Tag: belagavi

  • ಸಿಎಂ ನಿದ್ದೆರಾಮಯ್ಯ ಆಗಿದ್ದಾರೆ, 17 ತಿಂಗಳಲ್ಲಿ 17 ಅವಾಂತರ ತೋರಿದ ಸರ್ಕಾರ – ಆರ್.ಅಶೋಕ್ ಕಿಡಿ

    ಸಿಎಂ ನಿದ್ದೆರಾಮಯ್ಯ ಆಗಿದ್ದಾರೆ, 17 ತಿಂಗಳಲ್ಲಿ 17 ಅವಾಂತರ ತೋರಿದ ಸರ್ಕಾರ – ಆರ್.ಅಶೋಕ್ ಕಿಡಿ

    ಬೆಳಗಾವಿ: ಸಿಎಂ ನಿದ್ದೆರಾಮಯ್ಯ ಆಗಿದ್ದಾರೆ, 12 ತಿಂಗಳ ಅವಧಿಯಲ್ಲಿ 17 ಅವಾಂತರಗಳನ್ನು ಸರ್ಕಾರ ತೋರಿಸಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಕಿಡಿಕಾರಿದ್ದಾರೆ.ಇದನ್ನೂ ಓದಿ: ಹಾಸನ| ಹೃದಯಾಘಾತದಿಂದ ಟೆಕ್ಕಿ ಸಾವು

    ಬೆಳಗಾವಿಯಲ್ಲಿ `ಪಬ್ಲಿಕ್ ಟಿವಿ’ಯೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ (Congress) ಸರ್ಕಾರ ಆಡಳಿತಕ್ಕೆ ಬಂದು 18 ತಿಂಗಳು ಕಳೆದಿವೆ. 17 ತಿಂಗಳಾದರೂ ಸರ್ಕಾರ ಏನೂ ಅಭಿವೃದ್ಧಿ ಮಾಡಿಲ್ಲ. ಆದರೆ 17 ತಿಂಗಳಲ್ಲಿ 17 ಅವಾಂತರಗಳನ್ನು ಸರ್ಕಾರ ತೋರಿಸಿದೆ. ಸಿದ್ದರಾಮಯ್ಯ ಕಳೆದ ಬಾರಿಯ ಆಡಳಿತವನ್ನು ಕೊಡುತ್ತಿಲ್ಲ. ಈ ಬಾರಿ ಸಿದ್ದರಾಮಯ್ಯ ಅವರೇ ಮುಡಾದಲ್ಲಿ ಸಿಲುಕಿ ನರಳುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ (CM Siddaramaiah) ಇದೀಗ ನಿದ್ದೆರಾಮಯ್ಯ ಆಗಿದ್ದಾರೆ. ಜೊತೆಗೆ ಸರ್ಕಾರವು ಕೂಡ ನಿದ್ದೆಯಲ್ಲಿದೆ. ಸಿಎಂಗೆ ಯಾವುದೇ ಇಲಾಖೆಗಳ ಮೇಲೆಯೂ ಹಿಡಿತ ಇಲ್ಲ ಎಂದು ವ್ಯಂಗ್ಯವಾಡಿದರು.

    ಬೆಳಗಾವಿ (Belagavi) ಜಿಲ್ಲೆಯೊಂದರಲ್ಲಿಯೇ ಮುನ್ನೂರಕ್ಕೂ ಹೆಚ್ಚು ನವಜಾತ ಶಿಶುಗಳ ಸಾವಾಗಿದೆ. ಸಿದ್ದರಾಮಯ್ಯ ಹೊಸದಾಗಿ ಬಂದಾಗ ಪ್ರತಿ ತಿಂಗಳು ಜನತಾದರ್ಶನ ಮಾಡುತ್ತೇನೆ ಎಂದಿದ್ದರು. ಆದರೆ ಮಂತ್ರಿಗಳು ದುಡ್ಡು ಮಾಡುವುದರಲ್ಲಿ ಮುಳುಗಿದ್ದಾರೆ. ಜಿಲ್ಲೆಗಳಿಗೆ ಮಂತ್ರಿಗಳು ಭೇಟಿ ಕೊಡುತ್ತಿಲ್ಲ. ದುಡ್ಡು ಮಾಡಲು ಮಾತ್ರ ಜಿಲ್ಲೆಗಳಿಗೆ ಹೋಗುತ್ತಾರೆ. ಯಾವ ಮಂತ್ರಿಗಳು ಆಯಾ ಜಿಲ್ಲೆಗೆ ಹೋಗುತ್ತಿಲ್ಲ. ಇದು ಗುರುವಾರದ ಸರ್ಕಾರ, ಗುರುವಾರ ಮಾತ್ರ ಸಚಿವರು ವಿಧಾನಸೌಧಕ್ಕೆ ಬರುತ್ತಾರೆ. ಉತ್ತರ ಕರ್ನಾಟಕದ ಬಗ್ಗೆ ಸರ್ಕಾರ ಹೇಳಿದ್ದೇನು, ಮಾಡಿದ್ದೇನು? ಅತ್ಯಂತ ಕಳಪೆ ಸರ್ಕಾರ ಇದು. ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಇದನ್ನೂ ಓದಿ: 5 ಲಕ್ಷ ಹೆಕ್ಟರ್ ತೊಗರಿ ಹೂ ಬಿಡದೇ ಸರ್ವನಾಶ – ಬೆಳೆ ಹಾನಿ ಸಮೀಕ್ಷೆಗೆ ರೈತರ ಒತ್ತಾಯ

  • ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿ: ಆದಿತ್ಯ ಠಾಕ್ರೆ ಕಿರಿಕ್‌

    ಬೆಳಗಾವಿ: ಚಳಿಗಾಲದ ಅಧಿವೇಶನ (Winter Session) ಆರಂಭಗೊಳ್ಳುವ ಸಂದರ್ಭದಲ್ಲೇ ಮಹಾರಾಷ್ಟ್ರದ ಮಾಜಿ ಸಿಎಂ ಉದ್ದವ್‌ ಠಾಕ್ರೆ (Uddhav Thackeray) ಪುತ್ರ ಆದಿತ್ಯ ಠಾಕ್ರೆ ಉದ್ಧಟತನದ ಹೇಳಿಕೆ ನೀಡಿದ್ದಾರೆ.

    ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಂಡು ಮಹಾ ವಿಕಾಸ ಅಘಾಡಿ ಒಕ್ಕೂಟ ಮಾಡಿಕೊಂಡಿರುವ ಶಿವಸೇನೆ ಶಾಸಕ ಆದಿತ್ಯ ಠಾಕ್ರೆ (Aditya Thackeray) ಗಡಿ ವಿವಾದವನ್ನು ಕೆದಕಿದ್ದಾರೆ. ಬೆಳಗಾವಿ ಗಡಿ ವಿವಾದದಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ.

    ಗಡಿ ವಿವಾದ ಇತ್ಯರ್ಥ ಆಗುವವರೆಗೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ:  ಮಹಾರಾಷ್ಟ್ರದಲ್ಲಿ ಎಸ್‌ಪಿ ಬಿಜೆಪಿಯ ಬಿ ಟೀಂ – ಆದಿತ್ಯ ಠಾಕ್ರೆ ಆಕ್ರೋಶ

    ಉದ್ದವ್‌ ಠಾಕ್ರೆ ನೇತೃತ್ವದ ಬಣ ಗಡಿ ವಿಚಾರವನ್ನು ಕೆದಕುವುದು ಹೊಸದೆನಲ್ಲ. ಇಲ್ಲಿಯವರೆಗೆ ಭಾಷಾ ವಿಷ ಬೀಜ ಬಿತ್ತುತ್ತಿದ್ದ ಉದ್ಧವ ಠಾಕ್ರೆ ಈಗ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎಂದು ಹೇಳುವ ಮೂಲಕ ಮತ್ತೆ ಕ್ಯಾತೆ ತೆಗೆದಿದ್ದಾರೆ.

  • ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸರಣಿ ಸಾವು – ಮೃತ ಬಾಣಂತಿಯರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

    ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸರಣಿ ಸಾವು – ಮೃತ ಬಾಣಂತಿಯರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

    – ಬಾಣಂತಿಯರ ಸಾವು ಪ್ರಕರಣ ತನಿಖೆಗೆ ಸಮಿತಿ ರಚನೆ

    ಬಳ್ಳಾರಿ/ಬೆಳಗಾವಿ: ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು (Ballari Maternal Death Case) ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಬಳ್ಳಾರಿ ಪ್ರಕರಣ ಹಸಿರುರುವಾಗಲೇ ಬೆಳಗಾವಿಯಲ್ಲಿ ಆಘಾತಕಾರಿ ಹಾಗೂ ಭಯಾನಕ ಸಂಗತಿ ಬಯಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತವರು ಜಿಲ್ಲೆಯಲ್ಲಿಯೇ ನವಜಾತ ಶಿಶುಗಳು, ಬಾಣಂತಿಯರು ದಾರುಣವಾಗಿ ಉಸಿರು ಚೆಲ್ಲಿದ್ದಾರೆ. ಕುಂದಾನಗರಿಯ ಸರ್ಕಾರಿ ಆಸ್ಪತ್ರೆಗಳಲ್ಲಿ (Government Hospital) ಕೇವಲ ಆರೇ ತಿಂಗಳಲ್ಲಿ 322 ಶಿಶುಗಳು ಹಾಗೂ 29 ಬಾಣಂತಿಯರು ಮೃತಪಟ್ಟಿದ್ದಾರೆ.

    ಕಳೆದ ಏಪ್ರಿಲ್ ತಿಂಗಳಿನಿಂದ ಅಕ್ಟೋಬರ್‌ವರೆಗೆ ಈ ಸಾವಾಗಿದೆ ಎಂದು ಡಿಹೆಚ್‌ಒ ಶರಣಪ್ಪ ಗಡೇದ್ ಮಾಹಿತಿ ನೀಡಿದ್ದಾರೆ. ಜಿಲ್ಲಾಸ್ಪತ್ರೆಯೊಂದರಲ್ಲೇ 172 ಶಿಶುಗಳು ಮಾರಣಹೋಮವಾಗಿದೆ. ಪ್ರತಿ ತಿಂಗಳು ಸರಾಸರಿ 20ರಿಂದ 25 ಮಕ್ಕಳು ಬೇರೆ ಬೇರೆ ಕಾರಣಗಳಿಂದ ಮೃತಪಟ್ಟಿವೆ. ಅಪೌಷ್ಠಿಕತೆಯಿಂದ ಸಾವುಗಳಾಗಿದೆ ಎಂದಿದ್ದಾರೆ. ನವಜಾತ ಶಿಶುಗಳು ಹಾಗೂ ಬಾಣಂತಿಯರ ಸಾವಿನ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್, ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: ದಿನ ರಾತ್ರಿ 2-3 ಹುಡುಗರನ್ನ ಕರೆದುಕೊಂಡು ಬರುತ್ತಿದ್ದಳು – ಅಪಾರ್ಟ್ಮೆಂಟ್‌ ಮಾಲೀಕ ಕೆಂಪೇಗೌಡ

    ಆರು ತಿಂಗಳಲ್ಲಿ 322 ಮಕ್ಕಳು ಮೃತಪಟ್ಟಿರುವುದು ದೊಡ್ಡ ದುರಂತ. ಪೌಷ್ಠಿಕ ಆಹಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆಗಿದೆ. ಬಳ್ಳಾರಿ ಮಾದರಿಯಲ್ಲಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ʻಪಬ್ಲಿಕ್ ಟಿವಿʼ ವರದಿ ಬೆನ್ನಲ್ಲೇ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸರಣಿ ಸಾವಿನ ಬಗ್ಗೆ ತನಿಖೆ ನಡೆಸೋದಾಗಿ ಹೇಳಿದ್ದಾರೆ. ಇದನ್ನೂ ಓದಿ: ಸರ್ಕಾರದ ಬೊಕ್ಕಸ ಬರಿದಾಗಿ ಕಳಪೆ ಔಷಧ ಖರೀದಿ, ಬಾಣಂತಿಯರ ಸಾವಿಗೆ ಇದೇ ಕಾರಣ: ಜೋಶಿ

