Tag: belagavi

  • ಕರ್ನಾಟಕ ಪ್ರವಾಸೋದ್ಯಮ ರೋಪ್‌ವೇಗಳ ವಿಧೇಯಕ ಅಂಗೀಕಾರ

    ಕರ್ನಾಟಕ ಪ್ರವಾಸೋದ್ಯಮ ರೋಪ್‌ವೇಗಳ ವಿಧೇಯಕ ಅಂಗೀಕಾರ

    – ರಾಜ್ಯದ 15 ಕಡೆ ರೋಪ್‌ವೇಗಳ ನಿರ್ಮಾಣಕ್ಕೆ ನಿರ್ಣಯ – ಸಚಿವ ಹೆಚ್.ಕೆ.ಪಾಟೀಲ

    ಬೆಳಗಾವಿ: ರಾಜ್ಯದಲ್ಲಿ 15 ಕಡೆ ರೋಪ್‌ವೇಗಳ ನಿರ್ಮಾಣಕ್ಕೆ ಸರ್ಕಾರ ನಿರ್ಣಯ ಕೈಗೊಂಡಿದೆ. ಇವುಗಳ ನಿರ್ಮಾಣ ಮತ್ತು ಕಾರ್ಯನಿರ್ವಹಣೆಯನ್ನು ಅಧಿಕೃತಗೊಳಿಸಿ, ಸುಗಮಗೊಳಿಸುವ ಹಾಗೂ ನಿಯಂತ್ರಿಸುವ ಸಲುವಾಗಿ 2024ನೇ ಸಾಲಿನ ಕರ್ನಾಟಕ ಪ್ರವಾಸೋದ್ಯಮ ರೋಪ್‌ವೇಗಳ ವಿಧೇಯಕವನ್ನು ಜಾರಿಗೆ ತರಲಾಗುತ್ತಿದೆ ಎಂದು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸಕ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ ಹೇಳಿದರು.

    ಸುವರ್ಣ ಸೌಧದಲ್ಲಿ ಸೋಮವಾರ ವಿಧಾನಸಭೆ ಕಲಾಪದಲ್ಲಿ ವಿಧೇಯಕವನ್ನು ಸದನದ ಪರ್ಯಾಲೋಚನೆಗೆ ಅವರು ಮಂಡಿಸಿದರು. ರೋಪ್‌ವೇಗಳ ನಿರ್ಮಾಣದಿಂದ ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಇಂಬು ದೊರಕಲಿದೆ. ಈ ರೋಪ್‌ವೇಗಳ ನಿರ್ಮಾಣದ ಜೊತೆಗೆ ನಿರ್ವಹಣೆಯನ್ನು ಸಹ ಪ್ರತ್ಯೇಕವಾಗಿ ಇಡಲು ಹಾಗೂ ಸಾರ್ವಜನಿಕ ಹಿತದೃಷ್ಠಿಯಿಂದ ವಿಧೇಯಕವನ್ನು ಮಂಡಿಸಲಾಗುತ್ತಿದೆ. ಸದನ ಒಪ್ಪಿಗೆ ನೀಡುವಂತೆ ಅವರು ಕೋರಿದರು.

    ಆರ್.ಅಶೋಕ್ ಮಾತನಾಡಿ, ವಿಧೇಯಕದಡಿ ರಚಿಸಲಾಗುವ ಸಲಹಾ ಪ್ರಾಧಿಕಾರದಲ್ಲಿ ಸರ್ಕಾರದ ಅರಣ್ಯ ಇಲಾಖೆ ಕಾರ್ಯದರ್ಶಿಗಳನ್ನು ಸಹ ಸದಸ್ಯರನ್ನಾಗಿ ನೇಮಿಸಬೇಕು. ರೋಪ್‌ವೇ ನಿರ್ಮಿಸಲು ಉದ್ದೇಶಿಸಿದ ಅನೇಕ ಸ್ಥಳಗಳು ಅರಣ್ಯ ಇಲಾಖೆ ವ್ಯಾಪ್ತಿಗೆ ಬರುತ್ತವೆ. ಇದರಿಂದ ಶೀಘ್ರವೇ ಅನುಮತಿ ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಶಾಸಕ ಡಾ.ಅಶ್ವಥ್ ನಾರಾಯಣ ಮಾತನಾಡಿ, ರೋಪ್‌ವೇಗಳು ಮಲೆನಾಡು ಭಾಗದಲ್ಲಿ ಗುಡ್ಡದ ಮೇಲೆ ಕಾಲುದಾರಿಗಳ ನಿರ್ಮಾಣದಿಂದ ಉಂಟಾಗುವ ಭೂ ಕುಸಿತ ತಡೆಯಲು ಸಹಾಯಕವಾಗಿವೆ ಎಂದು ಅಭಿಪ್ರಾಯಪಟ್ಟರು.

    ಶಾಸಕ ಅರಗ ಜ್ಞಾನೇಂದ್ರ ಮಾತನಾಡಿ, ರೋಪ್‌ವೇಗಳ ಸುರಕ್ಷತೆ ಹಾಗೂ ಗುಣಮಟ್ಟ ಪರೀಶಿಲನೆಗೆ ಸರ್ಕಾರ ವಿಧೇಯಕದಲ್ಲಿ ಹೆಚ್ಚಿನ ಮಹತ್ವ ನೀಡಬೇಕು ಎಂದರು. ಶಾಸಕ ಹೆಚ್.ಸಿ.ಬಾಲಕೃಷ್ಣ ಶ್ರವಣಬೆಳಗೊಳದಲ್ಲಿ ರೋಪ್ ವೇ ನಿರ್ಮಿಸಲು ಭಾರತೀಯ ಪುರತತ್ವ ಇಲಾಖೆ ಅನುಮತಿ ನೀಡುತ್ತಿಲ್ಲ. ಇದನ್ನು ಗಮನದಲ್ಲಿ ಇಟ್ಟುಕೊಂಡು ರೋಪ್ ವೇ ಸಲಹಾ ಪ್ರಾಧಿಕಾರದಲ್ಲಿ ಪುರತತ್ವ ಇಲಾಖೆ ಅಧಿಕಾರಿಗಳನ್ನು ಸಹ ಸದಸ್ಯರನ್ನಾಗಿ ಮಾಡುವಂತೆ ಸಲಹೆ ನೀಡಿದರು. ಶಾಸಕರು ಸಲಹೆ ನೀಡಿದ ಸೂಚನೆಗಳ ತಿದ್ದುಪಡಿಯೊಂದಿಗೆ ವಿಧೇಯಕಕ್ಕೆ ಸದನ ಧ್ವನಿ ಮತದಿಂದೊಂದಿಗೆ ಅಂಗೀಕಾರ ನೀಡಿತು.

    ವಿಧೇಯಕ ವಾಪಸ್ಸು: ರಾಜ್ಯಪಾಲರ ಸಲಹೆ ಮೇರೆಗೆ ಸಚಿವ ಹೆಚ್.ಕೆ.ಪಾಟೀಲ 2024ನೇ ಸಾಲಿನ ಕರ್ನಾಟಕ ವಿಧಾನ ಮಂಡಲ ಅನರ್ಹತಾ ನಿವಾರಣೆ ತಿದ್ದುಪಡಿ ವಿಧೇಯಕವನ್ನು ಹಿಂಪಡೆಯಲು ಸದನದಲ್ಲಿ ಅನುಮತಿ ಕೋರಿದರು. ವಿಧೇಯಕ ಹಿಂಪಡೆಯಲು ಸದನ ಅನುಮತಿ ನೀಡಿತು.

  • ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿಲ್ಲ, ಇದು ಪಿಕ್ನಿಕ್‍ನಂತಿದೆ – ಬಿಜೆಪಿಯಿಂದ ಬಾಣಂತಿಯರ ಕುಟುಂಬದ ಪರವಾಗಿ ಧ್ವನಿ ಎತ್ತುವ ಕೆಲಸ: ವಿಜಯೇಂದ್ರ

    ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿಲ್ಲ, ಇದು ಪಿಕ್ನಿಕ್‍ನಂತಿದೆ – ಬಿಜೆಪಿಯಿಂದ ಬಾಣಂತಿಯರ ಕುಟುಂಬದ ಪರವಾಗಿ ಧ್ವನಿ ಎತ್ತುವ ಕೆಲಸ: ವಿಜಯೇಂದ್ರ

    ಬೆಳಗಾವಿ: ಇಲ್ಲಿನದು ವಿಧಾನಸಭೆ, ವಿಧಾನಪರಿಷತ್ತಿನ ಅಧಿವೇಶನದಂತಿಲ್ಲ. ಇದು ಪಿಕ್ನಿಕ್‍ನಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು.

    ಬಾಣಂತಿಯರ ಸರಣಿ ಸಾವು, ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವನ್ನು ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಇಂದು ಬೆಳಗಾವಿಯ ಮಾಲಿನಿ ಸಿಟಿ, ಯಡಿಯೂರಪ್ಪ ರಸ್ತೆಯಲ್ಲಿ ನಡೆದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಬಾಣಂತಿಯರ ಸಾವು ನಿರಂತರವಾಗಿದೆ. ಹಸುಗೂಸುಗಳೂ ಸಾವನ್ನಪ್ಪುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು. ಧ್ವನಿ ಇಲ್ಲದ ಬಾಣಂತಿಯರ ಕುಟುಂಬದ ಪರವಾಗಿ ಧ್ವನಿ ಎತ್ತುವ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ. ಆ ಕೆಲಸವನ್ನು ಮಾಡಿದ ಬಿಜೆಪಿ ಮಹಿಳಾ ಮೋರ್ಚಾಕ್ಕೆ ಅಭಿನಂದನೆಗಳು ಎಂದು ತಿಳಿಸಿದರು.

