Tag: belagavi

  • ಕಾರು ಅಪಘಾತದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಬೆನ್ನುಮೂಳೆ ಮುರಿತ – ಸಚಿವೆ ಆರೋಗ್ಯದ ಬಗ್ಗೆ ವೈದ್ಯರು ಹೇಳೋದೇನು?

    ಕಾರು ಅಪಘಾತದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಬೆನ್ನುಮೂಳೆ ಮುರಿತ – ಸಚಿವೆ ಆರೋಗ್ಯದ ಬಗ್ಗೆ ವೈದ್ಯರು ಹೇಳೋದೇನು?

    – ಹೆಬ್ಬಾಳ್ಕರ್ ಸಹೋದರನ ತಲೆಗೆ ಪೆಟ್ಟು

    ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ (Lakshmi Hebbalkar) ಅವರು ಕಾರು ಅಪಘಾತದಲ್ಲಿ ಗಾಯಗಳಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸಚಿವೆ ಬೆನ್ನುಮೂಳೆಗೆ ಬಲವಾದ ಪೆಟ್ಟು ಬಿದ್ದಿದೆ ಎಂದು ವೈದ್ಯರು ತಿಳಿಸಿದ್ದಾರೆ.

    ಬೆಳಗ್ಗೆ ಸರಿಸುಮಾರು ಆರು ಗಂಟೆಗೆ ಬೆಳಗಾವಿಯ ವಿಜಯ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಚಿವೆ ಲಕ್ಷ್ಮಿ ಅವರಿಗೆ ಬೆನ್ನುಮೂಳೆಯ ಎಲ್1 ಎಲ್4 ಮೂಳೆಯಲ್ಲಿ ಬಲವಾದ ಪೆಟ್ಟಾಗಿದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸಚಿವೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಡಾ. ರವಿ ಪಾಟೀಲ ‘ಪಬ್ಲಿಕ್ ಟಿವಿ’ಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತ – ಪ್ರಾಣಾಪಾಯದಿಂದ ಪಾರಾದ ಸಚಿವೆ

    ಸಚಿವರ ಜೊತೆ ಅವರ ಸಹೋದರ, ಗನ್‌ಮ್ಯಾನ್, ಡ್ರೈವರ್ ಬಂದಿದ್ದಾರೆ. ಎಲ್ಲರಿಗೂ ನಾವು ಚಿಕಿತ್ಸೆ ಕೊಟ್ಟಿದ್ದೇವೆ. ಹೆಬ್ಬಾಳ್ಕರ್ ಅವರ ಆರೋಗ್ಯ ಚೇತರಿಕೆ ಆಗ್ತಿದೆ. ಪೇಯ್ನ್ಕಿಲ್ಲರ್ ಇಂಜೆಕ್ಷನ್, ಸಿಟಿ ಸ್ಕ್ಯಾನ್ ಮಾಡಿದ್ದೇವೆ. ಅವರಿಗೆ ಯಾವುದೇ ಶಸ್ತ್ರಚಿಕಿತ್ಸೆಯ ಅಗತ್ಯವಿಲ್ಲ. ಬಲವಾದ ಪೆಟ್ಟು ಬೆನ್ನಿನ ಮೂಳೆ ಮುರಿದಿದೆ. ಇನ್ನೆರಡು ದಿನಗಳ ಬಳಿಕ ಆಸ್ಪತ್ರೆಯಿಂದ ಬಿಡುಗಡೆ ಮಾಡ್ತೀವಿ ಎಂದು ತಿಳಿಸಿದ್ದಾರೆ.‌

    ಆಸ್ಪತ್ರೆಗೆ ಬಂದ ವೇಳೆ ಸ್ಥಿತಿ ಗಂಭೀರವಿತ್ತು. ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ. ಎಂಆರ್‌ಐ ಸ್ಕ್ಯಾನ್ ಮಾಡಿದ್ದೇವೆ. ಎಲ್1ಎಲ್4 ಮೂಳೆಗೆ ಪೆಟ್ಟಾಗಿದೆ. ಬೆನ್ನಿನ 2 ಮೂಳೆಗಳು ಮುರಿದಿವೆ. ಅವರು 1 ತಿಂಗಳು ಬೆಡ್ ರೆಸ್ಟ್ ಮಾಡಬೇಕು ಎಂದಿದ್ದಾರೆ.

  • ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತ – ಪ್ರಾಣಾಪಾಯದಿಂದ ಪಾರಾದ ಸಚಿವೆ

    ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತ – ಪ್ರಾಣಾಪಾಯದಿಂದ ಪಾರಾದ ಸಚಿವೆ

    ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ತೆರಳುತ್ತಿದ್ದ ಕಾರು ಅಪಘಾತವಾಗಿದ್ದು, ಸಚಿವೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಬೆಳಗಾವಿ (Belagavi) ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸಹೋದರ ಚನ್ನರಾಜ ಹಟ್ಟಿಹೊಳಿ ಅಪಾಯದಿಂದ ಬಚಾವ್ ಆಗಿದ್ದಾರೆ.