    ಪರಿಹಾರ ಘೋಷಣೆ:
    ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣವನನ್ನ ಸರ್ಕಾರ ಇದೀಗ ಗಂಭಿರವಾಗಿ ಪರಿಗಣಿಸಿದೆ. ತನಿಖೆಗಾಗಿ ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ಕಮಿಟಿ ರಚನೆ ಮಾಡಿದೆ. ಈ ಸಮಿತಿ ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆಗಳ ತಜ್ಞರು ಸೇರಿ ಐವರು ಸದಸ್ಯರನ್ನು ಒಳಗೊಂಡಿದೆ. ಇದನ್ನೂ ಓದಿ: ನಕಲಿ ಅಡ್ರೆಸ್ ಕೊಟ್ಟು ಮಾದಕ ವಸ್ತು ಕೊರಿಯರ್ – 2 ತಿಂಗಳಾದ್ರೂ ಪತ್ತೆಯಾಗಿಲ್ಲ ವಿಳಾಸ

    ಔಷಧಿಗಳ ಖರೀದಿ ಮತ್ತು ಪರೀಕ್ಷೆಗೆ ಒಳಪಡಿಸುವಲ್ಲಿ ಆಗಿರುವ ನಿಯಮ ಉಲ್ಲಂಘನೆ ಬಗ್ಗೆ ಈ ಸಮಿತಿ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಿದೆ. ಇತ್ತ ಸಿಎಂ ಸಿದ್ದರಾಮಯ್ಯ ಬಾಣಂತಿಯರ ಸಾವು ಪ್ರಕರಣ ಸಂಬಂಧ ಪ್ರತಿಕ್ರಿಯಿಸಿ, ಕಳಪೆ ಔಷಧಿಯಿಂದ ಮೃತಪಟ್ಟಿರೋದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ ಎಂದಿದ್ದಾರೆ. ಅಲ್ಲದೇ ಮೃತ ಬಾಣಂತಿಯರ ಕುಟುಂಬಕ್ಕೆ 5 ಲಕ್ಷ ಪರಿಹಾರ ಕೊಡೋದಾಗಿ ಘೋಷಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಈ ವಿಚಾರವನ್ನು ಸದನದಲ್ಲಿ ಪ್ರಸ್ತಾಪಿಸೋದಾಗಿ ಹೇಳಿದ್ದಾರೆ.

  • ಬಳ್ಳಾರಿ ಬಳಿಕ ಬೆಳಗಾವಿಯಲ್ಲೂ ಬಾಣಂತಿಯರು, ಶಿಶುಗಳ ಸಾವು!

    ಬಳ್ಳಾರಿ ಬಳಿಕ ಬೆಳಗಾವಿಯಲ್ಲೂ ಬಾಣಂತಿಯರು, ಶಿಶುಗಳ ಸಾವು!

    ಬೆಳಗಾವಿ: ಜಿಲ್ಲೆಯಲ್ಲಿ ಆರೇ ತಿಂಗಳಲ್ಲಿ 322 ಶಿಶುಗಳ ಹಾಗೂ 29 ಬಾಣಂತಿಯರ ಸಾವು ಸಂಭವಿಸಿದ್ದು ರಾಜ್ಯದ ಜನರನ್ನು ಬೆಚ್ಚಿ ಬೀಳಿಸಿದೆ. ಇದೊಂದು ಆಘಾತಕಾರಿ ವಿಚಾರ ತಕ್ಷಣವೇ ತನಿಖೆಯಾಗಬೇಕು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಆಗ್ರಹಿಸಿದರೆ ಸದನದಲ್ಲಿ ಈ ವಿಚಾರ ಪ್ರಸ್ಥಾಪಿಸುವದಾಗಿ ಶಾಸಕಿ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

    322 ಶಿಶುಗಳ ಹಾಗೂ 29 ಬಾಣಂತಿಯರ ಮರಣ, ಈ ಸಾವು ನ್ಯಾಯವೇ? ಬೆಳಗಾವಿಯ (Belagavi) ಸರ್ಕಾರಿ ಆಸ್ಪತ್ರೆಗಳಲ್ಲಿ ಆರು ತಿಂಗಳಲ್ಲಿ ಬರೊಬ್ಬರಿ 322 ಶಿಶುಗಳು ಹಾಗೂ 29 ಬಾಣಂತಿಯರು ಸಾವನ್ನಪ್ಪಿದ ಘಟನೆಯಿಂದ ಆರೋಗ್ಯ ಇಲಾಖೆ ಅಧಿಕಾರಿ ಹಾಗು ಸಿಬ್ಬಂದಿ ಹೈರಾಣಾಗಿದ್ದಾರೆ. ಸರಣಿ ಮಕ್ಕಳ ಸಾವುಗಳು ಸುದ್ದಿ ರಾಜ್ಯದ ಜನರನ್ನು ಬೆಚ್ಚಿ ಬೀಳಿಸಿದೆ. ಶಿಶುಗಳ ಮರಣಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಕುರಿತು ಆಡಿಟ್ ಹಾಗೂ ತನಿಖೆ ನಡೆಸಲಾಗುತ್ತದೆ ಎಂದು ಬೆಳಗಾವಿ ಆರೋಗ್ಯ ಇಲಾಖೆಯ ಪ್ರಭಾರಿ ಡಿಹೆಚ್‌ಒ ಗಡೇದ ತಿಳಿಸಿದ್ದಾರೆ. ಇದನ್ನೂ ಓದಿ: ಸೋಮವಾರದಿಂದ ಬೆಳಗಾವಿಯಲ್ಲಿ ಅಧಿವೇಶನ – ವಿಪಕ್ಷಗಳ ಬತ್ತಳಿಕೆಯಲ್ಲಿ ಸಾಲು ಸಾಲು ಅಸ್ತ್ರ

    ನವಜಾತ ಶಿಶುಗಳ ಸಾವಿನ ಬಗ್ಗೆ ತನಿಖೆಯಾಗಬೇಕು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರ ತವರು ಜಿಲ್ಲೆಯಲ್ಲಿ ಇಂಥ ಘಟನೆಗಳು ನಡೆದಿವೆ. ಅಪೌಷ್ಟಿಕತೆಯಿಂದ ಸಾವುಗಳಾಗಿದೆ ಎಂದು ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ. ಸರಣಿ ಶಿಶುಗಳ ಮರಣವನ್ನು ನಾವು ಗಂಭೀರವಾಗಿ ಸ್ಚೀಕರಿಸಿದ್ದೇವೆ. ಈ ಕುರಿತು ಸದನದಲ್ಲಿ ಧ್ವನಿ ಎತ್ತುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಇದನ್ನೂ ಓದಿ: Upper Krishna Project | ಪರ್ಸಂಟೇಜ್‌ಗಾಗಿ ಡಿಕೆಶಿ ನೀರಾವರಿ ಮಂತ್ರಿಯಾಗಿದ್ದಾರೆ: ಯತ್ನಾಳ್‌