    ರೈತ ನಾಯಕ, ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಲ್ಲಿ ಸುವರ್ಣಸೌಧ ನಿರ್ಮಿಸಿ ಉತ್ತರ ಕರ್ನಾಟಕದ ವಿಚಾರದ ಸಮಗ್ರ ಚರ್ಚೆ ಆಗಬೇಕೆಂದು ಆಶಿಸಿದ್ದರು. ಈ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಲೆಂದು ಬಯಸಿದ್ದರು. ಸದನದಲ್ಲಿ ಇವ್ಯಾವ ವಿಚಾರಗಳ ಚರ್ಚೆ ನಡೆಯುತ್ತಿಲ್ಲ. ಶಿಶುಗಳ ಮರಣ ಆಗುತ್ತಿದೆ. ಬಾಣಂತಿಯರು ಸಾವನ್ನಪ್ಪುತ್ತಿದ್ದಾರೆ. ಇವುಗಳ ಜೊತೆಗೆ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಯ ಚರ್ಚೆ ನಡೆಯುತ್ತಿಲ್ಲ ಎಂದು ವಿಜಯೇಂದ್ರ ಆಕ್ಷೇಪಿಸಿದರು.

    ಯಡಿಯೂರಪ್ಪ ಅವರ ಭಾಗ್ಯಲಕ್ಷ್ಮಿ ಯೋಜನೆಯನ್ನು ಸಿದ್ದರಾಮಯ್ಯನವರ ಸರ್ಕಾರ ನಿಲ್ಲಿಸಿದೆ ಎಂದು ಟೀಕಿಸಿದರು. ಇಂಥ ದರಿದ್ರ ಸರ್ಕಾರ ರಾಜ್ಯದಲ್ಲಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ತಾಯಂದಿರಿಗೆ ಅವಮಾನ ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರವು ನಮ್ಮ ತಾಯಂದಿರ ರಕ್ಷಣೆಗೆ ಬರದೆ ಇರುವ ಸಂದರ್ಭವಿದು. ಒಂದೆಡೆ ಬಾಣಂತಿಯರ ಸಾವಾಗಿದೆ. ಆ ಮಗುವನ್ನು ಯಾರು ನೋಡಿಕೊಳ್ಳಬೇಕು ಎಂದು ಪ್ರಶ್ನಿಸಿದರು.

    ಇದರ ಬಗ್ಗೆಯೂ ಸಿಎಂ, ಕಾಂಗ್ರೆಸ್ ಸರ್ಕಾರಕ್ಕೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ದೂರಿದರು. ಬಾಣಂತಿಯರ ಸಾವು, ಹಸುಗೂಸುಗಳ ಸಾವು ಸಂಭವಿಸಿದ್ದರೂ, ಸಚಿವರು, ಮುಖ್ಯಮಂತ್ರಿಗಳು ಭೇಟಿ ಕೊಡದೆ ಇರುವ ಕುರಿತು ತೀವ್ರವಾಗಿ ಖಂಡಿಸಿದರು. ಮುಖ್ಯಮಂತ್ರಿಗಳು, ಈ ಕಾಂಗ್ರೆಸ್ ಸರ್ಕಾರವು ಹಗರಣಗಳ ಸರಮಾಲೆಯಲ್ಲಿ ಸಿಲುಕಿದೆ. ಮಹರ್ಷಿ ವಾಲ್ಮೀಕಿ ನಿಗಮದ ಹಗರಣವು ಮುಖ್ಯಮಂತ್ರಿಗಳ ಕುಮ್ಮಕ್ಕಿನಿಂದ ನಡೆದಿದ್ದು, ಸಚಿವರು ರಾಜೀನಾಮೆ ಕೊಟ್ಟು ಜೈಲಿಗೆ ಹೋಗಿ ಬಂದರು. ಮೈಸೂರಿನ ಮುಡಾ ಹಗರಣವು 5 ಸಾವಿರ ಕೋಟಿಗೂ ಹೆಚ್ಚು ಮೊತ್ತದ್ದು. ಸ್ವತಃ ಮುಖ್ಯಮಂತ್ರಿಗಳ ಕುಟುಂಬವೇ ನೇರವಾಗಿ ಹಗರಣದಲ್ಲಿ ಭಾಗಿಯಾಗಿದೆ ಎಂದು ವಿಜಯೇಂದ್ರ ಟೀಕಿಸಿದರು.

  • ವಂಚಕ ಕಂಪನಿಗಳ ಕಡಿವಾಣಕ್ಕಾಗಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕಕ್ಕೆ ತಿದ್ದುಪಡಿ – ಕೃಷ್ಣ ಬೈರೇಗೌಡ

    ವಂಚಕ ಕಂಪನಿಗಳ ಕಡಿವಾಣಕ್ಕಾಗಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕಕ್ಕೆ ತಿದ್ದುಪಡಿ – ಕೃಷ್ಣ ಬೈರೇಗೌಡ

    -ಠೇವಣಿದಾರರ ಹಣ ಹಿಂಪಡೆಯಲು ಕಾನೂನಿನಲ್ಲಿ ಸರಳೀಕರಣ

    ಬೆಳಗಾವಿ: ಬಡವರ ಹಣ ವಂಚಿಸುವ ಮೋಸದ ಕಂಪನಿಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕಕ್ಕೆ ಹಲವು ಪ್ರಮುಖ ತಿದ್ದುಪಡಿಗಳನ್ನು ತರಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ (Krishna Byre Gowda) ತಿಳಿಸಿದರು.

    ಸೋಮವಾರ ವಿಧಾನಸಭೆಯಲ್ಲಿ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕ 2024 ಮಂಡಿಸಿ ಮಾತನಾಡಿದ ಅವರು, 2003-04ರಲ್ಲಿ ವಿನಿವಿಂಕ್ ಶಾಸ್ತ್ರಿ ಚಿಟ್‌ಫಂಡ್ ಸ್ಕೀಂನಿಂದ ಸಾವಿರಾರು ಜನ ಬಡ ಠೇವಣಿದಾರರು ಹಣ ಕಳೆದುಕೊಂಡಿದ್ದರು. ಅಪಾರ ಸಂಖ್ಯೆಯ ಅಮಾಯಕರು ಹಣ ಕಳೆದುಕೊಂಡಿದ್ದರು. ಆ ಪ್ರಕರಣ ಅಂದಿನ ದಿನಗಳಲ್ಲೇ ಸದನದಲ್ಲಿ ಭಾರೀ ಸದ್ದು ಮಾಡಿತ್ತು. ಪರಿಣಾಮ 2004ರಲ್ಲಿ ದೀರ್ಘ ಚರ್ಚೆಯ ನಂತರ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕವನ್ನು ಜಾರಿಗೆ ತರಲಾಯಿತು ಎಂದರು.

    ಚೈನ್‌ಲಿಂಕ್, ಚಿಟ್‌ಫಂಡ್, ಪಿರಮಿಡ್ ಮಾದರಿ ಹಾಗೂ ಹಣ ಡಬ್ಲಿಂಗ್ ಮಾಡುವ ಆಮಿಷ ಒಡ್ಡಿ ಜನರಿಂದ ಹಣ ಠೇವಣಿ ಪಡೆದು ವಂಚಿಸುವ ಕಂಪೆನಿಗಳಿಗೆ ಕಡಿವಾಣ ಹಾಕುವುದು ಈ ಕಾನೂನಿನ ಮುಖ್ಯ ಉದ್ದೇಶ. ಈ ಕಾನೂನು ಜಾರಿಗೆ ಬಂದು 20 ವರ್ಷ ಆಯ್ತು. ಆದರೆ, ಈಗಲೂ ಈ ಬಗ್ಗೆ ಸಾಕಷ್ಟು ಪ್ರಕರಣಗಳು ದಾಖಲಾಗುತ್ತಲೇ ಇದೆ. ಸೆಟಲ್ಮೆಂಟ್‌ಗಳೂ ಆಗುತ್ತಲೇ ಇವೆ. ಹೀಗಾಗಿ ಈ ಕಾನೂನನ್ನು ಅನುಷ್ಠಾನಗೊಳಿಸುವಾಗ ಒಂದಷ್ಟು ಬದಲಾವಣೆ ತಂದರೆ ಮತ್ತಷ್ಟು ಪ್ರಬಲವಾಗಿ ಅನುಷ್ಠಾನಗೊಳಿಸಬಹುದು ಹಾಗೂ ಬಾಧಿತರಿಗೆ ಮತ್ತಷ್ಟು ಪರಿಹಾರ ಒದಗಿಸಬಹುದು ಎಂಬ ಮಹತ್ವಾಕಾಂಕ್ಷೆಯಿಂದ ಈ ಕಾನೂನಿಗೆ ತಿದ್ದುಪಡಿ ತರಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.ಇದನ್ನೂ ಓದಿ: UI: ಮಣಿರತ್ನಂರನ್ನು ಉಪೇಂದ್ರ ಮೀರಿಸುತ್ತಾರೆ: ಶಿವಣ್ಣ

