Tag: belagavi

  • ಸರ್ಕಾರಿ ಶಾಲೆಗಳಲ್ಲಿ ಸಿಹಿ ಭೋಜನ ನೀಡ್ತಿದ್ದಾರೆ ಹುಕ್ಕೇರಿಯ ಅರಿಹಂತ

    ಸರ್ಕಾರಿ ಶಾಲೆಗಳಲ್ಲಿ ಸಿಹಿ ಭೋಜನ ನೀಡ್ತಿದ್ದಾರೆ ಹುಕ್ಕೇರಿಯ ಅರಿಹಂತ

    ಚಿಕ್ಕೋಡಿ: ರಾಜ್ಯಾದ್ಯಂತ ಬಿಸಿಯೂಟ ಯೋಜನೆಯಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಅನ್ನಸಾಂಬರ್ ಕೊಡಲಾಗ್ತಿದೆ. ಆದ್ರೆ, ಪಬ್ಲಿಕ್ ಹೀರೋ ಬೆಳಗಾವಿಯ ಹುಕ್ಕೇರಿಯ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕರಾದ ಅರಿಹಂತ ಪಾಟೀಲರ ಶ್ರಮದಿಂದ 120 ಶಾಲೆಗಳಲ್ಲಿ ವಾರಕ್ಕೆ 2 ದಿನ ವಿಶೇಷ ಭೋಜನದ ವ್ಯವಸ್ಥೆ ಮಾಡಲಾಗಿದೆ.

    ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಅರಿಹಂತ ಬಿರಾದಾರ ಪಾಟೀಲ ಅವರ ವಿಶೇಷ ಕಾಳಜಿಯಿಂದ ಸರ್ಕಾರಿ ಶಾಲೆಗಳಲ್ಲಿ ವಾರದಲ್ಲಿ 2 ದಿನ ಶಾಲಾ ಮಕ್ಕಳಿಗೆ ಈ ವಿಶೇಷ ಭೋಜನ ನೀಡಲಾಗುತ್ತಿದೆ. ಅನ್ನ ಸಾಂಬಾರು ಅನ್ನೋ ನಿಯಮದ ಜೊತೆಗೆ ಹುಗ್ಗಿ, ಪರೋಟಾ, ಗುಲಾಬ್ ಜಾಮೂನನ್ನೂ ನೀಡಲಾಗ್ತಿದೆ ಅಂತ ಬಾಗೇವಾಡಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸಂಜಯ ಖಾನಾಪೂರೆ ತಿಳಿಸಿದ್ದಾರೆ.

    ಅರಿಹಂತ ಬಿರಾದಾರ ಪಾಟೀಲರು 5 ವರ್ಷಗಳಿಂದ ಹುಕ್ಕೇರಿ ತಾಲೂಕಿನ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕರಾಗಿದ್ದಾರೆ. ಸರ್ಕಾರ ನೀಡುವ ದವಸ ಧಾನ್ಯಗಳ ಜೊತೆಗೆ ದಾನಿಗಳು, ಶಿಕ್ಷಕರ ಸಹಾಯದಿಂದ ಕೆಲ ಪದಾರ್ಥಗಳನ್ನು ತರಿಸಿ 120ಕ್ಕೂ ಹೆಚ್ಚು ಅಡುಗೆ ಕೇಂದ್ರಗಳಲ್ಲಿ ಈ ವಿಶೇಷ ಊಟ ನೀಡುತ್ತಿದ್ದಾರೆ.

    ಅರಿಹಂತ ಅವರ ಈ ಯೋಜನೆಯಿಂದಾಗಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹಾಗೂ ಹಾಜರಾತಿ ಗಣನೀಯ ಏರಿಕೆ ಕಂಡಿದೆ.

    https://www.youtube.com/watch?v=8KqAbbUwah4

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಉತ್ತರ ಕರ್ನಾಟಕ ಪ್ರತ್ಯೇಕ ಹೋರಾಟ ಅಚಲ ನಿರ್ಧಾರ : ಉಮೇಶ್ ಕತ್ತಿ

