Tag: belagavi

  • ಕುಂಭಮೇಳ ಕಾಲ್ತುಳಿತ | ಬೆಳಗಾವಿಯ ಮೃತರ ಕುಟುಂಬಸ್ಥರಿಗೆ ಯುಪಿ ಸರ್ಕಾರದಿಂದ 1 ಕೋಟಿ ಪರಿಹಾರ ಹಣ ಜಮೆ

    ಕುಂಭಮೇಳ ಕಾಲ್ತುಳಿತ | ಬೆಳಗಾವಿಯ ಮೃತರ ಕುಟುಂಬಸ್ಥರಿಗೆ ಯುಪಿ ಸರ್ಕಾರದಿಂದ 1 ಕೋಟಿ ಪರಿಹಾರ ಹಣ ಜಮೆ

    – ಮೃತ ನಾಲ್ವರ ಕುಟುಂಬಕ್ಕೆ ತಲಾ 25 ಲಕ್ಷದಂತೆ ಪರಿಹಾರ

    ಬೆಳಗಾವಿ: ಪ್ರಯಾಗ್‌ರಾಜ್‌ನ ಮಹಾಕುಂಭಮೇಳದಲ್ಲಿ ಸಂಭವಿಸಿದ್ದ ಕಾಲ್ತುಳಿತ (MahaKumbhamela Stampede) ಪ್ರಕರಣದಲ್ಲಿ ಮೃತಪಟ್ಟಿದ್ದ ಬೆಳಗಾವಿ (Belagavi) ಮೂಲದ ನಾಲ್ವರ ಕುಟುಂಬಸ್ಥರಿಗೆ ತಲಾ 25 ಲಕ್ಷ ರೂ.ನಂತೆ 1 ಕೋಟಿ ರೂ. ಪರಿಹಾರವನ್ನು ಉತ್ತರ ಪ್ರದೇಶ (Uttara Pradesh) ಸರ್ಕಾರ ನೀಡಿದೆ.

    ಜ.13 ರಿಂದ ಮಾ.26 ವರೆಗೆ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭಮೇಳದಲ್ಲಿ ಜ.29 ರಂದು ಮೌನಿ ಅಮವಾಸ್ಯೆ ಪ್ರಯುಕ್ತ ಪುಣ್ಯಸ್ನಾನದ ವೇಳೆ ಕಾಲ್ತುಳಿತ ಸಂಭವಿಸಿತ್ತು. ಈ ಕಾಲ್ತುಳಿತ ದುರಂತದಲ್ಲಿ ಬೆಳಗಾವಿ ಮೂಲದ ನಾಲ್ವರಾದ ಜ್ಯೋತಿ ಹತ್ತರವಾಠ, ಮೇಘಾ ಹತ್ತರವಾಠ, ಅರುಣ ಕೋಪರ್ಡೆ, ಮಹಾದೇವಿ ಬಾವನೂರ ಮೃತಪಟ್ಟಿದ್ದರು. ಇದನ್ನೂ ಓದಿ: ಉಡುಪಿ| ನಟೋರಿಯಸ್ ರೌಡಿ ಇಸಾಕ್ ಕಾಲಿಗೆ ಗುಂಡೇಟು

    ಯುಪಿ ಸಿಎಂ ಯೋಗಿ ಆದಿತ್ಯನಾಥ್ ಜ.29 ರಂದು ಮೃತರ ಕುಟುಂಬಸ್ಥರಿಗೆ ತಲಾ 25 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದರು. ಪರಿಹಾರ ಘೋಷಿಸಿದಂತೆ ಕಾಲ್ತುಳಿತ ಸಂಭವಿಸಿದ 40 ದಿನಗಳ ಬಳಿಕ ಇಂದು ಪರಿಹಾರ ಬಿಡುಗಡೆ ಮಾಡಿದೆ. ಉತ್ತರ ಪ್ರದೇಶ ಸರ್ಕಾರದಿಂದ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಅಕೌಂಟ್‌ಗೆ ಹಣ ಜಮೆಯಾಗಿದೆ.

    ಈ ಕುರಿತು ಸ್ವತಃ ಡಿಸಿ ಮಾಹಿತಿ ಹಂಚಿಕೊಂಡಿದ್ದು, ಕುಟುಂಬಸ್ಥರ ಬ್ಯಾಂಕ್ ಖಾತೆಗೆ ಆರ್.ಟಿ.ಜಿ.ಎಸ್ ಮೂಲಕ ಪರಿಹಾರ ಮೊತ್ತ ಜಮೆಯಾಗಿದೆ. ನಾಲ್ವರಿಗೆ ತಲಾ 25 ಲಕ್ಷ ರೂ.ಯಂತೆ 1 ಕೋಟಿ ರೂ. ಪರಿಹಾರ ವಿತರಣೆಯಾಗಿದ್ದು, ರಾಜ್ಯ ಸರ್ಕಾರದಿಂದಲೂ ಪರಿಹಾರ ನೀಡುವಂತೆ ಜಿಲ್ಲಾಡಳಿತದಿಂದ ವರದಿ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಧಾರ್ಮಿಕ ಸ್ಥಳಗಳಲ್ಲಿ ಅಳವಡಿಸಿರುವ ಧ್ವನಿವರ್ಧಕಗಳ ಶಬ್ದ ನಿಯಂತ್ರಣಕ್ಕೆ ಕ್ರಮ: ಯೋಗಿ ಆದಿತ್ಯನಾಥ್‌

     

  • ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಅನುದಾನ ಬಿಡುಗಡೆ – ಪ್ರಧಾನಿ ಮೋದಿ, ಕೇಂದ್ರ ಸಚಿವರಿಗೆ ಬೊಮ್ಮಾಯಿ ಕೃತಜ್ಞತೆ

    ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಅನುದಾನ ಬಿಡುಗಡೆ – ಪ್ರಧಾನಿ ಮೋದಿ, ಕೇಂದ್ರ ಸಚಿವರಿಗೆ ಬೊಮ್ಮಾಯಿ ಕೃತಜ್ಞತೆ

    ಬೆಳಗಾವಿ: ಜಿಲ್ಲೆಯ ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ಕೇಂದ್ರ ಸರ್ಕಾರ ಅನುಮೋದನೆ ಬಿಡುಗಡೆ ಮಾಡಿದ್ದು, ಪ್ರಧಾನಿ ಮೋದಿ, ಕೇಂದ್ರ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಧನ್ಯವಾದ ತಿಳಿಸಿದ್ದಾರೆ.ಇದನ್ನೂ ಓದಿ: ‘ದಿ ಡೆವಿಲ್’ ಶೂಟಿಂಗ್ ಮತ್ತೆ ಆರಂಭ- ದರ್ಶನ್ ಭದ್ರತೆಗಾಗಿ ಭಾರೀ ಮೊತ್ತ ಕಟ್ಟಿದ ಚಿತ್ರತಂಡ

    ಉತ್ತರ ಕರ್ನಾಟಕ ಭಾಗದ ಪ್ರಸಿದ್ಧ ಯಾತ್ರಾ ಸ್ಥಳ ಸವದತ್ತಿ ಯಲ್ಲಮ್ಮನ ಗುಡ್ಡದ ಅಭಿವೃದ್ಧಿಗೆ ಕೇಂದ್ರ ಸರ್ಕಾರ 100 ಕೋಟಿ ರೂ. ಅನುದಾನವನ್ನು ಮಂಜೂರು ಮಾಡಿದೆ.

    ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಕೇಂದ್ರದ ಪ್ರಸಾದ ಯೋಜನೆ ಅಡಿಯಲ್ಲಿ ಸವದತ್ತಿ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವುದರಿಂದ ಈ ದೇವಸ್ಥಾನಕ್ಕೆ ಬರುವ ಸಾವಿರಾರು ಭಕ್ತರಿಗೆ ಆಧುನಿಕ ಸೌಲಭ್ಯಗಳು ದೊರೆಯುವಂತಾಗಲಿದೆ. ಭಕ್ತರಲ್ಲಿ ದೇವಸ್ಥಾನದ ಬಗ್ಗೆ ಸಕಾರಾತ್ಮಕ ಭಾವನೆ ಮೂಡುವ ವಿಶ್ವಾಸ ಇದೆ ಎಂದಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರಸಿAಗ್ ಶೇಖಾವತ್ ಅವರಿಗೆ ಕೃತಜ್ಞತೆ ತಿಳಿಸಿದ್ದಾರೆ.ಇದನ್ನೂ ಓದಿ: ಬೆಳಗಾವಿ| ಬಾಲಕಿಯನ್ನು ಪುಸಲಾಯಿಸಿ ಗರ್ಭಿಣಿ ಮಾಡಿದ 2 ಮಕ್ಕಳ ತಂದೆ ಅರೆಸ್ಟ್

     

  • ಬೆಳಗಾವಿ| ಬಾಲಕಿಯನ್ನು ಪುಸಲಾಯಿಸಿ ಗರ್ಭಿಣಿ ಮಾಡಿದ 2 ಮಕ್ಕಳ ತಂದೆ ಅರೆಸ್ಟ್

    ಬೆಳಗಾವಿ| ಬಾಲಕಿಯನ್ನು ಪುಸಲಾಯಿಸಿ ಗರ್ಭಿಣಿ ಮಾಡಿದ 2 ಮಕ್ಕಳ ತಂದೆ ಅರೆಸ್ಟ್

    ಬೆಳಗಾವಿ: ಇಡೀ ಮಾನವ ಕುಲವೇ ತಲೆ ತಗ್ಗಿಸುವ ಪೈಶಾಚಿಕ ಕೃತ್ಯಕ್ಕೆ ಬೆಳಗಾವಿ (Belagavi) ಜಿಲ್ಲೆ ಸಾಕ್ಷಿಯಾಗಿದೆ. ಎರಡು ಮಕ್ಕಳಿರುವ ತಂದೆಯಿಂದಲೇ ಅಪ್ರಾಪ್ತೆ ಗರ್ಭಿಣಿಯಾದ ಘಟನೆ ಬೆಳಗಾವಿಯ ಕುಲಗೋಡ (Kulagod) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಬಸಪ್ಪ ಅಡಿವೆಪ್ಪ ಹಳ್ಳೂರ ಎಂಬಾತನನ್ನು ಬಾಲಕಿಯ ಪೋಷಕರು ನೀಡಿದ ದೂರಿನ ಅಧಾರದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ಪುಸಲಾಯಿಸಿ ಆಕೆಯೊಂದಿಗೆ ನಿಂತರ ದೈಹಿಕ ಸಂಪರ್ಕವನ್ನು ಬಸಪ್ಪ ಬೆಳೆಸಿದ್ದ ಎನ್ನಲಾಗಿದೆ. ನಿರಂತರ ದೈಹಿಕ ಸಂಪರ್ಕದ ಹಿನ್ನೆಲೆ ಬಾಲಕಿ 8 ತಿಂಗಳ ಗರ್ಭಿಣಿಯಾಗಿದ್ದಾಳೆ. ಇದನ್ನೂ ಓದಿ: ಡಿಜಿಪಿ ಅಪ್ಪನಿಗೆ ಮಗಳು ತಂದ ಸಂಕಷ್ಟ – ಸರ್ಕಾರದಿಂದ ಎರಡೆರಡು ತನಿಖೆಗೆ ಆದೇಶ

    ವೈದ್ಯರ ಬಳಿ ಬಾಲಕಿಯನ್ನು ಕರೆದುಕೊಂಡು ಹೋಗಿ ಪರೀಕ್ಷೆ ಮಾಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಆರೋಪಿಯನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ತನಿಖೆ ಮುಂದುವರೆದಿದೆ. ಇದನ್ನೂ ಓದಿ: ಹೈದರಾಬಾದ್‌ನಲ್ಲಿ ದಂಪತಿ ಆತ್ಮಹತ್ಯೆ – ಇಬ್ಬರು ಮಕ್ಕಳು ಶವವಾಗಿ ಪತ್ತೆ

  • ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಪುಂಡರ ಅಟ್ಟಹಾಸ – ಮರಾಠಿಯಲ್ಲಿ ಪಹಣಿ ಕೊಡದಿದ್ದಕ್ಕೆ ಕನ್ನಡಿಗ ಕಾರ್ಯದರ್ಶಿ ಮೇಲೆ ಹಲ್ಲೆ

    ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಪುಂಡರ ಅಟ್ಟಹಾಸ – ಮರಾಠಿಯಲ್ಲಿ ಪಹಣಿ ಕೊಡದಿದ್ದಕ್ಕೆ ಕನ್ನಡಿಗ ಕಾರ್ಯದರ್ಶಿ ಮೇಲೆ ಹಲ್ಲೆ

    – ರಾಡ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಪುಂಡರು

    ಬೆಳಗಾವಿ: ನಗರದಲ್ಲಿ ಎಂಇಎಸ್ ಪುಂಡರ ಹಾವಳಿ ಮತ್ತೆ ಮುಂದುವರಿದಿದೆ. ಮರಾಠಿಯಲ್ಲಿ ಪಹಣಿ ಕೊಡಲಿಲ್ಲ ಎಂದು ಕನ್ನಡಿಗ ಕಾರ್ಯದರ್ಶಿ ಮೇಲೆ ರಾಡ್‌ನಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಡೆದಿದೆ.

    ಕನ್ನಡದ ಬಸ್ ಕಂಡಕ್ಟರ್ ಮೇಲಿನ ಹಲ್ಲೆ ಪ್ರಕರಣ ಕರ್ನಾಟಕ ಮತ್ತು ಮಹಾರಾಷ್ಟ್ರ ಎರಡೂ ರಾಜ್ಯಗಳಲ್ಲಿ ಸಂಚಲನ ಮೂಡಿಸಿತ್ತು. ಈ ಘಟನೆ ಮಾಸುವ ಮುನ್ನವೇ ಕುಂದಾನಗರಿಯಲ್ಲಿ ಮತ್ತೊಂದು ಘಟನೆ ನಡೆದಿದೆ.

    ಮರಾಠಿಯಲ್ಲಿ ಪಹಣಿ ಕೊಡಲಿಲ್ಲ ಹಾಗೂ ಅವರ ಕಾನೂನು ಬಾಹಿರ ಕೃತ್ಯಕ್ಕೆ ಸಹಕಾರ ನೀಡಲಿಲ್ಲ ಎಂದು ಕನ್ನಡಿಗ ಕಾರ್ಯದರ್ಶಿ ಮೇಲೆ ಎಂಇಎಸ್ ಪುಂಡರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅಂಬೆವಾಡಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ನಾಗಪ್ಪಾ ಕೊಡಲಿ ಹಲ್ಲೆಗೊಳಗಾದವರು.

    ಮಹಾರಾಷ್ಟ್ರ ಎಕೀಕರಣ ಸಮಿತಿಯ ಸಕ್ರಿಯ ಜಿಲ್ಲಾ ಸಂಚಾಲಕ ಚೇತನ ಪಾಟೀಲ ಹಾಗೂ ವಿಕ್ರಂ ಯಳ್ಳೂರಕರ್ ಬೆಂಬಲಿಗರು ಕೃತ್ಯ ಎಸಗಿದ್ದಾರೆ. ತಲೆಗೆ ಹಾಗೂ ಕಾಲುಗಳಿಗೆ ರಾಡ್‌ನಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ನಾಗಪ್ಪಾರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಚ್ಚು-ಲಾಂಗು ಮಾರಕಾಸ್ತ್ರಗಳಿಂದ ಗೋಜಗಾ ಗ್ರಾಮದ ಬಳಿ ನಡು ರಸ್ತೆಯಲ್ಲಿಯೇ ಮನಸೋ ಇಚ್ಛೆ ಥಳಿಸಿದ್ದಾರೆ.

    ಚೇತನ ಪಾಟೀಲ ಅಂಬೆವಾಡಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ. ಹಾಲಿ ಅಧ್ಯಕ್ಷರ ಮಗ ವಿಕ್ರಂ ಯಳ್ಳೂರಕರ್ ಧಮ್ಕಿ ಹಾಕುತ್ತಿರುವ ಆಡಿಯೋ ‘ಪಬ್ಲಿಕ್ ಟಿವಿ’ಗೆ ಲಭ್ಯವಾಗಿದೆ.

    ನಾವು ಹೇಳಿದ ಹಾಗೆ ಕೆಲಸ ಮಾಡು. ಇಲ್ಲವಾದರೆ ಪರಿಣಾಮ ನೆಟ್ಟಗಿರಲ್ಲ. ನಾವೆಲ್ಲಾ ಸೇರಿ ನೀವು ಐವತ್ತು ಸಾವಿರ ಲಂಚ ಪಡೆಯುತ್ತಿದ್ದೀರಿ ಎಂದು ಹೇಳಿ ಏನ್ ಬೇಕಾದರೂ ಮಾಡಬಹುದು ಎಂದು ಧಮ್ಕಿ ಹಾಕಿದ್ದಾರೆ. ನಾಡದ್ರೋಹಿ ಎಂಇಎಸ್ ಗೂಂಡಾಗಳನ್ನು ತಕ್ಷಣವೇ ಬಂಧಿಸಬೇಕು ಹಾಗೂ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕೆಂದು ಕನ್ನಡಪರ ಸಂಘಟನೆಗಳಿAದ ಎಚ್ಚರಿಕೆ ರವಾನೆಯಾಗಿದೆ.

  • ಬೆಳಗಾವಿಯಲ್ಲಿ ಬಿರುಬಿಸಿಲಿನ ಆರ್ಭಟ – ಬಿಸಿಲ ಬೇಗೆಗೆ ಜನ ಹೈರಾಣು

    ಬೆಳಗಾವಿಯಲ್ಲಿ ಬಿರುಬಿಸಿಲಿನ ಆರ್ಭಟ – ಬಿಸಿಲ ಬೇಗೆಗೆ ಜನ ಹೈರಾಣು

    ಚಿಕ್ಕೋಡಿ: ಉತ್ತರ ಕರ್ನಾಟಕದಲ್ಲಿ ಬಿರುಬಿಸಿಲಿನ ಆರ್ಭಟ ಶುರುವಾಗಿದ್ದು ಚಿಕ್ಕೋಡಿ (Chikkodi) ಭಾಗದ ಜನರು ಬಿಸಿಲಿನ ಝಳಕ್ಕೆ ಹೈರಾಣಾಗಿದ್ದಾರೆ. ಕಳೆದ ಬಾರಿಗಿಂತಲೂ ಹೆಚ್ಚಿನ ತಾಪಮಾನ ಏರಿಕೆಯಾಗಿದ್ದು, ಜನರು ಬಿಸಿಲಿನ ಬೇಗೆಗೆ ಬೇಸತ್ತು ಹೋಗಿದ್ದಾರೆ.

    ಬಿಸಿಲು ಜಿಲ್ಲೆಗಳಿಗಿಂತ ತಂಪಾಗಿರುತ್ತಿದ್ದ ಬೆಳಗಾವಿ (Belagavi) ಜಿಲ್ಲೆಯಲ್ಲಿ ಮಾರ್ಚ್ ಆರಂಭದಲ್ಲೇ ಜನರು ಬಿಸಿಲಿಗೆ ಹೈರಾಣಾಗಿದ್ದಾರೆ. ಸಾಮಾನ್ಯವಾಗಿ ಮಾರ್ಚ್ ಆರಂಭದಲ್ಲಿ ಕಾಣಿಸಿಕೊಳ್ಳುತ್ತಿದ್ದ 32 ಡಿಗ್ರಿ ಸೆಲ್ಸಿಯಸ್ ತಾಪಮಾನ, ಈ ಬಾರಿ 36 ರಿಂದ 38 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ದಾಖಲಾಗಿದೆ. ಇದನ್ನೂ ಓದಿ: ಒಟ್ಟಿಗೆ ಕಾಣಿಸಿಕೊಂಡು ಇಂಟರ್‌ನೆಟ್‌ಗೆ ಬೆಂಕಿ ಹಚ್ಚಿದ ಮಾಜಿ ಲವ್ ಬರ್ಡ್ಸ್

     

    2020ರಿಂದ ಇಲ್ಲಿಯವರೆಗೆ ಇದ್ದ ತಾಪಮಾನವನ್ನು ಈ ಬಾರಿ ಮಾರ್ಚ್ ಆರಂಭದಲ್ಲೇ ಹಿಂದಿಕ್ಕಿದೆ. ಮಾರ್ಚ್ ತಿಂಗಳ ಹಿಂದಿನ ವರ್ಷಗಳ ಗರಿಷ್ಠ ತಾಪಮಾನ ಹೋಲಿಕೆ ನೋಡುವುದಾದರೆ, 2020 ಮಾರ್ಚ್‌ನಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿತ್ತು. 2021ರಲ್ಲಿ 30.7, 2022ರಲ್ಲಿ 32.5, 2023ರಲ್ಲಿ 33.8, 2024ನಲ್ಲಿ 34.5, 2025 ಮಾರ್ಚ್‌ನಲ್ಲಿ 37.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಇದನ್ನೂ ಓದಿ: `ಕೈ’ ಸಮಾವೇಶದಲ್ಲಿ ಮೃತಪಟ್ಟ ಕಾರ್ಯಕರ್ತನಿಗೆ 5 ಲಕ್ಷ ಪರಿಹಾರ ವಿತರಣೆ

    ಚಿಕ್ಕೋಡಿಯಲ್ಲಿ ಅವಧಿಗೆ ಮುನ್ನವೇ ಬಿಸಿಲಿನ ಝಳಕ್ಕೆ ಜನರು ತುತ್ತಾಗುತ್ತಿದ್ದಾರೆ. ಜನರು ಮಕ್ಕಳೊಂದಿಗೆ ಮನೆಯಿಂದ ಹೊರ ಬರಲು ಯೋಚನೆ ಮಾಡುತ್ತಿದ್ದಾರೆ. ನಗರದಲ್ಲಿ ಬಿಸಿಲಿನ ದಾಹ ತಣಿಸಿಕೊಳ್ಳಲು ಕಲ್ಲಂಗಡಿ, ತಂಪು ಪಾನೀಯ ಅಂಗಡಿಗಳ ಮುಂದೆ ಜನ ಸೇರುತ್ತಿದ್ದಾರೆ. ಇದನ್ನೂ ಓದಿ: ಧನಕರ್‌ಜೀ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ – ಉಪರಾಷ್ಟ್ರಪತಿ ಆರೋಗ್ಯ ವಿಚಾರಿಸಿದ ಮೋದಿ

    ಬಿಸಿಲ ಬೇಗೆಯು ಮೇ ತಿಂಗಳವರೆಗೆ ಭಯಾನಕವಾಗಿರಲಿದ್ದು, ಕಚೇರಿಗಳ ಸಮಯ ಬದಲಾವಣೆ ಮಾಡುವಂತೆ ಜನರು ವಿನಂತಿಸಿದ್ದಲ್ಲದೇ, ಪ್ರಾಣಿ ಪಕ್ಷಿಗಳ ಕುರಿತು ಕನಿಕರ ತೋರಿಸುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಲಿಂಗಾಯತರ ಸಮಾವೇಶ ಅಪ್ಪ ಮಕ್ಕಳ ಹಳೆಯ ಆಟ – ವಿಜಯೇಂದ್ರ ವಿರುದ್ಧ ಬಿ.ಪಿ ಹರೀಶ್ ವಾಗ್ದಾಳಿ

  • ಮದುವೆ ಸಂಭ್ರಮದಲ್ಲಿದ್ದ ಮಗನನ್ನು ಕಲ್ಲಿನಿಂದ ಹೊಡೆದು ಕೊಂದ ತಂದೆ!

    ಮದುವೆ ಸಂಭ್ರಮದಲ್ಲಿದ್ದ ಮಗನನ್ನು ಕಲ್ಲಿನಿಂದ ಹೊಡೆದು ಕೊಂದ ತಂದೆ!

    ಬೆಳಗಾವಿ: ಮದುವೆ (Marriage) ಖುಷಿಯಲ್ಲಿದ್ದ ಯುವಕನನ್ನು ಕ್ಷುಲ್ಲಕ ಕಾರಣಕ್ಕೆ ಆತನ ತಂದೆ ಹಾಗೂ ಸಹೋದರ ಸೇರಿ ಹತ್ಯೆಗೈದ ಘಟನೆ ಕಿತ್ತೂರು (Kitturu) ತಾಲೂಕಿನ ಚಿಕ್ಕ ನಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಮೃತನನ್ನು ಮಂಜುನಾಥ್ ಉಳ್ಳಾಗಡ್ಡಿ (25) ಎಂದು ಗುರುತಿಸಲಾಗಿದೆ. ಕೊಲೆಗೈದ ಆರೋಪಿಗಳನ್ನು, ನಾಗಪ್ಪ ಹಾಗೂ ಗುರುಬಸಪ್ಪ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ಮಂಜುನಾಥ್ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಇದರಿಂದ ಬೇಸತ್ತ ತಂದೆ ಹಾಗೂ ಸಹೋದರ ಆತನನ್ನು ಕಲ್ಲು, ಇಟ್ಟಿಗೆಯಿಂದ ಹೊಡೆದು ಹತ್ಯೆಗೈದಿದ್ದಾರೆ. ಇದನ್ನೂ ಓದಿ: 11 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ತಂದೆ ಅರೆಸ್ಟ್‌

    ಮಾ.12ರಂದು ಮಂಜುನಾಥ್ ಮದುವೆ ನಿಗದಿಯಾಗಿತ್ತು. ಆತನ ಮದುವೆಗಾಗಿ ಸೇನೆಯಲ್ಲಿದ್ದ ಗುರುಬಸಪ್ಪ ರಜೆಯ ಮೇಲೆ ಊರಿಗೆ ಬಂದಿದ್ದ ಎಂದು ತಿಳಿದು ಬಂದಿದೆ.

    ಕಿತ್ತೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶವವನ್ನು ಬಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ. ಇದನ್ನೂ ಓದಿ: 3 ವಾರಗಳ ಹಿಂದೆ ಅಪ್ರಾಪ್ತ ಬಾಲಕಿ ನಾಪತ್ತೆ – 42 ವರ್ಷದ ವ್ಯಕ್ತಿಯ ಜೊತೆ ಶವವಾಗಿ ಪತ್ತೆ

  • ಕೆಎಸ್‌ಆರ್‌ಟಿಸಿ ಬಸ್‌ ಒಳಗೆ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಕೆಎಸ್‌ಆರ್‌ಟಿಸಿ ಬಸ್‌ ಒಳಗೆ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆ

    – ಬೆನ್ನುನೋವಿದ್ದರೂ ಪಂಚರ್‌ ಕೆಲಸಕ್ಕೆ ಹಾಕಿದ್ದ ಅಧಿಕಾರಿಗಳು; ಡ್ಯೂಟಿ ಬದಲಿಸಲಿಲ್ಲ ಅಂತ ಬೇಸರ

    ಬೆಳಗಾವಿ: ಡ್ಯೂಟಿ ಬದಲಿಸಲಿಲ್ಲ ಅಂತ ಕೆಎಸ್‌ಆರ್‌ಟಿಸಿ ಮೆಕ್ಯಾನಿಕ್ ಬಸ್‌ನಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ‌ಬೆಳಗಾವಿಯ ಡಿಪೋ 1 ರಲ್ಲಿ ಅಳ್ನಾವರ್ ಬೆಳಗಾವಿ ಬಸ್‌ನಲ್ಲಿ ಮೆಕ್ಯಾನಿಕ್ ಆತ್ಮಹತ್ಯೆಗೆ ಶರಣಾಗಿದ್ದಾನೆ.‌