    ಈ ಕಾನೂನಿಗೆ ಏನೆಲ್ಲಾ ತಿದ್ದುಪಡಿ ತರಬೇಕು ಎಂದು ಅನುಭವದ ಆಧಾರದ ಮೇಲೆ ಕಳೆದ ಎರಡು ವರ್ಷಗಳಿಂದ ಅಧಿಕಾರಿಗಳ ಜೊತೆ ಸುದೀರ್ಘವಾಗಿ ಚರ್ಚಿಸಿ ತಿದ್ದುಪಡಿ ತರಲಾಗಿದೆ. ಕಾನೂನಿನ ಸಮರ್ಪಕ ಅನುಷ್ಠಾನ ಹಾಗೂ ಠೇವಣಿದಾರರಿಗೆ ಸಹಾಯ ಮಾಡಿಕೊಡುವ, ಅವರ ಹಣವನ್ನು ಸುಲಭಕ್ಕೆ ಹಿಂತಿರುಗಿ ಪಡೆಯುವ ನಿಟ್ಟಿನಲ್ಲಿ ಸರಳೀಕರಣಕ್ಕೆ ಅಗತ್ಯವಾದ ಎಲ್ಲಾ ಕ್ರಮಗಳನ್ನೂ ತಿದ್ದುಪಡಿಯಲ್ಲಿ ತರಲಾಗಿದೆ ಎಂದು ತಿಳಿಸಿದರು.

    ಕೆಲವರು ಕಂಪನಿ ತೆರೆದು ಹಗರಣ ಮಾಡಿ, ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗುವ ಮೊದಲೇ ಆ ಕಂಪನಿಯ ನಿರ್ದೇಶಕ ಹುದ್ದೆಯಿಂದ ನಿರ್ಗಮಿಸಿರುತ್ತಾರೆ. ನಿರ್ಗಮಿತ ನಿರ್ದೇಶಕರನ್ನು ವಿಚಾರಿಸುವ ಅವಕಾಶ ಹಳೆಯ ಕಾನೂನಿನಲ್ಲಿ ಇರಲಿಲ್ಲ. ಆದರೆ, ಇದೀಗ ಹೊಸ ತಿದ್ದುಪಡಿಯಲ್ಲಿ ಅದಕ್ಕೆ ಅವಕಾಶ ನೀಡಲಾಗಿದೆ. ಅಲ್ಲದೆ, ಅಂತಹ ವಂಚಕ ಕಂಪನಿಗಳು ತಮ್ಮ ಅಧಿಕಾರ ವ್ಯಾಪ್ತಿಯ ಪ್ರದೇಶದಲ್ಲಿ ಚಟುವಟಿಕೆ ಆರಂಭಿಸಿರುವ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ಉಪ-ವಿಭಾಗಾಧಿಕಾರಿಗಳು ಆ ಬಗ್ಗೆ ಕ್ರಮವಹಿಸಬೇಕು. ಅಂತಹ ಕಂಪನಿಗಳ ಪ್ರಚಾರ-ಜಾಹೀರಾತುಗಳಿಗೂ ತಡೆಯೊಡ್ಡುವ ಅಧಿಕಾರವನ್ನು ಅವರಿಗೆ ನೀಡಲಾಗಿದೆ ಎಂದು ಸದನಕ್ಕೆ ಮಾಹಿತಿ ನೀಡಿದರು.

    ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧವೂ ಕ್ರಮದ ಭರವಸೆ:
    ತಿದ್ದುಪಡಿ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಅವರು ವಿವರಿಸುತ್ತಿದ್ದಂತೆ ವಿಪಕ್ಷ ನಾಯಕ ಆರ್. ಅಶೋಕ್, ಬಿಜೆಪಿ ಶಾಸಕರಾದ ಸುನೀಲ್ ಕುಮಾರ್ ಹಾಗೂ ಅರಗ ಜ್ಞಾನೇಂದ್ರ ಅವರು ಗ್ರಾಮೀಣ ಭಾಗದ ಮಹಿಳೆಯರನ್ನು ಶೋಷಿಸುತ್ತಿರುವ ಮೈಕ್ರೋ ಫನಾನ್ಸ್, ಹೌಸಿಂಗ್ ಸ್ಕೀಂ ಹಾಗೂ ಗೋಲ್ಡ್ ಲೋನ್ ಕಂಪನಿಗಳ ವಂಚನೆಗಳ ಬಗ್ಗೆ ಗಮನ ಸೆಳೆದರು. ಅಲ್ಲದೆ, ಈ ಅಕ್ರಮಗಳಿಗೂ ತಡೆಯೊಡ್ಡಬೇಕು ಎಂದು ಆಗ್ರಹಿಸಿದರು.

    ವಿಪಕ್ಷ ನಾಯಕರ ಸಲಹೆ ಸೂಚನೆಗಳನ್ನು ಆಲಿಸಿ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಹೌಸಿಂಗ್ ಸ್ಕೀಂ, ಮೈಕ್ರೋ ಲೆಂಡಿಂಗ್, ಗೋಲ್ಡ್‌ ಲೋನ್‌ ನಂತರ ಅಕ್ರಮಗಳನ್ನು ತಡೆಯಲು ಪ್ರತ್ಯೇಕ ಕಾನೂನು ಇದೆ. ಆ ಚಟುವಟಿಕೆಗಳು ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕದ ಅಡಿ ಬರುವುದಿಲ್ಲ. ಆದರೆ, ಆ ಕಾನೂನುಗಳನ್ನೂ ಸಹ ಬಲಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯನವರು ಸೂಚನೆ ನೀಡಿದ್ದಾರೆ. ಇಂತಹ ಮೋಸದ ಕಂಪನಿಗಳನ್ನು ಸಂಪೂರ್ಣವಾಗಿ ನಿಲ್ಲಿಸುವ ಕುರಿತೂ ಚಿಂತಿಸಲಾಗುತ್ತಿದೆ. ಕೆಲವು ಮೈಕ್ರೋ ಫೈನಾನ್ಸ್ ಹೆಸರಿನ ಕಂಪನಿಗಳು ಮಹಿಳೆಯರನ್ನು ಶೋಷಿಸುತ್ತಿದ್ದು, ಇಂತಹ ಚಟುವಟಿಕೆಗಳನ್ನು ತಡೆಗಟ್ಟಲು, ತದ್ಸಂಬದ್ದ ಕಾನೂನಿಗೆ ತಿದ್ದುಪಡಿ ತರುವ ನಿಟ್ಟಿನಲ್ಲಿ ಹಣಕಾಸು ಇಲಾಖೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡುತ್ತೇನೆ ಎಂದು ಭರವಸೆ ನೀಡಿದರು.ಇದನ್ನೂ ಓದಿ: ಮಸೀದಿಯೊಳಗೆ ‘ಜೈ ಶ್ರೀರಾಮ್’ ಘೋಷಣೆ ಕೂಗುವುದು ತಪ್ಪಾ?- ಕರ್ನಾಟಕ ಪೊಲೀಸರ ನಡೆ ಪ್ರಶ್ನಿಸಿದ ಸುಪ್ರೀಂ

  • ಆರೋಗ್ಯ ಇಲಾಖೆಯಲ್ಲಿ ಖಾಲಿ ಇರೋ ಹುದ್ದೆ ಭರ್ತಿಗೆ ಕ್ರಮ: ದಿನೇಶ್ ಗುಂಡೂರಾವ್

    ಆರೋಗ್ಯ ಇಲಾಖೆಯಲ್ಲಿ ಖಾಲಿ ಇರೋ ಹುದ್ದೆ ಭರ್ತಿಗೆ ಕ್ರಮ: ದಿನೇಶ್ ಗುಂಡೂರಾವ್

    ಬೆಳಗಾವಿ: ಆರೋಗ್ಯ ಇಲಾಖೆಯಲ್ಲಿ ಖಾಲಿ ಇರೋ ಹುದ್ದೆ ಭರ್ತಿಗೆ ಕ್ರಮವಹಿಸೋದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ತಿಳಿಸಿದ್ದಾರೆ.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಎಂ.ಜಿ. ಮೂಳೆ ಪ್ರಶ್ನೆ ಕೇಳಿದ್ರು. ರಾಜ್ಯದಲ್ಲಿ ಆರೋಗ್ಯ ಇಲಾಖೆಯಲ್ಲಿ 32,870 ಹುದ್ದೆಗಳು ಖಾಲಿ ಇವೆ. ಇಲಾಖೆಯಲ್ಲಿ 50% ಹುದ್ದೆ ಖಾಲಿ ಇವೆ. ಹುದ್ದೆ ಖಾಲಿ ಇರೋದ್ರಿಂದ ಆರೋಗ್ಯ ಇಲಾಖೆಗೆ ಸಮಸ್ಯೆ ಆಗ್ತಿದೆ. ಆಸ್ಪತ್ರೆಗೆ ಬರೋ ರೋಗಿಗಳಿಗೆ ಸಮಸ್ಯೆ ಇದೆ. ಡಾಕ್ಟರ್‌ಗಳ ಹುದ್ದೆ ಖಾಲಿ ಇದೆ. ಖಾಲಿ ಹುದ್ದೆ ಹೊರಗುತ್ತಿಗೆ ಆಧಾರದಲ್ಲೂ ನೇಮಕ ಆಗಿಲ್ಲ. ಕಲ್ಯಾಣ ಕರ್ನಾಟಕ ಭಾಗದಲ್ಲೂ ಖಾಲಿ ಹುದ್ದೆಗಳು ಜಾಸ್ತಿ ಇವೆ‌. ಕಳೆದ ಅಧಿವೇಶನದಲ್ಲೂ ಇದೇ ಉತ್ತರ ಬಂದಿದೆ‌. ಕೂಡಲೇ ಖಾಲಿ ಹುದ್ದೆ ಭರ್ತಿ ಮಾಡಬೇಕು ಅಂತಾ ಒತ್ತಾಯ ಮಾಡಿದ್ದಾರೆ. ಇದನ್ನೂ ಓದಿ: ಸಿಸೇರಿಯನ್ ಹೆರಿಗೆಗಳಿಗೆ ಕಡಿವಾಣ ಹಾಕಲು ನೂತನ ಕಾರ್ಯಕ್ರಮ ಜಾರಿ – ದಿನೇಶ್ ಗುಂಡೂರಾವ್