    ಇಂದು ಬೆಳಗಿನ ಜಾವ ಐದು ಗಂಟೆ ಸುಮಾರಿಗೆ ಅಪಘಾತವಾಗಿದೆ. ನಾಯಿ ಅಡ್ಡ ಬಂದಿದ್ದನ್ನ ತಪ್ಪಿಸಲು ಹೋಗಿ ರಸ್ತೆ ಪಕ್ಕದ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಕಾರಿನ ಮುಂಭಾಗ ನುಜ್ಜಗುಜ್ಜಾಗಿದೆ.

    ಸಚಿವೆ ಹೆಬ್ಬಾಳ್ಕರ್ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

  • ಮನೆ ಮೇಲೆ ದಾಳಿ – ಎರಡು ನರಿ ಮರಿಗಳ ರಕ್ಷಣೆ

    ಮನೆ ಮೇಲೆ ದಾಳಿ – ಎರಡು ನರಿ ಮರಿಗಳ ರಕ್ಷಣೆ

    ಚಿಕ್ಕೋಡಿ: ವ್ಯಕ್ತಿಯ ಮನೆ ಮೇಲೆ ಅರಣ್ಯಾಧಿಕಾರಿಗಳು (Forest Officer) ದಾಳಿ ನಡೆಸಿ ಎರಡು ನರಿ ಮರಿಗಳನ್ನು (Fox Cubs) ರಕ್ಷಣೆ ಮಾಡಿದ್ದಾರೆ

    ರಾಯಬಾಗ ತಾಲೂಕಿನ ಹಂದಿಗುಂದ ಗ್ರಾಮದಲ್ಲಿ ಮಹಾಲಿಂಗ ದೊಡ್ಡಮನಿ ಎಂಬುವರ ಮನೆ ಮೇಲೆ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರಿ ದಳದ ಪೊಲೀಸರು ದಾಳಿ ನಡೆಸಿದ್ದರು. ಇದನ್ನೂ ಓದಿ: ಪಿಸ್ತಾ ಸಿಪ್ಪೆ ಗಂಟಲಲ್ಲಿ ಸಿಲುಕಿ ಮಗು ಸಾವು!

    ಈ ವೇಳೆ ಮನೆಯ ಆವರಣದಲ್ಲಿ ಸಂಗ್ರಹಿಸಿದ್ದ ಎರಡು ನರಿ ಮರಿಗಳ ರಕ್ಷಣೆ ಮಾಡಿದ್ದಾರೆ. ಹಾರೂಗೇರಿ ಪೊಲೀಸ್ ಠಾಣಾ ವ್ತಾಪ್ತಿಯಲ್ಲಿ ಘಟನೆ ನಡೆದಿದೆ.

  • 3 ಲಕ್ಷಕ್ಕೆ ಡೀಲ್‌, ಪುರುಷರೇ ಹುಷಾರಾಗಿ – ಮದ್ವೆ ಹೆಸರಲ್ಲಿ ಮಹಾ ಮೋಸ!

    3 ಲಕ್ಷಕ್ಕೆ ಡೀಲ್‌, ಪುರುಷರೇ ಹುಷಾರಾಗಿ – ಮದ್ವೆ ಹೆಸರಲ್ಲಿ ಮಹಾ ಮೋಸ!

    ಚಿಕ್ಕೋಡಿ: ವಯಸ್ಸಾದ ಅವಿವಾಹಿತ ಪುರುಷರನ್ನೇ ಟಾರ್ಗೆಟ್ ಮಾಡಿಕೊಂಡು ಮದುವೆ (Marriage) ಹೆಸರಲ್ಲಿ ವಂಚನೆ ಎಸಗುತ್ತಿದ್ದವರು ಸಿಕ್ಕಿಬಿದ್ದ ಘಟನೆ ರಾಯಬಾಗ (Raibag) ತಾಲೂಕಿನ ಕಂಕನವಾಡಿ ಗ್ರಾಮದಲ್ಲಿ ನಡೆದಿದೆ.

    ಈ ಗ್ಯಾಂಗಿನ ಸದಸ್ಯನೊಬ್ಬನನ್ನು ಕಂಕನವಾಡಿ ಗ್ರಾಮಸ್ಥರು ರಾಯಬಾಗ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸ್ ಇಲಾಖೆ ಈ ರೀತಿ ಮೋಸ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

    ಏನಿದು ಪ್ರಕರಣ?
    ಗ್ರಾಮೀಣ ಭಾಗದ ಯುವಕರನ್ನು ಮದುವೆಯಾಗಲು ಇಂದು ಹುಡುಗಿಯರು ಹಿಂದೇಟು ಹಾಕುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಗ್ಯಾಂಗ್‌ ಬಡ ಕುಟುಂಬಗಳನ್ನು ಗುರಿಯಾಗಿಸಿ ಮದುವೆ ಮಾತುಕತೆ ನಡೆಸುತ್ತಿತ್ತು. ಇದನ್ನೂ ಓದಿ: ಶತ್ರು ಸಂಹಾರಕ್ಕೆ ಜನಿಸಿದ ಉಗ್ರ ಸ್ವರೂಪಿಣಿ ʻಪ್ರತ್ಯಂಗಿರಾ ದೇವಿʼ ದರ್ಶನ ಪಡೆದ ಡಿಕೆಶಿ

