Tag: belagavi

  • ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್‌ ಕೇಸ್ – ಸತೀಶ್ ಜಾರಕಿಹೊಳಿ ಆಪ್ತೆ ಅರೆಸ್ಟ್

    ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್‌ ಕೇಸ್ – ಸತೀಶ್ ಜಾರಕಿಹೊಳಿ ಆಪ್ತೆ ಅರೆಸ್ಟ್

    – 5 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಆರೋಪಿಗಳು

    ಬೆಳಗಾವಿ: 5 ಕೋಟಿ ರೂ. ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಆಪ್ತೆಯನ್ನು ಘಟಪ್ರಭಾ ಪೊಲೀಸರು (Ghataprabha Police) ಬಂಧಿಸಿದ್ದಾರೆ.

    ಮಂಜುಳಾ ರಾಮಗನಟ್ಟಿ ಬಂಧಿತ ಆರೋಪಿ. ಇದನ್ನೂ ಓದಿ: ಕಾಂಗ್ರೆಸ್‌ ಕಾರ್ಯಕರ್ತೆ ಹಿಮಾನಿ ಶವ ಸೂಟ್‌ಕೇಸ್‌ನಲ್ಲಿ ಪತ್ತೆ – ಓರ್ವ ಶಂಕಿತ ಅರೆಸ್ಟ್‌

    ಫೆ.14ರಂದು ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಉದ್ಯಮಿ ಬಸವರಾಜ ಅಂಬಿ ಅವರನ್ನು ಆರೋಪಿಗಳು ಕಿಡ್ನ್ಯಾಪ್‌ ಮಾಡಿದ್ದರು. ಕಿಡ್ನ್ಯಾಪ್‌ ಮಾಡಿ 5 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಕಿಡ್ನ್ಯಾಪ್‌ ಪ್ರಕರಣ ದಾಖಲಾದ 24 ಗಂಟೆಯಲ್ಲಿ ಪೊಲೀಸರು ಬಸವರಾಜನನ್ನು ರಕ್ಷಣೆ ಮಾಡಿದ್ದರು. ಇದನ್ನೂ ಓದಿ: ಕೋಲಾರ | ಇನ್ನೋವಾ ಕಾರಿಗೆ ಬೈಕ್‌ ಡಿಕ್ಕಿ – ನಾಲ್ವರು ಸ್ಥಳದಲ್ಲೇ ಸಾವು

    ಪ್ರಕರಣ ಸಂಬಂಧ ಪೊಲೀಸರು 6 ಜನರನ್ನು ಬಂಧಿಸಿದ್ದರು. ತನಿಖೆ ವೇಳೆ ಕಿಡ್ನ್ಯಾಪ್‌ನ ಮಾಸ್ಟರ್ ಪ್ಲ್ಯಾನ್‌ ಮಾಡಿರುವುದು ಕಿಂಗ್‌ಪಿನ್ ಮಂಜುಳಾ ಎಂಬ ವಿಚಾರ ತಿಳಿದಿದೆ. ಮಂಜುಳಾ ಮಗ ಈಶ್ವರ ರಾಮಗನಟ್ಟಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ವಿಚಾರ ಬಹಿರಂಗವಾಗಿದೆ. ಇದನ್ನೂ ಓದಿ: ಇಂದಿನಿಂದ ಕಲಾಪ – ಸಾಲು ಸಾಲು ಪ್ರತಿಭಟನೆಗೆ ಪ್ಲ್ಯಾನ್‌, ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ

    ಮಗ ಮತ್ತು ಸ್ನೇಹಿತರು, ಮಂಜುಳಾ ನೀಡಿದ ಪ್ಲ್ಯಾನ್‌ ಮೇಲೆ ಕಿಡ್ನ್ಯಾಪ್‌ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿರುವುದು ಬೆಳಕಿಗೆ ಬಂದಿದೆ. ತನಿಖೆ ಸಂದರ್ಭದಲ್ಲಿ ಸಿಕ್ಕ ತಾಂತ್ರಿಕ ಸಾಕ್ಷಿ ಸೇರಿ ಆರೋಪಿಗಳ ಹೇಳಿಕೆ ಆಧರಿಸಿ ಮಂಜುಳಾನನ್ನ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ 7 ಜನ ಆರೋಪಿಗಳನ್ನ ಘಟಪ್ರಭಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಹಕ್ಕಿ ಜ್ವರದ ಆತಂಕ – ಮಟನ್‌, ಫಿಶ್‌ ಮೊರೆಹೋದ ಚಿಕನ್‌ ಪ್ರಿಯರು

  • ಪರೀಕ್ಷೆಯಲ್ಲಿ ನಕಲು| ಪೋಷಕರ ಸಮ್ಮುಖದಲ್ಲಿ ಸಿಸಿಟಿವಿ ಪರೀಕ್ಷಿಸಿದ್ದಕ್ಕೆ ಮನನೊಂದು ಕೆರೆಗೆ ಹಾರಿದ ವಿದ್ಯಾರ್ಥಿನಿ

    ಪರೀಕ್ಷೆಯಲ್ಲಿ ನಕಲು| ಪೋಷಕರ ಸಮ್ಮುಖದಲ್ಲಿ ಸಿಸಿಟಿವಿ ಪರೀಕ್ಷಿಸಿದ್ದಕ್ಕೆ ಮನನೊಂದು ಕೆರೆಗೆ ಹಾರಿದ ವಿದ್ಯಾರ್ಥಿನಿ

    ಬಾಗಲಕೋಟೆ: ವಿಜ್ಞಾನ ಪರೀಕ್ಷೆಯಲ್ಲಿ (Science Exam) ವಿದ್ಯಾರ್ಥಿನಿ ನಕಲು ಮಾಡಿ ಸಿಕ್ಕು ಬಿದ್ದು, ಪೋಷಕರ‌ ಸಮ್ಮುಖದಲ್ಲಿ ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ (Student) ಕೆರೆ ನೀರಿಗೆ ಬಿದ್ದು ಜೀವ ಬಿಟ್ಟಿರುವ ಘಟನೆ ಮುಧೋಳ (Mudhol) ನಗರದಲ್ಲಿ ನಡೆದಿದೆ.

    ಶಾರದಾ ಪಿಯು ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪ್ರಥಮ ವರ್ಷ ಓದುತ್ತಿದ್ದ ತೇಜಸ್ವಿನಿ ದೊಡಮನಿ ನೀರಿಗೆ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದನ್ನೂ ಓದಿ: ಜಾತ್ರೆಯಲ್ಲಿ ಕೇಂದ್ರ ಸಚಿವರ ಮಗಳಿಗೆ ಕಿರುಕುಳ – ಓರ್ವ ಆರೋಪಿ ಬಂಧನ

     

    ಫೆ.27 ರಂದು ಕಾಲೇಜಿನಲ್ಲಿ ಪರೀಕ್ಷೆ ನಡೆದಿತ್ತು. ಈ ವೇಳೆ ನಕಲು (Copy) ಮಾಡುವ ತೇಜಸ್ವಿನಿ ಸಿಕ್ಕಿ ಬಿದ್ದಿದ್ದಳು. ಕೂಡಲೇ ಸಿಬ್ಬಂದಿ ತೇಜಸ್ವಿನಿಯನ್ನು ಪ್ರಶ್ನೆ ಮಾಡಿ ಬುದ್ಧಿವಾದ ಹೇಳಿದ್ದರು.

    ಬುದ್ಧಿವಾದ ಹೇಳಿದ ವಿಚಾರವನ್ನು ತೇಜಸ್ವಿನಿ ಮನೆಗೆ ಬಂದು ತಿಳಿಸಿದ್ದಾಳೆ. ವಿಚಾರ ತಿಳಿದ ಪೋಷಕರು ಮರುದಿನ ಶಾಲೆಗೆ ಬಂದು ಮಗಳನ್ನು ಪ್ರಶ್ನಿಸಿದ್ದು ಯಾಕೆ ಎಂದು ಕೇಳಿದ್ದಾರೆ. ಇದಕ್ಕೆ ಸಿಬ್ಬಂದಿ ಪರೀಕ್ಷೆಯಲ್ಲಿ ಆಕೆ ನಕಲು ಮಾಡುತ್ತಿದ್ದಳು ಎಂಬ ವಿಚಾರವನ್ನು ತಿಳಿಸುತ್ತಾರೆ.

     

    ಸಿಬ್ಬಂದಿ ಹೇಳಿದರೂ ತೇಜಸ್ವಿನಿ ನಾನು ನಕಲು ಮಾಡಿಲ್ಲ ಎಂದು ವಾದಿಸಿದ್ದಾಳೆ. ಈ ಸಂದರ್ಭದಲ್ಲಿ ಕಾಲೇಜು ಸಿಬ್ಬಂದಿ ಸಿಸಿ ಕ್ಯಾಮೆರಾ ಪರೀಕ್ಷಿಸಲು ಮುಂದಾದಾಗ ಕಾಲೇಜಿನಿಂದಲೇ ತೇಜಸ್ವಿನಿ ಓಡಿ ಹೋಗಿದ್ದಳು. ಈ ಬಗ್ಗೆ ತೇಜಸ್ವಿನಿ ಪೋಷಕರು ಮುಧೋಳ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

    ಇಂದು ತೇಜಸ್ವಿನಿ ನಗರದ ಮಹಾರಾಣಿ ಕರೆಯಲ್ಲಿ ಶವವಾಗಿ‌ ಪತ್ತೆಯಾಗಿದ್ದಾಳೆ. ತನಿಖೆ ನಡೆಸಿದ ಪೊಲೀಸರು ಕಾಲೇಜಿನಿಂದ ಹೊರಹೋದ ರಸ್ತೆಯಲ್ಲಿರುವ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದಾರೆ. ತೇಜಸ್ವಿನಿ ವೇಗವಾಗಿ ಕೆರೆ ಕಡೆ ಹೆಜ್ಜೆ ಹಾಕುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈಗ ತೇಜಸ್ವಿನಿಯನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

     

  • ಅರ್ಚಕನ ಬೈಕ್ ಸುಟ್ಟು ವಿಕೃತಿ ಮೆರೆದ ಅಪ್ರಾಪ್ತರು

    ಅರ್ಚಕನ ಬೈಕ್ ಸುಟ್ಟು ವಿಕೃತಿ ಮೆರೆದ ಅಪ್ರಾಪ್ತರು

    ಚಿಕ್ಕೋಡಿ: ಅಪ್ರಾಪ್ತ (Minor) ವಯಸ್ಸಿನ ಮಕ್ಕಳು ಅರ್ಚಕನ ಬೈಕ್ ಸುಟ್ಟು ವಿಕೃತಿ ಮೆರೆದಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ ತಾಲೂಕಿನ‌ ಕುಡಚಿ (Kudachi) ಪಟ್ಟಣದಲ್ಲಿ ನಡೆದಿದೆ.

    ದಾರಿ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್ ಗೆ ಮಕ್ಕಳ ಗುಂಪು ಬೆಂಕಿ ಹಚ್ಚಿದೆ. ಕುಡಚಿ ಪಟ್ಟಣದ ವಾರ್ಡ್ ನಂಬರ ಎರಡರ ಮರಾಠಾ ಗಲ್ಲಿಯಲ್ಲಿ ಶನಿವಾರ ರಾತ್ರಿ ಪಟ್ಟಣದ ಅರ್ಚಕ ಪ್ರವೀಣ್ ಕುಲಕರ್ಣಿ ಎಂಬುವವರಿಗೆ ಸೇರಿದ ಬೈಕಗೆ ಬೆಂಕಿ ಹಚ್ಚಲಾಗಿದೆ.

