Tag: belagavi

  • ಬೆಳಗಾವಿ ರಾಜಕಾರಣಕ್ಕೆ ಬ್ರೇಕ್ ಹಾಕಲು ಸಿಎಂ ಹೊಸ ತಂತ್ರ!

    ಬೆಳಗಾವಿ ರಾಜಕಾರಣಕ್ಕೆ ಬ್ರೇಕ್ ಹಾಕಲು ಸಿಎಂ ಹೊಸ ತಂತ್ರ!

    ಬೆಂಗಳೂರು: ಬೆಳಗಾವಿಯ ರಾಜಕಾರಣಕ್ಕೆ ಬ್ರೇಕ್ ಹಾಕಲು ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಅವರು ಹೊಸ ತಂತ್ರ ಹೂಡಿದ್ದಾರೆ ಎನ್ನಲಾಗಿದೆ.

    ಜಿಲ್ಲೆಯನ್ನು ಮೂರು ಭಾಗವಾಗಿ ವಿಭಜನೆ ಮಾಡಲು ಗಂಭೀರ ಚಿಂತನೆ ನಡೆಸಲಾಗಿದೆ. ಹೀಗಾಗಿ ಹೊಸ ಜಿಲ್ಲೆಯಾಗಿ ಗೋಕಾಕ್, ಚಿಕ್ಕೋಡಿ ರಚನೆ ಮಾಡಲು ಮುಖ್ಯಮಂತ್ರಿಯವರು ಈಗಾಗಲೇ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದಾರೆ ಎಂಬುದಾಗಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.


    ಜಿಲ್ಲೆ ವಿಭಜನೆ ಆದ್ರೆ ರಾಜಕೀಯ ಸಮಸ್ಯೆಗೆ ಕಡಿವಾಣ ಹಾಕಿದಂತಾಗುತ್ತದೆ. 3 ಲೋಕಸಭಾ ಕ್ಷೇತ್ರ ವ್ಯಾಪ್ತಿ ಹೊಂದಿರೋ ಬೆಳಗಾವಿ ಜಿಲ್ಲೆ ಸದ್ಯ 18 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಜಿಲ್ಲೆಯಲ್ಲಿ 10 ಜನ ಬಿಜೆಪಿ ಶಾಸಕರು, 8 ಜನ ಕಾಂಗ್ರೆಸ್ ಶಾಸಕರು ಇದ್ದಾರೆ.

    ಬೆಳಗಾವಿ ಕೇಂದ್ರಿಕೃತ ರಾಜಕಾರಣಕ್ಕೆ ಕಡಿವಾಣ ಸಾಧ್ಯತೆಗಳಿವೆ. ಗಡಿ ವಿವಾದ ಹಿನ್ನೆಲೆಯಲ್ಲಿ ಜಿಲ್ಲಾ ವಿಭಜನೆ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಮ್ಮ ಶಾಸಕರಿಗೆ ಆಮಿಷ ಒಡ್ಡುವುದನ್ನು ನಿಲ್ಸಿ, ಇಲ್ದೆ ಇದ್ರೆ ನಿಮ್ಮ ವಿಕೆಟ್ ಪತನ- ಬಿಜೆಪಿಗೆ ಗುಂಡೂರಾವ್ ಎಚ್ಚರಿಕೆ

    ನಮ್ಮ ಶಾಸಕರಿಗೆ ಆಮಿಷ ಒಡ್ಡುವುದನ್ನು ನಿಲ್ಸಿ, ಇಲ್ದೆ ಇದ್ರೆ ನಿಮ್ಮ ವಿಕೆಟ್ ಪತನ- ಬಿಜೆಪಿಗೆ ಗುಂಡೂರಾವ್ ಎಚ್ಚರಿಕೆ

    ಬೆಂಗಳೂರು: ಆಪರೇಷನ್ ಕಮಲದ ಭೀತಿಗೆ ಬೆಚ್ಚಿಬಿದ್ದಿರುವ ಕೆಪಿಸಿಸಿ ಇಂದು ಬಳ್ಳಾರಿ ಭಾಗದ ಕಾಂಗ್ರೆಸ್ ಶಾಸಕರಿಗೆ ಕೆಪಿಸಿಸಿ ಕಚೇರಿಗೆ ಬರುವಂತೆ ಬುಲಾವ್ ನೀಡಿತ್ತು. ಅದರಂತೆ ಮಧ್ಯಾಹ್ನ ಹೊಸಪೇಟೆ ಶಾಸಕ ಆನಂದ್ ಸಿಂಗ್, ಬಳ್ಳಾರಿ ಗ್ರಾಮಾಂತರ ಶಾಸಕ ನಾಗೇಂದ್ರ ಬಂದಿದ್ದರು.

    ಬಳಿಕ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು, ನಮ್ಮ ಯಾವುದೇ ಶಾಸಕರು ಪಕ್ಷ ಬಿಟ್ಟು ಹೋಗುವುದಿಲ್ಲ. ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಯ ನಮ್ಮ ಶಾಸಕರು ಬಿಜೆಪಿಗೆ ಹೋಗುವುದಿಲ್ಲ. ಬಿಜೆಪಿಯವರೇ ಅನೈತಿಕ ರಾಜಕಾರಣ ಶುರುಮಾಡಿದ್ದಾರೆ, ನಮ್ಮ ಅನೇಕ ಶಾಸಕರನ್ನು ಸಂಪರ್ಕ ಮಾಡಿದ್ದಾರೆ ಅಂತಾ ಆರೋಪಿಸಿದರು.

    ನಮ್ಮ ಪಕ್ಷದ ಶಾಸಕರಿಗೆ ಆಮಿಷ ಒಡ್ಡುವುದು ಹಾಗೂ ಮಾನಸಿಕ ಕಿರುಕುಳ ಕೊಡುವುದನ್ನು ನಿಲ್ಲಿಸಿ. ಇಲ್ಲದೇ ಹೋದರೆ ನಿಮ್ಮ ವಿಕೆಟ್‍ಗಳು ಪತನವಾಗತ್ತವೆ ಎಂದು ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದರು. ಇದನ್ನು ಓದಿ: ಬಳ್ಳಾರಿಯ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಜಂಪ್ ಆಗ್ತಾರಾ..? 

