Tag: belagavi

  • 3 ವರ್ಷದ ಮಗುವಿನ ಮೇಲೆ ಮಲತಂದೆಯ ಮೃಗೀಯ ವರ್ತನೆ – ಕಟ್ಟಿಗೆಯಿಂದ ಹೊಡೆದು ಹತ್ಯೆ

    3 ವರ್ಷದ ಮಗುವಿನ ಮೇಲೆ ಮಲತಂದೆಯ ಮೃಗೀಯ ವರ್ತನೆ – ಕಟ್ಟಿಗೆಯಿಂದ ಹೊಡೆದು ಹತ್ಯೆ

    ಬೆಳಗಾವಿ: 3 ವರ್ಷದ ಮಗುವನ್ನು ಕಟ್ಟಿಗೆಯಿಂದ ಹೊಡೆದು, ಎಲ್ಲೆಂದರಲ್ಲಿ ಸುಟ್ಟು ಮಲತಂದೆ(Stepfather) ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿಯ(Belagavi) ಬೈಲಹೊಂಗಲ ತಾಲೂಕಿನ ಹಾರೂಗೊಪ್ಪದಲ್ಲಿ(Harugoppa) ನಡೆದಿದೆ.

    ಕಾರ್ತಿಕ್ ಮುಕೇಶ್ ಮಾಂಜಿ (3) ಹತ್ಯೆಯಾದ ಮಗು. ಮಲತಂದೆ ಮಹೇಶ್ವರ್ ಮಾಂಜಿ, ಆತನ ಸ್ನೇಹಿತರು ರಾಕೇಶ್ ಮಾಂಜಿ, ಮಹೇಶ್ ಮತ್ತು ಶ್ರೀನಾಥ್ ಮಾಂಜಿ ಕೊಲೆ ಆರೋಪಿಗಳು. ಇದನ್ನೂ ಓದಿ: ನಾಲ್ಕು ರಾಜ್ಯಗಳ 5 ವಿಧಾನಸಭಾ ಕ್ಷೇತ್ರಗಳಿಗೆ ಜೂ.19ಕ್ಕೆ ಉಪಚುನಾವಣೆ

    ಮಹಿಳೆಯು ಮಹೇಶ್ವರ್ ಮಾಂಜಿಯನ್ನು ಎರಡನೇ ಮದುವೆಯಾಗಿ ಬಿಹಾರದಿಂದ(Bihar) ಬೆಳಗಾವಿಗೆ ಕೆಲಸಕ್ಕೆಂದು ಬಂದಿದ್ದರು. ಮಹಿಳೆಯು ತನ್ನೊಂದಿಗೆ 3 ವರ್ಷದ ಮಗ ಕಾರ್ತಿಕ್‌ನನ್ನ ಕರೆದುಕೊಂಡು ಬಂದಿದ್ದರು. ಇವರೆಲ್ಲ ಬೈಲಹೊಂಗಲ ತಾಲೂಕಿನ ಹಾರೂಗೊಪ್ಪ ಬಳಿ ಕೆಲಸ ಮಾಡಿಕೊಂಡಿದ್ದರು. ಇದನ್ನೂ ಓದಿ: ದೆಹಲಿಯಲ್ಲಿ ಭಾರೀ ಮಳೆ – ರಸ್ತೆಯಲ್ಲಿ ಹೊಳೆಯಂತೆ ಹರಿದ ನೀರು, ಧರೆಗುರುಳಿದ ಮರಗಳು

    ಮಹಿಳೆ ಮತ್ತು ಮಹೇಶ್ವರ್ ಹತ್ತಿ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಬಂದಿದ್ದರು. ಮಗನನ್ನ ಯಾಕೆ ಕರೆದುಕೊಂಡು ಬಂದಿದ್ದೀಯಾ ಎಂದು ಕುಡಿದು ಬಂದು ಹೆಂಡತಿ ಜೊತೆ ಮಹೇಶ್ವರ್ ಮಾಂಜಿ ಜಗಳ ಮಾಡಿದ್ದ. ಈ ವೇಳೆ ಆತನ ಮೂರು ಸ್ನೇಹಿತರು ಸೇರಿಕೊಂಡು ಮಹಿಳೆ ಮೇಲೆ ಹಲ್ಲೆಗೆ ಯತ್ನಿಸಿದ್ದರು. ಈ ವೇಳೆ ಮಗನನ್ನ ಬಿಟ್ಟು ಮಹಿಳೆ ಓಡಿಹೋಗಿದ್ದರು. ಇದನ್ನೂ ಓದಿ: ಕೋವಿಡ್ ಆತಂಕ – ಬೆಂಗಳೂರಿನ ಮಲ್ಲೇಶ್ವರಂ, ರಾಜಾಜಿನಗರದ ಇಬ್ಬರಿಗೆ ಕೊರೊನಾ ಪಾಸಿಟಿವ್

