ಎದುರಾಗುವ ಆತಂಕವಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪಂಚಮಸಾಲಿ ಪ್ರಾಬಲ್ಯವೇ ಇದೆ.

    ಅಂದಾಜು 70 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇರುವ ಪಂಚಮಸಾಲಿ ಸಮುದಾಯ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಾಬಲ್ಯ ಹೊಂದಿದೆ. 50ಕ್ಕೂ ಹೆಚ್ಚು ಮತ ಕ್ಷೇತ್ರಗಳಲ್ಲಿ ವರ್ಚಸ್ಸು ಹೊಂದಿದ್ದು 11 ಜಿಲ್ಲೆಗಳ ಬಹಳಷ್ಟು ಕ್ಷೇತ್ರಗಳಲ್ಲಿ ಪಂಚಮಸಾಲಿ ಮತ ನಿರ್ಣಾಯಕವಾಗಿದೆ.

    ಎಲ್ಲಿ ಪ್ರಾಬಲ್ಯ?
    ಬಾಗಲಕೋಟೆ, ಧಾರವಾಡ, ಬೆಳಗಾವಿ, ಹಾವೇರಿ, ಗದಗ, ವಿಜಯಪುರ, ಶಿವಮೊಗ್ಗ, ದಾವಣಗೆರೆ, ಕೊಪ್ಪಳ, ಬೀದರ್, ಕಲಬುರಗಿ.

  • ನಮ್ಮ ಮುಖ್ಯಮಂತ್ರಿ ದುರ್ಬಲರು.. ಅಮಿತ್ ಶಾ ಮಾತಿಗೆ ಕಿಮ್ಮತ್ತಿಲ್ಲ- ಸಿದ್ದರಾಮಯ್ಯ ವ್ಯಂಗ್ಯ

    ನಮ್ಮ ಮುಖ್ಯಮಂತ್ರಿ ದುರ್ಬಲರು.. ಅಮಿತ್ ಶಾ ಮಾತಿಗೆ ಕಿಮ್ಮತ್ತಿಲ್ಲ- ಸಿದ್ದರಾಮಯ್ಯ ವ್ಯಂಗ್ಯ

    ಬೆಳಗಾವಿ: ನಮ್ಮ ಮುಖ್ಯಮಂತ್ರಿ (Chief Minister) ದುರ್ಬಲ ಸಿಎಂ. ಕೇಂದ್ರ ಸಚಿವ ಅಮಿತ್ ಶಾ (Amit Shah) ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ವ್ಯಂಗ್ಯವಾಡಿದ್ದಾರೆ.

    ಬೆಳಗಾವಿ ಗಡಿ ಸಂಘರ್ಷಕ್ಕೆ (Belagavi Controversy) ಸಂಬಂಧಿಸಿದಂತೆ ಮಾತನಾಡಿದ ಅವರು, ಕರ್ನಾಟಕದ ಮುಖ್ಯಮಂತ್ರಿ ವೀಕ್ ಸಿಎಂ. ಕೇಂದ್ರ ಗೃಹ ಸಚಿವರು ಕರೆದು ಮಾತಾನಾಡಿದ್ರೂ ಗಲಾಟೆ ಆಗ್ತಿದೆ. ನಮ್ಮ ಸಿಎಂ ಗಟ್ಟಿ ಧ್ವನಿಯಲ್ಲಿ ಹೇಳಬೇಕಿತ್ತು, ಆದರೂ ದೊಡ್ಡ ಹೇಳಿಕೆಯನ್ನೇನು ನೀಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

    ಅಮಿತ್ ಶಾ ಶಾಂತಿ ಕಾಪಾಡಿ ಅಂದರೂ, ಮಹಾರಾಷ್ಟ್ರದವರು (Maharashtra) ಶಾಂತಿ ಕಾಪಾಡ್ತಿಲ್ಲ. ಅಮಿತ್ ಶಾ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಟೀಕಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮಂಡ್ಯ ಜಿಲ್ಲೆ ಜನರಿಗೆ ಅನ್ಯಾಯ – ಶಾಸಕ ದಿನೇಶ್‌ ಗೂಳಿಗೌಡ ಅಸಮಾಧಾನ