    ಉತ್ತರ ಕರ್ನಾಟಕ ಪ್ರತ್ಯೇಕ ಹೋರಾಟ ಅಚಲ ನಿರ್ಧಾರ : ಉಮೇಶ್ ಕತ್ತಿ

    ಬೆಳಗಾವಿ: ರಾಜ್ಯ ಸರ್ಕಾರ ಬೆಳಗಾವಿಯ ಸುವರ್ಣ ಸೌಧದಲ್ಲಿ ನೆಪ ಮಾತ್ರಕ್ಕೆ ಅಧಿವೇಶನ ನಡೆಸಿದ್ದು, ಉತ್ತರ ಕರ್ನಾಟಕ ಅಭಿವೃದ್ಧಿಗೆ ಯಾವುದೇ ಚರ್ಚೆ ನಡೆಸದೆ ಅನಗತ್ಯವಾಗಿ ಅಧಿವೇಶನ ನಡೆಸಿದ್ದಾರೆ. ಸಿಎಂ ಅವರಿಗೆ ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚಿಂತನೆ ಇಲ್ಲ, ಆದ್ದರಿಂದ ನಾನು ಈಗಾಗಲು ಪ್ರತ್ಯೇಕ ರಾಜ್ಯ ಹೋರಾಟಕ್ಕೆ ಅಚಲನಾಗಿದ್ದೇನೆ ಎಂದು ಬಿಜೆಪಿ ಮುಖಂಡ ಉಮೇಶ್ ಕತ್ತಿ ಸ್ಪಷ್ಟಪಡಿಸಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಉಮೇಶ್ ಕತ್ತಿ ಅವರು, ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಕಳೆದ 10 ವರ್ಷಗಳಿಂದ ಹೋರಾಟ ನಡೆಸುತ್ತಿದ್ದು, ಅಭಿವೃದ್ಧಿ ಮಾಡದಿದ್ದರೆ ಪ್ರತ್ಯೇಕ ರಾಜ್ಯ ಮಾಡಿ ಎಂದು ಹೇಳಿದ್ದೆ. ಈ ನಿರ್ಧಾರದಿಂದ ನಾನು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಅಭಿವೃದ್ಧಿ ಮಾಡಿಲ್ಲ, ಉತ್ತರ ಕರ್ನಾಟಕ ಪ್ರತ್ಯೇಕ ಮಾಡಿ ಎಂದು ಒತ್ತಾಯ ಮಾಡುತ್ತೇವೆ ಎಂದರು.

    ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಿರಿ: ರಾಜ್ಯದ ಉಸ್ತುವಾರಿ ವಹಿಸಿರುವ ಸಿಎಂ ಅವರಿಗೆ ಉತ್ತರ ಕರ್ನಾಟಕ ಅಗತ್ಯವಿಲ್ಲದಿದ್ದರೆ ದಯಾ ಮಾಡಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಿರಿ. ಆ ಮೂಲಕ ರಾಜ್ಯ ಇಬ್ಭಾಗ ಮಾಡುವ ಬಗ್ಗೆ ಸ್ಪಷ್ಟಪಡಿಸಿ. ಕಳೆದ ಐದು ವರ್ಷ ಆಡಳಿತ ನಡೆಸಿದ ಸಿದ್ದರಾಮಯ್ಯ ಅವರ ಸರ್ಕಾರ ಹಾಗೂ ಹೊಸ ಸರ್ಕಾರವೂ ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಿಲ್ಲ. ಮಠಾಧೀಶರು ಕೂಡ ಅಭಿವೃದ್ಧಿ ಕುರಿತು ಒಳ್ಳೆ ಸಲಹೆ ಕೊಟ್ಟಿದ್ದರು ಅದರ ಬಗ್ಗೆ ಕೂಡ ಸಿಎಂ ಮಾತನಾಡಿಲ್ಲ. ರಾಜ್ಯ ರೈತರ ಸಾಲಮನ್ನಾ ಬಗ್ಗೆಯೂ ಸ್ಪಷ್ಟನೆ ಇಲ್ಲ ಆರೋಪಿಸಿದರು.

    ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಸಕ್ಕರೆ ಕಾರ್ಖಾನೆಗಳು ಇದ್ದು, ಅಭಿವೃದ್ಧಿಯ ವಿಚಾರವಾಗಿ ಕೆಲ ಸರ್ಕಾರ ಇಲಾಖೆಯನ್ನು ಸುವರ್ಣ ಸೌಧಕ್ಕೆ ವರ್ಗಾವಣೆ ಮಾಡಲು ಮನವಿ ಮಾಡಲಾಗಿತ್ತು. ಆದರೆ ಇದು ಯಾವುದು ಆಗಿಲ್ಲ. ರಾಜ್ಯದಲ್ಲಿ ಸರ್ಕಾರವಿದ್ದರು ಸರಿಯಾದ ಅಭಿವೃದ್ಧಿ ಯೋಜನೆಗಳು ಜಾರಿ ಆಗುತ್ತಿಲ್ಲ. ಆದ್ದರಿಂದ ಮತ್ತೆ ಪ್ರತ್ಯೇಕ ಉತ್ತರ ಕರ್ನಾಟಕ ಬಗ್ಗೆ ಒತ್ತಾಯ ಮಾಡುತ್ತಿರುವುದಾಗಿ ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೇವಲ 25 ನಿಮಿಷಗಳಲ್ಲಿ ಕಲಾಪ ಮುಕ್ತಾಯ

    ಕೇವಲ 25 ನಿಮಿಷಗಳಲ್ಲಿ ಕಲಾಪ ಮುಕ್ತಾಯ

    – ಎರಡು ದಿನಗಳ ಕಾಲ ಪ್ರತಿಭಟನೆ ಮೊಳಗಿಸಿದ ವಿಪಕ್ಷ
    – ಗದ್ದಲದಲ್ಲಿಯೇ ಎರಡು ವಿಧೇಯಕಗಳಿಗೆ ಅಂಗೀಕಾರ ಪಡೆದ ಸರ್ಕಾರ
    – ಅಧಿವೇಶನಕ್ಕೆ ಮಾಜಿ ಸಿಎಂ ಚಕ್ಕರ್

    ಬೆಳಗಾವಿ: ಚಳಿಗಾಲ ಅಧಿವೇಶನದ ಕೊನೆಯ ದಿನದ ಕಲಾಪ ಗದ್ದಲ ಗೊಂದಲಗಳಿಗಷ್ಟೇ ಸೀಮಿತವಾಗಿ 11 ಗಂಟೆಗೆ ಆರಂಭವಾದ ಸದನ ಕೇವಲ 25 ನಿಮಿಷದಲ್ಲಿ ಮುಕ್ತಾಯವಾಯಿತು.