    ನಮ್ಮ ಪಕ್ಷಕ್ಕೆ ಬಿಜೆಪಿ ಶಾಸಕರು ಬರಲು ಸಿದ್ಧರಾಗಿದ್ದಾರೆ. ಈಗಾಗಲೇ ಕಾಂಗ್ರೆಸ್ಸಿಗೆ ಇಬ್ಬರು ಹಾಗೂ ಜೆಡಿಎಸ್‍ಗೆ ಐವರು ಬಿಜೆಪಿ ಶಾಸಕರು ಬರಲು ತಯಾರಾಗಿದ್ದಾರೆ. ಬಿಜೆಪಿಯ ಆಂತರಿಕ ಕಚ್ಚಾಟದಿಂದ ಅವರ ಶಾಸಕರು ಬೇಸತ್ತಿದ್ದಾರೆ. ಬಿಜೆಪಿಯವರು ನಮ್ಮ ಶಾಸಕರನ್ನು ಸೆಳೆದರೆ ನಾವು ಸಹಾ ತಿರುಗೇಟು ಕೊಡಬೇಕಾಗುತ್ತದೆ ಅಂತ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದರು.

    ಬಿಜೆಪಿಯವರು ಪದೇ ಪದೇ ನನ್ನ ಹೆಸರನ್ನು ಪ್ರಸ್ತಾಪ ಮಾಡುತ್ತಿದ್ದಾರೆ ಯಾಕೆ ಎನ್ನುವುದು ನನಗೆ ಗೊತ್ತಿಲ್ಲ. ಸಚಿವ ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲೆಯ ಸಮಸ್ಯೆಗಳನ್ನು ಪಕ್ಷದ ವರಿಷ್ಠರ ಗಮನಕ್ಕೆ ತಂದಿದ್ದಾರೆ. ಸಚಿವರ ಜೊತೆ ನಾವೆಲ್ಲರೂ ಒಟ್ಟಾಗಿ ಇರುತ್ತೇವೆ. ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಪ್ರಭಾವಿ ನಾಯಕರು. ಅವರ ಜೊತೆಗೂ ನಾವೆಲ್ಲ ಆತ್ಮೀಯತೆ ಹೊಂದಿದ್ದೇವೆ. ಅವರು ನಮ್ಮ ಜಿಲ್ಲೆಗೆ ಆಗಮಿಸಿದಾಗ ಒಟ್ಟಾಗಿ ಸ್ವಾಗತಿಸಿದ್ದೇವೆ ಎಂದು ಬಳ್ಳಾರಿ ಗ್ರಾಮಾಂತರ ಶಾಸಕ ನಾಗೇಂದ್ರ ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ಪೌರ ಕಾರ್ಮಿಕರ ಮೇಲೆ ತಹಶೀಲ್ದಾರ್ ಮುಂದೆಯೇ ಹಲ್ಲೆಗೆ ಯತ್ನ!

    ಪೌರ ಕಾರ್ಮಿಕರ ಮೇಲೆ ತಹಶೀಲ್ದಾರ್ ಮುಂದೆಯೇ ಹಲ್ಲೆಗೆ ಯತ್ನ!

    ಚಿಕ್ಕೋಡಿ: ಪಿಒಪಿ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಳ್ಳಲು ಮುಂದಾದ ಪೌರ ಕಾರ್ಮಿಕರನ್ನು ತಹಶೀಲ್ದಾರ್ ಮುಂದೆಯೇ ತಯಾರಕರು ಹಲ್ಲೆಗೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದಲ್ಲಿ ನಡೆದಿದೆ.

    ಅಥಣಿ ಪಟ್ಟಣದಲ್ಲಿ ಪಿಒಪಿ ಗಣೇಶ ಮೂರ್ತಿಯನ್ನು ತಯಾರಿಸುತ್ತಿದ್ದಾರೆ ಎನ್ನುವ ಮಾಹಿತಿ ಪುರಸಭೆ ಅಧಿಕಾರಿಗಳಿಗೆ ಸಿಕ್ಕಿತ್ತು. ಹೀಗಾಗಿ ಇಂದು ತಹಶೀಲ್ದಾರ್ ಎಂ.ಎನ್.ಬಳಿಗಾರ ಅವರು ಪುರಸಭೆಯ ಮುಖ್ಯಾಧಿಕಾರಿ ಹಾಗೂ ಪೌರ ಕಾರ್ಮಿಕರ ನೇತೃತ್ವದಲ್ಲಿ ಅಕ್ರಮವಾಗಿ ಪಿಒಪಿ ಗಣೇಶ ಮೂರ್ತಿ ತಯಾರಿಸುತ್ತಿದ್ದ ಅಡ್ಡೆಯ ಮೇಲೆ ದಾಳಿ ಮಾಡಿದ್ದರು.

    ಅಧಿಕಾರಿಗಳ ದಾಳಿಗೆ ಹೆದರಿದ ತಯಾರಕರು, ಎಲ್ಲಿ ತಮ್ಮ ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆಯುತ್ತಾರೆ ಎಂದು ತಿಳಿದು ಅಧಿಕಾರಿಗಳ ಜೊತೆಗೆ ಜಗಳಕ್ಕೆ ಇಳಿದಿದ್ದಾರೆ. ಮಾತಿನ ಚಕಮಕಿ ಮುಂದುವರಿದ ಪರಿಣಾಮ ತಯಾರಕರು ಹಾಗೂ ಪೌರಕಾರ್ಮಿಕರು ಕೈ ಕೈ ಮಿಲಾಯಿಸಿದ್ದಾರೆ. ಈ ವೇಳೆ ಗದ್ದಲ ಉಂಟಾಗಿ, ನೂಕಾಟದಲ್ಲಿ ಕೆಲವರು ಕೆಳಗೆ ಬಿದ್ದು ಗಾಯಗೊಂಡಿದ್ದಾರೆ.

    ಮಾಹಿತಿ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಇದಾದ ಬಳಿಕ ಅಥಣಿ ಪುರಸಭೆಯಲ್ಲಿ ಸಭೆ ನಡೆಸಿ ತಿಳುವಳಿಕೆ ಹೇಳಿ, ಪಿಒಪಿ ಮೂರ್ತಿ ಮಾರಾಟ ಮಾಡದಂತೆ ಮನವಿ ಮಾಡಿಕೊಂಡಿದ್ದಾರೆ. ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಜಾರಕಿಹೊಳಿ ಸಹೋದರರಿಂದ ಸರ್ಕಾರಕ್ಕೆ 4 ಷರತ್ತು!

    ಜಾರಕಿಹೊಳಿ ಸಹೋದರರಿಂದ ಸರ್ಕಾರಕ್ಕೆ 4 ಷರತ್ತು!