    ಇದಕ್ಕೆ ಸಚಿವ ದಿನೇಶ್ ಗುಂಡೂರಾವ್ ಉತ್ತರ ನೀಡಿ, ಖಾಲಿ ಇರೋ 32 ಸಾವಿರ ಹುದ್ದೆಗಳಲ್ಲಿ ಹಲವು ರೀತಿ ಭರ್ತಿ ಮಾಡೋ ಕೆಲಸ ಆಗಿದೆ. ಔಟ್ ಸೋರ್ಸ್‌ನಲ್ಲಿ ಅನೇಕ ಹುದ್ದೆ ಭರ್ತಿ ಆಗಿವೆ. 500 ಹೆಚ್ಚು MBBS ಡಾಕ್ಟರ್‌ಗಳನ್ನ ಔಟ್ ಸೋರ್ಸ್‌ನಲ್ಲಿ ಭರ್ತಿ ಮಾಡಾಗಿದೆ. ಒಟ್ಟಾರೆ 18,040 ಹುದ್ದೆಗಳನ್ನ ಔಟ್ ಸೋರ್ಸ್‌ನಲ್ಲಿ ಭರ್ತಿ ಮಾಡಲಾಗಿದೆ ಎಂದಿದ್ದಾರೆ.

    1,800 ಹುದ್ದೆಗೆ ಆರ್ಥಿಕ ಇಲಾಖೆ ಅನುಮತಿ ನೀಡಿದ್ದಾರೆ. ಆದಷ್ಟು ಬೇಗ ನೇಮಕಾತಿ ಮಾಡ್ತೀವಿ. ತಜ್ಞ ವೈದ್ಯರ ನೇಮಕಾತಿಗಾಗಿ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಕೇಂದ್ರದ ನಿಯಮದ ಪ್ರಕಾರ ತಜ್ಞ ಡಾಕ್ಟರ್‌ಗಳ ಸಂಬಳ ಇದೆ. ಇದನ್ನ ಹೆಚ್ಚಳ ಮಾಡಲು ನಮಗೆ ಅನುಮತಿ ಕೊಡಿ ಅಂತ ಮನವಿ ಮಾಡಿದ್ದೇವೆ‌. ಕೇಂದ್ರ ಕೂಡಾ ಓರಲ್‌ನಲ್ಲಿ ಒಪ್ಪಿಗೆ ಕೊಟ್ಟಿದೆ. ಅಧಿಕೃತವಾಗಿ ಅನುಮತಿ ಬಂದ ಮೇಲೆ ತಜ್ಞ ವೈದ್ಯರಿಗೆ ನಾವೇ ಸಂಬಳ ಜಾಸ್ತಿ ಮಾಡಿ ನೇಮಕಾತಿ ಮಾಡಿಕೊಳ್ತೀವಿ. ನರ್ಸ್ ಮತ್ತು ಟೆಕ್ನಿಷನ್ಸ್ ನೇಮಕಕ್ಕೆ ಆರ್ಥಿಕ ಇಲಾಖೆಗೆ ಮನವಿ ಮಾಡಿದ್ದೇವೆ. ಅವರು ಗುತ್ತಿಗೆ ಆಧಾರದಲ್ಲಿ ಅನುಮತಿ ಕೊಟ್ಟರೂ ನಾವು ನೇಮಕಾತಿ ಮಾಡಿಕೊಳ್ತೀವಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿಬಿಐಗೆ ಕೊಡಿ, ಸಿಬಿಐಗೆ ಕೊಡಿ – ಸದನದಲ್ಲಿ ಕಾಂಗ್ರೆಸ್‌, ಬಿಜೆಪಿ ಮಧ್ಯೆ ಕೋಲಾಹಲ

  • ಸಿಸೇರಿಯನ್ ಹೆರಿಗೆಗಳಿಗೆ ಕಡಿವಾಣ ಹಾಕಲು ನೂತನ ಕಾರ್ಯಕ್ರಮ ಜಾರಿ – ದಿನೇಶ್ ಗುಂಡೂರಾವ್

    ಸಿಸೇರಿಯನ್ ಹೆರಿಗೆಗಳಿಗೆ ಕಡಿವಾಣ ಹಾಕಲು ನೂತನ ಕಾರ್ಯಕ್ರಮ ಜಾರಿ – ದಿನೇಶ್ ಗುಂಡೂರಾವ್

    – ತಾಯಿ, ಮಗುವಿನ ಆರೋಗ್ಯದ ಹಿತದೃಷ್ಟಿಯಿಂದ ಸಿಸೇರಿಯನ್ ಹೆರಿಗೆಗಳಿಗೆ ನಿಯಂತ್ರಣ ಅಗತ್ಯ
    – ಭ್ರೂಣ ಹತ್ಯೆ ವಿರುದ್ಧ ಡಿಕಾಯ್ ಆಪರೇಷನ್‌ಗಳ ಮೂಲಕ 46 ಜನರ ಬಂಧನ

    ಬೆಳಗಾವಿ: ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮುಂದಿನ ತಿಂಗಳು ನೂತನ ಕಾರ್ಯಕ್ರಮ ಜಾರಿಗೊಳಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದ್ದಾರೆ.

    ಬೆಳಗಾವಿಯ (Belagavi) ಸುವರ್ಣಸೌಧದಲ್ಲಿ ಇಂದು (ಡಿ.16) ವಿಧಾನ ಪರಿಷತ್ ಕಲಾಪದಲ್ಲಿ ಸದಸ್ಯ ಜಗದೇವ ಗುತ್ತೇದಾರ ಅವರ ಪ್ರಶ್ನೆಗೆ ಉತ್ತರಿಸುವ ವೇಳೆ ಈ ವಿಷಯದ ಕುರಿತು ಮಾತನಾಡಿದರು.ಇದನ್ನೂ ಓದಿ: 2025ರ ಅಂತ್ಯ ಅಥವಾ 2026ರ ಆರಂಭದಲ್ಲಿ ಬಾಂಗ್ಲಾ ಚುನಾವಣೆ – ಮೊಹಮ್ಮದ್ ಯೂನಸ್

    ರಾಜ್ಯದಲ್ಲಿ ಪ್ರತಿ ವರ್ಷ ಸಿಸೇರಿಯನ್ ಹೆರಿಗೆ ಪ್ರಮಾಣ ಹೆಚ್ಚಾಗುತ್ತಿದೆ. 2021-2022ರಲ್ಲಿ 35% ಇದ್ದ ಸಿಸೇರಿಯನ್ ಪ್ರಮಾಣ, 2022-23ಕ್ಕೆ 38%ಕ್ಕೆ ಏರಿಕೆಯಾಗಿತ್ತು. ಪ್ರಸ್ತುತ ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆ ಪ್ರಮಾಣ 46% ಇದೆ. ವಿಶೇಷವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ.61ರಷ್ಟು ಸಿಸೇರಿಯನ್ ಹೆರಿಗೆ ಮಾಡಲಾಗುತ್ತಿದೆ. ಸಿಸೇರಿಯನ್‌ಗಳಿಂದ ಹೆಚ್ಚು ಆದಾಯ ಬರುತ್ತದೆ ಮತ್ತು ಸುಲಭವಾಗಿ ಸಿಸೇರಿಯನ್ ಮಾಡಬಹುದು ಎಂಬ ಕಾರಣಕ್ಕೆ ಖಾಸಗಿ ಆಸ್ಪತ್ರೆಗಳು ಸಿಸೇರಿಯನ್ ಹೆರಿಗೆಗಳನ್ನೇ ಹೆಚ್ಚು ಮಾಡುತ್ತಿದ್ದಾರೆ. ತಾಯಿ ಮತ್ತು ಮಗುವಿನ ಆರೋಗ್ಯ ದೃಷ್ಟಿಯಿಂದ ಇದಕ್ಕೆ ಕಡಿವಾಣ ಹಾಕುವುದು ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಮಹಿಳೆಯರನ್ನ ಸಹಜ ಹೆರಿಗೆ ಮಾಡಿಸಿಕೊಳ್ಳಲು ಮಾನಸಿಕವಾಗಿ ಸಜ್ಜುಗೊಳಿಸಿಬೇಕಿದೆ. ಇದಕ್ಕಾಗಿ ನೂತನ ಕಾರ್ಯಕ್ರಮ ಜಾರಿಗೊಳಿಸುತ್ತಿರುವುದಾಗಿ ಸದನಕ್ಕೆ ತಿಳಿಸಿದರು.