    ಕರ್ನಾಟಕ, ಮಹಾರಾಷ್ಟ್ರ, ಕೇಂದ್ರದಲ್ಲೂ ಬಿಜೆಪಿ ಸರ್ಕಾರವೇ (BJP Government) ಇದೆ. ತ್ರಿಬಲ್ ಇಂಜಿನ್ ಸರ್ಕಾರ ಇದ್ದರೂ ಪ್ರಯೋಜನವಾಗ್ತಿಲ್ಲ. ರಾಜ್ಯದ ನೆಲ-ಜಲ-ಭಾಷೆ ವಿಚಾರದಲ್ಲಿ ನಾವೆಲ್ಲರೂ ಒಂದಾಗುತ್ತೇವೆ. ಗಡಿ ವಿಚಾರದಲ್ಲಿ ಮಹಾಜನ್ ವರದಿಯೇ ಅಂತಿಮವಾಗಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನಾನು ಅಕ್ರಮವಾಗಿ ಸಂಪಾದನೆ ಮಾಡಿದ್ರೆ, ಅಷ್ಟೂ ಆಸ್ತಿ ದಾನ ಮಾಡ್ತೀನಿ – ಸಿ.ಟಿ ರವಿ

    ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಎರಡೂ ರಾಜ್ಯಗಳಲ್ಲಿ ಆಕ್ರೋಶ ಭುಗಿಲೆದ್ದಿದೆ. ಗಡಿ ಭಾಗದಲ್ಲಿ ಎರಡೂ ರಾಜ್ಯಗಳ ಬಸ್‌ಗಳಿಗೆ ಮಸಿ ಬಳಿದು ಆಕ್ರೋಶ ಕೂಡ ಹೊರಹಾಕಲಾಗಿತ್ತು. ವಿವಾದ ಉಲ್ಬಣವಾಗುತ್ತಿರುವುದನ್ನು ಅರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಎರಡೂ ರಾಜ್ಯಗಳ ಸಿಎಂ ಜೊತೆ ಸಭೆ ನಡೆಸಲಾಯಿತು. ಆದರೆ ಯಾವುದಕ್ಕೂ ಕ್ಯಾರೆ ಎನ್ನದ ಎಂಇಎಸ್ ಪುಂಡರು ಕರ್ನಾಟಕ ಗಡಿ ಪ್ರವೇಶಿಸಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ತಡೆದು ಕ್ರಮ ಜರುಗಿಸಿದ್ದಾರೆ. ಈ ಬೆನ್ನಲ್ಲೇ ಶಿವಸೇನಾ ಸಂಸದ ಸಂಜಯ್ ರಾವತ್ `ಚೀನಾ, ಭಾರತದ ಗಡಿ ನುಗ್ಗಿದಂತೆ ನಾವು ಕರ್ನಾಟಕ್ಕೆ ನುಗ್ಗುತ್ತೇವೆ ಎಂದು ನೀಡಿರುವ ಹೇಳಿಕೆ’ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಹೊಸವರ್ಷದ ಮೊದಲ ವಾರದಲ್ಲೇ KPTCL ಎಇ, ಜೆಇ ನೇಮಕ ಪರೀಕ್ಷೆ ಫಲಿತಾಂಶ: ಸುನೀಲ್ ಕುಮಾರ್

