ಬೆಳಗಾವಿ: ಹಿರೇಬಾಗೇವಾಡಿ ಬಳಿಯ ಕಮಕಾರಟ್ಟಿ ಘಾಟ್‌ನಲ್ಲಿ (Kamakaratti Ghat) ಸರಣಿ ಅಪಘಾತ (Serial Accident) ನಡೆದಿದ್ದು ಭಾರೀ ಅನಾಹುತ ತಪ್ಪಿದೆ.
ಮೂರು ಕೆಎಸ್‌ಆರ್‌ಟಿಸಿ ಬಸ್, ಮೂರು ಲಾರಿ, ಒಂದು ಬೈಕ್ ಹಾಗೂ ಕಂಟೇನರ್ ವಾಹನದ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಎಲ್ಲರೂ ಪಾರಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ನಾಲ್ಕು ಬೆಂಗಳೂರು ಪುಣೆ ಹೆದ್ದಾರಿಯಲ್ಲಿ (Bengaluru -Pune Highway) ಮೊದಲು ನಿಯಂತ್ರಣ ತಪ್ಪಿ ಕಂಟೇನರ್ ವಾಹನ ಪಲ್ಟಿಯಾಗಿದೆ. ಕಂಟೇನರ್ ಡಿಕ್ಕಿ ಆಗುತ್ತದೆ ಎಂದು ಚಾಲಕ ಬಸ್ಸನ್ನು ನಿಲ್ಲಿಸಿದ್ದಾನೆ.
ಸಡನ್ ಬ್ರೇಕ್ ಹಾಕಿದ ಬೆನ್ನಲ್ಲೇ ಹಿಂದಿದ್ದ ಲಾರಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಅಪಘಾತ ತಪ್ಪಿಸಲು ಹೋಗಿ ರಾಜಹಂಸ ಬಸ್ಸು ಬೈಕ್‌ಗೆ ಗುದ್ದಿದೆ.
ಮುಂದೆ ಅಪಘಾತ ಆಗುತ್ತಿರುವುದನ್ನು ಕಂಡು ಕೆಎಸ್‌ಆರ್‌ಟಿಸಿ ಬಸ್ ಪಕ್ಕಕ್ಕೆ ಹೋಗಿದ್ದರಿಂದ ಗ್ಯಾಸ್ ಸಾಗಿಸುತ್ತಿದ್ದ ಲಾರಿಗೆ ಹಾಗೂ ಗೂಡ್ಸ್ ಲಾರಿಗೆ ಡಿಕ್ಕಿ ಹೊಡೆದಿದೆ.
ರಾಜಹಂಸ ಬಸ್ ಚಕ್ರದಲ್ಲಿ ಸಿಲುಕಿ ಪ್ರಾಣಾಪಾಯದಿಂದ ಬೈಕ್ ಸವಾರ ಪಾರಾಗಿದ್ದಾನೆ. ಹೆಲ್ಮೆಟ್ ಹಾಕಿದ್ದರಿಂದ ಬಸ್ಸಿನ ಚಕ್ರಕ್ಕೆ ಸಿಲುಕಿದ್ರೂ ನಾನು ಪಾರಾಗಿ ಬಂದೆ ಎಂದು ಬೈಕ್ ಸವಾರ ಹೇಳಿದ್ದಾನೆ.
ಸರಣಿ ಅಪಘಾತದಿಂದ ರಸ್ತೆ ಒಂದು ಭಾಗದಲ್ಲಿ ಭಾರೀ ಟ್ರಾಫಿಕ್ ಜಾಮ್ ಸಂಭವಿಸಿತ್ತು. ಸ್ಥಳಕ್ಕೆ ಪೊಲೀಸರ ಭೇಟಿ ಕ್ರೇನ್ ಮೂಲಕ ಅಪಘಾತವಾದ ವಾಹನ ತೆರವು ಮಾಡಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಹೀರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.
ಧಾರವಾಡ/ಬೆಳಗಾವಿ: ಹನಿಟ್ರ‍್ಯಾಪ್ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡುವ ಅಗತ್ಯವೇ ಇಲ್ಲ. ನಮ್ಮಲ್ಲೇ ಉತ್ತಮ ಅಧಿಕಾರಿಗಳಿದ್ದಾರೆ ಎಂದು ಶಾಸಕ ವಿನಯ್ ಕುಲಕರ್ಣಿ (Vinay Kulakarni) ಹೇಳಿದರು.
ಬೆಳಗಾವಿಯ (Belagavi) ಕಿತ್ತೂರಿನಲ್ಲಿ (Kittur) ಮಾತನಾಡಿದ ಅವರು, ನಮ್ಮ ರಾಜ್ಯದಲ್ಲೇ ಹನಿಟ್ರ‍್ಯಾಪ್ ಪ್ರಕರಣವನ್ನು ಬೇಧಿಸುವಂತಹ ದಕ್ಷ ಅಧಿಕಾರಿಗಳಿದ್ದಾರೆ. ಹನಿಟ್ರ‍್ಯಾಪ್ ಮಾಡುವುದು ರಾಜಕಾರಣದಲ್ಲಿ ಅತ್ಯಂತ ಕೀಳುಮಟ್ಟದ ಕೆಲಸ. ಅದನ್ನು ಎಂದಿಗೂ ಮಾಡಬಾರದು ಎಂದರು. ಇದನ್ನೂ ಓದಿ: ಸಾಕು ನಾಯಿ ದಾಳಿ – ಮಹಿಳೆಯ ಮುಖಕ್ಕೆ ಬಿತ್ತು 20 ಸ್ಟಿಚ್
ಫೋನ್ ಕದ್ದಾಲಿಕೆ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರೇ ಹೆಚ್ಚು ಫೋನ್ ಕದ್ದಾಲಿಕೆ ಮಾಡುತ್ತಾರೆ. ಇಂದಿಗೂ ಬಿಜೆಪಿಯರು ಫೋನ್ ಕದ್ದಾಲಿಕೆ ಮಾಡುತ್ತಿದ್ದಾರೆ. ಆರ್.ಅಶೋಕ್ (R Ashok) ಅವರ ಫೋನ್ ಕದ್ದಾಲಿಕೆ ಬಗ್ಗೆ ನನಗೆ ಗೊತ್ತಿಲ್ಲ. ನಾನು ಪ್ರವಾಸದಲ್ಲಿದ್ದೆ ಎಂದು ತಿಳಿಸಿದರು. ಇದನ್ನೂ ಓದಿ: ಹನಿಟ್ರ್ಯಾಪ್ ಕೇಸ್ – ಪರಮೇಶ್ವರ್‌ಗೆ ದೂರು ನೀಡದೇ ಮನವಿ ಕೊಟ್ಟ ರಾಜಣ್ಣ
ಡಿ.ಕೆ.ಶಿವಕುಮಾರ್ (D K Shivakumar) ಅವರು ಸಂವಿಧಾನದ ಪರ ಇದ್ದವರು. ಅವರು ಸಂವಿಧಾನಕ್ಕೆ ಎಂದಿಗೂ ವಿರುದ್ಧ ಇಲ್ಲ. ಗಾಂಧಿ ಕಾರ್ಯಕ್ರಮದಲ್ಲಿ ಅವರು ಏನು ಮಾತನಾಡಿದ್ದಾರೆ ಎಂಬುದನ್ನು ನಾವು ನೋಡಿದ್ದೇವೆ. ಅಂತವರು ಸಂವಿಧಾನ ಬದಲಿಸುವ ಮಾತು ಹೇಳುತ್ತಾರಾ? ಅದು ಎಂದಿಗೂ ಸಾಧ್ಯವಿಲ್ಲ ಎಂದು ಹೇಳಿದರು. ಇದನ್ನೂ ಓದಿ: ರೀಲ್ಸ್ ವಿವಾದ: ನಮಗೆ ಪೊಲೀಸರ ದಿಕ್ಕು ತಪ್ಪಿಸೋ ಉದ್ದೇಶವಿಲ್ಲ ಎಂದ ವಿನಯ್ ಗೌಡ
ಶಾಸಕರಿಗೆ ಅನುದಾನದ ಕೊರತೆ ವಿಚಾರವಾಗಿ ಮಾತನಾಡಿ, ಬಜೆಟ್‌ನಲ್ಲಿ ಸ್ಪೆಷಲ್ ಗ್ರ‍್ಯಾಂಟ್ ಏನೂ ನಮಗೆ ಬಂದಿಲ್ಲ. ಇದನ್ನು ಸಿಎಂ ಜೊತೆ ನಾವು ಮಾತನಾಡುತ್ತೇವೆ. ಅವರೂ ಸಹ ನಮಗೆ ಹೆಚ್ಚು ಅನುದಾನ ಕೊಡುವ ಮಾತು ಹೇಳಿದ್ದಾರೆ. ನಮ್ಮ ಕಿತ್ತೂರು ಕರ್ನಾಟಕ ಭಾಗದ ಶಾಸಕರಿಗೆ ಹೆಚ್ಚಿನ ಅನುದಾನದ ಭರವಸೆ ಇದೆ. ಹೈದರಾಬಾದ್ ಕರ್ನಾಟಕದವರಿಗೆ 5 ಸಾವಿರ ಕೋಟಿ ರೂ. ಕೊಟ್ಟಿದ್ದಾರೆ ಎಂದು ನುಡಿದರು. ಇದನ್ನೂ ಓದಿ: ರೀಲ್ಸ್ ಮಾಡಿದ ಜಾಗದಲ್ಲಿ ವಿನಯ್, ರಜತ್‌ರನ್ನು ಸ್ಥಳ ಮಹಜರಿಗೆ ಕರೆತಂದ ಪೊಲೀಸರು
ಹಲವು ಕಾರ್ಯಕ್ರಮ ಕೂಡ ಇಲ್ಲಿ ಮುಂದೂಡಲಾಗಿದೆ. ಇದು ಅನುದಾನದ ಕೊರತೆ ಎಂದು ನಮಗನಿಸುತ್ತಿದೆ. ಕಿತ್ತೂರು ಕರ್ನಾಟಕ ಭಾಗದ ಶಾಸಕರಿಗಾಗಿ 8 ಸಾವಿರ ಕೋಟಿ ರೂ. ಇಟ್ಟುಕೊಂಡಿದ್ದು, ನಾನು ಎಲ್ಲಾ ಬ್ಯಾಲನ್ಸ್ ಮಾಡಿ ಕೊಡುತ್ತೇನೆ ಎಂದು ಸಿಎಂ ಹೇಳಿದ್ದಾರೆ. ಧಾರವಾಡಕ್ಕೆ (Dharwada) ಪ್ರತ್ಯೇಕ ಪಾಲಿಕೆ ಮಾಡಿರುವುದರಿಂದ ನಾನು ನೂರು ಕೋಟಿ ರೂ. ಅನುದಾನ ಕೊಡಲು ಕೇಳಿದ್ದೇನೆ. ಸಿಎಂ 200 ಕೋಟಿ ರೂ. ಕೊಡಬಹುದು ಎಂದರು. ಇದನ್ನೂ ಓದಿ: ಡಿಕೆಶಿ ಪ್ರತಿಕೃತಿ ಸುಟ್ಟು 200ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
ದೇವಸ್ಥಾನದ ಮೇಲೆ ಕಲ್ಲು ತೂರುತ್ತಿದ್ದಂತೆ ಯಾಶೀರ್‌ನನ್ನು ಸ್ಥಳೀಯರು ಹಿಡಿದು ಕಂಬಕ್ಕೆ ಕಟ್ಟಿಹಾಕಿದ್ದರು. ಈ ವೇಳೆ ಸ್ಥಳೀಯರು ಆತನನ್ನು ಕಂಬಕ್ಕೆ ಕಟ್ಟಿ ಹಾಕಿ ಪ್ರಶ್ನೆ ಮಾಡಿದಾಗ ನನ್ನಿಂದ ತಪ್ಪಾಗಿದೆ. ಕ್ಷಮಿಸಿ ಬಿಡಿ ಎಂದು ಕೇಳಿಕೊಂಡಿದ್ದ. ಸ್ಥಳೀಯರು ಮತ್ತೆ ಪ್ರಶ್ನೆ ಮಾಡಿದಾಗ ಈ ಹಿಂದೆ ಕೆಲವರು ಬುರ್ಖಾ ಧರಿಸಿ ಡಾನ್ಸ್ ಮಾಡಿದ್ದರು ಎಂದು ಹೇಳಿದನು. ಇದನ್ನೂ ಓದಿ: ಪರೀಕ್ಷಾ ದಿನವೇ ಕರ್ನಾಟಕ ಬಂದ್ – ಆತಂಕದಲ್ಲಿ ವಿದ್ಯಾರ್ಥಿಗಳು, ಪೋಷಕರು
ಭಾಷಾ ವೈಷಮ್ಯದಿಂದ ಆಗಾಗ ಸುದ್ದಿಯಲ್ಲಿರುವ ಬೆಳಗಾವಿ ಇಂತಹ ಕಿಡಿಗೇಡಿಗಳು ಮಾಡುವ ಕೃತ್ಯಗಳಿಂದ ಕೋಮು ವೈಷಮ್ಯದತ್ತ ವಾಲುತ್ತಿದೆಯಾ ಎನ್ನುವ ಪ್ರಶ್ನೆಗಳು ಉದ್ಭವವಾಗುತ್ತಿವೆ. ಯಾರೋ ಒಬ್ಬ ಕಿಡಿಗೇಡಿ ಬುರ್ಖಾ ಹಾಕಿಕೊಂಡು ಡಾನ್ಸ್ ಮಾಡಿದರೆ, ಮತ್ತೊಬ್ಬ ಕಿಡಿಗೇಡಿ ದೇವಸ್ಥಾನದ ಮೇಲೆ ಕಲ್ಲು ತೂರಿ ಎರಡೂ ಸಮಾಜಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಯುರೋಪ್‌ನಿಂದ ಹೆಚ್ಚಿನ ವಾಯು ರಕ್ಷಣೆ ಪಡೆಯಲು ಝೆಲೆನ್ಸ್ಕಿಗೆ ಟ್ರಂಪ್ ಸಹಾಯ: ಶ್ವೇತಭವನ ಮಾಹಿತಿ
ಇಂತಹ ಕಿಡಿಗೇಡಿಗಳ ಕೃತ್ಯಗಳನ್ನು ಪ್ರಜ್ಞಾವಂತ ಸಮಾಜ ಸೂಕ್ಷ್ಮವಾಗಿ ಗಮನಿಸಬೇಕಿದೆ. ಅಲ್ಲದೆ ಪೊಲೀಸರು ಸಹ ಇಂತವರಿಗೆ ಬಿಸಿ ಮುಟ್ಟಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.
ಚಿಕ್ಕೋಡಿ: ತೋಟದ ವಸತಿ ಪ್ರದೇಶಗಳಲ್ಲಿ ರಾತ್ರಿ ವೇಳೆ ವಿದ್ಯುತ್ ಇಲ್ಲದೇ ಮೊಬೈಲ್ ಟಾರ್ಚ್ ಬಳಸಿ ಓದುತ್ತಿದ್ದ ಮಕ್ಕಳಿಗೆ `ಪಬ್ಲಿಕ್ ಟಿವಿ’ ವರದಿ ಬೆನ್ನಲ್ಲೇ ಎಚ್ಚೆತ್ತ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘ ವಿದ್ಯುತ್ ಪೂರೈಕೆ ಮಾಡಿದ್ದಾರೆ.
ಹೌದು, ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ವಿವಿಧ ಗ್ರಾಮಗಳ ತೋಟದ ವಸತಿ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ರಾತ್ರಿ ವೇಳೆ ವಿದ್ಯುತ್ ಇರಲಿಲ್ಲ. ಹೀಗಾಗಿ ಅಲ್ಲಿನ ಮಕ್ಕಳು ಮೊಬೈಲ್ ಟಾರ್ಚ್ ಬಳಿಸಿ ವಿದ್ಯಾಭ್ಯಾಸ ಮಾಡುತ್ತಿದ್ದರು. ತೋಟದ ವಸತಿ ಪ್ರದೇಶಗಳಲ್ಲಿ ರೈತರ ಮಕ್ಕಳು ಪರದಾಡುತ್ತಿದ್ದರು.ಇದನ್ನೂ ಓದಿ: ‘ಟಾಕ್ಸಿಕ್’ನಲ್ಲಿ ಕೆಲಸ ಮಾಡಿದ್ದು, ನಿಜಕ್ಕೂ ಅದ್ಭುತ ಅನುಭವ- ಯಶ್‌ರನ್ನು ಕೊಂಡಾಡಿದ ಅಮೆರಿಕ ನಟ
ಈ ಕುರಿತು `ಪಬ್ಲಿಕ್ ಟಿವಿ’ ಸುದ್ದಿಯನ್ನು ಬಿತ್ತರಿಸಿತ್ತು. ವರದಿಯ ಬೆನ್ನಲ್ಲೇ ಎಚ್ಚೆತ್ತ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳು ವಿದ್ಯಾರ್ಥಿಗಳ ಅನೂಕುಲಕ್ಕಾಗಿ ರಾತ್ರಿಯಿಡಿ ವಿದ್ಯುತ್ ಪೂರೈಕೆ ಮಾಡಿದ್ದಾರೆ. ಜೊತೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಗಿಯುವವರೆಗೂ ವಿದ್ಯುತ್ ವ್ಯತ್ಯಯ ಮಾಡದಿರಲು ಆಡಳಿತ ಮಂಡಳಿ ತೀರ್ಮಾನಿಸಿದೆ.
ಬೆಳಗಾವಿ: ರಾಜ್ಯ ಸರ್ಕಾರ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದ್ದೆ ತಂದಿದ್ದು ಸರ್ಕಾರಿ ಬಸ್ಸುಗಳು ತುಂಬಿ ತುಳುಕುತ್ತಿವೆ. ಇದನ್ನೇ ದಾಳ ಮಾಡಿಕೊಂಡು ಬಸ್‌ನಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳಿಯರ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿಯ (Belagavi) ಕೇಂದ್ರ ಬಸ್ ನಿಲ್ದಾಣದಲ್ಲಿ ಸಕ್ರೀಯವಾಗಿದ್ದ ಕಳ್ಳಿಯರ ಗ್ಯಾಂಗ್ ಸದಸ್ಯರನ್ನು ಬೆಳಗಾವಿಯ ಮಾರ್ಕೆಟ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಸ್ ಹತ್ತುವಾಗ ಮತ್ತು ಇಳಿಯುವಾಗ ಮಹಿಳೆಯರ ಕತ್ತಲ್ಲಿದ್ದ ಬೆಲೆ ಬಾಳುವ ಬಂಗಾರದ ಒಡವೆಗಳನ್ನು ಕಳ್ಳಿಯರು ಕ್ಷಣಮಾತ್ರದಲ್ಲಿಯೇ ಎಗರಿಸುತ್ತಿದ್ದರು. ಇದನ್ನೂ ಓದಿ: 1 ಗ್ಯಾರಂಟಿಗೆ ಅರ್ಧ ಕೊಕ್ – ಬಡ ಮಹಿಳೆಯರಿಗೆ ಮಾತ್ರ ದುಡ್ಡು
ಹುಬ್ಬಳ್ಳಿ ಮೂಲದ ಕಾಂಚನಾ ಗೌಡರ ಎಂಬುವವರ ಚಿನ್ನದ ಸರ ಕಳ್ಳತನವಾಗಿತ್ತು. ಈ ಕುರಿತು ಕಾಂಚನಾ ಅವರು ಮಾರ್ಕೆಟ್ ಠಾಣೆಗೆ ದೂರು ನೀಡಿದ್ದರು. ದೂರನ್ನಾಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಸದ್ಯ ಮೂವರು ಖತರ್ನಾಕ್ ಕಳ್ಳಿಯರನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ‘ಕಿಸ್ಸಿಕ್’ ಬೆಡಗಿಗೆ ಬೇಡಿಕೆ- ಬಹುಭಾಷೆಗಳಲ್ಲಿ ಶ್ರೀಲೀಲಾ ಬ್ಯುಸಿ
ಬಂಧಿತ ಆರೋಪಿಗಳಿಂದ ಸುಮಾರು 12 ಲಕ್ಷ 70 ಸಾವಿರ ರೂ. ಮೌಲ್ಯದ 143 ಗ್ರಾಂ ಚಿನ್ನದ ಒಡವೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ: ಅಪಾರ್ಟ್ಮೆಂಟ್ ಬಾಡಿಗೆಗೆ ಪಡೆದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ತಿಳಕವಾಡಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರು ಬೆಳಗಾವಿಯ ಹಿಂದವಾಡಿ ಹನುಮಾನ್ ನಗರದಲ್ಲಿ ಅಪಾರ್ಟ್ಮೆಂಟ್ ಬಾಡಿಗೆ ಪಡೆದಿದ್ದರು. ಅದೇ ಅಪಾರ್ಟ್ಮೆಂಟ್‌ನಲ್ಲಿ ಮಹಿಳೆಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದು, ಅಪಾರ್ಟ್ಮೆಂಟ್‌ನಲ್ಲಿದ್ದ ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿದ್ದಾರೆ. ಇದನ್ನೂ ಓದಿ: ಹೈಕೋರ್ಟ್ ಆದೇಶದ ಬೆನ್ನಲ್ಲೇ ಹೆಚ್‍ಡಿಕೆ ಕೇತಗಾನಹಳ್ಳಿ ಜಮೀನು ಒತ್ತುವರಿ ತೆರವು ಕಾರ್ಯಾಚರಣೆ
ಚಿಕ್ಕೋಡಿ: ಕಲುಷಿತ ನೀರಿನಿಂದ ಜಿಲ್ಲೆಯ ಅಥಣಿ (Athani) ತಾಲೂಕಿನ ಶಿರಹಟ್ಟಿ ಗ್ರಾಮದ ಹೊರವಲಯದ ಕೃಷ್ಣ ನದಿಯಲ್ಲಿರುವ (Krishna River) ಮೀನುಗಳು ಸಾವಿರಾರು ಸಂಖ್ಯೆಯಲ್ಲಿ ಸಾವನ್ನಪ್ಪಿವೆ.
ನದಿ ತೀರದಲ್ಲಿ ರಾಶಿಗಟ್ಟಲೇ ಮೀನು ಸತ್ತು ಕೊಳೆತ ಸ್ಥಿತಿಯಲ್ಲಿ ಕಂಡುಬಂದಿವೆ. ಕಾರ್ಖಾನೆಗಳ ರಾಸಾಯನಿಕ ಮಿಶ್ರಿತ ನೀರಿನ ಪರಿಣಾಮದಿಂದ ಜಲಚರಗಳು ಸಾವನ್ನಪ್ಪಿವೆ. ಮಾಲಿನ್ಯ ನಿಯಂತ್ರಣ ಮಂಡಳಿ ಇಲಾಖೆ ಅಧಿಕಾರಿಗಳು ಕಂಡು ಕಾಣದಂತೆ ವರ್ತಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಬರಿಗೈಯಲ್ಲಿ ಬೆಂಕಿ ಕೆಂಡ ತೂರಿ ಜಾತ್ರೆ
ನದಿ ಪಾತ್ರಗಳಲ್ಲಿ ಕೊಳೆತ ಸ್ಥಿತಿಯಲ್ಲಿ ಸಾವಿರಾರು ಮೀನುಗಳು ಸತ್ತು ಬಿದ್ದ ಪರಿಣಾಮ ನದಿ ನೀರು ಹಾಗೂ ಸುತ್ತಮುತ್ತಲಿನ ವಾತಾವರಣ ಕಲುಷಿತಗೊಂಡಿದೆ. ರಾಸಾಯನಿಕ ಮಿಶ್ರಿತ ತ್ಯಾಜ್ಯ ನೀರು ಬಿಡುತ್ತಿರುವ ಕಾರ್ಖಾನೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಕೃಷ್ಣ ನದಿ ಜಲ ಶುದ್ಧೀಕರಣ ಮಾಡುವಂತೆ ಸ್ಥಳೀಯರು ಆಗ್ರಹಿಸಿದರು. ಇದನ್ನೂ ಓದಿ: ಅಪ್ಪು ಕಂದ ಒಂದ್ಸಲ ಬಂದು ನನ್ನ ನೋಡ್ಕೊಂದು ಹೋಗು: ಪುನೀತ್ ಬಗ್ಗೆ ಸೋದರತ್ತೆ ಮಾತು
– ಬಿಮ್ಸ್ ಒಂದರಲ್ಲೇ 150 ಪ್ರಕರಣ ವರದಿ – ಮಕ್ಕಳ ಆಸ್ತಿ ವರ್ಗಾವಣೆ ರದ್ದತಿಗೆ ಸೂಚನೆ
ಕಲಬುರಗಿ: ಇಂದಿನ ಯಾಂತ್ರೀಕೃತ ಹಾಗೂ ತಂತ್ರಜ್ಞಾನ ಜೀವನದಲ್ಲಿ ಭಾವನೆಗಳು ಹಾಗೂ ಸಂಬಂಧಗಳು ಮರೆಯಾಗುತ್ತಿರುವುದು ಬೇಸರದ ಸಂಗತಿ. ಇದು ಯಾವ ಮಟ್ಟಕ್ಕೆ ಹೋಗಿದೆ ಎಂದರೆ ಜನ್ಮ ನೀಡಿದ ತಂದೆ-ತಾಯಂದಿರನ್ನೇ ಅನಾಥರನ್ನಾಗಿ ಮಾಡುತ್ತಿರುವ ಪರಿಪಾಠ ಹೆಚ್ಚಾಗಿದೆ. ಇಂಥ ಅಮಾನವೀಯ ಕೃತ್ಯಗಳಿಗೆ ಬ್ರೇಕ್ ಹಾಕಲು ವೈದ್ಯಕೀಯ ಶಿಕ್ಷಣ ಇಲಾಖೆ ಮುಂದಾಗಿದೆ.
ಕರ್ನಾಟಕದಲ್ಲಿ ಇತ್ತೀಚೆಗೆ ವೃದ್ಧ ಪೋಷಕರನ್ನು (Elderly Parents) ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ (Hospital) ಬಿಟ್ಟು ಹೋಗುತ್ತಿರುವ ಉದಾಹರಣೆಗಳು ಹೆಚ್ಚಾಗಿದೆ. ಅದೂ ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಗೆ ಬಿಟ್ಟು ಮಕ್ಕಳು ನಾಪತ್ತೆಯಾಗುತ್ತಿದ್ದಾರೆ.
ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಐಎಂಎಸ್) ಒಂದರಲ್ಲೇ, 150 ಕ್ಕೂ ಹೆಚ್ಚು ಹಿರಿಯ ನಾಗರಿಕರನ್ನು ಮಕ್ಕಳು ತೊರೆದ ಪ್ರಕರಣಗಳು ವರದಿಯಾಗಿವೆ. ರಾಜ್ಯಾದ್ಯಂತ ಇತರ ವೈದ್ಯಕೀಯ ಸಂಸ್ಥೆಗಳಲ್ಲಿ ಇಂಥ 100 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಇದನ್ನೂ ಓದಿ: ಬೀದರ್‌ನಲ್ಲಿ ಏಕಾಏಕಿ ಕಾಗೆಗಳ ಸರಣಿ ಸಾವು – ಹಕ್ಕಿ ಜ್ವರದ ಆತಂಕ?
ಈ ವಿಷಯವನ್ನು ಅರಿತ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್, ತೀವ್ರ ಬೇಸರ ವ್ಯಕ್ತಪಡಿಸಿದರಲ್ಲದೇ, ಕೂಡಲೇ ವಿಲ್‌ಗಳು ಮತ್ತು ಆಸ್ತಿ ವರ್ಗಾವಣೆಗಳನ್ನು ರದ್ದುಗೊಳಿಸುವಂತೆ ಕ್ರಮ ಕೈಗೊಳ್ಳಲು ಸಚಿವರು ಆದೇಶ ನೀಡಿದ್ದಾರೆ.
ಈ ಸಂಬಂಧ ಸಚಿವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಹಲವು ವಿಷಯಗಳನ್ನು ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ ವಿಕಾಸ ಸೌಧದಲ್ಲಿ ರಾಜ್ಯದ ವಿವಿಧ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರು ಹಾಗೂ ಇತರ ಸದಸ್ಯರ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.
ಈ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ ಸಚಿವರು, ಈ ಕುರಿತ ಪ್ರಕರಣಗಳು ಕಂಡು ಬಂದ ಕೂಡಲೇ ವೈದ್ಯಕೀಯ ಶಿಕ್ಷಣ ನಿರ್ದೇಶಕರು (ಡಿಎಂಇ) ಕೂಡಲೇ ಸಹಾಯಕ ಆಯುಕ್ತರಿಗೆ (ಕಂದಾಯ ಉಪವಿಭಾಗ) ದೂರುಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.
ತಮ್ಮ ಮಕ್ಕಳ ಪರವಾಗಿ ಮಾಡಿದ ವಿಲ್‌ಗಳು ಮತ್ತು ಆಸ್ತಿ ವರ್ಗಾವಣೆಗಳನ್ನು ರದ್ದುಗೊಳಿಸುವಂತೆ ಪರಿತ್ಯಕ್ತ ಪೋಷಕರಿಗೆ ಸಚಿವರು ಕರೆ ನೀಡಿದ್ದಾರೆ.
ತಮ್ಮ ಮಕ್ಕಳು ನಮ್ಮನ್ನು ನೋಡಿಕೊಳ್ಳಲು ಆಗದೇ, ತೊರೆದಿದ್ದಾರೆ. ಕೆಲವರು ಆರ್ಥಿಕ ಸಂಕಷ್ಟಗಳಿಂದ ನಮ್ಮನ್ನು ಇಲ್ಲಿ ಬಿಟ್ಟಿದ್ದಾರೆ. ನಮ್ಮ ಆಸ್ತಿಗಳನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ನಂತರ ಮಕ್ಕಳು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಗೆ ಸೇರಿಸಿ ಹೊರಟುಹೋಗಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಊಟ, ವಸತಿ, ಆಶಯ ಉಚಿತವಾಗಿ ಸಿಗುತ್ತದೆ ಎಂಬ ಉದ್ದೇಶದಿಂದ ನಮ್ಮನ್ನು ಇಲ್ಲಿ ಬಿಟ್ಟುಹೋಗಿದ್ದಾರೆ ಎಂದು ಪರಿತ್ಯಕ್ತ ಪೋಷಕರು ತಿಳಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇಂಥ ಪರಿತ್ಯಕ್ತ ಹಿರಿಯ ನಾಗರಿಕರನ್ನು ಬಿಐಎಂಎಸ್ ಅಧಿಕಾರಿಗಳು ಬೆಳಗಾವಿ ಮತ್ತು ಸುತ್ತಮುತ್ತಲಿನ 70 ಹಿರಿಯ ನಾಗರಿಕರ ನಿವೃತ್ತಿ ಗೃಹಗಳಲ್ಲಿ ಅಥವಾ ವೃದ್ಧಾಶ್ರಮಗಳಲ್ಲಿ ಆಶ್ರಯ ಕಲ್ಪಿಸಿಕೊಟ್ಟಿದ್ದಾರೆ. ಆದರೆ ಇನ್ನೂ ಅನೇಕರು ಆಸ್ಪತ್ರೆಗಳಲ್ಲಿಯೇ ಇದ್ದಾರೆ.
ಹಿರಿಯ ನಾಗರಿಕರ ಕಾಯ್ದೆಯಡಿ ಕಾನೂನು ಕ್ರಮ
ವೈದ್ಯಕೀಯ ಸಂಸ್ಥೆಗಳ ನಿರ್ದೇಶಕರು ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ, 2007 ರ ಅಡಿಯಲ್ಲಿ ಸಹಾಯಕ ಆಯುಕ್ತರು ಕ್ರಮ ಕೈಗೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ದೂರುಗಳನ್ನು ಸಲ್ಲಿಸಬೇಕು ಎಂದು ಡಾ. ಪಾಟೀಲ್ ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
“ಈ ಕಾನೂನಿನ ಬಗ್ಗೆ ಅನೇಕ ಜನರಿಗೆ ತಿಳಿದಿಲ್ಲ. ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರಿಕರಿಗೆ ಆರ್ಥಿಕ ಮತ್ತು ವೈದ್ಯಕೀಯ ಬೆಂಬಲವನ್ನು ಒದಗಿಸಬೇಕು ಎಂಬ ನಿಯಮವಿದೆ. ಅವರು ಹಾಗೆ ಮಾಡಲು ವಿಫಲವಾದರೆ, ಪೋಷಕರು ತಮ್ಮ ಮಕ್ಕಳ ಪರವಾಗಿ ಮಾಡಿದ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸುವ ಕಾನೂನುಬದ್ಧ ಹಕ್ಕು ಹೊಂದಿರುತ್ತಾರೆ” ಎಂದು ಡಾ. ಪಾಟೀಲ್ ಹೇಳಿದ್ದಾರೆ.
ಕಾಯ್ದೆಯ ಸೆಕ್ಷನ್ 23 ರ ಪ್ರಕಾರ, ಮಕ್ಕಳು ಆಸ್ತಿಯನ್ನು ಆನುವಂಶಿಕವಾಗಿ ಪಡೆದ ನಂತರ ಹೆತ್ತವರನ್ನು ನಿರ್ಲಕ್ಷಿಸಿದರೆ ಅಥವಾ ತ್ಯಜಿಸಿದರೆ, ವಿಲ್ ಅಥವಾ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸಲು ಮತ್ತು ವಯಸ್ಸಾದ ಪೋಷಕರಿಗೆ ಮಾಲೀಕತ್ವವನ್ನು ಪುನಃ ಪಡೆಯಲು ಕಾಯ್ದೆಯಲ್ಲಿ ಅನುಮತಿ ಇದೆ ಎಂದು ತಿಳಿಸಲಾಗಿದೆ.
ಬೆಳಗಾವಿ: ನೆಲಮಂಗಲದ ಸಮೀಪ ಚಲಿಸುತ್ತಿದ್ದ ಕಾರಿನ ಮೇಲೆ ಟ್ರಕ್ ಬಿದ್ದು ಒಂದೇ ಕುಟುಂಬದ ಆರು ಜನ ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಅಂತಹದ್ದೇ ಘಟನೆ ಬೆಳಗಾವಿಯ (Belagavi) ರಾಷ್ಟ್ರೀಯ ಹೆದ್ದಾರಿ ನಾಲ್ಕರ ಬಳಿ ನಡೆದಿದೆ.
ಈ ಸಂದರ್ಭದಲ್ಲಿ ಸರ್ವಿಸ್ ರಸ್ತೆಯಲ್ಲಿ ಬರುತ್ತಿದ್ದ ಸಿಮೆಂಟ್ ಮಿಕ್ಸರ್ ಲಾರಿಯೊಂದು (Cement Mixer Lorry) ಡಿವೈಡರ್‌ಗೆ ಡಿಕ್ಕಿಯಾಗಿ ಕಾರಿನ ಮೇಲೆ ಬಿದ್ದಿದೆ. ಲಾರಿ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದ ಪರಪ್ಪ, ನಾಗಪ್ಪ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕ್ರೇನ್ ಮತ್ತು ಅಗ್ನಿಶಾಮಕದಳದ ಸಿಬ್ಬಂದಿ 45 ನಿಮಿಷ ಕಾರ್ಯಾಚರಣೆ ನಡೆಸಿ ಇಬ್ಬರನ್ನು ರಕ್ಷಿಸಿದ್ದಾರೆ. ಈಗ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಇಬ್ಬರನ್ನು ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಬೆಳಗಾವಿ: ಜಿಲ್ಲೆಯ ಕಿಣೆ (Kine) ಗ್ರಾಮ ಪಂಚಾಯತಿಗೆ ನುಗ್ಗಿ ಪಿಡಿಓಗೆ ಮರಾಠಿಯಲ್ಲಿ ಮಾತನಾಡುವಂತೆ ಧಮ್ಕಿ ಹಾಕಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಿಣೆ ಗ್ರಾಮದ ತಿಪ್ಪಣ್ಣ ಡೋಕ್ರೆ ಬಂಧಿತ ಆರೋಪಿ. ಬುಧವಾರ ಬೆಳಗಾವಿಯ ಕಿಣೆ ಗ್ರಾಮ ಪಂಚಾಯತಿ ಪಿಡಿಓ ನಾಗೇಂದ್ರ ಪತ್ತಾರ್ ಅವರಿಗೆ ಮರಾಠಿ ಭಾಷೆಯಲ್ಲಿ ಮಾತನಾಡುವಂತೆ ತಿಪ್ಪಣ್ಣ ಆವಾಜ್ ಹಾಕಿದ್ದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿತ್ತು. ಇದನ್ನೂ ಓದಿ: ಪ್ರತ್ಯೇಕ ಕರಾವಳಿಯ ಕೂಗು ಎಬ್ಬಿಸಿದ ಪೂಂಜಾ
ವಿಡಿಯೋ ವೈರಲ್ ಆಗುತ್ತಿದ್ದಂತೆ ಕನ್ನಡಪರ ಸಂಘಟನೆಯ ಕಾರ್ಯಕರ್ತರು ಆರೋಪಿ ತಿಪ್ಪಣ್ಣ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಆರೋಪಿಯನ್ನು ಬೆಳಗಾವಿ ಗ್ರಾಮೀಣ ಪೊಲೀಸರು ಬಂಧಿಸಿ, ಹಿಂಡಲಗಾ ಜೈಲಿಗೆ ಅಟ್ಟಿದ್ದಾರೆ. ಇದನ್ನೂ ಓದಿ: ಪ್ರವಾಸಿಗರೇ ಗಮನಿಸಿ; ಕಾಫಿನಾಡ ಮುಳ್ಳಯ್ಯನಗಿರಿ-ದತ್ತಪೀಠ 3 ದಿನ ಬಂದ್!