ಬೆಂಗಳೂರು: ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ ಏರಿಕೆಯಾಗಿದ್ದು, ಹೆಚ್ಚಿನ ಬಿಸಿಲು ಇರುವ ಕಾರಣ, ಗ್ರಾಮೀಣ ಭಾಗದ ಜೀವನೋಪಾಯದ ಪ್ರಮುಖ ಭಾಗವಾದ ನರೇಗಾ ಯೋಜನೆಯಡಿ(MGNREGA Project) ಕೂಲಿ ಕೆಲಸ ಮಾಡುವ ಬೆಳಗಾವಿ(Belagavi) ಮತ್ತು ಕಲಬುರಗಿ(Kalaburagi) ಕಂದಾಯ ವಿಭಾಗದ ಕಾರ್ಮಿಕರಿಗೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ 30% ರಷ್ಟು ಹಾಗೂ ಜೂನ್‌ನಲ್ಲಿ 20% ರಷ್ಟು ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ಘೋಷಿಸಿರುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ತಿಳಿಸಿದ್ದಾರೆ.
ಬೇಸಿಗೆ ದಿನಗಳಲ್ಲಿ ಕೂಲಿ ಕಾರ್ಮಿಕರು ಶಾಖಾಘಾತದಿಂದ, ತಮ್ಮ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ತಪ್ಪಿಸಲು ಬಿಳಿಯ ಬಣ್ಣದ ಸಡಿಲವಾದ ಖಾದಿ ಬಟ್ಟೆಗಳನ್ನು ಹಾಗೂ ತಲೆಯ ಮೇಲೆ ಬಿಳಿ ಬಣ್ಣದ ರುಮಾಲು ಧರಿಸಿ ಕೆಲಸ ಮಾಡಬೇಕು. ಚಹಾ, ಕಾಫಿ, ತಂಪಾದ ಪಾನೀಯಗಳು, ಮಸಾಲೆ ಮತ್ತು ಎಣ್ಣೆಭರಿತ ಆಹಾರದ ಬದಲಾಗಿ ಹೆಚ್ಚು ತೇವಾಂಶವುಳ್ಳ ತರಕಾರಿ, ಅಂಬಲಿ, ಮಜ್ಜಿಗೆ, ಎಳೆನೀರು ಸೇವನೆ ಮಾಡಬೇಕು. ನೀರನ್ನು ಯಥೇಚ್ಛವಾಗಿ ಕುಡಿಯಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ಮಗು ಇದ್ದಂತೆ ಚಾಕ್ಲೇಟ್ ಕೊಟ್ಟವರ ಕಡೆ ಹೋಗ್ತಾರೆ: ಪ್ರದೀಪ್ ಈಶ್ವರ್ ಲೇವಡಿ
ಸಂಬಂಧಿಸಿದ ಅಧಿಕಾರಿಗಳು ಕಾಮಗಾರಿ ಸ್ಥಳಗಳಲ್ಲಿ ಯೋಜನೆಯ ಮಾರ್ಗಸೂಚಿಯಂತೆ ಕಡ್ಡಾಯವಾಗಿ ನೆರಳು, ಶುದ್ಧ ಕುಡಿಯುವ ನೀರು, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಮುಂತಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮವಹಿಸಲು ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: ʻವಕ್ಫ್ ವಾರ್ʼ – ಸೋನಿಯಾ ಗಾಂಧಿ ಕ್ಷಮೆ ಯಾಚಿಸಲಿ: ಬಿಜೆಪಿ ಪಟ್ಟು
ಬೆಳಗಾವಿ: ಆಸ್ಪತ್ರೆಗಾಗಿ (Hospital) 60 ವರ್ಷಗಳ ಹಿಂದೆ ಭೂಮಿ ಕಳೆದುಕೊಂಡ ರೈತರಿಗೆ (Farmers) ಇನ್ನೂ ಪರಿಹಾರ ನೀಡದ ಹಿನ್ನೆಲೆ ಬೆಳಗಾವಿ (Belagavi) ಜಿಲ್ಲಾ ಆರೋಗ್ಯ ಅಧಿಕಾರಿಗಳ ಕಾರನ್ನು ಜಪ್ತಿ ಮಾಡುವಂತೆ ನ್ಯಾಯಾಲಯ ಆದೇಶಿಸಿದೆ.
ರೈತರಾದ ಫಕ್ಕೀರಪ್ಪ ತಳವಾರ, ಮಲ್ಲಿಕಾರ್ಜುನ ತಳವಾರ ಹಾಗೂ ಅಶೋಕತಾಯಿ ತಳವಾರ ಅವರು ಆಸ್ಪತ್ರೆಗಾಗಿ ಜಮೀನು ಕಳೆದುಕೊಂಡಿದ್ದರು. ಮೂರು ಜನ ರೈತರು, ನ್ಯಾಯಾಲಯದ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಪರಿಹಾರ ನೀಡಲು ವಿಳಂಬವಾದ ಹಿನ್ನೆಲೆ ಡಿಹೆಚ್‍ಓ (DHO) ಕಾರನ್ನು ಜಪ್ತಿ ಮಾಡುವಂತೆ ನ್ಯಾಯಾಲಯ (Court) ಆದೇಶಿಸಿದೆ.
ವಕೀಲರ ಸಮೇತ ರೈತರು ಬಂದು ಕಾರನ್ನು ಜಪ್ತಿ ಮಾಡಿದ್ದಾರೆ. ಜಪ್ತಿಗೆ ಬರುತ್ತಿರುವ ವಿಚಾರ ತಿಳಿದು ಚಾಲಕ ಕಾರನ್ನು ತೆಗೆದುಕೊಂಡು ಪರಾರಿಯಾಗಿದ್ದ. ಈ ವೇಳೆ ಅಧಿಕಾರಿಗಳಿಗೆ ವಕೀಲರು ಹಿಗ್ಗಾಮಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ತೀವ್ರ ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ಸಿಬ್ಬಂದಿ ಕಾರನ್ನು ತಂದುಕೊಟ್ಟಿದ್ದಾರೆ.
ಬೆಳಗಾವಿ: ಐಫೋನ್ (iPhone) ತಗೊಂಡಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ಮಗ ನೆಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿಯ (Belagavi) ನ್ಯೂ ವೈಭವ ನಗರದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಯುವಕನನ್ನು ಮುಸ್ತಫೀಸ್ ಅಬ್ದುಲ್ ರಶೀದ್ ಶೇಖ್ (24) ಎಂದು ಗುರುತಿಸಲಾಗಿದೆ. ಯುವಕ ಇಎಂಐ ಮೂಲಕ 70 ಸಾವಿರ ರೂ. ಬೆಲೆಯ ಐಫೋನ್ ಖರೀದಿಸಿದ್ದ. ಈ ವಿಚಾರ ಗೊತ್ತಾಗಿ ಇಷ್ಟೊಂದು ಹಣ ಕೊಟ್ಟು ಯಾಕೆ ಮೊಬೈಲ್ ತಗೊಂಡಿದ್ದೀಯಾ? ಕಡಿಮೆ ದರದ ಮೊಬೈಲ್ ತೆಗೆದುಕೊಳ್ಳಬೇಕಿತ್ತು ಎಂದು ತಂದೆ ತಿಳುವಳಿಕೆ ಹೇಳಿದ್ದರು.
ಇದೇ ವಿಚಾರಕ್ಕೆ ಮನನೊಂದ ಮನೆಯ ರೂಮ್‍ನಲ್ಲಿ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ: ಶಾಸಕ ರಾಜು ಕಾಗೆ (Raju Kage) ಸಹೋದರನ ಪುತ್ರನಿಂದ ಕಾರು ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಬೆಳಗಾವಿ (Belgavi) ಜಿಲ್ಲೆಯ ಕಿತ್ತೂರು (Kitturu) ಪಟ್ಟಣದ ಹೊರವಲಯದ ಬೆಂಗಳೂರು-ಪುಣೆ (Bengaluru-Pune) ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತ ಬಸವರಾಜ ಹಾಗೂ ಆತನ ಇಬ್ಬರು ಸ್ನೇಹಿತರು ಬೆಳಗಾವಿಯಿಂದ ಕಿತ್ತೂರಿಗೆ ಬೈಕ್‌ನಲ್ಲಿ ಕೆಲಸಕ್ಕೆ ಹೊರಟ್ಟಿದ್ದರು. ಈ ವೇಳೆ ಶಾಸಕ ರಾಜು ಕಾಗೆ ಸಹೋದರನ ಪುತ್ರ ಶ್ರೀಪ್ರಸಾದ್ ಸಿದ್ದನಗೌಡ ಕಾಗೆ ಪ್ರಯಾಣಿಸುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸವರಾಜ ಪುಡಕಲಕಟ್ಟಿ ಸಾವನ್ನಪ್ಪಿದ್ದು, ಸಣ್ಣವಿಠ್ಠಲ್ ದುರದುಂಡಿ, ನಿಂಗಪ್ಪ ಹೆಬ್ಬಾಳ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತ ದೇಹವನ್ನು ಬಿಮ್ಸ್ (BIMS) ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಗಾಯಾಳುಗಳನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಿತ್ತೂರು ಠಾಣೆ ಪೊಲೀಸರು (Kitturu Police Station) ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ:ಚಿಕ್ಕಬಳ್ಳಾಪುರ| ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಮೂವರು ದುರ್ಮರಣ
ಬೆಳಗಾವಿ: ಅಕ್ಕನ ಮಗಳ ಮದುವೆಗೆ ರಜೆ ನೀಡದ ಹಿನ್ನೆಲೆ ಬಸ್‌ನಲ್ಲೇ ಚಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ(Belagavi) ಡಿಪೋದ 2ನೇ ಘಟಕದಲ್ಲಿ ನಡೆದಿದೆ.
2ನೇ ಘಟಕದ ಬಸ್ ಚಾಲಕ ಬಾಲಚಂದ್ರ ಹುಕೋಜಿ ನೇಣಿಗೆ ಶರಣಾಗಿದ್ದಾರೆ. ಮನೆಯಲ್ಲಿ ಅಕ್ಕನ ಮಗಳ ಮದುವೆಯಿದ್ದ ಕಾರಣ ಕಳೆದ ಮೂರು ದಿನಗಳ ಹಿಂದೆ ರಜೆಗಾಗಿ ಅರ್ಜಿ ಸಲ್ಲಿಸಿದ್ದರು. ರಜೆ ನೀಡದ ಹಿನ್ನೆಲೆ ಸಿಬಿಟಿಯಿಂದ ವಡಗಾವ ನಗರ ಸಂಚಾರ ಬಸ್‌ನಲ್ಲಿ ಕರ್ತವ್ಯ ನಿರ್ವಹಿಸಬೇಕಿದ್ದ ಅವರು ಅದೇ ಬಸ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಸನ್ನಿ ಡಿಯೋಲ್ ಸಿನಿಮಾದಲ್ಲಿ ಸೊಂಟ ಬಳುಕಿಸಿದ ‘ಐರಾವತ’ ನಟಿ ಊರ್ವಶಿ
ಗಾಂಧಿ ನಗರದಲ್ಲಿ(Gandhi Nagara) ವಾಸವಿದ್ದ ಮೃತ ಚಾಲಕ, ಬೆಳಿಗ್ಗೆ 6 ಗಂಟೆಗೆ ಕರ್ತವ್ಯಕ್ಕೆ ಹಾಜರಾಗಿದ್ದರು. ಅವರು ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ(Market Police Station) ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮುಂಬೈ: 14ನೇ ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆ
ಬೆಳಗಾವಿ: ಪ್ರಾರ್ಥನೆ ಮುಗಿಸಿ ಉಪಹಾರ ಸೇವಿಸಲು ಹೋಟೆಲ್‌ಗೆ (Hotel) ಬಂದಾಗ ಒಂದೇ ಕೋಮಿನ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದ್ದು, ಸೋಡಾ ಬಾಟಲಿ ಹಾಗೂ ನೀರಿನ ಬಾಟಲಿಯಿಂದ ಪರಸ್ಪರ ಹೊಡೆದಾಡಿಕೊಂಡ ಘಟನೆ ಬೆಳಗಾವಿ (Belagavi) ನಗರದಲ್ಲಿ ನಡೆದಿದೆ.
ಎರಡು ಗುಂಪುಗಳ ಯುವಕರು ಪರಸ್ಪರ ಹೊಡೆದಾಡುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯಿಂದ ಕೆಲಕಾಲ ತ್ವೇಷಮಯ ವಾತಾವರಣ ಉಂಟಾಗಿತ್ತು. ಏಕಾಏಕಿ ಘರ್ಷಣೆ ಉಂಟಾದ ಹಿನ್ನೆಲೆ ಸಿಬ್ಬಂದಿ ಹೋಟೆಲ್‌ನ ಬಾಗಿಲು ಮುಚ್ಚಿದ್ದಾರೆ. ಇದನ್ನೂ ಓದಿ: ರಾಜ್ಯದ ಮೊಟ್ಟ ಮೊದಲ ಮೇಕೆ ಹಾಲು ಉತ್ಪಾದನಾ ಘಟಕ ಕಾಡುಪಾಲು
ಬೆಳಗಾವಿ: ನಗರದ (Belagavi) ಪಿಜಿ ಒಂದರಲ್ಲಿ ಎಂಬಿಎ ಪದವೀಧರೆಯೊಬ್ಬಳು (MBA Graduate) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಕೇಸ್‌ಗೆ ಹೊಸ ಟ್ವಿಸ್ಟ್ ಸಿಕ್ಕಿದೆ.
ಪ್ರಿಯಕರನ ಲವ್ (Love) ದೋಖಾಗೆ ವಿಜಯಪುರ (Vijayapura) ಮೂಲದ ಐಶ್ವರ್ಯಲಕ್ಷ್ಮೀ ಗಲಗಲಿ ಬಲಿಯಾಗಿದ್ದಾಳೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಯುವತಿಯ ಮೊಬೈಲ್ ಪರಿಶೀಲನೆ ವೇಳೆ ಪೊಲೀಸರಿಗೆ ಯುವತಿಯ ಪ್ರಿಯಕರನ ಕರಾಳ ಮುಖ ಬಯಲಾಗಿದೆ. ಇದೀಗ ಯುವತಿಯ ಪ್ರಿಯಕರ ಆಕಾಶ್ ಚಡಚಣನನ್ನು ಬೆಳಗಾವಿಯ ಎಪಿಎಂಸಿ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿ | ಎಂಬಿಎ ಪದವೀಧರೆ ಪಿ.ಜಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಐಶ್ವರ್ಯಳ ಪ್ರಿಯಕರ ಮತ್ತೋರ್ವ ಯುವತಿಯೊಂದಿಗೆ ಸಂಬಂಧ ಹೊಂದಿದ್ದು ತಿಳಿದು ಆಘಾತಕ್ಕೊಳಗಾಗಿದ್ದಳು. ಇದೇ ವಿಚಾರಕ್ಕೆ ಮನನೊಂದು ಮಾ.25 ರಂದು ಸಂಜೆ 6:30 ರಿಂದ 7:30ರ ಅವಧಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಳು. ಸಾವಿಗೂ ಮುನ್ನ ಯುವತಿ, ಆಕಾಶ್ ಹಾಗೂ ಅವನ ಸ್ನೇಹಿತನ ಮೊಬೈಲ್‌ಗೆ, ʻನನ್ನ ಸಾವಿಗೆ ನೀವಿಬ್ಬರೂ ಕಾರಣʼ ಎಂದು ಮೆಸೇಜ್ ಮಾಡಿದ್ದಳು ಎನ್ನಲಾಗಿದೆ. ಮೆಸೇಜ್ ನೋಡಿದ್ದ ಆಕಾಶ್, ಐಶ್ವರ್ಯ ತಂಗಿದ್ದ ಪಿಜಿಗೆ ಬಂದು ಬಾಗಿಲು ಒಡೆದು, ಯುವತಿಯ ಮೊಬೈಲ್ ಕದ್ದು ಪರಾರಿಯಾಗಿದ್ದ. ಆತ ಬಂದು ಹೋಗಿರುವ ವೀಡಿಯೊ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
ಇಬ್ಬರ ನಡುವೆ ಕಾಲೇಜು ದಿನಗಳಿಂದಲೇ ಪ್ರೇಮ ಸಂಬಂಧ ಇತ್ತು ಎನ್ನಲಾಗಿದೆ. ಆಕಾಶ್ ಬೆಳಗಾವಿಯ ಖಾಸಗಿ ಕಂಪನಿಗಲ್ಲಿ ಕೆಲಸ ಮಾಡ್ತಿದ್ದ ಎನ್ನುವ ಕಾರಣಕ್ಕೆ ಆಕೆ ಸಹ ಇಂಟರ್ನಶಿಪ್‌ಗೆ ನಗರಕ್ಕೆ ಬಂದಿದ್ದಳು. ಇದನ್ನೂ ಓದಿ: ಮಾಸ್ಕೋ ನಡು ಬೀದಿಯಲ್ಲಿ ಪುಟಿನ್ ಕಾರು ಸ್ಫೋಟ – ಹತ್ಯೆಗೆ ಯತ್ನ?
ಚಿಕ್ಕೋಡಿ : ಮೇಕೆ, ಎಮ್ಮೆ, ಹಸು ದುಬಾರಿ ಹಣಕ್ಕೆ ಮಾರಾಟವಾಗಿರುವುದನ್ನು ಕೇಳಿರಬಹುದು. ಆದರೆ ಜಿಲ್ಲೆಯಲ್ಲಿ ಕೋಣವೊಂದು (Buffalo) 1.15 ಲಕ್ಷ ರೂ.ಗೆ ಮಾರಾಟವಾಗುವ ಮೂಲಕ ಸುದ್ದಿ ಮಾಡಿದೆ.
ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್ ಪ್ರತಿಕ್ರಿಯಿಸಿ, ಸೈಬರ್ ವಂಚಕರು ಬೆದರಿಕೆ ಕರೆ ಮಾಡಿ ಡಯಾಗೊ ಅವರಿಂದ 50 ಲಕ್ಷ ರೂ. ಹೆಚ್ಚು ಹಣವನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದಾರೆ. ಸುಮ್ಮನಾಗದೇ ಮತ್ತೆ ಹಣಕ್ಕೆ ಕಿರುಕುಳ ನೀಡುತ್ತಿದ್ದರು. ಇದರಿಂದ ತಮ್ಮ ಜೀವನವನ್ನು ಕೊನೆಗೊಳಿಸಲು ದಂಪತಿ ನಿರ್ಧರಿಸಿದ್ದರು. ತಮ್ಮ ಡೆತ್ ನೋಟ್‌ನಲ್ಲಿ, ದಂಪತಿ ಕೆಲವು ವ್ಯಕ್ತಿಗಳಿಂದ ಸಾಲ ಪಡೆದಿರುವುದಾಗಿ ಉಲ್ಲೇಖಿಸಿದ್ದಾರೆ. ಅದನ್ನು ತಮ್ಮ ಆಸ್ತಿಗಳನ್ನು ಮಾರಿ ಮರುಪಾವತಿಸಬೇಕೆಂದು ಹೇಳಿದ್ದಾರೆ ಎಂದು ತಿಳಿಸಿದರು.
ಡೆತ್‌ನೋಟ್‌ನಲ್ಲಿ ಏನಿದೆ?
ಕೆಲ ದಿನಗಳ ಹಿಂದೆ ದೆಹಲಿ ಕ್ರೈಂ ಬ್ರ‍್ಯಾಂಚ್‌ನಿಂದ ನಮಗೆ ವಿಡಿಯೋ ಕರೆ ಬಂದಿತ್ತು. ಆ ಕರೆಯಲ್ಲಿ ನೀವು ಅಪರಾಧ ಒಂದರಲ್ಲಿ ಭಾಗಿಯಾಗಿದ್ದೀರಿ ಎಂದು ಬೆದರಿಕೆ ಹಾಕಲಾಗಿತ್ತು. ಬಳಿಕ 5 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಭಯಗೊಂಡು ನಾವು ಅವರು ಹೇಳಿದ ಖಾತೆಗೆ ಹಣ ಹಾಕಿದ್ದೆವು.
ಹಣ ಪಾವತಿ ಮಾಡಿದ ಬಳಿಕವೂ ಮತ್ತೆ ವಿಡಿಯೋ ಕಾಲ್ ಮಾಡಿ ಹಣ ನೀಡಬೇಕು. ಒಂದು ವೇಳೆ ಹಣ ನೀಡದಿದ್ದರೆ ಅರೆಸ್ಟ್ ಮಾಡುತ್ತೇವೆ ಎಂದು ಬೆದರಿಸಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬರೆದಿದ್ದಾರೆ. ಡೆತ್ ನೋಟ್‌ನಲ್ಲಿ ದಂಪತಿ ತಮ್ಮ ದೇಹವನ್ನು ವೈದ್ಯಕೀಯ ವಿಜ್ಞಾನಗಳ ಆಸ್ಪತ್ರೆಗೆ ದಾನ ಮಾಡುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ನನ್ನ ಕೊಲೆಗೆ 70 ಲಕ್ಷ ಸುಪಾರಿ ಕೊಡಲಾಗಿದೆ – ತುಮಕೂರು ಎಸ್ಪಿಗೆ ಸಚಿವ ರಾಜಣ್ಣ ಪುತ್ರ ದೂರು
ಮೃತ ಡಿಯಾಗೋ ಮಹಾರಾಷ್ಟ್ರ ಸರ್ಕಾರದಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಅಷ್ಟೇ ಅಲ್ಲದೇ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಮತ್ತು ಇತರ ಪರೀಕ್ಷೆಗಳಿಗೆ ತರಬೇತಿ ನೀಡಿದ್ದರು. ದಂಪತಿಯ ಶವವನ್ನು ಹಸ್ತಾಂತರಿಸಿದ್ದರೂ ತಾಂತ್ರಿಕ ಕಾರಣಗಳಿಂದ ಬಿಐಎಂಎಸ್ ಶವಗಳನ್ನು ಸ್ವೀಕರಿಸಲಿಲ್ಲ. ನಂತರ ನಂತರ ಎರಡೂ ಶವಗಳನ್ನು ಬೀಡಿ ಸ್ಮಶಾನದಲ್ಲಿ ಸಮಾಧಿ ಮಾಡಲಾಗಿದೆ.
ಬೆಳಕಿಗೆ ಬಂದಿದ್ದು ಹೇಗೆ?
ವೃದ್ಧ ದಂಪತಿ ಮನೆಗೆ ಇಂದು ನೆರೆ ಮನೆಯ ಮಹಿಳೆ ಎಂದಿನಂತೆ ಬಂದಿದ್ದಾರೆ. ಎಷ್ಟು ಕರೆದರೂ ಬಾಗಿಲು ತೆಗೆಯದ ಕಾರಣ ಕಿಟಕಿಯಿಂದ ವೃದ್ಧ ದಂಪತಿಯ ಮೃತದೇಹ ನೋಡಿದ್ದಾರೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಬಂದ ನಂದಗಡ ಠಾಣೆ ಪೊಲೀಸರು ಪರಿಶೀಲನೆ ಮಾಡಿದ್ದಾರೆ. ವೃದ್ಧ ದಂಪತಿ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಬಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ವಿಜಯಪುರ (Vijayapura) ಜಿಲ್ಲೆಯ ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡ ಯುವತಿ. ವಿಜಯಪುರದಲ್ಲಿಯೇ ಎಂಬಿಎ ಪದವಿ ಓದಿದ್ದ ಐಶ್ವರ್ಯ ಕೆಲಸಕ್ಕಾಗಿ ಬೆಳಗಾವಿಗೆ ಬಂದಿದ್ದಳು. ಬೆಳಗಾವಿಯ ಕಂಪನಿಯೊಂದರಲ್ಲಿ ಕಲಿಕಾ ತರಬೇತಿಯಲ್ಲಿದ್ದ ಐಶ್ವರ್ಯ ಕಳೆದ ಮೂರು ತಿಂಗಳಿನಿಂದ ನೆಹರು ನಗರದ ಪಿ.ಜಿಯಲ್ಲಿ ವಾಸವಿದ್ದಳು. ಆತ್ಮಹತ್ಯೆಗೆ ಮುನ್ನ ಗೆಳತಿಯೊಂದಿಗೆ ಮಾತನಾಡಿ ರೂಂಗೆ ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಾತ್ರವಲ್ಲದೇ ಯುವತಿ ಸ್ನೇಹಿತ ಕೂಡ ಪಿ.ಜಿಗೆ ಬಂದು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಲವ್ ಬ್ರೇಕಪ್ ಯುವತಿ ಆತ್ಮಹತ್ಯೆಗೆ ಕಾರಣವಾಯ್ತಾ ಎಂಬ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಕಡಲಾಚೆಯ ಗಣಿಗಾರಿಕೆ ಯೋಜನೆಗೆ ಕೇರಳದ ವಿರೋಧವೇಕೆ? – ಯೋಜನೆಯ ಮಹತ್ವವೇನು?
ಮಂಗಳವಾರ ಸಂಜೆ 6:30 ರಿಂದ 7:30ರ ಅವಧಿಯಲ್ಲಿ ಐಶ್ವರ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಫೋನ್ ರಿಸೀವ್ ಮಾಡದಿದ್ದಕ್ಕೆ ಆಕೆಯ ಸ್ನೇಹಿತ ಪಿ.ಜಿಗೆ ಗಾಬರಿಯಿಂದ ಬಂದಿದ್ದ. ಪಿ.ಜಿ ರೂಂನ ಬಾಗಿಲು ಒಡೆದು ನೋಡಿದಾಗ ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ಐಶ್ವರ್ಯ ಸ್ನೇಹಿತ ಅಲ್ಲಿಂದ ವಾಪಸ್ ಹೋಗುತ್ತಿರುವುದನ್ನು ಸ್ಥಳೀಯರು ಕೂಡ ನೋಡಿದ್ದಾರೆ. ಇದನ್ನೂ ಓದಿ: ಮನೆ ಓನರ್ ಹೆಂಡ್ತಿ ಜೊತೆಗೇ ಕಳ್ಳಸಂಬಂಧ – ಬಾಡಿಗೆದಾರನನ್ನ 7 ಅಡಿ ಗುಂಡಿಯಲ್ಲಿ ಜೀವಂತವಾಗಿ ಹೂತುಹಾಕಿದ ಪತಿ!
ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಬಂದ ಪೊಲೀಸ್ ಅಧಿಕಾರಿಗಳು ಐಶ್ವರ್ಯ ಮೊಬೈಲ್‌ನ ಕಾಲ್ ಡೀಟೈಲ್ಸ್ ಪರಿಶೀಲನೆಗೆ ಮುಂದಾಗಿದ್ದಾರೆ. ಅಲ್ಲದೇ ಪಿಜಿಗೆ ಬಂದು ಹೋದ ಸ್ನೇಹಿತನಿಗಾಗಿ ಶೋಧ ನಡೆಸುತ್ತಿದ್ದಾರೆ. ಐಶ್ವರ್ಯ ಆತ್ಮಹತ್ಯೆಗೆ ಅಸಲಿ ಕಾರಣ ಪೊಲೀಸ್ ತನಿಖೆಯಿಂದ ಗೊತ್ತಾಗಬೇಕಿದೆ. ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: Tumakuru | 19 ಸಾವಿರ ಗಡಿ ದಾಟಿದ ಕ್ವಿಂಟಲ್ ಕೊಬ್ಬರಿ ಧಾರಣೆ – ಸಾರ್ವಕಾಲಿಕ ದಾಖಲೆ