    ಹೊಸವರ್ಷದ ಮೊದಲ ವಾರದಲ್ಲೇ KPTCL ಎಇ, ಜೆಇ ನೇಮಕ ಪರೀಕ್ಷೆ ಫಲಿತಾಂಶ: ಸುನೀಲ್ ಕುಮಾರ್

    ಬೆಳಗಾವಿ: ಕೆಪಿಟಿಸಿಎಲ್ (KPTCL) ಸಹಾಯಕ ಎಂಜನಿಯರ್ (AE), ಕಿರಿಯ ಎಂಜನಿಯರ್ ಹಾಗೂ ಕಿರಿಯ ಸಹಾಯಕ ಎಂಜಿನಿಯರ್ (JE) ಹುದ್ದೆಗಳ ನೇಮಕ ಪರೀಕ್ಷೆಯ ಫಲಿತಾಂಶವನ್ನು ಜನವರಿ ಮೊದಲ ವಾರದಲ್ಲೇ ಪ್ರಕಟಿಸಲಾಗುವುದು. ಜೊತೆಗೆ ಕೀ ಉತ್ತರಗಳನ್ನು ವಾರದೊಳಗೆ ಪ್ರಕಟಿಸಲಾಗುವುದು ಎಂದು ಸಚಿವ ವಿ. ಸುನೀಲ್‌ಕುಮಾರ್ (V Sunil Kumar) ಅವರು ತಿಳಿಸಿದರು.

    ವಿಧಾನಸಭೆಯಲ್ಲಿಂದು ಶೂನ್ಯವೇಳೆಯಲ್ಲಿ ಶಾಸಕ ಸುರೇಶಕುಮಾರ್ (SureshKumar) ಅವರ ಪ್ರಶ್ನೆಗೆ ಉತ್ತರಿಸಿದರು. ಇದನ್ನೂ ಓದಿ: ಜಿಲ್ಲಾ ಕೇಂದ್ರಗಳಲ್ಲಿ ಉದ್ಯಮಿಯಾಗು-ಉದ್ಯೋಗ ನೀಡು ಕಾರ್ಯಾಗಾರ: ಸಚಿವ ನಿರಾಣಿ

    ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಪರೀಕ್ಷೆಗಳನ್ನು 5 ತಿಂಗಳ ಹಿಂದೆ ನಡೆಸಲಾಗಿದೆ. ಆದರೆ ಫಲಿತಾಂಶ ಪ್ರಕಟಿಸಿಲ್ಲ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿರುವುದು ಗಮನಕ್ಕೆ ಬಂದಿದ್ದು, ಈ ಕುರಿತು ಕೆಇಎ ಜೊತೆಗೆ ಫಾಲೋಅಫ್ ಮಾಡುತ್ತಿದ್ದೇವೆ. ಈ ವಾರದಲ್ಲಿ ಅಥವಾ ಅಧಿವೇಶನ ಮುಗಿಯುವುದರೊಳಗೆ ಕೀ ಉತ್ತರಗಳನ್ನು ಪ್ರಕಟಿಸಿ, ಜನವರಿ ಮೊದಲ ವಾರದೊಳಗೆ ಫಲಿತಾಂಶ ಪ್ರಕಟಿಸಲು ಕ್ರಮಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

    ಶಾಸಕ ಸುರೇಶಕುಮಾರ್ ಅವರು, ಪರೀಕ್ಷೆ ಬರೆದು ಐದು ತಿಂಗಳಾದರೂ ಫಲಿತಾಂಶ ಪ್ರಕಟವಾಗಿಲ್ಲ. ಪರೀಕ್ಷೆ ಬರೆದ ಅಭ್ಯರ್ಥಿಗಳು ಫಲಿತಾಂಶ ಯಾವಾಗ ಬಿಡುಗಡೆ ಮಾಡಲಾಗುತ್ತದೆ ಎಂಬುದರ ಕುರಿತು ಚಾತಕ ಪಕ್ಷಿಯಂತೆ ಕಾಯುತ್ತಿದ್ದು, ಕೂಡಲೇ ಕ್ರಮವಹಿಸುವಂತೆ ಸಚಿವರಲ್ಲಿ ಕೋರಿದ್ದರು. ಇದನ್ನೂ ಓದಿ: ಆ ಒಂದು ಮಾತಿನಿಂದ ಮುರಿದು ಬಿತ್ತು ರೂಪೇಶ್ ಶೆಟ್ಟಿ- ರಾಜಣ್ಣ ಫ್ರೆಂಡ್‌ಶಿಪ್

    Live Tv
    [brid partner=56869869 player=32851 video=960834 autoplay=true]