    ಭ್ರೂಣ ಹತ್ಯೆ ವಿರುದ್ಧ ಯಶಸ್ವಿ ಡಿಕಾಯ್ ಆಪರೇಷನ್:
    ರಾಜ್ಯದಲ್ಲಿ 2023-24ರಿಂದ ಇಲ್ಲಿಯವರೆಗೆ ಭ್ರೂಣ ಹತ್ಯೆಗೆ ಸಂಬಂಧಿಸಿದಂತೆ 8 ಪ್ರಕರಣ ದಾಖಲಿಸಿ 46 ಜನರನ್ನು ಬಂಧಿಸಲಾಗಿದೆ ಎಂದು ಇದೇ ವೇಳೆ ಸದನದಲ್ಲಿ ಮಾಹಿತಿ ನೀಡಿದರು. ರಾಜ್ಯದಲ್ಲಿ ಸ್ಕ್ಯಾನಿಂಗ್ ಸೆಂಟರ್ ಮತ್ತು ಆಸ್ಪತ್ರೆಗಳ ಮೇಲೆ ತಪಾಸಣೆಗಳನ್ನು ಜಾಸ್ತಿ ಮಾಡಿರುವುದರಿಂದ ಹೆಚ್ಚಿನ ಸಂಖ್ಯೆಯ ಭ್ರೂಣ ಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಅಲ್ಲದೇ ಡಿಕಾಯ್ ಆಪರೇಷನ್‌ಗಳ ಯಶಸ್ವಿ ಕಾರ್ಯಾಚರಣೆಗಳನ್ನ ನಡೆಸಿ ಭ್ರೂಣೆ ಹತ್ಯೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

    ರಾಜ್ಯದಲ್ಲಿ ಭ್ರೂಣ ಹತ್ಯೆ ತಡೆಯಲು ಸರ್ಕಾರವು ಪಿ.ಸಿ&ಪಿ.ಎನ್.ಡಿ.ಟಿ. ಕಾಯ್ದೆಯಡಿ ಬರುವ ಎಲ್ಲಾ ಶಾಸನಬದ್ದ ಸಮಿತಿಗಳನ್ನು ರಾಜ್ಯ ಮತ್ತು ಜಿಲ್ಲೆಗಳಲ್ಲಿ ರಚನೆ ಮಾಡಲಾಗಿದೆ. 2018 ರಿಂದ ರಾಜ್ಯದಲ್ಲಿ ‘ಬಾಲಿಕಾ’ ಆನ್ಲೈನ್ ಸಾಪ್ಟ್ವೇರ್ ಮುಖಾಂತರ ಎಲ್ಲಾ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಕಡ್ಡಾಯವಾಗಿ ನೋಂದಣಿ ಮತ್ತು ನವೀಕರಣ ನಡೆಸಲಾಗುತ್ತಿದೆ.ಇದನ್ನೂ ಓದಿ: ಬಿಜಿಎಸ್‌ ಆಸ್ಪತ್ರೆಯಿಂದ ಕೋರ್ಟ್‌ಗೆ ಆಗಮಿಸಿದ ದರ್ಶನ್‌

    ರಾಜ್ಯ ಮಟ್ಟದಲ್ಲಿ ಶೇ.100ರಷ್ಟು ಗರ್ಭಿಣಿಯರ ನೋಂದಣಿ ಪ್ರಕ್ರಿಯೆಯು ಚಾಲ್ತಿಯಲ್ಲಿದ್ದು, ಗ್ರಾಮ ಮಟ್ಟದಲ್ಲಿ ಜನನ ಸಮಯದ ಲಿಂಗಾನುಪಾತದ ದತ್ತಾಂಶಗಳನ್ನು ಮಾಹಿತಿ ತಂತ್ರಜ್ಞಾನದ ಮುಖಾಂತರ ಮೇಲ್ವಿಚಾರಣೆ ಮಾಡಲು ಕಲ್ಪಿಸಲಾಗುತ್ತಿದೆ. ರಾಜ್ಯದಲ್ಲಿ ಇದುವರೆಗೂ ಪಿ.ಸಿ&ಪಿ.ಎನ್.ಡಿ.ಟಿ. ಕಾಯ್ದೆಯನ್ನು ಉಲ್ಲಂಘಿಸಿರುವ ಸ್ಕ್ಯಾನಿಂಗ್ ಸೆಂಟರ್/ಮಾಲೀಕರು/ವೈದ್ಯರ ವಿರುದ್ಧ ಒಟ್ಟು 136 ಪ್ರಕರಣಗಳನ್ನು ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದ್ದು, 74 ಪ್ರಕರಣಗಳು ದಂಡ ವಿಧಿಸಿ ಖುಲಾಸೆಗೊಂಡಿವೆ ಹಾಗೂ 65 ಪ್ರಕರಣಗಳು ನ್ಯಾಯಾಲಯದಲ್ಲಿ ವಿವಿಧ ಹಂತದಲ್ಲಿ ಬಾಕಿಯಿರುತ್ತದೆ ಎಂದು ತಿಳಿಸಿದರು.

    ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಮಾಡುವಂತಹ ಸ್ಕ್ಯಾನಿಂಗ್ ಸೆಂಟರ್, ಆಸ್ಪತ್ರೆ, ವೈದ್ಯರು, ದಲ್ಲಾಳಿಗಳು, ಗರ್ಭಿಣಿಯರ ಸಂಬಂಧಿಕರ ವಿರುದ್ಧ ಮಾಹಿತಿ ನೀಡಿ, ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಸಹಕರಿಸುವ ಮಾಹಿತಿದಾರರಿಗೆ ಕರ್ನಾಟಕ ಸರ್ಕಾರದಿಂದ ನೀಡುತ್ತಿದ್ದ ಬಹುಮಾನವನ್ನು 50 ಸಾವಿರದಿಂದ 1 ಲಕ್ಷದವರೆಗೆ ಹೆಚ್ಚಿಸಲಾಗಿದೆ. ಪಿ.ಸಿ. & ಪಿ.ಎನ್.ಡಿ.ಟಿ. ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಆಯುಕ್ತರ ಅಧ್ಯಕ್ಷತೆಯಲ್ಲಿ ರಾಜ್ಯ ಕಾರ್ಯಪಡೆಯನ್ನು ರಚಿಸಲಾಗಿದ್ದು, ರಾಜ್ಯ ಮಟ್ಟದಿಂದ ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿ ಗುಪ್ತ ಕಾರ್ಯಾಚರಣೆ ನಡೆಸಲಾಗಿದೆ ಎಂದರು.

    ಹೆಣ್ಣು ಭ್ರೂಣ ಹತ್ಯೆ ಮಾಡದಂತೆ ರಾಜ್ಯಾದ್ಯಂತ ಜನಜಾಗೃತಿ ಹಾಗೂ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ವಿವರಿಸಿದರು.ಇದನ್ನೂ ಓದಿ: ಬೆಜೆಪಿ ರೆಬೆಲ್‌ ತಂಡದಿಂದ ಫಡ್ನವಿಸ್‌ ಭೇಟಿ

     

  • ಸಿಬಿಐಗೆ ಕೊಡಿ, ಸಿಬಿಐಗೆ ಕೊಡಿ – ಸದನದಲ್ಲಿ ಕಾಂಗ್ರೆಸ್‌, ಬಿಜೆಪಿ ಮಧ್ಯೆ ಕೋಲಾಹಲ

    ಸಿಬಿಐಗೆ ಕೊಡಿ, ಸಿಬಿಐಗೆ ಕೊಡಿ – ಸದನದಲ್ಲಿ ಕಾಂಗ್ರೆಸ್‌, ಬಿಜೆಪಿ ಮಧ್ಯೆ ಕೋಲಾಹಲ

    ಬೆಳಗಾವಿ: ವಿಧಾನಸಭಾ ಕಲಾಪದಲ್ಲಿ ಆರಂಭದಲ್ಲೇ ಇಂದು ಬಿಜೆಪಿ ಮತ್ತು ಕಾಂಗ್ರೆಸ್‌ (BJP, Congress) ನಾಯಕರು ಸಿಬಿಐ ತನಿಖೆಗೆ ಆಗ್ರಹಿಸಿದ ಪ್ರಸಂಗ ನಡೆಯಿತು.

    ಸದನ ಆರಂಭಗೊಳ್ಳುತ್ತಿದ್ದಂತೆ ಸ್ಪೀಕರ್‌ ಖಾದರ್‌ (UT Khader) ಅವರು ಉತ್ತರ ಕರ್ನಾಟಕ (North Karnaataka) ಭಾಗದ ಚರ್ಚೆಗೆ ಅವಕಾಶ ನೀಡಿದರು. ಈ ವೇಳೆ ಪ್ರತಿಪಕ್ಷ ನಾಯಕ ಅಶೋಕ್ (Ashok) ಅವರು ವಕ್ಫ್‌ ವಿಚಾರವನ್ನು ಪ್ರಸ್ತಾಪ ಮಾಡಿದರು.