    ಬೆಂಗಳೂರು: ಬೆಳಗಾವಿ ವಿಚಾರವಾಗಿ ಮುನಿಸಿಕೊಂಡಿರುವ ಜಾರಕಿಹೊಳಿ ಸಹೋದರರು ಪಕ್ಷ ಬಿಟ್ಟು ಹೋಗದಂತೆ ಮಾಡಲು ತಮ್ಮದೇ ಆದ ನಾಲ್ಕು ಷರತ್ತುಗಳನ್ನು ಸಮ್ಮಿಶ್ರ ಸರ್ಕಾರದ ಮುಂದೆ ಇಟ್ಟಿದ್ದಾರಂತೆ.

    ಹೌದು, ಬೆಳಗಾವಿಯ ಪಿಎಲ್‍ಡಿ ಬ್ಯಾಂಕ್ ಚುನಾವಣೆ ನಡೆಯಿಂದ ಮುನಿಸಿಕೊಂಡಿರುವ ಸತೀಶ್ ಜಾರಕಿಹೊಳಿ ಹಾಗೂ ರಮೇಶ್ ಜಾರಕಿಹೊಳಿ ಸಹೋದರರು ಕಾಂಗ್ರೆಸ್ ಬಿಡುವ ಯೋಚನೆಗೆ ಕೈ ಹಾಕಿರುವುದಾಗಿ ಮಾಹಿತಿ ಲಭಿಸಿದೆ. ಒಂದು ವೇಳೆ ಸಹೋದರರು ಪಕ್ಷದಲ್ಲಿಯೇ ಉಳಿಯಬೇಕಾದರೆ ಅವರ 4 ಷರತ್ತುಗಳನ್ನು ಪೂರೈಸುವಂತೆ ಕೆಪಿಸಿಸಿ ಹಾಗೂ ಸಿಎಂ ಕುಮಾರಸ್ವಾಮಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ ಎಂದು ಹೇಳಲಾಗಿದೆ.

    ಅಲ್ಲದೇ ರಾಜ್ಯ ಉಸ್ತುವಾರಿ ವೇಣುಗೋಪಾಲ್, ಡಿಸಿಎಂ ಪರಮೇಶ್ವರ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್‍ರೊಂದಿಗೆ ದೂರವಾಣಿಯಲ್ಲಿ ಸಂಪರ್ಕಿಸಿದಾಗಲೂ ಸಹೋದರರು ಈ ನಾಲ್ಕು ಷರತ್ತುಗಳನ್ನು ಮುಂದಿಟ್ಟಿರುವುದಾಗಿ ತಿಳಿದು ಬಂದಿದೆ.

    ಷರತ್ತುಗಳು ಏನು?
    1. ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಇತರೆ ಯಾರೇ ಆದರೂ ಬೆಳಗಾವಿ ಜಿಲ್ಲೆಯ ಆಂತರಿಕ ರಾಜಕೀಯ ವಿಷಯಕ್ಕೆ ತಲೆ ಹಾಕದಂತೆ ನೋಡಿಕೊಳ್ಳಬೇಕು.
    2. ಬೆಳಗಾವಿ ಜಿಲ್ಲೆಯಲ್ಲಿ ನಮ್ಮ ನಿರ್ಣಯವೇ ಅಂತಿಮ. ಪಕ್ಷ ಹಾಗೂ ಸರ್ಕಾರ ಎರಡರ ಹಿತ ಕಾಯುವುದು ನಮ್ಮ ಜವಾಬ್ದಾರಿ. ಆದರೆ ಅದಕ್ಕೆ ಧಕ್ಕೆ ಬರಬಾರದು ಅಂದರೆ ನಾವು ಹೇಳಿದ ಮಾತಿಗೆ ಆದ್ಯತೆ ನೀಡಬೇಕು.
    3. ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ವಾಲ್ಮೀಕಿ ನಾಯಕ ಜನಾಂಗಕ್ಕೆ ಸೇರಿದ ಶಾಸಕರೊಬ್ಬರಿಗೆ ಸಚಿವ ಸ್ಥಾನ ಕಲ್ಪಿಸಿಕೊಡಬೇಕು.
    4. ನಮ್ಮ ಬೆಂಬಲಿತ ಮೂರರಿಂದ ನಾಲ್ಕು ಜನ ಶಾಸಕರಿಗೆ ಒಳ್ಳೆಯ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು.

    ಈ ಮೇಲ್ಕಂಡ ಒಟ್ಟು 4 ಷರತ್ತುಗಳನ್ನು ಜಾರಕಿಹೊಳಿ ಸಹೋದರರು ಪ್ರಮುಖವಾಗಿ ಎಐಸಿಸಿ ಹಾಗೂ ಕೆಪಿಸಿಸಿ ನಾಯಕರ ಮುಂದಿಟ್ಟಿದ್ದಾರೆ. ಹೀಗಾಗಿ ರಾಜ್ಯ ಕಾಂಗ್ರೆಸ್ ನಾಯಕರು ಮೊದಲೆರಡು ಷರತ್ತುಗಳಿಗೆ ಅಸ್ತು ಎಂದು, ಬೆಳಗಾವಿ ವಿಷಯದಲ್ಲಿ ಯಾರು ಕೂಡ ಹಸ್ತಕ್ಷೇಪ ಮಾಡಲ್ಲ. ಬೆಳಗಾವಿಯಲ್ಲಿನ ಪಕ್ಷ ಹಾಗೂ ಸರ್ಕಾರದ ಜವಾಬ್ದಾರಿ ನಿಮ್ಮದೆ ಎಂದಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗಿವೆ.

    ಸಂಪುಟ ವಿಸ್ತರಣೆಯಲ್ಲಿ ಸಾಮಾಜಿಕ ನ್ಯಾಯ ಎತ್ತಿ ಹಿಡಿಯಬೇಕಿದೆ. ಹೀಗಾಗಿ ಜಾತಿವಾರು ಹಾಗೂ ಪ್ರದೇಶವಾರು ಲೆಕ್ಕಾಚಾರದಲ್ಲಿ ವಾಲ್ಮೀಕಿ ನಾಯಕ ಜನಾಂಗಕ್ಕೆ ಅನ್ಯಾಯವಾಗಿದ್ದರೆ, ಅದನ್ನು ಪರಿಶೀಲಿಸಿ ನ್ಯಾಯ ಒದಗಿಸಲಾಗುವುದು. ಇನ್ನು ನಿಗಮ ಮಂಡಳಿ ವಿಚಾರದಲ್ಲಿ ಅರ್ಹರಿಗೆ 2-3 ಬಾರಿ ಗೆದ್ದವರಿಗೆ ಆದ್ಯತೆ ನೀಡಬೇಕಿದೆ. ಅದರಲ್ಲಿ ನಿಮ್ಮ ಬೆಂಬಲಿಗರು ಇದ್ದರೆ ಕಂಡಿತ ಅವಕಾಶ ಸಿಗಲಿದೆ ಎಂದು ತಿಳಿಸಿದ್ದಾರಂತೆ.