    ಸದನ ಆರಂಭವಾಗುತ್ತಿದ್ದಂತೆ ಬಿಜೆಪಿ ಶಾಸಕರು ನಿನ್ನೆಯಂತೆ ಸದನದ ಬಾವಿಗಿಳಿದು ಧರಣಿ ಮುಂದುವರಿಸಿದರು. ಈ ವೇಳೆ ಆಡಳಿತ ಹಾಗೂ ವಿಪಕ್ಷದ ಶಾಸಕರು ಪರ ವಿರೋಧ ಘೋಷಣೆಗೆ ಇಳಿದರು. ಇದರಿಂದಾಗಿ ಕಲಾಪದಲ್ಲಿ ಗೊಂದಲ ಆರಂಭವಾಗಿತ್ತು. ಈ ಪರಿಸ್ಥಿತಿಯಲ್ಲಿ ಸರ್ಕಾರವು ಎರಡು ವಿಧೇಯಕಗಳಿಗೆ ಅಂಗೀಕಾರ ಪಡೆಯಿತು.

    ಕರ್ನಾಟಕ ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರ ನೇಮಕಾತಿ ತಿದ್ದುಪಡಿ ಹಾಗೂ ರೈ ತಾಂತ್ರಿಕ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅನುಮೋದನೆ ನೀಡಲಾಯಿತು. ಗದ್ದಲ ಜಾಸ್ತಿಯಾಗುತ್ತಿದ್ದಂತೆ ಸ್ಪೀಕರ್ ಅನಿರ್ಧಿಷ್ಟ ಅವಧಿಗೆ ಸದನವನ್ನು ಮುಂದೂಡಿದರು. ಬಳಿಕ ಪ್ರತಿಭಟನೆಯ ಬಿಸಿ ಕಲಾಪಕ್ಕೆ ತಟ್ಟಿದ್ದರಿಂದ ಅಧಿವೇಶನದ ಕೊನೆಯ ದಿನ ಯಾವುದೇ ಚರ್ಚೆ ನಡೆಯದೇ ರಾಷ್ಟ್ರಗೀತೆಯೊಂದಿಗೆ ಅಧಿವೇಶನಕ್ಕೆ ತೆರೆ ಬಿದ್ದಿತು.

    ರೈತರ ಕೃಷಿ ಸಾಲಮನ್ನಾ ಹಾಗೂ ಸಿಎಂ ಕುಮಾರಸ್ವಾಮಿ ಕ್ಷಮೆ ಕೇಳಬೇಕು ಎಂದು ಬಿಜೆಪಿ ನಾಯಕರು ಎರಡು ದಿನಗಳ ಕಾಲ ಪ್ರತಿಭಟನೆ ನಡೆಸಿದರು. ಆದರೆ ಕುಮಾರಸ್ವಾಮಿ ಅವರು ಇದಕ್ಕೆ ತಲೆ ಕೆಡಿಸಿಕೊಳ್ಳದೆ ಕಲಾಪದಿಂದ ದೂರ ಉಳಿದಿದ್ದರು. ಬಿಜೆಪಿ ಶಾಸಕರ ಪ್ರತಿಭಟನೆ ಹಾಗೂ ಆಡಳಿತ ಪಕ್ಷದ ಕೆಲ ನಾಯಕರ ಗೈರು ಎಲ್ಲವೂ ಸದನವನ್ನು ನುಂಗಿ ಹಾಕಿತು.

    ಕಾಡಿದ ಮಾಜಿ ಸಿಎಂ ಗೈರು:
    ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಿದೇಶಿ ಪ್ರವಾಸ, ಕ್ಷೇತ್ರ ಪ್ರವಾಸದಲ್ಲಿ ಫುಲ್ ಬ್ಯೂಸಿ ಆಗಿದ್ದರು. ಹೀಗಾಗಿ ಶಾಸಕಾಂಗ ಸಭೆಯ ದಿನದಂದು ಮಾತ್ರ ಕಲಾಪದಲ್ಲಿ ಕಾಣಿಸಿಕೊಂಡರು. ಸಂಪುಟ ವಿಸ್ತರಣೆಯ ಕುರಿತು ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಲು ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ. ಇದರಿಂದಾಗಿ ಕೊನೆಯ ದಿನದ ಕಲಾಪದಿಂದ ಅವರು ದೂರ ಉಳಿದಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಚಿವ ಸ್ಥಾನ ಕೊಟ್ರೆ ಪ್ರಮಾಣವಚನ, ಇಲ್ಲಂದ್ರೆ ಹುಬ್ಳಿ ದಾರಿ : ಬಸವರಾಜ್ ಹೊರಟ್ಟಿ

    ಸಚಿವ ಸ್ಥಾನ ಕೊಟ್ರೆ ಪ್ರಮಾಣವಚನ, ಇಲ್ಲಂದ್ರೆ ಹುಬ್ಳಿ ದಾರಿ : ಬಸವರಾಜ್ ಹೊರಟ್ಟಿ

    ಬೆಂಗಳೂರು: ನನಗೆ ಸಚಿವ ಸ್ಥಾನ ಕೊಟ್ಟರೆ ಪ್ರಮಾಣವಚನ ಸ್ವೀಕರಿಸುತ್ತೇನೆ. ಇಲ್ಲವಾದರೆ ಹುಬ್ಬಳ್ಳಿ ದಾರಿ ಹಿಡಿಯುತ್ತೇನೆ ಎಂದು ಜೆಡಿಎಸ್ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.

    ಸುವರ್ಣಸೌಧದಲ್ಲಿ ಮಾತಾಡಿದ ಹೊರಟ್ಟಿ, ಉತ್ತರ ಕರ್ನಾಟಕಕ್ಕೆ ಸಂಪುಟ ವಿಸ್ತರಣೆ ವೇಳೆ ಹೆಚ್ಚಿನ ಪ್ರಾಶಸ್ತ್ಯ ಸಿಗಬೇಕು ಎನ್ನುವುದು ನಮ್ಮ ನಿರೀಕ್ಷೆ. ಆದರೆ ತೀರ್ಮಾನ ವರಿಷ್ಠರಿಗೆ ಬಿಟ್ಟಿದ್ದು. ಸಚಿವ ಸ್ಥಾನ ಕೊಟ್ಟರೆ ನಿರ್ವಹಿಸುತ್ತೇನೆ. ಇಲ್ಲದಿದ್ರೆ ಹುಬ್ಬಳ್ಳಿ ದಾರಿ ಹಿಡಿಯುತ್ತೇನೆ ಎಂದು ತಿಳಿಸಿದರು.

    ಅಧಿವೇಶನದಲ್ಲಿ ನಾನು ಸಭಾಪತಿಯಾಗಿ ಕೆಲಸ ಮಾಡುವ ಆಸೆಯಿತ್ತು. ಆದರೆ ದುರ್ದೈವದಿಂದ ಅದು ಆಗಲಿಲ್ಲ ಎಂದು ಈ ಸಮಯದಲ್ಲಿ ಬಸವರಾಜ ಹೊರಟ್ಟಿ ತಮ್ಮ ಅಸಮಾಧಾನವನ್ನು ಹೊರ ಹಾಕಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾರು ಅಪಘಾತ

    ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾರು ಅಪಘಾತ

    ಬೆಳಗಾವಿ: ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರ ಕಾರು ಇಂದು ಜಿಲ್ಲೆಯ ಧರ್ಮನಾಥ ಸರ್ಕಲ್ ಬಳಿ ಅಪಘಾತಕ್ಕಿಡಾಗಿದೆ.

    ಧರ್ಮನಾಥ ಸರ್ಕಲ್ ಬಳಿ ಜಗದೀಶ್ ಶೆಟ್ಟರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಶೆಟ್ಟರ್ ಅವರ ಕಾರಿಗೆ ಹಿಂದಿನಿಂದ ಇನ್ನೊವಾ ಕಾರೊಂದು ಬಂದು ಗುದ್ದಿದೆ. ಸದ್ಯ ಅಪಘಾತದಿಂದ ಜಗದೀಶ್ ಶೆಟ್ಟರ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಅಪಘಾತದಿಂದ ಮಾಜಿ ಸಿಎಂ ಅವರ ಕಾರು ಸ್ವಲ್ಪ ಜಖಂಗೊಂಡಿದ್ದು, ಯಾರಿಗೂ ಯಾವುದೇ ಅಪಾಯವಾಗಿಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಜೆಪಿ ಔತಣಕೂಟದಲ್ಲಿ ರಮೇಶ್ ಜಾರಕಿಹೊಳಿ ಭಾಗವಹಿಸಿದ್ದು ಯಾಕೆ: ಉತ್ತರ ಕೊಟ್ಟ ಅಶೋಕ್

    ಬಿಜೆಪಿ ಔತಣಕೂಟದಲ್ಲಿ ರಮೇಶ್ ಜಾರಕಿಹೊಳಿ ಭಾಗವಹಿಸಿದ್ದು ಯಾಕೆ: ಉತ್ತರ ಕೊಟ್ಟ ಅಶೋಕ್

    ಬೆಳಗಾವಿ: ಬೆಳಗಾವಿಯನ್ನು ಎರಡು ಭಾಗ ಮಾಡಿದ ಡಿ.ಕೆ.ಶಿವಕುಮಾರ್ ಔತಣಕೂಟಕ್ಕೆ ಹೋಗಲು ರಮೇಶ್ ಜಾರಕಿಹೊಳಿ ಇಷ್ಟವಿರಲಿಲ್ಲ. ಹೀಗಾಗಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಅವರ ಮೇಲಿನ ಪ್ರೀತಿ, ವಿಶ್ವಾಸದಿಂದ ಬಂದಿರಬಹುದು ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಹೇಳಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಮತ್ತು ಸಚಿವ ಡಿ.ಕೆ.ಶಿವಕುಮಾರ್ ಅವರ ಮಧ್ಯೆ ಇರುವುದು ಎಣ್ಣೆ ಸೀಗೇಕಾಯಿ ಸಂಬಂಧ ಅಂತ ಎಲ್ಲರಿಗೂ ಗೊತ್ತಿರುವ ವಿಚಾರ. ಹೀಗಾಗಿ ಮಹಾಂತೇಶ ಕವಟಗಿಮಠ ಅವರು ನಗರದಲ್ಲಿ ಬುಧವಾರ ಆಯೋಜಿಸಿದ್ದ ಔತಣಕೂಟಕ್ಕೆ ರಮೇಶ್ ಜಾರಕಿಹೊಳಿ ಬಂದಿರಬಹುದು. ಆದರೆ ನಿರ್ದಿಷ್ಟವಾಗಿ ಯಾವ ಕಾರಣಕ್ಕೆ ಬಂದಿದ್ದರು ಎನ್ನುವ ಮಾಹಿತಿ ನನಗಿಲ್ಲ ಎಂದರು.

    ಈಗಾಗಲೇ ಎಚ್.ಡಿ.ಕುಮಾರಸ್ವಾಮಿ ಅಧಿಕಾರಲ್ಲಿ ಇರುವಾಗಲೇ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆಗಬೇಕು ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಸಿಎಂ ಕುಮಾರಸ್ವಾಮಿಗೆ ಶೀಘ್ರವೇ ಕಾಂಗ್ರೆಸ್ ತಲಾಖ್ ತಲಾಖ್ ತಲಾಖ್ ಅಂತ ಹೇಳಲಿದೆ. ಸೋಡಾ ಚೀಟಿ ಪಡೆಯಲು ಕುಮಾರಸ್ವಾಮಿ ಸಿದ್ಧರಾಗಿರಲಿ ಎಂದು ಲೇವಡಿ ಮಾಡಿದ್ದಾರೆ.

    ನಿನ್ನೆ ಆಗಿದ್ದೇನು?:
    ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಗೂ ಬಾರದೇ ಚಕ್ಕರ್ ಹೊಡೆದಿದ್ದ ಜಾರಕಿಹೊಳಿ, ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ಪಕ್ಕದಲ್ಲೇ ಕುಳಿತು ರಾತ್ರಿಯ ಭೋಜನ ಸವಿದರು. ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಆಯೋಜಿಸಿದ್ದ ಭೋಜನ ಕೂಟದಲ್ಲಿ ಪಾಲ್ಗೊಳ್ಳದ ರಮೇಶ್ ಜಾರಕಿಹೊಳಿ ಬಿಜೆಪಿ ಪರಿಷತ್ ಸದಸ್ಯ ಮಹಾಂತೇಶ್ ಕವಟಗಿಮಠ ಆಯೋಜಿಸಿದ್ದ ಡಿನ್ನರ್ ನಲ್ಲಿ ಯಡಿಯೂರಪ್ಪ, ಕತ್ತಿ ಜೊತೆ ಒಂದೇ ಟೇಬಲ್‍ನಲ್ಲಿ ಕುಳಿತು ಚರ್ಚೆ ನಡೆಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೈ ಶಾಸಕಾಂಗ ಸಭೆಗೆ ಚಕ್ಕರ್ ಹಾಕಿದ್ದ ಜಾರಕಿಹೊಳಿ ಬಿಜೆಪಿ ನಾಯಕರ ಔತಣಕೂಟದಲ್ಲಿ ಹಾಜರ್!

    ಕೈ ಶಾಸಕಾಂಗ ಸಭೆಗೆ ಚಕ್ಕರ್ ಹಾಕಿದ್ದ ಜಾರಕಿಹೊಳಿ ಬಿಜೆಪಿ ನಾಯಕರ ಔತಣಕೂಟದಲ್ಲಿ ಹಾಜರ್!

    ಬೆಳಗಾವಿ: ಕಾಂಗ್ರೆಸ್‍ನಲ್ಲಿ ಕ್ಷಣಕ್ಷಣಕ್ಕೂ ಬಂಡಾಯ ಬಾವುಟ ಹಾರಿಸುತ್ತಲೇ ಇರುವ ಪೌರಾಡಳಿತ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ನಾಯಕರ ರಾತ್ರಿಯ ಊಟದಲ್ಲಿ ದಿಢೀರ್ ಆಗಿ ಕಾಣಿಸಿಕೊಂಡಿದ್ದಾರೆ.

    ಮಂಗಳವಾರ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದಿದ್ದ ಶಾಸಕಾಂಗ ಪಕ್ಷದ ಸಭೆಗೂ ಬಾರದೇ, ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಗೂ ಬಾರದೇ ಚಕ್ಕರ್ ಹೊಡೆದಿದ್ದ ಜಾರಕಿಹೊಳಿ ಯಡಿಯೂರಪ್ಪ ಪಕ್ಕದಲ್ಲೇ ಕುಳಿತು ರಾತ್ರಿಯ ಭೋಜನ ಸವಿದರು.

    ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಆಯೋಜಿಸಿದ್ದ ಭೋಜನ ಕೂಟದಲ್ಲಿ ಪಾಲ್ಗೊಳ್ಳದ ರಮೇಶ್ ಜಾರಕಿಹೊಳಿ ಬಿಜೆಪಿ ಪರಿಷತ್ ಸದಸ್ಯ ಮಹಾಂತೇಶ್ ಕವಟಗಿಮಠ ಆಯೋಜಿಸಿದ್ದ ಡಿನ್ನರ್ ನಲ್ಲಿ ಯಡಿಯೂರಪ್ಪ, ಕತ್ತಿ ಜೊತೆ ಒಂದೇ ಟೇಬಲ್‍ನಲ್ಲಿ ಕುಳಿತು ಚರ್ಚೆ ಮಾಡಿದ್ದಾರೆ.