    ಒಂದೆಡೆ 322 ಶಿಶುಗಳ ಮರಣ ಇನ್ನೊಂದೆಡೆ 29 ಬಾಣಂತಿಯರ ಸಾವು ಇಲಾಖೆಯ ಕಾರ್ಯ ವೈಖರಿ ಮೇಲೆ ಸಂಶಯ ಹುಟ್ಟು ಹಾಕಿದೆ. ಕೆಲ ವೈದ್ಯರು ಈ ಅಂಕಿ – ಅಂಶ ಇನ್ನೂ ಹೆಚ್ಚು ಇದೆ ಎಂದು ಗುಸು ಗುಸು ಎನ್ನುತ್ತಿದ್ದಾರೆ. ಒಟ್ಟಾರೆ ಕಣ್ಣು ಬಿಟ್ಟು ಈ ಜಗತ್ತನ್ನು ನೋಡುವ ಮೊದಲೆ ಕಂದಮ್ಮಗಳು ಕಣ್ಣು ಮುಚ್ಚಿಕೊಳ್ಳುತ್ತಿರುವದು ವಿಷಾಧನಿಯ. ಇದನ್ನೂ ಓದಿ: ಬೆಳಗಾವಿಯಲ್ಲಿ ಬಾಣಂತಿಯರು, ಮಕ್ಕಳ ಸಾವು ಪ್ರಕರಣ – ‘ಪಬ್ಲಿಕ್ ಟಿವಿ’ ವರದಿ ಬೆನ್ನಲ್ಲೇ ತನಿಖೆಗೆ ಹೆಬ್ಬಾಳ್ಕರ್ ಆದೇಶ 

  • ಬೆಳಗಾವಿಯಲ್ಲಿ ಬಾಣಂತಿಯರು, ಮಕ್ಕಳ ಸಾವು ಪ್ರಕರಣ – ‘ಪಬ್ಲಿಕ್ ಟಿವಿ’ ವರದಿ ಬೆನ್ನಲ್ಲೇ ತನಿಖೆಗೆ ಹೆಬ್ಬಾಳ್ಕರ್ ಆದೇಶ

    ಬೆಳಗಾವಿಯಲ್ಲಿ ಬಾಣಂತಿಯರು, ಮಕ್ಕಳ ಸಾವು ಪ್ರಕರಣ – ‘ಪಬ್ಲಿಕ್ ಟಿವಿ’ ವರದಿ ಬೆನ್ನಲ್ಲೇ ತನಿಖೆಗೆ ಹೆಬ್ಬಾಳ್ಕರ್ ಆದೇಶ

    ಬೆಳಗಾವಿ: ಬಳ್ಳಾರಿ ಬಳಿಕ ಬೆಳಗಾವಿಯಲ್ಲೂ (Belagavi) ಬಾಣಂತಿಯರು, ಮಕ್ಕಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ‘ಪಬ್ಲಿಕ್ ಟಿವಿ’ ವರದಿ ಬೆನ್ನಲ್ಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ತನಿಖೆಗೆ ಆದೇಶಿಸಿದ್ದಾರೆ. ತನಿಖೆ ನಡೆಸಿ ವರದಿ ನೀಡಲು ಒಂದು ವಾರಗಳ ಡೆಡ್‌ಲೈನ್ ನೀಡಲಾಗಿದೆ.

    ಈ ಕುರಿತು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ಮೂರು ತಿಂಗಳಲ್ಲಿ ಬಾಣಂತಿಯರು, ಗರ್ಭಿಣಿಯರು, ಮಕ್ಕಳ ಸಾವು ಯಾವ ಕಾರಣಕ್ಕೆ ಆಗಿದೆ ಎಂದು ನೋಡುತ್ತಿದ್ದೇವೆ. ಬಳ್ಳಾರಿಯಲ್ಲಿ ನಡೆದ ಘಟನೆಯ ಸಮಗ್ರ ವರದಿಯನ್ನು ಕೇಳಿದ್ದೇವೆ. ಐವಿ ಫ್ಲೂಯಿಡ್‌ನಿಂದ (IV Fluid) ಆಗಿರಬಹುದು ಎಂದು ಕಂಪನಿ ಬಗ್ಗೆ ಕೂಡ ವಿಚಾರಣೆ ನಡೆಸುತ್ತಿದ್ದೇವೆ ಎಂದರು. ಇದನ್ನೂ ಓದಿ: ಕರ್ನಾಟಕ-ಲಕ್ಷದ್ವೀಪ ವ್ಯಾಪಾರ ಮಾರ್ಗ ಪುನರುಜ್ಜೀವನಗೊಳಿಸಲು ಕೆಎಂಬಿ ಪೂರ್ವ ಭಾವಿಯಾಗಿ ಕೆಲಸ ಮಾಡಲಿದೆ: ಸಚಿವ ವೈದ್ಯ

    ಪೌಷ್ಠಿಕಾಂಶದ ಕೊರತೆಯಿಂದ ಮಕ್ಕಳ ಸಾವಾಗಿದೆ ಎಂಬ ವಿಚಾರದ ಕುರಿತು ಪ್ರತಿಕ್ರಿಯಿಸಿ, ಪೌಷ್ಠಿಕಾಂಶದ ವಿಚಾರವಾಗಿ ನಮ್ಮ ಇಲಾಖೆ ಆರೋಗ್ಯ ಇಲಾಖೆ ಜಂಟಿಯಾಗಿ ಪ್ರೋಟಿನ್ ಸಂಬಂಧ ಮೂರು ತಿಂಗಳ ಗರ್ಭಿಣಿ ಇದ್ದಾಗಿನಿಂದ ನೋಡುತ್ತಿದ್ದೇವೆ. ಬರೀ ಪೌಷ್ಠಿಕಾಂಶದಿಂದ ಸಾವಾಗಿದೆ ಎಂದು ಹೇಳಲು ಆಗಲ್ಲ. ಬೇರೆ ಕಾರಣ ಇರಬಹುದು. ಒಂದು ವಾರದ ಗಡುವು ಕೊಟ್ಟು ತನಿಖೆ ನಡೆಸಿ ವರದಿ ಕೊಡುವಂತೆ ಹೇಳುತ್ತೇವೆ. ಬೆಳಗಾವಿಯಲ್ಲಿ ಸಾವಿನ ಕುರಿತು ಕೂಡ ವರದಿ ಕೊಡುವಂತೆ ಕೇಳುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: 24 ಗಂಟೆಯಲ್ಲಿ 1,000 ಪುರುಷರೊಂದಿಗೆ ಸೆಕ್ಸ್‌ ಮಾಡುವ ಗುರಿ – ಹೊಸ ವರ್ಷಕ್ಕೆ 23ರ ಯುವತಿ ತಯಾರಿ!

    ಪೌಷ್ಠಿಕ ಆಹಾರ ನೀಡುವಲ್ಲಿ ಯತ್ನಾಳ್ ಭ್ರಷ್ಟಾಚಾರ ಆರೋಪ ಹೊರಿಸಿದ ಕುರಿತು ಮಾತನಾಡಿ, ಸದನದಲ್ಲಿ ಹತ್ತು ಸಾರಿ ಚರ್ಚೆ ಆಗಿದೆ. ನಾವೇನು ಹೊಸದು ಮಾಡಿಲ್ಲ. ಸುಪ್ರೀಂ ಕೋರ್ಟ್ ಆದೇಶದಂತೆ ಮಾಡುತ್ತಿದ್ದೇವೆ. ಬಿಜೆಪಿ ಅವಧಿಯಲ್ಲಿ ಈ ರೀತಿ ಆಗಿದೆ. 70,000 ಅಂಗನವಾಡಿಯಲ್ಲಿ ಏನೂ ದುರ್ಘಟನೆ ಆಗಿಲ್ಲ. ದೇವರ ಆಶೀರ್ವಾದದಿಂದ ಯಾವ ಮಕ್ಕಳ ಆರೋಗ್ಯ ಸಮಸ್ಯೆ ಆಗಿಲ್ಲ. ಎಲ್ಲಿಯಾದರೂ ಘಟನೆ ಆದರೆ, ಕಳಪೆ ಆಹಾರ ಏನಾದರೂ ಬಂದರೆ ನಮ್ಮ ಗಮನಕ್ಕೆ ತನ್ನಿ, ಸರಿಪಡಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಬಾಲಕನ ಮೇಲೆ ಬೀದಿ ನಾಯಿ ದಾಳಿ – ಹರಿದು ಹೋಯ್ತು ತುಟಿ

  • ಸೋಮವಾರದಿಂದ ಬೆಳಗಾವಿಯಲ್ಲಿ ಅಧಿವೇಶನ – ವಿಪಕ್ಷಗಳ ಬತ್ತಳಿಕೆಯಲ್ಲಿ ಸಾಲು ಸಾಲು ಅಸ್ತ್ರ

    ಸೋಮವಾರದಿಂದ ಬೆಳಗಾವಿಯಲ್ಲಿ ಅಧಿವೇಶನ – ವಿಪಕ್ಷಗಳ ಬತ್ತಳಿಕೆಯಲ್ಲಿ ಸಾಲು ಸಾಲು ಅಸ್ತ್ರ

    ಬೆಳಗಾವಿ: ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ (Belagavi Winter Session) ಪ್ರಾರಂಭ ಆಗಲಿದೆ. ಸರ್ಕಾರವನ್ನ ಕಟ್ಟಿ ಹಾಕಲು ವಿಪಕ್ಷಗಳು ಸಾಲು ಸಾಲು ಅಸ್ತ್ರ ರೆಡಿ ಮಾಡಿಕೊಂಡಿದ್ದರೆ ವಿಪಕ್ಷಗಳನ್ನು ಕಟ್ಟಿ ಹಾಕಲು ಸರ್ಕಾರವೂ ಸನ್ನದ್ದವಾಗಿದೆ.

    9 ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಆಡಳಿತ ಪಕ್ಷ ‌ಮತ್ತು ವಿಪಕ್ಷಗಳ ನಡುವೆ ಪ್ರತಿಷ್ಠೆಯ ಜಿದ್ದಿಗೆ ಅಧಿವೇಶನ ಸಾಕ್ಷಿಯಾಗಲಿದೆ. ಚಳಿಗಾಲದ ಅಧಿವೇಶನಕ್ಕೆ ಸುವರ್ಣ ಸೌಧವೂ ಸಿದ್ದವಾಗಿದ್ದು ಸ್ಪೀಕರ್ ಯುಟಿ ಖಾದರ್ (UT Khader) ಸಿದ್ದತೆ ವೀಕ್ಷಣೆ ಮಾಡಿದರು.

    ವಿಪಕ್ಷಗಳ ಬಳಿ ಇದೆ ಪ್ರಬಲ ಅಸ್ತ್ರ
    ಈ ಬಾರಿಯ ಅಧಿವೇಶನದಲ್ಲಿ ಸರ್ಕಾರವನ್ನು ಕಟ್ಟಿ ಹಾಕಲು ವಿಪಕ್ಷಗಳಿಗೆ ಪ್ರಬಲ ಅಸ್ತ್ರಗಳು ಸಿಕ್ಕಿವೆ. ಸಿಎಂ ಸಿದ್ದರಾಮಯ್ಯ (CM Siddaramaiah) ಮೇಲೆ ಕೇಳಿ ಬಂದಿರುವ ಮುಡಾ ಅಕ್ರಮ ಪ್ರಕರಣದಲ್ಲಿ ಇಡಿ ಪ್ರಸ್ತಾಪ ಮಾಡಿದ ಅಂಶಗಳು, ವಕ್ಪ್ ವಿವಾದ, ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ, ಅಲ್ಪಸಂಖ್ಯಾತರ ಸಂಸ್ಥೆಗಳಿಗೆ ನಿಯಮ ಸಡಿಲಿಕೆ ವಿಚಾರ, ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲು ವಿವಾದ, ಗ್ಯಾರಂಟಿ ಯೋಜನೆಯಲ್ಲಿ ಲೋಪ.. ಹೀಗೆ ಸರ್ಕಾರದ ವಿರುದ್ದ ಸಾಲು ಸಾಲು ಅಸ್ತ್ರ ಪ್ರಯೋಗ ಮಾಡುವ ಮೂಲಕ ಸರ್ಕಾರವನ್ನ ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ಸಿದ್ದವಾಗಿವೆ. ಇದನ್ನೂ ಓದಿ: ಗಂಡಸರಿಗೂ ಫ್ರೀ ಬಸ್‌ ಕೊಟ್ರೆ KSRTC ಮುಚ್ಚಬೇಕಾಗುತ್ತೆ: ಸಿದ್ದರಾಮಯ್ಯ