    ಎಐಸಿಸಿ ಹಾಗೂ ಕೆಪಿಸಿಸಿ ಪ್ರಮುಖ ನಾಯಕರು ಜಾರಕಿಹೊಳಿ ಸಹೋದರರು ಮುಂದಿಟ್ಟಿದ್ದ ನಾಲ್ಕು ಷರತ್ತುಗಳ ಪೈಕಿ ಎರಡಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದು, ಇನ್ನುಳಿದ ಷರತ್ತುಗಳಿಗೆ ಸ್ವಲ್ಪ ಸಮಯ ಕಾಯುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬೆಳಗಾವಿ ವಿಷಯಕ್ಕೆ ಡಿಕೆಶಿ ಎಂಟ್ರಿಯಾಗಿದ್ರಿಂದ್ಲೆ ಗೊಂದಲ ಸೃಷ್ಟಿಯಾಗಿದ್ದು: ಸತೀಶ್ ಜಾರಕಿಹೊಳಿ

    ಬೆಳಗಾವಿ ವಿಷಯಕ್ಕೆ ಡಿಕೆಶಿ ಎಂಟ್ರಿಯಾಗಿದ್ರಿಂದ್ಲೆ ಗೊಂದಲ ಸೃಷ್ಟಿಯಾಗಿದ್ದು: ಸತೀಶ್ ಜಾರಕಿಹೊಳಿ

    ಬೆಂಗಳೂರು: ಬೆಳಗಾವಿಯಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಮಧ್ಯಪ್ರವೇಶದಿಂದ ಗೊಂದಲವಾಗಿದ್ದು, ಇನ್ನು ಮುಂದೆ ಅವರು ಯಾವುದೇ ಕಾರಣಕ್ಕೂ ತಲೆ ಹಾಕಬಾರದು ಎಂದು ಸತೀಶ್ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ.

    ಬೆಳಗಾವಿ ವಿಚಾರದ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಬೆಳಗಾವಿ ವಿಚಾರಕ್ಕೆ ಡಿಕೆಶಿಯವರು ಪ್ರವೇಶಿಸಿದ್ದಕ್ಕೆ ಗೊಂದಲ ಸೃಷ್ಟಿಯಾಗಿತ್ತು. ಹೀಗಾಗಿ ಅವರು ಬೆಳಗಾವಿ ವಿಚಾರಕ್ಕೆ ಯಾವುದೇ ಕಾರಣಕ್ಕೂ ಮಧ್ಯ ಪ್ರವೇಶ ಮಾಡುವಂತಿಲ್ಲ. ನಮ್ಮ ಸಮಸ್ಯೆಯನ್ನು ರಾಜ್ಯ ಕಾಂಗ್ರೆಸ್ ನಾಯಕರು ವಿಚಾರಿಸಿ, ಬಗೆಹರಿಸಿದರೇ ಎಲ್ಲಾ ಸರಿ ಹೋಗುತ್ತೆ. ನಾನು ಕೂಡ ಮುಖ್ಯಮಂತ್ರಿಯಾಗಬೇಕು ಅದಕ್ಕೆ ಇನ್ನೂ ಸಮಯವಿದೆ ಎಂದು ಹೇಳಿದರು.

    ಕಳೆದ ನಾಲ್ಕು ತಿಂಗಳಿನಿಂದಲೂ ಬಿಜೆಪಿ ನಾಯಕರ ಒತ್ತಡ ನಮ್ಮ ಮೇಲಿದೆ. ಆದರೆ ನಾವು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು. ಈ ಸರ್ಕಾರಕ್ಕೆ ನಮ್ಮಿಂದ ಯಾವುದೇ ಸಮಸ್ಯೆ ಆಗುವುದಿಲ್ಲ. ನನ್ನ ಸಹೋದರನ ಜೊತೆ ಸಮಸ್ಯೆಗಳ ಬಗ್ಗೆ ಇಂದು ಚರ್ಚೆ ನಡೆಸುತ್ತೇನೆ. ಯಾವೆಲ್ಲಾ ಬಿಜೆಪಿ ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆ ಅನ್ನೋದು ನನಗೆ ಗೊತ್ತಿಲ್ಲ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬೆಳಗಾವಿಯಲ್ಲಿ ಗೊಂದಲವೇ ಇರಲಿಲ್ಲ, ಮಾಧ್ಯಮಗಳಲ್ಲಿ ಪಿಎಲ್‍ಡಿ ಚುನಾವಣೆ ವಿವಾದವಾಗಿತ್ತು ಅಷ್ಟೇ: ಸಿಎಂ

    ಬೆಳಗಾವಿಯಲ್ಲಿ ಗೊಂದಲವೇ ಇರಲಿಲ್ಲ, ಮಾಧ್ಯಮಗಳಲ್ಲಿ ಪಿಎಲ್‍ಡಿ ಚುನಾವಣೆ ವಿವಾದವಾಗಿತ್ತು ಅಷ್ಟೇ: ಸಿಎಂ

    ಉಡುಪಿ: ಬೆಳಗಾವಿಯಲ್ಲಿ ಗೊಂದಲವೇ ಇರಲಿಲ್ಲ, ಕೇವಲ ಪಿಎಲ್‍ಡಿ ಬ್ಯಾಂಕ್ ವಿವಾದ ಮಾತ್ರ ಮಾಧ್ಯಮಗಳಲ್ಲಿ ಚರ್ಚೆಯಾಗಿತ್ತು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

    ಕೆಡಿಪಿ ಸಭೆಯ ನಂತರ ಮಾಧ್ಯಮಗಳಿಗೆ ಬೆಳಗಾವಿ ಪಿಎಲ್‍ಡಿ ಬ್ಯಾಂಕ್ ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ಬೆಳಗಾವಿಯಲ್ಲಿ ಯಾವುದೇ ವಿವಾದಗಳಿರಲಿಲ್ಲ, ಪ್ರಕರಣ ಸುಖಾಂತ್ಯವಾಗುವುದಕ್ಕೆ ಸಮಸ್ಯೆ ಇದ್ದದ್ದು ಯಾವಾಗ ಎಂದು ಪ್ರಶ್ನಿಸಿದ ಅವರು, ರಾಜ್ಯದಲ್ಲಿ ಎಲ್ಲವೂ ಸಾಮರಸ್ಯದಿಂದ ನಡೆಯುತ್ತಿದೆ. ನನ್ನ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಚುನಾವಣೆಯಲ್ಲಿ ಜಯವಾಗಿರುವುದು ಯಾವುದೇ ಬಣಕ್ಕೆ ಅಲ್ಲ, ಪಿಎಲ್‍ಡಿ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಜಯವಾಗಿದೆ. ನನ್ನ ಜೊತೆ ಎಲ್ಲರೂ ಸುಮಧುರ ಬಾಂಧವ್ಯದಿಂದ ಇದ್ದಾರೆ ಎಂದು ಹೇಳಿದರು.

    ಕೇವಲ ಮಾಧ್ಯಮಗಳಲ್ಲಿ ಬೆಳಗಾವಿ ಪಿಎಲ್‍ಡಿ ಬ್ಯಾಂಕ್ ಚುನಾವಣೆಯ ವಿವಾದ ಚರ್ಚೆಯಾಗಿತ್ತು. ಅಲ್ಲದೇ ಮಾಧ್ಯಮಗಳಲ್ಲಿ ಅಸಾಧ್ಯವಾದುದರ ಬಗ್ಗೆ ಚರ್ಚೆಯಾಗುತ್ತಿದೆ. ಕೇವಲ ಅವರ ಖುಷಿಯಂತೆ ಚರ್ಚೆಯಾಗಿದೆ. ನಾನು ಯಾರನ್ನು ತಡೆಯುವುದಿಲ್ಲವೆಂದರು. ಈ ವೇಳೆ ಸಿದ್ದರಾಮಯ್ಯನವರ ಪ್ರವಾಸದ ಬಗ್ಗೆ ಮಾತನಾಡಿ, ಸಿದ್ದರಾಮಯ್ಯ ವಿದೇಶಕ್ಕೆ ಹೋಗೋದೆ ತಪ್ಪಾ? ಅವರೇನಾರೂ ಒಬ್ಬರೇ ಹೋಗಿದ್ದಾರಾ? ಅವರ ಜೊತೆ ಕೆಲವು ನಾಯಕರೂ ಸಹ ವಿದೇಶ ಪ್ರವಾಸಕ್ಕೆ ಹೋಗಿದ್ದಾರೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬೆಳಗಾವಿ ಬ್ಯಾಂಕ್ ಬ್ಯಾಟಲ್- ಬಿಜೆಪಿ ನಾಯಕರಿಗೆ ಬಿಎಸ್‍ವೈ ಖಡಕ್ ಸೂಚನೆ

    ಬೆಳಗಾವಿ ಬ್ಯಾಂಕ್ ಬ್ಯಾಟಲ್- ಬಿಜೆಪಿ ನಾಯಕರಿಗೆ ಬಿಎಸ್‍ವೈ ಖಡಕ್ ಸೂಚನೆ

    ಬೆಂಗಳೂರು: ಬೆಳಗಾವಿ ಬ್ಯಾಂಕ್ ಬ್ಯಾಟಲ್ ನಲ್ಲಿ ಬಿಜೆಪಿ ಸೈಲೆಂಟ್ ಆಗಿದ್ದು, ನಾಯಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಖಡಕ್ ಸೂಚನೆ ನೀಡಿದ್ದಾರೆ.

    ನಮ್ಮ ಪಕ್ಷದ ಯಾರೂ ಜಾರಕಿಹೊಳಿ ಬ್ರದರ್ಸ್, ಲಕ್ಷ್ಮೀ ಹೆಬ್ಬಾಳ್ಕರ್ ಪರ ವಿರೋಧ ನಿಲ್ಲಬಾರದು. ಅದು ಅವರ ಪಕ್ಷದ ಒಳ ಬೇಗುದಿ. ಎಲ್ಲಿಗೆ ಹೋಗಿ ತಲುಪುತ್ತೆ ನೋಡೋಣ. ಅವರ ಮೇಲಾಟ ಮುಗಿದ ಮೇಲೆ ನಮ್ಮ ಆಟ ಏನು ಅನ್ನೋದನ್ನ ನೋಡೋಣ ಅಂತ ಸೂಚಿಸಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

    ಸದ್ಯಕ್ಕೆ ಪಿಎಲ್ ಡಿ ಬ್ಯಾಂಕ್ ವಿಚಾರದಲ್ಲಿ ಅಂತರ ಕಾಯ್ದುಕೊಳ್ಳಿ ಎಂದು ಬಿಎಸ್ ವೈ ಖಡಕ್ ಸೂಚನೆ ನೀಡಿದ್ದಾರೆ.

    ಇತ್ತ ಶಿವಮೊಗ್ಗದಲ್ಲಿ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಮಾತನಾಡಿ, ಕಾಂಗ್ರೆಸ್ ನವರಿಗೆ ಹೇಳೋರು, ಕೇಳೋರು ಯಾರೂ ಇಲ್ಲ ಎಂಬುದಕ್ಕೆ ಬೆಳಗಾವಿನ ಪಿಎಲ್‍ಡಿ ಬ್ಯಾಂಕ್ ಚುನಾವಣೆಯೇ ಸಾಕ್ಷಿ. ಒಂದು ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಗೆ ಇಂತಹ ಹೀನಾಯ ಸ್ಥಿತಿ ಬರಬಾರದು. ಆದ್ರೆ ಅವರ ಬಡಿದಾಟ ಅವರಿಗೆ ಮಾತ್ರ ಸಂಬಂಧಪಟ್ಟಿದ್ದಾಗಿದೆ. ಹೀಗಾಗಿ ನಾವು ಇದ್ರಲ್ಲಿ ತಲೆತೂರಿಸುವುದಿಲ್ಲ ಅಂತ ಹೇಳಿದ್ದಾರೆ.

    ಒಬ್ಬ ಮಂತ್ರಿ, ಇನ್ನೊಬ್ಬ ಮಹಿಳೆ ಹಾಗೂ ಚುನಾಯಿತ ಪ್ರತಿನಿಧಿ. ಜಾರಕಿಹೊಳಿ ಈ ಶಾಸಕಿಯನ್ನು ಕಾಲಕಸಕ್ಕಿಂತ ಸಮ. ಇದು ಮಹಿಳಾ ಕುಲಕ್ಕೆ ಚುನಾಯಿತ ಪ್ರತಿನಿಧಿಗೆ ಮಾಡಿದ ಅಪಮಾನ. ಹಾದಿ ರಂಪ, ಬೀದಿ ರಂಪ ಮಾಡಿಕೊಂಡು ಕಾಂಗ್ರೆಸ್ ದಯನೀಯ ಸ್ಥಿತಿಯಲ್ಲಿ ಇದೆ ಅಂತ ಅವರು ತಿಳಿಸಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಎಲ್ಲವನ್ನು ಆ ದೇವ್ರು ನೋಡಿಕೊಳ್ತಾನೆ – ಗೆದ್ದ ಬಳಿಕ ಲಕ್ಷ್ಮಿ ಹೆಬ್ಬಾಳ್ಕರ್ ಚುಟುಕು ಮಾತು

    ಎಲ್ಲವನ್ನು ಆ ದೇವ್ರು ನೋಡಿಕೊಳ್ತಾನೆ – ಗೆದ್ದ ಬಳಿಕ ಲಕ್ಷ್ಮಿ ಹೆಬ್ಬಾಳ್ಕರ್ ಚುಟುಕು ಮಾತು

    – ಲೋಕಲ್ ಸಮಸ್ಯೆ ಇತ್ಯರ್ಥ ಎಂದ ಸತೀಶ್ ಜಾರಕಿಹೊಳಿ

    ಬೆಳಗಾವಿ: ಒಂದು ವಾರದಿಂದ ರಾಜ್ಯದ ಗಮನ ಸೆಳೆದಿದ್ದ ಪಿಎಲ್‍ಡಿ ಬ್ಯಾಂಕ್ ಚುನಾವಣೆಗೆ ತೆರೆ ಬಿದ್ದಿದೆ. ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷರ ನೇಮಕಾತಿ ವಿಚಾರದಲ್ಲಿ ತೀವ್ರ ಕೂತುಹಲ ಕೆರಳಿಸಿದ್ದ ಸಾಹುಕಾರರ ಅಡ್ಡದ ರಣರಂಗದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಬಣ ಮೇಲುಗೈ ಸಾಧಿಸಿದ್ದು, ಜಾರಕಿಹೊಳಿ ಬಣಕ್ಕೆ ಹಿನ್ನಡೆಯಾಗಿದೆ.

    ಗೆಲುವಿನ ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಎಲ್ಲರ ಒಮ್ಮತದಿಂದ ಅಧ್ಯಕ್ಷ, ಉಪಾಧ್ಯಕ್ಷರು ಆಯ್ಕೆಯಾಗಿದ್ದಾರೆ. ನನ್ನ ವಿರುದ್ಧದ ವೈಯಕ್ತಿಕ ಟೀಕೆಗಳಿಗೆ ನಾನು ಉತ್ತರ ಕೊಡಲ್ಲ. ಭಗವಂತ ಎಲ್ಲವನ್ನು ನೋಡಿಕೊಳ್ಳುತ್ತಾನೆ. ಚುನಾವಣೆಯಲ್ಲಿ ಯಾರ ಗೆಲುವು ಇಲ್ಲ. ಸೋಲು ಇಲ್ಲ. ಪಕ್ಷದ ಮುಖಂಡರ ಸಮ್ಮುಖದಲ್ಲಿ ಎಲ್ಲವೂ ಸುಖಾಂತ್ಯವಾಗಿದೆ. ಜಾರಕಿಹೊಳಿ ಸಹೋದರರೊಂದಿಗೆ ಪಕ್ಷದ ವರಿಷ್ಠರು ಮಾತನಾಡಿದ್ದಾರೆ. ನನ್ನ ಕ್ಷೇತ್ರಕ್ಕೆ ಗೆಲುವು ಆಗಿದೆ ಎಂದು ಸಂತೋಷ ಹಂಚಿಕೊಂಡರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    ಪಿಎಲ್‍ಡಿ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲಿಯೂ ಮಾಧ್ಯಮಗಳ ಮುಂದೆ ಬಂದಿಲ್ಲ. ನಾನು ಎಲ್ಲಿಯೂ ಬೇರೆಯವರ ರೀತಿ ನಡೆದುಕೊಂಡಿಲ್ಲ. ಇನ್ನು ಆ ಘಟನೆಗಳ ಬಗ್ಗೆ ನಾನು ಹೆಚ್ಚು ಮಾತನಾಡಲು ಇಷ್ಟಪಡಲ್ಲ. ನಾನು ಸ್ಲಂನಲ್ಲಿಯೇ ಹುಟ್ಟಿರಬಹುದು, ಏನಾದ್ರೂ ಆಗಿರಬಹುದು. ಯಾವುದೇ ಹೇಳಿಕೆಗಳಿಗೂ ನಾನು ಕಮೆಂಟ್ ಮಾಡಲ್ಲ. ವೈಯಕ್ತಿಕ ಟೀಕೆಗಳಿಂದ ಮನಸ್ಸಿಗೆ ತುಂಬಾ ನೋವಾಗಿದೆ. ಪಕ್ಷ ಮತ್ತು ವರಿಷ್ಠರು ಏನು ಹೇಳಿದ್ದಾರೋ ಆ ಕೆಲಸವನ್ನು ಮಾತ್ರ ಮಾಡಿದ್ದೇನೆ. ಎಲ್ಲ ಬೆಳವಣಿಗೆಯನ್ನು ಜನತೆ ಗಮನಿಸಿದ್ದಾರೆ ಎಂದು ತಿಳಿಸಿದ್ದಾರೆ.

    ಲೋಕಲ್ ಸಮಸ್ಯೆ ಇತ್ಯರ್ಥ:
    ಅವಿರೋಧವಾಗಿ ಎಲ್ಲರನ್ನು ಆಯ್ಕೆ ಮಾಡಿದ್ದೇವೆ. ಇಂದು ಮಾಡಿದ್ದ ಕೆಲಸವನ್ನು ಕಾರ್ಯಧ್ಯಕ್ಷರು ಮೊದಲೇ ಮಾಡಬೇಕಿತ್ತು. ಸ್ವಲ್ಪ ತಡವಾಗಿದ್ದರಿಂದ ಇಷ್ಟೆಲ್ಲಾ ಗೊಂದಲ ನಿರ್ಮಾಣವಾಗಿತ್ತು. ಇದೊಂದು ಸ್ಥಳೀಯ ಮಟ್ಟದ ಸಮಸ್ಯೆ ಇದಾಗಿದ್ದು, ಇಲ್ಲಿಯೇ ಬಗೆಹರಿಸಿಕೊಂಡಿದ್ದೇವೆ. ಪಕ್ಷ ಅಂತಾ ಬಂದಾಗ ನಮ್ಮಲ್ಲಿ ಏನೇ ಗೊಂದಲಗಳಿದ್ದರೂ ನಾವೆಲ್ಲರೂ ಒಂದಾಗುತ್ತೇವೆ ಅಂತಾ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.

     

    ಅವಿರೋಧ ಆಯ್ಕೆಯ ನಂತರ ಸರ್ಕಿಟ್ ಹೌಸ್‍ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಯಿತು. ಎಲ್ಲಾ ಸಮಸ್ಯೆ ಬಗೆಹರಿದಿದೆ. ಎಲ್ಲವನ್ನೂ ಸೌಹಾರ್ದಯುತವಾಗಿ ಇತ್ಯರ್ಥ ಮಾಡಿಕೊಂಡಿದ್ದೇವೆ ಎಂದು ಈಶ್ವರ್ ಖಂಡ್ರೆ ಹೇಳಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸತೀಶ್ ಜಾರಕಿಹೊಳಿ ಸುದ್ದಿಗೋಷ್ಠಿಯಲ್ಲಿ ಭಾಗಿಯಾದರೂ ಪರಸ್ಪರ ಮುಖ ನೋಡದೇ ಮಾತು ಮುಗಿಸಿದ್ರು.

     

  • ಪಕ್ಷಕ್ಕೆ ಯಾವುದೇ ಡ್ಯಾಮೇಜ್ ಆಗದಂತೆ ಸಮಸ್ಯೆ ಬಗೆಹರಿಸ್ತೇವೆ- ಸತೀಶ್ ಜಾರಕಿಹೊಳಿ

    ಪಕ್ಷಕ್ಕೆ ಯಾವುದೇ ಡ್ಯಾಮೇಜ್ ಆಗದಂತೆ ಸಮಸ್ಯೆ ಬಗೆಹರಿಸ್ತೇವೆ- ಸತೀಶ್ ಜಾರಕಿಹೊಳಿ

    ಬೆಳಗಾವಿ: ಜಾರಕಿಹೊಳಿ ಬ್ರದರ್ಸ್ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕದನ ಕ್ಲೈಮಾಕ್ಸ್ ಹಂತಕ್ಕೆ ತಲುಪಿದ್ದು, ಪಕ್ಷಕ್ಕೆ ಯಾವುದೇ ಸಮಸ್ಯೆಯಾಗದಂತೆ ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ ಅಂತ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಇದನ್ನೂ ಓದಿ: ಮಾಧ್ಯಮಗಳ ಮೂಲಕ ಬೆಳಗಾವಿ ಕಿತ್ತಾಟಕ್ಕೆ ಹೇಳಿಕೆ ನೀಡುವುದು ಸರಿಯಲ್ಲ: ದಿನೇಶ್ ಗುಂಡೂರಾವ್

    ನಗರದಲ್ಲಿ ಇಂದು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಈಗಾಗಲೇ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರನ್ನ ಸಮಸ್ಯೆ ಬಗೆಹರಿಸಲು ಇಲ್ಲಿಗೆ ಕಳುಹಿಸಿದ್ದಾರೆ. ಸದ್ಯ ಅವರು ಸಕ್ರ್ಯೂಟ್ ಹೌಸ್‍ನಲ್ಲಿ ಇದ್ದಾರೆ. ಅಲ್ಲಿಗೆ ತೆರಳಿ ಮಾತಾನಾಡುತ್ತೇವೆ. ಸಂಧಾನದ ಮೂಲಕ ಸಮಸ್ಯೆಯನ್ನು ಇತ್ಯರ್ಥ ಮಾಡಿಕೊಳ್ಳುತ್ತೇವೆ ಅಂತ ಹೇಳಿದ್ರು.  ಇದನ್ನೂ ಓದಿ: ಡಿಕೆಶಿಗೆ ಕಾದಿದೆ ಗಂಡಾಂತರ, ಹೆಬ್ಬಾಳ್ಕರ್ ಬೆಂಗ್ಳೂರಿಗೆ ಹೋಗಿ ಶೋ ಮಾಡ್ತಿದ್ದಾರೆ: ಜಾರಕಿಹೊಳಿ

    ನಾಮಪತ್ರ ಸಲ್ಲಿಸದಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಹೀಗಾಗಿ ಯಾರೂ ನಾಮಪತ್ರ ಸಲ್ಲಿಸುತ್ತಿಲ್ಲ. ಹೀಗಾಗಿ ಇದೀಗ ಖಂಡ್ರೆ ಏನ್ ಹೇಳ್ತಾರೋ ಅದರಂತೆ ನಡೆದುಕೊಳ್ಳುತ್ತೇವೆ. ಅದೇ ರೀತಿ ಲಕ್ಷ್ಮಿ ಬಣಕ್ಕೂ ದಿನೇಶ್ ಗುಂಡೂರಾವ್ ಇದೇ ಸಂದೇಶವನ್ನು ರವಾನಿಸಿರಬಹುದು. ಒಟ್ಟಿನಲ್ಲಿ ಕೆಪಿಸಿಸಿ ಸಮಸ್ಯೆ ಬಗೆಹರಿಸಲಿದ್ದು, ಚುನಾವಣೆ ಮುಂದೂಡುವ ಸಾಧ್ಯತೆಗಳಿವೆ ಅಂತ ಅವರು ಹೇಳಿದ್ದಾರೆ. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಕ್ಷಮಿಸಲ್ಲ-ರಮೇಶ್ ಜಾರಕಿಹೊಳಿ ವಿರುದ್ಧ ಡಿಕೆಶಿ ಕೆಂಡಾಮಂಡಲ!

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಾನು ಸ್ಲಂನಲ್ಲಿ ಹುಟ್ಟಿರ್ಬೋದು, ಸಂಸ್ಕೃತಿ ಎಲ್ಲೆ ಮೀರಿ ಹೋಗಿಲ್ಲ- ರಮೇಶ್‍ಗೆ ಹೆಬ್ಬಾಳ್ಕರ್ ಟಾಂಗ್

    ನಾನು ಸ್ಲಂನಲ್ಲಿ ಹುಟ್ಟಿರ್ಬೋದು, ಸಂಸ್ಕೃತಿ ಎಲ್ಲೆ ಮೀರಿ ಹೋಗಿಲ್ಲ- ರಮೇಶ್‍ಗೆ ಹೆಬ್ಬಾಳ್ಕರ್ ಟಾಂಗ್

    ಬೆಳಗಾವಿ: ಪಿಎಲ್‍ಡಿ ಬ್ಯಾಂಕ್ ಚುನಾವಣಾ ಪ್ರಕ್ರಿಯೆ ಆರಂಭವಾದ್ರೆ ಇತ್ತ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ವಾರ್ ಕೂಡ ಮುಂದುವರಿದಿದೆ.

    ರಮೇಶ್ ಜಾರಕಿಹೊಳಿ ಹೇಳಿಕೆ ಪ್ರತಿಕ್ರಿಯಿಸಿದ ಶಾಶಕಿ, ನಾನು ಸ್ಲಂನಲ್ಲೇ ಹುಟ್ಟಿರಬಹುದು. ಬೇರೆ ಯಾವುದೇ ಆಗಿರಬಹುದು. ಇದ್ಯಾವುದರ ಬಗ್ಗೆನೂ ನಾನು ಮಾತಾಡೋಕೆ ಹೋಗುವುದಿಲ್ಲ. ನಾನು ಸಂಸ್ಕೃತಿ ಎಲ್ಲೆ ಮೀರಿ ಹೋಗಿಲ್ಲ, ಹೋಗೊದು ಇಲ್ಲ ಅಂತ ಟಾಂಗ್ ನೀಡಿದ್ದಾರೆ.

    `ಆ’ ರೀತಿ ಮಾತನಾಡುವುದರಿಂದ ನಾವೇನೋ ಸಾಧಿಸುತ್ತೇವೆ ಅಂತಾ ಭಾವಿಸೋದು ತಪ್ಪು. ನಾವು ಜವಾಬ್ದಾರಿ ಸ್ಥಾನದಲ್ಲಿದ್ದೇವೆ. ಏಕ ವಚನದಲ್ಲಿ ಮಾತನಡೋದು ತರವಲ್ಲ. ಯಾರು ಯಾರು ಏನೇನ್ ಮಾತಾಡ್ತಾರೋ ಅದನ್ನು ಆ ಭಗವಂತ ನೋಡಿಕೊಳ್ಳುತ್ತಾನೆ. ಮನಸ್ಸಿಗೆ ತುಂಬಾ ನೋವಾಗಿದೆ ಅಂತ ಹೆಬ್ಬಾಳ್ಕರ್ ಹೇಳಿದ್ದಾರೆ. ಇದನ್ನೂ ಓದಿ: ಲಕ್ಷ್ಮೀ ಹೆಬ್ಬಾಳ್ಕರ್ ನ ಹದ್ದು ಬಸ್ತುನಲ್ಲಿ ಇಡದಿದ್ದರೇ, ಉಗ್ರ ಕ್ರಮ ಕೈಗೊಳ್ತೀವಿ: ರಮೇಶ್ ಜಾರಕಿಹೊಳಿ

    ರಮೇಶ್ ಜಾರಕಿಹೊಳಿ ಹೇಳಿದ್ದೇನು?:
    ಆಕೆ ಸ್ಲಂನಲ್ಲಿದ್ದವಳು, ಆಕೆಯನ್ನು ರಾಜಕೀಯಕ್ಕೆ ತಂದು ಇಷ್ಟು ದೊಡ್ಡ ಮಟ್ಟದಲ್ಲಿ ಬೆಳೆಸಿದ್ದೇವೆ. ಆದ್ರೆ ಇಂದು ನಮ್ಮ ವಿರುದ್ಧವೇ ನೀಂತಿದ್ದನು ನೋಡಿ ಶಾಕ್ ಆಗಿದ್ದೇವೆ ಅಂತ ರಮೇಶ್ ಜಾರಕಿಹೊಳಿ ಗುರುವಾರ ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ಏಕವಚನದಲ್ಲಿಯೇ ಕಿಡಿಕಾರಿದ್ದರು.

    ನಾನು ಲಕ್ಷ್ಮಿ ಹೆಬ್ಬಾಳ್ಕರ್‍ಗೆ ದೆಹಲಿ ತೋರಿಸಿದ್ದೆ. ಡಿಕೆಶಿ ನಾವು ಇಬ್ಬರು ಗೆಳೆಯರಾಗಿದ್ದು, 2004 ರಲ್ಲಿ ನಾವು ಶಿವಕುಮಾರ್ ಪರ ಬ್ಯಾಟಿಂಗ್ ಮಾಡಿದ್ದೆನು. ಅವರು ನನಗೆ ಸಚಿವರಾಗಲು ಸಹಾಯ ಮಾಡಿದ್ದರು. ಕೊಲ್ಹಾಪುರ ಮಹಾಲಕ್ಷ್ಮಿ ದೇವರ ಆಣೆ ನಾನು ಹೇಳಲು ಸಿದ್ಧ. ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಹದ್ದು ಬಸ್ತಿನಲ್ಲಿ ಇಡದಿದ್ದರೆ ನಾನು ಸತೀಶ್ ಜಾರಕಿಹೊಳಿ ಉಗ್ರ ನಿರ್ಧಾರ ಕೈ ಗೊಳ್ಳುತ್ತೇವೆ. ನಾವು ಬಹುಮತ ಪಡೆಯೋದು ದೊಡ್ಡದಲ್ಲ. ಆದ್ರೆ ಅವರು ಏನಾದ್ರು ಮಾಡಿದ್ರೆ ಜಾರಕಿಹೊಳಿ ಕುಟುಂಬಕ್ಕೆ ಕೆಟ್ಟ ಹೆಸರು ಬರುತ್ತೆ. ಚುನಾವಣೆ ವಿಚಾರದಲ್ಲಿ ಹಣಕಾಸಿನ ವ್ಯವಹಾರ ನಡೆದಿದೆ. ಸತೀಶ್ ಜಾರಕಿಹೊಳಿ ಅಪಮಾನ ಆದ್ರೆ ನಾನು ಅವರ ಜತೆಗೆ ಇರುತ್ತೇನೆ. ಶಾಸಕ ಸತೀಶ್ ಜಾರಕಿಹೊಳಿ ನಿರ್ಣಯಕ್ಕೆ ನಾನು ಬದ್ಧ ಅಂತ ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv