Tag: belagavi

  • ರಾಜ್ಯದಲ್ಲಿ 3 ಸಾವಿರ ಹೊಸ ಅಂಗನವಾಡಿ ಸ್ಥಾಪನೆಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ- ಲಕ್ಷ್ಮಿ ಹೆಬ್ಬಾಳ್ಕರ್

    ರಾಜ್ಯದಲ್ಲಿ 3 ಸಾವಿರ ಹೊಸ ಅಂಗನವಾಡಿ ಸ್ಥಾಪನೆಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ- ಲಕ್ಷ್ಮಿ ಹೆಬ್ಬಾಳ್ಕರ್

    ಬೆಂಗಳೂರು/ಬೆಳಗಾವಿ: ರಾಜ್ಯದಲ್ಲಿ ಹೊಸದಾಗಿ 3988 ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರ್ಕಾರದ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ತಿಳಿಸಿದ್ದಾರೆ.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಶಾಸಕ ಜವರಾಯೇಗೌಡ ಪರವಾಗಿ ತಿಪ್ಪೇಸ್ವಾಮಿ ಪ್ರಶ್ನೆ ಕೇಳಿದ್ರು. ಇದಕ್ಕೆ ಉತ್ತರ ನೀಡಿದ ಸಚಿವರು, ಹೊಸದಾಗಿ ಅಂಗನವಾಡಿ ಕೇಂದ್ರ ಪ್ರಾರಂಭಿಸಲು ಕೇಂದ್ರ ಸರ್ಕಾರದ ಅನುಮೋದನೆ ಅವಶ್ಯಕವಿರುತ್ತದೆ. ಹೀಗಾಗಿ ಕೇಂದ್ರಕ್ಕೆ ಮನವಿ ಮಾಡಿದ್ದು, ಕೇಂದ್ರ ಅನುಮತಿ ಕೊಟ್ಟ ಬಳಿಕ ಹೊಸ ಅಂಗನವಾಡಿ ಕೇಂದ್ರ ಪ್ರಾರಂಭ ಮಾಡೋದಾಗಿ‌ ತಿಳಿಸಿದರು. ಇದನ್ನೂ ಓದಿ: ದೇವದಾಸಿಯರಿಗೆ ಗೃಹಲಕ್ಷ್ಮಿ ಯೋಜನೆ ಅನ್ವಯ ಆಗುತ್ತೆ : ಲಕ್ಷ್ಮಿ ಹೆಬ್ಬಾಳ್ಕರ್

    ಅಂಗನವಾಡಿ ಕೇಂದ್ರದಲ್ಲಿ ಫಲಾನುಭವಿಗಳಿಗೆ ಪೂರೈಸಲಾಗುವ ಪೂರಕ ಪೌಷ್ಟಿಕ ಆಹಾರ ಯೋಜನೆಯಡಿ ಹಂಚಿಕೆ ಅನುದಾನದಲ್ಲಿ ಕೇಂದ್ರದ ಪಾಲು ಶೇ.20 ರಷ್ಟು ಇರುತ್ತದೆ. ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಗೌರವಧನ ಪಾವತಿಯಲ್ಲಿ ಆಡಳಿತ ವೆಚ್ಚದಡಿ ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದ ಪಾಲು ಶೇ.30 ರಷ್ಟಿರುತ್ತದೆ. ಸಬ್ಸಿಡಿ ದರದಲ್ಲಿ ಅಕ್ಕಿ ಮತ್ತು ಗೋಧಿಯನ್ನು ಸಹ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹಂಚಿಕೆ ಮಾಡುತ್ತದೆ. ಹಾಲಿ ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಅನುಮೋದಿತ 65,931 ಅಂಗನವಾಡಿ ಕೇಂದ್ರಗಳು ಹಾಗೂ ರಾಜ್ಯ ಸರ್ಕಾರದ ವತಿಯಿಂದ ಅನುದಾನಿತ 3,988 ಅಂಗನವಾಡಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಸದರಿ 3,988 ಅಂಗನವಾಡಿ ಕೇಂದ್ರಗಳಿಗೆ ಕೇಂದ್ರ ಸರ್ಕಾರದ ಅನುಮೋದನೆಗಾಗಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದರು.

    ರಾಜ್ಯದಲ್ಲಿ ಸ್ವಂತ ಕಟ್ಟಡವಿಲ್ಲದ ಅಂಗನವಾಡಿ ಕೇಂದ್ರಗಳಿಗೆ ಹೊಸದಾಗಿ ಕಟ್ಟಡ ನಿರ್ಮಿಸಲು ಕಳೆದ 2 ವರ್ಷಗಳಲ್ಲಿ ರೂ. 22,923 ಲಕ್ಷ ಅನುದಾನ ಬಿಡುಗಡೆಯಾಗಿರುತ್ತದೆ. ಒಟ್ಟು 337 ಅಂಗನವಾಡಿ ಕಟ್ಟಡಗಳ ಕಾಮಗಾರಿ ಪೂರ್ಣಗೊoಡಿದೆ ಅಂತ ಉತ್ತರ ನೀಡಿದ್ರು‌. ಇದನ್ನೂ ಓದಿ: ಕೇರಳ ಮಾದರಿಯಲ್ಲಿ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಗೌರವಧನ ಹೆಚ್ಚಳ ಸಾಧ್ಯವಿಲ್ಲ: ಪ್ರಿಯಾಂಕ್ ಖರ್ಗೆ

  • ದೇವದಾಸಿಯರಿಗೆ ಗೃಹಲಕ್ಷ್ಮಿ ಯೋಜನೆ ಅನ್ವಯ ಆಗುತ್ತೆ : ಲಕ್ಷ್ಮಿ ಹೆಬ್ಬಾಳ್ಕರ್

    ದೇವದಾಸಿಯರಿಗೆ ಗೃಹಲಕ್ಷ್ಮಿ ಯೋಜನೆ ಅನ್ವಯ ಆಗುತ್ತೆ : ಲಕ್ಷ್ಮಿ ಹೆಬ್ಬಾಳ್ಕರ್

    ಬೆಳಗಾವಿ: ರಾಜ್ಯದಲ್ಲಿನ ದೇವದಾಸಿ ಮಹಿಳೆಯರಿಗೆ ಕೂಡಾ ಗೃಹ ಲಕ್ಷ್ಮೀ (Gruha Lakshmi) ಯೋಜನೆಯ ನೆರವು ದೊರೆಯುತ್ತಿದ್ದು, ಸೌಲಭ್ಯ ದೊರೆಯದ ಬಗ್ಗೆ ಯಾವುದೇ ದೂರು ಸಲ್ಲಿಕೆಯಾದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಅಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ತಿಳಿಸಿದ್ದಾರೆ.

    ವಿಧಾನ ಪರಿಷತ್ (Vidhan Parishad) ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯೆ ಹೇಮಲತಾ ನಾಯಕ್ ಪ್ರಶ್ನೆ ಕೇಳಿದ್ರು.ಕೊಪ್ಪಳದಲ್ಲಿ ಸರಿಯಾಗಿ ದೇವದಾಸಿಯರಿಗೆ (Devadasi) ಮಾಶಾಸನ ಸಿಗುತ್ತಿಲ್ಲ. ದೇವದಾಸಿಯರ ಸರ್ವೆ ಸರಿಯಾಗಿ ಆಗಿಲ್ಲ. ದೇವದಾಸಿಯರ ಮಾಶಾಸನ 5 ಸಾವಿರಕ್ಕೆ ಹೆಚ್ಚಳ ಮಾಡಬೇಕು.ಗೃಹಲಕ್ಷ್ಮಿ ಯೋಜನೆ ದೇವದಾಸಿಯರಿಗೆ ನೀಡಬೇಕು ಅಂತ ಒತ್ತಾಯ ಮಾಡಿದ್ರು.