     

    ಸರ್ಕಾರಕ್ಕೆ ಕೋವಿಡ್ ಅಕ್ರಮದ ಅಸ್ತ್ರ.
    ಸರ್ಕಾರದ ವಿರುದ್ದ ಸಮರ ಸಾರಲು ವಿಪಕ್ಷಗಳಿಗೆ ಸಾಲು ಸಾಲು ಅಸ್ತ್ರಗಳಿದ್ದು, ಅ ಅಸ್ತ್ರಗಳನ್ನ ಎದುರಿಸಲು ಸರ್ಕಾರದ ಬಳಿಯೂ ಬ್ರಹ್ಮಾಸ್ತ್ರಗಳು ರೆಡಿಯಾಗಿವೆ. ಯಡಿಯೂರಪ್ಪ (Yediyurappa) ಅವಧಿಯಲ್ಲಿ ನಡೆದಿರುವ ಕೋವಿಡ್ ಅಕ್ರಮ ಕುರಿತು ನಿವೃತ್ತ ನ್ಯಾ. ಡಿ ಕುನ್ಹಾ ವರದಿ ಇಟ್ಟುಕೊಂಡು ಬಿಜೆಪಿಗೆ (BJP) ತಿರುಗೇಟು ನೀಡಲು ಸರ್ಕಾರ ರೆಡಿಯಾಗಿದೆ.

    ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾಗಿರೋ ಬಿಡಿಎ ಹಗರಣ, ಗಣಿ ಹಗರಣಗಳು, ಬಿಜೆಪಿಯಲ್ಲಿ ವಿಜಯೇಂದ್ರ-ಯತ್ನಾಳ್ ಕಿತ್ತಾಟ, ಕೇಂದ್ರ ಸರಕಾರದಿಂದ ಅನುದಾನ ತಾರತಮ್ಯ, ಉಪ ಚುನಾವಣೆ ಸೋಲು ಸೇರಿ ಹಲವು ವಿಷಯಗಳನ್ನ ಇಟ್ಟುಕೊಂಡು ವಿಪಕ್ಷಗಳನ್ನ ಕಟ್ಟಿ ಹಾಕುವ ರಣತಂತ್ರವನ್ನ ಕಾಂಗ್ರೆಸ್ ಮಾಡಿದೆ. ಸದನದಲ್ಲಿ ವಿಪಕ್ಷಗಳನ್ನ ಕಟ್ಟಿ ಹಾಕಲು ಸಚಿವರಿಗೆ ಟಾಸ್ಕ್ ನೀಡಿರೋ‌ ಸಿಎಂ, ಯಾರ ಪ್ರಶ್ನೆಗೆ ಯಾರು ಉತ್ತರ ನೀಡಬೇಕು ಅಂತ ಸಚಿವರನ್ನು ನಿಯೋಜನೆ ಮಾಡಲಾಗಿದೆ.

     

    ಮಂಡನೆಯಾಗಲಿದೆ ಹಲವು ಮಹತ್ವದ ಮಸೂದೆಗಳು
    ಅಧಿವೇಶನದಲ್ಲಿ ಸುಮಾರು 6ಕ್ಕೂ ಹೆಚ್ಚು ವಿಧೇಯಕಗಳು ಮಂಡನೆ ಆಗಲಿವೆ. ಬಿಬಿಎಂಪಿ ವಿಧೇಯಕ, ರಾಜ್ಯಪಾಲರ ಅಧಿಕಾರ ಮೊಟಕು ಮಾಡುವ ಗ್ರಾಮೀಣಾಭಿವೃದ್ಧಿ ವಿವಿ ವಿಧೇಯಕ, ಠೇವಣಿದಾರರ ಹಿತರಕ್ಷಣೆ ಕಾಯ್ದೆ ವಿಧೇಯಕ, ಗಣಿಗಾರಿಕೆ ಸಂಬಂಧಿಸಿದ ವಿಧೇಯಕ ಸೇರಿ ಹಲವು ಮಹತ್ವದ ವಿಧೇಯಕಗಳು ಮಂಡನೆ ಆಗಲಿದೆ. ಅಲ್ಲದೆ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೂ ಹೆಚ್ಚು ಸಮಯ ಮೀಸಲು ಇರಲಿದೆ.

    ವಿಧಾನಸಭೆ ಸಭಾಂಗಣದಲ್ಲಿ ಸ್ಪೀಕರ್ ಪೀಠ ಬದಲಾವಣೆ ಮಾಡಲಾಗಿದೆ. ಬೆಂಗಳೂರಿನ ವಿಧಾನಸಭೆ ಸಭಾಂಗಣದಲ್ಲಿ ಇರುವ ವಿನ್ಯಾಸದ ರೀತಿಯೇ ಬೆಳಗಾವಿಯಲ್ಲೂ ವಿನ್ಯಾಸ ನಿರ್ಮಾಣ ಮಾಡಲಾಗಿದೆ. ಒಟ್ಟಾರೆ 9 ದಿನಗಳ ಅಧಿವೇಶನ ಆಡಳಿತ-ವಿಪಕ್ಷಗಳ ನಡುವೆ ಕಾಳಗಗಕ್ಕೆ ಸಾಕ್ಷಿಯಾಗಲಿದೆ.

  • ಅಥಣಿ | ನಾಪತ್ತೆಯಾಗಿದ್ದ ವಕೀಲ ಶವವಾಗಿ ಕೃಷ್ಣಾ ನದಿಯಲ್ಲಿ ಪತ್ತೆ

    ಅಥಣಿ | ನಾಪತ್ತೆಯಾಗಿದ್ದ ವಕೀಲ ಶವವಾಗಿ ಕೃಷ್ಣಾ ನದಿಯಲ್ಲಿ ಪತ್ತೆ

    ಬೆಳಗಾವಿ: ಅಥಣಿಯಲ್ಲಿ (Atahani) ಕಳೆದ 3 ದಿನಗಳ ಹಿಂದೆ ನಾಪತ್ತೆಯಾಗಿದ್ದ ವಕೀಲ (Lawyer) ಶುಕ್ರವಾರ ಶವವಾಗಿ ಪತ್ತೆಯಾಗಿದ್ದಾರೆ.

    ಅಥಣಿ ತಾಲೂಕಿನ ಯಲ್ಲಮ್ಮವಾಡಿ ಗ್ರಾಮದ ನಿವಾಸಿ ಸುಭಾಷ್ ಪಾಟಣಕರ(56) ಮೃತ ದುರ್ದೈವಿ. ಡಿಸೆಂಬರ್ 3 ರಂದು ನಾಪತ್ತೆಯಾಗಿದ್ದ ಸುಭಾಷ್‌ ಮೃತದೇಹ ಅಥಣಿ ತಾಲೂಕಿನ ಹಲ್ಯಾಳ- ದರೂರ ಕೃಷ್ಣಾ ನದಿಯಲ್ಲಿ ಪತ್ತೆಯಾಗಿದೆ. ಇದನ್ನೂ ಓದಿ: ಸಂಪನ್ಮೂಲ ಕ್ರೋಢೀಕರಣಕ್ಕೆ ಹೊಸ ದಾರಿ – 6,105 ಕೋಟಿ ದಂಡ ಸಂಗ್ರಹಕ್ಕೆ ಒನ್‌ಟೈಮ್ ಸೆಟಲ್ಮೆಂಟ್ ಆಫರ್‌!

    ಎಸ್‌ಡಿಆರ್‌ಎಫ್, ಅಗ್ನಿಶಾಮಕ, ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರ ತೆಗೆದಿದ್ದಾರೆ. ಗುರುವಾರ ಸುಭಾಷ್ ಪಾಟಣಕರ ಪತ್ತೆಗಾಗಿ ಆಗ್ರಹಿಸಿ  ಪೋಲಿಸರ ವಿರುದ್ಧ ವಕೀಲರು ಪ್ರತಿಭಟನೆ ನಡೆಸಿದ್ದರು.

    ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದನ್ನು ಪತ್ತೆಹಚ್ಚಲು ತನಿಖೆ ನಡೆಸುವಂತೆ ವಕೀಲರು ಆಗ್ರಹಿಸಿದ್ದಾರೆ. ಅಥಣಿ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಮೃತದೇಹ ಪತ್ತೆಯಾಗಿದೆ.

     

  • ಗೂಗಲ್ ಮ್ಯಾಪ್ ನಂಬಿ ಬೆಳಗಾವಿ ಕಾಡಿನಲ್ಲಿ ದಾರಿ ತಪ್ಪಿದ ನಾಲ್ವರು!

    ಗೂಗಲ್ ಮ್ಯಾಪ್ ನಂಬಿ ಬೆಳಗಾವಿ ಕಾಡಿನಲ್ಲಿ ದಾರಿ ತಪ್ಪಿದ ನಾಲ್ವರು!

    ಬೆಳಗಾವಿ: ಗೂಗಲ್ ಮ್ಯಾಪ್ (Google Map) ನಂಬಿ ಗೋವಾ ಪ್ರವಾಸಕ್ಕೆ (Goa) ತೆರಳುತ್ತಿದ್ದ ಕುಟುಂಬ ರಾತ್ರಿಯಿಡಿ ಕಾಡಿನಲ್ಲಿಯೇ ಕಳೆದ ಘಟನೆ ಜಿಲ್ಲೆಯ ಖಾನಾಪುರ (Khanapur) ಭೀಮಗಢ ಅರಣ್ಯ ಪ್ರದೇಶಲ್ಲಿ ನಡೆದಿದೆ.

    ಬಿಹಾರ ಮೂಲದ ಕುಟುಂಬ ಗೋವಾಕ್ಕೆ ಪ್ರವಾಸಕ್ಕೆಂದು ತೆರಳುತ್ತಿತ್ತು. ನಾಲ್ಕು ಮಹಿಳೆಯರು ಹಾಗೂ ಓರ್ವ ಚಾಲಕನಿಂದ ಕಾರಿಗೆ ಶಿರೋಲಿ ಮತ್ತು ಹೆಮ್ಮಡಗಾ ಮಾರ್ಗ ಮಧ್ಯೆ ಸಮೀಪ ಗೂಗಲ್‌ ಮ್ಯಾಪ್ ದಾರಿ ತೋರಿಸಿದೆ. ಮ್ಯಾಪ್ ನಂಬಿ ಭೀಮಗಢ ಅರಣ್ಯದೊಳಗೆ 7-8 ಕಿ.ಮೀ ಬಂದಿದ್ದಾರೆ.

     

     ಕಾಡಿನಲ್ಲಿ ರಾತ್ರಿ ಸಮಯ ಹಾಗೂ ನೆಟ್‌ವರ್ಕ್‌ ಸಿಗದ ಕಾರಣ ಬೆಳಗಿನವರೆಗೂ ಅಲ್ಲೇ ಇದ್ದ ಕುಟುಂಬ ಬೆಳಗಾಗುತ್ತಿದ್ದಂತೆ ನೆಟ್‌ವರ್ಕ್‌ ಹುಡುಕಿ ಖಾನಾಪುರ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿತು. ತಕ್ಷಣ ಕಾರ್ಯ ಪ್ರವೃತ್ತರಾದ ಖಾನಾಪುರ ಪೊಲೀಸರು (Khanapur Police) ಕುಟುಂಬವನ್ನು ಮೊಬೈಲ್ ನೆಟ್‌ವರ್ಕ್‌ ಜಾಗ ಪತ್ತೆ ಹಚ್ಚಿ ರಕ್ಷಿಸಿದ್ದಾರೆ.

    ಈ ತುರ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರ ಹಾಗೂ ಸಿಬ್ಬಂದಿ ವರ್ಗದವರಿಗೆ ಬೆಳಗಾವಿ ಎಸ್‌ಪಿ ಅಭಿನಂದನೆ ಸಲ್ಲಿಸಿದ್ದಾರೆ. ಗೂಗಲ್‌ ಮ್ಯಾಪ್‌ನಲ್ಲಿ ʼಶಾರ್ಟ್‌ಕಟ್‌ ಗೋವಾ ರೂಟ್‌ʼ ಎಂದು ಸರ್ಚ್‌ ಮಾಡಿದಗ ತೋರಿಸಿದ ದಾರಿ ನೋಡಿದ್ದರಿಂದ ಈ ಎಡವಟ್ಟಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

     

  • ಚಿಕ್ಕೋಡಿ| ಪ್ರೀತಿಗೆ ವಿರೋಧ; ಪ್ರಿಯಕರನಿಂದ ಡಬಲ್ ಮರ್ಡರ್

    ಚಿಕ್ಕೋಡಿ| ಪ್ರೀತಿಗೆ ವಿರೋಧ; ಪ್ರಿಯಕರನಿಂದ ಡಬಲ್ ಮರ್ಡರ್

    ಚಿಕ್ಕೋಡಿ: ತನ್ನ ಪ್ರೀತಿಗೆ (Love) ನಿರಾಕರಣೆ ಮಾಡಿದ್ದಕ್ಕೆ ಸಿಟ್ಟಿಗೆದ್ದ ಯುವಕ ಪ್ರೀತಿಸಿದ ಯುವತಿಯ ತಾಯಿ ಹಾಗೂ ಆಕೆಯ ತಮ್ಮನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಿಪ್ಪಾಣಿ (Nippani) ತಾಲೂಕಿ ಅಕ್ಕೋಳ ಗ್ರಾಮದಲ್ಲಿ ನಡೆದಿದೆ.

    ಮಂಗಲ ನಾಯಕ್ ( 45 ), ಪ್ರಜ್ವಲ್ ನಾಯಕ್ ( 18 ) ಮೃತ ದುರ್ದೈವಿಗಳು. ನಿಪ್ಪಾಣಿ ತಾಲೂಕಿನ ಅಕ್ಕೋಳ ಗ್ರಾಮದ ಹೊರ ವಲಯದ ಮನೆಯಲ್ಲಿ ಬುಧವಾರ ರಾತ್ರಿ ಘಟನೆ ನಡೆದಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ. ಇದನ್ನೂ ಓದಿ: ಕಚ್ಚಾಡುವುದರಿಂದ ಯಾರಿಗೂ ಲಾಭವಿಲ್ಲ: ಯತ್ನಾಳ್ ವಿಚಾರಕ್ಕೆ ಬಿಎಸ್‍ವೈ ಪ್ರತಿಕ್ರಿಯೆ

    ಕೃತ್ಯ ಎಸಗಿರುವ ಪಾಗಲ್ ಪ್ರೇಮಿ ರವಿ ಎಂದು ತಿಳಿದುಬಂದಿದೆ. ಈತ ಯುವತಿಯನ್ನು ಪ್ರೀತಿ ಮಾಡುತ್ತಿದ್ದ. ಆದರೆ ಇವರ ಪ್ರೀತಿಗೆ ಮನೆಯವರು ತುಂಬಾ ವಿರೋಧ ಮಾಡಿದ್ದರು. ಯಾವುದೇ ಕಾರಣಕ್ಕೂ ಮದುವೆಗೆ ಒಪ್ಪಿಗೆ ಸಿಗದ ಕಾರಣ ಕೊಲೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.‌ ಇದನ್ನೂ ಓದಿ: ಸೂರ್ಯ ಘರ್: ಇನ್ನೆಂಟು ತಿಂಗಳಲ್ಲಿ 2 ಲಕ್ಷ ತಂತ್ರಜ್ಞರಿಗೆ ತರಬೇತಿ

    ಘಟನೆಗೆ ಸಂಬಂಧಿಸಿದಂತೆ ಆರೋಪಿ ರವಿ, ಆತನ ಸ್ನೇಹಿತ ಹಾಗೂ ಹತ್ಯೆಗೆ ಒಳಗಾದ ಮಂಗಲ ಅವರ ಮಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪವರ್ ಶೇರಿಂಗ್| ಅವರಿಬ್ಬರೇ ಎಲ್ಲಾ ಒಪ್ಪಂದ ಮಾಡಿಕೊಳ್ಳೋದಾದ್ರೆ ನಾವ್ಯಾಕೆ ಇರೋದು: ಪರಮೇಶ್ವರ್ ಪ್ರಶ್ನೆ

     

     

  • ಬೆಳಗಾವಿ ಹಾಸ್ಟೆಲ್‌ನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ ಸಾವು

    ಬೆಳಗಾವಿ ಹಾಸ್ಟೆಲ್‌ನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ ಸಾವು

    ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಎಂಬಿಎ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ವಿವಿ ಕ್ಯಾಂಪಸ್ ನಲ್ಲಿ ಇರುವ ಕೃಷ್ಣ ಹಾಸ್ಟೆಲ್ ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.‌

    ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದ ಚೇತನ್‌ ನಾಯಿಕ (25) ಮೃತ ವಿದ್ಯಾರ್ಥಿ. ಹಾಸ್ಟೆಲ್‌ನಿಂದ ಜಿಗಿದ ವಿದ್ಯಾರ್ಥಿಗೆ ಗಂಭೀರ ಗಾಯವಾಗಿತ್ತು.‌ ತೀವ್ರ ಗಾಯಗೊಂಡಿದ್ದ ವಿದ್ಯಾರ್ಥಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು.‌ ಈ ಘಟನೆ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ: Ballari | ಐವಿ ದ್ರಾವಣ ಪೂರೈಕೆ ಮಾಡಿದ ಕಂಪನಿ ವಿರುದ್ಧ ಕೇಸ್ ದಾಖಲಿಸಲು ತಾಕೀತು

    ಪ್ರಕರಣ ಸಂಬಂಧ ಡಿಸಿಎಂ ರೋಹನ್ ಜಗದೀಶ್ ಮಾಹಿತಿ ಮಾಹಿತಿ ನೀಡಿದ್ದು, ಹಾಸ್ಟೆಲ್ ಮೇಲಿನಿಂದ ಬಿದ್ದ ವಿದ್ಯಾರ್ಥಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಚೇತನ್‌ ಅವರನ್ನು ಕುಟುಂಬಸ್ಥರು ಡಿಸ್ಚಾರ್ಜ್ ಮಾಡಿದ್ದಾರೆ. ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ವಿದ್ಯಾರ್ಥಿ ತಂದೆ ಇದುವರೆಗೂ ದೂರನ್ನು ನೀಡಿಲ್ಲ ಎಂದರು.

    ಪ್ರಜ್ಞಾಹೀನ ಸ್ಥಿತಿಯಲ್ಲಿ ಚೇತನ್‌ನನ್ನು ಪೋಷಕರು ಮನೆಗೆ ಕರೆದುಕೊಂಡು ಹೊಗಿದ್ದರು. ಚೇತನ್‌ ಮನೆಯಲ್ಲಿ ಸಾವನ್ನಪ್ಪಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.‌