  • ನನಗೆ ಗುಂಡು ಹೊಡೆದ್ರೂ ಟಿಪ್ಪು ಭಾವಚಿತ್ರ ಅಳವಡಿಸಲು ಬಿಡಲ್ಲ – ಯತ್ನಾಳ್

    ನನಗೆ ಗುಂಡು ಹೊಡೆದ್ರೂ ಟಿಪ್ಪು ಭಾವಚಿತ್ರ ಅಳವಡಿಸಲು ಬಿಡಲ್ಲ – ಯತ್ನಾಳ್

    ಬೆಳಗಾವಿ: ನನಗೆ ಗುಂಡು ಹೊಡೆದ್ರೂ ಸರಿ, ವಿಧಾನಸೌಧದಲ್ಲಿ ಟಿಪ್ಪು (Tipu Sultan) ಭಾವಚಿತ್ರ ಅಳವಡಿಸಲು ಬಿಡಲ್ಲ ಎಂದು ಬಿಜೆಪಿ ಮುಖಂಡ ಬಸನಗೌಡ ಪಾಟೀಲ ಯತ್ನಾಳ್ (Basangouda Patil Yatnal) ಗುಡುಗಿದ್ದಾರೆ.

    ಬೆಳಗಾವಿಯ ಸುವರ್ಣಸೌಧದಲ್ಲಿ ‘ಪಬ್ಲಿಕ್ ಟಿವಿ’ (Public TV) ಜೊತೆಗೆ ಮಾತನಾಡಿದ ಅವರು, ಗ್ರಾಮ ಪಂಚಾಯಿತಿಗಳಲ್ಲಿ ಅಳವಡಿಸಿರುವ ಟಿಪ್ಪು ಭಾವಚಿತ್ರ ತೆಗೆಯಬೇಕು ಎಂದು ಸದನದಲ್ಲಿ ಆಗ್ರಹಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಡಿಕೆಶಿ, ಸಿದ್ದರಾಮಯ್ಯ ಮೈಯಲ್ಲಿ ಭಯೋತ್ಪಾದಕರ ವಂಶದ ರಕ್ತ ಹರಿಯುತ್ತಿದೆ – ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

    ಸುವರ್ಣಸೌಧದಲ್ಲಿ ಸಾವರ್ಕರ್ (VD Savarkar) ಭಾವಚಿತ್ರ ಅಳವಡಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಸಾವರ್ಕರ್ ಭಾವಚಿತ್ರ ಅಳವಡಿಸಿದ್ದಕ್ಕೆ ಕಾಂಗ್ರೆಸ್‌ನವರು (Congress) ಪ್ರತಿಭಟನೆ ಮಾಡಿ ಹೋದರು. ಅವರದ್ದು ಅಷ್ಟೆ. ಸಿದ್ದರಾಮಯ್ಯ (Siddaramaiah) ಅವರು ಗಾಂಧಿ ಹತ್ಯೆಯಲ್ಲಿ ಸಾವರ್ಕರ್ ಪಾತ್ರ ಇದೆ ಎಂದು ಆರೋಪ ಮಾಡ್ತಿದ್ದಾರೆ. ಹಾಗಾದ್ರೆ ಕಾಂಗ್ರೆಸ್‌ನವರು ಸುಭಾಷ್ ಚಂದ್ರಬೋಸ್ ಹಾಗೂ ಲಾಲ್ ಬಹದ್ದೂರ್ ಅವರ ಸಾವಿನ ವಿಷಯ ಬಹಿರಂಗಪಡಿಸಲಿ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಓವೈಸಿ ಪಕ್ಷದ ನಾಯಕನ ಕಚೇರಿಯಲ್ಲೇ ವಿದ್ಯಾರ್ಥಿ ಕೊಲೆ

    ನೆಹರೂ ಅವರ ಭಾವಚಿತ್ರವನ್ನು ಸುವರ್ಣಸೌಧದಲ್ಲಿ ಇಡಲು ನಮಗೇನೂ ಅಭ್ಯಂತರವಿಲ್ಲ. ಆದ್ರೆ ಟಿಪ್ಪು ಸುಲ್ತಾನ್ ಬಗ್ಗೆ ವಿರೋಧವಿದೆ ಎಂದರು. ಇನ್ನೂ ಎಂಇಎಸ್ ಮುಗಿದು ಹೋದ ಅಧ್ಯಾಯವಾಗಿದೆ. ಡಿಸೆಂಬರ್ 22 ರೊಳಗೆ ಪಂಚಮಸಾಲಿ ಮೀಸಲಾತಿ ಘೋಷಣೆ ಆಗುತ್ತೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಡಿಕೆಶಿ, ಸಿದ್ದರಾಮಯ್ಯ ಮೈಯಲ್ಲಿ ಭಯೋತ್ಪಾದಕರ ವಂಶದ ರಕ್ತ ಹರಿಯುತ್ತಿದೆ – ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

    ಡಿಕೆಶಿ, ಸಿದ್ದರಾಮಯ್ಯ ಮೈಯಲ್ಲಿ ಭಯೋತ್ಪಾದಕರ ವಂಶದ ರಕ್ತ ಹರಿಯುತ್ತಿದೆ – ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

    ಬೆಳಗಾವಿ: ಡಿ.ಕೆ ಶಿವಕುಮಾರ್ (DK Shivakumar) ಹಾಗೂ ಸಿದ್ದರಾಮಯ್ಯ (Siddaramaiah) ಅವರ ಮೈಯಲ್ಲಿ ಭಯೋತ್ಪಾದಕರ ವಂಶದ ರಕ್ತವೇ ಹರಿಯುತ್ತಿದೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (KS Eshwarappa) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    `ಡಿಕೆಶಿ ನೇತೃತ್ವದ ಸಂಸ್ಥೆಗಳ ಮೇಲೆ ಸಿಬಿಐ (CBI) ದಾಳಿಗೆ ಬಿಜೆಪಿ (BJP) ಕಾರಣ’ ಎಂಬ ವಿಚಾರವಾಗಿ ಮಾತನಾಡಿದ ಅವರು, ಭಯೋತ್ಪಾದಕರ ವಂಶದ ರಕ್ತವೇ ಡಿಕೆಶಿ, ಸಿದ್ದರಾಮಯ್ಯ ಮೈಯಲ್ಲಿ ಹರಿಯುತ್ತಿದೆ. ಮುಸ್ಲಿಮರ ವೋಟು ಹೋಗುತ್ತದೆ ಅಂತಾ ಹೀಗೆ ಮಾಡ್ತಿದ್ದಾರೆ. ಭಯೋತ್ಪಾದಕರ ವಿಚಾರದಲ್ಲಿ ಡಿಕೆಶಿ, ಸಿದ್ದರಾಮಯ್ಯ ಒಂದಾದ್ರು. ಯಾಕಂದ್ರೆ ಮುಸ್ಲಿಮರ ವೋಟಿಗಾಗಿ (Muslims Vote) ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: `ಕಾಂತಾರ’ ಎಫೆಕ್ಟ್, ಭೂತಕೋಲ ನೋಡಲು ಧರ್ಮಸ್ಥಳಕ್ಕೆ ಬರಲಿದ್ದಾರೆ ನಟ ವಿಶಾಲ್

    ಹಾಗಂತ ಎಲ್ಲಾ ಮುಸ್ಲಿಮರೂ ಭಯೋತ್ಪಾದಕರಲ್ಲ. ಎಲ್ಲರೂ ಮುಸ್ಲಿಮರ ವೋಟಿಗೆ ಓಲೈಕೆ ಮಾಡ್ತಿದ್ದಾರೆ. ಬೇರೆ ಬೇರೆ ದಿಕ್ಕಲ್ಲಿದ್ದವರು ಈಗ ಒಂದಾಗಿದ್ದಾರೆ. ಹಿಂದುತ್ವದ ಬಗ್ಗೆ ಕೆಳಮಟ್ಟದಲ್ಲಿ ಮಾತನಾಡ್ತಿದ್ದಾರೆ. ಅವರು ಕೆಳಮಟ್ಟದಲ್ಲಿ ಮಾತನಾಡಿದಷ್ಟೂ ಪಕ್ಷ ನೆಲ ಕಚ್ಚಲಿದೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಕರ್ನಾಟಕಕ್ಕೂ ನಿಮಗೂ ಸಂಬಂಧ ಏನು? – ಬಿ.ಎಲ್.ಸಂತೋಷ್ ವಿರುದ್ಧ ಹೆಚ್‌ಡಿಕೆ ಕಿಡಿ