    ಈ ವೇಳೆ ಅಲ್ಲೇ ಇದ್ದ ಮಗುವಿನ ಮೇಲೆ ಪಾಪಿಗಳು ರಾಕ್ಷಸಿಯ ವರ್ತನೆ ತೋರಿಸಿ, ತಲೆಗೆ ಕಟ್ಟಿಗೆಯಿಂದ ಹೊಡೆದು, ಅದೇ ಕಟ್ಟಿಗೆಗೆ ಬೆಂಕಿ ಹಚ್ಚಿ ಎಲ್ಲೆಂದರಲ್ಲಿ ಸುಟ್ಟು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಮಹಿಳೆ ವಾಪಾಸ್ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಕಾಲುಗಳಿಗೆ ಹಗ್ಗ ಕಟ್ಟಿ ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಆತ್ಮಹತ್ಯೆ

    ಮಹಿಳೆಯು ಮುರಗೋಡ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು, 4 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

  • ಅಪ್ರಾಪ್ತೆಯ ಮೇಲೆ ಅತ್ಯಾಚಾರ – ಮೇಖಳಿಯ ಸ್ವಾಮೀಜಿ ಅರೆಸ್ಟ್‌, ಜೈಲುಪಾಲು

    ಅಪ್ರಾಪ್ತೆಯ ಮೇಲೆ ಅತ್ಯಾಚಾರ – ಮೇಖಳಿಯ ಸ್ವಾಮೀಜಿ ಅರೆಸ್ಟ್‌, ಜೈಲುಪಾಲು

    ಬೆಳಗಾವಿ: ಅಪ್ರಾಪ್ತೆಯ ಮೇಲೆ ಅತ್ಯಾಚಾರ (Rape) ಎಸಗಿದ ಆರೋಪದಡಿ ಕಾಮುಕ ಸ್ವಾಮೀಜಿಯನ್ನು ಅರೆಸ್ಟ್ ಮಾಡಲಾಗಿದೆ.

    ರಾಯಬಾಗ ತಾಲೂಕಿನ ಮೇಖಳಿಯ ರಾಮಮಂದಿರದ (Ram Mandir) ಲೋಕೇಶ್ವರ ಸ್ವಾಮೀಜಿ ವಿರುದ್ಧ ಪೋಕ್ಸೋ ಕೇಸ್‌ (Pocso Case) ದಾಖಲಾಗಿದ್ದು ಪೊಲೀಸರು ಈಗ ಜೈಲಿಗಟ್ಟಿದ್ದಾರೆ.

    ಬಾಗಲಕೋಟೆ (Bagalkote) ನಗರದ ಲಾಡ್ಜ್‌ನಲ್ಲಿ ಅತ್ಯಾಚಾರ ಎಸಗಿ ಬಳಿಕ ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಬಾಲಕಿಯನ್ನು ಬಿಡಲಾಗಿತ್ತು. ಬಾಗಲಕೋಟೆಯ ನವನಗರದ ಮಹಿಳಾ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾದ ನಂತರ ಬೆಳಗಾವಿಯ ಮೂಡಲಗಿಗೆ ವರ್ಗಾವಣೆಯಾಗಿತ್ತು. ಇದನ್ನೂ ಓದಿ: ಭಾರತದಲ್ಲಿ ಐಫೋನ್‌ ತಯಾರಿಸಿದರೆ 25% ಸುಂಕ – ಆಪಲ್‌ಗೆ ಟ್ರಂಪ್‌ ವಾರ್ನಿಂಗ್‌

     

    ಏನಿದು ಕೇಸ್‌?
    ಬಾಲಕಿಗೆ 17 ವರ್ಷ ಆಗಿದ್ದು ಆಕೆ ಹುಷಾರಿಲ್ಲದೇ ಇದ್ದಾಗ ಪೋಷಕರು ಆಕೆಯನ್ನು ಆಗಾಗ ಮಠಕ್ಕೆ ತಂದು ಬಿಟ್ಟು ಹೋಗುತ್ತಿದ್ದರು. ವಾರಗಟ್ಟಲೇ ಮಗಳನ್ನು ಸ್ವಾಮೀಜಿಯ ಸುಪರ್ದಿಗೆ ಒಪ್ಪಿಸಿ ಮಠದಲ್ಲೇ ಬಿಡುತ್ತಿದ್ದರು.

    ಹೀಗೆ ಮಠಕ್ಕೆ ಬಂದಿದ್ದ ಬಾಲಕಿಯನ್ನು ಆಕೆಯ ಮನೆಗೆ ಬಿಡಲು ಲೋಕೇಶ್ವರ ಸ್ವಾಮೀಜಿ ತೀರ್ಮಾನಿಸಿದ್ದ. ಮೇ 13 ರಂದು ಇಬ್ಬರು ಕಾರಿನಲ್ಲಿ ಪ್ರಯಾಣ ಬೆಳೆಸಿದ್ದಾರೆ. ರಾಯಚೂರಿನಲ್ಲಿ 2 ದಿನ ಇದ್ದ ಇವರು ಮೇ15 ರಂದು ಬಾಗಲಕೋಟೆಗೆ ಬಂದಿದ್ದಾರೆ.

    ಈ ಎರಡು ಕಡೆ ಆರೋಪಿ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರ ಎಸಗಿದ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವ ಬೆದರಿಕೆಯನ್ನು ಹಾಕಿ ಮೇ 16 ರಂದು ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಬಾಲಕಿಯನ್ನು ಬಿಟ್ಟು ತೆರಳಿದ್ದಾನೆ. ಇದನ್ನೂ ಓದಿ: ಬೆಂಗಳೂರಲ್ಲಿ 9 ತಿಂಗಳ ಮಗು ಸೇರಿ ಮೂರು ಮಕ್ಕಳಿಗೆ ಕೊರೊನಾ ಪಾಸಿಟಿವ್‌

    ಮೇ17 ರಂದು ಬಾಗಲಕೋಟೆ ಮಹಿಳಾ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗುತ್ತದೆ. ವಿಚಾರಣೆಗೆ ಒಳಪಡಿಸಿದಾಗ ಬಾಲಕಿ ನಡೆದ ಎಲ್ಲಾ ಘಟನೆಗಳನ್ನು ವಿವರಿಸಿದ್ದಾಳೆ. ಕೇಸ್‌ ದಾಖಲಾದ ಬಳಿಕ ಪ್ರಕರಣ ಬೆಳಗಾವಿಯ ಮೂಡಲಗಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು.

    2021ರಲ್ಲಿ ಸ್ವಾಮೀಜಿಗೆ ಧರ್ಮದೇಟು ನೀಡಿ ಗ್ರಾಮಸ್ಥರು ಬುದ್ಧಿವಾದ ಹೇಳಿದ್ದರು. ಮಠದಲ್ಲಿ ಸಾಕಷ್ಟು ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

  • ಕರ್ನಾಟಕದ ವಿದ್ಯಾರ್ಥಿನಿ ಮೇಲೆ ಮಹಾರಾಷ್ಟ್ರದಲ್ಲಿ ಗ್ಯಾಂಗ್ ರೇಪ್

    ಕರ್ನಾಟಕದ ವಿದ್ಯಾರ್ಥಿನಿ ಮೇಲೆ ಮಹಾರಾಷ್ಟ್ರದಲ್ಲಿ ಗ್ಯಾಂಗ್ ರೇಪ್

    – ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಘಟನೆ
    – ಮತ್ತು ಬರುವ ಔಷಧಿ ಬೆರೆಸಿ ಪಾನೀಯ ನೀಡಿದ್ದ ಕಿರಾತಕರು

    ಬೆಳಗಾವಿ: ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಬೆಳಗಾವಿ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸ್ನೇಹಿತರೇ ಸಾಮೂಹಿಕ ಅತ್ಯಾಚಾರ ನಡೆಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

    ಮೇ 20 ರಂದು ಸ್ನೇಹಿತರ ಜೊತೆಗೆ ರಾತ್ರಿ ಸಿನಿಮಾ ನೋಡಲು ಯುವತಿ ಹೋಗಿದ್ದಳು. ಸಿನಿಮಾ ಮುಗಿಸಿ ವಾಪಸ್ ಸ್ನೇಹಿತರ ಪ್ಲ್ಯಾಟ್‌ಗೆ ಹೋಗಿದ್ದಳು. ಈ ವೇಳೆ ಯುವತಿಗೆ ಪಾನೀಯದಲ್ಲಿ ನಿದ್ರೆ ಮಾತ್ರೆ ಹಾಕಿ ಬಳಿಕ ಅತ್ಯಾಚಾರ ನಡೆದಿದೆ.

    ಬೆಳಗ್ಗೆ ಎದ್ದ ಬಳಿಕ ಅತ್ಯಾಚಾರ ಆಗಿದ್ದರ ಬಗ್ಗೆ ಬೆಳಕಿಗೆ ಬಂದಿದೆ. ಕೂಡಲೇ ಯುವತಿ ಕುಟುಂಬಸ್ಥರ ಗಮನಕ್ಕೆ ತಂದಿದ್ದಾಳೆ. ಸಾಂಗ್ಲಿಯ ವಿಶ್ರಾಂಬಾಗ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮೂವರನ್ನ ಬಂಧಿಸಿದ್ದಾರೆ.

    ಸೊಲ್ಲಾಪುರದ ವಿನಯ್ ಪಾಟೀಲ್ (22), ಪುಣೆಯ ಸರ್ವಜ್ಞ ಗಾಯಕವಾಡ (22), ಸಾಂಗ್ಲಿಯ ತನ್ಮಯ್ ಪೇಡ್ನೆಕರ್ (21) ಬಂಧನ‌ ಆಗಿದೆ. ನ್ಯಾಯಾಲಯವು ಆರೋಪಿಗಳನ್ನ ಆರು ದಿನ ಪೊಲೀಸ್ ಕಸ್ಟಡಿಗೆ ನೀಡಿದೆ.

  • ಧಾರವಾಡ | ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ – ಬ್ಯಾಂಕ್ ಮ್ಯಾನೇಜರ್ ಸಾವು

    ಧಾರವಾಡ | ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ – ಬ್ಯಾಂಕ್ ಮ್ಯಾನೇಜರ್ ಸಾವು

    ಧಾರವಾಡ: ಇಲ್ಲಿನ ತೇಗೂರು(Tegur) ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬ್ಯಾಂಕ್ ಮ್ಯಾನೇಜರ್(Bank Manager) ಒಬ್ಬರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇನ್ನಿಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

    ಮಧ್ಯಪ್ರದೇಶ ಮೂಲದ ಬೆಳಗಾವಿ ಕೆನರಾ ಬ್ಯಾಂಕ್‌ನಲ್ಲಿ ಮ್ಯಾನೇಜರ್ ಆಗಿದ್ದ ರಾಹುಲ್ ಶುಕ್ಲಾ (40) ಮೃತ ದುರ್ದೈವಿ. ಇದನ್ನೂ ಓದಿ: ಹಾಸನ | ಕಾಡಾನೆ ದಾಳಿಗೆ ಮಹಿಳೆ ಬಲಿ – ಮೃತರ ಕುಟುಂಬಕ್ಕೆ 20 ಲಕ್ಷ ಪರಿಹಾರ

    ಧಾರವಾಡ ಕಡೆಯಿಂದ ವಾಪಸ್ ಬೆಳಗಾವಿ ಕಡೆಗೆ ತೆರಳುತ್ತಿದ್ದ ಸಂದರ್ಭ ಎದುರು ಹೋಗುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ರಾಹುಲ್ ಶುಕ್ಲಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಪರಂ ವಿರುದ್ಧದ ಷಡ್ಯಂತ್ರಕ್ಕೆ ಕಾಂಗ್ರೆಸ್‌ನ ಮಹಾನಾಯಕನೇ ಸೂತ್ರಧಾರ: ಹೆಚ್‌ಡಿಕೆ ಬಾಂಬ್

    ಪತ್ನಿ ಶ್ರೇಯಾ ಶುಕ್ಲಾ (35) ಹಾಗೂ ಮೂರು ವರ್ಷದ ಮಗಳು ಕಿಯಾನಾ ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ತಮನ್ನಾನು ಬೇಡ, ಸುಮನ್ನಾನು ಬೇಡ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ರಾಯಭಾರಿ ಆಗ್ತೀನಿ: ವಾಟಾಳ್ ನಾಗರಾಜ್

    ಅಪಘಾತ ಸಂಭವಿಸುತ್ತಿದ್ದಂತೆ ಲಾರಿ ನಿಲ್ಲಿಸದ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಲಂಚ ಪಡೆದು ಲಾಕ್ ಆದ ಅಧಿಕಾರಿ – ಲೋಕಾ ದಾಳಿ ವೇಳೆ ಅಸ್ವಸ್ಥಗೊಂಡ ಸಿಬ್ಬಂದಿ!

    ಲಂಚ ಪಡೆದು ಲಾಕ್ ಆದ ಅಧಿಕಾರಿ – ಲೋಕಾ ದಾಳಿ ವೇಳೆ ಅಸ್ವಸ್ಥಗೊಂಡ ಸಿಬ್ಬಂದಿ!

    ಬೆಳಗಾವಿ: ಅಂಗನವಾಡಿ ಸಹಾಯಕಿಯ ವರ್ಗಾವಣೆಗೆ 30 ಸಾವಿರ ರೂ. ಲಂಚ ಕೇಳಿದ್ದ ಬೆಳಗಾವಿಯ (Belagavi) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (Women and Child Development Department) ಅಧಿಕಾರಿ ಹಾಗೂ ಇಲಾಖೆಯ ಸಿಬ್ಬಂದಿ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾರೆ.

    ಇಲಾಖೆ ಸೂಪರಿಂಟೆಂಡೆಂಟ್ ಅಬ್ದುಲ್ ವಲಿ ಹಾಗೂ ಕಂಪ್ಯೂಟರ್ ಆಪರೇಟರ್ ಸೌಮ್ಯಾ ಬಡಿಗೇರ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಅಧಿಕಾರಿಗಳು. ಇಬ್ಬರು ಸೇರಿ, ಹುಕ್ಕೇರಿ ಮೂಲದ ಅಂಗನವಾಡಿ ಸಹಾಯಕಿ ಶಕುಂತಲಾ ಕಾಂಬ್ಳೆಯವರ ವರ್ಗಾವಣೆಗೆ 30 ಸಾವಿರ ರೂ. ಹಣದ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅಂಗನವಾಡಿ ಸಹಾಯಕಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

    ಅಂಗನವಾಡಿ ಸಹಾಯಕಿಯಿಂದ ಅಧಿಕಾರಿಗಳು 15 ಸಾವಿರ ರೂ. ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿ ಆಗುತ್ತಿದ್ದಂತೆ ಕಂಪ್ಯೂಟರ್ ಆಪರೇಟರ್ ಸೌಮ್ಯಾ ಅಸ್ವಸ್ಥರಾಗಿದ್ದು, ತಕ್ಷಣವೇ ಕಚೇರಿಗೆ ವೈದ್ಯರನ್ನ ಕರೆಸಿ ಚಿಕಿತ್ಸೆ ಕೊಡಿಸಲಾಗಿದೆ.

    ಹಣ ಪಡೆದಿದ್ದ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

  • ರೆಸಾರ್ಟ್‌ನಲ್ಲಿ ಅಪ್ರಾಪ್ತೆಯ ಮೇಲೆ ಗ್ಯಾಂಗ್‌ ರೇಪ್‌ – ಸಿಪಿಐ ಪುತ್ರ ಸೇರಿ ಮೂವರು ಅರೆಸ್ಟ್‌

    ರೆಸಾರ್ಟ್‌ನಲ್ಲಿ ಅಪ್ರಾಪ್ತೆಯ ಮೇಲೆ ಗ್ಯಾಂಗ್‌ ರೇಪ್‌ – ಸಿಪಿಐ ಪುತ್ರ ಸೇರಿ ಮೂವರು ಅರೆಸ್ಟ್‌

    ಬೆಳಗಾವಿ: 15 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್ (Gang Rape) ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಅಪ್ರಾಪ್ತ ಸೇರಿ ಮೂವರನ್ನು ಪೊಲೀಸರು (Police) ಬಂಧಿಸಿದ್ದಾರೆ.

    ರಾಜ್ಯದ ಬೇರೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಪಿಐ ಪುತ್ರ ಸೇರಿ ಅಪ್ರಾಪ್ತ ಆರೋಪಿಯನ್ನು ಬಂಧಿಸಲಾಗಿದೆ. ರೆಸಾರ್ಟ್ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬೆಳಗಾವಿಯ ಮಾರ್ಕೆಟ್‌ ಪೊಲೀಸರು ಬಂಧಿಸಿದ್ದಾರೆ.

    ಸಾಕೀಬ್ ಮತ್ತು ಇಬ್ಬರು ಅಪ್ರಾಪ್ತರು ಬಾಲಕಿಯ ಮೇಲೆ ಅತ್ಯಾಚಾರ ಮಾಡಿರುವ ಆರೋಪ ಕೇಳಿ ಬಂದಿದೆ. ಅಪ್ರಾಪ್ತರಿಗೆ ರೆಸಾರ್ಟ್ ಕೊಟ್ಟ ಆರೋಪದಡಿ ರೋಹನ್ ಪಾಟೀಲ್ ಹಾಗೂ ಅಶುತೋಷ್‌ ಪಾಟೀಲ್ ಇಬ್ಬರನ್ನು ಬಂಧಿಸಿ ಈಗಾಗಲೇ ಪೊಲೀಸರು ಹಿಂಡಲಗಾ ಜೈಲಿಗೆ ಕಳಿಸಿದ್ದಾರೆ.

    ಆರೋಪಿಗಳು ಮನೆಯೊಂದನ್ನು ಬಾಡಿಗೆಗೆ ಪಡೆದು ತಿಂಗಳಿಗೆ 20 ಸಾವಿರ ಬಾಡಿಗೆಗೆ ಪಡೆದು ರೆಸಾರ್ಟ್ ಆಗಿ ಪರಿವರ್ತನೆ‌ ಮಾಡಿದ್ದರು. ಇದನ್ನೂ ಓದಿ: ರೇಪ್‌ ಮಾಡಿ ಗರ್ಭಪಾತ, ಖಾಸಗಿ ವಿಡಿಯೋ ಇಟ್ಕೊಂಡು ಬ್ಲ್ಯಾಕ್‌ಮೇಲ್‌ – ಸಹ ಕಲಾವಿದೆಯ ದೂರಿನಲ್ಲಿ ಏನಿದೆ?

     
    ಏನಿದು ಪ್ರಕರಣ?
    ಒಂದು ವಾರದ ಹಿಂದೆ ಘಟನೆ ನಡೆದಿದ್ದು, ಸಾಕೀಬ್ ಹಾಗೂ ಇಬ್ಬರು ಅಪ್ರಾಪ್ತರು ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದರು. ಸಾಕೀಬ್ ತನ್ನ ಹೆಸರಲ್ಲಿ ರೂಮ್ ಬುಕ್ ಮಾಡಿದ್ದ. ಬಾಲಕಿಯ ಸ್ನೇಹಿತನಾಗಿರುವ ಅಪ್ರಾಪ್ತ ಆಕೆಯನ್ನು ಕರೆದುಕೊಂಡು ರೂಮಿಗೆ ಹೋಗಿದ್ದು, ಮೂವರು ಸೇರಿಕೊಂಡು ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದರು. ಇದನ್ನೂ ಓದಿ: ರನ್ಯಾ ಮದುವೆಗೆ ಪರಮೇಶ್ವರ್‌ 20 ಲಕ್ಷ ಗಿಫ್ಟ್‌ ಕೊಟ್ಟಿರಬಹುದು: ಡಿಕೆಶಿ

    ಮನೆಗೆ ವಾಪಸ್ ಬಂದ ಬಳಿಕ ಬಾಲಕಿ ಹೊಟ್ಟೆ ನೋವು ಎಂದಿದ್ದಳು. ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

  • Belagavi | 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಅಪ್ರಾಪ್ತ ಸೇರಿ ಇಬ್ಬರ ಬಂಧನ

    Belagavi | 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಅಪ್ರಾಪ್ತ ಸೇರಿ ಇಬ್ಬರ ಬಂಧನ

    – ಮತ್ತೋರ್ವ ಅಪ್ರಾಪ್ತನಿಗಾಗಿ ಶೋಧ

    ಬೆಳಗಾವಿ: ಹದಿನೈದು ವರ್ಷದ ಬಾಲಕಿ ಮೇಲೆ ಇಬ್ಬರು ಅಪ್ರಾಪ್ತರು ಸೇರಿ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಗಾವಿ (Belagavi) ಹೊರ ವಲಯದ ರೆಸಾರ್ಟ್‌ನಲ್ಲಿ (Resort) ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಒಂದು ವಾರದ ಹಿಂದೆ ಘಟನೆ ನಡೆದಿದ್ದು, ಸಾಕೀಬ್ ಹಾಗೂ ಇಬ್ಬರು ಅಪ್ರಾಪ್ತರು ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಸಾಕೀಬ್ ತನ್ನ ಹೆಸರಲ್ಲಿ ರೂಮ್ ಬುಕ್ ಮಾಡಿದ್ದ. ಬಾಲಕಿಯ ಸ್ನೇಹಿತನಾಗಿರುವ ಅಪ್ರಾಪ್ತ ಆಕೆಯನ್ನು ಕರೆದುಕೊಂಡು ರೂಮಿಗೆ ಹೋಗಿದ್ದು, ಮೂವರು ಸೇರಿಕೊಂಡು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಇದನ್ನೂ ಓದಿ: ನೀರಿನ ಬಾಟಲಿಗೆ 1 ರೂ. ಜಿಎಸ್‌ಟಿ – ರೆಸ್ಟೋರೆಂಟ್‌ಗೆ 8 ಸಾವಿರ ದಂಡ

    ಮನೆಗೆ ವಾಪಸ್ ಬಂದ ಬಳಿಕ ಬಾಲಕಿ ಹೊಟ್ಟೆ ನೋವು ಎಂದಿದ್ದಳು. ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಗಳಾದ ಸಾಕೀಬ್ ಮತ್ತು ಓರ್ವ ಅಪ್ರಾಪ್ತನನ್ನು ಪೊಲೀಸರು ಬಂಧಿಸಿದ್ದು, ಮತ್ತೋರ್ವ ಅಪ್ರಾಪ್ತ ಬಾಲಕನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲೊಬ್ಬ ಆಧುನಿಕ ರಾಬಿನ್ ಹುಡ್ – ಕಳ್ಳತನ ಮಾಡಿ 20 ಮಕ್ಕಳ ಶಾಲಾ, ಕಾಲೇಜು ಫೀಸ್ ಕಟ್ಟಿದ ಕಳ್ಳ ಅರೆಸ್ಟ್

  • ಬೆಳಗಾವಿ | ಯೋಧನ ಅಂತ್ಯಸಂಸ್ಕಾರಕ್ಕೆ ಜಾಗ ಕೇಳಿದ್ದಕ್ಕೆ ಲಾಠಿಚಾರ್ಜ್ – ಗ್ರಾಮಸ್ಥರ ಆಕ್ರೋಶ

    ಬೆಳಗಾವಿ | ಯೋಧನ ಅಂತ್ಯಸಂಸ್ಕಾರಕ್ಕೆ ಜಾಗ ಕೇಳಿದ್ದಕ್ಕೆ ಲಾಠಿಚಾರ್ಜ್ – ಗ್ರಾಮಸ್ಥರ ಆಕ್ರೋಶ

    ಬೆಳಗಾವಿ: ಅಪಘಾತದಲ್ಲಿ ಮೃತಪಟ್ಟ ಯೋಧನ ಅಂತ್ಯ ಸಂಸ್ಕಾರಕ್ಕೆ ಜಾಗ ಕೇಳಿದ್ದಕ್ಕಾಗಿ ಗ್ರಾಮಸ್ಥರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿರುವುದು ಬೈಲಹೊಂಗಲ ತಾಲೂಕಿನ ಮುರಗೋಡ ಗ್ರಾಮದಲ್ಲಿ ನಡೆದಿದೆ.