    ಮಕ್ಕಳ ವಿಕೃತಿ ಮೆರೆದಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಕುಡಚಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

  • ಬೆಳಗಾವಿ | ಸಿಮ್ ಕಾರ್ಡ್‌ಗಾಗಿ ವ್ಯಕ್ತಿಗೆ ಚಾಕು ಇರಿತ

    ಬೆಳಗಾವಿ | ಸಿಮ್ ಕಾರ್ಡ್‌ಗಾಗಿ ವ್ಯಕ್ತಿಗೆ ಚಾಕು ಇರಿತ

    ಬೆಳಗಾವಿ: ಮೊಬೈಲ್‌ನಲ್ಲಿರುವ ಸಿಮ್ ಕಾರ್ಡ್‌ಗಾಗಿ ವ್ಯಕ್ತಿಯೋರ್ವನಿಗೆ ಚಾಕು ಇರಿದ ಘಟನೆ ಬೆಳಗಾವಿ (Belagavi) ನಗರದ ಬೋಗಾರವೇಸ್‌ನಲ್ಲಿರುವ (Bogarves) ಹನುಮಂತ ದೇವಸ್ಥಾನದ ಬಳಿ ನಡೆದಿದೆ.

    ಸುರೇಶ ವಾರಂಗ್ ಹಲ್ಲೆಗೊಳಗಾದ ವ್ಯಕ್ತಿ. ಆರೋಪಿ ನಿಖಿಲ್ ಕುರಣೆ, ಸುರೇಶ್ ಬಳಿ ಕರೆ ಮಾಡಿ ಕೊಡುತ್ತೇನೆ ಎಂದು ಫೋನ್ ತೆಗೆದುಕೊಂಡಿದ್ದಾನೆ. ಈ ವೇಳೆ ಮೊಬೈಲ್ ಕವರ್‌ನಲ್ಲಿಟ್ಟಿದ್ದ 4,000 ರೂ.ನಲ್ಲಿ 1500 ರೂ. ಹಣವನ್ನು ನಿಖಿಲ್ ಎಗರಿಸಿದ್ದಾನೆ. ಅಲ್ಲದೆ ಮೊಬೈಲ್‌ನಲ್ಲಿದ್ದ ಸಿಮ್‌ಕಾರ್ಡ್ ಸಹ ತೆಗೆದುಕೊಂಡಿದ್ದಾನೆ. ಸಿಮ್‌ಕಾರ್ಡ್ ಮತ್ತು ಹಣ ವಾಪಸ್ ಕೇಳಲು ಹೋಗಿದ್ದಾಗ ನಿಖಿಲ್ ಮತ್ತು ಆತನ ಗ್ಯಾಂಗ್ ನನ್ನ ಮೇಲೆ ಹಲ್ಲೆ ಮಾಡಿದೆ ಎಂದು ಸುರೇಶ್ ವಾರಂಗ್ ಆರೋಪಿಸಿದ್ದಾರೆ. ಇದನ್ನೂ ಓದಿ: ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ – ಪ್ರಕರಣದ ವಿಚಾರಣೆಗೆ ನಿರಾಕರಿಸಿದ ಸುಪ್ರೀಂಕೋರ್ಟ್

    ಸುರೇಶ್ ತೊಡೆಯ ಭಾಗಕ್ಕೆ ತೀವ್ರವಾಗಿ ಹಲ್ಲೆಯಾಗಿದ್ದು, ಬೆಳಗಾವಿಯ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಪೋಕ್ಸೊ ಕೇಸ್‌ನಲ್ಲಿ ಬಿಎಸ್‌ವೈಗೆ ಶುರುವಾಯ್ತು ಸಂಕಷ್ಟ – ಕೋರ್ಟ್‌ನಿಂದ ಸಮನ್ಸ್ ಜಾರಿ

  • ಮಾ.22 ರಂದು ಕರ್ನಾಟಕ ಬಂದ್‌

    ಮಾ.22 ರಂದು ಕರ್ನಾಟಕ ಬಂದ್‌

    ಬೆಂಗಳೂರು: ಕನ್ನಡಿಗರ ಮೇಲೆ ಮರಾಠಿಗರ ದಬ್ಬಾಳಿಕೆ ಖಂಡಿಸಿ ಮತ್ತುಬೆಳಗಾವಿಯಲ್ಲಿ (Belagavi) ಎಂಇಎಸ್‌ ಪುಂಡರಿಗೆ ಕಡಿವಾಣ ಹಾಕುವಂತೆ  ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಮಾ.22 ಶನಿವಾರ ಕರ್ನಾಟಕ ಬಂದ್‌ಗೆ (Karnataka Bandh) ಕರೆ ನೀಡಿವೆ.

    ಇಂದು ಬೆಂಗಳೂರಿನಲ್ಲಿ ವಿವಿಧ ಕನ್ನಡ ಸಂಘಟನೆಗಳ ಸಭೆ ಸೇರಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಕನ್ನಡಕ್ಕಾಗಿ, ಕನ್ನಡಿಗರಿಗಾಗಿ ಮಾ.22 ರಂದು ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಕರ್ನಾಟಕ ಬಂದ್ ನಡೆಯಲಿದೆ ವಾಟಾಳ್ ನಾಗರಾಜ್ (Vatal Nagaraj) ಹೇಳಿದ್ದಾರೆ.

    ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವರು, ಮಾ.3 ರಂದು ಬೆಳಗ್ಗೆ 11 ಗಂಟೆಗೆ ರಾಜಭವನ ಮುತ್ತಿಗೆ ಹಾಕಲಿದ್ದೇವೆ. ಮಾ.7ಕ್ಕೆ ಬೆಳಗಾವಿ ಚಲೋ ಕೈಗೊಳ್ಳುತ್ತೇವೆ. ಮಾ.11 ರಂದು ಮೇಕೆದಾಟು ಯೋಜನೆಗೆ ಆಗ್ರಹಿಸಿ ಅತ್ತಿಬೆಲೆ ತಮಿಳುನಾಡು ಗಡಿ ಬಂದ್ ಮಾಡಿ ಪ್ರತಿಭಟಿಸುತ್ತೇವೆ. ಮಾ.14 ರಂದು ಮೈಸೂರು, ಮಂಡ್ಯ, ರಾಮನಗರ ಡಿಸಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ತಿಳಿಸಿದರು.

    ಜಿಲ್ಲಾಧಿಕಾರಿ ಸೇರಿದಂತೆ ಇಡೀ ಬೆಳಗಾವಿಯ ಎಲ್ಲಾ ಅಧಿಕಾರಿಗಳ ಬದಲಾವಣೆ ಆಗಬೇಕು. ಎಲ್ಲಾ ಕನ್ನಡ ಅಧಿಕಾರಿಗಳನ್ನ ಹಾಕಬೇಕು. ಎಂಇಎಸ್ ನಿಷೇಧ ಮಾಡಿ ಶಿವಸೇನೆ ಕಾರ್ಯಕರ್ತರನ್ನು ಗಡಿಪಾರು ಮಾಡಬೇಕು. ಸಾಂಬಾಜಿ ಪ್ರತಿಮೆ ತೆರವು ಮಾಡಬೇಕು. ಕೇಂದ್ರ ಸರ್ಕಾರ ರಾಜ್ಯಕ್ಕೆ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

  • ವಿಜಯಪುರ- ಬೆಳಗಾವಿ, ವಿಜಯಪುರ – ಹುಬ್ಬಳ್ಳಿ ಷಟ್ಪಥ ರಸ್ತೆಗೆ ಗಡ್ಕರಿ ಸಹಮತ – ಎಂಎಲ್‌ಸಿ ಸುನೀಲಗೌಡ

    ವಿಜಯಪುರ- ಬೆಳಗಾವಿ, ವಿಜಯಪುರ – ಹುಬ್ಬಳ್ಳಿ ಷಟ್ಪಥ ರಸ್ತೆಗೆ ಗಡ್ಕರಿ ಸಹಮತ – ಎಂಎಲ್‌ಸಿ ಸುನೀಲಗೌಡ

    ವಿಜಯಪುರ: ವಿಜಯಪುರ-ಹುಬ್ಬಳ್ಳಿ ಮತ್ತು ವಿಜಯಪುರ-ಬೆಳಗಾವಿ ಹೆದ್ದಾರಿಯನ್ನು ಷಟ್ಪಥ (ಆರು ಪಥ) ಅಂದರೆ 6 ಲೈನ್ ಮಾರ್ಗವಾಗಿ ಅಭಿವೃದ್ಧಿಪಡಿಸುವಂತೆ ಆಗ್ರಹಿಸಿ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ್ ಬರೆದಿದ್ದ ಪತ್ರಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

    ಜ.15, 2025 ರಂದು ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದ ಸುನೀಲಗೌಡ ಪಾಟೀಲ, ವಿಜಯಪುರ ಜಿಲ್ಲೆಯಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆದ್ದಾರಿ ಪ್ರಮುಖ ಪಾತ್ರ ವಹಿಸುತ್ತಿದ್ದು, ವಿಜಯಪುರದಿಂದ ಹುಬ್ಬಳ್ಳಿ ಮತ್ತು ವಿಜಯಪುರದಿಂದ ಬೆಳಗಾವಿಗೆ ಈಗ ಇರುವ ಹೆದ್ದಾರಿಯನ್ನು ಮೇಲ್ದರ್ಜೆಗೆ ಏರಿಸುವುದು ಅಗತ್ಯವಾಗಿದೆ. ಈಗ ಇರುವ ಹೆದ್ದಾರಿಯನ್ನು ಆರು ಪಥದ ರಸ್ತೆಯಾಗಿ ಅಭಿವೃದ್ಧಿ ಪಡಿಸಬೇಕು ಎಂದು ಒತ್ತಾಯಿಸಿದ್ದರು.ಇದನ್ನೂ ಓದಿ: ಡಿಕೆಶಿ ಮುಂದೆಯೇ ಸದ್ಗುರು ಕಾಂಗ್ರೆಸ್‌ ಪಕ್ಷವನ್ನು ಅವಮಾನಿಸಿದ್ರಾ?