     

    ಇದಕ್ಕೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಉತ್ತರ ನೀಡಿ, ದೇವದಾಸಿಯರಿಗೆ ಸರಿಯಾಗಿ ಮಾಶಾಸನ ಡಿಬಿಟಿ ಮೂಲಕ ಹಾಕಲಾಗ್ತಿದೆ.ಎಲ್ಲೂ ಕೂಡಾ ಮಾಶಾಸನ ಸೋರಿಕೆ ಆಗ್ತಿಲ್ಲ. ಕೊಪ್ಪಳ ಜಿಲ್ಲೆಯಲ್ಲಿ ದೇವದಾಸಿಯರ ಸರ್ವೆ ಸರಿಯಾಗಿ ಆಗಿಲ್ಲ ಅನ್ನೋ ಬಗ್ಗೆ ಮತ್ತೊಮ್ಮೆ ಸಮೀಕ್ಷೆ ಮಾಡುತ್ತೇವೆ ಎಂದರು.

    ದೇವದಾಸಿಯರಿಗೆ 2 ಸಾವಿರ ರೂ. ಮಾಶಾಸನ ಕೊಡಲಾಗುತ್ತಿದೆ‌. ಪ್ರತಿ ವರ್ಷ 250 ದೇವದಾಸಿಯರಿಗೆ ಒಂದು ಸಾರಿಗೆ ಪ್ರೊತ್ಸಾಹ ಧನವಾಗಿ 30 ಸಾವಿರ ನೀಡಲಾಗುತ್ತದೆ‌. ಈ ಹಣ ವಾಪಸ್ ಕೊಡುವ ಹಾಕಿಲ್ಲ.ದೇವದಾಸಿಯರಿಗೆ ಆರೋಗ್ಯ ತಪಾಸಣೆ ಮಾಡೋ ಕೆಲಸ ಆಗ್ತಿದೆ.ಮನೆಗಳು ಕೊಡೋ ಬಗ್ಗೆ ನಾವು ಪಟ್ಟಿ ಮಾಡಿ ವಸತಿ ಇಲಾಖೆಗೆ ಕಳಿಸುತ್ತೇವೆ. ಅವರು ಅಂತಿಮ ನಿರ್ಧಾರ ಮಾಡಬೇಕು.ಯಾರು ಅರ್ಜಿ ಹಾಕಿರುತ್ತಾರೋ ಅವರಿಗೆ ಆದ್ಯತೆ ಮೇರೆಗೆ ಮನೆ ಹಂಚಿಕೆ ಮಾಡುತ್ತದೆ.ಗೃಹಲಕ್ಷ್ಮಿ ಯೋಜನೆ ದೇವದಾಸಿಯರಿಗೆ ಕೊಡಲಾಗ್ತಿದೆ. ಯಾರಿಗಾದರೂ ಸಿಗದೇ ಇದ್ದರೆ ಮಾಹಿತಿ ಕೊಟ್ಟರೆ ಅವರಿಗೆ ಗೃಹಲಕ್ಷ್ಮಿ ಯೋಜನೆ ಕೊಡುತ್ತೇವೆ ಎಂದು ತಿಳಿಸಿದರು.

     

  • ಡಿಜಿಟಲ್ ಫ್ರಾಡ್, ಅರೆಸ್ಟ್ ಬಗ್ಗೆ ಜಾಗೃತಿ ಮೂಡಿಸಲು ಕ್ರಮ: ಪರಮೇಶ್ವರ್

    ಡಿಜಿಟಲ್ ಫ್ರಾಡ್, ಅರೆಸ್ಟ್ ಬಗ್ಗೆ ಜಾಗೃತಿ ಮೂಡಿಸಲು ಕ್ರಮ: ಪರಮೇಶ್ವರ್

    ಬೆಳಗಾವಿ: ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ (Digital Arrest) ವಂಚನೆ ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ವಾಟ್ಸಾಪ್ ಹಾಗೂ ಸೈಬರ್ ಜಾಗೃತಿಯ ಸಂದೇಶಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಗೃಹ ಸಚಿವ ಪರಮೇಶ್ವರ್ (G Parameshwar) ತಿಳಿಸಿದ್ದಾರೆ.

    ವಿಧಾನ ಪರಿಷತ್ (Legislative Council) ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪ್ರತಾಪ್ ಸಿಂಹ ನಾಯಕ್ ಡಿಜಿಟಲ್ ಫ್ರಾಡ್ ಬಗ್ಗೆ ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರ ನೀಡಿದ ಅವರು, ರಾಜ್ಯದಲ್ಲಿ ಪ್ರಸ್ತುತ ವರ್ಷದಲ್ಲಿ ಡಿಜಿಟಲ್ ಅರೆಸ್ಟ್ ಸಂಬಂಧಿತ ಒಟ್ಟು 641 ಪ್ರಕರಣಗಳಲ್ಲಿ 109 ಕೋಟಿ ರೂ.ಗೂ ಹೆಚ್ಚು ಮೊತ್ತದ ವಂಚನೆ ಆಗಿದೆ. ಅದರಲ್ಲಿ 9.45 ಕೋಟಿ ರೂ.ಗಳನ್ನು ವಶಪಡಿಸಿಕೊಂಡು 27 ಜನರನ್ನು ಅರೆಸ್ಟ್ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಉಗ್ರ ಸಂಘಟನೆಗೆ ನೇಮಕಾತಿ ಕೇಸ್‌ | 5 ರಾಜ್ಯಗಳ 19 ಸ್ಥಳಗಳಲ್ಲಿ ಎನ್‌ಐಎ ಶೋಧ -ಮೂವರು ಅರೆಸ್ಟ್‌

    ಸಾರ್ವಜನಿಕರನ್ನು ಇಂತಹ ಅಪರಾಧಿಕ ಕೃತ್ಯಗಳ ಮೂಲಕ ವಂಚಿಸಲು ನಕಲಿ ಸಿಮ್ ಕಾರ್ಡ್ ಹಾಗೂ ನಕಲಿ ಬ್ಯಾಂಕ್ ಖಾತೆಗಳನ್ನು ಮಾರಾಟಕ್ಕೆ ಬಳಸುವ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಟೆಲಿಗ್ರಾಂ ಇತರೆ ಅಂತರ್ಜಾಲ ವೇದಿಕೆಗಳಲ್ಲಿ ಸಕ್ರಿಯವಾಗಿರುವ ಖಾತೆಗಳು ಹಾಗೂ ಗುಂಪುಗಳನ್ನು ಪತ್ತೆ ಹಚ್ಚಿ, 268 ಫೇಸ್ಬುಕ್ ಗುಂಪುಗಳು, 465 ಟೆಲಿಗ್ರಾಂ ಗುಂಪುಗಳು, 15 ಇನ್ಸ್ಟಾಗ್ರಾಂ ಖಾತೆಗಳು ಹಾಗೂ 61 ವಾಟ್ಸಾಪ್ ಗುಂಪುಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ಶಾಲಾ ಕಾಲೇಜುಗಳಿಗೆ ಇತರೆ ಸಂಸ್ಥೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಡಿಜಿಟಲ್ ಅರೆಸ್ಟ್ ವಂಚನೆಯ ಬಗ್ಗೆ ಜಾಗೃತಿ ಮೂಡಿಸಲು ಜಾಗೃತಾ ಕಾರ್ಯಕ್ರಮ ಕೈಗೊಳ್ಳಲಾಗುತ್ತಿದೆ. ಡಿಜಿಟಲ್ ಅರೆಸ್ಟ್ ಮೂಲಕ ಸಾರ್ವಜನಿಕರನ್ನು ವಂಚಿಸುತ್ತಿರುವ ಸೈಬರ್ ವಂಚಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ, ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಇದನ್ನೂ ಓದಿ: ರೈತ ಆತ್ಮಹತ್ಯೆ ಕೇಸ್‌ ಟ್ವೀಟ್‌ ವಿವಾದ; ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣ ರದ್ದು

    ದೇಶದಾದ್ಯಂತ ಡಿಜಿಟಲ್ ಅರೆಸ್ಟ್ ಪ್ರಕರಣಗಳು ದಿನೇ ದಿನೇ ಅಧಿಕವಾಗುತ್ತಿದ್ದು, ಕಳೆದ ವರ್ಷ ಇಡೀ ದೇಶದಲ್ಲಿ 42,000 ಪ್ರಕರಣ ದಾಖಲಾಗಿದ್ದು, ರಾಜ್ಯದಲ್ಲಿ 11,000 ಪ್ರಕರಣ ದಾಖಲಾಗಿದೆ. ಸಾರ್ವಜನಿಕರು ಸೈಬರ್ ವಂಚನೆ ಆದ ಕೂಡಲೇ ಉಚಿತ ಸಹಾಯವಾಣಿ ಸಂಖ್ಯೆ 1930ಗೆ ಮಾಹಿತಿ ನೀಡುವಂತೆ ತಿಳಿಸಿದರು.  ಇದನ್ನೂ ಓದಿ: ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ – ರಾಜ್ಯ ಸರ್ಕಾರದ ನಡೆಗೆ ಬಿಜೆಪಿ ಸಂಸದರು ಕೆಂಡ

  • ಪ್ರತಿಭಟನೆಯಲ್ಲಿ ಭಾಗಿಯಾಗಿ ಸಮಾಜದ ಋಣ ತೀರಿಸಿ – ವಚನಾನಂದ ಶ್ರೀಗಳ ವಿರುದ್ಧ ಮಾಜಿ ಶಾಸಕ ಗರಂ

    ಪ್ರತಿಭಟನೆಯಲ್ಲಿ ಭಾಗಿಯಾಗಿ ಸಮಾಜದ ಋಣ ತೀರಿಸಿ – ವಚನಾನಂದ ಶ್ರೀಗಳ ವಿರುದ್ಧ ಮಾಜಿ ಶಾಸಕ ಗರಂ

    ದಾವಣಗೆರೆ: ವಚನಾನಂದ ಶ್ರೀಗಳು (Vachanananda Sri) ಪಂಚಮಸಾಲಿ ಸಮಾಜದಿಂದ ನಡೆಯುತ್ತಿರುವ ಮೀಸಲಾತಿ ಹೋರಾಟದಲ್ಲಿ (Panchamasali Protest) ಭಾಗಿಯಾಗಿ ಸಮಾಜದ ಋಣ ತೀರಿಸಬೇಕು ಎಂದು ಮಾಜಿ ಶಾಸಕ ಹೆಚ್.ಎಸ್ ಶಿವಶಂಕರ್ ಆಗ್ರಹಿಸಿದ್ದಾರೆ.

    ಬೆಳಗಾವಿಯಲ್ಲಿ (Belagavi) ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ನಡೆದ ಹಿನ್ನಲೆ, ರಾಜ್ಯಾದ್ಯಂತ ಕೂಡಲಸಂಗಮ ಶ್ರೀಗಳು ಪ್ರತಿಭಟನೆಗೆ ಕರೆ ನೀಡಿದ್ದರು. ದಾವಣಗೆರೆಯಲ್ಲಿ ಈ ಪ್ರತಿಭಟನೆಯ ಮುಖಂಡತ್ವವನ್ನು ಶಿವಶಂಕರ್ ವಹಿಸಿದ್ದು, 500ಕ್ಕೂ ಹೆಚ್ಚು ಪ್ರತಿಭಟನಾಕಾರರು ರ್ಯಾಲಿಯಲ್ಲಿ ಪ್ರತಿಭಟನೆ ನಡೆದಿದೆ. ಈ ವೇಳೆ ಮಾತನಾಡಿದ ಅವರು, ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಕೂಡಲಸಂಗಮ ಶ್ರೀಗಳು ಮಠವನ್ನು ಬಿಟ್ಟು ಹೋರಾಟ ಮಾಡುತ್ತಿದ್ದಾರೆ. ಮೀಸಲಾತಿ ಸಿಗುವವರೆಗೂ ಮಠ ಸೇರುವುದಿಲ್ಲ ಎಂದು ಹೋರಾಟಕ್ಕೆ ಇಳಿದಿದ್ದಾರೆ. ಎಸಿ ರೂಮ್‍ನಲ್ಲಿ ಕುಳಿತು ಪ್ರತಿಭಟನೆ ಬಗ್ಗೆ ಮಾತನಾಡುವುದಲ್ಲ. ಸಮಾಜದ ಹೋರಾಟದಲ್ಲಿ ಭಾಗಿಯಾಗಿ ಸಮಾಜದ ಋಣ ತೀರಿಸಿ. ಬರಿ ಎಸಿ ರೂಮ್‍ನಲ್ಲಿ ಇರೋದಲ್ಲ ಎಂದು ವಚನಾನಂದ ಸ್ವಾಮೀಜಿಗಳ ವಿರುದ್ಧ ಅಕ್ರೋಶ ಹೊರ ಹಾಕಿದ್ದಾರೆ.

  • ರಾಜ್ಯಾದ್ಯಂತ ಪಂಚಮಸಾಲಿ ಹೋರಾಟದ ಕಿಚ್ಚು – ಅಥಣಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ

    ರಾಜ್ಯಾದ್ಯಂತ ಪಂಚಮಸಾಲಿ ಹೋರಾಟದ ಕಿಚ್ಚು – ಅಥಣಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ

    ಬೆಳಗಾವಿ: ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಲಾಠಿ ಚಾರ್ಜ್ ಖಂಡಿಸಿ ಅಥಣಿಯಲ್ಲಿ (Athani) ರಾಷ್ಟ್ರೀಯ ಹೆದ್ದಾರಿ (National Highway) ತಡೆದು ಪ್ರತಿಭಟನೆ ನಡೆಸಿದ್ದಾರೆ.

    ಬೆಳಗಾವಿ ಅಧಿವೇಶನದಲ್ಲಿ (Belagavi Session) ಪಂಚಮಸಾಲಿ ಹೋರಾಟದ ವೇಳೆ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ನಡೆಸಿದ ಹಿನ್ನೆಲೆ ಇಂದು (ಡಿ.12) ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಪಂಚಮಸಾಲಿ ಸಮಾಜದಿಂದ ಪ್ರತಿಭಟನೆ ನಡೆಯುತ್ತಿದೆ. ಪಂಚಮಸಾಲಿ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ ಬೆನ್ನಲ್ಲೇ ಪ್ರತಿಭಟನೆ ನಡೆಯುತ್ತಿದೆ.ಇದನ್ನೂ ಓದಿ: ಅಂತರ್ಜಾತಿ ಯುವತಿ ಪ್ರೀತಿಸಿದ್ದಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಜಾತಿನಿಂದನೆ ಕೇಸ್!

    2ಎ ಮೀಸಲಾತಿಗಾಗಿ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯಾ ಸರ್ಕಾರದ ಗೂಂಡಾ ವರ್ತನೆಯನ್ನು ಖಂಡಿಸಿ ಹೋರಾಟಗಾರರು ಬೀದಿಗಿಳಿದಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದ್ದು, ಪ್ರತಿಭಟನೆಯಲ್ಲಿ ವಕೀಲರು ಸೇರಿದಂತೆ ಬಿಜೆಪಿ ಸಹ ಕಾರ್ಯಕರ್ತರು ಭಾಗಿಯಾಗಿದ್ದಾರೆ.

    ಇನ್ನೂ ಅಥಣಿ ತಾಲೂಕಿನ ಗುಂಡೆವಾಡಿ ಗ್ರಾಮದಲ್ಲಿ ಜತ್ತ -ಜಾಂಬೋಟಿ ರಾಜ್ಯ ಹೆದ್ದಾರಿ ತಡೆದು ಪಂಚಮಸಾಲಿ ಸಮಾಜದವರು ಪ್ರತಿಭಟನೆ ನಡೆಸಿದ್ದಾರೆ. ಲಾಠಿ ಚಾರ್ಜ್ ನಡೆಸಿದ್ದಕ್ಕೆ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ನಡೆಯನ್ನ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ.

    ಚಿಕ್ಕೋಡಿಯಲ್ಲಿ ಮಾತ್ರವಲ್ಲ, ಧಾರವಾಡ, ಹಾವೇರಿ, ಬೆಳಗಾವಿ, ಕೊಪ್ಪಳ, ದಾವಣಗೆರೆ, ಬಾಗಲಕೋಟೆ, ಹುಬ್ಬಳ್ಳಿ, ಗದಗ ಸೇರಿ ಹಲವು ಜಿಲ್ಲೆಗಳಲ್ಲಿ ಪಂಚಮಸಾಲಿ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರೂ ಇದಕ್ಕೆ ಕೈಜೋಡಿಸಿದ್ದಾರೆ.

    ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದೇಕೆ?
    ಇದೇ ಮಂಗಳವಾರ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಬಂದ ಹೋರಾಟಗಾರರನ್ನು ಪೊಲೀಸರು ದಾರಿಯಲ್ಲೇ ತಡೆದಿದ್ದರು. ಮುತ್ತಿಗೆ ಹಾಕಲು ಅನುಮತಿ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದರೂ ಪ್ರತಿಭಟನಾಕಾರರು ಪಟ್ಟುಹಿಡಿದಿದ್ದರು. ಈ ವೇಳೆ ತಳ್ಳಾಟ ನೂಕಾಟ ನಡೆದಿದೆ. ಈ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಚಪ್ಪಲಿ, ಕಲ್ಲು ಬಿದ್ದಿದೆ. ಇದರಿಂದ ಪೊಲೀಸರು ಪ್ರತಿಭಟನಾ ನಿರತರ ಮೇಲೆ ಲಾಠಿ ಬೀಸಿದ್ದರು. ಲಾಠಿ ಬೀಸುತ್ತಿದ್ದಂತೆ ಪ್ರತಿಭಟನಾ ನಿರತರು ದಿಕ್ಕಾಪಾಲಾಗಿ ಓಡಿದ್ದರು.ಇದನ್ನೂ ಓದಿ: ವಯನಾಡಿಗೆ 100 ಮನೆ – ರಾಜಕೀಯ ಗುಲಾಮಗಿರಿಯ ಸಂಕೇತ: ಸಿಎಂ ವಿರುದ್ಧ ಸಿ.ಟಿ.ರವಿ ಕಿಡಿ

  • ಸ್ವಾಮೀಜಿ ಕಾನೂನು ಉಲ್ಲಂಘನೆ ಮಾಡಿದ್ದಾರೆ, ಲಾಠಿ ಚಾರ್ಜ್ ಅನಿವಾರ್ಯ ಆಗಿತ್ತು: ಪರಮೇಶ್ವರ್‌

    ಸ್ವಾಮೀಜಿ ಕಾನೂನು ಉಲ್ಲಂಘನೆ ಮಾಡಿದ್ದಾರೆ, ಲಾಠಿ ಚಾರ್ಜ್ ಅನಿವಾರ್ಯ ಆಗಿತ್ತು: ಪರಮೇಶ್ವರ್‌

    ಬೆಂಗಳೂರು: ಪಂಚಮಸಾಲಿ ಪ್ರತಿಭಟನೆ (Panchmasali Protest) ವೇಳೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಕಾನೂನು ಉಲ್ಲಂಘನೆ ಮಾಡಿದ್ದಾರೆ. ಕೆಲವರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಆದ್ದರಿಂದ, ಲಾಠಿ ಚಾರ್ಜ್ ಮಾಡುವ ಅನಿವಾರ್ಯ ಇತ್ತು ಎಂದು ಗೃಹಸಚಿವ ಜಿ. ಪರಮೇಶ್ವರ್‌ (G Parameshwar) ಅವರು ಪೊಲೀಸರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

    2ಎ ಮೀಸಲಾತಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ಪಂಚಮಸಾಲಿಗಳ ಪ್ರತಿಭಟನೆ ವೇಳೆ ಲಾಠಿ ಚಾರ್ಜ್‌ ಘಟನೆಗೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಗೃಹಸಚಿವರು ಪ್ರತಿಕ್ರಿಯೆ ನೀಡಿದರು. ಇದನ್ನೂ ಓದಿ: 2028ಕ್ಕೆ ನಮಗೆ ಬೇಕಾದ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ: ಜಯ ಮೃತ್ಯುಂಜಯ ಸ್ವಾಮೀಜಿ

    ಪಂಚಮಸಾಲಿ ಪ್ರತಿಭಟನೆ ಅವರ ಹಕ್ಕು. 5 ಸಾವಿರ ಟ್ರ್ಯಾಕ್ಟರ್‌ಗಳನ್ನು ತೆಗೆದುಕೊಂಡು ಮುತ್ತಿಗೆ ಹಾಕಲು ಪ್ರತಿಭಟನೆ ಮಾಡಲು ಮುಂದಾಗಿದ್ದರು. ಅದಕ್ಕೆ ಅನುಮತಿ ನೀಡಲಾಗಿತ್ತು, ಮೂವರು ಸಚಿವರನ್ನು ಪ್ರತಿಭಟನಾ ಸ್ಥಳಕ್ಕೆ ಕಳಿಸಲಾಗಿತ್ತು. ಸಿಎಂ ಜೊತೆ ಮಾತುಕತೆಗೆ ಸ್ವಾಮೀಜಿ ಬರಲಿಲ್ಲ. ಮುಖ್ಯರಸ್ತೆಗೆ ಪ್ರತಿಭಟನಾಕಾರರು ಬಂದರು. ಕಾನೂನು ಉಲ್ಲಂಘನೆ ಮಾಡಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಹೋದಾಗ ಲಘು ಲಾಠಿ ಪ್ರಹಾರ ನಡೆದಿದೆ. ಸ್ವಾಮೀಜಿ ಅವರು ಕಾನೂನು ಉಲ್ಲಂಘನೆ ಮಾಡಿದ್ದಾರೆ. ಲಾಠಿ ಚಾರ್ಜ್ ಮಾಡುವುದು ಅನಿವಾರ್ಯ ಆಗಿತ್ತು. ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆಸಿದ್ದಾರೆ ಆದ್ದರಿಂದ, ಲಾಠಿ ಚಾರ್ಜ್ ಮಾಡುವ ಅನಿವಾರ್ಯ ಇತ್ತು ಎಂದು ತಿಳಿಸಿದರು.

    ಇನ್ನೂ ಗೋಲಿಬಾರ್ ಮಾಡುವ ಪ್ಲ್ಯಾನ್‌ ಇತ್ತು ಎಂಬ ಸ್ವಾಮೀಜಿ ಹೇಳಿಕೆ ಆ ರೀತಿ ಏನೂ ಇಲ್ಲ, ಎಂದರಲ್ಲದೇ ಪೊಲೀಸರು ಯಾರ ಮೇಲೂ ದುರುದ್ದೇಶಪೂರಿತವಾಗಿ ಲಾಠಿ ಪ್ರಹಾರ ನಡೆಸಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: 2ಎ ಮೀಸಲಾತಿ ಕಿಚ್ಚು – ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

    ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದೇಕೆ?
    ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಬಂದ ಹೋರಾಟಗಾರರನ್ನು ಪೊಲೀಸರು ದಾರಿಯಲ್ಲೇ ತಡೆದಿದ್ದರು. ಮುತ್ತಿಗೆ ಹಾಕಲು ಅನುಮತಿ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದರೂ ಪ್ರತಿಭಟನಾಕಾರರು ಪಟ್ಟುಹಿಡಿದಿದ್ದರು. ಈ ವೇಳೆ ತಳ್ಳಾಟ ನೂಕಾಟ ನಡೆದಿದೆ. ಈ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಚಪ್ಪಲಿ, ಕಲ್ಲು ಬಿದ್ದಿದೆ. ಮ್ಮ ಮೇಲೆಯೇ ಕಲ್ಲುತೂರಿದ್ದರು, ಇದರಿಂದ ಪೊಲೀಸರು ಪ್ರತಿಭಟನಾ ನಿರತರ ಮೇಲೆ ಲಾಠಿ ಬೀಸಿದ್ದರು. ಲಾಠಿ ಬೀಸುತ್ತಿದ್ದಂತೆ ಪ್ರತಿಭಟನಾ ನಿರತರು ದಿಕ್ಕಾಪಾಲಾಗಿ ಓಡಿದ್ದರು. ಇದನ್ನೂ ಓದಿ: ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ -ಹೋರಾಟಗಾರರ ಮೇಲೆ ಲಾಠಿಚಾರ್ಜ್‌

  • 2ಎ ಮೀಸಲಾತಿ ಕಿಚ್ಚು – ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

    2ಎ ಮೀಸಲಾತಿ ಕಿಚ್ಚು – ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

    – ಲಾಠಿಚಾರ್ಜ್ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

    ಬೆಳಗಾವಿ: 2ಎ ಮೀಸಲಾತಿಗೆ ಆಗ್ರಹಿಸಿ ಉಗ್ರ ಹೋರಾಟದ ಮಾಡುವುದಾಗಿ ಕೂಡಲಸಂಗಮದ ಪಂಚಮಸಾಲಿ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ (Basavajaya Mrutunjaya Swamiji) ಎಚ್ಚರಿಕೆ ನೀಡಿದ್ದಾರೆ.

    ಇಂದು (ಡಿ.12) ಬೆಳಗಾವಿ (Belagavi) ಅಧಿವೇಶನದ ವೇಳೆ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಪ್ರಕರಣದ ಹಿನ್ನೆಲೆ ಉಗ್ರ ಹೋರಾಟ ಮಾಡುವುದಾಗಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪಂಚಮಸಾಲಿ ಸಮಾಜಕ್ಕೆ ಪ್ರತಿಭಟನೆಗೆ ಕರೆ ನೀಡಿದ್ದಾರೆ. ರಾಜ್ಯಾದ್ಯಂತ ಪಂಚಮಸಾಲಿ ಸಮಾಜದಿಂದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಲಿದೆ. ಸದನದ ಒಳಗೂ ಹೊರಗೂ ಪಂಚಮಸಾಲಿ ಮೀಸಲಾತಿ ಹೋರಾಟ ಸದ್ದು ಮಾಡಲಿದ್ದು, ಜೊತೆಗೆ ಜಿಲ್ಲೆ, ತಾಲೂಕು, ಹೋಬಳಿ ಮಟ್ಟದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆಗೆ ಕರೆ ನೀಡಲಾಗಿದೆ.ಇದನ್ನೂ ಓದಿ: ಡ್ರೋನ್‌ ಪ್ರತಾಪ್‌ ಎಡವಟ್ಟು – ನೀರಿನೊಳಗೆ ಕೆಮಿಕಲ್ ಹಾಕಿ ಬ್ಲಾಸ್ಟ್, ಸಾರ್ವಜನಿಕರು ನಿಗಿನಿಗಿ ಕೆಂಡ!

    ಬೆಳಗಾವಿ ಹಿರೇಬಾಗೇವಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಸ್ವಾಮೀಜಿ ನೇತೃತ್ವದಲ್ಲಿ ಬೆಳಗ್ಗೆ 10:30ಕ್ಕೆ ಪ್ರತಿಭಟನೆ ನಡೆಯಲಿದ್ದು, ಪಂಚಮಸಾಲಿ ಸಮಾಜದವರು ರಾಜ್ಯಪಾಲರಿಗೆ ಮನವಿ ಸಲ್ಲಿಸಲಿದ್ದಾರೆ. ಮನವಿ ಮೂಲಕ ಸಿಎಂ ಸಿದ್ದರಾಮಯ್ಯ, ಎಡಿಜಿಪಿ ಆರ.ಹಿತೇಂದ್ರ ಅವರನ್ನು ವಜಾ ಮಾಡಬೇಕು. ಮೀಸಲಾತಿ ಹೋರಾಟವನ್ನ ಸರ್ಕಾರ ಹತ್ತಿಕ್ಕಲು ಯತ್ನಿಸಿದೆ. ತಕ್ಷಣವೇ ಪಂಚಮಸಾಲಿ ಸಮಾಜಕ್ಕೆ ಕ್ಷಮೆ ಕೇಳಬೇಕು. ಇದು ಲಿಂಗಾಯತ ವಿರೋಧಿ ಸರ್ಕಾರ ಎಂದು ಪ್ರತಿಭಟನೆ ಮೂಲಕ ಆಗ್ರಹಿಸಲಿದ್ದಾರೆ.

    ಒಟ್ಟು 9 ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯಲಿದ್ದು, 4 ಸಂಘಟನೆಗಳು ಸರ್ಕಾರಕ್ಕೆ ಮನವಿ ಸಲ್ಲಿಸಲಿವೆ. ಬೆಳಗಾವಿ ವಿಧಾನ ಸೌಧದ ಹೊರಗಿನ ಕೊಂಡಸಕೋಪ್ಪ, ಸುವರ್ಣ ಗಾರ್ಡನ್ ಬಳಿಯ ಟೆಂಟ್‌ನಲ್ಲಿ ಹೋರಾಟ ನಡೆಯಲಿದೆ. ಕಾರ್ಮಿಕರ ವಿವಿಧ ಬೇಡಿಕೆಗೆ ಒತ್ತಾಯಿಸಿ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್, ಸ್ವಾತಂತ್ರ‍್ಯ ಯೋಧರ ಉತ್ತರಾಧಿಕಾರಿ ಸದಸ್ಯರಿಗೆ ಸರ್ಕಾರಿ ನೌಕರಿ ಸೇರಿ ವಿವಿಧ ಬೇಡಿಕೆಗೆ ಒತ್ತಾಯಿಸಿ ಅಖಿಲ ಕರ್ನಾಟಕ ಸ್ವಾತಂತ್ರ‍್ಯ ಯೋಧರ ಉತ್ತರಾಧಿಕಾರಿಗಳ ಸಂಘ, ಒಳ ಮೀಸಲಾತಿ, ಜಾತಿ ಗಣತಿ ಕೂಡಲೆ ಜಾರಿಗೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಹೋರಾಟ ನಡೆಯಲಿದೆ.

    ಪಂಚಮಸಾಲಿ ಮೀಸಲು ಹೋರಾಟದಲ್ಲಿ ನಡೆದ ಲಾಠಿಚಾರ್ಜ್‌ನಿಂದಾಗಿ ಹಲವರು ಗಾಯಗೊಂಡಿದ್ದರು. ಸದ್ಯ ಗಾಯಳುಗಳು ಬೆಳಗಾವಿ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಿಜೆಪಿ ನಾಯಕರು ಇಂದು ಗಾಯಾಳುಗಳ ಆರೋಗ್ಯ ವಿಚಾರಿಣೆ ನಡೆಸಲಿದ್ದಾರೆ. ಬಿಜೆಪಿ ರಾಜಾಧ್ಯಕ್ಷ ಬಿವೈ ವಿಜಯೇಂದ್ರ, ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಅರವಿಂದ ಬೆಲ್ಲದ್, ಸಿ.ಸಿ ಪಾಟೀಲ್ ಸೇರಿದಂತೆ ಇನ್ನಿತರರು ಭೇಟಿ ನೀಡಲಿದ್ದಾರೆ.

    ಬಿಜೆಪಿಯಿಂದ ಲಾಠಿಚಾರ್ಜ್ ಖಂಡಿಸಿ ಪ್ರತಿಭಟನೆ:
    ಪಂಚಮಸಾಲಿ ಹೋರಾಟದಲ್ಲಿ ನಡೆದ ಲಾಠಿಚಾರ್ಜ್ ಖಂಡಿಸಿ ಇಂದು ಬಿಜೆಪಿ ಸುವರ್ಣಸೌಧದ ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಿದೆ. ಬಿವೈ ವಿಜಯೇಂದ್ರ, ಅಶೋಕ್, ಛಲವಾದಿ ನಾರಾಯಣಸ್ವಾಮಿ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಬಿಜೆಪಿಯ ಶಾಸಕರು, ಪರಿಷತ್ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.ಇದನ್ನೂ ಓದಿ: ಮರುಡೇಶ್ವರದಲ್ಲಿ ವಿದ್ಯಾರ್ಥಿನಿಯರ ಸಾವು ಕೇಸ್: ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ

  • ಬೆಳಗಾವಿ| ವಿಧಾನಸಭೆ ಸಭಾಧ್ಯಕ್ಷರಿಗೆ ನೂತನ ಪೀಠ – ವಿಶೇಷತೆ ವಿವರಿಸಿದ ಯು.ಟಿ.ಖಾದರ್

    ಬೆಳಗಾವಿ| ವಿಧಾನಸಭೆ ಸಭಾಧ್ಯಕ್ಷರಿಗೆ ನೂತನ ಪೀಠ – ವಿಶೇಷತೆ ವಿವರಿಸಿದ ಯು.ಟಿ.ಖಾದರ್

    ಬೆಳಗಾವಿ: ಸಂವಿಧಾನದಲ್ಲಿ ಸದನಕ್ಕೆ ಬಹಳ ಉನ್ನತ ಸ್ಥಾನವನ್ನು ನೀಡಲಾಗಿದೆ. ಅಂತಹ ಸದನವನ್ನು ಮುನ್ನಡೆಸುವ ಜವಾಬ್ದಾರಿ ಹೊಂದಿರುವ ಸಭಾಧ್ಯಕ್ಷರ ಹುದ್ದೆ ಸಹ ಒಂದು ಸಂವಿಧಾನಾತ್ಮಕ ಹುದ್ದೆಯಾಗಿದೆ. ಅಂತಹ ಹುದ್ದೆ ಅಲಂಕರಿಸುವ ಸಭಾಧ್ಯಕ್ಷರು ಆಸೀನರಾಗುವ ಪೀಠ ಸಹ ಅಷ್ಟೇ ಪ್ರಾಮುಖ್ಯತೆ ಹೊಂದಿರಬೇಕು ಎಂಬ ಉದ್ದೇಶದಿಂದ ಬೆಂಗಳೂರಿನ ವಿಧಾನಸೌಧದ ಪೀಠದ ಮಾದರಿಯಲ್ಲಿಯೇ ಬೆಳಗಾವಿಯಲ್ಲಿನ ಸುವರ್ಣ ವಿಧಾನಸೌಧದಲ್ಲಿನ ವಿಧಾನಸಭೆಯ ಸಭಾಂಗಣದಲ್ಲಿರುವ ಸಭಾಧ್ಯಕ್ಷರ ಪೀಠವನ್ನು ತಯಾರಿಸಿ ಅಳವಡಿಸಲಾಗಿದೆ ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ ಖಾದರ್ (UT Khader) ಬಣ್ಣಿಸಿದರು.

    ಬೆಳಗಾವಿಯಲ್ಲಿ ವಿಧಾನಸಭೆ ಸಭಾಧ್ಯಕ್ಷರಿಗೆ ನಿರ್ಮಿಸಿದ ನೂತನ ಪೀಠದ (Chair) ವಿಶೇಷತೆಯನ್ನು ಯುಟಿ ಖಾದರ್ ವಿವರಿಸಿದರು. ಈ ವೇಳೆ ಮಾತನಾಡಿದ ಅವರು, ವಿಧಾನಸೌಧವನ್ನು ಕಟ್ಟಿಸಿದ ದಿ.ಕೆಂಗಲ್ ಹನುಮಂತಯ್ಯನವರು (Kengal Hanumanthaiah) ಸಭಾಧ್ಯಕ್ಷ ಪೀಠದ ಬಗ್ಗೆ ಒಂದು ಮಹೋನ್ನತ ಪರಿಕಲ್ಪನೆ ಹೊಂದಿದ್ದರು. ಈ ಪೀಠವನ್ನು ವಿಶಿಷ್ಟವಾಗಿ ರೂಪಿಸಬೇಕೆಂದು ಅವರು ಯೋಜಿಸಿದ್ದರು. ಅದರಂತೆ ಅವರು ನಮ್ಮ ಇತಿಹಾಸದಲ್ಲಿ ರಾಜ್ಯವನ್ನು ಬಹಳ ಕಾಲ ಉತ್ತಮವಾಗಿ ಆಡಳಿತ ನಡೆಸಿದ ರಾಷ್ಟ್ರಕೂಟರು ಹಾಗೂ ಹೊಯ್ಸಳರು ಹೊಂದಿದ್ದ ರಾಷ್ಟ್ರ ಲಾಂಛನಗಳನ್ನು ಅದರಲ್ಲಿ ಅಳವಡಿಸಿಕೊಳ್ಳಬೇಕೆಂಬ ಚಿಂತನೆ ನಡೆಸಿದ್ದರು. ಈ ಉದ್ದೇಶಕ್ಕಾಗಿಯೇ ಶಿವಮೊಗ್ಗದಲ್ಲಿ ಲಭ್ಯವಿದ್ದ ಉತ್ತಮ ಗುಣಮಟ್ಟದ ಬೀಟೆ ಮರ ಆಯ್ಕೆ ಮಾಡಿ, ಅಲ್ಲಿನ ಗುಡಿಗಾರರಿಗೆ ತಮ್ಮ ಕನಸಿನ ಚಿಂತನೆಗಳನ್ನು ವಿವರಿಸಿ ಅದೇ ರೀತಿಯಲ್ಲಿಯೇ ಪೀಠ ಮೂಡಿಬರುವಂತೆ ಮುತುವರ್ಜಿ ವಹಿಸಿದ್ದರು. ರಾಷ್ಟ್ರಕೂಟರು ಹೊಂದಿದ್ದ ಗಂಡಭೇರುಂಡ ಚಿಹ್ನೆಯನ್ನು ಪೀಠದಲ್ಲಿ ಅಳವಡಿಸಿದ್ದರು. ಗಂಡಭೇರುಂಡ ಚಿಹ್ನೆಯನ್ನು ರಾಷ್ಟ್ರಕೂಟರು ತಮ್ಮ ಅಧಿಕಾರ ಹಾಗೂ ಶಕ್ತಿ ಸಾಮರ್ಥ್ಯದ ಪ್ರತೀಕವಾಗಿ ಹಾಗೂ ದೈವಿಕ ರಕ್ಷಣೆ ಹೊಂದಿರುವ ಪ್ರತೀಕವಾಗಿ ಉಪಯೋಗಿಸಿದ್ದರು. ಅದೇ ಲಾಂಛನವನ್ನು ಈ ಪೀಠದಲ್ಲಿ ಅದರ ಪ್ರತಿರೂಪವಾಗಿ ಕೆತ್ತಲಾಗಿದೆ ಎಂದರು. ಇದನ್ನೂ ಓದಿ: ಮೊದಲ ದಿನವೇ ಬಿಜೆಪಿ ಶಾಸಕರಲ್ಲಿ ಸಮನ್ವಯದ ಕೊರತೆ

    ವಿಶಾಲವಾದ ಸಾಮ್ರಾಜ್ಯವನ್ನು ಹೊಂದಿದ್ದ ಹಾಗೂ ಬಹುಕಾಲ ಉತ್ತಮವಾಗಿ ಆಳಿದ ಹೊಯ್ಸಳರು ಸಹ ಶರಭ ಅಂದರೆ ಸಿಂಹದ ಲಾಂಛನ ಹೊಂದಿದ್ದರು. ಸಿಂಹವು ಶೌರ್ಯದ ಪ್ರತೀಕವಾಗಿದ್ದು, ಅದನ್ನೂ ಸಹ ಪೀಠದ ಎರಡೂ ಬದಿಗಳಲ್ಲಿ ಕೆತ್ತಲಾಗಿದೆ. ಅದೇ ರೀತಿ ಪೀಠದ ಮೇಲ್ಭಾಗದಲ್ಲಿ ಸೂರ್ಯಕಾಂತಿ ಹೂವಿನ ಚಿತ್ತಾರವನ್ನು ಕೆತ್ತಲಾಗಿದ್ದು, ಇದು ಸಭಾಧ್ಯಕ್ಷರಿಗೆ ಒಂದು ರೀತಿಯ ಮೇಲ್ಛಾವಣಿಯಂತೆ ರೂಪಿಸಲಾಗಿದೆ. ಪೀಠದ ಮುಂಭಾಗದ ಮೇಲೆ ಸೂರ್ಯ ಮತ್ತು ಚಂದ್ರರ ಚಿಹ್ನೆಗಳನ್ನು ಕೆತ್ತಲಾಗಿದ್ದು, ಸೂರ್ಯ ಮತ್ತು ಚಂದ್ರರ ಚಿಹ್ನೆಯ ಅಮರತ್ವವನ್ನು ಪ್ರತಿರೂಪಿಸುವಂತಹ ಚಿಹ್ನೆಯನ್ನು ಕೆತ್ತಲಾಗಿದೆ. ಪೀಠದ ಮೇಲ್ಭಾಗದ ಎರಡೂ ಬದಿಗಳಲ್ಲಿ ಮಾವಿನ ಕಾಯಿ ರೂಪವನ್ನು ಕೆತ್ತಲಾಗಿದೆ. ನಮ್ಮ ದೇಶದಲ್ಲಿ ಮಾವಿನ ಕಾಯಿಗೆ ವೈಜ್ಞಾನಿಕ ಹಾಗೂ ಧಾರ್ಮಿಕವಾಗಿ ಬಹಳ ಪ್ರಾಮುಖ್ಯತೆ ನೀಡಲಾಗಿದೆ. ಮಾವಿನ ಕಾಯಿ ಬೆಳವಣಿಗೆಯ ದ್ಯೋತಕವಾಗಿದ್ದು, ಈ ಹಿನ್ನೆಲೆಯಲ್ಲಿ ಮಾವಿನ ಕಾಯಿ ಪ್ರತಿರೂಪವನ್ನು ಕೆತ್ತಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ – 45 ದಿನಗಳಲ್ಲಿ 13,000 ರೈಲುಗಳ ಸಂಚಾರ

    ಹೀಗೆ ನಮ್ಮ ದೇಶದ ಇತಿಹಾಸ ಹಾಗೂ ಧಾರ್ಮಿಕತೆಯ ಚಿಹ್ನೆಗಳ ಮಿಶ್ರಣ ರೂಪದಲ್ಲಿರುವ ಈ ಕೆತ್ತನೆಗಳನ್ನು ಬೀಟೆ ಮರದಲ್ಲಿ ಬೆಂಗಳೂರಿನ ವಿಧಾನಸೌಧದ ಪೀಠವನ್ನು ತಯಾರಿಸಿ ಅಳವಡಿಸಲಾಗಿದೆ. ಇದೇ ಉದ್ದೇಶದಿಂದ ಬೆಳಗಾವಿಯಲ್ಲಿಯ ಸುವರ್ಣ ವಿಧಾನಸೌಧದಲ್ಲಿನ ವಿಧಾನಸಭೆ ಸಭಾಂಗಣದ ಸಭಾಧ್ಯಕ್ಷರ ಪೀಠವನ್ನು ತಯಾರಿಸಿ ನೂತನವಾಗಿ ಅಳವಡಿಸಲಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಕೊನೆಗೂ ಪಂಚಮಸಾಲಿ ಹೋರಾಟಕ್ಕೆ ಬೆಳಗಾವಿ ಜಿಲ್ಲಾಡಳಿತ ಅನುಮತಿ

  • ಆಸ್ಪತ್ರೆಗಳು ಶವಾಗಾರವಾಗುವ ಪರಿಸ್ಥಿತಿ, ಇದಕ್ಕೆ `ಕೈ’ ಸರ್ಕಾರವೇ ಕಾರಣ – ಛಲವಾದಿ ನಾರಾಯಣಸ್ವಾಮಿ

    ಆಸ್ಪತ್ರೆಗಳು ಶವಾಗಾರವಾಗುವ ಪರಿಸ್ಥಿತಿ, ಇದಕ್ಕೆ `ಕೈ’ ಸರ್ಕಾರವೇ ಕಾರಣ – ಛಲವಾದಿ ನಾರಾಯಣಸ್ವಾಮಿ

    ಬೆಳಗಾವಿ: ಬಾಣಂತಿಯರು, ಹಸುಗೂಸುಗಳ ಸಾವಿನಿಂದಾಗಿ ಆಸ್ಪತ್ರೆಗಳು ಶವಾಗಾರವಾಗುವ ಪರಿಸ್ಥಿತಿಯಿದೆ. ಇದಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಹೇಳಿದರು.ಇದನ್ನೂ ಓದಿ: ಹಾಸನ| ಹೃದಯಾಘಾತದಿಂದ ಟೆಕ್ಕಿ ಸಾವು

    ಬೆಳಗಾವಿಯಲ್ಲಿ (Belagavi) ಮಾತನಾಡಿದ ಅವರು, ಬಾಣಂತಿಯರು, ನವಜಾತ ಶಿಶುಗಳ ಸಾವಿನ ವಿಷಯದಲ್ಲಿ ರಾಜ್ಯಾದ್ಯಂತ ಗೊಂದಲದ ವಾತಾವರಣ ಇದೆ. ಆಸ್ಪತ್ರೆಗಳು ಶವಾಗಾರವಾಗುವ ಪರಿಸ್ಥಿತಿಯನ್ನು ನಾವು ನೋಡುತ್ತಿದ್ದೇವೆ. ಈ ಸ್ಥಿತಿಗೆ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಟೀಕಿಸಿದ್ದಾರೆ.

    ಕಾಂಗ್ರೆಸ್ಸಿಗರು (C0ngress) ಭ್ರಷ್ಟಾಚಾರ ಮಾಡುವ ಕಡೆ ಗಮನ ಕೊಡುತ್ತಿದ್ದು, ಆಸ್ಪತ್ರೆಗಳ ಮೇಲೆ ನಿಯಂತ್ರಣ ಇಲ್ಲವಾಗಿದೆ. ಔಷಧಿ ಕೊಂಡುಕೊಳ್ಳುವಾಗ ಬ್ಲಾಕ್ ಮಾಡಿದ ಕಳಪೆ ಔಷಧಿಗಳನ್ನು ಖರೀದಿಸಿದ್ದಾರೆ. ಅವುಗಳನ್ನು ಬಳಸಿದ್ದರಿಂದ ಅನೇಕ ಕಡೆ ಈ ರೀತಿಯ ದಾರುಣ ಘಟನೆಗಳು ನಡೆದಿವೆ. ಇದೇ ಕಾರಣಕ್ಕೆ ರಾಜ್ಯಾಧ್ಯಕ್ಷ ವಿಜಯೇಂದ್ರ, ಡಾ.ಅಶ್ವತ್ಥನಾರಾಯಣ್, ಶಶಿಕಲಾ ಜೊಲ್ಲೆ, ಹೇಮಲತಾ ನಾಯಕ್ ಸೇರಿ ನಾವೆಲ್ಲ ಇಲ್ಲಿಗೆ ಭೇಟಿ ಕೊಟ್ಟಿದ್ದೇವೆ. ವಸ್ತುಸ್ಥಿತಿಯನ್ನು ವೈದ್ಯರಿಂದ ತಿಳಿದುಕೊಳ್ಳುತ್ತೇವೆ ಎಂದು ತಿಳಿಸಿದರು.ಇದನ್ನೂ ಓದಿ: ತುಮಕೂರು ಸಿದ್ದಗಂಗಾ ಮಠದಲ್ಲಿ ಚಿರತೆ ಪ್ರತ್ಯಕ್ಷ

     

  • ಸರ್ಕಾರದ ಬೇಜವಾಬ್ದಾರಿತನದಿಂದ ಬಾಣಂತಿಯರು, ಹಸುಗೂಸುಗಳ ಸಾವು : ವಿಜಯೇಂದ್ರ

    ಸರ್ಕಾರದ ಬೇಜವಾಬ್ದಾರಿತನದಿಂದ ಬಾಣಂತಿಯರು, ಹಸುಗೂಸುಗಳ ಸಾವು : ವಿಜಯೇಂದ್ರ

    ಬೆಳಗಾವಿ: ಬಾಣಂತಿಯರು ಮತ್ತು ಹಸುಗೂಸುಗಳ ಸಾವಿನಲ್ಲಿ ರಾಜ್ಯ ಸರ್ಕಾರದ ಬೇಜವಾಬ್ದಾರಿತನ ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿವೈ.ವಿಜಯೇಂದ್ರ (BY Vijayendra) ಆರೋಪಿಸಿದರು.ಇದನ್ನೂ ಓದಿ: ಸಿಎಂ ನಿದ್ದೆರಾಮಯ್ಯ ಆಗಿದ್ದಾರೆ, 17 ತಿಂಗಳಲ್ಲಿ 17 ಅವಾಂತರ ತೋರಿದ ಸರ್ಕಾರ – ಆರ್.ಅಶೋಕ್ ಕಿಡಿ

    ಬೆಳಗಾವಿಯಲ್ಲಿ (Belagavi)ಇಂದು (ಡಿ.9) ಆಸ್ಪತ್ರೆಗೆ ಭೇಟಿ ಕೊಟ್ಟ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಸತ್ಯಾಂಶ ತಿಳಿಯಲು ಇಲ್ಲಿಗೆ ಬಂದಿದ್ದೇವೆ. ಆಸ್ಪತ್ರೆ ಭೇಟಿಯಲ್ಲಿ ರಾಜಕಾರಣದ ಪ್ರಶ್ನೆ ಇಲ್ಲ. ಇವತ್ತು ಬಡವರಿಗೆ ಅನ್ಯಾಯ ಆಗುತ್ತಿದೆ. ಬಾಣಂತಿಯರು, ಹಸುಗೂಸುಗಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದನ್ನು ಸದನದಲ್ಲಿ ಚರ್ಚಿಸುತ್ತೇವೆ ಎಂದು ತಿಳಿಸಿದರು.

    ಉಸ್ತುವಾರಿ ಸಚಿವರು, ಆರೋಗ್ಯ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಈ ಸಾವುಗಳ ಕುರಿತು ತಲೆ ಕೆಡಿಸಿಕೊಂಡಿಲ್ಲ. ಈ ಬೇಜವಾಬ್ದಾರಿತನ ಏನಿದೆಯೋ? ಅದನ್ನು ಸರ್ಕಾರ ಈಗಲಾದರೂ ಎಚ್ಚೆತ್ತು ಗಮನಿಸಬೇಕು ಎಂಬ ದೃಷ್ಟಿಯಿಂದ ಇದರ ಕುರಿತು ಗಮನ ಸೆಳೆಯುತ್ತೇವೆ ಎಂದು ಹೇಳಿದರು.ಇದನ್ನೂ ಓದಿ: ತುಮಕೂರು ಸಿದ್ದಗಂಗಾ ಮಠದಲ್ಲಿ ಚಿರತೆ ಪ್ರತ್ಯಕ್ಷ