     

     

    ಸಾಂದರ್ಭಿಕ ಚಿತ್ರ
    ಸಾಂದರ್ಭಿಕ ಚಿತ್ರ

    ಮಾತುಕತೆಗೆ ಹುಡುಗನ ಕಡೆಯಿಂದ ಒಪ್ಪಿಗೆ ಸಿಕ್ಕಿದ ಕೂಡಲೇ 3 ಲಕ್ಷ ರೂ. ನೀಡುವಂತೆ ಕೇಳುತ್ತಿದ್ದರು. 3 ಲಕ್ಷ ರೂ. ನೀಡಿದರೆ ಹುಡುಗಿಯನ್ನು ತೋರಿಸುವುದಾಗಿ ಹೇಳುತ್ತಿದ್ದರು. ಅಷ್ಟೇ ಅಲ್ಲದೇ ಅಂದೇ ಮದುವೆ ಮಾಡಿಸುತ್ತೇವೆ ಎಂದು ಭರವಸೆ ನೀಡುತ್ತಿದ್ದರು. ಈ ಗ್ಯಾಂಗ್‌ ಸದಸ್ಯರ ಮಾತಿಗೆ ಒಪ್ಪಿ ವರನ ಪೋಷಕರು 3 ಲಕ್ಷ ರೂ. ಹಣವನ್ನು ನೀಡುತ್ತಿದ್ದರು.

    ಹಣ ನೀಡಿದ ಬಳಿಕ ಯುವತಿ ಜೊತೆ ಸರಳವಾಗಿ ಮದುವೆ ನಡೆಯುತ್ತಿತ್ತು. ಮದುವೆಯಾದ ಒಂದು ತಿಂಗಳಿನಲ್ಲಿ ಹುಡುಗಿ ಹಣ, ಚಿನ್ನದೊಂದಿಗೆ ಪರಾರಿಯಾಗುತ್ತಿದ್ದಳು. ನಂತರ ಈ ಗ್ಯಾಂಗ್‌ ಆ ಹುಡುಗಿಗೆ  ಮತ್ತೊಂದು ಮದುವೆ ಮಾಡಿಸಿ ದಂಧೆ ಮುಂದುವರಿಸುತ್ತಿದ್ದರು.

    ಇತ್ತೀಚೆಗಷ್ಟೇ ಅಥಣಿ, ರಾಯಬಾಗ, ಹುಕ್ಕೇರಿ ಹಾಗೂ ಮಹಾರಾಷ್ಟ್ರ ಕರ್ನಾಟಕದ ಗಡಿ ಗ್ರಾಮಗಳಲ್ಲಿ ವಂಚನೆ ಬೆಳಕಿಗೆ ಬಂದಿದೆ. ಈ ರೀತಿ ಮದುವೆ ಮಾಡಿಸಲು ಈ ಗ್ಯಾಂಗ್‌ ಸದಸ್ಯನೊಬ್ಬ ಕಂಕನವಾಡಿ ಗ್ರಾಮಕ್ಕೆ ಬಂದಾಗ ಜನರಿಗೆ ಅನುಮಾನ ಬಂದಿದೆ. ಅನುಮಾನ ನಿಜವಾಗಿದ್ದು ಈಗ ಆತನನ್ನು ಹಿಡಿದು  ಪೊಲೀಸರಿಗೆ ಒಪ್ಪಿಸಿದ್ದಾರೆ.

    ಮರ್ಯಾದೆಗೆ ಅಂಜಿ ಈತನ ವಿರುದ್ಧ ದೂರು ನೀಡಲು ಗ್ರಾಮಸ್ಥರು ಹಿಂದೇಟು ಹಾಕಿದ್ದಾರೆ. ಹೀಗಾಗಿ ಆತನನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ ಎಂಬ ವಿಚಾರ ಈಗ ತಿಳಿದು ಬಂದಿದೆ.

  • ಸಿಎಂ, ಸಚಿವರ ಡಿನ್ನರ್ ಪಾರ್ಟಿಗೆ ರಾಜಕೀಯ ಲೇಪನ ಬೇಡ: ಈಶ್ವರ್ ಖಂಡ್ರೆ

    ಸಿಎಂ, ಸಚಿವರ ಡಿನ್ನರ್ ಪಾರ್ಟಿಗೆ ರಾಜಕೀಯ ಲೇಪನ ಬೇಡ: ಈಶ್ವರ್ ಖಂಡ್ರೆ

    ಬೆಂಗಳೂರು: ಸಿಎಂ (Siddaramaiah) ಮತ್ತು ಮಂತ್ರಿಗಳು ಹೊಸ ವರ್ಷದ ಖುಷಿಯಿಂದ ಊಟಕ್ಕೆ ಸೇರಿದ್ದರು. ಅದಕ್ಕೆ ರಾಜಕೀಯ ಕಲ್ಪಿಸೋದು ಬೇಡ ಎಂದು ಡಿನ್ನರ್ ಪಾರ್ಟಿ ಸಭೆಯನ್ನು (Dinner Meeting) ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwara Khandre) ಸಮರ್ಥಿಸಿಕೊಂಡಿದ್ದಾರೆ.