    ಸಿಎಂ ಉತ್ತರ ಕೊಡಬೇಕು: ಸಚಿವ ಸಂಪುಟ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಮೋದಿ ಅಥವಾ ಅಮಿತ್ ಶಾ ಜೊತೆ ಚರ್ಚೆ ಮಾಡಿಲ್ಲ. ಸಿಎಂ ಜೊತೆ ಮಾತನಾಡಿದಾಗ ತೆಗೆದುಕೊಳ್ಳುತ್ತೇವೆ ಅಂತಾ ಹೇಳಿದ್ದರು. ಆದರೀಗ ನನ್ನ ಯಾಕೆ ತೆಗೆದುಕೊಂಡಿಲ್ಲ ಅಂತಾ ಸಿಎಂ ಉತ್ತರ ಕೊಡಬೇಕು. ಆದ್ರೆ ಯಾವುದೇ ಉತ್ತರ ಬರುತ್ತಿಲ್ಲ. ಆರೋಪ ಬಂದ ನಂತರ ನಾನೇ ರಾಜೀನಾಮೆ ಕೊಟ್ಟು, ತನಿಖೆ ನಂತರವೂ ಕ್ಲೀನ್ ಚಿಟ್ ಸಿಕ್ಕಿದ್ರೂ ತೆಗೆದುಕೊಂಡಿಲ್ಲ. ಕ್ಷೇತ್ರದ ಜನರಿಗೆ ಉತ್ತರ ಕೊಡಲು ಆಗುತ್ತಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ.

    ಬೆಳಗಾವಿ ಅಧಿವೇಶನಕ್ಕೆ ಗೈರು ವಿಚಾರಕ್ಕೆ, ಕೆ.ಜೆ. ಜಾರ್ಜ್ ಗೃಹ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೊಲೆ ಆರೋಪ ಕೇಳಿಬಂದಿತ್ತು. ಆಗ ನಾನು ವಿಪಕ್ಷ ನಾಯಕನಾಗಿದ್ದೆ. ಆಗ ನಾನೇ ರಾಜೀನಾಮೆ ಕೊಡುವಂತೆ ಹೇಳಿದ್ದೆ. ತನಿಖೆ ಆಗಿ ಕ್ಲೀನ್ ಚಿಟ್ ಸಿಕ್ಕ ಬಳಿಕ ಅವರು ಸಚಿವರಾದರು. ನನ್ನ ಮೇಲೆ ಆರೋಪ ಬಂದಾಗ ರಾಜೀನಾಮೆ ಬೇಡ ಎಂದರೂ ನೈತಿಕತೆ ಪ್ರಶ್ನೆ ಬರುತ್ತದೆ ಎಂತಾ ನಾನೇ ರಾಜೀನಾಮೆ ನೀಡಿದೆ. ಆದ್ರೆ ಕ್ಲೀನ್ ಚಿಟ್ ಸಿಕ್ಕ ಬಳಿಕವೂ ಸಚಿವ ಸ್ಥಾನ ನೀಡಿಲ್ಲ. ಎಲ್ಲರೂ ಯಾಕೆ ಸಿಗಲಿಲ್ಲ ಅಂತಾ ಪ್ರಶ್ನೆ ಮಾಡ್ತಿದ್ದಾರೆ. ನನ್ನದು ಸೌಮ್ಯ ರೂಪದ ಪ್ರತಿಭಟನೆ. ನಾನು ಪತ್ರ ಬರೆದಿದ್ದೇನೆ. ಸಿಎಂ ಸಿಕ್ಕಿಲ್ಲ, ಹಾಗಾಗಿ ಇನ್ನೂ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]