    ಸಂಪುಟ ವಿಸ್ತರಣೆಯೇ? ವಿಸರ್ಜನೆಯೋ ಎನ್ನುವುದು ಡಿಸೆಂಬರ್ 22ರಂದು ತಿಳಿಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ. ಸಂಪುಟ ವಿಸ್ತರಣೆ ಮತ್ತು ಸಚಿವ ಸ್ಥಾನ ಸಂಬಂಧ ಕಾಂಗ್ರೆಸ್‍ನಲ್ಲಿ ತೀವ್ರಗೊಂಡಿರುವ ಅಸಮಾಧಾನದ ಹೊತ್ತಲ್ಲೇ ರಮೇಶ್ ಅವರ ನಡೆಯಿಂದ ಮಹತ್ವ ಹೆಚ್ಚಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ- ನೋಡ ನೋಡುತ್ತಿದ್ದಂತೆ ಸುಟ್ಟುಹೋಯ್ತು 10 ಎಕ್ರೆ ಬೆಳೆ

    ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ- ನೋಡ ನೋಡುತ್ತಿದ್ದಂತೆ ಸುಟ್ಟುಹೋಯ್ತು 10 ಎಕ್ರೆ ಬೆಳೆ

    ಸಾಂದರ್ಭಿಕ ಚಿತ್ರ

    ಬೆಳಗಾವಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಟಾವಿಗೆ ಬಂದಿದ್ದ ಸುಮಾರು 10 ಕ್ಕೂ ಹೆಚ್ಚು ಎಕರೆ ಕಬ್ಬು ಬೆಂಕಿಗೆ ಆಹುತಿಯಾದ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಂದೂರಟೇಕ ಗ್ರಾಮದಲ್ಲಿ ನಡೆದಿದೆ.

    ಇಂದು ಮಧ್ಯಾಹ್ನದ ವೇಳೆ ಚಂದೂರಟೇಕ ಗ್ರಾಮದ ಕಬ್ಬಿನ ಗದ್ದೆಯಲ್ಲಿದ್ದ ಟ್ರಾನ್ಸ್‌ಫಾರ್ಮರ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿತ್ತು. ಬಳಿಕ ಸುತ್ತಲಿದ್ದ ಗ್ರಾಮದ ಸುಕುಮಾರ ಚೌಗಲೆ, ಮಹಾವೀರ ಚೌಗಲೆ, ಧನಂಜಯ ಚೌಗಲೆ,ಬಾಳಾಸಾಬ ಚೌಗಲೆ, ರಾಜು ಚೌಗಲೆ, ಸಾಗರ ಚೌಗಲೆ ಸೇರಿದಂತೆ 7 ಕ್ಕಿಂತ ಹೆಚ್ಚು ರೈತರ 10 ಎಕರೆಗೂ ಅಧಿಕ ಕಬ್ಬು ಸುಟ್ಟು ಕರಕಲಾಗಿದೆ.

    ಬೆಂಕಿಯನ್ನು ಕಂಡು ರೈತರು ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟರು ಯಾವುದೇ ಪ್ರಯೋಜನವಾಗಿಲ್ಲ. ನೋಡು ನೋಡುತ್ತಲೇ ಬೆಳೆದು ನಿಂತಿದ್ದ ಕಬ್ಬು ಧಗಧಗನೆ ಉರಿದು ಸುಟ್ಟು ಕರಕಲಾಗಿವೆ. ಪರಿಣಾಮ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

    ಇತ್ತೀಚೆಗೆ ಇದೇ ಗ್ರಾಮದಲ್ಲಿ 60 ಎಕರೆ ಕಬ್ಬು ಬೆಂಕಿಗೆ ಆಹುತಿಯಾಗಿತ್ತು. ಘಟನೆ ಸಂಬಂಧ ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಆರಂಭದಲ್ಲಿ ಸಿಎಲ್‍ಪಿ ಸಭೆಗೆ ಬರ್ತೀನಿ ಎಂದಿದ್ದ ಸಿಎಂ ಗೈರಾಗುತ್ತಿರೋದು ಯಾಕೆ?

    ಆರಂಭದಲ್ಲಿ ಸಿಎಲ್‍ಪಿ ಸಭೆಗೆ ಬರ್ತೀನಿ ಎಂದಿದ್ದ ಸಿಎಂ ಗೈರಾಗುತ್ತಿರೋದು ಯಾಕೆ?

    ಬೆಳಗಾವಿ: ಇಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ(ಸಿಎಲ್‍ಪಿ) ನಡೆಯಲಿದ್ದು ಮುಖ್ಯಮಂತ್ರಿ ಕುಮಾರಸ್ವಾಮಿ ಗೈರಾಗಲಿದ್ದಾರೆ.