    ಪ್ರಿಯಾಂಕ್ ಖರ್ಗೆ (Priyank Kharge) ವಿಜಯೇಂದ್ರ ವಿರುದ್ಧ ಮೊನ್ನೆ ಆರೋಪ ಮಾಡಿದ್ದಾರೆ. ಆದರೆ ಅವರು ಮಾತನಾಡುವುದಕ್ಕೆ ಮೊದಲೇ ನೋಟಿಸ್‌ ನೀಡಬೇಕಿತ್ತು ಎಂದು ಹೇಳಿ ವಿರೋಧ ವ್ಯಕ್ತಪಡಿಸಿದರು.

    ಇದಕ್ಕೆ ಪ್ರಿಯಾಂಕ್‌ ಖರ್ಗೆ, ನಾನು ಆರೋಪ ಮಾಡಿದ್ದಲ್ಲ, ಮಾಣಿಪ್ಪಾಡಿ (Anwar Manippady) ಆರೋಪ ಮಾಡಿದ್ದು, ಅದನ್ನೇ ನಾನು ಹೇಳಿದ್ದು ಎಂದು ಹೇಳಿದರು. ಪ್ರಿಯಾಂಕ್‌ ಖರ್ಗೆ ಆರೋಪದ ಬಗ್ಗೆ ಬಿಜೆಪಿ ನಾಯಕರು ಚರ್ಚೆಗೆ ಅವಕಾಶ ಕೇಳಿದರು. ಆದರೆ ಚರ್ಚೆಗೆ ಅವಕಾಶ ನೀಡದ ಸ್ಪೀಕರ್‌ ವಿಜಯೇಂದ್ರ ಅವರಿಗೆ ಸ್ಪಷ್ಟನೆ ನೀಡುವಂತೆ ಸೂಚಿಸಿದರು. ಇದನ್ನೂ ಓದಿ: ಹಾಸನ-ಮಂಗಳೂರು ಹೈವೇಯಲ್ಲಿ ಮತ್ತೊಂದು ಟೋಲ್ ಆರಂಭ – ಸಾರ್ವಜನಿಕರಿಂದ ತೀವ್ರ ಆಕ್ರೋಶ

    ನನ್ನ ಮೇಲೆ ಪ್ರಿಯಾಂಕ್‌ ಖರ್ಗೆ ಗುರುತರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಅಧಿಕಾರ ದುರುಪಯೋಗ ಪಡಿಸಿಕೊಂಡಿದೆ. ಸಿಎಂಗೆ ಈಗ ಸಿಬಿಐ (CBI) ಮೇಲೆ ನಂಬಿಕೆ ಬಂದಿದೆ ಎಂದು ವಿಜಯೇಂದ್ರ ಹೇಳಿದಾಗ ಎದ್ದು ನಿಂತ ಕೃಷ್ಣಬೈರೇಗೌಡ ಇಲ್ಲಿ ರಾಜಕೀಯ ಭಾಷಣ ಮಾಡಬೇಡಿ ಎಂದು ಪ್ರತಿಕ್ರಿಯಿಸಿದರು.

     

    ಈ ವೇಳೆ ಸಿಟ್ಟಾದ ವಿಜಯೇಂದ್ರ, ಸಿಎಂಗೆ ಪರಮಾಧಿಕಾರ ಇದ್ದು ಸಿಬಿಐ ತನಿಖೆಗೆ ನೀಡಲಿ. ಸಿಎಂ ಹಗರಣಗಳ ಸುಳಿಗೆ ಸಿಕ್ಕಿದ್ದಾರೆ. ಅದರಿಂದ ಬಚಾವಾಗಲು ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.

    ಸಿಎಂ ಅವರಿಗೆ ಸಿಬಿಐ ಬಗ್ಗೆ ಬಹಳ ವಿಶ್ವಾಸ ಇದೆ. 150 ಕೋಟಿ ರೂ. ಆಮಿಷ ಆರೋಪವನ್ನು ಸಿಬಿಐಗೆ ವಹಿಸಲಿ. ಜೊತೆಗೆ ಅನ್ವರ್ ಮಾಣಿಪ್ಪಾಡಿ ವರದಿಯ ತನಿಖೆಯನ್ನೂ ಸಿಬಿಐಗೆ ಕೊಡಲಿ ಎಂದು ಸವಾಲು ಎಸೆದರು. ಅಷ್ಟೇ ಅಲ್ಲದೇ ಮುಡಾ ಪ್ರಕರಣವನ್ನು ಸಿಬಿಐಗೆ ನೀಡಲಿ ಎಂದು ಹೇಳಿದರು. ಈ ವೇಳೆ ಕಾಂಗ್ರೆಸ್‌ ನಾಯಕರು ಎದ್ದು ನಿಂತು ವಿರೋಧ ವ್ಯಕ್ತಪಡಿಸಿದಾಗ ಸದನದಲ್ಲಿ ಭಾರೀ ಕೋಲಾಹಲ, ಗದ್ದಲ ನಡೆಯಿತು.

    150 ಕೋಟಿ ರೂ. ಆಮಿಷವನ್ನು ಸಿಬಿಐಗೆ ನೀಡಬೇಕೆಂದು ಕಾಂಗ್ರೆಸ್‌ನವರು ಕೂಗಿದರೆ ಬಿಜೆಪಿಯವರು ಮುಡಾ ಹಗರಣವನ್ನು ಸಿಬಿಐಗೆ ನೀಡಿ ಎಂದು ಆಗ್ರಹಿಸಿದರು. ಈ ಮಧ್ಯೆ ಮಾತಾಡಲು ಪ್ರಿಯಾಂಕ್ ಖರ್ಗೆ ಎದ್ದಾಗ ಖಾದರ್‌ ಅವಕಾಶ ನೀಡಲಿಲ್ಲ. ವಿಜಯೇಂದ್ರ ಅವರಿಂದ ಸ್ಪಷ್ಟನೆ ಬಂದಿದೆ. ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ಮಾಡಿ ಎಂದು ಸೂಚಿಸಿ ಎರಡು ಪಕ್ಷಗಳ ಕಿತ್ತಾಟಕ್ಕೆ ಪೂರ್ಣ ವಿರಾಮ ಹಾಕಿದರು.

     

  • Belagavi| ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆ ನೇಣಿಗೆ ಶರಣು

    Belagavi| ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆ ನೇಣಿಗೆ ಶರಣು

    ಚಿಕ್ಕೋಡಿ: ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆ ನೇಣಿಗೆ ಶರಣಾಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ (Raibag) ತಾಲೂಕಿನ ನಿಡಗುಂದಿ (Nidagundi) ಗ್ರಾಮದಲ್ಲಿ ನಡೆದಿದೆ.

    ರಮ್ಯಾಶ್ರೀ ಬಸವರಾಜ ಹಂಪನ್ನವರ (25) ಮೃತ ಮಹಿಳೆ. ಅನಾರೋಗ್ಯದ ಸಮಸ್ಯೆಯಿಂದ ಮಹಿಳೆ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ರಮ್ಯಾಶ್ರೀ ಕಳೆದ ನಾಲ್ಕು ವರ್ಷದ ಹಿಂದೆ ಬೇರೆ ಮದುವೆ ಆಗಿ ಪತಿಯಿಂದ ಬೇರ್ಪಟ್ಟಿದ್ದಳು. ಬಳಿಕ ಮೂರು ತಿಂಗಳ ಹಿಂದೆ ನಿಡಗುಂದಿ ಗ್ರಾಮದ ಬಸವರಾಜ ಹಂಪನ್ನವರ ಎಂಬವರನ್ನು ಮದುವೆ ಆಗಿದ್ದಳು. ಮೊದಲನೆ ಮದುವೆಯಾಗಿ ನಾಲ್ಕು ವರ್ಷ ಸಂಸಾರ ನಡೆಸಿದ್ದಳು. ಬಳಿಕ ಮತ್ತೊಂದು ಮದುವೆ ಆಗಿ ಕೇವಲ ಮೂರೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನೇಣು ಬಿಗಿದ ಸ್ಥಿತಿಯಲ್ಲಿ ರಮ್ಯಾಶ್ರೀ ಶವ ಪತ್ತೆಯಾಗಿದೆ. ಇದನ್ನೂ ಓದಿ: ಟೆಕ್ಕಿ ಅತುಲ್‌ ಆತ್ಮಹತ್ಯೆ ಕೇಸ್‌ – ತಲೆಮರೆಸಿಕೊಂಡಿದ್ದ ಪತ್ನಿ ಬಂಧನ

    ಪತ್ನಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿ ಕಂಡು ಪತಿ ಬಸವರಾಜ ಕೂಡ ಆತ್ನಹತ್ಯೆಗೆ ಯತ್ನಿಸಿದ್ದಾರೆ. ಭಯಗೊಂಡು ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಪಟ್ಟಿದ್ದಾರೆ. ಸದ್ಯ ಹಾರೂಗೇರಿ ಖಾಸಗಿ ಆಸ್ಪತ್ರೆಯಲ್ಲಿ ಪತಿ ಬಸವರಾಜ್ ಹಂಪನ್ನವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ರಾಯಬಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಚಿತ್ರದುರ್ಗ| ಲಾರಿ, 2 ಕಾರುಗಳ ನಡುವೆ ಸರಣಿ ಅಪಘಾತ – 4 ಎಮ್ಮೆಗಳು ಸಾವು