    ಮೃತ ನೌಕರನನ್ನು ಕೇಶವ ಕಮಡೊಳಿ (57) ಎಂದು ಗುರುತಿಸಲಾಗಿದೆ. ಬೆಳಗಾವಿಯ ಹಳೆ ಗಾಂಧಿ ನಗರದ ನಿವಾಸಿ ಕೇಶವ್, ಬಸ್ ವಾಶಿಂಗ್‌ನಲ್ಲಿ ಬಸ್‌ಗಳ ಪಂಚರ್‌ ತೆಗೆಯುವ ಕೆಲಸ‌ ಮಾಡುತ್ತಿದ್ದರು. ಬೆನ್ನು ನೋವಿದ್ದರೂ ಸಹ ಪಂಚರ್ ತೆಗೆಯುವ ಕೆಲಸವನ್ನು ಅಧಿಕಾರಿಗಳು ಹಚ್ಚಿದ್ದರು ಎನ್ನಲಾಗಿದೆ.

    ಡಿಪೋ ಮ್ಯಾನೇಜರ್ ಲಿಂಗರಾಜ್ ಲಾಠಿ, ಸಹಾಯಕ ಕಾರ್ಯ ಅಧೀಕ್ಷಕ ಅನಿಲ್ ಬಾಂದೇಕರ್‌ಗೆ ಕುಟುಂಬಸ್ಥರು ಮನವಿ ಮಾಡಿದ್ದರು ಎನ್ನಲಾಗಿದೆ. ಕೆಲಸದ ಒತ್ತಡ ತಡೆದಕೊಳ್ಳಲಾಗದೇ ಕೇಶವ ಆತ್ಮಹತ್ಯೆ ಮಾಡಿದಕೊಂಡಿದ್ದಾರೆ ಎನ್ನಲಾಗಿದ್ದು, ಅಧಿಕಾರಿಗಳ ವಿರುದ್ಧ ಮೃತ ಕೇಶವ್ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.

    ಸ್ಥಳಕ್ಕೆ ಮಾರ್ಕೆಟ್ ಪೊಲೀಸ್ ಠಾಣೆಯ ಪೊಲೀಸರು ಭೇಟಿ ‌ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಬೆಳಗಾವಿ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಗೆ ದಿನ ನಿಗದಿ – ಮಾ.15ಕ್ಕೆ ಎಲೆಕ್ಷನ್

    ಬೆಳಗಾವಿ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಗೆ ದಿನ ನಿಗದಿ – ಮಾ.15ಕ್ಕೆ ಎಲೆಕ್ಷನ್

    ಬೆಳಗಾವಿ: ತೀವ್ರ ಕುತೂಹಲ ಮೂಡಿಸಿದ್ದ ಬೆಳಗಾವಿ (Belagavi) ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಮಾ. 15ರಂದು ಚುನಾವಣೆ ನಡೆಯಲಿದೆ ಎಂದು ಬೆಳಗಾವಿ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.

    ಮಾ. 15ರಂದು ಬೆಳಗ್ಗೆ 9 ಗಂಟೆಯಿಂದ 11 ಗಂಟೆಯ ವೇಳೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದ್ದು, ಮಧ್ಯಾಹ್ನ 1 ಗಂಟೆಗೆ ಚುನಾವಣೆ ಪ್ರಕ್ರಿಯೆ ನಡೆಯಲಿದೆ. ಮೇಯರ್ ಸ್ಥಾನಕ್ಕೆ ಸಾಮಾನ್ಯ ಪುರುಷ ಹಾಗೂ ಉಪಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳೆಗೆ ಮೀಸಲಾತಿ ಇರುತ್ತದೆ. ಇದನ್ನೂ ಓದಿ: ಕೆಇಎ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೊಸ ರೂಲ್ಸ್ – ಇನ್ಮುಂದೆ ಒಂದು ಪ್ರಶ್ನೆಗೆ 5 ಆಯ್ಕೆ

    ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರ ಮಧ್ಯೆ ರಾಜಕೀಯ ಕುಸ್ತಿಗೆ ಮೇಯರ್, ಉಪಮೇಯರ್ ಚುನಾವಣೆ ಸಾಕ್ಷಿಯಗಲಿದೆ ಎನ್ನುವ ಲೆಕ್ಕಾಚಾರಗಳು ಬೆಳಗಾವಿಯಲ್ಲಿ ಕೇಳಿಬರುತ್ತಿದೆ. ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಬಿಜೆಪಿ ಶಾಸಕ ಅಭಯ್ ಪಾಟೀಲ್ ಪ್ರತಿಷ್ಠೆಯ ಕಣವಾಗಿ ಈ ಚುನಾವಣೆ ಮಾರ್ಪಟ್ಟಿದೆ.

    ಇಬ್ಬರು ಸದಸ್ಯರ ಸದಸ್ಯತ್ವ ರದ್ದಾದರೂ ಸಹ ಬಿಜೆಪಿಗೆ ಸ್ಪಷ್ಟ ಬಹುಮತವಿದೆ. ಆದರೆ ವಿಜಯಪುರ ಮಾದರಿಯಲ್ಲಿ ಕಾಂಗ್ರೆಸ್ ಸಂಖ್ಯಾಬಲ ಹೆಚ್ಚಿಸಿಕೊಂಡರೆ ಅಚ್ಚರಿ ಫಲಿತಾಂಶ ಖಚಿತ ಎನ್ನುತ್ತಿದ್ದಾರೆ. ಇಬ್ಬರು ಸದಸ್ಯರ ಸದಸ್ಯತ್ವ ರದ್ದಾಗಿರುವುದರಿಂದ ಪಾಲಿಕೆಯ ಒಟ್ಟು ಸಂಖ್ಯಾ ಬಲ 56ಕ್ಕೆ ಕುಸಿದಿದೆ. ಇದನ್ನೂ ಓದಿ: ಕೊನೆಗೂ ಎಚ್ಚೆತ್ತ ಜಿಲ್ಲಾಡಳಿತ – ವಿಸಿ ನಾಲೆಗೆ ತಡೆಗೋಡೆ ನಿರ್ಮಾಣ

    ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಶಾಸಕರು, ಸಂಸದರು, ಪರಿಷತ್ ಸದಸ್ಯರು ಮತದಾನ ಮಾಡುವ ಹಕ್ಕು ಹೊಂದಿರುತ್ತಾರೆ. ನಾಗರಾಜ್ ಯಾದವ್ ಜಿಲ್ಲೆಯ ಕೆಡಿಪಿ ಸಭೆಯಲ್ಲಿ ನಿರಂತರವಾಗಿ ಪಾಲ್ಗೊಳುತ್ತಿದ್ದಾರೆ. ಕಂಡಕ್ಟರ್ ಮೇಲೆ ನಡೆದ ಹಲ್ಲೆ ಪ್ರಕರಣ ಸಂದರ್ಭ ಉಮಾಶ್ರೀ ಸಹ ಬೆಳಗಾವಿಯಲ್ಲಿ ಕಾಣಿಸಿಕೊಂಡಿದ್ದರು. ಇನ್ನು ಪಕ್ಷೇತರ ಎಂಎಲ್‌ಸಿ ಲಖನ್ ಜಾರಕಿಹೊಳಿ ಬೆಳಗಾವಿಯನ್ನು ಪ್ರತಿನಿಧಿಸುತ್ತಾರೆ.

    ಮೇಯರ್ ಚುನಾವಣೆಯ ಮತದಾರರ ಪಟ್ಟಿ ಮೇಲೆ ಕಾಂಗ್ರೆಸ್ ಭವಿಷ್ಯ ನಿಂತಿದೆ. ಸಂಖ್ಯಾಬಲ ಹೆಚ್ಚಿಸಿಕೊಂಡರೆ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡಬಹುದೆಂಬ ಲೆಕ್ಕಚಾರಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿದೆ. ಇದನ್ನೂ ಓದಿ: ಪಾಕ್‌ನ ಬಲೂಚಿಸ್ತಾನದಲ್ಲಿ IED ಸ್ಫೋಟ – 5 ಮಂದಿ ಸಾವು

  • ಕೌಟುಂಬಿಕ ಕಲಹಕ್ಕೆ ಮನನೊಂದು 3 ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿದ ತಾಯಿ

    ಕೌಟುಂಬಿಕ ಕಲಹಕ್ಕೆ ಮನನೊಂದು 3 ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿದ ತಾಯಿ

    – ತಾಯಿ, ಇಬ್ಬರು ಮಕ್ಕಳು ಸಾವು, 1 ಮಗು ಅಪಾಯದಿಂದ ಪಾರು

    ಚಿಕ್ಕೋಡಿ: ಕೌಟುಂಬಿಕ ಕಲಹಕ್ಕೆ ಮನನೊಂದು ಮಹಿಳೆಯೊಬ್ಬರು 3 ಮಕ್ಕಳೊಂದಿಗೆ ಕೃಷ್ಣಾ ನದಿಗೆ (Krishna River) ಹಾರಿದ್ದಾರೆ. ಇಬ್ಬರು ಮಕ್ಕಳು ಮತ್ತು ತಾಯಿ ಸಾವನ್ನಪ್ಪಿದ್ದು, 1 ಮಗು ಪಾರಾಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ನಡೆದಿದೆ.

    ತಾಯಿ ಶಾರದಾ ಡಾಲೆ(32) ಮಕ್ಕಳಾದ ಅಮೃತಾ(14), ಆದರ್ಶ(8) ಮೃತರು. ಅನುಕ್ಷಾ ಡಾಲೆ ಬದುಕುಳಿದಿದ್ದು, ರಾಯಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ನನ್ನನ್ನು ‘ಲೇಡಿ ಸೂಪರ್‌ಸ್ಟಾರ್’ ಎಂದು ಕರೆಯಬೇಡಿ- ಫ್ಯಾನ್ಸ್‌ಗೆ ನಯನತಾರಾ ಮನವಿ

    ಪತಿ ಅಶೋಕ ಡಾಲೆ(45) ಪ್ರತಿ ನಿತ್ಯ ಕುಡಿದು ಬಂದು ಪತ್ನಿ ಹಾಗೂ ಮಕ್ಕಳಿಗೆ ಕಿರುಕುಳ ನೀಡುತ್ತಿದ್ದ. ಇದರಿಂದ ಮನನೊಂದ ಶಾರದಾ ಮೂವರು ಮಕ್ಕಳೊಂದಿಗೆ ನದಿಗೆ ಹಾರಿದ್ದಾರೆ. 1 ಮಗುವನ್ನು ಕೂಡಲೇ ರಕ್ಷಣೆ ಮಾಡಿದ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸ್ ತಿಳಿಸಿದ್ದಾರೆ. ಇದನ್ನೂ ಓದಿ: ಸಾಲದ ಶ್ಯೂರಿಟಿಗೆ ಸಹಿ ಹಾಕುವಂತೆ ಬೆದರಿಕೆ – ಮನನೊಂದ ಮಹಿಳೆ ಆತ್ಮಹತ್ಯೆ