    ಉತ್ತರ ಕರ್ನಾಟಕದ ಕೇಂದ್ರ ಭಾಗದಲ್ಲಿರುವ ಐತಿಹಾಸಿಕ ವಿಜಯಪುರ ಜಿಲ್ಲೆ ಸಾಂಸ್ಕೃತಿಕವಾಗಿ ಶ್ರೀಮಂತವಾಗಿದೆ. ಇಲ್ಲಿರುವ ಪ್ರಾಚೀನ ಸ್ಮಾರಕಗಳು, ಕೃಷಿ ಹಾಗೂ ತೋಟಗಾರಿಕೆ ಉತ್ಪನ್ನಗಳು ದೇಶವಷ್ಟೇ ಅಲ್ಲ, ವಿದೇಶಗಳಲ್ಲಿಯೂ ಹೆಸರುವಾಸಿಯಾಗಿವೆ. ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಈ ಜಿಲ್ಲೆಯಿಂದ ಹುಬ್ಬಳ್ಳಿ ಮತ್ತು ಬೆಳಗಾವಿ ಸಂಪರ್ಕಿಸುವ ಹೆದ್ದಾರಿಗಳು ಕಿರಿದಾಗಿದ್ದು, ವಾಹನಗಳ ಸಂಚಾರಕ್ಕೆ ಹೆಚ್ಚು ಸಮಯ ತಗಲುತ್ತಿದೆ. ಇದರಿಂದ ಆರ್ಥಿಕತೆಗೂ ಹಿನ್ನಡೆಯಾಗಿದೆ. ಈ ಹೆದ್ದಾರಿಗಳನ್ನು ಆರು ಪಥಕ್ಕೆ ಅಗಲೀಕರಣ ಮಾಡುವುದರಿಂದ ಸರಕು ಸಾಗಾಣಿಕೆಗೆ ಅನುಕೂಲವಾಗಲಿದ್ದು, ಸುರಕ್ಷತೆಯ ಜೊತೆಗೆ ಸಂಚಾರಕ್ಕೆ ಸಮಯವೂ ತಗ್ಗಲಿದೆ. ಜೊತೆಗೆ ಆರ್ಥಿಕ ನಗರಗಳಾದ ಹುಬ್ಬಳ್ಳಿ ಮತ್ತು ಬೆಳಗಾವಿಗಳ ಜೊತೆ ವಾಣಿಜ್ಯ ವ್ಯವಹಾರವೂ ವೃದ್ಧಿಸಿ ಪ್ರವಾಸೋದ್ಯಮದ ಅವಕಾಶವನ್ನೂ ಹೆಚ್ಚಿಸಲಿದೆ. ಉದ್ಯೋಗ ಸೃಷ್ಠಿ, ಯುವಕರಲ್ಲಿ ಕೌಶಲ್ಯಾಭಿವೃದ್ಧಿ ಹೆಚ್ಚಳ, ಹೊಸ ಕೈಗಾರಿಕೆಗಳ ಸ್ಥಾಪನೆ, ಆರೋಗ್ಯ, ಶಿಕ್ಷಣ ಮತ್ತಿತರ ಕ್ಷೇತ್ರಗಳಿಗೂ ಇದರಿಂದ ಲಾಭವಾಗಲಿದೆ. ಹೀಗಾಗಿ ಈ ಬೇಡಿಕೆಗೆ ಸ್ಪಂದಿಸಿ ತಮ್ಮ ಅವಧಿಯಲ್ಲಿ ವಿಜಯಪುರ ಜಿಲ್ಲೆಯಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹಾಗೂ ಈ ಭಾಗದಲ್ಲಿ ಅನುಕೂಲ ಮಾಡಿಕೊಡುವಂತೆ ಶಾಸಕರು ಪತ್ರದಲ್ಲಿ ಕೇಂದ್ರ ಸಚಿವರಿಗೆ ಮನವಿ ಮಾಡಿದ್ದರು.

    ಈ ಪತ್ರಕ್ಕೆ ಸ್ಪಂದಿಸಿರುವ ಸಚಿವ ನಿತಿನ್ ಗಡ್ಕರಿ ಬೇಡಿಕೆ ಕುರಿತು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಅವರ ಉತ್ತರಕ್ಕೆ ಕೃತಜ್ಞತೆ ಸಲ್ಲಿಸಿರುವ ಶಾಸಕ ಸುನೀಲಗೌಡ ಪಾಟೀಲ, ಸಚಿವರು ವಿಜಯಪುರ-ಹುಬ್ಬಳ್ಳಿ ಮತ್ತು ವಿಜಯಪುರ- ಬೆಳಗಾವಿ ಹೆದ್ದಾರಿಗಳನ್ನು ಆದಷ್ಟು ಬೇಗ ಷಟ್ಪಥ ರಸ್ತೆಗಳನ್ನಾಗಿ ಮೇಲ್ದರ್ಜೆಗೇರಿಸುವ ವಿಶ್ವಾಸವಿದೆ ಎಂದು ಹೇಳಿದರು.ಇದನ್ನೂ ಓದಿ: ಪ್ರಾಣಿ ರಕ್ಷಣೆಯಲ್ಲಿನ ಉತ್ಕೃಷ್ಟ ಸೇವೆಗೆ ಅನಂತ್ ಅಂಬಾನಿಯ `ವಂತಾರ’ಗೆ ರಾಷ್ಟ್ರೀಯ ಪ್ರಾಣಿ ಮಿತ್ರ ಪ್ರಶಸ್ತಿ

  • ಬೆಳಗಾವಿಯಲ್ಲಿ ಮರಾಠರು ಪುಂಡಾಟಿಕೆ ಮಾಡಿದರೆ ಸರಿಯಿರಲ್ಲ – ಶಿವರಾಜ್ ತಂಗಡಗಿ ಕಿಡಿ

    ಬೆಳಗಾವಿಯಲ್ಲಿ ಮರಾಠರು ಪುಂಡಾಟಿಕೆ ಮಾಡಿದರೆ ಸರಿಯಿರಲ್ಲ – ಶಿವರಾಜ್ ತಂಗಡಗಿ ಕಿಡಿ

    ಬೆಂಗಳೂರು: ಮರಾಠರು ಪುಂಡಾಟಿಕೆ ಮಾಡಿದರೆ ಸರಿಯಿರಲ್ಲ, ಮರಾಠ ಸಮುದಾಯದವರ ಈ ವರ್ತನೆ ಹೀಗೆ ಮುಂದುವರಿದರೆ ಬುದ್ಧಿ ಕಲಿಸಬೇಕಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಹೇಳಿದರು.ಇದನ್ನೂ ಓದಿ: ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಅನುಮತಿ, ಅನುದಾನ ನೀಡಿ: ಕೇಂದ್ರಕ್ಕೆ ಡಿಕೆಶಿ ಮನವಿ

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮರಾಠ ಪುಂಡರ ಹಾವಳಿಗೆ ಈಗಾಗಲೇ ಎಚ್ಚರಿಕೆ ಕೊಡುವ ಕೆಲಸ ಆಗಿದೆ. ಇದೆಲ್ಲ ಸರಿಯಿರಲ್ಲ ಎಂದು ಹೇಳಿದ್ದೇವೆ. ಮುಂದುವರೆದರೆ ನಾವೂ ಸರಿಯಾದ ಉತ್ತರ ಕೊಡಬೇಕಾಗುತ್ತದೆ. ಈಗಾಗಲೇ ಸಿಎಂ ಗೃಹ ಸಚಿವರಿಗೂ ಹೇಳಿದ್ದೇವೆ. ಕನ್ನಡದ ವಿಚಾರಕ್ಕೆ ಬಂದರೆ ಅವರಿಗೆ ಶಿಸ್ತು ಕಲಿಸಬೇಕಾಗುತ್ತದೆ ಎಂದರು.

    ಇಲ್ಲಿಯ ಗಾಳಿ, ನೀರು, ಅನ್ನ ತಿಂದು ಬೇರೆ ಭಾಷೆ ಬಗ್ಗೆ ವ್ಯಾಮೋಹ ಇದ್ದರೆ ಸರಿಯಿರಲ್ಲ. ಅಂತವರ ವಿರುದ್ಧ ಗೂಂಡಾ ಕೇಸ್ ಹಾಕ್ತೀವಿ. ನಾವು ಕೂಡ ಬೇರೆ ಭಾಷೆ ಪ್ರೀತಿಸುತ್ತೇವೆ. ಆದರೆ ಗೂಂಡಾ ವರ್ತನೆ ಮಾಡುವುದಿಲ್ಲ. ಈ ರೀತಿ ಮಾಡಿದರೆ ಸರಿಯಾದ ಉತ್ತರ ಕೊಡಬೇಕಾಗುತ್ತದೆ. ನಾಡು ನುಡಿ ವಿಷಯ ಬಂದಾಗ ಯಾಕೆ ಮಾತಾಡಬಾರದು? ನಾವು ಅವರ ಜಾಗದಲ್ಲಿಯೇ ಬಂದು ಉತ್ತರ ಕೊಡ್ತೀವಿ. ನಮ್ಮ ಕಂಡಕ್ಟರ್ ಯಾಕೆ ಮರಾಠಿ ಮಾತಾಡಬೇಕು? ಅವರು ಕನ್ನಡದವರು ಕನ್ನಡ ಮಾತನಾಡುತ್ತಾರೆ. ಅವರ ಮೇಲೆ ಯಾಕೆ ಪೋಕ್ಸೋ ಕಾಯ್ದೆ ಹಾಕಬೇಕು ಎಂದು ಕಿಡಿಕಾರಿದರು.ಇದನ್ನೂ ಓದಿ: ಕೋರ್ಟ್ ಹಾಲ್‌ನಲ್ಲಿ ಪವಿತ್ರಾ, ದರ್ಶನ್ ದೂರ ದೂರಾ – ಕಣ್ಣೀರಿಡುತ್ತ ತೆರಳಿದ ಗೆಳತಿ!

     

  • ಬೆಳಗಾವಿ ಕಂಡಕ್ಟರ್ ಮೇಲೆ ಹಲ್ಲೆ : ಸಾರಿಗೆ ಸಚಿವರಿಂದ ಮಾಹಿತಿ ಪಡೆದ ಸಿಎಂ

    ಬೆಳಗಾವಿ ಕಂಡಕ್ಟರ್ ಮೇಲೆ ಹಲ್ಲೆ : ಸಾರಿಗೆ ಸಚಿವರಿಂದ ಮಾಹಿತಿ ಪಡೆದ ಸಿಎಂ

    ಬೆಂಗಳೂರು: ಬೆಳಗಾವಿಯಲ್ಲಿ (Belagavi) ಕಂಡಕ್ಟರ್ ಮೇಲಿನ ಹಲ್ಲೆ ಪ್ರಕರಣದ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy), ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಮಾಹಿತಿ ನೀಡಿದ್ದಾರೆ.

    ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಸಚಿವ ರಾಮಲಿಂಗಾ ರೆಡ್ಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿಯನ್ನು ಒಪ್ಪಿಸಿದರು.

    ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರನ್ನು ಪೊಲೀಸ್ ಮಹಾನಿರ್ದೇಶಕ ಆಲೋಕ್ ಮೋಹನ್ ಭೇಟಿಯಾಗಿ, ಬೆಳಗಾವಿ ಗಲಾಟೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು.

    ಘಟನೆ ಬಗ್ಗೆ ಮಾಹಿತಿ ಪಡೆದ ಸಿಎಂ, ಗಡಿಭಾಗದಲ್ಲಿ ಕಟ್ಟುನಿಟ್ಟಾಗಿ ಬಂದೋಬಸ್ತ್ ಮಾಡುವಂತೆ ಸೂಚಿಸಿದರು. ಇನ್ನು ಬಸ್‌ಗಳ ಓಡಾಟ ಹಾಗೂ ರಕ್ಷಣೆ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಕಾರ್ಯದರ್ಶಿ ಜೊತೆ ಮಾತನಾಡುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಹೇಳಿದರು. ಅಲ್ಲದೇ ಮಹಾರಾಷ್ಟ್ರ ಪೊಲೀಸ್ ಮಹಾನಿರ್ದೇಶಕರ ಜೊತೆ ಮಾತನಾಡುವಂತೆ ಡಿಜಿಪಿ ಆಲೋಕ್ ಮೋಹನ್ ಅವರಿಗೆ ಸೂಚನೆ ನೀಡಿದರು.

  • ಕನ್ನಡಿಗರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಗೂಂಡಾ ಕಾಯ್ದೆ ಹಾಕ್ಬೇಕು: ರಾಮಲಿಂಗಾ ರೆಡ್ಡಿ

    ಕನ್ನಡಿಗರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಗೂಂಡಾ ಕಾಯ್ದೆ ಹಾಕ್ಬೇಕು: ರಾಮಲಿಂಗಾ ರೆಡ್ಡಿ

    ಬೆಳಗಾವಿ: ಕರ್ನಾಟಕದ ಬಸ್ ಚಾಲಕರು, ನಿರ್ವಾಹಕರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಗೂಂಡಾ ಕಾಯ್ದೆ ಹಾಕ್ಬೇಕು ಎಂದು ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

    ಕನ್ನಡದಲ್ಲಿ ಮಾತನಾಡಿ ಎಂದ ವಿಚಾರಕ್ಕೆ ದುಷ್ಕರ್ಮಿಗಳು ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದರು. ಈ ಹಿನ್ನೆಲೆ ಇಂದು ಬೆಳಗಾವಿಗೆ ಭೇಟಿ ನೀಡಿದ್ದ ಸಚಿವರು ಹಲ್ಲೆಗೊಳಗಾದ ಕಂಡೆಕ್ಟರ್ ಆರೋಗ್ಯ ವಿಚಾರಿಸಿದರು. ಇದನ್ನೂ ಓದಿ: ರಾಮನಗರ | ಗೌಡಗೆರೆ ಚಾಮುಂಡೇಶ್ವರಿ ದೇವಾಲಯಕ್ಕೆ ದರ್ಶನ್ ತಾಯಿ ಭೇಟಿ

    ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಂಡಕ್ಟರ್ ಆರೋಗ್ಯ ಸ್ಥಿರವಾಗಿದೆ. ಎರಡು ದಿನಗಳಲ್ಲಿ ಮನೆಗೆ ಕಳುಹಿಸುತ್ತಾರೆ. ನಮ್ಮ ಎಂಡಿ ಅವರು ಪ್ರತಿದಿನ ಬಂದು ಯೋಗಕ್ಷೇಮ ವಿಚಾರಿಸುತ್ತಿದ್ದಾರೆ. ಗಲಾಟೆಯಾದ ಬಳಿಕ ಕೇಸ್ ಕೊಟ್ಟಿದ್ದಕ್ಕೆ ಗಾಬರಿಯಾಗಿದ್ದಾರೆ. ಏನೇ ಕೇಸ್ ಮಾಡಲಿ ತನಿಖೆ ಮಾಡುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಹಾವೇರಿ | ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು

    ಆ ಬಸ್‌ನಲ್ಲಿ ಅಂದು 90 ಜನ ಇದ್ದರು. ಕರ್ನಾಟಕದಲ್ಲಿ 1,72,000 ಟ್ರಿಪ್ ಇರುತ್ತದೆ. ಈ ರೀತಿ ದೂರು 65 ವರ್ಷದಲ್ಲಿ ಕೇಸ್ ದಾಖಲಾಗಿಲ್ಲ. ಉದ್ದೇಶಪೂರ್ವಕವಾಗಿ ಕೇಸ್ ಕೊಟ್ಟಿದ್ದಾರೆ. ನಾನು ಗೃಹಮಂತ್ರಿಗಳ ಜೊತೆಗೆ ಮಾತನಾಡುತ್ತೇನೆ. ಮಹದೇವಪ್ಪ ಪರವಾಗಿ ನಮ್ಮ ಇಲಾಖೆ ಇದೆ. ಸಾರ್ವಜನಿಕರೂ ಸಹ ಇದ್ದಾರೆ ಎಂದು ನುಡಿದರು. ಇದನ್ನೂ ಓದಿ: 8 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ – ಲಕ್ಷ್ಮಿ ಹೆಬ್ಬಾಳ್ಕರ್‌ ಭರವಸೆ

    ಚಿತ್ರದುರ್ಗದಲ್ಲಿ ನಮ್ಮವರು ಮಸಿ ಬಳಿದರು, ಅದರ ಮಾರನೇ ದಿನ ಮಹಾರಾಷ್ಟ್ರದವರು ಮಸಿ ಬಳಿದರು ಎರಡೂ ರಾಜ್ಯಕ್ಕೆ ಇದರಿಂದ ನಷ್ಟ ಆಗುತ್ತದೆ. ಸಾರ್ವಜನಿಕರಿಗೂ ತೊಂದರೆ ಹಾಗೂ ಇಲಾಖೆಗೂ ನಷ್ಟ ಆಗುತ್ತದೆ. ಶಿವಸೇನೆಯಂತಹ ಪಕ್ಷ ಇಂತಹ ಕೆಲಸಗಳಿಗೆ ಬೆಂಬಲ ನೀಡಬಾರದು. ಇದೊಂದು ಸಣ್ಣ ಕಾರಣಕ್ಕೆ ಆಗಿದೆ. ಶಿವಸೇನೆಯವರು ಇದನ್ನು ಗಂಭೀರವಾಗಿ ತೆಗೆದುಕೊಳ್ಳಬಾರದು. ಅಂತವರ ಮೇಲೆ ಕ್ರಮ ಕೈಗೊಳ್ಳಬೇಕು. ಬೆಳಗಾವಿಯಲ್ಲಿ ಎಂಇಎಸ್‌ನವರು ಗೂಂಡಾಗಿರಿ ಮಾಡವವರಿಗೆ ಬೆಂಬಲ ಕೊಟ್ಟರೆ ನಾವು ಕೇಸ್ ಹಾಕುತ್ತೇವೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ನಾನು, ಟ್ರಂಪ್, ಮೋದಿ ಒಂದಾದ್ರೆ ಪ್ರಜಾಸತ್ತೆಗೆ ಬೆದರಿಕೆ ಹೇಗಾಗುತ್ತೆ?: ಮೆಲೋನಿ ಪ್ರಶ್ನೆ

  • 8 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ – ಲಕ್ಷ್ಮಿ ಹೆಬ್ಬಾಳ್ಕರ್‌ ಭರವಸೆ

    8 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ – ಲಕ್ಷ್ಮಿ ಹೆಬ್ಬಾಳ್ಕರ್‌ ಭರವಸೆ

    – ಕನ್ನಡಿಗರಿಗೆ ಧಮ್ಕಿ ಹಾಕುವುದನ್ನು ನಿಲ್ಲಿಸಬೇಕು – ಶಿವಸೇನೆ ಪುಂಡರ ಕೃತ್ಯಕ್ಕೆ ಸಚಿವೆ ಖಂಡನೆ

    ಬೆಳಗಾವಿ: ಇನ್ನೂ 8 ದಿನಗಳಲ್ಲಿ ʻಗೃಹಲಕ್ಷ್ಮಿʼ ಯೋಜನೆ ಹಣ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ಹೇಳಿದ್ದಾರೆ.

    ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಅಪಪ್ರಚಾರ ಮಾಡಲಿ. ನಾವು ಈಗಾಗಲೇ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುವುದಾಗಿ ಹೇಳಿದ್ದೇವೆ. ತಾಲೂಕು ಪಂಚಾಯಿತಿ ಮುಖಾಂತರ ಬಿಡುಗಡೆ ಮಾಡಬೇಕು ಅಂತ ಹೇಳಿರೋದ್ರಿಂದ ಸ್ವಲ್ಪ ತಡವಾಗಿದೆ. ಯಾವುದೇ ಕಾರಣಕ್ಕೂ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ನಿಲ್ಲೋದಿಲ್ಲ. 8-10 ದಿನಗಳಲ್ಲಿ ಬರುತ್ತೆ ಅಂತ ಹೇಳಿದ್ದೆ. 2 ದಿನ ಕಳೆದಿದೆ. ಇನ್ನು 8 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಮತದಾನಕ್ಕೆ ಅಮೆರಿಕ ದೇಣಿಗೆ ನೀಡಿಲ್ಲ, 7 ಯೋಜನೆಗಳಿಗಷ್ಟೇ ಧನಸಹಾಯ – ಹಣಕಾಸು ಸಚಿವಾಲಯ

    ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಸೂಚಿಸಿದ್ದೇನೆ:
    ಇದೇ ವೇಳೆ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆಯ ಕುರಿತು ಸಚಿವೆ ಪ್ರತಿಕ್ರಿಯೆ ನೀಡಿದ ಸಚಿವರು, ‌ಘಟನೆಯನ್ನು ನಾನು ಖಂಡಿಸುತ್ತೆನೆ.‌ ಘಟನೆ ನಡೆದು ಐದೇ ನಿಮಿಷಕ್ಕೆ ಕಮೀಷನರ್ ಜೊತೆ ನಾನು ಮಾತನಾಡಿದ್ದೆ. ಯಾರು ತಪ್ಪಿತಸ್ಥರು ಅವರ ಮೇಲೆ ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಹೇಳಿದ್ದೇನೆ. ‌ನಾವೆಲ್ಲರೂ ಮೊದಲು ಭಾರತೀಯರು ಕನ್ನಡಿಗರು ಸ್ವರಾಜ್ಯದ ಬಗ್ಗೆ ಮಾತನಾಡಿದಾಗ ನಾಲ್ಕೈದು ಪುಂಡರು ಬಂದು ಭಾಷಾ ವಿವಾದ ಎಳೆದು ರಾಜಕೀಯ ಬೇಳೆ ಬೇಯಿಸಿಕೊಳ್ತಿದ್ದಾರೆ. ಇದನ್ನು ಖಂಡಿಸುತ್ತೆನೆ ಎಂದಿದ್ದಾರೆ. ಇದನ್ನೂ ಓದಿ: ಬಲ್ಡೋಟಾ ಫ್ಯಾಕ್ಟರಿ ಸ್ಥಾಪನೆ ವಿರೋಧಿಸಿ ಕೊಪ್ಪಳ ಬಂದ್ ಕರೆ – ಶಾಲೆಗಳಿಗೆ ರಜೆ

    https://youtu.be/9aRZwimkiN0?si=1pIJY_bEtIdzMSF8

    ಸರ್ಕಾರಿ ನೌಕರನ ಮೇಲೆ ಕೈ ಮಾಡಿದ್ದು ಅಕ್ಷಮ್ಯ ಅಪರಾಧ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ಹಾಗೆ ನಾವು ಮಾಡ್ತೀವಿ. ನಮ್ಮ ರಾಜ್ಯದ ಡ್ರೈವರ್ ಗಳಿಗೆ ಧಮ್ಕಿ ಹಾಕುವುದನ್ನು ನಿಲ್ಲಿಸಬೇಕು. ಸ್ಥಳೀಯ ಸಿಪಿಐ ನಿಭಾಯಿಸುವುದರಲ್ಲಿ ವಿಫಲರಾಗಿದ್ದಾರೆ ಎನ್ನುವುದನ್ನು‌ ಕೇಳಿದ್ದೆನೆ. ‌ಸ್ಥಳೀಯ ಸಿಪಿಐ ಗಮನಕ್ಕೂ ತರದೇ ಪೋಕ್ಸೋ ಕೇಸ್ ಮಾಡಿದ್ದಾರೆ. ಇದರ ಕುರಿತು ನಾನು ಗೃಹ ಸಚಿವರು ಹಾಗೂ ಡಿಜಿಯವರಿಗೂ ಮಾತನಾಡುತ್ತೆನೆ ಎಂದು ಹೆಬ್ಬಾಳಕರ್ ತಿಳಿಸಿದ್ದಾರೆ. ಇದನ್ನೂ ಓದಿ: ಬ್ಯಾಂಕಲ್ಲಿ 5 ಲಕ್ಷಕ್ಕಿಂತ ಹೆಚ್ಚು ಹಣ ಇಟ್ಟರೆ ಸೇಫ್ ಆಗಿರುತ್ತಾ, ಇಲ್ವಾ? – ಏನಿದು ಠೇವಣಿ ವಿಮೆ?