    ಡಿನ್ನರ್ ಪಾರ್ಟಿ ವಿಚಾರವಾಗಿ ಅವರು ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದರು. ಈ ವೇಳೆ, ಹೊಸ ವರ್ಷದ ಖುಷಿಯಿಂದ ಊಟಕ್ಕೆ ಎಲ್ಲರೂ ಕರೆಯುತ್ತಾರೆ. ನಾನು ಕೂಡಾ ಊಟಕ್ಕೆ ಕರೆಯುತ್ತೇನೆ. ನಿಮ್ಮನ್ನು ಕರೆಯುತ್ತೇನೆ. ಅದರಲ್ಲಿ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.

    ಡಿನ್ನರ್ ಪಾರ್ಟಿಗೆ ರಾಜಕೀಯ ಕಲ್ಪಿಸೋದು ಬೇಡ. ಹೊಸ ವರ್ಷದ ಖುಷಿ ಇರುತ್ತೆ‌ ಅದಕ್ಕೆ ಕರೆದು ಊಟ, ಟಿಫನ್‌ಗೆ ಕರೆಯೋದು ಸಾಮಾನ್ಯ. ಅದಕ್ಕೆ ರಾಜಕೀಯ ಅನ್ನೋದು ಬೇಡ ಎಂದಿದ್ದಾರೆ.

    ಏನಿದು ಡಿನ್ನರ್ ಪಾರ್ಟಿ?
    ಇತ್ತೀಚೆಗೆ ಬೆಳಗಾವಿಯಲ್ಲಿ (Belagavi) ಆಪ್ತ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್ ನಡೆಸಿದ್ದರು. ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕುಟುಂಬ ಸದಸ್ಯರ ಜೊತೆ ವಿದೇಶದಲ್ಲಿ ಪ್ರವಾಸದಲ್ಲಿದ್ದರು. ಈ ಹೊತ್ತಿನಲ್ಲೇ ಇತ್ತ ಸಿದ್ದರಾಮಯ್ಯ ಬಣದಿಂದ ಡಿನ್ನರ್ ಮೀಟಿಂಗ್ ನಡೆದಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿತ್ತು.

  • ಸಂಕೇಶ್ವರ | ಜ.11 ರಂದು ಬೃಹತ್ ಉದ್ಯೋಗ ಮೇಳ

    ಸಂಕೇಶ್ವರ | ಜ.11 ರಂದು ಬೃಹತ್ ಉದ್ಯೋಗ ಮೇಳ

    ಚಿಕ್ಕೋಡಿ: ಮಾಜಿ ಸಚಿವ ಹಾಗೂ ಆದ್ಯ ಶ್ರೀ ನಿಜಲಿಂಗೇಶ್ವರ ಶಿಕ್ಷಣ ಸಮೂಹ ಸಂಸ್ಥೆಗಳ ಸಂಸ್ಥಾಪಕ ದಿ. ಮಲ್ದಾರಿಗೌಡ ಪಾಟೀಲ್ ಇವರ ಸ್ಮರಣಾರ್ಥ ಜ.11ರಂದು ಸಂಕೇಶ್ವರ (Sankeshwar) ಪಟ್ಟಣದ ಸಂಸ್ಥೆಯ ಆವರಣದಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಉಪಾಧ್ಯಕ್ಷ ಕುಣಾಲ್ ಪಾಟೀಲ್ ತಿಳಿಸಿದ್ದಾರೆ.

    ಬೆಳಗಾವಿ (Belagavi) ಜಿಲ್ಲೆ ಹುಕ್ಕೇರಿಯ ಸಂಕೇಶ್ವರ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ವೇಳೆ ಶಾಸಕರಾಗಿ, ನೀರಾವರಿ ಸಚಿವರಾಗಿ ಈ ಭಾಗದ ಜನರ ಕಲ್ಯಾಣಕ್ಕಾಗಿ ಸಾಕಷ್ಟು ಶ್ರಮಿಸಿ, ಗಡಿ ಭಾಗದಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ಅಪಾರ ಸೇವೆ ಸಲ್ಲಿಸಿದ ಮಲ್ದಾರಿಗೌಡ ಪಾಟೀಲ್‌ರ ಸೇವೆ ಸ್ಮರಣೀಯವಾಗಿದ್ದು, ಅವರ ಸೇವಾ ಕೈಂಕರ್ಯಗಳನ್ನು ಮುಂದುವರಿಸುವ ಉದ್ದೇಶದಿಂದ ಬೆಳಗಾವಿ ಜಿಲ್ಲೆಯ ಹಾಗೂ ಗಡಿ ಭಾಗದ ಯುವಕರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ತಿಳಿಸಿದರು.

    ಧಾರವಾಡದ ಕರಾವಳಿ ಟೀಚರ್ಸ್ ಹೆಲ್ಸ್ಲೈನ್‌ನವರ ಸಹಯೋಗದಲ್ಲಿ ನಡೆಯಲಿರುವ ಈ ಉದ್ಯೋಗ ಮೇಳದಲ್ಲಿ ಎಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಜಾಬ್ ಜಂಕ್ಷನ್, ಯುಥ್, ಅಪ್ಟಿಮಂ, ಮ್ಯಾನ್ ಪವರ್ ಸಂಸ್ಥೆಗಳು ಭಾಗವಹಿಸಲಿದ್ದು, ಎಸ್‌ಎಸ್‌ಎಲ್‌ಸಿ, ಪಿಯುಸಿ, ಎನ್ ಟಿಸಿ, ಡಿಇಡಿ, ಬಿಇಡಿ, ಬಿಪಿಇಡಿ, ಎಂ.ಕಾಂ, ಬಿಎ, ಬಿಎಸ್ಸಿ, ಎಂಎಸ್ಸಿ , ಎಂಕಾಂ, ಎಂಎಸ್ಸಿ, ಬಿಬಿಎ, ಬಿಸಿಎ, ಐಟಿಐ, ಫಾರ್ಮಸಿ, ಬಿಇ, ಎಂಟೆಕ್, ಎಂಎಸ್‌ಡಬ್ಲ್ಯೂ ಅರ್ಹತೆ ಹೊಂದಿರುವ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ ಎಂದರು.‌

    ಹೆಚ್ಚಿನ ಮಾಹಿತಿಗೆ ಮತ್ತು ಹೆಸರು ನೋಂದಾಯಿಸಲು . 9743218480, 483585840, 8762903585, 9980116526 ಸಂಪರ್ಕಿಸಬಹುದು.

  • ಗಟಾರ ಸ್ವಚ್ಛತೆಗೆ 200 ರೂ. ಕೇಳಿದ ಪಂಚಾಯತ್‌ – ಒಳಚರಂಡಿ ಸ್ವಚ್ಛಗೊಳಿಸುತ್ತಿದ್ದಾರೆ ವೃದ್ಧ ದಂಪತಿ

    ಗಟಾರ ಸ್ವಚ್ಛತೆಗೆ 200 ರೂ. ಕೇಳಿದ ಪಂಚಾಯತ್‌ – ಒಳಚರಂಡಿ ಸ್ವಚ್ಛಗೊಳಿಸುತ್ತಿದ್ದಾರೆ ವೃದ್ಧ ದಂಪತಿ

    ಬೆಳಗಾವಿ: ಗ್ರಾಮ ಪಂಚಾಯತ್‌ ಒಳಚರಂಡಿ (Sewerage) ಸ್ವಚ್ಛಗೊಳಿಸದ್ದಕ್ಕೆ ವೃದ್ಧ ದಂಪತಿಯೇ ಗಟಾರಕ್ಕೆ ಇಳಿದು ಸ್ವಚ್ಛಗೊಳಿಸುವ ಮೂಲಕ ಸುದ್ದಿಯಾಗಿದ್ದಾರೆ.

    ರಾಯಬಾಗ (Rayabhagh) ತಾಲೂಕಿನ ಇಟನಾಳ (Itanal) ಗ್ರಾಮದಲ್ಲಿ ಸೊಳ್ಳೆ ಕಾಟ ವಿಪರೀತವಾಗಿದೆ ಇದರ ಜೊತೆ ಕೆಟ್ಟ ಕೊಳೆತ ವಾಸನೆ ಬರುವುದು ಈಗ ಹೆಚ್ಚಾಗಿದೆ. ಇದರಿಂದಾಗಿ ಗ್ರಾಮದ ಹಲವು ಜನರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಇದನ್ನೂ ಓದಿ: ಚಾಮರಾಜನಗರ | ಹೃದಯಾಘಾತದಿಂದ 3ನೇ ತರಗತಿ ವಿದ್ಯಾರ್ಥಿನಿ ಸಾವು


    ಗ್ರಾಮದಲ್ಲಿ ಹೆಚ್ಚಾದ ಸಾಂಕ್ರಾಮಿಕ ರೋಗಗಳ (Infectious Diseases) ಭೀತಿಯಿಂದ ಗ್ರಾಮಸ್ಥರು ಪಂಚಾಯತ್‌ಗೆ ಹಲವು ಬಾರಿ ಒಳಚರಂಡಿ ಸ್ವಚ್ಛಗೊಳಿಸುವಂತೆ ಮನವಿ ಮಾಡಿದ್ದರು. ಗ್ರಾಮ ಪಂಚಾಯತಿಯ ಅಧ್ಯಕ್ಷ ಹಾಗೂ ಪಿಡಿಓಗೆ ಮನವಿ ಮಾಡಿದರೂ ಕ್ಯಾರೇ ಅಂದಿಲ್ಲ. ಅಷ್ಟೇ ಅಲ್ಲದೇ ಗಟಾರಗಳ ಸ್ವಚ್ಚತೆಗಾಗಿ ಸಿಬ್ಬಂದಿಗೆ 200 ರೂ. ನೀಡಬೇಕೆಂದು ಹೇಳಿದ್ದಾರೆ.

    ಇದರಿಂದ ಸಿಟ್ಟಾದ ಗ್ರಾಮದ ವೃದ್ಧ ದಂಪತಿ ಲಕ್ಷ್ಮಣ ಭಜಂತ್ರಿ ಹಾಗೂ ಮಹಾದೇವಿ ಅವರು ಟ್ಟಿ, ಸಣಿಕೆ ತೆಗೆದುಕೊಂಡು ಗಟಾರ ಸ್ವಚ್ಛಗೊಳಿಸುತ್ತಿದ್ದಾರೆ.

     

  • ಡಿಕೆಶಿ ವಿದೇಶದಲ್ಲಿರುವಾಗಲೇ ಆಪ್ತ ಸಚಿವರೊಂದಿಗೆ ಸಿಎಂ ಡಿನ್ನರ್ ಮೀಟಿಂಗ್!

    ಡಿಕೆಶಿ ವಿದೇಶದಲ್ಲಿರುವಾಗಲೇ ಆಪ್ತ ಸಚಿವರೊಂದಿಗೆ ಸಿಎಂ ಡಿನ್ನರ್ ಮೀಟಿಂಗ್!

    – ಪವರ್ ಶೇರಿಂಗ್, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಂಪುಟ ಪುನಾರಚನೆ ಬಗ್ಗೆ ಚರ್ಚೆ?

    ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಡಿನ್ನರ್ ಮೀಟಿಂಗ್ ಸಂಚಲನ ಮೂಡಿಸಿದೆ. ಮೂರು ಅಜೆಂಡಾಗಳೊಂದಿಗೆ ಬೆಳಗಾವಿಯಲ್ಲಿ ಆಪ್ತ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ.

    ಅತ್ತ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕುಟುಂಬ ಸದಸ್ಯರ ಜೊತೆ ವಿದೇಶದಲ್ಲಿ ಪ್ರವಾಸದಲ್ಲಿದ್ದಾರೆ. ಈ ಹೊತ್ತಿನಲ್ಲೇ ಇತ್ತ ಸಿದ್ದರಾಮಯ್ಯ ಬಣದಿಂದ ಡಿನ್ನರ್ ಮೀಟಿಂಗ್ ನಡೆದಿರುವುದು ಕಾಂಗ್ರೆಸ್ ರಾಜಕೀಯ ಪಡಸಾಲೆಯಲ್ಲಿ ಕುತೂಹಲ ಮೂಡಿಸಿದೆ.

    ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ. ಗೃಹ ಸಚಿವ ಪರಮೇಶ್ವರ್, ಸಚಿವ ಹೆಚ್.ಸಿ.ಮಹದೇವಪ್ಪ, ಕೆ.ಎನ್.ರಾಜಣ್ಣ ಪಾಲ್ಗೊಂಡಿದ್ದರು.

    ಬಜೆಟ್‌ಗೂ ಮುನ್ನವೇ ಸಂಪುಟ ಪುನಾರಚನೆ ಗುಸುಗುಸು ಕೇಳಿಬಂದಿದೆ. ಈ ಬೆನ್ನಲ್ಲೇ ಎರಡು ವಿಚಾರಗಳ ಬಗ್ಗೆ ಮಹತ್ವದ ಚರ್ಚೆ ನಡೆದಿದೆ ಎನ್ನಲಾಗಿದೆ. ಮುಂದಿನ ರಾಜಕೀಯ ಬದಲಾವಣೆಗಳ ಬಗ್ಗೆ ಡಿನ್ನರ್ ಪಾಲಿಟಿಕ್ಸ್ನಲ್ಲಿ ಭರ್ಜರಿ ಚರ್ಚೆ ನಡೆದಿದೆ ಎನ್ನಲಾಗಿದೆ.

    ಸಚಿವ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹಾಗೂ ಪವರ್ ಶೇರಿಂಗ್ ವಿಚಾರ, ಈ ಮೂರು ವಿಚಾರಗಳ ಬಗ್ಗೆ ಆಪ್ತ ಸಚಿವರ ಜೊತೆ ಸಿಎಂ ಕ್ಲೋಸ್ ಡೋರ್ ಮೀಟಿಂಗ್ ನಡೆಸಿದ್ದಾರೆನ್ನಲಾಗಿದೆ.

    ಸಚಿವ ಸಂಪುಟ ಪುನಾರಚನೆ ಆಗಬೇಕಾ ಬೇಡ್ವಾ? ವೈಯಕ್ತಿಕವಾಗಿ ಸಂಪುಟ ಪುನಾರಚನೆ ಇಷ್ಟವಿಲ್ಲದಿದ್ದರೂ ಹೈಕಮಾಂಡ್ ಸೂಚನೆ ನೀಡಿದರೆ ಏನು ಎಂಬ ಬಗ್ಗೆ ಸಿಎಂ ಚರ್ಚೆ ನಡೆಸಿದ್ದಾರೆ. ಸಂಪುಟ ಪುನಾರಚನೆ ಅನಿವಾರ್ಯ ಆದರೆ ಹೇಗಿರಬೇಕು ಎಂಬುದರ ಬಗ್ಗೆಯೂ ಚರ್ಚೆ ನಡೆದಿರುವ ಸಾಧ್ಯತೆ ಇದೆ.

    ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರ ಪ್ರಮುಖವಾಗುತ್ತೆ. ಹೈಕಮಾಂಡ್ ಬದಲಾವಣೆಗೆ ಒಪ್ಪಿದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್ ಹೇಗಿರಲಿದೆ ಎಂಬುದರ ಬಗ್ಗೆಯೂ ಡಿನ್ನರ್ ಮೀಟಿಂಗ್‌ನಲ್ಲಿ ಚರ್ಚೆ ಆಗಿದೆ ಎಂಬ ಮಾಹಿತಿ ಇದೆ. ಪವರ್ ಶೇರಿಂಗ್ ವಿಚಾರದಲ್ಲಿ ಸಿಎಂ ಸೈಲೆಂಟ್ ಗೇಮ್ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ.

  • ಡ್ಯೂಟಿ ಚೇಂಜ್ ಮಾಡಿದ್ದಕ್ಕೆ ಆತ್ಮಹತ್ಯೆಗೆ ಯತ್ನ ಬೆದರಿಕೆ – ಠಾಣೆಯಲ್ಲಿ ಪೊಲೀಸ್ ಪೇದೆ ಹೈಡ್ರಾಮಾ

    ಡ್ಯೂಟಿ ಚೇಂಜ್ ಮಾಡಿದ್ದಕ್ಕೆ ಆತ್ಮಹತ್ಯೆಗೆ ಯತ್ನ ಬೆದರಿಕೆ – ಠಾಣೆಯಲ್ಲಿ ಪೊಲೀಸ್ ಪೇದೆ ಹೈಡ್ರಾಮಾ

    – ಪೇದೆ ಹೈಡ್ರಾಮಾಕ್ಕೆ ಹೆದರಿದ ಇನ್‌ಸ್ಪೆಕ್ಟರ್‌ಗೆ ಬಿಪಿ ಲೋ; ಆಸ್ಪತ್ರೆಗೆ ದಾಖಲು

    ಬೆಳಗಾವಿ: ಡ್ಯೂಟಿ ಚೇಂಜ್ ಮಾಡಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸುವ ರೀತಿಯಲ್ಲಿ ಪೇದೆ ಹೈಡ್ರಾಮಾ ಮಾಡಿದ ಘಟನೆ ಬೆಳಗಾವಿ (Belagavi) ನಗರದ ಉದ್ಯಮಬಾಗ ಪೊಲೀಸ್  (Udyambag) ಠಾಣೆಯಲ್ಲಿ ನಡೆದಿದೆ.

    ಆತ್ಮಹತ್ಯೆಗೆ ಯತ್ನಿಸಿದ ಪೇದೆಯನ್ನು ಮುದಕಪ್ಪ ಉದಗಟ್ಟಿ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಆರ್ಥಿಕ ಸಂಕಷ್ಟದಲ್ಲಿ ಹಿಮಾಚಲ ಸರ್ಕಾರ – ಜನರಿಗೆ ನೀಡಿದ್ದ ‘ಗ್ಯಾರಂಟಿ’ ವಾಪಸ್ ಅಭಿಯಾನ ಶುರು

    ಎರಡು ದಿನ ರಜೆಗೆ ಹೋಗಿ ಬಂದಿದ್ದ ಪೇದೆ ಮುದಕಪ್ಪನಿಗೆ ಡ್ಯೂಟಿ ಬದಲಿಸಿದ್ದರು. ಇದನ್ನು ಪ್ರಶ್ನೆ ಮಾಡಿದಾಗ ಬೆಳಗ್ಗೆ ನಿಯೋಜಿಸಿದ್ದ ಜಾಗಕ್ಕೆ ಹೋಗಬೇಕು ಎಂದು ಸೂಚನೆ ನೀಡಿದ್ದರು. ಇದರಿಂದ ತಾನು ವಿಷ ಸೇವಿಸುತ್ತೇನೆಂದು ಹೇಳಿ ಇನ್ಸ್ಪೆಕ್ಟರ್ ಡಿ.ಕೆ ಪಾಟೀಲ್ ಚೇಂಬರ್‌ನಲ್ಲಿ ಆತ್ಮಹತ್ಯೆ ಡ್ರಾಮಾ ಮಾಡಿ ಬಿದ್ದು ಉರುಳಾಡಿದ್ದ. ತಕ್ಷಣವೇ ಆಸ್ಪತ್ರೆಗೆ ರವಾನಿಸಿ, ಆರೋಗ್ಯ ತಪಾಸಣೆ ಮಾಡಿದಾಗ ವೈದ್ಯರು ಯಾವುದೇ ವಿಷ ಸೇವಿಸಿಲ್ಲ ಎಂದು ಹೇಳಿದ್ದರು. ಬಳಿಕ ಮೇಲಾಧಿಕಾರಿಗಳು ಪೇದೆಗೆ ಬುದ್ಧಿವಾದ ಹೇಳಿ ಮನೆಗೆ ಕಳುಹಿಸಿದ್ದರು.

    ಪೇದೆಯ ನಡೆಯಿಂದ ಇನ್ಸ್ಪೆಕ್ಟರ್ ಡಿ.ಕೆ ಪಾಟೀಲ್ ಅವರ ಬೀಪಿ ಲೋ ಆಗಿ ತಕ್ಷಣವೇ ಅವರನ್ನು ಯಳ್ಳೂರ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಸುದ್ದಿ ತಿಳಿದು ಖಡೇಬಜಾರ್ ಎಸಿಪಿ ಶೇಖರಪ್ಪ ಉದ್ಯಮಬಾಗ ಠಾಣೆಗೆ ಆಗಮಿಸಿದರು. ಠಾಣೆಯಲ್ಲಿರುವ ಸಿಬ್ಬಂದಿಯಿಂದ ಘಟನೆ ಕುರಿತು ಮಾಹಿತಿ ಪಡೆದರು. ಹೈಡ್ರಾಮಾ ಕುರಿತು ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್‌ಗೆ ಮಾಹಿತಿ ನೀಡಿದರು.

    ನ.28ರಂದು ಪೇದೆ ವಿಠ್ಠಲ್ ಮುನಿಹಾಳ ಎಂಬಾತ ನಾಲ್ಕು ಪುಟಗಳ ಡೆತ್‌ನೋಟ್ ಬರೆದಿಟ್ಟು ಹೋಗಿದ್ದ. ಡೆತ್‌ನೋಟ್‌ನಲ್ಲಿ ಸಿಪಿಐ ಕಿರುಕುಳ ನೀಡ್ತಿದ್ದಾರೆಂದು ಉಲ್ಲೇಖಿಸಿದ್ದ. ತಕ್ಷಣ ಆತನನ್ನು ಹುಡುಕಿ ಸಹೋದ್ಯೋಗಿಗಳು ಜೀವ ಉಳಿಸಿದ್ದರು.ಇದನ್ನೂ ಓದಿ: ನಮ್ಮ ಮೆಟ್ರೋ ‘ಯೆಲ್ಲೋ ಲೈನ್’‌ ಸೇವೆ ಆರಂಭ ಯಾವಾಗ?- ವಿಳಂಬಕ್ಕೆ ಕಾರಣ ಬಿಚ್ಚಿಟ್ಟ ತೇಜಸ್ವಿ ಸೂರ್ಯ

  • ಕಾರು ಸಮೇತ ಘಟಪ್ರಭಾ ನದಿಗೆ ಬಿದ್ದು ವ್ಯಕ್ತಿ ಸಾವು

    ಕಾರು ಸಮೇತ ಘಟಪ್ರಭಾ ನದಿಗೆ ಬಿದ್ದು ವ್ಯಕ್ತಿ ಸಾವು

    ಬೆಳಗಾವಿ: ಕಾರು (Car) ಸಮೇತ ನದಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನ‌ ಬೆನಕನಹೊಳಿ ಗ್ರಾಮ ಬಳಿಯ ಘಟಪ್ರಭಾ ನದಿಯಲ್ಲಿ(Ghataprabha River) ನಡೆದಿದೆ.

    ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮದ ನಿವಾಸಿ ಕಿರಣ ಲಕ್ಷ್ಮಣ ನಾವಲಗಿ(45) ಮೃತ ದುರ್ದೈವಿ. ಬ್ಯೂಟಿ ಪಾರ್ಲರ್ ಉದ್ಯಮ ನಡೆಸುತ್ತಿದ್ದ ಮೃತ ಕಿರಣ ಡಿಸೆಂಬರ್‌ 30 ರಂದು ಮನೆಯಲ್ಲಿ ಯಾರಿಗೂ ಹೇಳದೇ ಕಾರು ತೆಗೆದುಕೊಂಡು ತೆರಳಿದ್ದರು. ಇದನ್ನೂ ಓದಿ: ಅಶ್ವಮೇಧ ಕುದುರೆಯ ಓಟಕ್ಕೆ ಪ್ರಶಸ್ತಿಗಳ ಸುರಿಮಳೆ – KSRTCಗೆ 9 ಬಹುಮಾನ

    ಉದ್ಯಮದಲ್ಲಿ ನಷ್ಟವಾದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

    ಸ್ಥಳಕ್ಕೆ ಯಮಕನಮರಡಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ನದಿಯಲ್ಲಿ ಬಿದ್ದಿದ್ದ ಕಾರು ಹಾಗೂ ಶವವನ್ನು ಹೊರತೆಗೆದಿದ್ದಾರೆ. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.