    ಮೈತ್ರಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕರ ಅತೃಪ್ತಿ ಹಿನ್ನೆಲೆಯಲ್ಲಿ ಸಿಎಂ ಮುಂದೆಯೇ ನಿಮ್ಮ ಸಮಸ್ಯೆ ಬಗೆಹರಿಸಿಕೊಳ್ಳಿ ಅಂತ ಸಿದ್ದರಾಮಯ್ಯ ಈ ಸಭೆ ಕರೆದಿದ್ದಾರೆ. ಮೊದಲಿಗೆ ಸಭೆಗೆ ಬಂದು ಶಾಸಕರ ಕಷ್ಟ ಕೇಳುತ್ತೇನೆ ಎಂದಿದ್ದ ಸಿಎಂ ಕುಮಾರಸ್ವಾಮಿ ಕೊನೇ ಘಳಿಗೆಯಲ್ಲಿ ಕೈ ಎತ್ತಿದ್ದಾರೆ. ತಿರುಪತಿ ಪ್ರವಾಸದ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ಸಭೆಗೆ ಬರಲು ಆಗುತ್ತಿಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ತಿಳಿಸಿದ್ದಾರೆ. ಹೀಗಾಗಿ ಬೇರೆ ದಾರಿ ಇಲ್ಲದೇ ಸಿದ್ದರಾಮಯ್ಯ ತಾವೇ ಶಾಸಕರ ಕಷ್ಟ ಆಲಿಸಲು ನಿರ್ಧರಿಸಿದ್ದಾರೆ.

    ಪ್ರಮುಖವಾಗಿ ಇಂದಿನ ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ, ಶಾಸಕರ ಕ್ಷೇತ್ರಗಳಲ್ಲಿ ಅನುದಾನದ ಕೊರತೆ, ಕೆಲಸಗಳು ಸ್ಥಗಿತಗೊಂಡಿರುವ ಬಗ್ಗೆ ಚರ್ಚೆ ನಡೆಯಲಿದೆ. ಈ ಮಧ್ಯೆ ಇಂದು ರಾತ್ರಿ ಸರ್ವಪಕ್ಷ ಶಾಸಕರಿಗೆ ಡಿಕೆ ಶಿವಕುಮಾರ್ ಭೋಜನಕೂಟ ಆಯೋಜಿಸಿದ್ದಾರೆ. ಇಷ್ಟು ವರ್ಷ ಬೆಳಗಾವಿ ಅಧಿವೇಶನ ನಡೆದಾಗ ಜಾರಕಿಹೊಳಿ ಸಹೋದರರು ಭೋಜನಕೂಟ ಏರ್ಪಡಿಸುತ್ತಿದ್ದರು. ಆದರೆ ಈ ಬಾರಿ ಡಿಕೆ ಶಿವಕುಮಾರ್ ಆಯೋಜಿಸಿದ್ದು, ಅದಕ್ಕೆ ಜಾರಕಿಹೊಳಿ ಸಹೋದರರು ಹೋಗ್ತಾರಾ ಇಲ್ವಾ ಎನ್ನುವ ಚರ್ಚೆ ಶುರುವಾಗಿದೆ.

    ತಿರುಪತಿಯಲ್ಲಿ ಸಿಎಂ:
    ದೇವೇಗೌಡರ ಕುಟುಂಬ ನಸುಕಿನ ಜಾವವೇ ವೈಕುಂಠ ಏಕಾದಶಿ ಪೂಜೆಯಲ್ಲಿ ಪಾಲ್ಗೊಂಡಿದೆ. ವೈಕುಂಠ ಏಕಾದಶಿಯಂದು ಮೊದಲ ಪೂಜೆ ಮಾಡಿದರೆ ತುಂಬಾ ಒಳ್ಳೆಯದು ಎನ್ನುವ ನಂಬಿಕೆ. ಈ ಹಿನ್ನೆಲೆಯಲ್ಲಿ ತಿರುಪತಿಯಲ್ಲಿ ಬೆಳಗ್ಗೆ 3-30ಕ್ಕೆ ವೈಕುಂಠ ಏಕಾದಶಿಯ ಮೊದಲ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಮಕ್ಕಳು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ತಿಮ್ಮಪ್ಪನ ಸನ್ನಿಧಾನದಲ್ಲಿ ಪೂಜೆ ಸಲ್ಲಿಸಿದ್ದಾರೆ.

    ಸೋಮವಾರ ಕಾಂಗ್ರೆಸ್ ಮುಖ್ಯಮಂತ್ರಿಗಳ ಪ್ರಮಾಣವಚನದಲ್ಲಿ ಪಾಲ್ಗೊಂಡಿದ್ದ ಕುಮಾರಸ್ವಾಮಿ ಮತ್ತು ದೇವೇಗೌಡರು ಭೋಪಾಲ್ ನಿಂದ ತಿರುಪತಿಗೆ ಆಗಮಿಸಿದ್ದರು. ಇತ್ತ ಎರಡು ವಿಶೇಷ ವಿಮಾನದಲ್ಲಿ ಕುಟುಂಬದ ಉಳಿದ ಸದಸ್ಯರು ತಿರುಪತಿಗೆ ತೆರಳಿದ್ದರು.

     

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಾಂಗ್ರೆಸ್ ಸಚಿವರ ಮೇಲೆ ಅಸಮಾಧಾನ ಹೊರ ಹಾಕಿದ ಬಸವರಾಜ ಹೊರಟ್ಟಿ

    ಕಾಂಗ್ರೆಸ್ ಸಚಿವರ ಮೇಲೆ ಅಸಮಾಧಾನ ಹೊರ ಹಾಕಿದ ಬಸವರಾಜ ಹೊರಟ್ಟಿ

    ಬೆಳಗಾವಿ: ಕಳೆದ ಸರ್ಕಾರದ ಮಂತ್ರಿಗಳು ಕೇವಲ ಜನರಿಗೆ ಆಶ್ವಾಸನೆ ಕೊಟ್ಟಿದ್ದಾರೆ. ಅದನ್ನು ಬಿಟ್ಟು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಇಂದು ಬೆಳಗಾವಿಯ ಸುವರ್ಣ ಸೌಧದ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಆಗಮಿಸಿದ ಬಸವರಾಜ್ ಹೊರಟ್ಟಿ ಪ್ರತಿಭಟನಾಕಾರರ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಸಚಿವೆ ಜಯಮಾಲಾ ಅವರೊಂದಿಗೆ ಚರ್ಚೆ ನಡೆಸುತ್ತೇನೆ. ನಿಮ್ಮ ಪರ 4 ಮುಖಂಡರು ಕೂಡ ಮನವಿಯೊಂದಿಗೆ ಬನ್ನಿ ಸಮಸ್ಯೆ ಬಗ್ಗೆ ಚರ್ಚೆ ನಡೆಸಿ ಪರಿಹಾರ ನೀಡೋಣ ಎಂದು ಆಶ್ವಾಸನೆ ನೀಡಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ, ಸರ್ಕಾರದ ಸಚಿವರು ಜನರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸಬೇಕು. ಆದರೆ ಕಳೆದ ಕಾಂಗ್ರೆಸ್ ಸರ್ಕಾರದ ಮಂತ್ರಿಗಳು ಕೇವಲ ಆಶ್ವಾಸನೆ ಕೊಟ್ಟಿದ್ದಾರೆ ಅಷ್ಟೇ. ಮಾಜಿ ಸಚಿವೆ ಉಮಾಶ್ರೀ ಅವರು ಕೂಡ ಆಶ್ವಾಸನೆ ಕೊಟ್ಟು ಹೋದರು ಎಂದು ಪರೋಕ್ಷವಾಗಿ ಈ ಹಿಂದಿನ ಕಾಂಗ್ರೆಸ್ ಸಚಿವರ ವಿರುದ್ಧ ಅಸಮಾಧಾನ ಹೊರಹಾಕಿದರು.

    ಸಚಿವ ಸ್ಥಾನ ಕುರಿತು ಪ್ರಶ್ನೆಗೆ ಉತ್ತರಿಸಿದ ಅವರು, ಸಚಿವ ಸ್ಥಾನ ಪಡೆಕೊಳ್ಳಲು ನನ್ನ ಬಳಿ ಏನೂ ಇಲ್ಲಾ ಪಕ್ಷದ ವರಿಷ್ಠರಾದ ದೇವಗೌಡ ಹಾಗೂ ಕುಮಾರಸ್ವಾಮಿ ಅವರ ಬಳಿ ಇದೆ. ಅವರ ಕಷ್ಟ ಅವರಿಗೆ ಮಾತ್ರ ಗೊತ್ತು. ಅದ್ದರಿಂದ ನಾನು ಯಾರ ಮೇಲೂ ಆರೋಪ ಮಾಡುವುದಿಲ್ಲ. ಈಗಿನ ರಾಜಕೀಯ ವ್ಯವಸ್ಥೆಯೇ ಸರಿಯಾಗಿಲ್ಲ ಎಂದರು. ಬಳಿಕ ಕುಮಾರಸ್ವಾಮಿ ಮಧ್ಯ ಪ್ರದೇಶ ಸಿಎಂ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತೆರಳಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಮಾಜಿ ಸಿಎಂ ಯಡಿಯೂರಪ್ಪ ಅವರು ಕೂಡ ಅನೇಕ ಬಾರಿ ಸದನ ತಪ್ಪಿಸಿ ಹೋಗಿದ್ದಾರೆ. ಅದರಂತೆ ಸಿಎಂ ಕುಮಾರಸ್ವಾಮಿ ಸದನ ತಪ್ಪಿಸಿ ಹೋಗಿದ್ದು ತಪ್ಪೇನಿಲ್ಲ. ಆದರೆ ಪದೇ ಪದೇ ಇದು ಪುನರಾವರ್ತನೆ ಆಗಬಾರದು ಅಷ್ಟೇ ಎಂದರು.

    ಬೆಳಗಾವಿಯಲ್ಲಿ ಅಧಿವೇಶನ ಇನ್ನೂ ಎರಡು ದಿನ ನಡೆಯಬೇಕು ಎಂಬ ಆಸೆ ನನಗೂ ಇದೆ. ಸದನ ಆರಂಭದಲ್ಲೇ ನಾನು ಈ ಕುರಿತು ಚರ್ಚೆ ನಡೆಸಿದ್ದೆ. ಆದರೆ ನನ್ನ ಮಾತು ಯಾರು ಕೇಳುತ್ತಿಲ್ಲ ಎಂದು ತಮ್ಮ ಅಸಹಾಯಕತೆ ಹೊರ ಹಾಕಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv