Tag: belagavi

  • ಕರ್ನಲ್ ಸೋಫಿಯಾ ಪತಿ ಮನೆ ಮೇಲೆ RSS ದಾಳಿ ವದಂತಿ – ಪೋಸ್ಟ್ ಮಾಡಿದ್ದವನ ವಿರುದ್ಧ FIR

    ಕರ್ನಲ್ ಸೋಫಿಯಾ ಪತಿ ಮನೆ ಮೇಲೆ RSS ದಾಳಿ ವದಂತಿ – ಪೋಸ್ಟ್ ಮಾಡಿದ್ದವನ ವಿರುದ್ಧ FIR

    ಬೆಳಗಾವಿ: `ಆಪರೇಷನ್ ಸಿಂಧೂರ’ದ (Operation Sindoor) ಬಗ್ಗೆ ವಿವರವಾಗಿ ಮಾಹಿತಿ ನೀಡಿದ್ದ ಕರ್ನಲ್ ಸೋಫಿಯಾ ಖುರೇಷಿ (Colonel Sophia Qureshi) ಪತಿ ಮನೆ ಮೇಲೆ ಆರ್‌ಎಸ್‌ಎಸ್ (RSS) ದಾಳಿ ನಡೆಸಿದೆ ಎಂಬ ವದಂತಿ ಹಬ್ಬಿಸಿದ ವ್ಯಕ್ತಿಯ ವಿರುದ್ಧ ಇದೀಗ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

    ವದಂತಿ ಹಬ್ಬಿಸಿದ್ದ ಅನೀಸ್ ಉದ್ದೀನ್ ಮೇಲೆ ಬೆಳಗಾವಿ ಜಿಲ್ಲಾ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಬೆಳಗಾವಿ ಎಸ್ಪಿ ಭೀಮಾಶಂಕರ್ ಗುಳೇದ್ ಅವರ ಸೂಚನೆ ಮೇರೆಗೆ ಬಿಎನ್‌ಎಸ್ ಕಾಯ್ದೆಯಡಿ 353(2), 192 ಸೆಕ್ಷನ್ ಅಡಿಯಲ್ಲಿ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.ಇದನ್ನೂ ಓದಿ: ಪ್ರಧಾನಿ ಮೋದಿ, ರಫೆಲ್ ಯುದ್ಧ ವಿಮಾನದ ಬಗ್ಗೆ ಅವಹೇಳನಕಾರಿ ಪೋಸ್ಟ್ – ಯುವಕ ಅರೆಸ್ಟ್

    ಈ ಕುರಿತು ಬುಧವಾರ ಬೆಳಗಾವಿ ಎಸ್ಪಿ ಡಾ.ಭೀಮಾಶಂಕರ್ ಗುಳೇದ ಮಾಧ್ಯಮದವರೊಂದಿಗೆ ಮಾತನಾಡಿ, ಎಕ್ಸ್ ಖಾತೆಯಲ್ಲಿ ಕರ್ನಲ್ ಸೋಫಿಯಾ ಪತಿ ಮನೆಯ ಮೇಲೆ ಆರ್‌ಎಸ್‌ಎಸ್ ಬೆಂಬಲಿತ ಹಿಂದೂಗಳು ದಾಳಿ ಮಾಡಿ, ಮನೆ ದ್ವಂಸ ಮಾಡಿದ್ದಾರೆ ಎಂದು ಸುಳ್ಳು ಪೋಸ್ಟ್ ಹಾಕಲಾಗಿತ್ತು. ಅನೀಸ್ ಉದ್ದಿನ್ ಎಂಬಾತ ಎಕ್ಸ್ ಖಾತೆಯಲ್ಲಿ ಸುಳ್ಳು ಸುದ್ದಿ ಹಾಕಿಕೊಂಡಿದ್ದ ಎಂದು ಹೇಳಿದ್ದರು.

    ಪೋಸ್ಟ್‌ನಲ್ಲಿ ಕರ್ನಲ್ ಸೋಫಿಯಾ ಅವರ ಫೋಟೋ ಹಾಗೂ ಮನೆಯನ್ನು ಧ್ವಂಸ ಮಾಡಿರುವ ಯಾವುದೋ ಒಂದು ಹಳೆಯ ಫೋಟೋವನ್ನು ಹಾಕಿ ಹಂಚಿಕೊಳ್ಳಲಾಗಿತ್ತು. ಈ ವಿಚಾರವಾಗಿ ಜಿಲ್ಲಾ ಸಾಮಾಜಿಕ ಮಾಧ್ಯಮ ಮಾನಿಟರಿಂಗ್ ಟೀಂ ನಮ್ಮ ಗಮನಕ್ಕೆ ತಂದಿತ್ತು. ನಾನು ಅದಕ್ಕೆ ಇದು ಸುಳ್ಳು ಸುದ್ದಿ ಎಂದು ಕಾಮೆಂಟ್ ಮಾಡಿ, ತಕ್ಷಣವೇ ಪೋಸ್ಟ್ ಡಿಲೀಟ್ ಮಾಡುವಂತೆ ಸೂಚಿಸಿದ್ದೆ. ಕೂಡಲೇ ನಾವು ಸೋಫಿಯಾ ಖುರೇಷಿ ಅವರ ಪತಿ ಮನೆಗೆ ನಮ್ಮ ಪೊಲೀಸರನ್ನು ಕಳಿಸಿದ್ದೆವು, ಯಾವುದೇ ದಾಳಿ ನಡೆದಿಲ್ಲ ಎನ್ನುವುದು ಗೊತ್ತಾಗಿದೆ. ಆದರೂ ಸುರಕ್ಷತಾ ದೃಷ್ಟಿಯಿಂದ ಪೊಲೀಸರು ಸೋಫಿಯಾ ಪತಿ ಮನೆಗೆ ಭದ್ರತೆ ಒದಗಿಸಲಾಗಿದೆ ಎಂದು ತಿಳಿಸಿದ್ದರು.

    ಪೋಸ್ಟ್ ಮಾಡಿದ ವ್ಯಕ್ತಿ ಕೊಲಂಬಿಯಾ ಮೂಲದವನು ಎಂದು ಗೊತ್ತಾಗಿದೆ. ಹೊರದೇಶದವನು ಎಂದು ಗೊತ್ತಾಗಿದ್ದಕ್ಕೆ ಎಫ್‌ಐಆರ್ ಮಾಡಿಕೊಂಡಿಲ್ಲ. ಸದ್ಯ ಎಕ್ಸ್ ಲೀಗಲ್ ಟೀಂನಿಂದ ಮಾಹಿತಿ ಪಡೆಯುತ್ತಿದ್ದೇವೆ. ಒಂದು ವೇಳೆ ಆತ ಭಾರತದವನು ಎಂದು ಗೊತ್ತಾದರೆ ಎಫ್‌ಐಆರ್ ಮಾಡಿಕೊಳ್ಳುತ್ತೇವೆ. ಅವಶ್ಯಕತೆ ಬಿದ್ದರೆ ಅವನನ್ನು ಅರೆಸ್ಟ್ ಕೂಡ ಮಾಡುತ್ತೇವೆ. ಒಂದು ಕಮ್ಯೂನಿಟಿಯಿಂದ ಮತ್ತೊಂದು ಕಮ್ಯುನಿಟಿಗೆ ದ್ವೇಷ ಬಿತ್ತುವ ಕೆಲಸ ಮಾಡಬಾರದು. ಹಾಗೆ ಮಾಡಿದರೆ ಅಂತವರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳುತ್ತೇವೆ ಎಂದಿದ್ದರು.ಇದನ್ನೂ ಓದಿ: ಬಿಬಿಎಂಪಿ ರದ್ದು, ಇನ್ಮುಂದೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ

  • ಕರ್ನಲ್ ಸೋಫಿಯಾ ಪತಿ ಮನೆ ಮೇಲೆ RSS ದಾಳಿ ವದಂತಿ – ಸುಳ್ಳು ಸುದ್ದಿ ನಂಬದಂತೆ ಬೆಳಗಾವಿ ಎಸ್ಪಿ ಮನವಿ

    ಕರ್ನಲ್ ಸೋಫಿಯಾ ಪತಿ ಮನೆ ಮೇಲೆ RSS ದಾಳಿ ವದಂತಿ – ಸುಳ್ಳು ಸುದ್ದಿ ನಂಬದಂತೆ ಬೆಳಗಾವಿ ಎಸ್ಪಿ ಮನವಿ

    ಬೆಳಗಾವಿ: `ಆಪರೇಷನ್ ಸಿಂಧೂರ’ದ (Operation Sindoor) ಬಗ್ಗೆ ವಿವರವಾಗಿ ಮಾಹಿತಿ ನೀಡಿದ್ದ ಕರ್ನಲ್ ಸೋಫಿಯಾ ಖುರೇಷಿ (Colonel Sofia Qureshi) ಪತಿ ಮನೆ ಮೇಲೆ ಆರ್‌ಎಸ್‌ಎಸ್ (RSS) ದಾಳಿ ನಡೆಸಿದೆ ಎಂಬ ವದಂತಿ ಬೆನ್ನಲ್ಲೇ ಸುಳ್ಳು ಸುದ್ದಿ ನಂಬದಂತೆ ಬೆಳಗಾವಿ ಎಸ್ಪಿ ಡಾ.ಭೀಮಾಶಂಕರ ಗುಳೇದ್ (Dr. Bheemashankar S. Guled) ಮನವಿ ಮಾಡಿಕೊಂಡಿದ್ದಾರೆ.

    ಈ ಕುರಿತು ಬೆಳಗಾವಿ ಎಸ್ಪಿ ಡಾ.ಭೀಮಾಶಂಕರ್ ಗುಳೇದ ಮಾಧ್ಯಮದವರೊಂದಿಗೆ ಮಾತನಾಡಿ, ಎಕ್ಸ್ (X) ಖಾತೆಯಲ್ಲಿ ಕರ್ನಲ್ ಸೋಫಿಯಾ ಪತಿ ಮನೆಯ ಮೇಲೆ ಆರ್‌ಎಸ್‌ಎಸ್ ಬೆಂಬಲಿತ ಹಿಂದೂಗಳು ದಾಳಿ ಮಾಡಿ, ಮನೆ ದ್ವಂಸ ಮಾಡಿದ್ದಾರೆ ಎಂದು ಸುಳ್ಳು ಪೋಸ್ಟ್ ಹಾಕಲಾಗಿತ್ತು. ಅನೀಸ್ ಉದ್ದಿನ್ ಎಂಬಾತ ಎಕ್ಸ್ ಖಾತೆಯಲ್ಲಿ ಸುಳ್ಳು ಸುದ್ದಿ ಹಾಕಿಕೊಂಡಿದ್ದ. ಪೋಸ್ಟ್ನಲ್ಲಿ ಕರ್ನಲ್ ಸೋಫಿಯಾ ಅವರ ಫೋಟೋ ಹಾಗೂ ಮನೆಯನ್ನು ಧ್ವಂಸ ಮಾಡಿರುವ ಯಾವುದೋ ಒಂದು ಹಳೆಯ ಫೋಟೋವನ್ನು ಹಾಕಿ ಹಂಚಿಕೊಳ್ಳಲಾಗಿತ್ತು. ಈ ವಿಚಾರವಾಗಿ ಜಿಲ್ಲಾ ಸಾಮಾಜಿಕ ಮಾಧ್ಯಮ ಮಾನಿಟರಿಂಗ್ ಟೀಂ ನಮ್ಮ ಗಮನಕ್ಕೆ ತಂದಿತ್ತು. ನಾನು ಅದಕ್ಕೆ ಇದು ಸುಳ್ಳು ಸುದ್ದಿ ಎಂದು ಕಾಮೆಂಟ್ ಮಾಡಿದೆ. ತಕ್ಷಣ ಆ ವ್ಯಕ್ತಿ ಅದನ್ನು ಡಿಲೀಟ್ ಮಾಡಿದ್ದಾನೆ. ಕೂಡಲೇ ನಾವು ಸೋಫಿಯಾ ಖುರೇಷಿ ಅವರ ಪತಿ ಮನೆಗೆ ನಮ್ಮ ಪೊಲೀಸರನ್ನು ಕಳಿಸಿದ್ದೆವು, ಯಾವುದೇ ದಾಳಿ ನಡೆದಿಲ್ಲ ಎನ್ನುವುದು ಗೊತ್ತಾಗಿದೆ. ಆದರೂ ಸದ್ಯ ಸುರಕ್ಷತಾ ದೃಷ್ಟಿಯಿಂದ ಪೊಲೀಸರು ಸೋಫಿಯಾ ಪತಿ ಮನೆಗೆ ಭದ್ರತೆ ಒದಗಿಸಿದ್ದಾರೆ. ಜೊತೆಗೆ ಪೊಲೀಸರ ಗಮನಕ್ಕೆ ಬರುತ್ತಿದ್ದಂತೆ ಆ ವ್ಯಕ್ತಿ ಎಕ್ಸ್ ಖಾತೆಯಿಂದ ಪೋಸ್ಟ್ ಡಿಲೀಟ್ ಮಾಡಿದ್ದಾನೆ ಎಂದು ತಿಳಿಸಿದರು.ಇದನ್ನು ಓದಿ: ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಗೆಲುವು – ಪಾಕ್ ಬಂಧಿಸಿದ್ದ ಬಿಎಸ್‌ಎಫ್ ಯೋಧ ತಾಯ್ನಾಡಿಗೆ ವಾಪಸ್

    ಪೋಸ್ಟ್ ಮಾಡಿದ ವ್ಯಕ್ತಿ ಕೆನಡಾ ಮೂಲದವನು ಎಂದು ಗೊತ್ತಾಗಿದೆ. ಹೊರದೇಶದವನು ಎಂದು ಗೊತ್ತಾಗಿದ್ದಕ್ಕೆ ಎಫ್‌ಐಆರ್ (FIR) ಮಾಡಿಕೊಂಡಿಲ್ಲ. ಎಕ್ಸ್ ಲೀಗಲ್ ಟೀಂನಿಂದ ಮಾಹಿತಿ ಪಡೆಯುತ್ತಿದ್ದೇವೆ. ಒಂದು ವೇಳೆ ಆತ ಭಾರತದವನು ಎಂದು ಗೊತ್ತಾದರೆ ಎಫ್‌ಐಆರ್ ಮಾಡಿಕೊಳ್ಳುತ್ತೇವೆ. ಅವಶ್ಯಕತೆ ಬಿದ್ದರೆ ಅವನನ್ನು ಅರೆಸ್ಟ್ ಕೂಡ ಮಾಡುತ್ತೇವೆ. ಒಂದು ಕಮ್ಯೂನಿಟಿಯಿಂದ ಮತ್ತೊಂದು ಕಮ್ಯುನಿಟಿಗೆ ದ್ವೇಷ ಬಿತ್ತುವ ಕೆಲಸ ಮಾಡಬಾರದು. ಹಾಗೆ ಮಾಡಿದರೆ ಅಂತವರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳುತ್ತೇವೆ ಎಂದರು.

    ಸದ್ಯ ಸೈಬರ್ ಪೊಲೀಸ್ ಠಾಣೆಯ ಡಿವೈಎಸ್‌ಪಿಯವರ ನೇತೃತ್ವದಲ್ಲಿ ಸಾಮಾಜಿಕ ಮಾಧ್ಯಮಗಳ ಮೇಲೆ ಕಣ್ಣಿಡಲಾಗಿದೆ. ಬೀಟ್ ಹಂತದಲ್ಲೂ ಸಹ ಅದನ್ನು ಅಬ್ಸರವೇಷನ್ ಮಾಡಲಾಗುತ್ತಿದೆ. ಕಿಡಿಗೇಡಿಗಳು ಗುಂಪು ಘರ್ಷಣೆಗೆ ಕಾರಣವಾದರೆ ಅಂತಹವರ ವಿರುದ್ಧ ಕಾನೂನು ಕ್ರಮವನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.ಇದನ್ನು ಓದಿ: ನಮಗೆ ಯಾರಾದ್ರು ತೊಂದರೆ ಕೊಟ್ಟರೆ, ಸುಮ್ಮನೆ ಬಿಡಲ್ಲ: ಪಾಕ್‌ ವಿರುದ್ಧ ಗುಡುಗಿದ ಯೋಗಿ ಆದಿತ್ಯನಾಥ್‌

  • ರಾಜ್ಯದ ಹಲವೆಡೆ ವರುಣನ ಆರ್ಭಟ – ಮಳೆಗೆ 7 ಮಂದಿ ಬಲಿ, ಮನೆಗಳಿಗೆ ನುಗ್ಗಿದ ನೀರು

    ರಾಜ್ಯದ ಹಲವೆಡೆ ವರುಣನ ಆರ್ಭಟ – ಮಳೆಗೆ 7 ಮಂದಿ ಬಲಿ, ಮನೆಗಳಿಗೆ ನುಗ್ಗಿದ ನೀರು

    ಬೆಂಗಳೂರು: ರಾಜ್ಯದ ಹಲವಡೆ ತಡರಾತ್ರಿ ವರುಣನ ಅಬ್ಬರ ಜೋರಾಗಿತ್ತು. ಧಾರಾಕಾರ ಮಳೆಗೆ (Rain) ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿತ್ತು, ಮತ್ತೆ ಕೆಲವೆಡೆ ಅವಾಂತರ ಸೃಷ್ಟಿಯಾಗಿತ್ತು.. ಇನ್ನೂ ಕೆಲವೆಡೆ ಮಳೆಯ ಆರ್ಭಟಕ್ಕೆ 7 ಜೀವಗಳು ಬಲಿಯಾಗಿವೆ.

    ಹೌದು. ಮಂಗಳವಾರ (ಮೇ 14) ರಾತ್ರಿ ಸುರಿದ ಧಾರಾಕಾರ ಮಳೆಗೆ ಅವಾಂತರವೇ ಸೃಷ್ಟಿಯಾಗಿತ್ತು. ಹಲವು ಜಿಲ್ಲೆಗಳಲ್ಲಿ ಮಳೆರಾಯನ ಅಬ್ಬರಕ್ಕೆ 7 ಜನ ಸಾವನ್ನಪ್ಪಿದ್ದಾರೆ. ಇನ್ನೂ ಕೆಲವೆಡೆ ಮನೆಗೆಳಿಗೆ ನೀರು ನುಗ್ಗಿದ್ದು ಅವಾಂತರವೇ ಸೃಷ್ಠಿಯಾಗಿದೆ.

    ಬಳ್ಳಾರಿ (Ballari):
    ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ರಾರಾವಿ ಗ್ರಾಮದಲ್ಲಿ ಕುರಿ ಮೇಯಿಸಲು ಹೋದಾಗ ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಧಾರುಣವಾಗಿ ಮೃತಪಟ್ಟಿದ್ದಾರೆ. ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ರಾರಾವಿ ಗ್ರಾಮದ ಭೀರಪ್ಪ, ಸುನೀಲ ಮೃತ ದುರ್ದೈವಿಗಳಾಗಿದ್ದು, ವಿನೋದ ಎಂಬಾತ ಗಂಭೀರ ಗಾಯಗೊಂಡಿದ್ದಾನೆ.

    ರಾಯಚೂರು (Raichur):
    ಜಿಲ್ಲೆಯಲ್ಲಿ ವಿವಿಧೆಡೆ ಗುಡುಗು ಸಹಿತ ಮಳೆ ಆಗಿದೆ. ಸಿಡಿಲು ಬಡಿದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದು ಇಬ್ಬರು ಮಹಿಳೆಯರಿಗೆ ಗಾಯಗಳಾಗಿವೆ. ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದ ರೈತ ಲಿಂಗಪ್ಪ ಮೃತಪಟ್ಟಿದ್ದಾರೆ.

    ಹಾವೇರಿ/ಕೊಪ್ಪಳ/ಚಿಕ್ಕಮಗಳೂರು:
    ಹಾವೇರಿಯ (Haveri) ರಟ್ಟಿಹಳ್ಳಿ ತಾಲ್ಲೂಕಿನ ಕುಡಪಲಿ ಗ್ರಾಮದಲ್ಲೂ ಸಿಡಿಲು ಬಡಿದು ರೈತ ಸುನೀಲ್ ಕಾಳೇರ್ ಸಾವನ್ನಪ್ಪಿದ್ದಾರೆ. ಇನ್ನೂ ಕೊಪ್ಪಳದಲ್ಲೂ ಕನಕಗಿರಿ ತಾಲೂಕಿನ ಹುಲಿಹೈದರದಲ್ಲಿ ಸಿಡಿಲು ಬಡಿದು ಯಂಕಪ್ಪ ಜಾಡಿ ಎಂಬ ರೈತ ಮೃತಪಟ್ಟಿದ್ದಾರೆ. ಕಾಫಿನಾಡು ಚಿಕ್ಕಮಗಳೂರಿನ ಕಡೂರು ತಾಲೂಕಿನ ಗೆದ್ಲೆಹಳ್ಳಿಯಲ್ಲಿ ಸಿಡಿಲು ಬಡಿದು ಕುರಿಗಾಯಿ ಲೋಕೇಶಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ಹುಬ್ಬಳ್ಳಿ:
    ಹುಬ್ಬಳ್ಳಿಯಲ್ಲಿ ಸುರಿದ ಧಾರಾಕಾರ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಇಲ್ಲಿನ ಗಣೇಶ ನಗರ, ಆನಂದನಗರದಲ್ಲಿ ಮನೆಗಳಿಗೆ ಭಾರೀ ಪ್ರಮಾಣದ ನೀರು ನುಗ್ಗಿದ್ದರಿಂದ ಜನರು ಪರದಾಡಿದ್ದಾರೆ. ಹುಬ್ಬಳ್ಳಿಯ ಗಬ್ಬೂರಿನ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಮಳೆ ನೀರಿನಲ್ಲಿ ಟೆಂಪೊ ಟ್ರಾವೆಲ್ ವಾಹನ ಮುಳುಗಿತ್ತು.

    ಬೆಳಗಾವಿ: ಚರಂಡಿಯಲ್ಲಿ ಕೊಚ್ಚಿಹೋದ ವ್ಯಕ್ತಿ
    ಬೆಳಗಾವಿಯಲ್ಲಿ ವಿವಿಧ ಬಡಾವಣೆಗಳು ಜಲಾವೃತವಾಗಿದೆ. ನಿರಂತರ ಮಳೆಗೆ ಚರಂಡಿಯಲ್ಲಿ ಕಾಶಪ್ಪ ಶಿರಟ್ಟಿ ಎಂಬಾತ ಕೊಚ್ಚಿ ಹೋಗಿದ್ದಾರೆ. ಧಾರಾಕಾರವಾಗಿ ಸುರಿದ ಮಳೆಯಿಂದ ತುಂಬಿ ಹರಿಯುತ್ತಿರುವ ಚರಂಡಿಗಳಿಂದ ಅವಾಂತರವಾಗಿದೆ. ಜೊತೆಗೆ ಗೋಕಾಕ್ ನಗರದ ರೈಲ್ವೇ ನಿಲ್ದಾಣ ಬಳಿಯೂ ರಸ್ತೆಗಳು ಕೆರೆಯಂತೆ ಹರಿದಿವೆ.

    ಗದಗ: ಹಳ್ಳದ ನೀರಲ್ಲಿ ಕೊಚ್ಚಿಹೋದ ಬೈಕ್ ಸವಾರ
    ಗದಗ ಜಿಲ್ಲೆಯ ಹಲವೆಡೆಯೂ ಭಾರೀ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ಬೆನಕೊಪ್ಪ ಗ್ರಾಮದ ಬಳಿ ಹಳ್ಳದಲ್ಲಿ ಬೈಕ್ ಸಮೇತ ಸವಾರ ಕೊಚ್ಚಿ ಹೋಗಿರುವ ಶಂಕೆ ಇದೆ. ಭಾರೀ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು ಆತಂಕ ಮೂಡಿಸಿದೆ.

  • ಯಾರದ್ದೋ ಮಾತು ಕೇಳಿ ಪಾಕ್ ವಿರುದ್ಧ ಸಂಘರ್ಷ ನಿಲ್ಲಿಸಬಾರದಿತ್ತು: ಹೊರಟ್ಟಿ ಅಸಮಾಧಾನ

    ಯಾರದ್ದೋ ಮಾತು ಕೇಳಿ ಪಾಕ್ ವಿರುದ್ಧ ಸಂಘರ್ಷ ನಿಲ್ಲಿಸಬಾರದಿತ್ತು: ಹೊರಟ್ಟಿ ಅಸಮಾಧಾನ

    – ಪಾಕಿಸ್ತಾನದವರು ಸಾಯುವವರೆಗೂ ವೈರಿಗಳೇ ಎಂದ ಸಭಾಪತಿ

    ಚಿಕ್ಕೋಡಿ: ಯಾರದ್ದೋ ಮಾತು ಕೇಳಿ ಪಾಕ್ (Pakistan) ವಿರುದ್ಧ ಭಾರತ ಸಂಘರ್ಷ ನಿಲ್ಲಿಸಬಾರದಿತ್ತು ಎಂದು ಪ್ರಧಾನಿ ಮೋದಿ (Narendra Modi) ವಿರುದ್ಧ ಸಭಾಪತಿ ಬಸವರಾಜ್ ಹೊರಟ್ಟಿ (Basavaraj Horatti) ಅಸಮಾಧಾನ ಹೊರಹಾಕಿದ್ದಾರೆ.

    ಈ ಕುರಿತು ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಸಂಘರ್ಷದಲ್ಲಿ ಪಾಕಿಸ್ತಾನವನ್ನು ನಾಶ ಮಾಡಬೇಕಿತ್ತು. ಕದನ ವಿರಾಮದ ನಂತರ ಮತ್ತೆ ದಾಳಿ ಮಾಡಿದ್ದಾರೆ. ಬೇರೆಯವರ ಮಾತು ಕೇಳಿ ಪಾಕಿಸ್ತಾನದ ಜೊತೆ ನಡೆಸುತ್ತಿದ್ದ ಸಂಘರ್ಷ ಕೈ ಬಿಟ್ಟಿದ್ದು ತಪ್ಪು. ಪಾಕಿಸ್ತಾನದವರು ಸಾಯುವವರೆಗೂ ವೈರಿಗಳೇ. ಅವರು ಎಂದಿಗೂ ನಮಗೆ ಒಳ್ಳೆಯದು ಮಾಡಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಭಾರತ-ಪಾಕ್ ಸಂಘರ್ಷ – ಬಿನ್ ಲಾಡೆನ್ ಆಪ್ತನ ಮಗ ಈಗ ಪಾಕ್ ಸೇನಾ ವಕ್ತಾರ

    ಪಾಕ್ ಹಾಗೂ ಭಾರತದ ನಡುವೆ ಸಂಧಾನದಲ್ಲಿ ಟ್ರಂಪ್ (Donald Trump) ಮಧ್ಯಸ್ಥಿಕೆ ವಹಿಸಲು ಅವರು ಯಾರು? ಅಮೆರಿಕದ ವಿಚಾರದಲ್ಲಿ ನಾವು ಏನಾದರೂ ಹೇಳಿದರೆ ಅವರು ಕೇಳುತ್ತಾರಾ? ಮೋದಿಯವರು ಕಠಿಣ ಹಾಗೂ ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕಿತ್ತು. ಈ ವಿಚಾರದಲ್ಲಿ ಟ್ರಂಪ್ ಮಾತು ಕೇಳಿದ್ದು ತಪ್ಪು. ಭಯೋತ್ಪಾದಕರ ವಿಚಾರದಲ್ಲಿ ಎಲ್ಲಾ ದೇಶಗಳು ಶೃಂಗಸಭೆಯನ್ನ ನಡೆಸಿ ಭಯೋತ್ಪಾದಕರನ್ನು ನಾಶ ಮಾಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಆಪರೇಷನ್‌ ಸಿಂಧೂರ ಮುಂದುವರಿಯುತ್ತದೆ – ಭಾರತೀಯ ವಾಯುಸೇನೆ ಅಧಿಕೃತ ಘೋಷಣೆ

  • ಆಪರೇಷನ್ ಸಿಂಧೂರವನ್ನು ಜಗತ್ತಿಗೆ ವಿವರಿಸಿದ್ದ ಕರ್ನಲ್ ಸೋಫಿಯಾ ಬೆಳಗಾವಿಯ ಸೊಸೆ!

    ಆಪರೇಷನ್ ಸಿಂಧೂರವನ್ನು ಜಗತ್ತಿಗೆ ವಿವರಿಸಿದ್ದ ಕರ್ನಲ್ ಸೋಫಿಯಾ ಬೆಳಗಾವಿಯ ಸೊಸೆ!

    ಬೆಳಗಾವಿ: ಆಪರೇಷನ್ ಸಿಂಧೂರ(Operation Sindoor) ಕಾರ್ಯಚರಣೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯಾ ಖುರೇಶಿಯವರು(Sophia Qureshi) ಬೇರೆ ಯಾರು ಅಲ್ಲ. ಅವರು ಕರ್ನಾಟಕದ ಬೆಳಗಾವಿಯ(Belagavi) ಹೆಮ್ಮೆಯ ಸೊಸೆ.

    ಕಾಶ್ಮೀರದ ಪಹಲ್ಗಾಮ್‌ನಲ್ಲಿ(Pahalgam) ನಡೆದ ಭಾರತೀಯರ ಹತ್ಯಾಕಾಂಡದ ಪ್ರತೀಕಾರವಾಗಿ ಪಾಕ್ ಉಗ್ರರ ವಿರುದ್ಧ ಭಾರತೀಯ ಸೇನೆಯು ಆಪರೇಷನ್ ಸಿಂಧೂರ ಹೆಸರಿನ ಏರ್‌ಸ್ಟ್ರೈಕ್‌ ಮಾಡಿತ್ತು. ಈ ಕಾರ್ಯಚರಣೆಯ ಮಾಹಿತಿಯನ್ನು ನೀಡಿದ ಕರ್ನಲ್ ಸೋಫಿಯಾ ಖುರೇಶಿ ಅವರ ಪತಿ ತಾಜುದ್ದೀನ್ ಬಾಗೇವಾಡಿ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರು ಗ್ರಾಮದ ನಿವಾಸಿಯಾಗಿದ್ದಾರೆ. ಇದನ್ನೂ ಓದಿ: ರಫೇಲ್‌ ಬಗ್ಗೆ ಸುಳ್ಳು ಹೇಳಿ ಜಗತ್ತಿನ ಮುಂದೆ ಮತ್ತೆ ಬೆತ್ತಲಾದ ಪಾಕಿಸ್ತಾನ!

    ಮೂಲತಃ ಗುಜರಾತ್(Gujarat) ರಾಜ್ಯದ ವಡೋದರದವರಾದ ಖುರೇಶಿ, 2015ರಲ್ಲಿ ತಾಜುದ್ದೀನ್ ಅವನ್ನು ಪ್ರೇಮ ವಿವಾಹವಾಗಿದ್ದರು. ಪತಿ ತಾಜುದ್ದೀನ್ ಬಾಗೇವಾಡಿ ಹಾಗೂ ಪತ್ನಿ ಸೋಫಿಯಾ ಖುರೇಶಿ ಇಬ್ಬರೂ ಭಾರತೀಯ ಸೇನೆಯಲ್ಲಿ ಕರ್ನಲ್ ಆಗಿ ದೇಶ ಸೇವೆ ಮಾಡುತ್ತಿದ್ದಾರೆ. ಬೆಳಗಾವಿಯ ಸೊಸೆಯಾಗಿರುವ ಖುರೇಶಿ ಈಗ ಭಾರತದ ಹೆಮ್ಮೆಯ ಪುತ್ರಿ. ಸದ್ಯ ಖುರೇಶಿ ಪತಿ ತಾಜುದ್ದೀನ್ ಜಾನ್ಸಿಯಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದನ್ನೂ ಓದಿ: ಬಲೂಚಿಸ್ತಾನ್‌ ಲಿಬರೇಶನ್ ಆರ್ಮಿಯಿಂದ ಐಇಡಿ ದಾಳಿ – 12 ಪಾಕ್ ಸೈನಿಕರು ಸಾವು

    ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನ ಜಗತ್ತಿಗೆ ಬಿಚ್ಚಿಟ್ಟಿದ್ದ ಕರ್ನಲ್ ಸುಫೀಯಾ ಖುರೇಶಿ, ಬಹುರಾಷ್ಟ್ರೀಯ ಸೇನಾ ತುಕಡಿ ಮುನ್ನಡೆಸಿದ ಮೊದಲ ಭಾರತೀಯ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಖುರೇಶಿ ಅವರು ಆಪರೇಷನ್ ಸಿಂಧೂರದಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆಪರೇಷನ್ ಬಳಿಕ ಸೋಫಿಯಾ ಖುರೇಶಿ ಮಾಧ್ಯಮಗಳಿಗೆ ಇಂಚಿಂಚು ಮಾಹಿತಿ ನೀಡಿದ್ದರು.

  • Belagavi | 2 ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಒಂದೇ ಕುಟುಂಬದ ಮೂವರ ಸಾವು

    Belagavi | 2 ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಒಂದೇ ಕುಟುಂಬದ ಮೂವರ ಸಾವು

    – ಮಾಜಿ ಶಾಸಕ ಆರ್.ವಿ ಪಾಟೀಲ್ ಅವರ ಪುತ್ರನಿಗೂ ಗಾಯ

    ಬೆಳಗಾವಿ: ಎರಡೂ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.

    ಬೈಲಹೊಂಗಲದಿಂದ ಹಿರೇಬಾಗೇವಾಡಿಗೆ ಬರ್ತಿದ್ದ ಆಲ್ಟೊ ಕಾರು ಹಾಗೂ ಬೆಳಗಾವಿಯಿಂದ ಬೈಲಹೊಂಗಲ ಮಾರ್ಗವಾಗಿ ಹೋಗುತ್ತಿದ್ದ ಕೀಯಾ ಕಾರು ನಡುವೆ ಬೆಳಗಾವಿಗೆ ಸಂಪರ್ಕಿಸುವ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಅವಮಾನ ಸಹಿಸುವಷ್ಟು ಚಿಕ್ಕವನಲ್ಲ – ಸ್ಯಾಂಡಲ್‌ವುಡ್‌ನಿಂದ ಅಸಹಕಾರದ ಬೆನ್ನಲ್ಲೇ ಸೋನು ನಿಗಮ್ ರಿಯಾಕ್ಷನ್

    ಓವರ್ ಟೆಕ್ ಮಾಡಲು ಹೋಗಿ ಎದುರಿನಿಂದ ಬರ್ತಿದ್ದ ಆಲ್ಟೊ ಕಾರಿಗೆ ಕಿಯಾ ಕಾರು ಚಾಲಕ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ಆಲ್ಟೊ ಕಾರಿನಲ್ಲಿದ್ದ ಗಂಡ ಅಯುಮ್, ಹೆಂಡತಿ, ಒಂದು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಂದು ಮಗುವಿನ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಅಲ್ಲದೇ ಕೀಯಾ ಕಾರಿನಲ್ಲಿದ್ದ ಮಾಜಿ ಶಾಸಕ ಆರ್.ವಿ ಪಾಟೀಲ್ ಅವರ ಪುತ್ರನಿಗೂ ಪೆಟ್ಟಾಗಿದ್ದು, ಕಿಯಾ ಕಾರಿನಲ್ಲಿದ್ದ ಇಬ್ಬರನ್ನೂ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: 5 ಲಕ್ಷ ವೆಚ್ಚದಲ್ಲಿ ದುರಸ್ತಿ ಮಾಡಿದ್ದ ನಾಡಕಚೇರಿ ಕುಸಿತ – ದಾಖಲೆಗಳು ನಾಶ

    ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತರ ಶವಗಳನ್ನ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಭಾರತ-ಪಾಕ್‌ ನಡುವೆ ಯುದ್ಧ ಛಾಯೆ – ಮೇ 7ರಂದು ದೇಶಾದ್ಯಂತ ಮಾಕ್ ಡ್ರಿಲ್

  • ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಪ್ರದರ್ಶನ – ಇಬ್ಬರು ಪೊಲೀಸ್ ವಶಕ್ಕೆ

    ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಪ್ರದರ್ಶನ – ಇಬ್ಬರು ಪೊಲೀಸ್ ವಶಕ್ಕೆ

    ಚಿಕ್ಕೋಡಿ: ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಪ್ರದರ್ಶನ ಮಾಡಿದ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ (Hukkeri) ತಾಲೂಕಿನ ಶಹಾಬಂದರ ಗ್ರಾಮದ ಬಳಿ ನಡೆದಿದೆ.

    ಬೆಳಗಾವಿ ತಾಲೂಕಿನ ಬಮ್ಮನಟ್ಟಿ ಗ್ರಾಮದ ನಿವಾಸಿ ಹಾಲಪ್ಪ ದ್ಯಾಮಪ್ಪ ಕಾಟಾಬಳಿ(25), ಹುಕ್ಕೇರಿ ತಾಲೂಕಿನ ಚಿಕಲದಿನ್ನಿ ಗ್ರಾಮದ ನಿವಾಸಿ ನಾಗರಾಜ ದ್ಯಾಮಪ್ಪ ಕಟಾಬಳಿ(21) ಬಂಧಿತರು. ಇದನ್ನೂ ಓದಿ: ಪಾಕ್‌ಗೆ ಸೇನಾ ಮಾಹಿತಿ ರವಾನೆ – ಇಬ್ಬರು ಅರೆಸ್ಟ್‌

    ಇತ್ತೀಚೆಗೆ ಹಾಲಪ್ಪ ಹಾಗೂ ದ್ಯಾಮಪ್ಪ ಶಹಬಂದರ ಕ್ರಾಸ್‌ನ ವಾಲ್ಮೀಕಿ ಸರ್ಕಲ್ ಬಳಿ ಕೈಯಲ್ಲಿ ತಲ್ವಾರ್ ಹಿಡಿದು ಓಡಾಡಿದ್ದರು. ಅಲ್ಲದೇ ಜನರನ್ನ ನಿಂದಿಸಿ, ಭಯದ ವಾತಾವರಣ ನಿರ್ಮಾಣ ಮಾಡಿದ್ದರು. ಇದನ್ನೂ ಓದಿ: ಪಹಲ್ಗಾಮ್ ದಾಳಿ, ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಚಿಕ್ಕಮಗಳೂರು ಬಂದ್‌ಗೆ ಕರೆ

    ವಿಷಯ ತಿಳಿದ ಯಮಕನಮರಡಿ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ (Hamakanamardi Police Station) ಪ್ರಕರಣ ದಾಖಲಾಗಿದೆ.

  • ಕರ್ನಾಟಕದ ಮರಾಠಿ ಮಾತನಾಡುವ ಪ್ರದೇಶಗಳು ಇನ್ನೂ ಮಹಾರಾಷ್ಟ್ರ ಭಾಗವಾಗಿಲ್ಲ: ಅಜಿತ್‌ ಪವಾರ್‌

    ಕರ್ನಾಟಕದ ಮರಾಠಿ ಮಾತನಾಡುವ ಪ್ರದೇಶಗಳು ಇನ್ನೂ ಮಹಾರಾಷ್ಟ್ರ ಭಾಗವಾಗಿಲ್ಲ: ಅಜಿತ್‌ ಪವಾರ್‌

    – ಬೆಳಗಾವಿ, ಕಾರವಾರ, ನಿಪ್ಪಾಣಿಗಳನ್ನು ಮಹಾರಾಷ್ಟ್ರದೊಂದಿಗೆ ವಿಲೀನಗೊಳಿಸಬೇಕು ಎಂದ ‘ಮಹಾ’ ಡಿಸಿಎಂ

    ಮುಂಬೈ: ಕರ್ನಾಟಕದ ಮರಾಠಿ ಮಾತನಾಡುವ ಪ್ರದೇಶಗಳು ಇನ್ನೂ ಮಹಾರಾಷ್ಟ್ರ ಭಾಗವಾಗಿಲ್ಲ ಎಂದು ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಹೇಳಿಕೆ ನೀಡಿದ್ದಾರೆ.

    ಮಹಾರಾಷ್ಟ್ರ ರಚನೆಯಾಗಿ 65 ವರ್ಷಗಳ ನಂತರವೂ, ಪಕ್ಕದ ಕರ್ನಾಟಕದ ಬೆಳಗಾವಿ ಮತ್ತು ಕಾರವಾರ ಇನ್ನೂ ಪಶ್ಚಿಮ ಮರಾಠಿ ಮಾತನಾಡುವ ರಾಜ್ಯದೊಂದಿಗೆ ವಿಲೀನಗೊಂಡಿಲ್ಲ ಎಂಬುದು ವಿಷಾದದ ಸಂಗತಿ ಎಂದಿದ್ದಾರೆ.

    ಮಹಾರಾಷ್ಟ್ರವು ಹೋರಾಟದಿಂದ ರೂಪುಗೊಂಡಿತು. ಮಹಾರಾಷ್ಟ್ರವು ತನ್ನ ಅಸ್ತಿತ್ವಕ್ಕೆ 65 ವರ್ಷಗಳನ್ನು ಪೂರೈಸಿದ್ದರೂ, ನಮ್ಮ ಹೃದಯದಲ್ಲಿ ಒಂದು ವಿಷಾದವಿದೆ. ಇಂದಿಗೂ, ಬೆಳಗಾವಿ ಮತ್ತು ಕಾರವಾರದ ಮರಾಠಿ ಮಾನೂಗಳು (ಮರಾಠಿ ಮಾತನಾಡುವ ಜನರು) ನಮ್ಮೊಂದಿಗೆ ಇಲ್ಲ. ಪ್ರಕರಣವು ಸುಪ್ರೀಂ ಕೋರ್ಟ್‌ನಲ್ಲಿದೆ. ಅವರು ಮಹಾರಾಷ್ಟ್ರದೊಂದಿಗೆ ವಿಲೀನಗೊಂಡ ದಿನ, ಮಹಾರಾಷ್ಟ್ರ ಈಗ ಪೂರ್ಣಗೊಂಡಿದೆ ಎಂದು ನಾವು ವಿಶ್ವಾಸದಿಂದ ಹೇಳಬಹುದು ಎಂದು ಮಾತನಾಡಿದ್ದಾರೆ.

    ಕರ್ನಾಟಕದ ಮರಾಠಿ ಮಾತನಾಡುವ ಪ್ರದೇಶಗಳಾದ ಬೆಳಗಾವಿ, ಕಾರವಾರ, ನಿಪ್ಪಾಣಿಗಳನ್ನು ಮಹಾರಾಷ್ಟ್ರದೊಂದಿಗೆ ವಿಲೀನಗೊಳಿಸಬೇಕೆಂದು ಅಜಿತ್‌ ಪವಾರ್‌ ಆಗ್ರಹಿಸಿದ್ದಾರೆ.

  • ರಾಜ್ಯದಲ್ಲಿ ಬಿಜೆಪಿಯವರಿಗೆ ಒಂದೇ ಒಂದು ಸಭೆ ಮಾಡಲು ಬಿಡಲ್ಲ: ಡಿಕೆಶಿ ವಾರ್ನಿಂಗ್

    ರಾಜ್ಯದಲ್ಲಿ ಬಿಜೆಪಿಯವರಿಗೆ ಒಂದೇ ಒಂದು ಸಭೆ ಮಾಡಲು ಬಿಡಲ್ಲ: ಡಿಕೆಶಿ ವಾರ್ನಿಂಗ್

    – ಇದೇ ವರ್ತನೆ ಮುಂದುವರಿಸಿದ್ರೆ ಹುಷಾರ್ ಎಂದ ಡಿಸಿಎಂ

    ಬೆಳಗಾವಿ: ರಾಜ್ಯದಲ್ಲಿ ಬಿಜೆಪಿಯವರಿಗೆ (BJP) ಒಂದೇ ಒಂದು ಸಭೆ ಮಾಡಲು ಬಿಡಲ್ಲ. ಇದು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar)  ಬಿಜೆಪಿ ನಾಯಕರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

    ಸಿಎಂ ಸಿದ್ದರಾಮಯ್ಯ (Siddaramaiah) ಭಾಷಣದ ವೇಳೆ ಬಿಜೆಪಿ ಕಾರ್ಯಕರ್ತರ ಅಡ್ಡಿ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರಿಗೆ ಒಂದು ಹೇಳಲು ಬಯಸುತ್ತೇನೆ. ನೀವು ಒಂದು ಸಭೆ ಮಾಡಲು ಬಿಡಲ್ಲ. ನಾನು ಕಾರ್ಯಕರ್ತರಿಗೆ ಒಂದು ಸಂದೇಶ ಕೊಡುತ್ತೇವೆ. ಇದೇ ವರ್ತನೆ ಮುಂದುವರಿಸಿದರೆ ಹುಷಾರ್ ಎಂದು ವಾರ್ನಿಂಗ್ ಕೊಟ್ಟರು. ಇದನ್ನೂ ಓದಿ: ಇ-ಸ್ವತ್ತು ಉತಾರ ಮಾಡಲು 4 ಲಕ್ಷ ಲಂಚ ಪಡೆಯುತ್ತಿದ್ದಾಗ ಪಿಡಿಓ, ಮೂವರು ಗ್ರಾಪಂ ಸದಸ್ಯ ಅರೆಸ್ಟ್‌

    ನಿಮಗಿಂತ ಕಾರ್ಯರೂಪ ಮಾಡುವ ಶಕ್ತಿ ಜನ ನನಗೆ ಕೊಟ್ಟಿದ್ದಾರೆ. ಬಿಜೆಪಿ ಕಾರ್ಯಕರ್ತರಿಗೆ ಬುದ್ದಿವಾದ ಹೇಳಿದ್ರೆ ಸರಿ, ಇದು ವಾರ್ನಿಂಗ್ ಎಂದು ಖಡಕ್ ಸಂದೇಶ ಕೊಟ್ಟರು. ಇದನ್ನೂ ಓದಿ: ಮೋದಿ-ರಾಜನಾಥ್ ಸಿಂಗ್ ಮಹತ್ವದ ಚರ್ಚೆ; ಉಗ್ರರ ವಿರುದ್ಧ ಮುಂದಿನ ಕ್ರಮಕ್ಕೆ ಮಾಸ್ಟರ್ ಪ್ಲ್ಯಾನ್

  • ಪೊಲೀಸರು ಇವರ ಗುಲಾಮರು ಅಂದುಕೊಂಡಿದ್ದಾರಾ? – ಸಿಎಂ ನಡೆಗೆ ಛಲವಾದಿ ನಾರಾಯಣಸ್ವಾಮಿ ಕಿಡಿ

    ಪೊಲೀಸರು ಇವರ ಗುಲಾಮರು ಅಂದುಕೊಂಡಿದ್ದಾರಾ? – ಸಿಎಂ ನಡೆಗೆ ಛಲವಾದಿ ನಾರಾಯಣಸ್ವಾಮಿ ಕಿಡಿ

    ಬೆಂಗಳೂರು: ಬೆಳಗಾವಿ (Belagavi) ಕಾರ್ಯಕ್ರಮದಲ್ಲಿ ವೇದಿಕೆಯಲ್ಲೇ ಎಎಸ್‌ಪಿ (ASP) ಮೇಲೆ ಸಿಎಂ ಗರಂ ಆದ ವಿಚಾರವಾಗಿ, ಪೊಲೀಸರು ಇವರ ಗುಲಾಮರು ಅಂದುಕೊಂಡಿದ್ದಾರಾ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಕಿಡಿಕಾರಿದ್ದಾರೆ.

    ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವನಲೇ ಎಸ್ಪಿ ಅಂತ ಕರೆದಾಗ ಎಎಸ್‌ಪಿ ನಾರಾಯಣ್ ಅನ್ನೋರು ಬರುತ್ತಾರೆ. ಸಿಎಂ ಕರೆದು ಕಪಾಳಮೋಕ್ಷ ಮಾಡಲು ಮುಂದಾಗುತ್ತಾರೆ. ಆಗ ಹೆಚ್ಚುವರಿ ಎಸ್‌ಪಿ ಒಂದು ಹೆಜ್ಜೆ ಹಿಂದೆ ಹೋಗುತ್ತಾರೆ. ಇಲ್ಲದಿದ್ರೆ ಅವರಿಗೆ ಕಪಾಳಮೋಕ್ಷ ಆಗುತ್ತಿತ್ತು. ಪೊಲೀಸರು ಇವರ ಗುಲಾಮರು ಅಂದುಕೊಂಡಿದ್ದಾರಾ? ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಘೇರಾವ್ ಹಾಕುತ್ತಾರೆ ಅನ್ನೋದೇ ಗೊತ್ತಿಲ್ಲ. ಇದು ಇಂಟೆಲಿಜೆನ್ಸ್ ಫೇಲ್ಯೂರ್ ಅಲ್ವಾ? ಕದ್ದು ಮುಚ್ಚಿ ಬಂದ ಭಯೋತ್ಪಾದಕರು ಪಹಲ್ಗಾಮ್‌ನಲ್ಲಿ ಗುಂಡು ಹಾರಿಸಿದರು. ಅದನ್ನ ಇಂಟಲಿಜೆನ್ಸ್ ಫೇಲ್ಯೂರ್, ಮೋದಿ ಫೇಲ್ಯೂರ್ ಎನ್ನುತ್ತಾರೆ. ಮುತ್ತಿಗೆಯಂತಹ ಸಣ್ಣ ವಿಷಯವೇ ನಿಮಗೆ ಗೊತ್ತಾಗಿಲ್ಲ. ಇನ್ನು ಜನರನ್ನು ಕೊಲ್ಲೋ ವಿಚಾರ ಹೇಗೆ ಗೊತ್ತಾಗಲಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಲಾರಿ ಚಾಲಕನ ಯಡವಟ್ಟು – ರೈಲ್ವೆ ಹಳಿ ಮೇಲೆ ಬಿದ್ದ ಕಬ್ಬಿಣದ ಪ್ಲೇಟ್, ತಪ್ಪಿದ ಭಾರೀ ಅನಾಹುತ

    ಬೆಳಗಾವಿಯಲ್ಲಿ ರಾಜ್ಯದ ಸಿಎಂ ಸಿದ್ದರಾಮಯ್ಯ ಅವರು ಪಕ್ಷದ ಕಾರ್ಯಕ್ರಮ ಮಾಡಲು ಹೋಗಿದ್ದಾರೆ. ಕಾರ್ಯಕ್ರಮದ ಸಂದರ್ಭದಲ್ಲಿ ದೇಶದ ವಿರುದ್ಧವಾಗಿ ಹೇಳಿಕೆ ನೀಡಿದ್ದರು. ಇದನ್ನು ವಿರೋಧಿಸಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ಕಪ್ಪು ಬಟ್ಟೆ ತೋರಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಯಾರೂ ಮಚ್ಚು, ದೊಣ್ಣೆ, ಎಕೆ-47 ತೆಗೆದುಕೊಂಡು ಹೋಗಿಲ್ಲ. ಪೊಲೀಸರು ಬಂಧನ ಮಾಡಿದ ಬಳಿಕ, ಕಾಂಗ್ರೆಸ್ ಗೂಂಡಾಗಳು ಅವರ ಮೇಲೆ ಮುಗಿಬಿದ್ದಿದ್ದಾರೆ. ಇದು ಈ ಗೂಂಡಾ ಸರ್ಕಾರದ ವರ್ತನೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಉಗ್ರರು ನಿಮ್ಮ ಚಡ್ಡಿ ಬಿಚ್ಚಿಸಿ ಚೆಕ್ ಮಾಡಿದ್ರೆ ಏನ್ ಮಾಡ್ತೀರಿ – ತಿಮ್ಮಾಪೂರ್‌ ವಿರುದ್ಧ ಸೂರ್ಯ ಆಕ್ರೋಶ

    ಸಿದ್ದರಾಮಯ್ಯ ವಿರುದ್ಧ ರಾಜ್ಯದಲ್ಲಿ ಉಳಿದಿರೋದು ಜನಾಕ್ರೋಶ ಮಾತ್ರ. ಇನ್ನು ಮುಂದೆ ಎಲ್ಲೇ ಹೋದರೂ ನಿಮ್ಮ ಪರಿಸ್ಥಿತಿ ಹೀಗೇ ಇರುತ್ತದೆ. ರಾಜ್ಯದ ಜನರು ಇದೇ ರೀತಿ ಉತ್ತರ ಕೊಡುತ್ತಾರೆ ಎಂದರು. ಇದನ್ನೂ ಓದಿ: ಬೆಳಗಾವಿ | ಹೆಚ್ಚುವರಿ ಎಸ್‌ಪಿ ವಿರುದ್ಧ ಸಿಎಂ ಗರಂ – ವೇದಿಕೆಯಲ್ಲೇ ತರಾಟೆ