  • ಜಯಮೃತ್ಯುಂಜಯ ಸ್ವಾಮೀಜಿ ಮುಗಿಸಲು ಪೊಲೀಸರ ಸಂಚು: ರೇಣುಕಾಚಾರ್ಯ ಬಾಂಬ್

    ಜಯಮೃತ್ಯುಂಜಯ ಸ್ವಾಮೀಜಿ ಮುಗಿಸಲು ಪೊಲೀಸರ ಸಂಚು: ರೇಣುಕಾಚಾರ್ಯ ಬಾಂಬ್

    ದಾವಣಗೆರೆ: ಬೆಳಗಾವಿಯಲ್ಲಿ (Belagavi) ಪಂಚಮಸಾಲಿ ಮೀಸಲಾತಿ (Panchamasali Reservation) ಹೋರಾಟಗಾರರ ಮೇಲೆ ಗೋಲಿ ಬಾರ್ ಮಾಡಲು ಸಂಚು ಮಾಡಲಾಗಿತ್ತು. ಈ ಮೂಲಕ ಹೋರಾಟ ನಿಲ್ಲಿಸಲು ಜಯಮೃತ್ಯುಂಜಯ ಸ್ವಾಮೀಜಿಗಳನ್ನು (JayaMrityunjaya Swamiji ) ಮುಗಿಸಲು ಪ್ಲ್ಯಾನ್ ನಡೆದಿತ್ತು ಎಂದು ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ (M.P.Renukacharya) ಆರೋಪಿಸಿದ್ದಾರೆ.

    ದಾವಣಗೆರೆಯಲ್ಲಿ (Davanagere) ಅವರು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಪಂಚಮಸಾಲಿ ಹೋರಾಟಗಾರರ ಮೇಲಿನ ಲಾಠಿ ಚಾರ್ಜ್ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯಿಸಿದರು. ಸ್ವಾಮೀಜಿ ಮುಗಿಸಿದ್ರೆ ಹೋರಾಟ ನಿಲ್ಲುತ್ತೆ ಎಂದು ಗೋಲಿ ಬಾರ್ ಮಾಡಲು ಪ್ಲ್ಯಾನ್ ನಡೆದಿತ್ತು ಎಂದು ಬಾಂಬ್ ಸಿಡಿಸಿದ್ದಾರೆ.

    ಚನ್ನಮ್ಮ ವಂಶಸ್ಥರ ಮೇಲೆ ನಡೆದ ಲಾಠಿ ಚಾರ್ಜ್‍ನ್ನು ಖಂಡಿಸಬೇಕು. ಇಲ್ಲವಾದರೆ ನಮಗೂ ಕೂಡ ಉಳಿಗಾಲವಿಲ್ಲದಂತಾಗುತ್ತದೆ. ನಾವು ಪಂಚಮಸಾಲಿ ಸಮುದಾಯದ ಜೊತೆ ಗಟ್ಟಿಯಾಗಿದ್ದೇವೆ. ಸಮುದಾಯದವರ ಮೇಲಿನ ದಾಳಿಯನ್ನು ಎಲ್ಲಾ ಮಠಾಧೀಶರು ಖಂಡಿಸಬೇಕು. ಮೀಸಲಾತಿ ಅವರ ಹಕ್ಕು, ಅದನ್ನು ಅವರು ಕೇಳುತಿದ್ದಾರೆ ಎಂದಿದ್ದಾರೆ.

    ಲಾಠಿ ಚಾರ್ಜ್ ವಿಚಾರವಾಗಿ ಗೃಹ ಸಚಿವ ಜಿ.ಪರಮೇಶ್ವರ್ ಹಗುರವಾಗಿ ಮಾತನಾಡಿದ್ದಾರೆ. ಅವರನ್ನು ಸಂಪುಟದಿಂದ ವಜಾ ಮಾಡಬೇಕು. ಲಾಠಿ ಚಾರ್ಜ್ ಮಾಡುವ ಬದಲು ಮುತ್ತು ಕೊಡಬೇಕಾ ಅಂತ ಕೇಳ್ತಾರೆ. ಮುತ್ತು ಕೊಡು ಎಂದು ಕೇಳಿದ್ದಾರಾ? ಹೋರಾಟಗಾರರು ಇರುವಲ್ಲಿಗೆ ಹೋಗಿ ಅವರ ಮನವಿಯನ್ನ ಕೇಳಬೇಕಿತ್ತು ಎಂದು ಕಿಡಿಕಾರಿದ್ದಾರೆ.

    ಆರ್‍ಎಸ್‍ಎಸ್‍ನವರು ಹೋರಾಟದಲ್ಲಿ ಕಲ್ಲು ತೂರಿದ್ದಾರೆ ಎಂಬ ಖಾಶಪ್ಪನವರ ಹೇಳಿಕೆ ವಿಚಾರವಾಗಿ, ಹೋರಾಟ ಹತ್ತಿಕ್ಕಲು ಅವರೇ ಕಲ್ಲು ತೂರಿರಬಹುದು. ಅಧಿಕಾರದ ಪಿತ್ತ ನೆತ್ತಿಗೇರಿ ಈ ರೀತಿ ಮಾತನಾಡುತಿದ್ದಾರೆ. ನಮ್ಮ ಸರ್ಕಾರ ಇರುವ ಸಮಯದಲ್ಲಿ ಒಂದು ಕೂಡ ಅಹಿತಕರ ಘಟನೆ ನಡೆಯಲಿಲ್ಲ. ನೀವು ಈ ರೀತಿ ಮಾತನಾಡೋದು ಸರಿಯಲ್ಲ. ಈ ಬಗ್ಗೆ ಕ್ಷೀಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

    ಸಿಎಂ ಸಿದ್ದರಾಮಯ್ಯ ಅವರಿಗೆ ಮುಸ್ಲಿಂ ಸಮುದಾಯ ಮೇಲೆ ವ್ಯಾಮೋಹ ಜಾಸ್ತಿ. ಕಾವಿ ಬಟ್ಟೆ ಹಾಕಿಕೊಂಡವರ ಮೇಲೆ ಅವರಿಗೆ ಅಷ್ಟ್ಯಾಕೆ ಸಿಟ್ಟು? ಎಂದು ಲಾಠಿ ಚಾರ್ಜ್ ನಡೆಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

  • ಗ್ರಾಮ ಪಂಚಾಯತಿ ಆಸ್ತಿಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಯುತ್ತಿದೆ – ಪ್ರಿಯಾಂಕ್ ಖರ್ಗೆ

    ಗ್ರಾಮ ಪಂಚಾಯತಿ ಆಸ್ತಿಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಯುತ್ತಿದೆ – ಪ್ರಿಯಾಂಕ್ ಖರ್ಗೆ

    ಬೆಳಗಾವಿ: ರಾಜ್ಯದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಿಳಿಸಿದ್ದಾರೆ.

    ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಎನ್.ರವಿಕುಮಾರ್ ಅವರು, ಗ್ರಾಮ ಪಂಚಾಯತಿಗಳಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿಗಳ ಮ್ಯಾನ್ಯುಯಲ್ ಸರಿಯಾಗಿ ಆಗಿಲ್ಲ. ಸಂಪೂರ್ಣವಾಗಿ ಆಸ್ತಿ ನಮೂದು ಆಗಬೇಕು. ಗ್ರಾಮ ಪಂಚಾಯತಿಗಳಲ್ಲಿ ಸರಿಯಾಗಿ ಆಸ್ತಿ ಪತ್ತೆ ಹಚ್ಚಿ, ತೆರಿಗೆ ಸಂಗ್ರಹ ಮಾಡಬೇಕು. ಇದರಿಂದ ಸರ್ಕಾರದ ಗ್ಯಾರಂಟಿಗೆ ಗ್ರಾಮೀಣಾಭಿವೃದ್ಧಿ ಇಲಾಖೆಯೇ ಹಣ ಕೊಡಬಹುದು. ಅಧಿಕಾರಿಗಳು ಸರಿಯಾಗಿ ಆಸ್ತಿ ಸರ್ವೇ ಮಾಡುತ್ತಿಲ್ಲ.ಬೆಂಗಳೂರಿನಲ್ಲಿ ಸರಿಯಾಗಿ ಸರ್ವೆ ಮಾಡಿಲ್ಲ. ಅಧಿಕಾರಿಗಳು ಎರಡು ಬುಕ್ ಇಟ್ಟುಕೊಂಡು ತೆರಿಗೆ ಸರ್ಕಾರಕ್ಕೆ ನಷ್ಟ ಮಾಡ್ತಿವೆ. ಇದರ ಬಗ್ಗೆ ಕ್ರಮ ತೆಗೆದುಕೊಳ್ಳಿ ಎಂದು ಪ್ರಶ್ನಿಸಿದರು.ಇದನ್ನೂ ಓದಿ: ಬಲಿಷ್ಠ ಸಮುದಾಯ 2ಎ ಮೀಸಲಾತಿ ಕೇಳುತ್ತಿರುವುದು ಸಂವಿಧಾನಕ್ಕೆ ಬಗೆಯುತ್ತಿರುವ ಅಪಚಾರ: ಲೇಖಕ ಕುಂ.ವೀರಭದ್ರಪ್ಪ ಕಿಡಿ

    ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಸಿ ತೆರಿಗೆ ವ್ಯಾಪ್ತಿಗೆ ಒಳಪಡಿಸಿ, ಪಂಚತಂತ್ರ 2.0 ತಂತ್ರಾಂಶದಲ್ಲಿ ಅಳವಡಿಸುವ ಬಗ್ಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಇಲ್ಲಿಯವರೆಗೆ ಮ್ಯಾನ್ಯುಯಲ್ ಸಮೀಕ್ಷೆ ಮೂಲಕ 1,41,42,124 ಆಸ್ತಿಗಳನ್ನು ಸಮೀಕ್ಷೆ ಮಾಡಿ ಈ ಎಲ್ಲಾ ಆಸ್ತಿಗಳ ವಿವರಗಳನ್ನು ನಮೂನೆ-9ಎ ರಿಜಿಸ್ಟರ್‌ನಲ್ಲಿ ನಮೂದಿಸಲಾಗಿದೆ ಎಂದರು.

    ಗ್ರಾಮ ಪಂಚಾಯತ್‌ಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಸಂಗ್ರಹ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮ ಸರ್ಕಾರ ಬಂದ ಮೇಲೆ 8,61,524 ನಾವು ಅಸ್ತಿಗಳನ್ನ ಮ್ಯಾಪಿಂಗ್ ಮಾಡಿದ್ದೇವೆ. ಇವುಗಳ ಪೈಕಿ 4 ಲಕ್ಷ ಅಸ್ತಿಗಳು ಪಂಚತಂತ್ರದಲ್ಲಿ ನಮೂದು ಆಗಿಲ್ಲ. ಆದಷ್ಟು ಬೇಗ ಎಲ್ಲಾ ಆಸ್ತಿ ನಮೂದು ಮಾಡ್ತೀವಿ. ಇ-ಆಸ್ತಿ ನೋಂದಣಿಗೆ ಮಾಡಲು ಸರ್ವರ್ ಸಮಸ್ಯೆ ಕಾಣುತ್ತಿದೆ. ಎನ್‌ಐಸಿ ಅವರು ಸರ್ವರ್ ನಿರ್ವಹಣೆ ಮಾಡಿದ್ದಾರೆ. ಹೀಗಾಗಿ ಎನ್‌ಐಸಿಗೆ ನಾವೇ ಸರ್ವರ್ ನಿರ್ವಹಣೆ ಮಾಡೋದಾಗಿ ಹೇಳಿದ್ದೇವೆ. ಅವರು ಸಮಯ ಕೇಳಿದ್ದಾರೆ. ಇನ್ನೊಂದು ವರ್ಷದಲ್ಲಿ ಇ-ಸ್ವತ್ತು ಸಂಪೂರ್ಣವಾಗಿ ಜಾರಿ ಮಾಡೋ ಬಗ್ಗೆ ನೀಲಿನಕ್ಷೆ ಸಿದ್ಧಪಡಿಸಿದ್ದೇವೆ ಎಂದರು.ಇದನ್ನೂ ಓದಿ: ದರ್ಶನ್‌ಗೆ ಬೇಲ್: ದೇವರ ಪ್ರಸಾದ ಹಿಡಿದ ಫೋಟೋ ಹಂಚಿಕೊಂಡ ವಿಜಯಲಕ್ಷ್ಮಿ

  • ಕೇರಳ ಮಾದರಿಯಲ್ಲಿ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಗೌರವಧನ ಹೆಚ್ಚಳ ಸಾಧ್ಯವಿಲ್ಲ: ಪ್ರಿಯಾಂಕ್ ಖರ್ಗೆ

    ಕೇರಳ ಮಾದರಿಯಲ್ಲಿ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಗೌರವಧನ ಹೆಚ್ಚಳ ಸಾಧ್ಯವಿಲ್ಲ: ಪ್ರಿಯಾಂಕ್ ಖರ್ಗೆ

    ಬೆಳಗಾವಿ‌‌: ಕೇರಳ (Kerala) ಮಾದರಿಯಲ್ಲಿ ಗ್ರಾಮ ಪಂಚಾಯತಿ (Gram Panchayat) ಅಧ್ಯಕ್ಷರು, ಉಪಾಧ್ಯಕ್ಷರ ಗೌರವಧನ ಹೆಚ್ಚಳ ಮಾಡಲು ಸಾಧ್ಯವಿಲ್ಲ. ಆದರೆ ಗೌರವ ಧನ ಹೆಚ್ಚಳದ ಬಗ್ಗೆ ಸಿಎಂ ಸಿದ್ದರಾಮಯ್ಯ ಬಳಿಕ ಚರ್ಚೆ ಮಾಡೋದಾಗಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಿಳಿಸಿದ್ದಾರೆ.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯರಾದ ಡಿ.ಎಸ್.ಅರುಣ್ ಹಾಗೂ ಡಾ.ಧನಂಜಯ ಸರ್ಜಿಯವರು, ಗ್ರಾಮ ಪಂಚಾಯತಿ ಸದಸ್ಯರು, ಅಧ್ಯಕ್ಷ, ಉಪಾಧ್ಯಕ್ಷ, ಸಿಬ್ಬಂದಿ, ವಾಟರ್ ಮನ್ ಗಳ ಗೌರವ ಧನ ಹೆಚ್ಚಳ ಮಾಡಬೇಕು. ಗ್ರಾಮ ಪಂಚಾಯತಿ ನೌಕರರ ಸಂಘದ ಬೇಡಿಕೆ ಈಡೇರಿಕೆ ಮಾಡಬೇಕು ಅಂತ ಒತ್ತಾಯಿಸಿದರು.

    ಇದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಉತ್ತರ ನೀಡಿ, ಅನೇಕ ಬೇಡಿಕೆಗಳಿಗಾಗಿ ಗ್ರಾಮ ಪಂಚಾಯತಿ ನೌಕರರ ಸಂಘದವರು ಪ್ರತಿಭಟನೆ ಮಾಡಿದ್ದರು. ಎಲ್ಲಾ ಅಸೋಸಿಯೇಷನ್‌ಗಳ ಜೊತೆ ನಾನು ಸಭೆ ಮಾಡಿದ್ದೇವೆ. ಸಮಸ್ಯೆಗಳ ಪರಿಹಾರಕ್ಕೆ ಇಲಾಖೆ ಕಮೀಷನರ್ ನೇತೃತ್ವದಲ್ಲಿ ಸಮಿತಿ ಮಾಡಲಾಗಿದೆ. ಆರ್ಥಿಕ ವಿಚಾರದ ಬೇಡಿಕೆ ಬಗ್ಗೆ ಅರ್ಥಿಕ ಇಲಾಖೆಗೆ ಕಡತ ಕಳಿಸಲಾಗಿದೆ ಎಂದರು.

    ಗೌರವ ಧನ ಹೆಚ್ಚಳ ಬಗ್ಗೆ ಪ್ರಸ್ತಾಪ ಅಗಿದೆ. ಕೇರಳ ಮಾದರಿಯಲ್ಲಿ ವೇತನ ಜಾಸ್ತಿ ಮಾಡಿ ಎನ್ನುತಿದ್ದಾರೆ‌. ಕೇರಳದಲ್ಲಿ 900 ಪಂಚಾಯತಿಗಳು ಮಾತ್ರ ಇವೆ. ಕರ್ನಾಟಕದಲ್ಲಿ 6 ಸಾವಿರ ಪಂಚಾಯತಿಗಳು ಇವೆ. ಹೀಗಾಗಿ ಕೇರಳ ಮಾದರಿ ವೇತನ ಹೆಚ್ಚಳ ಸಾಧ್ಯವಿಲ್ಲ. ಆದರೂ ಪಂಚಾಯತಿ ಸದಸ್ಯರು, ಅಧ್ಯಕ್ಷರು, ಉಪಾಧ್ಯಕ್ಷರ ವೇತನ ಹೆಚ್ಚಳಕ್ಕೆ ಸಿಎಂಗೆ ಮನವಿ ಸಲ್ಲಿಕೆ ಮಾಡ್ತೀವಿ. ಇದನ್ನ ಹೊರೆತುಪಡಿಸಿ ಬೇರೆ ಬೇರೆ ಬಸ್ ಪಾಸ್, ಪಿಂಚಣಿ, ವಿಮೆ ಸೇರಿ ಹಲವು ಬೇಡಿಕೆ ಇಟ್ಟಿದ್ದಾರೆ. ನಾವು ಬೇಡಿಕೆಗಳ ಪರಿಹಾರಕ್ಕೆ 3 ತಿಂಗಳು ಸಮಯ ಕೇಳಿದ್ದೇವೆ‌. ಈಗ ಒಂದು ತಿಂಗಳು ಅಗಿದೆ. 2 ತಿಂಗಳ ಒಳಗೆ ಯಾವುದು ಸಾಧ್ಯವೋ ಆ ಬೇಡಿಕೆಗಳ ಬಗ್ಗೆ ತೀರ್ಮಾನ ಮಾಡ್ತೀವಿ ಎಂದಿದ್ದಾರೆ.