    ಅಶೋಕ ಡಾಲೆಯನ್ನು ಕುಡಚಿ ಪೊಲೀಸರ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮದುವೆಗೆ ನಿರಾಕರಿಸಿದ್ದಕ್ಕೆ ಪ್ರೇಯಸಿ ಕತ್ತು ಸೀಳಿ ಕೊಂದು ಪ್ರಿಯಕರ ಆತ್ಮಹತ್ಯೆ

    ಮದುವೆಗೆ ನಿರಾಕರಿಸಿದ್ದಕ್ಕೆ ಪ್ರೇಯಸಿ ಕತ್ತು ಸೀಳಿ ಕೊಂದು ಪ್ರಿಯಕರ ಆತ್ಮಹತ್ಯೆ

    ಬೆಳಗಾವಿ: ಮದುವೆಗೆ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಪ್ರೇಯಸಿಯ ಕತ್ತು ಸೀಳಿ ಕೊಲೆ ಮಾಡಿ, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಶಹಾಪುರದ (Shahpura) ನವಿ ಗಲ್ಲಿಯಲ್ಲಿ ನಡೆದಿದೆ.

    ಯಳ್ಳೂರು ಗ್ರಾಮದ ಪ್ರಶಾಂತ ಯಲ್ಲಪ್ಪ ಕುಂಡೇಕರ (29) ಪ್ರೇಯಸಿ ಕೊಂಡು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ಮಠದ ಜಾಗ ತೆರವು – 14 ಮಂದಿ ಮಸೀದಿ ಸದಸ್ಯರ ವಿರುದ್ಧ ಕೇಸ್‌ ದಾಖಲು

    ಪೇಂಟಿಂಗ್ ಕೆಲಸ ಮಾಡ್ತಿದ್ದ ಪ್ರಶಾಂತ್ ಒಂದೂವರೆ ವರ್ಷದಿಂದ ಹುಡುಗಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಪ್ರಶಾಂತ್ ಯುವತಿಯನ್ನು ಮದುವೆಯಾಗುವಂತೆ ಒತ್ತಾಯಿಸಿದ್ದ. ಈ ವೇಳೆ ಯುವತಿಯ ತಾಯಿ, ಚೆನ್ನಾಗಿ ಕೆಲಸ ಮಾಡಿ, ಸಂಬಳ ಜಾಸ್ತಿ ತೆಗೆದುಕೋ ಎಂದು ಬುದ್ಧಿವಾದ ಹೇಳಿದ್ದರು. ಇದನ್ನೂ ಓದಿ: ಪ್ರೀತಿಸಿದ ಹುಡುಗಿ ಜೊತೆ ವಿವಾಹ – ಮದುವೆಯಾದ 3 ದಿನಕ್ಕೆ ಹೃದಯಾಘಾತದಿಂದ ನವವಿವಾಹಿತ ಸಾವು

    ಪ್ರಶಾಂತ್ ತನ್ನ ಪ್ರೇಯಸಿಯನ್ನು ಆಕೆಯ ಚಿಕ್ಕಮ್ಮನ ಮನೆಗೆ ಕರೆಸಿಕೊಂಡಿದ್ದ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಕೆಗೆ ವಿಷ ಕುಡಿಸಲು ಯತ್ನಿಸಿದ್ದ. ಬಳಿಕ ಚಾಕುವಿನಿಂದ ಆಕೆಯ ಕತ್ತು ಸೀಳಿ, ಅದೇ ಚಾಕುವಿನಿಂದ ಆತನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಕುಡಿಯುವ ನೀರು ಅನ್ಯ ಕೆಲಸಗಳಿಗೆ ಬಳಕೆ; 417 ಜನರಿಗೆ 20.85 ಲಕ್ಷ ರೂ. ದಂಡ

    ಸ್ಥಳಕ್ಕೆ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್, ಡಿಸಿಪಿ ರೋಹನ್ ಜಗದೀಶ್ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಸಿಪಿಐ ಎಸ್.ಎಸ್.ಸಿಮಾನಿ, ಎಸಿಪಿ ಸಂತೋಷ ಸತ್ಯನಾಯಕರಿಂದ ಮಾಹಿತಿ ಪಡೆದರು. ಇದನ್ನೂ ಓದಿ: ನೆಲಮಂಗಲ ಪೊಲೀಸರಿಂದ ತಪ್ಪಿಸಿಕೊಂಡು ಮಣಿಪಾಲ್‌ ಪೊಲೀಸರಿಗೆ ಸಿಕ್ಕಿಬಿದ್ದ ಕ್ರಿಮಿನಲ್‌!

    ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಬಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು, ಬಳಿಕ ಮನೆಯವರಿಗೆ ಪೊಲೀಸರು ಹಸ್ತಾಂತರಿಸಿದ್ದಾರೆ. ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ವಿಮಾನಕ್ಕಿಂತ ಎರಡು ಪಟ್ಟು ವೇಗ – ಏನಿದು ಹೈಪರ್‌ಲೂಪ್?