    ಯೋಧ ವಿಷ್ಣು ಕಾರಜೋಳ (25) ಮೂರು ತಿಂಗಳ ಹಿಂದೆ ಕರ್ತವ್ಯದಲ್ಲಿದ್ದಾಗಲೇ ಬಿದ್ದು ಗಾಯಗೊಂಡಿದ್ದರು. ಗಾಯಗೊಂಡ ಯೋಧನನ್ನು ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಾಲ್ಕು ದಿನಗಳ ಹಿಂದೆ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳಿದಿದ್ದರು.

    ಭಾನುವಾರ ಸ್ವಗ್ರಾಮ ಮುರಗೋಡ್‍ಗೆ ಮೃತ ಯೋಧನ ಪಾರ್ಥಿವ ಶರೀರವನ್ನು ತರಲಾಗಿತ್ತು. ಈ ವೇಳೆ ಯೋಧನ ಅಂತ್ಯಕ್ರಿಯೆಗೆ ಗ್ರಾಮಸ್ಥರು ಗ್ರಾಮದಲ್ಲಿ ಸರ್ಕಾರಿ ಜಾಗಕ್ಕಾಗಿ ಗ್ರಾಮ ಪಂಚಾಯತಿ ಬಳಿ ಬೇಡಿಕೆ ಇಟ್ಟಿದ್ದರು. ಪಿಡಿಒ ಸರ್ಕಾರಿ ಜಾಗ ಕೊಡಲು ಸಾಧ್ಯವಿಲ್ಲ. ಸಾರ್ವಜನಿಕ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ಮಾಡುವಂತೆ ಹೇಳಿದ್ದರು. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ದಿಢೀರ್ ಪ್ರತಿಭಟನೆ ನಡೆಸಿದ್ದರು.

    ರೊಚ್ಚಿಗೆದ್ದ ಗ್ರಾಮಸ್ಥರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿ ಜನರನ್ನು ಚದುರಿಸಿದ್ದರು. ಬಳಿಕ ಯೋಧನ ಕುಟುಂಬಸ್ಥರು ತಡರಾತ್ರಿ ಸಾರ್ವಜನಿಕ ರುಧ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಿದ್ದರು. ಪೊಲೀಸರ ನಡೆ ವಿರುದ್ಧ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

  • ಮಹಿಳೆ ಕೊಲೆ ಮಾಡಿ ಬೈಕ್ ಅಪಘಾತವೆಂದು ಬಿಂಬಿಸಿದ ಪತಿ, ಮಾವ, ಅತ್ತೆ ಅರೆಸ್ಟ್

    ಮಹಿಳೆ ಕೊಲೆ ಮಾಡಿ ಬೈಕ್ ಅಪಘಾತವೆಂದು ಬಿಂಬಿಸಿದ ಪತಿ, ಮಾವ, ಅತ್ತೆ ಅರೆಸ್ಟ್

    ಚಿಕ್ಕೋಡಿ: ಮಕ್ಕಳಾಗಿಲ್ಲ ಎಂದು ಮಹಿಳೆಯನ್ನು ಭೀಕರವಾಗಿ ಕೊಲೆ (Murder) ಮಾಡಿ ಇದು ಕೊಲೆಯಲ್ಲ ಬೈಕ್ ಅಪಘಾತವೆಂದು (Accident) ಬಿಂಬಿಸಿಸಲು ಯತ್ನಿಸಿದ‌ ಮಹಿಳೆಯ ಪತಿ, ಮಾವ, ಹಾಗೂ ಅತ್ತೆಯನ್ನ ಪೊಲೀಸರು ಅರೆಸ್ಟ್ ಮಾಡಿ ಜೈಲಿಗಟ್ಟಿದ್ದಾರೆ.

    ಅಥಣಿ ತಾಲೂಕಿನ ಮಲಬಾದ ಗ್ರಾಮದ ರೇಣುಕಾ ಸಂತೋಷ ಹೋನಕಾಂಡೆ (27) ಮೃತ ಮಹಿಳೆಯಾಗಿದ್ದು. ಶನಿವಾರ ತಡ ರಾತ್ರಿ ಕೊಲೆ‌ ಮಾಡಿ ಅಪಘಾತವೆಂದು ಬಿಂಬಿಸಲಾಗಿತ್ತು. ಇದನ್ನೂ ಓದಿ: ಏರೋಸ್ಪೇಸ್ ಎಂಜಿನಿಯರ್ ಸಾವು ಕೇಸ್‌ಗೆ ಟ್ವಿಸ್ಟ್ – 2 ಮಕ್ಕಳ ತಂದೆಯೊಂದಿಗೆ ಪ್ರೇಮ ವೈಫಲ್ಯ

     

    ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಸಂತೋಷ ಹೊನಕಾಂಡೆ, ಮಾವ ಕಾಮಣ್ಣ ಹಾಗೂ ಅತ್ತೆ ಜಯಶ್ರೀಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಇದನ್ನೂ ಓದಿ: ಹೈದರಾಬಾದ್‌ನಲ್ಲಿ ನಕಲಿ ಬಾಂಬ್ ಬ್ಲಾಸ್ಟ್ ಮಾಡಲು ಸಂಚು – ಇಬ್ಬರು ಶಂಕಿತ ಉಗ್ರರ ಬಂಧನ

    ಅಥಣಿಯಿಂದ ಬೈಕ್ ಮೇಲೆ ಹೊರಟಾಗ ಬೈಕ್ ಚಕ್ರಕ್ಕೆ ಸೀರೆ ಸಿಲುಕಿ ಮಹಿಳೆ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಬಿಂಬಿಸಲು ಹೊರಟ ಹಂತಕರನ್ನ ಸಂಶಯಾಸ್ಪದವಾಗಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇದು ಅಪಘಾತವಲ್ಲ ಕೊಲೆ ಎಂದು ಬೆಳಕಿಗೆ ಬಂದಿದೆ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಬೆಳಗಾವಿಯಲ್ಲಿ ಮುಸ್ಲಿಮರ ಪ್ರತಿಭಟನೆ – ಪೊಲೀಸರ ಮೇಲೆ ಚಪ್ಪಲಿ ಎಸೆದ ಕಿಡಿಗೇಡಿಗಳು

    ಬೆಳಗಾವಿಯಲ್ಲಿ ಮುಸ್ಲಿಮರ ಪ್ರತಿಭಟನೆ – ಪೊಲೀಸರ ಮೇಲೆ ಚಪ್ಪಲಿ ಎಸೆದ ಕಿಡಿಗೇಡಿಗಳು

    ಬೆಳಗಾವಿ: ಸಂತಿ ಬಸ್ತವಾಡ ಗ್ರಾಮದ ಕುರಾನ್ (Quran) ಸುಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಸ್ಲಿಮರು ನಡೆಸಿದ ಪ್ರತಿಭಟನೆಯಲ್ಲಿ (Protest) ಪೊಲೀಸರ (Police) ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದಿದ್ದಾರೆ.

    ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಇಂದು ಬೃಹತ್‌ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಸಿಸಿಬಿ ಪಿಐ ಗಡ್ಡೇಕರ್ ಅವರತ್ತ ಚಪ್ಪಲಿ ತೂರಿ ಬಂದಿದೆ. ಇದನ್ನೂ ಓದಿ: 40,000 ಫ್ಯಾನ್ಸ್‌ಗಳಿಂದ ವೈಟ್ ಜೆರ್ಸಿಯಲ್ಲಿ `ಕಿಂಗ್ ಕೊಹ್ಲಿ’ಗೆ ಗೌರವ

     

    ಚಪ್ಪಲಿ ಮೈಮೇಲೆ ಬಿದ್ದರೂ ಬಂದೋಬಸ್ತ್‌ನಲ್ಲಿ ತೊಡಗಿದ್ದ ಗಡ್ಡೇಕರ್ ತಮ್ಮ ಕರ್ತವ್ಯವನ್ನು ಮುಂದುವರೆಸಿದ್ದಾರೆ. ನೂರಾರು ಜನ ಸೇರಿದ ಪ್ರತಿಭಟನಾ ರ‍್ಯಾಲಿಯಲ್ಲಿ ಚಪ್ಪಲಿ ಎಸೆದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ.

    ಬೆಳಗಾವಿ ಪೊಲೀಸರು ಆರೋಪಿಗಳ ಬಂಧನಕ್ಕೆ ಮೂರು ದಿನ ಸಮಯ ಕೇಳಿದ್ದರು. ಮೂರು ದಿನವಾದರೂ ಆರೋಪಿಗಳ ಬಂಧಿಸದ ಹಿನ್ನೆಲೆ ಮುಸ್ಲಿಮ್‌ ಸಮುದಾಯ ಒಗ್ಗಟ್ಟು ಪ್ರದರ್ಶನ ಮಾಡಿ ಪ್ರತಿಭಟಿಸಿತು.